\id 1PE - Biblica® Open Kannada Contemporary Version \ide UTF-8 \h 1 ಪೇತ್ರನು \toc1 ಪೇತ್ರನು ಬರೆದ ಮೊದಲನೆಯ ಪತ್ರಿಕೆ \toc2 1 ಪೇತ್ರನು \toc3 1 ಪೇತ್ರ \mt1 ಪೇತ್ರನು \mt2 ಬರೆದ ಮೊದಲನೆಯ ಪತ್ರಿಕೆ \c 1 \p \v 1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೇತ್ರನು, \b \p ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನ್ಯ ಇವುಗಳಲ್ಲೆಲ್ಲಾ ಚದರಿರುವ, ದೇವರಿಂದ ಆಯ್ಕೆಯಾದ ಪ್ರವಾಸಿಗಳಿಗೆ, \v 2 ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: \b \p ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. \b \s1 ಸಜೀವ ನಿರೀಕ್ಷೆಗಾಗಿ ದೇವರಿಗೆ ಸ್ತೋತ್ರ \p \v 3 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ. \v 4 ಈ ನಿರೀಕ್ಷೆಯು ಲಯ, ಕಳಂಕ, ಕ್ಷಯಗಳಿಲ್ಲದ ಬಾಧ್ಯತೆಯಾಗಿದೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ. \v 5 ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ. \v 6 ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. \v 7 ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು. \v 8 ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. \v 9 ಏಕೆಂದರೆ ನಿಮ್ಮ ನಂಬಿಕೆಯ ಅಂತಿಮ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ. \p \v 10 ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು, ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. \v 11 ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು. \v 12 ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ. \s1 ಪರಿಶುದ್ಧರಾಗಿರಿ \p \v 13 ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ. \v 14 ವಿಧೇಯರಾದ ಮಕ್ಕಳಿಗೆ ತಕ್ಕಂತೆ, ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮ್ಮ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರಬೇಡಿರಿ. \v 15 ಆದರೆ ನಿಮ್ಮನ್ನು ಕರೆದಿರುವ ದೇವರು ಪರಿಶುದ್ಧರಾಗಿರುವ ಪ್ರಕಾರವೇ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ. \v 16 ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು,”\f + \fr 1:16 \fr*\ft \+xt ಯಾಜಕ 11:44,45; 19:2\+xt*\ft*\f* ಎಂದು ಪವಿತ್ರ ವೇದದಲ್ಲಿ ಬರೆದಿದೆ. \p \v 17 ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ. \v 18 ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ. \v 19 ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ. \v 20 ಅವರು ಜಗದುತ್ಪತ್ತಿಗೆ ಮೊದಲೇ ನೇಮಕಗೊಂಡು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷರಾದರು. \v 21 ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ. \p \v 22 ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ. \v 23 ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ. \q1 \v 24 “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. \q2 ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. \q1 ಹುಲ್ಲು ಒಣಗಿಹೋಗುವುದು. \q2 ಅದರ ಹೂವು ಉದುರಿ ಹೋಗುವುದು. \q2 \v 25 ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು.”\f + \fr 1:25 \fr*\ft \+xt ಯೆಶಾಯ 40:6-8\+xt*\ft*\f* \m ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು. \c 2 \p \v 1 ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ. \v 2 ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ. \v 3 ಏಕೆಂದರೆ ಕರ್ತದೇವರು ಒಳ್ಳೆಯವರೆಂದು ನೀವು ರುಚಿ ನೋಡಿದ್ದೀರಲ್ಲಾ. \s1 ಆಯ್ಕೆಯಾದ ಜೀವವುಳ್ಳ ಕಲ್ಲುಗಳು \p \v 4 ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು. \v 5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು. \v 6 ಪವಿತ್ರ ವೇದವು ಹೇಳುವುದೇನೆಂದರೆ: \q1 “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. \q2 ಅದು ಆರಿಸಿಕೊಂಡದ್ದು, ಅಮೂಲ್ಯವಾದದ್ದು. \q1 ದೇವರ ಮೇಲೆ ನಂಬಿಕೆಯಿಡುವವನು \q2 ಆಶಾಭಂಗಪಡುವದೇ ಇಲ್ಲ.”\f + \fr 2:6 \fr*\ft \+xt ಯೆಶಾಯ 28:16\+xt*\ft*\f* \m \v 7 ಈಗ ನಂಬುವವರಾದ ನಿಮಗೆ ಈ ಕಲ್ಲು ಅಮೂಲ್ಯವಾದುದು. ನಂಬದವರಿಗಾದರೋ, \q1 “ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ \q2 ಮುಖ್ಯವಾದ ಮೂಲೆಗಲ್ಲಾಯಿತು,”\f + \fr 2:7 \fr*\ft \+xt ಕೀರ್ತನೆ 118:22\+xt*\ft*\f* \m \v 8 ಮತ್ತು, \q1 “ಜನರು ಎಡವಲು ಕಾರಣವಾಗುವ ಕಲ್ಲೂ \q2 ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,”\f + \fr 2:8 \fr*\ft \+xt ಯೆಶಾಯ 8:14\+xt*\ft*\f* \m ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು. \p \v 9 ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ. \v 10 ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ. \s1 ಭಕ್ತಿಹೀನ ಸಮಾಜದಲ್ಲಿ ಭಕ್ತರಾಗಿ ಬಾಳುವುದು \p \v 11 ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. \v 12 ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು. \p \v 13 ಮನುಷ್ಯನ ಪ್ರತಿಯೊಂದು ನಿಯಮಗಳಿಗೂ ಕರ್ತದೇವರ ನಿಮಿತ್ತ ನೀವು ಅಧೀನರಾಗಿರಿ. ಅರಸನು ಸರ್ವಾಧಿಕಾರಿಯಾಗಿದ್ದು, \v 14 ರಾಜ್ಯಪಾಲರು ಕೆಟ್ಟವರನ್ನು ದಂಡಿಸುವುದಕ್ಕೆ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವುದಕ್ಕೆ ಅರಸನಿಂದ ಅವರು ಕಳುಹಿಸಲಾದವರೆಂದೂ ತಿಳಿದು ಅವರಿಗೆ ಅಧೀನರಾಗಿರಿ. \v 15 ನೀವು ನಿಮ್ಮ ಒಳ್ಳೆಯ ನಡತೆಯಿಂದ, ತಿಳುವಳಿಕೆಯಿಲ್ಲದೆ ಮಾತಾಡುವ ಮೂಢಜನರ ಬಾಯಿ ಮುಚ್ಚುವಂತೆ ಮಾಡುವುದೇ ದೇವರ ಚಿತ್ತ. \v 16 ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ. \v 17 ಎಲ್ಲರನ್ನು ಸನ್ಮಾನಿಸಿರಿ, ವಿಶ್ವಾಸಿಗಳ ಸಹೋದರತ್ವವನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ, ಅರಸನನ್ನು ಸನ್ಮಾನಿಸಿರಿ. \p \v 18 ದಾಸರೇ, ಯಜಮಾನರಿಗೆ ಅಧೀನರಾಗಿರಿ. ನೀವು ಅವರಲ್ಲಿ ಒಳ್ಳೆಯ ಯಜಮಾನರಿಗೆ ಮಾತ್ರವಲ್ಲ, ಕ್ರೂರ ಯಜಮಾನರಿಗೂ ಪೂರ್ಣಭಯಭಕ್ತಿಯಿಂದ ಅಧೀನರಾಗಿರಿ. \v 19 ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅವನು ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ. \v 20 ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ. \v 21 ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು. \q1 \v 22 “ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ, \q2 ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.”\f + \fr 2:22 \fr*\ft \+xt ಯೆಶಾಯ 53:9\+xt*\ft*\f* \m \v 23 ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು. \v 24 ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.” \v 25 ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.”\f + \fr 2:25 \fr*\ft \+xt ಯೆಶಾಯ 53:4,5,6\+xt*\ft*\f* ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ. \c 3 \p \v 1 ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಪತಿಯರಲ್ಲಿ ಯಾರಾದರೂ ವಾಕ್ಯವನ್ನು ಸ್ವೀಕರಿಸದವರಾಗಿದ್ದರೂ ಪತ್ನಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ, \v 2 ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಲಿ. \v 3 ವಿಚಿತ್ರವಾಗಿ ಜಡೆ ಹೆಣೆದುಕೊಳ್ಳುವುದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವುದೂ ಇಲ್ಲವೆ ತುಂಬಾ ಬೆಲೆಯ ಉಡಿಗೆಗಳನ್ನು ಧರಿಸಿಕೊಳ್ಳುವುದೂ ಇವೇ ನಿಮ್ಮ ಅಲಂಕಾರವಾಗಿರಬಾರದು. \v 4 ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ. \v 5 ಪೂರ್ವಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡರು. ಅವರು ತಮ್ಮ ತಮ್ಮ ಪತಿಯರಿಗೆ ಅಧೀನರಾಗಿದ್ದರು. \v 6 ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು “ಯಜಮಾನ” ಎಂದು ಕರೆದಳು. ನೀವು ಸಾರಳ ಪುತ್ರಿಯರಾಗಿದ್ದೀರಲ್ಲಾ. ನೀವು ಒಳ್ಳೆಯದು ಯಾವುದೋ ಅದನ್ನು ಮಾಡುವುದಾದರೆ ಯಾವುದಕ್ಕೂ ಭಯಪಡಬೇಕಾಗಿರುವುದಿಲ್ಲ. \p \v 7 ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ. \s1 ಒಳ್ಳೆಯದನ್ನು ಮಾಡಿದ್ದಕ್ಕಾಗಿ ಬಾಧೆ \p \v 8 ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ, \v 9 ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ. \q1 \v 10 “ಬಾಳನ್ನು ಪ್ರೀತಿಸಿ \q2 ಸುದಿನಗಳನ್ನು ನೋಡುವುದಕ್ಕೆ ಇಷ್ಟವುಳ್ಳವನು \q1 ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ \q2 ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ. \q1 \v 11 ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ. \q2 ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ. \q1 \v 12 ಏಕೆಂದರೆ ನೀತಿವಂತರ ಮೇಲೆ ಕರ್ತದೇವರು ದೃಷ್ಟಿ ಇಡುತ್ತಾರೆ. \q2 ಅವರ ಪ್ರಾರ್ಥನೆಗಳಿಗೆ ಕರ್ತದೇವರು ಕಿವಿಗೊಡುತ್ತಾರೆ. \q1 ಆದರೆ ಕೆಟ್ಟದ್ದನ್ನು ಮಾಡುವವರಿಗೆ ದೇವರು ವಿಮುಖರಾಗಿದ್ದಾರೆ,”\f + \fr 3:12 \fr*\ft \+xt ಕೀರ್ತನೆ 34:12-16\+xt*\ft*\f* \m ಎಂದು ಪವಿತ್ರ ವೇದದಲ್ಲಿ ಬರೆದಿದೆಯಲ್ಲಾ? \p \v 13 ನೀವು ಒಳ್ಳೆಯದನ್ನು ಅನುಸರಿಸಲು ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? \v 14 ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.\f + \fr 3:14 \fr*\ft \+xt ಯೆಶಾಯ 8:12\+xt*\ft*\f* \v 15 ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ “ಕರ್ತದೇವರು” ಎಂದು ಪ್ರತಿಷ್ಠೆ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ. \v 16 ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು. \v 17 ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು. \v 18 ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು. \v 19 ಹೀಗೆ ಕ್ರಿಸ್ತ ಯೇಸುವು ಆತ್ಮರೂಪದಲ್ಲಿ ಬದುಕುವವರಾಗಿ, ಸೆರೆಯಲ್ಲಿದ್ದ ಅವಿಧೇಯ ಆತ್ಮಗಳ ಬಳಿಗೆ ಹೋಗಿ ಸಾರಿದರು. \v 20 ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು. \v 21 ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ. \v 22 ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ. \c 4 \s1 ದೇವರಿಗಾಗಿ ಬಾಳುವುದು \p \v 1 ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು. \v 2 ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು. \v 3 ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ. \v 4 ಆದುದರಿಂದ ನಿಮ್ಮ ಹಳೆಯ ಸ್ನೇಹಿತರೊಂದಿಗೆ ನೀವು ಮುಂಚಿನಂತೆ ಹಳೆಯ ದುಷ್ಕಾರ್ಯಗಳಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ. \v 5 ಅಂಥವರು ಬದುಕುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕಾಗಿ ಸಿದ್ಧವಾಗಿರುವ ದೇವರಿಗೆ ಲೆಕ್ಕ ಕೊಡಬೇಕಾಗುವುದು. \v 6 ಈ ಕಾರಣದಿಂದಲೇ ಈಗ ಸತ್ತಿರುವವರಿಗೂ ಸಹ ಬದುಕಿದ್ದಾಗ ಸುವಾರ್ತೆ ಸಾರಲಾಯಿತು. ಆದ್ದರಿಂದ ಎಲ್ಲಾ ಮನುಷ್ಯರಿಗೆ ನೇಮಿಸಿದ ನ್ಯಾಯತೀರ್ಪಿನಂತೆ ಅವರು ದೇಹದಲ್ಲಿ ಮರಣ ಹೊಂದಿದ್ದರೂ, ತಮ್ಮ ಆತ್ಮದಲ್ಲಿ ದೇವರಿಗಾಗಿ ಜೀವಿಸುವರು. \p \v 7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ. \v 8 ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ. \v 9 ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. \v 10 ನೀವು ದೇವರಿಂದ ವಿವಿಧ ಕೃಪಾವರಗಳನ್ನು ಹೊಂದಿರಲಾಗಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿರುವ ವರಗಳನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. \v 11 ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್. \s1 ಕ್ರಿಸ್ತ ಯೇಸುವಿಗಾಗಿ ಶ್ರಮೆಗಳು \p \v 12 ಪ್ರಿಯರೇ, ನಿಮ್ಮನ್ನು ಶೋಧಿಸಲು ಬರುವ ಅಗ್ನಿಪರೀಕ್ಷೆಗೆ ನೀವು ಆಶ್ಚರ್ಯಪಡಬೇಡಿರಿ. ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿತೆಂದು ಯೋಚಿಸಬೇಡಿರಿ. \v 13 ನೀವು ಕ್ರಿಸ್ತ ಯೇಸುವಿನ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ಸಂತೋಷವುಳ್ಳವರಾಗಿರಿ. ಆಗ ಕ್ರಿಸ್ತ ಯೇಸುವಿನ ಮಹಿಮೆಯ ಪ್ರತ್ಯಕ್ಷತೆಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. \v 14 ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ. \v 15 ನಿಮ್ಮಲ್ಲಿ ಯಾವನಾದರೂ ಕೊಲೆಗಾರನು, ಕಳ್ಳನು, ದುಷ್ಟನು ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನು ಅನುಭವಿಸಬಾರದು. \v 16 ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವವರಾಗಿ ಬಾಧೆಪಟ್ಟರೆ ನಾಚಿಕೆಪಡಬೇಡಿರಿ. ಆ ಹೆಸರನ್ನು ಹೊಂದಿದ್ದಕ್ಕಾಗಿ ದೇವರನ್ನು ಘನಪಡಿಸಲಿ. \v 17 ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು? \v 18 ಮತ್ತು, \q1 “ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, \q2 ಭಕ್ತಿಹೀನನೂ ಪಾಪಿಷ್ಠನೂ ಆಗಿರುವವನ ಗತಿ ಏನು?”\f + \fr 4:18 \fr*\ft \+xt ಜ್ಞಾನೋಕ್ತಿ 11:31\+xt*\ft*\f* \p \v 19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ. \c 5 \s1 ಸಭೆಯ ಹಿರಿಯರಿಗೂ ಸಭೆಯವರಿಗೂ \p \v 1 ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು. \v 2 ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ. \v 3 ದೇವರ ಸ್ವಾಸ್ತ್ಯದ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಆದರ್ಶವಾಗಿಯೇ ನಡೆದುಕೊಳ್ಳಿರಿ. \v 4 ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ. \p \v 5 ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, \q1 “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, \q2 ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”\f + \fr 5:5 \fr*\ft \+xt ಜ್ಞಾನೋಕ್ತಿ 3:34\+xt*\ft*\f* \m \v 6 ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು. \v 7 ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ. \p \v 8 ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. \v 9 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಸೈತಾನನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಸಹೋದರಿಯರಿಗೂ ಅಂಥಾ ಬಾಧೆಗಳೇ ಸಂಭವಿಸುತ್ತವೆ ಎಂದು ನಿಮಗೆ ತಿಳಿದದೆಯಲ್ಲಾ. \p \v 10 ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು. \v 11 ಅವರಿಗೆ ಸರ್ವಾಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್. \b \s1 ಕಡೆಯ ಮಾತುಗಳು \p \v 12 ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ. \b \p \v 13 ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆ ಹೇಳುತ್ತಾನೆ. \p \v 14 ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. \b \p ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ!