\id 1TH - Biblica® Open Kannada Contemporary Version \ide UTF-8 \h 1 ಥೆಸಲೋನಿಕದವರಿಗೆ \toc1 ಥೆಸಲೋನಿಕದವರಿಗೆ ಪೌಲನು ಬರೆದ ಮೊದಲನೆಯ ಪತ್ರಿಕೆ \toc2 1 ಥೆಸಲೋನಿಕದವರಿಗೆ \toc3 1 ಥೆಸ \mt1 ಥೆಸಲೋನಿಕದವರಿಗೆ \mt2 ಪೌಲನು ಬರೆದ ಮೊದಲನೆಯ ಪತ್ರಿಕೆ \c 1 \p \v 1 ತಂದೆ ದೇವರಲ್ಲಿಯೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ, \b \p ಪೌಲ, ಸಿಲ್ವಾನ ಹಾಗೂ ತಿಮೊಥೆ ಇವರು ಬರೆಯುವ ಪತ್ರ: \b \p ನಿಮಗೆ ಕೃಪೆಯೂ ಶಾಂತಿಯೂ ಆಗಲಿ. \b \s1 ಪೌಲನ ಕೃತಜ್ಞತಾಸ್ತುತಿ \p \v 2 ನಾವು ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಸ್ಮರಿಸುತ್ತಾ ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. \v 3 ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ. \p \v 4 ದೇವರು ಪ್ರೀತಿಸುವ ಪ್ರಿಯರೇ, ದೇವರು ತಾವಾಗಿಯೇ ನಿಮ್ಮನ್ನು ಆರಿಸಿಕೊಂಡಿದ್ದಾರೆಂದು ನಾವು ಬಲ್ಲೆವು. \v 5 ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ. \v 6 ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ. \v 7 ಹೀಗೆ ಮಕೆದೋನ್ಯ ಹಾಗೂ ಅಖಾಯದ ವಿಶ್ವಾಸಿಗಳೆಲ್ಲರಿಗೂ ನೀವು ಆದರ್ಶರಾದಿರಿ. \v 8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯ ಹಾಗೂ ಅಖಾಯದಲ್ಲಿ ಘೋಷಿತವಾದದ್ದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಹರಡಿತು. ಆದ್ದರಿಂದ ಇದನ್ನು ಕುರಿತು ನಾವು ಹೇಳಬೇಕಾದ ಅವಶ್ಯ ಏನೂ ಇಲ್ಲ. \v 9 ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ. \v 10 ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು. \c 2 \s1 ಥೆಸಲೋನಿಕದಲ್ಲಿ ಪೌಲನು ಮಾಡಿದ ಸೇವೆ \p \v 1 ಪ್ರಿಯರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬುದನ್ನು ನೀವು ತಿಳಿದಿದ್ದೀರಿ. \v 2 ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು. \v 3 ಏಕೆಂದರೆ ನಮ್ಮ ಬೋಧನೆಯು ದುರುದ್ದೇಶದಿಂದಲೂ ಇಲ್ಲವೆ ವಂಚನೆಗಳಿಂದಲೂ ತಪ್ಪುಗಳಿಂದಲೂ ಕೂಡಿದ್ದಲ್ಲ. \v 4 ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ. \v 5 ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ. \v 6 ಕ್ರಿಸ್ತ ಯೇಸುವಿನ ಅಪೊಸ್ತಲರಾದ ನಾವು ನಿಮ್ಮ ಮೇಲೆ ಭಾರವನ್ನು ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಗೌರವವನ್ನು ನಿಮ್ಮಿಂದಾಗಲೀ, ಇತರರಿಂದಾಗಲೀ, ಹುಡುಕುವವರಾಗಿರಲಿಲ್ಲ. \v 7 ಅದರ ಬದಲಾಗಿ, ನಾವು ನಿಮ್ಮ ನಡುವೆ ಶಿಶುಗಳಂತೆ ಇದ್ದೆವು. \p ತಾಯಿಯು ತನ್ನ ಮಕ್ಕಳನ್ನು ಪೋಷಿಸುವಂತೆ, \v 8 ನಿಮ್ಮನ್ನು ಪೋಷಿಸಿದೆವು. ಏಕೆಂದರೆ ನಾವು ನಿಮ್ಮನ್ನು ಬಹಳವಾಗಿ ಪ್ರೀತಿಸಿದ್ದರಿಂದ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಮಾತ್ರವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವುದಕ್ಕೂ ಇಷ್ಟವುಳ್ಳವರಾಗಿದ್ದೆವು. \v 9 ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ. \v 10 ನಂಬುವವರಾದ ನಿಮ್ಮೊಂದಿಗೆ ನಾವು ಎಷ್ಟೋ ಪವಿತ್ರರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿ. \v 11 ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು. \v 12 ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ. \p \v 13 ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. \v 14 ಪ್ರಿಯರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನೇ ನೀವೂ ಸಹ ನಿಮ್ಮ ಸ್ವದೇಶಿಯರಿಂದ ಅನುಭವಿಸಿದಿರಿ. \v 15 ಆ ಯೆಹೂದ್ಯರು ನಮಗೆ ಕರ್ತ ಆಗಿರುವ ಯೇಸುವನ್ನು ಮತ್ತು ಪ್ರವಾದಿಗಳನ್ನು ಕೊಂದರು. ನಮ್ಮನ್ನೂ ಓಡಿಸಿಬಿಟ್ಟರು. ಅವರು ದೇವರನ್ನು ಮೆಚ್ಚಿಸದೆ ಜನರೆಲ್ಲರಿಗೂ ವಿರೋಧಿಗಳಾಗಿದ್ದಾರೆ. \v 16 ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ. \s1 ಪೌಲನು ಥೆಸಲೋನಿಕದವರನ್ನು ನೋಡುವುದಕ್ಕೆ ಹಾರೈಸಿದ್ದು \p \v 17 ಪ್ರಿಯರೇ, ನಾವು ದೈಹಿಕವಾಗಿ ನಿಮ್ಮನ್ನು ಬಿಟ್ಟು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ, ನಿಮ್ಮ ಮುಖವನ್ನು ಕಾಣಲು ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು. \v 18 ಆದ್ದರಿಂದ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಪೌಲನಾದ ನಾನಂತೂ ಮತ್ತೆ ಮತ್ತೆ ಬರಲು ಬಯಸಿದೆನು. ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು. \v 19 ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ? \v 20 ನೀವೇ ನಮ್ಮ ಮಹಿಮೆಯೂ ಆನಂದವೂ ಆಗಿದ್ದೀರಿ. \c 3 \p \v 1 ಆದ್ದರಿಂದ ನಿಮ್ಮ ಅಗಲಿಕೆಯನ್ನು ಸಹಿಸಲಾಗದೆ, ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿದೆವು. \v 2 ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು. \v 3 ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ. ಏಕೆಂದರೆ ಇವುಗಳಿಗಾಗಿಯೇ ನಾವು ನೇಮಕವಾಗಿದ್ದೇವೆ ಎಂದು ನೀವೇ ಬಲ್ಲಿರಿ. \v 4 ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ. ಹಾಗೆ ಆಯಿತೆಂದು ನೀವೂ ಚೆನ್ನಾಗಿ ಬಲ್ಲಿರಿ. \v 5 ಈ ಕಾರಣದಿಂದ, ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಶೋಧಿಸುವನೋ ಎಂಬ ಭಯದ ದೆಸೆಯಿಂದ, ನಾನು ಸಹ ಸಹಿಸಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವುದಕ್ಕೆ ತಿಮೊಥೆಯನನ್ನು ಕಳುಹಿಸಿದೆನು. \s1 ತಿಮೊಥೆ ಕೊಟ್ಟ ಪ್ರೋತ್ಸಾಹ ಕಾರ್ಯದ ವರದಿ \p \v 6 ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಹಾಗೂ ಪ್ರೀತಿಯ ವಿಷಯವಾಗಿ ಒಳ್ಳೆಯ ವರ್ತಮಾನವನ್ನು ತಂದಿದ್ದಾನೆ. ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ನೆನಪಿಸಿಕೊಂಡು, ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವುದಕ್ಕೆ ಹಾರೈಸುತ್ತೀರೆಂಬುದನ್ನು ತಿಳಿಸಿದ್ದಾನೆ. \v 7 ಈ ಕಾರಣದಿಂದ ಪ್ರಿಯರೇ, ನಮ್ಮ ಎಲ್ಲಾ ಇಕ್ಕಟ್ಟು ಹಾಗೂ ಹಿಂಸೆಗಳಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು. \v 8 ಏಕೆಂದರೆ ನೀವು ಕರ್ತ ಯೇಸುವಿನಲ್ಲಿ ದೃಢವಾಗಿ ನಿಂತಿರುವುದರಿಂದಲೇ ಈಗ ನಾವು ನಿಜವಾಗಿಯೂ ಜೀವಿಸುತ್ತಿದ್ದೇವೆ. \v 9 ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಆನಂದಕ್ಕೆ ಬದಲಾಗಿ ದೇವರಿಗೆ ಹೇಗೆ ಸಾಕಷ್ಟು ಕೃತಜ್ಞತೆಯನ್ನು ಸಲ್ಲಿಸಬಹುದು? \v 10 ನಿಮ್ಮ ಮುಖವನ್ನು ನೋಡುವುದಕ್ಕಾಗಿಯೂ ನಿಮ್ಮ ನಂಬಿಕೆಯಲ್ಲಿರುವ ಕೊರತೆಯನ್ನು ನಿವಾರಿಸುವುದಕ್ಕೂ ನಾವು ಹಗಲಿರುಳು ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದೇವೆ. \p \v 11 ನಮ್ಮ ತಂದೆಯಾದ ದೇವರೂ ನಮಗೆ ಕರ್ತ ಆಗಿರುವ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ಮಾರ್ಗವನ್ನು ಸುಗಮಗೊಳಿಸಲಿ. \v 12 ನಮ್ಮ ಪ್ರೀತಿಯು ನಿಮ್ಮ ಕಡೆಗೆ ಸಮೃದ್ಧಿಯಾಗಿರುವಂತೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ತುಂಬಿರುವಂತೆ ಕರ್ತ ಯೇಸು ನಿಮಗೆ ಅನುಗ್ರಹಿಸಲಿ. \v 13 ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ! \c 4 \s1 ದೇವರನ್ನು ಮೆಚ್ಚಿಸಲು ಜೀವಿಸುವುದು \p \v 1 ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ. \v 2 ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ. \p \v 3 ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು. \v 4 ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು\f + \fr 4:4 \fr*\ft ಅಥವಾ \ft*\fqa ತನ್ನ ಸ್ವಂತ ಪತ್ನಿಯನ್ನು\fqa*\f* ಕಾಪಾಡಿಕೊಳ್ಳಲು ತಿಳಿಯಬೇಕು. \v 5 ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು. \v 6 ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ. \v 7 ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ. \v 8 ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ. \p \v 9 ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವುದು ಅವಶ್ಯವಿಲ್ಲ. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂದು ನೀವು ದೇವರಿಂದಲೇ ಉಪದೇಶ ಹೊಂದಿದ್ದೀರಿ. \v 10 ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ನೀವು ಪ್ರೀತಿಸುತ್ತಿರುವುದು ನಿಜವೆ. ಆದರೂ ಪ್ರಿಯರೇ, ನೀವು ಪ್ರೀತಿಯಲ್ಲಿ ಇನ್ನೂ ಸಮೃದ್ಧಿಯಾಗಬೇಕೆಂದು ನಾವು ನಿಮ್ಮನ್ನು ಉತ್ತೇಜಿಸುತ್ತೇವೆ. \v 11 ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ. \v 12 ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ. \s1 ಪುನರುತ್ಥಾನದ ನಿರೀಕ್ಷೆ \p \v 13 ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ. \v 14 ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು. \v 15 ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ. \v 16 ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು. \v 17 ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು. \v 18 ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ. \c 5 \s1 ಕರ್ತ ಯೇಸುವಿನ ದಿನವು \p \v 1 ಪ್ರಿಯರೇ, ಈ ಕಾಲಸಮಯಗಳನ್ನು ಕುರಿತು ನಿಮಗೆ ಬರೆಯುವುದು ಅವಶ್ಯವಿಲ್ಲ. \v 2 ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ. \v 3 ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು. \p \v 4 ಆದರೆ ಪ್ರಿಯರೇ, ಆ ದಿನವು ಕಳ್ಳನಂತೆ ನಿಮ್ಮನ್ನು ಆಶ್ಚರ್ಯಪಡಿಸುವುದಕ್ಕೆ ನೀವು ಕತ್ತಲೆಯಲ್ಲಿರುವವರಲ್ಲ. \v 5 ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಿ. ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ. \v 6 ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ. \v 7 ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರೆ. \v 8 ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ. \v 9 ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು. \v 10 ನಾವು ಎಚ್ಚರವಾಗಿದ್ದರೂ ನಿದ್ರೆಯಲ್ಲಿದ್ದರೂ ತಮ್ಮ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಅವರು ನಮಗಾಗಿ ಸತ್ತರು. \v 11 ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ. \s1 ಅನುಸರಿಸಬೇಕಾದ ಅಂತಿಮ ಆಜ್ಞೆಗಳು \p \v 12 ಪ್ರಿಯರೇ, ಯಾರು ನಿಮ್ಮ ನಡುವೆ ಪ್ರಯಾಸಪಟ್ಟು ಕರ್ತ ಯೇಸುವಿನಲ್ಲಿ ನಿಮ್ಮನ್ನು ಪರಾಮರಿಸುವವರಾಗಿದ್ದು ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಗೌರವಿಸಿರಿ. \v 13 ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಅತ್ಯಧಿಕವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ. \v 14 ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ. \v 15 ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ. \p \v 16 ಯಾವಾಗಲೂ ಆನಂದಿಸಿರಿ. \v 17 ಎಡೆಬಿಡದೆ ಪ್ರಾರ್ಥಿಸಿರಿ. \v 18 ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ. \p \v 19 ಪವಿತ್ರಾತ್ಮ ದೇವರ ಸನ್ನಿಧಿಯನ್ನು ನಂದಿಸಬೇಡಿರಿ. \v 20 ಪ್ರವಾದನೆಗಳನ್ನು ಹೀನೈಸಬೇಡಿರಿ. \v 21 ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ. \v 22 ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ. \p \v 23 ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ. \v 24 ನಿಮ್ಮನ್ನು ಕರೆಯುವ ದೇವರು ನಂಬಿಗಸ್ತರು, ಅವರೇ ಅದನ್ನು ಸಾಧಿಸುವವರೂ ಆಗಿದ್ದಾರೆ. \b \b \p \v 25 ಪ್ರಿಯರೇ, ನಮಗಾಗಿ ಪ್ರಾರ್ಥಿಸಿರಿ. \b \p \v 26 ಪವಿತ್ರವಾದ ಮುದ್ದಿಟ್ಟು ದೇವಜನರೆಲ್ಲರನ್ನೂ ವಂದಿಸಿರಿ. \b \p \v 27 ಈ ಪತ್ರವನ್ನು ಸಹೋದರ ಸಹೋದರಿಯರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತ ಯೇಸುವಿನ ಹೆಸರಿನಲ್ಲಿ ಆಜ್ಞಾಪಿಸುತ್ತೇನೆ. \b \p \v 28 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೊಂದಿಗಿರಲಿ.