\id 1TI - Biblica® Open Kannada Contemporary Version \ide UTF-8 \h 1 ತಿಮೊಥೆಯನಿಗೆ \toc1 ತಿಮೊಥೆಯನಿಗೆ ಪೌಲನು ಬರೆದ ಮೊದಲನೆಯ ಪತ್ರಿಕೆ \toc2 1 ತಿಮೊಥೆಯನಿಗೆ \toc3 1 ತಿಮೊಥೆ \mt1 ತಿಮೊಥೆಯನಿಗೆ \mt2 ಪೌಲನು ಬರೆದ ಮೊದಲನೆಯ ಪತ್ರಿಕೆ \c 1 \p \v 1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ನಮಗೆ ರಕ್ಷಕ ಆಗಿರುವ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತ ಯೇಸುವಿನ ಆಜ್ಞಾನುಸಾರ, \b \p \v 2 ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: \b \p ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ. \b \s1 ಸುಳ್ಳು ಬೋಧಕರನ್ನು ಎದುರಿಸಲು ಎಚ್ಚರಿಕೆ \p \v 3 ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸದಲ್ಲಿ ಇದ್ದುಕೊಂಡು ಸುಳ್ಳು ಬೋಧನೆಯನ್ನು ಉಪದೇಶಿಸಬಾರದೆಂತಲೂ \v 4 ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ. \v 5 ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ. \v 6 ಕೆಲವರು ಇವುಗಳನ್ನು ಬಿಟ್ಟುಬಿಟ್ಟು ವ್ಯರ್ಥವಾದ ಮಾತುಗಳಿಗೆ ತಿರುಗಿಕೊಂಡಿದ್ದಾರೆ. \v 7 ಅವರು ನಿಯಮದ ಬೋಧಕರಾಗಿರಲು ಬಯಸಿದರೂ ತಾವು ಹೇಳುವುದನ್ನಾಗಲಿ, ತಾವು ಸ್ಥಾಪಿಸುವುದನ್ನಾಗಲಿ ಏನೆಂದು ದೃಢನಿಶ್ಚಯವಿಲ್ಲದವರಾಗಿದ್ದಾರೆ. \p \v 8 ಒಬ್ಬನು ನಿಯಮವನ್ನು ಸರಿಯಾಗಿ ಉಪಯೋಗಿಸುವುದಾದರೆ ಅದು ಒಳ್ಳೆಯದೆಂದು ನಾವು ಬಲ್ಲೆವು. \v 9 ನಿಯಮವು ನೀತಿವಂತರಿಗೋಸ್ಕರ ಅಲ್ಲ. ಬದಲಿಗೆ ಅದು ಅವಿಧೇಯರಿಗೆ, ಅಕ್ರಮಗಾರರಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಅಪವಿತ್ರರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ, ಕೊಲೆಗಾರರಿಗೆ, \v 10 ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ. \v 11 ಈ ಬೋಧನೆಯು ಭಾಗ್ಯವಂತರಾದ ದೇವರ ಮಹಿಮೆಯ ಸುವಾರ್ತೆಗೆ ಅನುರೂಪವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲಾಗಿದೆ. \s1 ಪೌಲನ ಮೇಲೆ ಕ್ರಿಸ್ತ ಯೇಸುವಿನ ಕೃಪೆ \p \v 12 ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. \v 13 ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು. \v 14 ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು. \p \v 15 ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು. \v 16 ಆದರೂ ಇನ್ನು ಮುಂದೆ ನಿತ್ಯಜೀವಕ್ಕೆ ತಮ್ಮ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಾಗಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನಲ್ಲಿ ತಮ್ಮ ಪೂರ್ಣ ಸಹನೆಯನ್ನು ತೋರ್ಪಡಿಸಿರುವುದಕ್ಕಾಗಿ ನನಗೆ ಕರುಣೆ ದೊರೆಯಿತು. \v 17 ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್. \s1 ತಿಮೊಥೆಯನ ಜವಾಬ್ದಾರಿ \p \v 18 ಮಗನಾದ ತಿಮೊಥೆಯನೇ, ನಿನ್ನ ವಿಷಯವಾಗಿ ಮೊದಲು ಉಂಟಾದ ಪ್ರವಾದನೆಗಳ ಪ್ರಕಾರವೇ ನೀನು ಅವುಗಳಿಂದ ಒಳ್ಳೆಯ ಯುದ್ಧವನ್ನು ನಡಿಸಬೇಕೆಂದು ಈ ಆಜ್ಞೆಯನ್ನು ನಿನಗೆ ಒಪ್ಪಿಸುತ್ತೇನೆ. \v 19 ನಂಬಿಗಸ್ತನೂ ಒಳ್ಳೆಯ ಮನಸ್ಸಾಕ್ಷಿಯುಳ್ಳವನೂ ಆಗಿರು. ಕೆಲವರು ಈ ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ಹಡಗನ್ನು ಒಡೆದವರ ಹಾಗೆ ಇದ್ದಾರೆ. \v 20 ಹುಮೆನಾಯನೂ ಅಲೆಕ್ಸಾಂಡರನೂ ಅಂಥವರಾಗಿದ್ದಾರೆ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನಿಗೆ ಒಪ್ಪಿಸಿಬಿಟ್ಟಿದ್ದೇನೆ. \c 2 \s1 ಆರಾಧನೆಯ ಕ್ರಮ \p \v 1 ಎಲ್ಲದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರವೂ ಅರಸರುಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಬಿನ್ನಹಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಪ್ರಬೋಧಿಸುತ್ತೇನೆ. \v 2 ಹೀಗೆ ಮಾಡಿದರೆ ನಾವು ನೆಮ್ಮದಿ ಹಾಗೂ ಸಮಾಧಾನಗಳಿಂದ ಕೂಡಿದ ಜೀವನವನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ನಡೆಸುವುದಕ್ಕಾಗುವುದು. \v 3 ಏಕೆಂದರೆ ಇದು ನಮ್ಮ ರಕ್ಷಕರಾದ ದೇವರ ಮುಂದೆ ಒಳ್ಳೆಯದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಇದೆ. \v 4 ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ. \v 5 ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ. \v 6 ಯೇಸು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು. ಇದೇ ಸೂಕ್ತ ಸಮಯದಲ್ಲಿ ನೀಡಬೇಕಾದ ಸಾಕ್ಷಿಯಾಗಿದೆ. \v 7 ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ. \p \v 8 ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ. \v 9 ಹಾಗೆಯೇ ಸ್ತ್ರೀಯರು ಸಭ್ಯತೆ ಹಾಗೂ ಸ್ವಸ್ಥಬುದ್ಧಿಯುಳ್ಳವರಾಗಿದ್ದು ಗೌರವಕ್ಕೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ, ಚಿನ್ನ, ಮುತ್ತುಗಳು, ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ, \v 10 ದೇವ ಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ತಕ್ಕಂತೆ ಸತ್ಕ್ರಿಯೆಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳಬೇಕು. \p \v 11 ಸ್ತ್ರೀಯು\f + \fr 2:11 \fr*\ft ಅಥವಾ \ft*\fqa ಹೆಂಡತಿ\fqa*\f* ಮೌನವಾಗಿದ್ದು ಎಲ್ಲಾ ಅಧೀನತೆಯನ್ನು ಕಲಿಯಬೇಕು. \v 12 ಆದರೆ ಉಪದೇಶ ಮಾಡುವುದಕ್ಕಾಗಲಿ, ಪುರುಷನ\f + \fr 2:12 \fr*\ft ಅಥವಾ \ft*\fqa ತನ್ನ ಗಂಡನ ಮೇಲೆ\fqa*\f* ಮೇಲೆ ಅಧಿಕಾರ ನಡೆಸುವುದಕ್ಕಾಗಲಿ ಸ್ತ್ರೀಗೆ ನಾನು ಅಪ್ಪಣೆ ಕೊಡುವುದಿಲ್ಲ. ಆಕೆಯು ಮೌನವಾಗಿರಬೇಕು. \v 13 ಏಕೆಂದರೆ ಮೊದಲು ನಿರ್ಮಿತನಾದವನು ಆದಾಮನು, ಆಮೇಲೆ ಹವ್ವಳು. \v 14 ಆದಾಮನು ವಂಚನೆಗೊಳಗಾಗಲಿಲ್ಲ, ಸ್ತ್ರೀಯು ವಂಚನೆಗೊಳಗಾಗಿ ಅಪರಾಧಿಯಾದಳು. \v 15 ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆ, ಪ್ರೀತಿ ಹಾಗೂ ಪರಿಶುದ್ಧತೆಯಲ್ಲಿ ನೆಲೆಗೊಂಡಿದ್ದರೆ ಅವರು ಮಗುವನ್ನು ಹೆರುವುದರ ಮೂಲಕ ರಕ್ಷಣೆಹೊಂದುವರು. \c 3 \s1 ಮೇಲ್ವಿಚಾರಕರೂ ಸಭಾಸೇವಕರೂ \p \v 1 ಸಭೆಯ ಮೇಲ್ವಿಚಾರಕನಾಗಲು ಬಯಸುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ. \v 2 ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು. \v 3 ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು. \v 4 ಪೂರ್ಣ ಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವನಾಗಿರಬೇಕು. \v 5 ಸ್ವಂತ ಮನೆಯವರನ್ನು ಆಳುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿಸುವನು? \v 6 ಅವನು ಹೊಸದಾಗಿ ವಿಶ್ವಾಸಕ್ಕೆ ಬಂದವನಾಗಿರಬಾರದು. ಅಂಥವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಬಲಿಬೀಳುವನು. \v 7 ಇದಲ್ಲದೆ ಅವನು ನಿಂದೆಗೆ ಗುರಿಯಾಗದವನೂ ಸೈತಾನನ ಉರುಲಿಗೆ ಸಿಕ್ಕಿ ಬೀಳದವನೂ ಆಗಿದ್ದಾನೆಂಬ ಒಳ್ಳೆಯ ಸಾಕ್ಷಿಯನ್ನು ಹೊಂದಿದವನಾಗಿರಬೇಕು. \p \v 8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ನಾಲಿಗೆಯುಳ್ಳವರಾಗಿರಬಾರದು. ಮದ್ಯಾಸಕ್ತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ \v 9 ನಂಬಿಕೆಯ ರಹಸ್ಯವನ್ನು ಶುದ್ಧಮನಸ್ಸಾಕ್ಷಿಯಿಂದ ಹಿಡಿದುಕೊಂಡವರಾಗಿರಬೇಕು. \v 10 ಇದಲ್ಲದೆ ಇವರು ಸಹ ಮೊದಲು ಪರೀಕ್ಷೆಗೊಳಪಡಬೇಕು. ಅವರು ನಿಂದಾರಹಿತರಾಗಿ ಕಂಡು ಬಂದರೆ ಸಭಾ ಹಿರಿಯರಾಗಿ ಸೇವೆಮಾಡಲಿ. \p \v 11 ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು. ಚಾಡಿ ಹೇಳದವರೂ ಸ್ವಸ್ಥ ಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು. \p \v 12 ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು. \v 13 ಸಭಾ ಹಿರಿಯರಾಗಿ ಚೆನ್ನಾಗಿ ಸೇವೆ ಮಾಡಿದವರು ತಮಗೆ ಒಳ್ಳೆಯ ಸ್ಥಿತಿಯನ್ನೂ, ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸದಲ್ಲಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ. \s1 ಪೌಲನ ಸೂಚನೆಗಳಿಗೆ ಕಾರಣಗಳು \p \v 14 ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ. \v 15 ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು. \v 16 ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: \q1 “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. \q2 ಆತ್ಮದಲ್ಲಿ ರುಜುಪಡಿಸಲಾದರು. \q1 ದೂತರಿಗೆ ಕಾಣಿಸಿಕೊಂಡರು, \q2 ಯೆಹೂದ್ಯರಲ್ಲದವರಿಗೆ ಸಾರಲಾದರು, \q1 ಲೋಕದಲ್ಲಿ ನಂಬಲಾದರು, \q2 ಮಹಿಮೆಗೆ ಒಯ್ಯಲಾದರು!” \c 4 \p \v 1 ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ. \v 2 ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು \v 3 ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ. \v 4 ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ. \v 5 ಅದು ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಪವಿತ್ರವಾಗುತ್ತದೆ. \p \v 6 ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ. \v 7 ಪ್ರಾಪಂಚಿಕ ಹಾಗೂ ಅಜ್ಜಿ ಕಥೆಗಳನ್ನು ನಿರಾಕರಿಸಿ ನೀನು ದೇವಭಕ್ತಿಯನ್ನು ಅಭ್ಯಾಸ ಮಾಡಿಕೋ. \v 8 ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು. \v 9 ಈ ಮಾತು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. \v 10 ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ. \p \v 11 ಈ ವಿಷಯಗಳನ್ನು ಆಜ್ಞಾಪಿಸಿ ಬೋಧಿಸು. \v 12 ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು. \v 13 ನಾನು ಬರುವ ತನಕ ಓದುವುದರಲ್ಲಿಯೂ ಎಚ್ಚರಿಸುವುದರಲ್ಲಿಯೂ ಬೋಧಿಸುವುದರಲ್ಲಿಯೂ ಲಕ್ಷ್ಯಕೊಡು. \v 14 ನಿನ್ನಲ್ಲಿರುವ ವರವನ್ನು ಅಲಕ್ಷ್ಯ ಮಾಡಬೇಡ. ಅದು ಸಭೆಯ ಹಿರಿಯರು ಪ್ರವಾದನೆಯ ಮೂಲಕ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ನಿನಗೆ ಕೊಡಲಾಯಿತಲ್ಲವೇ? \p \v 15 ಈ ವಿಷಯಗಳನ್ನು ಧ್ಯಾನಿಸುವವನಾಗಿರು. ಇವುಗಳಲ್ಲಿಯೇ ನೆಲೆಗೊಂಡಿರು. ಹೀಗೆ ನಿನ್ನ ಪ್ರಗತಿಯು ಎಲ್ಲರಿಗೂ ಪ್ರಕಟವಾಗುವುದು. \v 16 ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ. \c 5 \s1 ವಿಧವೆಯರ, ಹಿರಿಯರ, ಗುಲಾಮರ ಬಗ್ಗೆ ಸಲಹೆಗಳು \p \v 1 ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ \v 2 ವೃದ್ಧ ಸ್ತ್ರೀಯರನ್ನು ತಾಯಿಯಂತೆಯೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆಯಿಂದ ಸಹೋದರಿಯರಂತೆಯೂ ಅವರವರಿಗೆ ಬುದ್ಧಿ ಹೇಳು. \p \v 3 ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯರನ್ನು ಗುರುತಿಸಿ ಅವರಿಗೆ ಸಹಾಯಮಾಡು. \v 4 ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು. \v 5 ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು. \v 6 ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ. \v 7 ವಿಧವೆಯರು ನಿಂದೆಗೆ ಗುರಿಯಾಗದಂತೆ ಇವುಗಳನ್ನು ಆಜ್ಞಾಪಿಸು. \v 8 ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ. \p \v 9 ವಯಸ್ಸಿನಲ್ಲಿ ಅರವತ್ತಕ್ಕೆ ಕಡಿಮೆಯಿಲ್ಲದ ವಿಧವೆಯರನ್ನು ಮಾತ್ರ ವಿಧವೆಯರ ಪಟ್ಟಿಯಲ್ಲಿ ಸೇರಿಸು. ಅಂಥವಳು ಗಂಡನಿಗೆ ನಂಬಿಗಸ್ತಳಾಗಿದ್ದಿರಬೇಕು. \v 10 ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು. \p \v 11 ಆದರೆ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ ಅವರಲ್ಲಿ ದೈಹಿಕ ಅಪೇಕ್ಷೆಗಳು ಕ್ರಿಸ್ತ ಯೇಸುವಿನ ಮೇಲಿಟ್ಟ ಅವರ ಪ್ರತಿಷ್ಠೆಯನ್ನು ಸೋಲಿಸಿ, ಅವರು ಮದುವೆ ಮಾಡಿಕೊಳ್ಳುವಂತೆ ಮಾಡುವವು. \v 12 ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ಬಿಟ್ಟಿದ್ದರಿಂದ ತೀರ್ಪಿಗೆ ಗುರಿಯಾಗುವರು. \v 13 ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಸೋಮಾರಿತನವನ್ನು ಕಲಿಯುತ್ತಾರೆ. ಸೋಮಾರಿಗಳಾಗುವುದಷ್ಟೇ ಅಲ್ಲ, ಹರಟೆ ಮಾತನಾಡುವವರೂ ಇತರರ ಕೆಲಸದಲ್ಲಿ ತಲೆಹಾಕುವವರಾಗಿ ಆಡಬಾರದ ಮಾತುಗಳನ್ನಾಡುವವರೂ ಆಗುತ್ತಾರೆ. \v 14 ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ. \v 15 ಈಗಾಗಲೇ ಕೆಲವರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ. \p \v 16 ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆ ಇಂಥವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸಬೇಕಾಗಿರುವುದರಿಂದ ಆ ಭಾರವನ್ನು ಸಭೆಯ ಮೇಲೆ ಹಾಕಬಾರದು. \p \v 17 ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. \v 18 ಏಕೆಂದರೆ, “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು!”\f + \fr 5:18 \fr*\ft \+xt ಧರ್ಮೋ 25:4\+xt*\ft*\f* ಎಂತಲೂ, “ಕೆಲಸದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ!”\f + \fr 5:18 \fr*\ft \+xt ಲೂಕ 10:7\+xt*\ft*\f* ಎಂತಲೂ ಪವಿತ್ರ ವೇದದಲ್ಲಿ ಹೇಳಿದೆಯಲ್ಲಾ. \v 19 ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ, ಇಬ್ಬರ ಇಲ್ಲವೆ ಮೂವರ ಸಾಕ್ಷಿ ಇಲ್ಲದೆ ಅದನ್ನು ಅಂಗೀಕರಿಸಬೇಡ. \v 20 ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು. \v 21 ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ. \p \v 22 ಅವಸರದಿಂದ ಯಾರ ಮೇಲೆಯೂ ಹಸ್ತವನ್ನಿಟ್ಟು, ಸಭಾ ಹಿರಿಯರನ್ನಾಗಿ ನೇಮಿಸಬೇಡ. ಇತರರ ಪಾಪಗಳಲ್ಲಿ ಪಾಲುಗಾರನಾಗಬೇಡ. ನಿನ್ನನ್ನು ಶುದ್ಧನಾಗಿ ಕಾಪಾಡಿಕೋ. \p \v 23 ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು. \p \v 24 ಕೆಲವರ ಪಾಪಗಳು ತೀರ್ಪಿಗೆ ಮುಂಚೆಯೇ ಬಹಿರಂಗವಾಗುತ್ತವೆ. ಇನ್ನು ಕೆಲವರ ಪಾಪಗಳು ಕ್ರಮೇಣವಾಗಿ ಕಂಡುಬರುತ್ತವೆ. \v 25 ಅದರಂತೆಯೇ ಕೆಲವರ ಒಳ್ಳೆಯ ಕ್ರಿಯೆಗಳು ಮುಂಚೆಯೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವ ಒಳ್ಳೆಯ ಕ್ರಿಯೆಗಳು ನಿರಂತರವಾಗಿ ಮರೆಯಾಗಿರಲಾರವು. \c 6 \p \v 1 ದೇವರ ನಾಮವೂ ನಮ್ಮ ಬೋಧನೆಯೂ ದೂಷಣೆಗೆ ಗುರಿಯಾಗದಂತೆ ದಾಸತ್ವದ ನೊಗ ಹೊತ್ತಿರುವವರು ತಮ್ಮ ಸ್ವಂತ ಯಜಮಾನರನ್ನು ಪೂರ್ಣ ಗೌರವಕ್ಕೆ ಯೋಗ್ಯರೆಂದೆಣಿಸಲಿ. \v 2 ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರು ಸಹೋದರನಾಗಿರುವುದರಿಂದ ಅವರನ್ನು ತಾತ್ಸಾರ ಮಾಡದಿರಲಿ. ಏಕೆಂದರೆ ತಮ್ಮ ಸೇವೆಯಿಂದ ಲಾಭ ಹೊಂದುವವರು ವಿಶ್ವಾಸಿಗಳು ಮತ್ತು ತಮಗೆ ಪ್ರಿಯರಾಗಿದ್ದಾರೆ ಎಂದು ತಿಳಿದು ಅವರಿಗೆ ಉತ್ತಮ ಸೇವೆಮಾಡಲಿ. ಇವುಗಳನ್ನು ಅವರಿಗೆ ಬೋಧಿಸಿ ಎಚ್ಚರಿಸು. \s1 ಸುಳ್ಳು ಬೋಧಕರು ಹಾಗೂ ಹಣದಾಶೆ \p \v 3 ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶುದ್ಧವಾದ ಮಾತುಗಳಿಗೂ ಭಕ್ತಿಗೆ ಅನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ, \v 4 ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ. \v 5 ಹೀಗೆ ಅನಾರೋಗ್ಯಕರವಾದ ವಿವಾದಗಳನ್ನೂ ಕೆಲವು ಮಾತುಗಳ ಕುರಿತಾಗಿರುವ ತರ್ಕಗಳನ್ನೂ ಸೃಷ್ಟಿಸುವ ಪ್ರಸಿದ್ಧರಾಗಿದ್ದಾರೆ. ಅಂಥವರು ದೇವಭಕ್ತಿಯನ್ನು ಆರ್ಥಿಕ ಲಾಭವನ್ನಾಗಿ ಭಾವಿಸುವವರಾಗಿದ್ದಾರೆ. \p \v 6 ಸಂತೃಪ್ತಿಯೊಂದಿಗಿರುವ ದೇವಭಕ್ತಿಯೇ ದೊಡ್ಡ ಲಾಭವು. \v 7 ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. \v 8 ಆದರೆ ಅನ್ನವಸ್ತ್ರಗಳು ನಮಗಿರುವುದಾದರೆ, ನಾವು ಅದರಲ್ಲಿ ತೃಪ್ತರಾಗಿರೋಣ. \v 9 ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ. \v 10 ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ. \s1 ತಿಮೊಥೆಗೆ ಪೌಲನ ಅಪ್ಪಣೆ \p \v 11 ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು. \v 12 ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ? \v 13 ಎಲ್ಲಕ್ಕೂ ಜೀವ ನೀಡುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಒಳ್ಳೆಯ ಅರಿಕೆಯನ್ನು ಸಾಕ್ಷಿಯಾಗಿ ನೀಡಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳವುದೇನೆಂದರೆ: \v 14 ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು. \v 15 ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು. \v 16 ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್. \p \v 17 ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು. \v 18 ಅಂಥವರು ಒಳ್ಳೆಯದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲು ಕೊಡುವುದರಲ್ಲಿ ಸಿದ್ಧರಾಗಿರುವವರೂ ಪರೋಪಕಾರ ಮಾಡುವವರೂ ಆಗಿರಬೇಕೆಂದು ಅವರನ್ನು ಪ್ರಬೋಧಿಸು. \v 19 ಹೀಗೆ ಮುಂದಿನ ಕಾಲಕ್ಕೆ ಯಥಾರ್ಥ ಜೀವವಾಗಿರುವ ನಿತ್ಯಜೀವವನ್ನು ಹಿಡಿದುಕೊಳ್ಳುವಂತೆ ತಮಗೋಸ್ಕರ ಸ್ಥಿರವಾದ ಅಸ್ತಿವಾರಕ್ಕಾಗಿ ನಿಕ್ಷೇಪಗಳನ್ನು ಕೂಡಿಸಿಟ್ಟುಕೊಳ್ಳಲಿ. \p \v 20 ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು. \v 21 ಕೆಲವರು ಇಂಥವುಗಳಿಗೆ ಒಳಪಟ್ಟು ನಂಬಿಕೆಯಿಂದ ಗುರಿತಪ್ಪಿ ಹೋಗಿದ್ದಾರೆ. \b \b \p ಕೃಪೆಯು ನಿಮ್ಮೊಂದಿಗಿರಲಿ.