\id 2SA - Biblica® Open Kannada Contemporary Version \ide UTF-8 \h 2 ಸಮುಯೇಲ \toc1 ಸಮುಯೇಲ ದ್ವಿತೀಯ ಭಾಗ \toc2 2 ಸಮುಯೇಲ \toc3 2 ಸಮು \mt1 ಸಮುಯೇಲ \mt2 ದ್ವಿತೀಯ ಭಾಗ \c 1 \s1 ಸೌಲನ ಮರಣದ ಬಗ್ಗೆ ದಾವೀದನು ಕೇಳಿದ್ದು \p \v 1 ಸೌಲನ ಮರಣದ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ, ಚಿಕ್ಲಗಿಗೆ ತಿರುಗಿಬಂದು, ಎರಡು ದಿವಸ ಅಲ್ಲಿ ಇದ್ದ ತರುವಾಯ, \v 2 ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. \p \v 3 ದಾವೀದನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದನು. \p ಅದಕ್ಕವನು, “ಇಸ್ರಾಯೇಲಿನ ಪಾಳೆಯದಿಂದ ತಪ್ಪಿಸಿಕೊಂಡು ಬಂದೆನು,” ಎಂದನು. \p \v 4 ದಾವೀದನು ಅವನಿಗೆ, “ನಡೆದ ವರ್ತಮಾನವೇನು? ನೀನು ನನಗೆ ತಿಳಿಸು,” ಎಂದನು. \p ಅವನು, “ಜನರು ಯುದ್ಧದಿಂದ ಓಡಿಹೋದರು. ಜನರಲ್ಲಿ ಅನೇಕರು ಸತ್ತರು. ಸೌಲನೂ, ಅವನ ಮಗ ಯೋನಾತಾನನೂ ಸತ್ತರು,” ಎಂದನು. \p \v 5 ದಾವೀದನು ತನಗೆ ವರ್ತಮಾನ ಹೇಳಿದ ಯುವಕನಿಗೆ, “ಸೌಲನೂ, ಅವನ ಮಗ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು?” ಎಂದು ಪ್ರಶ್ನಿಸಿದನು. \p \v 6 ಆಗ ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಬೆಟ್ಟಕ್ಕೆ ಹೋಗಿದ್ದೆನು. ಅಲ್ಲಿ ಸೌಲನು ತನ್ನ ಈಟಿಯನ್ನು ಊರಿಕೊಂಡು ನಿಂತಿದ್ದನು. ಆಗ ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು. \v 7 ಅವನು ಹಿಂದಕ್ಕೆ ತಿರುಗಿ ನೋಡಿ, ನನ್ನನ್ನು ಕಂಡು ಕರೆದನು. ಆಗ ನಾನು, ‘ಇದ್ದೇನೆ,’ ಎಂದೆನು. \p \v 8 “ಆಗ ಅವನು, ‘ನೀನ್ಯಾರು?’ ಎಂದು ಕೇಳಿದನು. \p “ ‘ನಾನು ಒಬ್ಬ ಅಮಾಲೇಕ್ಯನು,’ ಎಂದು ಉತ್ತರಕೊಟ್ಟೆನು. \p \v 9 “ಅವನು ನನಗೆ, ‘ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು. ಏಕೆಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣವಾಗಿರುವುದರಿಂದ ಸಂಕಟವು ನನ್ನನ್ನು ಹಿಡಿದಿದೆ,’ ಎಂದನು. \p \v 10 “ಆದ್ದರಿಂದ ಅವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು, ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು, ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದಿದ್ದೇನೆ,” ಎಂದನು. \p \v 11 ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು, \v 12 ಸೌಲನೂ, ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಯೆಹೋವ ದೇವರ ಜನರೂ ಖಡ್ಗದಿಂದ ಬಿದ್ದ ಕಾರಣ, ಅವರಿಗೋಸ್ಕರ ಗೋಳಾಡಿ ಅತ್ತು, ಅಸ್ತಮಾನದವರೆಗೂ ಉಪವಾಸವಾಗಿದ್ದರು. \p \v 13 ದಾವೀದನು ತನಗೆ ವರ್ತಮಾನ ತಿಳಿಸಿದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. \p ಅವನು, “ನಾನು ವಿದೇಶಿಯ ಮಗನಾದ ಅಮಾಲೇಕ್ಯನು,” ಎಂದನು. \p \v 14 ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು. \p \v 15 ಯುವಕರಲ್ಲಿ ಒಬ್ಬನನ್ನು ಕರೆದು, “ನೀನು ಇವನನ್ನು ಕೊಲ್ಲು,” ಎಂದನು. ಹಾಗೆಯೇ ಅವನು ಅವನನ್ನು ಹೊಡೆದು ಕೊಂದನು. \v 16 ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು. \s1 ಸೌಲ ಮತ್ತು ಯೋನಾತಾನರಿಗಾಗಿ ದಾವೀದನು ದುಃಖಿಸಿದ್ದು \p \v 17 ಆಗ ದಾವೀದನು ಸೌಲನ ಮೇಲೆಯೂ, ಅವನ ಮಗ ಯೋನಾತಾನನ ಮೇಲೆಯೂ ಶೋಕದಿಂದ ಈ ಗೀತೆ ಹಾಡಿ ಗೋಳಾಡಿದನು. \v 18 ಇದಲ್ಲದೆ ದಾವೀದನು ಬಿಲ್ಲೆ ಎಂಬ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಹೇಳಿದನು. ಇದು ಯಾಷಾರನ ಗ್ರಂಥದಲ್ಲಿ ಬರೆಯಲಾಗಿದೆ: \q1 \v 19 “ಇಸ್ರಾಯೇಲೇ, ನಿನ್ನ ಮಹಿಮೆಯು ನಿನ್ನ ಬೆಟ್ಟಗಳ ಮೇಲೆ ಕೊಲೆಯಾಗಿ ಬಿದ್ದಿದೆ. \q2 ಪರಾಕ್ರಮಶಾಲಿಗಳು ಹೇಗೆ ಬಿದ್ದರು! \b \q1 \v 20 “ಗತ್ ಊರಿನಲ್ಲಿ ಇದನ್ನು ತಿಳಿಸಬೇಡಿರಿ. \q2 ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. \q1 ಫಿಲಿಷ್ಟಿಯರ ಪುತ್ರಿಯರು ಸಂತೋಷಪಡಬಾರದು; \q2 ಸುನ್ನತಿ ಇಲ್ಲದವರ ಪುತ್ರಿಯರು ಉತ್ಸಾಹಪಡಬಾರದು. \b \q1 \v 21 “ಗಿಲ್ಬೋವ ಬೆಟ್ಟಗಳೇ, \q2 ನಿಮ್ಮ ಮೇಲೆ ಮಂಜೂ ಮಳೆಯೂ ಬೀಳದೆ ಇರಲಿ, \q2 ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. \q1 ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಯೂ ಅವಮಾನಗೊಂಡು ಬಿದ್ದವು. \q2 ಸೌಲನ ಗುರಾಣಿಯೂ ಎಣ್ಣೆಯಿಂದ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆಯಿತು. \b \q1 \v 22 “ಹತರಾದವರ ರಕ್ತದಿಂದಲೂ, \q2 ಯೋನಾತಾನನ ಬಿಲ್ಲು \q1 ಹಿಂದಕ್ಕೆ ತಿರುಗಲಿಲ್ಲ. \q2 ಸೌಲನ ಖಡ್ಗ ತೃಪ್ತಿಗೊಳ್ಳದೆ ತಿರುಗಿ ಬರಲಿಲ್ಲ. \q1 \v 23 ಸೌಲನೂ ಯೋನಾತಾನನೂ \q2 ಜೀವದಿಂದಿದ್ದಾಗ ಪ್ರಿಯಕರವಾಗಿಯೂ, \q2 ಸಂತೋಷಕರವಾಗಿಯೂ ಇದ್ದರು. \q1 ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. \q2 ಅವರು ಹದ್ದುಗಳಿಗಿಂತ ವೇಗವುಳ್ಳವರೂ, ಸಿಂಹಗಳಿಗಿಂತ ಬಲವುಳ್ಳವರೂ ಆಗಿದ್ದರು. \b \q1 \v 24 “ಇಸ್ರಾಯೇಲಿನ ಪುತ್ರಿಯರೇ, \q2 ಸೌಲನಿಗೋಸ್ಕರ ಅಳಿರಿ. \q1 ನಿಮಗೆ ರಕ್ತಾಂಬರವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ. \q2 ನಿಮ್ಮ ಉಡುಗೆಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ. \b \q1 \v 25 “ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ. \q2 ಯೋನಾತಾನನೇ, ನೀನು ಉನ್ನತ ಸ್ಥಳಗಳಲ್ಲಿ ಹತನಾಗಿ ಬಿದ್ದಿರುವಿ. \q1 \v 26 ನನ್ನ ಸಹೋದರನಾದ ಯೋನಾತಾನನೇ, \q2 ನಾನು ನಿನಗೋಸ್ಕರ ಶೋಕಿಸುತ್ತೇನೆ. ನೀನು ನನಗೆ ಬಹಳ ಮನೋಹರನಾಗಿದ್ದಿ. \q1 ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯಕರವಾಗಿತ್ತು. \q2 ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು. \b \q1 \v 27 “ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ. \q2 ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.” \c 2 \s1 ದಾವೀದನು ಯೆಹೂದದ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದು \p \v 1 ಇದಾದ ಮೇಲೆ ದಾವೀದನು ಯೆಹೋವ ದೇವರನ್ನು, “ಯೆಹೂದದ ಪಟ್ಟಣಗಳಲ್ಲಿ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಿದನು. \p ಯೆಹೋವ ದೇವರು ಅವನಿಗೆ, “ಹೋಗು,” ಎಂದರು. \p ಅದಕ್ಕವನು, “ನಾನು ಎಲ್ಲಿಗೆ ಹೋಗಲಿ?” ಎಂದನು. \p ಅದಕ್ಕೆ ದೇವರು, “ಹೆಬ್ರೋನಿಗೆ,” ಎಂದರು. \p \v 2 ಹಾಗೆಯೇ ದಾವೀದನೂ, ಹಾಗೂ ಅವನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾಗಿರುವ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳೂ ಅಲ್ಲಿಗೆ ಹೋದರು. \v 3 ಇದಲ್ಲದೆ ದಾವೀದನು ತನ್ನ ಸಂಗಡ ಇದ್ದ ಜನರನ್ನೂ, ಅವರವರ ಮನೆಯವರನ್ನೂ ಕರೆದುಕೊಂಡು ಹೋದನು. ಅವರು ಹೆಬ್ರೋನಿನ ಪಟ್ಟಣಗಳಲ್ಲಿ ವಾಸವಾಗಿದ್ದರು. \v 4 ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. \p ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ, \v 5 ದಾವೀದನು ಯಾಬೇಷ್ ಗಿಲ್ಯಾದಿನವರಿಗೆ ದೂತರನ್ನು ಕಳುಹಿಸಿ, “ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ, ಅವನನ್ನು ಸಮಾಧಿಮಾಡಿದ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ. \v 6 ಈಗ ಯೆಹೋವ ದೇವರು ನಿಮಗೆ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ, ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು. \v 7 ನೀವು ಪರಾಕ್ರಮಶಾಲಿಗಳಾಗಿದ್ದು, ನಿಮ್ಮ ಕೈಗಳು ಬಲವಾಗಿರಲಿ. ಏಕೆಂದರೆ ನಿಮ್ಮ ಯಜಮಾನನಾದ ಸೌಲನು ಮರಣಹೊಂದಿದನು. ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿದರು,” ಎಂದನು. \s1 ದಾವೀದ ಮತ್ತು ಸೌಲನ ಕುಟುಂಬಗಳ ನಡುವೆ ಯುದ್ಧ \p \v 8 ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು. \v 9 ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು. \p \v 10 ಸೌಲನ ಮಗ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವುದಕ್ಕೆ ಆರಂಭಿಸಿದಾಗ, ನಾಲ್ವತ್ತು ವರ್ಷ ಪ್ರಾಯದವನಾಗಿದ್ದು ಎರಡು ವರ್ಷ ಆಳಿದನು. ಆದರೆ ಯೆಹೂದ ಗೋತ್ರದವರು ದಾವೀದನನ್ನು ಹಿಂಬಾಲಿಸಿದರು. \v 11 ದಾವೀದನು ಹೆಬ್ರೋನಿನಲ್ಲಿ ಯೆಹೂದ ಗೋತ್ರದವರ ಮೇಲೆ ಅರಸನಾಗಿದ್ದ ಕಾಲವು ಏಳು ವರ್ಷ ಆರು ತಿಂಗಳು. \p \v 12 ನೇರನ ಮಗನಾಗಿರುವ ಅಬ್ನೇರನೂ, ಸೌಲನ ಮಗ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದನು. \v 13 ಚೆರೂಯಳ ಮಗ ಯೋವಾಬನೂ, ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಕೊಂಡರು. ಅವರು ಕೊಳದ ಆಚೆಯಲ್ಲಿಯೂ, ಇವರು ಕೊಳದ ಈಚೆಯಲ್ಲಿಯೂ ಕುಳಿತುಕೊಂಡರು. \p \v 14 ಆಗ ಅಬ್ನೇರನು ಯೋವಾಬನಿಗೆ, “ಕೆಲವು ಜನ ಯುವಕರು ಎದ್ದು ನಮ್ಮ ಮುಂದೆ ಮುಷ್ಠಿ ಯುದ್ಧ ಸ್ಪರ್ಧಿಸಲಿ,” ಎಂದನು. \p ಅದಕ್ಕೆ ಯೋವಾಬನು, “ಅವರು ಹಾಗೆಯೇ ಮಾಡಲಿ,” ಎಂದನು. \p \v 15 ಆದ್ದರಿಂದ ಸೌಲನ ಮಗ ಈಷ್ಬೋಶೆತನ ಕಡೆಯವನಾದ ಬೆನ್ಯಾಮೀನ್ಯರಲ್ಲಿ ಹನ್ನೆರಡು ಮಂದಿಯೂ, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟುಬಂದು, \v 16 ಅವರಲ್ಲಿ ಒಬ್ಬರ ಪಕ್ಕೆಯಲ್ಲಿ ಒಬ್ಬರು ಖಡ್ಗವನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಅಂದರೆ, “ಹದಗತ್ತಿ ಕ್ಷೇತ್ರ” ಎಂದು ಹೆಸರಾಯಿತು. \p \v 17 ಇದಲ್ಲದೆ, ಆ ದಿನದಲ್ಲಿ ಘೋರವಾದ ಯುದ್ಧವಾಯಿತು. ಅಬ್ನೇರನೂ, ಇಸ್ರಾಯೇಲರೂ ದಾವೀದನ ಸೇವಕರಿಂದ ಸೋತುಹೋದರು. \p \v 18 ಚೆರೂಯಳ ಮೂವರು ಮಕ್ಕಳಾದ ಯೋವಾಬನೂ, ಅಬೀಷೈಯನೂ, ಅಸಾಯೇಲನೂ ಅಲ್ಲಿ ಇದ್ದರು. ಅಸಾಯೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು. \v 19 ಅಸಾಯೇಲನು ಅಬ್ನೇರನನ್ನು ಬಲಗಡೆಗಾದರೂ, ಎಡಗಡೆಗಾದರೂ ತಿರುಗದೆ ಬೆನ್ನಟ್ಟಿದನು. \v 20 ಆಗ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿ, “ನೀನು ಅಸಾಯೇಲನು ಅಲ್ಲವೇ?” ಎಂದನು. \p ಅದಕ್ಕವನು, “ನಾನೇ,” ಎಂದನು. \p \v 21 ಆಗ ಅಬ್ನೇರನು ಅವನಿಗೆ, “ನೀನು ಬಲಗಡೆಗಾದರೂ, ಎಡಗಡೆಗಾದರೂ ತಿರುಗು. ಯುವಕರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತೆಗೆದುಕೋ,” ಎಂದನು. ಆದರೆ ಅಸಾಯೇಲನು ಅವನನ್ನು ಹಿಂಬಾಲಿಸುವುದನ್ನು ಬಿಡಲೇ ಇಲ್ಲ. \p \v 22 ಅಬ್ನೇರನು ಅಸಾಯೇಲನಿಗೆ, “ನನ್ನನ್ನು ಬೆನ್ನಟ್ಟುವುದನ್ನು ಬಿಟ್ಟುಬಿಡು, ನಾನು ಏಕೆ ನಿನ್ನನ್ನು ನೆಲಕ್ಕೆ ಹೊಡೆದು ಕೆಡವಿಬಿಡಬೇಕು? ನಾನು ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ?” ಎಂದನು. \p \v 23 ಆದರೆ ಅಸಾಯೇಲನು ಒಪ್ಪದೆ ಹೋದದ್ದರಿಂದ, ಅಬ್ನೇರನು ತನ್ನ ಭರ್ಜಿಯ ಹಿಂಭಾಗದ ಮೊನೆಯಿಂದ ಅವನ ಹೊಟ್ಟೆಯೊಳಗೆ ತಿವಿಯಲು, ಅದು ಅವನ ಬೆನ್ನ ಹೊರಗೆ ತೂರಿ ಬಂತು. ಅವನು ಅಲ್ಲಿ ಬಿದ್ದು, ಅದೇ ಸ್ಥಳದಲ್ಲಿ ಸತ್ತನು. ಅಸಾಯೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು. \p \v 24 ಆದರೆ ಯೋವಾಬನೂ, ಅಬೀಷೈಯನೂ ಅಬ್ನೇರನನ್ನು ಹಿಂದಟ್ಟಿ, ಸೂರ್ಯ ಆಸ್ತಮಿಸುವವರೆಗೆ ಗಿಬ್ಯೋನಿನ ಮರುಭೂಮಿಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದವರೆಗೆ ಬಂದರು. \v 25 ಆಗ ಅಬ್ನೇರನ ಹಿಂದೆ ಬೆನ್ಯಾಮೀನನ ಜನರು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು, ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು. \p \v 26 ಆಗ ಅಬ್ನೇರನು ಯೋವಾಬನಿಗೆ, “ಖಡ್ಗವು ಯಾವಾಗಲೂ ನುಂಗಿ ಬಿಡುವುದೋ? ಅಂತ್ಯದಲ್ಲಿ ಅದು ಕಹಿತನಕ್ಕೆ ನಡೆಸುವುದೆಂದು ನಿನಗೆ ಗೊತ್ತಾಗಲಿಲ್ಲವೋ? ತಮ್ಮ ಸಹೋದರರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಕ್ಕೆ ತಿರುಗುವಂತೆ ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದು ಕೂಗಿ ಹೇಳಿದನು. \p \v 27 ಅದಕ್ಕೆ ಯೋವಾಬನು, “ದೇವರ ಜೀವದಾಣೆ, ನೀನು ಮಾತನಾಡದೆ ಹೋದರೆ, ನಿಶ್ಚಯವಾಗಿ ಪ್ರತಿ ಮನುಷ್ಯನು ಉದಯದವರೆಗೆ ತನ್ನ ಸಹೋದರನನ್ನು ಹಿಂದಟ್ಟಿ ಹೋಗುತ್ತಿದ್ದನು,” ಎಂದನು. \p \v 28 ಹೀಗೆ ಯೋವಾಬನು ತುತೂರಿಯನ್ನು ಊದಿದನು. ಆಗ ಸೈನಿಕರೆಲ್ಲರೂ ನಿಂತರು. ಇಸ್ರಾಯೇಲರನ್ನು ಪುನಃ ಹಿಂದಟ್ಟಲಿಲ್ಲ, ಯುದ್ಧವು ನಿಂತಿತು. \p \v 29 ಅಬ್ನೇರನೂ, ಅವನ ಜನರೂ ಆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ನಡೆದು, ಯೊರ್ದನನ್ನು ದಾಟಿ, ಬಿಥ್ರೋನ್ ಕಣಿವೆಯನ್ನು ಹಾದು ಮಹನಯಿಮಿಗೆ ಬಂದರು. \p \v 30 ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ, ದಾವೀದನ ಸೇವಕರಲ್ಲಿ ಹತ್ತೊಂಬತ್ತು ಜನರೂ, ಅಸಾಯೇಲನೂ ಕಡಿಮೆಯಾಗಿದ್ದರು. \v 31 ದಾವೀದನ ಸೇವಕರು ಬೆನ್ಯಾಮೀನ್ಯರಲ್ಲಿಯೂ, ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು. \v 32 ಅವರು ಅಸಾಯೇಲನನ್ನು ಎತ್ತಿಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು. \c 3 \p \v 1 ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು. \b \li4 \v 2 ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: \b \li1 ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; \li1 \v 3 ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; \li1 ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು; \li1 \v 4 ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು; \li1 ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು; \li1 \v 5 ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು. \b \li4 ಇವರು ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು. \s1 ಅಬ್ನೇರನು ದಾವೀದನ ಪಕ್ಷ ಹಿಡಿದದ್ದು \p \v 6 ಸೌಲನ ಕುಟುಂಬಕ್ಕೂ ದಾವೀದನ ಕುಟುಂಬಕ್ಕೂ ಯುದ್ಧ ನಡೆಯುತ್ತಿರುವಾಗ, ಅಬ್ನೇರನು ಸೌಲನ ಕುಟುಂಬದಲ್ಲಿ ತನ್ನದೇ ಆದ ಸ್ಥಾನವನ್ನು ಬಲಪಡಿಸಿಕೊಂಡನು. \v 7 ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳೆಂಬ ಹೆಸರುಳ್ಳ ಒಬ್ಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರನಿಗೆ, “ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇಕೆ?” ಎಂದನು. \p \v 8 ಆಗ ಅಬ್ನೇರನು ಈಷ್ಬೋಶೆತನ ಮಾತುಗಳಿಗೆ ಬಹುಕೋಪಗೊಂಡು, “ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿವಸದವರೆಗೂ ಯೆಹೂದವನ್ನು ವಿರೋಧಿಸಿ, ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಸಹೋದರರಿಗೂ, ಸ್ನೇಹಿತರಿಗೂ ದಯೆ ತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ತಪ್ಪು ಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ? \v 9 ನಾನು ಸೌಲನ ಕುಟುಂಬದಿಂದ ರಾಜ್ಯವನ್ನು ತಪ್ಪಿಸಿ, ಯೆಹೋವ ದೇವರು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ, \v 10 ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ಮಟ್ಟಿಗೂ ಇರುವ ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ, ದೇವರು ಅಬ್ನೇರನಿಗೆ ಹೀಗೆಯೂ ಅಧಿಕವಾಗಿಯೂ ಮಾಡಲಿ,” ಎಂದನು. \v 11 ಈಷ್ಬೋಶೆತನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು. \p \v 12 ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ತನ್ನ ದೂತರನ್ನು ಕಳುಹಿಸಿ, “ದೇಶವು ಯಾರದು? ಇದಲ್ಲದೆ ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು. ಆಗ ಇಗೋ, ಇಸ್ರಾಯೇಲರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವುದೆಂದು ಹೇಳಿರಿ,” ಎಂದನು. \p \v 13 ಅದಕ್ಕೆ ದಾವೀದನು, “ಒಳ್ಳೆಯದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು. ಆದರೆ ನಾನು ನಿನ್ನಲ್ಲಿ ಒಂದನ್ನು ಕೇಳುತ್ತೇನೆ.” ಏನೆಂದರೆ, “ನೀನು ನನ್ನನ್ನು ನೋಡುವುದಕ್ಕೆ ಬರುವಾಗ, ಸೌಲನ ಮಗಳಾದ ಮೀಕಲಳನ್ನು ನೀನು ಕರೆದುಕೊಂಡು ಬಾರದೆ ಹೋದರೆ, ನೀನು ನನ್ನ ಮುಖವನ್ನು ಕಾಣಬಾರದು,” ಎಂದನು. \v 14 ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು. \p \v 15 ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ, ಲಯಿಷನ ಮಗನಾಗಿರುವ ಅವಳ ಗಂಡ ಪಲ್ಟೀಯೇಲನಿಂದ ಅವಳನ್ನು ಕರೆಯಿಸಿಕೊಂಡನು. \v 16 ಅವಳ ಗಂಡನು ಅವಳ ಸಂಗಡ ಬಹುರೀಮಿನವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆ, “ತಿರುಗಿ ಹೋಗು ಹಿಂದಿರುಗು,” ಎಂದನು. ಅವನು ತಿರುಗಿಹೋದನು. \p \v 17 ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ, “ದಾವೀದನು ನಿಮ್ಮ ಮೇಲೆ ಅರಸನಾಗಿರುವುದಕ್ಕೆ ನೀವು ಹುಡುಕುತ್ತಿದ್ದೀರಿ. \v 18 ಆದರೆ ಈಗ ಅದನ್ನು ಮಾಡಿರಿ. ಏಕೆಂದರೆ, ‘ನಾನು ನನ್ನ ದಾಸನಾದ ದಾವೀದನ ಕೈಯಿಂದ ಜನರಾದ ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ, ಅವರ ಸಮಸ್ತ ಶತ್ರುಗಳ ಕೈಯಿಂದಲೂ ತಪ್ಪಿಸಿ ರಕ್ಷಿಸುವೆನು,’ ಎಂದು ಯೆಹೋವ ದೇವರು ದಾವೀದನ ವಿಷಯದಲ್ಲಿ ಹೇಳಿದ್ದಾರೆ,” ಎಂದನು. \p \v 19 ಇದಲ್ಲದೆ ಅಬ್ನೇರನು ಬೆನ್ಯಾಮೀನ್ಯರ ಸಂಗಡ ಮಾತನಾಡಿದನು. ಅಬ್ನೇರನು ಇಸ್ರಾಯೇಲರ ದೃಷ್ಟಿಗೂ ಬೆನ್ಯಾಮೀನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೆಯದಾಗಿ ತೋರಿದ್ದನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ಹೆಬ್ರೋನಿಗೆ ಹೋದನು. \v 20 ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರೆದುಕೊಂಡು, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರನಿಗೂ, ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು. \v 21 ಆಗ ಅಬ್ನೇರನು ದಾವೀದನಿಗೆ, “ಸಮಸ್ತ ಇಸ್ರಾಯೇಲರು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವ ಹಾಗೆಯೂ, ನಿನ್ನ ಪ್ರಾಣವು ಇಚ್ಛೈಸುವ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ, ಸಮಸ್ತ ಇಸ್ರಾಯೇಲರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು,” ಎಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು. \s1 ಯೋವಾಬನು ಅಬ್ನೇರನನ್ನು ಕೊಂದದ್ದು \p \v 22 ಆಗ ದಾವೀದನ ಸೇವಕರೂ ಯೋವಾಬನೂ ಒಂದು ಸೈನ್ಯದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಬಂದರು. ಆಗ ಅಬ್ನೇರನು ಹೆಬ್ರೋನಿನಲ್ಲಿ ದಾವೀದನ ಸಂಗಡ ಇರಲಿಲ್ಲ. ಏಕೆಂದರೆ ಅವನು ಅಬ್ನೇರನನ್ನು ಕಳುಹಿಸಿಬಿಟ್ಟದ್ದರಿಂದ, ಅವನು ಸಮಾಧಾನವಾಗಿ ಹೋದನು. \v 23 ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅಲ್ಲಿದ್ದವರು ಯೋವಾಬನಿಗೆ, “ನೇರನ ಮಗ ಅಬ್ನೇರನು ಅರಸನ ಬಳಿಗೆ ಬಂದನು. ದಾವೀದನು ಅವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ,” ಎಂದರು. \p \v 24 ಆಗ ಯೋವಾಬನು ಅರಸನ ಬಳಿಗೆ ಬಂದು, “ಏನು ಮಾಡಿದೆ? ಅಬ್ನೇರನು ನಿನ್ನ ಬಳಿಗೆ ಬಂದನು. ಅವನು ಹೋಗಿ ಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಏಕೆ? \v 25 ನೇರನ ಮಗ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಆಗಮನ, ನಿರ್ಗಮನಗಳನ್ನು ತಿಳಿದುಕೊಳ್ಳುವುದಕ್ಕೂ, ನೀನು ಮಾಡುವುದನ್ನೆಲ್ಲಾ ಕಂಡುಹಿಡಿಯುವುದಕ್ಕೂ ಬಂದಿದ್ದನು,” ಎಂದನು. \p \v 26 ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದಾಗ, ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು. ಅವರು ಅವನನ್ನು ಸಿರಾ ಎಂಬ ಬಾವಿಯಿಂದ ತಿರುಗಿ ಕರೆದುಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು. \v 27 ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು. \p \v 28 ದಾವೀದನು ಅದನ್ನು ಕೇಳಿದಾಗ, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಯೆಹೋವ ದೇವರ ಮುಂದೆ ನಿರಪರಾಧಿಯಾಗಿದ್ದೇವೆ. \v 29 ಅದು ಯೋವಾಬನ ತಲೆಯ ಮೇಲೆಯೂ, ಅವನ ತಂದೆಯ ಮನೆತನದವರ ಮೇಲೆಯೂ ನಿಂತಿರಲಿ. ಯೋವಾಬನ ಮನೆಯಲ್ಲಿ ರಕ್ತಸ್ರಾವ ರೋಗದವರೂ, ಕುಷ್ಠರೋಗಿಯೂ, ಕೋಲು ಹಿಡಿದು ನಡೆಯುವವನೂ, ಖಡ್ಗದಿಂದ ಬೀಳುವವನೂ, ಆಹಾರದ ಕೊರತೆಯುಳ್ಳವನಾಗಿಯೂ ಇದ್ದೇ ಇರಲಿ,” ಎಂದನು. \p \v 30 ಹೀಗೆ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದುಹಾಕಿದರು. ಏಕೆಂದರೆ ಅಬ್ನೇರನು ಅವನ ಸಹೋದರ ಅಸಾಯೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು. \p \v 31 ದಾವೀದನು ಯೋವಾಬನಿಗೂ, ಅವನ ಸಂಗಡವಿದ್ದ ಸಮಸ್ತ ಜನರಿಗೂ, “ನೀವು ನಿಮ್ಮ ವಸ್ತ್ರಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಉಟ್ಟುಕೊಂಡು, ಅಬ್ನೇರನ ಮುಂದೆ ಗೋಳಾಡಿರಿ,” ಎಂದನು. ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು. \v 32 ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಳಿಟ್ಟರು. ಆಗ ಅರಸನು ತನ್ನ ಧ್ವನಿಯನ್ನೆತ್ತಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರು ಅತ್ತರು. \p \v 33 ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೀಗೆ ಹಾಡಿದನು: \q1 “ಬುದ್ಧಿಹೀನನು ಸತ್ತ ಹಾಗೆಯೇ, ಅಬ್ನೇರನು ಸತ್ತನೋ? \q2 \v 34 ನಿನ್ನ ಕೈಗಳು ಕಟ್ಟಿರಲಿಲ್ಲ. \q2 ನಿನ್ನ ಕಾಲಿಗೆ ಬೇಡಿ ಹಾಕಿರಲಿಲ್ಲ. \q1 ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದು ಹೋದೆ.” \p ಆಗ ಜನರೆಲ್ಲರು ತಿರುಗಿ ಅವನಿಗೋಸ್ಕರ ಅತ್ತರು. \p \v 35 ಇನ್ನೂ ಹೊತ್ತಿರುವಾಗಲೇ ಜನರೆಲ್ಲರು ಬಂದು ಊಟಮಾಡು ಎಂದು ದಾವೀದನಿಗೆ ಹೇಳಿದರು. ಅದಕ್ಕೆ ದಾವೀದನು, “ಸೂರ್ಯನು ಅಸ್ತಮಿಸುವುದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾಗಲಿ, ಬೇರೆ ಯಾವ ಆಹಾರವನ್ನಾಗಲಿ ರುಚಿ ನೋಡಿದರೆ, ದೇವರು ನನಗೆ ಬೇಕಾದದ್ದನ್ನು ಮಾಡಲಿ, ಅಧಿಕವಾಗಿಯೂ ಮಾಡಲಿ,” ಎಂದು ಆಣೆ ಇಟ್ಟುಕೊಂಡನು. \p \v 36 ಜನರೆಲ್ಲರು ಅದನ್ನು ತಿಳಿದುಕೊಂಡಾಗ, ಅವರೆಲ್ಲರಿಗೆ ಮೆಚ್ಚಿಗೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ, ಅದು ಜನರಿಗೆ ಮೆಚ್ಚಿಗೆಯಾಗಿತ್ತು. \v 37 ಏಕೆಂದರೆ ನೇರನ ಮಗ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದದ್ದಲ್ಲವೆಂದು ಸಮಸ್ತ ಜನರೂ, ಸಮಸ್ತ ಇಸ್ರಾಯೇಲರೂ ಆ ದಿವಸದಲ್ಲಿ ತಿಳಿದುಕೊಂಡರು. \p \v 38 ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ? \v 39 ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು. \c 4 \s1 ಈಷ್ಬೋಶೆತನ ಕೊಲೆ \p \v 1 ಅಬ್ನೇರನು ಹೆಬ್ರೋನಿನಲ್ಲಿ ಮರಣ ಹೊಂದಿದನೆಂದು ಸೌಲನ ಮಗ ಈಷ್ಬೋಶೆತನು ಕೇಳಿದಾಗ, ಅವನು ಧೈರ್ಯವನ್ನು ಕಳೆದುಕೊಂಡನು. ಇಸ್ರಾಯೇಲರೆಲ್ಲರು ಕಳವಳಗೊಂಡರು. \v 2 ಆದರೆ ಸೌಲನ ಮಗನಿಗೆ ಸೇನಾಪತಿಗಳು ಇಬ್ಬರಿದ್ದರು. ಒಬ್ಬನ ಹೆಸರು ಬಾಣನು. ಮತ್ತೊಬ್ಬನ ಹೆಸರು ರೇಕಾಬನು. ಇವರು ಬೆನ್ಯಾಮೀನ್ ಗೋತ್ರದಲ್ಲಿ ಬೇರೋತ್ ಗ್ರಾಮದವನಾದ ರಿಮ್ಮೋನನ ಮಕ್ಕಳು. ಏಕೆಂದರೆ ಬೇರೋತ್ ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ. \v 3 ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ ಇಂದಿನವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ. \p \v 4 ಸೌಲನ ಮಗ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಸೌಲನೂ, ಯೋನಾತಾನನೂ ಮರಣ ಹೊಂದಿದರೆಂಬ ವರ್ತಮಾನ ಇಜ್ರೆಯೇಲ್ ಎಂಬ ಪಟ್ಟಣದಿಂದ ಬಂದಾಗ, ಅವನು ಐದು ವರ್ಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು. \p \v 5 ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬನೂ, ಬಾಣನೂ ಹೊರಟು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಈಷ್ಬೋಶೆತನ ಮನೆಗೆ ಬಂದರು. ಅವನು ಮಂಚದ ಮೇಲೆ ಮಲಗಿಕೊಂಡಿದ್ದನು. \v 6 ಅವರು ಗೋಧಿಯನ್ನು ತೆಗೆದುಕೊಂಡು ಹೋಗುವವರಂತೆ ನಡುಮನೆಯೊಳಗೆ ಹೋಗಿ ಅವನ ಹೊಟ್ಟೆಯಲ್ಲಿ ತಿವಿದರು. ರೇಕಾಬನೂ ಅವನ ಸಹೋದರ ಬಾಣನೂ ಗುಟ್ಟಾಗಿ ಒಳಗೆ ಜಾರಿಕೊಂಡರು. \p \v 7 ಅವರು ಮನೆಯೊಳಗೆ ಪ್ರವೇಶಿಸಿದಾಗ, ಅರಸನು ಮಲಗುವ ಕೋಣೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಅವರಿಬ್ಬರು ಅವನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕಡಿದು, ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ನಡೆದರೆ. \v 8 ಅನಂತರ ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋಶೆತನ ತಲೆಯನ್ನು ತಂದು ಅರಸನಿಗೆ, “ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಯೆಹೋವ ದೇವರು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲನಿಗೂ, ಅವನ ಸಂತಾನಕ್ಕೂ ಮುಯ್ಯಿ ತೀರಿಸಿದ್ದಾರೆ,” ಎಂದರು. \p \v 9 ಆಗ ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬನಿಗೂ, ಅವನ ಸಹೋದರ ಬಾಣನಿಗೂ ಉತ್ತರವಾಗಿ, “ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಯೆಹೋವ ದೇವರ ಜೀವದಾಣೆ, \v 10 ಶುಭವರ್ತಮಾನವನ್ನು ತಂದವನು ನಾನು, ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡುವೆನೆಂದು ನೆನಸಿ ಒಬ್ಬನು ನನಗೆ, ‘ಇಗೋ, ಸೌಲನು ಮರಣಹೊಂದಿದನು,’ ಎಂದು ಹೇಳಿದ್ದರಿಂದ, ನಾನು ಚಿಕ್ಲಗಿನಲ್ಲಿ ಅವನಿಗೆ ಮರಣದಂಡನೆಯನ್ನು ವಿಧಿಸಿದೆನು. \v 11 ಹಾಗಾದರೆ, ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನಿರ್ದೋಷಿಯನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲ್ಲಿಸುವೆನು. ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾರಣೆ ಮಾಡಿ, ನಿಮ್ಮನ್ನು ಭೂಮಿಯಿಂದ ತೆಗೆದುಬಿಡುವೆನು,” ಎಂದನು. \p \v 12 ದಾವೀದನು ತನ್ನ ಜನರಿಗೆ ಆಜ್ಞಾಪಿಸಿದ್ದರಿಂದ, ಅವರು ಅವರನ್ನು ಕೊಂದುಹಾಕಿ, ಅವರ ಕೈಕಾಲುಗಳನ್ನು ಕಡಿದು, ಹೆಬ್ರೋನಿನ ಕೊಳದ ಬಳಿಯಲ್ಲಿ ತೂಗುಹಾಕಿದರು. ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು, ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು. \c 5 \s1 ಇಸ್ರಾಯೇಲರ ಮೇಲೆ ದಾವೀದನು ಅರಸನಾದದ್ದು \p \v 1 ಇಸ್ರಾಯೇಲಿನ ಎಲ್ಲಾ ಗೋತ್ರದವರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ. \v 2 ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು. \p \v 3 ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು. \p \v 4 ದಾವೀದನು ಆಳಲು ಪ್ರಾರಂಭಿಸಿದಾಗ, ಮೂವತ್ತು ವರ್ಷದವನಾಗಿದ್ದನು. ಅವನು ನಲವತ್ತು ವರ್ಷ ಆಳಿದನು. \v 5 ಅವನು ಹೆಬ್ರೋನಿನಲ್ಲಿ ಯೆಹೂದದ ಮೇಲೆ ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲರ ಮೇಲೆಯೂ, ಸಮಸ್ತ ಯೆಹೂದದ ಜನರ ಮೇಲೆಯೂ ಮೂವತ್ತು ಮೂರು ವರ್ಷ ಆಳಿದನು. \s1 ದಾವೀದನು ಯೆರೂಸಲೇಮನ್ನು ಗೆದ್ದದ್ದು \p \v 6 ಅರಸನೂ ಅವನ ಜನರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಬಂದರು. ದಾವೀದನು ಇದರೊಳಗೆ ಬರಲು ಸಾಧ್ಯವಿಲ್ಲವೆಂದು ಅವರು ನೆನಸಿ ದಾವೀದನಿಗೆ, “ನೀನು ಕಣ್ಣು ಕಾಣದವರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು, ನೀನು ಇಲ್ಲಿಗೆ ಬರಲಾರೆ,” ಎಂದರು. \v 7 ಆದರೂ ದಾವೀದನು ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು. \p \v 8 ಆ ದಿವಸದಲ್ಲಿ ದಾವೀದನು, “ಜಲದ್ವಾರವನ್ನು ದಾಟಿ, ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನೂ ಕುಂಟರನ್ನೂ ನಾಶಮಾಡಲಿ,” ಎಂದು ಹೇಳಿದ್ದನು. ಆದುದರಿಂದಲೇ, “ಕುರುಡರೂ ಕುಂಟರೂ ಅರಮನೆಯೊಳಗೆ ಪ್ರವೇಶಿಸಲಾರರು,” ಎಂಬ ಗಾದೆಯಾಯಿತು. \p \v 9 ದಾವೀದನು ಕೋಟೆಯಲ್ಲಿ ವಾಸಮಾಡಿದನು, ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು. \v 10 ಹೀಗೆಯೇ ಸರ್ವಶಕ್ತರಾದ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು. \p \v 11 ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು. \v 12 ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು. \p \v 13 ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ, ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದ್ದರಿಂದ ಅವನಿಗೆ ಇನ್ನೂ ಹೆಚ್ಚು ಪುತ್ರ, ಪುತ್ರಿಯರು ಹುಟ್ಟಿದರು. \v 14 ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್, \v 15 ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ, \v 16 ಎಲೀಷಾಮ, ಎಲ್ಯಾದ, ಎಲೀಫೆಲೆಟ್, ಇವರೇ. \s1 ದಾವೀದನು ಫಿಲಿಷ್ಟಿಯರನ್ನು ಸೋಲಿಸಿದ್ದು \p \v 17 ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಕೋಟೆ ಸ್ಥಳಕ್ಕೆ ಹೋದನು. \v 18 ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು. \v 19 ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ಯೆಹೋವ ದೇವರನ್ನು ವಿಚಾರಿಸಿದನು. \p ಆಗ ಯೆಹೋವ ದೇವರು ಅವನಿಗೆ, “ಹೋಗು, ಖಂಡಿತವಾಗಿ ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು. \p \v 20 ಆದಕಾರಣ ದಾವೀದನು ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ಯೆಹೋವ ದೇವರು ನನ್ನ ಶತ್ರುಗಳನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ, ಆ ಸ್ಥಳಕ್ಕೆ ಬಾಳ್ ಪೆರಾಜಿಮ್\f + \fr 5:20 \fr*\fq ಬಾಳ್ ಪೆರಾಜಿಮ್ \fq*\ft ಅಂದರೆ \ft*\fqa ದೇವರು ಹರಿದುಬಿಟ್ಟಿದ್ದಾರೆ\fqa*\f* ಎಂದು ಹೆಸರಿಟ್ಟನು. \v 21 ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟು ಹೋದುದರಿಂದ ದಾವೀದನೂ, ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು. \p \v 22 ಫಿಲಿಷ್ಟಿಯರು ಮತ್ತೆ ತಿರುಗಿಬಂದು, ರೆಫಾಯಿಮಿನ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು. \v 23 ಆದ್ದರಿಂದ ದಾವೀದನು ಇದರ ಬಗ್ಗೆ ಯೆಹೋವ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಮುಂದೆ ಹೋಗದೆ, ಅವರ ಹಿಂದಿನಿಂದ ಸುತ್ತಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು. \v 24 ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ಯೆಹೋವ ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು. \v 25 ಆಗ ದಾವೀದನು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗೆಬದಿಂದ ಗೆಜೆರಿನವರೆಗೆ ಫಿಲಿಷ್ಟಿಯರನ್ನು ಹೊಡೆದನು. \c 6 \s1 ಮಂಜೂಷವನ್ನು ಯೆರೂಸಲೇಮಿಗೆ ತಂದದ್ದು \p \v 1 ದಾವೀದನು ಇಸ್ರಾಯೇಲಿನಲ್ಲಿ ಆರಿಸಿದ ಮೂವತ್ತು ಸಾವಿರ ಸೈನಿಕರನ್ನು ಕೂಡಿಸಿಕೊಂಡು, \v 2 ಆ ಕೆರೂಬಿಗಳ ನಡುವೆ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು ತನ್ನ ಸಂಗಡ ಇದ್ದ ಸಮಸ್ತ ಜನರನ್ನು ಕರೆದುಕೊಂಡು, ಯೆಹೂದದ ಬಾಲಾ\f + \fr 6:2 \fr*\ft ಅದು, ಕಿರ್ಯತ್‌ಯಾರೀಮ; ನೋಡಿರಿ \+xt 1 ಪೂರ್ವ 13:6\+xt*\ft*\f* ಎಂಬಲ್ಲಿಗೆ ಹೊರಟನು. \v 3 ಆಗ ಅವರು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು, ಅದನ್ನು ಹೊಸ ಬಂಡಿಯ ಮೇಲೆ ಏರಿಸಿದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮಕ್ಕಳಾದ ಉಜ್ಜನು ಹಾಗೂ ಅಹಿಯೋವನು ಆ ಹೊಸ ಬಂಡಿಯನ್ನು ನಡೆಸಿದರು. \v 4 ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದಾಗ ಅಹಿಯೋವನು ದೇವರ ಮಂಜೂಷದ ಮುಂದೆ ನಡೆದನು. \v 5 ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ಸ್ವರಮಂಡಲ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ಯೆಹೋವ ದೇವರ ಮುಂದೆ ಹೋದರು. \p \v 6 ಅವರು ನಾಕೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು. \v 7 ಆಗ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು, ಅಂಥ ಅಗೌರವಕ್ಕಾಗಿ ದೇವರು ಅವನನ್ನು ಶಿಕ್ಷಿಸಿದರು; ಅವನು ಅಲ್ಲಿಯೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು. \p \v 8 ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ, ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ\f + \fr 6:8 \fr*\fq ಪೆರೆಚ್ ಉಜ್ಜ \fq*\ft ಎಂದರೆ \ft*\fqa ಉಜ್ಜನ ವಿರುದ್ಧ ಕೋಪಗೊಂಡಿದ್ದು\fqa*\f* ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ. \p \v 9 ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ಯೆಹೋವ ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು. \v 10 ದಾವೀದನು ಯೆಹೋವ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು. \v 11 ಯೆಹೋವ ದೇವರ ಮಂಜೂಷವು ಗಿತ್ತೀಯನಾದ ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದರು. \p \v 12 “ದೇವರ ಮಂಜೂಷದ ನಿಮಿತ್ತ ಯೆಹೋವ ದೇವರು ಓಬೇದ್ ಏದೋಮನ ಮನೆಯನ್ನೂ, ಅವನಿಗೆ ಉಂಟಾದದ್ದೆಲ್ಲವನ್ನೂ ಆಶೀರ್ವದಿಸಿದ್ದಾರೆ,” ಎಂದು ಅರಸನಾದ ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು ಹೋಗಿ, ಓಬೇದ್ ಏದೋಮನ ಮನೆಯೊಳಗಿಂದ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು. \v 13 ಯೆಹೋವ ದೇವರ ಮಂಜೂಷವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ, ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು. \v 14 ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡು, ತನ್ನ ಪೂರ್ಣಬಲದಿಂದ ಯೆಹೋವ ದೇವರ ಮುಂದೆ ಕುಣಿದಾಡಿದನು. \v 15 ಈ ಪ್ರಕಾರ ದಾವೀದನೂ, ಇಸ್ರಾಯೇಲರೆಲ್ಲರೂ ಯೆಹೋವ ದೇವರ ಮಂಜೂಷವನ್ನು ಆರ್ಭಟದಿಂದಲೂ, ತುತೂರಿಯ ಶಬ್ದದಿಂದಲೂ ಬರಮಾಡಿದರು. \p \v 16 ಯೆಹೋವ ದೇವರ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಅರಸನಾದ ದಾವೀದನು ಯೆಹೋವ ದೇವರ ಮುಂದೆ ಕುಣಿದಾಡುವುದನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು. \p \v 17 ಅವರು ಯೆಹೋವ ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ದಾವೀದನು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. \v 18 ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ, \v 19 ನೆರೆದುಬಂದ ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. \p \v 20 ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ತಿರುಗಿದಾಗ, ಸೌಲನ ಮಗಳಾದ ಮೀಕಲಳು ದಾವೀದನಿಗೆ ಎದುರಾಗಿ ಬಂದು, “ನಿಷ್ಪ್ರಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿ ಹಾಕಿದ ಹಾಗೆಯೇ, ಈ ಹೊತ್ತು ತನ್ನ ಸೇವಕರ ದಾಸಿಯರ ಕಣ್ಣು ಮುಂದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಹೊಂದಿದನು?” ಎಂದಳು. \p \v 21 ಆದರೆ ದಾವೀದನು ಮೀಕಲಳಿಗೆ, “ನಾನು ಕುಣಿದದ್ದು ಯೆಹೋವ ದೇವರ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಆ ಯೆಹೋವ ದೇವರ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು. \v 22 ನಾನು ಇನ್ನೂ ಇದಕ್ಕಿಂತ ಅಲ್ಪನಾಗಿರುವುದಕ್ಕೂ, ಹೀನೈಸಿಕೊಳ್ಳುವುದಕ್ಕೂ, ಸಿದ್ಧನಾಗಿದ್ದೇನೆ. ಆದರೆ ನೀನು ಹೇಳಿದ ದಾಸಿಯರಿಂದ ನಿಶ್ಚಯವಾಗಿ ಘನತೆಯನ್ನು ಹೊಂದುವೆನು,” ಎಂದನು. \p \v 23 ಆದ್ದರಿಂದ ಸೌಲನ ಮಗಳಾದ ಮೀಕಲಳು ತನ್ನ ಮರಣದ ದಿವಸದ ಮಟ್ಟಿಗೂ ಮಕ್ಕಳು ಆಗಲಿಲ್ಲ. \c 7 \s1 ದಾವೀದನಿಗೆ ಯೆಹೋವ ದೇವರ ವಾಗ್ದಾನ \p \v 1 ಯೆಹೋವ ದೇವರು ಅರಸನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅರಸನು ವಿಶ್ರಾಂತಿಯಿಂದ ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, \v 2 ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು. \p \v 3 ಆಗ ನಾತಾನನು ಅರಸನಿಗೆ, “ಆಗಲಿ ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು. ಏಕೆಂದರೆ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು. \p \v 4 ಅದೇ ರಾತ್ರಿಯಲ್ಲಿ ಯೆಹೋವ ದೇವರ ವಾಕ್ಯವು ನಾತಾನನಿಗೆ ಉಂಟಾಗಿ, \pm \v 5 “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಬೇಕೆಂದಿರುವೆಯೋ? \v 6 ನಿಶ್ಚಯವಾಗಿ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು. \v 7 ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು, ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’ \pm \v 8 “ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು. \v 9 ನೀನು ಎಲ್ಲಿ ಹೋದರೂ, ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು. \v 10 ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು. \v 11 ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ಆ ದಿವಸದಿಂದ ಈಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಮೇಲೆ ಕುಗ್ಗಿಸದೆ ಇರುವರು. \pm “ ‘ನಿನ್ನನ್ನು, ನಿನ್ನ ಸಮಸ್ತ ಶತ್ರುಗಳಿಂದ ತಪ್ಪಿಸಿ, ನಿನಗೆ ವಿಶ್ರಾಂತಿಯನ್ನು ಉಂಟುಮಾಡುವೆನು. ಇದಲ್ಲದೆ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ, ನಾನು ನಿನ್ನ ರಾಜವಂಶವನ್ನು ಸ್ಥಿರಪಡಿಸುವೆನು. \v 12 ನಿನ್ನ ಆಯುಷ್ಕಾಲವು ಮುಗಿದ ಮೇಲೆ ನೀನು ನಿನ್ನ ಪಿತೃಗಳ ಜೊತೆ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು. \v 13 ಅವನೇ ನನ್ನ ಹೆಸರಿಗಾಗಿ ದೇವಾಲಯನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. \v 14 ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು. \v 15 ಆದರೆ ಸೌಲನ ಮೇಲಿದ್ದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ, ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ. ನಾನು ಸೌಲನನ್ನು ನಿನ್ನ ಮುಂದೆಯೇ ಹೊರಡಿಸಿಬಿಟ್ಟೆನಲ್ಲಾ. \v 16 ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು. \p \v 17 ನಾತಾನನು ಈ ಸಮಸ್ತ ಪ್ರಕಟಣೆಯ ಮಾತುಗಳನ್ನು ದಾವೀದನಿಗೆ ತಿಳಿಸಿದನು. \s1 ದಾವೀದನ ಪ್ರಾರ್ಥನೆ \p \v 18 ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, \pm “ಸಾರ್ವಭೌಮ ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು? \v 19 ಸಾರ್ವಭೌಮ ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಸಾರ್ವಭೌಮ ಯೆಹೋವ ದೇವರೇ, ಇದು ನೀವು ಮನುಷ್ಯನೊಂದಿಗೆ ವರ್ತಿಸುವ ಕ್ರಮ. \pm \v 20 “ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ; ಓ ಸಾರ್ವಭೌಮ ಯೆಹೋವ ದೇವರೇ, \v 21 ನಿಮ್ಮ ವಾಕ್ಯದ ನಿಮಿತ್ತವಾಗಿಯೂ ನಿಮ್ಮ ಚಿತ್ತಾನುಸಾರವಾಗಿಯೂ ನಿಮ್ಮ ಸೇವಕನಿಗೆ ತಿಳಿಯಪಡಿಸುವ ಹಾಗೆ ಈ ಮಹಾಕಾರ್ಯಗಳನ್ನೆಲ್ಲಾ ಮಾಡಿದಿರಿ. \pm \v 22 “ಸಾರ್ವಭೌಮ ಯೆಹೋವ ದೇವರೇ, ನೀವು ಮಹೋನ್ನತರಾಗಿದ್ದೀರಿ. ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ. \v 23 ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ? \v 24 ದೇವರಾದ ಯೆಹೋವ ದೇವರೇ, ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಇರುವ ಹಾಗೆ ಸ್ಥಿರಪಡಿಸಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ. \pm \v 25 “ಈಗ ದೇವರಾದ ಯೆಹೋವ ದೇವರೇ, ನೀವು ನಿಮ್ಮ ಸೇವಕನನ್ನು ಕುರಿತೂ, ಅವನ ಕುಟುಂಬವನ್ನು ಕುರಿತೂ ಮಾಡಿದ ವಾಗ್ದಾನವನ್ನು ನೆರವೇರಿಸಿ ಅದನ್ನು ಶಾಶ್ವತವಾಗಿ ಸ್ಥಿರಪಡಿಸಿರಿ. \v 26 ಹೀಗೆ ನಿಮ್ಮ ಹೆಸರು ಎಂದೆಂದಿಗೂ ಶ್ರೇಷ್ಠವಾಗಿರುತ್ತದೆ. ಆಗ ಜನರು, ‘ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲರ ದೇವರು,’ ಎಂದು ಹೇಳುವರು. ಇದಲ್ಲದೆ ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರುವುದು. \pm \v 27 “ಸೇನಾಧೀಶ್ವರ ಯೆಹೋವ ದೇವರೇ, ಇಸ್ರಾಯೇಲಿನ ದೇವರೇ, ‘ನಾನು ನಿಮಗೆ ಮನೆಯನ್ನು ಕಟ್ಟುವೆನೆಂದು’ ನಿಮ್ಮ ಸೇವಕನಿಗೆ ಪ್ರಕಟ ಮಾಡಿದ್ದರಿಂದ, ನಿಮ್ಮನ್ನು ಕುರಿತು ಈ ಪ್ರಾರ್ಥನೆಯನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು. \v 28 ಸಾರ್ವಭೌಮ ಯೆಹೋವ ದೇವರೇ, ನಿಮ್ಮ ವಾಕ್ಯಗಳು ಸತ್ಯವಾದದ್ದು. ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ. \v 29 ಆದಕಾರಣ ಈಗ ನಿಮ್ಮ ಸೇವಕನ ಮನೆಯು ನಿಮ್ಮ ಮುಂದೆ ಶಾಶ್ವತವಾಗಿ ಇರುವ ಹಾಗೆ ಅದನ್ನು ಆಶೀರ್ವದಿಸಲು ಸಂತೋಷಪಡಿರಿ. ಸಾರ್ವಭೌಮ ಯೆಹೋವ ದೇವರೇ, ಅದನ್ನು ಹೇಳಿದವರು ನೀವೇ; ನಿಮ್ಮ ಆಶೀರ್ವಾದದಿಂದ ನಿಮ್ಮ ಸೇವಕನ ಮನೆಯಲ್ಲಿ ನಿತ್ಯವೂ ಸೌಭಾಗ್ಯವಿರಲಿ.” \c 8 \s1 ದಾವೀದನ ವಿಜಯಗಳು \p \v 1 ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಮೇತೆಗ್ ಅಮ್ಮಹವನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು. \p \v 2 ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು. \p \v 3 ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಚೋಬದ ಅರಸನಾದ ರೆಹೋಬನ ಮಗ ಹದದೆಜೆರನನ್ನು ಸೋಲಿಸಿದನು. \v 4 ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು. \p \v 5 ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು. \v 6 ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು. \p \v 7 ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು. \v 8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ, ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು. \p \v 9 ದಾವೀದನು ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ, \v 10 ಅವನು ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಯೋರಾಮನನ್ನು ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು. \p \v 11 ಅರಸನಾದ ದಾವೀದನು ಚಿನ್ನ, ಬೆಳ್ಳಿ ಮತ್ತು ಕಂಚಿನ ಎಲ್ಲಾ ವಸ್ತುಗಳನ್ನು ಯೆಹೋವ ದೇವರಿಗೆ ಸಮರ್ಪಿಸಿದನು. ಜೊತೆಗೆ ಅವನು ಸೋತ ಎಲ್ಲಾ ದೇಶಗಳಿಂದ ವಶಪಡಿಸಿಕೊಂಡ ವಸ್ತುಗಳನ್ನೂ ಅರ್ಪಿಸಿದನು. \v 12 ಅಂದರೆ, ಅರಾಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಮತ್ತು ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಿಂದ ಪಡೆದ ಕೊಳ್ಳೆಯನ್ನೂ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು. \p \v 13 ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂದಿರುಗಿದಾಗ ಪ್ರಖ್ಯಾತಿ ಹೊಂದಿದನು. \p \v 14 ಸಮಸ್ತ ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು. \s1 ದಾವೀದನ ಅಧಿಕಾರಿಗಳು \p \v 15 ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು. \v 16 ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು. \v 17 ಅಹೀಟೂಬನ ಮಗ ಚಾದೋಕನೂ ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು. \v 18 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು\f + \fr 8:18 \fr*\ft ಅಥವಾ, \ft*\fqa ಯಾಜಕ \fqa*\ft ನೋಡಿರಿ \+xt 1 ಪೂರ್ವ 18:17\+xt*\ft*\f*. \c 9 \s1 ದಾವೀದನು ಹಾಗೂ ಮೆಫೀಬೋಶೆತನು \p \v 1 ದಾವೀದನು, “ಸೌಲನ ಕುಟುಂಬದಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆ ತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ?” ಎಂದು ಕೇಳಿದನು. \p \v 2 ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ, “ನೀನು ಚೀಬನೋ?” ಎಂದನು. \p ಅದಕ್ಕವನು, “ನಿನ್ನ ದಾಸನು ನಾನೇ,” ಎಂದನು. \p \v 3 ಅರಸನು, “ನಾನು ದೇವರ ದಯೆ ತೋರಿಸುವ ಹಾಗೆ ಸೌಲನ ಕುಟುಂಬದಲ್ಲಿ ಇನ್ನೂ ಯಾವನಾದರೂ ಇದ್ದಾನೋ?” ಎಂದನು. \p ಆಗ ಚೀಬನು ಅರಸನಿಗೆ, “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಮಗನಿದ್ದಾನೆ,” ಎಂದನು. \p \v 4 “ಅವನು ಎಲ್ಲಿ ಇದ್ದಾನೆ?” ಎಂದು ಅರಸನು ಅವನನ್ನು ಕೇಳಿದನು. \p ಚೀಬನು ಅರಸನಿಗೆ, “ಅವನು ಲೋದೆಬಾರಲ್ಲಿ ಅಮ್ಮಿಯೇಲನ ಮಗ ಮಾಕೀರನ ಮನೆಯಲ್ಲಿ ಇದ್ದಾನೆ,” ಎಂದನು. \p \v 5 ಆಗ ಅರಸ ದಾವೀದನು ಲೋದೆಬಾರಿನಲ್ಲಿರುವ ಅಮ್ಮಿಯೇಲನ ಮಗ ಮಾಕೀರನ ಮನೆಯಿಂದ ಅವನನ್ನು ಕರೆಯಕಳುಹಿಸಿದನು. \p \v 6 ಸೌಲನ ಮಗನಾಗಿರುವ ಯೋನಾತಾನನ ಮಗ ಮೆಫೀಬೋಶೆತನು ದಾವೀದನ ಬಳಿಗೆ ಬಂದಾಗ, ಮೋರೆ ಕೆಳಗಾಗಿ ಬಿದ್ದು ವಂದಿಸಿದನು. \p ದಾವೀದನು, “ಮೆಫೀಬೋಶೆತನೇ,” ಎಂದನು. \p ಅವನು, “ಇಗೋ, ನಿನ್ನ ದಾಸನು,” ಎಂದನು. \p \v 7 ಆಗ ದಾವೀದನು ಅವನಿಗೆ, “ಭಯಪಡಬೇಡ, ಏಕೆಂದರೆ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆ ತೋರಿಸುವೆನು. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರುಗಿ ಕೊಡುವೆನು ಮತ್ತು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವೆ,” ಎಂದನು. \p \v 8 ಆಗ ಅವನು ಅಡ್ಡಬಿದ್ದು, “ನೀನು ನನ್ನಂಥ ಸತ್ತ ನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು,” ಎಂದನು. \p \v 9 ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು, “ನಿನ್ನ ಯಜಮಾನ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ. \v 10 ಆದ್ದರಿಂದ ನೀನೂ, ನಿನ್ನ ಪುತ್ರರೂ, ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ, ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ, ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮೊಮ್ಮಗ ಮೆಫೀಬೋಶೆತನು ನಿತ್ಯವೂ ನನ್ನ ಮೇಜಿನಲ್ಲಿ ಊಟಮಾಡುವನು,” ಎಂದನು. ಈ ಚೀಬನಿಗೆ ಹದಿನೈದು ಮಂದಿ ಪುತ್ರರೂ ಇಪ್ಪತ್ತು ಮಂದಿ ದಾಸರೂ ಇದ್ದರು. \p \v 11 ಆಗ ಚೀಬನು ಅರಸನಿಗೆ, “ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು,” ಎಂದನು. ಅರಸನ ಪುತ್ರರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು. \p \v 12 ಮೆಫೀಬೋಶೆತನಿಗೆ ಮೀಕನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾಗಿದ್ದ ಸಮಸ್ತರೂ ಮೆಫೀಬೋಶೆತನಿಗೆ ದಾಸರಾಗಿದ್ದರು. \v 13 ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದ್ದುದರಿಂದ ಯೆರೂಸಲೇಮಿನಲ್ಲೇ ವಾಸವಾಗಿದ್ದನು. ಅವನಿಗೆ ಎರಡೂ ಕಾಲು ಕುಂಟಾಗಿದ್ದವು. \c 10 \s1 ದಾವೀದನು ಅಮ್ಮೋನಿಯರನ್ನು ಸೋಲಿಸಿದ್ದು \p \v 1 ಇದರ ತರುವಾಯ, ಅಮ್ಮೋನಿಯರ ಅರಸನು ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗ ಹಾನೂನನು ಅರಸನಾದನು. \v 2 ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. \p ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು. \v 3 ಆಗ ಅಮ್ಮೋನಿಯರ ಪ್ರಧಾನರು ತಮ್ಮ ಯಜಮಾನನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ದಾವೀದನು ತನ್ನ ಸೇವಕರನ್ನು ಈ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಕಳುಹಿಸಿದ್ದಾನಲ್ಲವೇ,” ಎಂದರು. \v 4 ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು, ಅವರ ಅರ್ಧ ಗಡ್ಡವನ್ನು ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು. \p \v 5 ಅವರು ಈ ವಿಷಯದ ಕುರಿತು ದಾವೀದನಿಗೆ ಹೇಳಿ ಕಳುಹಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ” ಎಂದು ಹೇಳಿಸಿದನು. \p \v 6 ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು. \p \v 7 ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು. \v 8 ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು. \p \v 9 ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು. \v 10 ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು, \v 11 ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು. \v 12 ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು. \p \v 13 ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು. \v 14 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರು ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು, ಯೆರೂಸಲೇಮಿಗೆ ತಿರುಗಿಹೋದನು. \p \v 15 ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರೆಲ್ಲರು ಒಟ್ಟಾಗಿ ಕೂಡಿಬಂದರು. \v 16 ಹದದೆಜೆರನು ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡದ್ದರಿಂದ ಅವರು ಹೆಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು. \p \v 17 ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ ಹೆಲಾಮಿಗೆ ಬಂದನು. ಅರಾಮ್ಯರು ದಾವೀದನಿಗೆದುರಾಗಿ ವ್ಯೂಹ ಕಟ್ಟಿ ಯುದ್ಧಮಾಡಿದರು. \v 18 ಆಗ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ ಕೊಂದು, ಅವರ ಸೇನಾಧಿಪತಿಯಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಮರಣಹೊಂದಿದನು. \v 19 ಹದದೆಜೆರನ ಸೇವಕರಾದ ಸಮಸ್ತ ಅರಸರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ಇಸ್ರಾಯೇಲರ ಸಂಗಡ ಸಂಧಾನ ಮಾಡಿಕೊಂಡು ಅವರಿಗೆ ಅಧೀನರಾದರು. \p ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಭಯಪಟ್ಟರು. \c 11 \s1 ದಾವೀದನು ಮತ್ತು ಬತ್ಷೆಬೆಳು \p \v 1 ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. \p \v 2 ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು. \v 3 ಆ ಸ್ತ್ರೀಯು ಬಹು ಸೌಂದರ್ಯವುಳ್ಳ ರೂಪವತಿಯಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವುದಕ್ಕೆ ಕಳುಹಿಸಿದಾಗ ಒಬ್ಬನು, “ಅವಳು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಬತ್ಷೆಬೆಳು,” ಎಂದನು. \v 4 ಆಗ ದಾವೀದನು ದೂತರನ್ನು ಕಳುಹಿಸಿ ಅವಳನ್ನು ಬರಮಾಡಿಕೊಂಡನು. ಅವಳು ಅವನ ಬಳಿಗೆ ಬಂದಾಗ, ಅವಳು ತನ್ನ ಮೈಲಿಗೆಯನ್ನು ಕಳೆದುಕೊಂಡು ಶುಚಿಯಾಗಿದ್ದದರಿಂದ, ದಾವೀದನು ಅವಳ ಸಂಗಡ ಮಲಗಿದನು. \v 5 ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ, “ತಾನು ಗರ್ಭವತಿ,” ಎಂಬ ವಿಷಯವನ್ನು ದಾವೀದನಿಗೆ ಹೇಳಿ ಕಳುಹಿಸಿದಳು. \p \v 6 ಆಗ ದಾವೀದನು, “ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸು,” ಎಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು. \v 7 ಊರೀಯನು ದಾವೀದನ ಬಳಿಗೆ ಬಂದಾಗ, ದಾವೀದನು ಅವನನ್ನು, “ಯೋವಾಬನೂ ಸೈನ್ಯದವರೂ ಹೇಗಿದ್ದಾರೆ? ಮತ್ತು ಯುದ್ಧವು ಹೇಗಿದೆ?” ಎಂದು ವಿಚಾರಿಸಿದನು. \v 8 ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು. \v 9 ಆದರೆ ಊರೀಯನು ತನ್ನ ಮನೆಗೆ ಹೋಗದೆ, ಅರಮನೆಯ ಬಾಗಿಲ ಬಳಿಯಲ್ಲಿ ತನ್ನ ಅರಸನ ಸಮಸ್ತ ಸೇವಕರ ಸಂಗಡ ಮಲಗಿದ್ದನು. \p \v 10 ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ದಾವೀದನು ಊರೀಯನಿಗೆ, “ನೀನು ಪ್ರಯಾಣದಿಂದ ಬರಲಿಲ್ಲವೋ? ಏಕೆ ನಿನ್ನ ಮನೆಗೆ ಹೋಗಲಿಲ್ಲ?” ಎಂದನು. \p \v 11 ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು. \p \v 12 ಆಗ ದಾವೀದನು ಊರೀಯನಿಗೆ, “ಈ ಹೊತ್ತು ಇಲ್ಲಿರು. ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಊರೀಯನೂ ಆ ದಿನವೂ, ಮಾರನೆಯ ದಿವಸವೂ ಯೆರೂಸಲೇಮಿನಲ್ಲಿ ಇದ್ದನು. \v 13 ದಾವೀದನು ಅವನನ್ನು ಕರೆದಾಗ, ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ, ತನ್ನ ಯಜಮಾನನ ಸೇವಕರ ಸಂಗಡ ಮಲಗುವುದಕ್ಕೆ ಹೊರಟುಹೋದನು. \p \v 14 ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು, ಊರೀಯನ ಕೈಯಲ್ಲಿ ಕಳುಹಿಸಿದನು. \v 15 ಆ ಪತ್ರದಲ್ಲಿ, “ಊರೀಯನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂದೆ ನಿಲ್ಲಿಸಿ, ಅವನು ಗಾಯಗೊಂಡು ಸಾಯುವಂತೆ, ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿದುಕೊಳ್ಳಿರಿ,” ಎಂದು ಬರೆದಿದ್ದನು. \p \v 16 ಹಾಗೆಯೇ ಯೋವಾಬನು ಆ ಪಟ್ಟಣವನ್ನು ಮುತ್ತಿಗೆ ಹಾಕುವಾಗ, ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳಿದುಕೊಂಡು, ಅಲ್ಲಿ ಊರೀಯನನ್ನು ನಿಲ್ಲಿಸಿದನು. \v 17 ಪಟ್ಟಣದ ಮನುಷ್ಯರು ಹೊರಟು ಯೋವಾಬನ ಸಂಗಡ ಯುದ್ಧಮಾಡುವಾಗ, ದಾವೀದನ ಸೇವಕರಾದವರಲ್ಲಿ ಕೆಲವರು ಸತ್ತರು. ಇದಲ್ಲದೆ ಹಿತ್ತಿಯನಾದ ಊರೀಯನೂ ಸತ್ತನು. \p \v 18 ಆಗ ಯೋವಾಬನು ಯುದ್ಧದ ವರ್ತಮಾನಗಳನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನೆಂದರೆ: \v 19 “ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ, \v 20 ಅರಸನಿಗೆ ಕೋಪ ಉರಿದು, ‘ನೀವು ಯುದ್ಧಮಾಡುವುದಕ್ಕೆ ಪಟ್ಟಣಕ್ಕೆ ಇಷ್ಟು ಸಮೀಪವಾಗಿ ಸೇರಿದ್ದೇನು? \v 21 ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ‍್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು. \p \v 22 ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ತನ್ನೊಂದಿಗೆ ಕಳುಹಿಸಿದ ವರ್ತಮಾನಗಳನ್ನೆಲ್ಲಾ ತಿಳಿಸಿದನು. \v 23 ಆ ದೂತನು ದಾವೀದನಿಗೆ, “ಆ ಮನುಷ್ಯರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬಯಲಿನಲ್ಲಿ ನಮ್ಮ ಮೇಲೆ ಹೊರಟುಬಂದಾಗ, ನಾವು ಪಟ್ಟಣದ ಬಾಗಿಲವರೆಗೆ ಅವರ ಮೇಲೆ ಬಂದೆವು. \v 24 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದ ಕಾರಣ, ಅರಸನ ಸೇವಕರಲ್ಲಿ ಕೆಲವರು ಸತ್ತರು. ಇದಲ್ಲದೆ ನಿನ್ನ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನು,” ಎಂದನು. \p \v 25 ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು. \p \v 26 ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ, ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು. \v 27 ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು. \c 12 \s1 ನಾತಾನನು ದಾವೀದನನ್ನು ಗದರಿಸಿದ್ದು \p \v 1 ಯೆಹೋವ ದೇವರು ದಾವೀದನ ಬಳಿಗೆ ನಾತಾನನನ್ನು ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಅವನಿಗೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು. \v 2 ಐಶ್ವರ್ಯವಂತನಿಗೆ ಕುರಿದನಗಳು ಬಹಳವಾಗಿದ್ದವು. \v 3 ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡ, ಅವನ ಮಕ್ಕಳ ಸಂಗಡ ಬೆಳೆದು, ಅವನ ಸ್ವಂತ ಆಹಾರ ತಿಂದು, ಅವನ ಪಾತ್ರೆಯಲ್ಲಿ ಕುಡಿದು, ಅವನ ಮಗ್ಗುಲಲ್ಲಿ ಮಲಗಿಕೊಂಡು, ಅವನಿಗೆ ಮಗಳ ಹಾಗಿತ್ತು. \p \v 4 “ಐಶ್ವರ್ಯವಂತನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ, ಐಶ್ವರ್ಯವಂತನು ಅತಿಥಿಗಾಗಿ ಅಡಿಗೆಯನ್ನು ಮಾಡಿಸುವುದಕ್ಕೆ ತನ್ನ ಕುರಿದನಗಳಲ್ಲಿ ಒಂದನ್ನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಕುರಿಯನ್ನು ತೆಗೆದುಕೊಂಡು, ತನ್ನ ಬಳಿಗೆ ಬಂದ ಮನುಷ್ಯನಿಗೋಸ್ಕರ ಅದನ್ನು ಅಡಿಗೆ ಮಾಡಿಸಿದನು,” ಎಂದನು. \p \v 5 ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ, “ಯೆಹೋವ ದೇವರ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು. \v 6 ಅವನು ಕನಿಕರಪಡದೆ ಈ ಕಾರ್ಯವನ್ನು ಮಾಡಿದ್ದರಿಂದ, ಆ ಕುರಿಗೋಸ್ಕರವಾಗಿ ನಾಲ್ಕರಷ್ಟು ತಿರುಗಿ ಕೊಡಬೇಕು,” ಎಂದನು. \p \v 7 ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು; \v 8 ನಿನ್ನ ಯಜಮಾನನ ಮನೆಯನ್ನೂ, ನಿನ್ನ ಯಜಮಾನನ ಹೆಂಡತಿಯರನ್ನೂ ನಿನಗೆ ಕೊಟ್ಟು; ಇಸ್ರಾಯೇಲಿನ ಮನೆಯನ್ನೂ, ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ, ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. \v 9 ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ. \v 10 ಈಗ ನೀನು ನನ್ನನ್ನು ತಿರಸ್ಕರಿಸಿ, ಹಿತ್ತಿಯನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡದ್ದರಿಂದ, ಖಡ್ಗವು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ತೊಲಗದು. \p \v 11 “ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ, ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು, ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲು ಹೊತ್ತಿನಲ್ಲಿಯೇ ಅವರ ಸಂಗಡ ಮಲಗುವನು. \v 12 ಏಕೆಂದರೆ ನೀನು ಮರೆಯಲ್ಲಿ ಅದನ್ನು ಮಾಡಿದೆ. ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲರೆಲ್ಲರ ಮುಂದೆಯೂ, ಹಗಲು ಹೊತ್ತಿನಲ್ಲಿಯೂ ಮಾಡುವೆನು,’ ” ಎಂದನು. \p \v 13 ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. \p ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು. \v 14 ಹೇಗಿದ್ದರೂ ಈ ಕಾರ್ಯದಿಂದ ನೀನು ಯೆಹೋವ ದೇವರ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ, ನಿನಗೆ ಹುಟ್ಟಿದ ಮಗುವು ಖಂಡಿತವಾಗಿ ಸಾಯುವುದು,” ಎಂದನು. \p \v 15 ನಂತರ ನಾತಾನನು ತನ್ನ ಮನೆಗೆ ಹೋದನು. ಯೆಹೋವ ದೇವರು, ಊರೀಯನ ಹೆಂಡತಿಯು ದಾವೀದನಿಗೆ ಹೆತ್ತ ಕೂಸನ್ನು ಬಾಧಿಸಲು, ಅದು ಬಹಳ ಅಸ್ವಸ್ಥವಾಯಿತು. \v 16 ದಾವೀದನು ಕೂಸಿಗೋಸ್ಕರ ದೇವರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪವಾಸ ಮಾಡಿ, ಒಳಗಿನ ಕೋಣೆಯಲ್ಲಿ ನೆಲದ ಮೇಲೆಯೇ ರಾತ್ರಿ ಕಳೆಯುತ್ತಿದ್ದನು. \v 17 ಅವನನ್ನು ಎಬ್ಬಿಸುವುದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು. ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಇದ್ದನು. \p \v 18 ಮಗುವು ಏಳನೆಯ ದಿವಸ ಸತ್ತು ಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿಸುವುದಕ್ಕೆ ಭಯಪಟ್ಟರು. ಏಕೆಂದರೆ, “ಮಗುವು ಇನ್ನೂ ಬದುಕಿರುವಾಗ, ನಾವು ಅವನ ಸಂಗಡ ಮಾತನಾಡಿದಾಗ, ಅವನು ನಮ್ಮ ಮಾತನ್ನು ಕೇಳದೆ ಹೋದನು. ಈಗ ಮಗುವು ಸತ್ತು ಹೋಯಿತೆಂದು ನಾವು ಅವನಿಗೆ ಹೇಳಿದರೆ, ಅವನು ತನಗೆ ಏನಾದರೂ ಕೇಡುಮಾಡಿಕೊಳ್ಳುವನೋ?” ಎಂದುಕೊಂಡರು. \p \v 19 ಆದರೆ ದಾವೀದನು ತನ್ನ ಸೇವಕರು ಪಿಸುಗುಟ್ಟುವುದನ್ನು ಕಂಡು, ಮಗು ಸತ್ತು ಹೋಯಿತೆಂದು ಗ್ರಹಿಸಿಕೊಂಡನು. ದಾವೀದನು ತನ್ನ ಸೇವಕರಿಗೆ, “ಮಗುವು ಸತ್ತು ಹೋಯಿತೋ?” ಎಂದನು. \p ಅವರು, “ಸತ್ತು ಹೋಯಿತು,” ಎಂದರು. \p \v 20 ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ, ತೈಲವನ್ನು ಹಚ್ಚಿಕೊಂಡವನಾಗಿ, ಬದಲು ವಸ್ತ್ರಗಳನ್ನು ಧರಿಸಿಕೊಂಡು, ಯೆಹೋವ ದೇವರ ಮನೆಗೆ ಹೋಗಿ, ಅವರನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನ ಕೋರಿಕೆಯ ಮೇರೆಗೆ ಅವರು ಅವನಿಗೆ ಆಹಾರವನ್ನು ಬಡಿಸಿದರು ಮತ್ತು ಅವನು ತಿನ್ನುತ್ತಿದ್ದನು. \p \v 21 ಅವನ ಸೇವಕರು ಅವನಿಗೆ, “ಇದು ಏನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ, ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದೆ. ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದೆ,” ಎಂದರು. \p \v 22 ಅದಕ್ಕವನು, “ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಯೆಹೋವ ದೇವರು ನನಗೆ ದಯಮಾಡುವರೋ ಎಂದು ಉಪವಾಸ ಮಾಡಿ ಅತ್ತೆನು. \v 23 ಆದರೆ ಈಗ ಸತ್ತಿದೆಯಲ್ಲಾ. ನಾನು ಉಪವಾಸ ಮಾಡುವುದು ಏಕೆ? ನಾನು ಅದನ್ನು ತಿರುಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು. ಆದರೆ ಅದು ನನ್ನ ಬಳಿಗೆ ತಿರುಗಿ ಬರುವುದಿಲ್ಲ,” ಎಂದನು. \p \v 24 ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಳನ್ನು ಆಧರಿಸಿ, ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು. ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಯೆಹೋವ ದೇವರು ಅವನನ್ನು ಪ್ರೀತಿ ಮಾಡಿದರು. \v 25 ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ\f + \fr 12:25 \fr*\fq ಯೆದೀದ್ಯ \fq*\ft ಅರ್ಥ \ft*\fqa ಯೆಹೋವ ದೇವರಿಗೆ ಪ್ರಿಯನು\fqa*\f* ಎಂದು ಹೆಸರಿಟ್ಟನು. \p \v 26 ಯೋವಾಬನು ಅಮ್ಮೋನಿಯರ ರಬ್ಬತಿನ ಮೇಲೆ ಯುದ್ಧಮಾಡಿ, ಅರಮನೆ ಇದ್ದ ಪಟ್ಟಣವನ್ನು ವಶಪಡಿಸಿಕೊಂಡನು. \v 27 ಯೋವಾಬನು ದಾವೀದನಿಗೆ, “ನಾನು ರಬ್ಬಕ್ಕೆ ವಿರೋಧವಾಗಿ ಯುದ್ಧಮಾಡಿ, ನೀರು ಪೂರೈಕೆಯ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ. \v 28 ಈಗ ನಾನು ಪಟ್ಟಣವನ್ನು ಹಿಡಿದು, ಅದು ನನ್ನ ಹೆಸರಿಗೆ ಕೀರ್ತಿ ಬಾರದ ಹಾಗೆ ನೀನು ಜನರನ್ನು ಕೂಡಿಸಿಕೊಂಡು ಬಂದು, ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ,” ಎಂದು ಹೇಳಿ ದೂತರನ್ನು ಕಳುಹಿಸಿದನು. \p \v 29 ಹಾಗೆಯೇ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿ ಅದನ್ನು ವಶಮಾಡಿಕೊಂಡನು. \v 30 ಇದಲ್ಲದೆ ದಾವೀದನು ಅಮ್ಮೋನಿಯರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ಸಹ ತೆಗೆದುಕೊಂಡನು. ಅದು ಮೂವತ್ತೈದು ಕಿಲೋಗ್ರಾಂ ತೂಕದ್ದಾಗಿತ್ತು ಅದನ್ನು ಬಂಗಾರದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ ಅಲಂಕರಿಸಲಾಗಿತ್ತು, ಆ ಕಿರೀಟವನ್ನು ದಾವೀದನ ಶಿರಸ್ಸಿನಲ್ಲಿ ಧರಿಸಲಾಯಿತು. ಆ ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು. \v 31 ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು. \c 13 \s1 ಅಮ್ನೋನನು ಮತ್ತು ತಾಮಾರಳು \p \v 1 ಕಾಲಾಂತರದಲ್ಲಿ ದಾವೀದನ ಮಗ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸುಂದರಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗ ಅಮ್ನೋನನು ಪ್ರೀತಿಮಾಡಿದನು. \p \v 2 ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ಸಂಕಟಪಟ್ಟು ಅಸ್ವಸ್ಥನಾದನು. ಅವಳು ಕನ್ಯೆಯಾಗಿದ್ದಳು. ಆದ್ದರಿಂದ ಅವಳನ್ನು ಏನಾದರೂ ಮಾಡುವುದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು. \p \v 3 ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮೆಯನ ಮಗ ಯೊನಾದಾಬನೆಂಬ ಹೆಸರುಳ್ಳ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಬಹು ಕುಯುಕ್ತಿಯುಳ್ಳವನಾಗಿದ್ದನು. \v 4 ಯೋನಾದಾಬನು ಅಮ್ನೋನನಿಗೆ, “ಅರಸನ ಮಗನಾದ ನೀನು ದಿನದಿನಕ್ಕೆ ಏಕೆ ಕ್ಷೀಣವಾಗಿ ಹೋಗುತ್ತೀ? ನನಗೆ ತಿಳಿಸುವುದಿಲ್ಲವೋ?” ಎಂದನು. \p ಅದಕ್ಕೆ ಅಮ್ನೋನನು ಅವನಿಗೆ, “ನಾನು ನನ್ನ ಸಹೋದರನಾಗಿರುವ ಅಬ್ಷಾಲೋಮನ ಸಹೋದರಿ ತಾಮಾರಳನ್ನು ಪ್ರೀತಿಮಾಡುತ್ತಿದ್ದೇನೆ,” ಎಂದನು. \p \v 5 ಆಗ ಯೋನಾದಾಬನು ಅವನಿಗೆ, “ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವುದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ, ‘ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು. ನಾನು ಅವಳ ಕೈಯಿಂದ ಉಣ್ಣುವ ಹಾಗೆ, ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ, ನನಗೆ ಆಹಾರ ಕೊಡಲಿ,’ ಎಂದು ಹೇಳು,” ಎಂದನು. \p \v 6 ಅಮ್ನೋನನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿಕೊಂಡನು. ಅರಸನು ತನ್ನನ್ನು ನೋಡುವುದಕ್ಕೆ ಬಂದಾಗ ಅಮ್ನೋನನು ಅರಸನಿಗೆ, “ನೀವು ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣು ಮುಂದೆ ಎರಡು ಭಕ್ಷ್ಯಗಳನ್ನು ಮಾಡುವುದಕ್ಕೆ ಬರಲಿ,” ಎಂದನು. \p \v 7 ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ, “ನೀನು ನಿನ್ನ ಸಹೋದರ ಅಮ್ನೋನನ ಮನೆಗೆ ಹೋಗಿ, ಅವನಿಗೆ ಅಡಿಗೆಯನ್ನು ಮಾಡಿ ಇಡು,” ಎಂದನು. \v 8 ಹಾಗೆಯೇ ತಾಮಾರಳು ತನ್ನ ಸಹೋದರ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದು ಕಲಸಿ, ಅವನ ಕಣ್ಣು ಮುಂದೆ ನಾದಿ, ಭಕ್ಷ್ಯಗಳನ್ನು ಮಾಡಿ, \v 9 ಪಾತ್ರೆ ತೆಗೆದುಕೊಂಡು ಅವನ ಮುಂದೆ ಇಟ್ಟಳು. \p ಆದರೆ ಅಮ್ನೋನನು, “ನಾನು ಉಣ್ಣುವುದಿಲ್ಲ,” ಎಂದು ಹೇಳಿ, “ನನ್ನ ಬಳಿಯಿಂದ ಎಲ್ಲಾ ಮನುಷ್ಯರನ್ನು ಕಳುಹಿಸಿಬಿಡಿರಿ,” ಎಂದನು. ಹಾಗೆಯೇ ಎಲ್ಲರು ಅವನನ್ನು ಬಿಟ್ಟುಹೋದರು. \v 10 ಆಗ ಅಮ್ನೋನನು, “ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿಯೊಳಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿಯೊಳಗೆ ತನ್ನ ಸಹೋದರನಾದ ಅಮ್ಮೋನನ ಬಳಿಗೆ ತೆಗೆದುಕೊಂಡು ಬಂದಳು. \v 11 ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ, ಅವನು ಅವಳನ್ನು ಹಿಡಿದು ಅವಳಿಗೆ, “ನನ್ನ ಸಹೋದರಿಯೇ, ನನ್ನ ಸಂಗಡ ಮಲಗು ಬಾ,” ಎಂದನು. \p \v 12 ಅದಕ್ಕವಳು, “ನನ್ನ ಸಹೋದರನೇ, ಬೇಡ. ನನ್ನನ್ನು ಒತ್ತಾಯ ಮಾಡಬೇಡ. ಏಕೆಂದರೆ ಇಸ್ರಾಯೇಲಿನಲ್ಲಿ ಇಂಥ ಕಾರ್ಯ ಮಾಡಕೂಡದು. ಇಂಥ ದುಷ್ಟತನದ ಕೆಲಸ ಮಾಡಬೇಡ. \v 13 ಈ ಅವಮಾನವನ್ನು ಮರೆಮಾಡುವುದು ಹೇಗೆ? ನೀನು ಇಸ್ರಾಯೇಲಿನಲ್ಲಿ ದುಷ್ಟ ಮೂರ್ಖರೊಳಗೆ ಒಬ್ಬನಾಗಿ ಇರುವೆ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು. ಏಕೆಂದರೆ ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ,” ಎಂದಳು. \v 14 ಆದರೆ ಅವನು ಅವಳ ಮಾತನ್ನು ಕೇಳಲಿಲ್ಲ. ಅಮ್ನೋನನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಅವನು ಬಲಾತ್ಕಾರದಿಂದ ಅವಳ ಮೇಲೆ ಅತ್ಯಾಚಾರಮಾಡಿದನು. \p \v 15 ಅನಂತರ ಅಮ್ನೋನನು ಅವಳನ್ನು ಅತ್ಯಂತ ಹಗೆ ಮಾಡಿದನು. ಅವಳನ್ನು ಹಗೆ ಮಾಡುವ ಮೊದಲು ಮಾಡಿದ ಪ್ರೀತಿಗಿಂತ ಅದು ಅಧಿಕವಾಗಿತ್ತು. ಆದ್ದರಿಂದ, ಅಮ್ನೋನನು ಅವಳಿಗೆ, “ಎದ್ದು ಹೋಗು,” ಎಂದನು. \p \v 16 ಆಗ ಅವಳು ಅವನಿಗೆ, “ಬೇಡ! ನನಗೆ ಮಾಡಿದ ಆ ಕೆಟ್ಟತನಕ್ಕಿಂತ, ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಅಧಿಕ ಅನ್ಯಾಯವಾಗಿದೆ,” ಎಂದಳು. \p ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ \v 17 ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಸೇವಕನನ್ನು ಕರೆದು, “ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ, ಅವಳ ಹಿಂದೆ ಬಾಗಿಲು ಮುಚ್ಚಿ ಭದ್ರಪಡಿಸು,” ಎಂದನು. \v 18 ಅವಳು ವಿವಿಧ ಬಣ್ಣದ ವಸ್ತ್ರಗಳನ್ನು ಧರಿಸಿದ್ದಳು. ಏಕೆಂದರೆ ಅರಸನ ಪುತ್ರಿಯರಾದ ಕನ್ಯೆಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಅವನ ಸೇವಕನು ಅವಳನ್ನು ಹೊರಗೆ ತಂದು, ಅವಳ ಹಿಂದೆ ಬಾಗಿಲು ಮುಚ್ಚಿ ಬೀಗ ಹಾಕಿದನು. \v 19 ಆಗ ತಾಮಾರಳು ತನ್ನ ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು, ತಾನು ಧರಿಸಿಕೊಂಡಿದ್ದ ವಿವಿಧ ಬಣ್ಣದ ವಸ್ತ್ರವನ್ನು ಹರಿದು, ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಗಟ್ಟಿಯಾಗಿ ಅಳುತ್ತಾ ಹೋದಳು. \p \v 20 ಆಗ ಅವಳ ಸಹೋದರ ಅಬ್ಷಾಲೋಮನು ಅವಳಿಗೆ, “ನಿನ್ನ ಸಹೋದರ ಅಮ್ನೋನನು ನಿನ್ನ ಮಾನಭಂಗ ಮಾಡಿದನೋ? ನನ್ನ ಸಹೋದರಿ, ಈಗ ಸುಮ್ಮನಿರು. ಅವನು ನಿನ್ನ ಸಹೋದರನು. ಈ ಕಾರ್ಯವನ್ನು ನಿನ್ನ ಮನಸ್ಸಿಗೆ ತೆಗೆದುಕೊಳ್ಳಬೇಡ,” ಎಂದನು. ಹಾಗೆಯೇ ತಾಮಾರಳು ತನ್ನ ಸಹೋದರ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿ ವಾಸಿಸಿದಳು. \p \v 21 ಅರಸನಾದ ದಾವೀದನು ಇವುಗಳನ್ನೆಲ್ಲಾ ಕೇಳಿದಾಗ ಬಹು ಕೋಪಗೊಂಡನು. \v 22 ಆದರೆ ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೆಯದಾದರೂ, ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಏಕೆಂದರೆ ಅವನು ತನ್ನ ಸಹೋದರಿಯಾದ ತಾಮಾರಳನ್ನು ಅವಮಾನ ಮಾಡಿದ್ದರಿಂದ, ಅಬ್ಷಾಲೋಮನು ಅವನನ್ನು ಹಗೆ ಮಾಡಿದನು. \s1 ಅಬ್ಷಾಲೋಮನು ಅಮ್ಮೋನನನ್ನು ಕೊಂದದ್ದು \p \v 23 ಎರಡು ವರ್ಷ ಪೂರ್ಣ ಮುಗಿದ ತರುವಾಯ, ಅಬ್ಷಾಲೋಮನಿಗೆ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವಾಗ, ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು. \v 24 ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ, “ಇಗೋ, ಈಗ ನಿನ್ನ ಸೇವಕನ ಬಳಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ, ತನ್ನ ಸೇವಕರೂ ನಿನ್ನ ಸೇವಕನ ಬಳಿಗೆ ಬರಬಹುದೋ?” ಎಂದನು. \p \v 25 ಅದಕ್ಕೆ ಅರಸನು ಅಬ್ಷಾಲೋಮನಿಗೆ, “ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವುದಿಲ್ಲ,” ಎಂದನು. ಅವನು ರಾಜನನ್ನು ಬಲವಂತ ಮಾಡಿದನು. ಆದರೆ ಅರಸನು ಹೋಗಲು ಒಪ್ಪದೆ, ಅಬ್ಷಾಲೋಮನನ್ನು ಆಶೀರ್ವದಿಸಿ ಕಳುಹಿಸಿದನು. \p \v 26 ಆಗ ಅಬ್ಷಾಲೋಮನು, “ಹಾಗಾದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ,” ಎಂದನು. \p ಅರಸನು ಅವನಿಗೆ, “ಏಕೆ ಅವನು ನಿಮ್ಮ ಸಂಗಡ ಬರಬೇಕು?” ಎಂದನು. \v 27 ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅಮ್ನೋನನನ್ನೂ, ಅರಸನ ಸಮಸ್ತ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು. \p \v 28 ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು. \v 29 ಅಬ್ಷಾಲೋಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆಲ್ಲರೂ ಎದ್ದು, ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು. \p \v 30 ಅವರು ದಾರಿಯಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದುಹಾಕಿದ್ದಾನೆ, ಒಬ್ಬನಾದರೂ ಉಳಿಯಲಿಲ್ಲ,” ಎಂಬ ವರ್ತಮಾನ ಬಂತು. \v 31 ಆಗ ಅರಸನು ಎದ್ದು, ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲು ನಿಂತರು. \p \v 32 ಆದರೆ ದಾವೀದನ ಸಹೋದರನಾದ ಶಿಮೆಯನ ಮಗನಾಗಿರುವ ಯೋನಾದಾಬನು ದಾವೀದನಿಗೆ, “ಒಡೆಯನೇ, ನನ್ನ ಅರಸನ ಪುತ್ರರೆಲ್ಲರನ್ನು ಕೊಂದು ಹಾಕಿದ್ದಾರೆಂದು ನೆನಸಬೇಡ. ಅಮ್ನೋನನು ಮಾತ್ರವೇ ಸತ್ತನು. ಏಕೆಂದರೆ ಅಬ್ಷಾಲೋಮನು ತನ್ನ ಸಹೋದರಿಯಾದ ತಾಮಾರಳನ್ನು ಅಮ್ಮೋನನು ಬಲಾತ್ಕಾರ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವುದಕ್ಕೆ ತನ್ನ ಮನಸ್ಸಿನಲ್ಲಿ ನಿಶ್ಚಯಮಾಡಿಕೊಂಡಿದ್ದನು. \v 33 ಆದ್ದರಿಂದ ಅರಸನಾದ ನನ್ನ ಒಡೆಯನೇ, ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನಲ್ಲಿಡಬೇಡ. ಏಕೆಂದರೆ ಅಮ್ನೋನನು ಒಬ್ಬನೇ ಸತ್ತನು,” ಎಂದನು. \p \v 34 ಅಬ್ಷಾಲೋಮನು ಓಡಿಹೋದನು. \p ಆಗ ಕಾವಲುಗಾರನು ಕಣ್ಣೆತ್ತಿ ನೋಡುವಾಗ, ಅವನ ಹಿಂಭಾಗದಲ್ಲಿ ಬೆಟ್ಟದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು. ಕಾವಲುಗಾರನು ಹೋಗಿ ಅರಸನಿಗೆ, “ನಾನು ಬೆಟ್ಟದ ಬದಿಯಲ್ಲಿರುವ ಹೋರೋನೈಮ್ ದಿಕ್ಕಿನಲ್ಲಿ ಮನುಷ್ಯರನ್ನು ಕಂಡೆನು,”\f + \fr 13:34 \fr*\ft ಕೆಲವು ಪ್ರತಿಗಳಲ್ಲಿ ಈ ವಾಕ್ಯವು ಇರುವುದಿಲ್ಲ\ft*\f* ಎಂದು ಹೇಳಿದನು. \p \v 35 ಆಗ ಯೋನಾದಾಬನು ಅರಸನಿಗೆ, “ಅರಸನ ಪುತ್ರರು ಬರುತ್ತಿದ್ದಾರೆ. ನಿಮ್ಮ ಸೇವಕನು ಹೇಳಿದ ಹಾಗೆಯೇ ಆಯಿತು,” ಎಂದನು. \p \v 36 ಅವನು ಮಾತನಾಡಿ ತೀರಿಸಿದಾಗ, ಅರಸನ ಪುತ್ರರು ಬಂದು ಸ್ವರವೆತ್ತಿ ಅತ್ತರು. ಅರಸನೂ, ಅವನ ಸಮಸ್ತ ಸೇವಕರೂ ಮಹಾಧ್ವನಿಯಿಂದ ಅತ್ತರು. \p \v 37 ಆದರೆ ಅಬ್ಷಾಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅಮ್ಮೀಹೂದನ ಮಗ ತಲ್ಮಾಯನ ಬಳಿಗೆ ಹೋದನು. ದಾವೀದನು ಬಹಳ ದಿನಗಳವರೆಗೆ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು. \p \v 38 ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿಹೋಗಿ ಅಲ್ಲಿ ಮೂರು ವರ್ಷ ಇದ್ದನು. \v 39 ಆದರೆ ಅರಸನಾದ ದಾವೀದನು ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ಅಬ್ಷಾಲೋಮನ ಬಳಿಗೆ ಹೋಗಲು ಬಯಸಿದನು. \c 14 \s1 ಅಬ್ಷಾಲೋಮನು ಯೆರೂಸಲೇಮಿಗೆ ಹಿಂದಿರುಗಿದ್ದು \p \v 1 ಅರಸನಾದ ದಾವೀದನ ಹೃದಯವು ಅಬ್ಷಾಲೋಮನ ಕಡೆಗೆ ಇರುವುದನ್ನು ಚೆರೂಯಳ ಮಗ ಯೋವಾಬನಿಗೆ ತಿಳಿಯಿತು. \v 2 ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು, \v 3 ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು,” ಎಂದು ಹೇಳಿ ಯೋವಾಬನು ಅವಳಿಗೆ ಕಲಿಸಿಕೊಟ್ಟನು. \p \v 4 ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು. \p \v 5 ಅರಸನು ಅವಳಿಗೆ, “ನಿನಗೆ ಏನಾಯಿತು?” ಎಂದನು. \p ಅದಕ್ಕವಳು, “ನಾನು ನಿಶ್ಚಯವಾಗಿ ವಿಧವೆಯಾದ ಸ್ತ್ರೀಯು. ನನ್ನ ಗಂಡನು ಸತ್ತುಹೋಗಿದ್ದಾನೆ. \v 6 ಆದರೆ ನಿನ್ನ ಸೇವಕಳಿಗೆ ಇಬ್ಬರು ಪುತ್ರರಿದ್ದರು. ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು. ಅವರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ, ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು. \v 7 ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು. \p \v 8 ಆಗ ಅರಸನು ಆ ಸ್ತ್ರೀಗೆ, “ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ,” ಎಂದನು. \p \v 9 ಆದರೆ ತೆಕೋವದ ಸ್ತ್ರೀಯು ಅರಸನಿಗೆ, “ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ, ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಅರಸನೂ, ಅವನ ಸಿಂಹಾಸನವೂ ನಿರಪರಾಧವಾಗಿರಲಿ,” ಎಂದಳು. \p \v 10 ಅದಕ್ಕೆ ಅರಸನು, “ಯಾವನಾದರೂ ನಿನಗೆ ಏನಾದರೂ ಹೇಳಿದರೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದೆ ಇರುವನು,” ಎಂದನು. \p \v 11 ಆಕೆ, “ಹಾಗಾದರೆ ನನ್ನ ಮಗನು ಸಾಯದಂತೆ ನಾಶನಕ್ಕೆ ನಾಶನವನ್ನು ಕೂಡಿಸುವ ಸೇಡುತೀರಿಸುವವರನ್ನು ತಡೆಯಲು ಅರಸನು ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಲಿ,” ಎಂದಳು. \p ಅದಕ್ಕೆ ದಾವೀದನು, “ಯೆಹೋವ ದೇವರ ಜೀವದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ,” ಎಂದನು. \p \v 12 ಆಗ ಆ ಸ್ತ್ರೀಯು, “ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವುದಕ್ಕೆ ಅಪ್ಪಣೆ ಆಗಬೇಕು,” ಎಂದಳು. \p ಆಗ ಅವನು, “ಹೇಳು,” ಎಂದನು. \p \v 13 ಆಗ ಆ ಸ್ತ್ರೀಯು, “ಹಾಗಾದರೆ, ಏಕೆ ದೇವಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನಡೆಸುವುದೇನು? ಅರಸನು ತಾನು ಬಹಿಷ್ಕರಿಸಿದ ಮಗನನ್ನು ತಿರುಗಿ ಸೇರಿಸಿಕೊಳ್ಳದೆ ಹೋದದ್ದರಿಂದ, ತನ್ನನ್ನು ತಾನೇ ಅಪರಾಧಿ ಎಂದು ತೀರ್ಪುಮಾಡಿದ ಹಾಗಾಯಿತು. \v 14 ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ. \p \v 15 “ಆದ್ದರಿಂದ ಈಗ ಜನರು ನನ್ನನ್ನು ಭಯಪಡಿಸಿದ್ದರಿಂದ, ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತಾನಾಡುವುದಕ್ಕೆ ಬಂದೆನು. ‘ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ. ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. \v 16 ಏಕೆಂದರೆ ಅರಸನು ಕೇಳಿ ನನ್ನನ್ನೂ, ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕೆಂದಿರುವ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು,’ ಎಂದುಕೊಂಡೆನು. \p \v 17 “ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.” \p \v 18 ಆಗ ಅರಸನು ಉತ್ತರವಾಗಿ ಆ ಸ್ತ್ರೀಗೆ, “ನಾನು ನಿನ್ನಿಂದ ಕೇಳುವುದನ್ನು ನನಗೆ ಮರೆಮಾಡಬೇಡ,” ಎಂದನು. \p ಅದಕ್ಕವಳು, “ಅರಸನಾದ ನನ್ನ ಒಡೆಯನು ಮಾತನಾಡಲಿ,” ಎಂದಳು. \p \v 19 ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. \p ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು. \v 20 ಈ ಮಾತನ್ನು ರೂಪಕವಾಗಿ ತಿರುಗಿಸುವುದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿಯಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ದೇವದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ,” ಎಂದಳು. \p \v 21 ಆದ್ದರಿಂದ ಅರಸನು ಯೋವಾಬನಿಗೆ, “ನಾನು ಈ ಕಾರ್ಯವನ್ನು ಮಾಡಿದೆನು. ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ತಿರುಗಿ ಕರೆದುಕೊಂಡು ಬಾ,” ಎಂದನು. \p \v 22 ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು. \p \v 23 ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು. \v 24 ಆದರೆ ಅರಸನು, “ಅವನು ತನ್ನ ಮನೆಗೆ ತಿರುಗಿ ಹೋಗಲಿ. ಅವನು ನನ್ನ ಮುಖವನ್ನು ನೋಡಬಾರದು,” ಎಂದನು. ಆದ್ದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿಹೋದನು. \p \v 25 ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು. \v 26 ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರ್ಷದ ಕೊನೆಯಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ರಾಜರ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗಿರುತ್ತಿತ್ತು. \p \v 27 ಅಬ್ಷಾಲೋಮನಿಗೆ ಮೂರು ಮಂದಿ ಪುತ್ರರೂ, ತಾಮಾರ್ ಎಂಬ ಒಬ್ಬ ಪುತ್ರಿಯೂ ಹುಟ್ಟಿದರು. ತಾಮಾರಳು ಸೌಂದರ್ಯವುಳ್ಳ ಸ್ತ್ರೀ ಆಗಿದ್ದಳು. \p \v 28 ಅಬ್ಷಾಲೋಮನು ಅರಸನ ಮುಖವನ್ನು ಕಾಣದೆ, ಪೂರ್ಣವಾಗಿ ಎರಡು ವರ್ಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು. \v 29 ಆದ್ದರಿಂದ ಅಬ್ಷಾಲೋಮನು ಅರಸನ ಬಳಿಗೆ ತನ್ನನ್ನು ಕಳುಹಿಸುವುದಕ್ಕೆ ಯೋವಾಬನನ್ನು ಕರೆಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲೊಲ್ಲದೆ ಹೋದನು. ಎರಡನೆಯ ಸಾರಿ ಅವನನ್ನು ಕರೆಕಳುಹಿಸಿದನು. ಅವನು ಬರಲೊಲ್ಲದೆ ಹೋದನು. \v 30 ಆದ್ದರಿಂದ ಅವನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲಕ್ಕೆ ಸಮೀಪವಾಗಿ ಯೋವಾಬನ ಹೊಲವಿದೆ. ಅದರಲ್ಲಿ ಜವೆಗೋಧಿ ಇದೆ. ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ,” ಎಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು. \p \v 31 ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ, “ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟಿದ್ದೇಕೆ?” ಎಂದು ಕೇಳಿದನು. \p \v 32 ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು. \p \v 33 ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ, ಅರಸನು ಅಬ್ಷಾಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರಮಾಡಿದನು. ಆಗ ಅರಸನು ಅಬ್ಷಾಲೋಮನಿಗೆ ಮುದ್ದಿಟ್ಟನು. \c 15 \s1 ಅಬ್ಷಾಲೋಮನ ಒಳಸಂಚು \p \v 1 ಇದರ ತರುವಾಯ ಅಬ್ಷಾಲೋಮನು ತನಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು. \v 2 ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಿಲ ಬಳಿಯಲ್ಲಿ ನಿಂತುಕೊಂಡು, ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು, “ನೀನು ಯಾವ ಪಟ್ಟಣದವನು?” ಎಂದು ಕೇಳಿದನು. ಅದಕ್ಕವನು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರ ಕೊಡುವನು. \v 3 ಆಗ ಅಬ್ಷಾಲೋಮನು ಅವನಿಗೆ, “ನೋಡು ನಿನ್ನ ಕಾರ್ಯವು ಒಳ್ಳೆಯದೂ, ನ್ಯಾಯವಾದದದ್ದೂ ಆಗಿದೆ. ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವುದಕ್ಕೆ ಯಾವನೂ ಇಲ್ಲ,” ಅನ್ನುವನು. \v 4 ಇದಲ್ಲದೆ ಅಬ್ಷಾಲೋಮನು, “ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ನೇಮಕವಾಗಿದ್ದರೆ ಎಷ್ಟೋ ಒಳ್ಳೆಯದು. ಆಗ ವ್ಯಾಜ್ಯವಾದರೂ, ನ್ಯಾಯವಿಚಾರಣೆಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ, ನಾನು ಅವನಿಗೆ ನೀತಿಯಿಂದ ನ್ಯಾಯತೀರಿಸುವೆನು,” ಅನ್ನುವನು. \p \v 5 ಯಾವನಾದರೂ ಅವನಿಗೆ ವಂದಿಸುವುದಕ್ಕೆ ಬಂದರೆ, ಕೂಡಲೆ ತನ್ನ ಕೈಯನ್ನು ಚಾಚಿ ಅಂಥವನನ್ನು ಎತ್ತಿ ಮುದ್ದಿಡುತ್ತಿದ್ದನು. \v 6 ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲರೆಲ್ಲರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲರ ಹೃದಯಗಳನ್ನು ಗೆದ್ದುಕೊಂಡನು. \p \v 7 ನಾಲ್ಕು ವರ್ಷಗಳಾದ ತರುವಾಯ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವ ದೇವರಿಗೆ ಮಾಡಿಕೊಂಡಿದ್ದ ನನ್ನ ಹರಕೆಯನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವುದಕ್ಕೆ ಅಪ್ಪಣೆಕೊಡಬೇಕು. \v 8 ಏಕೆಂದರೆ, ‘ಯೆಹೋವ ದೇವರು ನನ್ನನ್ನು ಯೆರೂಸಲೇಮಿಗೆ ತಿರುಗಿ ನಿಜವಾಗಿಯೂ ಬರಮಾಡಿದರೆ, ನಾನು ಯೆಹೋವ ದೇವರನ್ನು ಸೇವಿಸುವೆನು,’ ಎಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಹರಕೆ ಮಾಡಿಕೊಂಡಿದ್ದನು,” ಎಂದನು. \p \v 9 ಅರಸನು ಅವನಿಗೆ, “ಸಮಾಧಾನವಾಗಿ ಹೋಗು,” ಎಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು. \p \v 10 ಅಬ್ಷಾಲೋಮನು ಇಸ್ರಾಯೇಲಿನ ಸಮಸ್ತ ಗೋತ್ರಗಳಿಗೆ ಗೂಢಚಾರರನ್ನು ಕಳುಹಿಸಿ ಅವರಿಗೆ, “ನೀವು ತುತೂರಿಯ ಶಬ್ದ ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಘೋಷಿಸಿರಿ’ ಎಂದು ಹೇಳಿರಿ,” ಎಂದನು. \v 11 ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲಾದ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ಒಳಸಂಚನ್ನು ಏನೂ ತಿಳಿಯದೆ ಯಥಾರ್ಥ ಮನಸ್ಸುಳ್ಳವರಾಗಿದ್ದರು. \v 12 ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು. \s1 ದಾವೀದನು ಓಡಿಹೋದದ್ದು \p \v 13 ದಾವೀದನ ಬಳಿಗೆ ಒಬ್ಬ ದೂತನು ಬಂದು, “ಇಸ್ರಾಯೇಲರ ಹೃದಯಗಳು ಅಬ್ಷಾಲೋಮನ ಕಡೆ ತಿರುಗಿಕೊಂಡಿವೆ,” ಎಂದನು. \p \v 14 ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಸಮಸ್ತ ಸೇವಕರಿಗೆ, “ಏಳಿರಿ, ನಾವು ಓಡಿಹೋಗೋಣ. ಇಲ್ಲದಿದ್ದರೆ ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಂಡು ಹೋಗಲಾರೆವು. ಅವನು ಫಕ್ಕನೆ ನಮ್ಮನ್ನು ಹಿಡಿದು, ನಮ್ಮ ಮೇಲೆ ಕೇಡನ್ನು ಬರಮಾಡಿ, ಪಟ್ಟಣವನ್ನು ಖಡ್ಗದಿಂದ ಹೊಡೆಯದ ಹಾಗೆ ಹೊರಟು ಹೋಗುವುದಕ್ಕೆ ತ್ವರೆಮಾಡಿರಿ,” ಎಂದನು. \p \v 15 ಆಗ ಅರಸನ ಸೇವಕರು ಅರಸನಿಗೆ, “ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ, ಅದನ್ನು ಮಾಡುವುದಕ್ಕೆ ನಿನ್ನ ಸೇವಕರು ಸಿದ್ಧವಾಗಿದ್ದೇವೆ,” ಎಂದರು. \p \v 16 ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು, ಅವನೂ, ಅವನ ಮನೆಯವರೆಲ್ಲರೂ ಅವನ ಹಿಂದೆ ಹೊರಟು ಹೋದರು. \v 17 ಅರಸನೂ, ಅವನ ಹಿಂದೆ ಸಮಸ್ತ ಜನರೂ ಹೊರಟುಹೋಗಿ ಪಟ್ಟಣದ ಕಡೆಯ ಮನೆಯ ಬಳಿ ಬಂದು ಅಲ್ಲಿ ನಿಂತರು. \v 18 ಅವನ ಸಮಸ್ತ ಸೇವಕರೂ, ಸಮಸ್ತ ಕೆರೇತ್ಯರೂ, ಸಮಸ್ತ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತೀಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು. \p \v 19 ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ಕಂಡು, “ನೀನು ನಮ್ಮ ಸಂಗಡ ಬರುವುದು ಏಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ, ಅರಸನ ಸಂಗಡ ಇರು. ಏಕೆಂದರೆ ನೀನು ವಿದೇಶಿ. ನಿನ್ನ ದೇಶದಿಂದ ಸೆರೆಯಾಳಾಗಿ ಬಂದವನು. \v 20 ನೀನು ನಿನ್ನೆ ಬಂದವನು. ನಾನು ಎಲ್ಲಿಗೆ ಹೋಗುತ್ತೇನೋ ನನಗೇ ಗೊತ್ತಿಲ್ಲ. ಆದುದರಿಂದ ನಾನು ನಿನ್ನನ್ನು ನಮ್ಮ ಸಂಗಡ ಸುಮ್ಮನೇ ತಿರುಗಾಡಿಸುವುದು ಏಕೆ? ನೀನು ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಕ್ಕೆ ಹೋಗು. ದಯೆಯೂ, ನಂಬಿಗಸ್ತಿಕೆಯೂ ನಿನ್ನ ಸಂಗಡ ಇರಲಿ,” ಎಂದನು. \p \v 21 ಆದರೆ ಇತ್ತೈಯೂ ಅರಸನಿಗೆ ಉತ್ತರವಾಗಿ, “ಯೆಹೋವ ದೇವರ ಜೀವದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ, ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ, ಸಾವಾದರೂ ಬದುಕಾದರೂ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು,” ಎಂದನು. \p \v 22 ಆಗ ದಾವೀದನು ಇತ್ತೈಗೆ, “ನೀನು ಹೋಗಿ ದಾಟು,” ಎಂದನು. ಆದ್ದರಿಂದ ಗಿತ್ತೀಯನಾದ ಇತ್ತೈಯೂ, ಅವನ ಸಮಸ್ತ ಮನುಷ್ಯರೂ, ಅವನ ಸಂಗಡ ಇರುವ ಸಮಸ್ತ ಚಿಕ್ಕವರೂ ಕೂಡ ದಾಟಿಹೋದರು. \p \v 23 ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು. \p \v 24 ಚಾದೋಕನೂ, ಅವನ ಸಂಗಡ ಇರುವ ಸಮಸ್ತ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಅಬಿಯಾತರನು, ಜನರೆಲ್ಲರು ಪಟ್ಟಣದಿಂದ ದಾಟಿಹೋಗುವವರೆಗೆ ಯಜ್ಞ ಸಮರ್ಪಿಸುತ್ತಾ ಮುಂದೆ ನಡೆಯುತ್ತಿದ್ದನು. \p \v 25 ಆಗ ಅರಸನು ಚಾದೋಕನಿಗೆ, “ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರುಗಿ ತೆಗೆದುಕೊಂಡು ಹೋಗು. ಯೆಹೋವ ದೇವರ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ, ಅವರು ತಿರುಗಿ ನನ್ನನ್ನು ಬರಮಾಡಿ ಅದನ್ನೂ, ಅದರ ವಾಸಸ್ಥಳವನ್ನೂ ನನಗೆ ತೋರಿಸುವರು. \v 26 ಒಂದು ವೇಳೆ ಅವರು, ‘ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು’ ಹೇಳಿದರೆ ಇಗೋ, ಅವರು ತಮ್ಮ ದೃಷ್ಟಿಗೆ ತೋಚಿದ ಹಾಗೆ ನನಗೆ ಮಾಡಲಿ,” ಎಂದನು. \p \v 27 ಅರಸನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರುಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳು ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ ನಿನ್ನ ಸಂಗಡ ಹೋಗಲಿ. \v 28 ನೋಡು, ನನಗೆ ತಿಳಿಸುವುದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವವರೆಗೂ, ನಾನು ಮರುಭೂಮಿಯ ಬಳಿಯಲ್ಲಿ ಇರುವೆನು,” ಎಂದನು. \v 29 ಹಾಗೆಯೇ ಚಾದೋಕನೂ, ಅಬಿಯಾತರನೂ ದೇವರ ಮಂಜೂಷವನ್ನು ತಿರುಗಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ ಅಲ್ಲಿದ್ದರು. \p \v 30 ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು. \v 31 ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು. \p \v 32 ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿದಾಗ, ಅರ್ಕಿಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅವನನ್ನು ಎದುರುಗೊಳ್ಳಲು ಬಂದನು. \v 33 ಆಗ ದಾವೀದನು ಅವನಿಗೆ, “ನೀನು ನನ್ನ ಸಂಗಡ ಬಂದರೆ, ನನಗೆ ಭಾರವಾಗಿರುವೆ. \v 34 ನೀನು ಪಟ್ಟಣಕ್ಕೆ ತಿರುಗಿ ಹೋಗಿ ಅಬ್ಷಾಲೋಮನಿಗೆ, ‘ಅರಸನೇ, ನಾನು ನಿನ್ನ ಸೇವಕನಾಗಿರುವೆನು. ನಾನು ಇಂದಿನವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ, ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು,’ ಎಂದು ಹೇಳಿದರೆ, ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಬಹುದು. \v 35 ಅಲ್ಲಿ ಯಾಜಕರಾದ ಚಾದೋಕನೂ, ಅಬಿಯಾತರನೂ ನಿನ್ನ ಬಳಿಯಲ್ಲಿ ಇಲ್ಲವೋ? ಆದ್ದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ, ಅದನ್ನು ಯಾಜಕರಾದ ಚಾದೋಕನಿಗೂ, ಎಬ್ಯಾತಾರನಿಗೂ ತಿಳಿಸು. \v 36 ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ. ಚಾದೋಕನ ಮಗ ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಕೈಯಿಂದ ನನಗೆ ಹೇಳಿ ಕಳುಹಿಸಬೇಕು,” ಎಂದನು. \p \v 37 ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣದೊಳಗೆ ಬಂದನು. ಆಗ ಅಬ್ಷಾಲೋಮನು ಯೆರೂಸಲೇಮಿಗೆ ಬಂದನು. \c 16 \s1 ದಾವೀದನು ಮತ್ತು ಚೀಬನು \p \v 1 ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರ ಹೋದಾಗ, ಮೆಫೀಬೋಶೆತನ ಸೇವಕ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡೆದುಕೊಂಡು ಬಂದು, ಅವನನ್ನು ಎದುರುಗೊಂಡನು. ಅವುಗಳ ಮೇಲೆ ಇನ್ನೂರು ರೊಟ್ಟಿಗಳೂ, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳೂ, ಬೇಸಿಗೆ ಕಾಲದ ನೂರು ಹಣ್ಣುಗಳೂ, ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು. \p \v 2 ಅರಸನು ಚೀಬನಿಗೆ, “ಇವು ಏಕೆ,” ಎಂದನು. \p ಅದಕ್ಕೆ ಚೀಬನು, “ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವುದಕ್ಕೆ, ಆ ರೊಟ್ಟಿಗಳೂ, ಬೇಸಿಗೆ ಕಾಲದ ಫಲಗಳೂ ಜನರಿಗೆ ತಿನ್ನುವುದಕ್ಕೆ, ದ್ರಾಕ್ಷಾರಸವು ಮರುಭೂಮಿಯಲ್ಲಿ ದಣಿದವರು ಕುಡಿಯುವುದಕ್ಕೆ,” ಎಂದನು. \p \v 3 ಆಗ ಅರಸನು ಅವನನ್ನು, “ನಿನ್ನ ಯಜಮಾನನ ಪುತ್ರನು ಎಲ್ಲಿದ್ದಾನೆ?” ಎಂದು ಕೇಳಿದನು. \p ಚೀಬನು ಅರಸನಿಗೆ, “ಅವನು ಯೆರೂಸಲೇಮಿನಲ್ಲಿದ್ದಾನೆ. ಏಕೆಂದರೆ ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರುಗಿ ಕೊಡುವರೆಂದು ಹೇಳಿಕೊಂಡನು,” ಎಂದನು. \p \v 4 ಆಗ ಅರಸನು ಚೀಬನಿಗೆ, “ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲವೂ ನಿನಗುಂಟಾಯಿತು,” ಎಂದನು. \p ಅದಕ್ಕೆ ಚೀಬನು, “ಅರಸನಾದ ನನ್ನ ಒಡೆಯನೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು. \s1 ಶಿಮ್ಮಿ ದಾವೀದನನ್ನು ಶಪಿಸಿದ್ದು \p \v 5 ಅರಸನಾದ ದಾವೀದನು ಬಹುರೀಮಿನವರೆಗೂ ಬಂದಾಗ, ಸೌಲನ ಗೋತ್ರದವನಾದ ಗೇರನ ಮಗ ಶಿಮ್ಮಿ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು. \v 6 ದಾವೀದನ ಎಡಬಲದಲ್ಲಿ ಸೈನಿಕರೂ, ವಿಶೇಷ ಕಾವಲುಗಾರರೂ ಇದ್ದರು. ಆದರೂ ಶಿಮ್ಮಿಯು ದಾವೀದನ ಮೇಲೆಯೂ, ಅವನ ಅಧಿಕಾರಿಗಳ ಮೇಲೆಯೂ ಕಲ್ಲುಗಳನ್ನು ಎಸೆದನು. \v 7 ಶಿಮ್ಮಿಯು ಅರಸನನ್ನು ದೂಷಿಸುತ್ತಾ, “ಕೊಲೆಗಾರನೇ, ನೀಚನೇ, ಹೊರಟು ಹೋಗು; ಹೊರಟು ಹೋಗು. \v 8 ಯೆಹೋವ ದೇವರು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರುಗಿ ಬರಮಾಡಿ, ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ನೀನು ಕೊಲೆಗಾರನಾದುದರಿಂದ, ನಿನ್ನ ಕೇಡಿನಲ್ಲಿ ನೀನು ಸಿಕ್ಕಿಕೊಂಡೆ,” ಎಂದನು. \p \v 9 ಆಗ ಚೆರೂಯಳ ಮಗ ಅಬೀಷೈಯನು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವುದೇನು? ನಾನು ದಾಟಿ ಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆ ಆಗಲಿ,” ಎಂದನು. \p \v 10 ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು. \p \v 11 ದಾವೀದನು ಅಬೀಷೈಯನಿಗೂ, ತನ್ನ ಸಮಸ್ತ ಸೇವಕರಿಗೂ, “ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ, ಎಷ್ಟೋ ಅಧಿಕವಾಗಿ ಬೆನ್ಯಾಮೀನನಾದವನು ಈಗ ಏನು ಮಾಡಿಯಾನು? ಅವನನ್ನು ಬಿಟ್ಟುಬಿಡಿರಿ. ಅವನು ದೂಷಿಸಲಿ. ಏಕೆಂದರೆ ಯೆಹೋವ ದೇವರು ಅವನಿಗೆ ಹಾಗೆಯೇ ಹೇಳಿದ್ದಾರೆ. \v 12 ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು. \p \v 13 ದಾವೀದನೂ, ಅವನ ಸೇವಕರೂ ಹಾದಿ ಹಿಡಿದು ಹೋಗುವಾಗ, ಶಿಮ್ಮಿ ಬೆಟ್ಟದ ಓರೆಯಲ್ಲಿ ಬಂದು, ಅವನಿಗೆದುರಾಗಿ ನಡೆದನು. ಅವನು ದಾವೀದನನ್ನು ದೂಷಿಸಿ, ಮಣ್ಣನ್ನು ತೂರಿ, ಕಲ್ಲುಗಳನ್ನು ದಾವೀದನ ಮೇಲೆ ಎಸೆದನು. \v 14 ಅರಸನೂ, ಅವನ ಸಂಗಡದಲ್ಲಿರುವ ಸಮಸ್ತ ಜನರೂ ನಡೆದು ದಣಿದಿದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು. \s1 ಹೂಷೈ ಹಾಗೂ ಅಹೀತೋಫೆಲನು ಆಲೋಚನೆ \p \v 15 ಅಬ್ಷಾಲೋಮನೂ, ಇಸ್ರಾಯೇಲರಾದ ಸಮಸ್ತ ಜನರೂ, ಅವನ ಸಂಗಡ ಅಹೀತೋಫೆಲನೂ ಯೆರೂಸಲೇಮಿಗೆ ಬಂದರು. \v 16 ಅರ್ಕಿಯನಾದ ಹೂಷೈಯು ಎಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದಾಗ, ಹೂಷೈ ಅಬ್ಷಾಲೋಮನಿಗೆ, “ಅರಸನು ಬಾಳಲಿ, ಅರಸನು ಬಾಳಲಿ,” ಎಂದನು. \p \v 17 ಆಗ ಅಬ್ಷಾಲೋಮನು ಹೂಷೈಯಿಗೆ, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನ ಸಂಗಡ ಏಕೆ ಹೋಗಲಿಲ್ಲ,” ಎಂದನು. \p \v 18 ಹೂಷೈ ಅಬ್ಷಾಲೋಮನಿಗೆ, “ಹಾಗಲ್ಲ, ಯೆಹೋವ ದೇವರು ಈ ಜನರೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ ಯಾರನ್ನು ಆಯ್ದುಕೊಳ್ಳುವರೋ, ನಾನೂ ಅವನ ಪಕ್ಷದವನಾಗಿರುವೆನು. ನಾನು ಅವನ ಬಳಿಯಲ್ಲಿ ಇರುವೆನು. \v 19 ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು,” ಎಂದನು. \p \v 20 ಆಗ ಅಬ್ಷಾಲೋಮನು ಅಹೀತೋಫೆಲನಿಗೆ, “ನಾವು ಮಾಡಬೇಕಾದದ್ದನ್ನು ನೀವು ಯೋಚನೆ ಮಾಡಿ ಹೇಳಿರಿ,” ಎಂದನು. \p \v 21 ಅಹೀತೋಫೆಲನು ಅಬ್ಷಾಲೋಮನಿಗೆ, “ಮನೆಗೆ ಕಾವಲಿಟ್ಟ ನಿನ್ನ ತಂದೆಯ ಉಪಪತ್ನಿಯರ ಸಂಗಡ ಮಲಗು; ಆಗ ನಿನ್ನ ತಂದೆ ನಿನ್ನನ್ನು ತನ್ನ ಶತ್ರುವನ್ನಾಗಿ ಮಾಡಿದನೆಂದು ಎಲ್ಲ ಇಸ್ರಾಯೇಲರಿಗೆ ತಿಳಿಯುವುದು. ಆಗ ನಿನ್ನ ಜನರ ಕೈಗಳೂ ಬಲವಾಗುವುವು,” ಎಂದನು. \v 22 ಹಾಗೆಯೇ ಅವರು ಅಬ್ಷಾಲೋಮನ ಮನೆಯ ಮೇಲೆ ಡೇರೆ ಹಾಕಿದರು. ಅಲ್ಲಿ ಅಬ್ಷಾಲೋಮನು ಸಮಸ್ತ ಇಸ್ರಾಯೇಲರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳ ಸಂಗಡ ಮಲಗಿದನು. \p \v 23 ಆ ದಿವಸಗಳಲ್ಲಿ ಅಹೀತೋಫೆಲನು ತಿಳಿಸಿದ ಆಲೋಚನೆಯು ದೇವರನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಗಳನ್ನು ದಾವೀದನೂ, ಅಬ್ಷಾಲೋಮನೂ ಹಾಗೆಯೇ ಗೌರವಿಸುತ್ತಿದ್ದರು. \c 17 \p \v 1 ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆಯ್ದುಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು. \v 2 ಅವನು ದಣಿದು ಅವನ ಕೈ ದುರ್ಬಲವಾಗಿರುವಾಗ, ಹೋಗಿ ಅವನ ಮೇಲೆ ಬಿದ್ದು ಅವನನ್ನು ಹೆದರಿಸುವೆನು. ಆಗ ಅವನ ಸಂಗಡ ಇರುವ ಜನರೆಲ್ಲರು ಓಡಿಹೋಗುವರು. \v 3 ಆಗ ನಾನು ಅರಸನನ್ನು ಮಾತ್ರ ಹೊಡೆದು, ಜನರೆಲ್ಲರನ್ನು ತಿರುಗಿ ನಿನ್ನ ಬಳಿಗೆ ತೆಗೆದುಕೊಂಡು ಬರುವೆನು. ನೀನು ಹುಡುಕುವವನು ಸಿಕ್ಕಿದರೆ, ಜನರೆಲ್ಲರು ಹಿಂದಿರುಗಿದ ಹಾಗೆ ಆಗುವುದು. ಜನರೆಲ್ಲರು ಸಮಾಧಾನವಾಗಿರುವರು,” ಎಂದನು. \v 4 ಈ ಮಾತು ಅಬ್ಷಾಲೋಮನ ದೃಷ್ಟಿಗೂ, ಇಸ್ರಾಯೇಲಿನ ಸಮಸ್ತ ಹಿರಿಯರ ದೃಷ್ಟಿಗೂ ಒಳ್ಳೆಯದಾಗಿ ತೋರಿತು. \p \v 5 ಆದರೆ ಅಬ್ಷಾಲೋಮನು, “ಅರ್ಕಿಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ,” ಎಂದನು. \v 6 ಹೂಷೈ ಅಬ್ಷಾಲೋಮನ ಬಳಿಗೆ ಬಂದಾಗ, ಅಬ್ಷಾಲೋಮನು ಅವನಿಗೆ, “ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ ನೀನು ಮಾತನಾಡು,” ಎಂದನು. \p \v 7 ಆಗ ಹೂಷೈ ಅಬ್ಷಾಲೋಮನಿಗೆ, “ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೆಯದಲ್ಲ,” ಎಂದನು. \v 8 ಹೂಷೈ, “ನಿನ್ನ ತಂದೆಯೂ, ಅವನ ಮನುಷ್ಯರೂ ಪರಾಕ್ರಮಶಾಲಿಗಳು. ಅವರು ಅಡವಿಯಲ್ಲಿ ಮರಿಗಳನ್ನು ಕಳೆದುಕೊಂಡ ಕರಡಿಯ ಹಾಗೆಯೇ ಕೋಪವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು. ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವುದಿಲ್ಲ. \v 9 ಅವನು ಈಗ ಒಂದು ಗವಿಯಲ್ಲಾದರೂ, ಒಂದು ಸ್ಥಳದಲ್ಲಾದರೂ ಅಡಗಿಕೊಂಡಿದ್ದಾನೆ. ಮೊದಲೇ ಇವರಲ್ಲಿ ಕೆಲವರು ಸತ್ತರೆ, ಅದನ್ನು ಕೇಳುವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು. \v 10 ಆಗ ಸಿಂಹ ಹೃದಯರಾದ ಪರಾಕ್ರಮಶಾಲಿಯ ಹೃದಯವು ಸಹ ಸಂಪೂರ್ಣ ಕರಗುವುದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ, ಅವನ ಸಂಗಡ ಇರುವವರು ಪರಾಕ್ರಮಶಾಲಿಗಳೆಂದೂ ಇಸ್ರಾಯೇಲರೆಲ್ಲರು ಬಲ್ಲರು. \p \v 11 “ನಾನು ಹೇಳುವ ಆಲೋಚನೆ ಏನೆಂದರೆ, ದಾನಿನಿಂದ ಬೇರ್ಷೆಬದವರೆಗೂ ವಾಸವಾಗಿರುವ ಇಸ್ರಾಯೇಲರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ನಿನ್ನ ಬಳಿಯಲ್ಲಿ ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು. \v 12 ಆಗ ನಾವು ಅವನನ್ನು ಕಂಡುಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು, ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ, ಅವನ ಸಂಗಡ ಇರುವ ಸಮಸ್ತ ಜನರಲ್ಲಿ ಒಬ್ಬನಾದರೂ ಉಳಿಯುವುದಿಲ್ಲ. \v 13 ಅವನು ಒಂದು ಪಟ್ಟಣದಲ್ಲಿ ಹೊಕ್ಕಿರುವುದಾದರೆ, ಇಸ್ರಾಯೇಲರೆಲ್ಲರೂ ಆ ಪಟ್ಟಣಕ್ಕೆ ಹಗ್ಗಗಳನ್ನು ತಂದುಹಾಕಿದ ತರುವಾಯ, ನಾವು ಒಂದು ಹರಳಾದರೂ ಅಲ್ಲಿ ಉಳಿಯದಂತೆ ಆ ಊರನ್ನು ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿಬಿಡೋಣ,” ಎಂದನು. \p \v 14 ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು. \p \v 15 ಹೂಷೈಯು ಯಾಜಕರಾದ ಚಾದೋಕನಿಗೂ, ಅಬಿಯಾತರನಿಗೂ, “ಅಹೀತೋಫೆಲನು ಅಬ್ಷಾಲೋಮನಿಗೂ, ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು. \v 16 ಆದ್ದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಬೇಡಿ; ಇಲ್ಲವಾದರೆ ನೀವೂ, ನಿಮ್ಮ ಜನರೂ ನಾಶವಾಗುವಿರಿ,’ ಎಂದು ಹೇಳಿ ಕಳುಹಿಸಿರಿ,” ಎಂದನು. \p \v 17 ಯೋನಾತಾನನೂ, ಅಹೀಮಾಚನೂ ಏನ್ ರೋಗೆಲ್ ಎಂಬಲ್ಲಿ ಇದ್ದರು. ಒಬ್ಬ ಸೇವಕಿ ಹೋಗಿ ಅವರಿಗೆ ತಿಳಿಸಬೇಕಾಗಿತ್ತು. ಅನಂತರ ಅವರು ಹೋಗಿ ಅರಸನಾದ ದಾವೀದನಿಗೆ ಹೇಳಬೇಕಾಗಿತ್ತು. ಏಕೆಂದರೆ ಪಟ್ಟಣದಲ್ಲಿ ಪ್ರವೇಶಿಸುವುದನ್ನು ಬೇರೆಯವರು ನೋಡುವ ಗಂಡಾಂತರಕ್ಕೆ ಒಳಗಾಗಲು ಅಪೇಕ್ಷಿಸಿರಲಿಲ್ಲ. \v 18 ಆದರೆ ಒಬ್ಬ ಹುಡುಗನು ಅವರನ್ನು ಕಂಡು ಅಬ್ಷಾಲೋಮನಿಗೆ ತಿಳಿಸಿದನು. ಆದ್ದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ, ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ, ಅವನ ಅಂಗಳದಲ್ಲಿರುವ ಬಾವಿಯಲ್ಲಿ ಇಳಿದರು. \v 19 ಆಗ ಆ ಮನೆಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿದಳು. ಈ ಕಾರ್ಯ ಯಾರಿಗೂ ತಿಳಿಯದೆ ಹೋಯಿತು. \p \v 20 ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು, “ಅಹೀಮಾಚನೂ, ಯೋನಾತಾನನೂ ಎಲ್ಲಿ,” ಎಂದು ಕೇಳಿದರು. \p ಅವಳು ಅವರಿಗೆ, “ಹಳ್ಳವನ್ನು ದಾಟಿಹೋದರು,” ಎಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂದಿರುಗಿದರು. \p \v 21 ಇವರು ಹೋದ ತರುವಾಯ, ಅವರು ಬಾವಿಯೊಳಗಿಂದ ಏರಿಹೋಗಿ, ಅರಸನಾದ ದಾವೀದನಿಗೆ, “ನೀನು ಶೀಘ್ರವಾಗಿ ಎದ್ದು ನದಿಯನ್ನು ದಾಟಿ ಹೋಗು; ಏಕೆಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧವಾಗಿ ಆಲೋಚನೆ ಹೇಳಿದ್ದಾನೆ,” ಎಂದರು. \v 22 ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾದಾಗ ದಾಟಬೇಕಾದವರು ಒಬ್ಬರಾದರೂ ಉಳಿದಿರಲಿಲ್ಲ. \p \v 23 ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. \s1 ಅಬ್ಷಾಲೋಮನ ಮರಣ \p \v 24 ದಾವೀದನು ಮಹನಯಿಮಿಗೆ ಬಂದನು. ಇದಲ್ಲದೆ ಅಬ್ಷಾಲೋಮನೂ, ಅವನ ಸಂಗಡ ಇಸ್ರಾಯೇಲ್ ಮನುಷ್ಯರೂ ಯೊರ್ದನನ್ನು ದಾಟಿದರು. \v 25 ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯಾಗಿ ಇಟ್ಟಿದ್ದನು. ಈ ಅಮಾಸನು ಇಸ್ರಾಯೇಲನಾದ ಇತ್ರನ ಮಗನು. ಈ ಇತ್ರನು ನಾಹಾಷನ ಮಗಳೂ, ಯೋವಾಬನ ತಾಯಿಯೂ, ಚೆರೂಯಳ ಸಹೋದರಿಯೂ ಆದ ಅಬೀಗೈಲಳನ್ನು ಮದುವೆಯಾಗಿದ್ದನು. \v 26 ಇಸ್ರಾಯೇಲರೂ, ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ದಂಡಿಳಿದರು. \p \v 27 ದಾವೀದನು ಮಹನಯಿಮಿಗೆ ಬಂದಾಗ, ಅಮ್ಮೋನಿಯರ ರಬ್ಬಾ ಪಟ್ಟಣದ ನಾಹಾಷನ ಮಗ ಶೋಬಿಯೂ, ಲೋದೆಬಾರು ಊರಿನವನಾಗಿರುವ ಅಮ್ಮಿಯೇಲನ ಮಗ ಮಾಕೀರನೂ, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈಯೂ \v 28 ಹಾಸಿಗೆಗಳನ್ನು, ಬಟ್ಟಲುಗಳನ್ನು, ಮಡಕೆ, ಗೋಧಿ, ಜವೆಗೋಧಿ, ಹಿಟ್ಟು, ಹುರಿದ ಕಾಳು ಅವರೆ, ಅಲಸಂದಿ, \v 29 ಹುರಿದ ಕಡಲೆ, ಜೇನುತುಪ್ಪ, ಬೆಣ್ಣೆ, ಕುರಿ, ಹಸುವಿನ ಗಿಣ್ಣು ಇವುಗಳನ್ನು ದಾವೀದನಿಗೂ, ಅವನ ಸಂಗಡ ಇದ್ದ ಜನರಿಗೂ ತಿನ್ನುವುದಕ್ಕೆ ತಂದರು. ಏಕೆಂದರೆ, “ಮರುಭೂಮಿಯಲ್ಲಿ ಜನರು ಹಸಿದು ದಣಿದು ದಾಹಗೊಂಡಿರುವರು,” ಎಂದುಕೊಂಡರು. \c 18 \p \v 1 ದಾವೀದನು ತನ್ನ ಸಂಗಡದಲ್ಲಿದ್ದ ಜನರನ್ನು ಲೆಕ್ಕ ಮಾಡಿ, ಅವರ ಮೇಲೆ ಸಾವಿರ ಜನರಿಗೂ, ನೂರು ಜನರಿಗೂ ಅಧಿಪತಿಗಳನ್ನು ನೇಮಿಸಿದನು. \v 2 ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು. \p \v 3 ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು. \p \v 4 ಆಗ ಅರಸನು ಅವರಿಗೆ, “ನಿಮಗೆ ಸರಿಕಾಣಿಸುವುದನ್ನು ಮಾಡುತ್ತೇನೆ,” ಎಂದನು. \p ಅರಸನು ಬಾಗಿಲ ಬಳಿಯಲ್ಲಿ ನಿಂತನು. ಸೈನಿಕರೆಲ್ಲಾ ನೂರು ನೂರಾಗಿಯೂ, ಸಾವಿರ ಸಾವಿರಗಳಾಗಿಯೂ ಹೊರಟರು. \v 5 ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು. \p \v 6 ಅನಂತರ ಸೈನಿಕರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. ಯುದ್ಧವು ಎಫ್ರಾಯೀಮ್ ಅಡವಿಯಲ್ಲಿತ್ತು. \v 7 ಅಲ್ಲಿ ಇಸ್ರಾಯೇಲರು ದಾವೀದನ ಸೇವಕರ ಮುಂದೆ ಸಂಹಾರವಾದರು. \v 8 ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು. \p \v 9 ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು. \p \v 10 ಅದನ್ನು ಒಬ್ಬನು ಕಂಡು ಯೋವಾಬನಿಗೆ, “ಅಬ್ಷಾಲೋಮನು ಒಂದು ಏಲಾ ಮರದಲ್ಲಿ ತೂಗಾಡುವುದನ್ನು ಕಂಡೆನು,” ಎಂದನು. \p \v 11 ಅದಕ್ಕೆ ಯೋವಾಬನು ತನಗೆ ಅದನ್ನು ತಿಳಿಸಿದವನಿಗೆ, “ನೀನು ಕಂಡು ಅವನನ್ನು ಏಕೆ ಕಡಿದು ನೆಲಕ್ಕೆ ಉರುಳಿಸಲಿಲ್ಲ? ನಾನು ನಿನಗೆ ಹತ್ತು ಬೆಳ್ಳಿ ನಾಣ್ಯಗಳನ್ನು, ಒಂದು ಬೆಳ್ಳಿ ನಡುಕಟ್ಟನ್ನು ಕೊಡುತ್ತಿದ್ದೆನು,” ಎಂದನು. \p \v 12 ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು. \v 13 ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಏಕೆ ಮೋಸಮಾಡಿಕೊಳ್ಳಬೇಕು. ಏಕೆಂದರೆ ಅರಸನಿಗೆ ಯಾವ ಕಾರ್ಯವೂ ಮರೆಯಾಗಿರುವುದಿಲ್ಲ. ನೀನೇ ನನಗೆ ವಿರೋಧವಾಗಿ ನಿಲ್ಲುವಿ,” ಎಂದನು. \p \v 14 ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು. \v 15 ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು. \p \v 16 ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು. \v 17 ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು. \p \v 18 ಅಬ್ಷಾಲೋಮನು ಜೀವದಿಂದಿರುವಾಗ, “ನನ್ನ ಹೆಸರನ್ನು ಜ್ಞಾಪಕಾರ್ಥವಾಗಿ ಉಳಿಸಲು ನನಗೆ ಮಗನಿಲ್ಲ,” ಎಂದು ಹೇಳಿ, ಅವನು ತಗ್ಗಿನಲ್ಲಿರುವ ಒಂದು ಕಲ್ಲಿನ ಸ್ತಂಭವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಈ ದಿನದವರೆಗೂ ಅಬ್ಷಾಲೋಮನ ಸ್ಮಾರಕಸ್ತಂಭ ಎಂದು ಕರೆಯಲಾಗುತ್ತದೆ. \s1 ದಾವೀದನು ಗೋಳಾಡಿದ್ದು \p \v 19 ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು. \p \v 20 ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು. \p \v 21 ಯೋವಾಬನು ಕೂಷ್ಯ ದೇಶವಾಸಿಯಾದ ಒಬ್ಬನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು,” ಎಂದನು. ಕೂಷ್ಯ ದೇಶವಾಸಿ ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. \p \v 22 ಆಗ ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, ಏನೇ ಆಗಲಿ, “ನಾನು ಕೂಷ್ಯ ದೇಶವಾಸಿ ಹಿಂದೆ ಓಡಿಹೋಗುವ ಹಾಗೆ ಅಪ್ಪಣೆಕೊಡಬೇಕು,” ಎಂದನು. \p ಅದಕ್ಕೆ ಯೋವಾಬನು, “ನನ್ನ ಮಗನೇ, ನೀನು ಏಕೆ ಹೋಗಲು ಬಯಸುತ್ತಿರುವೆ? ನಿನಗೆ ಪ್ರಶಸ್ತಿಯನ್ನು ತರುವ ಯಾವುದೇ ಸುದ್ದಿ ನಿನ್ನ ಬಳಿ ಇಲ್ಲ,” ಎಂದನು. \p \v 23 ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. \p ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು. \p \v 24 ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ, ಕಣ್ಣುಗಳನ್ನೆತ್ತಿ ನೋಡಲಾಗಿ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿಬರುವುದನ್ನು ಕಂಡನು. \v 25 ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. \p ಅರಸನು, “ಅವನು ಒಬ್ಬನಾಗಿ ಬಂದರೆ, ಅವನ ಬಳಿ ಒಳ್ಳೆಯ ಸಮಾಚಾರ ಇರುವುದು,” ಎಂದನು. ಅವನು ಬಂದು ಸಮೀಪಿಸಿದನು. \p \v 26 ಕಾವಲುಗಾರನು ಬೇರೊಬ್ಬನು ಓಡಿಬರುವುದನ್ನು ಕಂಡು, ಬಾಗಿಲು ಕಾಯುವವನನ್ನು ಕರೆದು, “ಇಗೋ, ಮತ್ತೊಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ,” ಎಂದನು. \p ಅದಕ್ಕೆ ಅರಸನು, “ಅವನೂ ಸಹ ಒಳ್ಳೆಯ ಸಮಾಚಾರ ತೆಗೆದುಕೊಂಡು ಬರುತ್ತಾನೆ,” ಎಂದನು. \p \v 27 ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. \p ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು. \p \v 28 ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು. \p \v 29 ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. \p ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು. \p \v 30 ಅರಸನು, “ನೀನು ಇತ್ತಲಾಗಿ ಬಂದು ನಿಲ್ಲು,” ಎಂದನು. ಅವನು ಅತ್ತಲಾಗಿ ಹೋಗಿ ನಿಂತನು. ಆಗ ಕೂಷ್ಯನು ಬಂದನು. \p \v 31 ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು. \p \v 32 ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. \p ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು. \p \v 33 ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು. \c 19 \p \v 1 “ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು. \v 2 “ಅರಸನು ತನ್ನ ಮಗನಿಗೋಸ್ಕರ ವ್ಯಥೆಪಡುತ್ತಿದ್ದಾನೆ,” ಎಂದು ಎಲ್ಲ ಜನರಿಗೂ ಗೊತ್ತಾಗಿದ್ದರಿಂದ ಆ ವಿಜಯದ ದಿನವು ಸಮಸ್ತ ಜನರಿಗೆ ಗೋಳಾಟವಾಗಿ ಮಾರ್ಪಟ್ಟಿತು. \v 3 ಆದ್ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಬರುವ ಕಳ್ಳರ ಹಾಗೆ ಪಟ್ಟಣದೊಳಗೆ ಬಂದರು. \v 4 ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು, ಮಹಾಶಬ್ದವಾಗಿ, “ನನ್ನ ಮಗ ಅಬ್ಷಾಲೋಮನೇ, ಅಬ್ಷಾಲೋಮನೇ ನನ್ನ ಮಗನೇ, ನನ್ನ ಮಗನೇ,” ಎಂದು ಕೂಗುತ್ತಿದ್ದನು. \p \v 5 ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು, ಅವನಿಗೆ, “ನಿನ್ನ ಪ್ರಾಣವನ್ನೂ, ನಿನ್ನ ಪುತ್ರಪುತ್ರಿಯರ ಪ್ರಾಣಗಳನ್ನೂ, ನಿನ್ನ ಹೆಂಡತಿಯರ ಮತ್ತು ಉಪಪತ್ನಿಯರ ಪ್ರಾಣಗಳನ್ನೂ ರಕ್ಷಿಸಿದ ನಿನ್ನ ಸೇವಕರನ್ನು ಈ ಹೊತ್ತು ನಾಚಿಕೆಪಡಿಸಿದ್ದೀ. \v 6 ನೀನು ನಿನ್ನ ಹಗೆಯವರನ್ನು ಪ್ರೀತಿಮಾಡಿ, ನಿನ್ನನ್ನು ಪ್ರೀತಿಸುವವರನ್ನು ಹಗೆ ಮಾಡಿದ್ದರಿಂದ ಸೇನಾಧಿಪತಿಗಳನ್ನೂ, ಸೈನಿಕರನ್ನೂ ನಿನಗೆ ಏನೂ ಅಲ್ಲವೆಂದು ಈಗ ತಿಳಿಯಮಾಡಿದಿ. ಈ ಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನು ಬದುಕಿದ್ದರೆ, ನಿನಗೆ ಸಂತೋಷವಾಗುತ್ತಿತ್ತು ಎಂದು ನನಗೆ ಅನಿಸುತ್ತದೆ. \v 7 ಈಗ ನೀನು ಎದ್ದು ಹೊರಟುಬಂದು, ನಿನ್ನ ಸೈನಿಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ, ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವುದಿಲ್ಲವೆಂದು ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವನಕಾಲದಿಂದ ಈ ದಿನದವರೆಗೂ ನಿನಗೆ ಬಂದ ಸಮಸ್ತ ಕೇಡಿಗಿಂತ ಅದು ಅಧಿಕ ಕೇಡಾಗಿರುವುದು,” ಎಂದನು. \p \v 8 ಆಗ ಅರಸನು ಎದ್ದು ಹೋಗಿ ಬಾಗಿಲಲ್ಲಿ ಕುಳಿತನು. “ಅರಸನು ಬಾಗಿಲಲ್ಲಿ ಕುಳಿತಿದ್ದಾನೆ,” ಎಂದು ಸಮಸ್ತ ಸೈನಿಕರಿಗೆ ತಿಳಿದಿದ್ದರಿಂದ, ಸೈನಿಕರೆಲ್ಲರೂ ಅರಸನ ಎದುರಿಗೆ ಬಂದರು. \p ಆದರೆ ಇಸ್ರಾಯೇಲರು ಮಧ್ಯದಲ್ಲಿ ತಮ್ಮ ತಮ್ಮ ಮನೆಗಳಿಗೆ ಹೋದರು. \s1 ದಾವೀದನು ಯೆರೂಸಲೇಮಿಗೆ ಹಿಂದಿರುಗಿದ್ದು \p \v 9 ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. \v 10 ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು. \p \v 11 ಆಗ ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ, ಅಬಿಯಾತರನ ಬಳಿಗೂ ಸೇವಕರನ್ನು ಕಳುಹಿಸಿ, “ನೀವು ಯೆಹೂದದ ಹಿರಿಯರಿಗೆ, ‘ಸಮಸ್ತ ಇಸ್ರಾಯೇಲಿನ ಮಾತು ಅರಸನಿಗೆ ಅವನ ಅರಮನೆಯಲ್ಲಿಯೇ ತಿಳಿದಿರುವಾಗ, ಅರಸನನ್ನು ಅವನ ಮನೆಗೆ ತಿರುಗಿ ಕರೆದುಕೊಂಡು ಬರುವಂತೆ ನೀವು ಹಿಂಜರಿದದ್ದೇನು? \v 12 ನೀವು ನನ್ನ ಸಹೋದರರೂ, ನನ್ನ ರಕ್ತವೂ, ನನ್ನ ಮಾಂಸವೂ ಆಗಿದ್ದೀರಿ. ಹಾಗಾದರೆ ಅರಸನನ್ನು ತಿರುಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?’ ಎಂದು ತಿಳಿಸಿರಿ. \v 13 ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು. \p \v 14 ಅರಸನು ಸಕಲ ಯೆಹೂದ ಜನರ ಹೃದಯವನ್ನು ಸಂಪೂರ್ಣವಾಗಿ ಗೆದ್ದುಕೊಂಡದ್ದರಿಂದ, ಅವರು ಅರಸನಿಗೆ, “ನೀನೂ, ನಿನ್ನ ಸಮಸ್ತ ಸೇವಕರೂ ತಿರುಗಿ ಬನ್ನಿರಿ,” ಎಂದು ಹೇಳಿ ಕಳುಹಿಸಿದರು. \v 15 ಅರಸನು ತಿರುಗಿ ಯೊರ್ದನಿನವರೆಗೂ ಬಂದನು. \p ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವುದಕ್ಕೆ ಗಿಲ್ಗಾಲಿಗೆ ಬಂದರು. \v 16 ಬಹುರೀಮಿನವನೂ ಬೆನ್ಯಾಮೀನ್ಯನೂ ಗೇರನ ಮಗ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸ ದಾವೀದನನ್ನು ಎದುರುಗೊಳ್ಳುವುದಕ್ಕೆ ಬಂದನು. \v 17 ಅವನ ಸಂಗಡ ಬೆನ್ಯಾಮೀನ್ಯರಾದ ಸಾವಿರ ಜನರೂ, ಸೌಲನ ಮನೆಯ ಸೇವಕ ಚೀಬನೂ, ಅವನ ಸಂಗಡ ಹದಿನೈದು ಮಂದಿ ಪುತ್ರರೂ, ಅವನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ, ಅರಸನಿಗೆ ಎದುರಾಗಿ ಬಂದರು. \v 18 ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು. \p ಆಗ ಗೇರನ ಮಗ ಶಿಮ್ಮಿಯು ಯೊರ್ದನನ್ನು ದಾಟುತ್ತಲೇ, ಅರಸನ ಮುಂದೆ ಬಿದ್ದು ಅರಸನಿಗೆ, \v 19 “ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ. \v 20 ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು. \p \v 21 ಆಗ ಚೆರೂಯಳ ಮಗ ಅಬೀಷೈಯನು ಉತ್ತರವಾಗಿ, “ಯೆಹೋವ ದೇವರ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ, ಅದಕ್ಕಾಗಿ ಅವನಿಗೆ ಮರಣದಂಡನೆ ಆಗಬೇಕಲ್ಲವೆ?” ಎಂದನು. \p \v 22 ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು. \v 23 ಆಗ ಅರಸನು ಶಿಮ್ಮಿಗೆ, “ನೀನು ಸಾಯುವುದಿಲ್ಲ,” ಎಂದು ಅವನಿಗೆ ಆಣೆ ಇಟ್ಟನು. \p \v 24 ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ. \v 25 ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ, ಅರಸನು ಅವನಿಗೆ, “ಮೆಫೀಬೋಶೆತನೇ, ನೀನು ಏಕೆ ನನ್ನ ಸಂಗಡ ಬಾರದೆ ಹೋದೆ?” ಎಂದನು. \p \v 26 ಅದಕ್ಕವನು, “ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಏಕೆಂದರೆ ನಿನ್ನ ಸೇವಕನು ಕುಂಟನಾಗಿರುವುದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕಿ, ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು. \v 27 ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಮಾಡು. \v 28 ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು. \p \v 29 ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು. \p \v 30 ಮೆಫೀಬೋಶೆತನು ಅರಸನಿಗೆ, “ಹೌದು, ಅರಸನಾದ ನನ್ನ ಒಡೆಯನು ಸಮಾಧಾನದಿಂದ ತಿರುಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಸಮಸ್ತವನ್ನು ತೆಗೆದುಕೊಳ್ಳಲಿ,” ಎಂದನು. \p \v 31 ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ರೋಗೆಲೀಮಿನಿಂದ ಅರಸನನ್ನು ಯೊರ್ದನ್ ದಾಟಿಸಲು ಮತ್ತು ಅಲ್ಲಿಂದ ಅವನನ್ನು ಕಳುಹಿಸಲು ಬಂದನು. \v 32 ಈ ಬರ್ಜಿಲ್ಲೈಯು ಎಂಬತ್ತು ವರ್ಷದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನಯಿಮಿನಲ್ಲಿ ವಾಸಿಸಿಸುವವರೆಗೂ ಇವನು ಅರಸನನ್ನು ಸಂರಕ್ಷಿಸಿದನು. ಏಕೆಂದರೆ ಅವನು ಬಹು ಸಿರಿವಂತ ಮನುಷ್ಯನಾಗಿದ್ದನು. \v 33 ಆದ್ದರಿಂದ ಅರಸನು ಬರ್ಜಿಲ್ಲೈಗೆ, “ನೀನು ನನ್ನ ಸಂಗಡ ಬಾ, ಯೆರೂಸಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು,” ಎಂದನು. \p \v 34 ಆದರೆ ಬರ್ಜಿಲ್ಲೈಯು ಅರಸನಿಗೆ, “ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವಹಾಗೆ ನಾನು ಬದುಕುವ ವರುಷ ಎಷ್ಟು ಉಂಟು? \v 35 ನಾನು ಈ ಹೊತ್ತು ಎಂಬತ್ತು ವರ್ಷದವನು. ಇನ್ನು ಒಳ್ಳೆಯದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವುದು, ಕುಡಿಯುವುದು ನಿನ್ನ ಸೇವಕನಿಗೆ ರುಚಿಕರವಾಗಿರುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಏಕೆ ಇನ್ನು ಭಾರವಾಗಿರಬೇಕು? \v 36 ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವವರೆಗೂ ಅವರ ಅರಸನ ಸಂಗಡ ಬರುವನು. ಅದಕ್ಕೆ ಇಂಥಾ ಬಹುಮಾನ ಕೊಡುವುದೇನು? \v 37 ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರುಗಿ ಹೋಗಿ, ನನ್ನ ಪಟ್ಟಣದಲ್ಲಿ ನನ್ನ ತಂದೆತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ನಿನ್ನ ಸೇವಕನಾದ ನನ್ನ ಮಗ ಕಿಮ್ಹಾಮನು ಬರುವನು. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅವನಿಗೆ ಮಾಡು,” ಎಂದನು. \p \v 38 ಆಗ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನಾನು ಅವನಿಗೆ ಮಾಡುವೆನು. ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು,” ಎಂದನು. \p \v 39 ಜನರೆಲ್ಲರೂ ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ, ಬರ್ಜಿಲ್ಲೈಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಸ್ಥಳಕ್ಕೆ ಹಿಂದಿರುಗಿದನು. \p \v 40 ಅರಸನು ಗಿಲ್ಗಾಲಿಗೆ ಬಂದನು. ಹಾಗೆಯೇ ಅವನ ಸಂಗಡ ಕಿಮ್ಹಾಮನು ಬಂದನು. ಯೆಹೂದದ ಸೈನಿಕರೆಲ್ಲರೂ, ಇಸ್ರಾಯೇಲಿನ ಅರ್ಧ ಪಾಲು ಸೈನಿಕರೂ ಅರಸನನ್ನು ಕರೆದುಕೊಂಡು ಬಂದರು. \p \v 41 ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು. \p \v 42 ಆಗ ಯೆಹೂದದವರೆಲ್ಲರೂ ಇಸ್ರಾಯೇಲರಿಗೆ ಉತ್ತರವಾಗಿ, “ಅರಸನು ನಮಗೆ ಸಮೀಪ ಬಂಧುವಾದುದರಿಂದ, ಈ ಕಾರ್ಯಕ್ಕೋಸ್ಕರ ನೀವು ಕೋಪಗೊಂಡಿರುವುದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ನಾವು ನಮಗಾಗಿ ಏನನ್ನಾದರೂ ತೆಗೆದುಕೊಂಡಿದ್ದೇವೆಯೇ?” ಎಂದರು. \p \v 43 ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. \p ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು. \c 20 \s1 ಶೆಬನು ದಾವೀದನಿಗೆ ವಿರುದ್ಧ ದಂಗೆ ಎದ್ದದ್ದು \p \v 1 ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, \q1 “ನಮಗೆ ದಾವೀದನಲ್ಲಿ ಪಾಲಿಲ್ಲ, \q2 ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. \q1 ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.” \p \v 2 ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು ಸರಿದು, ಬಿಕ್ರಿಯ ಮಗ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು. \p \v 3 ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು. ಅರಸನು ಮನೆಯಲ್ಲಿ ಕಾಯಲು ಇಟ್ಟ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ತೆಗೆದುಕೊಂಡು, ಅವರನ್ನು ಒಂದು ಕಾವಲಿನಲ್ಲಿರಿಸಿ ಸಾಕುತ್ತಿದ್ದನು. ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಅವರ ಸಂಪರ್ಕ ಮಾಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು. \p \v 4 ಅರಸನು ಅಮಾಸನಿಗೆ, “ನೀನು ಮೂರು ದಿವಸಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ನನ್ನ ಬಳಿಗೆ ಬಾ ಮತ್ತು ನೀನೇ ಇಲ್ಲಿ ಇರು,” ಎಂದನು. \v 5 ಹಾಗೆಯೇ ಅಮಾಸನು ಯೆಹೂದ ಜನರನ್ನು ಕೂಡಿಸಲು ಹೋದನು. ಆದರೆ ಅವನು ತನಗೆ ನೇಮಿಸಿದ ಕಾಲಕ್ಕಿಂತ ಬಾರದೆ ಹೆಚ್ಚು ತಡಮಾಡಿದನು. \p \v 6 ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು. \v 7 ಹಾಗೆಯೇ ಅವನ ಹಿಂದೆ ಯೋವಾಬನ ಜನರೂ, ಕೆರೇತ್ಯರೂ, ಪೆಲೇತ್ಯರೂ, ಸಮಸ್ತ ಪರಾಕ್ರಮಶಾಲಿಗಳೂ ಅಬೀಷೈಯನ ನೇತೃತ್ವದಲ್ಲಿ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು. \p \v 8 ಅವರು ಗಿಬ್ಯೋನಿನ ಸಮೀಪದಲ್ಲಿರುವ ದೊಡ್ಡ ಕಲ್ಲಿನ ಬಳಿಗೆ ಬಂದಾಗ, ಅಮಾಸನು ಅವರೆದುರಿಗೆ ಬಂದನು. ಯೋವಾಬನು ತಾನು ಧರಿಸಿದ್ದ ಅಂಗಿಯ ಮೇಲೆ ಒಂದು ನಡುಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕಠಾರಿ ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಕಠಾರಿ ಒರೆಯಿಂದ ಕೆಳಗೆ ಬಿದ್ದಿತು. \p \v 9 ಆಗ ಯೋವಾಬನು ಅಮಾಸನಿಗೆ, “ನನ್ನ ಸಹೋದರನೇ, ಕ್ಷೇಮವೋ?” ಎಂದನು. ಯೋವಾಬನು ಅವನನ್ನು ಮುದ್ದಿಟ್ಟುಕೊಳ್ಳಲು ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. \v 10 ಆದರೆ ಅಮಾಸನು ಯೋವಾಬನ ಕೈಯಲ್ಲಿ ಕಠಾರಿ ಇದ್ದುದರಿಂದ ಎಚ್ಚರಿಕೆ ತೆಗೆದುಕೊಳ್ಳದಿರುವಾಗ, ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಹೊಟ್ಟೆಯಲ್ಲಿ ತಿವಿದನು. ಎರಡನೆಯ ಸಾರಿ ಹೊಡೆಯಲಿಲ್ಲ. ಅವನು ಸತ್ತನು. ಯೋವಾಬನೂ, ಅವನ ಸಹೋದರನಾದ ಅಬೀಷೈಯನೂ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಿದರು. \p \v 11 ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು, “ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ, ಯಾವನು ದಾವೀದನಿಗೆ ಹೊಂದಿದವನೋ, ಅವನು ಯೋವಾಬನ ಹಿಂದೆ ಹೋಗಲಿ,” ಎಂದನು. \v 12 ಆದರೆ ಅಮಾಸನು ರಾಜಮಾರ್ಗದೊಳಗೆ ರಕ್ತದಲ್ಲಿ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವುದನ್ನು ಆ ಮನುಷ್ಯನು ಕಂಡಾಗ, ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಹಾಕಿ, ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು. \v 13 ಶವವನ್ನು ರಾಜಮಾರ್ಗದಿಂದ ಎಳೆದು ಆಚೆ ಹಾಕಿದ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ, ಬಿಕ್ರಿಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು. \p \v 14 ಶೆಬನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಬೇತ್ ಮಾಕದ ಆಬೇಲಿಗೆ ಬಂದು, ಬೇರ‍್ಯರ ಪ್ರದೇಶದ ಮಾರ್ಗವಾಗಿ ಹೋದನು. ಆಗ ಬೇರ‍್ಯರು ಕೂಡಿಕೊಂಡು ಅವನ ಸಂಗಡ ಹೋದರು. \v 15 ಯೋವಾಬನ ಜೊತೆಗಿದ್ದ ಸೈನಿಕರು ಬಂದು ಆಬೇಲ್ ಬೇತ್ ಮಾಕಾ ಊರಿಗೆ ಮುತ್ತಿಗೆ ಹಾಕಿ, ಪಟ್ಟಣಕ್ಕೆದುರಾಗಿ ಊರು ಗೋಡೆಯವರೆಗೆ ಮಣ್ಣಿನ ದಿಬ್ಬವನ್ನು ಮಾಡಿದರು. ಯೋವಾಬನ ಸಂಗಡದಲ್ಲಿರುವ ಜನರೆಲ್ಲರೂ ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು. \v 16 ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ, “ಕೇಳಿರಿ, ಕೇಳಿರಿ. ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸಮೀಪಿಸಲು ಬರಹೇಳಿರಿ,” ಎಂದು ಕೂಗಿ ಬೇಡಿಕೊಂಡಳು. \v 17 ಅವನು ಅವಳ ಬಳಿಗೆ ಸಮೀಪಿಸಿ ಬಂದಾಗ, ಆ ಸ್ತ್ರೀಯು, “ನೀನು ಯೋವಾಬನೋ?” ಎಂದಳು. \p ಅದಕ್ಕೆ ಅವನು, “ಹೌದು, ನಾನೇ,” ಎಂದು ಉತ್ತರಕೊಟ್ಟನು. \p ಆಕೆ, “ನಿನ್ನ ದಾಸಿಯ ಮಾತನ್ನು ಕೇಳಿ,” ಎಂದಳು. \p ಅದಕ್ಕೆ ಅವನು, “ನಾನು ಕೇಳುತ್ತೇನೆ,” ಎಂದನು. \p \v 18 ಅವಳು ಮಾತನಾಡುತ್ತಾ, “ಪೂರ್ವಕಾಲದಲ್ಲಿ, ‘ಆಬೇಲಿನವರ ಉತ್ತರ ಪಡೆಯಿರಿ’ ಎಂದು ಹೇಗೆ ವ್ಯಾಜ್ಯ ತೀರಿಸಿಕೊಳ್ಳುತ್ತಿದ್ದರು. \v 19 ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು. \p \v 20 ಅದಕ್ಕೆ ಯೋವಾಬನು ಉತ್ತರವಾಗಿ, “ನಾನು ಅದನ್ನು ಎಂದಿಗೂ ಮಾಡುವುದಿಲ್ಲ. ನುಂಗುವುದನ್ನೂ ಹಾಳುಮಾಡುವುದನ್ನೂ ನಾನು ಎಂದಿಗೂ ಮಾಡುವುದಿಲ್ಲ. \v 21 ಕಾರ್ಯವು ಹಾಗಲ್ಲ. ಏಕೆಂದರೆ ಬಿಕ್ರಿಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯೀಮ್ ಬೆಟ್ಟದವನಾದ ಒಬ್ಬ ಮನುಷ್ಯನು, ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ. ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು,” ಎಂದನು. \p ಆ ಸ್ತ್ರೀಯು ಯೋವಾಬನಿಗೆ, “ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು,” ಎಂದಳು. \p \v 22 ಆ ಸ್ತ್ರೀಯು ತನ್ನ ಜ್ಞಾನದಿಂದ ಸಮಸ್ತ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರಿಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ, ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನೂ ತಮ್ಮ ತಮ್ಮ ಮನೆಗಳಿಗೆ ಹೋದರು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂದಿರುಗಿ ಬಂದನು. \s1 ದಾವೀದನ ಅಧಿಕಾರಿಗಳು \li1 \v 23 ಯೋವಾಬನು ಇಸ್ರಾಯೇಲಿನ ಸಮಸ್ತ ಸೈನ್ಯದ ಅಧಿಪತಿಯಾಗಿದ್ದನು. \li1 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. \li1 \v 24 ಅದೋನೀರಾಮನು\f + \fr 20:24 \fr*\fq ಅದೋನೀರಾಮನು \fq*\ft ಅಥವಾ \ft*\fqa ಅದೋರಾಮ\fqa*\f* ದಾಸರ ಮೇಲೆ ಉಸ್ತುವಾರಿ ವಹಿಸಿದ್ದನು. \li1 ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು. \li1 \v 25 ಶೆವನು ಕಾರ್ಯದರ್ಶಿಯಾಗಿದ್ದನು. \li1 ಚಾದೋಕನೂ ಅಬಿಯಾತರನೂ ಯಾಜಕರಾಗಿದ್ದರು. \li1 \v 26 ಯಾಯೀರಿನವನಾದ ಈರನೂ ದಾವೀದನ ಯಾಜಕನಾಗಿದ್ದನು. \c 21 \s1 ಗಿಬ್ಯೋನ್ಯರ ಮೇಲೆ ಪ್ರತೀಕಾರ \p \v 1 ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು. \p \v 2 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು. \v 3 ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಮಾಡಬೇಕಾದದ್ದೇನು? ನೀವು ಯೆಹೋವ ದೇವರ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ, ನಾನು ಯಾವುದರಿಂದ ಪ್ರಾಯಶ್ಚಿತ್ತ ಮಾಡಲಿ,” ಎಂದು ಕೇಳಿದನು. \p \v 4 ಆಗ ಗಿಬ್ಯೋನ್ಯರು ಅವನಿಗೆ, “ಸೌಲನ ಕೈಯಿಂದಲಾದರೂ, ಅವನ ಮನೆಯವರ ಕೈಯಿಂದಲಾದರೂ, ನಮಗೆ ಬೆಳ್ಳಿಯಾದರೂ, ಬಂಗಾರವಾದರೂ ಬೇಡ. ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕಬೇಕೆಂಬುದು ನಮಗೆ ಅಗತ್ಯವಿಲ್ಲ,” ಎಂದರು. \p ಆಗ ಅವನು, “ನೀವು ನನಗೆ ಏನು ಹೇಳುತ್ತೀರೋ, ನಾನು ನಿಮಗೆ ಮಾಡುವೆನು,” ಎಂದನು. \p \v 5 ಅವರು ಅರಸನಿಗೆ, “ಯಾವನು ನಮ್ಮನ್ನು ಸಂಹರಿಸಿಬಿಟ್ಟು, ನಾವು ಇಸ್ರಾಯೇಲಿನ ಸಮಸ್ತ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ ನಮಗೆ ಕೇಡು ಮಾಡಲು ನೆನಸಿದನೋ, \v 6 ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. \p ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು. \p \v 7 ಆದರೆ ತಮಗೂ, ದಾವೀದನಿಗೂ, ಸೌಲನ ಮಗ ಯೋನಾತಾನನಿಗೂ ಯೆಹೋವ ದೇವರನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ, \v 8 ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರು ಮಕ್ಕಳಾದ ಅರ್ಮೋನಿಯನ್ನೂ, ಮತ್ತೊಬ್ಬ ಮೆಫೀಬೋಶೆತನನ್ನೂ, ಸೌಲನ ಮಗಳಾಗಿರುವ ಮೇರಬಳು\f + \fr 21:8 \fr*\fq ಮೇರಬಳು \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಮೀಕಲಳು\fqa*\f* ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರಿಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡಿದುಕೊಂಡು, \v 9 ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಇವರನ್ನು ಕೊಂದು, ಯೆಹೋವ ದೇವರ ಮುಂದೆ ಬೆಟ್ಟದ ಮೇಲೆ ನೇತುಹಾಕಿದರು. ಈ ಏಳುಮಂದಿಯೂ ಒಂದೇ ಸಾರಿ ಹತರಾದರು. ಇವರನ್ನು ಕೊಂದಾಗ ಜವೆಗೋಧಿ ಸುಗ್ಗಿಯ ಆರಂಭವಾಗಿತ್ತು. \p \v 10 ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತೆಗೆದುಕೊಂಡುಹೋಗಿ, ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಅದರ ಮೇಲೆ ಕುಳಿತುಕೊಂಡಳು. ಸುಗ್ಗಿಯ ದಿವಸ ಮೊದಲ್ಗೊಂಡು ಆಕಾಶದಿಂದ ಶವಗಳ ಮೇಲೆ ಮಳೆ ಬೀಳುವ ತನಕ, ಹಗಲಲ್ಲಿ ಆಕಾಶದ ಪಕ್ಷಿಗಳಾದರೂ, ರಾತ್ರಿಯಲ್ಲಿ ಕಾಡುಮೃಗಗಳಾದರೂ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು. \v 11 ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲಾಯಿತು. \v 12 ಆಗ ದಾವೀದನು ಹೋಗಿ ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೆ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೌಲನನ್ನು ಸೋಲಿಸಿದ ನಂತರ, ಅವನ ಮತ್ತು ಅವನ ಮಗನಾದ ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಆ ಶವಗಳನ್ನು ಕದ್ದುಕೊಂಡು ಹೋಗಿದ್ದರು. \v 13 ದಾವೀದನು ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಗಿಬ್ಯೋನಿನಲ್ಲಿ ಹತರಾದ ಆ ಮನುಷ್ಯರ ಎಲುಬುಗಳನ್ನೂ ಅವರಿಂದ ತೆಗೆದುಕೊಂಡನು. \p \v 14 ಅವುಗಳನ್ನು ಬೆನ್ಯಾಮೀನನ ದೇಶದ ಚೇಲದಲ್ಲಿರುವ ಸೌಲನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಳಿಟ್ಟರು. ಅವರು ಅರಸನು ಆಜ್ಞಾಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ, ದೇವರು ದೇಶಕ್ಕೋಸ್ಕರ ಮಾಡಿದ ಬಿನ್ನಹವನ್ನು ಕೇಳಿದರು. \s1 ಫಿಲಿಷ್ಟಿಯರ ವಿರೋಧವಾಗಿ ಯುದ್ಧ \p \v 15 ಫಿಲಿಷ್ಟಿಯರು ತಿರುಗಿ ಇಸ್ರಾಯೇಲರ ಮೇಲೆ ಯುದ್ಧಮಾಡಿದರು. ಆಗ ದಾವೀದನು ತನ್ನ ಜನರೊಂದಿಗೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿದನು. ದಾವೀದನು ದಣಿದು ಹೋದನು. \v 16 ಆಗ ಮುನ್ನೂರು ಬೆಳ್ಳಿ ನಾಣ್ಯದ ತೂಕದ ಕಂಚು ಈಟಿಯುಳ್ಳ, ಹೊಸ ಖಡ್ಗವನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ರೆಫಾಯನ ಮಕ್ಕಳಲ್ಲಿ ಇಷ್ಬೀಬೆನೋಬನು ದಾವೀದನನ್ನು ಕೊಲ್ಲಬೇಕೆಂದಿದ್ದನು. \v 17 ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು. \p \v 18 ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಮತ್ತೊಂದು ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು. \p \v 19 ಅನಂತರ ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಯುದ್ಧ ಉಂಟಾದಾಗ, ಬೇತ್ಲೆಹೇಮಿನವನಾದ ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರರನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು. \p \v 20 ಇನ್ನೊಂದು ಸಾರಿ ಗತ್ ಊರಿನಲ್ಲಿ ಯುದ್ಧ ಉಂಟಾದಾಗ, ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು. ಅವನ ಕೈಕಾಲುಗಳ ಬೆರಳುಗಳು ಆರಾರರಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನು ಸಹ ರೆಫಾಯನಿಗೆ ಹುಟ್ಟಿದವನಾಗಿದ್ದನು. \v 21 ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮೆಯನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು. \p \v 22 ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು. \c 22 \s1 ದಾವೀದನ ಸ್ತುತಿಗೀತೆ \p \v 1 ಯೆಹೋವ ದೇವರು ದಾವೀದನನ್ನು ಅವನ ಎಲ್ಲಾ ಶತ್ರುಗಳಿಂದಲೂ, ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು. \v 2 ಅವನು ಹೇಳಿದನು: \q1 “ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ, \q2 \v 3 ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು; \q2 ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, \q1 ಅವರು ನನ್ನ ಉನ್ನತವಾದ ದುರ್ಗವೂ, ನನ್ನ ಆಶ್ರಯವೂ, \q2 ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವರೂ ಅವರೇ ಆಗಿದ್ದಾರೆ. \b \q1 \v 4 “ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, \q2 ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ. \q1 \v 5 ಮರಣದಲೆಗಳು ನನ್ನನ್ನು ಆವರಿಸಿಕೊಂಡವು. \q2 ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು; \q1 \v 6 ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; \q2 ಮರಣದ ಬಲೆಗಳು ನನ್ನನ್ನು ಎದುರಿಸಿದವು. \b \q1 \v 7 “ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಕರೆದೆನು; \q2 ನನ್ನ ದೇವರಿಗೆ ಮೊರೆಯಿಟ್ಟೆನು. \q1 ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; \q2 ನನ್ನ ಮೊರೆಯು ಅವರ ಕಿವಿಗೆ ಮುಟ್ಟಿತು. \q1 \v 8 ಆಗ ದೇವರು ಬೇಸರಗೊಂಡಿದ್ದರಿಂದ \q2 ಭೂಮಿಯು ನಡುಗಿ ಕದಲಿದವು, \q2 ಆಕಾಶಗಳ ಅಸ್ತಿವಾರಗಳು ಸಹ ಕದಲಿದವು. \q1 \v 9 ಮೂಗಿನಿಂದ ಹೊಗೆ ಬಂದಂತೆಯೂ, \q2 ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; \q2 ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇತ್ತು. \q1 \v 10 ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; \q2 ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು; \q1 \v 11 ಅವರು ಕೆರೂಬಿಯ ಮೇಲೆ ಕೂತು ಹಾರಿದರು, \q2 ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು. \q1 \v 12 ಕತ್ತಲನ್ನೂ, ಮಳೆ ತರುವ ಆಕಾಶದ ಕಾರ್ಮೋಡಗಳನ್ನೂ \q2 ತಮ್ಮ ಸುತ್ತಲೂ ಹೊದಿಕೆಯನ್ನಾಗಿ ಮಾಡಿಕೊಂಡರು. \q1 \v 13 ಅವರ ಸನ್ನಿಧಿಯ ಪ್ರಕಾಶದಿಂದ \q2 ಮಿಂಚಿನ ಜ್ವಾಲೆಗಳು ಹೊರಹೊಮ್ಮಿದವು. \q1 \v 14 ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು. \q2 ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು. \q1 \v 15 ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು, \q2 ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು. \q1 \v 16 ಆಗ ಯೆಹೋವ ದೇವರ ಗದರಿಕೆಯಿಂದಲೂ, \q2 ಅವರ ಮೂಗಿನ ಶ್ವಾಸದ ಗಾಳಿಯಿಂದಲೂ \q1 ಸಮುದ್ರದ ತಳವು ಕಾಣಿಸಿತು. \q2 ಭೂಲೋಕದ ಅಸ್ತಿವಾರಗಳು ಬಯಲಾದವು. \b \q1 \v 17 “ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, \q2 ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು. \q1 \v 18 ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, \q2 ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು. \q1 \v 19 ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; \q2 ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು. \q1 \v 20 ಅವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು; \q2 ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ಕಾಪಾಡಿದರು. \b \q1 \v 21 “ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; \q2 ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು. \q1 \v 22 ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಅನುಸರಿಸಿದ್ದೇನೆ, \q2 ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ. \q1 \v 23 ಅವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; \q2 ದೇವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ. \q1 \v 24 ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು, \q2 ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು. \q1 \v 25 ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ, \q2 ಅವರ ದೃಷ್ಟಿಯಲ್ಲಿ ನನ್ನ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು. \b \q1 \v 26 “ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ; \q2 ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ. \q1 \v 27 ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ, \q2 ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ. \q1 \v 28 ದೀನರನ್ನು ರಕ್ಷಿಸುತ್ತೀರಿ; \q2 ಆದರೆ ನೀವು ಗರ್ವಿಷ್ಠರನ್ನು ತಗ್ಗಿಸಲು ನಿಮ್ಮ ಕಣ್ಣುಗಳು ಅವರ ಮೇಲೆ ಇರುತ್ತವೆ. \q1 \v 29 ಯೆಹೋವ ದೇವರೇ, ನನ್ನ ದೀಪವು ನೀವೇ; \q2 ಯೆಹೋವ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು. \q1 \v 30 ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು. \q2 ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು. \b \q1 \v 31 “ದೇವರ ಮಾರ್ಗವು ಪರಿಪೂರ್ಣವಾದದ್ದು; \q2 ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; \q2 ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ. \q1 \v 32 ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? \q2 ಮತ್ತು ನಮ್ಮ ದೇವರನ್ನು ಹೊರತುಪಡಿಸಿ ಬಂಡೆ ಯಾರು? \q1 \v 33 ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ; \q2 ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ. \q1 \v 34 ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, \q2 ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ. \q1 \v 35 ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು. \q2 ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ. \q1 \v 36 ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ, \q2 ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ. \q1 \v 37 ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, \q2 ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ. \b \q1 \v 38 “ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು. \q2 ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ. \q1 \v 39 ಏಳಲಾರದಂತೆ ಅವರನ್ನು ಸಂಪೂರ್ಣವಾಗಿ ತುಳಿದುಬಿಟ್ಟೆನು; \q2 ಅವರು ನನ್ನ ಪಾದಗಳ ಕೆಳಗೆ ಬಿದ್ದರು. \q1 \v 40 ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ; \q2 ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ. \q1 \v 41 ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; \q2 ನಾನು ನನ್ನ ವೈರಿಗಳನ್ನು ಸಂಹರಿಸಿದೆನು. \q1 \v 42 ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ; \q2 ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ. \q1 \v 43 ನಾನು ಅವರನ್ನು ನೆಲದ ಧೂಳಿನಂತೆ ಪುಡಿಪುಡಿ ಮಾಡಿದೆನು; \q2 ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು. \b \q1 \v 44 “ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ, \q2 ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಉಳಿಸಿದ್ದೀ; \q1 ನಾನು ಅರಿಯದ ಜನರು ನನಗೆ ವಿಧೇಯರಾಗುವರು. \q2 \v 45 ವಿದೇಶಿಯರು ನನಗೆ ಅಧೀನರಾದರು; \q2 ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು. \q1 \v 46 ಅವರು ಭಯಗೊಳ್ಳುವರು; \q2 ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು. \b \q1 \v 47 “ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರ. \q2 ನನ್ನ ಬಂಡೆಯು, ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ. \q1 \v 48 ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ \q2 ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ. \q2 \v 49 ಅವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ. \q1 ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ. \q2 ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ. \q1 \v 50 ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು. \q2 ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು. \b \q1 \v 51 “ಅವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; \q2 ತಮ್ಮ ಅಭಿಷಿಕ್ತನಿಗೂ, ದಾವೀದನಿಗೂ, \q2 ಅವನ ಸಂತತಿಯವರಿಗೂ ದಯೆಯನ್ನು ಯುಗಯುಗಕ್ಕೂ ಅನುಗ್ರಹಿಸುವರು.” \c 23 \s1 ದಾವೀದನ ಕಡೆಯ ಮಾತುಗಳು \p \v 1 ದಾವೀದನ ಕಡೆಯ ಮಾತುಗಳು: \q1 “ಇಷಯನ ಮಗ ದಾವೀದನ ನುಡಿಗಳಿವು: \q2 ಉನ್ನತವಾಗಿ ಸಾಗಿದ ಪುರುಷನು \q1 ಯಾಕೋಬನ ದೇವರಿಂದ ಅಭಿಷಿಕ್ತನಾದವನು, \q2 ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನೆಂದರೆ: \b \q1 \v 2 “ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; \q2 ಅವರ ನುಡಿ ನನ್ನ ಬಾಯಲ್ಲಿ ಇತ್ತು. \q1 \v 3 ಇಸ್ರಾಯೇಲಿನ ದೇವರೂ, \q2 ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: \q1 ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, \q2 ದೇವರ ಭಯದಿಂದ ಆಳುವವನು. \q1 \v 4 ಮೋಡವಿಲ್ಲದ ಮುಂಜಾನೆ \q2 ಸೂರ್ಯೋದಯದ ಸಮಯದಲ್ಲಿಯ ಉದಯದ ಬೆಳಕಿನಂತಿರುವನು. \q1 ಭೂಮಿಯಿಂದ ಹುಲ್ಲು ಮೊಳೆಯಿಸುವ \q2 ಮಳೆಯ ನಂತರದ ಪ್ರಕಾಶದಂತಿರುವನು.’ \b \q1 \v 5 “ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, \q2 ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, \q2 ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. \q1 ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. \q2 ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ. \q1 \v 6 ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, \q2 ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ. \q1 \v 7 ಮುಳ್ಳುಗಳನ್ನು ಮುಟ್ಟುವವರು ಕಬ್ಬಿಣದ ಆಯುಧ ಉಪಯೋಗಿಸುವರು, \q2 ಇಲ್ಲವೆ ಈಟಿಯ ಮೊನೆಯನ್ನು ಉಪಯೋಗಿಸುವರು. \q2 ಅವು ಬೀಳುವ ಸ್ಥಳದಲ್ಲಿ ಸುಟ್ಟುಹೋಗುವುವು.” \s1 ದಾವೀದನ ಪರಾಕ್ರಮಶಾಲಿಗಳು \p \v 8 ದಾವೀದನ ಪರಾಕ್ರಮಶಾಲಿಗಳ ಹೆಸರುಗಳು ಇವೇ: \p ಮೂರು ಜನ ಮುಖ್ಯಸ್ಥರಲ್ಲಿ ಒಬ್ಬನು ತಹ್ಕೆಮೋನ್ಯನಾದ ಯೋಷೆಬ್ ಬಷ್ಷೆಬೆತ ಎಂಬವನು; ಇವನು ತನ್ನ ಈಟಿಯಿಂದ ಎಂಟುನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು. \p \v 9 ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು; ಇವನು ಇಸ್ರಾಯೇಲ್ ಜನರು ಓಡಿ ಹೋದ ತರುವಾಯ ಯುದ್ಧಕ್ಕೆ ಕೂಡಿಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು. \v 10 ಎಲಿಯಾಜರನು ಎದ್ದು ಖಡ್ಗ ಹಿಡಿದ ತನ್ನ ಕೈ ದಣಿದು ಮರಗಟ್ಟಿ ಹೋಗುವವರೆಗೂ ಫಿಲಿಷ್ಟಿಯರನ್ನು ಸಂಹರಿಸುತ್ತಿದ್ದನು. ಆ ದಿನ ಯೆಹೋವ ದೇವರು ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ಸೈನಿಕರು ಸುಲಿದುಕೊಳ್ಳುವುದಕ್ಕೆ ಮಾತ್ರ ಅವನ ಹಿಂದೆ ಹಿಂದಿರುಗಿದರು. \p \v 11 ಇವನ ತರುವಾಯ ಹರಾರ್ಯನಾದ ಆಗೇಯನ ಮಗನಾದ ಶಮ್ಮನು; ಅಲಸಂದಿಯಿಂದ ತುಂಬಿರುವ ಹೊಲದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿಬಂದಾಗ, ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು. \v 12 ಆದರೆ ಅವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು, ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು. \p \v 13 ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು. \v 14 ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು. \v 15 ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು. \v 16 ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. \v 17 ಅವನು, “ಯೆಹೋವ ದೇವರೇ, ನಾನು ಇಂಥಾ ಕಾರ್ಯವನ್ನು ಎಂದಿಗೂ ಮಾಡಲು ಸಾಧ್ಯವಿಲ್ಲ. ಇದು ತಮ್ಮ ಪ್ರಾಣದಾಶೆ ತೊರೆದ ಮನುಷ್ಯರ ರಕ್ತವಲ್ಲವೇ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. \p ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು. \p \v 18 ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು. \v 19 ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು. ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ. \p \v 20 ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು. \v 21 ಅವನು ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು. ಆ ಈಜಿಪ್ಟಿನವನ ಕೈಯಲ್ಲಿ ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು. \v 22 ಇವುಗಳನ್ನು ಯೆಹೋಯಾದಾವನ ಮಗ ಬೆನಾಯನು ಮಾಡಿದ್ದರಿಂದ, ಮೂರು ಮಂದಿ ಪರಾಕ್ರಮಶಾಲಿಗಳಂತೆಯೇ ಹೆಸರುಗೊಂಡನು. \v 23 ಇವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು. ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ. ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು. \b \li4 \v 24 ಈ ಮೂವತ್ತು ಮಂದಿ ಯಾರೆಂದರೆ: \b \li1 ಯೋವಾಬನ ಸಹೋದರನಾದ ಅಸಾಯೇಲನು, \li1 ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು; \li1 \v 25 ಹರೋದಿನವನಾದ ಶಮ್ಮನು; \li1 ಹರೋದಿನವನಾದ ಎಲೀಕನು; \li1 \v 26 ಪೆಲೆಟಿನವನಾದ ಹೆಲೆಚನು; \li1 ತೆಕೋವದ ಇಕ್ಕೇಷನ ಮಗನಾದ ಈರನು; \li1 \v 27 ಅನಾತೋತಿನವನಾದ ಅಬೀಯೆಜೆರನು; \li1 ಹುಷಾ ಊರಿನವನಾದ ಮೆಬುನೈ, \li1 \v 28 ಅಹೋಹ್ಯನಾದ ಚಲ್ಮೋನನು; \li1 ನೆಟೋಫದವನಾದ ಮಹರೈ; \li1 \v 29 ನೆಟೋಫದವನಾದ ಬಾಣನ ಮಗ ಹೆಲೇಬ್, \li1 ಬೆನ್ಯಾಮೀನ್ಯರಿಗೆ ಸೇರಿದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ; \li1 \v 30 ಪಿರಾತೋನ್ಯನಾದ ಬೆನಾಯನು; \li1 ಹೊಳೆಗಳುಳ್ಳ ಗಾಷ್ ಊರಿನವನಾದ ಹಿದ್ದೈ; \li1 \v 31 ಅರಾಬಾ ತಗ್ಗಿನವನಾದ ಅಬೀ ಅಲ್ಬೋನನು; \li1 ಬಹರೂಮ್ಯನಾದ ಅಜ್ಮಾವೆತನು; \li1 \v 32 ಶಾಲ್ಬೋನ್ಯನಾದ ಎಲೆಯಖ್ಬಾನು; \li1 ಯಾಷೇನನ ಪುತ್ರರಲ್ಲಿ ಒಬ್ಬನು \li1 ಯೋನಾತಾನನು; \v 33 ಹರಾರ್ಯನಾದ ಶಮ್ಮನು; \li1 ಹರಾರ್ಯನಾದ ಶಾರಾರನ ಮಗ ಅಹೀಯಾಮ್; \li1 \v 34 ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟನು; \li1 ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್; \li1 \v 35 ಕರ್ಮೇಲ್ಯನಾದ ಹೆಚ್ರೋ; \li1 ಅರ್ಬಿಯನಾದ ಪಾರೈ; \li1 \v 36 ಹಗ್ರೀಯನ ಮಗನಾದ \li1 ಚೋಬ ಊರಿನವನಾದ ನಾತಾನನ ಮಗ ಇಗಾಲನು, ಗಾದ್ಯನಾದ ಬಾನೀ. \li1 \v 37 ಅಮ್ಮೋನಿಯನಾದ ಚೆಲೆಕನು; \li1 ಚೆರೂಯಳ ಮಗನಾದ ಯೋವಾಬನ ಆಯುಧವಾಹಕನು ಆಗಿದ್ದ ಬೇರೋತ್ಯನಾದ ನಹರೈ; \li1 \v 38 ಯೆತೆರಿಯನಾದ ಈರನು; \li1 ಯೆತೆರಿಯನಾದ ಗಾರೇಬನು; \li1 \v 39 ಹಿತ್ತಿಯನಾದ ಊರೀಯನು. \b \li4 ಹೀಗೆ ಇವರು ಸೇರಿ ಒಟ್ಟು ಮೂವತ್ತೇಳು ಮಂದಿ ರಣಧೀರರಿದ್ದರು. \c 24 \s1 ದಾವೀದನು ಯುದ್ಧವೀರರ ಗಣತಿ ಮಾಡಿದ್ದು \p \v 1 ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು. \p \v 2 ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು. \p \v 3 ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು. \p \v 4 ಆದಾಗ್ಯೂ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆದ್ದರಿಂದ ಯೋವಾಬನೂ, ಸೈನ್ಯಾಧಿಪತಿಗಳೂ ಇಸ್ರಾಯೇಲರಲ್ಲಿ ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು. \p \v 5 ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು. \v 6 ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು. \v 7 ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು. \p \v 8 ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು. \p \v 9 ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು. \p \v 10 ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು. \p \v 11 ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ, \v 12 “ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು. \p \v 13 ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು\f + \fr 24:13 \fr*\fq ಮೂರು \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಏಳು\fqa*\f* ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು. \p \v 14 ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು. \p \v 15 ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು. \v 16 ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು. \p \v 17 ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು. \s1 ದಾವೀದನು ಬಲಿಪೀಠವನ್ನು ಕಟ್ಟಿಸಿದ್ದು \p \v 18 ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು. \v 19 ಆಗ ದಾವೀದನು ಗಾದನ ಮುಖಾಂತರವಾಗಿ ತನಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಹೋದನು. \v 20 ಆದರೆ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಣ್ಣೆತ್ತಿ ನೋಡಿದನು, ಆಗ ಅವನು ಕಣದಿಂದ ಹೊರಟು, ಅರಸನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು. \p \v 21 ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. \p ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು. \p \v 22 ಅರೌನನು ದಾವೀದನಿಗೆ, “ಅರಸನಾದ ನನ್ನ ಒಡೆಯನು ಅದನ್ನು ತೆಗೆದುಕೊಂಡು, ತನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅರ್ಪಿಸಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ ಮುಂತಾದವುಗಳು ಇಲ್ಲಿ ಇವೆ,” ಎಂದನು. \v 23 ಅರೌನನು ಇವುಗಳನ್ನೆಲ್ಲಾ ಅರಸನಿಗೆ ಕೊಟ್ಟನು. ಇದಲ್ಲದೆ ಅರೌನನು ಅರಸನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಂಗೀಕರಿಸಲಿ,” ಎಂದನು. \p \v 24 ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. \p ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು. \v 25 ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.