\id 2TH - Biblica® Open Kannada Contemporary Version \ide UTF-8 \h 2 ಥೆಸಲೋನಿಕದವರಿಗೆ \toc1 ಥೆಸಲೋನಿಕದವರಿಗೆ ಪೌಲನು ಬರೆದ ಎರಡನೆಯ ಪತ್ರಿಕೆ \toc2 2 ಥೆಸಲೋನಿಕದವರಿಗೆ \toc3 2 ಥೆಸ \mt1 ಥೆಸಲೋನಿಕದವರಿಗೆ \mt2 ಪೌಲನು ಬರೆದ ಎರಡನೆಯ ಪತ್ರಿಕೆ \c 1 \p \v 1 ನಮ್ಮ ತಂದೆ ದೇವರಲ್ಲಿಯೂ, \b \p ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ತಿಮೊಥೆಯರು ಬರೆಯುವುದು: \b \p \v 2 ನಮ್ಮ ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ. \b \s1 ಕೃತಜ್ಞತಾಸ್ತುತಿ ಹಾಗೂ ಪ್ರಾರ್ಥನೆ \p \v 3 ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ. \v 4 ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ. \p \v 5 ನೀವು ಯಾವ ದೇವರ ರಾಜ್ಯಕ್ಕಾಗಿ ಕಷ್ಟವನ್ನು ಅನುಭವಿಸುತ್ತಿರುವಿರೋ, ಆ ರಾಜ್ಯಕ್ಕಾಗಿ ನೀವು ಯೋಗ್ಯರೆಂದು ಎಣಿಕೆಯಾಗಲು ಇದು ದೇವರ ನೀತಿಯುಳ್ಳ ನ್ಯಾಯತೀರ್ಪಿಗೆ ಸ್ಪಷ್ಟವಾದ ನಿದರ್ಶನವಾಗಿದೆ. \v 6 ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು \v 7 ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು. \v 8 ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು. \v 9 ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು. \v 10 ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು. \p \v 11 ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ. \v 12 ನಮ್ಮ ದೇವರ ಹಾಗೂ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯ ಅನುಸಾರವಾಗಿ, ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಬೇಕು. ಮಾತ್ರವಲ್ಲದೇ ನೀವು ಕೂಡಾ ಅವರಲ್ಲಿ ಮಹಿಮೆ ಹೊಂದಬೇಕು ಎಂದು ಬೇಡಿಕೊಳ್ಳುತ್ತೇವೆ. \c 2 \s1 ಕರ್ತ ಯೇಸುವಿನ ದಿನವೂ ನಿಯಮ ಮೀರುವ ಮನುಷ್ಯನೂ \p \v 1 ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಬರುವಿಕೆಯನ್ನೂ ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನೂ ಕುರಿತು ನಾವು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: \v 2 ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ. \v 3 ನಿಮ್ಮನ್ನು ಯಾರೂ ಯಾವ ವಿಧದಲ್ಲಿಯೂ ವಂಚಿಸದಿರಲಿ. ಏಕೆಂದರೆ ವಿಶ್ವಾಸದಿಂದ ಬಿದ್ದುಹೋಗುವಿಕೆಯು ಸಂಭವಿಸಿ, ನಾಶಕ್ಕೆ ನೇಮಕವಾಗಿರುವ ನಿಯಮ ಮೀರುವ ಮನುಷ್ಯನು ಬರುವುದಕ್ಕೆ ಮುಂಚೆ ಕರ್ತ ಯೇಸುವಿನ ದಿನವು ಬರುವುದಿಲ್ಲ! \v 4 ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು. \p \v 5 ನಾನು ನಿಮ್ಮ ಸಂಗಡ ಇರುವಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ? \v 6 ಇದಲ್ಲದೆ ಅವನು ನಿಯಮಿತ ಕಾಲದಲ್ಲಿ ಮಾತ್ರ ಕಾಣಿಸಿಕೊಳ್ಳುವಂತೆ ಈಗ ಅವನನ್ನು ಏನು ಅಡ್ಡಿಮಾಡುತ್ತಿದೆಯೋ ಅದನ್ನು ನೀವೇ ಬಲ್ಲಿರಿ. \v 7 ಏಕೆಂದರೆ, ನಿಯಮ ಮೀರುವ ರಹಸ್ಯ ಶಕ್ತಿಯು ಈಗಾಗಲೇ ಕಾರ್ಯಮಾಡುತ್ತಿದೆ. ಅವನನ್ನು ದಾರಿಯಿಂದ ತೆಗೆಯುವವರೆಗೆ ಈಗ ಅಡ್ಡಿಮಾಡುವಾತನು ಅಡ್ಡಿ ಮಾಡುತ್ತಲೇ ಇರುವನು. \v 8 ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು. \v 9 ಆ ನಿಯಮ ಮೀರುವವನ ಬರುವಿಕೆಯು ಸೈತಾನನ ಕಾರ್ಯಗಳಿಗೆ ಅನುಸಾರವಾಗಿರುವುದು. ಅವು ಎಲ್ಲಾ ಶಕ್ತಿಯ ಪ್ರದರ್ಶನದಿಂದಲೂ ಸುಳ್ಳಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಇರುವವು. \v 10 ಎಲ್ಲಾ ವಿಧವಾದ ದುಷ್ಟತನದ ವಂಚನೆಯಿಂದಲೂ ಕೂಡಿ ನಾಶವಾಗುವವರಲ್ಲಿ ಇದು ಸಂಭವಿಸುವುದು. ಏಕೆಂದರೆ ಅವರು ರಕ್ಷಣೆ ಹೊಂದುವಂತೆ ಸತ್ಯವನ್ನು ಪ್ರೀತಿಸಲು ನಿರಾಕರಿಸಿದ ಕಾರಣದಿಂದ ನಾಶವಾಗಿ ಹೋಗುವರು. \v 11 ಇದೇ ಕಾರಣದಿಂದ ದೇವರು ಅವರ ಮೇಲೆ ವಂಚಿಸಲು ಶಕ್ತಿಯುಳ್ಳ ಭ್ರಮೆಯನ್ನು ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುವರು. \v 12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಿಸುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಗುರಿಯಾಗುವರು. \s1 ದೃಢವಾಗಿ ನಿಲ್ಲಿರಿ \p \v 13 ಕರ್ತ ಯೇಸುವಿಗೆ ಪ್ರಿಯರಾಗಿರುವವರೇ, ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಏಕೆಂದರೆ, ನೀವು ಪವಿತ್ರಾತ್ಮ ದೇವರ ಶುದ್ಧೀಕರಣದಿಂದಲೂ ಸತ್ಯವನ್ನು ನಂಬುವುದರಿಂದಲೂ ರಕ್ಷಣೆಯನ್ನು ಹೊಂದಿ ಪ್ರಥಮ ಫಲವಾಗುವುದಕ್ಕೆ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದಾರೆ. \v 14 ನಾವು ನಿಮಗೆ ತಿಳಿಸಿದ ಸುವಾರ್ತೆಯ ಮೂಲಕವಾಗಿ, ನೀವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಿಮ್ಮನ್ನು ಈ ಆಯ್ಕೆಗಾಗಿ ಕರೆದರು. \p \v 15 ಹೀಗಿರುವುದರಿಂದ ಪ್ರಿಯರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಪಾಲಿಸಿರಿ. \p \v 16 ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ, \v 17 ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ. \c 3 \s1 ಪ್ರಾರ್ಥನೆಗಾಗಿ ಬೇಡಿಕೆ \p \v 1 ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ. \v 2 ವಕ್ರಬುದ್ಧಿಯುಳ್ಳ ದುಷ್ಟರ ಕೈಯಿಂದ ನಾವು ತಪ್ಪಿಸಿಕೊಳ್ಳುವಂತೆಯೂ ಪ್ರಾರ್ಥಿಸಿರಿ. ಏಕೆಂದರೆ ಎಲ್ಲರಲ್ಲಿಯೂ ವಿಶ್ವಾಸವಿಲ್ಲವಲ್ಲಾ. \v 3 ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು. \v 4 ನಾವು ನಿಮಗೆ ಆಜ್ಞಾಪಿಸಿದವುಗಳನ್ನು ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯವಾಗಿ ಕರ್ತ ಯೇಸುವಿನಲ್ಲಿ ನಮಗೆ ಭರವಸೆಯಿದೆ. \v 5 ಕರ್ತ ಯೇಸು ದೇವರ ಪ್ರೀತಿಯಲ್ಲಿಯೂ ತಮ್ಮ ತಾಳ್ಮೆಯಲ್ಲಿಯೂ ನಿಮ್ಮ ಹೃದಯಗಳನ್ನು ನಡೆಸಲಿ. \s1 ಸೋಮಾರಿತನದ ಬಗ್ಗೆ ಎಚ್ಚರಿಕೆ \p \v 6 ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು. \v 7 ನೀವು ನಮ್ಮ ಮಾದರಿಯನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ. ಏಕೆಂದರೆ ನಾವು ನಿಮ್ಮಲ್ಲಿರುವಾಗ ಸೋಮಾರಿಗಳಾಗಿರಲಿಲ್ಲ. \v 8 ನಾವು ಉಚಿತವಾಗಿ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರದೆಂದು ಹಗಲಿರುಳೂ ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದೆವು. \v 9 ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದಲ್ಲ. ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಆದರ್ಶರಾಗಿರಬೇಕೆಂದು ಹಾಗೆ ಮಾಡಿದೆವು. \v 10 ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಉಣ್ಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು. \p \v 11 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಶಿಸ್ತಿನಿಂದ ನಡೆಯುತ್ತಾರೆಂದು ಕೇಳಿದ್ದೇವೆ. \v 12 ಅಂಥವರು ಶಾಂತವಾಗಿ ಕೆಲಸಮಾಡಿ ತಮ್ಮ ಸ್ವಂತ ಆಹಾರವನ್ನೇ ಊಟ ಮಾಡಬೇಕೆಂದು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ. \v 13 ಪ್ರಿಯರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ. \p \v 14 ಈ ಪತ್ರದ ಮೂಲಕ ಹೇಳಿರುವ ನಮ್ಮ ಮಾತಿಗೆ ಯಾರಾದರೂ ವಿಧೇಯರಾಗದಿದ್ದರೆ ಅಂಥವರನ್ನು ಗುರುತಿಸಿ ಅವರಿಗೆ ನಾಚಿಕೆಯಾಗುವಂತೆ ಅವರ ಸಹವಾಸದಲ್ಲಿ ಸೇರಬೇಡಿರಿ. \v 15 ಆದರೂ ಅಂಥವರನ್ನು ವೈರಿಯೆಂದು ಎಣಿಸದೆ, ಜೊತೆ ವಿಶ್ವಾಸಿಯೆಂದು ಭಾವಿಸಿ ಬುದ್ಧಿಹೇಳಿರಿ. \b \s1 ಅಂತಿಮ ವಂದನೆಗಳು \p \v 16 ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ. \b \p \v 17 ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದ ಬರೆದ ವಂದನೆಯಿದು. ನನ್ನ ಎಲ್ಲಾ ಪತ್ರಗಳಲ್ಲಿಯೂ ಇದೇ ಗುರುತು. ನಾನು ಹೀಗೆಯೇ ಬರೆಯುತ್ತೇನೆ. \b \p \v 18 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೆಲ್ಲರ ಸಂಗಡ ಇರಲಿ.