\id 2TI - Biblica® Open Kannada Contemporary Version \ide UTF-8 \h 2 ತಿಮೊಥೆಯನಿಗೆ \toc1 ತಿಮೊಥೆಯನಿಗೆ ಪೌಲನು ಬರೆದ ಎರಡನೆಯ ಪತ್ರಿಕೆ \toc2 2 ತಿಮೊಥೆಯನಿಗೆ \toc3 2 ತಿಮೊಥೆ \mt1 ತಿಮೊಥೆಯನಿಗೆ \mt2 ಪೌಲನು ಬರೆದ ಎರಡನೆಯ ಪತ್ರಿಕೆ \c 1 \p \v 1 ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು, \b \p \v 2 ನನ್ನ ಪ್ರಿಯ ಪುತ್ರನಾದ ತಿಮೊಥೆಯನಿಗೆ ಬರೆಯುವುದು: \b \p ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ. \b \s1 ನಂಬಿಗಸ್ತನಾಗಿರಲು ಪ್ರೋತ್ಸಾಹ \p \v 3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. \v 4 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು, ನಿನ್ನನ್ನು ನೋಡಿ ಆನಂದಭರಿತನಾಗಬೇಕೆಂದು ಬಹಳವಾಗಿ ಹಂಬಲಿಸುತ್ತೇನೆ. \v 5 ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನಿಕೆಯಲ್ಲಿಯೂ ಮೊದಲು ಇದ್ದ ನಂಬಿಕೆಯು ಈಗ ನಿನ್ನಲ್ಲಿಯೂ ಇದೆಯೆಂದು ನಾನು ದೃಢವಾಗಿ ನಂಬಿದ್ದೇನೆ. \s1 ಪೌಲನಿಗೂ ಸುವಾರ್ತೆಗೂ ಇರಬೇಕಾದ ನಂಬಿಗಸ್ತಿಕೆ \p \v 6 ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತಗಳನ್ನು ಇಟ್ಟಿದ್ದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ. \v 7 ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ. \v 8 ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು. \v 9 ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು. \v 10 ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು. \v 11 ಈ ಸುವಾರ್ತೆಯನ್ನು ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಯೆಹೂದ್ಯರಲ್ಲದವರಿಗೆ ಉಪದೇಶಕನಾಗಿಯೂ ದೇವರಿಂದ ನೇಮಕವಾದೆನು. \v 12 ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ. \p \v 13 ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ. \v 14 ನಿನಗೆ ಒಪ್ಪಿಸಲಾಗಿರುವ ಆ ಒಳ್ಳೆಯದನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮ ದೇವರ ಮೂಲಕ ನೀನು ಕಾಪಾಡು. \s1 ನಂಬಿಗಸ್ತಿಕೆ ಮತ್ತು ಅಪನಂಬಿಗಸ್ತಿಕೆ \p \v 15 ಏಷ್ಯ ಸೀಮೆಯಲ್ಲಿ ಫುಗೇಲನೂ ಹರ್ಮೊಗೇನನೂ ಒಳಗೊಂಡು ಎಲ್ಲರೂ ನನ್ನನ್ನು ಬಿಟ್ಟು ಹೋದರೆಂಬುದನ್ನು ನೀನು ಬಲ್ಲೆ. \p \v 16 ಒನೇಸಿಫೊರನ ಮನೆಯವರಿಗೆ ಕರ್ತ ಯೇಸು ಕರುಣೆಯನ್ನು ದಯಪಾಲಿಸಲಿ. ಏಕೆಂದರೆ ಅವನು ಅನೇಕಾವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆ ಪಡಲಿಲ್ಲ. \v 17 ಆದರೆ ಅವನು ರೋಮಿನಲ್ಲಿದ್ದಾಗ ಪ್ರಯಾಸದಿಂದ ನನ್ನನ್ನು ಹುಡುಕಿ ಕಂಡುಕೊಂಡನು. \v 18 ಅವನು ಆ ದಿನದಲ್ಲಿ ಕರ್ತ ಯೇಸುವಿನಿಂದ ಕರುಣೆಯನ್ನು ಕಂಡುಕೊಳ್ಳುವಂತೆ ಕರ್ತ ಯೇಸುವೇ ಅವನಿಗೆ ಅನುಗ್ರಹ ಮಾಡಲಿ. ಎಫೆಸದಲ್ಲಿ ಅವನು ನನಗೆ ಎಷ್ಟು ಸಹಾಯಮಾಡಿದನೆಂಬುದು ನಿನಗೆ ಚೆನ್ನಾಗಿ ಗೊತ್ತಿದೆ. \c 2 \s1 ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕ \p \v 1 ಆದ್ದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲಗೊಂಡವನಾಗಿರು. \v 2 ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನು ಇತರರಿಗೆ ಸಹ ಬೋಧಿಸಲು ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು. \v 3 ಆದ್ದರಿಂದ ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು. \v 4 ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು. \v 5 ಇದಲ್ಲದೆ ಯಾವನಾದರೂ ಆಟದ ಸ್ವರ್ಧೆಯಲ್ಲಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ, ಅವನು ಜಯಶಾಲಿಯ ಕಿರೀಟ ಹೊಂದುವುದಿಲ್ಲ. \v 6 ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯದಾಗಿ ಪಾಲುಗಾರನಾಗಿರತಕ್ಕದ್ದು. \v 7 ನಾನು ಹೇಳುತ್ತಿರುವುದನ್ನು ಆಲೋಚಿಸು. ಕರ್ತ ಯೇಸುವು ಇವೆಲ್ಲವುಗಳಲ್ಲಿ ನಿನಗೆ ವಿವೇಕವನ್ನು ದಯಪಾಲಿಸುವರು. \p \v 8 ನನ್ನ ಸುವಾರ್ತೆಯ ಸಾರೋಣಕ್ಕೆ ಅನುಸಾರವಾಗಿ ದಾವೀದನ ವಂಶದವರಾದ ಯೇಸು ಕ್ರಿಸ್ತರು ಸತ್ತವರೊಳಗಿಂದ ಎಬ್ಬಿಸಲಾದರೆಂದು ಜ್ಞಾಪಕಮಾಡಿಕೋ. \v 9 ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. \v 10 ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ. \p \v 11 ಇದು ನಂಬತಕ್ಕ ವಾಕ್ಯವಾಗಿದೆ: \q1 ನಾವು ಕ್ರಿಸ್ತ ಯೇಸುವಿನ ಜೊತೆಯಲ್ಲಿ ಸತ್ತಿದ್ದರೆ, \q2 ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಜೀವಿಸುವೆವು. \q1 \v 12 ನಾವು ಸಹಿಸಿಕೊಳ್ಳುವವರಾಗಿದ್ದರೆ \q2 ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಆಳುವೆವು. \q1 ಅವರನ್ನು ನಿರಾಕರಿಸಿದರೆ \q2 ಅವರು ಸಹ ನಮ್ಮನ್ನು ನಿರಾಕರಿಸುವರು. \q1 \v 13 ನಾವು ಅಪನಂಬಿಗಸ್ತರಾಗಿದ್ದರೂ \q2 ಅವರು ನಂಬಿಗಸ್ತರಾಗಿಯೇ ಉಳಿದಿರುವರು. \q2 ಅವರು ತಮ್ಮ ಸ್ವಭಾವವನ್ನು ತಾವೇ ನಿರಾಕರಿಸಲಾರರು. \s1 ದೇವರಿಂದ ಮನ್ನಣೆ ಹೊಂದಿದ ಕೆಲಸದವನು \p \v 14 ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು. \v 15 ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು. \v 16 ಆದರೆ ಭಕ್ತಿಗೆ ವಿರುದ್ಧವಾದ ಹರಟೆ ಮಾತುಗಳಿಂದ ತೊಲಗಿರು. ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು. \v 17 ಅವರ ಬೋಧನೆ ಮಾರಕ ಹುಣ್ಣಿನಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ. \v 18 ಅವರು ಪುನರುತ್ಥಾನವು ಆಗಲೇ ಆಗಿ ಹೋಯಿತೆಂದು ಹೇಳುತ್ತಾ ಸತ್ಯದ ಗುರಿಯನ್ನು ತಪ್ಪಿದವರಾಗಿ ಕೆಲವರ ವಿಶ್ವಾಸವನ್ನು ಕೆಡಿಸಿಬಿಡುವವರಾಗಿದ್ದಾರೆ. \v 19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು. \p \v 20 ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಕೆಲವು ವಿಶೇಷ ಉದ್ದೇಶಗಳಿಗಾಗಿಯೂ ಕೆಲವು ಸಾಮಾನ್ಯ ಉಪಯೋಗಕ್ಕಾಗಿಯೂ ಇರುತ್ತವೆ. \v 21 ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು. \p \v 22 ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು. \v 23 ಬುದ್ಧಿಯಿಲ್ಲದ ಅಯುಕ್ತ ವಾಗ್ವಾದಗಳು ಜಗಳಗಳನ್ನು ಹುಟ್ಟಿಸುತ್ತವೆ ಎಂದು ತಿಳಿದು ಅವುಗಳನ್ನು ನಿರಾಕರಿಸು. \v 24 ಕರ್ತ ಯೇಸುವಿನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ದಯೆಯುಳ್ಳವನೂ ಬೋಧಿಸುವುದರಲ್ಲಿ ಪ್ರವೀಣನೂ ಸಹನೆಯುಳ್ಳವನೂ ಆಗಿರಬೇಕು. \v 25 ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು. \v 26 ಈ ರೀತಿಯಾಗಿ, ಸೈತಾನನ ಚಿತ್ತವನ್ನು ನೆರವೇರಿಸಲು ಗುಲಾಮರಾಗಿರುವವರು, ಅವನ ಬಲೆಯಿಂದ ಬಿಡುಗಡೆಹೊಂದಿ ಸ್ವಸ್ಥಮನಸ್ಸುಳ್ಳವರಾಗಿ ತಪ್ಪಿಸಿಕೊಳ್ಳುವರು. \c 3 \p \v 1 ಆದರೆ ಕಡೆಯ ದಿವಸಗಳಲ್ಲಿ ಕಷ್ಟಕರವಾದ ಕಾಲಗಳು ಬರುವುವೆಂಬುದನ್ನು ಸಹ ತಿಳಿದುಕೋ. \v 2 ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿಕೊಳ್ಳುವವರೂ ಹಣದಾಶೆಯುಳ್ಳವರೂ ಬಡಾಯಿ ಕೊಚ್ಚುವವರೂ ಅಹಂಕಾರಿಗಳೂ ದೇವದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಕೃತಜ್ಞತೆಯಿಲ್ಲದವರೂ ಅಶುದ್ಧರೂ \v 3 ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ \v 4 ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ \v 5 ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು. \p \v 6 ಇಂಥವರು ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ಪ್ರೇರಣೆ ಹೊಂದಿ ಸುಲಭವಾಗಿ ಮೋಸಹೋಗುವ ಸ್ತ್ರೀಯರನ್ನು ವಶಮಾಡಿಕೊಳ್ಳುವರು. \v 7 ಇಂಥ ಸ್ತ್ರೀಯರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಜ್ಞಾನಕ್ಕೆ ಬರಲಾರದವರು ಆಗಿರುವರು. \v 8 ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ. \v 9 ಆದರೆ ಇವರು ಇನ್ನು ಮುಂದುವರಿಯಲಾರರು. ಯನ್ನ, ಯಂಬ್ರರ ಮೂರ್ಖತನವು ಎಲ್ಲರಿಗೂ ಸ್ಪಷ್ಟವಾಗಿ ತಿಳಿದುಬಂದಂತೆಯೇ, ಇವರದೂ ತಿಳಿದುಬರುವುದು. \s1 ತಿಮೊಥೆಗೆ ಪೌಲನ ಅಪ್ಪಣೆ \p \v 10 ನೀನಾದರೋ ನನ್ನ ಎಲ್ಲಾ ಬೋಧನೆ, ನನ್ನ ನಡತೆ, ನನ್ನ ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ, \v 11 ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು. \v 12 ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು. \v 13 ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು. \v 14 ನೀನಾದರೋ, ಕಲಿತು ನಿಶ್ಚಯಗೊಂಡವುಗಳಲ್ಲಿ ಮುಂದುವರಿಯುತ್ತಿರು. ನಿನಗೆ ಕಲಿಸಿಕೊಟ್ಟವರು ಯಾರೆಂಬುದು ನಿನಗೆ ತಿಳಿದಿದೆ. \v 15 ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ. \v 16 ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ. \v 17 ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. \c 4 \p \v 1 ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ: \v 2 ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು. \v 3 ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು. \v 4 ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು. \v 5 ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು. \p \v 6 ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ. \v 7 ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. \v 8 ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು. \s1 ವೈಯಕ್ತಿಕ ಹಿತನುಡಿಗಳು \p \v 9 ನನ್ನ ಬಳಿಗೆ ಆದಷ್ಟು ಬೇಗನೆ ಬರುವುದಕ್ಕೆ ನೀನು ಪ್ರಯತ್ನ ಮಾಡು. \v 10 ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು. \v 11 ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನು ನನ್ನ ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ. \v 12 ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದೆನು. \v 13 ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ. \p \v 14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ. \v 15 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು. \p \v 16 ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ. \v 17 ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು. \v 18 ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್. \b \s1 ಅಂತಿಮ ವಂದನೆಗಳು \p \v 19 ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ವಂದನೆ. \b \p \v 20 ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ಆದರೆ ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ನಾನು ಮಿಲೇತದಲ್ಲಿ ಬಿಟ್ಟಿದ್ದೇನೆ. \v 21 ನೀನು ಚಳಿಗಾಲಕ್ಕೆ ಮುಂಚೆಯೇ ಆದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನ ಮಾಡು. \b \p ಯುಬೂಲನೂ ಪೊದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ. \b \p \v 22 ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.