\id ACT - Biblica® Open Kannada Contemporary Version \ide UTF-8 \h ಅಪೊಸ್ತಲರ ಕೃತ್ಯಗಳು \toc1 ಅಪೊಸ್ತಲರ ಕೃತ್ಯಗಳು \toc2 ಅಪೊಸ್ತಲರ ಕೃತ್ಯಗಳು \toc3 ಅ. ಕೃ \mt1 ಅಪೊಸ್ತಲರ ಕೃತ್ಯಗಳು \c 1 \s1 ಯೇಸು ಪರಲೋಕಕ್ಕೆ ಏರಿಹೋದದ್ದು \p \v 1 ಥೆಯೊಫಿಲನೇ, ನಾನು ನಿನಗೆ ನನ್ನ ಮೊದಲನೆಯ ಗ್ರಂಥದಲ್ಲಿ ಯೇಸು ಮಾಡುವುದಕ್ಕೂ ಬೋಧಿಸುವುದಕ್ಕೂ ಪ್ರಾರಂಭಿಸಿದ್ದೆಲ್ಲವನ್ನೂ ಕುರಿತು ನಿಮಗೆ ಬರೆದಿದ್ದೇನೆ. \v 2 ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ. \v 3 ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು. \v 4 ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ. \v 5 ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು. \p \v 6 ಶಿಷ್ಯರು ಯೇಸುವಿನ ಸಂಗಡ ಇದ್ದಾಗ, “ಸ್ವಾಮೀ, ಇಸ್ರಾಯೇಲರ ರಾಜ್ಯವನ್ನು ಈ ಕಾಲದಲ್ಲಿ ಪುನಃ ಸ್ಥಾಪಿಸುವಿಯೋ?” ಎಂದು ಪ್ರಶ್ನೆ ಮಾಡಿದರು. \p \v 7 ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ. \v 8 ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು. \p \v 9 ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು. \p \v 10 ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು, \v 11 “ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು. \s1 ಯೂದನ ಬದಲಾಗಿ ಮತ್ತೀಯನ ಆಯ್ಕೆ \p \v 12 ಅನಂತರ ಅಪೊಸ್ತಲರು ಯೆರೂಸಲೇಮಿಗೆ ಸಮೀಪದಲ್ಲಿದ್ದ ಓಲಿವ್ ಗುಡ್ಡದಿಂದ ಇಳಿದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅದು ಸಬ್ಬತ್ ದಿನದಲ್ಲಿ ಪ್ರಯಾಣ\f + \fr 1:12 \fr*\ft ಅಂದರೆ ಸುಮಾರು 1 ಕಿಲೋಮೀಟರ್\ft*\f* ಮಾಡುವಷ್ಟು ದೂರದಲ್ಲಿತ್ತು. \v 13 ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: \b \li1 ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; \li1 ಫಿಲಿಪ್ಪ, ತೋಮ; \li1 ಬಾರ್ತೊಲೊಮಾಯ ಮತ್ತಾಯ; \li1 ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ. \b \p \v 14 ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು. \p \v 15 ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು: \v 16 “ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು. \v 17 ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದು ಈ ಸೇವೆಯಲ್ಲಿ ಪಾಲುಗಾರನಾಗಿದ್ದನು.” \p \v 18 ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು. \v 19 ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ. \p \v 20 ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: \q1 “ ‘ಅವನ ವಾಸಸ್ಥಾನವು ಹಾಳಾಗಲಿ, \q2 ಅದರಲ್ಲಿ ಯಾರೂ ವಾಸಿಸದಿರಲಿ,’\f + \fr 1:20 \fr*\ft \+xt ಕೀರ್ತನೆ 69:25\+xt*\ft*\f* \m ಮತ್ತು, \q1 “ ‘ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ,’\f + \fr 1:20 \fr*\ft \+xt ಕೀರ್ತನೆ 109:8\+xt*\ft*\f* \m \v 21 ಆದ್ದರಿಂದ, ಕರ್ತ ಆಗಿರುವ ಯೇಸು ನಮ್ಮೊಂದಿಗೆ ಇದ್ದ ಕಾಲವೆಲ್ಲಾ ನಮ್ಮ ಜೊತೆಯಲ್ಲಿರುವ ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಎಲ್ಲಾ ಸೇವಾ ಸಂಚಾರದಲ್ಲಿಯೂ ನಮ್ಮೊಂದಿಗೆ ಇದ್ದವನಾಗಿರಬೇಕು, \v 22 ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು. \p \v 23 ಆಗ ಅವರು ಇಬ್ಬರು ಪುರುಷರ ಹೆಸರುಗಳನ್ನು ಸೂಚಿಸಿದರು: ಬಾರ್ಸಬ ಎಂಬ ಹೆಸರಿನ ಯೋಸೇಫ, ಇವನನ್ನು ಯೂಸ್ತ ಎಂಬುದಾಗಿಯೂ ಕರೆಯುತ್ತಿದ್ದರು ಮತ್ತು ಇನ್ನೊಬ್ಬನು ಮತ್ತೀಯ ಎಂಬುವನು. \v 24 ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ, \v 25 ಈ ಅಪೊಸ್ತಲರ ಸೇವೆಯನ್ನು ವಹಿಸಿಕೊಳ್ಳುವುದಕ್ಕಾಗಿ, ನೀವು ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಂಡಿರುವಿರಿ ಎಂಬುದನ್ನು ನಮಗೆ ತೋರಿಸಿರಿ,” ಎಂದು ಪ್ರಾರ್ಥನೆ ಮಾಡಿದರು. \v 26 ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು. \c 2 \s1 ಪವಿತ್ರಾತ್ಮ ದೇವರ ಆಗಮನ \p \v 1 ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು,\f + \fr 2:1 \fr*\ft ಪಸ್ಕಹಬ್ಬ ಆಚರಿಸಿದ ಐವತ್ತು ದಿನಗಳ ನಂತರ ಬರುತ್ತಿದ್ದ ಯೆಹೂದ್ಯರ ಹಬ್ಬ\ft*\f* ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು. \v 2 ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. \v 3 ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು. \v 4 ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು. \p \v 5 ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು. \v 6 ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು. \v 7 ಅವರು ಅತ್ಯಾಶ್ಚರ್ಯವುಳ್ಳವರಾಗಿ, “ಇಲ್ಲಿ ಮಾತನಾಡುತ್ತಿರುವವರೆಲ್ಲರೂ ಗಲಿಲಾಯದವರಲ್ಲವೇ? \v 8 ನಾವೆಲ್ಲರೂ ನಮ್ಮ ನಮ್ಮ ಮಾತೃಭಾಷೆಗಳಲ್ಲಿಯೇ ಇವರು ಮಾತಾಡುತ್ತಿರುವುದನ್ನು ಕೇಳುತ್ತಿರುವುದು ಹೇಗೆ? \v 9 ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,\f + \fr 2:9 \fr*\ft ಆ ಹೆಸರಿನ ರೋಮಾ ಪ್ರಾಂತವಾಗಿತ್ತು\ft*\f* \v 10 ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ. \v 11 ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು. \v 12 ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, “ಇದರ ಅರ್ಥವೇನು?” ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು. \p \v 13 ಆದರೆ, ಅವರಲ್ಲಿ ಕೆಲವರು, ಅವರ ಬಗ್ಗೆ ಹಾಸ್ಯಮಾಡುತ್ತಾ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದರು. \s1 ಜನಸಮೂಹಕ್ಕೆ ಪೇತ್ರನ ಬೋಧನೆ \p \v 14 ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ. \v 15 ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ! \v 16 ಇದು ಪ್ರವಾದಿ ಯೋವೇಲನ ಪ್ರವಾದನೆಯ ನೆರವೇರುವಿಕೆಯಾಗಿದೆ: \q1 \v 17 “ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ \q2 ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, \q1 ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, \q2 ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, \q2 ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. \q1 \v 18 ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, \q2 ನನ್ನ ಆತ್ಮವನ್ನು ಸುರಿಸುವೆನು, \q2 ಅವರು ಪ್ರವಾದಿಸುವರು. \q1 \v 19 ನಾನು ಆಕಾಶದಲ್ಲಿ ಅದ್ಭುತಗಳನ್ನು, \q2 ಭೂಮಿಯಲ್ಲಿ ಸೂಚಕಕಾರ್ಯಗಳನ್ನು, \q2 ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು. \q1 \v 20 ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು \q2 ಸೂರ್ಯನು ಕತ್ತಲಾಗುವನು, \q2 ಚಂದ್ರನು ರಕ್ತವಾಗುವನು. \q1 \v 21 ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ \q2 ರಕ್ಷಣೆ ಆಗುವುದು.’\f + \fr 2:21 \fr*\ft \+xt ಯೋಯೇಲ 2:28-32\+xt*\ft*\f* \p \v 22 “ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ. \v 23 ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ. \v 24 ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ. \v 25 ದಾವೀದನು ಯೇಸುಸ್ವಾಮಿಯವರ ಬಗ್ಗೆ ಹೀಗೆ ಹೇಳಿದ್ದಾನೆ: \q1 “ ‘ನಾನು ಕರ್ತದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. \q2 ನಾನು ಕದಲದಂತೆ \q2 ಕರ್ತದೇವರು ನನ್ನ ಬಲಗಡೆಯಲ್ಲಿದ್ದಾರೆ. \q1 \v 26 ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; \q2 ನನ್ನ ಶರೀರವು ಸಹ ನಿರೀಕ್ಷೆಯಿಂದ ನೆಲೆಯಾಗಿರುವುದು. \q1 \v 27 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, \q2 ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ. \q1 \v 28 ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; \q2 ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’\f + \fr 2:28 \fr*\ft \+xt ಕೀರ್ತನೆ 16:8-11\+xt*\ft*\f* \p \v 29 “ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ. \v 30 ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು. \v 31 ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’ \v 32 ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು. \v 33 ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ. \v 34 ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: \q1 “ ‘ಕರ್ತದೇವರು ನನ್ನ ಕರ್ತದೇವರಿಗೆ: \q2 “ನಾನು ನಿನ್ನ ವಿರೋಧಿಗಳನ್ನು \q1 \v 35 ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ \q2 ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.” ’\f + \fr 2:35 \fr*\ft \+xt ಕೀರ್ತನೆ 110:1\+xt*\ft*\f* \p \v 36 “ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು. \p \v 37 ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು. \p \v 38 ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ. \v 39 ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು. \p \v 40 ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು. \v 41 ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು. \s1 ವಿಶ್ವಾಸಿಗಳ ಅನ್ಯೋನ್ಯತೆ \p \v 42 ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು, \v 43 ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು. \v 44 ವಿಶ್ವಾಸಿಗಳೆಲ್ಲರೂ ಒಟ್ಟಾಗಿದ್ದು, ತಮ್ಮಲ್ಲಿರುವ ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು. \v 45 ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು. \v 46 ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು. \v 47 ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು. \c 3 \s1 ಪೇತ್ರನು ಹುಟ್ಟುಕುಂಟನನ್ನು ಗುಣಪಡಿಸಿದ್ದು \p \v 1 ಒಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಾರ್ಥನೆಯ ಸಮಯದಲ್ಲಿ ಪೇತ್ರ ಹಾಗೂ ಯೋಹಾನನು ದೇವಾಲಯಕ್ಕೆ ಹೋದರು. \v 2 ದೇವಾಲಯದೊಳಗೆ ಹೋಗುವವರಿಂದ ಭಿಕ್ಷೆ ಬೇಡಲು ಪ್ರತಿದಿನ “ಸುಂದರದ್ವಾರ” ಎಂದು ಕರೆಯಲಾಗುತ್ತಿದ್ದ ದೇವಾಲಯದ ದ್ವಾರದ ಬಳಿಯಲ್ಲಿ ಹುಟ್ಟುಕುಂಟನೊಬ್ಬನನ್ನು ಕೆಲವರು ಹೊತ್ತುಕೊಂಡು ಬಂದು ಬಿಡುತ್ತಿದ್ದರು. \v 3 ಅವನು ಪೇತ್ರ, ಯೋಹಾನರು ದೇವಾಲಯದೊಳಗೆ ಪ್ರವೇಶಿಸುತ್ತಿರುವುದನ್ನು ಕಂಡು, ಭಿಕ್ಷೆ ಬೇಡಿದನು. \v 4 ಪೇತ್ರ ಯೋಹಾನರಿಬ್ಬರೂ ಭಿಕ್ಷುಕನನ್ನು ನೇರವಾಗಿ ದೃಷ್ಟಿಸಿ ನೋಡಿದರು. ಪೇತ್ರನು ಭಿಕ್ಷುಕನಿಗೆ, “ನಮ್ಮನ್ನು ನೋಡು!” ಎಂದು ಹೇಳಿದನು. \v 5 ಅವರಿಂದ ಏನಾದರೂ ದೊರೆಯುವುದೆಂದು ನಿರೀಕ್ಷಿಸಿ ಅವನು ಅವರ ಕಡೆಗೆ ಲಕ್ಷ್ಯವಿಟ್ಟು ನೋಡಿದನು. \p \v 6 ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ, \v 7 ಬಲಗೈ ಹಿಡಿದೆಬ್ಬಿಸಿದಾಗ ಕೂಡಲೇ ಆ ಮನುಷ್ಯನ ಪಾದ ಮತ್ತು ಹರಡುಗಳು ಬಲಗೊಂಡವು. \v 8 ಅವನು ಜಿಗಿದು ನಿಂತು ನಡೆದಾಡಲು ಪ್ರಾರಂಭಿಸಿದನು. ಆಮೇಲೆ ನಡೆಯುತ್ತಾ, ಕುಣಿಯುತ್ತಾ, ದೇವರ ಸ್ತೋತ್ರ ಮಾಡುತ್ತಾ, ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು. \v 9 ಅವನು ನಡೆಯುವುದನ್ನೂ ದೇವರ ಸ್ತೋತ್ರ ಮಾಡುತ್ತಿರುವುದನ್ನೂ ಜನರೆಲ್ಲರೂ ಕಂಡರು. \v 10 ಅವನು ದೇವಾಲಯದ “ಸುಂದರದ್ವಾರದ” ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಮನುಷ್ಯನೇ ಎಂದು ಗುರುತಿಸಿದರು. ಅವನಿಗೆ ಸಂಭವಿಸಿದ್ದರ ಬಗ್ಗೆ ಅವರು ವಿಸ್ಮಯಗೊಂಡು ಬೆರಗಾದರು. \s1 ನೋಡುತ್ತಿದ್ದ ಜನರೊಂದಿಗೆ ಪೇತ್ರನು ಮಾತನಾಡಿದ್ದು \p \v 11 ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು. \v 12 ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ? \v 13 ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ. \v 14 ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ. \v 15 ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು. \v 16 ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ. \p \v 17 “ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು. \v 18 ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು. \v 19 ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು. \v 20 ದೇವರು ನಿಮಗೋಸ್ಕರ ನೇಮಕವಾಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿಕೊಡುವರು. \v 21 ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು. \v 22 ಮೋಶೆಯು ಹೇಳಿದ್ದೇನೆಂದರೆ: ‘ನಿಮ್ಮ ಕರ್ತದೇವರು ನಿಮ್ಮ ಸ್ವಂತ ಸಹೋದರರೊಳಗಿಂದ ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗಾಗಿ ಎಬ್ಬಿಸುವರು. ಅವರು ನಿಮಗೆ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗಿರಬೇಕು. \v 23 ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ತನ್ನ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.’\f + \fr 3:23 \fr*\ft \+xt ಧರ್ಮೋ 18:15,18,19\+xt*\ft*\f* \p \v 24 “ಸಮುಯೇಲನು ಮೊದಲುಗೊಂಡು, ಮಾತನಾಡಿದ ಎಲ್ಲಾ ಪ್ರವಾದಿಗಳು ಕ್ರಮವಾಗಿ ಈ ದಿನಗಳನ್ನು ಕುರಿತು ಮುಂತಿಳಿಸಿದ್ದಾರೆ. \v 25 ನೀವು ಪ್ರವಾದಿಗಳ ಮತ್ತು ನಿಮ್ಮ ಪಿತೃಗಳೊಂದಿಗೆ ದೇವರು ಮಾಡಿಕೊಂಡ ಒಡಂಬಡಿಕೆಯ ಮಕ್ಕಳಾಗಿದ್ದೀರಿ. ಏಕೆಂದರೆ ದೇವರು, ‘ನಿನ್ನ ಸಂತತಿಯ ಮುಖಾಂತರವಾಗಿ ಭೂಲೋಕದ ಎಲ್ಲಾ ಕುಟುಂಬಗಳಿಗೆ ಆಶೀರ್ವಾದವುಂಟಾಗುವುದು,’\f + \fr 3:25 \fr*\ft \+xt ಆದಿ 22:18; 26:4\+xt*\ft*\f* ಎಂದು ಅಬ್ರಹಾಮನಿಗೆ ಹೇಳಿದರು. \v 26 ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.” \c 4 \s1 ನ್ಯಾಯಸಭೆಯಲ್ಲಿ ಪೇತ್ರ ಮತ್ತು ಯೋಹಾನ \p \v 1 ಪೇತ್ರ ಮತ್ತು ಯೋಹಾನರು ಜನರೊಂದಿಗೆ ಮಾತನಾಡುತ್ತಿದ್ದಾಗಲೇ, ಯಾಜಕರೂ ದೇವಾಲಯದ ದಳಪತಿಯೂ ಸದ್ದುಕಾಯರೂ ಅವರ ಬಳಿಗೆ ಬಂದರು. \v 2 ಯೇಸುವಿನಲ್ಲಿ ಸತ್ತವರಿಗೆ ಪುನರುತ್ಥಾನ ಉಂಟು ಎಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿದ್ದರಿಂದ ಅವರು ಬಹಳ ಬೇಸರಗೊಂಡರು. \v 3 ಅವರು ಪೇತ್ರ ಯೋಹಾನರನ್ನು ಬಂಧಿಸಿ, ಸಂಜೆಯಾದ್ದರಿಂದ ಮರುದಿನದವರೆಗೆ ಅವರನ್ನು ಸೆರೆಮನೆಯಲ್ಲಿ ಹಾಕಿದರು. \v 4 ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು. \p \v 5 ಮರುದಿನ ಅಧಿಕಾರಿಗಳು, ಹಿರಿಯರು, ನಿಯಮ ಬೋಧಕರು ಯೆರೂಸಲೇಮಿನಲ್ಲಿ ಸಭೆ ಸೇರಿದರು. \v 6 ಮಹಾಯಾಜಕ ಅನ್ನನೂ ಹಾಗೂ ಮಹಾಯಾಜಕನ ಕುಟುಂಬದವರು ಕಾಯಫ, ಯೋಹಾನ ಮತ್ತು ಅಲೆಕ್ಸಾಂದ್ರ ಅಲ್ಲಿದ್ದರು. \v 7 ಅವರು ಪೇತ್ರ ಯೋಹಾನರನ್ನು ತಮ್ಮೆದುರಿನಲ್ಲಿ ನಿಲ್ಲಿಸಿ ಅವರಿಗೆ, “ಯಾವ ಶಕ್ತಿಯಿಂದ ಇಲ್ಲವೆ, ಯಾವ ಹೆಸರಿನಿಂದ ನೀವಿದನ್ನು ಮಾಡಿದಿರಿ?” ಎಂದು ಪ್ರಶ್ನಿಸಿದರು. \p \v 8 ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ, “ಜನರ ಅಧಿಕಾರಿಗಳೇ, ಜನರ ಹಿರಿಯರೇ! \v 9 ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದದ್ದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ. \v 10 ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು. \v 11 ಪವಿತ್ರ ವೇದದಲ್ಲಿ, \q1 “ ‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ \q2 ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’\f + \fr 4:11 \fr*\ft \+xt ಕೀರ್ತನೆ 118:22\+xt*\ft*\f* \m ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ. \v 12 ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು. \p \v 13 ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು. \v 14 ಆದರೆ ಗುಣಹೊಂದಿದ ಮನುಷ್ಯನು ಅವರೊಂದಿಗೆ ನಿಂತುಕೊಂಡಿದ್ದನ್ನು ಅವರು ಕಂಡಾಗ ಇವರಿಗೆ ವಿರೋಧವಾಗಿ, ಏನನ್ನೂ ಹೇಳಲು ಸಾಧ್ಯವಾಗಲಿಲ್ಲ. \v 15 ಆದ್ದರಿಂದ ಇವರನ್ನು ನ್ಯಾಯಸಭೆಯಿಂದ ಹೊರಗೆ ಹೋಗುವಂತೆ ಆಜ್ಞಾಪಿಸಿ ಒಬ್ಬರೊಂದಿಗೊಬ್ಬರು ಚರ್ಚೆಮಾಡಿ, \v 16 “ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ. \v 17 ಆದರೆ ಈ ವಿಷಯ ಜನರಲ್ಲಿ ಹೆಚ್ಚು ಪ್ರಸಾರವಾಗದಂತೆ ನಿಲ್ಲಿಸಲು, ಇವರು ಈ ನಾಮದಲ್ಲಿ ಇನ್ನೆಂದೂ ಯಾರೊಂದಿಗೂ ಮಾತನಾಡಬಾರದೆಂದು ಇವರಿಗೆ ಎಚ್ಚರಿಕೆ ಕೊಡೋಣ,” ಎಂದು ಯೋಚಿಸಿದರು. \p \v 18 ಅವರು ಶಿಷ್ಯರನ್ನು ಸಭೆಯಲ್ಲಿ ಕರೆದು, “ಯೇಸುವಿನ ಹೆಸರಿನಲ್ಲಿ ಮಾತನಾಡಲೂಬಾರದು, ಬೋಧಿಸಲೂಬಾರದು,” ಎಂದು ಆಜ್ಞಾಪಿಸಿದರು. \v 19 ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ. \v 20 ಏಕೆಂದರೆ ಕಂಡಿದ್ದನ್ನೂ ಕೇಳಿದ್ದನ್ನೂ ಕುರಿತು ನಾವು ಮಾತನಾಡದೆ ಇರಲಾರೆವು,” ಎಂದು ಉತ್ತರಕೊಟ್ಟರು. \p \v 21 ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು. \v 22 ಅದ್ಭುತ ರೀತಿಯಲ್ಲಿ ಸ್ವಸ್ಥತೆ ಹೊಂದಿದ ಆ ಮನುಷ್ಯನು ನಾಲ್ವತ್ತಕ್ಕಿಂತಲೂ ಹೆಚ್ಚು ವರ್ಷ ವಯಸ್ಸಿನವನಾಗಿದ್ದನು. \s1 ವಿಶ್ವಾಸಿಗಳ ಪ್ರಾರ್ಥನೆ \p \v 23 ಬಿಡುಗಡೆ ಹೊಂದಿದ, ಪೇತ್ರ ಮತ್ತು ಯೋಹಾನರು ವಿಶ್ವಾಸಿಗಳ ಬಳಿಗೆ ಹೋಗಿ, ತಮಗೆ ಮುಖ್ಯಯಾಜಕರೂ ಹಿರಿಯರೂ ಹೇಳಿದ್ದೆಲ್ಲವನ್ನೂ ವರದಿಮಾಡಿದರು. \v 24 ಇದನ್ನು ಕೇಳಿ ಅವರೆಲ್ಲರೂ ಒಟ್ಟಾಗಿ ಸ್ವರವೆತ್ತಿ ದೇವರಿಗೆ ಪ್ರಾರ್ಥನೆ ಮಾಡಿದರು: “ಕರ್ತದೇವರೇ, ನೀನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿರುವಿರಿ. \v 25 ಪವಿತ್ರಾತ್ಮ ದೇವರ ಮೂಲಕ ನಿಮ್ಮ ಸೇವಕನೂ ನಮ್ಮ ಪಿತೃವೂ ಆದ ದಾವೀದನ ಮುಖಾಂತರ ನೀವು ಮಾತನಾಡಿ: \q1 “ ‘ರಾಷ್ಟ್ರಗಳು ರೋಷಗೊಳ್ಳುವುದೇಕೆ? \q2 ಜನರು ವ್ಯರ್ಥವಾಗಿ ಕಲ್ಪಿಸಿಕೊಂಡದ್ದೇಕೆ? \q1 \v 26 ಕರ್ತ ದೇವರಿಗೂ ಅವರ ಅಭಿಷಿಕ್ತನಿಗೂ\f + \fr 4:26 \fr*\fq ಅಭಿಷಿಕ್ತ \fq*\ft ಅಂದರೆ \ft*\fqa ಕ್ರಿಸ್ತನು\fqa*\f* ವಿರೋಧವಾಗಿ \q2 ಭೂಲೋಕದ ಅರಸರೂ ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.\f + \fr 4:26 \fr*\ft \+xt ಕೀರ್ತನೆ 2:1,2\+xt*\ft*\f*’ \m \v 27 ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು. \v 28 ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು. \v 29 ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ. \v 30 ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.” \p \v 31 ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು. \s1 ವಿಶ್ವಾಸಿಗಳು ತಮಗಿದ್ದುದನ್ನು ಹಂಚಿಕೊಂಡದ್ದು \p \v 32 ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು. \v 33 ಮಹಾಶಕ್ತಿಯಿಂದ ಅಪೊಸ್ತಲರು ಕರ್ತ ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಕೊಟ್ಟರು. ಅವರೆಲ್ಲರ ಮೇಲೆ ದೇವರ ಮಹಾಕೃಪೆಯಿತ್ತು. \v 34 ಅವರಲ್ಲಿ ಕೊರತೆಯಿದ್ದವರು ಇರಲಿಲ್ಲ. ಏಕೆಂದರೆ ಹೊಲಗದ್ದೆಯಿದ್ದವರೂ ಮನೆಗಳಿದ್ದವರೆಲ್ಲರೂ ಅವುಗಳನ್ನು ಮಾರಿ ಹಣವನ್ನು ತಂದು, \v 35 ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು. ಅಪೊಸ್ತಲರು ಅದನ್ನು ಅಗತ್ಯವಿದ್ದವರಿಗೆ ತಕ್ಕಂತೆ ಹಂಚುತ್ತಿದ್ದರು. \p \v 36 ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ. \v 37 ಅವನು ತನ್ನ ಸ್ವಂತ ಹೊಲವನ್ನು ಮಾರಿ, ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು. \c 5 \s1 ಅನನೀಯ ಮತ್ತು ಸಪ್ಫೈರ \p \v 1 ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಆಸ್ತಿಯ ಒಂದು ಭಾಗವನ್ನು ಮಾರಿದನು. \v 2 ತನ್ನ ಹೆಂಡತಿಯ ಪೂರ್ಣ ತಿಳುವಳಿಕೆಯಿಂದ, ಬಂದ ಹಣದಲ್ಲಿ ಒಂದು ಭಾಗವನ್ನು ತನಗಾಗಿ ಇಟ್ಟುಕೊಂಡು, ಉಳಿದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿಟ್ಟನು. \p \v 3 ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ? \v 4 ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು. \p \v 5 ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು. \v 6 ಆಗ ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ, ಹೊತ್ತುಕೊಂಡು ಹೋಗಿ ಹೂಣಿಟ್ಟರು. \p \v 7 ಏನು ಸಂಭವಿಸಿತೆಂಬುದನ್ನು ತಿಳಿಯದೆ, ಸುಮಾರು ಮೂರು ತಾಸುಗಳ ನಂತರ ಅವನ ಹೆಂಡತಿ ಒಳಗೆ ಪ್ರವೇಶಿಸಿದಳು. \v 8 ಆಗ ಪೇತ್ರನು, “ನನಗೆ ಹೇಳು ನೀನು ಮತ್ತು ನಿನ್ನ ಗಂಡ ಅನನೀಯನು ಆಸ್ತಿಯನ್ನು ಮಾರಿದ್ದರಿಂದ ಬಂದ ಹಣ ಇಷ್ಟೆಯೋ?” ಎಂದು ಆಕೆಯನ್ನು ಕೇಳಲು, \p “ಹೌದು, ಅಷ್ಟೇ ಕ್ರಯ ಬಂದಿತು,” ಎಂದಳು. \p \v 9 “ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು. \p \v 10 ಆ ಕ್ಷಣದಲ್ಲಿಯೇ ಆಕೆ ಅವನ ಪಾದಗಳ ಬಳಿಯಲ್ಲಿ ಬಿದ್ದು ಸತ್ತುಹೋದಳು. ಆಗ ಯುವಕರು ಒಳಗೆ ಬಂದು ಆಕೆ ಸತ್ತು ಹೋಗಿರುವುದನ್ನು ಕಂಡು, ಆಕೆಯ ಶವವನ್ನು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿಯೇ ಸಮಾಧಿಮಾಡಿದರು. \v 11 ಇಡೀ ಸಭೆಗೂ ಈ ಘಟನೆಗಳ ಬಗ್ಗೆ ಕೇಳಿದವರಿಗೂ ಮಹಾ ಭಯವು ಉಂಟಾಯಿತು. \s1 ಅಪೊಸ್ತಲರು ಅನೇಕರನ್ನು ಗುಣಪಡಿಸಿದ್ದು \p \v 12 ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು. \v 13 ಅವರೆಲ್ಲರೂ ಜನರಿಂದ ಬಹಳ ಗೌರವಕ್ಕೆ ಪಾತ್ರರಾಗಿದ್ದರೂ ಬೇರೆಯವರು ಅವರ ಜೊತೆ ಸೇರಲು ಧೈರ್ಯಗೊಳ್ಳಲಿಲ್ಲ. \v 14 ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು. \v 15 ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು. \v 16 ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳಿಂದ ಜನರ ಗುಂಪುಗಳು ತಮ್ಮಲ್ಲಿ ಅಸ್ವಸ್ಥರಾದವರನ್ನೂ ಅಶುದ್ಧಾತ್ಮ ಪೀಡಿತರನ್ನೂ ಕರೆದುಕೊಂಡು ಬರುತ್ತಿದ್ದರು. ಬಂದವರೆಲ್ಲರೂ ಸ್ವಸ್ಥರಾಗುತ್ತಿದ್ದರು. \s1 ಅಪೊಸ್ತಲರಿಗಾದ ಹಿಂಸೆ \p \v 17 ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು. \v 18 ಅವರು ಅಪೊಸ್ತಲರನ್ನು ಬಂಧಿಸಿ ಸಾರ್ವಜನಿಕ ಸೆರೆಮನೆಯಲ್ಲಿ ಹಾಕಿಸಿದರು. \v 19 ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು, \v 20 “ಹೋಗಿರಿ, ದೇವಾಲಯದ ಅಂಗಳದಲ್ಲಿ ನಿಂತುಕೊಂಡು, ಈ ಜೀವವಾಕ್ಯಗಳನ್ನೆಲ್ಲಾ ಜನರಿಗೆ ಬೋಧಿಸಿರಿ,” ಎಂದು ಹೇಳಿದನು. \p \v 21 ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. \p ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು. \v 22 ಆದರೆ ಅಧಿಕಾರಿಗಳು ಸೆರೆಮನೆಗೆ ಬಂದಾಗ, ಅಪೊಸ್ತಲರು ಸೆರೆಮನೆಯಲ್ಲಿ ಇರಲಿಲ್ಲ. ಇವರು ಹಿಂತಿರುಗಿ ಹೋಗಿ, \v 23 “ಸೆರೆಮನೆಯ ಬಾಗಿಲುಗಳು ಭದ್ರಪಡಿಸಿರುವುದನ್ನೂ ದ್ವಾರಗಳ ಬಳಿ ಕಾವಲುಗಾರರು ನಿಂತಿರುವುದನ್ನೂ ಕಂಡೆವು. ಆದರೆ ದ್ವಾರಗಳನ್ನು ನಾವು ತೆರೆದಾಗ ಒಳಗೆ ಯಾರೂ ಇರಲಿಲ್ಲ,” ಎಂದು ವರದಿಮಾಡಿದರು. \v 24 ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು. \p \v 25 ಆಗ ಯಾರೋ ಒಬ್ಬನು ಬಂದು, “ನೋಡಿರಿ! ನೀವು ಸೆರೆಮನೆಯಲ್ಲಿ ಬಂಧಿಸಿಟ್ಟಿದ್ದ ಆ ಪುರುಷರು ದೇವಾಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ,” ಎಂದು ವರದಿ ಮಾಡಿದನು. \v 26 ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು. \p \v 27 ಅಪೊಸ್ತಲರನ್ನು ಕರೆತಂದು, ಮಹಾಯಾಜಕನು ಪ್ರಶ್ನಿಸಲೆಂದು ಅವರನ್ನು ನ್ಯಾಯಸಭೆಯ ಎದುರಿನಲ್ಲಿ ನಿಲ್ಲಿಸಿದರು. \v 28 ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು. \p \v 29 ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ! \v 30 ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ. \v 31 ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ. \v 32 ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ,” ಎಂದರು. \p \v 33 ಅವರು ಇದನ್ನು ಕೇಳಿದಾಗ ಬಹುಕೋಪಗೊಂಡು ಅವರನ್ನು ಕೊಲ್ಲಬೇಕೆಂದಿದ್ದರು. \v 34 ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು. \v 35 ಗಮಲಿಯೇಲನು ಸಭೆಯನ್ನುದ್ದೇಶಿಸಿ, “ಇಸ್ರಾಯೇಲರೇ, ಈ ಜನರ ವಿರುದ್ಧ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯುಳ್ಳವರಾಗಿರಿ. \v 36 ಕೆಲವು ದಿನಗಳ ಹಿಂದೆ ಥೈದನೆಂಬವನು ಕಾಣಿಸಿಕೊಂಡು, ತಾನು ಒಬ್ಬ ಗಣ್ಯವ್ಯಕ್ತಿಯೆಂದು ಹೇಳಿಕೊಳ್ಳುತ್ತಾ ಬಂದನು. ಸುಮಾರು ನಾಲ್ಕುನೂರು ಜನರು ಅವನ ಹಿಂಬಾಲಕರಾದರು. ಅವನು ಕೊಲೆಗೀಡಾದನು. ಅವನಿಗೆ ವಿಧೇಯರಾದವರೆಲ್ಲರೂ ಚದರಿಹೋಗಿ ಇಲ್ಲದಂತಾದರು. \v 37 ಅವನ ನಂತರ ಗಲಿಲಾಯದ ಯೂದ ಎಂಬುವವನು ಜನಗಣತಿಯ ದಿನಗಳಲ್ಲಿ ಕಾಣಿಸಿಕೊಂಡು, ಜನರ ಗುಂಪನ್ನು ತಿರುಗಿಬೀಳಲು ನಡೆಸಿದನು. ಅವನು ಸಹ ನಾಶವಾದನು. ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. \v 38 ಆದ್ದರಿಂದ, ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ! ಅವರನ್ನು ಬಿಟ್ಟುಬಿಡಿರಿ! ಏಕೆಂದರೆ ಅವರ ಉದ್ದೇಶ ಅಥವಾ ಕಾರ್ಯವು ಮನುಷ್ಯರಿಂದ ಬಂದದ್ದಾಗಿದ್ದರೆ, ಅದೇ ವ್ಯರ್ಥವಾಗುವುದು. \v 39 ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು. \p \v 40 ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು. \p \v 41 ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು. \v 42 ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ. \c 6 \s1 ಏಳು ಜನರ ಆಯ್ಕೆ \p \v 1 ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು. \v 2 ಆದ್ದರಿಂದ ಆ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಸೇರಿಸಿ, “ನಾವು ದೇವರ ವಾಕ್ಯ ಬೋಧಿಸುವ ಸೇವೆಯನ್ನು ಕಡೆಗಣಿಸಿ, ಆಹಾರ ವಿತರಣೆಗಾಗಿ ಸಮಯ ಕಳೆಯುತ್ತಿರುವುದು ಸರಿಯಲ್ಲ. \v 3 ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು. \v 4 ನಾವಾದರೋ ಪ್ರಾರ್ಥನೆ ಮಾಡುವುದರಲ್ಲಿಯೂ ದೇವರ ವಾಕ್ಯ ಬೋಧಿಸುವುದರಲ್ಲಿಯೂ ನಿರತರಾಗಿರುವೆವು,” ಎಂದು ಹೇಳಿದರು. \p \v 5 ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು. \v 6 ಇವರನ್ನು ಅಪೊಸ್ತಲರ ಮುಂದೆ ತಂದು ನಿಲ್ಲಿಸಿದರು. ಅವರು ಪ್ರಾರ್ಥನೆಮಾಡಿ ಅವರ ಮೇಲೆ ತಮ್ಮ ಹಸ್ತಗಳನ್ನಿಟ್ಟು ನೇಮಿಸಿದರು. \p \v 7 ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು. \s1 ಸ್ತೆಫನನ ಬಂಧನ \p \v 8 ದೇವರ ಕೃಪೆಯಿಂದಲೂ ಶಕ್ತಿಯಿಂದಲೂ ತುಂಬಿದ್ದ ಸ್ತೆಫನನಿಂದ ಜನರಲ್ಲಿ ಮಹಾ ಅದ್ಭುತಗಳೂ ಸೂಚಕಕಾರ್ಯಗಳೂ ನಡೆದವು. \v 9 ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು. \v 10 ಆದರೆ ಅವನು ಜ್ಞಾನದಿಂದಲೂ ಪವಿತ್ರಾತ್ಮ ದೇವರಿಂದಲೂ ಮಾತನಾಡಿದ್ದರಿಂದ ಅವರಿಗೆ ಅವನನ್ನು ಎದುರಿಸಲು ಸಾಧ್ಯವಾಗಲಿಲ್ಲ. \p \v 11 ಆಗ ಅವರು, “ಇವನು ಮೋಶೆಗೂ ದೇವರಿಗೂ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ,” ಎಂದು ಕೆಲವರಿಗೆ ಲಂಚಕೊಟ್ಟು ಹೇಳುವಂತೆ ರಹಸ್ಯವಾಗಿ ಮನವೊಲಿಸಿದರು. \p \v 12 ಹೀಗೆ ಅವರು ಜನರನ್ನೂ ಹಿರಿಯರನ್ನೂ ನಿಯಮ ಬೋಧಕರನ್ನೂ ಪ್ರಚೋದಿಸಿ ಸ್ತೆಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ತಂದು ನಿಲ್ಲಿಸಿದರು. \v 13 ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ. \v 14 ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿಬಿಡುತ್ತಾರೆಂದೂ ನಮಗೆ ಒಪ್ಪಿಸಿದ ಮೋಶೆಯ ಪದ್ಧತಿಗಳನ್ನು ಬದಲಾಯಿಸುತ್ತಾರೆಂದೂ ಇವನು ಹೇಳುವುದನ್ನು ನಾವು ಕೇಳಿದ್ದೇವೆ,” ಎಂದು ಅವನ ವಿರುದ್ಧ ಸಾಕ್ಷಿ ಹೇಳಿಸಿದರು. \p \v 15 ನ್ಯಾಯಸಭೆಯಲ್ಲಿ ಕುಳಿತುಕೊಂಡಿದ್ದವರೆಲ್ಲರೂ ಸ್ತೆಫನನ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದರು. ಅವನ ಮುಖವು ದೇವದೂತನ ಮುಖದಂತೆ ಕಾಣಿಸುತ್ತಿತ್ತು. \c 7 \s1 ನ್ಯಾಯಸಭೆಗೆ ಸ್ತೆಫನನ ಉಪನ್ಯಾಸ \p \v 1 ಆಗ ಮಹಾಯಾಜಕನು, “ಈ ಸಂಗತಿಗಳು ನಿಜವೋ?” ಎಂದು ಸ್ತೆಫನನನ್ನು ಪ್ರಶ್ನಿಸಿದನು. \p \v 2 ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ\f + \fr 7:2 \fr*\ft ಅಥವಾ \ft*\fqa ಖಾರಾನಿನಲ್ಲಿ\fqa*\f* ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು, \v 3 ‘ನಿನ್ನ ಸ್ವದೇಶವನ್ನು ಬಂಧುಗಳನ್ನು ಬಿಟ್ಟು, ನಾನು ನಿನಗೆ ತೋರಿಸುವ ನಾಡಿಗೆ ಹೋಗು,’\f + \fr 7:3 \fr*\ft \+xt ಆದಿ 12:1\+xt*\ft*\f* ಎಂದು ಹೇಳಿದರು. \p \v 4 “ಅದರಂತೆ ಅಬ್ರಹಾಮನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ\f + \fr 7:4 \fr*\ft ಅಥವಾ \ft*\fqa ಖಾರಾನಿನಲ್ಲಿ\fqa*\f* ಬಂದು ನೆಲೆಸಿದನು. ಅವನ ತಂದೆಯ ಮರಣದ ನಂತರ ನೀವು ಈಗ ವಾಸಿಸುತ್ತಿರುವ ಈ ನಾಡಿಗೆ ದೇವರು ಅವನನ್ನು ಬರಮಾಡಿದರು. \v 5 ದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು. \v 6 ಇದಲ್ಲದೆ ದೇವರು ಅಬ್ರಹಾಮನೊಂದಿಗೆ ಮಾತನಾಡಿ, ‘ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು. ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು. \v 7 ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ಅನಂತರ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು,’\f + \fr 7:7 \fr*\ft \+xt ಆದಿ 15:13,14\+xt*\ft*\f* ಎಂದು ದೇವರು ಹೇಳಿದರು. \v 8 ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು. \p \v 9 “ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು, \v 10 ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು. \p \v 11 “ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು. \v 12 ಈಜಿಪ್ಟಿನಲ್ಲಿ ದವಸಧಾನ್ಯ ದೊರೆಯುವುದೆಂದು ಯಾಕೋಬನಿಗೆ ತಿಳಿದುಬಂದಾಗ, ಅವನು ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು. \v 13 ಅವರು ಎರಡನೆಯ ಸಾರಿ ಅಲ್ಲಿಗೆ ಹೋದಾಗ, ಯೋಸೇಫನು ತಾನು ಯಾರೆಂಬುದನ್ನು ತನ್ನ ಸಹೋದರರಿಗೆ ತಿಳಿಸಿದನು. ಆಗ ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ಗೊತ್ತಾಯಿತು. \v 14 ಇದಾದನಂತರ, ಯೋಸೇಫನು ತನ್ನ ತಂದೆ ಯಾಕೋಬನನ್ನು ಅವನ ಕುಟುಂಬದವರೆಲ್ಲರನ್ನೂ, ಒಟ್ಟು ಎಪ್ಪತ್ತೈದು ಜನರನ್ನು ಕರೆಕಳುಹಿಸಿದನು. \v 15 ಆಗ ಯಾಕೋಬನು ಈಜಿಪ್ಟಿಗೆ ಹೋದನು, ಅಲ್ಲಿಯೇ ಅವನೂ ನಮ್ಮ ಪಿತೃಗಳೂ ಮೃತರಾದರು. \v 16 ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು. \p \v 17 “ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನ ನೆರವೇರುವ ಕಾಲವು ಹತ್ತಿರ ಬಂದಾಗ, ಈಜಿಪ್ಟಿನಲ್ಲಿ ನಮ್ಮ ಜನರ ಸಂಖ್ಯೆ ಬಹಳ ಹೆಚ್ಚಾಯಿತು. \v 18 ಆಗ, ‘ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.’\f + \fr 7:18 \fr*\ft \+xt ವಿಮೋ 1:8\+xt*\ft*\f* \v 19 ಆ ಅರಸನು ನಮ್ಮ ಜನರೊಂದಿಗೆ ಕುಯುಕ್ತಿಯಿಂದ ವರ್ತಿಸುತ್ತಾ, ಅವರ ಕೂಸುಗಳು ಸಾಯುವಂತೆ ಬಿಸಾಡಿಬಿಡಬೇಕೆಂದು, ನಮ್ಮ ಪಿತೃಗಳನ್ನು ಕಠಿಣವಾಗಿ ಹಿಂಸಿಸಿದನು. \p \v 20 “ಆ ಸಮಯದಲ್ಲಿಯೇ ಮೋಶೆ ಜನಿಸಿದನು. ಅವನು ದೇವರ ದೃಷ್ಟಿಯಲ್ಲಿ ಸುಂದರನಾಗಿದ್ದನು. ಮೂರು ತಿಂಗಳುಗಳ ಕಾಲ ಅವನು ತನ್ನ ತಂದೆಯ ಮನೆಯಲ್ಲೇ ಬೆಳೆದನು. \v 21 ಆಮೇಲೆ ಅವನನ್ನು ಮನೆಯಿಂದ ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ತೆಗೆದುಕೊಂಡು ತನ್ನ ಸ್ವಂತ ಮಗನಂತೆ ಬೆಳೆಸಿದಳು. \v 22 ಮೋಶೆಯು ಈಜಿಪ್ಟಿನವರ ಸಕಲ ವಿದ್ಯೆಗಳಲ್ಲಿ ತರಬೇತಿ ಹೊಂದಿ, ಮಾತಿನಲ್ಲಿಯೂ ಕೃತ್ಯದಲ್ಲಿಯೂ ಸಮರ್ಥನಾದನು. \p \v 23 “ಮೋಶೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಬಂಧುಗಳಾದ ಇಸ್ರಾಯೇಲ್ ಪುತ್ರರನ್ನು ಸಂದರ್ಶಿಸಬೇಕೆಂದು ತೀರ್ಮಾನಿಸಿದನು. \v 24 ತನ್ನ ಬಂಧುಗಳಲ್ಲಿ ಒಬ್ಬನನ್ನು ಈಜಿಪ್ಟಿನವನೊಬ್ಬನು ಹೊಡೆಯುತ್ತಿರುವುದನ್ನು ಕಂಡು, ಮೋಶೆ ಆ ಈಜಿಪ್ಟಿನವನನ್ನು ಕೊಂದುಹಾಕಿ ಸೇಡು ತೀರಿಸಿದನು. \v 25 ದೇವರು ಸ್ವಜನರಿಗೆ ತನ್ನ ಮೂಲಕವಾಗಿ ಬಿಡುಗಡೆಯನ್ನು ಕೊಡುವನೆಂದು ಅವರು ಅರ್ಥ ಮಾಡಿಕೊಳ್ಳುವರೆಂದು ಮೋಶೆ ಭಾವಿಸಿದ್ದನು. ಸ್ವಜನರೋ, ಇದನ್ನು ಅರ್ಥಮಾಡಿಕೊಳ್ಳಲಿಲ್ಲ. \v 26 ಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು. \p \v 27 “ಆದರೆ ಹೊಡೆಯುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು? \v 28 ನಿನ್ನೆ ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಲ್ಲಬೇಕೆಂದಿರುವೆಯಾ?’\f + \fr 7:28 \fr*\ft \+xt ವಿಮೋ 2:14\+xt*\ft*\f* ಎಂದು ಕೇಳಿದನು. \v 29 ಮೋಶೆ ಇದನ್ನು ಕೇಳಿ, ಮಿದ್ಯಾನಿಗೆ ಓಡಿಹೋದನು. ಅಲ್ಲಿ ಪರದೇಶದವನಂತೆ ಬದುಕಿ, ಇಬ್ಬರು ಗಂಡು ಮಕ್ಕಳನ್ನು ಪಡೆದನು. \p \v 30 “ನಲವತ್ತು ವರ್ಷಗಳು ಗತಿಸಿದ ತರುವಾಯ ಸೀನಾಯಿ ಪರ್ವತದ ಮರುಭೂಮಿಯಲ್ಲಿ ಉರಿಯುವ ಪೊದೆಯಲ್ಲಿ ದೇವದೂತನೊಬ್ಬನು ಮೋಶೆಗೆ ದರ್ಶನ ಕೊಟ್ಟನು. \v 31 ಇದನ್ನು ಮೋಶೆ ಕಂಡಾಗ ಆ ನೋಟಕ್ಕೆ ಅತ್ಯಾಶ್ಚರ್ಯಪಟ್ಟನು. ಅದನ್ನು ಸಮೀಪದಿಂದ ನೋಡಲು ಹೊರಟಾಗ, ಕರ್ತದೇವರ ಧ್ವನಿಯನ್ನು ಅವನು ಕೇಳಿಸಿಕೊಂಡನು. \v 32 ‘ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ, ಇಸಾಕನ, ಯಾಕೋಬನ ದೇವರು,’\f + \fr 7:32 \fr*\ft \+xt ವಿಮೋ 3:6\+xt*\ft*\f* ಎಂಬ ವಾಣಿಯನ್ನು ಕೇಳಿಸಿಕೊಂಡ ಮೋಶೆ ಭಯದಿಂದ ನಡುಗುತ್ತಾ ನೇರವಾಗಿ ದೃಷ್ಟಿಸಲು ಧೈರ್ಯಗೊಳ್ಳಲಿಲ್ಲ. \p \v 33 “ಆಗ ಕರ್ತದೇವರು ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ. \v 34 ಈಜಿಪ್ಟಿನಲ್ಲಿ ನನ್ನ ಜನರ ದುರವಸ್ಥೆಯನ್ನು ನಾನು ಕಂಡಿದ್ದೇನೆ. ಅವರ ನರಳಾಟವನ್ನು ಕೇಳಿಸಿಕೊಂಡಿದ್ದೇನೆ. ಅವರನ್ನು ಬಿಡುಗಡೆ ಮಾಡಲು ನಾನಿಳಿದು ಬಂದಿದ್ದೇನೆ. ಇಲ್ಲಿ ಬಾ, ನಾನು ನಿನ್ನನ್ನು ಹಿಂದಿರುಗಿ ಈಜಿಪ್ಟಿಗೆ ಕಳುಹಿಸುತ್ತೇನೆ,’\f + \fr 7:34 \fr*\ft \+xt ವಿಮೋ 3:5-10\+xt*\ft*\f* ಎಂದರು. \p \v 35 “ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು. \v 36 ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು. \p \v 37 “ ‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’\f + \fr 7:37 \fr*\ft \+xt ಧರ್ಮೋ 18:15\+xt*\ft*\f* ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ. \v 38 ಇವನು ಇಸ್ರಾಯೇಲರು ಅರಣ್ಯದಲ್ಲಿ ದೊಡ್ಡಗುಂಪಾಗಿದ್ದಾಗ ಅವರ ಮಧ್ಯದಲ್ಲಿದ್ದವನು. ಸೀನಾಯಿ ಬೆಟ್ಟದ ಮೇಲೆ ಅವನೊಂದಿಗೆ ಮಾತನಾಡಿದ ದೇವದೂತನೊಂದಿಗಿದ್ದವನು. ಇವನು ನಮ್ಮ ಪಿತೃಗಳೊಂದಿಗೂ ಮಧ್ಯಸ್ಥನಾಗಿ ಇದ್ದವನು. ನಮಗೆ ಕೊಡುವುದಕ್ಕಾಗಿ ಜೀವ ವಾಕ್ಯಗಳನ್ನು ಸ್ವೀಕರಿಸಿದವನು ಈ ಮೋಶೆಯೇ. \p \v 39 “ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ಒಪ್ಪಿಕೊಳ್ಳಲಿಲ್ಲ. ಅದಕ್ಕೆ ಬದಲಾಗಿ ಅವರು ಅವನನ್ನು ತಿರಸ್ಕರಿಸಿ, ತಮ್ಮ ಹೃದಯಗಳಲ್ಲಿ ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗಬೇಕೆಂದಿದ್ದರು. \v 40 ಅವರು ಆರೋನನಿಗೆ, ‘ನಮಗೆ ಮುಂದಾಗಿ ಹೋಗುವುದಕ್ಕಾಗಿ ನಮಗೆ ದೇವರುಗಳನ್ನು ಮಾಡಿಕೊಡು, ನಮ್ಮನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದ ಆ ಮೋಶೆಗೆ ಏನಾಯಿತೋ ತಿಳಿಯದು,’\f + \fr 7:40 \fr*\ft \+xt ವಿಮೋ 32:1\+xt*\ft*\f* ಎಂದರು. \v 41 ಆ ಸಮಯದಲ್ಲಿ ಅವರು ಕರುವಿನ ರೂಪದಲ್ಲಿ ಒಂದು ವಿಗ್ರಹ ಮಾಡಿಕೊಂಡರು. ಅದರ ಮುಂದೆ ತಮ್ಮ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಲ್ಲಿ ಹರ್ಷಗೊಂಡರು. \v 42 ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: \q1 “ ‘ಇಸ್ರಾಯೇಲಿನ ಮನೆತನದವರೇ, \q2 ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ. \q1 \v 43 ಮೊಲೋಖನ ಗುಡಾರವನ್ನೂ \q2 ರೊಂಫಾ ದೇವತೆಯ ನಕ್ಷತ್ರವನ್ನೂ \q2 ನೀವು ನಿರ್ಮಿಸಿಕೊಂಡ ವಿಗ್ರಹಗಳನ್ನೂ ಪೂಜಿಸಿದಿರಿ. \q1 ಆದ್ದರಿಂದ ಬಾಬಿಲೋನಿನ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ,’\f + \fr 7:43 \fr*\ft \+xt ಆಮೋ 5:25-27\+xt*\ft*\f* \m ಎಂದು ಬರೆದಿರುವ ಪ್ರಕಾರ ಇದು ನೆರವೇರಿತು. \p \v 44 “ಅರಣ್ಯದಲ್ಲಿ ದೇವದರ್ಶನ ಗುಡಾರ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ದೇವರು ಮೋಶೆಗೆ ಆಜ್ಞಾಪಿಸಿದಂತೆ, ಅವನಿಗೆ ತೋರಿಸಿದ ಮಾದರಿಯಂತೆ ಅದನ್ನು ರೂಪಿಸಲಾಗಿತ್ತು. \v 45 ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು. \v 46 ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು. \v 47 ಆದರೆ ದೇವರಿಗಾಗಿ ಆಲಯವನ್ನು ಕಟ್ಟಿಸಿದವನು ಸೊಲೊಮೋನನು. \p \v 48 “ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ: \q1 \v 49 “ ‘ಆಕಾಶವೇ ನನ್ನ ಸಿಂಹಾಸನ, \q2 ಭೂಮಿಯೇ ನನ್ನ ಪಾದ ಪೀಠ. \q1 ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? \q2 ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ? \q1 \v 50 ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯಿಂದ ಅಲ್ಲವೇ?’\f + \fr 7:50 \fr*\ft \+xt ಯೆಶಾಯ 66:1,2\+xt*\ft*\f* \q2 ಎಂದು ಕರ್ತದೇವರು ಪ್ರಶ್ನಿಸುತ್ತಾರೆ. \p \v 51 “ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ! \v 52 ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ. \v 53 ದೇವದೂತರ ಮುಖಾಂತರವಾಗಿ ಜಾರಿಗೆ ಬಂದ ಮೋಶೆಯ ನಿಯಮವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ,” ಎಂದು ಹೇಳಿದನು. \s1 ಸ್ತೆಫನನ ಮೇಲೆ ಕಲ್ಲು ಎಸೆದದ್ದು \p \v 54 ಈ ಮಾತುಗಳನ್ನು ಕೇಳಿದಾಗ ಅವರು ರೋಷವುಳ್ಳವರಾಗಿ, ಅವನ ಕಡೆಗೆ ನೋಡಿ, ತಮ್ಮ ಹಲ್ಲುಗಳನ್ನು ಕಡಿದರು. \v 55 ಆದರೆ ಪವಿತ್ರಾತ್ಮಭರಿತನಾದ ಸ್ತೆಫನನು ಪರಲೋಕದ ಕಡೆಗೆ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ಯೇಸು ನಿಂತುಕೊಂಡಿರುವುದನ್ನೂ ಕಂಡನು. \v 56 “ನೋಡಿರಿ, ಪರಲೋಕ ತೆರೆದಿರುವುದನ್ನೂ ಮನುಷ್ಯಪುತ್ರ ಆಗಿರುವ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ಕಾಣುತ್ತಿದ್ದೇನೆ,” ಎಂದನು. \p \v 57 ಈ ಮಾತಿಗೆ ಅವರು ತಮ್ಮ ಕಿವಿಗಳನ್ನು ಮುಚ್ಚಿಕೊಂಡು, ಆರ್ಭಟಿಸುತ್ತಾ, ಅವನ ಕಡೆಗೆ ಓಡಿಹೋಗಿ ಅವನನ್ನು ಹೊಡೆದರು. \v 58 ಅವನನ್ನು ಪಟ್ಟಣದ ಹೊರಗೆ ಎಳೆದುಕೊಂಡು ಹೋಗಿ ಅವನ ಮೇಲೆ ಕಲ್ಲೆಸೆಯಲು ಪ್ರಾರಂಭಿಸಿದರು. ಆ ಸಮಯದಲ್ಲಿ ಸಾಕ್ಷಿಗಳು ತಮ್ಮ ಬಟ್ಟೆಗಳನ್ನು ಸೌಲ ಎಂಬ ಹೆಸರಿನ ಒಬ್ಬ ಯುವಕನ ಪಾದಗಳ ಬಳಿಯಲ್ಲಿಟ್ಟಿದ್ದರು. \p \v 59 ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು. \v 60 ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು. \c 8 \p \v 1 ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. \s1 ಸಭೆ ಹಿಂಸೆಗೆ ಗುರಿಯಾಗಿ ಸದಸ್ಯರು ಚದರಿಹೋದದ್ದು \p ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು. \v 2 ದೇವಭಕ್ತರು ಸ್ತೆಫನನ ಶವಸಂಸ್ಕಾರ ಮಾಡಿ, ಅವನಿಗಾಗಿ ಬಹಳ ಗೋಳಾಡಿದರು. \v 3 ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು. \s1 ಸಮಾರ್ಯದಲ್ಲಿ ಫಿಲಿಪ್ಪನು \p \v 4 ಚದರಿಹೋದವರು ತಾವು ಹೋದಲ್ಲೆಲ್ಲಾ ವಾಕ್ಯವನ್ನು ಬೋಧಿಸಿದರು. \v 5 ಫಿಲಿಪ್ಪನು ಸಮಾರ್ಯದ ಒಂದು ಪಟ್ಟಣಕ್ಕೆ ಹೋಗಿ ಅಲ್ಲಿ ಕ್ರಿಸ್ತ ಯೇಸುವಿನ ಸಂದೇಶ ಸಾರಿದನು. \v 6 ಜನಸಮೂಹವು ಫಿಲಿಪ್ಪನ ಬೋಧನೆ ಕೇಳಿ, ಅವನು ಮಾಡಿದ ಸೂಚಕಕಾರ್ಯಗಳನ್ನು ಕಂಡು, ಅವನು ಹೇಳಿದ್ದಕ್ಕೆಲ್ಲಾ ಮನಸ್ಸು ಕೊಟ್ಟರು. \v 7 ಅನೇಕರಿಂದ ಅಶುದ್ಧಾತ್ಮಗಳು ಆರ್ಭಟಿಸುತ್ತಾ ಹೊರಗೋಡಿದವು. ಮಾತ್ರವಲ್ಲದೇ ಅನೇಕ ಪಾರ್ಶ್ವವಾಯು ಪೀಡಿತರು, ಅಂಗವಿಕಲರು ಸ್ವಸ್ಥರಾದರು. \v 8 ಇದರಿಂದ ಆ ಪಟ್ಟಣದಲ್ಲಿ ಮಹಾ ಸಂತೋಷವಾಯಿತು. \s1 ಮಂತ್ರವಾದಿ ಸೀಮೋನ \p \v 9 ಆ ಪಟ್ಟಣದಲ್ಲಿ ಕೆಲ ಸಮಯದಿಂದ ಸೀಮೋನ ಎಂಬ ಹೆಸರಿನ ಒಬ್ಬನು ಮಂತ್ರ ವಿದ್ಯೆ ಉಪಯೋಗಿಸಿ ಸಮಾರ್ಯದ ಜನರನ್ನು ಆಶ್ಚರ್ಯಗೊಳಿಸಿದ್ದನು. ತಾನೊಬ್ಬ ಮಹಾವ್ಯಕ್ತಿ ಎಂದು ಕೊಚ್ಚಿಕೊಳ್ಳುತ್ತಿದ್ದನು, \v 10 ಆ ಪಟ್ಟಣದಲ್ಲಿಯ ಹಿರಿಯರು, ಕಿರಿಯರು ಎಲ್ಲರೂ ಅವನನ್ನು ಗೌರವಿಸಿ, “ಈ ಮನುಷ್ಯನು ಮಹಾಶಕ್ತಿ ಎನಿಸಿಕೊಂಡ ದೇವರ ಶಕ್ತಿ” ಎಂದು ಹೇಳುತ್ತಿದ್ದರು. \v 11 ಸೀಮೋನನು ತನ್ನ ಮಂತ್ರಶಕ್ತಿಯಿಂದ ಅವರನ್ನು ಆಶ್ಚರ್ಯಗೊಳಿಸಿದ್ದರಿಂದ ಅವರು ಅವನನ್ನು ಹಿಂಬಾಲಿಸುತ್ತಿದ್ದರು. \v 12 ಆದರೆ ಫಿಲಿಪ್ಪನು ದೇವರ ರಾಜ್ಯದ ಶುಭವರ್ತಮಾನವನ್ನೂ ಕ್ರಿಸ್ತ ಯೇಸುವಿನ ಹೆಸರನ್ನೂ ಪ್ರಕಟಿಸಿದಾಗ ಅಲ್ಲಿಯ ಸ್ತ್ರೀ ಪುರುಷರು ಅದನ್ನು ನಂಬಿ ದೀಕ್ಷಾಸ್ನಾನವನ್ನು ಹೊಂದಿದರು. \v 13 ಸೀಮೋನನು ಸಹ ವಿಶ್ವಾಸವಿಟ್ಟು, ದೀಕ್ಷಾಸ್ನಾನ ಹೊಂದಿದನು. ಫಿಲಿಪ್ಪ ಮಾಡಿದ ಮಹಾಸೂಚಕಕಾರ್ಯಗಳನ್ನು ಮತ್ತು ಅದ್ಭುತಗಳನ್ನು ಕಂಡು, ಬೆರಗಾಗಿ ಅವನು ಹೋದಲ್ಲೆಲ್ಲಾ ಅವನನ್ನು ಹಿಂಬಾಲಿಸುತ್ತಿದ್ದನು. \p \v 14 ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದರು ಎಂಬ ಸಮಾಚಾರ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಗೆ ತಲುಪಿದ್ದರಿಂದ, ಅವರ ಬಳಿಗೆ ಪೇತ್ರ ಮತ್ತು ಯೋಹಾನರನ್ನು ಕಳುಹಿಸಿದರು. \v 15 ಇವರು ತಲುಪಿದಾಗ, ಅಲ್ಲಿಯವರು ಪವಿತ್ರಾತ್ಮ ದೇವರನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಾರ್ಥನೆ ಮಾಡಿದರು. \v 16 ಏಕೆಂದರೆ ಅವರಲ್ಲಿ ಯಾರ ಮೇಲೆಯೂ ಪವಿತ್ರಾತ್ಮ ಬಂದಿರಲಿಲ್ಲ, ಅವರು ಕರ್ತ ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಹೊಂದಿದ್ದರಷ್ಟೇ. \v 17 ಆಗ ಪೇತ್ರ ಮತ್ತು ಯೋಹಾನರು ಅವರ ಮೇಲೆ ತಮ್ಮ ಕೈಗಳನ್ನಿಡಲು, ಅವರು ಪವಿತ್ರಾತ್ಮ ವರವನ್ನು ಹೊಂದಿದರು. \p \v 18 ಅಪೊಸ್ತಲರು ತಮ್ಮ ಕೈಗಳನ್ನಿಡಲು ಪವಿತ್ರಾತ್ಮ ದೊರೆತದ್ದನ್ನು ಕಂಡ ಸೀಮೋನನು, ಅವರಿಗೆ ಹಣವನ್ನು ಕೊಟ್ಟು, \v 19 “ನಾನು ಯಾರ ಮೇಲೆ ಕೈಗಳನ್ನಿಡುವೆನೋ ಅವರೂ ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಂತೆ ಈ ಶಕ್ತಿಯನ್ನು ಕೊಡಬೇಕು,” ಎಂದು ಕೇಳಿದನು. \p \v 20 ಅದಕ್ಕೆ ಪೇತ್ರನು, “ದೇವರ ವರವನ್ನು ಹಣಕೊಟ್ಟು ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದ್ದರಿಂದ ನೀನು ನಿನ್ನ ಹಣದೊಂದಿಗೆ ನಾಶವಾಗಿಹೋಗು! \v 21 ನಿನ್ನ ಹೃದಯವು ದೇವರ ದೃಷ್ಟಿಯಲ್ಲಿ ಸರಿಯಾಗಿಲ್ಲವಾದ್ದರಿಂದ ಈ ಸೇವೆಯಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ. \v 22 ಈ ದುಷ್ಟತನಕ್ಕಾಗಿ ಪಶ್ಚಾತ್ತಾಪಪಟ್ಟು ಕರ್ತ ಯೇಸುವನ್ನು ಬೇಡಿಕೋ, ಒಂದು ವೇಳೆ ಅವರು ನಿನ್ನ ಹೃದಯದಲ್ಲಿದ್ದ ಈ ವಿಚಾರವನ್ನು ಕ್ಷಮಿಸಬಹುದು. \v 23 ನೀನು ಕಹಿತನದಿಂದ ತುಂಬಿರುವೆ; ಪಾಪ ಬಂಧನದಲ್ಲಿರುವೆ ಎಂದು ಕಾಣುತ್ತಿದ್ದೇನೆ,” ಎಂದನು. \p \v 24 ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು. \p \v 25 ಪೇತ್ರ ಯೋಹಾನರು ಕರ್ತದೇವರ ವಾಕ್ಯದ ಸಾಕ್ಷಿ ಹೇಳಿ ಬೋಧನೆ ಮಾಡಿದ ತರುವಾಯ ಸಮಾರ್ಯದ ಅನೇಕ ಗ್ರಾಮಗಳಲ್ಲಿ ಸುವಾರ್ತೆ ಸಾರಿ, ಯೆರೂಸಲೇಮಿಗೆ ಹಿಂದಿರುಗಿದರು. \s1 ಫಿಲಿಪ್ಪ ಹಾಗೂ ಐಥಿಯೋಪ್ಯದವನು \p \v 26 ದೇವದೂತನೊಬ್ಬನು ಫಿಲಿಪ್ಪನಿಗೆ, “ದಕ್ಷಿಣ ದಿಕ್ಕಿಗೆ ಹೋಗುವ ಮಾರ್ಗದಲ್ಲಿ ಹೋಗು, ಅದು ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದು ಹೇಳಿದನು. \v 27 ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು. \v 28 ಈಗ ತನ್ನ ಮನೆಗೆ ಹಿಂತಿರುಗುತ್ತಿದ್ದಾಗ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು. \v 29 ಆಗ, “ನೀನು ಹೋಗಿ ಆ ರಥದ ಜೊತೆಯಲ್ಲಿಯೇ ನಡೆ,” ಎಂದು ಪವಿತ್ರಾತ್ಮರು ಫಿಲಿಪ್ಪನಿಗೆ ಹೇಳಿದರು. \p \v 30 ಫಿಲಿಪ್ಪನು ರಥದ ಹತ್ತಿರಕ್ಕೆ ಓಡಿದನು. ಆ ಮನುಷ್ಯನು ಪ್ರವಾದಿ ಯೆಶಾಯನ ಗ್ರಂಥ ಓದುತ್ತಿರುವುದನ್ನು ಕೇಳಿಸಿಕೊಂಡು, “ನೀವು ಓದುತ್ತಿರುವುದು ನಿಮಗೆ ಅರ್ಥವಾಗುತ್ತಿದೆಯೇ?” ಎಂದು ಫಿಲಿಪ್ಪನು ಪ್ರಶ್ನಿಸಿದನು. \p \v 31 ಅವನು, “ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?” ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು. \p \v 32 ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು: \q1 “ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು. \q2 ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು. \q2 ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ. \q1 \v 33 ಅವರ ಅವಮಾನದಲ್ಲಿ ನ್ಯಾಯವು ಅವರಿಂದ ತೆಗೆಯಲಾಯಿತು. \q2 ಭೂಮಿಯಿಂದ ಆತನ ಜೀವವನ್ನು ತೆಗೆದೇಬಿಟ್ಟರಲ್ಲವೇ, \q2 ಆತನ ಸಂತತಿಯವರ ಬಗ್ಗೆ ಮಾತನಾಡಬಲ್ಲವರು ಯಾರು?”\f + \fr 8:33 \fr*\ft \+xt ಯೆಶಾಯ 53:7,8\+xt*\ft*\f* \p \v 34 ನಂತರ ಕಂಚುಕಿಯು, “ಪ್ರವಾದಿ ಇಲ್ಲಿ ಯಾರ ಬಗ್ಗೆ ಮಾತನಾಡುತ್ತಿದ್ದಾನೆ, ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ? ನನಗೆ ಹೇಳು,” ಎಂದು ಫಿಲಿಪ್ಪನನ್ನು ಕೇಳಿದನು. \v 35 ಪವಿತ್ರ ವೇದದ ಆ ಭಾಗದಿಂದಲೇ ಪ್ರಾರಂಭಿಸಿ ಫಿಲಿಪ್ಪನು ಅವನಿಗೆ ಯೇಸುವಿನ ಕುರಿತಾದ ಶುಭವಾರ್ತೆಯನ್ನು ತಿಳಿಸಿದನು. \p \v 36 ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು. \p \v 37 \it “ನೀನು ಪೂರ್ಣಹೃದಯದಿಂದ ನಂಬಿದರೆ ನಿನಗೆ ದೀಕ್ಷಾಸ್ನಾನವಾಗಬಹುದು,” ಎಂದು ಫಿಲಿಪ್ಪನು ಹೇಳಿದನು.\it* \p \it “ಕ್ರಿಸ್ತ ಯೇಸುವೇ ದೇವಪುತ್ರರು ಎಂದು ನಾನು ನಂಬುತ್ತೇನೆ,” ಎಂದು ಕಂಚುಕಿಯು ಪ್ರಕಟಿಸಿದನು.\it*\f + \fr 8:37 \fr*\ft ಕೆಲವು ಮೂಲ ಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \v 38 ರಥವನ್ನು ನಿಲ್ಲಿಸಲು ಅಪ್ಪಣೆಕೊಟ್ಟ ನಂತರ ಫಿಲಿಪ್ಪನು ಮತ್ತು ಕಂಚುಕಿ ಇಬ್ಬರೂ ನೀರೊಳಗೆ ಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. \v 39 ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು. \v 40 ಫಿಲಿಪ್ಪನು, ಅಜೋತಿನಲ್ಲಿ ಕಾಣಿಸಿಕೊಂಡು, ಕೈಸರೈಯ ತಲುಪುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಪ್ರಯಾಣಮಾಡಿದನು. \c 9 \s1 ಸೌಲನ ಪರಿವರ್ತನೆ \p \v 1 ಇಷ್ಟರಲ್ಲಿ, ಸೌಲನು ಕರ್ತ ಯೇಸುವಿನ ಶಿಷ್ಯರನ್ನು ಕೊಲೆಮಾಡುವ ಬೆದರಿಕೆಯನ್ನು ಹಾಕುತ್ತಲೇ ಇನ್ನೂ ಮುಂದುವರೆದನು. ಮಹಾಯಾಜಕನ ಬಳಿಗೆ ಹೋಗಿ, \v 2 ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು. \v 3 ಸೌಲನು ಪ್ರಯಾಣ ಮಾಡುತ್ತಾ ದಮಸ್ಕಕ್ಕೆ ಸಮೀಪ ಬಂದಾಗ, ಫಕ್ಕನೆ ಪರಲೋಕದಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು. \v 4 ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು. \p \v 5 “ಸ್ವಾಮಿ, ತಾವು ಯಾರು?” ಎಂದು ಸೌಲನು ಪ್ರಶ್ನಿಸಲು, \p “ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು. \v 6 ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು. \p \v 7 ಸೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು ಮೂಕರಂತೆ ನಿಂತುಕೊಂಡರು. ಅವರಿಗೆ ಧ್ವನಿ ಕೇಳಿಸಿತೇ ಹೊರತು ಯಾರೂ ಕಾಣಲಿಲ್ಲ. \v 8 ಸೌಲನು ನೆಲದಿಂದ ಎದ್ದ ಮೇಲೆ ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಅವರು ಅವನ ಕೈಹಿಡಿದು ದಮಸ್ಕದೊಳಗೆ ಕರೆದುಕೊಂಡು ಹೋದರು. \v 9 ಮೂರು ದಿನ ಅವನು ಕುರುಡನಾಗಿದ್ದನು. ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. \p \v 10 ದಮಸ್ಕದಲ್ಲಿ ಅನನೀಯ ಎಂಬ ಹೆಸರಿನ ಶಿಷ್ಯನಿದ್ದನು. ದರ್ಶನದಲ್ಲಿ ಕರ್ತ ಯೇಸುವು ಅವನನ್ನು, “ಅನನೀಯಾ!” ಎಂದು ಕರೆದರು. \p “ಇಗೋ, ಇದ್ದೇನೆ ಸ್ವಾಮಿ,” ಎಂದು ಅವನು ಉತ್ತರಕೊಟ್ಟನು. \p \v 11 ಕರ್ತ ಯೇಸುವು ಅವನಿಗೆ, “ನೀನೆದ್ದು ‘ನೇರ ಬೀದಿ’ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬುವನನ್ನು ವಿಚಾರಿಸು. ಅವನು ಪ್ರಾರ್ಥನೆ ಮಾಡುತ್ತಿದ್ದಾನೆ. \v 12 ತನ್ನ ದೃಷ್ಟಿ ಪುನಃ ಬರುವಂತೆ ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ಬಂದು ತನ್ನ ಮೇಲೆ ಕೈಗಳನ್ನಿಡುವುದನ್ನು ಅವನು ದರ್ಶನದಲ್ಲಿ ಕಂಡಿದ್ದಾನೆ,” ಎಂದು ಹೇಳಿದರು. \p \v 13 ಆಗ ಅನನೀಯನು, “ಸ್ವಾಮಿ, ಈ ಮನುಷ್ಯನ ಬಗ್ಗೆ ಬಹಳ ಕೇಳಿದ್ದೇನೆ. ಯೆರೂಸಲೇಮಿನಲ್ಲಿ ನಿಮ್ಮ ಭಕ್ತರಿಗೆ ಬಹಳ ಕೇಡು ಮಾಡಿದ್ದಾನೆ. \v 14 ಇಲ್ಲಿ ನಿಮ್ಮ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕನಿಂದ ಅಧಿಕಾರದ ಪತ್ರ ಪಡೆದು ಬಂದಿದ್ದಾನೆ,” ಎಂದು ಉತ್ತರಕೊಟ್ಟನು. \p \v 15 ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ. \v 16 ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು. \p \v 17 ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು, \v 18 ತಕ್ಷಣವೇ, ಸೌಲನ ಕಣ್ಣುಗಳಿಂದ ಪರೆ ಕಳಚಿದಂತಾಗಿ ಅವನಿಗೆ ಪುನಃ ದೃಷ್ಟಿ ಬಂದಿತು. ಅವನು ಎದ್ದು ದೀಕ್ಷಾಸ್ನಾನವನ್ನು ಪಡೆದುಕೊಂಡನು. \v 19 ತರುವಾಯ ಊಟಮಾಡಿ ಚೇತರಿಸಿಕೊಂಡನು. ಆಗ ಅವನು ಎದ್ದು ನಿಲ್ಲಲು ಶಕ್ತನಾದನು. \s1 ಸೌಲನು ದಮಸ್ಕದಲ್ಲಿ ಹಾಗೂ ಯೆರೂಸಲೇಮಿನಲ್ಲಿ \p ದಮಸ್ಕದಲ್ಲಿ ಶಿಷ್ಯರೊಂದಿಗೆ ಸೌಲನು ಹಲವಾರು ದಿನಗಳನ್ನು ಕಳೆದನು. \v 20 ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು. \v 21 ಅವನ ಮಾತುಗಳನ್ನು ಕೇಳಿದವರಿಗೆ ಅತ್ಯಾಶ್ಚರ್ಯವಾಯಿತು. ಅವರು, “ಈ ಹೆಸರನ್ನು ಹೇಳುವವರೆಲ್ಲರಿಗೆ ಯೆರೂಸಲೇಮಿನಲ್ಲಿ ತೊಂದರೆಕೊಟ್ಟು ಗೊಂದಲವೆಬ್ಬಿಸಿದವನು ಇವನೇ ಅಲ್ಲವೇ? ಅಂಥವರನ್ನು ಸೆರೆಹಿಡಿದು ಮುಖ್ಯಯಾಜಕರ ಬಳಿಗೆ ಎಳೆದೊಯ್ಯಲು ಇಲ್ಲಿಗೆ ಬಂದವನಲ್ಲವೇ?” ಎಂದು ಪ್ರಶ್ನಿಸಿಕೊಂಡರು. \v 22 ಆದರೂ ಸೌಲನು ಹೆಚ್ಚೆಚ್ಚು ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತ ಆಗಿದ್ದಾರೆಂದು ರುಜುವಾತುಪಡಿಸುತ್ತಾ ದಮಸ್ಕದ ನಿವಾಸಿಗಳಾದ ಯೆಹೂದ್ಯರನ್ನು ಗಲಿಬಿಲಿಗೆ ಒಳಪಡಿಸಿದನು. \p \v 23 ಅನೇಕ ದಿನಗಳ ತರುವಾಯ, ಸೌಲನನ್ನು ಕೊಲ್ಲಲು ಯೆಹೂದ್ಯರು ರಹಸ್ಯವಾಗಿ ಯೋಚಿಸಿದರು. \v 24 ಆದರೆ ಅವರ ಯೋಚನೆ ಸೌಲನಿಗೆ ತಿಳಿಯಿತು. ಅವರು ಅವನನ್ನು ಕೊಲ್ಲುವುದಕ್ಕಾಗಿ ಹಗಲಿರುಳು ಪಟ್ಟಣದ ದ್ವಾರಗಳ ಬಳಿಯಲ್ಲಿ ಹೊಂಚುಹಾಕುತ್ತಿದ್ದರು. \v 25 ಆದರೆ ಸೌಲನ ಅನುಯಾಯಿಗಳು ರಾತ್ರಿಯಲ್ಲಿ ಅವನನ್ನು ಕರೆದುಕೊಂಡು ಹೋಗಿ, ಬುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಕಿಟಿಕಿಯ ಮುಖಾಂತರ ಹೊರಗೆ ಕೆಳಗಿಳಿಸಿದರು. \p \v 26 ಸೌಲನು ಯೆರೂಸಲೇಮಿಗೆ ಬಂದು, ಶಿಷ್ಯರ ಜೊತೆಯಲ್ಲಿರಲು ಪ್ರಯತ್ನಿಸಿದನು. ಆದರೆ ಅವನು ನಿಜವಾಗಿಯೂ ಶಿಷ್ಯನೆಂದು ನಂಬದೆ ಅವರು ಅವನಿಗೆ ಭಯಪಟ್ಟಿದ್ದರು. \v 27 ಬಾರ್ನಬನು ಅವನನ್ನು ಕರೆದುಕೊಂಡು ಅಪೊಸ್ತಲರ ಬಳಿಗೆ ಬಂದನು. ಸೌಲನು ಪ್ರಯಾಣ ಮಾಡುತ್ತಿದ್ದಾಗ ಅವನಿಗೆ ಕರ್ತ ಯೇಸು ದರ್ಶನವಾದದ್ದನ್ನೂ ಕರ್ತ ಯೇಸು ಅವನೊಂದಿಗೆ ಮಾತನಾಡಿದ್ದನ್ನೂ ಯಾವ ಭಯವಿಲ್ಲದೆ ದಮಸ್ಕದಲ್ಲಿ ಯೇಸುವಿನ ಹೆಸರಿನಲ್ಲಿ ಅವನು ಬೋಧಿಸಿದ್ದನ್ನೂ ಬಾರ್ನಬನು ತಿಳಿಸಿದನು. \v 28 ಹೀಗೆ ಸೌಲನು ಅಪೊಸ್ತಲರೊಂದಿಗೆ ಇದ್ದು ಯೆರೂಸಲೇಮಿನಲ್ಲಿ ಆತಂಕವಿಲ್ಲದೆ ತಿರುಗಾಡಿ ಕರ್ತ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದನು. \v 29 ಗ್ರೀಕ್ ಮಾತನಾಡುವ ಯೆಹೂದ್ಯರೊಂದಿಗೆ ಅವನು ಮಾತನಾಡಿ ಚರ್ಚೆಮಾಡಿದಾಗ, ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು. \v 30 ಸಹೋದರರಿಗೆ ಈ ಸುದ್ದಿ ತಿಳಿದಾಗ, ಅವರು ಸೌಲನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು. \p \v 31 ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು. \s1 ಐನೇಯನು ಮತ್ತು ದೊರ್ಕಳು \p \v 32 ಪೇತ್ರನು ಬೇರೆ ಬೇರೆ ಕಡೆಗಳಲ್ಲಿ ಪ್ರಯಾಣಮಾಡಿದ ತರುವಾಯ ಲುದ್ದದಲ್ಲಿಯ ದೇವಭಕ್ತರನ್ನು ಸಂದರ್ಶಿಸಲು ಹೋದನು. \v 33 ಅಲ್ಲಿ ಐನೇಯ ಎಂಬ ಹೆಸರಿನ ಒಬ್ಬಾತನನ್ನು ಸಂದರ್ಶಿಸಿದನು. ಅವನು ಪಾರ್ಶ್ವವಾಯು ರೋಗ ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದನು. \v 34 ಪೇತ್ರನು ಅವನಿಗೆ, “ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು,” ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು. \v 35 ಲುದ್ದ ಹಾಗೂ ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು. \p \v 36 ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು. \v 37 ಆ ಸಮಯದಲ್ಲಿ ಆಕೆ ಅಸ್ವಸ್ಥಳಾಗಿ ಸತ್ತುಹೋದಳು. ಆಕೆಯ ಶವಕ್ಕೆ ಸ್ನಾನಮಾಡಿಸಿ, ಅದನ್ನು ಮೇಲೆ ಮಾಳಿಗೆಯ ಕೋಣೆಯಲ್ಲಿ ಇಟ್ಟರು. \v 38 ಲುದ್ದ ಊರು ಯೊಪ್ಪ ಊರಿಗೆ ಸಮೀಪದಲ್ಲಿತ್ತು. ಪೇತ್ರನು ಲುದ್ದದಲ್ಲಿರುವುದು ದೇವ ಭಕ್ತರಿಗೆ ತಿಳಿಯಲು ಅವರು, “ಕೂಡಲೇ ಬರಬೇಕು,” ಎಂದು ಹೇಳಿ ಅವನನ್ನು ಕರೆದುಕೊಂಡು ಬರಲು ಇಬ್ಬರನ್ನು ಕಳುಹಿಸಿದರು. \p \v 39 ಅವರೊಂದಿಗೆ ಪೇತ್ರನು ಹೊರಟನು. ಅವನು ಬಂದಾಗ ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರು ಅವನ ಸುತ್ತಲೂ ನಿಂತುಕೊಂಡು ದೊರ್ಕಳು ಜೀವದಿಂದ ಇದ್ದಾಗ ಆಕೆ ಸಿದ್ಧಪಡಿಸಿದ ನಿಲುವಂಗಿಗಳನ್ನು ಇತರ ಬಟ್ಟೆಗಳನ್ನು ಅವನಿಗೆ ತೋರಿಸುತ್ತಾ ಕಣ್ಣೀರಿಟ್ಟರು. \p \v 40 ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು. \v 41 ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು. \v 42 ಈ ವಿಷಯ ಯೊಪ್ಪದಲ್ಲಿದ್ದವರೆಲ್ಲರಿಗೂ ತಿಳಿಯಿತು. ಕರ್ತ ಯೇಸುವಿನಲ್ಲಿ ಅನೇಕರು ವಿಶ್ವಾಸವನ್ನಿಟ್ಟರು. \v 43 ಪೇತ್ರನು ಯೊಪ್ಪದಲ್ಲಿ ಸೀಮೋನ ಎಂಬ ಹೆಸರಿನ ಚರ್ಮಕಾರನೊಂದಿಗೆ ಕೆಲವು ದಿನ ಇದ್ದನು. \c 10 \s1 ಕೊರ್ನೇಲ್ಯನು ಪೇತ್ರನನ್ನು ಕರೆಕಳುಹಿಸಿದ್ದು \p \v 1 ಕೈಸರೈಯದಲ್ಲಿ ಕೊರ್ನೇಲ್ಯ ಎಂಬುವನಿದ್ದನು. “ಇಟಲಿಯ ದಳ” ಎಂದು ಹೆಸರಿನ ದಳಕ್ಕೆ ಅವನು ಶತಾಧಿಪತಿ. \v 2 ಅವನೂ ಅವನ ಕುಟುಂಬದವರು ಭಕ್ತಿವಂತರೂ ದೇವರಿಗೆ ಭಯಪಡುವವರೂ ಆಗಿದ್ದರು. ಅವನು ಕೊರತೆಯಲ್ಲಿರುವವರಿಗೆ ಧಾರಾಳವಾಗಿ ಕೊಡುತ್ತಿದ್ದನು. ಅವನು ಅನುದಿನವೂ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದನು. \v 3 ಒಂದು ದಿನ ಮಧ್ಯಾಹ್ನ ಸುಮಾರು ಮೂರು ಗಂಟೆಯ ಸಮಯ ಅವನಿಗೆ ಒಂದು ದರ್ಶನವಾಯಿತು. ತನ್ನ ಬಳಿಗೆ ಒಬ್ಬ ದೇವದೂತನು ಬಂದು, “ಕೊರ್ನೇಲ್ಯನೇ!” ಎಂದು ಕರೆಯುವ ದೇವದೂತನನ್ನು ಸ್ಪಷ್ಟವಾಗಿ ಕಂಡನು. \p \v 4 ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, \p “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ. \v 5 ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಇಲ್ಲಿಗೆ ಕರೆದುಕೊಂಡು ಬರಲು ಹೇಳು. \v 6 ಚರ್ಮಕಾರನಾದ ಸೀಮೋನನ ಮನೆಯಲ್ಲಿ ಅವನು ಇಳಿದುಕೊಂಡಿದ್ದಾನೆ. ಆ ಮನೆ ಸಮುದ್ರ ತೀರದಲ್ಲಿದೆ,” ಎಂದು ದೇವದೂತನು ಹೇಳಿದನು. \p \v 7 ತನ್ನೊಂದಿಗೆ ಮಾತನಾಡಿದ ದೇವದೂತನು ಅದೃಶ್ಯವಾದ ಮೇಲೆ ಕೊರ್ನೇಲ್ಯನು ತನ್ನ ಇಬ್ಬರು ಸೇವಕರನ್ನು ಮತ್ತು ತನ್ನ ಪರಿಚಾರಕರಲ್ಲಿ ಭಕ್ತಿವಂತನಾದ ಒಬ್ಬ ಸಿಪಾಯಿಯನ್ನು ಕರೆದು, \v 8 ಸಂಭವಿಸಿದ್ದೆಲ್ಲವನ್ನು ಅವರಿಗೆ ವಿವರಿಸಿ, ಅವರನ್ನು ಯೊಪ್ಪಕ್ಕೆ ಕಳುಹಿಸಿದನು. \s1 ಪೇತ್ರನಿಗಾದ ದರ್ಶನ \p \v 9 ಮಾರನೆಯ ದಿನ ಅವರು ಪ್ರಯಾಣಮಾಡಿ ಮಧ್ಯಾಹ್ನದ ಸಮಯ ಯೊಪ್ಪ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆಗತಾನೇ ಪೇತ್ರನು ಪ್ರಾರ್ಥಿಸಲು ಮಾಳಿಗೆಯ ಮೇಲಕ್ಕೆ ಹೋದನು. \v 10 ಅವನಿಗೆ ಹಸಿವಾಗಿ ಏನನ್ನಾದರೂ ತಿನ್ನಬೇಕೆನಿಸಿತು. ಊಟ ಸಿದ್ಧತೆಯಾಗುತ್ತಿದ್ದಾಗ ಅವನು ಧ್ಯಾನ ಪರವಶನಾದನು. \v 11 ಪರಲೋಕವು ತೆರೆಯಲಾಗಿ ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವದನ್ನು ಕಂಡನು. \v 12 ಎಲ್ಲಾ ಜಾತಿಯ ನಾಲ್ಕು ಕಾಲಿನ ಪ್ರಾಣಿಗಳು, ಭೂಮಿಯ ಮೇಲೆ ಹರಿದಾಡುವ ಸರೀಸೃಪಗಳು, ಹಾರಾಡುವ ಪಕ್ಷಿಗಳು ಅದರಲ್ಲಿದ್ದವು. \v 13 ಆಗ, “ಪೇತ್ರನೇ, ಎದ್ದೇಳು, ಕೊಂದು ತಿನ್ನು,” ಎಂಬ ವಾಣಿ ಅವನಿಗೆ ಕೇಳಿಸಿತು. \p \v 14 ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು. \p \v 15 ವಾಣಿಯು ಎರಡನೆಯ ಬಾರಿಗೆ, “ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು. \p \v 16 ಹೀಗೆ ಮೂರು ಸಾರಿ ನಡೆದಮೇಲೆ, ಕೂಡಲೇ ಆ ಜೋಳಿಗೆಯನ್ನು ಪರಲೋಕಕ್ಕೆ ಎತ್ತಿಕೊಳ್ಳಲಾಯಿತು. \p \v 17 ಈ ದರ್ಶನದ ಅರ್ಥವೇನೆಂದು ಪೇತ್ರನು ಯೋಚಿಸುತ್ತಿರಲು, ಇಗೋ, ಕೊರ್ನೇಲ್ಯನು ಕಳುಹಿಸಿದ ಜನರು ಸೀಮೋನನ ಮನೆಯನ್ನು ಕಂಡುಕೊಂಡು ಅಲ್ಲಿ ದ್ವಾರದ ಬಳಿಯಲ್ಲಿ ನಿಂತಿದ್ದರು. \v 18 ಅವರು ಪೇತ್ರನು ಎಂದು ಕರೆಯಲಾಗುವ ಸೀಮೋನ ಅಲ್ಲಿ ಇಳಿದುಕೊಂಡಿರುವನೋ ಎಂದು ವಿಚಾರಿಸಿದರು. \p \v 19 ಪೇತ್ರನು ಇನ್ನೂ ಆ ದರ್ಶನದ ಬಗ್ಗೆ ಯೋಚಿಸುತ್ತಿರಲು, ಪವಿತ್ರಾತ್ಮ ದೇವರು ಅವನಿಗೆ, “ಸೀಮೋನನೇ ಇಗೋ, ಮೂವರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ. \v 20 ಎದ್ದೇಳು, ಕೆಳಗಿಳಿದು ಹೋಗು. ಅವರ ಜೊತೆಯಲ್ಲಿ ಹೋಗಲು ಹಿಂಜರಿಯಬೇಡ, ನಾನೇ ಅವರನ್ನು ಕಳುಹಿಸಿರುವೆ,” ಎಂದರು. \p \v 21 ಪೇತ್ರನು ಕೆಳಗಿಳಿದು ಹೋಗಿ, ಅವರಿಗೆ, “ನೀವು ಹುಡುಕುತ್ತಿರುವವನು ನಾನೇ. ನೀವು ಬಂದಿರುವ ಕಾರಣವೇನು?” ಎಂದು ಕೇಳಿದನು. \p \v 22 ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು. \v 23 ಪೇತ್ರನು ಅವರನ್ನು ತನ್ನ ಅತಿಥಿಗಳಾಗಿರಲು ಮನೆಯೊಳಗೆ ಕರೆದನು. \s1 ಕೊರ್ನೇಲ್ಯನ ಮನೆಯಲ್ಲಿ ಪೇತ್ರನು \p ಮರುದಿನ ಪೇತ್ರನು ಅವರೊಂದಿಗೆ ಪ್ರಯಾಣ ಬೆಳೆಸಿದನು. ಯೊಪ್ಪದಲ್ಲಿಯ ಕೆಲವು ಸಹೋದರರು ಅವನೊಂದಿಗೆ ಹೊರಟರು. \v 24 ಮರುದಿನ ಅವನು ಕೈಸರೈಯವನ್ನು ತಲುಪಿದನು ಮತ್ತು ಕೊರ್ನೇಲ್ಯನು ಅವರಿಗಾಗಿ ಕಾಯುತ್ತಿದ್ದನು. ತನ್ನ ಬಂಧುಗಳನ್ನು ಹತ್ತಿರದ ಸ್ನೇಹಿತರನ್ನು ಕರೆಯಿಸಿದ್ದನು. \v 25 ಆಗ ಪೇತ್ರನು ಮನೆಯಲ್ಲಿ ಪ್ರವೇಶಿಸುತ್ತಿದ್ದಂತೆ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಮುಂದೆ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಮಾಡಿದನು. \v 26 ಆದರೆ ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದೇಳು, ನಾನೂ ಒಬ್ಬ ಮನುಷ್ಯನೇ,” ಎಂದು ಹೇಳಿದನು. \p \v 27 ಅವನೊಂದಿಗೆ ಮಾತನಾಡುತ್ತಾ ಪೇತ್ರನು ಮನೆಯೊಳಗೆ ಹೋಗಿ ಅಲ್ಲಿ ಜನರ ದೊಡ್ಡ ಗುಂಪೇ ಇರುವುದನ್ನು ಕಂಡನು. \v 28 ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ. \v 29 ಆದ್ದರಿಂದ ನನ್ನನ್ನು ಕರೆಕಳುಹಿಸಿದಾಗ ಯಾವ ಆಕ್ಷೇಪಣೆ ಮಾಡದೆ ಇಲ್ಲಿಗೆ ಬಂದಿದ್ದೇನೆ. ನನ್ನನ್ನು ಕರೆಕಳುಹಿಸಿದ ಕಾರಣವನ್ನು ಈಗ ನಾನು ತಿಳಿಯಬಹುದೋ?” ಎಂದನು. \p \v 30 ಆಗ ಕೊರ್ನೇಲ್ಯನು, “ನಾಲ್ಕು ದಿನಗಳ ಹಿಂದೆ ಈ ಸಮಯದಲ್ಲಿ ಅಂದರೆ, ಮಧ್ಯಾಹ್ನ ಮೂರು ಗಂಟೆಯ ಸಮಯದಲ್ಲಿ ನಾನು ನನ್ನ ಮನೆಯಲ್ಲಿದ್ದುಕೊಂಡು ಪ್ರಾರ್ಥನೆ ಮಾಡುತ್ತಿದ್ದೆನು. ಆಗ ಫಕ್ಕನೆ ಹೊಳೆಯುತ್ತಿರುವ ವಸ್ತ್ರ ಧರಿಸಿದ್ದ ಒಬ್ಬನು ನನ್ನೆದುರು ಬಂದು ನಿಂತುಕೊಂಡನು. \v 31 ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ. \v 32 ಪೇತ್ರನೆಂದು ಹೆಸರಿನ ಸೀಮೋನನನ್ನು ಕರೆದುಕೊಂಡು ಬರಲು ಯೊಪ್ಪಕ್ಕೆ ಕೆಲವರನ್ನು ಕಳುಹಿಸು. ಪೇತ್ರನು ಸಮುದ್ರ ತೀರದಲ್ಲಿರುವ ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳಿದುಕೊಂಡಿದ್ದಾನೆ,’ ಎಂದು ಹೇಳಿದನು. \v 33 ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು. \p \v 34 ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ. \v 35 ದೇವರು ಪ್ರತಿಯೊಂದು ದೇಶದಲ್ಲಿಯೂ ತಮಗೆ ಭಯಪಡುವ ಮತ್ತು ಸರಿಯಾದದ್ದನ್ನು ಮಾಡುವ ಜನರನ್ನು ಸ್ವೀಕರಿಸುತ್ತಾರೆ. \v 36 ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ. \v 37 ಯೋಹಾನನು ದೀಕ್ಷಾಸ್ನಾನದ ಬಗ್ಗೆ ಬೋಧಿಸಿದ ನಂತರ ಗಲಿಲಾಯದಲ್ಲಿ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಏನು ಸಂಭವಿಸಿತೆಂಬುದನ್ನೂ ನೀವು ತಿಳಿದಿದ್ದೀರಿ. \v 38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ. \p \v 39 “ಯೆಹೂದ್ಯರ ನಾಡಿನಲ್ಲಿ ಮತ್ತು ಯೆರೂಸಲೇಮ ಪಟ್ಟಣದಲ್ಲಿಯೂ ಯೇಸು ಮಾಡಿದ ಪ್ರತಿಯೊಂದಕ್ಕೂ ನಾವು ಸಾಕ್ಷಿಗಳು. ಮರದ ಕಂಬಕ್ಕೆ ತೂಗುಹಾಕಿ ಯೇಸುವನ್ನು ನಾಯಕರು ಕೊಂದುಹಾಕಿದರು, \v 40 ಆದರೆ ಮೂರನೆಯ ದಿನದಲ್ಲಿ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಏಳುವಂತೆ ಮತ್ತು ಕಾಣಿಸಿಕೊಳ್ಳುವಂತೆ ಮಾಡಿದರು. \v 41 ಯೇಸುವನ್ನು ಎಲ್ಲರೂ ನೋಡಲಿಲ್ಲ. ಆದರೆ ದೇವರು ಮೊದಲೇ ನೇಮಿಸಿಕೊಂಡ ಸಾಕ್ಷಿಗಳಾಗಿರುವ ನಮಗೆ ಕಾಣಿಸಿಕೊಂಡರು. ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದ ತರುವಾಯ ಅವರೊಡನೆ ಊಟ, ಪಾನಮಾಡಿದ ನಮಗೆ ಕಾಣಿಸಿಕೊಂಡರು. \v 42 ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ. \v 43 ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು. \p \v 44 ಪೇತ್ರನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ, ಆ ಸಂದೇಶವನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮ ದೇವರು ಇಳಿದು ಬಂದರು. \v 45 ಯೆಹೂದ್ಯರಲ್ಲದವರ ಮೇಲೆಯೂ ಪವಿತ್ರಾತ್ಮ ದೇವರು ವರವನ್ನು ಸುರಿಸಿದ್ದಕ್ಕೆ ಪೇತ್ರನೊಂದಿಗೆ ಸುನ್ನತಿಯಾದ ವಿಶ್ವಾಸಿಗಳು ಅತ್ಯಾಶ್ಚರ್ಯಪಟ್ಟರು. \v 46 ಏಕೆಂದರೆ ಅವರು ಅನ್ಯಭಾಷೆಗಳಲ್ಲಿ ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಿದ್ದುದನ್ನು ಅವರು ಕೇಳಿಸಿಕೊಂಡರು, \p ಆಗ ಪೇತ್ರನು, \v 47 “ನೀರಿನಿಂದ ದೀಕ್ಷಾಸ್ನಾನವನ್ನು ಹೊಂದದಂತೆ ಯಾರಾದರೂ ಅಡ್ಡಿಮಾಡುವವರಿದ್ದಾರೋ? ನಾವು ಹೊಂದಿದಂತೆಯೇ ಇವರು ಸಹ ಪವಿತ್ರಾತ್ಮ ದೇವರನ್ನು ಹೊಂದಿಕೊಂಡಿದ್ದಾರಲ್ಲಾ?” ಎಂದು ಹೇಳಿದನು. \v 48 ಆಗ ಅವರು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದುವಂತೆ ಆಜ್ಞಾಪಿಸಿದನು. ಅನಂತರ ಕೆಲವು ದಿನ ಅಲ್ಲಿಯೇ ಇರಬೇಕೆಂದು ಅವರು ಪೇತ್ರನನ್ನು ಕೇಳಿಕೊಂಡರು. \c 11 \s1 ಪೇತ್ರನು ತನ್ನ ಸೇವೆಯ ಬಗ್ಗೆ ವಿವರಿಸಿದ್ದು \p \v 1 ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿದರೆಂಬ ವಾರ್ತೆಯನ್ನು ಅಪೊಸ್ತಲರೂ ಯೂದಾಯದಲ್ಲೆಲ್ಲಾ ಇದ್ದ ಸಹೋದರರೂ ಕೇಳಿದರು. \v 2 ಆದ್ದರಿಂದ ಪೇತ್ರನು ಯೆರೂಸಲೇಮಿಗೆ ಹೋದಾಗ ಸುನ್ನತಿಯಾದವರು ಅವನೊಂದಿಗೆ ವಾಗ್ವಾದಮಾಡಿ, \v 3 “ಸುನ್ನತಿ ಇಲ್ಲದವರ ಮನೆಯೊಳಗೆ ಹೋಗಿ ಅವರೊಂದಿಗೆ ಊಟಮಾಡಿದೆ,” ಎಂದರು. \p \v 4 ಆಗ ಸಂಭವಿಸಿದ್ದೆಲ್ಲವನ್ನು ಪೇತ್ರನು ಕ್ರಮವಾಗಿ ವಿವರಿಸಿ: \v 5 “ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದೆನು. ಆಗ ನಾನು ಧ್ಯಾನಪರವಶನಾಗಿ ಒಂದು ದರ್ಶನವನ್ನು ಕಂಡೆನು. ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಪರಲೋಕದಿಂದ ಕೆಳಗೆ ಇಳಿದು ನಾನಿದ್ದಲ್ಲಿಗೆ ಬರುವುದನ್ನು ಕಂಡೆನು. \v 6 ನಾನು ಅದರೊಳಗೆ ನೋಡಲು ಅದರಲ್ಲಿ ಭೂಲೋಕದ ಮೇಲೆ ತಿರುಗಾಡುವ ಪ್ರಾಣಿಗಳೂ ಕಾಡು ಮೃಗಗಳೂ ಕ್ರಿಮಿಕೀಟಗಳೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳೂ ಇದ್ದುದನ್ನು ಕಂಡೆನು. \v 7 ಮಾತ್ರವಲ್ಲದೆ, ‘ಪೇತ್ರನೇ ಎದ್ದೇಳು, ಕೊಂದು ತಿನ್ನು,’ ಎಂದು ನನಗೆ ಹೇಳುವ ಒಂದು ವಾಣಿಯನ್ನು ಕೇಳಿಸಿಕೊಂಡೆನು. \p \v 8 “ಅದಕ್ಕೆ ನಾನು, ‘ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,’ ಎಂದು ಉತ್ತರಕೊಟ್ಟೆನು. \p \v 9 “ಆಗ ಪರಲೋಕದ ಆ ವಾಣಿಯು, ‘ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,’ ಎಂದು ಎರಡನೆಯ ಸಾರಿ ನನಗೆ ಹೇಳಿತು. \v 10 ಹೀಗೆ ಮೂರು ಬಾರಿಯಾದ ತರುವಾಯ ಅವೆಲ್ಲವನ್ನೂ ಪರಲೋಕಕ್ಕೆ ಹಿಂದಿರುಗಿ ತೆಗೆದುಕೊಳ್ಳಲಾಯಿತು. \p \v 11 “ಆ ಸಮಯಕ್ಕೆ ಸರಿಯಾಗಿ ಕೈಸರೈಯದಿಂದ ನನ್ನ ಬಳಿಗೆ ಕಳುಹಿಸಲಾದ ಮೂರು ಜನರು ನಾನು ಉಳಿದುಕೊಂಡಿದ್ದ ಮನೆಯ ಮುಂದೆ ಬಂದು ನಿಂತರು. \v 12 ಏನೂ ಸಂಶಯಪಡದೇ ಅವರ ಜೊತೆಯಲ್ಲಿ ಹೋಗಬೇಕೆಂದು ಪವಿತ್ರಾತ್ಮ ದೇವರು ನನಗೆ ಅಪ್ಪಣೆಕೊಟ್ಟರು. ಇದಲ್ಲದೆ ಈ ಆರು ಜನ ಸಹೋದರರೂ ನನ್ನೊಂದಿಗೆ ಹೊರಟರು. ನಾವು ಆ ಮನುಷ್ಯನ ಮನೆಯೊಳಗೆ ಪ್ರವೇಶಿಸಿದೆವು. \v 13 ತನ್ನ ಮನೆಯಲ್ಲಿ ಒಬ್ಬ ದೇವದೂತನು ಪ್ರತ್ಯಕ್ಷನಾಗಿ, ‘ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಯೊಪ್ಪದಿಂದ ಕರೆಕಳುಹಿಸು. \v 14 ಅವನು ಕೊಡುವ ವಾಕ್ಯದ ಮೂಲಕ ನೀನೂ ನಿನ್ನ ಮನೆಯಲ್ಲಿರುವವರೆಲ್ಲರೂ ರಕ್ಷಣೆ ಹೊಂದುವಿರಿ,’ ಎಂದು ಹೇಳಿದ್ದನ್ನು ಅವನು ನಮಗೆ ವಿವರಿಸಿದನು. \p \v 15 “ನಾನು ಮಾತನಾಡಲು ಪ್ರಾರಂಭ ಮಾಡಿದಾಗ, ಪವಿತ್ರಾತ್ಮ ದೇವರು ಮೊದಲು ನಮ್ಮ ಮೇಲೆ ಇಳಿದಂತೆಯೇ ಅವರ ಮೇಲೆಯೂ ಇಳಿದು ಬಂದರು. \v 16 ‘ಯೋಹಾನನು ನೀರಿನಿಂದ ದೀಕ್ಷಾಸ್ನಾನ ಮಾಡಿಸಿದ್ದಾನೆ. ನೀವಾದರೋ ಪವಿತ್ರಾತ್ಮ ದೇವರಿಂದ ದೀಕ್ಷಾಸ್ನಾನ ಹೊಂದುವಿರಿ,’ ಎಂದು ಕರ್ತ ಯೇಸುವು ಹೇಳಿದ ಮಾತುಗಳನ್ನು ನಾನು ಆಗ ಜ್ಞಾಪಿಸಿಕೊಂಡೆನು. \v 17 ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಂಬಿಕೆಯನ್ನಿಟ್ಟ ನಮಗೆ ಕೊಟ್ಟ ಪವಿತ್ರಾತ್ಮ ವರವನ್ನೇ ದೇವರು ಅವರಿಗೂ ಕೊಟ್ಟಿರಲು, ದೇವರಿಗೆ ಅಡ್ಡಿಮಾಡಲು ನಾನು ಯಾರು?” ಎಂದನು. \p \v 18 ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು. \s1 ಅಂತಿಯೋಕ್ಯದಲ್ಲಿದ್ದ ಸಭೆ \p \v 19 ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು. \v 20 ಆದರೆ ಅವರಲ್ಲಿ, ಕೆಲವರು ಅಂದರೆ ಸೈಪ್ರಸ್ ಮತ್ತು ಕುರೇನೆದ ಪುರುಷರು ಅಂತಿಯೋಕ್ಯಕ್ಕೆ ಹೋಗಿ ಗ್ರೀಕರಿಗೂ ಕರ್ತ ಯೇಸುವಿನ ಶುಭಸಮಾಚಾರ ಸಾರಲು ಪ್ರಾರಂಭಿಸಿದರು. \v 21 ಕರ್ತ ಯೇಸುವಿನ ಹಸ್ತವು ಅವರೊಂದಿಗಿತ್ತು ಬಹಳಷ್ಟು ಜನರು ನಂಬಿ ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು. \p \v 22 ಈ ಸಮಾಚಾರ ಯೆರೂಸಲೇಮಿನ ಸಭೆಯವರಿಗೆ ತಿಳಿಯಿತು. ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿಕೊಟ್ಟರು. \v 23 ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು. \v 24 ಬಾರ್ನಬನು ಸತ್ಪುರುಷನೂ ಪವಿತ್ರಾತ್ಮಭರಿತನೂ ಪೂರ್ಣನಂಬಿಕೆಯುಳ್ಳವನೂ ಆಗಿದ್ದನು. ಅಲ್ಲಿ ಅನೇಕರು ಕರ್ತ ಯೇಸುವಿನ ಕಡೆಗೆ ಬಂದರು. \p \v 25 ಅನಂತರ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋದನು. \v 26 ಅಲ್ಲಿ ಸೌಲನನ್ನು ಭೇಟಿಯಾಗಿ, ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅನಂತರ ಇಡೀ ಒಂದು ವರ್ಷಕಾಲ ಬಾರ್ನಬನು, ಸೌಲನು ಅಲ್ಲಿ ಸಭೆಯವರೊಂದಿಗೆ ಇದ್ದುಕೊಂಡು ಬಹಳ ಜನರಿಗೆ ಬೋಧನೆ ಮಾಡಿದರು. ಶಿಷ್ಯರಿಗೆ ಪ್ರಥಮ ಬಾರಿ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲಿಯೇ. \p \v 27 ಈ ಸಮಯದಲ್ಲಿ ಯೆರೂಸಲೇಮಿನಿಂದ ಕೆಲವು ಪ್ರವಾದಿಗಳು ಅಂತಿಯೋಕ್ಯಕ್ಕೆ ಬಂದರು. \v 28 ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು. \v 29 ಯೂದಾಯದಲ್ಲಿ ವಾಸಿಸುತ್ತಿದ್ದ ಸಹೋದರರಿಗೆ ಸಹಾಯ ಒದಗಿಸಲು ಅನುಕೂಲಸ್ಥರಾದ ಶಿಷ್ಯರು ತಮ್ಮ ಶಕ್ತ್ಯಾನುಸಾರ ಕೊಡಲು ನಿರ್ಧರಿಸಿದರು. \v 30 ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು. \c 12 \s1 ಅದ್ಭುತವಾದ ರೀತಿಯಲ್ಲಿ ಪೇತ್ರನು ಬಿಡುಗಡೆಯಾದದ್ದು \p \v 1 ಆ ದಿನಗಳಲ್ಲಿ ಅರಸನಾದ ಹೆರೋದನು ದೇವರ ಸಭೆಯ ಸದಸ್ಯರನ್ನು ಹಿಂಸಿಸುವ ಉದ್ದೇಶದಿಂದ ಕೆಲವರನ್ನು ಬಂಧಿಸಿದನು. \v 2 ಯೋಹಾನನ ಸಹೋದರ ಯಾಕೋಬನನ್ನು ಖಡ್ಗದಿಂದ ಕೊಲ್ಲಿಸಿದನು. \v 3 ಇದರಿಂದ ಯೆಹೂದ್ಯರಿಗೆ ಮೆಚ್ಚಿಕೆಯಾಯಿತೆಂದು ತಿಳಿದಾಗ, ಅವನು ಪೇತ್ರನನ್ನು ಬಂಧಿಸಿದನು. ಇದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಸಮಯದಲ್ಲಿ ನಡೆಯಿತು. \v 4 ಪೇತ್ರನನ್ನು ಬಂಧಿಸಿದ ನಂತರ ಅವನನ್ನು ಸೆರೆಮನೆಯಲ್ಲಿ ಹಾಕಿದನು. ಪೇತ್ರನನ್ನು ಕಾಯಲು ನಾಲ್ಕು ದಳಗಳನ್ನು ನೇಮಿಸಿದನು. ಒಂದೊಂದು ದಳದಲ್ಲಿಯೂ ನಾಲ್ಕು ಸಿಪಾಯಿಗಳಿದ್ದರು. ಪಸ್ಕಹಬ್ಬ ಮುಗಿದ ತರುವಾಯ ಪೇತ್ರನನ್ನು ಬಹಿರಂಗ ವಿಚಾರಣೆಗೆ ತರಬೇಕೆಂದು ಉದ್ದೇಶಿಸಿದ್ದನು. \p \v 5 ಹೀಗೆ ಪೇತ್ರನು ಸೆರೆಮನೆಯಲ್ಲಿ ಬಂಧಿಸಲಾಗಿದ್ದಾಗ, ದೇವರ ಸಭೆಯು ಅವನಿಗೋಸ್ಕರವಾಗಿ ಆಸಕ್ತಿಯಿಂದ ದೇವರಿಗೆ ಪ್ರಾರ್ಥಿಸುತ್ತಿತ್ತು. \p \v 6 ಹೆರೋದನು ಅವನನ್ನು ವಿಚಾರಣೆಗೆ ತರಲಿಕ್ಕಿದ್ದ ದಿನದ ಹಿಂದಿನ ರಾತ್ರಿ ಪೇತ್ರನು ಸರಪಣಿಗಳಿಂದ ಬಂಧಿಸಲಾಗಿ ಇಬ್ಬರು ಸಿಪಾಯಿಗಳ ಮಧ್ಯೆ ನಿದ್ರಿಸುತ್ತಿದ್ದನು. ಕಾವಲುಗಾರರು ದ್ವಾರದ ಬಳಿಯಲ್ಲಿ ಕಾಯುತ್ತಿದ್ದರು. \v 7 ಫಕ್ಕನೆ ದೇವದೂತನೊಬ್ಬನು ಪ್ರತ್ಯಕ್ಷನಾಗಲು ಕೋಣೆಯೆಲ್ಲಾ ಪ್ರಕಾಶಮಯವಾಯಿತು. ಅವನು ಪೇತ್ರನನ್ನು ತಟ್ಟಿ ಎಬ್ಬಿಸಿ, “ಬೇಗ ಎದ್ದೇಳು!” ಎಂದನು. ಪೇತ್ರನ ಕೈಗಳಿಗೆ ಬಂಧಿಸಿದ್ದ ಸರಪಣಿಗಳು ಕಳಚಿಬಿದ್ದವು. \p \v 8 “ನಿನ್ನ ಬಟ್ಟೆಗಳನ್ನೂ ಮೆಟ್ಟುಗಳನ್ನೂ ಧರಿಸಿಕೋ,” ಎಂದು ದೇವದೂತನು ಅವನಿಗೆ ಹೇಳಲು, ಪೇತ್ರನು ಅದರಂತೆ ಮಾಡಿದನು. “ನಿನ್ನ ನಿಲುವಂಗಿಯನ್ನು ಸುತ್ತಿಕೊಂಡು ನನ್ನನ್ನು ಹಿಂಬಾಲಿಸು,” ಎಂದು ದೇವದೂತನು ಹೇಳಿದನು. \v 9 ಪೇತ್ರನು ಸೆರೆಮನೆಯಿಂದ ಹೊರಗೆ ಅವನನ್ನು ಹಿಂಬಾಲಿಸಿ ಹೊರಟನು. ದೇವದೂತನು ಮಾಡುತ್ತಿರುವುದು ನಿಜವಾಗಿಯೂ ನಡೆಯುತ್ತಿದೆ ಎಂಬುದು ಅವನಿಗೆ ತಿಳಿಯಲಿಲ್ಲ. ತಾನು ದರ್ಶನ ಕಾಣುತ್ತಿರುವೆನೋ ಎಂದು ಭಾವಿಸಿದನು. \v 10 ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣದೊಳಗೆ ನಡೆಸುವ ಕಬ್ಬಿಣದ ದ್ವಾರಕ್ಕೆ ಅವರು ಬಂದರು. ಅದು ತನ್ನಷ್ಟಕ್ಕೆ ತಾನೇ ತೆರೆಯಲು ಅವರು ಅದನ್ನು ದಾಟಿ ಹೊರಗೆ ಬಂದರು. ಒಂದು ಬೀದಿಯನ್ನು ದಾಟುವವರೆಗೆ ನಡೆದು ಬಂದ ನಂತರ ಫಕ್ಕನೆ ದೇವದೂತನು ಪೇತ್ರನನ್ನು ಬಿಟ್ಟುಹೋದನು. \p \v 11 ಆಗ ಪೇತ್ರನು ಸಂಪೂರ್ಣವಾಗಿ ಎಚ್ಚರಗೊಂಡು, “ಈಗ ಕರ್ತದೇವರು ತಮ್ಮ ದೂತನನ್ನು ಕಳುಹಿಸಿ ಹೆರೋದನ ಹಿಡಿತದಿಂದಲೂ ಯೆಹೂದ್ಯ ಜನರು ನಿರೀಕ್ಷಿಸುತ್ತಿದ್ದ ಎಲ್ಲಾ ಕೇಡಿನಿಂದಲೂ ನನ್ನನ್ನು ಉಳಿಸಿ ಕಾಪಾಡಿರುವರು ಎಂದು ಈಗ ನನಗೆ ಗೊತ್ತಾಗಿದೆ,” ಎಂದುಕೊಂಡನು. \p \v 12 ಅವನು ಇದನ್ನು ಗ್ರಹಿಸಿ, ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿ ಮರಿಯಳ ಮನೆಗೆ ಹೋದನು. ಅಲ್ಲಿ ಅನೇಕರು ಒಟ್ಟಾಗಿ ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು. \v 13 ಪೇತ್ರನು ಬಾಗಿಲನ್ನು ತಟ್ಟಿದಾಗ, ರೋದೆ ಎಂಬ ಸೇವಕಿ ಬಾಗಿಲು ತೆರೆಯಲು ಬಾಗಿಲ ಬಳಿಗೆ ಬಂದಳು. \v 14 ಪೇತ್ರನ ಧ್ವನಿಯನ್ನು ಗುರುತಿಸಿ ಸಂತೋಷದಿಂದ ಕೂಡಿದವಳಾಗಿ ಬಾಗಿಲು ತೆರೆಯದೆ ಹಿಂದೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿಯಲ್ಲಿದ್ದಾನೆ!” ಎಂದು ತಿಳಿಸಿದಳು. \p \v 15 ಆದರೆ ಅವರು, “ನಿನಗೆ ಹುಚ್ಚುಹಿಡಿದಿದೆ,” ಎಂದರು. ತಾನು ಹೇಳುವುದು ನಿಜ ಎಂದು ಆಕೆ ಒತ್ತಿ ಹೇಳುತ್ತಿರಲು ಅವರು, “ಅದು ಅವನ ದೂತನೇ ಆಗಿರಬೇಕು,” ಎಂದರು. \p \v 16 ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಹೋಗಿ ಬಾಗಿಲು ತೆರೆಯಲು ಅವನನ್ನು ಕಂಡು ಅತ್ಯಾಶ್ಚರ್ಯಗೊಂಡರು. \v 17 ಸುಮ್ಮನಿರಬೇಕೆಂದು ಪೇತ್ರನು ಅವರಿಗೆ ಕೈಸನ್ನೆ ಮಾಡಿ ಕರ್ತದೇವರು ಹೇಗೆ ತನ್ನನ್ನು ಸೆರೆಮನೆಯಿಂದ ಬಿಡಿಸಿ ಹೊರಗೆ ಕರೆದುಕೊಂಡು ಬಂದರು ಎಂಬುದನ್ನು ವಿವರಿಸಿದನು. “ಇದನ್ನು ಯಾಕೋಬನಿಗೆ\f + \fr 12:17 \fr*\ft ಯೇಸುವಿನ ಸಹೋದರ\ft*\f* ಹಾಗೂ ಸಹೋದರರಿಗೆ ತಿಳಿಸಿರಿ,” ಎಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು. \p \v 18 ಬೆಳಗಾದ ಮೇಲೆ ಪೇತ್ರನಿಗೆ ಏನಾಯಿತೆಂದು ಸೈನಿಕರ ನಡುವೆ ಬಹಳಷ್ಟು ಗೊಂದಲವಿತ್ತು. \v 19 ಹೆರೋದನು ಅವನನ್ನು ಹುಡುಕಿ ಕಾಣದೆ ಹೋದದ್ದರಿಂದ ಕಾವಲುಗಾರರನ್ನು ವಿಚಾರಿಸಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. \s1 ಹೆರೋದನ ಮರಣ \p ಅನಂತರ ಹೆರೋದನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಸ್ವಲ್ಪ ಸಮಯ ಇದ್ದನು. \v 20 ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು. \p \v 21 ನೇಮಕವಾದ ದಿನ ಹೆರೋದನು ತನ್ನ ರಾಜವಸ್ತ್ರಗಳನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತುಕೊಂಡು ಜನರನ್ನುದ್ದೇಶಿಸಿ ಬಹಿರಂಗ ಭಾಷಣ ಮಾಡಿದನು. \v 22 “ಇದು ಮಾನವ ಧ್ವನಿಯಲ್ಲ ದೇವರದೇ!” ಎಂದು ಜನರು ಆರ್ಭಟಿಸಿದರು. \v 23 ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು. \p \v 24 ದೇವರ ವಾಕ್ಯವಾದರೋ ವೃದ್ಧಿಯಾಗುತ್ತಾ ಪ್ರಸಾರಗೊಂಡಿತು. \s1 ಬಾರ್ನಬ ಸೌಲರನ್ನು ಕಳುಹಿಸಿದ್ದು \p \v 25 ಬಾರ್ನಬ ಮತ್ತು ಸೌಲನು ತಮ್ಮ ಸೇವಾಕಾರ್ಯವನ್ನು ಮುಗಿಸಿ, ಮಾರ್ಕ ಎಂದು ಕರೆಯಲಾಗುತ್ತಿದ್ದ ಯೋಹಾನನನ್ನು ತಮ್ಮೊಂದಿಗೆ ಕರೆದುಕೊಂಡು ಯೆರೂಸಲೇಮಿನಿಂದ ಹೊರಟು ಹೋದರು. \c 13 \nb \v 1 ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ. \v 2 ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು. \v 3 ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ, ಅವರಿಬ್ಬರ ಮೇಲೆ ಕೈಗಳನ್ನಿಟ್ಟು ಕಳುಹಿಸಿಬಿಟ್ಟರು. \s1 ಸೈಪ್ರಸ್ನಲ್ಲಿ \p \v 4 ಪವಿತ್ರಾತ್ಮ ದೇವರಿಂದ ಕಳುಹಿಸಲಾದ ಅವರಿಬ್ಬರೂ ಸೆಲ್ಯೂಕ್ಯಕ್ಕೆ ಹೋಗಿ ಅಲ್ಲಿಂದ ನೌಕೆಯಲ್ಲಿ ಪ್ರಯಾಣಮಾಡಿ ಸೈಪ್ರಸಿಗೆ ತಲುಪಿದರು. \v 5 ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು. \p \v 6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡಿ ಪಾಫೋಸ್ ಎಂಬಲ್ಲಿಗೆ ಬಂದರು. ಅಲ್ಲಿ ಮಂತ್ರವಾದಿಯೂ ಸುಳ್ಳುಪ್ರವಾದಿಯೂ ಆಗಿದ್ದ “ಬಾರ್ ಯೇಸು” ಎಂಬ ಹೆಸರಿನ ಒಬ್ಬ ಯೆಹೂದ್ಯನನ್ನು ಕಂಡರು. \v 7 ಅವನು ರಾಜ್ಯಪಾಲ ಸೆರ್ಗ್ಯಪೌಲನ ಜೊತೆಗಿದ್ದನು. ಈ ರಾಜ್ಯಪಾಲನು ಬುದ್ಧಿವಂತನಾಗಿದ್ದನು. ಇವನು ದೇವರ ವಾಕ್ಯವನ್ನು ಕೇಳುವ ಉದ್ದೇಶದಿಂದ ಬಾರ್ನಬ ಮತ್ತು ಸೌಲರನ್ನು ಕರೆಕಳುಹಿಸಿದನು. \v 8 ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ. \v 9 ಆಗ ಪೌಲನೆಂದೂ ಕರೆಯಲಾಗುತ್ತಿದ್ದ ಸೌಲನು, ಪವಿತ್ರಾತ್ಮಭರಿತನಾಗಿ, ಎಲುಮನನ್ನು ನೇರವಾಗಿ ದೃಷ್ಟಿಸಿ, \v 10 “ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ? \v 11 ಇಗೋ ಕರ್ತದೇವರ ಹಸ್ತ ನಿನಗೆ ವಿರೋಧವಾಗಿದೆ. ಈಗ ನೀನು ಕುರುಡನಾಗಿ, ಸ್ವಲ್ಪ ಕಾಲ ಸೂರ್ಯನ ಬೆಳಕನ್ನು ಕಾಣದೇ ಹೋಗುವೆ,” ಎಂದನು. \p ತಕ್ಷಣವೇ ಅವನ ಮೇಲೆ ಮಂಜು ಮುಸುಕಿ ಕತ್ತಲೆ ಆವರಿಸಿತು. ಅವನು ತಡವರಿಸುತ್ತಾ ತನ್ನನ್ನು ಯಾರಾದರೂ ಕೈಹಿಡಿದು ನಡೆಸುವರೋ ಎಂದು ಹುಡುಕಾಡಿದನು. \v 12 ಸಂಭವಿಸಿದ್ದೆಲ್ಲವನ್ನೂ ರಾಜ್ಯಪಾಲನು ಕಂಡು, ಕರ್ತ ಯೇಸುವಿನ ವಿಷಯವಾಗಿದ್ದ ಬೋಧನೆಯ ಬಗ್ಗೆ ಆಶ್ಚರ್ಯಪಟ್ಟು ವಿಶ್ವಾಸವನ್ನಿಟ್ಟನು. \s1 ಪಿಸಿದ್ಯದ ಅಂತಿಯೋಕ್ಯದಲ್ಲಿ \p \v 13 ಪಾಫೋಸಿನಿಂದ, ಪೌಲ ಮತ್ತು ಅವನ ಸಂಗಡಿಗರು ಪಂಫುಲ್ಯಕ್ಕೆ ಸೇರಿದ ಪೆರ್ಗೆ ಎಂಬಲ್ಲಿಗೆ ನೌಕೆಯಲ್ಲಿ ಪ್ರಯಾಣಮಾಡಿದರು, ಅಲ್ಲಿ ಯೋಹಾನನು ಅವರನ್ನು ಬಿಟ್ಟು ಯೆರೂಸಲೇಮಿಗೆ ಹಿಂತಿರುಗಿ ಹೋದನು. \v 14 ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು. \v 15 ನಿಯಮ ಮತ್ತು ಪ್ರವಾದಿಗಳ ಗ್ರಂಥವು ಪಾರಾಯಣವಾದ ತರುವಾಯ, ಸಭಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಪ್ರೋತ್ಸಾಹ ಕೊಡುವ ಸಂದೇಶ ನಿಮ್ಮಲ್ಲಿದ್ದರೆ, ಮಾತನಾಡಿರಿ,” ಎಂದು ಕೇಳಿಕೊಂಡರು. \p \v 16 ಪೌಲನು ಎದ್ದು ನಿಂತು, ಕೈಸನ್ನೆ ಮಾಡಿ ಹೀಗೆ ಹೇಳಿದನು: “ಇಸ್ರಾಯೇಲ್ ಜನರೇ, ದೇವರಲ್ಲಿ ಭಯಭಕ್ತಿಯುಳ್ಳವರೇ, ಕೇಳಿರಿ! \v 17 ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆಯ್ದುಕೊಂಡರು; ಈಜಿಪ್ಟಿನಲ್ಲಿ ನಮ್ಮ ಜನರು ವಾಸಿಸುತ್ತಿದ್ದಾಗ; ಅವರನ್ನು ಪ್ರಬಲರನ್ನಾಗಿ ಮಾಡಿ ತಮ್ಮ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಅವರನ್ನು ಬಿಡಿಸಿ ಕರೆತಂದರು; \v 18 ಅರಣ್ಯದಲ್ಲಿ ಸುಮಾರು ನಲವತ್ತು ವರ್ಷ ಅವರ ನಡತೆಯನ್ನು ಸಹಿಸಿಕೊಂಡರು. \v 19 ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು. \v 20 ಇದಕ್ಕೆ ನಾನೂರ ಐವತ್ತು ವರ್ಷಗಳ ಕಾಲ ಹಿಡಿಯಿತು. \p “ಇದಾದನಂತರ, ದೇವರು ಅವರಿಗೆ ಪ್ರವಾದಿ ಸಮುಯೇಲನ ಸಮಯದವರೆಗೆ ನ್ಯಾಯಸ್ಥಾಪಕರನ್ನು ದಯಪಾಲಿಸಿದರು. \v 21 ಅನಂತರ ಜನರು ಒಬ್ಬ ಅರಸನು ತಮಗೆ ಬೇಕೆಂದು ಕೇಳಿಕೊಳ್ಳಲು, ದೇವರು ಬೆನ್ಯಾಮೀನ್ ಗೋತ್ರದ ಕೀಷನ ಮಗ ಸೌಲನನ್ನು ಅವರಿಗೆ ಕೊಟ್ಟರು. ಇವನು ನಲವತ್ತು ವರ್ಷ ಆಳ್ವಿಕೆ ಮಾಡಿದನು. \v 22 ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು. \p \v 23 “ಈ ದಾವೀದನ ಸಂತತಿಯಲ್ಲಿಯೇ ದೇವರು ಇಸ್ರಾಯೇಲಿಗೆ ತನ್ನ ವಾಗ್ದಾನದಂತೆ ರಕ್ಷಕ ಯೇಸುವನ್ನು ತಂದರು. \v 24 ಯೇಸು ಬರುವ ಮೊದಲು, ಸ್ನಾನಿಕ ಯೋಹಾನನು ಎಲ್ಲಾ ಇಸ್ರಾಯೇಲರಿಗೆ ಪಶ್ಚಾತ್ತಾಪ ಮತ್ತು ದೀಕ್ಷಾಸ್ನಾನದ ಬಗ್ಗೆ ಸಾರಿದನು. \v 25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ, ‘ನನ್ನನ್ನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ಅವರು ನಾನಲ್ಲ, ಇಗೋ, ಅವರು ನನ್ನ ನಂತರ ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು. \p \v 26 “ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ. \v 27 ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು. \v 28 ಮರಣದಂಡನೆ ವಿಧಿಸಲು ಯಾವುದೇ ಕಾರಣ ಸಿಗದಿದ್ದರೂ ಯೇಸುವನ್ನು ಕೊಲ್ಲಬೇಕೆಂದು ಪಿಲಾತನನ್ನು ಕೇಳಿಕೊಂಡರು. \v 29 ಪವಿತ್ರ ವೇದದಲ್ಲಿ ಯೇಸುವನ್ನು ಕುರಿತು ಬರೆದಿರುವ ಪ್ರಕಾರ ನೆರವೇರಿದ ನಂತರ, ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು. \v 30 ಆದರೆ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದರು. \v 31 ಯೇಸುವಿನೊಡನೆ ಗಲಿಲಾಯದಿಂದ ಯೆರೂಸಲೇಮಿನವರೆಗೆ ಮುಂಚೆ ಬಂದಿದ್ದವರಿಗೆ ಯೇಸು ಅನೇಕ ದಿನಗಳವರೆಗೆ ಕಾಣಿಸಿಕೊಂಡರು. ಈಗ ಅವರೇ ನಮ್ಮ ಜನರಿಗೆ ಯೇಸುವಿನ ಸಾಕ್ಷಿಗಳಾಗಿದ್ದಾರೆ. \p \v 32 “ನಾವು ನಿಮಗೆ, ದೇವರು ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ್ದನ್ನು ಶುಭವರ್ತಮಾನವನ್ನಾಗಿ ಹೇಳುತ್ತಿದ್ದೇವೆ. \v 33 ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: \q1 “ ‘ನೀನು ನನ್ನ ಪುತ್ರನು, \q2 ಇಂದು ನಾನು ನಿನ್ನ ತಂದೆಯಾಗಿದ್ದೇನೆ.’\f + \fr 13:33 \fr*\ft \+xt ಕೀರ್ತನೆ 2:7\+xt*\ft*\f* \m \v 34 ಹೀಗೆ ಯೇಸುವನ್ನು ಸಮಾಧಿಯಲ್ಲಿ ಕೊಳೆಯಲು ಬಿಡದೇ ದೇವರು ಅವರನ್ನು ಜೀವಂತವಾಗಿ ಎಬ್ಬಿಸಿದ ಸತ್ಯವು ಈ ಮಾತುಗಳಲ್ಲಿ ಬಂದಿದೆ: \q1 “ ‘ನಾನು ದಾವೀದನಿಗೆ ವಾಗ್ದಾನ ಮಾಡಿದ ಪವಿತ್ರ \q2 ಹಾಗೂ ನಿಶ್ಚಯವಾದ ಆಶೀರ್ವಾದಗಳನ್ನು ನಿಮಗೆ ಕೊಡುವೆನು’\f + \fr 13:34 \fr*\ft \+xt ಯೆಶಾಯ 55:3\+xt*\ft*\f* \m \v 35 ಇನ್ನೊಂದು ಕೀರ್ತನೆಯಲ್ಲಿ ಹೀಗೆ ಹೇಳಿದ್ದಾರೆ: \q1 “ ‘ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.’\f + \fr 13:35 \fr*\ft \+xt ಕೀರ್ತನೆ 16:10\+xt*\ft*\f* \p \v 36 “ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು. \v 37 ಆದರೆ ದೇವರು ಮರಣದಿಂದ ಎಬ್ಬಿಸಿದ ಈ ಯೇಸು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ. \p \v 38 “ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ. \v 39 ಮೋಶೆಯ ನಿಯಮದ ಮೂಲಕವಾಗಿ ನೀತಿವಂತರೆಂದು ನಿರ್ಣಯಿಸಲಾಗದ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ, ಯೇಸುವನ್ನು ನಂಬುವ ಪ್ರತಿಯೊಬ್ಬರೂ ಯೇಸುವಿನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರಾಗುವರು. \v 40 ಆದ್ದರಿಂದ ಪ್ರವಾದಿಗಳು ಹೇಳಿದ ಮಾತುಗಳು ನಿಮ್ಮಲ್ಲಿ ನಡೆಯದಂತೆ ಜಾಗರೂಕರಾಗಿರಿ: \q1 \v 41 “ ‘ತಿರಸ್ಕಾರ ಮಾಡುವವರೇ, ಗಮನಿಸಿರಿ, \q2 ಆಶ್ಚರ್ಯಪಟ್ಟು, ಚದುರಿ ಹೋಗಿರಿ, \q1 ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ \q2 ಆ ಕಾರ್ಯವನ್ನು ಯಾರಾದರೂ ವಿವರಿಸಿ ಹೇಳಿದರೂ \q2 ನೀವದನ್ನು ಎಂದಿಗೂ ನಂಬುವುದೇ ಇಲ್ಲ,’\f + \fr 13:41 \fr*\ft \+xt ಹಬ 1:5\+xt*\ft*\f*” \m ಎಂದು ಹೇಳಿದನು. \p \v 42 ಪೌಲ ಬಾರ್ನಬರು ಸಭಾಮಂದಿರವನ್ನು ಬಿಟ್ಟು ಹೊರಡುವಾಗ, “ಬರುವ ಸಬ್ಬತ್ ದಿನವೂ ಬಂದು ಇದೇ ವಿಷಯಗಳನ್ನು ಕುರಿತು ಮಾತನಾಡಿರಿ,” ಎಂದು ಜನರು ಅವರನ್ನು ಕೇಳಿಕೊಂಡರು. \v 43 ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು. \p \v 44 ಮುಂದಿನ ಸಬ್ಬತ್ ದಿನ ಕರ್ತದೇವರ ವಾಕ್ಯ ಕೇಳಲು ನಗರದ ಜನರೆಲ್ಲರೂ ಹೆಚ್ಚಾಗಿ ಕೂಡಿಬಂದರು. \v 45 ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು. \p \v 46 ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ. \v 47 ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: \q1 “ ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ \q2 ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ ”\f + \fr 13:47 \fr*\ft \+xt ಯೆಶಾಯ 49:6\+xt*\ft*\f* \p \v 48 ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು. \p \v 49 ಆ ಪ್ರದೇಶದಲ್ಲೆಲ್ಲಾ ಕರ್ತದೇವರ ವಾಕ್ಯವು ಪ್ರಸಾರವಾಗುತ್ತಾ ಬಂತು. \v 50 ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು. \v 51 ಆಗ ಅವರಿಗೆ ವಿರೋಧವಾಗಿ ಪೌಲ, ಬಾರ್ನಬರು ತಮ್ಮ ಪಾದದ ಧೂಳನ್ನು ಝಾಡಿಸಿ ಇಕೋನ್ಯಕ್ಕೆ ಹೊರಟು ಹೋದರು. \v 52 ಶಿಷ್ಯರು ಬಹಳ ಸಂತೋಷದಿಂದಲೂ ಪವಿತ್ರಾತ್ಮ ದೇವರಿಂದಲೂ ತುಂಬಿದವರಾದರು. \c 14 \s1 ಇಕೋನ್ಯದಲ್ಲಿ \p \v 1 ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು. \v 2 ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು. \v 3 ಆದ್ದರಿಂದ ಪೌಲ ಬಾರ್ನಬರು ಅಲ್ಲಿ ಬಹಳ ಸಮಯವಿದ್ದು ಕರ್ತ ಯೇಸುವಿನ ವಿಷಯದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು. ಆದ್ದರಿಂದ ಕರ್ತ ಯೇಸು ಅವರ ಕೈಗಳಿಂದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟು ತಮ್ಮ ಕೃಪಾವಾಕ್ಯವನ್ನು ಖಚಿತಪಡಿಸಿದರು. \v 4 ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು. \v 5 ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ, \v 6 ಈ ವಿಷಯ ಅಪೊಸ್ತಲರಿಗೆ ತಿಳಿಯಲು ಅವರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆ ಹಾಗೂ ಅವುಗಳ ಸುತ್ತಮುತ್ತಲ ಪ್ರದೇಶಗಳಿಗೆ ಓಡಿಹೋದರು. \v 7 ಹೀಗೆ ಅವರು ಅಲ್ಲೆಲ್ಲಾ ಸುವಾರ್ತೆ ಸಾರಿದರು. \s1 ಲುಸ್ತ್ರ ಮತ್ತು ದೆರ್ಬೆಯಲ್ಲಿ \p \v 8 ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದನು. ಅವನು ಹುಟ್ಟು ಕುಂಟನಾಗಿದ್ದುದರಿಂದ ಅವನೆಂದೂ ನಡೆದಾಡಿರಲಿಲ್ಲ. \v 9 ಪೌಲನು ಮಾತನಾಡುತ್ತಿರುವುದನ್ನು ಅವನು ಆಲಿಸುತ್ತಿದ್ದನು. ಪೌಲನು ನೇರವಾಗಿ ಅವನನ್ನೇ ದೃಷ್ಟಿಸಿ ನೋಡಿ, ತಾನು ಗುಣಹೊಂದಲು ಅವನಲ್ಲಿ ವಿಶ್ವಾಸವಿದೆಯೆಂದು ಕಂಡು, \v 10 “ಎದ್ದೇಳು, ಕಾಲೂರಿ ನಿಲ್ಲು!” ಎಂದು ದೊಡ್ಡ ಧ್ವನಿಯಿಂದ ಹೇಳಿದನು. ಆ ಮನುಷ್ಯನು ಜಿಗಿದು ನಿಂತು, ನಡೆದಾಡಲು ಪ್ರಾರಂಭಿಸಿದನು. \p \v 11 ಪೌಲನು ಮಾಡಿದ್ದನ್ನು ಜನರು ಕಂಡಾಗ, ಲುಕವೋನಿಯ ಭಾಷೆಯಲ್ಲಿ, “ಮಾನವ ರೂಪದಲ್ಲಿ ದೇವರುಗಳು ಬಂದಿದ್ದಾರೆ!” ಎಂದು ಘೋಷಿಸಿದರು. \v 12 ಅವರು ಬಾರ್ನಬನನ್ನು “ಜೆಯುಸ್” ದೇವರು ಎಂದೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು “ಹೆರ್ಮೆ” ದೇವರು ಎಂದೂ ಕರೆದರು. \v 13 ಪಟ್ಟಣದ ಹೊರಗೆ ಸಮೀಪದಲ್ಲಿದ್ದ ಜೆಯುಸ್ ದೇವರ ಗುಡಿಯ ಪೂಜಾರಿಯು, ಪಟ್ಟಣದ ದ್ವಾರಗಳ ಬಳಿಗೆ ಹೋರಿಗಳನ್ನೂ ಹೂಮಾಲೆಗಳನ್ನೂ ತೆಗೆದುಕೊಂಡು ಬರಲು, ಅವರಿಗಾಗಿ ಯಜ್ಞಗಳನ್ನು ಅರ್ಪಿಸಲು ಜನರು ಅಪೇಕ್ಷಿಸಿದರು. \p \v 14 ಆದರೆ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ಇದನ್ನು ಕೇಳಿದಾಗ, ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದ ಕಡೆಗೆ ಓಡಿಬಂದು ಕೂಗಿ ಹೇಳಿದ್ದೇನೆಂದರೆ: \v 15 “ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ. \v 16 ದೇವರು ಹಿಂದಿನ ಕಾಲದಲ್ಲಿ, ಆಯಾ ದೇಶಗಳು ತಮ್ಮ ತಮ್ಮ ಮಾರ್ಗಗಳಲ್ಲಿಯೇ ನಡೆಯುವಂತೆ ಬಿಟ್ಟುಬಿಟ್ಟರು. \v 17 ಆದರೂ ದೇವರು ತಮ್ಮ ಬಗ್ಗೆ ಸಾಕ್ಷಿಕೊಡದೆ ಇರಲಿಲ್ಲ. ಆಕಾಶದಿಂದ ಮಳೆಯನ್ನೂ ಸಕಾಲದಲ್ಲಿ ಬೆಳೆಯನ್ನೂ ನಿಮಗೆ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೆಯದನ್ನು ಮಾಡುತ್ತಾ ಬಂದವರು ದೇವರೇ.” \v 18 ಹೀಗೆ ಹೇಳಿದರೂ ಆ ಜನಸಮೂಹ ಅವರಿಗೆ ಬಲಿಯರ್ಪಿಸುವುದನ್ನು ತಡೆಯಲು ಕಷ್ಟವಾಯಿತು. \p \v 19 ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು. \v 20 ಆದರೆ ಶಿಷ್ಯರು ಬಂದು ಪೌಲನ ಸುತ್ತಲೂ ನಿಂತುಕೊಳ್ಳಲು ಅವನು ಎದ್ದು ಪಟ್ಟಣಕ್ಕೆ ಹಿಂದಿರುಗಿ ಹೋದನು. ಮರುದಿನ ಅವನೂ ಬಾರ್ನಬನೂ ದೆರ್ಬೆಗೆ ಹೊರಟು ಹೋದರು. \s1 ಸಿರಿಯದ ಅಂತಿಯೋಕ್ಯಕ್ಕೆ ಮರುಪ್ರಯಾಣ \p \v 21 ಆ ಪಟ್ಟಣದಲ್ಲಿ ಪೌಲ, ಬಾರ್ನಬರು ಸುವಾರ್ತೆಯನ್ನು ಸಾರಿದರು. ಬಹುಜನರನ್ನು ಶಿಷ್ಯರನ್ನಾಗಿ ಮಾಡಿದರು. ಅನಂತರ ಅವರು ಲುಸ್ತ್ರ, ಇಕೋನ್ಯ ಮತ್ತು ಅಂತಿಯೋಕ್ಯಗಳಿಗೆ ಹಿಂದಿರುಗಿದರು. \v 22 ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು. \v 23 ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು. \v 24 ತರುವಾಯ ಪಿಸಿದ್ಯವನ್ನು ದಾಟಿಕೊಂಡು, ಪಂಫುಲ್ಯದೊಳಗೆ ಬಂದರು, \v 25 ಪೆರ್ಗೆಯಲ್ಲಿ ದೇವರ ವಾಕ್ಯವನ್ನು ಸಾರಿ, ಅಲ್ಲಿಂದ ಅತ್ತಾಲಿಯ ಎಂಬಲ್ಲಿಗೆ ಹೋದರು. \p \v 26 ಅತ್ತಾಲಿಯದಿಂದ ನೌಕೆಯಲ್ಲಿ ಪ್ರಯಾಣಮಾಡಿ ಅಂತಿಯೋಕ್ಯಕ್ಕೆ ಬಂದರು. ಅವರು ಪೂರೈಸಿದ ಸೇವೆಗಾಗಿ ದೇವರ ಕೃಪೆಗೆ ತಮ್ಮನ್ನು ಸಮರ್ಪಿಸಿಕೊಂಡದ್ದು ಈ ಪಟ್ಟಣದಿಂದಲೇ. \v 27 ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು. \v 28 ಅವರು ಅಲ್ಲಿಯೇ ಶಿಷ್ಯರೊಂದಿಗೆ ಬಹುಕಾಲ ತಂಗಿದ್ದರು. \c 15 \s1 ಯೆರೂಸಲೇಮಿನಲ್ಲಿ ಸಮಾಲೋಚನೆ \p \v 1 ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು. \v 2 ಇದರಿಂದ ಪೌಲ, ಬಾರ್ನಬರು ಅವರೊಂದಿಗೆ ಭಿನ್ನಾಭಿಪ್ರಾಯವುಳ್ಳವರಾಗಿ ತೀವ್ರ ವಿವಾದವುಂಟಾಯಿತು. ಈ ಪ್ರಶ್ನೆಯ ವಿಷಯದಲ್ಲಿ ಅಪೊಸ್ತಲರನ್ನೂ ಹಿರಿಯರನ್ನೂ ಭೇಟಿಯಾಗಲು, ತಮ್ಮಲ್ಲಿ ಬೇರೆ ಕೆಲವರು ಪೌಲ, ಬಾರ್ನಬರೊಂದಿಗೆ ಯೆರೂಸಲೇಮಿಗೆ ಹೋಗಬೇಕೆಂದು ನಿರ್ಣಯಿಸಲಾಯಿತು. \v 3 ಆದ್ದರಿಂದ ಸಭೆಯವರು ಅವರನ್ನು ಸಾಗಕಳುಹಿಸಲು, ಅವರು ಫೊಯಿನಿಕೆಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣ ಮಾಡುವಾಗ, ಯೆಹೂದ್ಯರಲ್ಲದವರ ಪರಿವರ್ತನೆಯನ್ನು ವಿವರವಾಗಿ ಅಲ್ಲಿಯವರೆಗೆ ತಿಳಿಸುತ್ತಾ ಸಹೋದರರೆಲ್ಲರಿಗೂ ಮಹಾಸಂತೋಷವನ್ನುಂಟುಮಾಡಿದರು. \v 4 ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು. \p \v 5 ಆದರೆ ಫರಿಸಾಯರ ಪಂಗಡಕ್ಕೆ ಸೇರಿದ ಕೆಲವು ವಿಶ್ವಾಸಿಗಳು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದವರು ಸುನ್ನತಿ ಹೊಂದಬೇಕು ಮತ್ತು ಮೋಶೆಯ ನಿಯಮಕ್ಕೆ ವಿಧೇಯರಾಗಬೇಕು,” ಎಂದರು. \p \v 6 ಅಪೊಸ್ತಲರು ಮತ್ತು ಹಿರಿಯರು ಈ ವಿಷಯದ ಕುರಿತಾಗಿ ವಿಚಾರಿಸಲು ಸಭೆ ಸೇರಿದರು. \v 7 ಬಹಳ ಚರ್ಚೆಯಾಗುತ್ತಿರುವಾಗ ಪೇತ್ರನು ಎದ್ದು ನಿಂತು ಅವರಿಗೆ, “ಸಹೋದರರೇ, ಯೆಹೂದ್ಯರಲ್ಲದವರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂಬ ಉದ್ದೇಶದಿಂದ ನಿಮ್ಮೊಳಗಿಂದ ನನ್ನನ್ನು ದೇವರು ಬಹು ದಿನಗಳ ಹಿಂದೆ ಆಯ್ದುಕೊಂಡರೆಂಬುದು ನಿಮಗೆ ತಿಳಿದೇ ಇದೆ. \v 8 ಹೃದಯವನ್ನು ಬಲ್ಲ ದೇವರು, ನಮಗೆ ಪವಿತ್ರಾತ್ಮ ದೇವರನ್ನು ಕೊಟ್ಟಂತೆಯೇ ಯಹೂದ್ಯರಲ್ಲದವರಿಗೂ ದಯಪಾಲಿಸಿ, ಅವರ ಬಗ್ಗೆ ಸಾಕ್ಷಿಕೊಟ್ಟರು. \v 9 ದೇವರು ಅವರಿಗೂ ನಮಗೂ ಮಧ್ಯದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೆ, ವಿಶ್ವಾಸದ ಮೂಲಕ ಅವರ ಹೃದಯಗಳನ್ನು ಶುದ್ಧೀಕರಿಸಿದರು. \v 10 ಆದ್ದರಿಂದ ನಾವಾಗಲಿ, ನಮ್ಮ ಪಿತೃಗಳಾಗಲಿ, ಹೊರಲಾರದ ನೊಗವನ್ನು ಯೆಹೂದ್ಯರಲ್ಲದ ಶಿಷ್ಯರ ಹೆಗಲ ಮೇಲೆ ಹಾಕಿ, ಈಗ ಏಕೆ ದೇವರನ್ನು ಪರೀಕ್ಷಿಸಲು ಪ್ರಯತ್ನಿಸುತ್ತೀರಿ? \v 11 ಆದರೆ ನಾವು ರಕ್ಷಣೆ ಹೊಂದಿದ್ದು ನಮ್ಮ ಕರ್ತ ಯೇಸುವಿನ ಕೃಪೆಯಿಂದಲೇ, ಹಾಗೆಯೇ ಅವರೂ ಹೊಂದುವರು ಎಂಬುದು ನಮ್ಮ ನಂಬಿಕೆ,” ಎಂದನು. \p \v 12 ಇದಕ್ಕೆ ಜನರು ಮೌನವಾಗಿದ್ದು, ಯೆಹೂದ್ಯರಲ್ಲದವರ ಮಧ್ಯದಲ್ಲಿ ದೇವರು ತಮ್ಮ ಮೂಲಕ ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕುರಿತು ಬಾರ್ನಬ ಮತ್ತು ಪೌಲ ಹೇಳುವುದನ್ನು ಕೇಳಿಸಿಕೊಂಡರು. \v 13 ಅವರು ಹೇಳಿ ಮುಗಿಸಿದಾಗ, ಯಾಕೋಬನು ಮಾತನಾಡಿ, “ಸಹೋದರರೇ, ನನ್ನ ಮಾತುಗಳನ್ನು ಆಲಿಸಿರಿ, \v 14 ದೇವರು ಯೆಹೂದ್ಯರಲ್ಲದವರೊಳಗಿಂದ ತಮ್ಮ ಹೆಸರಿಗಾಗಿ ಜನರನ್ನು ಆರಿಸಿಕೊಳ್ಳಲು ಹೇಗೆ ದಯೆತೋರಿಸಿದರೆಂದು ಸೀಮೋನನು ಈಗಾಗಲೇ ನಮಗೆ ವಿವರಿಸಿದ್ದಾನೆ. \v 15 ಪ್ರವಾದಿಗಳು ಬರೆದಿರುವ ಮಾತುಗಳು ಇದಕ್ಕೆ ಸರಿಹೊಂದುತ್ತವೆ: \q1 \v 16 “ ‘ಇದಾದನಂತರ ನಾನು ಮರಳಿ ಬರುವೆನು. \q2 ಬಿದ್ದುಹೋದ ದಾವೀದನ ಗುಡಾರವನ್ನು ಕಟ್ಟುವೆನು. \q1 ಪಾಳುಬಿದ್ದದ್ದನ್ನು ಜೀರ್ಣೋದ್ಧಾರ ಮಾಡಿ, \q2 ಅದನ್ನು ಪುನರುಜ್ಜೀವನಗೊಳಿಸುವೆನು. \q1 \v 17 ಆಗ ಉಳಿದಿರುವ ಜನರಲ್ಲಿ ಯೆಹೂದ್ಯರಲ್ಲದವರೂ \q2 ನನ್ನ ಹೆಸರೆತ್ತಿ ಕರೆಯುವವರೂ ಸಹ \q1 ಕರ್ತದೇವರನ್ನು ಹುಡುಕುವರು,’\f + \fr 15:17 \fr*\ft \+xt ಆಮೋ 9:11,12\+xt*\ft*\f* \q2 \v 18 ಎಂದು ನಿತ್ಯತ್ವವನ್ನು ತಿಳಿದಿರುವವರೂ ಇವುಗಳನ್ನೆಲ್ಲಾ \q2 ಮಾಡುವವರೂ ಆಗಿರುವ ದೇವರು ಹೇಳುತ್ತಾರೆ. \p \v 19 “ಆದ್ದರಿಂದ, ದೇವರ ಕಡೆಗೆ ತಿರುಗುತ್ತಿರುವ ಯೆಹೂದ್ಯರಲ್ಲದವರಿಗೆ ನಾವು ತೊಂದರೆ ಮಾಡಬಾರದು ಎಂಬುದೇ ನನ್ನ ತೀರ್ಮಾನ. \v 20 ಅದರ ಬದಲಾಗಿ ನಾವು ಅವರಿಗೆ, ದೇವರಲ್ಲದವುಗಳಿಂದ ಮಲಿನವಾದ ಆಹಾರದಿಂದಲೂ ಅನೈತಿಕತೆಯಿಂದಲೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ರಕ್ತದಿಂದಲೂ ದೂರವಿರಬೇಕು. \v 21 ಏಕೆಂದರೆ ಆರಂಭ ಕಾಲದಿಂದಲೂ ಪ್ರತಿಯೊಂದು ಪಟ್ಟಣದಲ್ಲಿ ಮೋಶೆಯ ಗ್ರಂಥವನ್ನು ಬೋಧಿಸಲಾಗುತ್ತದೆ ಹಾಗೂ ಪ್ರತಿ ಸಬ್ಬತ್ ದಿನ ಸಭಾಮಂದಿರಗಳಲ್ಲಿ ಓದಲಾಗುತ್ತದೆ,” ಎಂದು ಹೇಳಿದನು. \s1 ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಬಂದ ಪತ್ರ \p \v 22 ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು. \v 23 ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: \pmo ಅಪೊಸ್ತಲರು ಹಾಗೂ ಹಿರಿಯ ಸಹೋದರರು, \pmo ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: \pmo ವಂದನೆಗಳು. \pm \v 24 ನಮ್ಮಿಂದ ಕೆಲವರು ನಮ್ಮ ಅಪ್ಪಣೆಯಿಲ್ಲದೆ ತಮ್ಮ ಮಾತುಗಳಿಂದ ನಿಮ್ಮ ಮನಸ್ಸಿಗೆ ತೊಂದರೆ ಕೊಟ್ಟರೆಂದು ನಾವು ಕೇಳಿದೆವು. \v 25 ಆದ್ದರಿಂದ ಕೆಲವರನ್ನು ಆಯ್ದುಕೊಂಡು ಅವರನ್ನು ನಮ್ಮ ಪ್ರಿಯರಾದ ಬಾರ್ನಬ ಮತ್ತು ಪೌಲರೊಂದಿಗೆ ನಿಮ್ಮ ಬಳಿಗೆ ಕಳುಹಿಸುವುದು ಯುಕ್ತವೆಂದು ಒಂದೇ ಮನಸ್ಸಾಗಿರುವ ನಮಗೆ ತೋಚಿತು. \v 26 ಅವರು ನಮ್ಮ ಕರ್ತ ಕ್ರಿಸ್ತ ಯೇಸುವಿನ ಹೆಸರಿನ ಪರವಾಗಿ ತಮ್ಮ ಪ್ರಾಣಗಳನ್ನೇ ಬಿಟ್ಟು ಕೊಡುವವರಾಗಿದ್ದಾರೆ. \v 27 ಆದ್ದರಿಂದ ನಾವು ಈ ಸಂಗತಿಗಳನ್ನು ಬಾಯಿಮಾತುಗಳಿಂದ ಪ್ರಕಟಿಸುವುದಕ್ಕಾಗಿ ಯೂದ ಮತ್ತು ಸೀಲರನ್ನು ಕಳುಹಿಸುತ್ತಿದ್ದೇವೆ. \v 28 ಈ ಅಗತ್ಯವಾದವುಗಳನ್ನು ಬಿಟ್ಟು ಬೇರೆಯವುಗಳನ್ನು ನಿಮ್ಮ ಮೇಲೆ ಹೊರೆಯಾಗಿ ಹಾಕಬಾರದೆಂಬುದು, ಪವಿತ್ರಾತ್ಮರಿಗೂ ನಮಗೂ ಒಳ್ಳೆಯದೆಂದು ತೋಚಿತು. \v 29 ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕು. ಇವುಗಳಿಂದ ನಿಮ್ಮನ್ನು ಕಾಪಾಡಿಕೊಳ್ಳುವುದರಿಂದ ನಿಮಗೆ ಒಳಿತಾಗುವುದು. \pmc ನಿಮಗೆ ಶುಭವಾಗಲಿ. \p \v 30 ಅವರು ಹೊರಟುಹೋಗಿ ಅಂತಿಯೋಕ್ಯವನ್ನು ತಲುಪಿದರು. ಅಲ್ಲಿ ದೇವಸಭೆಯನ್ನು ಕೂಡಿಸಿ ಆ ಪತ್ರವನ್ನು ಕೊಟ್ಟರು. \v 31 ಸಭೆಯವರು ಅದನ್ನು ಓದಿ ಅದರಲ್ಲಿದ್ದ ಆದರಣೆ ಮಾತುಗಳಿಗಾಗಿ ಸಂತೋಷಪಟ್ಟರು. \v 32 ಯೂದ ಮತ್ತು ಸೀಲರು ಸ್ವತಃ ಪ್ರವಾದಿಗಳಾಗಿದ್ದುದರಿಂದ ಅಲ್ಲಿದ್ದ ವಿಶ್ವಾಸಿಗಳನ್ನು ಅನೇಕ ಬುದ್ಧಿವಾದಗಳಿಂದ ಬಲಪಡಿಸಿದರು. \v 33 ಅವರು ಕೆಲವು ದಿನಗಳು ಇದ್ದ ನಂತರ ಅಲ್ಲಿಯ ವಿಶ್ವಾಸಿಗಳನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿಕೊಟ್ಟವರ ಬಳಿಗೆ ಹಿಂದಿರುಗಿದರು. \v 34 \it ಸೀಲನು ಅಲ್ಲಿಯೇ ಇರಲು ತೀರ್ಮಾನಿಸಿದನು.\it*\f + \fr 15:34 \fr*\ft ಕೆಲವು ಮೂಲ ಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \v 35 ಆದರೆ ಪೌಲನು ಮತ್ತು ಬಾರ್ನಬರು ಅಂತಿಯೋಕ್ಯದಲ್ಲಿಯೇ ಉಳಿದುಕೊಂಡು ಅನೇಕರಿಗೆ ಕರ್ತ ಯೇಸುವಿನ ವಾಕ್ಯವನ್ನು ಬೋಧಿಸುತ್ತಾ ಸುವಾರ್ತೆ ಸಾರಿದರು. \s1 ಪೌಲ ಮತ್ತು ಬಾರ್ನಬ \p \v 36 ಕೆಲವು ದಿನಗಳ ನಂತರ ಪೌಲನು ಬಾರ್ನಬನಿಗೆ, “ನಾವು ಕರ್ತ ಯೇಸುವಿನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ಹೋಗಿ ಅಲ್ಲಿದ್ದ ವಿಶ್ವಾಸಿಗಳನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ,” ಎಂದು ಹೇಳಿದನು. \v 37 ಬಾರ್ನಬನು ಮಾರ್ಕ ಎಂಬ ಹೆಸರಿನ ಯೋಹಾನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬಯಸಿದನು, \v 38 ಆದರೆ ಪಂಫುಲ್ಯದಲ್ಲಿ ತಮ್ಮನ್ನು ಬಿಟ್ಟು ತಮ್ಮೊಂದಿಗೆ ಸೇವೆಗೆ ಸಹಕರಿಸದೆ ಹೋದ ಮಾರ್ಕನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ಪೌಲನು ಭಾವಿಸಿದನು. \v 39 ಇದರಿಂದ ಅವರಲ್ಲಿ ತೀವ್ರ ಭಿನ್ನಾಭಿಪ್ರಾಯ ಉಂಟಾಗಿ ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾಗಿ ಹೋಗಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ಪ್ರಯಾಣಮಾಡಿದನು, \v 40 ಆದರೆ ಪೌಲನು ಸೀಲನನ್ನು ಆರಿಸಿಕೊಂಡು ಹೋದನು. ವಿಶ್ವಾಸಿಗಳಿಂದ ಅವನನ್ನು ಕರ್ತ ಯೇಸುವಿನ ಕೃಪೆಗೆ ಒಪ್ಪಿಸಿ, ಕಳುಹಿಸಿಕೊಟ್ಟುರು. \v 41 ಪೌಲನು ಸಿರಿಯ ಮತ್ತು ಕಿಲಿಕ್ಯ ಸೀಮೆಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಸಭೆಗಳ ನಂಬಿಕೆಯನ್ನು ಬಲಪಡಿಸಿದನು. \c 16 \s1 ಪೌಲ ಸೀಲರೊಡನೆ ತಿಮೊಥೆಯನು \p \v 1 ಪೌಲನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಅಲ್ಲಿ, ತಿಮೊಥೆಯನೆಂಬ ಹೆಸರಿನ ಒಬ್ಬ ಶಿಷ್ಯನಿದ್ದನು. ಅವನ ತಾಯಿ ವಿಶ್ವಾಸಿಯಾಗಿದ್ದ ಯೆಹೂದ್ಯ ಸ್ತ್ರೀ. ಆದರೆ ಅವನ ತಂದೆ ಒಬ್ಬ ಗ್ರೀಕನಾಗಿದ್ದನು. \v 2 ಲುಸ್ತ್ರ ಹಾಗೂ ಇಕೋನ್ಯಗಳಲ್ಲಿದ್ದ ಸಹೋದರರು ತಿಮೊಥೆಯನ ಬಗ್ಗೆ ಒಳ್ಳೆಯ ಸಾಕ್ಷಿ ಹೇಳುತ್ತಿದ್ದರು. \v 3 ತಿಮೊಥೆಯನನ್ನು ಪೌಲನು ತನ್ನೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಬೇಕೆಂದು ಅಪೇಕ್ಷಿಸಿ, ಆ ಪ್ರದೇಶದಲ್ಲಿ ನೆಲೆಸಿದ ಯೆಹೂದ್ಯರ ನಿಮಿತ್ತ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು. ಏಕೆಂದರೆ ಅವನ ತಂದೆ ಗ್ರೀಕನು ಎಂಬುದನ್ನು ಅವರೆಲ್ಲರೂ ತಿಳಿದಿದ್ದರು. \v 4 ಅವರು ಪಟ್ಟಣಗಳಲ್ಲಿ ಪ್ರಯಾಣಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರು, ಹಿರಿಯರು ತೆಗೆದುಕೊಂಡ ತೀರ್ಮಾನಗಳನ್ನು ಜನರು ಅನುಸರಿಸಿ ನಡೆಯುವಂತೆ ಅವರಿಗೆ ಬೋಧಿಸಿದರು. \v 5 ಹೀಗೆ ಸಭೆಗಳು ವಿಶ್ವಾಸದಲ್ಲಿ ಬಲಗೊಂಡು ಸಂಖ್ಯೆಯಲ್ಲಿ ಅನುದಿನ ಹೆಚ್ಚುತ್ತಾ ಬಂದವು. \s1 ಪೌಲನಿಗೆ ಉಂಟಾದ ಮಕೆದೋನ್ಯ ಮನುಷ್ಯನ ದರ್ಶನ \p \v 6 ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು. \v 7 ಮೂಸ್ಯದ ಸೀಮೆಯನ್ನು ತಲುಪಿದಾಗ ಬಿಥೂನ್ಯವನ್ನು ಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಅನುಮತಿಸಲಿಲ್ಲ. \v 8 ಆದ್ದರಿಂದ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು. \v 9 ಆ ರಾತ್ರಿಯಲ್ಲಿ ಪೌಲನಿಗೆ ಒಂದು ದರ್ಶನವಾಯಿತು. ಅದರಲ್ಲಿ ಮಕೆದೋನ್ಯದವನೊಬ್ಬನು ನಿಂತುಕೊಂಡು, “ಮಕೆದೋನ್ಯ ದಾಟಿ ಬಂದು ನಮಗೆ ಸಹಾಯಮಾಡು,” ಎಂದು ಅವನನ್ನು ಬೇಡಿಕೊಂಡನು. \v 10 ಪೌಲನಿಗೆ ಈ ದರ್ಶನವಾದಾಗ ಆ ಜನರಿಗೆ ಸುವಾರ್ತೆ ಸಾರಲು ದೇವರು ನಮ್ಮನ್ನು ಕರೆಯುತ್ತಿದ್ದಾರೆಂದು ತಿಳಿದುಕೊಂಡು ಕೂಡಲೇ ಮಕೆದೋನ್ಯಕ್ಕೆ ಹೊರಡಲು ಸಿದ್ಧರಾದೆವು. \s1 ಫಿಲಿಪ್ಪಿಯಲ್ಲಿ ಲುದ್ಯಳ ಪರಿವರ್ತನೆ \p \v 11 ನಾವು ನೌಕೆ ಹತ್ತಿ ತ್ರೋವದಿಂದ ನೇರವಾಗಿ ಸಮೊಥ್ರಾಕೆಗೆ ಹೊರಟೆವು. ಮರುದಿನ ನೆಯಾಪೊಲಿಗೆ ತಲುಪಿದೆವು. \v 12 ಅಲ್ಲಿಂದ ಮಕೆದೋನ್ಯ ಪ್ರಾಂತದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ಪ್ರವಾಸ ಸ್ಥಳವಾಗಿತ್ತು. ನಾವು ಆ ಪಟ್ಟಣದಲ್ಲಿ ಕೆಲವು ದಿನ ಉಳಿದುಕೊಂಡೆವು. \p \v 13 ಪ್ರಾರ್ಥನೆಯ ಸ್ಥಳ ಸಿಕ್ಕಬಹುದೆಂದು ಭಾವಿಸಿ ಸಬ್ಬತ್ ದಿನದಂದು ಪಟ್ಟಣದ ದ್ವಾರದ ಹೊರಗಿದ್ದ ನದಿತೀರಕ್ಕೆ ಹೋದೆವು. ಅಲ್ಲಿ ಕುಳಿತುಕೊಂಡು ಕೂಡಿಬಂದಿದ್ದ ಮಹಿಳೆಯರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು. \v 14 ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು. \v 15 ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು. \s1 ಪೌಲ ಸೀಲರು ಸೆರೆಮನೆಯಲ್ಲಿ \p \v 16 ಒಂದು ದಿನ ನಾವು ಪ್ರಾರ್ಥನೆಯ ಸ್ಥಳಕ್ಕೆ ಹೋಗುತ್ತಿದ್ದೆವು, ಆಗ ಭವಿಷ್ಯ ಹೇಳುವ ದುರಾತ್ಮವುಳ್ಳ ದಾಸಿಯೊಬ್ಬಳು ನಮ್ಮನ್ನು ಭೇಟಿಯಾದಳು. ಭವಿಷ್ಯ ಹೇಳುವುದರಿಂದ ಆಕೆ ತನ್ನ ಯಜಮಾನನಿಗೆ ಬಹಳ ಹಣ ಸಂಪಾದಿಸುತ್ತಿದ್ದಳು. \v 17 ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು. \v 18 ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು. \p \v 19 ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು. \v 20 ಅವರನ್ನು ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಯೆಹೂದ್ಯರಾಗಿರುವ ಇವರು, ನಮ್ಮ ಪಟ್ಟಣದಲ್ಲಿ ಬಹು ಗಲಿಬಿಲಿ ಮಾಡುತ್ತಿದ್ದಾರೆ. \v 21 ರೋಮನವರಾದ ನಾವು ಸ್ವೀಕರಿಸಲೂ ಇಲ್ಲವೆ ಅನುಸರಿಸಲೂ ಆಗದಂಥಾ ಆಚಾರಗಳನ್ನು ಪ್ರಕಟಿಸುತ್ತಿದ್ದಾರೆ,” ಎಂದರು. \p \v 22 ಪೌಲ, ಸೀಲರಿಗೆ ವಿರೋಧವಾಗಿ ಜನಸಮೂಹವೆಲ್ಲಾ ಕೂಡಿಕೊಂಡಿತು. ನ್ಯಾಯಾಧಿಪತಿಗಳು ಪೌಲ, ಸೀಲರ ಬಟ್ಟೆಗಳನ್ನು ಕಿತ್ತುಹಾಕಿಸಿ ಛಡಿಗಳಿಂದ ಹೊಡೆಯಬೇಕೆಂದು ಆಜ್ಞಾಪಿಸಿದರು. \v 23 ಅವರನ್ನು ಛಡಿ ಏಟುಗಳಿಂದ ಬಹಳವಾಗಿ ಥಳಿಸಿ ಸೆರೆಮನೆಗೆ ಹಾಕಲಾಯಿತು. ಅವರನ್ನು ಜಾಗರೂಕತೆಯಿಂದ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಆಜ್ಞಾಪಿಸಲಾಯಿತು. \v 24 ಇಂಥಾ ಆಜ್ಞೆಯನ್ನು ಪಡೆದು, ಅವನು ಸೆರೆಮನೆಯ ಒಳಕೋಣೆಯಲ್ಲಿ ಅವರನ್ನು ಹಾಕಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಂಧಿಸಿದರು. \p \v 25 ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು. \v 26 ಆಗ ತಕ್ಷಣವೇ ಭೀಕರವಾದ ಭೂಕಂಪವಾಗಿ ಸೆರೆಮನೆಯ ಅಸ್ತಿವಾರವು ಕದಲಿತು. ಕೂಡಲೇ ಸೆರೆಮನೆಯ ಎಲ್ಲಾ ಬಾಗಿಲುಗಳು ತೆರೆದವು. ಎಲ್ಲರನ್ನು ಬಂಧಿಸಿದ್ದ ಸರಪಣಿಗಳು ಸಡಿಲಗೊಂಡವು. \v 27 ಸೆರೆಮನೆಯ ಅಧಿಕಾರಿ ಎಚ್ಚತ್ತುಕೊಂಡು, ಸೆರೆಮನೆಯ ಬಾಗಿಲುಗಳು ತೆರೆದಿರುವುದನ್ನು ಕಂಡು, ಸೆರೆಯಾಳುಗಳು ತಪ್ಪಿಸಿಕೊಂಡು ಹೋಗಿರಬಹುದೆಂದು ಭಾವಿಸಿ, ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು. \v 28 ಆದರೆ ಪೌಲನು, “ನೀನು ಹಾನಿ ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲಿಯೇ ಇದ್ದೇವೆ,” ಎಂದು ಗಟ್ಟಿಯಾಗಿ ಕೂಗಿದನು. \p \v 29 ಅವನು ದೀಪ ತರಬೇಕೆಂದು ಹೇಳಿ ಓಡಿಹೋಗಿ ಭಯದಿಂದ ನಡುಗುತ್ತಾ ಪೌಲ, ಸೀಲರ ಮುಂದೆ ಅಡ್ಡಬಿದ್ದನು. \v 30 ಆಮೇಲೆ ಅವರನ್ನು ಹೊರಗೆ ಕರೆದುಕೊಂಡು ಬಂದು, “ಮಹನೀಯರೇ, ನಾನು ರಕ್ಷಣೆ ಹೊಂದಲು ಏನು ಮಾಡಬೇಕು?” ಎಂದನು. \p \v 31 “ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು,” ಎಂದರು. \v 32 ಆಮೇಲೆ ಅವರು ಅವನಿಗೂ ಅವನ ಮನೆಯವರೆಲ್ಲರಿಗೂ ಕರ್ತ ಯೇಸುವಿನ ಸುವಾರ್ತೆಯನ್ನು ತಿಳಿಸಿದರು. \v 33 ಆ ಅಧಿಕಾರಿ, ರಾತ್ರಿಯ ಅದೇ ಗಳಿಗೆಯಲ್ಲಿ ಪೌಲ, ಸೀಲರನ್ನು ಕರೆದುಕೊಂಡು ಹೋಗಿ, ಅವರ ಗಾಯಗಳನ್ನು ತೊಳೆದನು. ಆಮೇಲೆ ಅವನೂ ಅವನ ಮನೆಯವರೆಲ್ಲರೂ ದೀಕ್ಷಾಸ್ನಾನವನ್ನು ಹೊಂದಿದರು. \v 34 ಸೆರೆಮನೆಯ ಅಧಿಕಾರಿ ಅವರನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅವರಿಗೆ ಊಟಬಡಿಸಿದನು ಮತ್ತು ಅವನೂ ತನ್ನ ಮನೆಯವರೆಲ್ಲರೂ ದೇವರಲ್ಲಿ ವಿಶ್ವಾಸವಿಟ್ಟಿದ್ದಕ್ಕಾಗಿ ಉಲ್ಲಾಸಗೊಂಡನು. \p \v 35 ಬೆಳಗಾದ ತರುವಾಯ ನ್ಯಾಯಾಧಿಪತಿಗಳು ತಮ್ಮ ಅಧಿಕಾರಿಗಳನ್ನು ಸೆರೆಮನೆಯ ಅಧಿಕಾರಿಯ ಬಳಿಗೆ ಕಳುಹಿಸಿ, “ಆ ಮನುಷ್ಯರನ್ನು ಬಿಡುಗಡೆಮಾಡು,” ಎಂದು ತಿಳಿಸಿದರು. \v 36 ಸೆರೆಮನೆಯ ಅಧಿಕಾರಿ ಪೌಲನಿಗೆ, “ನಿನ್ನನ್ನು ಸೀಲನನ್ನು ಬಿಟ್ಟುಬಿಡಲು ನ್ಯಾಯಾಧಿಪತಿಗಳು ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಬಹುದು,” ಎಂದು ಪ್ರಕಟಿಸಿದನು. \p \v 37 ಆದರೆ ಪೌಲನು ಅಧಿಕಾರಿಗಳಿಗೆ, “ನಾವು ರೋಮ್ ಪೌರರಾಗಿದ್ದು ಯಾವ ನ್ಯಾಯವಿಚಾರಣೆ ಮಾಡದೇ ಬಹಿರಂಗವಾಗಿ ನಮ್ಮನ್ನು ಛಡಿಯಿಂದ ಹೊಡೆಸಿ, ನಮ್ಮನ್ನು ಸೆರೆಮನೆಗೆ ತಳ್ಳಿದ್ದಾರೆ. ಈಗ ರಹಸ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೋ? ಇಲ್ಲ, ಅವರು ತಾವೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಲಿ,” ಎಂದನು. \p \v 38 ಅಧಿಕಾರಿಗಳು ಹೋಗಿ ಇದನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಪೌಲ, ಸೀಲರು ರೋಮ್ ಪೌರರೆಂದು ಕೇಳಿ ಅವರು ಗಾಬರಿಗೊಂಡರು. \v 39 ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. \v 40 ಪೌಲ, ಸೀಲರು ಸೆರೆಮನೆಯಿಂದ ಹೊರಗೆ ಬಂದ ಮೇಲೆ ಲುದ್ಯಳ ಮನೆಗೆ ಹೋಗಿ, ಅಲ್ಲಿ ಸಹೋದರರನ್ನು ಭೇಟಿಯಾಗಿ ಅವರನ್ನು ಪ್ರೋತ್ಸಾಹಿಸಿ, ಅಲ್ಲಿಂದ ಹೊರಟು ಹೋದರು. \c 17 \s1 ಥೆಸಲೋನಿಕದಲ್ಲಿ \p \v 1 ಅವರು ಅಂಫಿಪೊಲಿ ಮತ್ತು ಅಪೊಲೋನ್ಯ ಮಾರ್ಗವಾಗಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು. \v 2 ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ, \v 3 ಕ್ರಿಸ್ತ ಯೇಸು ಯಾತನೆಯನ್ನು ಅನುಭವಿಸಿ, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿತ್ತೆಂಬುದನ್ನು ವಿವರಿಸಿ, “ನಾನು ನಿಮಗೆ ಪ್ರಕಟಿಸುತ್ತಿರುವ ಯೇಸುವೇ ಆ ಕ್ರಿಸ್ತ,” ಎಂದು ಅವನು ಅವರ ಮುಂದೆ ಬಹಿರಂಗಪಡಿಸಿದನು. \v 4 ಅವರಲ್ಲಿ ಕೆಲವರು ದೇವಭಕ್ತಿಯುಳ್ಳ ಗ್ರೀಕರೂ ಪ್ರಮುಖರಾಗಿದ್ದ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಒಡಂಬಟ್ಟವರಾಗಿ ಪೌಲ, ಸೀಲರನ್ನು ಸೇರಿಕೊಂಡರು. \p \v 5 ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು. \v 6 ಆದರೆ ಅಲ್ಲಿ ಅವರಿಲ್ಲದಿರುವುದನ್ನು ಕಂಡು ಅವರು ಯಾಸೋನನನ್ನೂ ಕೆಲವು ಸಹೋದರರನ್ನೂ ಎಳೆದುಕೊಂಡು ಬಂದು ಪಟ್ಟಣದ ಅಧಿಕಾರಿಗಳ ಮುಂದೆ ನಿಲ್ಲಿಸಿ, “ಲೋಕವನ್ನು ತಲೆಕೆಳಗೆ ಮಾಡಿರುವ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ. \v 7 ಯಾಸೋನನು ಅವರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡಿದ್ದಾನೆ. ಅವರು ಯೇಸು ಎಂಬ ಬೇರೊಬ್ಬ ಅರಸನಿದ್ದಾನೆ ಎಂದು ಹೇಳುತ್ತಾ ಕೈಸರನ ವಿರುದ್ಧವಾಗಿ ನಡೆಯುತ್ತಾರೆ,” ಎಂದು ಗಟ್ಟಿಯಾಗಿ ಕೂಗಿದರು. \v 8 ಇದನ್ನು ಕೇಳಿದ ಜನರೂ ಪಟ್ಟಣದ ಅಧಿಕಾರಿಗಳೂ ಕಳವಳಗೊಂಡರು. \v 9 ಆಮೇಲೆ ಯಾಸೋನನಿಂದಲೂ ಮತ್ತಿತರರಿಂದಲೂ ಜಾಮೀನು ಪಡೆದು ಅವರನ್ನು ಬಿಡುಗಡೆ ಮಾಡಿದರು. \s1 ಬೆರೋಯದಲ್ಲಿ \p \v 10 ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. \v 11 ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು. \v 12 ಆದ್ದರಿಂದ ಅವರಲ್ಲಿ ಅನೇಕರು ವಿಶ್ವಾಸ ಹೊಂದಿದರು. ಅನೇಕ ಗ್ರೀಕ್ ಪುರುಷರೂ ಪ್ರಮುಖ ಸ್ತ್ರೀಯರೂ ವಿಶ್ವಾಸವನ್ನಿಟ್ಟರು. \p \v 13 ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು. \v 14 ಆದ್ದರಿಂದ ಸಹೋದರರು ಕೂಡಲೇ ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೆ ಬೆರೋಯದಲ್ಲಿಯೇ ಉಳಿದುಕೊಂಡರು. \v 15 ಪೌಲನನ್ನು ಬಿಟ್ಟು ಬರಲು ಹೋದವರು ಅವನ ಜೊತೆ ಅಥೇನೆ ಪಟ್ಟಣದವರೆಗೆ ಹೋದರು. ಸೀಲ ಮತ್ತು ತಿಮೊಥೆಯರು ಸಾಧ್ಯವಾದಷ್ಟು ಬೇಗನೇ ತನ್ನ ಬಳಿ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂತಿರುಗಿ ಹೋದರು. \s1 ಅಥೇನೆ ಪಟ್ಟಣದಲ್ಲಿ \p \v 16 ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು. \v 17 ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ದೇವಭಕ್ತಿಯುಳ್ಳ ಗ್ರೀಕರೊಂದಿಗೂ ಅಲ್ಲದೆ ಬಹಿರಂಗ ಸಂತೆಪೇಟೆ ಸ್ಥಳದಲ್ಲಿ ದಿನದಿನವೂ ಬರುತ್ತಿದ್ದ ಜನರೊಂದಿಗೂ ಚರ್ಚೆ ಮಾಡುತ್ತಿದ್ದನು. \v 18 ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು. \v 19 ಆಗ ಅವರು ಪೌಲನನ್ನು ಕರೆದುಕೊಂಡು ಅರಿಯೊಪಾಗ ಎಂಬ ಸ್ಥಳಕ್ಕೆ ಬಂದು, “ನೀನು ಹೇಳುತ್ತಿರುವ ಈ ಹೊಸ ಉಪದೇಶ ಏನೆಂಬುದನ್ನು ನಾವು ತಿಳಿದುಕೊಳ್ಳಬಹುದೋ? \v 20 ನೀನು ಕೆಲವು ವಿಚಿತ್ರವಾದ ವಿಚಾರಗಳನ್ನು ನಮಗೆ ಹೇಳುತ್ತಿರುವೆ. ಆದ್ದರಿಂದ ಅವುಗಳ ಅರ್ಥವನ್ನು ತಿಳಿಯಬಯಸುತ್ತೇವೆ,” ಎಂದರು. \v 21 ಅಲ್ಲಿ ನೆಲೆಸಿದ್ದ ಅಥೇನೆಯ ನಿವಾಸಿಗಳೂ ವಿದೇಶಿಯರೂ ಹೊಸ ಹೊಸ ವಿಷಯಗಳನ್ನು ಹೇಳುವುದಕ್ಕೂ ಕೇಳುವುದಕ್ಕೂ ಹೊರತು ಇತರ ವಿಷಯಗಳಲ್ಲಿ ಸಮಯ ಕಳೆಯುತ್ತಿರಲಿಲ್ಲ. \p \v 22 ಅರಿಯೊಪಾಗದ ಗುಂಪಿನ ಮುಂದೆ ನಿಂತು ಪೌಲನು ಹೀಗೆಂದನು: “ಅಥೇನೆಯ ಜನರೇ! ನೀವು ಪ್ರತಿಯೊಂದರಲ್ಲಿಯೂ ಹೇಗೆ ಬಹು ಧಾರ್ಮಿಕರಾಗಿದ್ದೀರಿ ಎಂಬುದನ್ನು ನಾನು ಕಂಡುಕೊಂಡಿದ್ದೇನೆ. \v 23 ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, \pc \sc ‘ತಿಳಿಯದ ದೇವರಿಗೆ’\sc* \m ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ. \p \v 24 “ಜಗತ್ತನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಲೋಕಗಳ ಅಧಿಪತಿಯಾಗಿದ್ದಾರೆ. ಅವರು ಕೈಗಳಿಂದ ಕಟ್ಟಿದ ದೇವಾಲಯಗಳಲ್ಲಿ ವಾಸಿಸುವವರಲ್ಲ. \v 25 ದೇವರಿಗೆ ಏನಾದರೂ ಅವಶ್ಯಕತೆಯಿರುವಂತೆ ಮಾನವ ಹಸ್ತಗಳ ಸೇವೆಯು ಅಗತ್ಯವಿರುವುದಿಲ್ಲ. ದೇವರೇ ಎಲ್ಲರಿಗೂ ಜೀವವನ್ನೂ ಉಸಿರನ್ನೂ ಪ್ರತಿಯೊಂದನ್ನೂ ದಯಪಾಲಿಸಿರುವುದರಿಂದ, \v 26 ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ. \v 27 ದೇವರು ನಮ್ಮಲ್ಲಿ ಯಾರಿಂದಲೂ ದೂರವಾಗಿಲ್ಲವಾದರೂ ದೇವರನ್ನು ನಾವು ಅಪೇಕ್ಷಿಸುವಂತೆ ನಾವು ದೇವರನ್ನು ಹುಡುಕಿ ಕಂಡುಕೊಳ್ಳುವಂತೆ ಹೀಗೆ ಮಾಡಿದರು. \v 28 ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’ \p \v 29 “ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು. \v 30 ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ. \v 31 ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.” \p \v 32 ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು. \v 33 ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು. \v 34 ಆದರೆ ಕೆಲವರು ಪೌಲನನ್ನು ಅಂಟಿಕೊಂಡು ದೇವರಲ್ಲಿ ವಿಶ್ವಾಸವನ್ನಿಟ್ಟರು. ಅವರಲ್ಲಿ ಅರಿಯೊಪಾಗದ ದಿಯೊನುಸ್ಯನು ಮತ್ತು ದಾಮರಿ ಎಂಬ ಹೆಸರಿನ ಒಬ್ಬ ಮಹಿಳೆ ಹಾಗೂ ಇನ್ನಿತರರೂ ಇದ್ದರು. \c 18 \s1 ಕೊರಿಂಥದಲ್ಲಿ \p \v 1 ಇದಾದನಂತರ, ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥ ಪಟ್ಟಣಕ್ಕೆ ಹೋದನು. \v 2 ಅಲ್ಲಿ ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅವನು ಪೊಂತ ಎಂಬ ಊರಿನ ನಿವಾಸಿ. ಎಲ್ಲಾ ಯೆಹೂದ್ಯರು ರೋಮ್ ಪಟ್ಟಣ ಬಿಟ್ಟು ಹೊರಟುಹೋಗಬೇಕೆಂದು ಚಕ್ರವರ್ತಿ ಕ್ಲೌದ್ಯನು ಆಜ್ಞೆ ಹೊರಡಿಸಿದ್ದರಿಂದ, ಅವನು ತನ್ನ ಹೆಂಡತಿ ಪ್ರಿಸ್ಕಿಲ್ಲಳೊಂದಿಗೆ ಇತ್ತೀಚೆಗೆ ಇಟಲಿಯನ್ನು ಬಿಟ್ಟು ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು. \v 3 ಅವರು ತನ್ನಂತೆಯೇ ಗುಡಾರಮಾಡುವ ಕೆಲಸದವರಾದ್ದರಿಂದ ಪೌಲನು ಅವರೊಂದಿಗಿದ್ದು ಅವರೊಂದಿಗೆ ಗುಡಾರ ಕೆಲಸ ಮಾಡುತ್ತಿದ್ದನು. \v 4 ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು. \p \v 5 ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು. \v 6 ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು. \p \v 7 ಆಮೇಲೆ ಪೌಲನು ಸಭಾಮಂದಿರವನ್ನು ಬಿಟ್ಟು ಹೊರಗೆ ಬಂದು ಪಕ್ಕದಲ್ಲಿಯೇ ಇದ್ದ ದೇವಭಕ್ತನಾದ ತೀತಯುಸ್ತ ಎಂಬುವನ ಮನೆಗೆ ಹೋದನು. \v 8 ಸಭಾಮಂದಿರದ ನಾಯಕ ಕ್ರಿಸ್ಪ ಎಂಬುವನು ತನ್ನ ಮನೆಯವರೆಲ್ಲರೊಂದಿಗೆ ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಟ್ಟನು. ಪೌಲನ ಬೋಧನೆ ಕೇಳಿದ ಕೊರಿಂಥದವರಲ್ಲಿ ಇನ್ನೂ ಅನೇಕರು ವಿಶ್ವಾಸವನ್ನಿಟ್ಟು ದೀಕ್ಷಾಸ್ನಾನ ಪಡೆದುಕೊಂಡರು. \p \v 9 ಒಂದು ರಾತ್ರಿ ಕರ್ತ ಯೇಸು ದರ್ಶನದಲ್ಲಿ ಪೌಲನೊಂದಿಗೆ ಮಾತನಾಡಿ: “ಭಯಪಡಬೇಡ, ಮಾತನಾಡುತ್ತಲೇ ಇರು, ಸುಮ್ಮನಿರಬೇಡ. \v 10 ನಾನೇ ನಿನ್ನೊಂದಿಗಿದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ನಿನಗೆ ಕೇಡನ್ನುಂಟುಮಾಡುವುದಿಲ್ಲ. ಏಕೆಂದರೆ ನನಗಾಗಿ ಈ ಪಟ್ಟಣದಲ್ಲಿ ಅನೇಕ ಜನರಿದ್ದಾರೆ,” ಎಂದರು. \v 11 ಆದ್ದರಿಂದ ಪೌಲನು ಅಲ್ಲಿ ಒಂದೂವರೆ ವರ್ಷವಿದ್ದು ಅವರಿಗೆ ದೇವರ ವಾಕ್ಯವನ್ನು ಬೋಧಿಸಿದನು. \p \v 12 ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು, \v 13 “ಮೋಶೆಯ ನಿಯಮಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಈ ಮನುಷ್ಯನು ಜನರನ್ನು ಪ್ರೇರೇಪಿಸುತ್ತಿದ್ದಾನೆ,” ಎಂದು ದೂರು ಹೇಳಿದರು. \p \v 14 ಪೌಲನು ಮಾತನಾಡಬೇಕೆಂದಿದ್ದಾಗ, ಗಲ್ಲಿಯೋನನು ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧ ಇಲ್ಲವೆ ದುಷ್ಕಾರ್ಯದ ಬಗ್ಗೆ ನಿಮಗೇನಾದರು ಹೇಳುವುದು ಇದ್ದರೆ, ಅದನ್ನು ಸಹನೆಯಿಂದ ಕೇಳುವುದು ನನಗೆ ಯೋಗ್ಯವಾದದ್ದು. \v 15 ಆದರೆ ವಾಕ್ಯ, ಹೆಸರುಗಳ ಮತ್ತು ನಿಮ್ಮ ನಿಯಮದ ವಿಷಯವಾಗಿರುವ ಪ್ರಶ್ನೆಗಳಾಗಿದ್ದರೆ, ಈ ಸಂಗತಿಯನ್ನು ನೀವೇ ಬಗೆಹರಿಸಿಕೊಳ್ಳಿ, ಅಂಥ ವಿಷಯಗಳಿಗೆ ನಾನು ನ್ಯಾಯಾಧೀಶನಾಗಿರಲಾರೆ,” ಎಂದನು. \v 16 ಹೀಗೆ ಅವನು ಅವರನ್ನು ನ್ಯಾಯಸ್ಥಾನದಿಂದ ಹೊರಗೆ ಕಳುಹಿಸಿಬಿಟ್ಟನು. \v 17 ಆದರೆ ಅವರು ಸಭಾಮಂದಿರದ ಅಧಿಕಾರಿ ಸೋಸ್ಥೆನನನ್ನು ಹಿಡಿದು ನ್ಯಾಯಸ್ಥಾನದ ಎದುರಿನಲ್ಲಿಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷಿಸಲಿಲ್ಲ. \s1 ಪ್ರಿಸ್ಕಿಲ್ಲ, ಅಕ್ವಿಲ ಮತ್ತು ಅಪೊಲ್ಲೋಸನು \p \v 18 ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು. \v 19 ಎಫೆಸಕ್ಕೆ ತಲುಪಿದಾಗ, ಪೌಲನು ಅವರನ್ನು ಅಲ್ಲಿಯೇ ಬಿಟ್ಟು ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚೆ ನಡೆಸಿದನು. \v 20 ಹೆಚ್ಚು ಸಮಯ ತಮ್ಮೊಂದಿಗಿರಬೇಕೆಂದು ಅವರು ಕೇಳಿದಾಗ, ಪೌಲನು ಅದಕ್ಕೆ ಸಮ್ಮತಿಸಲಿಲ್ಲ. \v 21 ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು. \v 22 ಅನಂತರ ಅವನು ಕೈಸರೈಯವನ್ನು ಸೇರಿದಾಗ, ಅಲ್ಲಿದ್ದ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೊರಟುಹೋದನು. \p \v 23 ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು. \p \v 24 ಅಲೆಕ್ಸಾಂದ್ರಿಯ ನಿವಾಸಿ ಅಪೊಲ್ಲೋಸ ಎಂಬ ಹೆಸರಿನ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನು ವಾಕ್ಚಾತುರ್ಯವುಳ್ಳವನೂ ಪವಿತ್ರ ವೇದದಲ್ಲಿ ಪ್ರವೀಣನೂ ಆಗಿದ್ದನು. \v 25 ಇವನು ಕರ್ತ ಯೇಸುವಿನ ಮಾರ್ಗದ ಬಗ್ಗೆ ಉಪದೇಶ ಹೊಂದಿದ್ದನು. ಯೋಹಾನನ ದೀಕ್ಷಾಸ್ನಾನವನ್ನು ಮಾತ್ರವೇ ತಿಳಿದವನಾಗಿದ್ದನು. ಇವನು ಆತ್ಮದಲ್ಲಿ ಉತ್ಸಾಹಭರಿತನಾಗಿ ಯೇಸುವಿನ ವಿಷಯದಲ್ಲಿ ಧೈರ್ಯವಾಗಿ ಬೋಧಿಸುತ್ತಿದ್ದನು. \v 26 ಇವನು ಸಭಾಮಂದಿರದಲ್ಲಿ ಧೈರ್ಯದಿಂದ ಬೋಧಿಸಲು ಪ್ರಾರಂಭಿಸಿದನು. ಆಗ ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನು ಮಾತನಾಡುವುದನ್ನು ಕೇಳಿ, ಅವನನ್ನು ತಮ್ಮ ಮನೆಗೆ ಆಮಂತ್ರಿಸಿದರು. ಅವರು ದೇವರ ಮಾರ್ಗವನ್ನು ಇನ್ನೂ ಹೆಚ್ಚಾದ ರೀತಿಯಲ್ಲಿ ಅಪೊಲ್ಲೋಸನಿಗೆ ವಿವರಿಸಿ ಹೇಳಿದರು. \p \v 27 ಅಪೊಲ್ಲೋಸನು ಅಖಾಯಕ್ಕೆ ಹೋಗಲು ಬಯಸಿದಾಗ, ಸಹೋದರರು ಅವನನ್ನು ಪ್ರೋತ್ಸಾಹಿಸಿ, ಅವನನ್ನು ಸ್ವೀಕರಿಸುವಂತೆ ಅಲ್ಲಿಯ ಶಿಷ್ಯರಿಗೆ ಪತ್ರವನ್ನು ಬರೆದುಕೊಟ್ಟರು. ಅವನು ಅಲ್ಲಿಗೆ ತಲುಪಿದಾಗ ದೇವರ ಕೃಪೆಯಿಂದ ವಿಶ್ವಾಸವಿಟ್ಟವರಿಗೆ ಅವನು ಬಹಳ ಸಹಾಯಮಾಡಿದನು. \v 28 ಯೇಸುವೇ ಬರತಕ್ಕ ಕ್ರಿಸ್ತ ಆಗಿದ್ದಾರೆ ಎಂದು ಪವಿತ್ರ ವೇದಗಳಿಂದ ಸಿದ್ಧಾಂತಪಡಿಸಿ ತೋರಿಸುತ್ತಾ ಅಲ್ಲಿಯ ಯೆಹೂದ್ಯರೊಂದಿಗೆ ಬಹಿರಂಗವಾಗಿ ಚರ್ಚೆ ಮಾಡಿದನು. \c 19 \s1 ಎಫೆಸದಲ್ಲಿ ಪೌಲನು \p \v 1 ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗಲೇ, ಕಾಲ್ನಡಿಗೆಯಾಗಿ ಪೌಲನು ಪ್ರಯಾಣಮಾಡಿ ಎಫೆಸ ಪಟ್ಟಣಕ್ಕೆ ಬಂದನು. ಅಲ್ಲಿ ಕೆಲವು ಶಿಷ್ಯರನ್ನು ಕಂಡು, \v 2 “ನೀವು ವಿಶ್ವಾಸವನ್ನಿಟ್ಟಾಗ ಪವಿತ್ರಾತ್ಮರನ್ನು ಪಡೆದುಕೊಂಡಿರೋ?” ಎಂದು ಪ್ರಶ್ನೆ ಮಾಡಿದನು. \p ಅದಕ್ಕೆ ಅವರು, “ಇಲ್ಲ, ಪವಿತ್ರಾತ್ಮ ಇದ್ದಾರೆಂಬುದನ್ನು ನಾವು ಕೇಳಿಯೇ ಇಲ್ಲ,” ಎಂದರು. \p \v 3 “ಹಾಗಾದರೆ ನೀವು ಯಾವ ದೀಕ್ಷಾಸ್ನಾನವನ್ನು ಪಡೆದುಕೊಂಡಿದ್ದೀರಿ?” ಎಂದು ಪೌಲನು ಕೇಳಿದಾಗ ಅವರು, \p “ಯೋಹಾನನ ದೀಕ್ಷಾಸ್ನಾನವನ್ನು,” ಎಂದರು. \p \v 4 ಅದಕ್ಕೆ ಪೌಲನು, “ಯೋಹಾನನ ದೀಕ್ಷಾಸ್ನಾನವು ಪಶ್ಚಾತ್ತಾಪದ ದೀಕ್ಷಾಸ್ನಾನವಾಗಿತ್ತು. ತನ್ನ ನಂತರ ಬರಲಿರುವ ಯೇಸುವಿನಲ್ಲಿ ವಿಶ್ವಾಸವನ್ನಿಡಬೇಕೆಂದು ಯೋಹಾನನು ಜನರಿಗೆ ಹೇಳಿದನು,” ಎಂದನು. \v 5 ಇದನ್ನು ಕೇಳಿದ ನಂತರ ಅವರು ಕರ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡರು. \v 6 ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು. \v 7 ಅವರು ಸುಮಾರು ಹನ್ನೆರಡು ಜನ ಪುರುಷರಿದ್ದರು. \p \v 8 ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು. \v 9 ಆದರೆ ಅವರಲ್ಲಿ ಕೆಲವರು ಕಠಿಣ ಹೃದಯದವರಾಗಿ; ಒಡಂಬಡದೆ ಈ ಮಾರ್ಗವನ್ನು ಬಹಿರಂಗವಾಗಿ ದೂಷಿಸಿದರು. ಆದ್ದರಿಂದ ಪೌಲನು ಅವರನ್ನು ಬಿಟ್ಟು, ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ಅನುದಿನವೂ ತುರನ್ನನ ತರ್ಕಶಾಲೆಯಲ್ಲಿ ಅವರೊಂದಿಗೆ ಚರ್ಚಿಸುತ್ತಾ ಬಂದನು. \v 10 ಇದು ಎರಡು ವರ್ಷಗಳ ಕಾಲ ಮುಂದುವರಿಯಿತು. ಇದರಿಂದ ಏಷ್ಯಾ ಪ್ರಾಂತದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ ಗ್ರೀಕರೂ ಕರ್ತ ಯೇಸುವಿನ ವಾಕ್ಯವನ್ನು ಕೇಳಿದರು. \p \v 11 ದೇವರು ಪೌಲನ ಮುಖಾಂತರ ಅಸಾಧಾರಣ ಅದ್ಭುತಗಳನ್ನು ಮಾಡುತ್ತಿದ್ದರು. \v 12 ಹೀಗೆ ಪೌಲನನ್ನು ಮುಟ್ಟಿದ ಕೈವಸ್ತ್ರಗಳನ್ನೂ ಉಡುಪುಗಳನ್ನೂ ತೆಗೆದುಕೊಂಡುಹೋಗಿ ರೋಗಿಗಳಿಗೆ ಮುಟ್ಟಿಸಿದಾಗ ಅವರು ರೋಗಗಳಿಂದ ವಾಸಿಯಾಗುತ್ತಿದ್ದರು ಹಾಗೂ ಅವರಲ್ಲಿಯ ದುರಾತ್ಮಗಳು ಬಿಟ್ಟು ಹೋಗುತ್ತಿದ್ದವು. \p \v 13 ಕೆಲವು ಯೆಹೂದ್ಯರು ದುರಾತ್ಮಗಳನ್ನು ಬಿಡಿಸಲು ಪ್ರಯತ್ನಿಸಿ, “ಪೌಲನು ಸಾರುತ್ತಿರುವ ಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಆಜ್ಞಾಪಿಸುತ್ತೇನೆ,” ಎಂದು ಅವರು ಕರ್ತ ಯೇಸುವಿನ ಹೆಸರನ್ನು ಬಳಸಲು ಪ್ರಯತ್ನಿಸಿದರು. \v 14 ಯೆಹೂದ್ಯ ಮುಖ್ಯಯಾಜಕ ಸ್ಕೇವ ಎಂಬುವನ ಏಳು ಜನ ಗಂಡು ಮಕ್ಕಳು ಈ ರೀತಿ ಮಾಡುತ್ತಿದ್ದರು. \v 15 ದುರಾತ್ಮವು ಅವರಿಗೆ ಉತ್ತರವಾಗಿ, “ಯೇಸುವನ್ನು ನಾನು ಬಲ್ಲೆ, ಪೌಲನೂ ನನಗೆ ಗೊತ್ತು, ಆದರೆ ನೀವು ಯಾರು?” ಎಂದು ಕೇಳಿ, \v 16 ದುರಾತ್ಮ ಪೀಡಿತ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅವರೆಲ್ಲರಿಗಿಂತಲೂ ಹೆಚ್ಚು ಬಲಗೊಂಡು ಅವರನ್ನು ಬಡಿದು ಗಾಯಗೊಳಿಸಲು, ಅವರು ನಗ್ನರಾಗಿಯೇ ಮನೆಬಿಟ್ಟು ಹೊರಗೆ ಓಡಿಹೋದರು. \p \v 17 ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರಿಗೂ ಗ್ರೀಕರಿಗೂ ಈ ವಿಷಯ ತಿಳಿದಾಗ, ಅವರೆಲ್ಲರೂ ಬಹಳ ಭಯಗೊಂಡರು. ಹೀಗೆ ಕರ್ತ ಯೇಸುವಿನ ಹೆಸರಿಗೆ ಅತ್ಯಂತ ಮಹಿಮೆಯಾಯಿತು. \v 18 ವಿಶ್ವಾಸವಿಟ್ಟವರಲ್ಲಿ ಅನೇಕರು ಅಲ್ಲಿಗೆ ಬಂದು ತಮ್ಮ ಕೃತ್ಯಗಳನ್ನು ಅರಿಕೆಮಾಡಿದರು. \v 19 ಮಾಟಮಂತ್ರ ಮಾಡುತ್ತಿದ್ದವರು ತಮ್ಮ ಗ್ರಂಥಗಳನ್ನು ತೆಗೆದುಕೊಂಡು ಬಂದು ಎಲ್ಲರ ಮುಂದೆ ಸುಟ್ಟು ಹಾಕಿದರು. ಅವುಗಳ ಒಟ್ಟು ಮೌಲ್ಯ ಐವತ್ತು ಸಾವಿರ ಬೆಳ್ಳಿನಾಣ್ಯಗಳಷ್ಟಾಯಿತು.\f + \fr 19:19 \fr*\ft ಒಂದು ದ್ರಹ್ಮ ನಾಣ್ಯದ ಮೌಲ್ಯವು ಒಂದು ದಿನದ ಕೂಲಿ\ft*\f* \v 20 ಹೀಗೆ ಕರ್ತ ಯೇಸುವಿನ ವಾಕ್ಯವು ವಿಸ್ತಾರವಾಗಿ ಹರಡುತ್ತಾ ಪ್ರಬಲವಾಯಿತು. \p \v 21 ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು. \v 22 ತನ್ನ ಇಬ್ಬರು ಸಹಾಯಕರಾದ ತಿಮೊಥೆ ಮತ್ತು ಎರಸ್ತನನ್ನು ಮಕೆದೋನ್ಯಕ್ಕೆ ಕಳುಹಿಸಿ ತಾನು ಇನ್ನೂ ಸ್ವಲ್ಪಕಾಲ ಏಷ್ಯಾ ಪ್ರಾಂತದಲ್ಲಿ ಇದ್ದನು. \s1 ಎಫೆಸದಲ್ಲಿ ದಂಗೆ \p \v 23 ಕ್ರಿಸ್ತ ಯೇಸುವಿನ ಮಾರ್ಗದ ವಿಷಯವಾಗಿ ಆ ಸಮಯದಲ್ಲಿ ದೊಡ್ಡ ಗಲಭೆ ಉಂಟಾಯಿತು. \v 24 ಏಕೆಂದರೆ ದೇಮೇತ್ರಿಯ ಎಂಬ ಒಬ್ಬ ಅಕ್ಕಸಾಲಿಗನು ಅರ್ತೆಮೀ ದೇವಿಯ ಬೆಳ್ಳಿಯ ಮೂರ್ತಿಗಳನ್ನು ಮಾಡುವವನಾಗಿದ್ದು, ಆ ಶಿಲ್ಪಿಗಳ ಹಣ ಸಂಪಾದನೆಗೆ ಬಹಳ ವ್ಯಾಪಾರವನ್ನು ಒದಗಿಸುತ್ತಿದ್ದನು. \v 25 ಅವನು ಶಿಲ್ಪಿಗಳನ್ನೂ ಆ ಕಸುಬಿಗೆ ಸಂಬಂಧಪಟ್ಟ ವ್ಯಾಪಾರಿಗಳನ್ನೂ ಒಟ್ಟಿಗೆ ಕೂಡಿಸಿ ಅವರಿಗೆ, “ಜನರೇ, ಈ ವೃತ್ತಿಯಿಂದ ನಮಗೆ ಉತ್ತಮ ಆದಾಯ ಬರುತ್ತಿದೆಯೆಂಬುದನ್ನು ನೀವು ತಿಳಿದಿರುವಿರಿ. \v 26 ಪೌಲನೆಂಬ ಈ ಮನುಷ್ಯನು ಎಫೆಸದಲ್ಲಿಯೂ ಇಡೀ ಏಷ್ಯಾ ಪ್ರಾಂತದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಮನವೊಲಿಸಿ, ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲ ಎಂದು ಹೇಳಿ, ಅವರನ್ನು ಮಾರ್ಪಡಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ಕೇಳಿದ್ದೀರಿ ಹಾಗೂ ಕಂಡಿದ್ದೀರಿ. \v 27 ಇದರಿಂದ ಈಗ ನಮ್ಮ ವೃತ್ತಿಗೆ ಅಪಾಯ ಬಂದಿರುವುದಲ್ಲದೆ ಅರ್ತೆಮೀ ಮಹಾದೇವಿಯ ಗುಡಿಯ ಬಗ್ಗೆಯೂ ಯೋಚಿಸಬೇಕು. ಏಕೆಂದರೆ ಏಷ್ಯಾದಲ್ಲಿಯೂ ಇಡೀ ಜಗತ್ತಿನಲ್ಲೆಲ್ಲಾ ಪೂಜಿಸುತ್ತಿರುವ ದೇವಿಯ ಮಹತ್ವವು ಸಹ ಕುಂದಿಹೋಗುವಂತಿದೆ,” ಎಂದನು. \p \v 28 ಈ ಮಾತುಗಳನ್ನು ಕೇಳಿ ಅವರು ಉಗ್ರರಾಗಿ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು. \v 29 ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು. \v 30 ಪೌಲನು ಜನರೆದುರಿಗೆ ಬರಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ. \v 31 ಪೌಲನ ಸ್ನೇಹಿತರಾಗಿದ್ದ ಏಷ್ಯಾ ಸೀಮೆಯ ಕೆಲವು ಅಧಿಕಾರಿಗಳೂ ಈ ಕ್ರೀಡಾಂಗಣದೊಳಗೆ ಹೋಗುವ ಸಾಹಸ ಮಾಡಬಾರದೆಂದು ವಿನಂತಿಸಿ ಅವನಿಗೆ ಸಂದೇಶ ಕಳುಹಿಸಿದರು. \p \v 32 ಜನಸಮೂಹ ಗಲಿಬಿಲಿಗೊಂಡಿತ್ತು. ಕೆಲವರು ಒಂದು ರೀತಿಯಾಗಿಯೂ ಇನ್ನು ಕೆಲವರು ಬೇರೊಂದು ವಿಧವಾಗಿಯೂ ಕೂಗುತ್ತಿದ್ದರು. ಬಹು ಪಾಲು ಜನರಿಗೆ ತಾವೇಕೆ ಅಲ್ಲಿಗೆ ಬಂದಿದ್ದೇವೆಂಬುದರ ಬಗ್ಗೆ ತಿಳಿದಿರಲೇ ಇಲ್ಲ. \v 33 ಆದರೆ ಯೆಹೂದ್ಯರು ಅಲೆಕ್ಸಾಂದ್ರ ಎಂಬುವನನ್ನು ಮುಂದಕ್ಕೆ ತಳ್ಳಿದರು. ಜನಸಮೂಹದಲ್ಲಿದ್ದ ಕೆಲವರು ಅವನಿಗೆ ವಿಷಯ ತಿಳಿಸಿದರು. ಆಗ ಅಲೆಕ್ಸಾಂದ್ರನು, ಜನರ ಎದುರಿನಲ್ಲಿ ವಾದಿಸಲಿಕ್ಕಾಗುವಂತೆ ಕೈಸನ್ನೆ ಮಾಡಿದನು. \v 34 ಆದರೆ ಅವನು ಯೆಹೂದ್ಯನೆಂದು ಜನರು ತಿಳಿದಾಗ, “ಎಫೆಸದ ಅರ್ತೆಮೀ ದೇವಿ ಮಹಾದೇವಿ!” ಎಂದು ಒಕ್ಕೊರಲಿನಿಂದ ಎರಡು ತಾಸುಗಳವರೆಗೆ ಆರ್ಭಟಿಸುತ್ತಲೇ ಇದ್ದರು. \p \v 35 ನಗರದ ಗುಮಾಸ್ತ ಜನಸಮೂಹವನ್ನು ಸುಮ್ಮನಿರಿಸಿ, “ಎಫೆಸದ ಜನರೇ, ಮಹಾ ಅರ್ತೆಮೀ ದೇವಿಯ ಮಂದಿರ ಹಾಗೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಯನ್ನು ಎಫೆಸ ಪಟ್ಟಣವು ಕಾಪಾಡುತ್ತಿದೆ ಎಂಬುದನ್ನು ತಿಳಿಯದಿರುವ ಮನುಷ್ಯನು ಇದ್ದಾನೆಯೇ? \v 36 ಈ ಸಂಗತಿಯನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ನೀವು ಸುಮ್ಮನಿರಬೇಕು. ಅವಸರದಿಂದ ಏನನ್ನೂ ಮಾಡಲು ಹೋಗಬಾರದು. \v 37 ನೀವು ತಂದಿರುವ ಈ ಜನರು ನಮ್ಮ ಗುಡಿ ಕಳ್ಳರಲ್ಲ; ನಮ್ಮ ದೇವತೆಯ ದೂಷಕರೂ ಅಲ್ಲ. \v 38 ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಸಹ ಶಿಲ್ಪಿಗಳಿಗೂ ಯಾವುದೇ ವ್ಯಕ್ತಿಯ ವಿರುದ್ಧ ಏನಾದರೂ ಆಪಾದನೆಗಳಿದ್ದರೆ ಅವರಿಗಾಗಿ ನ್ಯಾಯಾಲಯಗಳು ತೆರೆದಿವೆ. ರಾಜ್ಯಪಾಲರು ಇದ್ದಾರೆ; ಅವರ ಮುಂದೆ ದೂರುಗಳನ್ನು ಸಲ್ಲಿಸಲಿ. \v 39 ಆದರೆ ನೀವು ಇದಕ್ಕಿಂತ ಹೆಚ್ಚಾಗಿ ಬೇರೆ ಏನನ್ನಾದರೂ ತರುವುದಾದರೆ ಅದು ಕಾನೂನುಬದ್ಧ ಸಭೆಯಲ್ಲಿ ತೀರ್ಮಾನವಾಗಬೇಕು. \v 40 ಈಗ ಇದ್ದ ಪರಿಸ್ಥಿತಿಯಲ್ಲಿ ಇಂದಿನ ಘಟನೆಯಿಂದ ನಾವು ದಂಗೆಯೆದ್ದಿದ್ದೇವೆ ಎಂಬ ಅಪರಾಧ ನಮ್ಮ ಮೇಲೆ ಬರುವ ಆಸ್ಪದವಿದೆ. ಈ ಗಲಭೆಗೆ ಕಾರಣವೇನೆಂದು ವಿವರಿಸಲು ನಮಗೆ ಸಾಧ್ಯವಾಗುವುದಿಲ್ಲ. ಏಕೆಂದರೆ ಇದು ಕಾರಣವಿಲ್ಲದೇ ಎದ್ದ ದಂಗೆ,” ಎಂದನು. \v 41 ಇದನ್ನು ಹೇಳಿ ಅವನು ಜನಸಮೂಹವನ್ನು ಚದರಿಸಿಬಿಟ್ಟನು. \c 20 \s1 ಮಕೆದೋನ್ಯ ಮತ್ತು ಗ್ರೀಸ್ ಮಾರ್ಗವಾಗಿ ಪೌಲನ ಪ್ರಯಾಣ \p \v 1 ಗಲಭೆಯು ಶಾಂತಗೊಂಡ ನಂತರ ಪೌಲನು ಶಿಷ್ಯರನ್ನು ಕರೆಕಳುಹಿಸಿ ಅವರಿಗೆ ಧೈರ್ಯ ಹೇಳಿ, ಅವರನ್ನು ಬೀಳ್ಕೊಟ್ಟು ಮಕೆದೋನ್ಯಕ್ಕೆ ಪ್ರಯಾಣಮಾಡಿದನು. \v 2 ಆ ಪ್ರದೇಶದಲ್ಲೆಲ್ಲಾ ಜನರಿಗೆ ಅನೇಕ ಪ್ರೋತ್ಸಾಹದ ಮಾತುಗಳನ್ನು ಹೇಳುತ್ತಾ ಪ್ರಯಾಣಮಾಡಿ ಗ್ರೀಸ್ ತಲುಪಿದನು. \v 3 ಇಲ್ಲಿ ಮೂರು ತಿಂಗಳುಗಳ ಕಾಲ ಇದ್ದ ಮೇಲೆ, ಅವನು ಸಿರಿಯಕ್ಕೆ ಪ್ರಯಾಣ ಮಾಡಬೇಕೆಂದು ಯೋಚಿಸುತ್ತಿದ್ದಾಗ ಅವನಿಗೆ ವಿರೋಧವಾಗಿ ಯೆಹೂದ್ಯರು ಒಳಸಂಚು ಮಾಡಿದ್ದು ಅವನಿಗೆ ತಿಳಿದು ಬಂದದ್ದರಿಂದ ಮಕೆದೋನ್ಯ ಮಾರ್ಗವಾಗಿ ಹಿಂತಿರುಗಿ ಹೋಗಲು ನಿರ್ಣಯಿಸಿದನು. \v 4 ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು. \v 5 ಇವರೆಲ್ಲರೂ ಮುಂಚಿತವಾಗಿ ಹೋಗಿ ತ್ರೋವದಲ್ಲಿ ನಮಗಾಗಿ ಕಾದಿದ್ದರು. \v 6 ಹುಳಿಯಿಲ್ಲದ ರೊಟ್ಟಿಯ ಹಬ್ಬದ ನಂತರ ನಾವು ಫಿಲಿಪ್ಪಿಯಿಂದ ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ, ಐದು ದಿನಗಳ ತರುವಾಯ ತ್ರೋವದಲ್ಲಿದ್ದ ಇತರರೊಂದಿಗೆ ಸೇರಿ, ಅಲ್ಲಿ ಏಳು ದಿನ ಇದ್ದೆವು. \s1 ತ್ರೋವದಲ್ಲಿ ಯೂತಿಖನನ್ನು ಮರಣದಿಂದ ಎಬ್ಬಿಸಿದ್ದು \p \v 7 ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು. \v 8 ನಾವು ಸಭೆ ಸೇರಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು. \v 9 ಒಂದು ಕಿಟಿಕಿಯಲ್ಲಿ ಯೂತಿಖ ಎಂಬ ಹೆಸರಿನ ಒಬ್ಬ ಯುವಕನು ಕುಳಿತುಕೊಂಡಿದ್ದನು. ಪೌಲನು ಬಹಳ ಹೊತ್ತು ಬೋಧಿಸುತ್ತಲೇ ಇದ್ದುದರಿಂದ ಅವನಿಗೆ ಗಾಢನಿದ್ರೆ ಹತ್ತಿತು. ನಿದ್ರಿಸುತ್ತಿದ್ದ ಅವನು ಮೂರನೇ ಅಂತಸ್ತಿನಿಂದ ಕೆಳಕ್ಕೆ ಬಿದ್ದನು. ಅವನನ್ನು ಎತ್ತಿಕೊಂಡಾಗ ಅವನು ಸತ್ತೇ ಹೋಗಿದ್ದನು. \v 10 ಆದರೆ ಪೌಲನು ಕೆಳಗೆ ಹೋಗಿ, ಆ ಯುವಕನನ್ನು ತಬ್ಬಿಕೊಂಡು, “ಗಾಬರಿಗೊಳ್ಳಬೇಡಿ, ಅವನ ಜೀವ ಅವನಲ್ಲಿದೆ,” ಎಂದನು. \v 11 ಅನಂತರ ಪೌಲನು ಮೇಲಂತಸ್ತಿಗೆ ಹೋಗಿ ವಿಶ್ವಾಸಿಗಳೊಂದಿಗೆ ರೊಟ್ಟಿ ಮುರಿದು ಊಟಮಾಡಿ, ಬೆಳಗಾಗುವವರೆಗೆ ಅವರೊಡನೆ ಮಾತನಾಡಿ, ಅಲ್ಲಿಂದ ಹೊರಟನು. \v 12 ಜೀವ ಹೊಂದಿದ ಆ ಯುವಕನನ್ನು ಜನರು ಮನೆಗೆ ಕರೆದುಕೊಂಡು ಹೋದರು. ಅವರಿಗೆ ಅಪಾರ ಸಾಂತ್ವನ ದೊರೆಯಿತು. \s1 ಎಫೆಸದ ಹಿರಿಯರಿಗೆ ಪೌಲನ ಬೀಳ್ಕೊಡುವಿಕೆ \p \v 13 ಮೊದಲು ನಾವು ನೌಕೆ ಇದ್ದ ಸ್ಥಳಕ್ಕೆ ಹೋಗಿ ಅಸ್ಸೊಸಿ ಎಂಬಲ್ಲಿಗೆ ಸಮುದ್ರ ಪ್ರಯಾಣಮಾಡಿದೆವು. ಅಲ್ಲಿ ಪೌಲನು ಬಂದು ನಮ್ಮೊಂದಿಗೆ ನೌಕೆಯಲ್ಲಿ ಪ್ರಯಾಣ ಮಾಡಬೇಕಿತ್ತು. ಅಲ್ಲಿಗೆ ಕಾಲ್ನಡಿಗೆಯಾಗಿ ಹೋಗಬೇಕಾದ್ದರಿಂದ ಅವನು ಈ ಏರ್ಪಾಡು ಮಾಡಿದನು. \v 14 ಅಸ್ಸೊಸಿನಲ್ಲಿ ಪೌಲನು ನಮ್ಮನ್ನು ಭೇಟಿಯಾದಾಗ, ಅವನನ್ನು ಕರೆದುಕೊಂಡು ಮಿತಿಲೇನೆಗೆ ಹೋದೆವು. \v 15 ನಾವು ಮರುದಿನ ಅಲ್ಲಿಂದ ಪ್ರಯಾಣ ಮುಂದುವರೆಸಿ ಖೀಯೊಸ್ ದ್ವೀಪವನ್ನು ಸಮೀಪಿಸಿದೆವು. ಮರುದಿನ ಸಾಮೊಸನ್ನು ತಲುಪಿದೆವು. ಅನಂತರ ಮಾರನೆಯ ದಿನ ಮಿಲೇತನ್ನು ಸೇರಿದೆವು. \v 16 ಸಾಧ್ಯವಾದರೆ, ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬಕ್ಕೆ\f + \fr 20:16 \fr*\ft ಪಸ್ಕಹಬ್ಬ ಆಚರಿಸಿದ ಐವತ್ತು ದಿನಗಳ ನಂತರ ಬರುತ್ತಿದ್ದ ಯೆಹೂದ್ಯರ ಹಬ್ಬ\ft*\f* ಯೆರೂಸಲೇಮನ್ನು ತಲುಪಬೇಕೆಂಬ ಅವಸರ ಪೌಲನಿಗಿದ್ದುದ್ದರಿಂದ, ಏಷ್ಯಾ ಪ್ರಾಂತದಲ್ಲಿ ಕಾಲ ಕಳೆಯುವುದನ್ನು ತಪ್ಪಿಸಿ ಎಫೆಸವನ್ನು ದಾಟಿ ಹೋಗಬೇಕೆಂದು ನಿರ್ಧರಿಸಿದ್ದನು. \p \v 17 ಮಿಲೇತದಿಂದ, ಪೌಲನು ಎಫೆಸಕ್ಕೆ ಸಂದೇಶ ಕಳುಹಿಸಿ, ಅಲ್ಲಿಯ ಸಭೆಯ ಹಿರಿಯರು ಬರಬೇಕೆಂದು ತಿಳಿಸಿದನು. \v 18 ಅವರು ಬಂದ ಮೇಲೆ, ಪೌಲನು ಅವರಿಗೆ ಹೀಗೆಂದನು: “ನಾನು ಏಷ್ಯಾ ಪ್ರಾಂತಕ್ಕೆ ಬಂದ ಪ್ರಥಮ ದಿನದಿಂದ ನಿಮ್ಮೊಂದಿಗಿದ್ದು ಪೂರ್ತಿ ಸಮಯ ಹೇಗೆ ಕಳೆದನೆಂಬುದನ್ನು ನೀವು ಅರಿತಿದ್ದೀರಿ. \v 19 ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು. \v 20 ನಿಮಗೆ ಹಿತಕರವಾದುದ್ದೆಲ್ಲವನ್ನೂ ಬೋಧಿಸಲು ನಾನು ಹಿಂಜರಿಯಲಿಲ್ಲ. ಬಹಿರಂಗದಲ್ಲಿಯೂ ಮನೆಮನೆಗಳಲ್ಲಿಯೂ ನಾನು ನಿಮಗೆ ಬೋಧಿಸಿದ್ದೇನೆ. \v 21 ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ. \p \v 22 “ಈಗಲಾದರೋ, ನಾನು ಪವಿತ್ರಾತ್ಮ ಪ್ರೇರಿತನಾಗಿ ಯೆರೂಸಲೇಮಿನಲ್ಲಿ ನನಗೇನಾಗುವುದೋ ಎಂಬುದನ್ನು ತಿಳಿಯದೆ, ಅಲ್ಲಿಗೆ ಹೋಗುತ್ತಿದ್ದೇನೆ. \v 23 ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ. \v 24 ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ. \p \v 25 “ನಿಮ್ಮ ಮಧ್ಯದಲ್ಲಿ ನಾನು ದೇವರ ರಾಜ್ಯದ ಬಗ್ಗೆ ಬೋಧಿಸುತ್ತಾ ಇದ್ದೆನು. ನಿಮ್ಮಲ್ಲಿ ಯಾರೂ ನನ್ನ ಮುಖವನ್ನು ಇನ್ನೊಮ್ಮೆ ಕಾಣಲಾರಿರಿ ಎಂದು ನಾನು ಬಲ್ಲೆನು. \v 26 ಆದಕಾರಣ ನಾನು ಎಲ್ಲಾ ಮನುಷ್ಯರ ರಕ್ತದ ಹೊಣೆಯಿಂದ ವಿಮುಕ್ತನಾಗಿದ್ದೇನೆ ಎಂದು ಈ ದಿನ ಸಾಕ್ಷಿಕೊಡುತ್ತೇನೆ. \v 27 ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ. \v 28 ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ. \v 29 ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು. \v 30 ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು. \v 31 ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ. \p \v 32 “ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು. \v 33 ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ. \v 34 ನನ್ನ ಹಸ್ತಗಳೇ ನನ್ನ ಅಗತ್ಯಗಳನ್ನೂ ನನ್ನೊಂದಿಗಿದ್ದವರ ಅಗತ್ಯಗಳನ್ನೂ ಪೂರೈಸಿದವೆಂಬುದನ್ನು ನೀವು ಬಲ್ಲವರಾಗಿದ್ದೀರಿ. \v 35 ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು. \p \v 36 ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು. \v 37 ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು. \v 38 “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ,” ಎಂದು ಅವನು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ದುಃಖಗೊಂಡು, ಅವನೊಂದಿಗೆ ನೌಕೆಯವರೆಗೆ ಹೋದರು. \c 21 \s1 ಯೆರೂಸಲೇಮಿಗೆ \p \v 1 ನಾವು ಅವರನ್ನು ಅಗಲಿದ ನಂತರ, ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ ನೇರವಾಗಿ ಕೋಸ್ ದ್ವೀಪಕ್ಕೆ ಹೋದೆವು. ಮರುದಿನ ರೋದ ಎಂಬಲ್ಲಿಗೆ ಹೋಗಿ ಅಲ್ಲಿಂದ ಪತರಕ್ಕೆ ಬಂದೆವು. \v 2 ಅಲ್ಲಿ ಫೊಯಿನಿಕೆಗೆ ಹೋಗುವ ನೌಕೆಯನ್ನು ಕಂಡು, ಅದನ್ನೇರಿ ಪ್ರಯಾಣ ಮುಂದುವರಿಸಿದೆವು. \v 3 ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು. \v 4 ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಅವರೊಂದಿಗೆ ಏಳು ದಿನ ಇದ್ದೆವು. ಪೌಲನು ಯೆರೂಸಲೇಮಿಗೆ ಹೋಗಬಾರದೆಂದು ಅವರು ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದರು. \v 5 ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು. \v 6 ಪರಸ್ಪರ ಬೀಳ್ಕೊಡುಗೆಯಾದ ನಂತರ, ನಾವು ನೌಕೆಯನ್ನೇರಿದೆವು. ಅವರು ತಮ್ಮ ಮನೆಗೆ ಹೊರಟು ಹೋದರು. \p \v 7 ಟೈರ್ ಪಟ್ಟಣದಿಂದ ನಮ್ಮ ಪ್ರಯಾಣ ಮುಂದುವರಿಸಿ ಪ್ತೊಲೆಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿಯ ಸಹೋದರರನ್ನು ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು. \v 8 ಮರುದಿನ ಹೊರಟು ಕೈಸರೈಯ ಪಟ್ಟಣವನ್ನು ತಲುಪಿದೆವು. ಅಲ್ಲಿ ಏಳು ಜನರಲ್ಲಿ ಒಬ್ಬನಾದ, ಫಿಲಿಪ್ಪನೆಂಬ ಸುವಾರ್ತಿಕನ ಮನೆಯಲ್ಲಿ ತಂಗಿದೆವು. \v 9 ಅವನಿಗೆ ಅವಿವಾಹಿತರಾದ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಪ್ರವಾದಿಸುವವರಾಗಿದ್ದರು. \p \v 10 ನಾವು ಅಲ್ಲಿ ಕೆಲವು ದಿನ ಇದ್ದ ತರುವಾಯ, ಅಗಬ ಎಂಬ ಹೆಸರಿನ ಪ್ರವಾದಿ ಯೂದಾಯದಿಂದ ಬಂದನು. \v 11 ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು. \p \v 12 ಇದನ್ನು ನಾವು ಕೇಳಿದಾಗ, ನಾವೂ ಅಲ್ಲಿಯ ಜನರೂ ಯೆರೂಸಲೇಮಿಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು. \v 13 ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು. \v 14 ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು. \p \v 15 ಇದಾದನಂತರ ನಾವು ಸಿದ್ಧರಾಗಿ ಯೆರೂಸಲೇಮಿಗೆ ಹೋದೆವು. \v 16 ಕೈಸರೈಯದಿಂದ ಕೆಲವು ಶಿಷ್ಯರು ನಮ್ಮೊಂದಿಗೆ ಬಂದು, ಮ್ನಾಸೋನ ಎಂಬುವನ ಮನೆಗೆ ನಾವು ಇಳಿದುಕೊಳ್ಳುವಂತೆ ಕರೆದುಕೊಂಡು ಹೋದರು. ಅವನು ಸೈಪ್ರಸ್ ದಿಂದ ಬಂದ ಪ್ರಥಮ ಶಿಷ್ಯರಲ್ಲಿ ಒಬ್ಬನಾಗಿದ್ದನು. \s1 ಪೌಲನು ಯೆರೂಸಲೇಮನ್ನು ತಲುಪಿದ್ದು \p \v 17 ನಾವು ಯೆರೂಸಲೇಮನ್ನು ತಲುಪಿದಾಗ, ಸಹೋದರರು ನಮ್ಮನ್ನು ಸಂತೋಷದಿಂದ ಸ್ವೀಕರಿಸಿದರು. \v 18 ಮರುದಿನ ನಾವೆಲ್ಲರೂ ಪೌಲನೊಂದಿಗೆ ಯಾಕೋಬನನ್ನು ನೋಡಲು ಹೋದೆವು. ಅಲ್ಲಿ ಎಲ್ಲಾ ಸಭೆಹಿರಿಯರೂ ಇದ್ದರು. \v 19 ಪೌಲನು ಅವರನ್ನು ವಂದಿಸಿ, ತನ್ನ ಸೇವೆಯ ಮೂಲಕ ದೇವರು ಯೆಹೂದ್ಯರಲ್ಲದವರ ಮಧ್ಯದಲ್ಲಿ ಮಾಡಿದ ಕಾರ್ಯಗಳನ್ನು ವಿವರಿಸಿದನು. \p \v 20 ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು. \v 21 ನೀನು ಯೆಹೂದ್ಯರಲ್ಲದವರ ಮಧ್ಯದಲ್ಲಿ ವಾಸಿಸುತ್ತಿರುವ ಯೆಹೂದ್ಯರಿಗೆ, ‘ನೀವು ಮೋಶೆಯ ನಿಯಮವನ್ನು ಅನುಸರಿಸಬೇಡಿರಿ, ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಬೇಡಿರಿ,’ ಎಂದು ಬೋಧಿಸುವುದಾಗಿ ನಿನ್ನ ವಿಷಯದಲ್ಲಿ ಅವರಿಗೆ ತಿಳಿದು ಬಂದಿದೆ. \v 22 ಹೀಗಿರುವಲ್ಲಿ ನಾವೇನು ಮಾಡೋಣ? ನೀನು ಇಲ್ಲಿಗೆ ಬಂದಿರುವ ವಿಷಯವೂ ಅವರಿಗೆ ಗೊತ್ತಾಗುವುದು. \v 23 ಆದ್ದರಿಂದ ನಾವು ನಿನಗೆ ಹೇಳುವಂತೆ ಮಾಡು, ಹರಕೆ ಹೊತ್ತ ನಾಲ್ವರು ನಮ್ಮಲ್ಲಿ ಇದ್ದಾರೆ. \v 24 ನೀನು ಇವರನ್ನು ಕರೆದುಕೊಂಡು ಹೋಗಿ, ಅವರೊಂದಿಗೆ ನಿನ್ನನ್ನು ಶುದ್ಧಿಮಾಡಿಕೊಂಡು, ಅವರು ತಮ್ಮ ಕ್ಷೌರ ಮಾಡಿಸಿಕೊಳ್ಳುವ ಖರ್ಚನ್ನು ನೀನೇ ಪೂರೈಸು. ಆಗ ನಿನ್ನ ವಿಷಯದಲ್ಲಿ ಕೇಳಿರುವ ಸಂಗತಿಗಳು ನಿಜವಲ್ಲ ಮತ್ತು ನೀನು ಮೋಶೆಯ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತೀ ಎಂದು ಎಲ್ಲರಿಗೂ ತಿಳಿದುಬರುವುದು. \v 25 ಯೆಹೂದ್ಯರಲ್ಲದವರಿಂದ ಬಂದ ವಿಶ್ವಾಸಿಗಳಿಗಾದರೋ, ಅವರು ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕೆಂದು ನಾವು ಬರೆದ ನಮ್ಮ ತೀರ್ಮಾನವನ್ನು ತಿಳಿಸಿದ್ದೇವೆ,” ಎಂದರು. \p \v 26 ಮರುದಿನ ಪೌಲನು ಆ ನಾಲ್ವರೊಂದಿಗೆ ತನ್ನನ್ನು ಶುದ್ಧೀಕರಿಸಿಕೊಂಡನು. ಅನಂತರ ಶುದ್ಧಾಚಾರ ಮುಗಿಯುವ ದಿನಗಳ ಬಗ್ಗೆ ತಿಳಿಸುವುದಕ್ಕಾಗಿ ದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಅರ್ಪಣೆಯು ಆಗಬೇಕೆಂಬುದರ ಬಗ್ಗೆಯೂ ಸೂಚಿಸಿದನು. \s1 ಪೌಲನ ಬಂಧನ \p \v 27 ಏಳು ದಿನಗಳ ಅವಧಿ ಮುಗಿಯುತ್ತಿದ್ದಾಗ, ಏಷ್ಯಾ ಪ್ರಾಂತದ ಕೆಲವು ಯೆಹೂದ್ಯ ಜನರು ದೇವಾಲಯದಲ್ಲಿ ಪೌಲನನ್ನು ಕಂಡರು. ಅವರು ಇಡೀ ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು. \v 28 “ಇಸ್ರಾಯೇಲರೇ, ನಮಗೆ ಸಹಾಯಮಾಡಿರಿ! ನಮ್ಮ ಜನರಿಗೂ ನಮ್ಮ ನಿಯಮಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲಾ ಜನರಿಗೆ ಬೋಧಿಸುತ್ತಿರುವ ಮನುಷ್ಯನು ಇವನೇ. ಅಷ್ಟೇ ಅಲ್ಲ, ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪವಿತ್ರ ಸ್ಥಳವನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿ ಹೇಳಿದರು. \v 29 ಅವರು ಮೊದಲು ಪಟ್ಟಣದಲ್ಲಿ ಪೌಲನೊಂದಿಗೆ ಎಫೆಸದ ತ್ರೊಫಿಮ ಎಂಬವನು ಇದ್ದುದನ್ನು ಕಂಡಿದ್ದರಿಂದ, ಪೌಲನು ಈಗ ಅವನನ್ನು ದೇವಾಲಯದೊಳಗೆ ಕರೆದುಕೊಂಡು ಬಂದಿರಬಹುದೆಂದು ಅವರು ಭಾವಿಸಿದರು. \p \v 30 ಇಡೀ ಪಟ್ಟಣದಲ್ಲೇ ಕೋಲಾಹಲವೆದ್ದಿತು. ಜನರು ಎಲ್ಲಾ ದಿಕ್ಕುಗಳಿಂದ ಓಡೋಡುತ್ತಾ ಬಂದು. ಪೌಲನನ್ನು ಹಿಡಿದುಕೊಂಡು ದೇವಾಲಯದೊಳಗಿಂದ ಹೊರಗೆಳೆದುಕೊಂಡು ಹೋದರು. ಕೂಡಲೇ ದ್ವಾರಗಳನ್ನು ಮುಚ್ಚಿಬಿಟ್ಟರು. \v 31 ಅವರು ಪೌಲನನ್ನು ಕೊಲ್ಲುವುದಕ್ಕೆ ಪ್ರಯತ್ನಿಸುತ್ತಿದ್ದಾಗ, ಯೆರೂಸಲೇಮ ಪಟ್ಟಣದಲ್ಲೆಲ್ಲಾ ಗೊಂದಲವೆದ್ದಿದೆ ಎಂಬ ಸುದ್ದಿ ಅಲ್ಲಿದ್ದ ರೋಮ್ ಸಹಸ್ರಾಧಿಪತಿಗೆ ತಲುಪಿತು. \v 32 ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ಕರೆದುಕೊಂಡು ಜನಸಮೂಹದ ಬಳಿಗೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಅವನ ಸೈನಿಕರನ್ನೂ ಕಂಡಾಗ ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು. \p \v 33 ಸಹಸ್ರಾಧಿಪತಿ ಅಲ್ಲಿಗೆ ಬಂದು ಪೌಲನನ್ನು ಬಂಧಿಸಿ, ಅವನನ್ನು ಎರಡು ಸರಪಣಿಗಳಿಂದ ಕಟ್ಟಬೇಕೆಂದು ಆಜ್ಞಾಪಿಸಿದನು. ಅನಂತರ “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು. \v 34 ಜನಸಮೂಹದಲ್ಲಿದ್ದ ಇತರರು ವಿವಿಧ ರೀತಿಯಿಂದ ಕೂಗುತ್ತಿರಲು ಗಲಭೆಯ ನಿಮಿತ್ತ ಸಹಸ್ರಾಧಿಪತಿಗೆ ಸತ್ಯಾಂಶ ತಿಳಿಯಲಾಗಲಿಲ್ಲ. ಆದ್ದರಿಂದ ಪೌಲನನ್ನು ಸೈನಿಕ ಪಾಳ್ಯದೊಳಗೆ ತೆಗೆದುಕೊಂಡು ಹೋಗಲು ಆಜ್ಞಾಪಿಸಿದನು. \v 35 ಪೌಲನನ್ನು ಮೆಟ್ಟಲುಗಳವರೆಗೆ ತೆಗೆದುಕೊಂಡು ಹೋದಾಗ ಜನರ ರೋಷ ಇನ್ನೂ ಬಲವಾದುದ್ದರಿಂದ ಸೈನಿಕರು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು. \v 36 ಏಕೆಂದರೆ ಮುನ್ನುಗ್ಗುತ್ತಿದ್ದ ಜನರ ಗುಂಪು, “ಅವನನ್ನು ಕೊಲ್ಲಿರಿ!” ಎಂದು ಆರ್ಭಟಿಸುತ್ತಿತ್ತು. \s1 ಜನಸಮೂಹಕ್ಕೆ ಪೌಲನ ಪ್ರತಿವಾದ \p \v 37 ಸೈನಿಕರು ಪೌಲನನ್ನು ಅವರ ಪಾಳ್ಯದೊಳಗೆ ಒಯ್ಯುತ್ತಿದ್ದಾಗ, ಅವನು ಸಹಸ್ರಾಧಿಪತಿಗೆ, “ನಾನು ನಿನ್ನೊಡನೆ ಸ್ವಲ್ಪ ಮಾತನಾಡುವುದಕ್ಕೆ ಅಪ್ಪಣೆಯಾದೀತೇ?” ಎಂದು ಕೇಳಲು, ಅದಕ್ಕೆ ಅವನು, \p “ನಿನಗೆ ಗ್ರೀಕ್ ಭಾಷೆಯೂ ಗೊತ್ತಿದೆಯೋ?” \v 38 “ಹಾಗಾದರೆ ಕೆಲವು ಸಮಯದ ಹಿಂದೆ ದಂಗೆಯೆಬ್ಬಿಸಿ ನಾಲ್ಕು ಸಾವಿರ ಉಗ್ರಗಾಮಿಗಳನ್ನು ಅರಣ್ಯಕ್ಕೆ ಕರೆದುಕೊಂಡುಹೋದ ಈಜಿಪ್ಟಿನವನು ನೀನಲ್ಲವೋ?” ಎಂದನು. \p \v 39 ಅದಕ್ಕೆ ಪೌಲನು, “ನಾನೊಬ್ಬ ಯೆಹೂದ್ಯನು, ಕಿಲಿಕ್ಯದ ತಾರ್ಸದವನು, ಪ್ರಸಿದ್ಧ ಪಟ್ಟಣದ ನಾಗರಿಕನು. ದಯವಿಟ್ಟು ಜನರೊಂದಿಗೆ ಮಾತನಾಡಲು ನನಗೆ ಅವಕಾಶ ಕೊಡಬೇಕು,” ಎಂದು ಸಹಸ್ರಾಧಿಪತಿಯನ್ನು ಬೇಡಿಕೊಂಡನು. \p \v 40 ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು: \c 22 \nb \v 1 “ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು. \p \v 2 ಅವನು ತಮ್ಮೊಂದಿಗೆ ಹೀಬ್ರೂ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿದಾಗ ಅವರು ಮತ್ತಷ್ಟು ನಿಶ್ಶಬ್ದರಾದರು. \p ಆಗ ಪೌಲನು: \v 3 “ನಾನು ಕಿಲಿಕ್ಯದ ತಾರ್ಸದಲ್ಲಿ ಜನಿಸಿದ ಯೆಹೂದ್ಯನು, ಈ ಪಟ್ಟಣದಲ್ಲಿಯೇ ಬೆಳೆದವನು, ಗಮಲಿಯೇಲನ ಪಾದ ಸನ್ನಿಧಿಯಲ್ಲಿ ನಮ್ಮ ಪಿತೃಗಳ ನಿಯಮವನ್ನು ಸೂಕ್ಷ್ಮವಾಗಿ ಅಭ್ಯಾಸ ಮಾಡಿದೆ. ದೇವರ ವಿಷಯದಲ್ಲಿ, ಇಂದು ನೀವೆಲ್ಲರೂ ಇರುವಂತೆಯೇ ನಾನೂ ಆಸಕ್ತಿವುಳ್ಳವನಾಗಿದ್ದೆನು. \v 4 ಈ ಮಾರ್ಗದವರನ್ನು ಸಾಯುವಷ್ಟು ಹಿಂಸಿಸಿದೆನು. ಸ್ತ್ರೀಪುರುಷರೆನ್ನದೆ ಅವರನ್ನು ಬಂಧಿಸಿ ಅವರನ್ನು ಸೆರೆಮನೆಗೆ ಹಾಕಿಸುತ್ತಿದ್ದೆನು, \v 5 ಮಹಾಯಾಜಕನೂ ಹಿರಿಸಭೆಯವರೆಲ್ಲರೂ ಇದಕ್ಕೆ ಸಾಕ್ಷಿ. ಅವರಿಂದಲೇ ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ದಂಡಿಸುವುದಕ್ಕಾಗಿಯೂ ಸೆರೆಹಿಡಿದು ಯೆರೂಸಲೇಮಿಗೆ ತರುವುದಕ್ಕಾಗಿಯೂ ದಮಸ್ಕಕ್ಕೆ ಪ್ರಯಾಣಮಾಡಿದೆನು. \p \v 6 “ಸುಮಾರು ಮಧ್ಯಾಹ್ನದ ಸಮಯಕ್ಕೆ ನಾನು ದಮಸ್ಕದ ಹತ್ತಿರದಲ್ಲಿದ್ದೆನು. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾ ಬೆಳಕು ನನ್ನ ಸುತ್ತಲೂ ಹೊಳೆಯಿತು. \v 7 ನಾನು ನೆಲದ ಮೇಲೆ ಬಿದ್ದೆನು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?’ ಎಂದು ಒಂದು ಸ್ವರವು ನನಗೆ ಹೇಳುವುದನ್ನು ಕೇಳಿಸಿಕೊಂಡೆನು. \p \v 8 “ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, \p “ ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದು ಅವರು ನನಗೆ ಹೇಳಿದರು. \v 9 ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರು. ಆದರೆ ನನ್ನ ಕೂಡ ಮಾತನಾಡುತ್ತಿದ್ದ ಸ್ವರವು ಅವರಿಗೆ ಕೇಳಿಸಲಿಲ್ಲ. \p \v 10 “ಆಗ ನಾನು, ‘ಸ್ವಾಮಿ, ನಾನೇನು ಮಾಡಬೇಕು?’ ಎಂದು ಕೇಳಲು, \p “ ‘ಎದ್ದೇಳು, ದಮಸ್ಕದೊಳಗೆ ಹೋಗು, ನೀನು ಏನೇನು ಮಾಡಬೇಕಾಗಿದೆಯೋ ಅದೆಲ್ಲವನ್ನು ನಿನಗೆ ಅಲ್ಲಿ ಹೇಳಲಾಗುವುದು,’ ಎಂದು ಕರ್ತ ಯೇಸು ನನಗೆ ಹೇಳಿದರು. \v 11 ಆ ಬೆಳಕಿನ ಉಜ್ವಲ ಪ್ರಕಾಶದ ನಿಮಿತ್ತ ನನ್ನ ಕಣ್ಣು ಕುರುಡಾಗಿದ್ದರಿಂದ ನನ್ನ ಜೊತೆಯಲ್ಲಿದ್ದವರು ನನ್ನ ಕೈಹಿಡಿದು ದಮಸ್ಕದೊಳಗೆ ನಡೆಸಿಕೊಂಡು ಹೋದರು. \p \v 12 “ಅನನೀಯ ಎಂಬ ಹೆಸರಿನವನೊಬ್ಬನು ನನ್ನ ಬಳಿ ಬಂದನು. ಅವನು ಮೋಶೆಯ ನಿಯಮಕ್ಕನುಗುಣವಾಗಿ ಭಕ್ತಿವಂತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಸಾಕ್ಷಿಹೊಂದಿದವನೂ ಆಗಿದ್ದನು. \v 13 ಅವನು ನನ್ನ ಬಳಿ ನಿಂತುಕೊಂಡು, ‘ಸಹೋದರ ಸೌಲನೇ, ನೀನು ದೃಷ್ಟಿಯನ್ನು ಪಡೆದುಕೋ,’ ಎಂದನು. ಆ ಗಳಿಗೆಯಲ್ಲಿಯೇ ನಾನು ದೃಷ್ಟಿಯನ್ನು ಪಡೆದು ಅವನನ್ನು ಕಂಡೆನು. \p \v 14 “ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ. \v 15 ಏಕೆಂದರೆ ನೀನು ಕಂಡದ್ದಕ್ಕೂ ಕೇಳಿದ್ದಕ್ಕೂ ಎಲ್ಲಾ ಜನರಿಗೆ ಅವರ ಸಾಕ್ಷಿಯಾಗಿರುವೆ. \v 16 ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು. \p \v 17 “ನಾನು ಯೆರೂಸಲೇಮಿಗೆ ಹಿಂದಿರುಗಿ ಬಂದು ದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಆತ್ಮಪರವಶನಾದೆನು. \v 18 ಆಗ ಕರ್ತ ಯೇಸು ನನ್ನೊಂದಿಗೆ ಮಾತನಾಡುತ್ತಿರುವುದನ್ನು ಕಂಡೆನು. ಅವರು, ‘ತಡಮಾಡದೆ! ತಕ್ಷಣವೇ ಯೆರೂಸಲೇಮನ್ನು ಬಿಟ್ಟು ಹೊರಟು ಹೋಗು, ಏಕೆಂದರೆ ನೀನು ನನ್ನನ್ನು ಕುರಿತು ಹೇಳುವ ಸಾಕ್ಷಿಯನ್ನು ಅವರು ಸ್ವೀಕರಿಸುವುದಿಲ್ಲ,’ ಎಂದರು. \p \v 19 “ಅದಕ್ಕೆ ನಾನು, ‘ಸ್ವಾಮಿ, ಎಲ್ಲಾ ಸಭಾಮಂದಿರಗಳಲ್ಲಿಯೂ ನಿಮ್ಮಲ್ಲಿ ನಂಬಿಕೆಯಿಟ್ಟವರನ್ನು ಬಂಧಿಸಿ, ಹೊಡೆದು ಸೆರೆಮನೆಗೆ ಹಾಕಿಸುತ್ತಿದ್ದೇನೆಂದು ಈ ಜನರು ಬಲ್ಲರು. \v 20 ನಿಮ್ಮ ಸಾಕ್ಷಿಯಾದ ಸ್ತೆಫನನ ರಕ್ತ ಸುರಿಸಿದಾಗ ಅದಕ್ಕೆ ನಾನೂ ಸಮ್ಮತಿ ಕೊಟ್ಟು ಅವನನ್ನು ಕೊಲ್ಲುವವರ ಬಟ್ಟೆಗಳನ್ನು ಕಾಯುತ್ತಾ ನಿಂತಿದ್ದೆನು,’ ಎಂದೆನು. \p \v 21 “ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.” \s1 ರೋಮನ್ ಪೌರನಾದ ಪೌಲನು \p \v 22 ಇದನ್ನು ಹೇಳುವವರೆಗೆ ಜನರು ಪೌಲನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಅನಂತರ ಅವರು ತಮ್ಮ ಸ್ವರವೆತ್ತಿ, “ಇಂಥವನನ್ನು ಭೂಲೋಕದಿಂದ ತೊಲಗಿಸಿರಿ! ಇವನು ಜೀವಿಸುವುದಕ್ಕೆ ಯೋಗ್ಯನಲ್ಲ!” ಎಂದು ಕೂಗಿದರು. \p \v 23 ಅವರು ಅರಚುತ್ತ ತಮ್ಮ ಮೇಲಂಗಿಗಳನ್ನು ಹರಿಯುತ್ತ ಗಾಳಿಯಲ್ಲಿ ಮಣ್ಣು ತೂರುತ್ತಿರಲು, \v 24 ಸಹಸ್ರಾಧಿಪತಿಯು ಪೌಲನನ್ನು ಸೈನಿಕರ ಪಾಳ್ಯದೊಳಗೆ ಒಯ್ಯಬೇಕೆಂದು, ಅವನನ್ನು ಕೊರಡೆಗಳಿಂದ ಹೊಡೆದು ಯಾವ ಅಪರಾಧಕ್ಕಾಗಿ ಜನರು ಅವನಿಗೆ ವಿರೋಧವಾಗಿ ಅರಚುತ್ತಿದ್ದರು ಎಂಬುದನ್ನು ಅವನಿಂದ ವಿಚಾರಿಸಬೇಕೆಂದು ಆಜ್ಞಾಪಿಸಿದನು. \v 25 ಆದರೆ ಅವರು ಅವನನ್ನು ಹೊಡೆಯುವುದಕ್ಕೆ ಬಾರುಕೋಲನ್ನು ಚಾಚಿದಾಗ ಪೌಲನು ಅಲ್ಲಿ ನಿಂತಿದ್ದ ಶತಾಧಿಪತಿಗೆ, “ಅಪರಾಧಿಯೆಂದು ಸಿದ್ಧವಾಗುವ ಮೊದಲೇ ರೋಮ್ ಪೌರನನ್ನು ಕೊರಡೆಗಳಿಂದ ಹೊಡೆಯುವುದು ನ್ಯಾಯವಾದದ್ದೋ?” ಎಂದು ಕೇಳಿದನು. \p \v 26 ಶತಾಧಿಪತಿ ಈ ಮಾತುಗಳನ್ನು ಕೇಳಿದಾಗ, ಸಹಸ್ರಾಧಿಪತಿಯ ಬಳಿಗೆ ಹೋಗಿ ಇದನ್ನು ವರದಿ ಮಾಡಿ, “ಇವನು ರೋಮ್ ಪೌರನು. ಈಗ ನೀನೇನು ಮಾಡಬೇಕೆಂದಿದ್ದೀ?” ಎಂದು ಅವನನ್ನು ಪ್ರಶ್ನಿಸಿದನು. \p \v 27 ಸಹಸ್ರಾಧಿಪತಿಯು ಪೌಲನ ಬಳಿಗೆ ಹೋಗಿ, “ನೀನು ರೋಮ್ ಪೌರನೋ, ಹೇಳು?” ಎಂದು ಕೇಳಿದ್ದಕ್ಕೆ, \p ಅವನು, “ಹೌದು,” ಎಂದನು. \p \v 28 “ನಾನು ಈ ಪೌರತ್ವ ಪಡೆಯಬೇಕಾದರೆ ಅದಕ್ಕೆ ನಾನು ಬಹಳ ಹಣ ಕೊಡಬೇಕಾಯಿತು,” ಎಂದು ಸಹಸ್ರಾಧಿಪತಿಯು ಹೇಳಲು, ಪೌಲನು, \p “ಆದರೆ ನಾನು ಹುಟ್ಟಿದ ದಿನದಿಂದಲೇ ರೋಮಿನ ಪೌರನಾಗಿದ್ದೇನೆ,” ಎಂದನು. \p \v 29 ಪೌಲನನ್ನು ಪ್ರಶ್ನಿಸಲು ಬಂದವರು ತಕ್ಷಣವೇ ಬಿಟ್ಟುಹೋದರು. ಮಾತ್ರವಲ್ಲದೆ ಪೌಲನು ರೋಮ್ ಪೌರನೆಂದು ಗ್ರಹಿಸಿದ ಅವನನ್ನು ಬೇಡಿಗಳಿಂದ ಬಂಧಿಸಿದ್ದರಿಂದ ಸಹಸ್ರಾಧಿಪತಿಯೂ ಭಯಪಟ್ಟನು. \s1 ನ್ಯಾಯಸಭೆಯ ಮುಂದೆ \p \v 30 ಯೆಹೂದ್ಯರು ಪೌಲನ ವಿರುದ್ಧ ಏಕೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದಕ್ಕೆ ನಿಜಸಂಗತಿಯನ್ನು ಕಂಡುಹಿಡಿಯಲು ಸಹಸ್ರಾಧಿಪತಿಯು ಅಪೇಕ್ಷೆಪಟ್ಟನು. ಮರುದಿನ ಪೌಲನನ್ನು ಬಿಡುಗಡೆ ಮಾಡಿ, ಮುಖ್ಯಯಾಜಕರೂ ನ್ಯಾಯಸಭೆಯೂ ಕೂಡಿಬರಬೇಕೆಂದು ಅಪ್ಪಣೆಮಾಡಿದನು. ಆಮೇಲೆ ಪೌಲನನ್ನು ತಂದು ಅವರ ಎದುರಿನಲ್ಲಿ ನಿಲ್ಲಿಸಿದರು. \c 23 \p \v 1 ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು. \v 2 ಅದಕ್ಕೆ ಮಹಾಯಾಜಕ ಅನನೀಯನು ಪೌಲನ ಬಳಿ ನಿಂತಿದ್ದವರಿಗೆ ಅವನ ಬಾಯಮೇಲೆ ಹೊಡೆಯಬೇಕೆಂದು ಆಜ್ಞಾಪಿಸಿದನು. \v 3 ಆಗ ಪೌಲನು ಅವನಿಗೆ, “ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವರು. ಮೋಶೆಯ ನಿಯಮದ ಪ್ರಕಾರ ನನ್ನ ನ್ಯಾಯವಿಚಾರಣೆ ಮಾಡಲು ನೀನು ಕುಳಿತುಕೊಂಡು, ನಿಯಮಕ್ಕೆ ವಿರುದ್ಧವಾಗಿ ನನ್ನನ್ನು ಹೊಡೆಯಬೇಕೆಂದು ಆಜ್ಞಾಪಿಸುತ್ತೀಯೋ?” ಎಂದನು. \p \v 4 ಪೌಲನ ಹತ್ತಿರ ನಿಂತಿದ್ದವರು, “ದೇವರು ನೇಮಿಸಿದ ಮಹಾಯಾಜಕನನ್ನು ನಿಂದಿಸುತ್ತಿದ್ದೀಯಾ?” ಎಂದು ಹೇಳಲು, \p \v 5 “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ಏಕೆಂದರೆ, ‘ನಿನ್ನ ಜನರ ಅಧಿಪತಿಯ ಕುರಿತಾಗಿ ಕೆಟ್ಟದ್ದನ್ನು ಮಾತನಾಡಬಾರದು’\f + \fr 23:5 \fr*\ft \+xt ವಿಮೋ 22:28\+xt*\ft*\f* ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದು ಪೌಲನು ಹೇಳಿದನು. \p \v 6 ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು. \v 7 ಪೌಲನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದ ಉಂಟಾಯಿತು. ಇದರಿಂದ ಸಮೂಹವು ವಿಭಾಗವಾಯಿತು. \v 8 ಏಕೆಂದರೆ ಸದ್ದುಕಾಯರು ಪುನರುತ್ಥಾನ ಇಲ್ಲವೆಂದೂ ದೇವದೂತರಾಗಲಿ, ಆತ್ಮಗಳಾಗಲಿ ಇಲ್ಲವೆಂದೂ ಹೇಳುತ್ತಿದ್ದರು. ಫರಿಸಾಯರು ಇವೆರಡನ್ನೂ ಒಪ್ಪಿಕೊಳ್ಳುತ್ತಿದ್ದರು. \p \v 9 ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು. \v 10 ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು. \p \v 11 ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು. \s1 ಪೌಲನನ್ನು ಕೊಲ್ಲಲು ಒಳಸಂಚು \p \v 12 ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು. \v 13 ಈ ಒಳಸಂಚಿನಲ್ಲಿ ನಾಲ್ವತ್ತಕ್ಕಿಂತಲೂ ಹೆಚ್ಚು ಜನ ಪುರುಷರಿದ್ದರು. \v 14 ಅವರು ಮುಖ್ಯಯಾಜಕರ ಹಾಗೂ ಹಿರಿಯರ ಬಳಿಗೆ ಹೋಗಿ, “ಪೌಲನನ್ನು ಕೊಲ್ಲುವವರೆಗೆ ನಾವು ಊಟಮಾಡುವುದಿಲ್ಲ ಎಂದು ಗಂಭೀರ ಶಪಥಮಾಡಿದ್ದೇವೆ. \v 15 ಆದ್ದರಿಂದ ಈಗ ವಿಚಾರಣೆಯ ಬಗ್ಗೆ ಹೆಚ್ಚಿನ ನಿರ್ದಿಷ್ಟವಾದ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂಬ ನೆಪದಿಂದ ಪೌಲನನ್ನು ನಿಮ್ಮ ಮುಂದೆ ತರುವಂತೆ ನೀವೂ ನ್ಯಾಯಸಭೆಯೂ ಸಹಸ್ರಾಧಿಪತಿಯನ್ನು ಬೇಡಿಕೊಳ್ಳಿರಿ. ಇಲ್ಲಿಗೆ ಬರುವ ಮೊದಲೇ ಪೌಲನನ್ನು ನಾವು ಕೊಂದುಬಿಡುತ್ತೇವೆ,” ಎಂದರು. \p \v 16 ಈ ಒಳಸಂಚು ಪೌಲನ ಸಹೋದರಿಯ ಮಗನಿಗೆ ತಿಳಿಯಲು ಅವನು ಸೈನಿಕ ಪಾಳ್ಯದೊಳಗೆ ಹೋಗಿ ಪೌಲನಿಗೆ ತಿಳಿಸಿದನು. \p \v 17 ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು. \v 18 ಅದರಂತೆ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, \p “ನಿಮಗೆ ತಿಳಿಸತಕ್ಕ ವಿಷಯವಿದೆಯೆಂದು ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯುವಕನನ್ನು ನಿಮ್ಮ ಬಳಿ ತರುವಂತೆ ಬೇಡಿಕೊಂಡಿದ್ದಾನೆ,” ಎಂದನು. \p \v 19 ಸಹಸ್ರಾಧಿಪತಿಯು ಯುವಕನ ಕೈಹಿಡಿದು ಏಕಾಂತವಾಗಿ ಪಕ್ಕಕ್ಕೆ ಕರೆದು, “ನೀನು ನನಗೆ ಹೇಳಬೇಕಾದದ್ದು ಏನು?” ಎಂದನು. \p \v 20 ಆ ಯುವಕನು, “ಪೌಲನ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯುವ ಅಪೇಕ್ಷೆಯ ನೆಪದಲ್ಲಿ ಅವನನ್ನು ನ್ಯಾಯಸಭೆಯ ಮುಂದೆ ಕರೆತರುವಂತೆ ನಿಮ್ಮನ್ನು ಕೇಳಿಕೊಳ್ಳಲು ಯೆಹೂದ್ಯರು ತೀರ್ಮಾನಿಸಿಕೊಂಡಿದ್ದಾರೆ. \v 21 ನೀವು ಅವರ ಮಾತಿಗೆ ಒಪ್ಪಿಕೊಳ್ಳಬೇಡಿ, ಏಕೆಂದರೆ ನಾಲ್ವತ್ತಕ್ಕಿಂತಲೂ ಹೆಚ್ಚು ಜನರು ಅವನಿಗಾಗಿ ಹೊಂಚುಹಾಕಿದ್ದಾರೆ. ಅವನನ್ನು ಕೊಲ್ಲುವವರೆಗೆ ಊಟಮಾಡುವುದಿಲ್ಲ, ಪಾನ ಮಾಡುವುದಿಲ್ಲ, ಎಂದು ಅವರು ಶಪಥ ಮಾಡಿದ್ದಾರೆ. ಅವರ ಬೇಡಿಕೆಗೆ ನಿಮ್ಮ ಒಪ್ಪಿಗೆಯನ್ನೇ ಈಗ ಅವರು ಎದುರುನೋಡುತ್ತಾ ಇದ್ದಾರೆ,” ಎಂದು ಹೇಳಿದನು. \p \v 22 “ಈ ವಿಷಯವನ್ನು ನನಗೆ ವರದಿ ಮಾಡಿದ್ದನ್ನು ಯಾರಿಗೂ ಹೇಳಬೇಡ,” ಎಂದು ಆ ಯುವಕನಿಗೆ ಎಚ್ಚರಿಕೆಯನ್ನು ನೀಡಿ ಅವನನ್ನು ಸಹಸ್ರಾಧಿಪತಿ ಕಳುಹಿಸಿಕೊಟ್ಟನು. \s1 ಕೈಸರೈಯಕ್ಕೆ ಪೌಲನನ್ನು ಕಳುಹಿಸಿದ್ದು \p \v 23 ಆಮೇಲೆ ಸಹಸ್ರಾಧಿಪತಿಯು ತನ್ನ ಇಬ್ಬರು ಶತಾಧಿಪತಿಗಳನ್ನು ಕರೆದು, “ಈ ರಾತ್ರಿ ಒಂಬತ್ತು ಗಂಟೆಗೆ ಕೈಸರೈಯಕ್ಕೆ ಹೋಗಲು ಇನ್ನೂರು ಜನ ಸೈನಿಕರನ್ನೂ ಎಪ್ಪತ್ತು ಕುದುರೆ ಸವಾರರನ್ನೂ ಇನ್ನೂರು ಜನ ಭರ್ಜಿಧರಿಸಿದವರನ್ನೂ ಸಿದ್ಧಗೊಳಿಸಿರಿ. \v 24 ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ಅವನು ಸುರಕ್ಷಿತವಾಗಿ ರಾಜ್ಯಪಾಲ ಫೇಲಿಕ್ಸನ ಬಳಿಗೆ ತಲುಪುವಂತೆ ವ್ಯವಸ್ಥೆಮಾಡಿರಿ,” ಎಂದು ಆಜ್ಞಾಪಿಸಿದನು. \p \v 25 ಅವರಿಗೆ ಒಂದು ಪತ್ರವನ್ನು ಹೀಗೆ ಬರೆದುಕೊಟ್ಟನು: \pmo \v 26 ಮಹಾಪ್ರಭುಗಳಾದ ರಾಜ್ಯಪಾಲ ಫೇಲಿಕ್ಸ್, \pmo ಅವರಿಗೆ ಕ್ಲೌದ್ಯ ಲೂಸ್ಯನು, \pmo ಮಾಡುವ ವಂದನೆಗಳು. \pm \v 27 ಈ ಪೌಲನನ್ನು ಯೆಹೂದ್ಯರು ಬಂಧಿಸಿ, ಇವನನ್ನು ಕೊಲ್ಲಬೇಕೆಂದಿದ್ದರು. ಆದರೆ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಬಿಡಿಸಿದೆನು. ಇವನು ರೋಮ್ ಪೌರ ಎಂದು ನನಗೆ ಗೊತ್ತಾಯಿತು. \v 28 ಅವರು ಏಕೆ ಪೌಲನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಅಪೇಕ್ಷಿಸಿ ಇವನನ್ನು ಅವರ ನ್ಯಾಯಸಭೆಯ ಮುಂದೆ ಕರೆದುಕೊಂಡು ಹೋದೆನು. \v 29 ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ. \v 30 ಆದರೂ ಪೌಲನ ವಿರೋಧವಾಗಿ ಒಂದು ಒಳಸಂಚು ನಡೆದಿದೆ ಎಂದು ನನಗೆ ರಹಸ್ಯ ಸುದ್ದಿ ಬಂದದ್ದರಿಂದ, ಕೂಡಲೇ ಇವನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಇವನಿಗೆ ವಿರೋಧವಾದ ಆರೋಪಣೆಯನ್ನು ನಿಮಗೆ ಸಲ್ಲಿಸಬೇಕೆಂದು ಇವನ ವಿರೋಧಿಗಳಿಗೆ ಅಪ್ಪಣೆ ಕೊಟ್ಟಿದ್ದೇನೆ. \p \v 31 ಸೈನಿಕರು ಈ ಆಜ್ಞೆಯಂತೆ, ರಾತ್ರಿಯಲ್ಲಿ ಪೌಲನನ್ನು ತಮ್ಮೊಂದಿಗೆ ಕರೆದುಕೊಂಡು ಅಂತಿಪತ್ರಿ ಎಂಬ ಊರಿನವರೆಗೆ ಹೋದರು. \v 32 ಮರುದಿನ ಪೌಲನೊಂದಿಗೆ ಮುಂದೆ ಹೋಗಲು ಕುದುರೆಸವಾರರನ್ನು ಬಿಟ್ಟು, ಸೈನಿಕರು ಅವರ ಪಾಳ್ಯಕ್ಕೆ ಹಿಂದಿರುಗಿದರು. \v 33 ಅವರು ಕೈಸರೈಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನಿಗೆ ಒಪ್ಪಿಸಿದರು. \v 34 ರಾಜ್ಯಪಾಲನು ಪತ್ರವನ್ನು ಓದಿ, ಪೌಲನು ಯಾವ ಪ್ರಾಂತದವನೆಂದು ಪ್ರಶ್ನಿಸಿ, ಅವನು ಕಿಲಿಕ್ಯದವನೆಂದು ತಿಳಿದುಕೊಂಡು, \v 35 “ನಿನ್ನ ಮೇಲೆ ಆರೋಪ ಹೊರಿಸಿದವರು ಇಲ್ಲಿಗೆ ಬಂದು ತಲುಪಿದ ತರುವಾಯ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ, ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದನು. \c 24 \s1 ಫೇಲಿಕ್ಸನ ಮುಂದೆ ವಿಚಾರಣೆ \p \v 1 ಐದು ದಿನಗಳ ನಂತರ ಮಹಾಯಾಜಕ ಅನನೀಯನು ಕೆಲವು ಹಿರಿಯರೊಂದಿಗೆ ಕೈಸರೈಯಕ್ಕೆ ಬಂದನು. ತನ್ನೊಂದಿಗೆ ಟೆರ್ಟುಲಸ್ ಎಂಬ ವಕೀಲನನ್ನು ಕರೆದುಕೊಂಡು ಬಂದು, ರಾಜ್ಯಪಾಲನಿಗೆ ಪೌಲನ ವಿರೋಧವಾಗಿ ದೂರುಗಳನ್ನಿಟ್ಟರು. \v 2 ಪೌಲನನ್ನು ಒಳಗೆ ಕರೆದುಕೊಂಡು ಬಂದಾಗ, ಟೆರ್ಟುಲಸನು ಫೇಲಿಕ್ಸನ ಮುಂದೆ ತಪ್ಪು ಹೊರಿಸಲು ಪ್ರಾರಂಭಿಸಿ, “ಸನ್ಮಾನಿತ ಫೇಲಿಕ್ಸರೇ, ನಿಮ್ಮ ಮೂಲಕ ಬಹಳ ದಿನಗಳಿಂದ ಶಾಂತಿಯನ್ನು ಅನುಭವಿಸುತ್ತಿದ್ದೇವೆ. ನಿಮ್ಮ ಮುಂದಾಲೋಚನೆಯಿಂದ ದೇಶಗಳಿಗೆ ಅನೇಕ ಸುಧಾರಣೆಗಳನ್ನು ತಂದಿರುವಿರಿ. \v 3 ಎಲ್ಲಾ ಕಡೆಗಳಲ್ಲಿಯೂ ಎಲ್ಲಾ ವಿಧದಲ್ಲಿಯೂ ಬಹು ಕೃತಜ್ಞತೆಯಿಂದ ಇದನ್ನು ಸ್ವಾಗತಿಸುತ್ತೇವೆ. \v 4 ಆದರೆ ನಿಮಗೆ ಹೆಚ್ಚು ತೊಂದರೆಕೊಟ್ಟು ಬೇಸರಪಡಿಸದೇ ನಾನು ಸಂಕ್ಷೇಪವಾಗಿ ಹೇಳುವ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ. \p \v 5 “ಜಗತ್ತಿನಲ್ಲಿ ಇರುವ ಯೆಹೂದ್ಯರ ಮಧ್ಯದಲ್ಲಿ ದಂಗೆಯೆಬ್ಬಿಸಿ ಪೌಲನೆಂಬ ಈ ಮನುಷ್ಯನು ತೊಂದರೆ ಕೊಡುವವನಾಗಿದ್ದಾನೆಂತಲೂ ನಜರೇತಿನವರ ಪಂಗಡಕ್ಕೆ ಇವನು ನಾಯಕನೆಂದೂ ನಾವು ಕಂಡೆವು. \v 6 ಇವನು ದೇವಾಲಯವನ್ನು ಭ್ರಷ್ಟಮಾಡಲು ಪ್ರಯತ್ನಿಸಿದ್ದರಿಂದ ನಾವು ಇವನನ್ನು ಬಂಧಿಸಿದೆವು. \v 7 \it ಆದರೆ ಸಹಸ್ರಾಧಿಪತಿ ಲೂಸ್ಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡು ಹೋದನು.\it*\f + \fr 24:7 \fr*\ft ಕೆಲವು ಮೂಲ ಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \v 8 ನೀವೇ ಪೌಲನನ್ನು ವಿಚಾರಣೆ ಮಾಡುವುದರ ಮೂಲಕ ನಾವು ಇವನಿಗೆ ವಿರೋಧವಾಗಿ ತಂದಿರುವ ದೂರುಗಳೆಲ್ಲವೂ ಸತ್ಯವೆಂದು ನಿಮಗೇ ಗೊತ್ತಾಗುವುದು.” \p \v 9 ಆಗ ಈ ಸಂಗತಿಗಳು ಸತ್ಯವಾದವುಗಳೆಂದು ಯೆಹೂದ್ಯರು ಸಹ ಸೇರಿಕೊಂಡು ವಕೀಲನಿಗೆ ದೋಷಾರೋಪಣೆ ಮಾಡಿದರು. \p \v 10 ರಾಜ್ಯಪಾಲನು ಪೌಲನಿಗೆ ಮಾತನಾಡಬೇಕೆಂದು ಸನ್ನೆಮಾಡಿದಾಗ, ಪೌಲನು ಕೊಟ್ಟ ಉತ್ತರವಿದು: “ಅನೇಕ ವರ್ಷಗಳಿಂದ ತಾವು ಈ ದೇಶದ ಮೇಲೆ ನ್ಯಾಯಾಧೀಶರಾಗಿರುವುದನ್ನು ನಾನು ಬಲ್ಲೆ. ಆದ್ದರಿಂದ ನಾನು ಸಂತೋಷದಿಂದ ನನ್ನ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ. \v 11 ದೇವರ ಆರಾಧನೆ ಮಾಡಲು ಯೆರೂಸಲೇಮಿಗೆ ಹೋಗಿ ಇನ್ನೂ ಹನ್ನೆರಡು ದಿನಗಳು ಮಾತ್ರವಾಯಿತು. ಇದನ್ನು ತಾವು ವಿಚಾರಿಸಿ ತಿಳಿದುಕೊಳ್ಳಬಹುದು. \v 12 ದೇವಾಲಯದಲ್ಲಾಗಲಿ, ಸಭಾಮಂದಿರದಲ್ಲಾಗಲಿ, ಪಟ್ಟಣದ ಯಾವುದೇ ಸ್ಥಳದಲ್ಲಾಗಲಿ ನಾನು ವಾಗ್ವಾದ ಮಾಡುತ್ತಿದ್ದುದ್ದನ್ನು ಅಥವಾ ಜನರ ಗುಂಪನ್ನು ಕೂಡಿಸುವುದನ್ನು ಇವರು ಕಂಡಿಲ್ಲ. \v 13 ಈಗ ಅವರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳನ್ನು ನಿಮ್ಮ ಮುಂದೆ ಅವರು ರುಜುಮಾಡಿ ತೋರಿಸಲಾರರು. \v 14 ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ. \v 15 ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಿದೆಯೆಂದು ಈ ಜನರು ಎದುರುನೋಡುವಂತೆಯೇ ದೇವರಲ್ಲಿ ನನಗೂ ನಿರೀಕ್ಷೆಯಿದೆ. \v 16 ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ. \p \v 17 “ಅನೇಕ ವರ್ಷಗಳ ನಂತರ ದಾನಧರ್ಮಗಳನ್ನೂ ಕಾಣಿಕೆಗಳನ್ನೂ ನನ್ನ ಸ್ವದೇಶದವರಿಗೆ ಕೊಡಲು ಬಂದೆನು. \v 18 ನಾನು ಇದನ್ನು ಮಾಡುತ್ತಾ ದೇವಾಲಯದಲ್ಲಿದ್ದಾಗ ನಾನು ಶುದ್ಧಾಚಾರ ಮಾಡುತ್ತಿರುವುದನ್ನು ಇವರು ಕಂಡರು. ನನ್ನೊಂದಿಗೆ ಜನರ ಗುಂಪು ಇರಲಿಲ್ಲ. ನಾನು ಗೊಂದಲವನ್ನೆಬ್ಬಿಸಲಿಲ್ಲ. \v 19 ಆದರೆ ಏಷ್ಯಾ ಪ್ರಾಂತದ ಕೆಲವು ಜನ ಯೆಹೂದ್ಯರು ಅಲ್ಲಿಗೆ ಬಂದಿದ್ದರು. ಅವರಿಗೆ ನನ್ನ ಮೇಲೆ ಏನಾದರೂ ವಿರೋಧವಿದ್ದರೆ, ಅವರು ನಿಮ್ಮ ಸನ್ನಿಧಿಯಲ್ಲಿ ಈಗ ಬಂದು ನನ್ನ ಮೇಲೆ ಅಪರಾಧ ಹೊರಿಸಲಿ. \v 20 ಇಲ್ಲವೆ ಇಲ್ಲಿಗೆ ಈಗ ಬಂದವರು ನಾನು ನ್ಯಾಯಸಭೆಯ ಮುಂದೆ ನಿಂತಾಗ ನನ್ನಲ್ಲಿ ಯಾವ ಅಪರಾಧವನ್ನು ಕಂಡರು ಎಂಬುದನ್ನು ಹೇಳಲಿ. \v 21 ‘ಇಂದು ನಾನು ನಿಮ್ಮ ಮುಂದೆ ನ್ಯಾಯವಿಚಾರಣೆಗೆ ನಿಂತಿರುವುದು ಸತ್ತವರ ಪುನರುತ್ಥಾನಕ್ಕೆ ಸಂಬಂಧಿಸಿದ್ದು,’ ಎಂದು ಅವರ ಮಧ್ಯದಲ್ಲಿ ನಿಂತು ಕೂಗಿದ್ದನ್ನು ಬಿಟ್ಟರೆ ಬೇರೆ ಏನನ್ನೂ ಇವರು ಹೇಳಲಾರರು,” ಎಂದನು. \p \v 22 ಈ ಮಾರ್ಗದ ವಿಷಯದ ಬಗ್ಗೆ ಬಹು ಸೂಕ್ಷ್ಮವಾಗಿ ತಿಳಿದುಕೊಂಡಿದ್ದ ಫೇಲಿಕ್ಸನು ವಿಚಾರಣೆಯನ್ನು ಮುಂದಕ್ಕೆ ಹಾಕಿದನು. ಅನಂತರ ಅವನು, “ಸಹಸ್ರಾಧಿಪತಿ ಲೂಸ್ಯನು ಬಂದ ಮೇಲೆ ನಿನ್ನ ಈ ವ್ಯಾಜ್ಯ ತೀರ್ಮಾನಿಸುತ್ತೇನೆ,” ಎಂದು ಹೇಳಿದನು. \v 23 ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು. \p \v 24 ಕೆಲವು ದಿನಗಳಾದ ತರುವಾಯ ಫೇಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರೂಸಿಲ್ಲಳೊಂದಿಗೆ ಬಂದನು. ಪೌಲನನ್ನು ಕರೆಕಳುಹಿಸಿ ಅವನು ಕ್ರಿಸ್ತ ಯೇಸುವಿನಲ್ಲಿ ನಂಬುವ ವಿಷಯವಾಗಿ ಮಾತನಾಡುವುದನ್ನು ಕೇಳಿದನು. \v 25 ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು. \v 26 ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರು ಹಣ ಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ ಅವನೊಂದಿಗೆ ಮಾತನಾಡುತ್ತಿದ್ದನು. \p \v 27 ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು. \c 25 \s1 ಫೆಸ್ತನ ಮುಂದೆ ಪೌಲನ ವಿಚಾರಣೆ \p \v 1 ಫೆಸ್ತನು ಅಧಿಕಾರವಹಿಸಿಕೊಂಡು ಮೂರು ದಿನಗಳ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು. \v 2 ಅಲ್ಲಿ ಮುಖ್ಯಯಾಜಕರು ಹಾಗೂ ಯೆಹೂದ್ಯ ನಾಯಕರು ಅವರ ಮುಂದೆ ಬಂದು ಪೌಲನಿಗೆ ವಿರೋಧವಾಗಿ ಆರೋಪ ಮಾಡಿದರು. \v 3 ತಮಗೆ ದಯೆತೋರಿ ಪೌಲನನ್ನು ಕೂಡಲೇ ಯೆರೂಸಲೇಮಿಗೆ ವರ್ಗಾಯಿಸಬೇಕೆಂದು ಫೆಸ್ತನನ್ನು ಬೇಡಿಕೊಂಡರು. ಏಕೆಂದರೆ ಪೌಲನು ಹಿಂದಿರುಗುವಾಗ ಮಾರ್ಗದಲ್ಲೇ ಅವನನ್ನು ಕೊಲ್ಲಬೇಕೆಂದು ಹೊಂಚುಹಾಕಿಕೊಂಡಿದ್ದರು. \v 4 ಆದ್ದರಿಂದ ಫೆಸ್ತನು ಉತ್ತರವಾಗಿ, “ಪೌಲನು ಕೈಸರೈಯದಲ್ಲಿ ಕಾವಲೊಳಗಿದ್ದಾನೆ. ನಾನೇ ಅಲ್ಲಿಗೆ ಬೇಗ ಹೊಗಬೇಕೆಂದಿದ್ದೇನೆ. \v 5 ನಿಮ್ಮಲ್ಲಿಯ ಕೆಲವು ನಾಯಕರು ನನ್ನೊಂದಿಗೆ ಅಲ್ಲಿಗೆ ಬರಲಿ. ಅವನೇನಾದರೂ ತಪ್ಪು ಮಾಡಿದ್ದರೆ ಅವನ ಮೇಲಿನ ದೂರುಗಳನ್ನು ಆಪಾದಿಸಲಿ,” ಎಂದನು. \p \v 6 ಎಂಟು ಹತ್ತು ದಿನಗಳನ್ನು ಅವರೊಂದಿಗೆ ಕಳೆದ ತರುವಾಯ ಅವನು ಕೈಸರೈಯಕ್ಕೆ ಹೋದನು. ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು ತನ್ನ ಮುಂದೆ ಪೌಲನನ್ನು ಕರೆತರಬೇಕೆಂದು ಆಜ್ಞಾಪಿಸಿದನು. \v 7 ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ. \p \v 8 ಆಗ ಪೌಲನು ತನ್ನ ಪ್ರತಿವಾದವನ್ನು ಮುಂದಿಟ್ಟು: “ನಾನು ಯೆಹೂದ್ಯರ ನಿಯಮಕ್ಕೆ ವಿರೋಧವಾಗಲಿ, ದೇವಾಲಯಕ್ಕೆ ವಿರೋಧವಾಗಲಿ, ಕೈಸರನ ವಿರೋಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ,” ಎಂದನು. \p \v 9 ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು. \p \v 10 ಅದಕ್ಕೆ ಪೌಲನು, “ಈಗ ನಾನು ಕೈಸರನ ನ್ಯಾಯಾಲಯದ ಎದುರಿನಲ್ಲಿ ನಿಂತುಕೊಂಡಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ನೀವೇ ಚೆನ್ನಾಗಿ ತಿಳಿದುಕೊಂಡಿರುವಂತೆ ನಾನು ಯೆಹೂದ್ಯರಿಗೆ ವಿರೋಧವಾಗಿ ಯಾವ ತಪ್ಪನ್ನೂ ಮಾಡಿಲ್ಲ. \v 11 ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು. \p \v 12 ಆಗ ಫೆಸ್ತನು ತನ್ನ ನ್ಯಾಯಸಭೆಯೊಂದಿಗೆ ಸಮಾಲೋಚನೆ ಮಾಡಿ, “ನೀನು ಕೈಸರನಿಗೆ ಮನವಿ ಮಾಡಿಕೊಂಡಿರುವೆ, ಕೈಸರನ ಬಳಿಗೇ ಹೋಗು!” ಎಂದು ಉತ್ತರಿಸಿದನು. \s1 ಫೆಸ್ತನು ಅಗ್ರಿಪ್ಪ ರಾಜನ ಸಲಹೆ ಪಡೆದದ್ದು \p \v 13 ಕೆಲವು ದಿನಗಳ ನಂತರ ಫೆಸ್ತನನ್ನು ಅಭಿನಂದಿಸಲು ರಾಜ ಅಗ್ರಿಪ್ಪನು ಬೆರ್ನಿಕೆಯಳೊಂದಿಗೆ ಕೈಸರೈಯಕ್ಕೆ ಬಂದನು. \v 14 ಅವರು ಅಲ್ಲಿ ಅನೇಕ ದಿನಗಳನ್ನು ಕಳೆಯುತ್ತಿದ್ದಾಗ, ಫೆಸ್ತನು ಪೌಲನ ವಿಷಯವನ್ನು ರಾಜನೊಂದಿಗೆ ಚರ್ಚಿಸಿ, “ಕೈದಿಯಾಗಿ ಫೇಲಿಕ್ಸನು ಬಿಟ್ಟುಹೋದ ಒಬ್ಬ ಮನುಷ್ಯನಿದ್ದಾನೆ. \v 15 ನಾನು ಯೆರೂಸಲೇಮಿಗೆ ಹೋದಾಗ ಮುಖ್ಯಯಾಜಕರೂ ಹಾಗೂ ಯೆಹೂದ್ಯರ ಹಿರಿಯರೂ ಅವನ ಮೇಲೆ ಆಪಾದನೆಗಳನ್ನು ತಂದು ಅವನಿಗೆ ವಿರೋಧವಾಗಿ ದಂಡನೆ ವಿಧಿಸಬೇಕೆಂದು ಕೇಳಿಕೊಂಡರು. \p \v 16 “ಆಪಾದಿತನು ಆಪಾದನೆ ಹೊರಿಸುವವರ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಹೊರಿಸಲಾದ ಆಪಾದನೆಗಳಿಗೆ ಪ್ರತಿವಾದ ಮಾಡಿಕೊಳ್ಳುವ ಮೊದಲು ಯಾವ ಮನುಷ್ಯನನ್ನೂ ಒಪ್ಪಿಸಿಕೊಡುವುದು ರೋಮ್ ಪದ್ಧತಿಯಲ್ಲ ಎಂದು ನಾನು ಅವರಿಗೆ ಹೇಳಿದೆನು. \v 17 ಅವರು ನನ್ನೊಂದಿಗೆ ಇಲ್ಲಿಗೆ ಬಂದದ್ದರಿಂದ ನ್ಯಾಯವಿಚಾರಣೆಯನ್ನು ತಡಮಾಡದೆ ಪ್ರಾರಂಭಿಸಿದೆ. ಮರುದಿನ ನ್ಯಾಯವಿಚಾರಣೆ ನಡೆಸಿ ಪೌಲನೆಂಬ ಆ ಮನುಷ್ಯನನ್ನು ತರಬೇಕೆಂದು ಆಜ್ಞಾಪಿಸಿದೆ. \v 18 ಅವನ ಮೇಲೆ ಆಪಾದನೆ ಹೊರಿಸುವವರು ಮಾತನಾಡಲು ಎದ್ದು ನಿಂತಾಗ, ನಾನು ಭಾವಿಸಿದ ಯಾವುದೇ ಅಪರಾಧವನ್ನು ಅವರು ಅವನ ಮೇಲೆ ಹೊರಿಸಲಿಲ್ಲ. \v 19 ಆದರೆ ಅವರಿಗೆ ತಮ್ಮ ಸಂಪ್ರದಾಯದ ಬಗ್ಗೆಯೂ ಸತ್ತು ಹೋಗಿದ್ದ ಯೇಸು ಎಂಬ ಮನುಷ್ಯನು ಜೀವಿಸುತ್ತಿದ್ದಾನೆಂದೂ ಪೌಲ ಹೇಳುವಂಥದ್ದರ ಬಗ್ಗೆ ವಾದವಿವಾದವಿತ್ತು. \v 20 ನಾನು ಅಂಥಾ ವಿಚಾರಗಳ ಬಗ್ಗೆ ಅವನು ಯೆರೂಸಲೇಮಿಗೆ ಹೋಗಿ ಈ ಆಪಾದನೆಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಮನಸ್ಸಿದೆಯೋ ಎಂದು ಅವನನ್ನು ಕೇಳಿದೆನು. \v 21 ಆದರೆ ಪೌಲನು ತನ್ನ ಬೇಡಿಕೆಯನ್ನು ನೇರವಾಗಿ ಕೈಸರನ ಬಳಿಗೆ ಕಳುಹಿಸುವವರೆಗೆ ಅವನನ್ನು ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದ್ದೇನೆ,” ಎಂದು ಫೆಸ್ತನು ಹೇಳಿದನು. \p \v 22 ಆಗ ಅಗ್ರಿಪ್ಪ ರಾಜನು, “ಈ ಮನುಷ್ಯನು ಹೇಳುವುದನ್ನು ನಾನೂ ಕೇಳಬೇಕೆಂದಿದ್ದೇನೆ,” ಎಂದು ಫೆಸ್ತನಿಗೆ ಹೇಳಿದನು. \p “ನಾಳೆಯೇ ಪೌಲನ ಬೇಡಿಕೆಯನ್ನು ಕೇಳುವಿರಿ,” ಎಂದು ಫೆಸ್ತನು ಉತ್ತರಕೊಟ್ಟನು. \s1 ಅಗ್ರಿಪ್ಪ ರಾಜನ ಮುಂದೆ ಪೌಲನು \p \v 23 ಮರುದಿನ ಅಗ್ರಿಪ್ಪನು ಹಾಗೂ ಬೆರ್ನಿಕೆಯು ಮಹಾ ವೈಭವದಿಂದ ಸೈನ್ಯಾಧಿಕಾರಿಗಳೊಂದಿಗೂ ಪಟ್ಟಣದ ಗಣ್ಯವ್ಯಕ್ತಿಗಳೊಂದಿಗೂ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯಂತೆ ಪೌಲನನ್ನು ಕರೆದುಕೊಂಡು ಬಂದರು. \v 24 ಆಗ ಫೆಸ್ತನು, “ಅಗ್ರಿಪ್ಪ ರಾಜನೇ, ನಮ್ಮ ಸಂಗಡ ಇಲ್ಲಿ ಸೇರಿ ಬಂದಿರುವವರೇ, ನೀವು ಕಾಣುತ್ತಿರುವ ಈ ಮನುಷ್ಯನು ಜೀವದಿಂದ ಉಳಿಯಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯೆಹೂದ್ಯರೆಲ್ಲರೂ ನನ್ನನ್ನು ಬೇಡಿಕೊಂಡಿದ್ದಾರೆ. \v 25 ಇವನು ಮರಣದಂಡನೆಗೆ ಯೋಗ್ಯವಾದ ಯಾವುದೇ ಅಪರಾಧ ಮಾಡಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಆದರೆ ಇವನು ನೇರವಾಗಿ ಚಕ್ರವರ್ತಿಗೇ ತನ್ನ ಬೇಡಿಕೆ ಸಲ್ಲಿಸಿದ್ದರಿಂದ ಇವನನ್ನು ರೋಮ್ ನಗರಕ್ಕೆ ಕಳುಹಿಸಲು ತೀರ್ಮಾನಿಸಿದ್ದೇನೆ. \v 26 ಆದರೂ ಇವನ ಬಗ್ಗೆ ಖಚಿತವಾಗಿ ತಮಗೆ ಬರೆಯಲು ನನಗೇನು ಇಲ್ಲದಿರುವುದರಿಂದ, ಅಗ್ರಿಪ್ಪ ರಾಜನೇ, ಇವನನ್ನು ತಮ್ಮ ಮುಂದೆ ತಂದಿದ್ದೇನೆ. ಹೀಗೆ ಈ ವಿಚಾರಣೆಯ ಮೂಲಕ ಬರೆಯಲು ನನಗೇನಾದರೂ ಸಿಕ್ಕಬಹುದು. \v 27 ಏಕೆಂದರೆ ನಿಶ್ಚಿತವಾದ ಅಪರಾಧಗಳನ್ನು ಸೂಚಿಸದೆ ಒಬ್ಬ ಸೆರೆಯಾಳನ್ನು ಕಳುಹಿಸುವುದು ಸರಿಯಲ್ಲ ಎಂದು ನನಗನಿಸುತ್ತದೆ,” ಎಂದನು. \c 26 \p \v 1 ಆಗ ಅಗ್ರಿಪ್ಪನು, “ನಿನ್ನ ಪರವಾಗಿ ಮಾತನಾಡಲು ನಿನಗೆ ಅಪ್ಪಣೆಯಿದೆ,” ಎಂದು ಪೌಲನಿಗೆ ಹೇಳಿದನು. \p ಆಗ ಪೌಲನು ಕೈಯೆತ್ತಿ ಹೀಗೆ ಪ್ರತಿವಾದಿಸತೊಡಗಿದನು: \v 2 “ಅಗ್ರಿಪ್ಪ ರಾಜರೇ, ಯೆಹೂದ್ಯರು ಮಾಡಿದ ಎಲ್ಲಾ ಆಪಾದನೆಗಳಿಗೆ ವಿರುದ್ಧವಾಗಿ ಇಂದು ನನ್ನ ಪ್ರತಿವಾದ ಮಾಡಲು ತಮ್ಮ ಎದುರಿನಲ್ಲಿರುವುದು ನನ್ನ ಭಾಗ್ಯವೆಂದೇ ತಿಳಿಯುತ್ತೇನೆ. \v 3 ಯೆಹೂದ್ಯರ ಎಲ್ಲಾ ಆಚಾರ ವಿಚಾರಗಳನ್ನು, ವಾದವಿವಾದಗಳನ್ನು ತಾವು ಚೆನ್ನಾಗಿ ತಿಳಿದಿದ್ದೀರಿ. ಆದ್ದರಿಂದ, ತಾವು ತಾಳ್ಮೆಯಿಂದ ಆಲಿಸಬೇಕೆಂದು ಕೇಳಿಕೊಳ್ಳುತ್ತೇನೆ. \p \v 4 “ನಾನು ಬಾಲಕನಾಗಿದ್ದಾಗಿನಿಂದ, ನನ್ನ ಪಟ್ಟಣದಲ್ಲಿಯೂ ಅನಂತರ ಯೆರೂಸಲೇಮಿನಲ್ಲಿಯೂ ನಾನು ಜೀವನ ಮಾಡಿದ ರೀತಿಯನ್ನು ಯೆಹೂದ್ಯರೆಲ್ಲರೂ ಬಲ್ಲವರಾಗಿದ್ದಾರೆ. \v 5 ಅವರು ನಮ್ಮ ವಿಶ್ವಾಸದ ಅತಿ ಕಟ್ಟುನಿಟ್ಟಾದ ಪಂಗಡಕ್ಕೆ ತಕ್ಕಂತೆ ನಾನು ಫರಿಸಾಯನಾಗಿ ಜೀವಿಸಿದೆನೆಂಬುದಾಗಿ ತಿಳಿದವರಾಗಿದ್ದಾರೆ. ಸಾಕ್ಷಿ ಹೇಳುವುದಕ್ಕೆ, ಅವರಿಗೆ ಮನಸ್ಸಿದ್ದರೆ ಹೇಳಬಹುದು. \v 6 ಈಗ ನಾನು ನನ್ನ ಪಿತೃಗಳಿಗೆ ದೇವರು ವಾಗ್ದಾನ ಮಾಡಿದ್ದರಲ್ಲಿ ನಿರೀಕ್ಷೆಯಿಟ್ಟಿದ್ದರಿಂದ ಇಂದು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ. \v 7 ರಾಜರೇ, ನಮ್ಮ ಹನ್ನೆರಡು ಗೋತ್ರಗಳವರು ಅತ್ಯಾಸಕ್ತಿಯಿಂದ ಹಗಲಿರುಳು ದೇವರ ಸೇವೆಮಾಡುತ್ತಾ, ಆ ವಾಗ್ದಾನವು ನೆರವೇರುವುದೆಂದು ನಿರೀಕ್ಷಿಸುತ್ತಾ ಇದ್ದಾರೆ. ರಾಜರೇ, ಈ ನಿರೀಕ್ಷೆಯ ನಿಮಿತ್ತವಾಗಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ. \v 8 ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ನೀವು ಪರಿಗಣಿಸುವುದು ಏಕೆ? \p \v 9 “ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು. \v 10 ಹಾಗೆಯೇ ನಾನು ಯೆರೂಸಲೇಮಿನಲ್ಲಿ ಮಾಡಿದೆನು. ಮುಖ್ಯಯಾಜಕರ ಅಧಿಕಾರ ಪಡೆದು ಅನೇಕ ಭಕ್ತರನ್ನು ಸೆರೆಮನೆಗೆ ಹಾಕಿಸಿದೆನು. ಅವರನ್ನು ಮರಣದಂಡನೆಗೆ ಒಪ್ಪಿಸುವಾಗ, ಅವರಿಗೆ ವಿರುದ್ಧವಾಗಿ ಮತ ಚಲಾಯಿಸಿದೆನು. \v 11 ಅನೇಕ ಸಲ ಅವರನ್ನು ದಂಡಿಸಲು ನಾನು ಒಂದು ಸಭಾಮಂದಿರದಿಂದ ಇನ್ನೊಂದು ಸಭಾಮಂದಿರಕ್ಕೆ ಹೋಗಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆ. ಇದಲ್ಲದೆ ಅವರ ಮೇಲೆ ಬಹು ಕೋಪಗೊಂಡವನಾಗಿ ನಾನು ಅವರನ್ನು ಹಿಂಸಿಸಲು ವಿದೇಶಿ ಪಟ್ಟಣಗಳಿಗೂ ಹೋದೆನು. \p \v 12 “ಹೀಗೆ ನಾನು ಮುಖ್ಯಯಾಜಕರ ಅಧಿಕಾರ, ಅಪ್ಪಣೆಗಳೊಂದಿಗೆ ದಮಸ್ಕಕ್ಕೆ ಪ್ರಯಾಣ ಹೋಗುತ್ತಿದ್ದೆನು. \v 13 ಆಗ ರಾಜರೇ, ಮಧ್ಯಾಹ್ನದ ಸಮಯದಲ್ಲಿ, ಮಾರ್ಗ ಮಧ್ಯದಲ್ಲಿ ನಾನು, ಆಕಾಶದಿಂದ ಸೂರ್ಯನ ಪ್ರಕಾಶಕ್ಕಿಂತಲೂ ಹೆಚ್ಚಾಗಿ ಹೊಳೆಯುವ ಒಂದು ಬೆಳಕನ್ನು ಕಂಡೆನು. ಅದು ನನ್ನ ಸುತ್ತಲೂ ನನ್ನ ಸಂಗಡಿಗರ ಸುತ್ತಲೂ ಪ್ರಕಾಶಿಸಿತು. \v 14 ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು. \p \v 15 “ಆಗ ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, \p “ಕರ್ತದೇವರು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು. \v 16 ನೀನು ಎದ್ದು ನಿಂತುಕೋ, ನೀನು ಕಂಡಿದ್ದವುಗಳಿಗಾಗಿಯೂ ನಾನು ನಿನಗೆ ತೋರಿಸುವಂಥವುಗಳಿಗಾಗಿಯೂ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಲು ನಾನು ನಿನಗೆ ಕಾಣಿಸಿಕೊಂಡಿದ್ದೇನೆ. \v 17 ನಾನು ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದವರಿಂದಲೂ ನಿನ್ನನ್ನು ಕಾಪಾಡುವೆನು. \v 18 ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು. \p \v 19 “ಆದ್ದರಿಂದ ಅಗ್ರಿಪ್ಪ ರಾಜರೇ, ಆ ಪರಲೋಕದ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ. \v 20 ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು. \v 21 ಈ ಕಾರಣದಿಂದಲೇ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು. \v 22 ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ. \v 23 ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ,” ಎಂದನು. \p \v 24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು. \p \v 25 ಆದರೆ ಪೌಲನು, “ಬಹು ಗೌರವವುಳ್ಳ ಫೆಸ್ತರೇ, ನಾನು ಹುಚ್ಚನಲ್ಲ, ಆದರೆ ನಾನು ಸತ್ಯವನ್ನೇ ಸ್ವಸ್ಥಬುದ್ಧಿಯಿಂದ ಮಾತನಾಡುತ್ತಿರುವೆನು. \v 26 ಏಕೆಂದರೆ ರಾಜರಿಗೆ ಈ ಎಲ್ಲಾ ಸಂಗತಿಗಳ ಪರಿಚಯವಿದೆ. ರಾಜರೊಂದಿಗೆ ನಾನು ಸಹ ಭರವಸೆಯಿಂದ ಮಾತನಾಡುತ್ತಿರುವೆನು. ಇವುಗಳಲ್ಲಿ ಯಾವುದೂ ರಾಜರ ಗಮನಕ್ಕೆ ಬಾರದೆ ಹೋಗಿಲ್ಲ ಎಂಬುದು ನನ್ನ ದೃಢ ನಂಬಿಕೆ. ಏಕೆಂದರೆ ಇದು ಮೂಲೆಯಲ್ಲಿ ನಡೆದ ಸಂಗತಿಯಲ್ಲ. \v 27 ಅಗ್ರಿಪ್ಪ ರಾಜರೇ, ನೀವು ಪ್ರವಾದಿಗಳನ್ನು ನಂಬುತ್ತೀರೋ? ನೀವು ನಂಬುತ್ತೀರೆಂದು ನಾನು ಬಲ್ಲೆ,” ಎಂದನು. \p \v 28 ಆಗ ಅಗ್ರಿಪ್ಪನು ಪೌಲನಿಗೆ, “ಅಲ್ಪ ಸಮಯದಲ್ಲಿಯೇ ನನ್ನನ್ನು ಕ್ರಿಸ್ತ ವಿಶ್ವಾಸಿಯನ್ನಾಗಿ ಮಾಡಬೇಕೆಂದಿದ್ದೀಯಾ?” ಎಂದನು. \p \v 29 ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು. \p \v 30 ರಾಜನು ಎದ್ದೇಳಲು ಅವನೊಂದಿಗೆ ರಾಜ್ಯಪಾಲನೂ ಬೆರ್ನಿಕೆಯೂ ಅವರೊಂದಿಗೆ ಕುಳಿತಿದ್ದವರೆಲ್ಲರೂ ಎದ್ದರು. \v 31 ಅವರು ಅಲ್ಲಿಂದ ಹೊರಗೆ ಬಂದು, ಒಬ್ಬರೊಂದಿಗೊಬ್ಬರು ಮಾತನಾಡುತ್ತಾ, “ಮರಣದಂಡನೆಗಾಗಲಿ, ಸೆರೆಮನೆ ವಾಸಕ್ಕಾಗಲಿ ಯೋಗ್ಯವಾದ ಏನನ್ನೂ ಈ ಮನುಷ್ಯನು ಮಾಡಿಲ್ಲ,” ಎಂದರು. \p \v 32 ಆಗ ಅಗ್ರಿಪ್ಪನು ಫೆಸ್ತನಿಗೆ, “ಪೌಲನು ನೇರವಾಗಿ ಕೈಸರನಿಗೆ ಬೇಡಿಕೆ ಸಲ್ಲಿಸದಿದ್ದರೆ ಇವನನ್ನು ಬಿಡುಗಡೆ ಮಾಡಬಹುದಾಗಿತ್ತು,” ಎಂದನು. \c 27 \s1 ಪೌಲನು ರೋಮಿಗೆ ಪ್ರಯಾಣಮಾಡಿದ್ದು \p \v 1 ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು. \v 2 ಆಗ ಅದ್ರಮಿತ್ತಿಯದಿಂದ ಬಂದು ಏಷ್ಯಾ ಪ್ರಾಂತದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ನೌಕೆಯನ್ನೇರಿ ನಾವು ಪ್ರಯಾಣ ಪ್ರಾರಂಭಿಸಿದೆವು. ಥೆಸಲೋನಿಕದಿಂದ ಬಂದ ಮಕೆದೋನ್ಯದ ಅರಿಸ್ತಾರ್ಕನು ನಮ್ಮೊಂದಿಗಿದ್ದನು. \p \v 3 ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು. \v 4 ಅಲ್ಲಿಂದ ಹೊರಟು, ಎದುರುಗಾಳಿ ಬೀಸುತ್ತಿದ್ದದರಿಂದ ನಾವು ಸಮುದ್ರ ಪ್ರಯಾಣಮಾಡಿ ಸೈಪ್ರಸ್ ದ್ವೀಪ ಸಮೀಪವಾಗಿ, \v 5 ಕಿಲಿಕ್ಯಯ ಹಾಗೂ ಪಂಫುಲ್ಯ ಪ್ರಾಂತ ತೀರಗಳ ಎದುರಾಗಿರುವ ಸಮುದ್ರವನ್ನು ದಾಟಿ, ಲುಕೀಯ ಪ್ರಾಂತದ ಮುರ ಪಟ್ಟಣ ಎಂಬಲ್ಲಿಗೆ ತಲುಪಿದೆವು. \v 6 ಅಲ್ಲಿ ಇಟಲಿಗೆ ಪ್ರಯಾಣಮಾಡುತ್ತಿದ್ದ ಅಲೆಕ್ಸಾಂದ್ರಿಯದ ನೌಕೆಯನ್ನು ಶತಾಧಿಪತಿಯು ಕಂಡು ನಮ್ಮನ್ನು ಆ ನೌಕೆಯಲ್ಲಿ ಹತ್ತಿಸಿದನು. \v 7 ಅನೇಕ ದಿನಗಳವರೆಗೆ ನಮ್ಮ ಪ್ರಯಾಣ ನಿಧಾನವಾಗಿ ಸಾಗಿತು. ಕ್ನೀದ ಪಟ್ಟಣ ಎಂಬಲ್ಲಿಗೆ ತಲುಪುವವರೆಗೆ ಬಹಳ ಪ್ರಯಾಸ ಪಡಬೇಕಾಯಿತು. ಎದುರುಗಾಳಿಯು ಅಡ್ಡಿಯಾದದ್ದರಿಂದ, ಸಲ್ಮೋನೆ ಭೂಶಿರವನ್ನು ದಾಟಿ, ಅದರ ಎದುರಾಗಿರುವ ಕ್ರೇತದ್ವೀಪವನ್ನು ತಲುಪಿದೆವು. \v 8 ಆ ದ್ವೀಪದ ಕರಾವಳಿಯಲ್ಲಿಯೇ ಕಷ್ಟದಿಂದ ಮುಂದೆ ಸಾಗುತ್ತಾ, “ಚಂದರೇವುಗಳು” ಎಂದು ಕರೆಯಲಾಗುವ ಸ್ಥಳಕ್ಕೆ ಬಂದೆವು. ಅದು ಲಸಾಯ ಪಟ್ಟಣಕ್ಕೆ ಸಮೀಪದಲ್ಲಿತ್ತು. \p \v 9 ಬಹಳ ಸಮಯ ಕಳೆದುಹೋಯಿತು. ದೋಷಪರಿಹಾರದ ದಿನವು ಸಹ ಮುಗಿದು ಹೋಯಿತು. ಈ ಸಂದರ್ಭದಲ್ಲಿ ಸಮುದ್ರ ಪ್ರಯಾಣ ಅಪಾಯಕರವಾಗಿದ್ದುದರಿಂದ ಪೌಲನು, \v 10 “ಸಹೋದರರೇ, ನಮ್ಮ ಸಮುದ್ರ ಪ್ರಯಾಣವು ಅಪಾಯಕಾರಿಯಾಗಿರುವಂತೆ ತೋರುತ್ತದೆ. ಇದರಿಂದ ನಮ್ಮ ನೌಕೆಗೂ ಸರಕಿಗೂ ಅಷ್ಟೇ ಅಲ್ಲ, ನಮ್ಮ ಪ್ರಾಣಗಳಿಗೂ ದೊಡ್ಡ ಹಾನಿ ಬರುವ ಸಂಭವವಿದೆ,” ಎಂದು ಎಚ್ಚರಿಸಿದನು. \v 11 ಆದರೆ ಶತಾಧಿಪತಿಯು ಪೌಲನು ಹೇಳಿದ್ದಕ್ಕೆ ಕಿವಿಗೊಡದೆ ನೌಕೆಯ ನಾವಿಕನು ಹಾಗೂ ಯಜಮಾನನು ಹೇಳಿದ ಮಾತುಗಳಿಗೆ ಕಿವಿಗೊಟ್ಟನು. \v 12 ಆದರೆ ಚಳಿಗಾಲ ಕಳೆಯಲು ಆ ಬಂದರು ಅನುಕೂಲವಾಗಿರಲಿಲ್ಲ. ಆದ್ದರಿಂದ ಹೆಚ್ಚು ಮಂದಿ ಪ್ರಯಾಣ ಮುಂದುವರಿಸಬೇಕೆಂದು ತೀರ್ಮಾನಿಸಿದರು. ಸಾಧ್ಯವಾದರೆ ಫೊಯಿನಿಕ್ಸನ್ನು ತಲುಪಿ ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂಬುದು ಅವರ ಯೋಚನೆಯಾಗಿತ್ತು. ಫೊಯಿನಿಕ್ಸ, ಕ್ರೇತದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿತ್ತು. \s1 ಚಂಡಮಾರುತ \p \v 13 ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು. \v 14 ಆದರೆ ಸ್ವಲ್ಪ ಸಮಯದಲ್ಲಿಯೇ “ಈಶಾನ್ಯ ಮಾರುತ” ಎಂಬ ಪ್ರಚಂಡ ಗಾಳಿ ದ್ವೀಪದ ಕಡೆಯಿಂದ ಬೀಸತೊಡಗಿತು. \v 15 ನೌಕೆ ಬಿರುಗಾಳಿಗೆ ಸಿಕ್ಕಿಕೊಂಡು ಮುಂದೆ ಹೋಗಲಾರದೆ ಇರಲು, ಗಾಳಿ ಬೀಸಿದ ಕಡೆಗೆ ನೂಕಿಸಿಕೊಂಡು ಹೋದೆವು. \v 16 ಕ್ಲೌಡ ಎಂಬ ಪುಟ್ಟ ದ್ವೀಪದ ಮರೆಯಲ್ಲಿ ಹೋಗುತ್ತಿದ್ದಾಗ, ಜೀವರಕ್ಷಕ ದೋಣಿಯನ್ನು ಸರಿಪಡಿಸಿಕೊಂಡು ಹೋಗುವುದು ನಮಗೆ ಕಷ್ಟಕರವಾಯಿತು. \v 17 ನೌಕೆಯವರು ಅದನ್ನು ಮೇಲಕ್ಕೆಳೆದು ಹಗ್ಗಗಳಿಂದ ನೌಕೆಯ ಕೆಳಭಾಗಕ್ಕೆ ಬಿಗಿಯಾಗಿ ಕಟ್ಟಿದರು. ಸುರ್ತಿಸ್ ಎಂಬ ಉಸುಬಿನಲ್ಲಿ ನೌಕೆ ಸಿಕ್ಕಿಕೊಳ್ಳಬಹುದೆಂಬ ಭಯದಿಂದ ಅವರು ನೌಕೆಯ ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಗೆ ನೌಕೆ ತೇಲುವಂತೆ ಬಿಟ್ಟರು. \v 18 ಚಂಡಮಾರುತದಿಂದ ನಾವು ಬಹಳ ಹೊಯ್ದಾಡಿದ್ದರಿಂದ ಮರುದಿನ ಅವರು ಸರಕುಗಳನ್ನು ನೌಕೆಯಿಂದ ಹೊರಗೆ ಎಸೆಯಲು ಪ್ರಾರಂಭಿಸಿದರು. \v 19 ಮೂರನೆಯ ದಿನ ನೌಕೆಯ ಅಡ್ಡ ಮರವನ್ನು ತಮ್ಮ ಕೈಗಳಿಂದಲೇ ಎತ್ತಿ ಹೊರಗೆ ಎಸೆದರು. \v 20 ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ, ನಕ್ಷತ್ರಗಳನ್ನಾಗಲಿ ಕಾಣದೆ ಚಂಡಮಾರುತ ಬೀಸುತ್ತಲೇ ಇದ್ದುದರಿಂದ ನಾವು ತಪ್ಪಿಸಿಕೊಳ್ಳುವ ಎಲ್ಲಾ ನಿರೀಕ್ಷೆಯನ್ನು ಕಳೆದುಕೊಂಡೆವು. \p \v 21 ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು. \v 22 ಈಗಲಾದರೂ ನೀವು ಧೈರ್ಯ ಕಳೆದುಕೊಳ್ಳಬೇಡಿರಿ ಎಂದು ನಿಮಗೆ ಸಲಹೆ ಕೊಡುತ್ತೇನೆ. ನಿಮ್ಮಲ್ಲಿ ಯಾರಿಗೂ ಪ್ರಾಣ ಹಾನಿಯಾಗುವುದಿಲ್ಲ. ನೌಕೆ ಮಾತ್ರವೇ ನಾಶವಾಗಿ ಹೋಗುವುದು. \v 23 ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು, \v 24 ‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು. \v 25 ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ. \v 26 ಆದರೆ ನಾವು ಯಾವುದೋ ಒಂದು ದ್ವೀಪದ ದಡದಲ್ಲಿ ಅಪ್ಪಳಿಸುತ್ತೇವೆ,” ಎಂದನು. \s1 ನೌಕೆ ಒಡೆದುಹೋದದ್ದು \p \v 27 ಹದಿನಾಲ್ಕನೇ ರಾತ್ರಿ ಬಂದ ಮೇಲೆ ನಾವು ಆದ್ರಿಯ ಸಮುದ್ರದಲ್ಲಿ ಬಿರುಗಾಳಿಯು ನಮ್ಮನ್ನು ಹೊಯ್ದಾಡಿಸುತ್ತಿದ್ದಾಗ, ಸುಮಾರು ಮಧ್ಯರಾತ್ರಿಯಲ್ಲಿ ನಾವು ನೆಲವನ್ನು ತಲುಪುತ್ತಿದ್ದೇವೆಂದು ನಾವಿಕರು ಭಾವಿಸಿ, \v 28 ನೀರಿನ ಆಳವನ್ನು ಪರೀಕ್ಷಿಸಿದಾಗ, ಅದು ನೂರಿಪ್ಪತ್ತು ಅಡಿ ಆಳವೆಂದು ಕಂಡುಕೊಂಡರು. ಸ್ವಲ್ಪ ಸಮಯದ ತರುವಾಯ ಆಳ ನೋಡಿದಾಗ, ಅದು ತೊಂಬತ್ತು ಅಡಿಯಿತ್ತು. \v 29 ನಾವು ಬಂಡೆಗಳಿಗೆ ಅಪ್ಪಳಿಸಬಹುದೆಂಬ ಭಯದಿಂದ, ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ, ಬೆಳಗಾಗಲೆಂದು ಹಾರೈಸುತ್ತಿದ್ದೆವು. \v 30 ನೌಕೆಯಿಂದ ತಪ್ಪಿಸಿಕೊಂಡು ಹೋಗಲು ನಾವಿಕರು ನೌಕೆಯ ಮುಂಭಾಗದಲ್ಲಿದ್ದ ಲಂಗರುಗಳನ್ನು ಕೆಳಗಿಳಿಸುವ ನೆಪದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿದರು. \v 31 ಆಗ ಪೌಲನು ಶತಾಧಿಪತಿಗೂ ಸೈನಿಕರಿಗೂ, “ಈ ಜನರು ನೌಕೆಯಲ್ಲಿ ಉಳಿದುಕೊಳ್ಳದಿದ್ದರೆ ನೀವು ತಪ್ಪಿಸಿಕೊಳ್ಳುವುದಕ್ಕಾಗುವುದಿಲ್ಲ,” ಎಂದನು. \v 32 ಆದ್ದರಿಂದ ಸೈನಿಕರು ದೋಣಿಗೆ ಕಟ್ಟಿದ್ದ ಹಗ್ಗಗಳನ್ನು ಕಡಿದುಹಾಕಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು. \p \v 33 ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರೂ ಏನನ್ನಾದರೂ ತಿನ್ನಬೇಕೆಂದು ಒತ್ತಾಯ ಮಾಡಿ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಕಾದುಕೊಂಡವರಾಗಿ ಊಟವನ್ನೇ ಮಾಡಿಲ್ಲ. \v 34 ಆದ್ದರಿಂದ ಊಟಮಾಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕಾಗಿಯೇ. ನೀವು ಜೀವದಿಂದ ಉಳಿಯಬೇಕು. ಏಕೆಂದರೆ ನಿಮ್ಮ ತಲೆಕೂದಲು ಒಂದಾದರೂ ನಾಶವಾಗುವುದಿಲ್ಲ,” ಎಂದನು. \v 35 ಹೀಗೆ ಹೇಳಿದ ನಂತರ ಅವನು ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಎದುರಿನಲ್ಲಿ ದೇವರಿಗೆ ಕೃತಜ್ಞತೆ ಸಲ್ಲಿಸಿ, ಅದನ್ನು ಮುರಿದು ತಿನ್ನಲು ಪ್ರಾರಂಭಿಸಿದನು. \v 36 ಅವರೆಲ್ಲರೂ ಧೈರ್ಯಹೊಂದಿ ಊಟಮಾಡಿದರು. \v 37 ಅಲ್ಲಿ ನೌಕೆಯಲ್ಲಿ ನಾವೆಲ್ಲಾ ಒಟ್ಟು ಇನ್ನೂರ ಎಪ್ಪತ್ತಾರು ಜನರಿದ್ದೆವು. \v 38 ಎಲ್ಲರೂ ಸಾಕಷ್ಟು ಊಟಮಾಡಿದ ಮೇಲೆ ಗೋಧಿಯನ್ನು ಸಮುದ್ರದಲ್ಲಿ ಎಸೆದು ನೌಕೆಯ ಭಾರವನ್ನು ಹಗುರಗೊಳಿಸಿದರು. \p \v 39 ಬೆಳಗಾದ ಮೇಲೆ ನೆಲವನ್ನು ಗುರುತಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆದರೆ ಅವರು ದಡವನ್ನು ಕಂಡು ಸಾಧ್ಯವಾದರೆ ಅಲ್ಲಿ ನೌಕೆಯನ್ನು ನಿಲ್ಲಿಸಬೇಕೆಂದು ತೀರ್ಮಾನಿಸಿದರು. \v 40 ಲಂಗರುಗಳನ್ನು ಸಡಿಲಗೊಳಿಸಿ ಅವುಗಳನ್ನು ಸಮುದ್ರದಲ್ಲಿ ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಿದ್ದ ಹಗ್ಗಗಳನ್ನು ಬಿಚ್ಚಿದರು. ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ನೌಕೆ ದಡದ ಕಡೆಗೆ ಚಲಿಸುವಂತೆ ಮಾಡಿದರು. \v 41 ಆದರೆ ನೌಕೆ ಮಧ್ಯದಲ್ಲಿ ಮರುಳು ದಿಬ್ಬಕ್ಕೆ ಅಪ್ಪಳಿಸಿ ಮುಳುಗಲಿಕ್ಕೆ ಪ್ರಾರಂಭಿಸಿತು. ನೌಕೆಯ ಮುಂಭಾಗ ಮರಳಲ್ಲಿ ಸಿಕ್ಕಿ ಅಲ್ಲಾಡದೇ ನಿಂತಿತು; ಹಿಂಭಾಗ ಬಿರುಗಾಳಿಯ ಹೊಡೆತಕ್ಕೆ ಸಿಕ್ಕಿ ಮುರಿದುಹೋಯಿತು. \p \v 42 ಆಗ ಕೈದಿಗಳು ಈಜಿಕೊಂಡು ತಪ್ಪಿಸಿಕೊಳ್ಳದಂತೆ ಸೈನಿಕರು ಅವರನ್ನು ಕೊಲ್ಲಲು ಯೋಚನೆ ಮಾಡಿದರು. \v 43 ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು. \v 44 ಕೆಲವರು ಹಲಗೆಗಳ ಮೇಲೆ ಮತ್ತು ಕೆಲವರು ನೌಕೆಯ ತುಂಡುಗಳ ಸಹಾಯದಿಂದ ದಡ ಸೇರಬೇಕೆಂದು ಆಜ್ಞಾಪಿಸಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡ ಸೇರಿದರು. \c 28 \s1 ಮಾಲ್ಟದ ದಡದಲ್ಲಿ \p \v 1 ನಾವು ಸುರಕ್ಷಿತವಾಗಿ ದಡ ಸೇರಿದ ಮೇಲೆ, ಆ ದ್ವೀಪವು ಮಾಲ್ಟ ದ್ವೀಪವೆಂದು ಕಂಡುಕೊಂಡೆವು. \v 2 ಆ ದ್ವೀಪದ ನಿವಾಸಿಗಳು ನಮಗೆ ಅಸಾಧಾರಣವಾದ ದಯೆತೋರಿಸಿದರು. ಆಗ ಮಳೆ ಬರುತ್ತಿದ್ದು ಬಹಳ ಚಳಿಯಿದ್ದುದರಿಂದ ಅವರು ಬೆಂಕಿಹೊತ್ತಿಸಿ ನಮ್ಮನ್ನು ಬರಮಾಡಿಕೊಂಡರು. \v 3 ಪೌಲನು ಕಟ್ಟಿಗೆ ಕೂಡಿಸಿ ಹೊರೆಯನ್ನು ತಂದು ಬೆಂಕಿಯಲ್ಲಿ ಹಾಕಲು ಶಾಖದಿಂದ ಒಂದು ಸರ್ಪವು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು. \v 4 ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. \v 5 ಆದರೆ ಪೌಲನು ಸರ್ಪವನ್ನು ಬೆಂಕಿಯೊಳಗೆ ಝಾಡಿಸಿ ಬಿಟ್ಟನು. ಅವನಿಗೆ ಯಾವ ಕೇಡೂ ಆಗಲಿಲ್ಲ. \v 6 ಅವನು ಬಾತುಹೋಗುತ್ತಾನೆ ಅಥವಾ ಇದ್ದಕ್ಕಿದ್ದಂತೆ ಸತ್ತು ಹೋಗುತ್ತಾನೆ ಎಂದು ಜನರು ಕಾದಿದ್ದರು. ಆದರೆ ಬಹಳ ಹೊತ್ತು ಕಾದು ನೋಡಿದ ಮೇಲೆ, ಅವನಿಗೆ ಕೆಟ್ಟದ್ದೇನೂ ಆಗದಿರುವುದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು, “ಇವನೊಬ್ಬ ದೇವರು” ಎಂದು ಹೇಳಿಕೊಂಡರು. \p \v 7 ದ್ವೀಪದ ಮುಖ್ಯ ಅಧಿಕಾರಿ ಪೊಪ್ಲಿಯನೆಂಬುವನಿಗೆ ಸೇರಿದ ಹೊಲವು ಸಮೀಪದಲ್ಲಿಯೇ ಇತ್ತು. ಅವನು ನಮ್ಮನ್ನು ತನ್ನ ಮನೆಗೆ ಆಮಂತ್ರಿಸಿ ಮೂರು ದಿನ ನಮ್ಮನ್ನು ಉಪಚರಿಸಿದನು. \v 8 ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು. \v 9 ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು. \v 10 ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು. \s1 ರೋಮನ್ನು ತಲುಪಿದ್ದು \p \v 11 ಮೂರು ತಿಂಗಳ ಸಮಯ ದಾಟಿದ ತರುವಾಯ ಆ ದ್ವೀಪದಲ್ಲಿ ಚಳಿಗಾಲ ಕಳೆದ ಮೇಲೆ ಒಂದು ನೌಕೆಯನ್ನು ಹತ್ತಿ ಹೊರಟೆವು. ಅದು ಅಶ್ವಿನಿ ಚಿಹ್ನೆಯಿದ್ದ ಅಲೆಕ್ಸಾಂದ್ರಿಯದ ಒಂದು ನೌಕೆಯಾಗಿತ್ತು. \v 12 ಸುರಕೂಸ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ಮೂರು ದಿನ ಇದ್ದೆವು. \v 13 ಅಲ್ಲಿಂದ ಸಮುದ್ರ ಪ್ರಯಾಣ ಮುಂದುವರಿಸಿ ರೇಗಿಯ ಪಟ್ಟಣಕ್ಕೆ ಬಂದೆವು. ಮರುದಿನ ದಕ್ಷಿಣ ಗಾಳಿ ಬೀಸುತ್ತಿದ್ದುದರಿಂದ ಎರಡನೆಯ ದಿನ ಪೊತಿಯೋಲ ರೇವನ್ನು ತಲುಪಿದೆವು. \v 14 ಅಲ್ಲಿ ಕೆಲವು ಸಹೋದರರು ನಮ್ಮನ್ನು ಕಂಡು ಒಂದು ವಾರ ತಮ್ಮೊಂದಿಗೆ ಕಳೆಯಬೇಕೆಂದು ಆಮಂತ್ರಿಸಿದರು. ಕೊನೆಗೆ ನಾವು ರೋಮ್ ಸೇರಿದೆವು. \v 15 ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು. \v 16 ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು. \s1 ರೋಮ್ ಪಟ್ಟಣದಲ್ಲಿ ಪೌಲನ ಬೋಧನೆ \p \v 17 ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು. \v 18 ಅವರು ನನ್ನನ್ನು ವಿಚಾರಣೆ ಮಾಡಿ, ನಾನು ಮರಣಶಿಕ್ಷೆ ಹೊಂದಲು ಯಾವ ಅಪರಾಧವೂ ಇಲ್ಲದಿರುವುದನ್ನು ಕಂಡು ನನ್ನನ್ನು ಬಿಡುಗಡೆ ಮಾಡಲಿದ್ದರು. \v 19 ಆದರೆ ಯೆಹೂದ್ಯರು ಅದನ್ನು ವಿರೋಧಿಸಿದಾಗ, ನಾನು ನೇರವಾಗಿ ಕೈಸರನಿಗೆ ಮನವಿ ಮಾಡಿಕೊಳ್ಳಲೇಬೇಕಾಯಿತು. ನನಗೆ ಸ್ವದೇಶದವರ ವಿರೋಧವಾಗಿ ಹೊರಿಸಲು ಯಾವ ಆಪಾದನೆಯೂ ಇಲ್ಲ. \v 20 ಈ ಕಾರಣದಿಂದಲೇ ನಾನು ನಿಮ್ಮನ್ನು ಭೇಟಿಯಾಗಿ ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲರ ನಿರೀಕ್ಷೆಯ ನಿಮಿತ್ತವಾಗಿಯೇ ನಾನು ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು. \p \v 21 ಅದಕ್ಕೆ ಅವರು, “ನಿನ್ನ ವಿಷಯದಲ್ಲಿ ಯೂದಾಯದಿಂದ ನಮಗೆ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರಲ್ಲಿ ಯಾರೂ ನಿನ್ನ ವಿಷಯದಲ್ಲಿ ಏನನ್ನೂ ವರದಿ ಮಾಡಿಲ್ಲ. ನಿನ್ನ ಬಗ್ಗೆ ಯಾವ ಕೆಟ್ಟದ್ದನ್ನೂ ಹೇಳಿಲ್ಲ. \v 22 ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು. \p \v 23 ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು. \v 24 ಕೆಲವರಿಗೆ ಅವನು ಹೇಳಿದ್ದರ ಬಗ್ಗೆ ಮನದಟ್ಟಾಯಿತು. \v 25 ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ: \q1 \v 26 “ ‘ಈ ಜನರ ಬಳಿಗೆ ಹೋಗಿ ಹೇಳು, \q1 “ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; \q2 ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.” \q1 \v 27 ಈ ಜನರ ಹೃದಯವು ಕಠೋರವಾಗಿದೆ; \q2 ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, \q2 ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. \q1 ಇಲ್ಲವಾದರೆ ಅವರು ತಮ್ಮ ಕಣ್ಣುಗಳಿಂದ ನೋಡಿ, \q2 ಕಿವಿಗಳಿಂದ ಕೇಳಿಸಿಕೊಂಡು, \q2 ತಮ್ಮ ಹೃದಯದಿಂದ ತಿಳಿದು, \q1 ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’\f + \fr 28:27 \fr*\ft \+xt ಯೆಶಾಯ 6:9,10\+xt*\ft*\f* \m ಎಂಬುದೇ. \p \v 28 “ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು. \v 29 \it ಪೌಲನು ಇದನ್ನು ಹೇಳಿದ ತರುವಾಯ ಯೆಹೂದ್ಯರು ತಮ್ಮತಮ್ಮಲ್ಲಿಯೇ ಕಟುವಾಗಿ ಚರ್ಚಿಸಿಕೊಳ್ಳುತ್ತಾ ಹೊರಟು ಹೋದರು.\it*\f + \fr 28:29 \fr*\ft ಕೆಲವು ಮೂಲ ಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \p \v 30 ಪೌಲನು ತಾನು ಬಾಡಿಗೆಗೆ ತೆಗೆದುಕೊಂಡ ಮನೆಯಲ್ಲಿ ಎರಡು ವರ್ಷಗಳ ಕಾಲವಿದ್ದು ತನ್ನ ಬಳಿಗೆ ಬಂದವರನ್ನೆಲ್ಲಾ ಸ್ವಾಗತಿಸುತ್ತಿದ್ದನು. \v 31 ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.