\id COL - Biblica® Open Kannada Contemporary Version \ide UTF-8 \h ಕೊಲೊಸ್ಸೆಯವರಿಗೆ \toc1 ಕೊಲೊಸ್ಸೆಯವರಿಗೆ ಪೌಲನು ಬರೆದ ಪತ್ರಿಕೆ \toc2 ಕೊಲೊಸ್ಸೆಯವರಿಗೆ \toc3 ಕೊಲೊಸ್ಸೆ \mt1 ಕೊಲೊಸ್ಸೆಯವರಿಗೆ \mt2 ಪೌಲನು ಬರೆದ ಪತ್ರಿಕೆ \c 1 \p \v 1 ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, \b \p \v 2 ಕ್ರಿಸ್ತನಲ್ಲಿರುವ ಕೊಲೊಸ್ಸೆಯ ದೇವರ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರ ಸಹೋದರಿಯರಿಗೆ: \b \p ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. \b \s1 ಕೃತಜ್ಞತಾಸ್ತುತಿ ಹಾಗೂ ಪ್ರಾರ್ಥನೆ \p \v 3 ನಾವು ನಿಮಗಾಗಿ ಪ್ರಾರ್ಥನೆ ಮಾಡುವಾಗ, ನಮ್ಮ ಕರ್ತ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. \v 4 ಏಕೆಂದರೆ, ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆ ಹಾಗೂ ದೇವಜನರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿ ನಾವು ಕೇಳಿದ್ದೇವೆ. \v 5 ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ. \v 6 ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ. \v 7 ಇದನ್ನು ನೀವು ನಮ್ಮ ಪ್ರೀತಿಯ ಜೊತೆ ಸೇವಕನಾದ ಎಪಫ್ರನಿಂದ ಕಲಿತುಕೊಂಡಿರಿ. ಅವನು ನಮಗೋಸ್ಕರ\f + \fr 1:7 \fr*\ft ಕೆಲವು ಪ್ರತಿಗಳಲ್ಲಿ, \ft*\fqa ನಿಮಗೋಸ್ಕರ\fqa*\f* ಕ್ರಿಸ್ತನ ನಂಬಿಗಸ್ತನಾದ ಸೇವಕನು. \v 8 ಪವಿತ್ರಾತ್ಮರಿಂದ ನೀವು ಹೊಂದಿರುವ ಪ್ರೀತಿಯನ್ನು ನಮಗೆ ತಿಳಿಸಿದವನೂ ಅವನೇ. \p \v 9 ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ. \v 10 ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ \v 11 ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ, \v 12 ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ. \v 13 ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು. \v 14 ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ. \s1 ಕ್ರಿಸ್ತ ಯೇಸುವಿನ ಸರ್ವಶ್ರೇಷ್ಠತೆ \p \v 15 ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ. \v 16 ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು. \v 17 ಕ್ರಿಸ್ತ ಯೇಸು ಎಲ್ಲದಕ್ಕೂ ಮೊದಲು ಇದ್ದವರು, ಇವರಲ್ಲಿಯೇ ಸಮಸ್ತವೂ ನೆಲೆಯಾಗಿದೆ. \v 18 ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ. \v 19 ಏಕೆಂದರೆ ದೇವರು ಕ್ರಿಸ್ತ ಯೇಸುವಿನಲ್ಲಿ ಸರ್ವಸಂಪೂರ್ಣತೆಯು ವಾಸವಾಗಿರಲು ಬಯಸಿದರು. \v 20 ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು. \p \v 21 ಹಿಂದಿನ ಕಾಲದಲ್ಲಿ ನೀವು ನಿಮ್ಮ ದುಷ್ಕೃತ್ಯಗಳ ನಿಮಿತ್ತ ದೇವರಿಂದ ದೂರವಿದ್ದವರೂ ಮನಸ್ಸಿನಲ್ಲಿ ದೇವರ ಶತ್ರುಗಳೂ ಆಗಿದ್ದೀರಿ. \v 22 ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ. \v 23 ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು. \s1 ಸಭೆಗಾಗಿ ಪೌಲನ ಸೇವೆ \p \v 24 ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ. \v 25 ನಿಮಗೋಸ್ಕರವಾಗಿ ನನಗೆ ದೇವರು ಕೊಟ್ಟಿರುವ ಜವಾಬ್ದಾರಿಗೆ ಅನುಸಾರವಾಗಿ, ದೇವರ ವಾಕ್ಯವನ್ನು ಸಂಪೂರ್ಣವಾಗಿ ಸಾರಲು ನಾನು ಸಭೆಗೆ ಸೇವಕನಾದೆನು. \v 26 ಆ ರಹಸ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು. ಆದರೂ ಈಗ ಅದು ಕರ್ತ ಯೇಸುವಿನ ಜನರಿಗೆ ಪ್ರಕಟವಾಗಿದೆ. \v 27 ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ. \p \v 28 ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ. \v 29 ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ. \c 2 \p \v 1 ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ವೈಯಕ್ತಿಕವಾಗಿ ಭೇಟಿಯಾಗದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆ ಎಂಬುದನ್ನು ನೀವು ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ. \v 2 ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ. \v 3 ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ. \v 4 ಯಾರೂ ತಮ್ಮ ತರ್ಕದ ನಯಮಾತುಗಳಿಂದ ನಿಮ್ಮನ್ನು ವಂಚಿಸಬಾರದೆಂದು ನಾನು ಇದನ್ನು ಹೇಳುತ್ತಿದ್ದೇನೆ. \v 5 ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ. \s1 ಕ್ರಿಸ್ತ ಯೇಸುವಿನಲ್ಲಿರುವ ಪರಿಪೂರ್ಣ ಜೀವನ \p \v 6 ಆದ್ದರಿಂದ ನೀವು ಕ್ರಿಸ್ತ ಯೇಸುವನ್ನು ಕರ್ತ ಎಂದು ಅಂಗೀಕರಿಸಿದಂತೆಯೇ ಅವರಲ್ಲಿ ಬಾಳಿರಿ. \v 7 ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ. \p \v 8 ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ\f + \fr 2:8 \fr*\ft ಈ ಲೋಕವನ್ನು ನಿಯಂತ್ರಿಸುವ ದುಷ್ಟ ಶಕ್ತಿಗೆ\ft*\f* ಅನುಸರಿಸುವವರಾಗಿದ್ದಾರೆ. \p \v 9 ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ. \v 10 ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ. \v 11 ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ. \v 12 ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ. \p \v 13 ನಿಮ್ಮ ಪಾಪಗಳಿಂದಲೂ ನಿಮ್ಮ ಸುನ್ನತಿಯಿಲ್ಲದ ಪಾಪ ಸ್ವಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತ ಯೇಸುವಿನೊಂದಿಗೆ ಜೀವಿತರನ್ನಾಗಿ ಮಾಡಿ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದರು. \v 14 ನಮಗೆ ವಿರೋಧವಾಗಿ ನಿಂತು ನಮ್ಮ ಮೇಲೆ ತಪ್ಪು ಹೊರಿಸುವಂತೆ ಬರೆಯಲಾಗಿದ್ದ ಶಾಸನಗಳನ್ನು ಕ್ರಿಸ್ತ ಯೇಸು ರದ್ದುಮಾಡಿದರು. ಅವುಗಳನ್ನು ಶಿಲುಬೆಯ ಮೇಲೆ ಜಡಿದು ಇಲ್ಲದಂತೆ ಮಾಡಿದರು. \v 15 ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು. \s1 ಮಾನವೀಯ ಬೋಧನೆಗಳಿಂದ ವಿಮೋಚನೆ \p \v 16 ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ. \v 17 ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ. \v 18 ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ. \v 19 ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ. \p \v 20 ಪ್ರಾಪಂಚಿಕ ಬಾಲಬೋಧನೆಗಳಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದೀರಿ. ಹಾಗಾದರೆ ನೀವು ಇನ್ನೂ ಪ್ರಾಪಂಚಿಕ ನಿಯಮಗಳಿಗೆ ಅಧೀನರಾಗಿರುವುದೇಕೆ? \v 21 “ಹಿಡಿಯಬೇಡ! ರುಚಿನೋಡಬೇಡ! ಮುಟ್ಟಬೇಡ!” \v 22 ಈ ಶಾಸನಗಳು ಮಾನವ ಆಜ್ಞೆಗಳ ಹಾಗೂ ಬೋಧನೆಗಳ ಅನುಸಾರವಾಗಿ ಬಳಕೆಯಿಂದ ಅಳಿದುಹೋಗುತ್ತವೆ! \v 23 ಇಂಥ ಉಪದೇಶಗಳು ತಾವೇ ತಂದುಕೊಂಡ ಆರಾಧನೆಯಲ್ಲಿಯೂ ಸುಳ್ಳು ದೀನತ್ವದಲ್ಲಿಯೂ ದೇಹದಂಡನೆಯಲ್ಲಿಯೂ ಜ್ಞಾನದ ತೋರಿಕೆಯುಳ್ಳದ್ದಾಗಿರುವುದು ನಿಜವೇ. ಆದರೆ ಇವು ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಪ್ರಯೋಜನವಿಲ್ಲದವುಗಳಾಗಿವೆ. \c 3 \s1 ಕ್ರಿಸ್ತನೊಂದಿಗೆ ಜೀವನ \p \v 1 ನೀವು ಕ್ರಿಸ್ತನೊಂದಿಗೆ ಜೀವಂತವಾಗಿ ಎದ್ದವರಾಗಿದ್ದರೆ, ಮೇಲಿರುವವುಗಳನ್ನೇ ಹುಡುಕಿರಿ. ಅಲ್ಲಿ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ. \v 2 ಪರಲೋಕದ ಕಾರ್ಯಗಳ ಮೇಲೆಯೇ ನಿಮ್ಮ ಮನಸ್ಸಿಡಿರಿ, ಭೂಸಂಬಂಧವಾದವುಗಳ ಮೇಲೆ ಮನಸ್ಸಿಡಬೇಡಿರಿ. \v 3 ಏಕೆಂದರೆ ನೀವು ಸತ್ತಿರುವಿರಲ್ಲಾ, ನಿಮ್ಮ ಜೀವವು ಕ್ರಿಸ್ತ ಯೇಸುವಿನೊಂದಿಗೆ ದೇವರಲ್ಲಿ ಮರೆಯಾಗಿದೆ. \v 4 ನಿಮಗೆ ಜೀವವಾಗಿರುವ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ, ನೀವು ಸಹ ಅವರೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ. \p \v 5 ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ. \v 6 ಇವುಗಳ ನಿಮಿತ್ತ ದೇವರ ಕೋಪವು ಉಂಟಾಗುತ್ತಲಿದೆ. \v 7 ಒಮ್ಮೆ ನೀವೂ ಸಹ ಅಂಥವುಗಳನ್ನು ಅನುಸರಿಸುತ್ತಿದ್ದಾಗ ಅವುಗಳಲ್ಲಿಯೇ ಜೀವಿಸಿದಿರಿ. \v 8 ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ, ನಿಮ್ಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. \v 9 ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ! \v 10 ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ. \v 11 ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ. \p \v 12 ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ. \v 13 ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ. \v 14 ಎಲ್ಲದಕ್ಕಿಂತ ಮಿಗಿಲಾಗಿ, ಎಲ್ಲವನ್ನೂ ಪರಿಪೂರ್ಣವಾದ ಐಕ್ಯತೆಯಲ್ಲಿ ಬಂಧಿಸುವ ಪ್ರೀತಿಯನ್ನು ಧರಿಸಿಕೊಳ್ಳಿರಿ. \p \v 15 ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ. \v 16 ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ. \v 17 ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ. \s1 ವಿಶ್ವಾಸಿಗಳ ಕುಟುಂಬಗಳಿಗಾಗಿ ನಿಯಮಗಳು \p \v 18 ಹೆಂಡತಿಯರೇ, ನೀವು ಕರ್ತ ಯೇಸುವಿನಲ್ಲಿ ಯೋಗ್ಯರಾಗಿರುವಂತೆ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. \p \v 19 ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ. \p \v 20 ಮಕ್ಕಳೇ, ಎಲ್ಲಾ ವಿಧಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಏಕೆಂದರೆ ಇದು ಕರ್ತ ಯೇಸುವಿಗೆ ಬಹು ಮೆಚ್ಚಿಕೆಯಾಗಿದೆ. \p \v 21 ತಂದೆಯರೇ, ನಿಮ್ಮ ಮಕ್ಕಳನ್ನು ರೇಗಿಸಬೇಡಿರಿ. ಹಾಗೆ ಮಾಡಿದರೆ, ಅವರು ನಿರಾಶರಾಗುವರು. \p \v 22 ಸೇವಕರೇ, ಭೂಮಿಯಲ್ಲಿ ನಿಮ್ಮ ಯಜಮಾನರಾಗಿರುವವರು ನೋಡುತ್ತಿರುವಾಗ ಮಾತ್ರ ಸೇವೆ ಮಾಡುವವರಾಗದೆ, ಕರ್ತ ಯೇಸುವಿಗೆ ಭಯಪಡುವವರಾಗಿ ಸರಳ ಹೃದಯದಿಂದ ಕೆಲಸಮಾಡಿ, ಅವರಿಗೆ ವಿಧೇಯರಾಗಿರಿ. \v 23 ನೀವು ಏನನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ. \v 24 ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ. \v 25 ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ದೇವರಲ್ಲಿ ಪಕ್ಷಪಾತವಿರುವುದಿಲ್ಲ. \c 4 \p \v 1 ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ, ಯೋಗ್ಯವಾದದ್ದನ್ನೂ ಕೊಡಿರಿ. \s1 ವಿವಿಧ ಸದುಪದೇಶಗಳು \p \v 2 ಎಚ್ಚರವಾಗಿದ್ದು ಕೃತಜ್ಞತೆ ಉಳ್ಳವರಾಗಿ ಪ್ರಾರ್ಥನೆಯಲ್ಲಿ ನಿರತರಾಗಿರಿ. \v 3 ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ. \v 4 ಆದಕಾರಣ ನಾನು ಆ ರಹಸ್ಯವನ್ನು ಮಾಡಬಯಸುವ ರೀತಿಯಲ್ಲಿ ಸ್ಪಷ್ಟವಾಗಿ ಸಾರುವಂತೆಯೂ ಬೇಡಿಕೊಳ್ಳಿರಿ. \v 5 ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ. \v 6 ನಿಮ್ಮ ಸಂಭಾಷಣೆ ಯಾವಾಗಲೂ ಪೂರ್ಣ ಕೃಪೆಯುಳ್ಳದ್ದೂ, ಉಪ್ಪಿನಿಂದ ಹದವುಳ್ಳದ್ದೂ ಆಗಿರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ. \b \s1 ಅಂತಿಮ ವಂದನೆಗಳು \p \v 7 ಪ್ರಿಯ ಸಹೋದರನೂ ನಂಬಿಗಸ್ತ ಸೇವಕನೂ ಮತ್ತು ಕರ್ತ ಯೇಸುವಿನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯವನ್ನೆಲ್ಲಾ ನಿಮಗೆ ತಿಳಿಸುವನು. \v 8 ನೀವು ನಮ್ಮ ಪರಿಸ್ಥಿತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಉತ್ತೇಜಿಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. \v 9 ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ, ಪ್ರಿಯ ಸಹೋದರನೂ ಆದ ಓನೇಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು. \b \p \v 10 ನನ್ನ ಜೊತೆ ಸೆರೆಯಾಳಾದ ಅರಿಸ್ತಾರ್ಕ, ಬಾರ್ನಬನ ಸಹೋದರಿಯ ಮಗನಾದ ಮಾರ್ಕನು ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನ ವಿಷಯದಲ್ಲಿ ನೀವು ಮಾರ್ಗದರ್ಶನ ಹೊಂದಿದ್ದೀರಲ್ಲಾ, ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. \p \v 11 ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾನೆ. ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸದವರಾಗಿದ್ದವರಲ್ಲಿ ಇವರು ಮಾತ್ರವೇ ಯೆಹೂದ್ಯರು. ಇವರು ನನಗೆ ತುಂಬಾ ಆದರಣೆಯಾಗಿದ್ದರು. \p \v 12 ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ. \v 13 ನಿಮಗಾಗಿಯೂ ಲವೊದಿಕೀಯ ಹಾಗೂ ಹಿರಿಯಾಪೊಲಿಯ ಜನರಿಗಾಗಿಯೂ ಅವನು ಬಹಳ ಪ್ರಯಾಸಪಡುತ್ತಿದ್ದಾನೆಂದು ಎಪಫ್ರನ ವಿಷಯವಾಗಿ ನಾನು ಸಾಕ್ಷಿ ಹೇಳುತ್ತೇನೆ. \p \v 14 ಪ್ರಿಯ ವೈದ್ಯನಾದ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. \p \v 15 ಲವೊದಿಕೀಯದಲ್ಲಿರುವ ಸಹೋದರರಿಗೂ ನುಂಫಳಿಗೂ ಆಕೆಯ ಮನೆಯಲ್ಲಿರುವ ಸಭೆಗೂ ವಂದನೆಗಳನ್ನು ಹೇಳಿರಿ. \b \p \v 16 ಈ ಪತ್ರವನ್ನು ನಿಮ್ಮ ಮಧ್ಯದಲ್ಲಿ ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿ ಹೇಳುವ ವ್ಯವಸ್ಥೆಮಾಡಿರಿ. ಹಾಗೆಯೇ ಲವೊದಿಕೀಯದಿಂದ ಬರುವ ಪತ್ರವನ್ನು ನೀವೂ ಓದಿಕೊಳ್ಳಿರಿ. \b \p \v 17 ಅರ್ಖಿಪ್ಪನಿಗೆ, “ನೀನು ಕರ್ತ ಯೇಸುವಿನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವುದಕ್ಕೆ ಎಚ್ಚರವಾಗಿರಬೇಕು!” ಎಂದು ಹೇಳಿರಿ. \b \p \v 18 ಇದು ಪೌಲನಾದ ನಾನೇ ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.