\id DAN - Biblica® Open Kannada Contemporary Version \ide UTF-8 \h ದಾನಿಯೇಲ \toc1 ದಾನಿಯೇಲ \toc2 ದಾನಿಯೇಲ \toc3 ದಾನಿ \mt1 ದಾನಿಯೇಲ \c 1 \s1 ಬಾಬಿಲೋನಿನಲ್ಲಿ ದಾನಿಯೇಲನಿಗೆ ತರಬೇತಿ \p \v 1 ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆಹಾಕಿದನು. \v 2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್\f + \fr 1:2 \fr*\fq ಶಿನಾರ್ \fq*\ft ಅಥವಾ \ft*\fqa ಬಾಬಿಲೋನ್\fqa*\f* ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು. \p \v 3 ಅರಸನು ತನ್ನ ಕಂಚುಕಿಯರ ಮುಖ್ಯಸ್ಥನಾದ ಅಶ್ಪೆನಜನ ಸಂಗಡ ಮಾತನಾಡಿ ಅವನು ಇಸ್ರಾಯೇಲರೊಳಗೆ ಕೆಲವರನ್ನು ಅರಸನ ಸಂತಾನದೊಳಗಿಂದಲೂ, ಪ್ರಧಾನರೊಳಗಿಂದಲೂ \v 4 ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು. \v 5 ಅರಸನು ರಾಜಭೋಜನದಲ್ಲಿಯೂ, ತಾನು ಕುಡಿಯುವ ದ್ರಾಕ್ಷಾರಸದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿಸಿದನು. ಹೀಗೆ ಅವರು ಮೂರು ವರ್ಷಗಳ ಕಾಲ ಪೋಷಿಸಲಾದ ಮೇಲೆ ಅರಸನ ಸನ್ನಿಧಿಯ ಸೇವಕರಾಗುವರು. \p \v 6 ಇವರಲ್ಲಿ ಯೆಹೂದದಿಂದ ದಾನಿಯೇಲ, ಹನನ್ಯ, ಮೀಶಾಯೇಲ್, ಅಜರ್ಯ ಎಂಬವರಿದ್ದರು. \v 7 ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್‌ನೆಗೋ ಎಂಬ ಹೆಸರಿಟ್ಟನು. \p \v 8 ದಾನಿಯೇಲನು ಅರಸನ ಭೋಜನದ ಪಾಲಿನಿಂದಲಾದರೂ, ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವುದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು. ಆದ್ದರಿಂದ ತಾನು ಅಶುದ್ಧನಾಗದ ಹಾಗೆ ಕಂಚುಕಿಯರ ಯಜಮಾನನನ್ನು ಬೇಡಿಕೊಂಡನು. \v 9 ಆಗ ದೇವರು ದಾನಿಯೇಲನ ಮೇಲೆ ಕಂಚುಕಿಯರ ಯಜಮಾನನ ದಯೆ, ಕನಿಕರ ತೋರುವಂತೆ ಮಾಡಿದರು. \v 10 ಕಂಚುಕಿಯ ಯಜಮಾನನು ದಾನಿಯೇಲನಿಗೆ, “ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯ ಅರಸನಿಗೆ ನಾನು ಭಯಪಡುತ್ತೇನೆ. ಏಕೆಂದರೆ ಅರಸನು ಏಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಇತರ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು. ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ?” ಎಂದನು. \p \v 11 ಆಮೇಲೆ ದಾನಿಯೇಲನು ಕಂಚುಕಿಯರ ಯಜಮಾನನು ಹನನ್ಯ, ಮೀಶಾಯೇಲ್, ಅಜರ್ಯ ಮತ್ತು ತನ್ನನ್ನು ನೋಡಿಕೊಳ್ಳುವುದಕ್ಕೆ ಇಟ್ಟಿದ್ದ ಮೇಲ್ವಿಚಾರಕನಿಗೆ, \v 12 “ನಿನ್ನ ಸೇವಕರನ್ನು ಹತ್ತು ದಿವಸಗಳವರೆಗೂ ಪರೀಕ್ಷಿಸಿ ನೋಡು. ಅವರು ನಮ್ಮ ಆಹಾರಕ್ಕೆ ಕೇವಲ ಕಾಯಿಪಲ್ಯಗಳನ್ನು, ಕುಡಿಯುವುದಕ್ಕೆ ಕೇವಲ ನೀರನ್ನು ಕೊಡಲಿ. \v 13 ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ. ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು,” ಎಂದು ಬೇಡಿಕೊಂಡನು. \v 14 ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ, ಹತ್ತು ದಿವಸಗಳವರೆಗೂ ಅವರನ್ನು ಪರೀಕ್ಷಿಸಿದನು. \p \v 15 ಹತ್ತು ದಿವಸಗಳಾದ ಮೇಲೆ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆಲ್ಲರಿಗಿಂತ ಇವರು ಆರೋಗ್ಯಕರವಾಗಿಯೂ, ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದರು. \v 16 ಹೀಗೆ ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂಥ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು. \p \v 17 ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು. \p \v 18 ಅರಸನು ಅವರನ್ನು ಕರೆತರಬೇಕೆಂದು ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು. \v 19 ಅರಸನು ಅವರ ಸಂಗಡ ಮಾತನಾಡಿದನು. ಅವರೆಲ್ಲರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ್ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದ್ದರಿಂದಲೇ ಇವರು ಅರಸನ ಸನ್ನಿಧಿಯ ಸೇವಕರಾದರು. \v 20 ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು. \p \v 21 ದಾನಿಯೇಲನು ರಾಜ ಕೋರೆಷನ ಆಳಿಕೆಯ ಮೊದಲನೆಯ ವರ್ಷದ ತನಕ ಅಲ್ಲಿಯೇ ಇದ್ದನು. \c 2 \s1 ನೆಬೂಕದ್ನೆಚ್ಚರನ ಕನಸು \p \v 1 ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ. \v 2 ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು. \v 3 ಆಗ ಅರಸನು ಅವರಿಗೆ, “ನಾನು ಒಂದು ಕನಸು ಕಂಡಿದ್ದೇನೆ. ಅದರ ಅರ್ಥವೇನೋ ಎಂದು ತಿಳಿಯಲು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು. \p \v 4 ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು. \p \v 5 ಅರಸನು ಪಂಡಿತರಿಗೆ ಉತ್ತರವಾಗಿ, “ನನ್ನ ಈ ಮಾತು ಖಂಡಿತ. ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ, ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು. ನಿಮ್ಮ ಮನೆಗಳನ್ನು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು. \v 6 ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು. \p \v 7 ಅವರು ಮತ್ತೆ ಉತ್ತರವಾಗಿ, “ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ. ಆಗ ಅದರ ಅರ್ಥವನ್ನು ನಾವು ತಿಳಿಸುವೆವು,” ಎಂದರು. \p \v 8 ಆಗ ಅರಸನು ಉತ್ತರವಾಗಿ, “ನಾನು ಇದನ್ನು ದೃಢವಾಗಿ ನಿರ್ಧರಿಸಿದ್ದೇನೆಂದು ಹೇಳಿದ್ದರಿಂದ ನೀವು ಸಮಯ ಉಳಿಸಿಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಿದ್ದೀರೆಂದು ನನಗೆ ನಿಶ್ಚಯವಾಗಿದೆ. \v 9 ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು. \p \v 10 ಆಗ ಪಂಡಿತರು ಅರಸನಿಗೆ ಉತ್ತರವಾಗಿ, “ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕದಲ್ಲಿಲ್ಲ! ಆದ್ದರಿಂದ ಯಾವ ಅರಸನಾದರೂ, ಯಾವ ಪ್ರಭುವಾದರೂ, ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ, ಜೋತಿಷ್ಯನಲ್ಲೂ, ಪಂಡಿತನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ. \v 11 ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.” \p \v 12 ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು. \v 13 ಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು. \p \v 14 ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು. \v 15 ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕನಿಗೆ ಉತ್ತರವಾಗಿ, “ಅರಸನಿಂದ ಇಂಥ ಕಠಿಣವಾದ ಆಜ್ಞೆ ಏಕೆ?” ಎಂದು ಕೇಳಲು, ಅರ್ಯೋಕನು ದಾನಿಯೇಲನಿಗೆ ಆ ಸಂಗತಿಯ ಬಗ್ಗೆ ವಿವರಿಸಿದನು. \v 16 ಆಗ ದಾನಿಯೇಲನು ಅರಮನೆಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ, ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು. \p \v 17 ಆಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ಮೀಶಾಯೇಲ್, ಅಜರ್ಯರಿಗೆ ಈ ಸಂಗತಿಯನ್ನು ತಿಳಿಸಿದನು. \v 18 ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು. \v 19 ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ, \v 20 ಹೀಗೆಂದು ಹೇಳಿದನು: \q1 “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! \q2 ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ. \q1 \v 21 ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ \q2 ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. \q1 ಜ್ಞಾನಿಗಳಿಗೆ ಜ್ಞಾನವನ್ನೂ, \q2 ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು. \q1 \v 22 ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. \q2 ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. \q2 ಬೆಳಕು ಅವರೊಳಗೆ ವಾಸಿಸುತ್ತದೆ. \q1 \v 23 ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, \q2 ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. \q1 ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; \q2 ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; \q2 ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.” \s1 ದಾನಿಯೇಲನು ಕನಸಿನ ಅರ್ಥವನ್ನು ಹೇಳಿದ್ದು \p \v 24 ದಾನಿಯೇಲನು ಬಾಬಿಲೋನಿನ ಜ್ಞಾನಿಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ, “ನೀನು ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಬೇಡ. ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು. ಆಗ ನಾನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತೇನೆ,” ಎಂದನು. \p \v 25 ಅರ್ಯೋಕನು ದಾನಿಯೇಲನನ್ನು ತ್ವರೆಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ, ಆತನಿಗೆ, “ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನುಷ್ಯನು ಸಿಕ್ಕಿದ್ದಾನೆ. ಅವನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತಾನೆ,” ಎಂದನು. \p \v 26 ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು. \p \v 27 ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು. \v 28 ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ. \p \v 29 “ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ, ಇನ್ನು ಮುಂದೆ ಏನು ಸಂಭವಿಸುವುದೋ, ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತ್ತು. ಆ ರಹಸ್ಯಗಳನ್ನು ವ್ಯಕ್ತಪಡಿಸುವವರು, ಮುಂದೆ ಸಂಭವಿಸುವುದು ಏನೆಂಬುದನ್ನು ನಿನಗೆ ಗೋಚರಪಡಿಸುತ್ತಾರೆ. \v 30 ಆದರೆ ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂದಲ್ಲದಿದ್ದರೂ, ಕನಸಿನ ಅರ್ಥವು ಅರಸನಾದ ನಿನಗೆ ಗೋಚರವಾಗಿ, ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದುಬರಲೆಂದು ನನಗೆ ಪ್ರಕಟವಾಗಿದೆ. \p \v 31 “ರಾಜನೇ, ನೀನು ನೋಡಲಾಗಿ, ಇಗೋ ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನವಾದ ಆ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು. ಅದರ ಆಕಾರವು ಭಯಂಕರವಾಗಿತ್ತು. \v 32 ಈ ಪ್ರತಿಮೆಯ ತಲೆಯು ಅಪ್ಪಟ ಬಂಗಾರದಿಂದಲೂ, ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ, ಅದರ ಹೊಟ್ಟೆಯು ಮತ್ತು ತೊಡೆಗಳು ಕಂಚಿನಿಂದಲೂ, \v 33 ಅದರ ಕಾಲುಗಳು ಕಬ್ಬಿಣದಿಂದಲೂ, ಅದರ ಪಾದಗಳು ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿತ್ತು. \v 34 ನೀವು ನೋಡುತ್ತಿರಲಾಗಿ, ಒಂದು ಗುಂಡು ಬಂಡೆಯು ಮಾನವ ಹಸ್ತದ ಸಹಾಯವಿಲ್ಲದೆ ಒಡೆದು, ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದಗಳಿಗೆ ಬಡಿದು ಚೂರುಚೂರು ಮಾಡಿತು. \v 35 ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು. \p \v 36 “ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ. \v 37 ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ. \v 38 ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ. \p \v 39 “ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು. \v 40 ಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು. \v 41 ಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು. \v 42 ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ, ಅರ್ಧ ಮಣ್ಣಿನಿಂದಲೂ ಮಾಡಿದ ಹಾಗೆ, ರಾಜ್ಯವು ಅರ್ಧ ಮುರಿದದ್ದಾಗಿಯೂ, ಅರ್ಧ ಬಲವಾದದ್ದಾಗಿಯೂ ಇರುವುದು. \v 43 ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಮಿಶ್ರವಾಗಿರುವುದನ್ನು ನೋಡಿದ ಹಾಗೆ, ಜನರು ಮಿಶ್ರವಾಗಿರುವರು ಮತ್ತು ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ, ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವುದಿಲ್ಲ. \p \v 44 “ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು. \v 45 ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. \p “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು. \p \v 46 ಆಗ ಅರಸನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, ದಾನಿಯೇಲನಿಗೆ ನಮಸ್ಕರಿಸಿ, ಅವನಿಗೆ ಕಾಣಿಕೆಗಳನ್ನೂ, ಸುಗಂಧ ದ್ರವ್ಯವನ್ನೂ ಅರ್ಪಿಸಬೇಕೆಂದೂ ಆಜ್ಞಾಪಿಸಿದನು. \v 47 ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು. \p \v 48 ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು. \v 49 ದಾನಿಯೇಲನು ಅರಸನನ್ನು ಬೇಡಿಕೊಂಡಿದ್ದರಿಂದ, ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನಿನ ಸಂಸ್ಥಾನದ ಕಾರ್ಯಾಧಿಕಾರಿಗಳನ್ನಾಗಿ ನೇಮಿಸಿದನು. ದಾನಿಯೇಲನು ಅರಸನ ಅರಮನೆಯಲ್ಲಿ ಉಳಿದನು. \c 3 \s1 ಬಂಗಾರದ ಪ್ರತಿಮೆ ಮತ್ತು ಉರಿಯುತ್ತಿರುವ ಕುಲುಮೆ \p \v 1 ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು. \v 2 ಆಮೇಲೆ ನೆಬೂಕದ್ನೆಚ್ಚರನು ಉಪರಾಜರನ್ನೂ ರಾಜ್ಯಪಾಲರನ್ನೂ ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಖಜಾಂಚಿದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕರೆಯಿಸಿದನು. \v 3 ಆಗ ಉಪರಾಜರು, ರಾಜ್ಯಪಾಲರು, ಅಧಿಕಾರಸ್ಥರು, ನ್ಯಾಯಾಧಿಪತಿಗಳು, ಖಜಾಂಚಿದವರು, ಸಲಹೆಗಾರರು, ಪಂಡಿತರು, ಎಲ್ಲಾ ಪ್ರಾಂತಗಳ ಅಧಿಕಾರಿಗಳು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕೂಡಿಬಂದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತರು. \p \v 4 ಆಗ ಘೋಷಣೆ ಮಾಡುವವರು ಗಟ್ಟಿಯಾಗಿ ಕೂಗಿ, “ಪ್ರಜೆಗಳೇ, ಜನಾಂಗಗಳೇ, ವಿವಿಧ ಭಾಷೆಯವರೇ \v 5 ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳಿದ ಕೂಡಲೇ, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು. \v 6 ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು. \p \v 7 ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು. \p \v 8 ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು \v 9 ಅರಸನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು. \v 10 ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾಗಸ್ವರ ಮುಂತಾದ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿದಾಗ ಪ್ರತಿಯೊಬ್ಬ ಮನುಷ್ಯನು ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅರಸನು ಆಜ್ಞೆಯನ್ನು ಹೊರಡಿಸಿದ್ದಾನೆ. \v 11 ಅಡ್ಡಬೀಳದೆ ಆರಾಧಿಸದೆ ಇರುವವರನ್ನು ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಬೇಕೆಂದು ಆಜ್ಞೆಮಾಡಿದಿಯಲ್ಲಾ? \v 12 ಆದರೆ ನೀನು ಬಾಬಿಲೋನಿನ ಪ್ರಾಂತದ ಕೆಲಸಗಳ ಮೇಲೆ ಇಟ್ಟಿರುವ ಯೆಹೂದ್ಯರಾದ ಕೆಲವರು ಎಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅವರು ನಿನ್ನ ದೇವರುಗಳನ್ನಾಗಲಿ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನಾದರೂ ಆರಾಧಿಸುವುದಿಲ್ಲ,” ಎಂದು ಹೇಳಿದರು. \p \v 13 ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು. \v 14 ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇದ್ದೀರಿ ಎಂಬ ಮಾತು ನಿಜವೋ? \v 15 ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು. \p \v 16 ಆಗ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಅರಸನಿಗೆ ಉತ್ತರವಾಗಿ, “ನೆಬೂಕದ್ನೆಚ್ಚರನೇ, ಈ ವಿಷಯದ ಬಗ್ಗೆ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. \v 17 ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು. \v 18 ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು. \p \v 19 ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು. \v 20 ಇದಲ್ಲದೆ ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾದವರಿಗೆ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು. \v 21 ಆಗ ಆ ಮನುಷ್ಯರು ತಮ್ಮ ಶಲ್ಯ, ಇಜಾರು, ಮುಂಡಾಸ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡವರಾಗಿರುವಾಗ, ಧಗಧಗನೆ ಉರಿಯುವ ಬೆಂಕಿಯ ಕುಲುಮೆಯಲ್ಲಿ ಅವರನ್ನು ಹಾಕಿದರು. \v 22 ಅರಸನ ಆಜ್ಞೆಯು ಅವಸರವಾಗಿಯೂ, ಕುಲುಮೆಯು ಬಹು ಉರಿಯಾಗಿಯೂ ಇದ್ದುದರಿಂದ, ಬೆಂಕಿಯ ಜ್ವಾಲೆಯು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಬೆಂಕಿಗೆ ಹಾಕಲು ಎತ್ತಿದ ಆ ಸೈನಿಕರನ್ನೇ ಸಂಹರಿಸಿತು. \v 23 ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಬೆಂಕಿಯ ಕುಲುಮೆಯ ನಡುವೆ ಬಿದ್ದರು. \p \v 24 ಆಗ ಅರಸನಾದ ನೆಬೂಕದ್ನೆಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು, ತನ್ನ ಆಲೋಚನಾಗಾರರ ಸಂಗಡ ಮಾತನಾಡಿ, “ನಾವು ಮೂವರು ಮನುಷ್ಯರನ್ನು ಕಟ್ಟಿ, ಬೆಂಕಿಯಲ್ಲಿ ಹಾಕಿದೆವಲ್ಲವೇ?” ಎಂದನು. \p ಆಗ ಅವರು ಅರಸನಿಗೆ, “ಅರಸನೇ, ಹೌದು ಸತ್ಯ,” ಎಂದು ಉತ್ತರಿಸಿದರು. \p \v 25 ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು. \p \v 26 ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. \p ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು. \v 27 ಆಗ ಉಪರಾಜರು, ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು, ಎಲ್ಲರೂ ಒಟ್ಟುಗೂಡಿ ಅವರನ್ನು ಸುತ್ತುವರಿದು, ಅವರ ಶರೀರದ ಮೇಲೆ ಬೆಂಕಿಯಿಂದ ಯಾವ ಅಪಾಯವಾಗಿರದೇ ಇರುವುದನ್ನೂ, ಅವರ ತಲೆಗೂದಲುಗಳಲ್ಲಿ ಒಂದಾದರೂ ಸುಡದಿರುವುದನ್ನೂ, ಅವರ ಅಂಗಿಗಳು ನಾಶವಾಗದಿರುವುದನ್ನೂ, ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವುದನ್ನೂ ಕಂಡರು. \p \v 28 ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು. \v 29 ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು. \p \v 30 ಆಗ ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನ್ ಪ್ರಾಂತದಲ್ಲಿ ಉನ್ನತ ಪದವಿಗೆ ತಂದನು. \c 4 \s1 ನೆಬೂಕದ್ನೆಚ್ಚರನು ಕಂಡ ಮರದ ಕನಸು \pmo \v 1 ಅರಸನಾದ ನೆಬೂಕದ್ನೆಚ್ಚರನು, \pmo ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, \pmo ನಿಮಗೆ ಶಾಂತಿಯು ಹೆಚ್ಚಾಗಲಿ. \pm \v 2 ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ. \qm1 \v 3 ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು! \qm2 ಅವರ ಅದ್ಭುತಗಳು ಪರಾಕ್ರಮವಾದವುಗಳು! \qm1 ಅವರ ರಾಜ್ಯವು ನಿತ್ಯವಾದ ರಾಜ್ಯವು, \qm2 ಅವರ ಆಡಳಿತವು ತಲತಲಾಂತರಕ್ಕೂ ಇರುವುದು. \pm \v 4 ನೆಬೂಕದ್ನೆಚ್ಚರನು ಎಂಬ ನಾನು ನನ್ನ ಅರಮನೆಯಲ್ಲಿ ಸಂತೃಪ್ತನಾಗಿದ್ದೆ ಮತ್ತು ಸಮೃದ್ಧನಾಗಿದ್ದೆ. \v 5 ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು. \v 6 ಆದ್ದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವುದಕ್ಕೋಸ್ಕರ ಬಾಬಿಲೋನಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು. \v 7 ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ. \v 8 ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ. \pm \v 9 “ಮಂತ್ರಗಾರರಲ್ಲಿ ಪ್ರಾಮುಖ್ಯನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವಿರುವುದೆಂದು ನಾನು ಬಲ್ಲೆನು. ಯಾವುದೇ ರಹಸ್ಯವು ನಿನಗೆ ಅಸಾಧ್ಯವಾದದ್ದಲ್ಲ. ಆದ್ದರಿಂದ ನಾನು ಕಂಡ ಕನಸಿನ ದರ್ಶನ, ಅದರ ಅರ್ಥವನ್ನೂ ನೀನು ನನಗೆ ಹೇಳು. \v 10 ಹಾಸಿಗೆಯಲ್ಲಿ ಮಲಗಿದ್ದಾಗ ನಾನು ಕಂಡ ದರ್ಶನಗಳು: ನಾನು ನೋಡಲಾಗಿ ಭೂಮಿಯ ಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು. \v 11 ಆ ಮರವು ವಿಶಾಲವಾಗಿಯೂ, ಬಲವಾಗಿಯೂ ಬೆಳೆಯಿತು ಹಾಗೂ ಅದು ಆಕಾಶವನ್ನು ಮುಟ್ಟುತ್ತಿತ್ತು. ಭೂಲೋಕದ ಕಟ್ಟಕಡೆಯವರೆಗೆ ಅದು ಕಾಣಿಸುತ್ತಿತ್ತು. \v 12 ಅದರ ಎಲೆಗಳು ಅಂದವಾಗಿದ್ದವು. ಅದರ ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರವಿತ್ತು. ಕಾಡುಮೃಗಗಳಿಗೆ ಅದರ ಕೆಳಗೆ ನೆರಳಲ್ಲಿ ಆಶ್ರಯ ದೊರಕುತ್ತಿತ್ತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು. ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ದೊರಕುತ್ತಿತ್ತು. \pm \v 13 “ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು. \v 14 ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ. \v 15 ಆದರೆ ಅದರ ಬುಡವೂ, ಬೇರೂ, ಕಬ್ಬಿಣ, ಕಂಚಿನ ಕಟ್ಟುಳ್ಳದ್ದಾಗಿ ನೆಲದಲ್ಲಿ ಹೊಲದ ಹುಲ್ಲಿನಲ್ಲಿ ಇರಲಿ. \pm “ ‘ಅವನು ಆಕಾಶದ ಮಂಜಿನಿಂದ ತೇವವಾಗಲಿ, ಭೂಮಿಯ ಗಿಡಗಳ ಮಧ್ಯದಲ್ಲಿರುವ ಮೃಗಗಳೊಂದಿಗೆ ಅವನು ವಾಸಿಸಲಿ. \v 16 ಅವನಿಗೆ ಏಳು ವರ್ಷಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ. \pm \v 17 “ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’ \pm \v 18 “ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೇಲ್ತೆಶಚ್ಚರನೆಂಬ ನೀನು ಅದರ ಅರ್ಥವನ್ನು ಹೇಳು. ಏಕೆಂದರೆ ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವು ಇರುವುದರಿಂದ ನೀನು ಹೇಳಲು ಶಕ್ತನು,” ಎಂದನು. \s1 ದಾನಿಯೇಲನು ಕನಸನ್ನು ವಿವರಿಸಿದ್ದು \pm \v 19 ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. \pm ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ. \v 20 ನೀನು ಕಂಡ ಮರವು ಬೆಳೆದು, ಬಲಗೊಂಡು ಆಕಾಶದ ತುದಿಯನ್ನು ಮುಟ್ಟಿ, ಇಡೀ ಭೂಮಿಗೆ ಗೋಚರಿಸುತ್ತಿತ್ತು. \v 21 ಅದರ ಎಲೆಗಳು ಅಂದವಾಗಿದ್ದು, ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರ ಇತ್ತು. ಅದರ ಕೆಳಗೆ ಕಾಡುಮೃಗಗಳು ವಾಸಮಾಡಿದ್ದವು. ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸ ಮಾಡಿದ್ದವು. \v 22 ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು. \pm \v 23 “ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’ \pm \v 24 “ಅರಸನೇ, ಇದರ ವ್ಯಾಖ್ಯಾನವು ಏನೆಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ: \v 25 ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು. \v 26 ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂಬ ಆಜ್ಞೆಯ ಅರ್ಥ ಏನೆಂದರೆ, ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಪುನಃಸ್ಥಾಪನೆಯಾಗುವುದು. \v 27 ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.” \s1 ಕನಸು ನೆರವೇರಿತು \pm \v 28 ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭವಿಸಿತು. \v 29 ಹನ್ನೆರಡು ತಿಂಗಳಾದ ಮೇಲೆ ಅರಸನು ಬಾಬಿಲೋನಿನ ರಾಜ್ಯದ ಅರಮನೆಯ ಮೇಲ್ಗಡೆ ತಿರುಗಾಡಿದನು. \v 30 ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು. \pm \v 31 ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಧ್ವನಿ ಉಂಟಾಯಿತು: “ಅರಸನಾದ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ದೈವೋಕ್ತಿ ಏನೆಂದರೆ: ನಿನ್ನ ರಾಜ್ಯವು ನಿನ್ನಿಂದ ತೆಗೆಯಲಾಗುವುದು. \v 32 ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ. \pm \v 33 ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದನು. ದನಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ, ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೆ ಬೆಳೆಯುವವರೆಗೆ ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. \b \pm \v 34 ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. \qm1 ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. \qm2 ಅವರ ರಾಜ್ಯವು ತಲತಲಾಂತರಕ್ಕೂ ಇರುವುದು. \qm1 \v 35 ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ \qm2 ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. \qm1 ದೇವರು ಪರಲೋಕದ ಸೈನ್ಯದಲ್ಲಿಯೂ, \qm2 ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. \qm2 ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. \qm1 “ನೀವು ಏನು ಮಾಡುತ್ತಿರುವಿರಿ?” \qm2 ಎಂದು ದೇವರನ್ನು ಯಾರೂ ಕೇಳಲಾರರು. \pm \v 36 ಇದೇ ಸಮಯದಲ್ಲಿ ನನ್ನ ಬುದ್ಧಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ, ನನ್ನ ತೇಜಸ್ಸೂ ತಿರುಗಿ ಬಂದವು. ನನ್ನ ಆಲೋಚನಾಗಾರರೂ, ನನ್ನ ಪ್ರಭುಗಳೂ ನನ್ನನ್ನು ಹುಡುಕಿ ಬಂದರು. ನಾನು ನನ್ನ ರಾಜ್ಯದಲ್ಲಿ ಪುನಃ ನೆಲೆಗೊಂಡೆನು. ಮೊದಲಿಗಿಂತಲೂ ನನಗೆ ಹೆಚ್ಚಿನ ಪ್ರತಿಭೆ ದೊರೆಯಿತು. \v 37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು. \c 5 \s1 ಗೋಡೆಯ ಮೇಲಿನ ಬರಹ \p \v 1 ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು. \v 2 ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು. \v 3 ಆಗ ಅವರು ಯೆರೂಸಲೇಮಿನ ದೇವರ ಆಲಯದೊಳಗಿಂದ ತಂದಿದ್ದ ಬಂಗಾರದ ಪಾತ್ರೆಗಳನ್ನು ತಂದರು. ಅರಸನೂ ಅವರ ಪ್ರಧಾನರೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. \v 4 ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು. \p \v 5 ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು. \v 6 ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು. \p \v 7 ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು. \p \v 8 ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು. \v 9 ಆಗ ಅರಸನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು. ಅವನ ಮುಖವು ಕಳೆಗುಂದಿತು. ಅವನ ಪ್ರಧಾನರು ಭಯಗೊಂಡರು. \p \v 10 ಆಗ ಅರಸನ ಮತ್ತು ಅವನ ಪ್ರಧಾನರ ಮಾತುಗಳನ್ನು ಕೇಳಿ ರಾಣಿಯು ಔತಣದ ಮನೆಗೆ ಬಂದಳು. ಆಗ ಮಾತನಾಡಿ, “ಅರಸನೇ, ನಿರಂತರವಾಗಿ ಬಾಳು! ನಿನ್ನ ಆಲೋಚನೆಗಳು ನಿನ್ನನ್ನು ಕಳವಳಪಡಿಸದಿರಲಿ. ನಿನ್ನ ಮುಖವು ಕಳೆಗುಂದದಿರಲಿ! \v 11 ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು. \v 12 ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು. \p \v 13 ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ? \v 14 ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ, ಒಳನೋಟ, ಬುದ್ಧಿಯೂ, ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ. \v 15 ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು. \v 16 ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು. \p \v 17 ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು. \p \v 18 “ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು. \v 19 ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು. \v 20 ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು. \v 21 ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು. \p \v 22 “ಅವನ ಮಗ ಬೇಲ್ಯಚ್ಚರನೇ, ನೀನು ಇದನ್ನೆಲ್ಲಾ ತಿಳಿದುಕೊಂಡಿದ್ದರೂ ತಗ್ಗಿಸಿಕೊಳ್ಳದೆ \v 23 ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ. \v 24 ಅದಕ್ಕಾಗಿಯೇ ಆತನು ಕಳುಹಿಸಿದ ಕೈಯ ಭಾಗವು ಬಂದು ಆ ಬರಹವನ್ನು ಬರೆದಿದೆ. \p \v 25 “ಆ ಬರಹವು ಏನೆಂದರೆ: \pc \sc ಮೆನೇ ಮೆನೇ, ತೆಕೇಲ್, ಉಫರ್ಸಿನ್.\sc* \p \v 26 “ಇದರ ಅರ್ಥವು ಹೀಗಿದೆ: \p “\tl ಮೆನೇ\tl* ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ. \p \v 27 “\tl ತೆಕೇಲ್\tl* ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನೀನು ಕೊರತೆಯುಳ್ಳವನಾಗಿ ಕಂಡುಬಂದಿರುವೆ. \p \v 28 “ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು. \p \v 29 ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು. \p \v 30 ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು. \v 31 ಮೇದ್ಯನಾದ ದಾರ್ಯಾವೆಷನು ತನ್ನ ಅರವತ್ತೆರಡು ವಯಸ್ಸಿನಲ್ಲಿ ರಾಜ್ಯವನ್ನು ವಶಪಡಿಸಿಕೊಂಡನು. \c 6 \s1 ದಾನಿಯೇಲನು ಸಿಂಹಗಳ ಗವಿಯಲ್ಲಿ \p \v 1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಉಪರಾಜರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ಇರಿಸಿದನು. \v 2 ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವುದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ನಷ್ಟವಾಗದಂತೆ ಲೆಕ್ಕ ಒಪ್ಪಿಸಲಾಯಿತು. ಇವರಲ್ಲಿ ದಾನಿಯೇಲನು ಒಬ್ಬನಾಗಿದ್ದನು. \v 3 ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು. \v 4 ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು. \v 5 ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪು ಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು. \p \v 6 ಆಗ ಉಪರಾಜರೂ, ದೇಶಾಧಿಪತಿಯೂ ಅರಸನ ಬಳಿಯಲ್ಲಿ ಕೂಡಿಬಂದು, “ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು. \v 7 ರಾಜ್ಯದ ಎಲ್ಲಾ ದೇಶಾಧಿಪತಿಗಳೂ, ರಾಜ್ಯಪಾಲರೂ, ನಾಯಕರೂ, ಉಪರಾಜರೂ, ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನೆಂದರೆ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ಪ್ರಾರ್ಥನೆ ಮಾಡಿದ್ದಾದರೆ ಅಂಥವರು ಸಿಂಹಗಳ ಗವಿಗೆ ಹಾಕಲಾಗುವುದು ಎಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆಯನ್ನು ಕೊಡತಕ್ಕದ್ದು. \v 8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು. \v 9 ಆದಕಾರಣ ದಾರ್ಯಾವೆಷನು ಆ ಬರಹಕ್ಕೂ, ನಿರ್ಣಯಕ್ಕೂ ರುಜು ಹಾಕಿದನು. \p \v 10 ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು. \v 11 ಆಮೇಲೆ ಆ ಮನುಷ್ಯರೆಲ್ಲಾ ಕೂಡಿಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡುತ್ತಿರುವುದನ್ನು ಕಂಡರು. \v 12 ಅನಂತರ ಅವರು ಅರಸನ ಮುಂದೆ ಬಂದು ರಾಜಾಜ್ಞೆಯ ವಿಷಯವಾಗಿ: “ಅರಸನೇ ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡುವರೋ, ಅವರನ್ನು ಸಿಂಹದ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀನು ರುಜು ಹಾಕಲಿಲ್ಲವೇ?” ಎಂದರು. \p ಅದಕ್ಕೆ ಅರಸನು ಉತ್ತರವಾಗಿ, “ಮೇದ್ಯ, ಪಾರಸಿಯರ ಬದಲಾಗದಂಥ ಧರ್ಮವಿಧಿಗಳ ಪ್ರಕಾರ ಅದು ಸ್ಥಿರವಾದ ನಿಬಂಧನೆ” ಎಂದನು. \p \v 13 ಆಗ ಅವರು ಉತ್ತರವಾಗಿ ಅರಸನ ಮುಂದೆ, “ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ, ನೀನು ರುಜು ಹಾಕಿದ ನಿರ್ಣಯವನ್ನೂ ಲಕ್ಷಿಸದೆ, ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ,” ಎಂದರು. \v 14 ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು. \p \v 15 ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿಬಂದು ಅರಸನಿಗೆ, “ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ, ಆಜ್ಞೆಯಾದರೂ ರದ್ದಾಗಬಾರದು ಎಂಬ ಮೇದ್ಯ ಮತ್ತು ಪಾರಸಿಯರ ನಿಯಮದಲ್ಲಿದೆ ಎಂದು ನಿನಗೆ ತಿಳಿದಿರಬೇಕು,” ಎಂದರು. \p \v 16 ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು. \p \v 17 ಗುಹೆಯ ಬಾಯಿಯನ್ನು ಬಂಡೆಯಿಂದ ಮುಚ್ಚಲಾಯಿತು. ಇದಲ್ಲದೆ ದಾನಿಯೇಲನ ಪರಿಸ್ಥಿತಿಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನೂ, ತನ್ನ ಪ್ರಧಾನರ ಮುದ್ರೆಯನ್ನೂ ಅದಕ್ಕೆ ಹಾಕಿದನು. \v 18 ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ. \p \v 19 ಮುಂಜಾನೆಗೆ ಮೊದಲೇ ಅರಸನು ಎದ್ದು, ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು. \v 20 ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು. \p \v 21 ಆಗ ದಾನಿಯೇಲನು ಅರಸನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು. \v 22 ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು. \p \v 23 ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ. \p \v 24 ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು. \p \v 25 ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, \pmo “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ. \pm \v 26 “ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. \qm1 “ಅವರೇ ಜೀವವುಳ್ಳ ದೇವರಾಗಿದ್ದು, \qm2 ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. \qm1 ಅವರ ರಾಜ್ಯವು ನಾಶವಾಗದೆ, \qm2 ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು. \qm1 \v 27 ಅವರೇ ಉದ್ಧರಿಸುವವರೂ ರಕ್ಷಿಸುವವರೂ ಆಗಿದ್ದು, \qm2 ಪರಲೋಕದಲ್ಲಿಯೂ ಭೂಲೋಕದಲ್ಲಿಯೂ \qm2 ಅದ್ಭುತ ಮಹತ್ತುಗಳನ್ನು ನಡೆಸುತ್ತಾರೆ. \qm1 ದಾನಿಯೇಲನನ್ನು ಸಿಂಹಗಳ ಸಾಮರ್ಥ್ಯದಿಂದ \qm2 ಬಿಡಿಸಿದವರೂ ಅವರೇ!” \p \v 28 ಹೀಗೆ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸಮೃದ್ಧವಾಗಿ ಬಾಳಿದನು. \c 7 \s1 ದಾನಿಯೇಲನ ನಾಲ್ಕು ಮೃಗಗಳ ವಿಷಯವಾದ ಕನಸು \p \v 1 ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು. \p \v 2 ದಾನಿಯೇಲನು, “ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿಯು ಮಹಾಸಾಗರವನ್ನು ಕಲಕುತ್ತಿದ್ದವು. \v 3 ಒಂದಕ್ಕೊಂದು ಬೇರೆ ಬೇರೆ ರೂಪದ ನಾಲ್ಕು ದೊಡ್ಡ ಮೃಗಗಳು ಸಮುದ್ರದೊಳಗಿಂದ ಮೇಲೆ ಬಂದವು. \p \v 4 “ಮೊದಲನೆಯದು ಸಿಂಹದ ಹಾಗಿತ್ತು, ಆದರೆ ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ನಾನು ಗಮನಿಸಲು, ಅದರ ರೆಕ್ಕೆಗಳನ್ನು ಕಿತ್ತುಹಾಕಲಾಗಿ, ಅದು ನೆಲದಿಂದ ಎತ್ತರಕ್ಕೆ ಮನುಷ್ಯನಂತೆ ಕಾಲೂರಿ ನಿಂತಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲಾಯಿತು. \p \v 5 “ಇದಲ್ಲದೆ, ಎರಡನೆಯ ಮೃಗವು ಕರಡಿಯ ಹಾಗಿರುವಂಥದ್ದನ್ನು ಕಂಡೆನು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿದ್ದವು. ಅದಕ್ಕೆ, ‘ಎದ್ದೇಳು, ಹೆಚ್ಚು ಮಾಂಸವನ್ನು ತಿನ್ನು,’ ಎಂದು ಹೇಳಿದರು. \p \v 6 “ಇದಾದ ಮೇಲೆ ನಾನು ನೋಡಲಾಗಿ, ಚಿರತೆಯ ಹಾಗಿರುವ ಇನ್ನೊಂದು ಮೃಗವಿತ್ತು. ಇದರ ಬೆನ್ನಿನ ಮೇಲೆ ಪಕ್ಷಿಯ ರೆಕ್ಕೆಗಳು ನಾಲ್ಕು ಇವೆ. ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇವೆ. ಇದಕ್ಕೆ ಆಳುವ ಅಧಿಕಾರವು ಕೊಡಲಾಗಿತ್ತು. \p \v 7 “ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ, ನಾಲ್ಕನೆಯ ಮೃಗವು ಭಯಂಕರವೂ, ಘೋರವೂ, ಬಹು ಬಲವುಳ್ಳದ್ದೂ ಆಗಿತ್ತು. ಅದಕ್ಕೆ ದೊಡ್ಡ ಕಬ್ಬಿಣದ ಹಲ್ಲುಗಳು ಇವೆ. ಅದು ತಿಂದು ತುಂಡುತುಂಡು ಮಾಡಿ, ಮಿಕ್ಕದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದೂ, ಹತ್ತು ಕೊಂಬುಗಳುಳ್ಳದ್ದೂ ಆಗಿತ್ತು. \p \v 8 “ಆ ಕೊಂಬುಗಳ ಬಗ್ಗೆ ನಾನು ಆಲೋಚಿಸುತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿದೆ. ಇದರ ಮುಂದೆ ಮೊದಲಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ, ಬಡಾಯಿ ಕೊಚ್ಚುವ ಬಾಯಿಯೂ ಇದ್ದವು. \p \v 9 “ನಾನು ನೋಡುತ್ತಿದ್ದ ಹಾಗೆಯೇ, \q1 “ಸಿಂಹಾಸನಗಳನ್ನು ಜೋಡಿಸಿದರು. \q2 ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. \q1 ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, \q2 ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, \q1 ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, \q2 ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು. \q1 \v 10 ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, \q2 ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. \q1 ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. \q2 ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು. \p \v 11 “ನಾನು ನೋಡುತ್ತಿರಲು, ಆ ಕೊಂಬು ಬಡಾಯಿಕೊಚ್ಚಿಕೊಂಡದ್ದರಿಂದ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು. \v 12 ಮಿಕ್ಕ ಮೃಗಗಳನ್ನು ಅವುಗಳ ಅಧಿಕಾರದಿಂದ ಹೊರಹಾಕಲಾಯಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವವರೆಗೂ ಅವುಗಳ ಜೀವವನ್ನು ಉಳಿಸಿದರು. \p \v 13 “ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. \v 14 ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ. \s1 ಕನಸಿನ ವಿವರಣೆ \p \v 15 “ದಾನಿಯೇಲನೆಂಬ ನಾನು ನನ್ನ ಆತ್ಮದಲ್ಲಿ ನೊಂದುಕೊಂಡೆನು. ನನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳ ನಿಮಿತ್ತ ಕಳವಳಗೊಂಡೆನು. \v 16 ನಾನು ಹತ್ತಿರ ನಿಂತವರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥವನ್ನು ಕೇಳಿದೆನು. \p “ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು. \v 17 ‘ಈ ದೊಡ್ಡ ಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸರು. \v 18 ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’ \p \v 19 “ಆಮೇಲೆ ನಾಲ್ಕನೆಯ ಮೃಗವು ಎಲ್ಲದರಲ್ಲಿ ವ್ಯತ್ಯಾಸವಾಗಿಯೂ, ಅತಿ ಭಯಂಕರವಾಗಿಯೂ, ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ, ಕಂಚಿನ ಉಗುರುಗಳುಳ್ಳದ್ದಾಗಿಯೂ ತುಂಡುತುಂಡು ಮಾಡಿ, ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥದ್ದೂ ಆಗಿದೆ. \v 20 ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ. \v 21 ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧ ಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು. \v 22 ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು. \p \v 23 “ಆಗ ಅವನು ನನಗೆ: ‘ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗುವುದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ, ಭೂಮಿಯನ್ನೆಲ್ಲಾ ತುಳಿದು ತುಂಡುತುಂಡು ಮಾಡುವಂಥಾದ್ದಾಗಿಯೂ ಇರುವುದು. \v 24 ಆ ಹತ್ತು ಕೊಂಬುಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸರು. ಅನಂತರ ಇನ್ನೊಬ್ಬ ಅರಸನು ಹುಟ್ಟುವನು. ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು. \v 25 ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು. \p \v 26 “ ‘ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯವರೆಗೂ ಅದನ್ನು ಸಂಹರಿಸಿ ನಾಶಪಡಿಸುವುದು. \v 27 ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’ \p \v 28 “ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.” \c 8 \s1 ಟಗರಿನ ಮತ್ತು ಹೋತದ ವಿಷಯವಾದ ದರ್ಶನ \p \v 1 ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ, ಮೊದಲಿನ ದರ್ಶನದಂಥ ಇನ್ನೊಂದು ದರ್ಶನವೂ ದಾನಿಯೇಲನಾದ ನನಗೆ ಕಾಣಿಸಿತು. \v 2 ಈ ದರ್ಶನದಲ್ಲಿ ನಾನು ನೋಡಿದ್ದೇನೆಂದರೆ: ನಾನು ಏಲಾಮ್ ಸೀಮೆಯಲ್ಲಿರುವ ಶೂಷನಿನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ನಾನು ಊಲಾ ನದಿಯ ದಡದ ಬಳಿಯಲ್ಲಿ ನಿಂತಿರುವ ಹಾಗೆ ತೋರಿತು. \v 3 ಆಗ ನಾನು ಕಣ್ಣೆತ್ತಿ ನೋಡಿದಾಗ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ, ಇನ್ನೊಂದಕ್ಕಿಂತ ಒಂದು ಉದ್ದವಾಗಿದ್ದವು. ಆ ದೊಡ್ಡ ಕೊಂಬು ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು. \v 4 ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಕಾದಾಡುತ್ತಿರುವುದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವುದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವುದಕ್ಕೂ ಸಾಧ್ಯವಾಗುವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ, ತನ್ನನ್ನು ಹೆಚ್ಚಿಸಿಕೊಂಡಿತು. \p \v 5 ನಾನು ಇದರ ಬಗ್ಗೆ ಆಲೋಚಿಸಲಾಗಿ ಕೂಡಲೆ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದೆ ಭೂಮಂಡಲವನ್ನೆಲ್ಲಾ ದಾಟಿಕೊಂಡು ಬಂದಿತು. ಆ ಹೋತಕ್ಕೆ ಕಣ್ಣುಗಳ ಮಧ್ಯೆ ವಿಶೇಷವಾದ ಕೊಂಬು ಇತ್ತು. \v 6 ನಾನು ನದಿಯ ಹತ್ತಿರ ಕಂಡ ಆ ಎರಡು ಕೊಂಬಿನ ಟಗರಿನ ಬಳಿಗೆ ಬಂದು ಪರಾಕ್ರಮದಿಂದ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು. \v 7 ಅದು ಟಗರಿನ ಹತ್ತಿರ ಬರುವುದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು, ಅದರ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಅದರ ಮುಂದೆ ನಿಲ್ಲುವುದಕ್ಕೆ ಟಗರಿಗೆ ಏನೂ ಶಕ್ತಿಯಿರಲಿಲ್ಲ. ಆದರೆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಹೋತದ ಹಿಡಿತದಿಂದ ಬಿಡಿಸುವವರು ಯಾರೂ ಇರಲಿಲ್ಲ. \v 8 ಆದ್ದರಿಂದ ಆ ಹೋತವು ಬಹಳವಾಗಿ ಬಲಗೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು, ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು. \p \v 9 ಅವುಗಳ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ, ಪೂರ್ವದ ಕಡೆಗೂ, ರಮ್ಯ ದೇಶದ ಕಡೆಗೂ ಪ್ರಬಲವಾಯಿತು. \v 10 ಅದು ಆಕಾಶದ ಸೈನ್ಯದ ಎತ್ತರಕ್ಕೂ ಬೆಳೆದು, ಆ ಸೈನ್ಯದಲ್ಲಿಯೂ, ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ, ಅವುಗಳನ್ನು ತುಳಿದು ಹಾಕಿತು. \v 11 ಅದು ಯೆಹೋವ ದೇವರ ಸೈನ್ಯದ ಅಧಿಪತಿಗೆ ವಿರೋಧವಾಗಿ ಬಲಗೊಂಡು, ನಿತ್ಯ ಯಜ್ಞವನ್ನು ಯೆಹೋವ ದೇವರಿಗೆ ಸಲ್ಲದಂತೆ ಮಾಡಿ, ಅವನ ಪವಿತ್ರ ಸ್ಥಾನವನ್ನು ಕೆಡವಿ ಹಾಕಲಾಯಿತು. \v 12 ಪ್ರತಿದಿನ ಯಜ್ಞದ ಸಂಗಡ ಯೆಹೋವ ದೇವರ ಸೈನ್ಯವೂ ಸಹ ಅಪರಾಧದ ನಿಮಿತ್ತವಾಗಿ ಅದಕ್ಕೆ ಕೊಡಲಾಯಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ, ಇಷ್ಟಾರ್ಥವನ್ನು ಪೂರೈಸಿಕೊಂಡು ಅನುಕೂಲ ಪಡೆಯಿತು, ವೃದ್ಧಿಗೆ ಬಂದಿತು. \p \v 13 ಆಮೇಲೆ ಒಬ್ಬ ಪರಿಶುದ್ಧನು ಮಾತನಾಡುವುದನ್ನು ಕೇಳಿದೆನು. ಮಾತನಾಡಿದ ಆತನಿಗೆ ಮತ್ತೊಬ್ಬ ಪರಿಶುದ್ಧನು, “ನಿತ್ಯ ಯಜ್ಞವನ್ನು ನಿಲ್ಲಿಸುವುದೂ, ಹಾಳುಮಾಡುವ ಅಪರಾಧವನ್ನು ತಡೆಯುವುದೂ, ಪರಿಶುದ್ಧ ಸ್ಥಳವನ್ನೂ, ಯೆಹೋವ ದೇವರ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವ ಈ ದರ್ಶನ ನೆರವೇರಲು ಎಷ್ಟು ಕಾಲ ಬೇಕಾಗುವುದು?” ಎಂದು ಕೇಳಿದನು. \p \v 14 ಅವನು ನನಗೆ, “ಎರಡು ಸಾವಿರದ ಮುನ್ನೂರು ಸಾಯಂಕಾಲ ಹಾಗೂ ಪ್ರಾತಃಕಾಲದವರೆಗೂ ನಡೆಯುವುವು. ಅನಂತರ ಪರಿಶುದ್ಧ ಸ್ಥಳವು ಪುನಃ ನ್ಯಾಯಸ್ಥಾಪನೆಯಾಗುವುದು,” ಎಂದು ಹೇಳಿದನು. \s1 ದರ್ಶನದ ವಿವರಣೆ \p \v 15 ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ, ಅದರ ಅರ್ಥವನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ, ಮನುಷ್ಯನ ರೂಪದಂತಿರುವ ಒಬ್ಬನು ನನ್ನ ಮುಂದೆ ನಿಂತಿದ್ದನು. \v 16 ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ, “ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು,” ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು. \p \v 17 ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು. \p \v 18 ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ, ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢನಿದ್ರೆಯಲ್ಲಿ ಬಿದ್ದಿದ್ದೆನು. ಆದರೆ ಅವನು ನನ್ನನ್ನು ಮುಟ್ಟಿ, ಎದ್ದು ನಿಲ್ಲುವಂತೆ ಮಾಡಿದನು. \p \v 19 ಅವನು, “ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು, ಆ ದರ್ಶನವು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು. \v 20 ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು, ಮೇದ್ಯ ಮತ್ತು ಪಾರಸಿಯ ರಾಜರು. \v 21 ಆ ಒರಟು ಹೋತವು ಗ್ರೀಕಿನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು. \v 22 ಆ ಕೊಂಬು ಮುರಿದುಹೋದ ಮೇಲೆ, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದಂತೆಯೇ, ಆ ಜನಾಂಗದಿಂದ ನಾಲ್ಕು ರಾಜ್ಯಗಳು ಉದಯಿಸುವುವು. ಆದರೆ ಮೊದಲನೆಯ ಅರಸನಿಗೆ ಇದ್ದಷ್ಟು ಅಧಿಕಾರ ಅವರಿಗೆ ಇರುವುದಿಲ್ಲ. \p \v 23 “ಅವರ ರಾಜ್ಯದ ಕಡೆಯ ಕಾಲದಲ್ಲಿ ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ, ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು. \v 24 ಅವನ ಶಕ್ತಿಯು ಬಲವಾಗಿರುವುದು. ಆದರೆ ಅದು ಸ್ವಂತ ಶಕ್ತಿಯಲ್ಲ. ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ಅಭಿವೃದ್ಧಿಯಾಗುವನು. ಅವನು ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲವಾದ, ಪರಿಶುದ್ಧ ಜನರನ್ನು ನಾಶಮಾಡುವನು. \v 25 ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು. \p \v 26 “ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.” \p \v 27 ದಾನಿಯೇಲನಾದ ನಾನು ಬಳಲಿ ಕೆಲವು ದಿನಗಳವರೆಗೂ ಅಸ್ವಸ್ಥನಾದೆನು. ಅನಂತರ ನಾನು ಎದ್ದು, ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು. ನಾನು ಆ ದರ್ಶನದ ಬಗ್ಗೆ ಬೆಚ್ಚಿಬೆರಗಾದೆನು. ಅದರ ಅರ್ಥವನ್ನೇ ಗ್ರಹಿಸಿಕೊಳ್ಳಲಾಗಲಿಲ್ಲ. \c 9 \s1 ದಾನಿಯೇಲನ ಪ್ರಾರ್ಥನೆ \p \v 1 ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಆದ ದಾರ್ಯಾವೆಷನ ಆಳ್ವಿಕೆಯ ಪ್ರಥಮ ವರ್ಷದಲ್ಲಿ ಬಾಬಿಲೋನ್ ರಾಜ್ಯದ ಮೇಲೆ ಅಧಿಕಾರಿಯಾಗಿದ್ದಾಗ, \v 2 ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು. \v 3 ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು. \p \v 4 ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: \pm “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ, \v 5 ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ. \v 6 ನಿಮ್ಮ ಹೆಸರಿನಲ್ಲಿ ನಮ್ಮ ಅರಸರಿಗೂ, ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ ದೇಶದ ಎಲ್ಲಾ ಜನರಿಗೂ ಮಾತನಾಡಿದ ನಿಮ್ಮ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡಲಿಲ್ಲ. \pm \v 7 “ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ. \v 8 ಯೆಹೋವ ದೇವರೇ, ನಮ್ಮ ಅರಸರಿಗೂ ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ, ನಮಗೂ ನಾಚಿಕೆಯಾಗಿದೆ. ಏಕೆಂದರೆ ನಿಮಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ. \v 9 ನಾವು ಆತನಿಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದರೂ, ನಮ್ಮ ಕರ್ತದೇವರು ಕರುಣೆಯುಳ್ಳವರೂ ಕ್ಷಮಿಸುವವರೂ ಆಗಿದ್ದಾರೆ. \v 10 ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾಗಲಿಲ್ಲ, ಅವರು ತಮ್ಮ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ನೀಡಿದ ನಿಯಮಗಳನ್ನು ಪಾಲಿಸಲಿಲ್ಲ. \v 11 ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. \pm “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ. \v 12 ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ. \v 13 ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ. \v 14 ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ. \pm \v 15 “ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ. \v 16 ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ. \pm \v 17 “ಈಗ, ನಮ್ಮ ದೇವರೇ, ಈ ನಿಮ್ಮ ಸೇವಕನ ಪ್ರಾರ್ಥನೆ ಮತ್ತು ವಿಜ್ಞಾಪನೆಗಳನ್ನು ಕೇಳಿರಿ. ಕರ್ತದೇವರೇ, ಹಾಳಾಗಿರುವ ನಿಮ್ಮ ಪರಿಶುದ್ಧ ಸ್ಥಳವನ್ನು ನಿಮ್ಮ ನಿಮಿತ್ತವಾಗಿ ಅನುಗ್ರಹದಿಂದ ನೋಡಿರಿ. \v 18 ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ. \v 19 ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.” \s1 ಎಪ್ಪತ್ತು “ಏಳುಗಳು” \p \v 20 ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ, \v 21 ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು, \v 22 ನನಗೆ, “ದಾನಿಯೇಲನೇ, ನಿನಗೆ ವಿವೇಕವನ್ನೂ, ಬುದ್ಧಿಯನ್ನೂ ಕೊಡುವುದಕ್ಕೆ ಈಗ ನಾನು ಬಂದಿದ್ದೇನೆ. \v 23 ನೀನು ವಿಜ್ಞಾಪನೆ ಮಾಡಿದ ಕೂಡಲೇ ಉತ್ತರ ಸಿಕ್ಕಿತು. ಅದನ್ನು ನಿನಗೆ ತಿಳಿಸುವುದಕ್ಕೆ ನಾನು ಬಂದಿದ್ದೇನೆ. ಏಕೆಂದರೆ ನೀನು ಅತಿ ಪ್ರಿಯನಾಗಿರುವೆ. ಆದ್ದರಿಂದ ವಿಷಯವನ್ನು ಗ್ರಹಿಸಿಕೊಂಡು ದರ್ಶನವನ್ನು ತಿಳಿದುಕೋ. \p \v 24 “ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು\f + \fr 9:24 \fr*\fq ಎಪ್ಪತ್ತು ವಾರಗಳು \fq*\ft ಎಪ್ಪತ್ತು “ಏಳುಗಳು”\ft*\f* ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ. \p \v 25 “ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು. \v 26 ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು. \v 27 ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು. \c 10 \s1 ದೇವದೂತನ ದರ್ಶನ \p \v 1 ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು. \p \v 2 ಆ ಸಮಯದಲ್ಲಿ ದಾನಿಯೇಲನೆಂಬ ನಾನು, ಮೂರು ವಾರಗಳವರೆಗೂ ದುಃಖಪಡುತ್ತಿದ್ದೆನು. \v 3 ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ. \p \v 4 ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ, ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ಇರುವಾಗ, \v 5 ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು. ಆಗ, ನಾರುಮಡಿಯನ್ನು ಧರಿಸಿದ್ದ ಒಬ್ಬ ಮನುಷ್ಯನನ್ನು ಕಂಡೆನು. ಆತನ ನಡುವು ಊಫಜಿನ ಅತ್ಯುತ್ತಮ ಬಂಗಾರದಿಂದ ಬಿಗಿದಿತ್ತು. \v 6 ಆತನ ದೇಹವು ಪೀತರತ್ನದ ಹಾಗೆಯೂ, ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ, ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ; ಆತನ ಮಾತುಗಳ ಶಬ್ದವು, ಜನಸಮೂಹದ ಸಪ್ಪಳದ ಹಾಗೆಯೂ ಇದ್ದವು. \p \v 7 ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಜನರು ಆ ದರ್ಶನವನ್ನು ನೋಡಲಿಲ್ಲ. ಆದರೆ ಅವರು ಭಯಭ್ರಾಂತರಾಗಿ ಓಡಿಹೋಗಿ ಅಡಗಿಕೊಂಡರು. \v 8 ನಾನು ಒಬ್ಬನೇ ಉಳಿದು, ಈ ಅದ್ಭುತ ದರ್ಶನವನ್ನು ನೋಡಿದೆನು. ನನ್ನಲ್ಲಿ ತ್ರಾಣವು ಇರಲಿಲ್ಲ. ನನ್ನ ಮುಖವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು. \v 9 ಆದರೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು. ಆತನ ಮಾತುಗಳ ಧ್ವನಿಯನ್ನು ಕೇಳಿದಾಗ, ಮುಖ ಕೆಳಗೆಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆ ಇತ್ತು. \p \v 10 ಒಂದು ಕೈ ನನ್ನನ್ನು ಮುಟ್ಟಿ, ನನ್ನ ಮೊಣಕಾಲುಗಳೂ, ನನ್ನ ಅಂಗೈಗಳೂ ನಡುಗುವಂತೆ ಮಾಡಿತು. \v 11 ಆತನು ನನಗೆ, “ದಾನಿಯೇಲನೇ, ಅತಿ ಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ಏಕೆಂದರೆ ನಾನು ಈಗ ನಿನ್ನ ಬಳಿಗೆ ಕಳುಹಿಸಲಾಗಿದ್ದೇನೆ,” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಮೇಲೆ, ನಾನು ನಡುಗುತ್ತಲೇ ನಿಂತೆನು. \p \v 12 ಆಗ ಅವನು ನನಗೆ, “ದಾನಿಯೇಲನೇ, ನೀನು ಭಯಪಡಬೇಡ. ಏಕೆಂದರೆ ನೀನು ತಿಳಿದುಕೊಳ್ಳುವುದಕ್ಕೂ, ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಪ್ರಾರ್ಥನೆಯು ದೇವರಿಗೆ ಮುಟ್ಟಿತು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ. \v 13 ಆದರೆ ಪಾರಸಿಯ ರಾಜ್ಯದ ರಾಜಪುತ್ರನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು. ಏಕೆಂದರೆ ನಾನು ಆ ಪಾರಸಿಯ ಅರಸನಿಂದ ತಡೆಹಿಡಿಯಲಾಗಿದ್ದೆನು. \v 14 ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು. \p \v 15 ಅವನು ನನಗೆ ಈ ಮಾತುಗಳನ್ನು ಹೇಳುತ್ತಿದ್ದಾಗ, ನಾನು ನನ್ನ ಮುಖವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು. \v 16 ಆಗ ಮಾನವನಂತೆ ಇರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ನಾನು ಬಾಯಿತೆರೆದು ಮಾತನಾಡಿ, ನನ್ನ ಮುಂದೆ ನಿಂತಿದ್ದವನಿಗೆ, “ನನ್ನ ಒಡೆಯನೇ, ಆ ದರ್ಶನದ ನಿಮಿತ್ತ, ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ, ನಾನು ನಿತ್ರಾಣನಾಗಿದ್ದೇನೆ. \v 17 ನನ್ನ ಒಡೆಯನ ದಾಸನಾದ ನನ್ನಂಥವನು ನನ್ನ ಒಡೆಯನಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ, ಉಸಿರಾಡಿಸಲೂ ಆಗದು.” \p \v 18 ಆಮೇಲೆ ಪುನಃ ಮನುಷ್ಯನಂತಿದ್ದ ಒಬ್ಬ ನನ್ನನ್ನು ಬಲಪಡಿಸಿ, \v 19 “ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. \p ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು. \p \v 20 ಅವನು, “ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ. ಈಗ ನಾನು ಪಾರಸಿಯದ ರಾಜಪುತ್ರನ ಸಂಗಡ ಯುದ್ಧಮಾಡಲು ಹಿಂದಿರುಗಬೇಕು. ನಾನು ಹೋದ ಮೇಲೆ, ಗ್ರೀಕಿನ ರಾಜಕುಮಾರನು ಬರುವನು. \v 21 ಆದರೆ ಸತ್ಯ ಗ್ರಂಥದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುತ್ತೇನೆ. ನಿಮ್ಮ ರಾಜಕುಮಾರನಾದ ಮೀಕಾಯೇಲನ ಹೊರತು ಮತ್ತೆ ಯಾರೂ ಅವರಿಗೆ ವಿರೋಧವಾಗಿ ನನಗೆ ಸಹಕಾರ ಕೊಡುವುದಿಲ್ಲ.” \c 11 \nb \v 1 ಮೇದ್ಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅವರಿಗೆ ಸಹಾಯಮಾಡಿ, ಅವನನ್ನು ರಕ್ಷಿಸಲು ನಾನು ನಿಂತುಕೊಂಡೆನು. \s1 ದಕ್ಷಿಣದ ಹಾಗೂ ಉತ್ತರದ ಅರಸರು \p \v 2 ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು. \v 3 ಆಗ ಬಲವುಳ್ಳ ಒಬ್ಬ ಅರಸನು ಉದಯಿಸುವನು. ಅವನು ಮಹಾಅಧಿಕಾರದಿಂದ ಆಳುವನು ಮತ್ತು ತನ್ನ ಇಷ್ಟದ ಪ್ರಕಾರ ಮಾಡುವನು. \v 4 ಅವನು ಉದಯಿಸಿದ ನಂತರ, ಅವನ ರಾಜ್ಯ ಒಡೆದು ಆಕಾಶದ ನಾಲ್ಕು ದಿಕ್ಕುಗಳಿಗೂ ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಅದು ಇನ್ನು ಪ್ರಬಲವಾಗದು. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಿತ್ತುಕೊಂಡು ಇತರರಿಗೆ ನೀಡಲಾಗುವುದು. \p \v 5 ದಕ್ಷಿಣದ ಅರಸನು ಬಲಿಷ್ಠನಾಗುವನು. ಆದರೆ ಅವನ ಸೇನಾಪತಿಗಳಲ್ಲಿ ಒಬ್ಬನು ಅವನಿಗಿಂತ ಬಲಿಷ್ಠನಾಗುವನು ಮತ್ತು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವುದು. \v 6 ಕೆಲವು ವರ್ಷಗಳ ನಂತರ ಅವರಿಬ್ಬರು ಒಪ್ಪಂದ ಮಾಡಿಕೊಳ್ಳುವರು. ದಕ್ಷಿಣದ ಅರಸನ ಮಗಳು ಒಪ್ಪಂದ ಮಾಡಿಕೊಳ್ಳಲು ಉತ್ತರದ ಅರಸನ ಬಳಿಗೆ ಬರುವಳು. ಆದರೆ ಅವಳು ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದಿಲ್ಲ. ಅವನೂ, ಅವನ ಅಧಿಕಾರವೂ\f + \fr 11:6 \fr*\fq ಅಧಿಕಾರವೂ \fq*\ft ಅಥವಾ \ft*\fqa ಸಂತತಿ\fqa*\f* ನಿಲ್ಲುವುದಿಲ್ಲ. ಆ ದಿನಗಳಲ್ಲಿ ಅವಳೂ ಅವಳನ್ನು ಕರೆತಂದವರೂ ಮತ್ತು ಅವಳ ತಂದೆಯೂ\f + \fr 11:6 \fr*\fq ತಂದೆಯೂ \fq*\ft ಕೆಲವು ಪ್ರತಿಗಳಲ್ಲಿ \ft*\fqa ಮಗು\fqa*\f* ಅವಳಿಗೆ ಸಹಾಯ ಮಾಡಿದವರು ಯಾರೂ ಉಳಿಯುವುದಿಲ್ಲ. \p \v 7 ಅವಳ ವಂಶದಲ್ಲಿಯ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು, ಸೈನ್ಯದೊಂದಿಗೆ ಬಂದು, ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ, ಅವರ ವಿರುದ್ಧ ಹೋರಾಡಿ ಗೆಲ್ಲುವನು. \v 8 ಅವರ ದೇವರುಗಳನ್ನೂ, ಅವರ ವಿಗ್ರಹಗಳನ್ನೂ ಅವರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನೂ ಅವನು ಸೂರೆಮಾಡಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋಗುವನು. ಕೆಲವು ವರ್ಷಗಳವರೆಗೆ ಅವನು ಉತ್ತರದ ಅರಸನ ಮೇಲೆ ಬಿಟ್ಟುಬಿಡುವನು. \v 9 ಆಮೇಲೆ ಉತ್ತರದ ಅರಸನು, ದಕ್ಷಿಣದ ಅರಸನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗಿ ಹೋಗುವನು. \v 10 ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು. \p \v 11 ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಮಹಾ ಸೈನ್ಯವನ್ನು ಕೂಡಿಸಿದನು. ಉತ್ತರದ ಅರಸನ ಸಂಗಡ ಯುದ್ಧಮಾಡುವನು. ಆದರೆ ಆ ಮಹಾ ಸೈನ್ಯವು ದಕ್ಷಿಣ ಅರಸನ ಕೈವಶವಾಗುವುದು. \v 12 ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ. \v 13 ಏಕೆಂದರೆ ಉತ್ತರದ ಅರಸನು ಪುನಃ ತಿರುಗಿಕೊಂಡು ಮೊದಲನೆಯದಕ್ಕಿಂತಲೂ ದೊಡ್ಡ ಸೈನ್ಯವನ್ನು ನಿಲ್ಲಿಸಿ, ಕೆಲವು ವರ್ಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ, ಬಹಳ ಆಯುಧಗಳ ಸಂಗಡವೂ ನಿಶ್ಚಯವಾಗಿ ಬರುವನು. \p \v 14 ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು. ನಿನ್ನ ಜನರಲ್ಲಿ ಹಿಂಸಾಕಾರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಿರುಗಿ ಬೀಳುವರು. ಆದರೆ ಸೋತುಹೋಗುವರು. \v 15 ಆಗ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ, ದಿಬ್ಬವನ್ನು ಕೆಡವಿ, ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವನು. ದಕ್ಷಿಣದ ಭುಜಬಲವಾದರೂ ಅವನು ಆಯ್ದುಕೊಂಡ ಜನರಾದರೂ ಎದುರಿಸಿ ನಿಲ್ಲುವುದಕ್ಕೆ ಅಶಕ್ತರಾಗುವರು. \v 16 ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು. \v 17 ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ದಕ್ಷಿಣದ ರಾಜನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವನು. ಅವನ ರಾಜ್ಯವನ್ನು ಉರುಳಿಸಲು ಅವನಿಗೆ ಮಗಳನ್ನು ಕೊಡುವನು. ಆದರೆ ಅವನ ಯೋಜನೆಗಳು ಜಯಹೊಂದುವುದಿಲ್ಲ. ಇಲ್ಲವೆ ಅವನಿಗೆ ಸಹಾಯ ಮಾಡುವುದಿಲ್ಲ. \v 18 ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ, ಅನೇಕರನ್ನು ವಶಪಡಿಸಿಕೊಳ್ಳುವನು. ಆದರೆ ಒಬ್ಬ ಅಧಿಪತಿಯು ಅವನ ಅಹಂಕಾರವನ್ನು ಅಡಗಿಸಿಬಿಡುವನು. ಆ ಅಹಂಕಾರವನ್ನು ತನ್ನ ಮೇಲೆ ಹಾಕಿಕೊಳ್ಳದೆ, ಅವನ ಮೇಲೆ ತಿರುಗಿಸಿ ಬಿಡುವನು. \v 19 ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು. ಆದರೆ ಅವನು ಎಡವಿಬಿದ್ದು, ಕಾಣದೆ ಹೋಗುವನು. \p \v 20 ಅವನ ಉತ್ತರಾಧಿಕಾರಿಯು ಅರಸೊತ್ತಿಗೆಯ ಸೊಗಸನ್ನು ಕಾದುಕೊಳ್ಳುವುದಕ್ಕಾಗಿ ಸುಂಕ ವಸೂಲಿ ಮಾಡುವವನನ್ನು ಕಳುಹಿಸುವನು. ಆದರೂ ಕೆಲವೇ ವರ್ಷಗಳಲ್ಲಿ ಅವನು ನಾಶ ಹೊಂದುವನು. ಇದು ಕೋಪದಿಂದಾಗಲಿ ಇಲ್ಲವೆ ಯುದ್ಧದಿಂದಾಗಲಿ ಆಗುವುದಿಲ್ಲ. \p \v 21 ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು. ಅವನಿಗೆ ರಾಜಮರ್ಯಾದೆಯನ್ನು ಕೊಡುವುದಿಲ್ಲ. ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು. \v 22 ಪ್ರವಾಹದಂತಿರುವ ಆ ಸೈನ್ಯವೂ, ಒಡಂಬಡಿಕೆಯ ರಾಜಕುಮಾರನೂ ಅವನ ರಭಸಕ್ಕೆ ಸಿಕ್ಕಿ ಒಡೆದುಹೋಗಿ ನಾಶವಾಗುವರು. \v 23 ಅವನ ಸಂಗಡ ಒಪ್ಪಂದ ಮಾಡಿಕೊಂಡ ಮೇಲೆ ಕಪಟವಾಗಿ ನಡೆಯುವನು. ಕೆಲವು ಜನರ ಸಹಾಯದಿಂದ ಅಧಿಕಾರ ಪಡೆಯುವನು. \v 24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನಗಳ ಫಲವತ್ತಾದ ಪ್ರದೇಶಗಳಲ್ಲಿ ನುಗ್ಗಿ, ತಂದೆ ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು. ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು, ತನ್ನನ್ನು ಅವರಿಗೆ ಹಂಚುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು. \p \v 25 ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು, ಆದರೆ ನಿಲ್ಲಲಾರದೆ ಹೋಗುವನು. ಏಕೆಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು. \v 26 ಅವನ ರಾಜ ಭೋಜನದಲ್ಲಿ ಭಾಗವನ್ನು ತಿಂದವರೇ, ಅವನನ್ನು ನಾಶಮಾಡುವರು. ಅವನ ಸೈನ್ಯವು ತುಂಬಿ ತುಳುಕುವುದು ಮತ್ತು ಅನೇಕರು ಹತರಾಗುವರು. \v 27 ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು. \v 28 ಆಗ ಉತ್ತರದ ಅರಸನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂದಿರುಗುವನು, ಆದರೆ ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವುದು; ಅವನು ಇದಕ್ಕೆ ವಿರುದ್ಧವಾಗಿ ಕಾರ್ಯಸಾಧಿಸಿ, ಸ್ವಂತ ದೇಶಕ್ಕೆ ಹಿಂದಿರುಗುವನು. \p \v 29 ನೇಮಕವಾದ ಕಾಲದಲ್ಲಿಯೇ ಅವನು ಹಿಂದಿರುಗಿ ದಕ್ಷಿಣಕ್ಕೆ ಬರುವನು, ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವುದಿಲ್ಲ. \v 30 ಏಕೆಂದರೆ ಕಿತ್ತೀಮಿನ\f + \fr 11:30 \fr*\fq ಕಿತ್ತೀಮಿನ \fq*\ft ಅಥವಾ \ft*\fqa ಪಶ್ಚಿಮದ ಸಮುದ್ರತಟ್ಟು\fqa*\f* ಹಡಗುಗಳು ಅವನಿಗೆ ವಿರೋಧವಾಗಿ ಬರುವುವು. ಆದ್ದರಿಂದ ಅವನು ಎದೆಗುಂದಿ, ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿ ಕೋಪಿಸಿಕೊಳ್ಳುವನು. ಹಿಂದಿರುಗಿ ಬಂದು ಪರಿಶುದ್ಧ ಒಡಂಬಡಿಕೆಯನ್ನು ತೊರೆದವರಿಗೆ ದಯೆ ತೋರಿಸುವನು. \p \v 31 ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು. \v 32 ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆಯುವವರನ್ನು ನಯವಾದ ಮಾತುಗಳಿಂದ ಕೆಡಿಸುವನು, ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಎದುರಿಸುವರು. \p \v 33 ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದರೂ ಖಡ್ಗದಿಂದಲೂ ಬೆಂಕಿಯಿಂದಲೂ ಸೆರೆಯಿಂದಲೂ ಕೊಳ್ಳೆಯಿಂದಲೂ ಕೆಲಕಾಲ ಸಿಕ್ಕಿ ಬೀಳುವರು. \v 34 ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು, ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಸೇರಿಕೊಳ್ಳುವರು. \v 35 ಇದಲ್ಲದೆ ಅಂತ್ಯಕಾಲದವರೆಗೆ ಜ್ಞಾನಿಗಳನ್ನು ಶೋಧಿಸುವುದಕ್ಕೂ ಅದರಲ್ಲಿ ಅನೇಕರು ಬೀಳುವರು; ಏಕೆಂದರೆ ಇದು ನೇಮಕವಾದ ಸಮಯದಲ್ಲಿ ಬರುವುದು. \s1 ತನ್ನನ್ನು ತಾನೇ ಹೆಚ್ಚಿಸಿಕೊಂಡ ಅರಸನು \p \v 36 ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು. \v 37 ಅವನು ತನ್ನ ಪಿತೃಗಳ ದೇವರನ್ನಾಗಲೀ, ಸ್ತ್ರೀಯರಿಂದ ಅಪೇಕ್ಷಿಸಿದವರನ್ನಾಗಲೀ ಅವನು ಲಕ್ಷಿಸುವುದಿಲ್ಲ, ಯಾವ ದೇವರನ್ನೂ ಲಕ್ಷಿಸುವುದಿಲ್ಲ; ಆದರೆ ಅವನು ಎಲ್ಲವುಗಳಿಗಿಂತ ಹೆಚ್ಚಿ, ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ. \v 38 ಅವನು ಕುಲ ದೇವರಿಗೆ ಬದಲಾಗಿ, ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿ ಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು. \v 39 ಅವನು ಅನ್ಯ ದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು. \p \v 40 ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು. \v 41 ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳನ್ನು ನಾಶಮಾಡುವನು; ಆದರೆ ಎದೋಮು, ಮೋವಾಬು ಮತ್ತು ಅಮ್ಮೋನಿಯರಲ್ಲಿ ಮುಖ್ಯಸ್ಥರು ಅವನ ಕೈಯಿಂದ ತಪ್ಪಿಸಿಕೊಳ್ಳುವರು. \v 42 ಅವನು ಇತರ ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಈಜಿಪ್ಟ್ ದೇಶವು ತಪ್ಪಿಸಿಕೊಳ್ಳದು. \v 43 ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ, ಈಜಿಪ್ಟಿನ ಎಲ್ಲಾ ಅಮೂಲ್ಯ ವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವುದು. ಲಿಬಿಯದವರೂ ಕೂಷ್ಯರೂ ಅವನಿಗೆ ಅಧೀನರಾಗುವರು. \v 44 ಆದರೆ ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವುವು. ಆದ್ದರಿಂದ ಅವನು ಮಹಾ ಉಗ್ರವಾಗಿ ಅನೇಕರನ್ನು ಸಂಹರಿಸುವುದಕ್ಕೂ, ನಿರ್ಮೂಲ ಮಾಡುವುದಕ್ಕೂ ಹೊರಡುವನು. \v 45 ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು. \c 12 \s1 ಯುಗ ಸಮಾಪ್ತಿ \p \v 1 “ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು. \v 2 ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು. \v 3 ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು. \v 4 ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು. \b \p \v 5 ಆಗ ದಾನಿಯೇಲನೆಂಬ ನಾನು ನೋಡಿದೆನು. ಅವರಿಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ, ಇನ್ನೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು. \v 6 ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು. \p \v 7 ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು. \p \v 8 ನಾನು ಅದನ್ನು ಕೇಳಿದೆನು, ಆದರೆ ಗ್ರಹಿಸಲಿಲ್ಲ. ಆಗ ನಾನು, “ನನ್ನ ಒಡೆಯನೇ, ಈ ಸಂಗತಿಗಳ ಅಂತ್ಯವೇನು?” ಎಂದು ಕೇಳಿದೆನು. \p \v 9 ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ. \v 10 ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು. \p \v 11 “ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು. \v 12 1,335 ದಿನಗಳು ಬರುವವರೆಗೆ ಕಾದಿರುವವನೇ ಭಾಗ್ಯವಂತನು. \p \v 13 “ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು.