\id ECC - Biblica® Open Kannada Contemporary Version \ide UTF-8 \h ಪ್ರಸಂಗಿ \toc1 ಪ್ರಸಂಗಿ \toc2 ಪ್ರಸಂಗಿ \toc3 ಪ್ರಸಂಗಿ \mt1 ಪ್ರಸಂಗಿ \c 1 \s1 ಸಮಸ್ತವೂ ವ್ಯರ್ಥ \p \v 1 ದಾವೀದನ ಮಗನೂ ಯೆರೂಸಲೇಮಿನ ಅರಸನೂ ಆದ ಪ್ರಸಂಗಿಯ ಮಾತುಗಳು: \q1 \v 2 “ವ್ಯರ್ಥಗಳಲ್ಲಿ ವ್ಯರ್ಥ! ವ್ಯರ್ಥಗಳಲ್ಲಿ ವ್ಯರ್ಥ!” \q2 ಎಂದು ಪ್ರಸಂಗಿ ಹೇಳುತ್ತಾನೆ. \q1 “ಸಮಸ್ತವೂ ವ್ಯರ್ಥ! \q2 ಎಲ್ಲವೂ ವ್ಯರ್ಥ.” \b \q1 \v 3 ಸೂರ್ಯನ ಕೆಳಗೆ ಮನುಷ್ಯನು ಪಡುವ \q2 ಎಲ್ಲಾ ಪ್ರಯಾಸಗಳಿಂದ ಅವನಿಗೆ ಲಾಭವೇನು? \q1 \v 4 ಸಂತತಿಗಳು ಬರುತ್ತವೆ, ಸಂತತಿಗಳು ಹೋಗುತ್ತವೆ; \q2 ಆದರೆ ಭೂಮಿಯು ಶಾಶ್ವತವಾಗಿ ಉಳಿಯುತ್ತದೆ. \q1 \v 5 ಸೂರ್ಯನು ಉದಯಿಸುತ್ತಾನೆ, ಸೂರ್ಯನು ಮುಳುಗುತ್ತಾನೆ. \q2 ತಾನು ಉದಯಿಸುವ ಸ್ಥಳಕ್ಕೆ ಆತುರದಿಂದ ಹಿಂದಿರುಗುತ್ತಾನೆ. \q1 \v 6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. \q2 ಉತ್ತರದ ಕಡೆಗೆ ತಿರುಗುತ್ತದೆ. \q1 ಸುತ್ತುತ್ತಾ, ಸುತ್ತುತ್ತಾ ಹೋಗುತ್ತದೆ. \q2 ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರುಗುತ್ತದೆ. \q1 \v 7 ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. \q2 ಆದರೂ ಸಮುದ್ರವು ತುಂಬುವುದಿಲ್ಲ. \q1 ನದಿಗಳು ಎಲ್ಲಿಂದ ಬಂದಿವೆಯೋ, \q2 ಆ ಸ್ಥಳಕ್ಕೆ ಅವು ಹಿಂದಿರುಗುತ್ತವೆ. \q1 \v 8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ. \q2 ಇದನ್ನು ಮನುಷ್ಯನು ವಿವರಿಸಲಾರನು. \q1 ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, \q2 ಕೇಳುವುದರಿಂದ ಕಿವಿಯು ದಣಿಯದು. \q1 \v 9 ಇದ್ದದ್ದೇ ಇರುವುದು, \q2 ನಡೆದದ್ದೇ ನಡೆಯುವುದು. \q2 ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ. \q1 \v 10 “ನೋಡು, ಇದು ಹೊಸದು,” ಎಂದು \q2 ಯಾವ ವಿಷಯವಾಗಿ ಹೇಳಬಹುದೋ? \q1 ಅದು ನಮಗಿಂತ ಮುಂಚೆ ಇದ್ದದ್ದು, \q2 ಪುರಾತನ ಕಾಲದಿಂದ ಇದ್ದದ್ದೇ. \q1 \v 11 ಹಿಂದಿನ ಕಾಲದ ಜನರ ಜ್ಞಾಪಕವು ಈಗಿನವರಿಗಿಲ್ಲ. \q2 ಮುಂದಿನ ಕಾಲದಲ್ಲಿ ಬರುವವರ ಜ್ಞಾಪಕವು \q1 ಅವುಗಳ ಮುಂದಿನ ಕಾಲದ \q2 ಜನರಿಗೆ ಇರುವುದಿಲ್ಲ. \s1 ಜ್ಞಾನವು ವ್ಯರ್ಥವಾದದ್ದು \p \v 12 ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರ ಮೇಲೆ ಅರಸನಾಗಿದ್ದೆ. \v 13 ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ. \v 14 ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ. ಗಾಳಿಯನ್ನು ಹಿಂದಟ್ಟುವಂತೆ ಎಲ್ಲವೂ ವ್ಯರ್ಥ. \q1 \v 15 ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ. \q2 ಇಲ್ಲದ್ದನ್ನು ಲೆಕ್ಕಿಸುವುದು ಅಸಾಧ್ಯ. \p \v 16 ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆನು, “ನೋಡು, ಯೆರೂಸಲೇಮಿನಲ್ಲಿ ನನಗಿಂತ ಮೊದಲು ಆಳಿದವರಿಗಿಂತ ನಾನು ಹೆಚ್ಚು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ಹಾಗೂ ತಿಳುವಳಿಕೆಯ ಅನುಭವ ನನಗಿದೆ.” \v 17 ಆಗ ಜ್ಞಾನವನ್ನೂ ಮನಗುಂದುವಿಕೆಯನ್ನೂ ಬುದ್ಧಿಹೀನತೆಯನ್ನೂ ತಿಳಿದುಕೊಳ್ಳುವಂತೆ ನಾನು ಮನಸ್ಸಿಟ್ಟೆನು, ಅದರ ಜೊತೆಗೆ ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ, ಎಂದು ನಾನು ಅರಿತುಕೊಂಡೆನು. \q1 \v 18 ಏಕೆಂದರೆ ಬಹು ಜ್ಞಾನವಿದ್ದಲ್ಲಿ ಬಹು ಸಂಕಟ, \q2 ಹೆಚ್ಚು ತಿಳುವಳಿಕೆ ಇದ್ದಲ್ಲಿ ಹೆಚ್ಚು ವ್ಯಥೆ ಇದೆ. \c 2 \s1 ಸುಖಭೋಗಗಳು ವ್ಯರ್ಥವಾದವುಗಳು \p \v 1 “ಈಗ ಬಾ, ಯಾವುದು ಒಳ್ಳೆಯದು ಎಂಬುದನ್ನು ಸುಖಭೋಗಗಳಿಂದ ನಿನ್ನನ್ನು ಪರೀಕ್ಷಿಸುವೆನು,” ಎಂದು ನನ್ನ ಮನಸ್ಸಿನಲ್ಲಿ ಹೇಳಿಕೊಂಡೆ. ಆದರೆ ಅದೂ ಕೂಡ ವ್ಯರ್ಥವಾದದ್ದೆಂದು ರುಜುವಾತಾಯಿತು. \v 2 “ನಗುವುದು ಮೂರ್ಖತನ, ಸುಖಭೋಗ ಏನನ್ನು ಸಾಧಿಸುತ್ತದೆ,” ಎಂದು ಹೇಳಿಕೊಂಡೆ. \v 3 ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ. \p \v 4 ನಾನು ಮಹಾ ಯೋಜನೆಗಳನ್ನು ನಡೆಸಿದೆನು: ನಾನು ನನಗಾಗಿ ಮನೆಗಳನ್ನು ಕಟ್ಟಿಸಿಕೊಂಡೆನು. ನಾನು ದ್ರಾಕ್ಷಿತೋಟಗಳನ್ನು ನೆಟ್ಟೆನು. \v 5 ನಾನು ಉದ್ಯಾನವನಗಳನ್ನೂ, ತೋಟಗಳನ್ನೂ ಮಾಡಿಕೊಂಡು, ಅವುಗಳಲ್ಲಿ ಸಕಲ ವಿಧವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು. \v 6 ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕೆ ನಾನು ಜಲಾಶಯಗಳನ್ನು ಮಾಡಿಕೊಂಡೆನು. \v 7 ನನಗೆ ದಾಸ, ದಾಸಿಯರನ್ನು ಕೊಂಡುಕೊಂಡೆನು. ನನ್ನ ಮನೆಯಲ್ಲಿ ಜನಿಸಿದ ಇತರ ಗುಲಾಮರು ಸಹ ಇದ್ದರು. ನನಗಿಂತ ಮುಂಚೆ ಯೆರೂಸಲೇಮಿನಲ್ಲಿ, ಇದ್ದವರೆಲ್ಲರಿಗಿಂತಲೂ ಹೆಚ್ಚಾಗಿ ಬಹಳ ಸಂಪತ್ತು ಉಳ್ಳವನಾಗಿ ಹೆಚ್ಚು ದನಕುರಿಗಳ ಮಂದೆಗಳನ್ನು ಹೊಂದಿದೆನು. \v 8 ನಾನು ಬೆಳ್ಳಿಬಂಗಾರಗಳನ್ನು, ಅರಸರ ಮತ್ತು ಪ್ರಾಂತಗಳ ವಿಶೇಷ ಸಂಪತ್ತನ್ನು ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗವಿಲಾಸಕ್ಕಾಗಿ ಅನೇಕ ಉಪಪತ್ನಿಯರನ್ನು ಸಂಪಾದಿಸಿಕೊಂಡೆನು. \v 9 ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಹೆಚ್ಚು ಅಭಿವೃದ್ಧಿಹೊಂದಿ, ಶ್ರೀಮಂತನಾದೆನು. ಇದೆಲ್ಲದರಲ್ಲಿ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು. \q1 \v 10 ನನ್ನ ಕಣ್ಣು ಬಯಸಿದ್ದೆಲ್ಲವನ್ನು ಅದರಿಂದ ಹಿಂತೆಗೆಯಲಿಲ್ಲ, \q2 ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ. \q1 ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು. \q2 ಇದು ನನ್ನ ಎಲ್ಲಾ ಪ್ರಯಾಸದಿಂದ ನನಗೆ ಬಂದ ಬಹುಮಾನ. \q1 \v 11 ನನ್ನ ಕೈಗಳು ನಡೆಸಿದವುಗಳೆಲ್ಲವನ್ನೂ \q2 ನಾನು ಸಾಧಿಸಲು ಪ್ರಯಾಸಪಟ್ಟದ್ದನ್ನೂ ಪರಿಶೀಲಿಸಿ ನೋಡಿದೆ. \q1 ಗಾಳಿಯನ್ನು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥವಾಗಿತ್ತು. \q2 ಸೂರ್ಯನ ಕೆಳಗೆ ಯಾವುದೂ ಲಾಭಕರವಾಗಿ ಕಾಣಲಿಲ್ಲ. \s1 ಜ್ಞಾನವೂ ಮೂಢತನವೂ ವ್ಯರ್ಥ \q1 \v 12 ಅನಂತರ ಜ್ಞಾನವನ್ನೂ ಮನಗುಂದುವಿಕೆಯನ್ನೂ ಮೂಡತೆಯನ್ನೂ \q2 ಮತ್ತೆ ಯೋಚಿಸುವುದಕ್ಕೆ ನಾನು ತಿರುಗಿಕೊಂಡೆನು. \q1 ಈಗಾಗಲೇ ಮಾಡಿದ್ದನ್ನು ಬಿಟ್ಟು, ಅರಸನ ತರುವಾಯ \q2 ಬರುವವನು ಹೊಸದಾಗಿ ಏನು ಮಾಡಬಲ್ಲನು? \q1 \v 13 ಆಗ ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ, \q2 ಜ್ಞಾನವು ಮೂಢತನಕ್ಕಿಂತ ಶ್ರೇಷ್ಠವಾಗಿದೆ ಎಂದು ನಾನು ಕಂಡೆನು. \q1 \v 14 ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುತ್ತದೆ. \q2 ಆದರೆ ಮೂಢನು ಕತ್ತಲೆಯಲ್ಲಿ ನಡೆಯುತ್ತಾನೆ. \q1 ಇವರಿಬ್ಬರಿಗೂ ಒಂದೇ ಗತಿಯು ಸಂಭವಿಸುವುದೆಂದೂ \q2 ನಾನು ಗ್ರಹಿಸಿಕೊಂಡೆನು. \p \v 15 ಆಗ ನಾನು ನನ್ನ ಮನಸ್ಸಿನಲ್ಲಿ, \q1 “ಮೂಢನಿಗೆ ಸಂಭವಿಸುವ ಗತಿಯೂ ನನಗೂ ಸಂಭವಿಸುತ್ತದೆ. \q2 ನಾನು ಜ್ಞಾನಿಯಾಗುವುದರಿಂದ ಲಾಭವೇನು?” \q2 “ಇದು ಸಹ ವ್ಯರ್ಥವೇ,” ಎಂದುಕೊಂಡೆನು. \q1 \v 16 ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ \q2 ಜನರು ಬಹಳ ದಿನಗಳವರೆಗೆ ಜ್ಞಾಪಕಮಾಡಿಕೊಳ್ಳುವುದಿಲ್ಲ. \q2 ಇವರಿಬ್ಬರನ್ನೂ ಮರೆತುಹೋದ ದಿನಗಳು ಈಗಾಗಲೇ ಬಂದಿವೆ. \q1 ಮೂಢನಂತೆ ಜ್ಞಾನಿಯೂ ಸಹ ಸಾಯಲೇಬೇಕು. \s1 ಶ್ರಮೆಯೂ ವ್ಯರ್ಥ \p \v 17 ಸೂರ್ಯನ ಕೆಳಗೆ ನಡೆಯುವ ಕಾರ್ಯವು ನನಗೆ ದುಃಖಕರವಾಗಿ ತೋರಿತು. ಆದಕಾರಣ ನಾನು ನನ್ನ ಜೀವನವನ್ನು ಹಗೆ ಮಾಡಿದೆನು. ಗಾಳಿಯನ್ನು ಬೆನ್ನಟ್ಟುವಂತೆ ಎಲ್ಲವೂ ವ್ಯರ್ಥವಾಗಿದೆ. \v 18 ನನ್ನ ತರುವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕಾದ್ದರಿಂದ ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆ ಮಾಡಿದೆನು. \v 19 ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ತೋರ್ಪಡಿಸಿಕೊಂಡದರ ಮೇಲೆಯೂ ಅವನು ಆಳುವನು. ಇದು ವ್ಯರ್ಥವೇ. \v 20 ಆದ್ದರಿಂದ ಸೂರ್ಯನ ಕೆಳಗೆ ಪ್ರಯಾಸಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ, ನನ್ನ ಹೃದಯವು ನಿರಾಶೆಗೊಳ್ಳಲು ಪ್ರಾರಂಭಿಸಿತು. \v 21 ಒಬ್ಬ ಮನುಷ್ಯನು ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ಕೌಶಲಯುತವಾಗಿಯೂ ತನ್ನ ಕೆಲಸ ಮಾಡಬಹುದು. ಅನಂತರ ತನಗಿರುವುದೆಲ್ಲವನ್ನು ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡಬೇಕಾಗುತ್ತದೆ. ಇದೂ ವ್ಯರ್ಥವೂ ದೊಡ್ಡ ವ್ಯಸನವೂ ಆಗಿವೆ. \v 22 ಸೂರ್ಯನ ಕೆಳಗೆ ತಾನು ಪ್ರಯಾಸಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ? \v 23 ಅವನ ದಿನಗಳೆಲ್ಲಾ ವ್ಯಸನವೇ. ಅವನ ಪ್ರಯಾಸವು ದುಃಖವೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಕೂಡ ವ್ಯರ್ಥವೇ. \p \v 24 ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು. \v 25 ದೇವರಿಲ್ಲದೆ ಯಾರಿಗೆ ಊಟ ದೊರಕಿತು? ದೇವರಿಲ್ಲದೆ ಯಾರು ಸುಖಾನುಭವ ಹೊಂದುವರು? \v 26 ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ. \c 3 \s1 ಪ್ರತಿಯೊಂದು ಕಾರ್ಯಕ್ಕೆ ಸಮಯ \q1 \v 1 ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ. \q2 ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ. \b \q2 \v 2 ಹುಟ್ಟುವುದಕ್ಕೆ ಒಂದು ಸಮಯ, ಸಾಯುವುದಕ್ಕೆ ಒಂದು ಸಮಯ. \q2 ನೆಡುವುದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕುವುದಕ್ಕೆ ಒಂದು ಸಮಯ. \q2 \v 3 ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, \q2 ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ. \q2 \v 4 ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. \q2 ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ. \q2 \v 5 ಕಲ್ಲುಗಳನ್ನು ಎಸೆಯುವುದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸುವುದಕ್ಕೆ ಒಂದು ಸಮಯ. \q2 ಅಪ್ಪಿಕೊಳ್ಳುವುದಕ್ಕೆ ಒಂದು ಸಮಯ, ತಡೆದಿರುವುದಕ್ಕೂ ಒಂದು ಸಮಯ. \q2 \v 6 ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. \q2 ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ. \q2 \v 7 ಹರಿಯುವುದಕ್ಕೆ ಒಂದು ಸಮಯ, ಹೊಲಿಯುವುದಕ್ಕೆ ಒಂದು ಸಮಯ. \q2 ಸುಮ್ಮನೆ ಇರುವುದಕ್ಕೆ ಒಂದು ಸಮಯ, ಮಾತಾಡುವುದಕ್ಕೆ ಒಂದು ಸಮಯ. \q2 \v 8 ಪ್ರೀತಿಸುವುದಕ್ಕೆ ಒಂದು ಸಮಯ, ದ್ವೇಷಿಸುವುದಕ್ಕೆ ಒಂದು ಸಮಯ. \q2 ಯುದ್ಧದ ಸಮಯ, ಸಮಾಧಾನದ ಸಮಯ, ಹೀಗೆ ಒಂದೊಂದಕ್ಕೂ ತಕ್ಕ ಸಮಯವಿದೆ. \p \v 9 ಹಾಗಾದರೆ, ಪ್ರಯಾಸ ಪಡುವುದರಲ್ಲಿ ದುಡಿಯುವವನಿಗೆ ಲಾಭವೇನಿದೆ? \v 10 ದೇವರು ಮಾನವ ಜನಾಂಗದ ಮೇಲೆ ಹೊರಿಸಿರುವ ಭಾರವನ್ನು ನಾನು ನೋಡಿದ್ದೇನೆ. \v 11 ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ. \v 12 ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು. \v 13 ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ. \v 14 ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ. \q1 \v 15 ಇರುವಂಥದ್ದು ಈಗಾಗಲೇ ಇತ್ತು, \q2 ಬರುವಂಥದ್ದು ಆಗಲೇ ಇದೆ. \q2 ಗತಿಸಿಹೋದದ್ದನ್ನು ದೇವರು ಪುನಃಸ್ಥಾಪಿಸುವರು. \p \v 16 ಇದಕ್ಕಿಂತಲೂ ಬೇರೆಯಾದದ್ದನ್ನು ಸೂರ್ಯನ ಕೆಳಗೆ ನೋಡಿದೆನು: \q1 ನ್ಯಾಯತೀರ್ಪಿನ ಸ್ಥಳದಲ್ಲಿ ದುಷ್ಕೃತ್ಯ ಇತ್ತು. \q2 ನೀತಿಯ ಸ್ಥಾನದಲ್ಲಿಯೂ ದುಷ್ಟತ್ವ ಇತ್ತು. \p \v 17 ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು, \q1 “ನೀತಿವಂತರನ್ನೂ ದುಷ್ಟರನ್ನೂ \q2 ದೇವರು ನ್ಯಾಯತೀರಿಸುವನು. \q1 ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ, \q2 ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ.” \p \v 18 ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ. \v 19 ಏಕೆಂದರೆ ಮೃಗಗಳಿಗೆ ಸಂಭವಿಸುವುದು ಮನುಷ್ಯರಿಗೂ ಸಂಭವಿಸುತ್ತದೆ. ಇಬ್ಬರಿಗೂ ಒಂದೇ ಸಂಗತಿ ಸಂಭವಿಸುತ್ತದೆ. ಒಂದು ಹೇಗೆ ಸಾಯುತ್ತದೋ ಹಾಗೆ ಇನ್ನೊಂದೂ ಸಾಯುತ್ತದೆ. ಎಲ್ಲಕ್ಕೂ ಒಂದೇ ಪ್ರಾಣ ಇದೆ. ಆ ರೀತಿಯಲ್ಲಿ ಮೃಗಕ್ಕಿಂತ ಮನುಷ್ಯನಿಗೆ ಹೆಚ್ಚು ಶ್ರೇಷ್ಠತೆ ಇಲ್ಲ. ಎಲ್ಲವೂ ವ್ಯರ್ಥ. \v 20 ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು. ಎಲ್ಲವೂ ಮಣ್ಣಿಗೆ ಸೇರುತ್ತವೆ. \v 21 ಮನುಷ್ಯನ ಆತ್ಮವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಗೆ ಹೋಗುತ್ತದೆಂದೂ ಯಾರು ತಿಳಿದಾರು?” \p \v 22 ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು? \c 4 \s1 ದಬ್ಬಾಳಿಕೆ, ಶ್ರಮೆ, ವೈರತ್ವ \p \v 1 ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: \q1 ಹಿಂಸೆಗೊಂಡವರ ಕಣ್ಣೀರನ್ನೂ, \q2 ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. \q1 ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. \q2 ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ. \q1 \v 2 ಆದಕಾರಣ ನಾನು ಇದನ್ನು ನೋಡಿ \q2 ಜೀವದಿಂದ ಇರುವವರಿಗಿಂತ, \q1 ಮೃತಪಟ್ಟವರೇ ಮೇಲು \q2 ಎಂದು ನಾನು ತೀರ್ಮಾನಿಸಿದೆ. \q1 \v 3 ಆದರೆ ಇವರಿಬ್ಬರಿಗಿಂತಲೂ \q2 ಇನ್ನೂ ಹುಟ್ಟದೇ, \q1 ಸೂರ್ಯನ ಕೆಳಗೆ ನಡೆಯುವ \q2 ಕೆಟ್ಟ ಕೃತ್ಯವನ್ನು ನೋಡದಿರುವವನೇ ಶ್ರೇಷ್ಠನು. \p \v 4 ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ. \q1 \v 5 ಸುಮ್ಮನೇ ಕೈಕಟ್ಟಿ ಕುಳಿತುಕೊಂಡು ಬುದ್ಧಿಹೀನರು, \q2 ತಮ್ಮನ್ನು ತಾವೇ ಹಾಳುಮಾಡಿಕೊಳ್ಳುತ್ತಾರೆ. \q1 \v 6 ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ \q2 ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ \q2 ನೆಮ್ಮದಿಯಿಂದ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು. \p \v 7 ಆಗ ಮತ್ತೆ ನಾನು ಸೂರ್ಯನ ಕೆಳಗೆ ವ್ಯರ್ಥವಾದದ್ಡನ್ನು ಕಂಡೆನು: \q1 \v 8 ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. \q2 ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. \q1 ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. \q2 ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. \q1 ಅವನು, “ನಾನು ಸುಖಸಂತೋಷವನ್ನು ತೊರೆದು, \q2 ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. \q1 ಇದು ಕೂಡ ವ್ಯರ್ಥವೇ, \q2 ಪ್ರಯಾಸದ ಕೆಲಸವೇ ಸರಿ. \b \q1 \v 9 ಒಬ್ಬನಿಗಿಂತ ಇಬ್ಬರು ಲೇಸು, \q2 ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ: \q1 \v 10 ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. \q2 ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ \q1 ಅವನ ಗತಿ ದುರ್ಗತಿಯೇ \q2 ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ. \q1 \v 11 ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ. \q2 ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ? \q1 \v 12 ಒಬ್ಬಂಟಿಗನ ಮೇಲೆ ಜಯ ಸಾಧಿಸಲು, \q2 ಇಬ್ಬರು ಎದುರಾಗಿ ನಿಲ್ಲಬಹುದು. \q1 ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ. \s1 ಅಭಿವೃದ್ಧಿ ಸಹ ವ್ಯರ್ಥ \p \v 13 ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು. \v 14 ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು. \v 15 ಸೂರ್ಯನ ಕೆಳಗೆ ಜೀವಿಸಿ ನಡೆದಾಡಿದವರೆಲ್ಲರೂ ಅರಸನ ಪ್ರತಿಯಾಗಿ ಯುವಕನನ್ನು ಹಿಂಬಾಲಿಸಿದ್ದನ್ನೂ ನಾನು ನೋಡಿದೆನು. \v 16 ಇವನ ಆಧಿಪತ್ಯಕ್ಕೆ ಒಳಪಟ್ಟ ಜನರ ಸಂಖ್ಯೆಯು ಅಪಾರ. ಆದರೆ ಯುವಕನ ಆಳ್ವಿಕೆಯ ಮುಂಚೆ ಇದ್ದವರು ಮತ್ತು ತರುವಾಯ ಬಂದವರು ಇವನನ್ನು ಮೆಚ್ಚಲಿಲ್ಲ. ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ ವ್ಯರ್ಥವೇ. \c 5 \s1 ದೇವರನ್ನು ಗೌರವಿಸಿ, ಅವರಿಗೆ ಭಯಪಡು \p \v 1 ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ. \q1 \v 2 ನೀನು ದುಡುಕಿ ಮಾತನಾಡಬೇಡ, \q2 ದೇವರ ಮುಂದೆ ಮಾತನಾಡಲು \q2 ನಿನ್ನ ಹೃದಯವು ಆತುರಪಡದೇ ಇರಲಿ. \q1 ದೇವರು ಪರಲೋಕದಲ್ಲಿದ್ದಾರೆ. \q2 ನೀನಾದರೋ ಭೂಮಿಯ ಮೇಲೆ ಇರುವೆ, \q2 ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ. \q1 \v 3 ಬಹಳ ಚಿಂತೆ ಇದ್ದಾಗಲೂ ಕನಸು ಬರುತ್ತದೆ. \q2 ಮೂಢನು ಮಾತಾಡಿದರೆ ಸಾಕು, ಬಹು ಮಾತುಗಳು ಬರುತ್ತವೆ. \p \v 4 ದೇವರಿಗೆ ನೀನು ಹರಕೆಯನ್ನು ಮಾಡಿದರೆ, ಅದನ್ನು ತೀರಿಸಲು ತಡಮಾಡಬೇಡ. ದೇವರು ಮೂಢರನ್ನು ಮೆಚ್ಚುವುದಿಲ್ಲ. ನೀನು ಹರಕೆ ಮಾಡಿದ್ದನ್ನು ತೀರಿಸು. \v 5 ಹರಕೆಮಾಡಿ ತೀರಿಸದೆ ಇರುವುದಕ್ಕಿಂತ, ಹರಕೆ ಮಾಡದೆ ಇರುವುದು ಒಳ್ಳೆಯದು. \v 6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು? \v 7 ಬಹು ಕನಸುಗಳೂ ಬಹು ಮಾತುಗಳೂ ವ್ಯರ್ಥವಾದವುಗಳು. ಆದ್ದರಿಂದ ನೀನು ದೇವರಿಗೆ ಭಯಪಡು. \s1 ಐಶ್ವರ್ಯವು ವ್ಯರ್ಥ \p \v 8 ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ. \v 9 ಭೂಮಿಯಿಂದ ಲಾಭವು ಎಲ್ಲರಿಗೂ ಇದೆ. ಹೊಲಗದ್ದೆಗಳಿಂದ ಅರಸನಿಗೂ ಲಾಭವಿದೆ. \q1 \v 10 ಹಣವನ್ನು ಪ್ರೀತಿಸುವವರಿಗೆ ಎಷ್ಟು ಹಣ ಇದ್ದರೂ ಸಾಕಾಗದು. \q2 ಆಸ್ತಿಯನ್ನು ಪ್ರೀತಿಸುವವನು ತನ್ನ ಆದಾಯದಿಂದ ತೃಪ್ತಿಗೊಳ್ಳುವುದಿಲ್ಲ. \q2 ಇದೂ ಸಹ ವ್ಯರ್ಥವೇ. \b \q1 \v 11 ಸೊತ್ತು ಹೆಚ್ಚಿದರೆ, \q2 ಅದನ್ನು ಅನುಭವಿಸುವವರು ಹೆಚ್ಚಾಗುವರು. \q1 ಯಜಮಾನರು ಅದನ್ನು ತಮ್ಮ ಕಣ್ಣಿಂದ ನೋಡುವುದೇ ಅವರಿಗಾಗುವ ಲಾಭ, \q2 ಬೇರೆ ಯಾವ ಪ್ರಯೋಜನವಿದೆ? \b \q1 \v 12 ಪ್ರಯಾಸ ಪಡುವವನು ಸ್ವಲ್ಪ ತಿಂದರೂ \q2 ಹೆಚ್ಚು ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ. \q1 ಆದರೆ ಐಶ್ವರ್ಯವಂತನ ಸಮೃದ್ಧಿಯು \q2 ಅವನನ್ನು ನಿದ್ರೆ ಮಾಡಗೊಡಿಸದು. \p \v 13 ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ: \q1 ಸಂಗ್ರಹಿಸಿದ ಆಸ್ತಿ ಯಜಮಾನನಿಗೆ ಹಾನಿ. \q2 \v 14 ಅದು ಹೇಗೆಂದರೆ, ಅನಾಹುತದಿಂದ ಆಸ್ತಿ ಕಳೆದುಹೋಗುತ್ತದೆ. \q1 ಅವನಿಗೆ ಮಗನಿದ್ದರೆ, \q2 ಅವನಿಗೆ ಏನೂ ಇರುವುದಿಲ್ಲ. \q1 \v 15 ತಾಯಿಯ ಗರ್ಭದಿಂದ ಅವನು ಹೇಗೆ ಬರಿಗೈಯಲ್ಲಿ ಬಂದನೋ, \q2 ಹಾಗೆ ಬರಿಗೈಯಲ್ಲಿ ಗತಿಸಿ ಹೋಗುವನು. \q1 ಅವನು ಪ್ರಯಾಸ ಪಟ್ಟದ್ದಕ್ಕಾಗಿ ಯಾವುದನ್ನು \q2 ತೆಗೆದುಕೊಂಡು ಹೋಗುವುದಿಲ್ಲ. \p \v 16 ಇದು ಕೂಡ ವ್ಯಸನಕರವಾದ ಕೇಡು: \q1 ಮನುಷ್ಯನು ಹೇಗೆ ಬಂದನೋ, \q2 ಹಾಗೆಯೇ ಹೋಗುವನು. \q2 ಗಾಳಿಗಾಗಿ ಪ್ರಯಾಸಪಟ್ಟವನಿಗೆ ಲಾಭವೇನಿದೆ? \q1 \v 17 ತನ್ನ ಜೀವಮಾನವೆಲ್ಲಾ ಅವನು ಕತ್ತಲೆಯಲ್ಲಿ ಕಳೆಯುತ್ತಾನೆ. \q2 ಅವನಿಗೆ ವ್ಯಾಧಿಯೊಂದಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ. \p \v 18 ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು. \v 19 ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ. \v 20 ಇಂಥವನು ತನ್ನ ಜೀವಮಾನದ ದಿನಗಳನ್ನು ಗಣನೆಗೆ ತಂದುಕೊಳ್ಳನು. ಏಕೆಂದರೆ ಇವನು ತನ್ನ ಹೃದಯಾನಂದದಲ್ಲಿ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ. \c 6 \p \v 1 ಸೂರ್ಯನ ಕೆಳಗೆ ಇರುವ ಇನ್ನೊಂದು ಕೇಡನ್ನು ಕಂಡೆನು, ಅದು ಮನುಷ್ಯರ ಮೇಲೆ ಬಹು ಭಾರವಾಗಿದೆ. \v 2 ಅದೇನೆಂದರೆ, ಮನುಷ್ಯನು ಹೃದಯದಲ್ಲಿ ಬಯಸಿದ್ದನ್ನು ಕೊರತೆಯಾಗದಂತೆ ದೇವರು ಅವನಿಗೆ ಧನ, ಐಶ್ವರ್ಯ, ಸನ್ಮಾನವನ್ನು ಕೊಡುತ್ತಾರೆ. ಆದರೆ ಅದನ್ನು ಅನುಭವಿಸುವಂತೆ ದೇವರು ಸಾಮರ್ಥ್ಯವನ್ನು ಕೊಡುವುದಿಲ್ಲ. ಆದುದರಿಂದ ಪರರು ಅದನ್ನು ಅನುಭವಿಸುತ್ತಾರೆ. ಇದು ವ್ಯರ್ಥವೂ ವ್ಯಸನಕರವಾದ ಕೇಡು. \p \v 3 ಒಬ್ಬ ಮನುಷ್ಯನಿಗೆ ನೂರು ಮಕ್ಕಳಿರಬಹುದು ಮತ್ತು ಅವನು ಬಹಳ ವರ್ಷ ಬದುಕಿರಬಹುದು. ಅವನು ತನ್ನ ಐಶ್ವರ್ಯವನ್ನು ಅನುಭವಿಸದೆ, ಸರಿಯಾದ ಶವಸಂಸ್ಕಾರ ಇಲ್ಲದೆ ಹೋದರೆ ಅವನಿಗಿಂತಲೂ ಮೃತ ಸ್ಧಿತಿಯಲ್ಲಿ ಹುಟ್ಟಿರುವ ಕೂಸೇ ಮೇಲು ಎಂದುಕೊಂಡೆ. \v 4 ಆ ಕೂಸು ವ್ಯರ್ಥವಾಗಿ ಬಂದು ಕತ್ತಲೆಯಲ್ಲಿ ಹೊರಟು ಹೋಗುತ್ತದೆ. ಅದರ ಹೆಸರು ಅಂಧಕಾರದಿಂದ ಕವಿದಿರುವುದು. \v 5 ಇದಲ್ಲದೆ ಅದು ಸೂರ್ಯನನ್ನು ನೋಡಲಿಲ್ಲ, ಯಾವುದನ್ನು ಅರಿತಿರಲಿಲ್ಲ. ಆದರೂ ಅದು ಆ ಮನುಷ್ಯನಿಗಿಂತ ಹೆಚ್ಚು ವಿಶ್ರಾಂತಿ ಹೊಂದಿದೆ. \v 6 ಒಂದು ವೇಳೆ ಎರಡು ಸಾವಿರ ವರ್ಷಗಳು ಆ ಮನುಷ್ಯನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ? \q1 \v 7 ಪ್ರತಿಯೊಬ್ಬನ ಪ್ರಯಾಸ ಅವನ ಹೊಟ್ಟೆಗಾಗಿಯೇ, \q2 ಆದರೆ ಅವನ ಹಸಿವು ತೃಪ್ತಿಹೊಂದುವುದಿಲ್ಲ. \q1 \v 8 ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? \q1 ಇತರರ ಮುಂದೆ ಹೇಗೆ ವರ್ತಿಸಬೇಕು ಎಂದು \q2 ತಿಳಿದುಕೊಳ್ಳುವುದರಿಂದ ಬಡವರಿಗೇನು ಲಾಭ? \q1 \v 9 ಹೆಚ್ಚು ಅಪೇಕ್ಷಿಸಿ ಅಲೆದಾಡುವುದಕ್ಕಿಂತ \q2 ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದು ಉತ್ತಮ. \q1 ಗಾಳಿಯನ್ನು ಬೆನ್ನಟ್ಟಿದಂತೆ \q2 ಇದೂ ಕೂಡ ವ್ಯರ್ಥವೇ. \b \q1 \v 10 ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ. \q2 ಮನುಷ್ಯನು ಯಾರು ಎಂದೂ ಗೊತ್ತಾಗಿದೆ. \q1 ತನಗಿಂತ ಬಲಿಷ್ಟನೊಂದಿಗೆ \q2 ಯಾರೂ ಹೋರಾಡುವುದಿಲ್ಲ. \q1 \v 11 ಮಾತು ಹೆಚ್ಚಿದಷ್ಟೂ, \q2 ಕಡಿಮೆ ಅರ್ಥೈಸುತ್ತವೆ, \q2 ಅದರಿಂದ ಯಾರಿಗೆ ಏನು ಲಾಭ? \p \v 12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು? \c 7 \s1 ಜ್ಞಾನ \q1 \v 1 ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. \q2 ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು. \q1 \v 2 ಔತಣದ ಮನೆಗೆ ಹೋಗುವುದಕ್ಕಿಂತ, \q2 ಶೋಕದ ಮನೆಗೆ ಹೋಗುವುದು ಲೇಸು. \q1 ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. \q2 ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು. \q1 \v 3 ನಗೆಗಿಂತ ದುಃಖವು ವಾಸಿ, \q2 ಏಕೆಂದರೆ ಮುಖದಲ್ಲಿ ದುಃಖ ಹೃದಯಕ್ಕೆ ಸುಖ. \q1 \v 4 ಜ್ಞಾನಿಗಳ ಹೃದಯವು ಶೋಕದ ಮನೆಯಲ್ಲಿರುವುದು, \q2 ಆದರೆ ಮೂಢರ ಹೃದಯವು ಉಲ್ಲಾಸದ ಮನೆಯಲ್ಲಿರುವುದು. \q1 \v 5 ಮೂಢರ ಹಾಡನ್ನು ಕೇಳುವುದಕ್ಕಿಂತ, \q2 ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು. \q1 \v 6 ಗಡಿಗೆಯ ಕೆಳಗೆ ಉರಿಯುವ ಮುಳ್ಳುಕಡ್ಡಿ ಚಟಚಟನೆಯ ಶಬ್ದ ಹೇಗೋ, \q2 ಮೂಢನ ನಗುವು ಹಾಗೆಯೇ ಇರುವುದು. \q2 ಇದು ಕೂಡ ವ್ಯರ್ಥವೇ. \b \q1 \v 7 ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. \q2 ಲಂಚವು ಹೃದಯವನ್ನು ಕೆಡಿಸುತ್ತದೆ. \b \q1 \v 8 ಪ್ರಾರಂಭಕ್ಕಿಂತ ಅದರ ಅಂತ್ಯವೇ ಲೇಸು. \q2 ಗರ್ವಿಷ್ಠನಿಗಿಂತ ತಾಳ್ಮೆಯುಳ್ಳವನೇ ಉತ್ತಮ. \q1 \v 9 ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, \q2 ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ. \b \q1 \v 10 “ಹಿಂದಿನ ಕಾಲ ಈಗಿನ ಕಾಲಕ್ಕಿಂತ ಮೇಲಾಗಿರುವುದಕ್ಕೆ ಕಾರಣ ಏನು?” ಎಂದು ನೀನು ಕೇಳಬೇಡ. \q2 ಇದು ಬುದ್ಧಿವಂತರು ಕೇಳುವ ಪ್ರಶ್ನೆಯಲ್ಲ. \b \q1 \v 11 ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು; \q2 ಅದರಿಂದ ಜೀವಂತರೆಲ್ಲರಿಗೂ ಲಾಭಕರ. \q1 \v 12 ಧನವು ಹೇಗೋ \q2 ಹಾಗೆ ಜ್ಞಾನವು ಆಶ್ರಯ. \q1 ಆದರೆ ಜ್ಞಾನದ ಶ್ರೇಷ್ಠತೆ ಏನೆಂದರೆ, \q2 ಅದು ಜ್ಞಾನಿಗೆ ಜೀವದಾಯಕ. \p \v 13 ದೇವರ ಸೃಷ್ಟಿಕಾರ್ಯವನ್ನು ಯೋಚಿಸು: \q1 ದೇವರು ಮಾಡಿದ್ದನ್ನು, \q2 ಪುನಃ ಸರಿಪಡಿಸಲು ಯಾರಿಗೆ ಸಾಧ್ಯ? \q1 \v 14 ಸುಖ ದಿನದಲ್ಲಿ ಸಂತೋಷವಾಗಿರು. \q2 ಆದರೆ ದುಃಖ ದಿನದಲ್ಲಿ ಇದನ್ನು ಯೋಚಿಸು: \q1 ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. \q2 ಹೀಗೆ ಮನುಷ್ಯನು ತನ್ನ ಆಯುಸ್ಸನ್ನು ಕಳೆದ ಮೇಲೆ ಭವಿಷ್ಯವನ್ನು ಗ್ರಹಿಸಲಾರನು. \p \v 15 ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: \q1 ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. \q2 ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ. \q1 \v 16 ನೀನು ಅತಿಯಾಗಿ ನೀತಿವಂತನಾಗಿರಬೇಡ. \q2 ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿಯೂ ಮಾಡಿಕೊಳ್ಳಬೇಡ. \q2 ನಿನ್ನನ್ನು ನೀನೇ ಏಕೆ ನಾಶಪಡಿಸಿಕೊಳ್ಳುವೆ? \q1 \v 17 ನೀನು ದುಷ್ಟತನದಲ್ಲಿ ಸಾಗಬೇಡ, \q2 ಮೂರ್ಖತನದಲ್ಲಿಯೂ ಮುಂದುವರಿಯಬೇಡ. \q2 ನಿನ್ನ ಸಮಯಕ್ಕಿಂತ ಮೊದಲು ನೀನು ಏಕೆ ಸಾಯುವೆ? \q1 \v 18 ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. \q2 ಹೌದು, ಇವುಗಳನ್ನು ಮರೆಯಬೇಡ. \q2 ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು. \b \q1 \v 19 ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, \q2 ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ. \b \q1 \v 20 ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, \q2 ಭೂಮಿಯ ಮೇಲೆ ಒಬ್ಬನೂ ಇಲ್ಲ. \b \q1 \v 21 ಜನರು ಆಡಿದ ಎಲ್ಲಾ ಮಾತುಗಳನ್ನು ನೀನು ಲಕ್ಷಿಸಬೇಡ, \q2 ನಿನ್ನ ಕೆಲಸದವರೂ ನಿನ್ನನ್ನು ಶಪಿಸಬಹುದು. \q1 \v 22 ನೀನು ಸಹ ಅನೇಕ ವೇಳೆ ಇತರರನ್ನು ಶಪಿಸಿದ್ದೀ, \q2 ಇದು ನಿನ್ನ ಹೃದಯಕ್ಕೆ ತಿಳಿದಿದೆ. \p \v 23 ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ, \q1 “ನಾನು ಜ್ಞಾನಿಯಾಗಿರಲು ತೀರ್ಮಾನಿಸುತ್ತೇನೆ,” ಎಂದುಕೊಂಡೆನು. \q2 ಆದರೆ ಅದು ನನ್ನಿಂದ ದೂರವಾಯಿತು. \q1 \v 24 ದೂರದಲ್ಲಿರುವುದನ್ನೂ, ಅಗಾಧದಲ್ಲಿರುವುದನ್ನೂ \q2 ಯಾರು ಕಂಡುಕೊಂಡಾರು? \q1 \v 25 ಜ್ಞಾನದ ಮೂಲ ತತ್ವವನ್ನೂ, \q2 ದುಷ್ಟತನದ ಮೂಢತನವನ್ನೂ, \q1 ಮೂಢತ್ವದ ಹುಚ್ಚುತನವನ್ನೂ \q2 ಪರೀಕ್ಷಿಸಿ ತಿಳಿದುಕೊಳ್ಳುವಂತೆ ಮನಸ್ಸುಮಾಡಿದೆನು. \b \q1 \v 26 ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. \q2 ಅವಳ ಕೈ ಸಂಕೋಲೆ ಆಗಿರುತ್ತದೆ. \q1 ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. \q2 ದೇವರನ್ನು ಮೆಚ್ಚಿಸುವವನು, \q1 ಅವಳಿಂದ ತಪ್ಪಿಸಿಕೊಳ್ಳುವನು. \q2 ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು. \p \v 27 “ನೋಡು, ನಾನಿದನ್ನು ಹುಡುಕಿ ಕಂಡುಕೊಂಡಿದ್ದೇನೆ,” ಎಂದು ಪ್ರಸಂಗಿಯು ಹೇಳುತ್ತಿದ್ದಾನೆ: \q1 ನಾನು ಒಂದರ ನಂತರ ಮತ್ತೊಂದನ್ನು ಕೂಡಿಸಿ, ಸಂಶೋಧನೆಗಳನ್ನು ನಡೆಸಿದೆ; \q2 \v 28 ನಾನು ಹುಡುಕಿ ನೋಡಿದರೂ \q2 ನನಗೆ ಇದುವರೆಗೆ ಉತ್ತರ ಸಿಕ್ಕಲಿಲ್ಲ. \q1 ನಾನು ಸಾವಿರ ಪುರುಷರಲ್ಲಿ ಒಬ್ಬ ಸತ್ಯವಂತನನ್ನು ಕಂಡೆನು. \q2 ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ಸತ್ಯವಂತಳನ್ನು ಕಂಡುಕೊಳ್ಳಲಿಲ್ಲ. \q1 \v 29 ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ: \q2 ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದರು. \q2 ಮನುಷ್ಯರಾದರೋ ಅನೇಕ ಸ್ವಾರ್ಥ ಯೋಜನೆಗಳನ್ನು ಮಾಡಿಕೊಂಡಿದ್ದಾರೆ. \b \c 8 \q1 \v 1 ಜ್ಞಾನಿಯ ಹಾಗೆ ಇರುವವರು ಯಾರು? \q2 ಈ ಸಂಗತಿಗಳ ಅರ್ಥವನ್ನು ವಿವರಿಸಬಲ್ಲವರು ಯಾರು? \q1 ಒಬ್ಬ ಮನುಷ್ಯನ ಜ್ಞಾನವು ಅವನ ಮುಖವನ್ನು ಬೆಳಗಿಸುತ್ತದೆ \q2 ಜ್ಞಾನವು ಕಠಿಣ ಮುಖಭಾವವನ್ನು ಸಹ ಬದಲಾಯಿಸುತ್ತದೆ. \s1 ಅರಸನ ಆಜ್ಞೆ ಪಾಲಿಸು \p \v 2 ನೀವು ದೇವರ ಮುಂದೆ ಪ್ರಮಾಣ ಮಾಡಿದ್ದರಿಂದ, ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಹೇಳುತ್ತೇನೆ. \v 3 ಅರಸನನ್ನು ಬಿಟ್ಟುಹೋಗುವುದಕ್ಕೆ ಆತುರ ಪಡಬೇಡಿರಿ. ಅರಸನು ತನಗೆ ಇಷ್ಟಬಂದದ್ದನ್ನೆಲ್ಲಾ ಮಾಡುತ್ತಾನೆ. ನೀವು ಕೆಟ್ಟ ಕಾರ್ಯಕ್ಕಾಗಿ ನಿಲ್ಲಬೇಡಿರಿ. \v 4 ಅರಸನ ಮಾತುಗಳೇ ಸರ್ವೋನ್ನತವಾದುದರಿಂದ, “ನೀನು ಮಾಡುವುದೇನು?” ಎಂದು ಅವನಿಗೆ ಪ್ರಶ್ನಿಸುವವರಾರು? \q1 \v 5 ಅರಸನ ಆಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸುವುದಿಲ್ಲ, \q2 ಜ್ಞಾನಿಯ ಹೃದಯವು ಸರಿಯಾದ ಕಾಲ ಕ್ರಮವನ್ನು ತಿಳಿದುಕೊಳ್ಳುತ್ತದೆ. \q1 \v 6 ಮನುಷ್ಯನಿಗೆ ಕಷ್ಟಸಂಕಟವು ಭಾರವಾಗಿದ್ದರೂ \q2 ಪ್ರತಿಯೊಂದು ಕಾರ್ಯಕ್ಕೂ ಸರಿಯಾದ ಕಾಲ ಮತ್ತು ಕ್ರಮ ಇರುತ್ತದೆ. \b \q1 \v 7 ಏಕೆಂದರೆ ಮುಂದೆ ಆಗುವುದೇನೆಂದು ಯಾರಿಗೂ ತಿಳಿಯದು. \q2 ಮುಂದೆ ಏನಾಗುವುದೆಂದು ಮನುಷ್ಯನಿಗೆ ತಿಳಿಸುವವರು ಯಾರು ಇಲ್ಲ. \q1 \v 8 ನಮ್ಮ ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. \q2 ಹಾಗೆಯೇ ಸಾಯುವ ಸಮಯವನ್ನು ತಡೆಯುವ ಶಕ್ತಿಯು ಸಹ ಯಾರಿಗೂ ಇಲ್ಲ. \q1 ಯುದ್ಧ ಸಮಯದಲ್ಲಿ ಹೇಗೆ ವಿರಾಮ ಇರುವುದಿಲ್ಲವೋ, \q2 ಹಾಗೆಯೇ ದುಷ್ಟನಿಗೆ ದುಷ್ಟತ್ವದಿಂದ ಬಿಡುಗಡೆಯೇ ಇಲ್ಲ. \p \v 9 ನಾನು ಇದನ್ನೆಲ್ಲಾ ನೋಡಿ, ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡೆಸುವ ಕಾಲವೂ ಇದೆ. \v 10 ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನೂ ನಾನು ನೋಡಿದ್ದೇನೆ. ಆದರೆ ಜನರು ಪರಿಶುದ್ಧ ಸ್ಥಳಕ್ಕೆ ಹೋಗಿ ಬಂದ ಆ ದುಷ್ಟರನ್ನು ಅವರಿದ್ದ ಪಟ್ಟಣದಲ್ಲಿ ಹೊಗಳುತ್ತಾರೆ\f + \fr 8:10 \fr*\fq ಹೊಗಳುತ್ತಾರೆ \fq*\ft ಪಟ್ಟಣದಲ್ಲಿ ಅವರ \ft*\fqa ಜ್ಞಾಪಕವೇ \fqa*\ft ಇಲ್ಲವಾಯಿತು\ft*\f*. ಇದೂ ಸಹ ನಿರರ್ಥಕವಾದದ್ದು. \p \v 11 ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು. \v 12 ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ, ಬಹುಕಾಲ ಬದುಕಿದರೂ ದೇವರಿಗೆ ಹೆದರಿ ದೈವಭಕ್ತಿಯುಳ್ಳವರಿಗೆ ಒಳ್ಳೆಯದಾಗುವುದೆಂದು ನಾನು ಬಲ್ಲೆನು. \v 13 ದುಷ್ಟರು ದೇವರಿಗೆ ಭಯಪಡುವುದಿಲ್ಲ. ಆದ್ದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ನೆರಳಿನ ಹಾಗಿರುವ ದುಷ್ಟರ ದಿನಗಳು ಹೆಚ್ಚುವುದಿಲ್ಲ. \p \v 14 ಭೂಮಿಯ ಮೇಲೆ ನಡೆಯುವ ಇನ್ನೊಂದು ವ್ಯರ್ಥ ಕಾರ್ಯವಿದು: ದುಷ್ಟರಿಗೆ ಆಗಬೇಕಾದ ಶಿಕ್ಷೆಯನ್ನು ನೀತಿವಂತರು ಅನುಭವಿಸುತ್ತಾರೆ. ನೀತಿವಂತರಿಗೆ ಆಗಬೇಕಾದ ಪ್ರತಿಫಲವನ್ನು ದುಷ್ಟರು ಅನುಭವಿಸುತ್ತಾರೆ. ಇದು ಸಹ ವ್ಯರ್ಥವೆಂದು ನಾನು ಹೇಳುತ್ತೇನೆ. \v 15 ಆದುದರಿಂದ ನಾನು ಸಂತೋಷವನ್ನು ಮೆಚ್ಚಿದೆನು. ಏಕೆಂದರೆ ಮನುಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವುದೂ ತಿನ್ನುವುದೂ ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದಿಲ್ಲ. ಸೂರ್ಯನ ಕೆಳಗೆ ದೇವರು ಮನುಷ್ಯನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟಕ್ಕೆ ಸುಖಾನುಭವವು ಅವನಿಗೆ ಸೇರಿರುತ್ತದೆ. \p \v 16 ಜ್ಞಾನವನ್ನು ತಿಳಿದುಕೊಳ್ಳುವುದಕ್ಕೂ ಭೂಮಿಯ ಮೇಲೆ ಮಾಡುವ ಪರಿಶ್ರಮವನ್ನು ನೋಡುವುದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು. ಜನರು ರಾತ್ರಿ ಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ಹಚ್ಚಗೊಡದವರೂ ಇದ್ದಾರೆ. \v 17 ತರುವಾಯ ದೇವರ ಮಾಡುವ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು. ಅದೇನೆಂದರೆ, ಸೂರ್ಯನ ಕೆಳಗೆ ಮಾಡುವ ದೇವರ ಕೆಲಸಗಳನ್ನು ಮನುಷ್ಯನು ಗ್ರಹಿಸಲಾರನು. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಸಹ ದೇವರು ಮಾಡುವುದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು. \c 9 \s1 ಎಲ್ಲರ ಅಂತ್ಯಸ್ಥಿತಿಯೂ ಒಂದೇ \p \v 1 ನಾನು ಇವೆಲ್ಲವುಗಳ ಮೇಲೆ ಅಭ್ಯಾಸ ಮಾಡಿ ಈ ತೀರ್ಮಾನಕ್ಕೆ ಬಂದೆನು. ಅದೇನೆಂದರೆ, ನೀತಿವಂತರ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಆದರೆ ಅವರಿಗೆ ಪ್ರೀತಿ ಕಾದಿದೆಯೋ ಅಥವಾ ದ್ವೇಷ ಕಾದಿದೆಯೋ ಎಂದು ಯಾರಿಗೂ ಗೊತ್ತಿಲ್ಲ. \v 2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ದುಷ್ಟನಿಗೂ ಒಳ್ಳೆಯವನಿಗೂ ಕೆಟ್ಟವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಯಜ್ಞ ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವುದು. \q1 ಒಳ್ಳೆಯವನಿಗೆ ಹೇಗೋ \q2 ಹಾಗೆಯೇ ಪಾಪಿಗೂ ಇರುವುದು. \q1 ಆಣೆಯಿಡುವವನಿಗೆ ಹೇಗೋ ಹಾಗೆಯೇ, \q2 ಆಣೆಯಿಡಲು ಭಯಪಡುವವನಿಗೂ ಇರುವುದು. \p \v 3 ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ. \v 4 ಜೀವಂತರ ಗುಂಪಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವುದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಉತ್ತಮ. \q1 \v 5 ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿದ್ದಾರೆ, \q2 ಆದರೆ ಸತ್ತವರಿಗೆ ಏನೂ ತಿಳಿಯದು; \q1 ಅವರಿಗೆ ಇನ್ನು ಮೇಲೆ ಪ್ರತಿಫಲ ಇಲ್ಲ. \q2 ಅವರ ಹೆಸರನ್ನು ಸಹ ಜನರು ಮರೆತುಬಿಡುತ್ತಾರೆ. \q1 \v 6 ಅವರ ಪ್ರೀತಿಯೂ ಅವರ ದ್ವೇಷವೂ \q2 ಅವರ ಅಸೂಯೆ ಕೂಡ, ಅವರು ಸತ್ತಾಗಲೇ ಅಳಿದುಹೋಗುತ್ತವೆ. \q1 ಸೂರ್ಯನ ಕೆಳಗೆ ನಡೆಯುವ ಯಾವ ಸಂಗತಿಗಳಲ್ಲಿಯೂ \q2 ಸತ್ತವರಿಗೆ ಇನ್ನೆಂದಿಗೂ ಪಾಲು ಇಲ್ಲ. \p \v 7 ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ. \v 8 ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ, ನಿನ್ನ ತಲೆಗೆ ಯಾವಾಗಲೂ ಎಣ್ಣೆ ಹಚ್ಚಿರಲಿ. \v 9 ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ. \v 10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ. \p \v 11 ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, \q1 ವೇಗಿಗಳಿಗೆ ಓಟವೂ \q2 ಪರಾಕ್ರಮಶಾಲಿಗಳಿಗೆ ಯುದ್ಧವೂ \q1 ಜ್ಞಾನಿಗಳಿಗೆ ಆಹಾರವೂ \q2 ವಿವೇಕಿಗಳಿಗೆ ಐಶ್ವರ್ಯವೂ \q2 ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. \q1 ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ. \p \v 12 ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. \q1 ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ \q2 ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ \q1 ಕೇಡಿನ ಕಾಲವು ತಟ್ಟನೆ ಬೀಳುವಾಗ \q2 ಜನರು ಸಿಕ್ಕಿಕೊಳ್ಳುತ್ತಾರೆ. \s1 ದಡ್ಡತನಕ್ಕಿಂತ ಜ್ಞಾನ ವಾಸಿ \p \v 13 ಸೂರ್ಯನ ಕೆಳಗೆ ನಾನು ಜ್ಞಾನವನ್ನು ಈ ವಿಧವಾಗಿ ನೋಡಿದ್ದೇನೆ. ಇದು ನನ್ನ ದೃಷ್ಟಿಗೆ ದೊಡ್ಡದಾಗಿ ಕಾಣಿಸಿತು. \v 14 ಒಂದು ಕಾಲದಲ್ಲಿ ಒಂದು ಸಣ್ಣ ನಗರವಿತ್ತು, ಅದರಲ್ಲಿ ಕೆಲವೇ ಜನರಿದ್ದರು. ಆಗ ಅಲ್ಲಿ ಒಬ್ಬ ಮಹಾ ಅರಸನು ಬಂದು ಅದನ್ನು ಮುತ್ತಿಗೆ ಹಾಕಿ, ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು. \v 15 ಆಗ ಅದರಲ್ಲಿ ಒಬ್ಬ ಜ್ಞಾನಿಯಾದ ಬಡ ಮನುಷ್ಯನು ಬಂದು, ತನ್ನ ಜ್ಞಾನದಿಂದ ಆ ಪಟ್ಟಣವನ್ನು ರಕ್ಷಿಸಿದನು. ಆದರೂ ಆ ಬಡ ಮನುಷ್ಯನನ್ನು ಯಾರೂ ಜ್ಞಾಪಕ ಮಾಡಿಕೊಳ್ಳಲಿಲ್ಲ. \v 16 ಇದನ್ನು ನೋಡಿ ನಾನು, “ಬಲಕ್ಕಿಂತ ಜ್ಞಾನವು ಉತ್ತಮ; ಆದರೆ ಜನರು ಬಡವನ ಜ್ಞಾನವನ್ನು ತಿರಸ್ಕಾರ ಮಾಡುತ್ತಾರೆ, ಅವನ ಮಾತುಗಳನ್ನು ಯಾರೂ ಲಕ್ಷಿಸುವುದಿಲ್ಲ,” ಎಂದುಕೊಂಡೆನು. \q1 \v 17 ಹುಚ್ಚರನ್ನು ಆಳುವವನ ಕೂಗಾಟಕ್ಕಿಂತಲೂ \q2 ಜ್ಞಾನಿಯ ಸಮಾಧಾನದ ಮಾತಿಗೆ ಮಹತ್ವ ಇದೆ. \q1 \v 18 ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. \q2 ಆದರೆ ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು. \b \c 10 \q1 \v 1 ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. \q2 ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ. \q1 \v 2 ಜ್ಞಾನಿಯ ಹೃದಯವು ಬಲಗಡೆ ಸಾಗಿದರೆ, \q2 ಮೂರ್ಖನ ಹೃದಯವು ಎಡಗಡೆ ಸಾಗುವುದು. \q1 \v 3 ಮೂರ್ಖನು ಮಾರ್ಗದಲ್ಲಿ ನಡೆಯುವಾಗಲೂ, \q2 ತಾನು ಅರಿವಿಲ್ಲದ ಮೂರ್ಖನೆಂದು \q2 ಪ್ರತಿಯೊಬ್ಬರಿಗೂ ಪ್ರಕಟಿಸುತ್ತಾನೆ. \q1 \v 4 ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, \q2 ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. \q2 ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ. \b \q1 \v 5 ಮತ್ತೊಂದು ವ್ಯಸನವನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. \q2 ಅದು ಆಳುವವರಿಂದ ಬರುವ ತಪ್ಪಿನಿಂದಾದದ್ದು. \q1 \v 6 ಅದು ಯಾವುದೆಂದರೆ, ಮೂರ್ಖರನ್ನು ಉನ್ನತ ಪದವಿಗೆ ನೇಮಿಸುವುದು. \q2 ಘನವಂತರನ್ನು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವಂತೆ ಮಾಡುವುದು. \q1 \v 7 ಕುದುರೆಗಳ ಮೇಲೆ ಸವಾರಿ ಮಾಡುವ ಸೇವಕರನ್ನೂ \q2 ಅಧಿಕಾರಿಗಳು ಸೇವಕರ ಹಾಗೆ ನಡೆದುಕೊಂಡು ಹೋಗುವುದನ್ನೂ ನಾನು ನೋಡಿದ್ದೇನೆ. \b \q1 \v 8 ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು. \q2 ಗೋಡೆಯನ್ನು ಒಡೆಯುವವನನ್ನು ಹಾವು ಕಡಿಯುವುದು. \q1 \v 9 ಗಣಿಯಿಂದ ಬಂಡೆಗಳನ್ನು ಸೀಳುವವನು ಗಾಯಗೊಳ್ಳುವನು. \q2 ಮರಕಡಿಯುವವನು ಅದರಿಂದಲೇ ಅಪಾಯಕ್ಕೊಳಗಾಗುವನು. \b \q1 \v 10 ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ, \q2 ಹೆಚ್ಚು ಬಲವನ್ನು ಪ್ರಯೋಗಿಸಬೇಕಾಗುವುದು, \q2 ಆದರೆ ಜ್ಞಾನವೇ ಯಶಸ್ಸನ್ನು ತರುತ್ತದೆ. \b \q1 \v 11 ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, \q2 ಹಾವಾಡಿಗನಿಗೆ ಏನು ಪ್ರಯೋಜನ? \b \q1 \v 12 ಜ್ಞಾನಿಯ ಮಾತುಗಳು ಹಿತಕರ. \q2 ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ. \q1 \v 13 ಅವನ ಮಾತುಗಳು ಆರಂಭದಲ್ಲಿ ಮೂಢತನವಾಗಿರುವುದು. \q2 ಅವನ ಮಾತಿನ ಅಂತ್ಯವು ಹುಚ್ಚುತನವಾಗಿರುವುದು. \q2 \v 14 ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. \b \q1 ಆದರೂ ಅವನು ಭವಿಷ್ಯ ಏನೆಂದು ತಿಳಿಯನು. \q2 ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ. \b \q1 \v 15 ಮೂಢರ ಕಷ್ಟವು ಅವರನ್ನು ದಣಿಸುತ್ತದೆ. \q2 ನಗರಕ್ಕೆ ಹೇಗೆ ಹೋಗಬೇಕೆಂದು ಸಹ ಅವನಿಗೆ ತಿಳಿಯದು. \b \q1 \v 16 ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, \q2 ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ! \q1 \v 17 ಶ್ರೇಷ್ಠ ಹಿನ್ನೆಲೆಯವನು ದೇಶಕ್ಕೆ ಅರಸನಾದರೆ, \q2 ರಾಜಕುಮಾರರು ಕುಡುಕರಾಗುವುದಕ್ಕೆ ಬದಲು, \q2 ಸರಿಯಾದ ಸಮಯದಲ್ಲಿ ಶಕ್ತಿಗಾಗಿ ಊಟ ಮಾಡಿದರೆ ಅದು ದೇಶಕ್ಕೆ ಆಶೀರ್ವಾದ. \b \q1 \v 18 ಸೋಮಾರಿತನದಿಂದ ಮನೆ ಕುಸಿಯುತ್ತದೆ. \q2 ಜೋಲುಗೈಯಿಂದ ಮನೆ ಸೋರುತ್ತದೆ. \b \q1 \v 19 ವಿನೋದಕ್ಕಾಗಿ ಔತಣ ಮಾಡುತ್ತಾರೆ, \q2 ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; \q2 ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು. \b \q1 \v 20 ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. \q2 ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. \q1 ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. \q2 ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು. \c 11 \s1 ನೀರಿನ ಮೇಲೆ ರೊಟ್ಟಿ \q1 \v 1 ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಕಳುಹಿಸು. \q2 ಬಹಳ ದಿನಗಳ ಮೇಲೆ ಅದರಿಂದ ನಿನಗೆ ಲಾಭ ಸಿಗುವುದು. \q1 \v 2 ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. \q2 ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು. \b \q1 \v 3 ಮೋಡಗಳು ಮಳೆಯಿಂದ ತುಂಬಿದ್ದರೆ, \q2 ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. \q1 ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, \q2 ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು. \q1 \v 4 ಯಾವನು ಗಾಳಿಗಾಗಿ ಕಾದಿರುವನೋ, ಅವನು ಬೀಜ ಬಿತ್ತುವುದಿಲ್ಲ. \q2 ಮೋಡಗಳನ್ನು ಗಮನಿಸುತ್ತಿರುವವನು ಸಹ ಪೈರು ಕೊಯ್ಯುವುದಿಲ್ಲ. \b \q1 \v 5 ಗಾಳಿಯ ಚಲನೆಯನ್ನಾಗಲಿ \q2 ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನೀನು ಹೇಗೆ ಗ್ರಹಿಸಲಾರೆಯೋ, \q1 ಹಾಗೆಯೇ, ಸರ್ವ ಸೃಷ್ಟಿಕರ್ತ ಆಗಿರುವ \q2 ದೇವರ ಕೆಲಸವನ್ನು ನೀನು ಗ್ರಹಿಸಲಾರೆ. \b \q1 \v 6 ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. \q2 ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. \q1 ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. \q2 ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ. \s1 ಸೃಷ್ಟಿಕರ್ತ ದೇವರನ್ನು ಸ್ಮರಿಸು \q1 \v 7 ಬೆಳಕು ಹಿತಕರ. \q2 ಸೂರ್ಯನ ಕಾಂತಿ ಕಣ್ಣುಗಳಿಗೆ ಮೆಚ್ಚಿಕೆ. \q1 \v 8 ಒಬ್ಬನು ಅನೇಕ ವರ್ಷಗಳು ಬದುಕಿ, \q2 ಅವುಗಳಲ್ಲೆಲ್ಲಾ ಸಂತೋಷಪಟ್ಟರೂ \q1 ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ, \q2 ಏಕೆಂದರೆ ಅಂಥ ದಿನಗಳು ಬಹಳ. \q2 ಮುಂದಾಗುವುದೆಲ್ಲವೂ ವ್ಯರ್ಥವೇ. \b \q1 \v 9 ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. \q2 ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. \q1 ನೀನು ನಿನ್ನ ಮನಸ್ಸಿಗೆ ಬಂದಂತೆಯೂ \q2 ನಿನ್ನ ಕಣ್ಣಿನ ನೋಟದಂತೆಯೂ ನಡೆ. \q1 ಆದರೆ ಈ ಎಲ್ಲಾ ಸಂಗತಿಗಳಿಗಾಗಿ \q2 ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ. \q1 \v 10 ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು. \q2 ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು. \q2 ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ. \b \c 12 \q1 \v 1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, \q2 “ಇವುಗಳಲ್ಲಿ ನನಗೆ ಸಂತೋಷವಿಲ್ಲ,” \q1 ಎಂದು ನೀನು ಹೇಳುವ ವರ್ಷಗಳು \q2 ಸಮೀಪಿಸುವುದಕ್ಕೆ ಮೊದಲು, \q2 ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು. \q1 \v 2 ಸೂರ್ಯ ಚಂದ್ರ \q2 ನಕ್ಷತ್ರಗಳೂ ನಿನಗೆ ಮೊಬ್ಬಾಗಿ, \q2 ಮಳೆಯ ಮೋಡಗಳು ಮತ್ತೆ ಬರುವುದಕ್ಕಿಂತ ಮೊದಲು ದೇವರನ್ನು ಸ್ಮರಿಸು. \q1 \v 3 ಆ ದಿನದಲ್ಲಿ ಮನೆ ಕಾಯುವವರು ನಡುಗುವರು. \q2 ಬಲವಾದ ಮನುಷ್ಯರು ಸಹ ತಾವಾಗಿಯೇ ಬಗ್ಗುವರು. \q1 ಅರೆಯುವವರು ಕೆಲವರೇ ಉಳಿದಿರುವುದರಿಂದ ಸುಮ್ಮನಿರುವರು. \q2 ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು. \q1 \v 4 ಬೀದಿ ಬಾಗಿಲುಗಳು ಮುಚ್ಚಿರುವುವು, \q2 ಅರೆಯುವ ಶಬ್ದವು ಕಡಿಮೆಯಾಗುವುದು; \q1 ಪಕ್ಷಿಯ ಶಬ್ದವಾದಾಗ ಎದ್ದೇಳುವುದು ತಡವಾಗುವುದು. \q2 ಮುಂಜಾನೆಯ ಗಾನಸ್ವರ ಮಂದವಾಗುವುದು. \q1 \v 5 ಎತ್ತರವನ್ನು ಕಂಡು ಹೆದರಿಕೆಯಾಗುವುದು. \q2 ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. \q1 ಬಾದಾಮಿಯ ಮರದಂತೆ ಹೂವು ಬಿಡುವುದು. \q2 ಮಿಡತೆಯು ಸಹ ಭಾರಾವಾಗಿರುವುದು. \q2 ಆಸೆ ಕುಂದಿಹೋಗುವುದು. \q1 ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. \q2 ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು. \b \q1 \v 6 ಬೆಳ್ಳಿಯಂತ ಸರ ಕಿತ್ತುಹೋಗುವುದು, \q2 ಬಂಗಾರದಂತ ಬಟ್ಟಲು ಜಜ್ಜಿ ಹೋಗುವುದು. \q1 ಮಣ್ಣಿನ ಮಡಕೆಯು ಬುಗ್ಗೆಯ ಹತ್ತಿರ ಒಡೆದು ಹೋಗುವುದು. \q2 ಬಾವಿಯ ರಾಟೆ ಮುರಿಯುವುದು. \q1 \v 7 ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. \q2 ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು. \b \q1 \v 8 “ವ್ಯರ್ಥ, ವ್ಯರ್ಥವೇ! \q2 ಎಲ್ಲವೂ ವ್ಯರ್ಥವೇ!” ಎಂದು ಪ್ರಸಂಗಿ ಹೇಳುತ್ತಾನೆ. \s1 ಕೊನೆಯ ಮಾತುಗಳು \p \v 9 ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು. \v 10 ಪ್ರಸಂಗಿಯು ಸೂಕ್ತ ವಾಕ್ಯಗಳನ್ನು ಹುಡುಕಿ ಕಂಡುಹಿಡಿದನು. ಹಾಗೆ ಬರೆದವುಗಳು ಯಥಾರ್ಥ ಮತ್ತು ಸತ್ಯವಾದ ಮಾತುಗಳು. \p \v 11 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ. \v 12 ನನ್ನ ಮಗುವೇ, ಇವುಗಳನ್ನಲ್ಲದೇ, ನೀನು ಎಚ್ಚರಿಕೆಯಿಂದ ಇರಬೇಕಾದ ವಿಷಯಗಳು ಇನ್ನೂ ಇವೆ. \p ಬಹಳ ಪುಸ್ತಕಗಳ ರಚನೆಗೆ ಅಂತ್ಯವಿಲ್ಲ. ಅತಿಯಾದ ಅಭ್ಯಾಸವು ದೇಹಕ್ಕೆ ಆಯಾಸ. \q1 \v 13 ಈಗ ನಾವು ಎಲ್ಲಾ ವಿಷಯವನ್ನೂ \q2 ಕೇಳಿ ಮುಗಿಯಿತು. \q1 ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. \q2 ಇದೇ ಮನುಷ್ಯನ ಪ್ರಮುಖ ಕರ್ತವ್ಯ. \q1 \v 14 ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, \q2 ದೇವರು ಆ ಎಲ್ಲಾ ಕಾರ್ಯಗಳನ್ನೂ \q2 ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.