\id EPH - Biblica® Open Kannada Contemporary Version \ide UTF-8 \h ಎಫೆಸದವರಿಗೆ \toc1 ಎಫೆಸದವರಿಗೆ ಪೌಲನು ಬರೆದ ಪತ್ರಿಕೆ \toc2 ಎಫೆಸದವರಿಗೆ \toc3 ಎಫೆಸ \mt1 ಎಫೆಸದವರಿಗೆ \mt2 ಪೌಲನು ಬರೆದ ಪತ್ರಿಕೆ \c 1 \p \v 1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, \b \p ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು: \b \p \v 2 ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. \b \s1 ಕ್ರಿಸ್ತನಿಂದ ಆತ್ಮಿಕ ಆಶೀರ್ವಾದಗಳು \p \v 3 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ. \v 4 ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು. \v 5 ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು. \v 6 ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ. \v 7 ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು. \v 8 ದೇವರು ಆ ಕೃಪೆಯನ್ನು ನಮ್ಮಲ್ಲಿ ಸಮೃದ್ಧಿಯಾಗಿ ಸುರಿಸಿದ್ದಾರೆ. ಎಲ್ಲಾ ಜ್ಞಾನ ವಿವೇಕಗಳೊಂದಿಗೆ \v 9 ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು, \v 10 ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ. \p \v 11 ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು. \v 12 ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು. \v 13 ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ. \v 14 ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ. \s1 ಕೃತಜ್ಞತೆ ಮತ್ತು ಪ್ರಾರ್ಥನೆ \p \v 15 ಈ ಕಾರಣದಿಂದ ನಾನು ಸಹ ಕರ್ತ ಯೇಸುವಿನಲ್ಲಿರುವ ನಿಮ್ಮ ನಂಬಿಕೆ ಹಾಗೂ ಪರಿಶುದ್ಧರೆಲ್ಲರಿಗಾಗಿರುವ ಪ್ರೀತಿಯನ್ನು ಕುರಿತು ಕೇಳಿ, \v 16 ನನ್ನ ಪ್ರಾರ್ಥನೆಗಳಲ್ಲಿ ನಿಮಗಾಗಿ ವಿಜ್ಞಾಪಿಸಿ, ನಿಮ್ಮ ನಿಮಿತ್ತವಾಗಿ ಎಡಬಿಡದೆ ಸ್ತೋತ್ರ ಮಾಡುತ್ತೇನೆ. \v 17 ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ. \v 18 ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ. \v 19 ಮಾತ್ರವಲ್ಲದೆ ನಂಬುವವರಾದ ನಮಗಾಗಿರುವ ಹೋಲಿಸಲಾಗದ ದೇವರ ಮಹಾಶಕ್ತಿಯನ್ನೂ ನೀವು ತಿಳಿಯುವಂತೆ ಪ್ರಾರ್ಥನೆ ಮಾಡುವವನಾಗಿದ್ದೇನೆ. \v 20 ಈ ಮಹಾಶಕ್ತಿಯನ್ನು ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ, \v 21 ಸಕಲ ರಾಜತ್ವ, ಅಧಿಕಾರ, ಶಕ್ತಿ, ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿಯೂ ಸಹ, ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೋಕದಲ್ಲಿ ಕ್ರಿಸ್ತರನ್ನು ತಮ್ಮ ಬಲಗಡೆಯಲ್ಲಿ ಕೂರಿಸಿಕೊಂಡರು. \v 22 ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಅಧೀನಮಾಡಿ, ಅವರನ್ನು ಎಲ್ಲದರ ಮೇಲೆ ಶಿರಸ್ಸಾಗಿರಲು ಸಭೆಗೋಸ್ಕರ ನೇಮಿಸಿದ್ದಾರೆ. \v 23 ಎಲ್ಲವನ್ನು ಎಲ್ಲಾ ವಿಧದಲ್ಲಿಯೂ ತುಂಬಿಸುವ ದೇವರಿಂದ ಕ್ರಿಸ್ತನ ದೇಹವಾಗಿರುವ ಸಭೆಯು ಪರಿಪೂರ್ಣ ಉಳ್ಳದ್ದಾಗಿದೆ. \c 2 \s1 ಕ್ರಿಸ್ತನಲ್ಲಿ ಜೀವಂತವಾಗಿರುವುದು \p \v 1 ನೀವು ನಿಮ್ಮ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಹಿಂದೊಮ್ಮೆ ಸತ್ತವರಾಗಿದ್ದೀರಿ. \v 2 ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ. \v 3 ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು. \v 4 ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು. \v 5 ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ. \v 6 ಕ್ರಿಸ್ತ ಯೇಸುವಿನೊಂದಿಗೆ ದೇವರು ನಮ್ಮನ್ನು ಎಬ್ಬಿಸಿ ಪರಲೋಕದ ಉನ್ನತ ಸ್ಥಳಗಳಲ್ಲಿ ಕ್ರಿಸ್ತನೊಂದಿಗೇ ನಮ್ಮನ್ನು ಕೂತುಕೊಳ್ಳುವಂತೆ ಮಾಡಿದ್ದಾರೆ. \v 7 ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾರೆ. \v 8 ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ. \v 9 ಯಾರಾದರೂ ಹೆಮ್ಮೆ ಪಡುವಂತೆ ಈ ರಕ್ಷಣೆಯು ಪುಣ್ಯಕ್ರಿಯೆಗಳಿಂದ ಉಂಟಾದದ್ದೂ ಅಲ್ಲ. \v 10 ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ. \s1 ಕ್ರಿಸ್ತನಲ್ಲಿ ಒಂದಾಗಿರುವುದು \p \v 11 ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ. \v 12 ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ. \v 13 ಮೊದಲು ಕ್ರಿಸ್ತ ಯೇಸುವಿಗೆ ದೂರವಾಗಿದ್ದ ನೀವು ಈಗ ಕ್ರಿಸ್ತನ ರಕ್ತದ\f + \fr 2:13 \fr*\ft ಅಥವಾ \ft*\fqa ಶಿಲುಬೆಯ ಮರಣದಿಂದ\fqa*\f* ಮೂಲಕ ಹತ್ತಿರವಾಗಿದ್ದೀರಿ. \p \v 14 ಕ್ರಿಸ್ತ ಯೇಸು ತಾವೇ ನಮ್ಮ ಸಮಾಧಾನವಾಗಿದ್ದು, ಎರಡು ಗುಂಪಿನವರನ್ನು ಒಂದು ಮಾಡಿ, ಅಗಲಿಸಿದ ವೈರತ್ವದ ಅಡ್ಡಗೋಡೆಯನ್ನು ತಮ್ಮ ಶರೀರದ ಮೂಲಕ ಕೆಡವಿಹಾಕಿದರು. \v 15 ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು. \v 16 ಶಿಲುಬೆಯ ಮರಣದ ಮೂಲಕ ಇವೆರಡೂ ಗುಂಪಿನವರಿಂದ ಒಂದೇ ದೇಹದವರನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿ, ಇದ್ದ ವೈರತ್ವವನ್ನು ಇಲ್ಲದಂತೆ ಮಾಡಿದರು. \v 17 ಇದಲ್ಲದೆ ಕ್ರಿಸ್ತ ಯೇಸುವು ಬಂದು ದೂರವಾಗಿದ್ದ ನಿಮಗೂ ಸಮೀಪವಾಗಿದ್ದ ನಮಗೂ ಸಮಾಧಾನವನ್ನು ಸಾರಿದರು. \v 18 ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ನಾವೂ ನೀವೂ ಪವಿತ್ರಾತ್ಮ ದೇವರಿಂದ ತಂದೆಯ ಬಳಿಗೆ ಪ್ರವೇಶಿಸುವುದಕ್ಕೆ ಮಾರ್ಗವಾಯಿತು. \p \v 19 ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶದವರೂ ಆಗಿರದೆ ದೇವಜನರೊಂದಿಗೆ ಜೊತೆ ನಾಗರಿಕರೂ ದೇವರ ಮನೆಯವರೂ ಆಗಿದ್ದೀರಿ. \v 20 ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ. \v 21 ಕ್ರಿಸ್ತನಲ್ಲಿ ಕಟ್ಟಡವೆಲ್ಲವೂ ಒಂದಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. \v 22 ನೀವೂ ಸಹ ಆತ್ಮನ ಮೂಲಕ ಕ್ರಿಸ್ತನಲ್ಲಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ನಿರ್ಮಿತರಾಗುತ್ತಿದ್ದೀರಿ. \c 3 \s1 ಪೌಲನು ಯೆಹೂದ್ಯರಲ್ಲದವರ ಅಪೊಸ್ತಲನು \p \v 1 ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ: \p \v 2 ನಿಮಗೋಸ್ಕರವಾಗಿ ನನಗೆ ಕೊಡಲಾದ ದೇವರ ಕೃಪೆಯ ಕಾರ್ಯಭಾರವನ್ನು ನೀವು ಕೇಳಿದ್ದೀರಿ, \v 3 ಅವರು ರಹಸ್ಯವನ್ನು ಪ್ರಕಟನೆಯಿಂದ ನನಗೆ ತಿಳಿಸಿದರೆಂದು ನಾನು ನಿಮಗೆ ಮೊದಲೇ ಸಂಕ್ಷೇಪವಾಗಿ ಬರೆದಿದ್ದೇನೆ. \v 4 ಅದನ್ನು ನೀವು ಓದಿದರೆ ಕ್ರಿಸ್ತನ ರಹಸ್ಯದ ಕುರಿತಾಗಿ ನನಗಿರುವ ಒಳನೋಟವನ್ನು ನೀವೇ ಅರ್ಥಮಾಡಿಕೊಳ್ಳುವಿರಿ. \v 5 ಈ ರಹಸ್ಯವು ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ದೇವರಾತ್ಮರ ಮೂಲಕ ಈಗ ಪ್ರಕಟಿಸಿದಂತೆ, ಬೇರೆ ತಲೆಮಾರುಗಳಲ್ಲಿದ್ದ ಜನರಿಗೆ ತಿಳಿಸಿರಲಿಲ್ಲ. \v 6 ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ. \p \v 7 ದೇವರ ಶಕ್ತಿಯ ಕ್ರಿಯೆಯಿಂದ ನನಗೆ ಕೊಡಲಾದ ಅವರ ದೇವ ಕೃಪಾದಾನಕ್ಕೆ ಅನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. \v 8 ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ \v 9 ಸಮಸ್ತವನ್ನೂ ಸೃಷ್ಟಿಸಿದ ದೇವರಲ್ಲಿ ಲೋಕಾದಿಯಿಂದ ಮರೆಯಾಗಿದ್ದ ಕಾರ್ಯಭಾರದ ರಹಸ್ಯವು ಏನೆಂಬುದನ್ನು ಎಲ್ಲರಿಗೂ ಸ್ಪಷ್ಟಪಡಿಸುವುದಕ್ಕಾಗಿಯೂ ಆಗಿರುತ್ತದೆ. \v 10 ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ. \v 11 ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು. \v 12 ಕ್ರಿಸ್ತನಲ್ಲಿಯೂ ಕ್ರಿಸ್ತನ ಮೇಲೆ ನಂಬಿಕೆಯನ್ನಿಡುವುದರ ಮೂಲಕವೂ ನಾವು ಸ್ವಾತಂತ್ರ್ಯದಿಂದಲೂ ಭರವಸೆಯಿಂದಲೂ ದೇವರನ್ನು ಸಮೀಪಿಸಲು ಈಗ ಸಾಧ್ಯ. \v 13 ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. \s1 ಎಫೆಸದವರಿಗಾಗಿ ಪ್ರಾರ್ಥನೆ \p \v 14-15 ಈ ಕಾರಣದಿಂದ, ಪರಲೋಕ ಭೂಲೋಕದಲ್ಲಿರುವ ಪ್ರತಿ ಕುಟುಂಬವೂ ಹೆಸರು ಪಡೆದಿರಲು ಕಾರಣವಾಗಿರುವ ತಂದೆಯ ಮುಂದೆ ನಾನು ಮೊಣಕಾಲೂರುತ್ತೇನೆ: \v 16 ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ. \v 17 ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು \v 18 ದೇವರ ಪರಿಶುದ್ಧರೆಲ್ಲರೊಂದಿಗೆ ಅದರ ಅಗಲ, ಉದ್ದ, ಆಳ ಮತ್ತು ಎತ್ತರವನ್ನು ಪೂರ್ಣವಾಗಿ ಕ್ರಿಸ್ತನ ಪ್ರೀತಿಯನ್ನು ಅರಿಯುವುದಕ್ಕೆ ಶಕ್ತರಾಗಲಿ. \v 19 ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ. \p \v 20 ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ \v 21 ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್. \c 4 \s1 ಕ್ರಿಸ್ತನ ದೇಹದಲ್ಲಿ ಐಕ್ಯತೆ \p \v 1 ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ. \v 2 ನೀವು ಸಂಪೂರ್ಣ ದೀನತ್ವದಿಂದಲೂ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ. \v 3 ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. \v 4 ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ, \v 5 ಕರ್ತ ಆಗಿರುವವರು ಒಬ್ಬರೇ, ಒಂದೇ ವಿಶ್ವಾಸ, ದೀಕ್ಷಾಸ್ನಾನವೂ ಒಂದೇ, \v 6 ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬರೇ; ಅವರೇ ಎಲ್ಲರ ಮೇಲಿರುವರೂ ಎಲ್ಲರ ಮೂಲಕ ಕಾರ್ಯನಡಿಸುವವರೂ ಎಲ್ಲರಲ್ಲಿ ವಾಸಿಸುವವರೂ ಆಗಿದ್ದಾರೆ. \p \v 7 ನಮ್ಮಲ್ಲಿ ಪ್ರತಿಯೊಬ್ಬನಿಗೂ ಕ್ರಿಸ್ತ ಯೇಸುವು ನೀಡಿದ ಅಳತೆಗೆ ಅನುಸಾರವಾಗಿ ವರವನ್ನು ಕೊಡಲಾಗಿದೆ. \v 8 ಆದ್ದರಿಂದ ಪವಿತ್ರ ವೇದದಲ್ಲಿ ಹೀಗೆ ಹೇಳಲಾಗಿದೆ: \q1 “ಅವರು ಉನ್ನತಸ್ಥಾನಕ್ಕೆ ಏರಿಹೋದಾಗ, \q2 ಸೆರೆಯಾಳಾಗಿದ್ದ ಅನೇಕರನ್ನು ಕೊಂಡೊಯ್ದು \q2 ತಮ್ಮ ಜನರಿಗೆ ವರದಾನಗಳನ್ನು ಕೊಟ್ಟರು!”\f + \fr 4:8 \fr*\ft \+xt ಕೀರ್ತನೆ 68:18\+xt*\ft*\f* \m \v 9 “ಅವರು ಏರಿ ಹೋದರೆಂದು,” ಹೇಳಿದ್ದರ ಅರ್ಥವೇನು? ಭೂಮಿಯ ಭೂಗರ್ಭಕ್ಕೂ ಇಳಿದಿದ್ದರು ಎಂದೂ ಹೇಳಿದ ಹಾಗಾಯಿತಲ್ಲವೇ? \v 10 ಇಳಿದು ಬಂದ ಅವರೇ ಮೇಲಣ ಎಲ್ಲಾ ಆಕಾಶಗಳಿಗಿಂತ ಉನ್ನತವಾಗಿ ಏರಿಹೋಗಿ, ಇಡೀ ವಿಶ್ವವನ್ನೇ ತುಂಬಿಕೊಳ್ಳುವುದಕ್ಕಾಗಿ ಮೇಲೆ ಏರಿ ಹೋಗಿದ್ದಾರೆ. \v 11 ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು. \v 12 ಕ್ರಿಸ್ತನ ದೇಹವನ್ನು ಕಟ್ಟುವುದಕ್ಕಾಗಿಯೂ ದೇವಜನರನ್ನು ಸೇವಾ ಕೆಲಸಕ್ಕಾಗಿ ಪರಿಣಿತರನ್ನಾಗಿ ಮಾಡುವುದಕ್ಕಾಗಿಯೂ ಕ್ರಿಸ್ತನು ಅವರನ್ನು ಕೊಟ್ಟ ಉದ್ದೇಶವಾಗಿತ್ತು. \v 13 ನಾವೆಲ್ಲರೂ ಕ್ರಿಸ್ತನ ಪರಿಪೂರ್ಣತೆಯ ಬೆಳವಣಿಗೆಯಲ್ಲಿ ವಿಶ್ವಾಸದಲ್ಲಿಯೂ ದೇವಪುತ್ರನ ತಿಳುವಳಿಕೆಯಲ್ಲಿ ಒಂದು ಮನಸ್ಸುಳ್ಳವರಾಗಿ ಪರಿಪಕ್ವತೆಯನ್ನು ಹೊಂದುವುದೇ ಆ ಉದ್ದೇಶವಾಗಿತ್ತು. \p \v 14 ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು. \v 15 ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ, ನಾವು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ದೇಹದ ಪರಿಪಕ್ವತೆಯೆಡೆಗೆ ಅವರ ಶಿರಸತ್ವದಲ್ಲಿ ಬೆಳೆಯೋಣ. \v 16 ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ. \s1 ಬೆಳಕಿನ ಮಕ್ಕಳಾಗಿ ಜೀವಿಸುವುದು \p \v 17 ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ. \v 18 ಅವರು ತಮ್ಮ ಹೃದಯ ಕಠಿಣತ್ವದ ಅಜ್ಞಾನದಿಂದ ತಮ್ಮ ಕತ್ತಲು ಕವಿದ ತಿಳುವಳಿಕೆಯಲ್ಲಿ, ದೇವರ ಜೀವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರಾಗಿದ್ದಾರೆ. \v 19 ಅವರು ಸರ್ವ ಸೂಕ್ಷ್ಮತೆಯನ್ನು ಕಳೆದುಕೊಂಡು, ತಮ್ಮನ್ನು ಕಾಮುಕತನಕ್ಕೆ ಒಪ್ಪಿಸಿಕೊಟ್ಟು, ಎಲ್ಲಾ ಅಶುದ್ಧತ್ವವನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ. \p \v 20 ನೀವಾದರೋ ಕ್ರಿಸ್ತನನ್ನು ಆ ರೀತಿಯಾಗಿ ಅರಿತುಕೊಳ್ಳಲಿಲ್ಲ. \v 21 ನೀವು ಕ್ರಿಸ್ತನ ಬಗ್ಗೆ ಕೇಳಿ ಬೋಧನೆಯನ್ನು ಪಡೆದಾಗ, ಅದು ಯೇಸುವಿನಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತು. \v 22 ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು. \v 23 ಹೀಗೆ ನೀವು ನಿಮ್ಮ ಮನೋಭಾವನೆಯನ್ನು ನವೀಕರಿಸಿಕೊಂಡು; \v 24 ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ. \p \v 25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು. \v 26 “ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,”\f + \fr 4:26 \fr*\ft \+xt ಕೀರ್ತನೆ 4:4\+xt*\ft*\f* ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ. \v 27 ಹೀಗೆ ನೀವು ಸೈತಾನನಿಗೆ ಅವಕಾಶಕೊಡಬೇಡಿರಿ. \v 28 ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು. \p \v 29 ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ. \v 30 ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. \v 31 ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. \v 32 ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ. \c 5 \nb \v 1 ಆದ್ದರಿಂದ ನೀವು ದೇವರ ಪ್ರಿಯರಾದ ಮಕ್ಕಳಂತೆ ದೇವರ ಮಾದರಿಯನ್ನು ಅನುಸರಿಸಿ ಬಾಳಿರಿ. \v 2 ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ. \p \v 3 ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ. \v 4 ಅಶ್ಲೀಲತೆ, ಬುದ್ಧಿಹೀನ ಮಾತು, ಅಸಭ್ಯ ಹರಟೆ ಇವು ಬೇಡ, ಇವು ಅಯುಕ್ತವಾಗಿವೆ, ಪ್ರತಿಯಾಗಿ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. \v 5 ಏಕೆಂದರೆ ಯಾವ ಜಾರನಾಗಲಿ, ಅಶುದ್ಧನಾಗಲಿ, ದೇವರಲ್ಲದವುಗಳನ್ನು ಪೂಜಿಸುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಹಕ್ಕುಬಾಧ್ಯತೆಯನ್ನು ಹೊಂದುವುದಿಲ್ಲವೆಂಬುದು ನಿಮಗೆ ಮನದಟ್ಟಾಗಿರಲಿ. \v 6 ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ. \v 7 ಆದ್ದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ. \p \v 8 ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ. \v 9 ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ. \v 10 ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬುದನ್ನು ಪರಿಶೋಧಿಸಿರಿ. \v 11 ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ. \v 12 ಆ ಅವಿಧೇಯರು ಗುಟ್ಟಾಗಿ ಮಾಡುವ ಕೃತ್ಯಗಳನ್ನು ಹೇಳುವುದಕ್ಕೂ ಅವಮಾನಕರವಾಗಿವೆ. \v 13 ಆದರೆ, ಬಹಿರಂಗವಾದವುಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ. ಎಲ್ಲವನ್ನೂ ಪ್ರಕಾಶಪಡಿಸುವಂಥದ್ದು ಬೆಳಕೇ. \v 14 ಆದ್ದರಿಂದ ಹೀಗೆ ಹೇಳಲಾಗಿದೆ: \q1 “ನಿದ್ರೆ ಮಾಡುವವನೇ, \q2 ಎಚ್ಚರವಾಗು, ಸತ್ತವರಿಂದ ಎದ್ದೇಳು, \q2 ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.” \p \v 15 ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ. \v 16 ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ. \v 17 ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ. \v 18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,\f + \fr 5:18 \fr*\ft ಅಥವಾ \ft*\fqa ನಿಯಂತ್ರಣಕ್ಕೆ ಒಳಗಾಗಿರಿ\fqa*\f* \v 19 ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ. \v 20 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ. \s1 ವಿಶ್ವಾಸಿಗಳ ಕುಟುಂಬಕ್ಕೆ ಬುದ್ಧಿವಾದಗಳು \p \v 21 ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ. \p \v 22 ಹೆಂಡತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. \v 23 ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ. \v 24 ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. \p \v 25 ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. \v 26 ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ, \v 27 ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು. \v 28 ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. \v 29 ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ. \v 30 ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ. \v 31 “ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.”\f + \fr 5:31 \fr*\ft \+xt ಆದಿ 2:24\+xt*\ft*\f* \v 32 ಈ ರಹಸ್ಯವು ಮಹತ್ತಾದದ್ದು. ಆದರೆ ನಾನು ಕ್ರಿಸ್ತನ ಹಾಗೂ ಸಭೆಯ ವಿಷಯವಾಗಿ ಮಾತನಾಡುತ್ತಿದ್ದೇನೆ. \v 33 ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು. \c 6 \p \v 1 ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು. \v 2 “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು,” ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ. \v 3 “ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ.”\f + \fr 6:3 \fr*\ft \+xt ಧರ್ಮೋ 5:16\+xt*\ft*\f* \p \v 4 ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ. \p \v 5 ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ. \v 6 ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ. \v 7 ನೀವು ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರವೇ ಸೇವೆ ಮಾಡುವಂತೆ, ಪೂರ್ಣಮನಸ್ಸಿನಿಂದ ಸೇವೆಮಾಡಿರಿ. \v 8 ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ. \p \v 9 ಯಜಮಾನರೇ, ನೀವು ಸಹ ನಿಮ್ಮ ಸೇವಕರೊಡನೆ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೆ ಯಜಮಾನನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿರಿ. \s1 ದೇವರು ಕೊಡುವ ಸರ್ವಾಯುಧಗಳು \p \v 10 ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ. \v 11 ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. \v 12 ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ. \v 13 ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. \v 14 ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ. \v 15 ಸಮಾಧಾನದ ಸುವಾರ್ತೆಯ ಸಿದ್ಧತೆಯೆಂಬ ಪಾದರಕ್ಷೆಗಳನ್ನು ಮೆಟ್ಟಿಕೊಂಡು ನಿಲ್ಲಿರಿ. \v 16 ಇವೆಲ್ಲವುಗಳೊಂದಿಗೆ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಈ ಗುರಾಣಿಯಿಂದಲೇ, ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. \v 17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ. \p \v 18 ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ. \v 19 ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ. \v 20 ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ. \b \s1 ಅಂತಿಮ ವಂದನೆಗಳು \p \v 21 ನನ್ನ ವಿಷಯವಾಗಿಯೂ ನಾನು ಮಾಡುತ್ತಿರುವುದರ ವಿಷಯವಾಗಿಯೂ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು. \v 22 ನೀವು ನಮ್ಮ ಸಮಾಚಾರವನ್ನು ತಿಳಿದುಕೊಳ್ಳುವಂತೆಯೂ ಅವನು ನಿಮ್ಮ ಹೃದಯಗಳನ್ನು ಉತ್ತೇಜಿಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. \b \p \v 23 ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ಶಾಂತಿಯೂ ಮತ್ತು ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಇರಲಿ. \b \p \v 24 ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಳಿದು ಹೋಗದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ಕೃಪೆಯಿರಲಿ.