\id EZK - Biblica® Open Kannada Contemporary Version \ide UTF-8 \h ಯೆಹೆಜ್ಕೇಲನು \toc1 ಯೆಹೆಜ್ಕೇಲನು \toc2 ಯೆಹೆಜ್ಕೇಲನು \toc3 ಯೆಹೆ \mt1 ಯೆಹೆಜ್ಕೇಲನು \c 1 \s1 ಯೆಹೆಜ್ಕೇಲನ ಮೊದಲನೆಯ ದರ್ಶನ \p \v 1 ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು. \p \v 2 ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಕೀನನ ಸೆರೆಯ ಐದನೆಯ ವರ್ಷದಲ್ಲಿ, \v 3 ಯೆಹೋವ ದೇವರ ವಾಕ್ಯವು ಬಾಬಿಲೋನಿಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ, ಬೂಜಿಯ ಮಗ ಹಾಗೂ ಯಾಜಕ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು ಮತ್ತು ಅಲ್ಲಿ ಯೆಹೋವ ದೇವರ ಕೈ ಅವನ ಮೇಲಿತ್ತು. \p \v 4 ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ ಜ್ವಾಲೆಯ ಮಧ್ಯೆ ಹೊಳೆಯುವ ಲೋಹ ಬೆಳಗಿತು. \v 5 ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರಟಿತು. ಅವುಗಳಿಗೆ ಮನುಷ್ಯನ ರೂಪವಿತ್ತು. \v 6 ಪ್ರತಿಯೊಂದಕ್ಕೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು. \v 7 ಅವುಗಳ ಕಾಲುಗಳು ನೆಟ್ಟಗಿದ್ದು, ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು, ಕಂಚಿಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು. \v 8 ಅವುಗಳ ರೆಕ್ಕೆಗಳ ಕೆಳಗೆ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು. ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು. \v 9 ಅವುಗಳ ರೆಕ್ಕೆಗಳು ಪರಸ್ಪರರ ರೆಕ್ಕೆಗಳನ್ನು ಸ್ಪರ್ಶಿಸುತ್ತಿದ್ದವು. ಪ್ರತಿಯೊಂದೂ ನೇರವಾಗಿ ಮುಂದೆ ಹೋಗುತ್ತಿದ್ದವು ಮತ್ತು ಅವರು ತಿರುಗದೆ ಮುಂದೆ ಸಾಗುತ್ತಿದ್ದರು. \p \v 10 ಅವುಗಳ ಮುಖಗಳು ಹೀಗಿದ್ದವು: ಪ್ರತಿಯೊಂದರ ಮುಂದಿನ ನಾಲ್ಕು ಮುಖಗಳು ಮನುಷ್ಯನ ಮುಖದಂತಿತ್ತು; ಬಲಗಡೆಯ ನಾಲ್ಕು ಮುಖಗಳು ಸಿಂಹದ ಮುಖದಂತಿತ್ತು; ಎಡಗಡೆಯ ನಾಲ್ಕು ಮುಖಗಳು ಹೋರಿಯ ಮುಖದಂತಿತ್ತು; ಹಿಂದಿನ ನಾಲ್ಕು ಮುಖಗಳು ಗರುಡಪಕ್ಷಿಯ ಮುಖದಂತಿತ್ತು. \v 11 ಅವುಗಳ ಮುಖಗಳು ಹೀಗಿದ್ದವು. ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಿಕೊಂಡಿದ್ದವು. ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು, ಒಂದಕ್ಕೊಂದು ಅಂಟಿಕೊಂಡಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು. \v 12 ಅವೆಲ್ಲವೂ ನೆಟ್ಟಗೆ ಮುಂದಕ್ಕೆ ಹೋದವು. ಅವುಗಳ ಆತ್ಮವು ಎಲ್ಲಿಗೆ ಹೋಗಬೇಕಿತ್ತೋ, ಅಲ್ಲಿಗೇ ಹೋದವು, ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ. \v 13 ಆ ಜೀವಿಗಳ ಮಧ್ಯೆ ಅದ್ಭುತ ಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು. ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು. \v 14 ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾಡುತ್ತಾ ಇದ್ದವು. \p \v 15 ಆಗ ನಾನು ಆ ಜೀವಿಗಳನ್ನು ನೋಡಲಾಗಿ, ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖವುಳ್ಳದ್ದಾಗಿರುವುದನ್ನು ನಾನು ನೋಡಿದೆನು. \v 16 ಆ ಚಕ್ರಗಳ ಆಕಾರವೂ, ಅವುಗಳ ಕೆಲಸವೂ ಪೀತರತ್ನದ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ಮಾದರಿಯಾಗಿದ್ದವು. ಅವುಗಳ ಆಕಾರವೂ, ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು. \v 17 ಅವು ಚಲಿಸುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು ಮತ್ತು ಅವು ಹೋಗುವಾಗ ತಿರುಗಲಿಲ್ಲ. \v 18 ಅವುಗಳ ಚಕ್ರಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು. ಆ ನಾಲ್ಕು ಚಕ್ರಗಳ ಸುತ್ತಲೂ ಅನೇಕ ಕಣ್ಣುಗಳಿದ್ದವು. \p \v 19 ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು. ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಏಳುವಾಗ, ಚಕ್ರಗಳು ಮೇಲಕ್ಕೆ ಏಳುತ್ತಿದ್ದವು. \v 20 ಆತ್ಮವು ಎಲ್ಲಿಗೆ ಹೋಗಬೇಕಿತ್ತೋ, ಅಲ್ಲಿಗೇ ಅವುಗಳು ಹೋದವು. ಚಕ್ರಗಳು ಸಹ ಅವುಗಳಿಗೆದುರಾಗಿ ಮೇಲಕ್ಕೆ ಏಳುತ್ತಿದ್ದವು. ಏಕೆಂದರೆ ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು. \v 21 ಆ ಜೀವಿಗಳು ಮುಂದುವರಿಯುವಾಗ, ಚಕ್ರಗಳೂ ಮುಂದುವರಿಯುತ್ತಿದ್ದವು. ಅವು ನಿಂತು ಹೋಗುವಾಗ, ಇವೂ ನಿಂತು ಹೋಗುತ್ತಿದ್ದವು. ಅವು ನೆಲದಿಂದ ಮೇಲಕ್ಕೆ ಏಳುವಾಗ, ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಏಕೆಂದರೆ ಆ ಜೀವಿಗಳ ಆತ್ಮ ಚಕ್ರಗಳಲ್ಲಿಯೂ ಇತ್ತು. \p \v 22 ಜೀವಿಯ ತಲೆಗಳ ಮೇಲೆ ಗಗನ ಮಂಡಲ ವಿಶಾಲ ರೂಪವು ವಜ್ರದಂತಿತ್ತು. ಮತ್ತು ಅದು ಅದ್ಭುತವಾಗಿತ್ತು. \v 23 ಆ ಗಗನ ಮಂಡಲದ ಕೆಳಗೆ ಆ ಜೀವಿಗಳ ರೆಕ್ಕೆಗಳು ಒಂದರ ಕಡೆಗೆ ಒಂದರಂತೆ ಚಾಚಿದವು. ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು. \v 24 ಅವು ಚಲಿಸುವಾಗ, ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು. ಅದು ಜಲಪ್ರವಾಹದ ಶಬ್ದದಂತೆಯೂ, ಸರ್ವಶಕ್ತರ ಧ್ವನಿಯ ಹಾಗೆಯೂ, ಸೈನ್ಯದ ಶಬ್ದದ ಹಾಗೆಯೂ ಇತ್ತು. ಅವು ನಿಲ್ಲುವಾಗ ಅವುಗಳ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು. \p \v 25 ಅವುಗಳು ನಿಂತು, ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ, ಅವುಗಳ ತಲೆಗಳ ಮೇಲಿರುವ ಗಗನ ಮಂಡಲದೊಳಗಿಂದ ಒಂದು ಶಬ್ದವಾಯಿತು. \v 26 ಅವುಗಳ ತಲೆಗಳ ಮೇಲಿರುವ ಗಗನ ಮಂಡಲದ ಮೇಲ್ಭಾಗದಲ್ಲಿ ನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು. \v 27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಲೋಹವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆನು. \v 28 ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. \p ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು. \c 2 \s1 ಪ್ರವಾದಿಯಾಗಲು ಯೆಹೆಜ್ಕೇಲನಿಗೆ ಕರೆ \p \v 1 ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.” \v 2 ಹೀಗೆ ಅವರು ನನ್ನ ಸಂಗಡ ಮಾತನಾಡುವಾಗ, ದೇವರಾತ್ಮರು ನನ್ನೊಳಗೆ ಪ್ರವೇಶಿಸಿ, ನನ್ನನ್ನು ನಿಂತುಕೊಳ್ಳುವಂತೆ ಮಾಡಿದರು. ಆಗ ಅವರು ನನ್ನೊಂದಿಗೆ ಮಾತನಾಡುವುದನ್ನು ಚೆನ್ನಾಗಿ ಕೇಳಿದೆನು. \p \v 3 ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ. \v 4 ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು. \v 5 ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು. \v 6 ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ. \v 7 ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು. \v 8 ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು. \p \v 9 ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು. ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು. \v 10 ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು. \c 3 \p \v 1 ಇದಾದ ಮೇಲೆ ದೇವರು ನನಗೆ, “ಮನುಷ್ಯಪುತ್ರನೇ, ನಿನಗೆ ಸಿಕ್ಕಿದ್ದ ಈ ಸುರುಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಜನರ ಸಂಗಡ ಮಾತನಾಡು,” ಎಂದರು. \v 2 ಆಗ ನಾನು ನನ್ನ ಬಾಯನ್ನು ತೆರೆದೆನು, ಅವರು ನನಗೆ ತಿನ್ನುವುದಕ್ಕೆ ಸುರುಳಿಯನ್ನು ಕೊಟ್ಟರು. \p \v 3 ಆಗ ಅವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು, ಹೊಟ್ಟೆಯನ್ನು ತುಂಬಿಸಿಕೋ,” ಎಂದರು. ಆಗ ನಾನು ಅದನ್ನು ತಿಂದೆನು. ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು. \p \v 4 ನನಗೆ ಅವರು, “ಮನುಷ್ಯಪುತ್ರನೇ, ಹೋಗು; ಇಸ್ರಾಯೇಲಿನ ಜನರ ಬಳಿಗೆ ಹೋಗಿ, ನನ್ನ ಮಾತುಗಳನ್ನು ಅವರಿಗೆ ಹೇಳು. \v 5 ನಿನ್ನನ್ನು ಅಸ್ಪಷ್ಟ ಭಾಷೆಯ ಮತ್ತು ಅನ್ಯಭಾಷೆಯ ಜನರ ಬಳಿಗೆ ಕಳುಹಿಸದೆ, ಇಸ್ರಾಯೇಲಿನ ಜನರ ಬಳಿಗೆ ಕಳುಹಿಸುತ್ತಿದ್ದೇನೆ. \v 6 ನಾನು ನಿನ್ನನ್ನು ಅಸ್ಪಷ್ಟ ಮಾತು ಮತ್ತು ಅನ್ಯಭಾಷೆ ಹೊಂದಿರುವ ಅನೇಕ ಜನರ ಬಳಿ ಕಳುಹಿಸುತ್ತಿಲ್ಲ. ಏಕೆಂದರೆ ಅವರ ಪದಗಳು ನಿಮಗೆ ಅರ್ಥವಾಗುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ, ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. \v 7 ಆದರೆ ಇಸ್ರಾಯೇಲಿನ ಜನರೋ ನಿನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಏಕೆಂದರೆ ಅವರು ನನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು. \v 8 ಆದರೆ ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ. ಅವರ ಹಟಮಾರಿತನಕ್ಕೆ ಪ್ರತಿಯಾಗಿ, ನಿನ್ನನ್ನು ಹಟವಾದಿಯನ್ನಾಗಿಸುವೆನು. \v 9 ನಾನು ನಿನ್ನ ಹಣೆಯನ್ನು ಅತ್ಯಂತ ಕಠಿಣವಾದ ಕಲ್ಲಿನಂತೆಯೂ ವಜ್ರದಂತೆಯೂ ಮಾಡುವೆನು. ಅವರು ತಿರುಗಿಬೀಳುವ ಜನರಾದರೂ ನೀನು ಅವರಿಗೆ ಭಯಪಡಬೇಡ ಅಥವಾ ಗಾಬರಿಯಾಗಬೇಡ,” ಎಂದರು. \p \v 10 ಇದಲ್ಲದೆ ಅವರು ನನಗೆ, “ಮನುಷ್ಯಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲ್ಲಾ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ. \v 11 ಸೆರೆಯಾಗಿರುವ ನಿನ್ನ ಜನರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರು ಕೇಳಿದರೂ ಕೇಳದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಅವರಿಗೆ ಹೇಳು,” ಎಂದನು. \p \v 12 ಆಮೇಲೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ಮಹಿಮೆಯಿಂದ ಕೂಡಿದ ಯೆಹೋವ ದೇವರ ಮಹಿಮೆಯು ಅವರ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು. \v 13 ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದವನ್ನೂ, ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ, ಮಹಾ ಘೋಷದ ಶಬ್ದವು ನುಗ್ಗಿ ಬರುತ್ತಿರುವುದನ್ನೂ ಕೇಳಿದೆನು. \v 14 ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು. \v 15 ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೆಲ್ ಅಬೀಬಿನ ಸೆರೆಯವರ ಬಳಿಗೆ ಬಂದೆನು. ನಾನು ಬಹು ದುಃಖಿತನಾಗಿ ಅವರು ಕುಳಿತಿದ್ದ ಕಡೆಗೆ ನಾನು ಏಳು ದಿನಗಳ ಕಾಲ ಅವರ ಜೊತೆಗೆ ಕುಳಿತುಕೊಂಡೆನು. \s1 ಕಾವಲುಗಾರನಾಗಿ ಯೆಹೆಜ್ಕೇಲನ ಕಾರ್ಯ \p \v 16 ಏಳು ದಿವಸಗಳಾದ ಮೇಲೆ ಯೆಹೋವ ದೇವರ ವಾಕ್ಯವು ನನಗೆ ಬಂದು, \v 17 “ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು. \v 18 ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸದೆ, ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ನೀನು ಅವನಿಗೆ ಬುದ್ಧಿಹೇಳದೆ ಹೋದರೆ, ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು. \v 19 ಆದರೆ ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ, ದುರ್ಮಾರ್ಗವನ್ನೂ ಬಿಟ್ಟು ತಿರುಗಿಕೊಳ್ಳದೆ ಹೋದರೆ, ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. \p \v 20 “ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ. \v 21 ಆದರೂ ನೀತಿವಂತನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ, ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.” \p \v 22 ಆಗ ಅಲ್ಲಿ ಯೆಹೋವ ದೇವರ ಹಸ್ತವು ನನ್ನ ಮೇಲಿತ್ತು. ನನಗೆ ಅವರು ಹೇಳಿದ್ದೇನೆಂದರೆ, “ಎದ್ದೇಳು, ಬಯಲು ಸೀಮೆಗೆ ಹೋಗು ಮತ್ತು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು.” \v 23 ಆಮೇಲೆ ನಾನು ಎದ್ದು ಬಯಲುಸೀಮೆಯ ಕಡೆಗೆ ಹೋದೆನು. ಯೆಹೋವ ದೇವರ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ನಾನು ಅಡ್ಡ ಬಿದ್ದೆನು. \p \v 24 ಆಮೇಲೆ ದೇವರಾತ್ಮ ನನ್ನೊಳಗೆ ಪ್ರವೇಶಿಸಿ, ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತನಾಡಿ, ನನಗೆ ಹೇಳಿದ್ದೇನೆಂದರೆ, “ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ. \v 25 ಮನುಷ್ಯಪುತ್ರನೇ, ಇಗೋ, ಅವರು ನಿನ್ನನ್ನು ಹಗ್ಗಗಳಿಂದ ಕಟ್ಟುವರು. ನೀನು ಅವರಿಂದ ಹೊರಗೆ ಹೋಗಲು ಆಗುವುದಿಲ್ಲ. \v 26 ಇದಲ್ಲದೆ ನಾನು ನಿನ್ನ ನಾಲಿಗೆ ಸೇದಿ ಹೋಗುವಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವವನಾಗಲಾರೆ. ಅವರು ತಿರುಗಿಬೀಳುವ ಜನರಾಗಿದ್ದಾರೆ. \v 27 ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆಯುವೆನು. ಆಗ ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ.’ ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಏಕೆಂದರೆ ಅವರು ತಿರುಗಿಬೀಳುವ ಜನರಾಗಿದ್ದಾರೆಂದು ಹೇಳಬೇಕು. \c 4 \s1 ಯೆರೂಸಲೇಮಿನ ಮುತ್ತಿಗೆಯ ಸೂಚನೆಗಳು \p \v 1 “ಮನುಷ್ಯಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು, ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ. \v 2 ಆ ನಕ್ಷೆಯ ಸುತ್ತಲು ದಿಬ್ಬ ಹಾಕಿ, ಒಡ್ಡು ಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತಿಗೆ ಹಾಕು. \v 3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ. \p \v 4 “ನೀನು ನಿನ್ನ ಎಡಗಡೆಯಲ್ಲಿ ಮಲಗಿ, ಇಸ್ರಾಯೇಲಿನ ಜನರ ಅಕ್ರಮಗಳನ್ನು ನಿಮ್ಮ ಮೇಲಿಡಬೇಕು. ನೀನು ಎಡಗಡೆಯಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ನಿಮ್ಮ ಮೇಲೆ ಹೊತ್ತುಕೊಂಡಿರಬೇಕು. \v 5 ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರ ತೊಂಬತ್ತು ದಿವಸಗಳಾಗಿವೆ. ಹೀಗೆ ನೀನು ಇಸ್ರಾಯೇಲಿನ ಜನರ ಅಕ್ರಮಗಳನ್ನು ಹೊರಬೇಕು. \p \v 6 “ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಗಡೆಯಲ್ಲಿ ಮಲಗಿ, ಯೆಹೂದ ಜನರ ಅಕ್ರಮವನ್ನು ನಲವತ್ತು ದಿವಸ ಹೊರಬೇಕು. ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ. \v 7 ನೀನು ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು. ನಿನ್ನ ಭುಜವನ್ನು ನೀನು ಬರಿದುಮಾಡಿಕೊಂಡು, ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು. \v 8 ನಾನು ನಿನ್ನ ಮೇಲೆ ಹಗ್ಗಗಳನ್ನು ಇಡುತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿಯುವವರೆಗೂ, ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು. \p \v 9 “ನೀನು ಗೋಧಿ, ಜವೆಗೋಧಿ, ಅವರೆ, ಅಲಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು, ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು, ನೀನು ಒಂದು ಕಡೆಯಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು, ಮುನ್ನೂರ ತೊಂಬತ್ತು ದಿನಗಳು ಅವರಿಂದಲೇ ತಿನ್ನಬೇಕು. \v 10 ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ 230 ಗ್ರಾಂ ಇರಲಿ, ನೀನು ಅದನ್ನು ಆಗಾಗ್ಗೆ ತಿನ್ನಬೇಕು. \v 11 ನೀನು ನೀರನ್ನು ಸಹ ಅಳತೆಯ ಪ್ರಕಾರ ಸುಮಾರು ಅರ್ಧ ಲೀಟರ್ ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು. \v 12 ಇದಲ್ಲದೆ ನೀನು ಆಹಾರವನ್ನು ಜವೆಗೋಧಿಯ ರೊಟ್ಟಿಗಳಂತೆ ತಿನ್ನಬೇಕು. ಅದನ್ನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉರಿಸಿ ಅವರ ಕಣ್ಣುಗಳ ಮುಂದೆ ಅಡಿಗೆ ಮಾಡಬೇಕು.” \v 13 ಯೆಹೋವ ದೇವರು ಹೇಳಿದ್ದೇನೆಂದರೆ, “ಈ ರೀತಿಯಾಗಿ ಇಸ್ರಾಯೇಲಿನ ಜನರು ನಾನು ಅವರನ್ನು ಓಡಿಸುವ ಜನಾಂಗಗಳ ನಡುವೆ ಅಶುದ್ಧ ಆಹಾರವನ್ನು ತಿನ್ನುವರು.” \p \v 14 ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ. \p \v 15 ಆಗ ಅವರು ನನಗೆ, “ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ಬಳಸಲು ನಿನಗೆ ಅನುಮತಿಸಿದ್ದೇನೆ. ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು,” ಎಂದನು. \p \v 16 ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು. \v 17 ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಸ್ತಬ್ಧರಾಗಿ, ಒಬ್ಬರ ಸಂಗಡ ಒಬ್ಬರು ತಮ್ಮ ಪಾಪಗಳಿಗಾಗಿ ಕ್ಷಯಿಸಿ ಹೋಗುವರು. \c 5 \s1 ದೇವರ ಕ್ಷೌರಿಕನ ಕತ್ತಿಯ ತೀರ್ಪಿನ \p \v 1 “ಮನುಷ್ಯಪುತ್ರನೇ, ನೀನು ಹರಿತವಾದ ಖಡ್ಗವನ್ನು ತೆಗೆದುಕೊಂಡು ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ, ಅದರಿಂದ ನಿನ್ನ ತಲೆಯನ್ನೂ ನಿನ್ನ ಗಡ್ಡವನ್ನೂ ಬೋಳಿಸಿಬಿಟ್ಟು, ಆಮೇಲೆ ಅದನ್ನು ತೂಕ ಮಾಡುವುದಕ್ಕೆ ತಕ್ಕಡಿಯನ್ನು ತೆಗೆದುಕೋ. ಆ ಕೂದಲನ್ನು ಭಾಗ ಮಾಡು. \v 2 ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು. \v 3 ನೀನು ಅವುಗಳೊಳಗಿಂದ ಕೆಲವು ಕೂದಲನ್ನು ಲೆಕ್ಕದಲ್ಲಿ ತೆಗೆದು, ನಿನ್ನ ಸೆರಗುಗಳಲ್ಲಿ ಕಟ್ಟು,” ಎಂದನು. \v 4 ಆಮೇಲೆ ಅವುಗಳೊಳಗಿಂದ ಕೆಲವನ್ನು ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ, ಅವುಗಳನ್ನು ಬೆಂಕಿಯಿಂದ ಸುಡು. ಏಕೆಂದರೆ ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರಿಗೂ ಹೋಗುವುದು. \p \v 5 “ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ಇದು ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ನಡುವೆ ಇಟ್ಟಿದ್ದೇನೆ. \v 6 ಆಕೆಯು ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ, ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತನಕ್ಕೆ ತಿರುಗಿಸಿಬಿಟ್ಟಳು. ಅವರು ನನ್ನ ನ್ಯಾಯಗಳನ್ನೂ ಅನುಸರಿಸದೆ ನನ್ನ ನಿಯಮಗಳನ್ನೂ ನಿರಾಕರಿಸಿದ್ದಾರೆ. \p \v 7 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದುದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ, ನನ್ನ ನ್ಯಾಯಗಳನ್ನು ಪಾಲಿಸದೇ ಇದ್ದುದರಿಂದಲೂ, ನಿಮ್ಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ, \p \v 8 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು. \v 9 ನಾನು ಮಾಡದೆ ಇದ್ದದ್ದನ್ನೂ, ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿಮ್ಮ ಅಸಹ್ಯಗಳ ನಿಮಿತ್ತವಾಗಿ ನಿಮ್ಮಲ್ಲಿ ಮಾಡುತ್ತೇನೆ. \v 10 ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು. \v 11 ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ. \v 12 ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು. \p \v 13 “ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು. \p \v 14 “ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳು ಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು. \v 15 ಹೀಗೆ ನಾನು ಕೋಪದಿಂದಲೂ, ರೋಷದಿಂದಲೂ, ಉಗ್ರಖಂಡನೆಯಿಂದಲೂ ನಿಮ್ಮಲ್ಲಿ ನ್ಯಾಯತೀರ್ಪುಗಳನ್ನು ನಡೆಸುವಾಗ, ನಿಮ್ಮ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ, ದೂಷಣೆಯೂ, ಶಿಕ್ಷೆಯೂ, ಭಯವೂ ಆಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. \v 16 ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು. ನಿನ್ನ ಮೇಲೆ ಭಯಂಕರವಾದ ಕ್ಷಾಮವನ್ನು ಬರಮಾಡಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು. \v 17 ನಾನು ಕಳುಹಿಸುವ ಕ್ಷಾಮದಿಂದ ದುಷ್ಟಮೃಗಗಳಿಂದ ನಿನಗೆ ಪುತ್ರ ಶೋಕ ಪ್ರಾಪ್ತಿಯಾಗುವುದು. ವ್ಯಾಧಿಯೂ, ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು, ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು. ಇದು ಯೆಹೋವ ದೇವರಾದ ನನ್ನ ನುಡಿ.” \c 6 \s1 ಇಸ್ರಾಯೇಲಿನ ಪರ್ವತಗಳಿಗೆ ವಿನಾಶ \p \v 1 ಯೆಹೋವ ದೇವರು ಈ ವಾಕ್ಯವು ನನಗೆ ಬಂದಿತು: \v 2 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು, ಅವುಗಳಿಗೆ ವಿರೋಧವಾಗಿ ಹೀಗೆ ಪ್ರವಾದಿಸು, \v 3 ‘ಇಸ್ರಾಯೇಲಿನ ಪರ್ವತಗಳೇ, ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಹೌದು, ಸಾರ್ವಭೌಮ ಯೆಹೋವ ದೇವರು ಪರ್ವತಗಳಿಗೂ ಗುಡ್ಡಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳುತ್ತಾರೆ, ನಾನೇ ನಿಮ್ಮ ಮೇಲೆ ಖಡ್ಗವನ್ನು ಹಿಡಿದು, ನಿಮ್ಮ ಪೂಜಾಸ್ಥಳಗಳನ್ನು ನಾಶಮಾಡುತ್ತೇನೆ. \v 4 ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಧೂಪವೇದಿಗಳು ಚೂರುಚೂರಾಗುವುವು. ನಿಮ್ಮ ಜನರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು. \v 5 ಇಸ್ರಾಯೇಲರ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಬಲಿಪೀಠಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿ ಬಿಡುವೆನು. \v 6 ನೀವು ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳಾಗುವುವು. ಪೂಜಾ ಸ್ಥಳಗಳೂ ನಾಶವಾಗುವುವು. ಹೀಗೆ ನಿಮ್ಮ ಬಲಿಪೀಠಗಳು ಸಹ ನಾಶವಾಗಿ, ನಿಮ್ಮ ವಿಗ್ರಹಗಳು ಒಡೆದುಹೋಗಿ ಇಲ್ಲದಂತಾಗುವುವು. ನೀವು ರೂಪಿಸಿದ ಎಲ್ಲವೂ ಕಡಿದು ಬಿದ್ದು ಅಳಿದುಹೋಗುವುವು. \v 7 ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ. \p \v 8 “ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ. \v 9 ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು. \v 10 ನಾನೇ ಯೆಹೋವ ದೇವರೆಂದೂ, ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ, ನಾನು ವ್ಯರ್ಥವಾಗಿ ಹೇಳುವುದಿಲ್ಲವೆಂದೂ ತಿಳಿದುಕೊಳ್ಳುವರು. \p \v 11 “ ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, “ಆಹಾ!” ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು. \v 12 ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು. ಹತ್ತಿರದಲ್ಲಿರುವವನು ಖಡ್ಗದಿಂದ ಬೀಳುವನು. ಉಳಿದ ಮುತ್ತಿಗೆಯಲ್ಲಿರುವವನು ಕ್ಷಾಮದಿಂದ ಸಾಯುವನು. ಹೀಗೆ ನಾನು ಅವರ ಮೇಲೆ ನನ್ನ ರೋಷವನ್ನು ತೀರಿಸಿಕೊಳ್ಳುವೆನು. \v 13 ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ. \v 14 ನಾನು ಅವರ ವಿರುದ್ಧ ಕೈಯೆತ್ತಿ, ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು, ನಾನೇ ಯೆಹೋವ ದೇವರು, ಎಂದು ಅವರಿಗೆ ತಿಳಿಯುವುದು.’ ” \c 7 \s1 ಅಂತ್ಯ ಬಂದಿದೆ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 2 “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: \q1 “ ‘ಅಂತ್ಯವು ಬಂದಿದೆ! \q2 ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ! \q1 \v 3 ಈಗಲೇ ನಿನಗೆ ಅಂತ್ಯವು ಬಂದಿದೆ. \q2 ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. \q1 ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. \q2 ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು. \q1 \v 4 ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. \q2 ನಾನು ನಿನ್ನನ್ನು ಬಿಡುವುದೂ ಇಲ್ಲ. \q1 ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. \q2 ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. \m ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’ \b \p \v 5 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ಕೇಡು! ಎಂದೂ ಕೇಳದ ಕೇಡು, \q2 ಇಗೋ ಬಂದಿತು. \q1 \v 6 ಅಂತ್ಯವು ಬಂದಿತು, \q2 ಅಂತ್ಯವು ಬಂದುಬಿಟ್ಟಿತು, \q1 ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, \q2 ಇಗೋ ಬಂದೇ ಬಂತು. \q1 \v 7 ಓ ದೇಶ ನಿವಾಸಿಯೇ, \q2 ನಿನಗಾಗಿ ವಿನಾಶದ ದಿನ ಬಂದಿತು, \q1 ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. \q2 ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ. \q1 \v 8 ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. \q2 ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. \q1 ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. \q2 ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು. \q1 \v 9 ನಾನು ಕಟಾಕ್ಷಿಸುವುದೂ ಇಲ್ಲ, \q2 ನಿನ್ನನ್ನು ಕನಿಕರಿಸುವುದೂ ಇಲ್ಲ. \q1 ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ \q2 ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. \m ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು. \q1 \v 10 “ ‘ಇಗೋ ಆ ದಿನವು ಬಂತು, \q1 ನೋಡು ವಿನಾಶದ ದಿನ ಹೊರಟುಹೋಯಿತು, \q2 ಕೋಲು ಚಿಗುರಿತು, \q2 ಅಹಂಕಾರವು ಅರಳಿತು, \q1 \v 11 ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. \q2 ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, \q2 ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, \q2 ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ. \q1 \v 12 ಸಮಯವು ಬಂತು, \q2 ದಿನವು ಬಂದೇಬಿಟ್ಟಿತು. \q1 ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, \q2 ಮಾರುವವನು ದುಃಖಿಸದಿರಲಿ. \q2 ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ. \q1 \v 13 ಮಾರಿದವನು ಎಷ್ಟು ವರ್ಷ ಬದುಕಿದರೂ, \q2 ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು. \q1 ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, \q2 ಎಂದಿಗೂ ತಿರುಗದು, \q1 ಯಾರೂ ತಮ್ಮ ಪಾಪಗಳಿಂದ \q2 ತಮ್ಮ ಜೀವವನ್ನು ಉಳಿಸಿಕೊಳ್ಳರು. \b \q1 \v 14 “ ‘ಅವರು ಕಹಳೆಯನ್ನೂದಿ \q2 ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ. \q1 ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ. \q2 ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ. \q1 \v 15 ಹೊರಗೆ ಖಡ್ಗವೂ \q2 ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. \q1 ಹೊರಗಿರುವವರನ್ನು ಖಡ್ಗವು ಸಾಯಿಸುವುದು, \q2 ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು. \q1 \v 16 ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. \q2 ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ \q2 ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, \q1 ಪರ್ವತಗಳ ಮೇಲೆ ಇರುವರು. \q1 \v 17 ಕೈಗಳೆಲ್ಲಾ ಜೋತಾಡುವುವು, \q2 ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ಆಗುವುವು. \q1 \v 18 ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು \q2 ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. \q1 ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, \q2 ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು. \b \q1 \v 19 “ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, \q2 ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. \q1 ಅವರ ಬೆಳ್ಳಿ ಬಂಗಾರಗಳು \q2 ಯೆಹೋವ ದೇವರ ಕೋಪದ ದಿವಸದಲ್ಲಿ \q2 ಅವರನ್ನು ಪಾರು ಮಾಡಲಾರವು. \q1 ಇದರಿಂದ ಅವರ ಹಸಿವು ನೀಗುವುದಿಲ್ಲ, \q2 ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. \q2 ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು. \q1 \v 20 ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. \q2 ಇದಲ್ಲದೆ ಹೇಯವೂ ಅಸಹ್ಯವೂ ಆದ \q1 ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. \q2 ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ \q1 \v 21 ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ, \q2 ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು. \q2 ಅವರು ಅದನ್ನು ಅಪವಿತ್ರಪಡಿಸುವರು. \q1 \v 22 ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು. \q2 ನನ್ನ ಅತ್ಯಂತ ಅಮೂಲ್ಯ ಸ್ಥಳವನ್ನು ಅಪವಿತ್ರಪಡಿಸುವರು. \q1 ದರೋಡೆಕೋರರು ಅದರಲ್ಲಿ ಸೇರಿ \q2 ಅದನ್ನು ಅಪವಿತ್ರಪಡಿಸುವರು. \b \q1 \v 23 “ ‘ಸರಪಳಿಯನ್ನು ತಯಾರುಮಾಡು. \q2 ದೇಶವು ರಕ್ತಾಪರಾಧದಿಂದ ತುಂಬಿದೆ \q2 ಮತ್ತು ನಗರವು ಹಿಂಸೆಯಿಂದ ತುಂಬಿದೆ. \q1 \v 24 ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ \q2 ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. \q1 ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. \q2 ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು. \q1 \v 25 ನಾಶವು ಬರುತ್ತದೆ. \q2 ಅವರು ಸಮಾಧಾನವನ್ನು ಹುಡುಕುತ್ತಾರೆ, ಆದರೆ ಅದು ಇರುವುದಿಲ್ಲ. \q1 \v 26 ಕೇಡಿನ ಮೇಲೆ ಕೇಡು ಬರುವುದು, \q2 ಸುದ್ದಿಯ ಮೇಲೆ ಸುದ್ದಿ ಬರುವುದು, \q1 ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. \q2 ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, \q2 ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು. \q1 \v 27 ಅರಸನು ದುಃಖಿಸುವನು, \q2 ರಾಜಕುಮಾರನಿಗೆ ನಿರಾಶೆಯು ಅವನ ಉಡುಪಾಗಿರುತ್ತದೆ. \q2 ದೇಶದ ಜನರ ಕೈಗಳು ತತ್ತರಿಸುವುವು, \q1 ಅವರ ದುರ್ನಡತೆಗೆ ತಕ್ಕ ಪ್ರತೀಕಾರ ಮಾಡುವೆನು. \q2 ಅವರ ದುಷ್ಕರ್ಮಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. \b \m “ ‘ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ” \c 8 \s1 ದೇವಾಲಯದಲ್ಲಿ ವಿಗ್ರಹಾರಾಧನೆ \p \v 1 ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು. \v 2 ಇಗೋ, ನಾನು ನೋಡುತ್ತಿದ್ದಂತೆ ಬೆಂಕಿ ಉರಿಯುತ್ತದೋ ಎಂಬಂತೆ ಮನುಷ್ಯಾಕೃತಿಯೊಂದು ಕಾಣಿಸಿತು. ಸೊಂಟದ ಕೆಳಗಿನ ರೂಪವು ಬೆಂಕಿಯಂತಿತ್ತು ಮತ್ತು ಅವನ ಸೊಂಟದ ಮೇಲಿನ ಭಾಗವು ಹೊಳೆಯುವ ಲೋಹದಂತೆ ಪ್ರಕಾಶಮಾನವಾಗಿತ್ತು. \v 3 ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು. \v 4 ಇಸ್ರಾಯೇಲಿನ ದೇವರ ಮಹಿಮೆಯು, ನಾನು ಆ ಬಯಲುಸೀಮೆಯಲ್ಲಿ ನೋಡಿದ ಆಕಾರದ ಪ್ರಕಾರವೇ ಅಲ್ಲಿ ಇತ್ತು. \p \v 5 ಆಗ ಅವರು ನನಗೆ, “ಮನುಷ್ಯಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದ ಪ್ರವೇಶದ್ವಾರದ ಮುಂದೆ ನಿಂತಿತ್ತು. \p \v 6 ಅವರು ನನಗೆ, “ಮನುಷ್ಯಪುತ್ರನೇ, ಅವರು ಮಾಡುತ್ತಿರುವುದನ್ನು ನೋಡುತ್ತಿರುವೆಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವಹಾಗೆ, ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯಗಳನ್ನು ನೋಡುತ್ತಿರುವೆಯಾ? ಆದರೆ ನೀನು ಇನ್ನೂ ಹೆಚ್ಚಿನ ಅಸಹ್ಯಗಳನ್ನು ನೋಡುವೆ,” ಎಂದನು. \p \v 7 ಆಗ ಅವನು ನನ್ನನ್ನು ಅಂಗಳದ ಬಾಗಿಲಿಗೆ ತಂದನು ಮತ್ತು ನಾನು ನೋಡುವಾಗ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು. \v 8 ಆಮೇಲೆ ಆತನು ನನಗೆ, “ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ,” ಎಂದು ಹೇಳಿದನು. ನಾನು ಗೋಡೆಯನ್ನು ಕೊರೆದಾಗ ಒಂದು ಬಾಗಿಲನ್ನು ಕಂಡೆನು. \p \v 9 ಆಗ ಆತನು ನನಗೆ, “ನೀನು ಒಳಗೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದನು. ನಾನು ಒಳಗೆ ಹೋಗಿ ನೋಡಿದೆನು. \v 10 ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ, ಇಸ್ರಾಯೇಲರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು. \v 11 ಇಸ್ರಾಯೇಲಿನ ಮನೆತನದವರಲ್ಲಿ ಎಪ್ಪತ್ತು ಮಂದಿ ಹಿರಿಯರೂ, ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿದ್ದರು. ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾರತಿ ಇತ್ತು. ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು. \p \v 12 ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು. \v 13 ಇದಲ್ಲದೆ ಅವರು, “ಮತ್ತೊಂದು ಸಾರಿ ತಿರುಗಿಕೋ. ಅವರು ಮಾಡುವ ಇನ್ನೂ ಮಹಾ ಅಸಹ್ಯ ಕಾರ್ಯಗಳನ್ನು ನೋಡುವೆ,” ಎಂದರು. \p \v 14 ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಉತ್ತರದ ಕಡೆಗೆ ಎದುರಾಗಿದ್ದ ಬಾಗಿಲಿನ ಕಡೆಗೆ ತಂದನು. ಅಲ್ಲಿ ತಮ್ಮೂಜ್ ದೇವತೆಗೋಸ್ಕರ ಅಳುವ ಹೆಂಗಸರು ಕೂತಿದ್ದರು. \v 15 ಆಮೇಲೆ ಅವನು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಮತ್ತೊಂದು ಸಾರಿ ತಿರುಗಿಕೋ. ಇವುಗಳಿಂದ ಇನ್ನೂ ಅಸಹ್ಯವಾದವುಗಳನ್ನು ಕಾಣುವೆ,” ಎಂದು ಹೇಳಿದನು. \p \v 16 ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು. \p \v 17 ಆಗ ಅವರು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದ ಮನೆತನದವರಿಗಲ್ಲವೇ? ಏಕೆಂದರೆ ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರಲ್ಲವೇ? ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟುಕೊಳ್ಳುತ್ತಾರೆ. \v 18 ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು. \c 9 \s1 ವಿಗ್ರಹಾರಾಧಕರ ಮೇಲೆ ತೀರ್ಪು \p \v 1 ಆಗ ಅವರು ದೊಡ್ಡ ಧ್ವನಿಯಿಂದ, “ನಗರದ ಜನರಿಗೆ ನ್ಯಾಯತೀರಿಸಲು ನೇಮಕವಾಗಿರುವವರೇ, ನಿಮ್ಮ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ,” ಎಂದು ಹೇಳುವುದನ್ನು ನಾನು ಕೇಳಿದೆನು. \v 2 ಕೂಡಲೇ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು. ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು. \p \v 3 ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ, ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು. ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಯೆಹೋವ ದೇವರು ಕೂಗಿ ಅವನಿಗೆ, \v 4 “ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು. \p \v 5 ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ, ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ, \v 6 ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು. \p \v 7 ದೇವರು ಅವರಿಗೆ, “ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿರಿ, ಹೊರಡಿರಿ,” ಎಂದು ಹೇಳಿದರು. ಆಗ ಅವರು ಹೊರಟು ನಗರದಲ್ಲಿದ್ದವರನ್ನು ಕೊಂದರು. \v 8 ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನೀವು ಯೆರೂಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿರಾ?” ಎಂದೆನು. \p \v 9 ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ. \v 10 ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು. \p \v 11 ನಾರುಮಡಿಯನ್ನು ಧರಿಸಿಕೊಂಡು ದೌತಿಯನ್ನು ತನ್ನ ನಡುವಿಗೆ ಕಟ್ಟಿಕೊಂಡಂಥ ಆ ಮನುಷ್ಯನು, “ವರ್ತಮಾನವನ್ನು ತಂದು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ,” ಎಂದನು. \c 10 \s1 ದೇವರ ಮಹಿಮೆ ದೇವಾಲಯವನ್ನು ಬಿಟ್ಟುಹೋದದ್ದು \p \v 1 ಆಗ ನಾನು ನೋಡಲಾಗಿ, ಕೆರೂಬಿಗಳ ತಲೆಯ ಮೇಲಿದ್ದ ಆಕಾಶಮಂಡಲದಲ್ಲಿ ನೀಲಮಣಿಯಂತೆ ಸಿಂಹಾಸನದ ಆಕಾರದಂತಿರುವ ರೂಪವನ್ನು ಕಂಡೆನು. ಅದು ಅವುಗಳ ಮೇಲೆ ಕಾಣಿಸಿತು. \v 2 ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು. \p \v 3 ಆ ಮನುಷ್ಯನು ಒಳಗೆ ಹೋದಾಗ ಕೆರೂಬಿಗಳು ಆಲಯದ ದಕ್ಷಿಣ ಭಾಗದ ಬಳಿಯಲ್ಲಿ ನಿಂತಿದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿಕೊಂಡಿತ್ತು. \v 4 ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು. \v 5 ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತ ದೇವರು ಮಾತನಾಡುವ ಹಾಗೆ ಹೊರಗಣ ಅಂಗಳದವರೆಗೂ ಕೇಳಿಬಂತು. \p \v 6 ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ, “ಚಕ್ರಗಳ ಮಧ್ಯದಿಂದಲೂ, ಕೆರೂಬಿಯರ ಮಧ್ಯದಿಂದಲೂ ಬೆಂಕಿಯನ್ನು ತೆಗೆದುಕೊಳ್ಳಲು,” ಆಜ್ಞಾಪಿಸಿದನು. ಮನುಷ್ಯನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. \v 7 ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಬೆಂಕಿಗೆ ಚಾಚಿ, ಸ್ವಲ್ಪ ತೆಗೆದುಕೊಂಡು ನಾರುಮಡಿಯನ್ನು ಧರಿಸಿಕೊಂಡಿದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು. \v 8 ಕೆರೂಬಿಯರಲ್ಲಿ ಅವರ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು. \p \v 9 ನಾನು ನೋಡಿದಾಗ, ಇಗೋ ಒಬ್ಬೊಬ್ಬ ಕೆರೂಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು. ಆ ಚಕ್ರಗಳ ವರ್ಣವು ಹೊಳೆಯುವ ಪೀತರತ್ನದ ಹಾಗಿತ್ತು. \v 10 ಆ ನಾಲ್ಕಕ್ಕೂ ಒಂದೇ ರೂಪವಿತ್ತು. ಚಕ್ರದೊಳಗೆ ಇನ್ನೊಂದು ಚಕ್ರವು ರಚಿಸಿದ್ದ ಹಾಗೆ ಇದ್ದವು. \v 11 ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು. ಕೆರೂಬಿಗಳು ಹೋದಂತೆ ಚಕ್ರಗಳು ತಿರುಗಲಿಲ್ಲ. ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ. \v 12 ಅವುಗಳ ದೇಹ, ಬೆನ್ನು, ಕೈ, ರೆಕ್ಕೆ ಮತ್ತು ಚಕ್ರಗಳು ಇವೆಲ್ಲವುಗಳ ಸುತ್ತಲೂ ಕಣ್ಣುಗಳಿಂದ ತುಂಬಿದ್ದವು, ಮತ್ತು ಅವನ ಎಲ್ಲಾ ನಾಲ್ಕು ಚಕ್ರಗಳು ಕಣ್ಣುಗಳಿಂದ ತುಂಬಿದ್ದವು. \v 13 ಆ ಚಕ್ರಗಳನ್ನು, “ತಿರುಗುವ ಚಕ್ರಗಳು” ಎಂದು ಕರೆಯುತ್ತಾರೆ ಎಂದು ನಾನು ಕೇಳಿದೆ. \v 14 ಒಬ್ಬೊಬ್ಬ ಕೆರೂಬಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯ ಮುಖವು ಮನುಷ್ಯನ ಮುಖ, ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು. \p \v 15 ಆಗ ಕೆರೂಬಿಯರು ಮೇಲಕ್ಕೆತ್ತಲಾದರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಗಳು ಇವೇ. \v 16 ಕೆರೂಬಿಯರು ಚಲಿಸಿದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ. \v 17 ಜೀವಿಗಳ ಆತ್ಮ ಆ ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತು ಹೋದಾಗ ಇವೂ ನಿಂತುಹೋದವು. ಅವು ಏರಿದಾಗ, ಇವೂ ಅವುಗಳ ಜೊತೆಯಲ್ಲೇ ಏರಿದವು. \p \v 18 ಆಗ ಯೆಹೋವ ದೇವರ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು. \v 19 ನಾನು ನೋಡುವಾಗಲೇ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿಕೊಂಡು, ಭೂಮಿಯನ್ನು ಬಿಟ್ಟು ಮೇಲಕ್ಕೇರಿ ಹೋದರು. ಅವು ಹೊರಟಾಗ, ಚಕ್ರಗಳೂ ಅದರ ಸಂಗಡ ಇದ್ದವು. ಅವರು ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಇಸ್ರಾಯೇಲಿನ ದೇವರ ಮಹಿಮೆಯು ಅವರ ಮೇಲೆ ಇತ್ತು. \p \v 20 ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ. ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು. \v 21 ಪ್ರತಿಯೊಬ್ಬನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು. ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು. \v 22 ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು. \c 11 \s1 ಇಸ್ರಾಯೇಲ್ ಮೇಲೆ ದೇವರ ಖಚಿತ ತೀರ್ಪು \p \v 1 ಆಮೇಲೆ ದೇವರಾತ್ಮರು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿಗೆ, ನನ್ನನ್ನು ಎತ್ತಿಕೊಂಡು ಹೋದರು. ಪ್ರವೇಶದ್ವಾರದಲ್ಲಿ ಇಪ್ಪತ್ತೈದು ಮಂದಿ ಮನುಷ್ಯರು ಇದ್ದರು. ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗ ಯಾಜನ್ಯನನ್ನೂ, ಬೆನಾಯನ ಮಗ ಪೆಲಟೀಯನನ್ನೂ ನೋಡಿದೆನು. \v 2 ಆಮೇಲೆ ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ, ದುರಾಲೋಚನೆಗಳನ್ನು ಹೇಳಿಕೊಡುವವರು ಈ ಜನರೇ. \v 3 ಅವರು, ‘ಇತ್ತೀಚಿಗೆ ನಮ್ಮ ಮನೆಗಳು ನಿರ್ಮಾಣವಾಗಿಲ್ಲವೇ? ಈ ಪಟ್ಟಣವು ಪಾತ್ರೆ, ಮತ್ತು ನಾವು ಅದರಲ್ಲಿರುವ ಮಾಂಸ,’ ಎನ್ನುತ್ತಾರೆ. \v 4 ಆದ್ದರಿಂದ ಮನುಷ್ಯಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.” \p \v 5 ಯೆಹೋವ ದೇವರ ಆತ್ಮವು ನನ್ನ ಮೇಲೆ ಬಂದು ತಿಳಿಸಲು ಹೇಳಿದ್ದೇನೆಂದರೆ: “ಇಸ್ರಾಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಏಕೆಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನು ನಾನು ಬಲ್ಲೆನು. \v 6 ನೀವು ಈ ಪಟ್ಟಣದಲ್ಲಿ ನರಹತ್ಯೆಯನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ. \p \v 7 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಕೊಂದು ಹಾಕಿದವರ ದೇಹಗಳೇ ಮಾಂಸ, ಈ ಪಟ್ಟಣವು ಬೇಯಿಸುವ ಪಾತ್ರೆ. ಆದರೆ ನಾನು ನಿಮ್ಮನ್ನು ಅದರಿಂದ ಹೊರಗೆ ತರುತ್ತೇನೆ. \v 8 ನೀವು ಖಡ್ಗಕ್ಕೆ ಭಯಪಟ್ಟಿರಿ. ನಾನು ನಿಮ್ಮ ಮೇಲೆ ಒಂದು ಖಡ್ಗವನ್ನು ತರುತ್ತೇನೆ. ಇದು ಸಾರ್ವಭೌಮ ಯೆಹೋವ ದೇವರ ನುಡಿ. \v 9 ನಾನು ನಿಮ್ಮನ್ನು ಪಟ್ಟಣದ ಮಧ್ಯದಿಂದ ಹೊರಗೆ ತಂದು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನ್ಯಾಯತೀರ್ಪುಗಳನ್ನು ನಡೆಸುವೆನು. \v 10 ನೀವು ಖಡ್ಗದಿಂದ ನಾಶವಾಗುವಿರಿ. ನಾನು ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು. \v 11 ಈ ಪಟ್ಟಣವು ಪಾತ್ರೆಯಾಗುವುದಿಲ್ಲ. ನೀವು ಅದರಲ್ಲಿ ಮಾಂಸವೂ ಆಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಾನು ನ್ಯಾಯತೀರಿಸುವೆನು. \v 12 ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.” \p \v 13 ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು. \s1 ಸೆರೆಯವರಿಗೆ ಕೊಟ್ಟ ವಾಗ್ದಾನ \p \v 14 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 15 “ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಾಯೇಲ್ ವಂಶದ ಎಲ್ಲರಿಗೆ, ಯೆರೂಸಲೇಮಿನಲ್ಲೇ ಉಳಿದಿರುವವರು, ‘ಯೆಹೋವ ದೇವರ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೇ? \p \v 16 “ಆದ್ದರಿಂದ ನಾನು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರನ್ನು ಇತರ ಜನಾಂಗಗಳಿಂದ ದೂರ ಹಾಕಿದರೂ, ದೇಶಗಳಲ್ಲಿ ಚದರಿಸಿದರೂ, ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದವರೆಗೆ ಪರಿಶುದ್ಧ ಸ್ಥಳವಾಗಿರುವೆನು.’ \p \v 17 “ಆದ್ದರಿಂದ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಶ್ಚಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ, ನೀವು ಚದರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ. ಇಸ್ರಾಯೇಲ್ ದೇಶವನ್ನು ನಿಮಗೆ ತಿರುಗಿ ಕೊಡುವೆನು.’ \p \v 18 “ಅವರು ಅಲ್ಲಿಗೆ ಹಿಂತಿರುಗಿ ಮತ್ತು ಅದರಲ್ಲಿರುವ ಎಲ್ಲಾ ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ತೆಗೆದುಹಾಕುತ್ತಾರೆ. \v 19 ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು. \v 20 ಆಗ ಅವರು ನನ್ನ ನಿಯಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪಾಲಿಸುವರು. ನನ್ನ ನಿಯಮಗಳನ್ನು ಕೈಗೊಳ್ಳುವರು. ಅವರು ನನ್ನ ಜನರಾಗುವರು, ನಾನು ಅವರ ದೇವರಾಗುವೆನು. \v 21 ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” \p \v 22 ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು. ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು. \v 23 ಯೆಹೋವ ದೇವರ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ, ಪಟ್ಟಣದ ಪೂರ್ವದಿಕ್ಕಿನಲ್ಲಿರುವ ಪರ್ವತದ ಮೇಲೆ ನಿಂತಿತು. \v 24 ಅನಂತರ ದೇವರಾತ್ಮರು, ದೇವರ ಆತ್ಮರಿಂದಾದ ದರ್ಶನದಲ್ಲಿ ನನ್ನನ್ನು ಬಾಬಿಲೋನಿಯರ ದೇಶಕ್ಕೆ ಸೆರೆಯವರ ಬಳಿಗೆ ಎತ್ತಿಕೊಂಡು ಹೋದರು. \p ಆಗ ನಾನು ನೋಡಿದ ದರ್ಶನವು ನನ್ನಿಂದ ಮೇಲೆ ಹೋಯಿತು. \v 25 ಆಮೇಲೆ ಯೆಹೋವ ದೇವರು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯಲ್ಲಿರುವವರಿಗೆ ಹೇಳಿದೆನು. \c 12 \s1 ಗಡಿಪಾರಿನ ಗುರುತು \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 2 “ಮನುಷ್ಯಪುತ್ರನೇ, ನೀನು ತಿರುಗಿಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವ, ಅವರಿಗೆ ನೋಡುವುದಕ್ಕೆ ಕಣ್ಣುಗಳುಂಟು, ಆದರೆ ನೋಡುವುದಿಲ್ಲ; ಕೇಳುವುದಕ್ಕೆ ಕಿವಿಗಳುಂಟು, ಕೇಳುವುದಿಲ್ಲ. ಅವರು ತಿರುಗಿಬೀಳುವ ಮನೆತನದವರು. \p \v 3 “ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು. \v 4 ನಿನ್ನ ಸಲಕರಣೆಗಳನ್ನು ತೆಗೆದುಕೊಂಡು ಹೋಗಲು ಅವುಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು. ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ \v 5 ನೀನು ಅವರ ಕಣ್ಣುಗಳ ಮುಂದೆಯೇ ಗೋಡೆಯನ್ನು ಕೊರೆದು, ಅಲ್ಲಿಂದ ನಿನ್ನ ಸಲಕರಣೆಗಳನ್ನು ಹೊತ್ತುಕೊಂಡು ಹೊರಗೆ ಹೊರಟು ಹೋಗು. \v 6 ಅವರ ಕಣ್ಣುಗಳ ಮುಂದೆ ಸಲಕರಣೆಗಳನ್ನು ಹೆಗಲಿನ ಮೇಲೆ ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೋಗಬೇಕು; ನೆಲವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.” \p \v 7 ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು. ನನ್ನ ಸರಕುಗಳನ್ನು ಹಗಲಿನಲ್ಲಿಯೇ ಹೊರಗೆ ತಂದೆನು. ಸಂಜೆಯಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು. ಅದನ್ನು ನಾನು ಮುಸ್ಸಂಜೆಯಲ್ಲಿ ಹೊರಗೆ ತಂದು, ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು. \p \v 8 ಬೆಳಗಿನ ಜಾವದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 9 “ಮನುಷ್ಯಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೇ? \p \v 10 “ಅವರಿಗೆ ನೀನು ಹೀಗೆ ಹೇಳಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ಈ ಪ್ರವಾದನೆಯು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ, ಅದರಲ್ಲಿರುವ ಸಮಸ್ತ ಇಸ್ರಾಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ. \v 11 ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಗುರುತಾಗಿದ್ದೇನೆ.’ \p “ನಾನು ಮಾಡಿದ ಹಾಗೆ ಅವರಿಗೆ ಮಾಡಲಾಗುವುದು. ಅವರು ಗುಲಾಮರಾಗಿ ಸೆರೆಗೆ ಹೋಗುವರು. \p \v 12 “ಅವರ ಮಧ್ಯದಲ್ಲಿರುವ ರಾಜಪುತ್ರನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೊರಟು ಹೋಗುವನು. ಅವರು ಗೋಡೆಯನ್ನು ಕೊರೆದು, ಆ ಕಿಂಡಿಯ ಮೂಲಕ ತಮ್ಮ ಸಲಕರಣೆಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖವನ್ನು ಮುಚ್ಚಿಕೊಳ್ಳುವನು. \v 13 ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು. \v 14 ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ, ಅವನ ಎಲ್ಲಾ ಸೈನ್ಯಗಳನ್ನೂ, ಎಲ್ಲಾ ದಿಕ್ಕುಗಳಿಗೆ ಚದರಿಸಿ, ಅವರ ಹಿಂದೆ ಖಡ್ಗವನ್ನು ಬೀಸುವೆನು. \p \v 15 “ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳ ಮೇಲೆ ಚೆಲ್ಲಾಪಿಲ್ಲಿಮಾಡುವಾಗ, ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು. \v 16 ಆದರೆ ಅವರು ಎಲ್ಲಿ ಹೋಗುವರೋ, ಆ ಜನಾಂಗಗಳೊಳಗೆ ಅವರ ಹೇಯ ಕಾರ್ಯಗಳನ್ನು ಇವರು ತಿಳಿದುಕೊಳ್ಳುವಂತೆ ಅವರಲ್ಲಿ ಕೆಲವರನ್ನು ಖಡ್ಗದಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.” \p \v 17 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 18 “ಮನುಷ್ಯಪುತ್ರನೇ, ಆಹಾರವನ್ನು ನಡುಗುತ್ತಾ ಊಟಮಾಡು ಮತ್ತು ನೀರನ್ನು ನಡುಗುವಿಕೆಯಿಂದಲೂ, ಎಚ್ಚರಿಕೆಯಿಂದಲೂ ಕುಡಿ. \v 19 ನಿನ್ನ ದೇಶದ ಜನರಿಗೆ ಹೀಗೆ ಹೇಳು, ‘ಯೆರೂಸಲೇಮಿನ ನಿವಾಸಿಗಳಿಗೆ ಮತ್ತು ಇಸ್ರಾಯೇಲರ ದೇಶಕ್ಕೆ ಸಾರ್ವಭೌಮ ಯೆಹೋವ ದೇವರು ಹೇಳಿದ್ದೇನೆಂದರೆ, ಅವರು ತಮ್ಮ ರೊಟ್ಟಿಯನ್ನು ಎಚ್ಚರಿಕೆಯಿಂದಲೇ ತಿನ್ನುವರು, ನೀರನ್ನು ಅಂಜಿಕೆಯಿಂದಲೇ ಕುಡಿಯುವರು. ಅದರಲ್ಲಿ ವಾಸವಾಗಿರುವವರೆಲ್ಲರ ಹಿಂಸಾಚಾರದಿಂದ ಅವರ ದೇಶವು ಸೊತ್ತನ್ನೆಲ್ಲಾ ಕಳೆದುಕೊಂಡು ಹಾಳಾಗುವುದು. \v 20 ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವುವು. ದೇಶವು ನಿರ್ಜನವಾಗುವುದು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ” \s1 ಯಾವುದೇ ವಿಳಂಬವಿಲ್ಲ \p \v 21 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 22 “ಮನುಷ್ಯಪುತ್ರನೇ, ‘ದಿನಗಳು ಬಹಳವಾಗುತ್ತಿವೆ. ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂದು ಇಸ್ರಾಯೇಲ್ ದೇಶದಲ್ಲಿ ಹೇಳಿಕೊಳ್ಳುವ ಈ ಗಾದೆ ಏನು’? \v 23 ಆದ್ದರಿಂದ ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನಾನು ಈ ಗಾದೆಯನ್ನು ನಿಲ್ಲಿಸುತ್ತೇನೆ. ಅದನ್ನು ಇನ್ನು ಮೇಲೆ ಇಸ್ರಾಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವುದಿಲ್ಲ. ದಿನಗಳು ಹತ್ತಿರವಾಗಿವೆ. ಪ್ರತಿದರ್ಶನವು ನೆರವೇರಲಿದೆ’ ಎಂದು ಅವರಿಗೆ ಹೇಳು. \v 24 ‘ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ಸುಳ್ಳು ದರ್ಶನವೂ, ಮೋಸದ ಶಕುನವೂ ಇರುವುದಿಲ್ಲ. \v 25 ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” \p \v 26 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 27 “ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು, ‘ಇವನಿಗಾದ ದರ್ಶನವು ಬಹುದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆ,’ ಎಂದು ಹೇಳುತ್ತಾರೆ.” \p \v 28 “ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ, ನನ್ನ ಯಾವುದೇ ಮಾತು ಇನ್ನು ತಡವಾಗದು. ನಾನು ಹೇಳಿದ್ದೆಲ್ಲವನ್ನು ನೆರವೇರುವುದೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” \c 13 \s1 ಸುಳ್ಳು ಪ್ರವಾದಿಗಳನ್ನು ಖಂಡಿಸಿದ್ದು \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 2 “ನರಪುತ್ರನೇ, ಪ್ರವಾದಿಸುತ್ತಿರುವ ಇಸ್ರಾಯೇಲಿನ ಮನೆತನದ ಪ್ರವಾದಿಗಳಿಗೆ ವಿರುದ್ಧವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಕಲ್ಪನೆಗಳಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ; \v 3 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಮೂರ್ಖ ಪ್ರವಾದಿಗಳೇ ನಿಮಗೆ ಕಷ್ಟ! \v 4 ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ. \v 5 ಯೆಹೋವ ದೇವರ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ಇಸ್ರಾಯೇಲ್ ಮನೆತನದವರ ಸುತ್ತಲೂ ಗೋಡೆಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರಲಿಲ್ಲ. \v 6 “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ. \v 7 ನಾನು ಮಾತಾಡದೇ ಇದ್ದರೂ, “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು. \p \v 8 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಸುಳ್ಳಾಗಿ ಮಾತನಾಡಿದ್ದರಿಂದಲೂ, ಸುಳ್ಳನ್ನು ದರ್ಶಿಸಿದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನು. ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 9 ಸುಳ್ಳಾದದ್ದನ್ನು ದರ್ಶಿಸಿ, ಸುಳ್ಳು ಕಣಿ ಹೇಳುವ ಪ್ರವಾದಿಗಳಿಗೆ ವಿರುದ್ಧವಾಗಿ ನನ್ನ ಹಸ್ತವಿರುವುದು. ಅವರು ನನ್ನ ಜನರ ಸಭೆಯಲ್ಲಿ ಇರುವುದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲಾಗುವುದೂ ಇಲ್ಲ. ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವುದೂ ಇಲ್ಲ. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. \p \v 10 “ ‘ಏಕೆಂದರೆ ಸಮಾಧಾನವಿಲ್ಲದಿರುವಾಗ ಅವರು, “ಸಮಾಧಾನವಿದೆ,” ಎಂದು ಹೇಳಿ, ನನ್ನ ಜನರನ್ನು ತಪ್ಪು ದಾರಿಗೆ ನಡೆಸಿದ್ದಾರೆ. ಒಬ್ಬನು ದುರ್ಬಲ ಗೋಡೆಯನ್ನು ಕಟ್ಟಿದರೆ, ಈ ಪ್ರವಾದಿಗಳ ಗುಂಪು ಅದಕ್ಕೆ ಸುಣ್ಣ ಹಚ್ಚಿದ್ದಾರೆ. \v 11 ಆದ್ದರಿಂದ ಸುಣ್ಣ ಹಚ್ಚುತ್ತಿರುವವನಿಗೆ ಅದು ಬೀಳುವುದೆಂದು ಹೇಳು. ಅಲ್ಲಿ ವಿಪರೀತ ಮಳೆ ಬರುವುದು ಮತ್ತು ದೊಡ್ಡ ಕಲ್ಮಳೆಯು ಬೀಳುವುದು. ಬಿರುಗಾಳಿಯು ಅದನ್ನು ಸೀಳಿಬಿಡುವುದು. \v 12 “ಗೋಡೆ ಬಿದ್ದುಹೋದ ಮೇಲೆ, ನೀವು ಹಚ್ಚಿದ ಸುಣ್ಣ ಎಲ್ಲಿ?” ಎಂದು ನಿಮಗೆ ಕೇಳುವರಲ್ಲವೆ? \p \v 13 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು. \v 14 ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ, ನೆಲಸಮಮಾಡಿ, ಅದರ ಅಸ್ತಿವಾರವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವಾಗ, ನೀವು ಅದರಲ್ಲಿ ನಾಶವಾಗುವಿರಿ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿದುಬರುವುದು. \v 15 ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿಕೊಂಡು, “ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇರುವುದಿಲ್ಲವೆಂದೂ, \v 16 ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ’ \p \v 17 “ಈಗ ಮನುಷ್ಯಪುತ್ರನೇ, ನೀನು ತಮ್ಮ ಸ್ವಂತ ಕಲ್ಪನೆಯಿಂದ ಪ್ರವಾದಿಸುವ ನಿನ್ನ ಜನರ ಪುತ್ರಿಯರಿಗೆ ವಿರೋಧವಾಗಿ ನಿನ್ನ ಮುಖವನ್ನಿಟ್ಟು, ಅವರಿಗೆ ವಿರೋಧವಾಗಿ ಪ್ರವಾದಿಸಿ, \v 18 ಹೀಗೆ ಹೇಳು ಎಂದು, ‘ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡುಗಳನ್ನು ಹೊಲೆದು ಮತ್ತು ಪ್ರತಿಯೊಬ್ಬನ ಎತ್ತರದ ತಲೆಗಳಿಗೆ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಪುತ್ರಿಯರಿಗೆ ಕಷ್ಟ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ? \v 19 ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ? \p \v 20 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಬೇಟೆಯಾಡುವಂತೆ ಬೇಟೆಯಾಡಿದ ಪ್ರಾಣಗಳನ್ನು ಬಿಡಿಸುತ್ತೇನೆ. \v 21 ನಿಮ್ಮ ವಸ್ತ್ರಗಳನ್ನು ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ. ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. \v 22 ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ. \v 23 ಆದ್ದರಿಂದ ನೀವು ಇನ್ನು ಮೇಲೆ ಸುಳ್ಳು ದರ್ಶನಗಳನ್ನು ಕಾಣುವುದಿಲ್ಲ ಮತ್ತು ಸುಳ್ಳು ದೈವೋಕ್ತಿಗಳನ್ನು ಅಭ್ಯಾಸಿಸುವುದಿಲ್ಲ. ಏಕೆಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ಬಿಡಿಸುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.’ ” \c 14 \s1 ವಿಗ್ರಹಾರಾಧಕರನ್ನು ಖಂಡಿಸಿದ್ದು \p \v 1 ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು. \v 2 ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 3 “ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ? \v 4 ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು. \v 5 ತಮ್ಮ ವಿಗ್ರಹಗಳಿಗಾಗಿ ನನ್ನನ್ನು ತೊರೆದ ಇಸ್ರಾಯೇಲ್ ಜನರ ಹೃದಯಗಳನ್ನು ಪುನಃ ವಶಪಡಿಸಿಕೊಳ್ಳಲು ನಾನು ಇದನ್ನು ಮಾಡುತ್ತೇನೆ.’ \p \v 6 “ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ. \p \v 7 “ ‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು. \v 8 ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು. \p \v 9 “ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು. \v 10 ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು. ವಿಚಾರಿಸುವವನ ದಂಡನೆಯು ಹೇಗೆಯೋ ಹಾಗೆಯೇ, ಪ್ರವಾದಿಗೆ ದಂಡನೆಯೂ ಇರುವುದು. \v 11 ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” \s1 ಯೆರೂಸಲೇಮಿನ ತೀರ್ಪು ತಪ್ಪಿಸಿಕೊಳ್ಳಲಾಗದು \p \v 12 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 13 “ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು. \v 14 ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 15 “ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ, \v 16 ಈ ಮೂರು ಮನುಷ್ಯರಲ್ಲಿ ಅದರಲ್ಲಿ ಇದ್ದರೂ, ನನ್ನ ಜೀವದಾಣೆ ಅವರು ಪುತ್ರರನ್ನಾಗಲಿ, ಪುತ್ರಿಯರನ್ನಾಗಲಿ ಬಿಡಿಸಲು ಆಗುತ್ತಿರಲಿಲ್ಲ, ತಾವು ಮಾತ್ರ ತಪ್ಪಿಸಿಕೊಳ್ಳುವರು. ಆದರೆ ದೇಶವು ಹಾಳಾಗುವುದು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 17 “ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ, \v 18 ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 19 “ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ, \v 20 ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 21 “ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು? \v 22 ಆದರೂ ಅದರಲ್ಲಿ ಪುತ್ರಪುತ್ರಿಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲಾಗುವರು. ಅವರು ನಿಮ್ಮ ಬಳಿಗೆ ಬಂದಾಗ, ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ಸಮಾಧಾನ ಹೊಂದುವಿರಿ. \v 23 ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” \c 15 \s1 ಯೆರೂಸಲೇಮು, ಪ್ರಯೋಜನವಿಲ್ಲದ ದ್ರಾಕ್ಷಾಲತೆ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 2 “ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು? \v 3 ಇದರಿಂದ ಕಟ್ಟಿಗೆಯನ್ನು ತೆಗೆದುಕೊಂಡು ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವನನ್ನಾದರೂ ನೇತುಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? \v 4 ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ? \v 5 ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ, ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟುಹೋದ ಮೇಲೆ ಯಾವ ಕೆಲಸಕ್ಕೆ ಬಂದೀತು?” \p \v 6 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ. \v 7 ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. \v 8 ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” \c 16 \s1 ವ್ಯಭಿಚಾರದ ಹೆಂಡತಿಯಾಗಿ ಯೆರೂಸಲೇಮ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 2 “ನರಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡಿ, \v 3 ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾರೆ: ನಿಮ್ಮ ಪೂರ್ವಜರು ಮತ್ತು ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ; ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು. \v 4 ನಿನ್ನ ಹುಟ್ಟಿದ ಸ್ಥಳದ ವಿಷಯವು: ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸಲಾಗಲಿಲ್ಲ; ಶುದ್ಧವಾಗುವ ಹಾಗೆ ನೀರಿನಲ್ಲಿ ತೊಳೆಯಲಾಗಲಿಲ್ಲ; ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ; \v 5 ನಿನ್ನನ್ನು ಕರುಣಿಸಿ, ಕಟಾಕ್ಷಿಸಿ ಯಾರೂ ನಿನಗೆ ಒಂದು ಸಹಾಯವನ್ನೂ ಮಾಡಲಿಲ್ಲ. ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಕಿದರು. \p \v 6 “ ‘ನಾನು ನಿನ್ನ ಬಳಿಯಲ್ಲಿ ಹಾದುಹೋಗುವಾಗ, ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿದಾಗ, “ಬದುಕು” ಎಂದೆನು. \v 7 ಹೊಲದಲ್ಲಿಯ ಮೊಳಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು, ನೀನು ಬಲಿತು, ಪ್ರಾಯವು ತುಂಬಿ, ನೀನು ಅತಿ ಸುಂದರಿಯಾದೆ, ನಿನ್ನ ಸ್ತನಗಳು ರೂಪಗೊಂಡವು, ನಿನ್ನ ಕೂದಲು ಬೆಳೆಯಿತು, ಮೊದಲು ನೀನು ಬರೀ ಬೆತ್ತಲೆಯಾಗಿದ್ದೆ. \p \v 8 “ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 9 “ ‘ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ನಿನ್ನ ರಕ್ತವನ್ನು ನಿನ್ನಿಂದ ತೊಳೆದೆನು, ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು. \v 10 ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲುಹಂದಿಯ ತೊಗಲಿನ ಪಾದರಕ್ಷೆಗಳನ್ನು ಕೊಟ್ಟೆನು. ನಯವಾದ ನಾರುಮಡಿಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು; \v 11 ಆಭರಣಗಳಿಂದ ನಿನ್ನನ್ನು ಅಲಂಕರಿಸಿದೆನು: ನಾನು ನಿನ್ನ ಕೈಗಳಿಗೆ ಕಡಗಗಳನ್ನು ನಿನ್ನ ಕೊರಳಿಗೆ ಸರವನ್ನು ಹಾಕಿದೆನು. \v 12 ನಿನ್ನ ಮೂಗಿಗೆ ಮೂಗುತಿಯನ್ನೂ, ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ, ನಿನ್ನ ತಲೆಯ ಮೇಲೆ ಸುಂದರ ಕಿರೀಟವನ್ನೂ ಇಟ್ಟೆನು. \v 13 ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ. \v 14 ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು, ಇದು ಸಾರ್ವಭೌಮ ಯೆಹೋವ ದೇವರ ನುಡಿ. \p \v 15 “ ‘ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸೆಯಿಟ್ಟು, ನಿನ್ನ ಕೀರ್ತಿಯ ನಿಮಿತ್ತವಾಗಿ ವೇಶ್ಯೆಯಾದೆ. ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರ ಮಾಡಿದೆ ಮತ್ತು ನಿನ್ನ ಸೌಂದರ್ಯ ಅವನದಾಯಿತು. \v 16 ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾ ಸ್ಥಳದಲ್ಲಿ ವ್ಯಭಿಚಾರ ಮಾಡಿದೆ; ನೀನು ಅವನ ಬಳಿಗೆ ಹೋದೆ ಮತ್ತು ಅವನು ನಿನ್ನ ಸೌಂದರ್ಯವನ್ನು ತೆಗೆದುಕೊಂಡಿದ್ದಾನೆ. \v 17 ಇದಲ್ಲದೆ ನಾನು ನಿನಗೆ ಬೆಳ್ಳಿಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು, ಅವುಗಳಿಂದ ಪುರುಷಮೂರ್ತಿಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದೆ. \v 18 ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು, ಅವರಿಗೆ ಹೊದಿಸಿ, ನನ್ನ ಎಣ್ಣೆಯನ್ನೂ, ಧೂಪವನ್ನೂ ಅವರ ಮುಂದೆ ಇಟ್ಟೆ. \v 19 ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 20 “ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ? \v 21 ನೀನು ನನ್ನ ಮಕ್ಕಳನ್ನು ಕೊಂದು, ವಿಗ್ರಹಗಳಿಗೆ ಬಲಿಯಾಗಿ ಅರ್ಪಿಸಿದೆ. \v 22 ಎಲ್ಲಾ ಅಸಹ್ಯ ಕಾರ್ಯಗಳನ್ನೂ, ವ್ಯಭಿಚಾರಗಳನ್ನೂ ಮಾಡುತ್ತಿದ್ದಾಗ, ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ, ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದುದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ. \p \v 23 “ ‘ನಿನಗೆ ಕಷ್ಟ! ಕಷ್ಟ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅವನ ಎಲ್ಲಾ ದುಷ್ಟತನದ ಹೊರತಾಗಿ, \v 24 ನೀವು ನಿಮಗಾಗಿ ಒಂದು ದಿಬ್ಬವನ್ನು ನಿರ್ಮಿಸಿದ್ದೀರಿ ಮತ್ತು ಪ್ರತಿ ಸಾರ್ವಜನಿಕ ಚೌಕದಲ್ಲಿ ಎತ್ತರದ ದೇವಾಲಯವನ್ನು ನಿರ್ಮಿಸಿದ್ದೀರಿ. \v 25 ಪ್ರತಿಯೊಂದು ದಾರಿಯ ಕೊನೆಯಲ್ಲಿಯೂ ಎತ್ತರದ ದೇವಾಲಯವನ್ನು ನಿರ್ಮಿಸಿ, ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು, ಹಾದುಹೋಗುವ ಪ್ರತಿಯೊಬ್ಬನಿಗೂ ನಿನ್ನ ಕಾಲುಗಳನ್ನು ಅಗಲಿಸಿದೆ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದೆ. \v 26 ಇದಲ್ಲದೆ ಅತಿಕಾಮಿಗಳಾದ ನಿನ್ನ ನೆರೆಯವರಾದ ಈಜಿಪ್ಟಿನವರ ಸಂಗಡ ವ್ಯಭಿಚಾರ ಮಾಡಿದೆ; ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದೆ; \v 27 ಆದ್ದರಿಂದ ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಭೂಪ್ರದೇಶವನ್ನು ಕಡಿಮೆ ಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು, ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಪುತ್ರಿಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ. \v 28 ಇದಲ್ಲದೆ ಅಸ್ಸೀರಿಯರೊಂದಿಗೂ ವ್ಯಭಿಚಾರ ಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀಯೆ; ಆದರೂ ತೃಪ್ತಿಯಾಗಲಿಲ್ಲ. \v 29 ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ವ್ಯಾಪಾರಸ್ಥರಾದ ಬಾಬಿಲೋನಿಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ. \p \v 30 “ ‘ನೀನು ನಾಚಿಕೆಯಿಲ್ಲದ ವೇಶ್ಯೆಯಂತೆ ವರ್ತಿಸಿದಾಗ ನಾನು ಕೋಪದಿಂದ ತುಂಬಿದೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 31 ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ, ದಿಬ್ಬವನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು, ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿ ನೀನಲ್ಲ. \p \v 32 “ ‘ಆದರೆ ಗಂಡನಿಗೆ ಬದಲಾಗಿ ಪರರನ್ನು ಬಯಸುವ ವ್ಯಭಿಚಾರಿಯಾದ ಹೆಂಡತಿಯಾಗಿರುವೆ! \v 33 ಸಾಮಾನ್ಯವಾಗಿ ವ್ಯಭಿಚಾರಿಗಳಿಗೆ ಬಹುಮಾನ ಕೊಡುತ್ತಾರೆ. ಆದರೆ ನೀನೇ ನಿನ್ನ ಪ್ರಿಯರಿಗೆಲ್ಲ ಬಹುಮಾನಗಳನ್ನು ಕೊಟ್ಟು, ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಲಂಚ ಕೊಡುತ್ತಿರುವೆ. \v 34 ಹೀಗಿರುವುದರಿಂದ ನಿನ್ನ ವ್ಯಭಿಚಾರವು ಇತರ ವೇಶ್ಯೆಯರ ವ್ಯಭಿಚಾರಕ್ಕಿಂತ ಭಿನ್ನ. ವ್ಯಭಿಚಾರ ಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ. ನೀನು ಬಹುಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವುದಿಲ್ಲ. ಆದ್ದರಿಂದ ನೀನು ಭಿನ್ನಳಾಗಿದ್ದು. \p \v 35 “ ‘ಆದಕಾರಣ ವ್ಯಭಿಚಾರಿಣಿಯೇ, ನೀನು ಯೆಹೋವ ದೇವರ ವಾಕ್ಯವನ್ನು ಕೇಳು. \v 36 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಮೋಹವನ್ನು ಸುರಿಸಿದ ಕಾರಣದಿಂದಲೂ, ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ, ನಿನ್ನ ಅಸಹ್ಯ ವಿಗ್ರಹಗಳಿಂದಲೂ, ನೀನು ಆಹುತಿ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ, \v 37 ನೀನು ಆನಂದಪಟ್ಟ ನಿನ್ನ ಪ್ರಿಯರೆಲ್ಲರನ್ನು ಮತ್ತು ಹಗೆಮಾಡಿದವರೆಲ್ಲರನ್ನು ಸಹ ಕೂಡಿಸುವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ, ಅವರೆದುರಿಗೆ ನಿನ್ನನ್ನು ಬೆತ್ತಲೆ ಮಾಡಿ, ನಿನ್ನ ಮಾನವನ್ನು ಬಯಲು ಮಾಡುವೆ. ಆಗ ಅವರು ನಿನ್ನನ್ನು ಬೆತ್ತಲೆಯಾಗಿ ನೋಡುವರು. \v 38 ವ್ಯಭಿಚಾರ ಮಾಡಿದ ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ಮೇಲೆ ರಕ್ತ ಸುರಿಸುವೆನು. \v 39 ಅನಂತರ ನಿನ್ನನ್ನು ಅವರ ಕೈಗಳಿಗೆ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ, ನಿನ್ನ ಉನ್ನತ ಸ್ಥಾನಗಳನ್ನು ಒಡೆದು ಬಿಡುವರು. ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಆಭರಣಗಳನ್ನು ಕಸಿದುಕೊಂಡು, ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿಹೋಗುವರು. \v 40 ಅವರು ನಿನಗೆ ವಿರುದ್ಧವಾಗಿ ಒಂದು ಗುಂಪನ್ನು ಕರೆದುಕೊಂಡು ಬಂದು, ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಖಡ್ಗಗಳಿಂದ ನಿನ್ನನ್ನು ತಿವಿಯುವರು. \v 41 ಅವರು ನಿನ್ನ ಮನೆಗಳನ್ನು ಸುಟ್ಟು, ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯತೀರಿಸುವರು. ನೀನು ವ್ಯಭಿಚಾರ ಮಾಡುವುದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯರಿಗೆ ಕೂಲಿ ಸಹ ಕೊಡುವುದನ್ನು ನಿಲ್ಲಿಸುವೆನು. \v 42 ಈ ರೀತಿ ನಿನ್ನ ಮೇಲಿನ ನನ್ನ ಸಿಟ್ಟನ್ನು ತೀರಿಸುವೆನು. ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ, ಶಾಂತನಾಗಿ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ. \p \v 43 “ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ? \p \v 44 “ ‘ “ತಾಯಿಯಂತೆ ಮಗಳು,” ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಪ್ರತಿಯೊಬ್ಬರು ಹೇಳುವರು. \v 45 ಗಂಡನಿಗೂ, ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು. ಗಂಡನಿಗೂ, ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ. ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು. \v 46 ನಿನ್ನ ಉತ್ತರ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ. ದಕ್ಷಿಣ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ. \v 47 ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ. ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ. ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ. \v 48 ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು ಮತ್ತು ಅವಳ ಪುತ್ರಿಯರು; ನೀನು ನಿನ್ನ ಪುತ್ರಿಯರು ಮಾಡಿದೆ ಹಾಗೆ ಮಾಡಿಲಿಲ್ಲ. \p \v 49 “ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ. \v 50 ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯವಾದವುಗಳನ್ನು ನಡೆಸಿದರು. ಆದ್ದರಿಂದ ನಾನು ಅದನ್ನು ನೋಡಿ, ಅವರನ್ನು ನಿರ್ಮೂಲ ಮಾಡಿದೆನು. \v 51 ಸಮಾರ್ಯವೆಂಬಾಕೆಯು ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದೆ. ನೀನು ಮಾಡಿದ ಲೆಕ್ಕವಿಲ್ಲದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. \v 52 ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು. ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ. ಅವರು ನಿನಗಿಂತ ನೀತಿವಂತರು. ಹೌದು, ನೀನು ನಿನ್ನ ಸಹೋದರಿಯರನ್ನು ನೀತಿವಂತರೆಂದು ತೋರ್ಪಡಿಸಿದ್ದರಿಂದ ನೀನೇ ನಾಚಿಕೆಪಟ್ಟು, ನಿನ್ನ ನಿಂದೆಯನ್ನು ಹೊತ್ತುಕೋ. \p \v 53 “ ‘ಸೊದೋಮ್ ಮತ್ತು ಆಕೆಯ ಕುಮಾರಿಯರ ಹಾಗೂ ಸಮಾರ್ಯ ಮತ್ತು ಆಕೆಯ ಕುಮಾರಿಯ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು. \v 54 ಏಕೆಂದರೆ ನೀನು ನಿನ್ನ ನಿಂದೆಯನ್ನು ಹೊತ್ತುಕೊಂಡು, ಅವರನ್ನು ಆಧರಿಸುವಾಗ ಲಜ್ಜೆಪಡುವೆ, ನಾಚಿಕೆಗೊಳ್ಳುವೆ. \v 55 ಆಗ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ, ಅವರ ಪುತ್ರಿಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ, ನಿನ್ನ ಪುತ್ರಿಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ. \v 56 ನಿನ್ನ ಸಹೋದರಿಯರಾದ ಸೊದೋಮನ್ನು ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲಿಲ್ಲ. \v 57 ಅರಾಮಿನ ಪುತ್ರಿಯರಿಂದಲೂ ಮತ್ತು ಅದರ ಸುತ್ತಲಿರುವಂತ ಎಲ್ಲವುಗಳಿಂದಲೂ ಮತ್ತು ನಿನ್ನನ್ನು ಉದಾಸೀನ ಮಾಡಿದಂಥ ಎಲ್ಲಾ ಫಿಲಿಷ್ಟಿಯರ ಪುತ್ರಿಯರಿಂದಲೂ, ನಿನಗೆ ನಿಂದೆಯು ಬಂದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವುದಕ್ಕೆ ಪೂರ್ವದಲ್ಲಿಯೇ \v 58 ನೀನು ನಿನ್ನ ದುಷ್ಕರ್ಮಗಳ ಮತ್ತು ನಿನ್ನ ಅಸಹ್ಯಗಳ ಫಲವನ್ನು ಅನುಭವಿಸಬೇಕಾಗಿ ಬಂತು, ಎಂದು ಯೆಹೋವ ದೇವರು ಹೇಳುತ್ತಾರೆ. \p \v 59 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ. ನೀನು ಒಡಂಬಡಿಕೆಯನ್ನು ಮೀರಿ, ನನ್ನ ಆಣೆಯನ್ನು ತಿರಸ್ಕರಿಸಿರುವೆ. \v 60 ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು. \v 61 ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು, ನಿನ್ನ ಸಹೋದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವೆ. ಅವರನ್ನು ನಿನ್ನ ಪುತ್ರಿಯರಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆಯಿಂದಲ್ಲ. \v 62 ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು. ಆದ್ದರಿಂದ ನಾನೇ ಯೆಹೋವ ದೇವರೆಂದು ನಿಮಗೆ ಗೊತ್ತಾಗುವುದು. \v 63 ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” \c 17 \s1 ಎರಡು ಹದ್ದುಗಳು ಮತ್ತು ದ್ರಾಕ್ಷಿಗಿಡ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 2 “ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು. \v 3 ಅವರಿಗೆ ಹೇಳತಕ್ಕದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಶಕ್ತಿಶಾಲಿ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ಮತ್ತು ವಿಧವಿಧವಾದ ಬಣ್ಣಬಣ್ಣದ ಪುಕ್ಕಗಳಿಂದ ತುಂಬಿದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಕೊಂಬೆಯನ್ನು ಹಿಡಿದು, \v 4 ಅದರ ಚಿಗುರುಗಳ ಕೊನೆಯನ್ನು ಕಿತ್ತು, ವ್ಯಾಪಾರದ ದೇಶಕ್ಕೆ ತೆಗೆದುಕೊಂಡುಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು. \p \v 5 “ ‘ಅದು ದೇಶದ ಬೀಜವನ್ನೂ ಸಹ ತೆಗೆದುಕೊಂಡುಹೋಗಿ ಫಲವತ್ತಾದ ಭೂಮಿಯಲ್ಲಿ ಇರಿಸಿತು. ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿತು. \v 6 ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷಿಗಿಡವಾಯಿತು. ಅದರ ರೆಂಬೆಗಳು ಅವನ ಕಡೆಗೆ ತಿರುಗಿಕೊಂಡವು. ಅದರ ಬೇರುಗಳು ಅದರ ಕೆಳಗಿದ್ದವು. ಹೀಗೆ ಅದು ದ್ರಾಕ್ಷಿಗಿಡವಾಯಿತು. ಕೊಂಬೆಗಳು ಹುಟ್ಟಿಕೊಂಡು ಬಳ್ಳಿಗಳು ಹಬ್ಬಿದವು. \p \v 7 “ ‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು. \v 8 ಅದು ಕೊಂಬೆಗಳನ್ನು ಬೆಳೆಸಿ ಫಲಕೊಡುವ ಹಾಗೆಯೂ, ಒಳ್ಳೆಯ ದ್ರಾಕ್ಷಿಗಿಡ ಆಗುವ ಹಾಗೆಯೂ, ಒಳ್ಳೆಯ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲಾಗಿತ್ತು.’ \p \v 9 “ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ. \v 10 ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’ ” \p \v 11 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 12 “ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ. \v 13 ಅರಸನ ಸಂತಾನದವರನ್ನು ಕರೆದುಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿ, ಅವನಿಂದ ಪ್ರಮಾಣ ಮಾಡಿಸಿ, ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ. \v 14 ಆ ರಾಜ್ಯವು ಮೇಲೇಳದ ಹಾಗಿದ್ದರೂ, ಅವನು ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು. \v 15 ಆದರೆ ಅರಸನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು, ತನ್ನ ರಾಯಭಾರಿಗಳನ್ನು ಈಜಿಪ್ಟಿಗೆ ಕಳುಹಿಸಿ, ತನಗೆ ಕುದುರೆಗಳನ್ನೂ, ಬಹಳ ಜನರನ್ನೂ ಕೊಡಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿಯಾಗುವನೋ? ಇಂತಹ ಸಂಗತಿಗಳನ್ನು ಮಾಡುವವನು ತಪ್ಪಿಸಿಕೊಳ್ಳುವನೋ ಅಥವಾ ಒಡಂಬಡಿಕೆಯನ್ನು ಮುರಿದು ತಪ್ಪಿಸಿಕೊಳ್ಳಲಾಗುವುದೋ? \p \v 16 “ ‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 17 ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನೂ, ಕೋಟೆಗಳನ್ನೂ ಕಟ್ಟಿದರೂ ಯುದ್ಧದಲ್ಲಿ ಅವನಿಗೆ ಏನೂ ಪ್ರಯೋಜನವಾಗುವುದಿಲ್ಲ. \v 18 ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು. \p \v 19 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು. \v 20 ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ. \v 21 ಅವನ ಸೈನ್ಯಗಳೆಲ್ಲಾ ಖಡ್ಗದಿಂದ ಬೀಳುವುದು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಹೋಗುವರು. ಆಗ ಯೆಹೋವ ದೇವರಾದ ನಾನೇ ಅದನ್ನು ಹೇಳಿದೆನೆಂದು ನಿಮಗೆ ತಿಳಿಯುವುದು. \p \v 22 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು. \v 23 ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು. \v 24 ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. \p “ ‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’ ” \c 18 \s1 ಪಾಪ ಮಾಡುವವನು ಸಾಯುವನು \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 2 “ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಈ ಗಾದೆಯನ್ನು ಉಲ್ಲೇಖಿಸುವುದರ ಅರ್ಥವೇನು: \q1 “ ‘ಪಿತೃಗಳು ಹುಳಿದ್ರಾಕ್ಷಿಗಳನ್ನು ತಿಂದರು, \q2 ಮಕ್ಕಳ ಹಲ್ಲು ಚಳಿತು ಹೋಯಿತು.’ \p \v 3 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವುದಿಲ್ಲ. \v 4 ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು. \q1 \v 5 “ಆದರೆ ಒಬ್ಬ ಮನುಷ್ಯನು ನೀತಿವಂತನಾಗಿದ್ದು, \q2 ನೀತಿಯನ್ನೂ ನ್ಯಾಯವನ್ನೂ ನಡೆಸಿ, \q1 \v 6 ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, \q2 ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, \q1 ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, \q2 ಮುಟ್ಟಾಗಿರುವ ಸ್ತ್ರೀಯನ್ನು ಸಮೀಪಿಸದೆ, \q1 \v 7 ಯಾರನ್ನೂ ಉಪದ್ರವಪಡಿಸದೆ, \q2 ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, \q1 ಹಿಂಸೆ ಸುಲಿಗೆ ಮಾಡದೆ, \q2 ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು \q2 ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ, \q1 \v 8 ಬಡ್ಡಿಗೆ ಸಾಲ ಕೊಡದೆ, \q2 ಲಾಭವನ್ನು ತೆಗೆದುಕೊಳ್ಳದೆ, \q1 ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು \q2 ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ, \q1 \v 9 ಸತ್ಯವನ್ನು ನಡೆಸುವುದಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, \q2 ನನ್ನ ನ್ಯಾಯಗಳನ್ನು ಕೈಗೊಂಡು ಸತ್ಯಪರನಾಗಿ ನಡೆದರೆ, \q1 ಅವನು ನೀತಿವಂತನು ಮತ್ತು \q2 ನಿಶ್ಚಯವಾಗಿ ಬದುಕುವನು,” \q2 ಎಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ. \p \v 10 “ಒಂದು ವೇಳೆ ಇಂಥವನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ, \v 11 ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ, \q1 “ಪರ್ವತಗಳ ಪೂಜಾಸ್ಥಳಗಳಲ್ಲಿ ತಿಂದು \q1 ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ, \q1 \v 12 ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, \q1 ಹಿಂಸಿಸಿ, ಸುಲಿಗೆ ಮಾಡಿ, \q1 ಒತ್ತೆಗಳನ್ನು ಹಿಂದೆ ಕೊಡದೆ, \q1 ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ \q1 ಅಸಹ್ಯವಾದವುಗಳನ್ನು ಮಾಡಿ, \q1 \v 13 ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, \m ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ. \p \v 14 “ಒಂದು ವೇಳೆ ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಆಲೋಚಿಸಿ, ಇಂಥಾ ಕಾರ್ಯಗಳನ್ನು ನಡೆಸದೆ, \q1 \v 15 “ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, \q2 ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, \q1 ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, \q1 \v 16 ಯಾರನ್ನೂ ಹಿಂಸಿಸದೆ, \q2 ಒತ್ತೆಯನ್ನು ಕೇಳದೆ, \q1 ಹಿಂಸೆಯಿಂದ ಸುಲಿಗೆ ಮಾಡದೆ, \q2 ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು \q2 ಮತ್ತು ಬೆತ್ತಲೆಯಾದವನಿಗೆ ವಸ್ತ್ರವನ್ನು ಹೊದಿಸಿ, \q1 \v 17 ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, \q2 ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, \q1 ನನ್ನ ನಿಯಮಗಳಲ್ಲಿ ನಡೆದರೆ, \m ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು. \v 18 ಇವನ ತಂದೆಯಾದರೊ ಸ್ವಜನರನ್ನು ಬಲಾತ್ಕಾರ ಮಾಡಿದ್ದರಿಂದಲೂ, ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ, ತನ್ನ ಜನರ ಮಧ್ಯದಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದಲೂ ಅವನು ತನ್ನ ಅಕ್ರಮದಲ್ಲಿ ಸಾಯುವನು. \p \v 19 “ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು. \v 20 ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು. \p \v 21 “ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು, ನ್ಯಾಯವನ್ನೂ, ನೀತಿಯನ್ನೂ ನಡೆಸಿದರೆ, ಅವನು ಸಾಯದೆ ಖಂಡಿತವಾಗಿ ಬದುಕುವನು. \v 22 ಅವನು ಮಾಡಿದ ಪಾಪಗಳಲ್ಲಿ ಒಂದಾದರೂ ಅವನ ಲೆಕ್ಕಕ್ಕೆ ಸೇರಿಸಲಾಗುವುದಿಲ್ಲ. ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು. \v 23 ದುಷ್ಟನು ಸಾಯುವುದರಲ್ಲಿ ನನಗೆ ಸ್ವಲ್ಪ ಸಂತೋಷವಿರುವುದೋ?” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ. “ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ಬದುಕಿದರೆ ನನಗೆ ಸಂತೋಷವಲ್ಲವೇ? \p \v 24 “ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು. \p \v 25 “ಆದರೆ ನೀವು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತೀರಿ. ಇಸ್ರಾಯೇಲ್ ಜನರೇ, ಈಗ ಕೇಳಿರಿ, ನನ್ನ ಮಾರ್ಗವು ಸರಿಯಲ್ಲವೇ? ನಿಜಕ್ಕೂ ನಿಮ್ಮ ಮಾರ್ಗಗಳೇ ಸರಿಯಲ್ಲ. \v 26 ಒಬ್ಬ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಪಾಪವನ್ನು ಮಾಡಿದರೆ, ಅವನು ಅದಕ್ಕಾಗಿ ಸಾಯಬೇಕು; ಹೌದು, ಅವನು ಮಾಡಿದ ಪಾಪದಿಂದಲೇ ಅವನು ಸಾಯಬೇಕು. \v 27 ಒಬ್ಬ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ, ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು. \v 28 ಏಕೆಂದರೆ ಅವನು ತಾನು ಮಾಡಿದ ದುಷ್ಕೃತ್ಯಗಳನ್ನು ಯೋಚಿಸಿ, ಅವುಗಳನ್ನು ಬಿಟ್ಟು ತಿರುಗಿಕೊಳ್ಳುವುದರಿಂದ ಸಾಯದೆ ನಿಶ್ಚಯವಾಗಿ ಬದುಕುವನು. \v 29 ಆದರೆ ಇಸ್ರಾಯೇಲ್ ಜನರು, ‘ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಎನ್ನುತ್ತಾರೆ. ಇಸ್ರಾಯೇಲ್ ಜನರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಅನೀತಿಯ ಮಾರ್ಗಗಳಲ್ಲವೇ? \p \v 30 “ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ. \v 31 ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ? \v 32 ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ. \c 19 \s1 ಇಸ್ರಾಯೇಲಿನ ರಾಜಕುಮಾರರಿಗಾಗಿ ಶೋಕಗೀತ \p \v 1 “ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ, \v 2 ಹೀಗೆ ಹೇಳು: \q1 “ ‘ಇಗೋ, ನಿನ್ನ ತಾಯಿ, \q2 ಸಿಂಹಗಳ ಮಧ್ಯೆ ಸಿಂಹಿಣಿ, \q1 ತನ್ನ ಮರಿಗಳನ್ನು ಸಾಕಿ, \q2 ಯುವ ಸಿಂಹಗಳ ನಡುವೆ ವಾಸಿಸಿತು. \q1 \v 3 ಅವಳೂ ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು, \q2 ಇದು ಪ್ರಾಯದ ಸಿಂಹವಾಯಿತು. \q1 ಇದು ಬೇಟೆಯನ್ನು ಕಲಿತು, \q2 ಮನುಷ್ಯರನ್ನು ನುಂಗಿಬಿಟ್ಟಿತು. \q1 \v 4 ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು, \q2 ಅವರ ಗುಂಡಿಯಲ್ಲಿ ಇದನ್ನು ಹಿಡಿದುಕೊಂಡರು. \q1 ಸಂಕೋಲೆಗಳಿಂದ ಬಂಧಿಸಿ, \q2 ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು. \b \q1 \v 5 “ ‘ಆಗ ಅವಳು ಅದನ್ನು ನೋಡಿ ತನ್ನ \q2 ನಿರೀಕ್ಷೆ ಕಳೆದುಕೊಂಡೆನೆಂದು \q1 ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು, \q2 ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು. \q1 \v 6 ಅದೂ ಸಿಂಹಗಳ ನಡುವೆ ತಿರುಗಾಡಿ, \q2 ಪ್ರಾಯದ ಸಿಂಹವಾಗಿ \q1 ಬೇಟೆಯನ್ನು ಕಲಿತು, \q2 ಮನುಷ್ಯರನ್ನು ನುಂಗಿಬಿಟ್ಟಿತು. \q1 \v 7 ಅವರ ಅರಮನೆಗಳನ್ನು ಹಾಳುಮಾಡಿತು, \q2 ಅವರ ನಗರಗಳನ್ನೂ ನಾಶಮಾಡಿತು, \q1 ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, \q2 ಅದರಲ್ಲಿದ್ದ ಎಲ್ಲರೂ ದಂಗಾದವು. \q1 \v 8 ಆಗ ಜನಾಂಗಗಳು ಸುತ್ತಲಿನ ಪ್ರಾಂತಗಳೊಳಗಿಂದ ಕೂಡಿಬಂದು, \q2 ಅದಕ್ಕೆ ವಿರೋಧವಾಗಿ ನಿಂತು, \q1 ಅದರ ಮೇಲೆ ಬಲೆಯನ್ನೊಡ್ಡಿದರು, \q2 ಆಗ ಅದು ಅವರ ಗುಂಡಿಯಲ್ಲಿ ಸಿಕ್ಕಿಬಿದ್ದಿತು. \q1 \v 9 ಅದಕ್ಕೆ ಸಂಕೋಲೆಗಳನ್ನು ತೊಡಿಸಿ, \q2 ಪಂಜರದಲ್ಲಿ ಹಾಕಿ, ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. \q1 ಅದರ ಶಬ್ದವು ಇನ್ನು ಮೇಲೆ \q2 ಇಸ್ರಾಯೇಲಿನ ಪರ್ವತಗಳ ಮೇಲೆ ಕೇಳಿಸದಂತೆ \q2 ಅದನ್ನು ಕೋಟೆಯೊಳಗೆ ಸೇರಿಸಿದರು. \b \q1 \v 10 “ ‘ನಿನ್ನ ತಾಯಿ ನೀರಿನ ಬಳಿಯಲ್ಲಿ \q2 ನೆಟ್ಟ ದ್ರಾಕ್ಷಿ ಗಿಡದ ಹಾಗೆ ಇದ್ದಾಳೆ. \q1 ಅದು ಸಮೃದ್ಧಿಯಾದ ನೀರಾವರಿಯಿಂದ \q2 ಫಲವುಳ್ಳದ್ದಾಗಿಯೂ ಇದೆ. \q1 \v 11 ಆಳುವವರ ರಾಜದಂಡಗಳಿಗೆ \q2 ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ. \q1 ಅದರ ಉದ್ದವು \q2 ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ. \q1 ಹಾಗೆಯೇ ಅದು ಬಹು ಕೊಂಬೆಗಳ ಮಧ್ಯದಲ್ಲಿ \q2 ಎತ್ತರವಾಗಿ ಕಾಣಬರುತ್ತಿದೆ. \q1 \v 12 ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು \q2 ನೆಲಕ್ಕೆ ಬಿಸಾಡಿದರು. \q1 ಪೂರ್ವದಿಕ್ಕಿನ ಗಾಳಿಯು \q2 ಅದರ ಫಲವನ್ನು ಒಣಗಿಸಿತು. \q1 ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. \q2 ಬೆಂಕಿಯು ಅವುಗಳನ್ನು ಸುಟ್ಟುಹಾಕಿತು. \q1 \v 13 ಈಗ ಅದು ಮರುಭೂಮಿಯಲ್ಲಿ ಒಣಗಿ, \q2 ನೀರಿಲ್ಲದಂಥ ಪ್ರದೇಶದಲ್ಲಿ ನೆಡಲಾಗಿದೆ. \q1 \v 14 ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು, \q2 ಅದರಲ್ಲಿ ಫಲವನ್ನು ತಿಂದುಬಿಟ್ಟಿದೆ. \q1 ಅದರಲ್ಲಿ ಆಳುವುದಕ್ಕೆ ರಾಜದಂಡಕ್ಕಾಗಿ \q2 ತಕ್ಕ ಬಲವುಳ್ಳ ಬಳ್ಳಿಯು ಈಗ ಇಲ್ಲ.’ \m ಇದು ಪ್ರಲಾಪವಾಗಿದೆ. ಪ್ರಲಾಪಕ್ಕಾಗಿಯೇ ಇದೆ.” \c 20 \s1 ತಿರುಗಿಬೀಳುವ ಇಸ್ರಾಯೇಲಿನ ಶುದ್ಧೀಕರಣ \p \v 1 ಏಳನೆಯ ವರ್ಷದ, ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವ ದೇವರ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತುಕೊಂಡರು. \p \v 2 ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 3 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ \p \v 4 “ನೀನು ಅವರಿಗೆ ನ್ಯಾಯತೀರಿಸುವೆಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸುವೆಯೋ? ಹಾಗಾದರೆ ಅವರ ಪಿತೃಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು. \v 5 ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇಸ್ರಾಯೇಲನ್ನು ಆಯ್ದುಕೊಂಡ ದಿವಸದಲ್ಲಿ ಯಾಕೋಬನ ವಂಶದವರಿಗೆ ನನ್ನ ಕೈಯೆತ್ತಿ, “ನಿಮ್ಮ ಸಾರ್ವಭೌಮ ಯೆಹೋವ ದೇವರು ನಾನೇ” ಎಂದು ಈಜಿಪ್ಟ್ ದೇಶದಲ್ಲಿ ಅವರಿಗೆ ಹೇಳಿದೆನು. \v 6 ನಾನು ಅವರಿಗೆ ಪ್ರಮಾಣಮಾಡಿ ಈಜಿಪ್ಟ್ ದೇಶದಿಂದ ಹೊರಗೆ ತಂದು, ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ದೇಶಕ್ಕೆ ಅವರನ್ನು ಆ ದಿವಸದಲ್ಲಿ ಕರೆತಂದೆನು. \v 7 ಆಮೇಲೆ ನಾನು ಅವರಿಗೆ, “ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳ ಮುಂದೆ ಅಸಹ್ಯವಾದವುಗಳನ್ನು ಬಿಸಾಡಿ ಬಿಡಿರಿ. ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನಾಗಿರುವೆನು.” \p \v 8 “ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು. \v 9 ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು. \v 10 ಆದ್ದರಿಂದ ನಾನು ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆತಂದು, ಮರುಭೂಮಿಯೊಳಗೆ ಅವರನ್ನು ಬರಮಾಡಿದೆನು. \v 11 ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು. \v 12 ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ, ಅವರಿಗೂ ಗುರುತಾಗಿರುವುದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು. \p \v 13 “ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು. \v 14 ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು. \v 15 ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು. \v 16 ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ವಿಶ್ರಾಂತಿಯ ದಿನಗಳನ್ನು ಅಪವಿತ್ರ ಮಾಡಿದ್ದರು. \v 17 ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು. ನಾನು ಅವರನ್ನು ಮರುಭೂಮಿಯಲ್ಲಿ ಅಂತ್ಯಗೊಳಿಸಲಿಲ್ಲ. \v 18 ಮರುಭೂಮಿಯಲ್ಲಿ ನಾನು ಅವರ ಮಕ್ಕಳಿಗೆ ಹೇಳಿದ್ದೇನೆಂದರೆ, “ನೀವು ನಿಮ್ಮ ತಂದೆಗಳ ನಿಯಮಗಳನ್ನು ಅನುಸರಿಸಬೇಡಿರಿ, ಅವರ ನ್ಯಾಯಗಳನ್ನು ಕೈಕೊಳ್ಳಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಮಾಡಿಕೊಳ್ಳಬೇಡಿರಿ. \v 19 ನಾನೇ ಯೆಹೋವ ದೇವರೂ ನಿಮ್ಮ ದೇವರೂ ಆಗಿದ್ದೇನೆ. ನನ್ನ ನಿಯಮಗಳಲ್ಲೇ ನಡೆಯಿರಿ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಕೈಗೊಂಡು ಅವುಗಳನ್ನೇ ಮಾಡಿರಿ. \v 20 ನನ್ನ ಸಬ್ಬತ್ ದಿನಗಳನ್ನು ಪರಿಶುದ್ಧ ಮಾಡಿರಿ, ನಾನೇ ನಿಮ್ಮ ದೇವರಾದ ಯೆಹೋವ ದೇವರು ಎಂದು ಅವು ನಿಮಗೂ ನನಗೂ, ನೀವು ತಿಳಿಯುವ ಹಾಗೆ ಗುರುತುಗಳಾಗಿರುವುವು.” \p \v 21 “ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು. \v 22 ಆದರೂ ನಾನು ನನ್ನ ಕೈಯನ್ನು ಹಿಂತೆಗೆದು, ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ, ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು. \v 23 ನಾನು ಅವರನ್ನು ಇತರ ಜನಾಂಗಗಳಲ್ಲಿ ಚದರಿಸುತ್ತೇನೆಂದೂ, ದೇಶಗಳಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಅವರ ಮೇಲೆ ಕೈಯೆತ್ತಿ ಪ್ರಮಾಣಮಾಡಿದೆನು. \v 24 ಏಕೆಂದರೆ ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದರು. ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು. \v 25 ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ, ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು. \v 26 ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿದುಕೊಳ್ಳುವರು.’ \p \v 27 “ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡಿ ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನಗೆ ವಿರುದ್ಧವಾಗಿ ಬಹಳ ಅಪರಾಧಮಾಡಿದ್ದರಲ್ಲಿಯೂ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು. \v 28 ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು. \v 29 ಆಗ ನಾನು ಅವರಿಗೆ ಹೇಳಿದ್ದೇನೆಂದರೆ: ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದವರೆಗೂ ಬಾಮಾ\f + \fr 20:29 \fr*\fq ಬಾಮಾ \fq*\ft ಇದರ ಅರ್ಥ \ft*\fqa ಉನ್ನತ ಪೂಜಾಸ್ಥಳ\fqa*\f* ಎಂದು ಕರೆಯುವರು.’ ” \s1 ಇಸ್ರಾಯೇಲಿನ ಪುನಸ್ಥಾಪನೆ \p \v 30 “ಆದ್ದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದ ವಿಗ್ರಹಗಳ ಹಿಂದೆ ಹೋಗುತ್ತೀರೋ? \v 31 ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 32 “ ‘ “ನಾವು ಇತರ ಜನಾಂಗಗಳ ಹಾಗೆ ಮತ್ತು ಇತರ ದೇಶಗಳವರ ಹಾಗೆ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ನೆರವೇರದು.” \v 33 ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡೆಸುತ್ತೇನೆ. \v 34 ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ, ನಿಮ್ಮನ್ನು ಜನರೊಳಗಿಂದ ಹೊರತಂದು ನೀವು ಚದರಿಹೋಗಿರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸುವೆನು. \v 35 ನಿಮ್ಮನ್ನು ಜನರಿರುವ ಮರುಭೂಮಿಯೊಳಗೆ ತಂದು, ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ನ್ಯಾಯತೀರ್ಪು ಮಾಡುವೆನು. \v 36 ಅದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಈಜಿಪ್ಟ್ ದೇಶದ ಮರುಭೂಮಿಯಲ್ಲಿ ನ್ಯಾಯತೀರ್ಪು ಮಾಡಿದೆನು. ಈಗಲೂ ನಿಮ್ಮ ಸಂಗಡ ನ್ಯಾಯತೀರ್ಪು ಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 37 ನೀವು ನನ್ನ ಕೋಲಿನ ಕೆಳಗೆ ನಡೆಯುವಾಗ, ನನ್ನ ಗಮನವು ನಿಮ್ಮ ಮೇಲೆ ಇರುತ್ತದೆ ಮತ್ತು ನಾನು ನಿಮ್ಮನ್ನು ಒಡಂಬಡಿಕೆಗೆ ತರುತ್ತೇನೆ. \v 38 ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ. \p \v 39 “ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ. \v 40 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು. \v 41 ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು. \v 42 ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ. \v 43 ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ. \v 44 ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳ ಪ್ರಕಾರವಲ್ಲ, ನಿಮ್ಮ ದುಷ್ಕೃತ್ಯಗಳ ಪ್ರಕಾರವಲ್ಲ, ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” \s1 ದಕ್ಷಿಣಕ್ಕೆ ವಿರೋಧವಾದ ಪ್ರವಾದನೆ \p \v 45 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 46 “ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು. \v 47 ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು. \v 48 ಯೆಹೋವ ದೇವರಾದ ನಾನೇ ಅದನ್ನು ಹಚ್ಚಿದೆನೆಂದು ಪ್ರತಿಯೊಬ್ಬರೂ ತಿಳಿದುಕೊಳ್ಳುವರು, ಅದು ಆರಿಹೋಗುವುದಿಲ್ಲ.’ ” \p \v 49 ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು. \c 21 \s1 ಬಾಬಿಲೋನಿನ, ಯೆಹೋವ ದೇವರ ಖಡ್ಗ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 2 “ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ, \v 3 ‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು. \v 4 ಆಮೇಲೆ ನಾನು ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವುದರಿಂದ ನನ್ನ ಖಡ್ಗವು ದಕ್ಷಿಣದಿಂದ ಮೊದಲುಗೊಂಡು ಉತ್ತರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆಯನ್ನು ಬಿಟ್ಟು ಹೋಗುವುದು. \v 5 ಆಗ ಯೆಹೋವ ದೇವರಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹೊರಗೆ ತೆಗೆದೆನೆಂದು ಜನರೆಲ್ಲರಿಗೂ ತಿಳಿಯುವುದು, ಅದು ಮತ್ತೆ ತಿರುಗಿ ಬರುವುದೇ ಇಲ್ಲ.’ \p \v 6 “ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು. \v 7 ‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” \p \v 8 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 9 “ಮನುಷ್ಯಪುತ್ರನೇ, ಪ್ರವಾದಿಸಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು: \q1 “ ‘ಆ ಒಂದು ಖಡ್ಗವು ಹದಮಾಡಲಾಗಿದೆ; \q2 ಮೆರುಗೂ ಸಹ ಮಾಡಲಾಗಿದೆ. \q1 \v 10 ಸಂಹರಿಸಲು ಸಾಣೆಹಿಡಿದಿದೆ; \q2 ಮಿಂಚುವಂತೆ ಮಸೆಯಲಾಗಿದೆ. \p “ ‘ಹಾಗಾದರೆ ನನ್ನ ಮಗ ಯೆಹೂದದ ರಾಜದಂಡದಲ್ಲಿ ನಾವು ಸಂತೋಷ ಪಡಬಹುದೋ? ಅಂಥ ಪ್ರತಿಯೊಂದು ಬೆತ್ತವನ್ನೂ ಖಡ್ಗವು ತಿರಸ್ಕರಿಸುತ್ತದೆ. \q1 \v 11 “ ‘ಖಡ್ಗವು ಕೈಯಲ್ಲಿ ಅದು ಹಿಡಿಯಲಾಗುವ ಹಾಗೆ \q2 ಮಸೆಯಲು ಕೊಡಲಾಗಿದೆ. \q1 ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಖಡ್ಗಕ್ಕೆ ಹದವನ್ನೂ, \q2 ಸಾಣೆಯನ್ನೂ ಮಾಡಲಾಗಿದೆ. \q1 \v 12 ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. \q2 ಏಕೆಂದರೆ ಅದು ನನ್ನ ಜನರ ಮೇಲೆಯೂ, \q2 ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. \q1 ಖಡ್ಗದ ಮುಖಾಂತರ ಅಂಜಿಕೆಯು \q2 ನನ್ನ ಜನರ ಮೇಲೆ ಬರುವುದು. \q1 ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ. \p \v 13 “ ‘ಪರಿಶೋಧನೆಯು ಖಂಡಿತವಾಗಿ ಬರುವುದಿಲ್ಲ. ಖಡ್ಗವು ತಿರಸ್ಕರಿಸುವ ಯೆಹೂದದ ರಾಜದಂಡವು ಮುಂದುವರಿಯದಿದ್ದರೆ ಹೇಗೆ? ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ \q1 \v 14 “ಆದ್ದರಿಂದ ನೀನು ಮನುಷ್ಯಪುತ್ರನೇ, \q2 ಕೈಗೆ ಕೈತಟ್ಟಿ ಪ್ರವಾದಿಸು. \q1 ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, \q2 ಮೂರರಷ್ಟು ಸಂಹರಿಸಲಿ. \q1 ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ \q2 ಆ ಕೊಠಡಿಗಳಲ್ಲಿ ಸೇರುವವರನ್ನು \q2 ಆ ದೊಡ್ಡ ಖಡ್ಗ ಸಂಹರಿಸುವುದು. \q1 \v 15 ಅವರ ಹೃದಯವು ಕರಗುವ ಹಾಗೆಯೂ, \q2 ಅವರ ಎಲ್ಲಾ ಬಾಗಿಲುಗಳಲ್ಲಿ \q1 ಪತನವು ಹೆಚ್ಚಾಗುವ ಹಾಗೆಯೂ \q2 ಖಡ್ಗದ ಮೊನೆ ಇಟ್ಟಿದ್ದೇನೆ. \q1 ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ \q2 ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ. \q1 \v 16 ಖಡ್ಗವೇ ಬಲಕ್ಕೆ ಹೊಡೆ, \q2 ಎಡಕ್ಕೆ ಹೊಡೆ, \q2 ನಿನ್ನ ಅಲಗು ತಿರುಗಿದ ಕಡೆಗೆಲ್ಲಾ ಹೊಡೆ. \q1 \v 17 ನಾನೂ ಸಹ ಕೈತಟ್ಟಿ \q2 ನನ್ನ ರೋಷವನ್ನು ತೀರಿಸಿಕೊಳ್ಳುವೆನು, \q1 ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.” \p \v 18 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 19 “ಮನುಷ್ಯಪುತ್ರನೇ, ಬಾಬಿಲೋನಿನ ಅರಸನ ಖಡ್ಗವು ಬರುವ ಹಾಗೆ ನೀನು ಎರಡು ಮಾರ್ಗಗಳನ್ನು ನೇಮಿಸಿಕೋ. ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟ ಹಾಗಿರಲಿ. ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು. \v 20 ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು. \v 21 ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ. \v 22 ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ. \v 23 ಆದರೆ ಅವರು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ನಂಬಿಕೆ ಇಟ್ಟಿದ್ದರಿಂದ, ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವುದು. ಆದರೆ ಅವನು ಅವರ ಅಕ್ರಮವನ್ನು ಜ್ಞಾಪಕಪಡಿಸಿ, ಅವರನ್ನು ಸೆರೆಯಾಗಿ ಒಯ್ಯುವನು. \p \v 24 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಿಮ್ಮ ದ್ರೋಹಗಳು ಪ್ರಕಟವಾಗಿ, ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ, ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಗೆ ಸಿಕ್ಕಿ ಬೀಳುವಿರಿ. \p \v 25 “ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು. \v 26 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಮೊದಲಿದ್ದ ಹಾಗೆಯೇ ಇರುವುದಿಲ್ಲ; ತಗ್ಗಿಸಿಕೊಂಡವನನ್ನು ಹೆಚ್ಚಿಸಿ, ಹೆಚ್ಚಿಸಿಕೊಂಡವನನ್ನು ತಗ್ಗಿಸು. \v 27 ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’ \p \v 28 “ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: \q1 “ ‘ಒಂದು ಖಡ್ಗವು, ಒಂದು ಖಡ್ಗವು \q2 ಸಂಹರಿಸುವುದಕ್ಕೆ ಹಿರಿದಿದೆ, \q1 ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. \q2 ಥಳಥಳಿಸುತ್ತಾ ನುಂಗುವಹಾಗಿದೆ. \q1 \v 29 ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, \q2 ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. \q1 ಹೀಗೆ ನಿನ್ನನ್ನು ಹತರಾದ ದುಷ್ಟರ \q2 ಕುತ್ತಿಗೆಗಳ ಮೇಲೆ ತಂದಿದ್ದಾರೆ. \q1 ಅವರ ಅಂತ್ಯದಿನವು ಬಂದಿದೆ. \q2 ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ. \b \q1 \v 30 “ ‘ಖಡ್ಗವನ್ನು ಒರೆಗೆ ಸೇರಿಸು, \q2 ನೀನು ಸೃಷ್ಟಿಯಾದ ಸ್ಥಳದಲ್ಲಿಯೇ \q1 ನಿನ್ನ ಪೂರ್ವಜರ ನಾಡಿನಲ್ಲಿಯೇ \q2 ನಿನಗೆ ನ್ಯಾಯತೀರಿಸುವೆನು. \q1 \v 31 ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. \q2 ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ \q1 ನಾಶಪಡಿಸುವುದರಲ್ಲಿ ಗಟ್ಟಿಗರಾದ \q2 ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು. \q1 \v 32 ನೀನು ಅಗ್ನಿಗೆ ಆಹುತಿಯಾಗುವೆ. \q2 ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು. \q1 ಇನ್ನು ಮೇಲೆ ನೀನು ಜ್ಞಾಪಕಕ್ಕೆ ಬರುವುದಿಲ್ಲವೆಂದು, \q2 ಯೆಹೋವ ದೇವರಾದ ನಾನೇ ಹೇಳಿದ್ದೇನೆ.’ ” \c 22 \s1 ಯೆರೂಸಲೇಮಿನ ಪಾಪಗಳ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \b \p \v 2 “ಮನುಷ್ಯಪುತ್ರನೇ, ಈಗ ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ? ಹಾಗಾದರೆ ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವೆ. \v 3 ಆಮೇಲೆ ನೀನು ಹೇಳಬೇಕಾದದ್ದೇನೆಂದರೆ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪಟ್ಟಣವು ಅದರ ಮಧ್ಯದಲ್ಲಿ ಅದರ ದಂಡನೆಯ ಕಾಲ ಬರುವಂತೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧಮಾಡುವಂತೆ ತನ್ನಲ್ಲಿ ವಿಗ್ರಹ ಮಾಡಿಕೊಂಡಿದೆ. \v 4 ನೀನು ಚೆಲ್ಲಿದ ನಿನ್ನ ರಕ್ತದಿಂದ ನೀನು ಅಪರಾಧಿಯಾದೆ; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧನಾದೆ; ನಿನ್ನ ದಿನಗಳನ್ನು ಸಮೀಪಿಸಿರುವೆ; ಮತ್ತು ನಿಮ್ಮ ವರ್ಷಗಳ ಅಂತ್ಯವು ಬಂದಿದೆ. ಆದ್ದರಿಂದ ನಿನ್ನನ್ನು ಇತರ ಜನಾಂಗಗಳಿಗೆ ನಾಚಿಕೆಯಾಗಿಯೂ, ಎಲ್ಲಾ ದೇಶಗಳಿಗೂ ನಿಂದೆಯಾಗಿಯೂ ಮಾಡಿದ್ದೇನೆ. \v 5 ಕುಖ್ಯಾತ ನಗರವೇ, ಬಹಳ ತೊಂದರೆಗೊಳಗಾದವಳೇ, ನಿನ್ನನ್ನು ಹತ್ತಿರದವರೂ, ದೂರದವರೂ ಅಪಹಾಸ್ಯ ಮಾಡುವರು. \p \v 6 “ ‘ಇಸ್ರಾಯೇಲಿನ ಅರಸರು ಪ್ರತಿಯೊಬ್ಬನು ತಮ್ಮ ತಮ್ಮ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾರೆ. \v 7 ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ. \v 8 ನೀನು ನನ್ನ ಪರಿಶುದ್ಧ ಸಂಗತಿಗಳನ್ನು ತಿರಸ್ಕರಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರ ಪಡಿಸಿದ್ದಿ. \v 9 ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಚಾಡಿ ಹೇಳುವವರು ಇದ್ದಾರೆ; ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನುತ್ತಾರೆ; ನಿನ್ನಲ್ಲಿ ಅವರು ದ್ರೋಹವನ್ನು ಮಾಡಿದ್ದಾರೆ. \v 10 ನಿಮ್ಮಲ್ಲಿ ತಂದೆಯ ಹಾಸಿಗೆಯನ್ನು ಅವಮಾನಿಸುವವರು ಇದ್ದಾರೆ, ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ. \v 11 ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ಅಸಹ್ಯಕರವಾದದ್ದನ್ನು ಮಾಡಿದ್ದಾನೆ; ಮತ್ತೊಬ್ಬನು ಅತ್ಯಾಚಾರದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಮಾನಭಂಗಪಡಿಸಿದ್ದಾನೆ. \v 12 ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 13 “ ‘ಆದ್ದರಿಂದ ನೀನು ಮಾಡಿದ ಈ ದುರ್ಲಾಭದಿಂದಲೂ, ನಿನ್ನಲ್ಲಿರುವ ನಿನ್ನ ರಕ್ತಾಪರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ. \v 14 ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವುದೋ? ನಿನ್ನ ಕೈಗಳು ಬಲವಾಗಿರುವುವೋ? ಯೆಹೋವ ದೇವರಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುವೆನು. \v 15 ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು. ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು. \v 16 ಆಗ ನೀನು ಇತರ ಜನಾಂಗಗಳ ಮುಂದೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.’ ” \p \v 17 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 18 “ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ ಕಸದ ಹಾಗಾದರೂ, ಅವರೆಲ್ಲರೂ ಗುಹೆಯಲ್ಲಿರುವ ತಾಮ್ರ, ತವರ, ಕಬ್ಬಿಣದ ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಸದ ಹಾಗೆಯೂ ಇದ್ದಾರೆ. \v 19 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೆಲ್ಲರೂ ಕೆಟ್ಟವರಾಗಿರುವುದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ. \v 20 ಅವರು ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒರೆಯೊಳಗೆ ಕೂಡಿಸಿ, ಅದಕ್ಕೆ ಬೆಂಕಿಯನ್ನು ಊದಿ ಕರಗಿಸುವರೋ, ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿ ಮತ್ತು ನನ್ನ ರೋಷದಲ್ಲಿ ಒಟ್ಟುಗೂಡಿಸಿ ನಿಮ್ಮನ್ನು ನಗರದೊಳಗೆ ಹಾಕಿ ಕರಗಿಸುತ್ತೇನೆ. \v 21 ನಾನು ನಿಮ್ಮನ್ನು ಕೂಡಿಸಿ, ನನ್ನ ರೋಷದ ಬೆಂಕಿಯನ್ನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿಹೋಗುವಿರಿ. \v 22 ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ. ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದವರು ಯೆಹೋವ ದೇವರಾದ ನಾನೇ ಎಂದು ನಿಮಗೆ ತಿಳಿಯುತ್ತದೆ.’ ” \p \v 23 ಯೆಹೋವ ದೇವರ ವಾಕ್ಯವು ಮತ್ತೆ ನನಗೆ ಬಂದಿತು, \v 24 “ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು, ‘ದೇವರ ರೌದ್ರದ ದಿವಸದಲ್ಲಿ ನೀನು ಶುದ್ಧಿಯಾಗದ ದೇಶವಾಗಿಯೂ, ಮಳೆಯಿಲ್ಲದ ದೇಶವಾಗಿಯೂ ಇರುವೆ.’ \v 25 ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ. \v 26 ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ. \v 27 ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ. \v 28 ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಯೆಹೋವ ದೇವರು ಮಾತನಾಡದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ’ ಎಂದು ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ. \v 29 ದೇಶದ ಜನರು ಬಲಾತ್ಕಾರದಿಂದ ಸೂರೆಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ, ದರಿದ್ರರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯ ಕೊಡದೆ ವಿದೇಶಿಯರನ್ನು ಬಲಾತ್ಕಾರ ಪಡಿಸಿದ್ದಾರೆ. \p \v 30 “ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ. \v 31 ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” \c 23 \s1 ಇಬ್ಬರು ವೇಶ್ಯೆ ಸಹೋದರಿಯರು \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 2 “ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು; \v 3 ಅವರು ಈಜಿಪ್ಟಿನಲ್ಲಿ ವೇಶ್ಯೆ ಆದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲಾದವು; ಅವುಗಳ ತೊಟ್ಟುಗಳು ನಸುಕಲಾದವು. \v 4 ಅವರುಗಳ ಹೆಸರುಗಳೇನೆಂದರೆ ಒಹೊಲ ಎಂಬವಳು ದೊಡ್ಡವಳು. ಒಹೊಲೀಬ ಎಂಬವಳು ಚಿಕ್ಕವಳು. ಅವರು ನನ್ನವರಾಗಿದ್ದು ಪುತ್ರಪುತ್ರಿಯರನ್ನು ಹೆತ್ತರು; ಅವರ ಹೆಸರುಗಳಾದ ಒಹೊಲ ಎಂಬುದು ಸಮಾರ್ಯವು ಮತ್ತು ಒಹೊಲೀಬ ಎಂಬುದು ಯೆರೂಸಲೇಮು ಆಗಿದೆ. \p \v 5 “ಒಹೊಲಳು ಇನ್ನು ನನ್ನ ವಶವಾಗಿರುವಾಗಲೇ ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು ತನ್ನ ನೆರೆಯವರಾದ ಅಸ್ಸೀರಿಯದವರನ್ನು, \v 6 ಅವರೆಲ್ಲರೂ ನೀಲಿ ಬಣ್ಣದಿಂದ ಹೊದಿಕೆಯಾದ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಯೌವನಸ್ಥರೂ, ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು ಮೋಹಿಸಿದಳು. \v 7 ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳಾಗಿದ್ದರು. ಅವಳು ಯಾರನ್ನು ಮೋಹಿಸಿದಳೋ, ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರ ಪಡಿಸಿಕೊಂಡಳು. \v 8 ಅವಳು ಈಜಿಪ್ಟಿನಲ್ಲಿ ಇದ್ದಾಗಿನಿಂದಲೂ ವ್ಯಭಿಚಾರವನ್ನು ಬಿಡಲಿಲ್ಲ. ಅವಳ ಯೌವನದಲ್ಲಿ ಪುರುಷರು ಅವಳ ಸಂಗಡ ಮಲಗಿದರು. ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ಅವಳ ಮೇಲೆ ವ್ಯಭಿಚಾರ ನಡೆಸಿದರು. \p \v 9 “ಆದ್ದರಿಂದ ನಾನು ಅವಳನ್ನು ಮೋಹಿಸಿದ ಅವಳ ಪ್ರಿಯರ ಕೈಗೆ ಅಸ್ಸೀರಿಯರ ಕೈಗೆ ಒಪ್ಪಿಸಿದೆನು. \v 10 ಅವರು ಅವಳ ಬೆತ್ತಲೆತನವನ್ನು ಬಯಲುಪಡಿಸಿದರು ಮತ್ತು ಅವಳ ಪುತ್ರರನ್ನೂ, ಅವಳ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು. \p \v 11 “ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ, ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆಸಿದಳು. \v 12 ಅವಳು ಯೋಧರಾದ ಅಸ್ಸೀರಿಯರನ್ನೂ, ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಉಡುಪು ಧರಿಸಿ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರಾಗಿಯೂ, ಅಪೇಕ್ಷಿಸತಕ್ಕ ಯೌವನಸ್ಥರಾಗಿಯೂ ಇರುವಂಥವರನ್ನು ಮೋಹಿಸಿದಳು. \v 13 ಅವಳೂ ಅಪವಿತ್ರಳಾದದ್ದನ್ನು ಕಂಡೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದರು. \p \v 14 “ಅವಳು ತನ್ನ ವ್ಯಭಿಚಾರತ್ವವನ್ನು ಇನ್ನೂ ಹೆಚ್ಚಿಸಿದಳು. ಗೋಡೆಯ ಮೇಲೆ ಕೆಂಪು ಬಣ್ಣದಿಂದ ಚಿತ್ರಿಸಲಾದ ಕಸ್ದೀಯರ ಪುರುಷರನ್ನು ನೋಡಿದಳು. ಅವರು, \v 15 ಚಿತ್ರದಲ್ಲಿನ ಪುರುಷರು ತಮ್ಮ ಸೊಂಟದ ಸುತ್ತಲೂ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು ಮತ್ತು ತಲೆಯ ಮೇಲೆ ಬೀಸುವ ಪೇಟಗಳನ್ನು ಹೊಂದಿದ್ದರು; ಅವರೆಲ್ಲರೂ ಬಾಬಿಲೋನ್ ನಿವಾಸಿಗಳಂತೆ, ಬಾಬಿಲೋನಿನ ರಥದ ಅಧಿಕಾರಿಗಳಂತೆ ಕಾಣುತ್ತಿದ್ದರು. \v 16 ಅವಳ ಕಣ್ಣುಗಳಿಂದ ಅವರನ್ನು ನೋಡಿದಾಗ ತಕ್ಷಣವೇ ಅವರನ್ನು ಮೋಹಿಸಿದಳು. ಅವರ ಬಳಿಗೆ ಕಸ್ದೀಯಕ್ಕೆ\f + \fr 23:16 \fr*\fq ಕಸ್ದೀಯ \fq*\ft ಅಥವಾ \ft*\fqa ಬಾಬಿಲೋನ್\fqa*\f* ದೂತರನ್ನು ಕಳುಹಿಸಿದಳು. \v 17 ಆಗ ಬಾಬಿಲೋನಿನವರು ಅವರ ಪ್ರೀತಿಯ ಹಾಸಿಗೆಯ ಮೇಲೆ ಬಂದು ಆಕೆಯನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು. ಅವಳು ಅವರಿಂದ ಅಪವಿತ್ರಳಾದ ಮೇಲೆ ಅವರ ಬಗ್ಗೆ ಇವಳಿಗೇ ಜಿಗುಪ್ಸೆ ಹುಟ್ಟಿತು. \v 18 ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನ್ನು ಬಯಲು ಪಡಿಸಿಕೊಂಡಾಗ, ತನ್ನ ಜಿಗುಪ್ಸೆ ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. \v 19 ಆದರೂ ಅವಳು ಈಜಿಪ್ಟ್ ದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿದಳು. \v 20 ಕತ್ತೆಗಳಂತೆ ಬೆದೆಯುಳ್ಳವರು ಕುದುರೆಗಳಂತೆ ದಾಟುವವರು ಆದ ತನ್ನ ಪ್ರಿಯರನ್ನು ಮೋಹಿಸಿದಳು. \v 21 ಹೀಗೆ ಈಜಿಪ್ಟಿನಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ. \p \v 22 “ಆದ್ದರಿಂದ ಒಹೊಲೀಬಳೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಯಾರಿಂದ ನಿನ್ನ ಮನಸ್ಸಿನಲ್ಲಿ ಜಿಗುಪ್ಸೆ ಹುಟ್ಟಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ವಿರೋಧವಾಗಿ ತರುತ್ತೇನೆ. \v 23 ಬಾಬಿಲೋನಿನವರು ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಎಲ್ಲಾ ಅಸ್ಸೀರಿಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿ ಹೊಂದಿದವರೂ ಎಲ್ಲರೂ ಕುದುರೆಗಳ ಮೇಲೆ ಬೀಳುವಂತೆ ಮಾಡುವೆನು. \v 24 ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು. \v 25 ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು. ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು. ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದುಹಾಕು; ನಿನ್ನಲ್ಲಿ ಉಳಿದವರು ಖಡ್ಗದಿಂದ ಬೀಳುವರು. ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು. \v 26 ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು. \v 27 ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಈಜಿಪ್ಟನ್ನು ಜ್ಞಾಪಕಕ್ಕೆ ತರದೇ ಇರುವೆ. \p \v 28 “ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಕುಂದಿಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ. \v 29 ಅವರು ನಿನ್ನ ವಿಷಯದಲ್ಲಿ ಹಗೆತೀರಿಸಿಕೊಳ್ಳುವರು. ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವುದು. \v 30 ನೀನು ಇತರ ಜನಾಂಗಗಳ ಹಿಂದೆ ಹೋಗಿ ವ್ಯಭಿಚಾರ ಮಾಡಿದ್ದರಿಂದಲೂ ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಿನಗೆ ಮಾಡುತ್ತೇನೆ. \v 31 ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ. \p \v 32 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ನೀನು ನಿನ್ನ ಸಹೋದರಿಯ \q2 ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವೆ. \q1 ನೀನು ಹಾಸ್ಯಕ್ಕೂ ನಿಂದೆಗೂ ಗುರಿಯಾಗುವೆ. \q2 ಅದೇ ನಿನಗೆ ಹೆಚ್ಚಾಗುವುದು. \q1 \v 33 ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ \q2 ವಿಸ್ಮಯವೂ ನಾಶವೂ ಆಗುವುದು. \q2 ನೀನು ಮತ್ತಿನಿಂದಲೂ ದುಃಖದಿಂದಲೂ ತುಂಬಿರುವೆ. \q1 \v 34 ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು \q2 ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ \q2 ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವೆ; \m ಏಕೆಂದರೆ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ. \b \p \v 35 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.” \p \v 36 ಯೆಹೋವ ದೇವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸುವೆಯೋ? ಹೌದು, ಅವರ ಅಸಹ್ಯಕರ ಕೃತ್ಯಗಳನ್ನು ಅವರಿಗೆ ತಿಳಿಸು. \v 37 ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಇದೆ: ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ. ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ. \v 38 ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರಪಡಿಸಿ ನನ್ನ ವಿಶ್ರಾಂತಿಯ ದಿನಗಳನ್ನು ಕೆಡಿಸಿದ್ದಾರೆ. \v 39 ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದುಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವುದಕ್ಕೆ ಬಂದರು. ಅವರು ನನ್ನ ಆಲಯದ ಒಳಗೆ ಹೀಗೆ ಮಾಡಿದ್ದಾರೆ. \p \v 40 “ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರಿಗೆ ಕರೆಯ ಕಳುಹಿಸಿದ್ದಾರೆ. ಅವರು ಬಂದಾಗ ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನ ಆಭರಣಗಳಿಂದ ಅಲಂಕರಿಸಿಕೊಂಡೆ. \v 41 ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ನನ್ನ ಧೂಪವನ್ನು ನನ್ನ ಎಣ್ಣೆಯನ್ನು ಇಟ್ಟಿದ್ದ ಮೇಜನ್ನು ಸಿದ್ಧಮಾಡಿದೆ. \p \v 42 “ಅವಳ ಸಂಗಡ ವಿನೋದಪ್ರಿಯ ಸಮೂಹದ ಶಬ್ದವು ಇತ್ತು. ಸಾಧಾರಣ ಮನುಷ್ಯರ ಸಂಗಡ ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಆ ಮಹಿಳೆ ಮತ್ತು ಅವಳ ಸಹೋದರಿಯ ಕೈಗಳ ಮೇಲೆ ಕಡಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು. \v 43 ಆಮೇಲೆ ನಾನು ಅವಳಿಗೆ ಹೇಳಿದ್ದೇನೆಂದರೆ, ‘ವ್ಯಭಿಚಾರದಿಂದ ಸವೆದು ಹೋದವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?’ \v 44 ಆದರೂ ವ್ಯಭಿಚಾರಿಣಿಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು. \v 45 ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ. \p \v 46 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ, ಅವರನ್ನು ಸೂರೆಗೂ ಹೆದರಿಕೆಗೂ ಒಪ್ಪಿಸುವೆನು. \v 47 ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಖಡ್ಗಗಳಿಂದ ಕೊಯ್ದು ಅವರ ಪುತ್ರರನ್ನೂ ಪುತ್ರಿಯರನ್ನೂ ಕೊಂದುಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟುಬಿಡುವರು. \p \v 48 “ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕರ್ಮದ ಪ್ರಕಾರ ಮಾಡದಿರಲೆಂದು ಅವರಿಗೆ ಬೋಧಿಸಿ ದೇಶದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು. \v 49 ನಿಮ್ಮ ದುಷ್ಕರ್ಮದ ಫಲವನ್ನು ನೀವೇ ಅನುಭವಿಸುವಂತೆ ಮಾಡುವೆ. ನೀವು ನಿಮ್ಮ ವಿಗ್ರಹಗಳ ಆರಾಧನೆಯಿಂದಾದ ಪಾಪಗಳನ್ನು ಹೊರುವಿರಿ. ಆಗ ಸಾರ್ವಭೌಮ ಯೆಹೋವ ದೇವರು ನಾನೇ ಎಂದು ತಿಳಿದುಕೊಳ್ಳುವಿರಿ.” \c 24 \s1 ಅಡುಗೆಯ ಪಾತ್ರೆಯಾಗಿ ಯೆರೂಸಲೇಮ \p \v 1 ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 2 “ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ. ಅದೇ ದಿನದಲ್ಲಿ ಬಾಬಿಲೋನಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ. \v 3 ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ಹಂಡೆಯನ್ನು ಒಲೆಯ ಮೇಲಿಡು, \q2 ಮೇಲಿಟ್ಟು ಅದರಲ್ಲಿ ನೀರನ್ನು ಸುರಿ. \q1 \v 4 ಮಾಂಸದ ತುಂಡುಗಳನ್ನೂ ತೊಡೆಯನ್ನೂ ಹೆಗಲನ್ನೂ \q2 ಎಲ್ಲಾ ಒಳ್ಳೆಯ ತುಂಡುಗಳನ್ನೂ ಒಟ್ಟಿಗೆ ಸೇರಿಸಿ \q1 ಒಳ್ಳೆಯ ಎಲುಬುಗಳ ಜೊತೆ ಅದನ್ನು ತುಂಬಿಸು. \q2 \v 5 ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೊಂಡು \q1 ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು \q2 ಅದನ್ನು ಚೆನ್ನಾಗಿ ಕುದಿಸು; \q2 ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ. \b \m \v 6 “ ‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! \q2 ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ \q2 ಆ ಹಂಡೆಗೆ ಕಷ್ಟ! \q1 ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. \q2 ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ. \b \q1 \v 7 “ ‘ಅದರ ರಕ್ತವು ಅದರ ಮಧ್ಯದಲ್ಲಿದೆ; \q2 ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ. \q1 ಧೂಳು ಮುಚ್ಚುವ ಹಾಗೆ \q2 ನೆಲದ ಮೇಲೆ ಚೆಲ್ಲಲಿಲ್ಲ. \q1 \v 8 ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ ರೋಷವನ್ನೆಬ್ಬಿಸುವ ಹಾಗೆ \q2 ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ \q2 ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ. \b \m \v 9 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ಆ ರಕ್ತಾಪರಾಧವುಳ್ಳ ಪಟ್ಟಣಕ್ಕೆ ಕಷ್ಟ! \q2 ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. \q1 \v 10 ಬಹಳ ಸೌದೆ ಹಾಕಿ, \q2 ಬೆಂಕಿಯನ್ನು ಹೆಚ್ಚಿಸಿ, \q1 ಮಾಂಸವನ್ನು ಚೆನ್ನಾಗಿ ಬೇಯಿಸು; \q2 ಮಸಾಲೆ ಚೆನ್ನಾಗಿ ಇರಲಿ, \q2 ಎಲುಬುಗಳು ಸುಡಲಿ. \q1 \v 11 ಆಮೇಲೆ ಹಂಡೆಯು ಕಾದು \q2 ತಾಮ್ರವು ಕೆಂಪಾಗಿ, \q1 ಒಳಗಣ ಕಲ್ಮಶವು ಕರಗಿ ಕಿಲುಬು ಇಲ್ಲವಾಗುವಂತೆ \q2 ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು. \q1 \v 12 ಅದರ ಕಲ್ಮಶವು ನನ್ನಲ್ಲಿ ಆಯಾಸವನ್ನುಂಟು ಮಾಡೀತೆ ಹೊರತು \q2 ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ. \q2 ಅದು ಬೆಂಕಿಯಿಂದಲೂ ನೀಗಲಿಲ್ಲ. \p \v 13 “ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ. \b \p \v 14 “ ‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” \s1 ಯೆಹೆಜ್ಕೇಲನ ಹೆಂಡತಿಯು ಸತ್ತುಹೋದದ್ದು \p \v 15 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 16 “ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ. \v 17 ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.” \p \v 18 ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನರೊಂದಿಗೆ ಮಾತನಾಡಿದೆನು. ಸಂಜೆ ನನ್ನ ಹೆಂಡತಿ ಸತ್ತಳು. ಮರುದಿನ ಬೆಳಿಗ್ಗೆ ನಾನು ಆಜ್ಞಾಪಿಸಿದಂತೆ ಮಾಡಿದೆನು. \p \v 19 ಆಗ ಜನರು, “ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ? ಯಾಕೆ ಹೀಗೆ ವರ್ತಿಸುತ್ತಿದ್ದೀಯಾ?” ಎಂದು ಕೇಳಿದರು. \p \v 20 ಆದ್ದರಿಂದ ನಾನು ಅವರಿಗೆ ಹೀಗೆ ಹೇಳಿದೆನು, “ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 21 ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು. \v 22 ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳುವುದಿಲ್ಲ ಅಥವಾ ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನುವುದಿಲ್ಲ. \v 23 ನಿಮ್ಮ ಮುಂಡಾಸಗಳು ನಿಮ್ಮ ತಲೆಯ ಮೇಲೆಯೂ ನಿಮ್ಮ ಪಾದರಕ್ಷೆಯು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವುವು. ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರಳುವಿರಿ. \v 24 ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವು ಮಾಡುವಿರಿ. ಈ ರೀತಿ ಆದಾಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ತಿಳಿಯುವಿರಿ.’ \p \v 25 “ಮನುಷ್ಯಪುತ್ರನೇ, ಅವರ ಮಹತ್ತರ ಸಂತೋಷವನ್ನೂ ಅವರ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವುದನ್ನೂ ಅವರ ಪುತ್ರಪುತ್ರಿಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ ದಿನದಲ್ಲಿ, \v 26 ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ? \v 27 ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ, ಆಗ ನಾನೇ ಯೆಹೋವ ದೇವರೆಂದು ತಿಳಿಯುವರು.” \c 25 \s1 ಅಮ್ಮೋನನ ವಿಷಯವಾದ ಪ್ರವಾದನೆ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 2 “ಮನುಷ್ಯಪುತ್ರನೇ, ನೀನು ಅಮ್ಮೋನ್ಯರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು. \v 3 ಅಮ್ಮೋನ್ಯರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನೀವು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಪಡಿಸಿದಾಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ನೀವು “ಆಹಾ!” ಅಂದದ್ದರಿಂದ \v 4 ನಾನು ನಿಮ್ಮನ್ನು ಪೂರ್ವದೇಶದ ಜನರಿಗೆ ಸೊತ್ತಾಗಿ ಕೊಡುತ್ತೇನೆ, ಅವರು ತಮ್ಮ ಗುಡಾರಗಳನ್ನು ನಿನ್ನಲ್ಲಿ ನೆಲೆಗೊಳಿಸುವರು. ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿಮ್ಮ ಫಲವನ್ನು ತಿಂದು ನಿಮ್ಮ ಹಾಲನ್ನೇ ಕುಡಿಯುವರು. \v 5 ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ. \v 6 ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ, \v 7 ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಇತರ ಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಾಂಗಗಳೊಳಗಿಂದ ನಿಮ್ಮನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನ ಹೆಸರನ್ನು ಅಳಿಸಿಬಿಡುವೆನು. ನಾನು ನಿಮ್ಮನ್ನು ನಾಶಮಾಡುವೆನು. ಆಗ ನಾನೇ ಯೆಹೋವ ದೇವರೆಂದು ತಿಳಿಯುವಿರಿ.’ ” \s1 ಮೋವಾಬಿನ ವಿರುದ್ಧ ಪ್ರವಾದನೆ \p \v 8 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು. \v 9 ಆದ್ದರಿಂದ ಇಗೋ, ದೇಶದ ವೈಭವಗಳಾದ ಮೋವಾಬಿನ ಗಡಿಯ ಪಟ್ಟಣಗಳಾದ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾತಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು. \v 10 ಆ ಅಮ್ಮೋನನ್ನೂ ಪೂರ್ವದವರೆಗೆ ಸೊತ್ತಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವರಿಗೆ ಸೊತ್ತಾಗಿ ಕೊಡುವೆನು. \v 11 ಮೋವಾಬ್ಯರಿಗೆ ನಾನು ಶಿಕ್ಷೆಯನ್ನು ವಿಧಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ” \s1 ಎದೋಮಿಗೆ ವಿರೋಧವಾದ ಪ್ರವಾದನೆ \p \v 12 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಏಕೆಂದರೆ ಎದೋಮು ಯೆಹೂದನ ಮನೆತನದವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿದ್ದರಿಂದ ಅತಿ ಅಪರಾಧಮಾಡಿ ಅವರಲ್ಲಿ ಸೇಡು ತೀರಿಸಿಕೊಂಡಿತು. \v 13 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು. \v 14 ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿತೀರಿಸುವೆನು, ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು, ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು, ಇದು ಸಾರ್ವಭೌಮ ಯೆಹೋವ ದೇವರ ನುಡಿ.’ ” \s1 ಫಿಲಿಷ್ಟಿಯಕ್ಕೆ ವಿರೋಧವಾದ ಪ್ರವಾದನೆ \p \v 15 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ತೀರಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಯೆಹೂದವನ್ನು ಕೆಡಿಸಿದರು. \v 16 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಫಿಲಿಷ್ಟಿಯರ ವಿರುದ್ಧ ನನ್ನ ಕೈಯನ್ನು ಚಾಚುವೆನು. ಕೆರೇತಿಯರನ್ನು ಕಡಿದುಬಿಡುವೆನು: ಉಳಿದವರನ್ನು ಸಮುದ್ರ ತೀರದಲ್ಲಿ ನಾಶಮಾಡುವೆನು. \v 17 ನಾನು ದೊಡ್ಡ ಪ್ರತಿದಂಡನೆಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ಮುಯ್ಯಿತೀರಿಸುವೆನು. ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ” \c 26 \s1 ಟೈರಿಗೆ ವಿರೋಧವಾದ ಪ್ರವಾದನೆ \p \v 1 ಹನ್ನೊಂದನೆಯ ವರ್ಷ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು. \v 2 “ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’ \v 3 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಟೈರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವುದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು. \v 4 ಅವರು ಟೈರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ಧೂಳನ್ನು ಒರಸಿ ಅದನ್ನು ಬೋಳು ಬಂಡೆಯಂತೆ ಮಾಡುವೆನು. \v 5 ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅದು ಜನಾಂಗಗಳಿಗೆ ಕೊಳ್ಳೆಯಾಗಿರುವುದು, \v 6 ಮತ್ತು ಪ್ರಧಾನ ಭೂಮಿಯಲ್ಲಿರುವ ಅದರ ಪುತ್ರಿಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವ ದೇವರೆಂದು ಎಲ್ಲರಿಗೂ ತಿಳಿಯುವುದು. \p \v 7 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ. \v 8 ಅವನು ಪ್ರಧಾನ ಭೂಮಿಯಲ್ಲಿನ ನಿನ್ನ ಪುತ್ರಿಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಗುರಾಣಿಯನ್ನು ಎತ್ತುವನು. \v 9 ತನ್ನ ಯುದ್ಧ ಯಂತ್ರಗಳನ್ನು ನಿನ್ನ ಗೋಡೆಗಳಿಗೆ ತಾಕಿಸುವನು. ತನ್ನ ಆಯುಧಗಳಿಂದ ನಿನ್ನ ಗೋಪುರಗಳನ್ನು ಕೆಡವಿಬಿಡುವನು. \v 10 ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಸುಕುವದು, ಒಡಕು ಬಿದ್ದ ಕೋಟೆಯೊಳಗೆ ಶತ್ರುಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲುಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವುವು. \v 11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ನಿನ್ನ ಜನರನ್ನು ಖಡ್ಗದಿಂದ ಕೊಲ್ಲುವನು; ನಿನ್ನ ಬಲವಾದ ಕಂಬಗಳು ನೆಲಕ್ಕೆ ಬೀಳುವುವು. \v 12 ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು. \v 13 ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ. \v 14 ನಿನ್ನನ್ನು ಬೋಳು ಬಂಡೆಯಂತೆ ಮಾಡುವೆನು. ನೀನು ಅಲ್ಲಿ ಬಲೆಹಾಸುವ ಸ್ಥಳವಾಗುವೆ. ನೀನು ಪುನಃ ಕಟ್ಟಲಾಗದೆ ಹೋಗುವಿ. ಯೆಹೋವ ದೇವರಾದ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 15 “ಸಾರ್ವಭೌಮ ಯೆಹೋವ ದೇವರು ಟೈರಿಗೆ ಹೀಗೆ ಹೇಳುತ್ತಾರೆ: ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ಸಮುದ್ರತೀರದ ಪ್ರದೇಶಗಳು ನಡುಗುವುದಿಲ್ಲವೇ? \v 16 ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು. \v 17 ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ: \q1 “ ‘ಸಮುದ್ರಗಳ ಬಳಿಯಲ್ಲಿ ವಾಸಿಸಿದವಳೇ, ಪ್ರಸಿದ್ಧ ಪಟ್ಟಣವೇ, \q2 ಸಮುದ್ರದ ಮೇಲೆ ಬಲಗೊಂಡ ನಗರವೇ, \q1 ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, \q2 ಅಯ್ಯೋ, ಹೇಗೆ ನಾಶವಾದೆ? \q1 \v 18 ಈಗ ನೀನು ಬೀಳುವ ದಿವಸದಲ್ಲಿ \q2 ಸಮುದ್ರ ತೀರಗಳು ನಡುಗುವುವು. \q1 ಹೌದು, ನೀನು ಅಳಿದು ಹೋದುದ್ದಕ್ಕೆ \q2 ಸಮುದ್ರ ತೀರಗಳು ಗಾಬರಿಯಾಗುವುವು.’ \p \v 19 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧ ಜಲರಾಶಿಯನ್ನು ನಿನ್ನ ಮೇಲೆ ಬರಮಾಡುವೆನು. \v 20 ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು. \v 21 ನಾನೂ ನಿನ್ನನ್ನು ಭಯಂಕರವಾದ ಅಂತ್ಯಕ್ಕೆ ತರುವೆನು. ಇನ್ನು ಮೇಲೆ ನೀನು ಇರುವುದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡುಕಿದರೂ ನೀನು ಸಿಗುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” \c 27 \s1 ಟೈರಿನ ಬಗ್ಗೆ ಪ್ರಲಾಪನೆ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 2 “ಮನುಷ್ಯಪುತ್ರನೇ, ಈಗ ಟೈರಿನ ಬಗ್ಗೆ ನೀನು ಗೋಳಾಟವನ್ನೆತ್ತು; \v 3 ಟೈರಿಗೆ ಹೇಳು, ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳ ಜನರ ನಡುವೆ ವ್ಯಾಪಾರವನ್ನು ನಡೆಸುವವಳೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, \q1 “ ‘ಟೈರ್ ನಗರಿಯೇ, \q2 “ನಾನು ಪೂರ್ಣ ಸೌಂದರ್ಯವತಿ,” ಎಂದು ನೀನು ಅಂದುಕೊಂಡಿದ್ದೀಯಲ್ಲಾ! \q1 \v 4 ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ. \q2 ನಿನ್ನನ್ನು ಕಟ್ಟಿದವರು ನಿನ್ನನ್ನು ಸರ್ವಾಂಗ ಸುಂದರಿಯನ್ನಾಗಿಸಿದ್ದಾರೆ. \q1 \v 5 ಸೆನೀರಿನ ತುರಾಯಿ ಮರಗಳಿಂದ \q2 ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿದ್ದಾರೆ. \q1 ನಿನಗೆ ಸ್ತಂಭಗಳನ್ನು ಮಾಡುವುದಕ್ಕೆ \q2 ಲೆಬನೋನಿನಿಂದ ದೇವದಾರುಗಳನ್ನು ತಂದಿದ್ದಾರೆ. \q1 \v 6 ನಿನ್ನ ಹುಟ್ಟುಗೋಲನ್ನು \q2 ಬಾಷಾನಿನ ಅಲ್ಲೋನ್ ವೃಕ್ಷದಿಂದ ಮಾಡಿದ್ದಾರೆ, \q1 ಕಿತ್ತೀಮ್ ದ್ವೀಪಗಳಿಂದ ತಂದ ಹಲಗೆಗಳಿಂದ \q2 ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, \q2 ಅದನ್ನು ದಂತದಿಂದ ಶೃಂಗರಿಸಿದ್ದಾರೆ. \q1 \v 7 ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು \q2 ಮತ್ತು ಅದು ನಿನ್ನ ಧ್ವಜವಾಗಿತ್ತು. \q1 ನಿಮ್ಮ ಮೇಲ್ಕಟ್ಟುಗಳು ಎಲೀಷ ಕರಾವಳಿಯಿಂದ \q2 ನೀಲಿ ಮತ್ತು ನೇರಳೆ ಬಣ್ಣದ್ದಾಗಿದ್ದವು. \q1 \v 8 ಸೀದೋನಿನ ಮತ್ತು ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವವರಾಗಿದ್ದಾರೆ. \q2 ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು. \q1 \v 9 ಗೆಬಾಲಿನ ಹಿರಿಯರೂ ಅದರ ಜ್ಞಾನಿಗಳೂ \q2 ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. \q1 ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ \q2 ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು. \b \q1 \v 10 “ ‘ಪಾರಸಿಯರೂ ಲೂದ್ಯರೂ ಹಾಗೂ ಪೂಟ್ಯರೂ \q2 ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. \q1 ಗುರಾಣಿಯನ್ನೂ ಶಿರಸ್ತ್ರಾಣವನ್ನೂ ನಿನ್ನ ಗೋಡೆಯಲ್ಲಿ ತೂಗಿಸಿದರು. \q2 ಇವರು ನಿನಗೆ ಮಹತ್ತನ್ನು ಕೊಟ್ಟರು. \q1 \v 11 ಅರ್ವಾದಿನವರು ಮತ್ತು ಹೆಲೆಕರು \q2 ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಇದ್ದರು. \q1 ಗಮ್ಮಾದ್ಯರು ನಿನ್ನ ಗೋಪುರಗಳಲ್ಲಿ ಕಾವಲಾಗಿದ್ದರು. \q2 ತಮ್ಮ ಖೇಡ್ಯಗಳನ್ನು ಸುತ್ತಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ \q2 ಇವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು. \p \v 12 “ ‘ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು. \p \v 13 “ ‘ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ನರಪ್ರಾಣಿಗಳನ್ನೂ ಕಂಚಿನ ಪಾತ್ರೆಗಳನ್ನೂ ನಿನ್ನ ಬಜಾರಿನಲ್ಲಿ ಮಾರಾಟಕ್ಕಿಟ್ಟರು. \p \v 14 “ ‘ತೋಗರ್ಮದ ಮನೆತನದವರು ಕುದುರೆಗಳಿಂದಲೂ ಕುದುರೆ ಸವಾರಿಗಳಿಂದಲೂ ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. \p \v 15 “ ‘ದೆದಾನಿನವರು\f + \fr 27:15 \fr*\fq ದೆದಾನಿನವರು \fq*\ft ಕೆಲವು ಪ್ರತಿಗಳಲ್ಲಿ \ft*\fqa ರೋಡ್ಸ\fqa*\f* ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದ ಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು. \p \v 16 “ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು\f + \fr 27:16 \fr*\fq ಅರಾಮ್ಯರು \fq*\ft ಕೆಲವು ಪ್ರತಿಗಳಲ್ಲಿ \ft*\fqa ಎದೋಮ್ಯರು\fqa*\f* ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. \p \v 17 “ ‘ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಮಿಠಾಯಿ, ಜೇನು, ಎಣ್ಣೆ ಮತ್ತು ಸುಗಂಧ ತೈಲದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು. \p \v 18 “ ‘ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು. \v 19 ವೆದಾನ್ ಮತ್ತು ಯಾವಾನ್ ಊರುಗಳು ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ, ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಬಜಾರಿನಲ್ಲಿ ಇದ್ದವು. \p \v 20 “ ‘ದೆದಾನ್ ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು. \p \v 21 “ ‘ಅರೇಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ಗ್ರಾಹಕರಾಗಿದ್ದರು. ಕುರಿಮರಿಗಳಿಂದಲೂ ಹೋತಗಳಿಂದಲೂ ನಿನ್ನೊಡನೆ ವ್ಯಾಪಾರಮಾಡಿದರು. \p \v 22 “ ‘ಶೆಬದವರು, ರಾಮದವರು ನಿನ್ನ ಕಡೆಯ ವರ್ತಕರಾಗಿ ಎಲ್ಲಾ ಶ್ರೇಷ್ಠವಾದ ಸುಗಂಧ ದ್ರವ್ಯದಿಂದಲೂ ಎಲ್ಲಾ ಬೆಲೆಯುಳ್ಳ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. \p \v 23 “ ‘ಹಾರಾನ್, ಕನ್ನೆ, ಏದೆನ್, ಶೆಬ, ಅಸ್ಸೀರಿಯ ಮತ್ತು ಕಿಲ್ಮದ್ ನಿನ್ನ ವ್ಯಾಪಾರಿಗಳಾಗಿದ್ದರು. \v 24 ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಎಂದರೆ ಸುಂದರವಾದ ಬಟ್ಟೆಗಳು, ನೀಲಿಬಟ್ಟೆಗಳು, ಕಸೂತಿಯ ಕೆಲಸ ಮತ್ತು ಹಗ್ಗಗಳಿಂದ ಬಲವಾಗಿ ಬಿಗಿದ ಬಣ್ಣಬಣ್ಣದ ವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಕಳುಹಿಸುತ್ತಿದ್ದರು. \q1 \v 25 “ ‘ತಾರ್ಷೀಷಿನ ಹಡಗುಗಳು \q2 ನಿನ್ನ ಮಾರುಕಟ್ಟೆಗೆ ಸರಕುಗಳನ್ನು ತರುತ್ತಿದ್ದವು. \q1 ಹೀಗೆ ನೀನು ತುಂಬಿದ್ದೀ ಮತ್ತು \q2 ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ. \q1 \v 26 ಹುಟ್ಟು ಹಾಕುವವರು ನಿನ್ನನ್ನು ಸಿಕ್ಕಿಸಿದ್ದಾರೆ. \q2 ಪೂರ್ವದಿಕ್ಕಿನ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ. \q1 \v 27 ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ \q2 ನಿನ್ನ ನಾವಿಕರೂ ನಿನ್ನ ಅಂಬಿಗರೂ ನಿನ್ನ ಒಡಕುಗಳನ್ನು ಮುಚ್ಚುವವರೂ \q1 ನಿನ್ನ ವ್ಯಾಪಾರಿಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ \q2 ಅಂತೂ ನಿನ್ನೊಳಗೆ ಸೇರಿಕೊಂಡಿರುವ \q1 ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ \q2 ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು. \q1 \v 28 ನಿನ್ನ ನಾವಿಕರ ಕೂಗಾಟಕ್ಕೆ, \q2 ಸಮುದ್ರತೀರದ ಪ್ರದೇಶಗಳು ನಡುಗುವುವು. \q1 \v 29 ಹುಟ್ಟುಹಾಕುವ ಅಂಬಿಗರೆಲ್ಲರೂ \q2 ಸಮುದ್ರದ ಸಕಲ ನಾವಿಕರೂ \q1 ತಮ್ಮ ತಮ್ಮ ಹಡಗುಗಳಿಂದಿಳಿದು \q2 ನೆಲದ ಮೇಲೆ ನಿಂತುಕೊಂಡು, \q1 \v 30 ನಿನ್ನ ನಿಮಿತ್ತ ಧ್ವನಿಗೈದು ದುಃಖದಿಂದ, \q2 ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿ, \q1 \v 31 ನಿನಗಾಗಿ ತಲೆ ಬೋಳಿಸಿಕೊಂಡು \q2 ಗೋಣಿಚೀಲವನ್ನು ಸುತ್ತಿಕೊಂಡು \q1 ಮನೋವ್ಯಥೆಯಿಂದ ಗೋಳಾಡಿ \q2 ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು. \q1 \v 32 ಅವರು ಗೋಳಾಡುತ್ತಾ \q2 ನಿನ್ನ ವಿಷಯವಾಗಿ ಶೋಕಗೀತೆಯನ್ನೆತ್ತಿ ಹೀಗೆ ಪ್ರಲಾಪಿಸುವರು; \q1 “ಸಮುದ್ರದ ನಡುವೆ ಹಾಳಾಗಿರುವ \q2 ಟೈರ್‌ನಂಥ ಪಟ್ಟಣ ಯಾವುದು?” \q1 \v 33 ನಿನ್ನ ಸರಕು ಸಮುದ್ರದಿಂದ ಹೊರಟಾಗ \q2 ಅನೇಕ ಜನರಿಗೆ ತೃಪ್ತಿಪಡಿಸಿದೆ. \q1 ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ \q2 ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದೆ. \q1 \v 34 ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, \q2 ನಿನ್ನ ಸರಕುಗಳೂ \q1 ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ \q2 ಆಗಾಧಜಲದಲ್ಲಿ ಮುಳುಗಿ ಹೋದರು. \q1 \v 35 ದ್ವೀಪದ ನಿವಾಸಿಗಳೆಲ್ಲಾ \q2 ನಿನ್ನ ಸ್ಥಿತಿಗೆ ಭಯಭೀತರಾಗಿದ್ದಾರೆ. \q1 ಅವರ ಅರಸರು ಬಹಳವಾಗಿ ಭಯಪಟ್ಟಿದ್ದಾರೆ. \q2 ರಾಜರು ನಡುಗಿ ಭೀತಿಗೊಂಡರು. \q1 \v 36 ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸೀಳಿಹಾಕುತ್ತಾರೆ. \q2 ನೀನು ಸಂಪೂರ್ಣ ಧ್ವಂಸವಾಗಿ \q2 ಇನ್ನೆಂದಿಗೂ ಇಲ್ಲದಂತಾಗಿರುವೆ.’ ” \c 28 \s1 ಟೈರ್ ಊರಿನ ಅರಸನ ವಿರೋಧ ಪ್ರವಾದನೆ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 2 “ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ನೀನು ಗರ್ವದಿಂದ, \q2 “ನಾನು ಒಬ್ಬ ದೇವರು \q1 ದೇವರ ಸ್ಥಾನದಲ್ಲಿ \q2 ಸಮುದ್ರಗಳ ಮಧ್ಯದಲ್ಲಿ \q1 ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. \q2 ಆದರೆ ನೀನು ದೇವರಲ್ಲ, ಮನುಷ್ಯನೇ, \q1 ಆದರೂ ನಿನ್ನನ್ನು ನೀನೇ \q2 ದೇವರಿಗೆ ಸಮನೆಂದು ಭಾವಿಸಿದೆ. \q1 \v 3 ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ? \q2 ನಿಮ್ಮಿಂದ ಮರೆಮಾಡಲು ಯಾವುದೇ ರಹಸ್ಯವಿಲ್ಲ. \q1 \v 4 ನಿನ್ನ ಜ್ಞಾನದಿಂದಲೂ ನಿನ್ನ ವಿವೇಕದಿಂದಲೂ \q2 ನಿನಗೆ ಐಶ್ವರ್ಯವನ್ನು ಗಳಿಸಿಕೊಂಡಿರುವೆ. \q1 ಚಿನ್ನವನ್ನೂ ಬೆಳ್ಳಿಯನ್ನೂ \q2 ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ. \q1 \v 5 ವ್ಯಾಪಾರದಲ್ಲಿ ನಿನ್ನ ಅಧಿಕ ಚಾತುರ್ಯದಿಂದಲೂ \q2 ನಿನ್ನ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. \q1 ನಿನ್ನ ಆಸ್ತಿಯ ನಿಮಿತ್ತ \q2 ನಿನ್ನ ಹೃದಯ ಗರ್ವಪಟ್ಟಿದೆ. \p \v 6 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ನೀನು ದೇವರಂತೆ ಬುದ್ಧಿವಂತನು \q2 ಎಂದು ಭಾವಿಸಿಕೊಂಡಿರುವೆ; \q1 \v 7 ಆದ್ದರಿಂದ ಭಯಂಕರ ಜನಾಂಗದವರಾದ ವಿದೇಶಿಯರನ್ನು \q2 ನಾನು ನಿನ್ನ ಮೇಲೆ ಬೀಳಮಾಡುವೆನು. \q1 ಅವರು ನಿನ್ನ ಸೌಂದರ್ಯ ಮತ್ತು ಜ್ಞಾನದ ವಿರುದ್ಧವಾಗಿ ಖಡ್ಗವನ್ನು ಹಿರಿಯುವರು; \q2 ನಿನ್ನ ಹೊಳೆಯುವ ವೈಭವವನ್ನು ಕೆಡಿಸುವರು. \q1 \v 8 ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು. \q2 ಸಮುದ್ರಗಳ ಮಧ್ಯದಲ್ಲಿ \q2 ಭಯಂಕರವಾದ ಮರಣದ ಹಾಗೆ ನೀನು ಸಾಯುವೆ. \q1 \v 9 ನಿನ್ನನ್ನು ಕೊಲ್ಲಲು ಬರುವವನ ಮುಂದೆ \q2 ಇನ್ನು, “ನಾನು ದೇವರು,” ಎಂದು ಹೇಳುವೆಯೋ? \q1 ನಿನ್ನನ್ನು ಕೊಲ್ಲುವವನ ಕೈಯಲ್ಲಿ \q2 ನೀನು ದೇವರಲ್ಲ ನರಪ್ರಾಣಿಯೇ; \q1 \v 10 ನೀನು ವಿದೇಶಿಯರ ಕೈಯಿಂದ \q2 ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ. \m ಏಕೆಂದರೆ ನಾನೇ ಇದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.’ ” \b \p \v 11 ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದಿತು, \v 12 “ಮನುಷ್ಯಪುತ್ರನೇ, ಟೈರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ನೀನು ಸರ್ವಸುಲಕ್ಷಣ ಶಿರೋಮಣಿ. ಸಂಪೂರ್ಣಜ್ಞಾನಿ, \q2 ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ. \q1 \v 13 ದೇವರ ತೋಟವಾದ \q2 ಏದೆನಿನಲ್ಲಿ ನೀನಿದ್ದೆ. \q2 ಮಾಣಿಕ್ಯ, ಪುಷ್ಯರಾಗ, ಪಚ್ಚೆ, \q2 ಪೀತರತ್ನ, ವಜ್ರ, ವೈಡೂರ್ಯ, \q2 ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ \q1 ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. \q2 ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು \q1 ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು. \q1 \v 14 ನೀನು ರಕ್ಷಕ ಕೆರೂಬಿಯಾಗಿ ಅಭಿಷೇಕಹೊಂದಿದೆ. \q2 ನಾನೇ ನಿನ್ನನ್ನು ನೇಮಿಸಿದ್ದೇನೆ. \q1 ನೀನು ದೇವರ ಪರಿಶುದ್ಧ ಪರ್ವತದ ಮೇಲೆ ಇದ್ದೆ; \q2 ನೀನು ಉರಿಯುತ್ತಿರುವ ಕಲ್ಲುಗಳ ನಡುವೆ ನಡೆದೆ. \q1 \v 15 ನಿನ್ನ ಸೃಷ್ಟಿಯ ದಿನದಿಂದ \q2 ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ \q2 ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು. \q1 \v 16 ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ \q2 ನಿನ್ನಲ್ಲಿ ಹಿಂಸಾಚಾರವು ತುಂಬಿ \q2 ನೀನು ಪಾಪಿಯಾದೆ; \q1 ಆದ್ದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ತಳ್ಳಿಬಿಟ್ಟೆನು. \q2 ಓ ರಕ್ಷಕ ಕೆರೂಬಿಯೇ, \q2 ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು. \q1 \v 17 ನೀನು ನಿನ್ನ ಸೌಂದರ್ಯದ ನಿಮಿತ್ತ \q2 ಉಬ್ಬಿದ ಮನಸ್ಸುಳ್ಳವನಾದೆ. \q1 ನಿನ್ನ ಮೆರೆತದ ನಿಮಿತ್ತ \q2 ನಿನ್ನ ಬುದ್ಧಿಯನ್ನು ಕಳೆದುಕೊಂಡೆ. \q1 ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ \q2 ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು. \q1 \v 18 ನಿನ್ನ ಅಪಾರವಾದ ಪಾಪಗಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ \q2 ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದೆ. \q1 ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, \q2 ಅದು ನಿನ್ನನ್ನು ನುಂಗಿಬಿಟ್ಟಿತು. \q1 ನೋಡುವವರೆಲ್ಲರ ಮುಂದೆ \q2 ನಿನ್ನನ್ನು ಬೂದಿಮಾಡುವೆನು. \q1 \v 19 ನಿನ್ನನ್ನು ಅರಿತ ಜನರೆಲ್ಲರೂ \q2 ನಿನ್ನ ವಿಷಯದಲ್ಲಿ ಭಯಗೊಳ್ಳುವರು. \q1 ನೀನು ಸಂಪೂರ್ಣ ಭೀತಿಗೊಳಗಾಗಿ \q2 ಇನ್ನೆಂದಿಗೂ ಇಲ್ಲದಂತಾಗುವೆ.’ ” \s1 ಸೀದೋನಿನ ವಿಷಯವಾದ ಪ್ರವಾದನೆ \p \v 20 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 21 “ಮನುಷ್ಯಪುತ್ರನೇ, ನೀನು ಸೀದೋನಿಗೆ ಅಭಿಮುಖವಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು. \v 22 ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. \q2 ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. \q1 ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, \q2 ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು. \q1 \v 23 ನಾನು ಅದರಲ್ಲಿ ವ್ಯಾಧಿಯನ್ನೂ \q2 ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು, \q1 ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ \q2 ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು, \q1 ಆಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿದುಬರುವುದು. \p \v 24 “ ‘ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು, ಹೀನೈಸುವ ನೆರೆಹೊರೆಯವರೆಂಬ ಮುಳ್ಳಿನ ಬಾಧೆ ಇನ್ನಾಗದು. ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು. \p \v 25 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು. \v 26 ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ” \c 29 \s1 ಈಜಿಪ್ಟಿನ ವಿರೋಧವಾದ ಪ್ರವಾದನೆ \s2 ಫರೋಹನ ವಿರೋಧ ತೀರ್ಪು \p \v 1 ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹನ್ನೆರಡನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 2 “ನರಪುತ್ರನೇ, ನೀನು ಈಜಿಪ್ಟಿನ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನಿಗೂ ಸಮಸ್ತ ಈಜಿಪ್ಟಿಗೂ ವಿರೋಧವಾಗಿ ಪ್ರವಾದಿಸು. \v 3 ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ಈಜಿಪ್ಟಿನ ಅರಸನಾದ ಫರೋಹನೇ, \q2 ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, \q1 ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, \q2 ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ. \q1 \v 4 ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, \q2 ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ \q1 ನಿನ್ನನ್ನು ನಿನ್ನ ನದಿಯೊಳಗಿಂದ ಮೇಲೆ ಎಳೆದು \q2 ನಿನ್ನ ಮೀನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. \q1 \v 5 ನಿನ್ನನ್ನೂ ನಿನ್ನ ನದಿಗಳ ಮೀನುಗಳನ್ನೂ ಅರಣ್ಯದಲ್ಲಿ ಹಾಕುವೆನು. \q2 ನೀನು ಬಯಲುಗಳ ಮೇಲೆ ಬಿದ್ದಿರುವೆ; \q1 ನಿನ್ನನ್ನು ಯಾರೂ ಹೊರುವುದೂ ಇಲ್ಲ, ಸೇರಿಸುವುದೂ ಇಲ್ಲ. \q2 ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು. \q1 ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ \q2 ನಿನ್ನನ್ನು ಆಹಾರವನ್ನಾಗಿ ಕೊಟ್ಟಿದ್ದೇನೆ. \m \v 6 ಆಗ ಎಲ್ಲಾ ಈಜಿಪ್ಟಿನ ನಿವಾಸಿಗಳು ನಾನೇ ಯೆಹೋವನೆಂದು ತಿಳಿಯುವರು. \b \p “ ‘ಅವರು ಇಸ್ರಾಯೇಲರ ಮನೆತನದವರಿಗೆ ದಂಟಿನ ಊರುಗೋಲಾಗಿದ್ದರು. \v 7 ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದೆ; ಅವರು ನಿನ್ನನ್ನು ಆದರಿಸಿಕೊಂಡಾಗ ನೀನು ಮುರಿದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ. \p \v 8 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾನೆ: ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ. \v 9 ನೀನು, “ಆ ನೈಲ್ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು,” ಹೇಳಿಕೊಂಡದ್ದರಿಂದ, \p “ ‘ಈಜಿಪ್ಟ್ ದೇಶವು ಹಾಳು ಮರುಭೂಮಿಯಾಗುವುದು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು. \v 10 ಆದ್ದರಿಂದ ಇಗೋ, ನಾನು ನಿನಗೂ ನಿನ್ನ ನದಿಗಳಿಗೂ ವಿರುದ್ಧವಾಗಿದ್ದೇನೆ. ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ. \v 11 ಯಾವ ಮನುಷ್ಯನ ಪಾದವಾದರೂ ಅದರಲ್ಲಿ ಹಾದು ಹೋಗುವುದಿಲ್ಲ. ಮೃಗಗಳ ಪಾದವೂ ಅದರಲ್ಲಿ ಹಾದು ಹೋಗುವುದಿಲ್ಲ ಅಥವಾ ನಲವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವುದಿಲ್ಲ. \v 12 ನಾನು ಈಜಿಪ್ಟ್ ದೇಶವನ್ನು ಹಾಳುಬಿದ್ದಿರುವ ದೇಶಗಳಲ್ಲಿ ಸೇರಿಸುವೆನು. ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ನಡುವೆ ನಲವತ್ತು ವರ್ಷಗಳು ಹಾಳಾಗಿರುವುವು. ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದುರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು. \p \v 13 “ ‘ಆದರೂ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಲವತ್ತು ವರ್ಷಗಳ ಕೊನೆಯಲ್ಲಿ ನಾನು ಈಜಿಪ್ಟಿನವರನ್ನು ಚದುರಿರುವ ರಾಷ್ಟ್ರಗಳಿಂದ ಒಟ್ಟುಗೂಡಿಸುವೆನು. \v 14 ನಾನು ಈಜಿಪ್ಟಿನವರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸ್ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡುವೆನು. ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು. \v 15 ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು. \v 16 ಇನ್ನು ಅದು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಇವರು ಅವರ ಕಡೆಗೆ ನೋಡಿದಾಗ ಪಾಪವನ್ನು ಜ್ಞಾಪಕಕ್ಕೆ ತರುವರು. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ” \p \v 17 ಇಪ್ಪತ್ತೇಳನೆಯ ವರ್ಷದಲ್ಲಿ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 18 “ಮನುಷ್ಯಪುತ್ರನೇ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರನಿಂದ ಪ್ರತಿಫಲವೇನೂ ದೊರೆಯಲಿಲ್ಲ. \v 19 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಅದರ ಕೊಳ್ಳೆಯನ್ನೂ ಅದರ ಸುಲಿಗೆಯನ್ನೂ ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವುದು. \v 20 ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಈಜಿಪ್ಟ್ ದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಸೇವೆಮಾಡಿದ್ದಾರೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 21 “ಆ ದಿನದಲ್ಲಿ ನಾನು ಇಸ್ರಾಯೇಲರ ಮನೆತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.” \c 30 \s1 ಈಜಿಪ್ಟ್ ಬಗ್ಗೆ ಪ್ರಲಾಪನೆ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 2 “ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ “ಅಯ್ಯೋ ಆ ದಿನ!” ಎಂದು, \q2 ಅಳುತ್ತಾ ಹೇಳಿರಿ. \q1 \v 3 ಏಕೆಂದರೆ ಆ ದಿನವು ಸಮೀಪವಾಯಿತು, \q2 ಯೆಹೋವ ದೇವರ ದಿನವು, \q1 ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. \q2 ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು. \q1 \v 4 ಖಡ್ಗವು ಈಜಿಪ್ಟಿಗೆ ವಿರುದ್ಧವಾಗಿ ಬರುವುದು. \q2 ಕೂಷ್ ಪಟ್ಟಣವು ಸಂಕಟಪಡುವುದು. \q1 ಈಜಿಪ್ಟಿನಲ್ಲಿ ಕೊಲ್ಲಲಾದವರು ಬಿದ್ದಾಗ, \q2 ಅವಳ ಸಂಪತ್ತು ಸೂರೆಯಾಗುವುದು. \q2 ಅವಳ ಅಡಿಪಾಯಗಳು ಕಿತ್ತುಹೋಗುವವು. \m \v 5 ಕೂಷ್ಯರು, ಪೂಟ್ಯರು, ಲೂದ್ಯರು, ಎಲ್ಲಾ ಅರಬ್ಬಿಯರೂ ಕೂಬ್ಯರೂ ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಅವರ ಸಂಗಡ ಖಡ್ಗದಿಂದ ಹತರಾಗುವರು. \p \v 6 “ ‘ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ಈಜಿಪ್ಟಿನ ಸಹಾಯಕರು ಬೀಳುವರು. \q2 ಅದರ ಶಕ್ತಿಯ ಮದವು ಇಳಿದುಹೋಗುವುದು. \q1 ಅಲ್ಲಿಯ ಜನರು ಮಿಗ್ದೋಲಿನಿಂದ ಸೆವೇನೆಯ ಗೋಪುರದವರೆಗೆ \q2 ಖಡ್ಗದಿಂದ ಹತರಾಗುವರು \q2 ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \q1 \v 7 ಆಗ ಅವರು ಹಾಳಾಗಿರುವ ದೇಶಗಳೊಳಗೆ \q2 ತಾವೂ ಹಾಳಾಗುವರು. \q1 ಹಾಳಾದ ಪಟ್ಟಣಗಳ ಮಧ್ಯದಲ್ಲಿ \q2 ಅದರ ಪಟ್ಟಣಗಳು ಹಾಳಾಗಿ ಇರುವುವು. \q1 \v 8 ನಾನು ಈಜಿಪ್ಟಿನಲ್ಲಿ ಬೆಂಕಿಯಿಟ್ಟ ಮೇಲೆ \q2 ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ \q2 ಅವರಿಗೆ ನಾನೇ ಯೆಹೋವ ದೇವರೆಂದು ತಿಳಿಯುವುದು. \p \v 9 “ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ. \b \p \v 10 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ : \q1 “ ‘ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ \q2 ಈಜಿಪ್ಟಿನ ಜನಸಮೂಹವನ್ನು ಕೊನೆಗಾಣಿಸುವೆನು. \q1 \v 11 ಆ ದೇಶವನ್ನು ನಾಶಪಡಿಸುವುದಕ್ಕೆ ಅವನನ್ನು \q2 ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು. \q1 ಅವರು ಈಜಿಪ್ಟಿಗೆ ವಿರೋಧವಾಗಿ ಖಡ್ಗ ಹಿರಿದು \q2 ದೇಶವನ್ನು ಹತರಾದವರಿಂದ ತುಂಬಿಸುವರು. \q1 \v 12 ಇದಲ್ಲದೆ ನಾನು ನದಿಗಳನ್ನು ಒಣಗಿಸಿ \q2 ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. \q1 ದೇಶವನ್ನೂ ಅದರಲ್ಲಿನ ಸಮಸ್ತವನ್ನೂ \q2 ವಿದೇಶಿಯರ ಕೈಯಿಂದ ನಾಶಮಾಡಿಸುವೆನು. \m ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ. \b \p \v 13 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ನಾನು ಮೂರ್ತಿಗಳನ್ನು ನಾಶಮಾಡುವೆನು. \q2 ಮತ್ತು ನೋಫಿನ\f + \fr 30:13 \fr*\fq ನೋಫಿನ \fq*\ft ಇನ್ನೊಂದು ಹೆಸರು \ft*\fqa ಮೆಂಫೀಸ್\fqa*\f* ವಿಗ್ರಹಗಳನ್ನು ಕೊನೆಗೊಳಿಸುವೆನು. \q1 ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, \q2 ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು. \q1 \v 14 ನಾನು ಪತ್ರೋಸನ್ನು\f + \fr 30:14 \fr*\fq ಪತ್ರೋಸ \fq*\ft ಅಂದರೆ \ft*\fqa ದಕ್ಷಿಣ ಈಜಿಪ್ಟ\fqa*\f* ನಾಶಮಾಡಿ, \q2 ಚೋವನ್ ಪಟ್ಟಣಕ್ಕೆ ಬೆಂಕಿಯಿಡುವೆನು. \q2 ತೆಬೆಸ್ ಪಟ್ಟಣವನ್ನು ದಂಡಿಸುವೆನು. \q1 \v 15 ಈಜಿಪ್ಟಿಗೆ ರಕ್ಷಣೆಯ ಕೋಟೆಯಾದ \q2 ಪೆಲೂಸಿಯಮ್ ಪಟ್ಟಣದ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, \q2 ತೆಬೆಸಿನ ನಿವಾಸಿಗಳನ್ನೆಲ್ಲಾ ಕಡಿದುಬಿಡುವೆನು. \q1 \v 16 ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು \q2 ಪೆಲೂಸಿಯಮ್ ಪ್ರಾಣಸಂಕಟ ಪಡುವುದು. \q1 ತೆಬೆಸವು ಬಿರುಗಾಳಿಯಿಂದ ತೆಗೆದುಕೊಳ್ಳಲಾಗುವುದು, \q2 ನೋಫಿನ ಮೇಲೆ ನಿರಂತರವಾಗಿ ಇಕ್ಕಟ್ಟು ಇರುವುದು. \q1 \v 17 ಓನಿನ\f + \fr 30:17 \fr*\fq ಓನಿನ \fq*\ft ಕೆಲವು ಪ್ರತಿಗಳಲ್ಲಿ \ft*\fqa ಅವೆನ \fqa*\fqa ಇನ್ನೊಂದು ಹೆಸರು \fqa*\fqa ಸೂರ್ಯನಗರ\fqa*\f* ಮತ್ತು ಪಿಬೇಸೆತಿನ ಯೌವನಸ್ಥರು \q2 ಖಡ್ಗದಿಂದ ಸಾಯುವರು. \q2 ಈ ಪಟ್ಟಣಗಳ ನಿವಾಸಿಗಳು ತಾವಾಗಿಯೇ ಸೆರೆಯಾಗಿ ಹೋಗುವುವು. \q1 \v 18 ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ \q2 ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. \q2 ಅದರ ಶಕ್ತಿಯ ಮದವು ಅಡಗಿಹೋಗುವುದು. \q1 ಅದನ್ನು ಮೇಘವು ಮುಚ್ಚುವುದು. \q2 ಅದರ ಪುತ್ರಿಯರು ಸೆರೆಗೆ ಹೋಗುವರು. \q1 \v 19 ಹೀಗೆ ನಾನು ಈಜಿಪ್ಟನ್ನು ದಂಡಿಸುವೆನು. \q2 ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ” \s2 ಫರೋಹನ ತೋಳುಗಳು ಮುರಿದದ್ದು \p \v 20 ಇದಲ್ಲದೆ ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ, ಏಳನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ, \v 21 “ಮನುಷ್ಯಪುತ್ರನೇ, ನಾನು ಈಜಿಪ್ಟಿನ ಅರಸನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ. ಇಗೋ, ಆ ದೇಶವನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ. \v 22 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ. \v 23 ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು. \v 24 ಬಾಬಿಲೋನಿನ ಅರಸನ ತೋಳುಗಳನ್ನು ನಾನು ಬಲಪಡಿಸುವೆನು, ಅವನ ಕೈಯಲ್ಲಿ ನನ್ನ ಖಡ್ಗವನ್ನಿಡುವೆನು. ಫರೋಹನ ತೋಳುಗಳು ಬಿದ್ದು ಹೋಗುವುವು. ಇವನು ಅವನ ಮುಂದೆ ಗಾಯ ಹೊಂದಿದವನಂತೆ ನರಳಾಡುವನು. \v 25 ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುತ್ತೇನೆ, ಆದರೆ ಫರೋಹನ ಕೈಗಳು ಬಲಹೀನವಾಗುವುವು. ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನ ಕೈಗೆ ಕೊಡುವೆನು. ಅವನು ಅದನ್ನು ಈಜಿಪ್ಟಿನ ವಿರೋಧವಾಗಿ ಪ್ರಯೋಗಿಸುವನು. ಆಗ ಅವರು ನಾನೇ ಯೆಹೋವ ದೇವರು ಎಂದು ತಿಳಿದುಕೊಳ್ಳುವರು. \v 26 ನಾನು ಈಜಿಪ್ಟಿನವರನ್ನು ಜನಾಂಗಗಳೊಗೆ ಚದುರಿಸಿ ದೇಶಗಳಲ್ಲಿ ಹರಡಿಸುತ್ತೇನೆ; ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.” \c 31 \s2 ಫರೋಹನೆಂಬ ದೊಡ್ಡ ಮರದ ಧ್ವಂಸ \p \v 1 ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 2 “ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನೊಂದಿಗೂ ಮತ್ತು ಅವನ ಸಮೂಹದೊಂದಿಗೂ ಮಾತನಾಡಿ, \q1 “ ‘ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನವಾಗಿರುವೆ? \q1 \v 3 ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ. \q2 ಅದರ ನೆರಳು ದಟ್ಟವಾಗಿದೆ, ಬಹಳ ಎತ್ತರವಾಗಿದೆ, \q2 ಅದರ ತುದಿಯು ದಟ್ಟವಾದ ಕೊಂಬೆಗಳ ನಡುವೆಯಿತ್ತು. \q1 \v 4 ಅದನ್ನು ಜಲಪ್ರವಾಹಗಳು ಬೆಳೆಸಿದವು, \q2 ಆಳವಾದ ಬುಗ್ಗೆಗಳು ಅದನ್ನು ಎತ್ತರಕ್ಕೆ ಬೆಳೆಸಿದವು. \q1 ಅವುಗಳ ತೊರೆಗಳು ಅದರ ಬುಡದ ಸುತ್ತಲೂ \q2 ಹರಿದು ತಮ್ಮ ಕಾಲುವೆಗಳನ್ನು \q2 ಹೊಲದ ಎಲ್ಲಾ ಮರಗಳಿಗೆ ಕಳುಹಿಸಿದವು. \q1 \v 5 ಆದ್ದರಿಂದ ಅದರ ಎತ್ತರವು \q2 ಬಯಲಿನ ಎಲ್ಲಾ ಮರಗಳಿಗಿಂತ ಎತ್ತರವಾಗಿತ್ತು. \q1 ಅದು ಹಬ್ಬಿದ್ದುದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ \q2 ಅದರ ಕೊಂಬೆಗಳು ಅಧಿಕವಾದವು; \q2 ಅದರ ರೆಂಬೆಗಳು ಉದ್ದವಾದವು. \q1 \v 6 ಅದರ ಕೊಂಬೆಗಳಲ್ಲಿ ಆಕಾಶದ \q2 ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು. \q1 ಅದರ ರೆಂಬೆಗಳ ಕೆಳಗೆ ಬಯಲಿನ \q2 ಎಲ್ಲಾ ಮೃಗಗಳು ಮರಿಗಳಿಗೆ ಜನ್ಮ ಕೊಟ್ಟವು. \q1 ಅದರ ಕೆಳಗೆ ನೆರಳಿನಲ್ಲಿ \q2 ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. \q1 \v 7 ಹೀಗೆ ಅದರ ತನ್ನ ದೊಡ್ಡಸ್ತಿಕೆಯಲ್ಲಿ \q2 ತನ್ನ ನೀಳವಾದ ಕೊಂಬೆಗಳಿಂದ ಸುಂದರವಾಗಿತ್ತು. \q1 ಏಕೆಂದರೆ ಅದರ ಬೇರು ಸಾಕಷ್ಟು \q2 ನೀರಿನ ಆಸರೆ ಪಡೆದಿತ್ತು. \q1 \v 8 ದೇವರ ತೋಟದ ದೇವದಾರುಗಳು \q2 ಅದನ್ನು ಮರೆಮಾಡಲಿಲ್ಲ. \q1 ತುರಾಯಿ ಮರಗಳು \q2 ಅದರ ಕೊಂಬೆಗಳಿಗೆ ಸಮವಾಗಲಿಲ್ಲ. \q1 ಆಲದ ಮರಗಳು \q2 ಅದರ ರೆಂಬೆಗಳಷ್ಟೂ ಇಲ್ಲ. \q1 ಆ ದೇವರ ತೋಟದ ಯಾವುದೇ ಮರವು \q2 ಇದರ ಸೌಂದರ್ಯಕ್ಕೆ ಸಮವಾಗಿಲ್ಲ. \q1 \v 9 ನಾನು ಅದನ್ನು ಅದರ ಕೊಂಬೆಗಳ \q2 ಸಮೂಹದಿಂದ ಸುಂದರಗೊಳಿಸಿದೆನು. \q1 ಅದರಿಂದ ದೇವರ ತೋಟದಲ್ಲಿನ ಏದೆನಿನ ಮರಗಳೆಲ್ಲಾ \q2 ಅದರ ಮೇಲೆ ಹೊಟ್ಟೆಕಿಚ್ಚು ಪಟ್ಟವು. \p \v 10 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು. \v 11 ಆದ್ದರಿಂದ ನಾನು ಅವನನ್ನು ಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಕೊಟ್ಟಿದ್ದೇನೆ. ಇವನು ನಿಶ್ಚಯವಾಗಿ ಅದನ್ನು ದಂಡಿಸುತ್ತಾನೆ ಅದರ ದುಷ್ಟತ್ವದ ನಿಮಿತ್ತ ನಾನು ಅದನ್ನು ತಳ್ಳಿಹಾಕಿದ್ದೇನೆ. \v 12 ಜನಾಂಗಗಳಲ್ಲಿ ಭಯಂಕರವಾದ ವಿದೇಶಿಯರು ಅದನ್ನು ಕಡಿದುಹಾಕುವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅದರ ಕೊಂಬೆಗಳು ಬೀಳುವುವು. ದೇಶದ ಹಳ್ಳಗಳಲ್ಲೆಲ್ಲಾ ಅದರ ರೆಂಬೆಗಳು ಮುರಿದು ಹೋಗುವುವು. ಭೂಮಿಯ ಜನಗಳೆಲ್ಲಾ ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಡುವರು. \v 13 ಕೆಳಗೆ ಬಿದ್ದ ಮರದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವುವು. ಎಲ್ಲಾ ಕಾಡುಮೃಗಗಳು ಅದರ ರೆಂಬೆಗಳ ಬಳಿಯಲ್ಲಿರುವುವು. \v 14 ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ ಇರುವುದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವುವು. ಅವುಗಳಿಗೆ ಅಧೋಲೋಕವೇ ಗತಿಯಾಗುವುದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವುವು. \p \v 15 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮಾಧಿಗೆ ಇಳಿದ ದಿನದಲ್ಲಿ ನಾನು ಆಳವಾದ ಬುಗ್ಗೆಗಳನ್ನು ದುಃಖದಿಂದ ಮುಚ್ಚಿದೆನು; ನಾನು ಅದರ ಪ್ರವಾಹವನ್ನು ತಡೆಹಿಡಿದೆನು. ಮಹಾಜಲವನ್ನು ನಿಲ್ಲಿಸಿದೆನು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಿಡುವಂತೆ ಮಾಡಿದೆನು. ಬಯಲಿನ ಮರಗಳೆಲ್ಲಾ ಕುಗ್ಗಿಹೋದವು. \v 16 ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು. \v 17 ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು. \p \v 18 “ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. \p “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” \c 32 \s2 ಫರೋಹನ ವಿಷಯವಾಗಿ ಪ್ರಲಾಪ \p \v 1 ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 2 “ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: \q1 “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, \q2 ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. \q1 ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು \q2 ನೀರನ್ನು ನಿನ್ನ ಕಾಲುಗಳಿಂದ ಕಲಕಿ \q2 ಹೊಳೆಗಳನ್ನು ತುಳಿದು ಬದಿಮಾಡಿದೆ. \p \v 3 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ಆದ್ದರಿಂದ ನಾನು ಗುಂಪಾಗಿ ಕೂಡಿದ \q2 ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು. \q2 ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು. \q1 \v 4 ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು. \q2 ಬಯಲಿನ ಮೇಲೆ ಬಿಸಾಡುವೆನು. \q1 ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, \q2 ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು. \q1 \v 5 ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, \q2 ಆ ನಿನ್ನ ರಾಶಿಯಿಂದ ಕಣಿವೆಗಳನ್ನು ತುಂಬಿಸುವೆನು. \q1 \v 6 ನಾನು ನಿನ್ನ ರಕ್ತ ಪ್ರವಾಹದಿಂದ \q2 ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು. \q2 ಹಳ್ಳಗಳು ನಿನ್ನ ಮಾಂಸದಿಂದ ತುಂಬುವುವು. \q1 \v 7 ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ \q2 ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, \q1 ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. \q2 ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. \q1 \v 8 ಆಕಾಶದಲ್ಲಿ ಪ್ರಕಾಶಿಸುವ ಬೆಳಕುಗಳನ್ನು \q2 ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು. \q1 ನಾನು ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆ \q2 ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \q1 \v 9 ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, \q2 ನಿನ್ನ ವಿನಾಶದ ಸುದ್ದಿಯನ್ನು ಹರಡಿ \q2 ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು. \q1 \v 10 ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ \q2 ಭಯಭೀತಿಗೊಳ್ಳುವಂತೆ ಮಾಡುವೆನು, \q1 ನಾನು ಅವರ ಮುಂದೆ ನನ್ನ ಖಡ್ಗವನ್ನು ಬೀಸುವಾಗ \q2 ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. \q1 ನೀನು ಬೀಳುವ ಆ ದಿನದಲ್ಲಿ \q2 ಅವರು ಕ್ಷಣಕ್ಷಣಕ್ಕೆ \q2 ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು. \p \v 11 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ಬಾಬಿಲೋನಿನ ಅರಸನ ಖಡ್ಗವು \q2 ನಿನ್ನ ವಿರುದ್ಧ ಬರುವುದು. \q1 \v 12 ಪರಾಕ್ರಮಶಾಲಿಗಳ ಖಡ್ಗಗಳಿಂದ \q2 ಜನಾಂಗಗಳಲ್ಲಿ ಭಯಂಕರರಾಗಿರುವ ನಿನ್ನ ಸಮೂಹವನ್ನು \q2 ನಾನು ಬೀಳುವಂತೆ ಮಾಡುವೆನು. \q1 ಅವರು ಈಜಿಪ್ಟಿನ ಮಹತ್ತನ್ನು ಕೆಡಿಸುವರು. \q2 ಅದರ ಜನಸಮೂಹವೆಲ್ಲಾ ಹಾಳಾಗುವುದು. \q1 \v 13 ನಾನು ಆ ಬಹು ಪ್ರವಾಹಗಳ ಬಳಿಯಲ್ಲಿರುವ \q2 ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು. \q1 ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಪಾದವಾಗಲಿ, \q2 ಪ್ರಾಣಿಗಳ ಗೊರಸಾಗಲಿ ಕಲಕಿಸುವುದಿಲ್ಲ. \q1 \v 14 ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು. \q2 ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡುವೆನು ಎಂದು \q2 ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \q1 \v 15 ನಾನು ಈಜಿಪ್ಟ್ ದೇಶವನ್ನು ಹಾಳು ಮಾಡಿ \q2 ಅದರ ಸೊತ್ತನ್ನೆಲ್ಲಾ ಧ್ವಂಸಮಾಡಿ \q1 ಅದರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ \q2 ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿಯುವುದು.’ \p \v 16 “ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ. ಈಜಿಪ್ಟಿನ ವಿಷಯವಾಗಿಯೂ ಅದರ ಎಲ್ಲಾ ಜನಸಮೂಹದ ವಿಷಯವಾಗಿಯೂ ಜನಾಂಗಗಳ ಪುತ್ರಿಯರು ಇದನ್ನು ಕುರಿತು ಗೋಳಾಡುವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” \s2 ಸತ್ತವರ ಸಾಮ್ರಾಜ್ಯಕ್ಕೆ ಈಜಿಪ್ಟಿನ ಇಳಿಯುವಿಕೆ \p \v 17 ಇದಲ್ಲದೆ ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ: \v 18 “ಮನುಷ್ಯಪುತ್ರನೇ, ಈಜಿಪ್ಟಿನ ಜನಸಮೂಹದ ವಿಷಯವಾಗಿ ಗೋಳಾಡು; ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಪುತ್ರಿಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಕೆಯೊಳಗೆ ಇಳಿಯುವವರ ಜೊತೆ ತಳ್ಳಿಬಿಡು. \v 19 ‘ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.’ \v 20 ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಖಡ್ಗವನ್ನು ಎಳೆಯಲಾಗುತ್ತದೆ. ಅವಳನ್ನು ತನ್ನ ಎಲ್ಲಾ ಗುಂಪುಗಳೊಂದಿಗೆ ಎಳೆದುಕೊಂಡು ಹೋಗಲಿ. \v 21 ಸತ್ತವರ ಕ್ಷೇತ್ರದೊಳಗಿಂದ ಪ್ರಬಲ ನಾಯಕರು ಈಜಿಪ್ಟ್ ಮತ್ತು ಅವಳ ಮಿತ್ರರಾಷ್ಟ್ರಗಳ ಬಗ್ಗೆ ಹೇಳುವರು, ‘ಅವರು ಇಳಿದು ಹೋಗಿ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿ ಮಲಗಿದ್ದಾರೆ.’ \p \v 22 “ಅಲ್ಲಿ ಅಸ್ಸೀರಿಯ ಮತ್ತು ಅದರ ಎಲ್ಲಾ ಗುಂಪು ಇರುವುದು. ಅಸ್ಸೀರಿಯದ ಸುತ್ತಲೂ ಖಡ್ಗದಿಂದ ಹತರಾದವರ ಸಮಾಧಿಗಳಿರುವುವು; \v 23 ಅವರ ಸಮಾಧಿಗಳು ಕುಳಿಯ ಕಡೆಗಳಲ್ಲಿ ಇಡಲಾಗಿವೆ. ಅವಳ ಸೇನೆಯು ಸಮಾಧಿಯ ಸುತ್ತಲೂ ಇವೆ. ಜೀವಿತರ ದೇಶದಲ್ಲಿ ಭಯವನ್ನು ಹರಡಿದವರೆಲ್ಲರೂ ಖಡ್ಗದಿಂದ ಹತರಾದರು. \p \v 24 “ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. \v 25 ಅವರು ಅವರ ಎಲ್ಲಾ ಸಮೂಹಕ್ಕೂ ಹತರಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ. ಅದರ ಸುತ್ತಲೂ ಅವರ ಸಮಾಧಿಗಳಿವೆ. ಅವರೆಲ್ಲರೂ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿದ್ದಾರೆ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಕುಳಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡು ಹತರಾದವರ ಮಧ್ಯದಲ್ಲಿ ಇಡಲಾಗಿದೆ. \p \v 26 “ಅಲ್ಲಿ ಮೆಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ. ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಸುನ್ನತಿಯಿಲ್ಲದೆ ಖಡ್ಗದಿಂದ ಹತರಾದವರು. \v 27 ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತಹ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಖಡ್ಗಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ. ಅವರ ಗುರಾಣಿಗಳು ಅವರ ಮೂಳೆಗಳ ಮೇಲೆ ಇಡಲಾದವು. ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರರಾಗಿದ್ದರೂ ಅವರ ಅಕ್ರಮಗಳು ಅವರ ಎಲುಬುಗಳ ಮೇಲೆ ಇರುವುವು. \p \v 28 “ಫರೋಹನೇ, ನೀನೂ ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲಾಗುವೆ. ಖಡ್ಗದಿಂದ ಹತರಾದವರ ಸಂಗಡ ಮಲಗುವೆ. \p \v 29 “ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಅದರ ಪ್ರಧಾನರೂ ಶೂರರಾಗಿದ್ದರೂ ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಅವರು ಸುನ್ನತಿಯಿಲ್ಲದವರ ಸಂಗಡ ಮತ್ತು ಕುಣಿಗೆ ಇಳಿಯುವವರ ಸಂಗಡ ಹತರಾದವರು. \p \v 30 “ಅಲ್ಲಿ ಉತ್ತರದ ರಾಜಕುಮಾರರೂ ಸೀದೋನ್ಯರೆಲ್ಲರೂ ಹತರಾದವರೊಂದಿಗೆ ಇಳಿದು ಅಲ್ಲಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಖಡ್ಗದಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ. \p \v 31 “ಫರೋಹನು ಹಾಗೂ ಆತನ ಸೈನ್ಯವು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಜನಸಮೂಹದ ವಿಷಯವಾಗಿ ಸಮಾಧಾನ ಹೊಂದುವನು, ಫರೋಹನು ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 32 ಏಕೆಂದರೆ ನಾನು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದೇ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಖಡ್ಗದಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ನಡುವೆ ಸೇರಿಹೋಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” \c 33 \s1 ಕಾವಲುಗಾರನಾಗಿ ಯೆಹೆಜ್ಕೇಲನ ಕರೆಯ ನವೀಕರಣ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದು: \v 2 “ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ನಾನು ಬಂದು ದೇಶದ ಮೇಲೆ ಯಾವಾಗ ಖಡ್ಗವನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ, \v 3 ಅವನು ಖಡ್ಗವು ದೇಶದ ಮೇಲೆ ಬರುವುದನ್ನು ನೋಡಿ, ಕೊಂಬನ್ನೂದಿ ಜನರನ್ನು ಎಚ್ಚರಿಸಲಿ, \v 4 ಯಾವನು ಕೊಂಬಿನ ಧ್ವನಿಯನ್ನು ಕೇಳಿ ಎಚ್ಚರವಾಗುವುದಿಲ್ಲವೋ ಅವನನ್ನು ಖಡ್ಗವು ನಾಶಮಾಡಿದರೆ ಅವನ ಸಾವಿಗೆ ಅವನೇ ಹೊಣೆಯಾಗುವನು. \v 5 ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಸಾವಿಗೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು. \v 6 ಆದರೆ ಕಾವಲುಗಾರನು ಬರುವ ಖಡ್ಗವನ್ನು ನೋಡಿ, ಒಂದು ವೇಳೆ ಕೊಂಬನ್ನು ಊದದೆ ಜನರನ್ನೂ ಎಚ್ಚರಿಸದೆ ಹೋದರೆ, ಆಗ ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನಾದರೂ ನಾಶಮಾಡಿದರೆ, ಅವನು ತನ್ನ ಪಾಪದಲ್ಲಿಯೇ ನಾಶವಾಗುವನು. ಆದರೆ ನಾನು ಅವನ ಸಾವಿಗೆ ಕಾವಲುಗಾರನನ್ನೇ ಹೊಣೆಮಾಡುವೆನು.’ \p \v 7 “ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು. \v 8 ಯಾವಾಗ ನಾನು ದುಷ್ಟನಿಗೆ, ‘ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ಅವನ ದುರ್ಮಾರ್ಗಗಳಿಂದ ತಪ್ಪಿಸಲು ಅವನನ್ನು ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು. \v 9 ಆದರೆ ನೀನು ದುಷ್ಟನನ್ನು ಅವನ ದುರ್ಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತಿರುಗಿಕೊಳ್ಳದೆ ಹೋದರೆ ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. \p \v 10 “ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು: ‘ನೀವು ಹೇಳುತ್ತಿರುವುದು ಇದನ್ನೇ: “ನಮ್ಮ ಅಪರಾಧಗಳೂ ನಮ್ಮ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲೇ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು ಎಂದು ಹೇಳುವಿರಲ್ಲಾ?” ’ \v 11 ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’ \p \v 12 “ಆದ್ದರಿಂದ, ನರಪುತ್ರನೇ, ನೀನು ನಿನ್ನ ಜನರ ಮಕ್ಕಳಿಗೆ ಹೇಳು: ‘ಒಬ್ಬ ನೀತಿವಂತನು ಅವಿಧೇಯನಾದರೆ, ಆ ವ್ಯಕ್ತಿಯ ಹಿಂದಿನ ನೀತಿಯು ಯಾವುದಕ್ಕೂ ಲೆಕ್ಕವಿಲ್ಲ. ಹಾಗೆಯೇ ದುಷ್ಟನು ಪಶ್ಚಾತ್ತಾಪಪಟ್ಟರೆ, ಆ ವ್ಯಕ್ತಿಯ ಹಿಂದಿನ ದುಷ್ಟತನವು ಖಂಡನೆಯನ್ನು ತರುವುದಿಲ್ಲ. ಪಾಪಮಾಡುವ ನೀತಿವಂತನು ಹಿಂದೆ ನೀತಿವಂತರಾಗಿದ್ದರೂ ಬದುಕಲು ಬಿಡುವುದಿಲ್ಲ.’ \v 13 ನಾನು ನೀತಿವಂತನಿಗೆ, ನೀನು ನಿಶ್ಚಯವಾಗಿ ಬದುಕುವೆ ಎಂದು ಹೇಳುವಾಗ, ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಕ್ರಮಗಳಿಂದಲೇ ಅವನು ಸಾಯುವನು. \v 14 ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ’ ಎಂದು ಹೇಳುವಾಗ ಅವನು ಪಾಪದಿಂದ ಬಿಟ್ಟು ತಿರುಗಿಕೊಂಡು ಮತ್ತು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ \v 15 ದುಷ್ಟನು ತನ್ನ ಒತ್ತೆಯನ್ನು ಮತ್ತು ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಅನ್ಯಾಯವನ್ನು ಮಾಡದೆ ಜೀವನಾಧಾರವಾದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತವಾಗಿ ಬದುಕುವನು. \v 16 ಅವನು ಮಾಡಿದ ಪಾಪಗಳಲ್ಲಿ ಒಂದಾದರೂ ಅವನ ಲೆಕ್ಕಕ್ಕೆ ಸೇರಿಸಲಾಗುವುದಿಲ್ಲ. ಅವನು ನ್ಯಾಯವನ್ನೂ ನೀತಿಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು. \p \v 17 “ಆದರೂ ನಿನ್ನ ಜನರ ಮಕ್ಕಳು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತಾರೆ. ಅವರಿಗಾದರೋ ಅವರ ಮಾರ್ಗವೇ ನೀತಿಯುಕ್ತವಲ್ಲ. \v 18 ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು, ಅಕ್ರಮವನ್ನು ಮಾಡುವನೋ ಅವನು ಖಂಡಿತವಾಗಿಯೂ ಅದರಲ್ಲಿಯೇ ಸಾಯುವನು. \v 19 ಆದರೆ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ ಅವನು ಅವುಗಳಿಂದ ಉಳಿಯುವನು. \v 20 ಆದರೂ, ‘ನೀವು ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಅನ್ನುತ್ತೀರಿ. ಇಸ್ರಾಯೇಲಿನ ಮನೆತನದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯತೀರಿಸುವೆನು.” \s1 ಯೆರೂಸಲೇಮಿನ ವಿನಾಶ \p \v 21 ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು. \v 22 ಆಗ ಅವನು ತಪ್ಪಿಸಿಕೊಂಡು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಯೆಹೋವ ದೇವರ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲಾಗಿತ್ತು. ನನ್ನ ಬಾಯಿ ತೆರೆದಿತ್ತು. ನಾನು ಮೌನವಾಗಿರಲಿಲ್ಲ. \p \v 23 ಆಮೇಲೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 24 “ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು ಹೀಗೆ ಹೇಳುತ್ತಾರೆ, ‘ಅಬ್ರಹಾಮನು ಒಬ್ಬೊಂಟಿಗನಾಗಿದ್ದರೂ ಈ ದೇಶ ಅವನಿಗೆ ಸೊತ್ತಾಗಿ ಸಿಕ್ಕಿತು. ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸೊತ್ತಾಗಿ ಕೊಡಲಾಗಿದೆ,’ ಎಂದು ಹೇಳುತ್ತಾರೆ. \v 25 ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ? \v 26 ನೀವು ನಿಮ್ಮ ಖಡ್ಗದ ಮೇಲೆ ಭರವಸೆ ಇಟ್ಟು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ನಿಮ್ಮ ನೆರೆಯವನ ಹೆಂಡತಿಯನ್ನು ಕೆಡಿಸುವಿರಿ. ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡಿರೇನು?’ \p \v 27 “ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು. \v 28 ನಾನು ಈ ದೇಶವನ್ನು ಹಾಳುಪಾಳುಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವುದು. ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅದರ ಮೂಲಕ ಹಾದು ಹೋಗುವುದಿಲ್ಲ. \v 29 ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.’ \p \v 30 “ಮನುಷ್ಯಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿಜ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಯೆಹೋವ ದೇವರ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ. \v 31 ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು. \v 32 ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ. \p \v 33 “ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವುದು.” \c 34 \s1 ಯೆಹೋವ ದೇವರು ಇಸ್ರಾಯೇಲಿನ ಕುರುಬ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು: \v 2 “ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ? \v 3 ನೀವು ಮೊಸರನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ನೀವು ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿಸುವುದಿಲ್ಲ. \v 4 ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. \v 5 ಅವು ಚದರಿಹೋದವು. ಏಕೆಂದರೆ ಅಲ್ಲಿ ಕುರುಬರಿಲ್ಲ; ಅವರು ಚದರಿಹೋದಾಗ ಎಲ್ಲಾ ಕಾಡುಮೃಗಗಳಿಗೆ ಆಹಾರವಾದವು. \v 6 ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ. ಹೌದು, ನನ್ನ ಮಂದೆಯು ಎಲ್ಲಾ ಭೂಮಿಯ ಮೇಲೆಲ್ಲಾ ಚದರಿಹೋಗಿದೆ. ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ. \p \v 7 “ ‘ಆದ್ದರಿಂದ ಕುರುಬರೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. \v 8 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದುದರಿಂದಲೂ ನನ್ನ ಮಂದೆಯು ಕುರುಬನಿಲ್ಲದೆ ಕಾಡುಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರುಬರು ನನ್ನ ಮಂದೆಯನ್ನು ಹುಡುಕದೆ ಇದ್ದುದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದೆ ಇದ್ದುದರಿಂದಲೂ \v 9 ಕುರುಬರೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. \v 10 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ. \p \v 11 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ. \v 12 ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು. \v 13 ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳನ್ನು ಸ್ವಂತ ದೇಶಕ್ಕೆ ತರುವೆನು. ಅವುಗಳನ್ನು ಇಸ್ರಾಯೇಲಿನ ಪರ್ವತಗಳ ಮೇಲೆ ಹಳ್ಳಗಳಲ್ಲಿ ನಿವಾಸಿಗಳುಳ್ಳ ಎಲ್ಲಾ ದೇಶಗಳಲ್ಲಿಯೂ ಮೇಯಿಸುವೆನು. \v 14 ನಾನು ಒಳ್ಳೆಯ ಮೇವಿನಲ್ಲಿ ಅವುಗಳನ್ನು ಮೇಯಿಸುವೆನು. ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಮಂದೆಯು ಇರುವುದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವುವು. \v 15 ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 16 ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು. \p \v 17 “ ‘ನಿಮಗೆ ನನ್ನ ಮಂದೆಯೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಕುರಿಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು. \v 18 ಒಳ್ಳೆಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ? \v 19 ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವುವು. ನಿನ್ನ ಕಾಲಿನಿಂದ ಕಲಕಿ ಹೊಲಸಾದದ್ದನ್ನು ಕುಡಿಯುವುವು. \p \v 20 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ, ನಾನು, ನಾನೇ ಕೊಬ್ಬಿದ ಕುರಿಗಳಿಗೂ ಮತ್ತು ಬಡಕಲಾದ ಕುರಿಗಳಿಗೂ ನ್ಯಾಯತೀರಿಸುತ್ತೇನೆ. \v 21 ಏಕೆಂದರೆ ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿಬಿಟ್ಟಿರಿ. \v 22 ಆದ್ದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ. ಅವು ಎಂದೆಂದೂ ಕೊಳ್ಳೆಯಾಗುವುದಿಲ್ಲ. ನಾನು ಕುರಿಮೇಕೆಗಳ ಮಧ್ಯೆ ನ್ಯಾಯತೀರಿಸುವೆನು. \v 23 ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. \v 24 ಯೆಹೋವ ದೇವರಾದ ನಾನೇ ಅವುಗಳಿಗೆ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವೆನೆಂದು ಯೆಹೋವ ದೇವರಾದ ನಾನೇ ಅದನ್ನು ಮಾತಾಡಿದ್ದೇನೆ. \p \v 25 “ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು. \v 26 ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು. \v 27 ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು. \v 28 ಅವರು ಇನ್ನು ಮೇಲೆ ಇತರ ಜನಾಂಗಗಳಿಗೆ ಕೊಳ್ಳೆಯಾಗುವುದಿಲ್ಲ; ಕಾಡುಮೃಗಗಳು ಅವರನ್ನು ತಿನ್ನುವುದಿಲ್ಲ. ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯವಾಗಿ ವಾಸಿಸುವರು. \v 29 ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು. ಇನ್ನು ಮೇಲೆ ಅವರು ದೇಶದಲ್ಲಿ ಬರಗಾಲದಿಂದ ನಾಶವಾಗುವುದಿಲ್ಲ. ಅವರು ಇತರ ಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವುದೇ ಇಲ್ಲ. \v 30 ಆಗ ಅವರು ತಮ್ಮ ಯೆಹೋವ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 31 ನೀವು ನನ್ನ ಕುರಿಗಳು, ನನ್ನ ಹುಲ್ಲುಗಾವಲಿನ ಕುರಿಗಳು, ಮತ್ತು ನಾನು ನಿಮ್ಮ ದೇವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” \c 35 \s1 ಎದೋಮಿಗೆ ವಿರೋಧವಾದ ಪ್ರವಾದನೆ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 2 “ಮನುಷ್ಯಪುತ್ರನೇ, ನೀನು ಸೇಯೀರ್ ಪರ್ವತಕ್ಕೆ ಅಭಿಮುಖನಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸಿ, \v 3 ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. \v 4 ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವೆ; ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ. \p \v 5 “ ‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕಾಲದಲ್ಲಿ ಅವರನ್ನು ಖಡ್ಗದ ಬಾಯಿಗೆ ಗುರಿಮಾಡಿದ ಕಾರಣ ಅವರ ಶಿಕ್ಷೆಯು ತಪ್ಪದು. \v 6 ಆದುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು. ರಕ್ತಪಾತವು ನಿನ್ನನ್ನು ಬೆನ್ನಟ್ಟುವುದು. ನೀನು ರಕ್ತಪಾತಕ್ಕೆ ಹೇಸದೆ ಹೋದಕಾರಣ ರಕ್ತ ಪ್ರವಾಹವೇ ನಿನ್ನ ಬೆನ್ನು ಹತ್ತುವುದು. \v 7 ಹೀಗೆ ನಾನು ಸೇಯೀರ್ ಪರ್ವತವನ್ನು ಸಂಪೂರ್ಣ ಹಾಳುಮಾಡುವೆನು. ಅದರೊಳಗೆ ಹಾದುಹೋಗುವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು. \v 8 ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವರು. ನಿನ್ನ ಖಡ್ಗದಿಂದ ಹತರಾದವರು ನಿನ್ನ ಹಳ್ಳಕೊಳ್ಳಗಳಲ್ಲಿಯೂ ಪರ್ವತಗಳ ಮೇಲೆಯೂ ಬೀಳುವರು. \v 9 ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ. \p \v 10 “ ‘ಯೆಹೋವ ದೇವರು ಅವುಗಳಲ್ಲಿದ್ದರೂ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನ ವಶವಾಗುವುವು. ಎಂದೂ ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ. \v 11 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೆಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದಾಗ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ. \v 12 ಆಗ ನಾನೇ ಯೆಹೋವನೆಂದು ನೀನು ತಿಳಿಯುವೆ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ, “ಅವು ಹಾಳಾಗಿವೆ ನಮಗೆ ನುಂಗುವುದಕ್ಕೆ ಕೊಡಲಾಗಿವೆ,” ಎಂದು ಹೇಳಿ ಮಾತನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಯೆಹೋವ ದೇವರೆಂಬ ನಾನೇ ಕೇಳಿರುವೆನೆಂದು ತಿಳಿಯುವೆ. \v 13 ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ. \v 14 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡುತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು. \v 15 ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’ ” \c 36 \s1 ಇಸ್ರಾಯೇಲ್ ಪರ್ವತಗಳ ಭರವಸೆ \p \v 1 “ನರಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು. ಹೇಳು, ‘ಇಸ್ರಾಯೇಲ್ ಪರ್ವತಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. \v 2 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಏಕೆಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ, “ಆಹಾ, ಪೂರ್ವದ ಉತ್ತಮ ಸ್ಥಳಗಳು ನಮ್ಮ ಸೊತ್ತಾದವು,” ಎಂದು ಹೇಳುವರು. ’ \v 3 ಆದ್ದರಿಂದ ನೀನು ಪ್ರವಾದಿಸಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರು ನಿನ್ನನ್ನು ಹಾಳು ಮಾಡಿ ಎಲ್ಲಾ ಕಡೆಗಳಿಂದಲೂ ನಿನ್ನನ್ನು ತುಳಿದುಬಿಟ್ಟರು. ನೀವು ಇತರ ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಗಾರರ ಬಾಯಿಗೆ ಬಿದ್ದು ಜನರ ನಿಂದೆಗೆ ಗುರಿಯಾಗಿದ್ದೀರಿ. \v 4 ಆದ್ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ, ಪರ್ವತಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ \v 5 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’ \v 6 ಆದ್ದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು. ಪರ್ವತಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ: ಇತರ ಜನಾಂಗಗಳ ಅವಮಾನವನ್ನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರದಿಂದಲೂ ಮಾತನಾಡಿದ್ದೇನೆ. \v 7 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನನ್ನ ಕೈಯೆತ್ತಿ ಪ್ರಮಾಣ ಮಾಡಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿರುವ ಆ ಜನಾಂಗಗಳು ತಮ್ಮ ನಿಂದೆಯನ್ನು ಹೊರುವರು. \p \v 8 “ ‘ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹರಡಿಸಿ ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವಿರಿ. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ. \v 9 ನಾನು ನಿಮ್ಮವನಾಗಿದ್ದೇನೆ ನಾನು ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನಿಮ್ಮಲ್ಲಿ ಉಳುಮೆ ಮಾಡಿ ಬಿತ್ತಲಾಗುತ್ತದೆ. \v 10 ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದವರನ್ನೂ ಎಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿಸುತ್ತೇನೆ. ಪಟ್ಟಣಗಳು ಜನಭರಿತವಾಗುವುವು. ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವುವು. \v 11 ನಾನು ನಿಮ್ಮ ಮೇಲೆ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡುವೆನು. ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವುವು. ನಾನು ನಿಮ್ಮನ್ನು ಮೊದಲಿನ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ. \v 12 ನನ್ನ ಜನರಾದ ಇಸ್ರಾಯೇಲ್ಯರನ್ನು ನಿಮ್ಮಲ್ಲಿ ವಾಸಿಸುವಂತೆ ಮಾಡುವೆನು. ಅವರು ನಿನ್ನನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ನೀವು ಅವರ ಸೊತ್ತಾಗಿರುವಿರಿ; ನೀವು ಎಂದಿಗೂ ಅವರ ಮಕ್ಕಳಿಂದ ವಂಚಿತರಾಗುವುದಿಲ್ಲ. \p \v 13 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವೆ,” ಎಂದು ಅವರು ನಿನಗೆ ಹೇಳುವರು. \v 14 ಆದ್ದರಿಂದ ಇನ್ನು ಮೇಲೆ ನೀನು ಮನುಷ್ಯರನ್ನು ನುಂಗುವುದಿಲ್ಲ. ಇನ್ನು ಮೇಲೆ ನಿನ್ನ ಜನಾಂಗದವರನ್ನೂ ಮಕ್ಕಳಿಲ್ಲದವರನ್ನಾಗಿ ಮಾಡುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 15 ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” \s1 ಇಸ್ರಾಯೇಲಿನ ಪುನಃಸ್ಥಾಪನೆ ಮತ್ತು ಭರವಸೆ \p \v 16 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 17 “ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು. \v 18 ಆದ್ದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷವನ್ನು ಅವರ ಮೇಲೆ ಸುರಿಸಿದೆನು. \v 19 ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶಗಳಲ್ಲಿ ಚದರಿಹೋದರು. ಅವರ ದುರ್ಮಾರ್ಗ ದುರಾಚಾರಗಳಿಗೆ ಅನುಸಾರವಾಗಿ ಅವರನ್ನು ನ್ಯಾಯತೀರಿಸಿದೆನು. \v 20 ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಇವರೇ, ‘ಯೆಹೋವ ದೇವರ ಜನರು ಮತ್ತು ಇವರು ಆತನ ದೇಶದಿಂದ ಹೊರಟು ಹೋದರು,’ ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡಿದರು. \v 21 ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ಕುರಿತು ಮನಮರುಗಿದೆನು. \p \v 22 “ಆದ್ದರಿಂದ ನೀನು ಇಸ್ರಾಯೇಲರ ಮನೆತನದವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡುತ್ತಿಲ್ಲ. ಆದರೆ ನೀವು ಇತರ ಜನಾಂಗಗಳ ನಡುವೆ ಅಪವಿತ್ರಪಡಿಸಿದ ನನ್ನ ಪರಿಶುದ್ಧ ನಾಮಕ್ಕಾಗಿ ಮಾಡುತ್ತೇನೆ. \v 23 ನೀನು ನನ್ನ ಮಹತ್ವದ ನಾಮವನ್ನು ಅಪವಿತ್ರತೆಗೆ ಗುರಿಮಾಡಿದ ಇತರ ಜನಾಂಗಗಳಲ್ಲಿ ನನ್ನ ಪವಿತ್ರ ನಾಮವನ್ನು ತೋರಿಸುವೆನು. ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮೂಲಕವಾಗಿ ನನ್ನನ್ನು ಪವಿತ್ರನೆಂದು ತೋರಿಸುವಾಗ ಅವರು ನಾನು ಯೆಹೋವ ದೇವರೆಂಬುದನ್ನು ತಿಳಿದುಕೊಳ್ಳುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 24 “ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು. \v 25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. \v 26 ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. \v 27 ನನ್ನ ಆತ್ಮವನ್ನು ನಿಮ್ಮೊಳಗೆ ಇಡುವೆನು. ನೀವು ನನ್ನ ನಿಯಮಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಜಾಗರೂಕತೆಯಿಂದ ಅನುಸರಿಸಿ ನಡೆಯುವಿರಿ. \v 28 ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿಸುವಿರಿ; ನೀವು ನನ್ನ ಜನರಾಗಿರುವಿರಿ. ನಾನು ನಿಮ್ಮ ದೇವರಾಗಿರುವೆನು. \v 29 ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು. ಬೆಳೆ ಬೆಳೆಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವುದಿಲ್ಲ. \v 30 ಜನಾಂಗಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನೂ ಹೆಚ್ಚಿಸುವೆನು. \v 31 ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ. \v 32 ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳಿಗೆ ನಾಚಿಕೆಪಟ್ಟು ಲಜ್ಜೆಹೊಂದಿರಿ. \p \v 33 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ಹಾಳಾಗಿರುವ ಸ್ಥಳಗಳಲ್ಲಿಯೂ ಕಟ್ಟಡಗಳು ಪುನಃ ಏಳುವುವು. \v 34 ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಹಾಳುಬಿದ್ದ ಹಾಗೆ ಕಾಣದೆ ಉಳುಮೆಗೊಂಡಿರುವುದು. \v 35 “ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು. \v 36 ಯೆಹೋವ ದೇವರಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ ಮತ್ತು ನಾನೇ ಇದನ್ನು ಮಾಡುತ್ತೇನೆ.’ \p \v 37 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು. \v 38 ಮೀಸಲಾದ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು. ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವುವು. ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.” \c 37 \s1 ಒಣಗಿದ ಎಲುಬುಗಳ ಕಣಿವೆ \p \v 1 ಯೆಹೋವ ದೇವರ ಕೈ ನನ್ನ ಮೇಲೆ ಇತ್ತು; ಅದು ಆತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಯಲ್ಲಿ ಇಳಿಸಿತು. \v 2 ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದನು. ತೆರೆದಿರುವ ಆ ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು. \v 3 ಆತನು ನನಗೆ, “ನರಪುತ್ರನೇ, ಈ ಎಲುಬುಗಳು ಜೀವಿಸುವಂಥವೇ?” ಎಂದಾಗ, \p ನಾನು ಉತ್ತರವಾಗಿ, “ಸಾರ್ವಭೌಮ ಯೆಹೋವ ದೇವರೇ, ನೀವೇ ತಿಳಿದಿರುವಿರಿ,” ಎಂದೆನು. \p \v 4 ಅವರು ನನಗೆ ಹೇಳಿದ್ದೇನೆಂದರೆ, “ಈ ಎಲುಬುಗಳ ಮೇಲೆ ಪ್ರವಾದಿಸಿ, ಅವುಗಳಿಗೆ ಹೇಳು: ‘ಒಣಗಿದ ಎಲುಬುಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ, \v 5 ಸಾರ್ವಭೌಮ ಯೆಹೋವ ದೇವರು ಈ ಎಲುಬುಗಳಿಗೆ ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ. ನೀವು ಬದುಕುವಿರಿ; \v 6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ತಂದು ಮತ್ತು ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ” \p \v 7 ಅದರಂತೆ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು. ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು. ಅದು ಕದಲುತ್ತಿತ್ತು, ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು. \v 8 ನಾನು ನೋಡಿದಾಗ, ನರಗಳು ಮತ್ತು ಮಾಂಸವು ಅವುಗಳ ಮೇಲೆ ಬಂದವು. ಅವುಗಳ ಮೇಲೆ ಚರ್ಮವು ಮುಚ್ಚಿಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ. \p \v 9 ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯಪುತ್ರನೇ, ಆ ಉಸಿರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತಶರೀರಗಳು ಬದುಕುವಂತೆ ಅದರ ಮೇಲೆ ಊದು.’ ” \v 10 ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು, ಅವುಗಳಲ್ಲಿ ಉಸಿರು ಬಂತು. ಅವುಗಳಲ್ಲಿ ಪಾದದ ಮೇಲೆ ಅವುಗಳು ನಿಂತವು, ಅತ್ಯಂತ ಮಹಾಸೈನ್ಯವಾದವು. \p \v 11 ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’ \v 12 ಆದ್ದರಿಂದ ನೀನು ಪ್ರವಾದಿಸಿ ಅವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. \v 13 ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. \v 14 ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’ ” \s1 ಒಬ್ಬನೇ ಅರಸ ಒಂದೇ ರಾಷ್ಟ್ರ \p \v 15 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 16 “ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಯೆಹೂದನದು ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು,’ ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯೀಮಿನ ಕೋಲು ಯೋಸೇಫನಿಗೂ ಅವನ ಜೊತೆಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು,’ ಎಂದು ಬರೆದಿಡು. \v 17 ಆ ಎರಡನ್ನು ಒಂದೇ ಕೋಲಾಗುವ ಹಾಗೆ ಜೋಡಿಸು. ಅವು ಒಂದಾಗಿ ನಿನ್ನ ಕೈಯಲ್ಲಿರುವುವು. \p \v 18 “ ‘ಇದರ ಅರ್ಥವೇನೆಂದು ನೀನು ನಮಗೆ ಹೇಳುವುದಿಲ್ಲವೋ?’ ಎಂದು ನಿನ್ನ ದೇಶದ ಜನರು ನಿನ್ನನ್ನು ಪ್ರಶ್ನಿಸುವಾಗ, \v 19 ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎಫ್ರಾಯೀಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು,’ ಎಂದು ಹೇಳು. \v 20 ನೀನು ಬರೆದ ಆ ಕೋಲುಗಳು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿ ಹಿಡಿದು ಅವರಿಗೆ ಹೇಳು: \v 21 ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು. \v 22 ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ. \v 23 ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ತಮ್ಮ ಅಸಹ್ಯ ವಸ್ತುಗಳಿಂದಲೂ ತಮ್ಮ ಅಕ್ರಮಗಳಿಂದಲೂ ಅಶುದ್ಧವಾಗುವುದಿಲ್ಲ. ಅವರ ಎಲ್ಲಾ ಪಾಪದ ಹಿಂಜಾರುವಿಕೆಯಿಂದಲೂ ನಾನು ಅವರನ್ನು ರಕ್ಷಿಸಿ, ಅವರನ್ನು ಶುದ್ಧಮಾಡುವೆನು. ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು. \p \v 24 “ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು. \v 25 ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು. \v 26 ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು. \v 27 ನನ್ನ ಗುಡಾರವು ಸಹ ಅವರೊಂದಿಗಿರುವುದು. ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು. \v 28 ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಯೆಹೋವ ದೇವರಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಎಲ್ಲಾ ದೇಶದ ಜನಾಂಗಗಳು ಸಹ ತಿಳಿದುಕೊಳ್ಳುವರು.’ ” \c 38 \s1 ರಾಷ್ಟ್ರಗಳ ಮೇಲೆ ಯೆಹೋವ ದೇವರ ಮಹಾ ವಿಜಯ \p \v 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, \v 2 “ಓ ಮನುಷ್ಯಪುತ್ರನೇ, ರೋಷ್, ಮೆಷೆಕ್ ಮತ್ತು ತೂಬಲ್‌ನ ಮುಖ್ಯ ರಾಜಕುಮಾರನಾದ ಮಾಗೋಗ್ ದೇಶದ ಗೋಗನ ಕಡೆಗೆ ನಿನ್ನ ಮುಖವನ್ನು ತಿರುಗಿಸು; ಮತ್ತು ಅವನ ವಿರುದ್ಧವಾಗಿ ಪ್ರವಾದಿಸು. \v 3 ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರೋಷ್, ಮೆಷೆಕ್, ತೂಬಲಿಗೆ ಮುಖ್ಯ ರಾಜಕುಮಾರನಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ. \v 4 ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕುವೆನು. ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಮತ್ತು ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಚಿಕ್ಕ ಮತ್ತು ದೊಡ್ಡ ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗಗಳನ್ನು ಹಿಡಿದಿರುವರು. \v 5 ಅವರೊಂದಿಗೆ ಪಾರಸಿಯರೂ ಕೂಷ್ಯರೂ ಮತ್ತು ಪೂಟ್ಯರೂ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು. \v 6 ಗೋಮೆರ್ ಮತ್ತು ಅದರ ಎಲ್ಲಾ ದಳಗಳನ್ನೂ, ಉತ್ತರ ದಿಕ್ಕಿನ ತೋಗರ್ಮದವರನ್ನೂ ಮತ್ತು ಅದರ ಎಲ್ಲಾ ದಳಗಳನ್ನೂ, ಹೀಗೆ ನಿನ್ನ ಸಂಗಡವಿರುವ ಅನೇಕ ಜನರನ್ನೂ ನಿನ್ನೊಂದಿಗೆ ಬರಮಾಡುವೆನು. \p \v 7 “ ‘ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರ ಅಧಿಕಾರವನ್ನು ತೆಗೆದುಕೊ. \v 8 ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ. \v 9 ನೀನು ಮೇಲೇರಿ ಬಿರುಗಾಳಿಯಂತೆ ಬರುವೆ. ನೀನೂ ನಿನ್ನ ಎಲ್ಲಾ ದಂಡುಗಳೂ ಅನೇಕ ಜನರಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ. \p \v 10 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಆ ದಿನದಲ್ಲಿ ನಿನ್ನ ಮನಸ್ಸಿಗೆ ಕೆಲವು ಆಲೋಚನೆಗಳು ಬರುವುವು ಮತ್ತು ನೀನು ಒಂದು ಕುತಂತ್ರವನ್ನು ಮಾಡುವೆ. \v 11 ನೀವು ಹೇಳುವಿರಿ, “ಗೋಡೆಯಿಲ್ಲದ ಹಳ್ಳಿಗಳಿಲ್ಲದ ದೇಶದ ಮೇಲೆ ನಾನು ಆಕ್ರಮಣ ಮಾಡುತ್ತೇನೆ. ಪೌಳಿಗೋಡೆಗಳಿಲ್ಲದೆ ಇಲ್ಲವೆ ಬಾಗಿಲುಗಳು ಅಗುಳಿಗಳು ಇಲ್ಲದೆ ಅವರು ಶಾಂತಿಯುತ ಮತ್ತು ನಿರ್ಭಯವಾಗಿ ವಾಸಿಸುವವರ ಮೇಲೆ ದಾಳಿಮಾಡುತ್ತೇನೆ. \v 12 ನಾನು ಸುಲಿಗೆಯನ್ನು ಮತ್ತು ಕೊಳ್ಳೆಯನ್ನು ತೆಗೆದುಕೊಳ್ಳುವೆನು. ಹೀಗೆ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳನ್ನು ಎದುರಿಸುವೆನು. ಜನಾಂಗಗಳಿಂದ ಒಟ್ಟುಗೂಡಿ, ಪಶುಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಿಸುವವರ ಮೇಲೆಯೂ ಕೈಹಾಕುವೆನು,” ಎಂದು ಹೇಳುವೆ. \v 13 ಶೆಬ, ದೆದಾನ್ ಮತ್ತು ತಾರ್ಷೀಷಿನ ವರ್ತಕರು, ಅವಳ ಎಲ್ಲಾ ಹಳ್ಳಿಗಳೊಂದಿಗೆ ಅಲ್ಲಿ ನಿನಗೆ, “ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದೆಯಾ? ಕೊಳ್ಳೆ ಹೊಡೆಯುವುದಕ್ಕಾಗಿಯೇ ನಿನ್ನ ತಂಡವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ಪಶುಗಳನ್ನೂ ಸಂಪತ್ತನ್ನೂ ತೆಗೆದುಕೊಂಡು ಮಹಾ ಸುಲಿಗೆ ತೆಗೆದುಕೊಳ್ಳಬೇಕೆಂದೋ?” ಎನ್ನುವರು.’ \p \v 14 “ಆದ್ದರಿಂದ ಮನುಷ್ಯಪುತ್ರನೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಗೋಗಿಗೆ ಪ್ರವಾದಿಸಿ ಹೇಳು, ನನ್ನ ಜನರಾದ ಇಸ್ರಾಯೇಲರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ \v 15 ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವೆ. ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದವರಾಗಿ ಬಲವಾದ ಸೈನ್ಯವಾಗಿಯೂ ಮಹಾ ದಂಡಾಗಿಯೂ ಬರುವೆ. \v 16 ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು. \p \v 17 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗಳಿಗೆ ಮುಂಚೆ ಪ್ರವಾದಿಸಿದೆಯಲ್ಲವೇ? \v 18 ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ, ನಾನು ರೋಷದಿಂದ ಬುಸುಗುಟ್ಟುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 19 ಏಕೆಂದರೆ ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನದಂದು ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗುವುದು. \v 20 ಆಗ ಸಮುದ್ರದ ಮೀನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವುವು; ಪರ್ವತಗಳು ಉರುಳಿಹೋಗುವುವು. ಝರಿಗಳು ಕವಚಿಕೊಳ್ಳುತ್ತಾ, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವುದು. \v 21 ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಖಡ್ಗವನ್ನು ಕರೆಯುವೆನೆಂದೂ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರತಿಯೊಬ್ಬ ಮನುಷ್ಯನ ಖಡ್ಗವೂ ಅವನ ಸಹೋದರನಿಗೆ ವಿರೋಧವಾಗಿರುವುದು. \v 22 ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು. \v 23 ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’ \c 39 \p \v 1 “ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ. \v 2 ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ ಮುಂದರಿಸಿ ಉತ್ತರ ದಿಕ್ಕಿನ ಕಟ್ಟಕಡೆಯಿಂದ ಬರಮಾಡಿ ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ, \v 3 ನಾನು ನಿನ್ನ ಎಡಗೈಯಿಂದ ನಿನ್ನ ಬಿಲ್ಲನ್ನು ಹೊಡೆಯುವೆನು ಮತ್ತು ನಿನ್ನ ಬಲಗೈಯಿಂದ ನಿನ್ನ ಬಾಣಗಳನ್ನು ಉದುರಿ ಬೀಳುವಂತೆ ಮಾಡುವೆನು. \v 4 ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು. \v 5 ನೀನು ತೆರೆದ ಬಯಲಿನಲ್ಲಿ ಬೀಳುವೆ, ಏಕೆಂದರೆ ನಾನೇ ಇದನ್ನು ಹೇಳಿರುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 6 ನಾನು ಮಾಗೋಗ್ ಮತ್ತು ಅವರೊಂದಿಗೆ ದ್ವೀಪಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ, ಅವರು ನಾನೇ ಯೆಹೋವ ದೇವರೆಂದು ತಿಳಿಯುವರು. \p \v 7 “ ‘ಹೀಗೆ ನನ್ನ ಜನರಾದ ಇಸ್ರಾಯೇಲ್ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಗೊಳಿಸುವೆನು. ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದಂತೆ ಮಾಡುವೆನು. ಇಸ್ರಾಯೇಲಿನಲ್ಲಿ ಪರಿಶುದ್ಧನಾದ ಯೆಹೋವ ದೇವರು ನಾನೇ ಎಂದು ಇತರ ದೇಶದವರಿಗೆ ಗೊತ್ತಾಗುವುದು. \v 8 ಇದು ಬಂದಿತು, ಇದು ನೆರವೇರಿತು. ನಾನು ಮುಂತಿಳಿಸಿದ ದಿನವು ಇದೇ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 9 “ ‘ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು. \v 10 ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 11 “ ‘ಆ ದಿನದಲ್ಲಿ ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ. ಸಮುದ್ರದ ಪೂರ್ವದಲ್ಲಿರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ, ಆಗ ಅದು ಹಾದು ಹೋಗುವವರನ್ನು ನಿಲ್ಲಿಸುವುದು. ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನು ಸಮಾಧಿಮಾಡುವರು. ಆ ಕಣಿವೆಯನ್ನು ಹಾಮೋನ್ ಗೋಗ್\f + \fr 39:11 \fr*\fq ಹಾಮೋನ್ ಗೋಗ್ \fq*\ft ಇದರ ಅರ್ಥ \ft*\fp ಗೋಗನ ಸೈನ್ಯ\fp*\f* ಎಂದು ಕರೆಯುವರು. \p \v 12 “ ‘ಇಸ್ರಾಯೇಲನ ಮನೆತನದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳವರೆಗೂ ಸಮಾಧಿಮಾಡುವರು. \v 13 ದೇಶದ ಎಲ್ಲಾ ಜನರು ಅವರನ್ನು ಹೂಳಿಡುವರು. ನಾನು ಮಹಿಮೆಯನ್ನು ಹೊಂದುವ ದಿನವು ಅವರಿಗೆ ಸ್ಮರಣ ದಿನವಾಗಿರುವುದು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 14 ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹೂಳಿಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನಿರಂತರವಾಗಿ ನೇಮಿಸುವರು. \p “ ‘ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು. \v 15 ಪ್ರಯಾಣಿಕರು ಆ ದೇಶದಲ್ಲಿ ಹಾದುಹೋಗುತ್ತಿರುವಾಗ ಯಾವುದಾದರೊಂದು ಮನುಷ್ಯನ ಎಲುಬನ್ನು ಕಂಡರೆ ಅಲ್ಲಿ ಒಂದು ಗುರುತನ್ನು ಹಾಕುವರು, ಹೂಣಿಡುವವರು ಅದನ್ನು ಹಾಮೋನ್ ಗೋಗಿನ ಕಣಿವೆಯಲ್ಲಿ ಹೂಳಿಡುವ ತನಕ ಆ ಗುರುತು ಹಾಗೆಯೇ ಇರುವದು. \v 16 ಆ ನಗರಕ್ಕೆ ಹಾಮೋನ\f + \fr 39:16 \fr*\fq ಹಾಮೋನ \fq*\ft ಅಂದರೆ \ft*\fqa ಸೈನ್ಯ\fqa*\f* ಎಂದು ಹೆಸರಾಗುವದು, ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.’ \p \v 17 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಪ್ರತಿಯೊಂದು ಕಾಡುಮೃಗಗಳಿಗೂ, ‘ಮಾತನಾಡಿ ಒಟ್ಟಾಗಿ ಬನ್ನಿರಿ. ನಾನು ನಿಮಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ. ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ಅಲ್ಲಿ ನೀವು ಮಾಂಸವನ್ನು ತಿನ್ನಬಹುದು ಮತ್ತು ರಕ್ತವನ್ನು ಕುಡಿಯಬಹುದು. \v 18 ಟಗರು, ಕುರಿಮರಿ, ಹೋತ, ಹೋರಿ ಮತ್ತು ಬಾಷಾನಿನ ಕೊಬ್ಬಿದ ಪ್ರಾಣಿಗಳಂತೆ ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ರಾಜಕುಮಾರರ ರಕ್ತವನ್ನು ಕುಡಿಯುವಿರಿ. \v 19 ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವವರೆಗೂ ಕೊಬ್ಬನ್ನು ತಿಂದು ಮತ್ತೇರುವವರೆಗೂ ರಕ್ತವನ್ನು ಕುಡಿಯಬಹುದು. \v 20 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ,’ ಇದು ಸಾರ್ವಭೌಮ ಯೆಹೋವ ದೇವರ ನುಡಿ. \p \v 21 “ನಾನು ನನ್ನ ಮಹಿಮೆಯನ್ನು ಇತರ ಜನಾಂಗಗಳಲ್ಲಿ ಸ್ಥಾಪಿಸಲು ಎಲ್ಲಾ ಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವುವು. \v 22 ಹೀಗೆ ಇಸ್ರಾಯೇಲನ ಮನೆತನದವರು ಯೆಹೋವ ದೇವರಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವರಾಗಿರುವೆನು ಎಂದು ತಿಳಿಯುವರು. \v 23 ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಇತರ ಜನಾಂಗಗಳು ತಿಳಿಯುವುವು. ಅವರು ನನಗೆ ವಿರೋಧವಾಗಿ ವಿಶ್ವಾಸದ್ರೋಹಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಖಡ್ಗದಿಂದ ಹತರಾದರು. \v 24 ಅವರ ಅಶುದ್ಧತ್ವದ ಪ್ರಕಾರವೂ ಅವರ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ. \p \v 25 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು. \v 26 ನಾನು ನನ್ನ ಜನರನ್ನು ಇತರ ಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. \v 27 ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲಾ ದ್ರೋಹಗಳ ಹೊರೆಯನ್ನು ಹೊರುತ್ತಾ ತಮ್ಮ ನಾಚಿಕೆಯನ್ನು ಮರೆತುಬಿಡುವರು. \v 28 ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು. \v 29 ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವುದಿಲ್ಲ. ನಾನು ನನ್ನ ಆತ್ಮವನ್ನು ಇಸ್ರಾಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” \c 40 \s1 ದೇವಾಲಯದ ಪ್ರದೇಶದ ಪುನಃಸ್ಥಾಪನೆ \p \v 1 ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೆಯ ದಿನದಲ್ಲಿ, ಪಟ್ಟಣವು ನಾಶವಾದ ಮೇಲೆ, ಹದಿನಾಲ್ಕನೆಯ ವರ್ಷದ ಅದೇ ದಿನದಲ್ಲಿ, ಯೆಹೋವ ದೇವರ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು. \v 2 ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು. \v 3 ಅವರು ನನ್ನನ್ನು ಅಲ್ಲಿಗೆ ತಂದಾಗ, ಅಲ್ಲಿ ಕಂಚಿನಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲೂ ಅಳತೆಯ ಕೋಲೂ ಇತ್ತು. ಅವನು ಬಾಗಿಲಲ್ಲೇ ನಿಂತಿದ್ದನು. \v 4 ಆ ಮನುಷ್ಯನು ನನಗೆ, “ಮನುಷ್ಯಪುತ್ರನೇ ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ಮತ್ತು ನಾನು ತೋರಿಸುವ ಎಲ್ಲಾ ಸಂಗತಿಗಳಿಗೆ ನೀನು ಮನಸ್ಸಿಡು. ನಾನು ನಿನಗೆ ಅವುಗಳನ್ನೆಲ್ಲಾ ತೋರಿಸುವುದಕ್ಕಾಗಿಯೇ ಇಲ್ಲಿಗೆ ನಿನ್ನನ್ನು ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ಜನರಿಗೆ ತಿಳಿಸು,” ಎಂದರು. \s2 ಹೊರ ಅಂಗಳಕ್ಕೆ ಪೂರ್ವ ದ್ವಾರ \p \v 5 ನಾನು ದೇವಾಲಯದ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿರುವ ಒಂದು ಗೋಡೆಯನ್ನು ಕಂಡೆನು. ಆ ಮನುಷ್ಯನ ಕೈಯಲ್ಲಿದ್ದ ಅಳತೆ ಕೋಲು ಸುಮಾರು ಮೂರು ಮೀಟರ್ ಉದ್ದವಿತ್ತು, ಪ್ರತಿಯೊಂದೂ ಒಂದು ಮೀಟರ್ ಮತ್ತು ಒಂದು ಅಂಗೈ ಅಗಲವಾಗಿತ್ತು. ಆ ಮನುಷ್ಯನು ಗೋಡೆಯನ್ನು ಅಳೆದನು. ಅದು ಒಂದು ಕೋಲು ಅಗಲ ಮತ್ತು ಒಂದು ಕೋಲು ಎತ್ತರವಾಗಿತ್ತು. \p \v 6 ಆಮೇಲೆ ಅವನು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಬಾಗಿಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಿಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು. \v 7 ಕಾವಲುಗಾರರ ಕೋಣೆಯ ಉಪವಿಭಾಗಗಳು ಒಂದು ಕೋಲು ಉದ್ದ ಮತ್ತು ಒಂದು ಕೋಲು ಅಗಲವಿದ್ದವು ಮತ್ತು ಕೋಣೆಯ ಉಪವಿಭಾಗಗಳ ನಡುವಿನ ಗೋಡೆಗಳು ಸುಮಾರು ಮೂರು ಮೀಟರ್ ದಪ್ಪವಾಗಿದ್ದವು. ಮತ್ತು ದೇವಾಲಯಕ್ಕೆ ಎದುರಾಗಿರುವ ದ್ವಾರಮಂಟಪದ ಮುಂದಿನ ಹೆಬ್ಬಾಗಿಲಿನ ಹೊಸ್ತಿಲು ಒಂದು ಕೋಲು ಆಳವಾಗಿತ್ತು. \p \v 8 ನಂತರ ಅವನು ಹೆಬ್ಬಾಗಿಲಿನ ದ್ವಾರಮಂಟಪವನ್ನು ಅಳೆದನು. \v 9 ಆಮೇಲೆ ಬಾಗಿಲಿನ ದ್ವಾರಾಂಗಣವನ್ನು ಸುಮಾರು ನಾಲ್ಕು ಮೀಟರ್ ಅದರ ಕಂಬಗಳನ್ನು ಸುಮಾರು ಒಂದು ಮೀಟರ್ ಎಂದು ಅಳೆದನು. ಹೆಬ್ಬಾಗಿಲಿನ ದ್ವಾರಮಂಟಪವು ದೇವಾಲಯಕ್ಕೆ ಎದುರಾಗಿತ್ತು. \p \v 10 ಪೂರ್ವದಿಕ್ಕಿನ ಕೋಣೆಯ ಉಪವಿಭಾಗಗಳು ಈ ಕಡೆಯಲ್ಲಿ ಮೂರೂ ಆ ಕಡೆಯಲ್ಲಿ ಮೂರೂ ಇದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡೂ ಕಡೆಯ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು. \v 11 ಅನಂತರ ಅವನು ಹೆಬ್ಬಾಗಿಲ ದ್ವಾರವನ್ನು ಅಳೆದನು. ಅದರ ಅಗಲ ಸುಮಾರು ಐದು ಮೀಟರ್ ಹಾಗು ಉದ್ದ ಸುಮಾರು ಆರುವರೆ ಮೀಟರ್ ಇತ್ತು. \v 12 ಪ್ರತಿಯೊಂದು ಕೋಣೆಯ ಉಪವಿಭಾಗಗಳ ಮುಂದೆ ಸುಮಾರು ಅರ್ಧ ಮೀಟರ್ ಎತ್ತರದ ಗೋಡೆಯಿತ್ತು. ಕೋಣೆಯ ಉಪವಿಭಾಗಗಳು ಸುಮಾರು ಮೂರು ಚದರ ಮೀಟರ್ ಆಗಿದ್ದವು. \v 13 ಆಗ ಅವನು, ಒಂದು ಕೋಣೆಯ ಉಪವಿಭಾಗದ ಮಾಳಿಗೆಯಿಂದ ಇನ್ನೊಂದು ಕೋಣೆಯ ಉಪವಿಭಾಗದ ಮಾಳಿಗೆಯವರೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಸುಮಾರು ಹದಿಮೂರು ಮೀಟರಿತ್ತು. \v 14 ಬಾಗಿಲಿನ ಚೌಕಟ್ಟಿನ ಕಂಬಗಳನ್ನು ಅಳತೆಮಾಡಲು ಸುಮಾರು ಮೂವತ್ತೆರಡು ಮೀಟರ್ ಇದ್ದವು. ಅದು ಬಾಗಿಲಿನ ಸುತ್ತಮುತ್ತಲಿರುವ ಕಂಬದವರೆಗೂ ಇತ್ತು. \v 15 ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳಬಾಗಿಲಿನ ದ್ವಾರದ ಅಂಗಳದವರೆಗೂ ಸುಮಾರು ಇಪ್ಪತ್ತೇಳು ಮೀಟರ್ ದೂರವಿತ್ತು. \v 16 ಕೋಣೆಯ ಉಪವಿಭಾಗಗಳು ಮತ್ತು ಬಾಗಿಲ ಚೌಕಟ್ಟಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು. ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು. ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು. \s2 ಹೊರ ಅಂಗಳ \p \v 17 ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆತಂದನು. ಅಲ್ಲಿ ನಾನು ಕೆಲವು ಕೋಣೆಗಳನ್ನು ಮತ್ತು ಅಂಗಳದ ಸುತ್ತಲೂ ನಿರ್ಮಿಸಲಾದ ಒಂದು ಕಾಲುದಾರಿಯನ್ನು ಕಂಡೆನು. ಕಾಲುದಾರಿ ಉದ್ದಕ್ಕೂ ಮೂವತ್ತು ಕೋಣೆಗಳಿದ್ದವು. \v 18 ಬಾಗಿಲುಗಳ ಪಾರ್ಷ್ವದಲ್ಲಿಯೂ ಬಾಗಿಲುಗಳ ಉದ್ದಕ್ಕೆ ಸರಿಯಾಗಿಯೂ ಇದ್ದ ಆ ಕಲ್ಲು ಹಾಸಿದ ನೆಲವು ಕೆಳಗಿನ ನೆಲಗಟ್ಟಾಗಿತ್ತು. \v 19 ಆಗ ಅವನು ಕೆಳಗಿನ ಬಾಗಿಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು. \s2 ಉತ್ತರದ ಹೆಬ್ಬಾಗಿಲು \p \v 20 ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರಗಿನ ಬಾಗಿಲಿನ ಉದ್ದವನ್ನೂ ಅಗಲವನ್ನೂ ಅಳೆದನು. \v 21 ಅದರ ಕೋಣೆಯ ಉಪವಿಭಾಗಗಳು ಈ ಕಡೆಗೂ ಆ ಕಡೆಗೂ ಮೂರು ಇದ್ದವು. ಅದರ ಕಂಬಗಳು ಮತ್ತು ಅದರ ಕೈಸಾಲೆಗಳು ಮೊದಲನೆಯ ಬಾಗಿಲಿನ ಅಳತೆಯಂತೆ ಇದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು. \v 22 ಅದರ ಕಿಟಕಿಗಳೂ ಅದರ ಕೈಸಾಲೆಗಳೂ ಅದರ ಖರ್ಜೂರದ ಗಿಡಗಳೂ ಪೂರ್ವ ಕಡೆಯ ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು. \v 23 ಒಳಗಿನ ಅಂಗಳದ ಬಾಗಿಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಿಲಿಗೆ ಎದುರಾಗಿತ್ತು. ಅವನು ಬಾಗಿಲಿನಿಂದ ಬಾಗಿಲಿಗೆ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು. \s2 ದಕ್ಷಿಣದ ಹೆಬ್ಬಾಗಿಲು \p \v 24 ಆಮೇಲೆ ಆತನು ನನ್ನನ್ನು ದಕ್ಷಿಣದ ಕಡೆಗೆ ಕರೆತಂದನು ಅಲ್ಲಿಯೂ ಬಾಗಿಲು ಇತ್ತು, ಅವನು ಅದರ ಕಂಬಗಳನ್ನು ಅದರ ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು. \v 25 ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅಗಲವು ಸುಮಾರು ಹದಿಮೂರು ಮೀಟರ್ ಇತ್ತು. \v 26 ಅದಕ್ಕೆ ಏರುವ ಹಾಗೆ ಏಳೂ ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು. ಅದರ ಕಂಬಗಳು ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರದಿಂದ ಅಲಂಕರಿಸಲಾಗಿತ್ತು. \v 27 ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಿಲಿತ್ತು. ಅವನು ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿಗೆ ದಕ್ಷಿಣವಾಗಿ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು. \s2 ಒಳಗಿನ ಪ್ರಾಕಾರಕ್ಕೆ ಬಾಗಿಲು \p \v 28 ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಿಲನ್ನು ಅಳೆದನು. \v 29 ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು. \v 30 ಸುತ್ತಲಿರುವ ಕೈಸಾಲೆಗಳೂ ಸುಮಾರು ಇಪ್ಪತ್ತೈದು ಮೀಟರ್ ಉದ್ದವಾಗಿಯೂ ಸುಮಾರು ಹದಿಮೂರು ಮೀಟರ್ ಅಗಲವಾಗಿಯೂ ಇದ್ದವು. \v 31 ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗಿದ್ದವು. ಅದರ ಕಂಬಗಳಲ್ಲಿ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು. ಅದಕ್ಕೆ ಏರುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು. \p \v 32 ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ಬಾಗಿಲನ್ನು ಅಳೆದನು. \v 33 ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು. \v 34 ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು. \p \v 35 ಅವನು ನನ್ನನ್ನು ಉತ್ತರದ ಬಾಗಿಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು; \v 36 ಅಲ್ಲಿಯ ಕೋಣೆಯ ಉಪವಿಭಾಗಗಳು, ಅಲ್ಲಿನ ಕಂಬಗಳು, ಅಲ್ಲಿನ ಕೈಸಾಲೆಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು. \v 37 ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು. ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು. \s2 ಯಜ್ಞಗಳನ್ನು ಸಿದ್ಧಪಡಿಸುವ ಕೋಣೆಗಳು \p \v 38 ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಿಲುಗಳ ಕಂಬಗಳ ಬಳಿಯಲ್ಲಿ, ದಹನಬಲಿಯನ್ನು ತೊಳೆಯುವಲ್ಲಿ ಇದ್ದವು; \v 39 ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡು ಮೇಜುಗಳು ಈ ಕಡೆಗೆ ಮತ್ತು ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು. \v 40 ಉತ್ತರ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಟಲುಗಳ ಹತ್ತಿರ, ಆ ಬಾಗಿಲ ಕೈಸಾಲೆಯ ಹೊರಗೆ, ಒಂದು ಕೊನೆಯಲ್ಲಿ ಎರಡು ಮೇಜುಗಳೂ ಇದ್ದವು. \v 41 ಬಾಗಿಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞಗಳನ್ನು ಅರ್ಪಿಸುತ್ತಿದ್ದರು. \v 42 ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ನಿರ್ಮಿತವಾಗಿದ್ದವು. ಅವುಗಳ ಉದ್ದ ಮತ್ತು ಅಗಲ ಸುಮಾರು ಎಂಬತ್ತು ಸೆಂಟಿಮೀಟರ್, ಎತ್ತರವೂ ಸುಮಾರು ಐವತ್ತಮೂರು ಸೆಂಟಿಮೀಟರ್. ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿಸುವ ಸಲಕರಣೆಗಳನ್ನೂ ಇಡುತ್ತಿದ್ದರು. \v 43 ಒಳಗೆ ಸುತ್ತಲಾಗಿ ಅಂಗೈ ಅಗಲದಷ್ಟು ಕೊಂಡಿಗಳು ಜಡಿಯಲಾಗಿದ್ದವು. ಮೇಜುಗಳ ಮೇಲೆ ಬಲಿಯ ಮಾಂಸವಿತ್ತು. \s2 ಯಾಜಕರ ಕೋಣೆಗಳು \p \v 44 ಅನಂತರ ಅವನು ನನ್ನನ್ನು ಒಳಗಿನ ಪ್ರಾಕಾರಕ್ಕೆ ಕರೆತಂದರು. ಅಲ್ಲಿ ಎರಡು ಕೊಠಡಿಗಳು ಇದ್ದವು. ಒಂದು ಉತ್ತರದ ಬಾಗಿಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಿಲಿನ ಕಡೆಗೆ ಉತ್ತರಕ್ಕೆ ಅಭಿಮುಖವಾಗಿತ್ತು. \v 45 ಅವನು ನನಗೆ ಹೇಳಿದ್ದೇನೆಂದರೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ದೇವಾಲಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು. \v 46 ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಬಲಿಪೀಠದ ಮೇಲ್ವಿಚಾರಕರಾದ ಯಾಜಕರದು. ಚಾದೋಕನ ಪುತ್ರರಾದ ಇವರು ಲೇವಿಯ ಕುಲದವರಲ್ಲಿ ಯೆಹೋವ ದೇವರ ಸನ್ನಿಧಿಯ ಸೇವಕರಾಗಿದ್ದಾರೆ.” \p \v 47 ಹೀಗೆ ಅವನು ಅಂಗಳವನ್ನು ಅಳೆದನು. ಅದರ ಉದ್ದವು ಸುಮಾರು ಐವತ್ತು ಮೀಟರ್, ಅಗಲವು ಸುಮಾರು ಐವತ್ತು ಮೀಟರ್ ಚಚ್ಚೌಕವಾಗಿತ್ತು. ಆ ಬಲಿಪೀಠವು ದೇವಾಲಯದ ಮುಂದೆ ಇತ್ತು. \s1 ನೂತನ ದೇವಾಲಯ \p \v 48 ಅವನು ನನ್ನನ್ನು ಮನೆಯ ದ್ವಾರಮಂಟಪಕ್ಕೆ ಕರೆದುಕೊಂಡು ಹೋಗಿ, ದ್ವಾರಮಂಟಪ ಪ್ರತಿಯೊಂದು ಕಂಬವನ್ನೂ ಅಳೆದನು. ದ್ವಾರಮಂಟಪ ಅಗಲವು ಸುಮಾರು ಏಳು ಮೀಟರ್ ಮತ್ತು ಪಕ್ಕದ ಗೋಡೆಗಳ ಅಗಲವು ಎರಡೂ ಬದಿಗಳಲ್ಲಿ ಸುಮಾರು ಒಂದೂವರೆ ಮೀಟರ್ ಆಗಿತ್ತು. \v 49 ದ್ವಾರಮಂಟಪದ ಅಗಲವು ಸುಮಾರು ಹನ್ನೊಂದು ಮೀಟರ್ ಮತ್ತು ಮುಂಭಾಗದಿಂದ ಹಿಂಭಾಗಕ್ಕೆ ಸುಮಾರು ಆರು ಮೀಟರ್. ಅದನ್ನು ಹತ್ತಲು ಮೆಟ್ಟಿಲುಗಳಿದ್ದವು ಮತ್ತು ಎರಡೂ ಬದಿಗಳಲ್ಲಿ ಬಾಗಿಲಿನ ಚೌಕಟ್ಟುಗಳ ಬದಿಗಳಲ್ಲಿ ಕಂಬಗಳು ಇದ್ದವು. \c 41 \p \v 1 ಆಮೇಲೆ, ಆ ಮನುಷ್ಯನು ನನ್ನನ್ನು ದೇವಾಲಯಕ್ಕೆ ಕರೆತಂದು ಕಂಬಗಳನ್ನು ಎರಡೂ ಕಡೆಯಲ್ಲಿ ಸುಮಾರು 3.2 ಮೀಟರ್ ಎಂದು ಅಳೆದನು. ಇದೇ ಆ ಗುಡಾರದ ಉದ್ದಗಲವಾಗಿತ್ತು. \v 2 ಬಾಗಿಲಿನ ಅಗಲವು ಸುಮಾರು ಐದು ಮೀಟರ್ ಮತ್ತು ಅದರ ಎರಡೂ ಬದಿಗಳಲ್ಲಿ ಗೋಡೆಗಳ ಅಗಲ ಸುಮಾರು ಎರಡೂವರೆ ಮೀಟರ್. ಅವನು ಮುಖ್ಯಸಭಾಂಗಣವನ್ನೂ ಅಳೆದನು. ಅದು ಸುಮಾರು ಇಪ್ಪತ್ತೊಂದು ಮೀಟರ್ ಉದ್ದ ಮತ್ತು ಸುಮಾರು ಹನ್ನೊಂದು ಮೀಟರ್ ಅಗಲವಿತ್ತು. \p \v 3 ಅನಂತರ ಅವನು ಒಳಗೆ ಹೋಗಿ ಪರಿಶುದ್ಧಸ್ಥಳದ ಪ್ರವೇಶದ್ವಾರದ ಕಂಬಗಳನ್ನು ಅಳೆದನು; ಒಂದೊಂದು ಕಂಬವು ಸುಮಾರು ಒಂದು ಮೀಟರ್ ಅಗಲವಿತ್ತು. ಪ್ರವೇಶದ್ವಾರವು ಸುಮಾರು ಮೂರು ಮೀಟರ್ ಅಗಲವಾಗಿತ್ತು ಮತ್ತು ಅದರ ಎರಡೂ ಬದಿಯ ಗೋಡೆಯು ಸುಮಾರು ನಾಲ್ಕು ಮೀಟರ್ ಅಗಲವಾಗಿತ್ತು. \v 4 ಅವನು ಒಳಗಿನ ಪರಿಶುದ್ಧಸ್ಥಳದ ಉದ್ದವನ್ನು ಅಳೆದನು; ಅದು ಸುಮಾರು ಹತ್ತು ಮೀಟರ್ ಆಗಿತ್ತು; ಅದರ ಅಗಲವು ಮುಖ್ಯ ಸಭಾಂಗಣದ ಕೊನೆಯವರೆಗೂ ಸುಮಾರು ಹತ್ತು ಮೀಟರ್ ಆಗಿತ್ತು. ಅವನು ನನಗೆ, “ಇದು ಅತ್ಯಂತ ಪವಿತ್ರ ಸ್ಥಳವಾಗಿದೆ” ಎಂದು ಹೇಳಿದನು. \p \v 5 ಅನಂತರ ಅವನು ಆಲಯದ ಗೋಡೆಯನ್ನು ಅಳೆದನು; ಅದು ಸುಮಾರು ಮೂರು ಮೀಟರ್ ದಪ್ಪವಾಗಿತ್ತು, ಮತ್ತು ಆಲಯದ ಸುತ್ತಲಿನ ಕೋಣೆಗಳ ಅಗಲವು ಪ್ರತಿ ಬದಿಯಲ್ಲಿ ಸುಮಾರು ಎರಡು ಮೀಟರ್ ಆಗಿತ್ತು. \v 6 ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತಾಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತು ಕೊಠಡಿಗಳಿದ್ದವು. ಪಕ್ಕದ ಕೋಣೆಗಳಿಗೆ ಆಧಾರವಾಗಿ ದೇವಾಲಯದ ಗೋಡೆಯ ಸುತ್ತಲೂ ಮುಂಚಾಚಿರುವಿಕೆಗಳು ಇದ್ದವು. ಇದರಿಂದಾಗಿ ಪೋಷಕ ಭಾಗಗಳನ್ನು ದೇವಾಲಯದ ಗೋಡೆಯೊಳಗೆ ಸೇರಿಸಲಾಗಿಲ್ಲ. \v 7 ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು. ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದುಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು. \p \v 8 ಆಲಯದ ಸುತ್ತಮುತ್ತಲೂ ಒಂದು ಜಗಲಿಯನ್ನು ನಾನು ನೋಡಿದೆನು. ಅದು ಪಕ್ಕದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆಯ ಕೋಲಿನಷ್ಟು ಎತ್ತರವಾಗಿತ್ತು. \v 9 ಹೊರಗಡೆಯಲ್ಲಿ ಪಕ್ಕದ ಕೊಠಡಿಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಕಡೆಯ ಕೊಠಡಿಗಳ ಸ್ಥಳವಾಗಿತ್ತು. \v 10 ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು; \v 11 ಪಕ್ಕದ ಕೊಠಡಿಗಳ ಬಾಗಿಲುಗಳು ತೆರೆದ ಸ್ಥಳದ ಕಡೆಗೆ ಇದ್ದವು. ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ತೆರೆದ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು. \p \v 12 ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು. ಅದರ ಉದ್ದವು ತೊಂಬತ್ತು ಮೊಳವಾಗಿತ್ತು. \p \v 13 ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದೂ ಅಳೆದನು; \v 14 ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು. \p \v 15 ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂಥ ಕಟ್ಟಡವನ್ನು ಅಂದರೆ ಶಾಲೆಗಳನ್ನೂ ಆ ಕಡೆ ಮತ್ತು ಈ ಕಡೆ ನೂರು ಮೊಳವೆಂದೂ ಅಳೆದನು. \p ಮುಖ್ಯ ಸಭಾಂಗಣ, ಗರ್ಭಗೃಹ ಮತ್ತು ಅಂಗಳದ ಮುಂಭಾಗದಲ್ಲಿ ದ್ವಾರಮಂಟಪ, \v 16 ಹಾಗೆಯೇ ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು ಮತ್ತು ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತುಗಳಲ್ಲಿ ಬಾಗಿಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಕೆಯಾಗಿದ್ದವು. ನೆಲ, ಕಿಟಕಿಯವರೆಗಿನ ಗೋಡೆ ಮತ್ತು ಕಿಟಕಿಗಳನ್ನು ಮುಚ್ಚಲಾಯಿತು. \v 17 ಬಾಗಿಲಿನ ಮೇಲಕ್ಕೂ ಒಳಗಿನ ಆಲಯದವರೆಗೂ ಮತ್ತು ಹೊರಗೂ ಸುತ್ತಲೂ ಇದ್ದ ಗೋಡೆ, ಹೀಗೆ ಒಳಗೂ ಹೊರಗೂ ಎಲ್ಲವನ್ನೂ ಅಳೆದನು. \v 18 ಅದು ಕೆರೂಬಿಗಳು ಮತ್ತು ಖರ್ಜೂರದ ಮರಗಳ ಚಿತ್ರಗಳಿಂದ ಕೂಡಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಮತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖಗಳು ಇದ್ದವು. \v 19 ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಮನುಷ್ಯನ ಮುಖವು, ಆ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಮತ್ತು ಸುತ್ತಮುತ್ತಲೂ ಚಿತ್ರಮಯವಾಗಿತ್ತು. \v 20 ನೆಲವು ಮೊದಲುಗೊಂಡು ಬಾಗಿಲಿನ ಮೇಲಿನವರೆಗೂ ದೇವಾಲಯದ ಗೋಡೆಯಲ್ಲಿಯೂ ಕೆರೂಬಿಗಳು ಮತ್ತು ಖರ್ಜೂರದ ಮರಗಳು ಚಿತ್ರಮಯವಾಗಿದ್ದವು. \p \v 21 ಮುಖ್ಯ ಸಭಾಂಗಣದ ಕಂಬಗಳು ಚಚ್ಚೌಕವಾಗಿದ್ದವು. ಮಹಾಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು. \v 22 ಸುಮಾರು ಒಂದೂವರೆ ಮೀಟರ್ ಎತ್ತರ ಮತ್ತು ಸುಮಾರು ಒಂದು ಮೀಟರ್ ಉದ್ದ ಮತ್ತು ಅಗಲವಿರುವ ಮರದ ಬಲಿಪೀಠವಿತ್ತು. ಅದರ ಮೂಲೆಗಳು, ಅದರ ತಳ ಮತ್ತು ಅದರ ಬದಿಗಳು ಮರದಿಂದ ಆಗಿದ್ದವು. ಆ ಮನುಷ್ಯನು ನನಗೆ, “ಇದು ಯೆಹೋವ ದೇವರ ಮುಂದೆ ಇರುವ ಮೇಜು” ಎಂದು ಹೇಳಿದನು. \v 23 ದೇವಾಲಯಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಎರಡು ಬಾಗಿಲುಗಳಿದ್ದವು. \v 24 ಆ ಎರಡು ಬಾಗಿಲುಗಳಿಗೆ ಎರಡು ಕದಗಳಿದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಿಲಿಗೆ ಎರಡು, ಇನ್ನೊಂದು ಬಾಗಿಲಿಗೆ ಎರಡು ಇದ್ದವು. \v 25 ಆಲಯದ ಬಾಗಿಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಚಿತ್ರಿತವಾಗುವ ಹಾಗೆಯೇ ಚಿತ್ರಿತವಾಗಿದ್ದವು. ದ್ವಾರಾಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು. \v 26 ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗಣದ ಪಕ್ಕಕ್ಕೂ ಆಲಯದ ಪಕ್ಕದ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪದ ಹಲಗೆಗಳೂ ಸಹ ಇದ್ದವು. \c 42 \s1 ಯಾಜಕರ ಕೋಣೆಗಳು \p \v 1 ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು. \v 2 ಉತ್ತರ ಭಾಗದಲ್ಲಿ ಬಾಗಿಲು ಇದ್ದ ಕಟ್ಟಡವು ಸುಮಾರು ಐವತ್ತೆರಡು ಮೀಟರ್ ಉದ್ದ ಮತ್ತು ಇಪ್ಪತ್ತಾರು ಮೀಟರ್ ಅಗಲವಿತ್ತು. \v 3 ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡಸಾಲೆಗಳ ಮೇಲೆ ಪಡಸಾಲೆಗಳಿದ್ದವು. \v 4 ಕೊಠಡಿಗಳ ಮುಂದೆ ಸುಮಾರು ಐದು ಮೀಟರ್ ಅಗಲ ಮತ್ತು ಸುಮಾರು ಐವತ್ತೆರಡು ಮೀಟರ್ ಉದ್ದದ ಒಳ ಮಾರ್ಗವಿತ್ತು. ಅದರ ಬಾಗಿಲುಗಳು ಉತ್ತರಕ್ಕೆ ಎದುರಾಗಿದ್ದವು. \v 5 ಈಗ ಮೇಲಿನ ಕೊಠಡಿಗಳೇ ಚಿಕ್ಕದಾಗಿದ್ದವು. ಏಕೆಂದರೆ ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮತ್ತು ಮಧ್ಯ ಭಾಗಕ್ಕಿಂತಲೂ ಪಡಸಾಲೆಗಳು ಎತ್ತರದಲ್ಲಿದ್ದವು. \v 6 ಇವು ಮೂರು ಅಂತಸ್ತುಗಳಾಗಿದ್ದವು. ಆದರೆ ಅಂಗಳದ ಕಂಬಗಳ ಹಾಗೆ ಇವುಗಳಿಗೆ ಕಂಬಗಳಿರಲಿಲ್ಲ. ಆದ್ದರಿಂದ ನೆಲಕ್ಕೆ ಎತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಿನ ಮತ್ತು ನಡುವಣ ಕೋಣೆಗಳಿಗಿಂತ ಚಿಕ್ಕದಾಗಿದ್ದವು. \v 7 ಕೊಠಡಿಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು. \v 8 ಏಕೆಂದರೆ ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿಯೂ ಮತ್ತು ದೇವಾಲಯದ ಮುಂದೆ ನೂರು ಮೊಳಗಳಿದ್ದವು. \v 9 ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶವಿತ್ತು. \p \v 10 ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು. \v 11 ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು. ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು. ಉತ್ತರ ದಿಕ್ಕಿನ ಬಾಗಿಲುಗಳು \v 12 ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು. \p \v 13 ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣದ ಕೊಠಡಿಗಳು ಪರಿಶುದ್ಧವಾದವು. ಅಲ್ಲಿ ಯೆಹೋವ ದೇವರಿಗಾಗಿ ಬರುವ ಯಾಜಕರು ಅತಿ ಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ. ಮತ್ತು ಕಾಣಿಕೆಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅಲ್ಲಿಡುತ್ತಾರೆ. ಆ ಸ್ಥಳವು ಪರಿಶುದ್ಧ. \v 14 ಯಾಜಕರು ಅವುಗಳಲ್ಲಿ ಪ್ರವೇಶಿಸುವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು. ಏಕೆಂದರೆ ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸಮೀಪಿಸಬೇಕು,” ಎಂದನು. \p \v 15 ಹೀಗೆ ಅವನು ಒಳಗಿನ ಆಲಯದ ಅಳತೆಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಿಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು. \v 16 ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುಮಾರು 265 ಮೀಟರ್ ಆಗಿತ್ತು. \v 17 ಉತ್ತರದ ಕಡೆಯಲ್ಲಿಯೂ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಸುಮಾರು 265 ಮೀಟರ್ ಎಂದು ಅಳೆದನು. \v 18 ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗವನ್ನು ಸುಮಾರು 265 ಮೀಟರ್ ಎಂದು ಅಳೆದನು. \v 19 ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಸುಮಾರು 265 ಮೀಟರ್ ಎಂದು ಅಳೆದನು. \v 20 ಅವನು ನಾಲ್ಕು ಕಡೆಗಳಿಂದ ಅಳೆದನು. ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಸ್ಥಳವನ್ನೂ ಪ್ರತ್ಯೇಕಪಡಿಸುವ ಹಾಗೆ ಅದಕ್ಕೆ ಸುತ್ತಲು ಸುಮಾರು 265 ಮೀಟರ್ ಉದ್ದ ಮತ್ತು ಸುಮಾರು 265 ಮೀಟರ್ ಗೋಡೆ ಇತ್ತು. \c 43 \s1 ದೇವಾಲಯದಲ್ಲಿ ಯೆಹೋವ ದೇವರ ಮಹಿಮೆಯ ಪುನರಾಗಮನ \p \v 1 ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಿಲಿಗೆ ಕರೆದುಕೊಂಡು ಹೋದನು. \v 2 ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು. \v 3 ನಾನು ಕಂಡ ದರ್ಶನವು, ಅವನು ಪಟ್ಟಣವನ್ನು ನಾಶಮಾಡಲು ಬಂದಾಗ ನಾನು ನೋಡಿದ ದೃಷ್ಟಿಯಂತೆ ಮತ್ತು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ದರ್ಶನಗಳಂತೆ ಮತ್ತು ಆಗ ನಾನು ಬೋರಲು ಬಿದ್ದೆನು. \v 4 ಆಗ ಯೆಹೋವ ದೇವರ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿಸಿತು. \v 5 ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆತಂದಿತು. ಯೆಹೋವ ದೇವರ ಮಹಿಮೆಯಿಂದ ಆಲಯವು ತುಂಬಿಕೊಂಡಿತು. \p \v 6 ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವುದನ್ನು ಕೇಳಿದೆನು. ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿದ್ದನು. \v 7 ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ. \v 8 ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ. ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿಬಿಟ್ಟಿದ್ದೇನೆ. \v 9 ಈಗ ಅವರು ತಮ್ಮ ವ್ಯಭಿಚಾರವನ್ನು ಮತ್ತು ನಿಮ್ಮ ರಾಜರ ಅಂತ್ಯಕ್ರಿಯೆಯ ವಿಧಿಗಳನ್ನು ಬಿಟ್ಟುಬಿಡಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ. \p \v 10 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ದೇವಾಲಯನ್ನು ವಿವರಿಸಿರಿ. ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಅದರ ಪರಿಪೂರ್ಣತೆಯನ್ನು ಪರಿಗಣಿಸಲಿ. \v 11 ಅವರು ಮಾಡಿದ ಎಲ್ಲದಕ್ಕಾಗಿ ನಾಚಿಕೆಪಟ್ಟರೆ, ದೇವಾಲಯದ ರೂಪವನ್ನೂ, ಅದರ ಆಕಾರವನ್ನೂ, ಅದರ ಆಗಮನ ನಿರ್ಗಮನಗಳನ್ನೂ, ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ಕಟ್ಟಳೆಗಳನ್ನೂ ಅವರಿಗೆ ವಿವರಿಸು. ಅವರು ಅದರ ರಚನಾವಿಧಾನಗಳಿಗೆ ನಂಬಿಗಸ್ತರಾಗಿರುವಂತೆಯೂ ಅವರು ಅದರ ಎಲ್ಲಾ ಕಟ್ಟಳೆಗಳನ್ನೂ ಅನುಸರಿಸುವಂತೆಯೂ ಅವರ ಮುಂದೆಯೇ ಇವುಗಳನ್ನು ಬರೆ. \p \v 12 “ಇದು ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿ ಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧವಾಗಿದೆ. ಇಗೋ, ಇದೇ ಆ ಆಲಯದ ನಿಯಮವಾಗಿದೆ. \s1 ಮಹಾ ಬಲಿಪೀಠವನ್ನು ಪುನಃಸ್ಥಾಪಿಸಲಾಗಿದೆ \p \v 13 “ಬಲಿಪೀಠವು ಮೀಟರ್ ಅಳತೆಯ ಪ್ರಕಾರ ಹೀಗಿರಬೇಕು. ಕೆಳಭಾಗದ ಎತ್ತರ ಐವತ್ತು ಸೆಂಟಿಮೀಟರ್, ಮೇಲಿನ ಬಿಡುವಿನ ಅಗಲವು ಸುತ್ತಲೂ ಐವತ್ತು ಸೆಂಟಿಮೀಟರ್, ಬಿಡುವಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್; \v 14 ಕೆಳಭಾಗದ ಎತ್ತರವು ಒಂದು ಮೊಳ ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಲೂ ದಿಂಡಿನ ಅಗಲವು ಒಂದು ಮೊಳ. ಇದೇ ಬಲಿಪೀಠ. ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರವು ಎರಡು ಮೊಳ, ಅದರ ಮೇಲಣ ಬಿಡುವಿನ ಅಗಲ ಒಂದು ಮೊಳ. ಸಣ್ಣ ಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ. \v 15 ಅಗ್ನಿಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್ ಆ ಅಗ್ನಿಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು. \v 16 ಬಲಿಪೀಠದ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು, ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು. \v 17 ಅದರ ಅಂಚು ನಾಲ್ಕು ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ಅದರ ತಳವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಎದುರಾಗಿರಬೇಕು.” \p \v 18 ಅವರು ನನಗೆ ಹೇಳಿದ್ದೇನೆಂದರೆ: “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಬಲಿಪೀಠವನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ. \v 19 ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಬಳಿಗೆ ಸಮೀಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯರಿಗೂ ದೋಷಪರಿಹಾರ ಬಲಿಗಾಗಿ ಎಳೆಯ ಹೋರಿಯನ್ನು ಕೊಡಬೇಕು. \v 20 ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಬಲಿಪೀಠವನ್ನು ಶುದ್ಧೀಕರಿಸಿ ಮತ್ತು ಅದಕ್ಕೆ ಪ್ರಾಯಶ್ಚಿತ್ತವನ್ನು ಮಾಡಿರಿ. \v 21 ಇದಲ್ಲದೆ ನೀನು ಹೋರಿಯನ್ನೂ ಸಹ ದೋಷಪರಿಹಾರ ಬಲಿಗೆ ತೆಗೆದುಕೊಂಡು ಆಲಯದ ನೇಮಕವಾದ ಸ್ಥಳದಲ್ಲಿ, ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು. \p \v 22 “ಎರಡನೆಯ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ದೋಷಪರಿಹಾರ ಬಲಿಯಾಗಿ ಅರ್ಪಿಸಬೇಕು. ಅವರು ಬಲಿಪೀಠವನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು. \v 23 ಹೀಗೆ ಅವರು ಶುದ್ಧಮಾಡಿದಾಗ ಕೊನೆಯಲ್ಲಿ ದೋಷವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು. \v 24 ನೀನು ಅವುಗಳನ್ನು ಯೆಹೋವ ದೇವರ ಮುಂದೆ ಅರ್ಪಿಸಬೇಕು. ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಬೇಕು. \p \v 25 “ಏಳು ದಿನಗಳ ತನಕ ಪ್ರತಿದಿನವೂ ನೀನು ದೋಷಪರಿಹಾರ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ಧಮಾಡಬೇಕು. \v 26 ಏಳು ದಿನಗಳ ತನಕ ಅವರು ಬಲಿಪೀಠವನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು. \v 27 ಈ ದಿನಗಳು ತೀರಿದಾಗ ಎಂಟನೆಯ ದಿನದ ತರುವಾಯ ಯಾಜಕರು ಬಲಿಪೀಠದ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” \c 44 \s1 ಯಾಜಕತ್ವದ ಪುನಃಸ್ಥಾಪನೆ \p \v 1 ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ಧಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು. ಅದು ಮುಚ್ಚಿತ್ತು. \v 2 ಆಮೇಲೆ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಬಾಗಿಲು ಮುಚ್ಚೇ ಇರಬೇಕು. ಇದು ತೆರೆಯಬಾರದು. ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು. ಏಕೆಂದರೆ ಇಸ್ರಾಯೇಲರ ಯೆಹೋವ ದೇವರು ಇದರಿಂದ ಪ್ರವೇಶಿಸಿದ್ದಾರೆ. ಆದ್ದರಿಂದ ಇದು ಮುಚ್ಚಿರಬೇಕು. \v 3 ಇದು ಪ್ರಭುವಿಗಾಗಿ ಇದೆ; ಪ್ರಭುವು ಅವರೊಳಗೆ ಕುಳಿತುಕೊಂಡು, ಯೆಹೋವ ದೇವರ ಮುಂದೆ ರೊಟ್ಟಿಯನ್ನು ತಿನ್ನಬೇಕು. ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.” \p \v 4 ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು. ನಾನು ನೋಡಿದೆ ಯೆಹೋವ ದೇವರ ಮಹಿಮೆಯು ಯೆಹೋವ ದೇವರ ಆಲಯವನ್ನು ತುಂಬಿಕೊಂಡಿತು, ನಾನು ಬೋರಲು ಬಿದ್ದೆನು. \p \v 5 ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಯೆಹೋವ ದೇವರ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನಿಯಮದ ವಿಷಯವಾಗಿಯೂ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ. ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧಸ್ಥಳದ ಪ್ರತಿಯೊಂದು ಹಾದುಹೋಗುಗಳನ್ನೂ ಗಮನಿಸು. \v 6 ತಿರುಗಿಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ. \v 7 ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ. \v 8 ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ, ಬದಲಿಗೆ ಅನ್ಯದೇಶೀಯರನ್ನು ನನ್ನ ಪರಿಶುದ್ಧ ಸ್ಥಳದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿದಿರಿ. \v 9 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲರೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಬಾರದು. \p \v 10 “ ‘ಇಸ್ರಾಯೇಲರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರೂ ಸಹ ತಮ್ಮ ಪಾಪಗಳನ್ನು ಹೊರುವರು. \v 11 ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿಸುವವರಾಗಿರುವರು. ಆಲಯದ ಬಾಗಿಲುಗಳ ಮೇಲ್ವಿಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು. ಅವರು ಜನರಿಗೋಸ್ಕರ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡಿ ಅವರಿಗೆ ಸೇವೆ ಮಾಡುವ ಹಾಗೆ ಅವರ ಮುಂದೆ ನಿಲ್ಲುವರು. \v 12 ಆದರೆ ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲಿನ ಮನೆತನದವರಿಗೆ ಪಾಪದ ಆತಂಕವಾದದ್ದರಿಂದ, ನಾನು ಅವರಿಗೆ ವಿರುದ್ಧವಾಗಿ ನನ್ನ ಕೈಯನ್ನು ಚಾಚಿದ್ದೇನೆ. ಅವರು ತಮ್ಮ ಪಾಪವನ್ನು ಹೊರುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 13 ಅವರು ಯಾಜಕರಾಗಿ ನನ್ನನ್ನು ಸಮೀಪಿಸದೆ ಮಹಾಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸಮೀಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು. \v 14 ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆಗೋಸ್ಕರವೂ ಅದರಲ್ಲಿ ಮಾಡುವಂತಹ ಎಲ್ಲವುಗಳಿಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿಕೊಳ್ಳುವವರನ್ನಾಗಿ ಮಾಡುವೆನು. \p \v 15 “ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 16 ಇವರು ಮಾತ್ರ ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ಇವರು ಮಾತ್ರ ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಮತ್ತು ನನಗೆ ಕಾವಲುಗಾರರಾಗಿ ಸೇವೆ ಸಲ್ಲಿಸಬೇಕು. \p \v 17 “ ‘ಅವರು ಒಳಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಅವರು ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು. \v 18 ಅವರ ತಲೆಗಳ ಮೇಲೆ ನಾರಿನ ಮುಂಡಾಸಗಳೂ, ಅವರ ಸೊಂಟಗಳ ಮೇಲೆ ನಾರಿನ ಒಳಉಡುಪುಗಳೂ ಇರಬೇಕು. ಅವರು ಬೆವರು ಬರುವಂಥವುಗಳನ್ನು ಕಟ್ಟಿಕೊಳ್ಳಬಾರದು. \v 19 ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು. \p \v 20 “ ‘ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದಕೂದಲನ್ನು ಬೆಳೆಸದೆ ತಮ್ಮ ತಲೆ ಕೂದಲುಗಳನ್ನು ಕತ್ತರಿಸಬೇಕು. \v 21 ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾರಸವನ್ನು ಕುಡಿಯಬಾರದು. \v 22 ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ಸಂತಾನದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ. \v 23 ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧಾಶುದ್ಧ ವ್ಯತ್ಯಾಸವನ್ನೂ ವಿವರಿಸಬೇಕು. \p \v 24 “ ‘ವ್ಯಾಜ್ಯವಾಗುವಾಗ ಅದನ್ನು ತೀರಿಸಲು ಯಾಜಕರು ನನ್ನ ನ್ಯಾಯಾನುಸಾರವಾಗಿ ನ್ಯಾಯಾಧಿಪತಿಗಳಾಗಿ ನ್ಯಾಯತೀರಿಸಲಿ. ಅವರು ನನ್ನ ತೀರ್ಪುಗಳನ್ನೂ, ನನ್ನ ನಿಯಮಗಳನ್ನೂ ನಾನು ನೇಮಿಸಿದ ಹಬ್ಬಗಳಲ್ಲಿಯೂ ನನ್ನ ಸಬ್ಬತ್ ದಿನಗಳಲ್ಲಿಯೂ ಪರಿಶುದ್ಧವಾಗಿ ಪಾಲಿಸಬೇಕು. \p \v 25 “ ‘ಯಾಜಕರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆತಾಯಿ, ಮಗ, ಮಗಳು, ಸಹೋದರ, ಗಂಡನಿಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು. \v 26 ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು. \v 27 ಅವನು ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವುದಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಪರಿಹಾರಕ ಬಲಿಯನ್ನು ಅರ್ಪಿಸಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \p \v 28 “ ‘ಅದು ಅವರಿಗೆ ಬಾಧ್ಯತೆಯಾಗಿರುವುದು; ನಾನೇ ಅವರಿಗೆ ಬಾಧ್ಯನಾಗಿರುವೆನು. ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯವನ್ನು ಕೊಡಬಾರದು. ಏಕೆಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು. \v 29 ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು. \v 30 ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು. \v 31 ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು. \c 45 \s1 ಇಸ್ರಾಯೇಲಿನ ಸಂಪೂರ್ಣ ಪುನಃಸ್ಥಾಪನೆ \p \v 1 “ ‘ಇದಲ್ಲದೆ ನೀವು ದೇಶವನ್ನು ಚೀಟುಹಾಕಿ ಸೊತ್ತಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಯೆಹೋವ ದೇವರಿಗೆ ಕಾಣಿಕೆಯಾಗಿ ಕೊಡಬೇಕು. ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ. ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ. \v 2 ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಮತ್ತು ಅದರ ಸುತ್ತಲೂ ಸುಮಾರು ಇಪ್ಪತ್ತಾರು ಮೀಟರ್ ತೆರೆದ ಭೂಮಿ ಇರಬೇಕು. ಇರುವುದು. \v 3 ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಮತ್ತು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು. \v 4 ದೇಶದ ಪರಿಶುದ್ಧ ಭಾಗವು ಯೆಹೋವ ದೇವರಿಗೆ ಸೇವೆ ಮಾಡಲು ಸಮೀಪಿಸುವಂತೆ, ಪರಿಶುದ್ಧಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು. \v 5 ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆ ಮಾಡುವ ಲೇವಿಯರಿಗೆ ತಮಗೆ ಸೊತ್ತಾಗಿ ಇಪ್ಪತ್ತು ಕೊಠಡಿಗಳಿಗಾಗಿ ಇರಬೇಕು. \p \v 6 “ ‘ನೀವು ಪಟ್ಟಣದ ಸೊತ್ತನ್ನು ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು. ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವುದು. \p \v 7 “ ‘ಕಾಣಿಕೆಯಾದ ಪರಿಶುದ್ಧಭಾಗದ ಮುಂದೆಯೂ ಪಟ್ಟಣದ ಸೊತ್ತಿನ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು. ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಒಂದು ಗೋತ್ರದ ಸ್ವಾಸ್ತ್ಯದ ಉದ್ದಕ್ಕೆ ಸರಿಸಮಾನವಾಗಿರುವುದು. \v 8 ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸೊತ್ತಾಗಿರುವುದು. ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವ ಪಡಿಸುವುದೇ ಇಲ್ಲ. ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲಾಗುವುದು. \p \v 9 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 10 ನ್ಯಾಯವಾದ ತಕ್ಕಡಿಯೂ ನ್ಯಾಯವಾದ ಎಫಾವೂ\f + \fr 45:10 \fr*\ft ಎಫಾವೂ ಸುಮಾರು 22 ಲೀಟರ್\ft*\f* ನ್ಯಾಯವಾದ ಬಾತ್\f + \fr 45:10 \fr*\ft ಬಾತ್ ಸುಮಾರು 22 ಲೀಟರ್\ft*\f* ಅಳತೆಯೂ ನಿಮಗಿರಬೇಕು. \v 11 ಎಫಾ ಎಂಬ ಧಾನ್ಯದ ಅಳತೆ ಮತ್ತು ಬತ್ ಎಂಬ ರಸದ್ರವ್ಯದ ಅಳತೆ ಒಂದೇ ಪ್ರಮಾಣವಾಗಿರಬೇಕು; ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಎಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಹೋಮೆರ್ ಎರಡಕ್ಕೂ ಪ್ರಮಾಣಿತ ಅಳತೆಗೆ ಸಂಬಂಧವಾಗಿರಬೇಕು. \v 12 ಒಂದು ಶೆಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು. ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು ಶೇಕೆಲು, ಇಪ್ಪತ್ತೈದು ಶೇಕೆಲು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ. \p \v 13 “ ‘ಇದು ಸಮರ್ಪಿಸಬೇಕಾದ ವಿಶೇಷ ಕಾಣಿಕೆ: ನೀವು ಜವೆಗೋಧಿಯ ಓಮೆರಿನಲ್ಲಿ ಏಫದ ಆರನೆಯ ಪಾಲನ್ನು ಕಾಣಿಕೆಯಾಗಿ ಕೊಡಬೇಕು. \v 14 ಒಂದು ಬಾತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗ, ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಎಫಾ ಅಳತೆಯ ಆರನೆಯ ಒಂದು ಪಾಲು; ಒಂದು ಬಾತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ, ಒಂದು ಕೋರ್ ಅಂದರೆ, ಹತ್ತು ಬಾತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬಾತ್ ಅಳತೆಯ ಹತ್ತನೆಯ ಒಂದು ಪಾಲು; ಏಕೆಂದರೆ ಹತ್ತು ಬಾತ್ ಒಂದೇ ಓಮೆರ್. \v 15 ಇಸ್ರಾಯೇಲಿನ ನೀರಿರುವ ಹುಲ್ಲುಗಾವಲುಗಳಿಂದ ಇನ್ನೂರು ಮಂದಿಯ ಹಿಂಡಿನಿಂದ ಒಂದು ಕುರಿಯನ್ನು ತೆಗೆದುಕೊಳ್ಳಬೇಕು. ಇವುಗಳನ್ನು ಜನರಿಗಾಗಿ ಪ್ರಾಯಶ್ಚಿತ್ತವನ್ನು ಮಾಡಲು ಧಾನ್ಯಯಜ್ಞಗಳು, ದಹನಬಲಿಗಳು ಮತ್ತು ಸಮಾಧಾನದ ಅರ್ಪಣೆಗಳಿಗಾಗಿ ಬಳಸಲಾಗುವುದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \v 16 ದೇಶದಲ್ಲಿರುವ ಜನರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭುವಿಗಾಗಿ ಕೊಡಬೇಕು. \v 17 ಹಬ್ಬಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವಿಶ್ರಾಂತಿಯ ದಿನಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವುದು ಪ್ರಭುವಿನ ಕೆಲಸವಾಗಿರುವುದು. ಆತನು ಇಸ್ರಾಯೇಲ್ಯರಿಗೆ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಳನ್ನು, ಧಾನ್ಯದ ಅರ್ಪಣೆಗಳನ್ನು, ದಹನಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಒದಗಿಸುವನು. \p \v 18 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೆಯ ಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡಬೇಕು. \v 19 ಯಾಜಕನು ದೋಷಪರಿಹಾರ ಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು; \v 20 ತಿಳಿಯದೆ ಅಥವಾ ಅಜ್ಞಾನದಿಂದ ಪಾಪಮಾಡುವ ಪ್ರತಿಯೊಬ್ಬರಿಗೂ ತಿಂಗಳ ಏಳನೇ ದಿನದಲ್ಲಿ ನೀವು ಅದೇ ರೀತಿ ಮಾಡಬೇಕು; ಈ ರೀತಿಯಾಗಿ ನೀವು ದೇವಾಲಯಕ್ಕೆ ಪ್ರಾಯಶ್ಚಿತ್ತವನ್ನು ಮಾಡಬೇಕು. \p \v 21 “ ‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕಹಬ್ಬವು ಇರಬೇಕು. ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. \v 22 ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ದೋಷಪರಿಹಾರ ಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು. \v 23 ಹಬ್ಬದ ಏಳು ದಿವಸಗಳಲ್ಲಿ ಪ್ರತಿದಿನವೂ ಅವನು ಯೆಹೋವ ದೇವರಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿದಿನವೂ ದೋಷಪರಿಹಾರ ಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು. \v 24 ಅವನು ಒಂದೊಂದು ಹೋರಿಗೆ ಮತ್ತು ಟಗರಿಗೆ ಐದು ಕಿಲೋಗ್ರಾಂ ಗೋಧಿಹಿಟ್ಟನ್ನೂ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಧಾನ್ಯ ಸಮರ್ಪಣೆಯಾಗಿ ಅರ್ಪಿಸಬೇಕು. \p \v 25 “ ‘ಏಕೆಂದರೆ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕ ಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯ ಸಮರ್ಪಣೆ, ಎಣ್ಣೆ ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು. \c 46 \p \v 1 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು. \v 2 ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು. \v 3 ದೇಶದ ಜನರು ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಈ ಬಾಗಿಲಿನ ಕದದ ಹತ್ತಿರ ಯೆಹೋವ ದೇವರ ಮುಂದೆ ಇದೇ ರೀತಿ ಆರಾಧಿಸಬೇಕು. \v 4 ರಾಜಕುಮಾರನು ಯೆಹೋವ ದೇವರಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು. \v 5 ಟಗರಿನ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಸುಮಾರು ಹದಿನಾರು ಕಿಲೋಗ್ರಾಂ\f + \fr 46:5 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಒಂದು ಎಫಾ, \fqa*\ft ಅಂದರೆ ಸುಮಾರು 16 ಕಿಲೋಗ್ರಾಂ\ft*\f* ಆಗಿರಬೇಕು ಮತ್ತು ಕುರಿಮರಿಗಳ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಅವನ ಕೈಲಾದಷ್ಟು ಆಗಿರಬೇಕು. ಇದರ ಜೊತೆಗೆ ಪ್ರತಿ ಎಫಾ ಪ್ರಮಾಣದ ಧಾನ್ಯ ಸಮರ್ಪಣೆಯಾಗಿ ಸುಮಾರು ಮೂರುವರೆ ಲೀಟರ್\f + \fr 46:5 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಒಂದು ಹಿನ್, \fqa*\ft ಅಂದರೆ ಸುಮಾರು ಮೂರುವರೆ ಲೀಟರ್\ft*\f* ಎಣ್ಣೆಯನ್ನು ಅರ್ಪಿಸಬೇಕು. \v 6 ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು. \v 7 ಅವನು ಹೋರಿಗೆ ಒಂದು ಎಫವನ್ನೂ ಟಗರಿಗೆ ಒಂದು ಎಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟನ್ನು ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನಿನ ಜೊತೆಗೆ ಅವನು ಧಾನ್ಯ ಸಮರ್ಪಣೆಗಾಗಿ ಸಿದ್ಧಮಾಡಬೇಕು. \v 8 ರಾಜಕುಮಾರನು ಪ್ರವೇಶಿಸುವಾಗ, ಅವನು ಬಾಗಿಲಿನ ದ್ವಾರಮಂಟಪದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು. \p \v 9 “ ‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು. \v 10 ರಾಜಕುಮಾರನು ಅವರ ಮಧ್ಯದಲ್ಲೆ ಅವರು ಒಳಗೆ ಹೋಗುವಾಗ ಒಳಗೆ ಹೋಗಬೇಕು, ಹೊರಗೆ ಹೋಗುವಾಗ ಹೊರಗೆ ಬರಬೇಕು. \v 11 ನಿಶ್ಚಿತ ಹಬ್ಬಗಳಲ್ಲಿಯೂ ಸಭೆಗಳಲ್ಲಿಯೂ ಧಾನ್ಯ ಸಮರ್ಪಣೆಗೆ ಹೋರಿಗೆ ಒಂದು ಎಫವೂ ಟಗರಿಗೆ ಒಂದು ಎಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು. \p \v 12 “ ‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು. \p \v 13 “ ‘ನೀನು ಪ್ರತಿದಿನವೂ ಯೆಹೋವ ದೇವರಿಗೆ ಒಂದು ವರ್ಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ಧಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು. \v 14 ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಸುಮಾರು ಎರಡುವರೆ ಕಿಲೋಗ್ರಾಂ\f + \fr 46:14 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಏಫದ ಆರನೆಯ ಪಾಲು, \fqa*\ft ಅಂದರೆ ಸುಮಾರು ಎರಡುವರೆ ಕಿಲೋಗ್ರಾಂ\ft*\f* ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಸುಮಾರು ಒಂದುವರೆ ಲೀಟರ್\f + \fr 46:14 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಹಿನ್ನಿನಲ್ಲಿ ಮೂರನೆಯ ಪಾಲು, \fqa*\ft ಅಂದರೆ ಸುಮಾರು ಒಂದುವರೆ ಲೀಟರ್\ft*\f* ಎಣ್ಣೆಯನ್ನು ಸಿದ್ಧಮಾಡಬೇಕು. ಇದು ಯೆಹೋವ ದೇವರಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದ ಧಾನ್ಯ ಸಮರ್ಪಣೆಯಾಗಿದೆ. \v 15 ಹೀಗೆ ಅವರು ಕುರಿಮರಿಯನ್ನು ಧಾನ್ಯ ಸಮರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದ ದಹನಬಲಿಯನ್ನಾಗಿ ಸಿದ್ಧಮಾಡಬೇಕು. \p \v 16 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರಾಜಕುಮಾರನು ತನ್ನ ಪುತ್ರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಏಕೆಂದರೆ ಅದು ಬಾಧ್ಯವಾಗಿ ಅವರ ಸೊತ್ತಾಗಿದೆ. \v 17 ಆದರೆ ಆತನು ತನ್ನ ಸೊತ್ತಿನೊಳಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರ್ಷದವರೆಗೂ ಅವನಿಗಾಗಿದ್ದು ಆಮೇಲೆ ಮತ್ತೆ ರಾಜಕುಮಾರನಿಗೆ ಸೇರಬೇಕು. ಅವನ ಸೊತ್ತು ಅವನ ಮಕ್ಕಳಿಗೆ ಮಾತ್ರ ಸೇರಬೇಕು. ಇದು ಅವರದೇ. \v 18 ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’ ” \p \v 19 ಆಮೇಲೆ ಅವನು ನನ್ನನ್ನು ಬಾಗಿಲಿನ ಪಕ್ಕದಲ್ಲಿದ್ದ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಅವುಗಳ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು. \v 20 ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು. \p \v 21 ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆಗಳನ್ನು ಹಾದುಹೋಗುವಂತೆ ಮಾಡಿದನು. ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳವನ್ನು ನಾನು ಕಂಡೆನು. \v 22 ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು. \v 23 ಅವುಗಳಲ್ಲಿ ಎಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಒಲೆಗಳಿದ್ದವು. \v 24 ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.” \c 47 \s1 ಆಲಯದಿಂದ ಹೊರಡುವ ನದಿ \p \v 1 ಆ ಮನುಷ್ಯನು ನನ್ನನ್ನು ಮತ್ತೆ ಆಲಯದ ಬಾಗಿಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು, ಏಕೆಂದರೆ ಆಲಯದ ಮುಂಭಾಗದಲ್ಲಿ ನೀರು ಇತ್ತು. ಆ ನೀರು ಆಲಯದ ದಕ್ಷಿಣಕ್ಕೆ ಕೆಳಗಡೆ ಹರಿಯಿತು. \v 2 ಆಮೇಲೆ ಅವನು ನನ್ನನ್ನು ಬಾಗಿಲಿನ ಮಾರ್ಗವಾಗಿ ಉತ್ತರದ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಿಲಿನವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಮತ್ತು ದಕ್ಷಿಣ ಭಾಗದಿಂದ ನೀರು ಜಿನುಗುತ್ತಿತ್ತು. \p \v 3 ಕೈಯಲ್ಲಿ ಅಳತೆಮಾಡುವ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು. ಅಲ್ಲಿ ನೀರು ಪಾದ ಮುಳುಗುವಷ್ಟಿತ್ತು. \v 4 ಅವನು ಸಾವಿರಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು. \v 5 ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂಥ ನದಿಯಾಗಿತ್ತು. ಏಕೆಂದರೆ ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು. \v 6 ಅವರು ನನಗೆ, “ಮನುಷ್ಯಪುತ್ರನೇ, ನೀನು ಇದನ್ನು ನೋಡಿದೆಯಾ?” \p ಆಗ ಅವನು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು. \v 7 ನಾನು ತಿರುಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆ ಕಡೆಯೂ ಈ ಕಡೆಯೂ ಅತಿ ಹೆಚ್ಚು ಮರಗಳಿದ್ದವು. \v 8 ಆಗ ಅವನು, “ಈ ನೀರು ಪೂರ್ವಸೀಮೆಗೆ ಹೋಗಿ ಅರಾಬಾ ಎಂಬ ಒಣಭೂಮಿಗೆ ಇಳಿದು ಲವಣ ಸಮುದ್ರ ಸೇರುವುದು. ಲವಣ ಸಮುದ್ರ ಸೇರಿದ ಮೇಲೆ ಅಲ್ಲಿಯ ನೀರು ಸಿಹಿಯಾಗುವುದು. \v 9 ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂಥ ಸಮಸ್ತ ಜೀವಿಗಳು ಬದುಕುವುವು ಮತ್ತು ಮೀನುಗಳ ಬಹುದೊಡ್ಡ ಸಮೂಹವಾಗುವುವು. ಏಕೆಂದರೆ ಈ ನೀರು ಅಲ್ಲಿಗೆ ಬರುವಾಗ ಅವು ಶುದ್ಧವಾಗುವುವು. ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವುವು. \v 10 ಏನ್ಗೆದಿ ಮೊದಲುಗೊಂಡು ಎನ್ ಎಗ್ಲಯಿಮಿನವರೆಗೂ ಬೆಸ್ತರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವುವು. ಅದರ ಮೀನುಗಳು ಮಹಾಸಾಗರದ ಮೀನುಗಳಾಗಿ ಜಾತ್ಯಾನುಸಾರವಾಗಿ ಬಹಳವಾಗಿರುವುವು. \v 11 ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಶುದ್ಧವಾಗುವುದಿಲ್ಲ. ಅವು ಉಪ್ಪಿನ ಗಣಿಯಾಗುವುವು. \v 12 ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.” \s1 ದೇಶದ ಮೇರೆಗಳು \p \v 13 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ. \v 14 ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು. ಏಕೆಂದರೆ ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈಯೆತ್ತಿ ಪ್ರಮಾಣ ಮಾಡಿದ್ದೇನೆ. ಈ ದೇಶವು ನಿಮಗೆ ಬಾಧ್ಯವಾಗಿ ಬರುವುದು. \b \li4 \v 15 “ಇದೇ ದೇಶದ ಮೇರೆಯು: \b \li1 “ಉತ್ತರದ ಕಡೆಗೆ ಮಹಾ ಸಮುದ್ರದಿಂದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಲೆಬೊ ಹಮಾತ್ ದಾಟಿ ಚೆದಾದಿಗೆ ಸೇರುವವರೆಗೂ; \v 16 ಹಮಾತೂ ಬೇರೋತವು, ದಮಸ್ಕದವರೆಗೂ ಹಾಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು. \v 17 ಹೀಗೆ ಹಚರ್ ಏನಾನೂ ದಮಸ್ಕದ ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಾಮಾತಿನ ಮೇರೆಯೂ ಉತ್ತರದ ಕಡೆಯಾಗಿರುವುದು. ಇದು ಉತ್ತರ ಮೇರೆ. \li1 \v 18 ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಲವಣ ಸಮುದ್ರದಿಂದ ಮತ್ತು ತಾಮರ್ ನೀವು ಅಳೆಯಬೇಕು. ಇದೇ ಪೂರ್ವದಿಕ್ಕಿನ ಮೇರೆಯಾಗಿದೆ. \li1 \v 19 ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು. ಇದೇ ದಕ್ಷಿಣದ ಮೇರೆ. \li1 \v 20 ಉತ್ತರದ ಮೇರೆಯಿಂದ ಹಮಾತಿನ ಪ್ರದೇಶದವರೆಗೂ ಇರುವ ದೊಡ್ಡ ಸಮುದ್ರವು ಪಶ್ಚಿಮದ ಕಡೆಗಿದೆ. ಇದೇ ಪಶ್ಚಿಮದ ಮೇರೆ. \b \p \v 21 “ಹೀಗೆ ನೀವು ಈ ದೇಶವನ್ನು ಇಸ್ರಾಯೇಲನ ಗೋತ್ರಗಳ ಪ್ರಕಾರ ಪಾಲುಮಾಡಿಕೊಳ್ಳಬೇಕು. \v 22 ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂಥವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ವಿದೇಶಿಯರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು. ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದವರೆಂದು ಪರಿಗಣಿಸಬೇಕು. ಅವರಿಗೆ ಇಸ್ರಾಯೇಲಿನ ಗೋತ್ರಗಳೊಳಗೆ ಬಾಧ್ಯತೆಯಾಗಬೇಕು. \v 23 ವಿದೇಶಿಯರು ಯಾವ ಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಅವರಿಗೆ ಸೊತ್ತನ್ನು ಕೊಡಬೇಕು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \c 48 \s1 ದೇಶದ ವಿಭಜನೆ \li4 \v 1 “ಗೋತ್ರಗಳ ಹೆಸರುಗಳು ಯಾವುವೆಂದರೆ: \b \li1 “ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಯೂ ಹಾಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಕಡೆಗಳು, ದಾನ್ ಗೋತ್ರಕ್ಕೆ ಒಂದು ಭಾಗವಾಗಿದೆ. \li1 \v 2 ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಆಶೇರನಿಗೆ ಒಂದು ಭಾಗವಾಗಿದೆ. \li1 \v 3 ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೆ ನಫ್ತಾಲಿಗೆ ಒಂದು ಭಾಗವಾಗಿದೆ. \li1 \v 4 ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೆ ಮನಸ್ಸೆಗೆ ಒಂದು ಭಾಗ. \li1 \v 5 ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಎಫ್ರಾಯೀಮಿಗೆ ಒಂದು ಭಾಗ. \li1 \v 6 ಎಫ್ರಾಯೀಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೆ ರೂಬೇನ್ ಗೆ ಒಂದು ಭಾಗ. \li1 \v 7 ರೂಬೇನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ, ಪಶ್ಚಿಮದ ಕಡೆಯವರೆಗೂ ಯೆಹೂದಕ್ಕೆ ಒಂದು ಭಾಗ. \b \p \v 8 “ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯವರೆಗೂ ಇರಬೇಕು. \p \v 9 “ನೀವು ಯೆಹೋವ ದೇವರಿಗೆ ಅರ್ಪಿಸುವಂತಹ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು. \v 10 ಅವರಿಗಾಗಿ ಎಂದರೆ ಯಾಜಕರಿಗಾಗಿ ಇದೇ ಪರಿಶುದ್ಧ ಕಾಣಿಕೆ ಆಗಿರಬೇಕು. ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು. ಅದರ ಮಧ್ಯದಲ್ಲಿ ಯೆಹೋವ ದೇವರ ಪರಿಶುದ್ಧ ಸ್ಥಳವೂ ಇರಬೇಕು. \v 11 ಇದು ನನಗೆ ನಂಬಿಗಸ್ತರಾಗಿ ನಡೆದುಕೊಂಡ ಚಾದೋಕನ ಪುತ್ರರಲ್ಲಿ ಪ್ರತಿಷ್ಠಿತರಾಗಿರುವ ಯಾಜಕರದಾಗಿರಬೇಕು; ಇಸ್ರಾಯೇಲರು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ಚಾದೋಕಿನವರು ತಪ್ಪಿಹೋಗಲಿಲ್ಲ. \v 12 ಮೀಸಲಾಗಿರುವ ಈ ನಾಡಿನ ವಿಶೇಷ ಕಾಣಿಕೆಯು ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧವಾದದ್ದಾಗಿರಬೇಕು. \p \v 13 “ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಒಟ್ಟು ಉದ್ದ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ. \v 14 ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ. \p \v 15 “ಸುಮಾರು ಎರಡೂವರೆ ಕಿಲೋಮೀಟರ್ ಅಗಲ ಮತ್ತು ಸುಮಾರು ಹದಿಮೂರು ಕಿಲೋಮೀಟರ್ ಉದ್ದದ ಉಳಿದ ಪ್ರದೇಶವು ನಗರದ ಸಾಮಾನ್ಯ ಬಳಕೆಗಾಗಿ, ಇದು ಮನೆಗಳು ಮತ್ತು ಹುಲ್ಲುಗಾವಲುಗಳನ್ನು ಹೊಂದಿರುತ್ತದೆ. ನಗರವು ಅದರ ಮಧ್ಯದಲ್ಲಿ ಇರುತ್ತದೆ; \v 16 ಮತ್ತು ಅದರ ಅಳತೆಯು ಈ ರೀತಿ ಇರುತ್ತದೆ: ಉತ್ತರದ ಕಡೆಗೆ ಸುಮಾರು ಎರಡೂವರೆ ಕಿಲೋಮೀಟರ್, ದಕ್ಷಿಣದ ಕಡೆಗೆ ಸುಮಾರು ಎರಡೂವರೆ ಕಿಲೋಮೀಟರ್, ಪೂರ್ವಕ್ಕೆ ಸುಮಾರು ಎರಡೂವರೆ ಕಿಲೋಮೀಟರ್, ಪಶ್ಚಿಮಕ್ಕೆ ಸುಮಾರು ಎರಡೂವರೆ ಕಿಲೋಮೀಟರ್. \v 17 ಪಟ್ಟಣದ ಹುಲ್ಲುಗಾವಲು ಹೀಗಿರಬೇಕು. ಉತ್ತರದಲ್ಲಿ 135 ಮೀಟರ್ ದಕ್ಷಿಣದಲ್ಲಿ 135 ಮೀಟರ್ ಪೂರ್ವದಲ್ಲಿ 135 ಮೀಟರ್; ಪಶ್ಚಿಮದಲ್ಲಿ 135 ಮೀಟರ್. \v 18 ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿರುವಂಥದ್ದೂ ಉದ್ದದಲ್ಲಿ ಉಳಿದ ಭೂಮಿಯು ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧಭಾಗಕ್ಕೆ ಎದುರಾಗಿರಬೇಕು. ಅದರ ಆದಾಯವು ಪಟ್ಟಣದಲ್ಲಿ ಸೇವೆಮಾಡುವವರ ಆಹಾರಕ್ಕಾಗುವಷ್ಟು ಇರಬೇಕು. \v 19 ಪಟ್ಟಣದಲ್ಲಿ ಸೇವೆಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದಲೇ ಅದರಲ್ಲಿಯೇ ಸೇವೆಮಾಡಬೇಕು. \v 20 ಎಲ್ಲಾ ಕಾಣಿಕೆಯ ಸ್ಥಳವು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು. ನೀವು ಪರಿಶುದ್ಧ ವಿಶೇಷ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸೊತ್ತಿನ ಸಂಗಡ ಅರ್ಪಿಸಬೇಕು. \p \v 21 “ಪರಿಶುದ್ಧ ಭಾಗವೂ ಪಟ್ಟಣದ ಸೊತ್ತಿಗೂ ಈ ಕಡೆಗೂ ಆ ಕಡೆಗೂ ಉಳಿದ ಭೂಮಿಯು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರುವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂಥದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಮೀಸಲಾದ ಪವಿತ್ರ ಕ್ಷೇತ್ರವೂ ಪವಿತ್ರಾಲಯವೂ ಅದರ ಮಧ್ಯದಲ್ಲಿರುವುವು. \v 22 ಇದಲ್ಲದೆ ಲೇವಿಯರ ಸೊತ್ತಿನಿಂದ ಮೊದಲುಗೊಂಡು ಪಟ್ಟಣದ ಸೊತ್ತಿನಿಂದ ಪ್ರಧಾನನ ನಡುವೆ ಇರುವಂಥದ್ದು ಯೆಹೂದದ ಮೇರೆಗೂ ಬೆನ್ಯಾಮೀನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಸಲ್ಲಬೇಕು. \b \li4 \v 23 “ಮಿಕ್ಕ ಗೋತ್ರಗಳ ವಿಷಯವೇನೆಂದರೆ: \b \li1 “ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಬೆನ್ಯಾಮೀನನ ಒಂದು ಭಾಗವಾಗಿದೆ. \li1 \v 24 ಬೆನ್ಯಾಮೀನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಸಿಮೆಯೋನ್ ಒಂದು ಭಾಗವಾಗಿದೆ. \li1 \v 25 ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಸ್ಸಾಕಾರ್ ನ ಒಂದು ಭಾಗವಾಗಿದೆ. \li1 \v 26 ಇಸ್ಸಾಕಾರ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಜೆಬುಲೂನ್ ನ ಒಂದು ಭಾಗವಾದೆ; \li1 \v 27 ಜೆಬುಲೂನ್ ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಗಾದ್ ನ ಒಂದು ಭಾಗವಾಗಿದೆ. \li1 \v 28 ಗಾದಿನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು. \b \li4 \v 29 “ನೀವು ಇಸ್ರಾಯೇಲಿನ ಗೋತ್ರಗಳಿಗೆ ಚೀಟುಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೆ. ಅದರ ಭಾಗಗಳು ಇವೇ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \s1 ನೂತನ ಪಟ್ಟಣದ ಬಾಗಿಲುಗಳು \li4 \v 30 “ಪಟ್ಟಣದ ಹೊರಗೆ ನಿರ್ಗಮನ ಹೀಗಿರಬೇಕು: \b \li1 “ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು. \v 31 ಪಟ್ಟಣದ ಬಾಗಿಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು. ಉತ್ತರಕ್ಕೆ ಮೂರು ಬಾಗಿಲುಗಳು: ರೂಬೇನ್ ಬಾಗಿಲು ಒಂದು, ಯೆಹೂದ ಬಾಗಿಲು ಒಂದು, ಲೇವಿ ಬಾಗಿಲು ಒಂದು. \li1 \v 32 ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪೂರ್ವದಲ್ಲಿ ಮೂರು ಬಾಗಿಲುಗಳಿರುತ್ತವೆ: ಯೋಸೇಫ್ ಬಾಗಿಲು ಒಂದು, ಬೆನ್ಯಾಮೀನನ ಬಾಗಿಲು, ಒಂದು ದಾನ್ ಬಾಗಿಲು ಒಂದು. \li1 \v 33 ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ದಕ್ಷಿಣದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಸಿಮೆಯೋನ್ ಬಾಗಿಲು, ಒಂದು ಇಸ್ಸಾಕಾರ್ ನ ಬಾಗಿಲು, ಒಂದು ಜೆಬುಲೂನ್ ನ ಬಾಗಿಲು. \li1 \v 34 ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪಶ್ಚಿಮದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು, ಮತ್ತೊಂದು ನಫ್ತಾಲಿ ಬಾಗಿಲು. \b \li4 \v 35 “ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. \b \p “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ\f + \fr 48:35 \fr*\fq ಯೆಹೋವ ದೇವರ ನೆಲೆ \fq*\ft ಮೂಲ \ft*\fqa ಯೆಹೋವ ಶಾಮ್ಮಾ ನೆಲೆಯಾಗಿರುವರು\fqa*\f*’ ” ಎಂಬುದೇ ಆಗಿರುವುದು.