\id EZR - Biblica® Open Kannada Contemporary Version \ide UTF-8 \h ಎಜ್ರ \toc1 ಎಜ್ರ \toc2 ಎಜ್ರ \toc3 ಎಜ್ರ \mt1 ಎಜ್ರ \c 1 \s1 ಕೋರೆಷನು ಸ್ವದೇಶಕ್ಕೆ ಹೋಗುವುದಕ್ಕೆ ಅಪ್ಪಣೆ ಕೊಟ್ಟದ್ದು \p \v 1 ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ: \pmo \v 2 “ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: \pm “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. \v 3 ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ! \v 4 ಯೆಹೂದ್ಯರಲ್ಲಿ ಬದುಕುಳಿದವರು ಈಗ ವಾಸಿಸುತ್ತಿರುವ ಯಾವುದೇ ಪ್ರದೇಶದಲ್ಲಿ, ಜನರು ಅವರಿಗೆ ಬೆಳ್ಳಿ ಮತ್ತು ಬಂಗಾರ, ಸರಕುಗಳು ಮತ್ತು ಪ್ರಾಣಿಪಶುಗಳನ್ನು ಮತ್ತು ಯೆರೂಸಲೇಮಿನ ದೇವಾಲಯಕ್ಕೆ ಉಚಿತ ಕಾಣಿಕೆಗಳನ್ನು ಒದಗಿಸಬೇಕು.’ ” \p \v 5 ಆಗ ಯೆಹೂದ ಹಾಗೂ ಬೆನ್ಯಾಮೀನ್ ಕುಟುಂಬಗಳ ಮುಖ್ಯಸ್ಥರೂ, ಯಾಜಕರೂ, ಲೇವಿಯರೂ, ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಹೋಗಲು ಯೆಹೋವ ದೇವರಿಂದ ಪ್ರೇರಿತರಾದವರೆಲ್ಲರೂ ಎದ್ದರು. \v 6 ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು. \p \v 7 ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು, ತನ್ನ ದೇವರುಗಳ ಮಂದಿರಗಳಲ್ಲಿ ಇರಿಸಿದ್ದ ಯೆಹೋವ ದೇವರ ಆಲಯದ ಸಲಕರಣೆಗಳನ್ನು ಪಾರಸಿಯ ಅರಸನಾದ ಕೋರೆಷನು ತರಿಸಿದನು. \v 8 ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು. \b \li4 \v 9 ಅವುಗಳ ಲೆಕ್ಕವು ಹೀಗಿವೆ: \b \li1 ಬಂಗಾರದ 30 ತಟ್ಟೆಗಳು. \li1 ಬೆಳ್ಳಿಯ 1,000 ತಟ್ಟೆಗಳು. \li1 ಬೆಳ್ಳಿಯ 29 ಪಾತ್ರೆಗಳು. \li1 \v 10 ಬಂಗಾರದ 30 ಬಟ್ಟಲುಗಳು. \li1 ಬೆಳ್ಳಿಯ 410 ಬಟ್ಟಲುಗಳು. \li1 ಇನ್ನಿತರು 1,000 ವಸ್ತುಗಳು. \b \li4 \v 11 ಒಟ್ಟು 5,400 ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳು. \b \p ಇವುಗಳನ್ನೆಲ್ಲಾ ಬಾಬಿಲೋನಿನಿಂದ ಯೆರೂಸಲೇಮಿಗೆ ಪ್ರಯಾಣಮಾಡಿದವರ ಸಂಗಡ ಶೆಷ್ಬಚ್ಚರನು ತೆಗೆದುಕೊಂಡು ಹೋದನು. \c 2 \s1 ಸೆರೆಯಿಂದ ತಿರುಗಿ ಬಂದವರ ಸಂಖ್ಯೆ \li4 \v 1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ, ಬಾಬಿಲೋನಿಗೆ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ \v 2 ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಹಾಗೂ ಬಾಣ. \b \li4 ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ: \li1 \v 3 ಪರೋಷನ ವಂಶಜರು 2,172 \li1 \v 4 ಶೆಫಟ್ಯನ ವಂಶಜರು 372 \li1 \v 5 ಆರಹನ ವಂಶಜರು 775 \li1 \v 6 ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,812 \li1 \v 7 ಏಲಾಮನ ವಂಶಜರು 1,254 \li1 \v 8 ಜತ್ತೂವಿನ ವಂಶಜರು 945 \li1 \v 9 ಜಕ್ಕೈನ ವಂಶಜರು 760 \li1 \v 10 ಬಾನೀಯ ವಂಶಜರು 642 \li1 \v 11 ಬೇಬೈನ ವಂಶಜರು 623 \li1 \v 12 ಅಜ್ಗಾದನ ವಂಶಜರು 1,222 \li1 \v 13 ಅದೋನೀಕಾಮಿನ ವಂಶಜರು 666 \li1 \v 14 ಬಿಗ್ವೈ ವಂಶಜರು 2,056 \li1 \v 15 ಅದೀನನ ವಂಶಜರು 454 \li1 \v 16 ಹಿಜ್ಕೀಯನ ಮಗನಾದ ಆಟೇರ್ ವಂಶಜರು 98 \li1 \v 17 ಬೇಚೈಯ ವಂಶಜರು 323 \li1 \v 18 ಯೋರನ ವಂಶಜರು 112 \li1 \v 19 ಹಾಷುಮನ ವಂಶಜರು 223 \li1 \v 20 ಗಿಬ್ಬಾರನ ವಂಶಜರು 95 \li1 \v 21 ಬೇತ್ಲೆಹೇಮನ ವಂಶಜರು 123 \li1 \v 22 ನೆಟೋಫದ ಜನರು 56 \li1 \v 23 ಅನಾತೋತ್ ಊರಿನವರು 128 \li1 \v 24 ಅಜ್ಮಾವೆತಿನವರು 42 \li1 \v 25 ಕಿರ್ಯತ್ ಯಾರೀಮ್, ಕೆಫೀರಾ, ಬೇರೋತ್ ಎಂಬ ಪಟ್ಟಣದವರು 743 \li1 \v 26 ರಾಮಾ ಗೆಬ ಎಂಬ ಪಟ್ಟಣದವರು 621 \li1 \v 27 ಮಿಕ್ಮಾಷದ ಜನರು 122 \li1 \v 28 ಬೇತೇಲ್ ಮತ್ತು ಆಯಿ ಎಂಬ ಪಟ್ಟಣದವರು 223 \li1 \v 29 ನೆಬೋ ಊರಿನವರು 52 \li1 \v 30 ಮಗ್ಬೀಷನ ಜನರು 156 \li1 \v 31 ಮತ್ತೊಬ್ಬ ಏಲಾಮನ ವಂಶಜರು 1,254 \li1 \v 32 ಹಾರಿಮನ ವಂಶಜರು 320 \li1 \v 33 ಲೋದ್, ಹಾದೀದ್, ಓನೋ ಎಂಬ ಊರಿನ ಜನರು 725 \li1 \v 34 ಯೆರಿಕೋವಿನ ವಂಶಜರು 345 \li1 \v 35 ಸೆನಾಹನ ವಂಶಜರು 3,630. \b \li4 \v 36 ಯಾಜಕರು: \li1 ಯೇಷೂವನ ಕುಟುಂಬದವರಾದ ಯೆದಾಯನ ವಂಶಜರು 973 \li1 \v 37 ಇಮ್ಮೇರನ ವಂಶಜರು 1,052 \li1 \v 38 ಪಷ್ಹೂರನ ವಂಶಜರು 1,247 \li1 \v 39 ಹಾರಿಮನ ವಂಶಜರು 1,017. \b \li4 \v 40 ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74. \b \li4 \v 41 ಹಾಡುಗಾರರು: ಆಸಾಫನ ವಂಶಜರು 128. \b \li4 \v 42 ದೇವಾಲಯದ ದ್ವಾರಪಾಲಕರಾದ ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು ಒಟ್ಟು 139. \b \li4 \v 43 ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್ ಇವರ ವಂಶಜರು. \li1 \v 44 ಕೆರೋಸ್, ಸೀಯಹಾ, ಪದೋನ್, \li1 \v 45 ಲೆಬಾನ, ಹಗಾಬ, ಅಕ್ಕೂಬ್ \li1 \v 46 ಹಗಾಬ್, ಶಲ್ಮೈ, ಹಾನಾನ್, \li1 \v 47 ಗಿದ್ದೇಲ್, ಗಹರ್, ರೆವಾಯ, \li1 \v 48 ರೆಚೀನ್, ನೆಕೋದ, ಗಜ್ಜಾಮ್, \li1 \v 49 ಉಜ್ಜ, ಪಾಸೇಹ, ಬೇಸೈ, \li1 \v 50 ಅಸ್ನ, ಮೆಯನೀಮ್, ನೆಫೀಸೀಮ್, \li1 \v 51 ಬಕ್ಬೂಕ್, ಹಕ್ಕೂಫ, ಹರ್ಹೂರ್, \li1 \v 52 ಬಚ್ಲೂತ್, ಮೆಹೀದ, ಹರ್ಷ, \li1 \v 53 ಬರ್ಕೋಸ್, ಸೀಸೆರ, ತೆಮಹ, \li1 \v 54 ನೆಚೀಹ, ಹಟೀಫ, ಇವರ ವಂಶಜರು. \li4 \v 55 ಸೊಲೊಮೋನನ ಸೇವಕರ ವಂಶಜರು: ಸೋಟೈ, ಹಸ್ಸೋಫೆರೆತ್, ಪೆರೂದ, \li1 \v 56 ಯಾಲ, ದರ್ಕೋನ್, ಗಿದ್ದೇಲ್, \li1 \v 57 ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಮತ್ತು ಆಮೀ ಇವರ ವಂಶಜರು. \li1 \v 58 ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ. \b \li4 \v 59 ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ: \li1 \v 60 ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು ಒಟ್ಟು 652 ಮಂದಿ. \b \li4 \v 61 ಯಾಜಕರಲ್ಲಿ: \li1 ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. \li2 ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ, ಅವನ ಹೆಸರನ್ನು ಇಟ್ಟುಕೊಂಡಿದ್ದನು. \li4 \v 62 ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು. \v 63 ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು. \b \li4 \v 64 ಹೀಗೆ ಹಿಂದಿರುಗಿ ಬಂದು, ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360. \v 65 ಅವರ ಹೊರತಾಗಿ ಅವರ ದಾಸರೂ, ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 200 ಮಂದಿ ಇದ್ದರು. \v 66 ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು, \v 67 ಅವರ 435 ಒಂಟೆಗಳು, ಅವರ ಒಟ್ಟು 6,720 ಕತ್ತೆಗಳು. \b \p \v 68 ಅವರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದ ತರುವಾಯ, ಕುಟುಂಬಗಳ ಕೆಲವು ಮುಖ್ಯಸ್ಥರು ದೇವರ ಆಲಯವನ್ನು ಅದರ ಸ್ಥಳದಲ್ಲಿ ಕಟ್ಟುವುದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು. \v 69 ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸಕ್ಕಾಗಿ ಬೊಕ್ಕಸಕ್ಕೆ 400 ಕಿಲೋಗ್ರಾಂ ಬಂಗಾರವನ್ನೂ, 2,800 ಕಿಲೋಗ್ರಾಂ ಬೆಳ್ಳಿಯನ್ನೂ, ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು. \p \v 70 ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಉಳಿದ ಇಸ್ರಾಯೇಲರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು. \c 3 \s1 ಬಲಿಪೀಠವನ್ನು ಪುನಃ ನಿರ್ಮಿಸಿದ್ದು \p \v 1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು, ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು. \v 2 ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು. \v 3 ಸುತ್ತಮುತ್ತಲಿನ ಜನರ ಭಯವಿದ್ದರೂ, ಅವರು ಬಲಿಪೀಠವನ್ನು ಅದರ ಅಸ್ತಿವಾರದ ಮೇಲೆ ಕಟ್ಟಿದರು. ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಅರ್ಪಿಸಿದರು. \v 4 ಇದಲ್ಲದೆ ದೇವರ ನಿಯಮದಲ್ಲಿ ಬರೆದಿರುವಂತೆ ಅವರು ಗುಡಾರಗಳ ಹಬ್ಬವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ಪ್ರತಿದಿನದ ದಹನಬಲಿಗಳನ್ನು ಅರ್ಪಿಸಿದರು. \v 5 ಅದರ ತರುವಾಯ ಅವರು ನಿತ್ಯ ದಹನಬಲಿ, ಅಮಾವಾಸ್ಯೆ ಬಲಿ, ಯೆಹೋವ ದೇವರ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಜನರು ಅರ್ಪಿಸುವ ಸ್ವಂತ ಇಚ್ಛೆಯಿಂದ ತಂದ ಬಲಿದಾನಗಳ ಬಲಿಯನ್ನೂ ಸಮರ್ಪಿಸಿದರು. \v 6 ಏಳನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಯೆಹೋವ ದೇವರ ಮಂದಿರದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ. \s1 ದೇವಾಲಯವನ್ನು ಪುನಃ ನಿರ್ಮಿಸಿದ್ದು \p \v 7 ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು. \p \v 8 ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು. \v 9 ಯೇಷೂವನೂ, ಅವನ ಮಕ್ಕಳೂ, ಅವನ ಸಹೋದರರೂ, ಕದ್ಮಿಯೇಲ್ ಮತ್ತು ಅವನ ಮಕ್ಕಳೂ, ಇವರು ಹೋದವ್ಯನ\f + \fr 3:9 \fr*\fq ಹೋದವ್ಯನ \fq*\ft ಅಥವಾ \ft*\fqa ಯೆಹೂದ\fqa*\f* ವಂಶಜರು. ಹೇನಾದಾದನ ಮಕ್ಕಳೂ, ಅವರ ಮಕ್ಕಳೂ, ಅವರ ಸಹೋದರರೂ, ಲೇವಿಯರೂ ಆಗ ದೇವರ ಆಲಯದಲ್ಲಿ ಕೆಲಸ ಮಾಡುವವರ ಮೇಲ್ವಿಚಾರಣೆ ಮಾಡಲು ನಿಂತರು. \p \v 10 ಕಟ್ಟುವವರು ಯೆಹೋವ ದೇವರ ಮಂದಿರಕ್ಕೆ ಅಸ್ತಿವಾರ ಹಾಕಿದಾಗ ಇಸ್ರಾಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಯೆಹೋವ ದೇವರನ್ನು ಸ್ತುತಿಸುವುದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವರಾಗಿ ತುತೂರಿಗಳನ್ನೂದುವ ಯಾಜಕರನ್ನೂ, ತಾಳಗಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಸಿದ್ಧಪಡಿಸಿದರು. \v 11 ಪರಸ್ಪರವಾಗಿ ಹಾಡುತ್ತಾ, ಕೃತಜ್ಞತಾಸ್ತುತಿ ಮಾಡುತ್ತಾ ಯೆಹೋವ ದೇವರನ್ನು ಕೀರ್ತಿಸಿದರು: \q1 “ಯೆಹೋವ ದೇವರು ಒಳ್ಳೆಯವರು! \q2 ಅವರ ಅಚಲ ಪ್ರೀತಿ ಇಸ್ರಾಯೇಲರ ಮೇಲೆ ಶಾಶ್ವತ!” \m ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ, ಯೆಹೋವ ದೇವರ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು. \v 12 ಮೊದಲಿನ ಮಂದಿರವನ್ನು ಕಂಡಿದ್ದ ವೃದ್ಧರಾದ ಯಾಜಕರೂ ಲೇವಿಯ ಅನೇಕ ಕುಟುಂಬಗಳ ಪ್ರಮುಖರೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ಮುಂದೆ ಹಾಕುತ್ತಿರುವಾಗ ದೊಡ್ಡ ಶಬ್ದದಿಂದ ಅತ್ತರು. \v 13 ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ, ಹರ್ಷಧ್ವನಿ ಯಾವುದು, ಅಳುವವರ ಧ್ವನಿ ಯಾವುದು ಎಂದು ಗುರುತಿಸಲಾಗಲಿಲ್ಲ. ಗದ್ದಲವು ಬಹು ದೂರದವರೆಗೂ ಕೇಳಿಸುತ್ತಿತ್ತು. \c 4 \s1 ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅಡ್ಡಿ ಮಾಡಿದ್ದು \p \v 1 ಸೆರೆಯಿಂದ ಬಂದವರು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗಾಗಿ ಆಲಯವನ್ನು ಕಟ್ಟುತ್ತಾರೆಂಬುದಾಗಿ ಯೆಹೂದದ ಮತ್ತು ಬೆನ್ಯಾಮೀನನ ಶತ್ರುಗಳು ಕೇಳಿದಾಗ \v 2 ಅವರು ಜೆರುಬ್ಬಾಬೆಲನ ಬಳಿಗೂ, ಕುಟುಂಬಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ, “ನಾವು ನಿಮ್ಮ ಹಾಗೆ ನಿಮ್ಮ ದೇವರನ್ನು ಹುಡುಕುತ್ತೇವೆ. ನಮ್ಮನ್ನು ಇಲ್ಲಿಗೆ ಬರಮಾಡಿದ ಅಸ್ಸೀರಿಯದ ಅರಸನಾದ ಏಸರ್‌ಹದ್ದೋನ್ ಎಂಬವನ ದಿವಸಗಳು ಮೊದಲುಗೊಂಡು, ಅವರಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ, ಕಟ್ಟುವುದರಲ್ಲಿ ನಾವು ಸಹಾಯ ಮಾಡುತ್ತೇವೆ,” ಎಂದರು. \p \v 3 ಆದರೆ ಜೆರುಬ್ಬಾಬೆಲನೂ, ಯೇಷೂವನೂ, ಮಿಕ್ಕಾದ ಇಸ್ರಾಯೇಲಿನ ಕುಟುಂಬಗಳ ಮುಖ್ಯಸ್ಥರೂ ಅವರಿಗೆ, “ನಮ್ಮ ದೇವರಿಗೆ ಆಲಯವನ್ನು ಕಟ್ಟುವುದರಲ್ಲಿ ನಿಮಗೆ ಭಾಗವಿಲ್ಲ. ಪಾರಸಿಯ ಅರಸನಾದ ಕೋರೆಷನು ನಮಗೆ ಆಜ್ಞಾಪಿಸಿದ ಹಾಗೆ, ನಾವು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರಿಗೆ ಅದನ್ನು ಕಟ್ಟುವೆವು,” ಎಂದರು. \p \v 4 ಆಗ ಸುತ್ತಲಿದ್ದ ಜನಾಂಗಗಳವರು ಯೆಹೂದದ ಜನರನ್ನು ನಿರಾಶರನ್ನಾಗಿ ಮಾಡಲು ಮತ್ತು ಕಟ್ಟುವುದನ್ನು ಮುಂದುವರಿಸುವ ವಿಷಯದಲ್ಲಿ ಭಯಪಡಿಸಲು ಮುಂದಿದ್ದರು. \v 5 ಪಾರಸಿಯ ಅರಸನಾದ ಕೋರೆಷನ ದಿನಗಳಿಂದ ಹಿಡಿದು, ಪಾರಸಿಯ ಅರಸನಾದ ದಾರ್ಯಾವೆಷನ ಆಳ್ವಿಕೆಯವರೆಗೂ, ಅವರ ಯೋಚನೆಯನ್ನು ವ್ಯರ್ಥಮಾಡುವುದಕ್ಕೆ ಅವರ ವಿರೋಧವಾಗಿ ವಕೀಲರನ್ನು ಹಣಕೊಟ್ಟು ಇಟ್ಟುಕೊಂಡರು. \s1 ಅಹಷ್ವೇರೋಷನ ಮತ್ತು ಅರ್ತಷಸ್ತನ ಆಳ್ವಿಕೆಯಲ್ಲಿ ವಿರೋಧ \p \v 6 ಆದರೆ ಅಹಷ್ವೇರೋಷನು ಆಳುವಾಗ, ಅವನ ಆಳ್ವಿಕೆಯ ಪ್ರಾರಂಭದಲ್ಲಿ, ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಸಲ್ಲಿಸಿದರು. \p \v 7 ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ, ಮಿತ್ರದಾತನೂ, ಟಾಬೆಯೇಲನೂ, ಮಿಕ್ಕಾದ ಅವರ ಜೊತೆಗಾರರೂ ಪಾರಸಿಯ ಅರಸನಾದ ಅರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯ ಭಾಷೆಯಲ್ಲಿಯೂ, ಅರಾಮ್ಯ ಲಿಪಿಯಲ್ಲಿಯೂ ಇತ್ತು. \p \v 8 ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಯೆರೂಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು. \pmo \v 9 ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಪರ್ಷಿಯಾ, ಯೆರೆಕ್ ಹಾಗೂ ಬಾಬೆಲಿನವರು, ಶೂಷನಿನವರ ಮತ್ತು ಏಲಾಮ್ಯರ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಆಡಳಿತಗಾರರು, \v 10 ಮತ್ತು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಯೂಫ್ರೇಟೀಸ್ ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ: \p \v 11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಿತ್ತು: \pmo ಅರ್ತಷಸ್ತ ರಾಜರಿಗೆ, \pmo ತಮ್ಮ ಸೇವಕರಾದ ಯೂಫ್ರೇಟೀಸ್ ನದಿಯ ಈಚೆಯವರು: \pm \v 12 ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು, ಯೆರೂಸಲೇಮನ್ನು ಸೇರಿ, ರಾಜಕಂಟಕವಾದ ಆ ದುಷ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆ ಮಾಡಿಕೊಳ್ಳುತ್ತೇವೆ. \pm \v 13 ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಕಟ್ಟುವುದು ಮುಗಿದರೆ, ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ. ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ. \v 14 ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು, ಅರಸರಿಗೆ ಅಪಮಾನವಾಗುವುದನ್ನು ಕಂಡು ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು, ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ. \v 15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರ ಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ, ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದೇಶದ್ರೋಹ ಮಾಡುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುತ್ತದೆ. \v 16 ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ, ತಮಗೆ ಯೂಫ್ರೇಟೀಸ್ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸನಿಗೆ ಅರಿಕೆ ಮಾಡಿಕೊಳ್ಳುತ್ತೇವೆ. \p \v 17 ಈ ಪತ್ರಕ್ಕೆ ಅರಸನು ಅವರಿಗೆ ಕೊಟ್ಟ ಉತ್ತರ: \pmo ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ, ಸಮಾರ್ಯದಲ್ಲಿರುವವರಿಗೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಇತರರಿಗೂ, \pmo ಕ್ಷೇಮಾಭಿಲಾಶೆಗಳು. \pm \v 18 ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಿ ಅನುವಾದ ಮಾಡಲಾಯಿತು. \v 19 ನನ್ನ ಆಜ್ಞಾನುಸಾರ ವಿಚಾರಣೆಯಾದಾಗ, ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ಪ್ರತಿಭಟಿಸುತ್ತಾ, ದೇಶದ್ರೋಹ ಮಾಡುತ್ತಾ ಬಂದಿದ್ದಾರೆ. \v 20 ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ. \v 21 ಆದ್ದರಿಂದ ಆ ಜನರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಲು ಅವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ. \v 22 ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದ ಇರಿ, ಉದಾಸೀನರಾಗಿರಬೇಡಿರಿ. \p \v 23 ಅರಸನಾದ ಅರ್ತಷಸ್ತನ ಪತ್ರದ ಪ್ರತಿಯು ರೆಹೂಮನಿಗೂ, ಕಾರ್ಯದರ್ಶಿ ಶಿಂಷೈಯಿಗೂ, ಅವರ ಜೊತೆಗಾರರಿಗೂ ಓದಿದ ತರುವಾಯ, ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ, ಒತ್ತಾಯದಿಂದ ಮತ್ತು ಅಧಿಕಾರದಿಂದ ಅವರನ್ನು ನಿಲ್ಲಿಸುವಂತೆ ಮಾಡಿದರು. \b \p \v 24 ಅಂದಿನಿಂದ ಪರ್ಷಿಯ ದೇಶದ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು. \c 5 \s1 ದಾರ್ಯಾವೆಷನಿಗೆ ತತ್ತೆನೈಯ ಪತ್ರ \p \v 1 ಈಗ ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು. \v 2 ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು. \p \v 3 ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು. \v 4 ಇದಲ್ಲದೆ ಅವರು, “ಈ ಕಟ್ಟಡವನ್ನು ಕಟ್ಟಿಸುವವರ ಹೆಸರುಗಳೇನು?” ಎಂದು ವಿಚಾರಿಸಿದರು. \v 5 ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವವರೆಗೂ, ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಉತ್ತರವನ್ನು ಪತ್ರದಲ್ಲಿ ಕಳುಹಿಸಿದರು. \p \v 6 ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈನೂ, ಶೆತರ್ ಬೋಜೆನೈಯೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅವನ ಜೊತೆಗಾರರೂ, ಅರಸನಾದ ದಾರ್ಯಾವೆಷನಿಗೆ ಪತ್ರ ಬರೆದು ಕಳುಹಿಸಿದರು. \v 7 ಅವರು ಅವನ ಬಳಿಗೆ ಕಳುಹಿಸಿದ ಪತ್ರದ ಪ್ರತಿಯಲ್ಲಿ: \pmo ಅರಸನಾದ ದಾರ್ಯಾವೆಷನಿಗೆ: \pmo ಸರ್ವತಾ ಕ್ಷೇಮ. \pm \v 8 ಅರಸನಿಗೆ ತಿಳಿಯಬೇಕಾದದ್ದೇನೆಂದರೆ, ನಾವು ಯೆಹೂದರ ದೇಶದಲ್ಲಿರುವ ಮಹಾ ದೇವರ ಆಲಯಕ್ಕೆ ಹೋದೆವು. ಅದನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನು ಇಡುತ್ತಿದ್ದಾರೆ. ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಿಂದ ವೇಗವಾಗಿ ವೃದ್ಧಿಯಾಗುತ್ತದೆ. \pm \v 9 “ಆಗ ಈ ಆಲಯವನ್ನು ಕಟ್ಟುವುದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ನಾವು ಆ ಹಿರಿಯರನ್ನು ಕೇಳಿದೆವು. \v 10 ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಹೆಸರುಗಳನ್ನು ನಿಮಗೆ ಬರೆದು ತಿಳಿಸುವಂತೆ ಅವರ ಹೆಸರುಗಳನ್ನು ಕೇಳಿದೆವು. \pm \v 11 ಅವರು ನಮಗೆ ಕೊಟ್ಟ ಉತ್ತರವೇನೆಂದರೆ: \b \pm “ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರ್ಷಗಳ ಹಿಂದೆ ಇಸ್ರಾಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿದ್ದ ಆಲಯವನ್ನು ನಾವು ಪುನಃ ಕಟ್ಟುತ್ತಿದ್ದೇವೆ. \v 12 ಆದರೆ ನಮ್ಮ ಪಿತೃಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ಕಾರಣ, ದೇವರು ಅವರನ್ನು ಬಾಬಿಲೋನಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆ ಅರಸನು ಆ ಆಲಯವನ್ನು ಹಾಳು ಮಾಡಿ, ಜನರನ್ನು ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದನು. \pm \v 13 “ಆದರೆ ಬಾಬಿಲೋನಿನ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ದೇವರ ಈ ಆಲಯವನ್ನು ಪುನಃ ಕಟ್ಟಲು ಆಜ್ಞೆಯನ್ನು ಕೊಟ್ಟನು. \v 14 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ದೇವಾಲಯದಿಂದ ತೆಗೆದುಕೊಂಡು, ಬಾಬಿಲೋನಿನ ಮಂದಿರಕ್ಕೆ ತಂದ ದೇವಸ್ಥಾನದ ಬೆಳ್ಳಿಬಂಗಾರದ ಸಾಮಗ್ರಿಗಳನ್ನು ಅರಸನಾದ ಕೋರೆಷನು ಬಾಬಿಲೋನಿನ ಮಂದಿರದಿಂದ ತೆಗೆದುಕೊಂಡು, ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿಕೊಟ್ಟನು. \v 15 ಅವನಿಗೆ, ‘ಈ ಸಾಮಗ್ರಿಗಳನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿರುವ ದೇವಾಲಯಕ್ಕೆ ತೆಗೆದುಕೊಂಡು ಹೋಗು. ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟು,’ ಎಂದು ಆಜ್ಞಾಪಿಸಿದನು. \pm \v 16 “ಆಗ ಶೆಷ್ಬಚ್ಚರನು ಬಂದು, ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ, ಇನ್ನೂ ಮುಗಿಯಲಿಲ್ಲ,” ಎಂದರು. \b \pm \v 17 “ಆದ್ದರಿಂದ ಅರಸನಿಗೆ ಸರಿ ತೋರುವುದಾದರೆ, ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ, ಇಲ್ಲವೋ ಎಂಬುದನ್ನು ಬಾಬಿಲೋನಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು. \c 6 \s1 ದಾರ್ಯಾವೆಷನ ತೀರ್ಪು \p \v 1 ಆಗ ಅರಸನಾದ ದಾರ್ಯಾವೆಷನ ಅಪ್ಪಣೆಯ ಪ್ರಕಾರ ಅವರು ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥಾಲಯದಲ್ಲಿ ಹುಡುಕಿದರು. \v 2 ಮೇದ್ಯರ ದೇಶದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಜ್ಞಾಪಕಾರ್ಥದ ಒಂದು ಸುರುಳಿ ಸಿಕ್ಕಿತು. \pmo ಅದರಲ್ಲಿ ಹೀಗೆ ಬರೆಯಲಾಗಿತ್ತು: \pm \v 3 ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನೆಂದರೆ: \b \pm ಜನರು ಬಲಿಗಳನ್ನು ಸಮರ್ಪಿಸುವುದಕ್ಕಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಅಸ್ತಿವಾರಗಳನ್ನು ಬಲವಾಗಿ ಹಾಕಬೇಕು. ಅದರ ಎತ್ತರ 27 ಮೀಟರ್, ಅದರ ಅಗಲ 27 ಮೀಟರ್ ಆಗಿರಲಿ. \v 4 ದೊಡ್ಡ ಕಲ್ಲುಗಳ ಮೂರು ಸಾಲುಗಳೂ, ಹೊಸ ತೊಲೆಗಳ ಒಂದು ಸಾಲೂ ಇರಲಿ. ಅದರ ಖರ್ಚು ಅರಮನೆಯ ಬೊಕ್ಕಸದಿಂದ ಕೊಡಲಾಗುವುದು. \v 5 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದುಕೊಂಡು ಬಾಬಿಲೋನಿಗೆ ಒಯ್ದ ದೇವರ ಆಲಯದ ಬೆಳ್ಳಿಬಂಗಾರದ ಸಲಕರಣೆಗಳನ್ನು ತಿರುಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತೆಗೆದುಕೊಂಡುಹೋಗಿ, ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇಡಬೇಕು. \b \pm \v 6 ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದು ಏನೆಂದರೆ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಯಾದ ತತ್ತೆನೈನೇ, ಶೆತರ್ ಬೋಜೆನೈಯೇ, ನದಿಯ ಆಚೆಯಲ್ಲಿರುವ ನಿಮ್ಮ ಜೊತೆಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರಿ. \v 7 ದೇವರ ಆಲಯವನ್ನು ಕಟ್ಟುವ ಕೆಲಸಕ್ಕೆ ನೀವು ಅಡ್ಡಿಮಾಡಬೇಡಿರಿ. ಯೆಹೂದ್ಯರ ಅಧಿಪತಿಯೂ, ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ. \pm \v 8 ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವುದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನೆಂದರೆ: \pm ಅವರು ಅಭ್ಯಂತರ ಮಾಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ತೆರಿಗೆಯಿಂದಲೇ ಈ ಮನುಷ್ಯರಿಗೆ ವೆಚ್ಚವನ್ನು ಕೊಡಬೇಕು. \v 9 ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ ಅವರಿಗೆ ಬೇಕಾದ ಹೋರಿಗಳೂ, ಟಗರುಗಳೂ, ಕುರಿಮರಿಗಳೂ, ಗೋಧಿಯೂ, ಉಪ್ಪೂ, ದ್ರಾಕ್ಷಾರಸವೂ, ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಬೇಕು. \v 10 ಇದಲ್ಲದೆ ಅವರು ಪರಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ, ಅರಸನ ಪ್ರಾಣಕ್ಕೋಸ್ಕರವೂ, ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡಬೇಕು. \pm \v 11 ನಾನು ಕೊಡುವ ಅಪ್ಪಣೆ ಏನೆಂದರೆ, ಯಾವನಾದರೂ ಈ ನನ್ನ ಆಜ್ಞೆಯನ್ನು ಬದಲು ಮಾಡಿದರೆ, ಅವನ ಮನೆಯಿಂದ ಒಂದು ತೊಲೆಯನ್ನು ತೆಗೆದು ಅದರಿಂದಲೇ ಅವನನ್ನು ಗಲ್ಲಿಗೆ ಏರಿಸಬೇಕು. ಅವನ ಮನೆಯನ್ನು ಇದರ ನಿಮಿತ್ತ ತಿಪ್ಪೆಯನ್ನಾಗಿ ಮಾಡಿಬಿಡಬೇಕು. \v 12 ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. \pm ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು. \s1 ದೇವಾಲಯ ಪ್ರತಿಷ್ಠಾಪನೆ \p \v 13 ಆಗ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅರಸನಾದ ದಾರ್ಯಾವೆಷನು ಕಳುಹಿಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು. \v 14 ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗನಾದ ಜೆಕರ್ಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ, ಕೋರೆಷ್, ದಾರ್ಯಾವೆಷ್ ಹಾಗೂ ಅರ್ತಷಸ್ತ ಎಂಬ ಪರ್ಷಿಯದ ರಾಜರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು. \v 15 ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರ್ಷದ ಆಡಾರ್ ತಿಂಗಳ, ಮೂರನೆಯ ದಿವಸದಲ್ಲಿ ಈ ಆಲಯವನ್ನು ಕಟ್ಟಿ ಮುಗಿಸಲಾಯಿತು. \p \v 16 ಆಗ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಸೆರೆಯಿಂದ ಬಂದ ಮಿಕ್ಕಾದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠಾಪಿಸಿದರು. \v 17 ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು. \v 18 ಮೋಶೆಯ ಗ್ರಂಥದಲ್ಲಿ ಬರೆದ ಹಾಗೆ ಯೆರೂಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆಗೋಸ್ಕರ ಯಾಜಕರನ್ನು ಮತ್ತು ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು. \s1 ಪಸ್ಕಹಬ್ಬ \p \v 19 ಇದಲ್ಲದೆ ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿವಸದಲ್ಲಿ ಪಸ್ಕವನ್ನು ಆಚರಿಸಿದರು. \v 20 ಯಾಜಕರೂ ಲೇವಿಯರೂ ಕೂಡ ಶುದ್ಧ ಮಾಡಿಕೊಂಡಿದ್ದರು. ಅವರೆಲ್ಲರು ಶುದ್ಧರಾದ ನಂತರ, ಲೇವಿಯರು ಸೆರೆಯಿಂದ ಬಂದವರೆಲ್ಲರಿಗೋಸ್ಕರವೂ, ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಯನ್ನು ವಧಿಸಿದರು. \v 21 ಸೆರೆಯಿಂದ ತಿರುಗಿ ಬಂದ ಇಸ್ರಾಯೇಲರು ತಮ್ಮ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರನ್ನು ಹುಡುಕಲು ದೇಶದ ಜನಾಂಗಗಳ ಅಶುದ್ಧತೆಯಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡು, ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು, \v 22 ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು. \c 7 \s1 ಎಜ್ರನು ಯೆರೂಸಲೇಮಿಗೆ ಬಂದದ್ದು \p \v 1 ಈ ಕಾರ್ಯಗಳಾದ ತರುವಾಯ ಪಾರಸಿಯ ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಹೊರಟುಹೋದನು. ಇವನು ಸೆರಾಯನ ಮಗನು; ಇವನು ಅಜರ್ಯನ ಮಗನು; ಇವನು ಹಿಲ್ಕೀಯನ ಮಗನು; \v 2 ಇವನು ಶಲ್ಲೂಮನ ಮಗನು; ಇವನು ಚಾದೋಕನ ಮಗನು; ಇವನು ಅಹೀಟೂಬನ ಮಗನು; \v 3 ಇವನು ಅಮರ್ಯನ ಮಗನು; ಇವನು ಅಜರ್ಯನ ಮಗನು; ಇವನು ಮೆರಾಯೋತನ ಮಗನು; \v 4 ಇವನು ಜೆರಹ್ಯನ ಮಗನು; ಇವನು ಉಜ್ಜೀಯನ ಮಗನು; ಇವನು ಬುಕ್ಕೀಯ ಮಗನು; \v 5 ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು. \v 6 ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು. \v 7 ಅವನ ಸಂಗಡ ಇಸ್ರಾಯೇಲರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ದೇವಾಲಯದ ಸೇವಕರಲ್ಲಿಯೂ ಕೆಲವರು ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಹೋದರು. \p \v 8 ಅರಸನ ಏಳನೆಯ ವರ್ಷದ, ಐದನೆಯ ತಿಂಗಳಲ್ಲಿ ಎಜ್ರನು ಯೆರೂಸಲೇಮಿಗೆ ಬಂದನು. \v 9 ಅವನು ಮೊದಲನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಬಾಬಿಲೋನಿನಿಂದ ಹೊರಟು, ಐದನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಏಕೆಂದರೆ ಅವನ ದೇವರಾದ ಯೆಹೋವ ದೇವರ ಹಸ್ತವು ಅವನ ಮೇಲಿತ್ತು. \v 10 ಏಕೆಂದರೆ ಎಜ್ರನು ಯೆಹೋವ ದೇವರ ನಿಯಮವನ್ನು ಅಭ್ಯಾಸ ಮಾಡುವುದಕ್ಕೂ ಅದನ್ನು ಕೈಗೊಂಡು ನಡೆಯುವುದಕ್ಕೂ ಇಸ್ರಾಯೇಲರಿಗೆ ಅದರ ತೀರ್ಪುಗಳನ್ನು ಹಾಗೂ ನಿಯಮಗಳನ್ನು ಬೋಧಿಸುವುದಕ್ಕೂ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನು. \s1 ಅರ್ತಷಸ್ತನು ಎಜ್ರನಿಗೆ ಬರೆದ ಪತ್ರ \p \v 11 ಯಾಜಕನು, ನಿಯಮಶಾಸ್ತ್ರಿಯು ಹಾಗೂ ಇಸ್ರಾಯೇಲರಿಗೆ ಕೊಡಲಾದ ಯೆಹೋವ ದೇವರ ಆಜ್ಞಾಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು: \pmo \v 12 ರಾಜಾಧಿರಾಜನಾದ ಅರ್ತಷಸ್ತನು, \pmo ಯಾಜಕನೂ, ಪರಲೋಕ ದೇವರ ನಿಯಮದಲ್ಲಿ ಪ್ರವೀಣನೂ ಆದ ಎಜ್ರನಿಗೆ, \pmo ವಂದನೆಗಳು. \pm \v 13 ನನ್ನ ರಾಜ್ಯದಲ್ಲಿರುವ ಇಸ್ರಾಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರಿಗೆ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ, ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ. \v 14 ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ನಿಯಮ ಗ್ರಂಥಕ್ಕೆ ಅನುಗುಣವಾಗಿ ಇದೆಯೋ, ಇಲ್ಲವೋ ವಿಮರ್ಶೆ ಮಾಡಬೇಕು. \v 15 ಅರಸನು ಮತ್ತು ಅವನ ಮಂತ್ರಿಗಳು ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು, \v 16 ಬಾಬಿಲೋನ್ ಸಂಸ್ಥಾನದಲ್ಲಿ ಸಿಕ್ಕುವ ಬೆಳ್ಳಿಬಂಗಾರವನ್ನು ಹಾಗು ಇಸ್ರಾಯೇಲ್ ಜನ ಸಾಮಾನ್ಯರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ, ನಾನೂ ಮತ್ತು ನನ್ನ ಏಳುಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ. \v 17 ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು. \pm \v 18 ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಚಿತ್ತದ ಪ್ರಕಾರ ನಿನಗೂ, ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚ ಮಾಡಿರಿ. \v 19 ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಗ್ರಿಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು. \v 20 ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜ ಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು. \pm \v 21 “ಅರ್ತಷಸ್ತ ರಾಜನಾದ ನಾನು, ಯೂಫ್ರೇಟೀಸ್ ನದಿ ಆಚೆಯ ಪ್ರಾಂತಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ ಯಾಜಕನೂ, ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು. \v 22 3.4 ಮೆಟ್ರಿಕ್ ಟನ್ ಬೆಳ್ಳಿಯನ್ನು, 16 ಮೆಟ್ರಿಕ್ ಟನ್ ಗೋಧಿಯನ್ನು, 2,200 ಲೀಟರ್ ದ್ರಾಕ್ಷಾರಸವನ್ನು, 2,200 ಲೀಟರ್ ಎಣ್ಣೆಯನ್ನು, ಇಷ್ಟರ ಮಟ್ಟಿಗೂ ಕೊಡಬೇಕು. ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು. \v 23 ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವ ಕೋಪವುಂಟಾಗದ ಹಾಗೆ, ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಶ್ರದ್ಧೆಯಿಂದ ಒದಗಿಸಿಕೊಡಬೇಕು. \v 24 ಇದಲ್ಲದೆ, ಆ ದೇವಾಲಯದ ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ, ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.” \pm \v 25 “ಎಜ್ರನೇ, ನಿನ್ನಲ್ಲಿರುವ ನಿನ್ನ ದೇವರ ಜ್ಞಾನಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ, ದಂಡಾಧಿಕಾರಿಯನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಾಯೇಲರಲ್ಲಿ, ನಿನ್ನ ದೇವರ ನಿಯಮಗಳನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀನು ಅದನ್ನು ಕಲಿಸಬೇಕು. \v 26 ನಿನ್ನ ದೇವರಾಜ್ಞೆಯನ್ನೂ, ರಾಜಾಜ್ಞೆಯನ್ನೂ ಕೈಗೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿ ಹಾಕುವುದು, ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.” \p \v 27 ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ. \v 28 ಅರಸನ ಮುಂದೆಯೂ, ಅವನ ಸಲಹೆಗಾರರ ಮುಂದೆಯೂ, ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆತೋರಿಸಿದ್ದಾರೆ. ಹೀಗೆಯೇ ನನ್ನ ದೇವರಾಗಿರುವ ಯೆಹೋವ ದೇವರ ಹಸ್ತವು ನನ್ನ ಮೇಲೆ ಇದ್ದುದರಿಂದ, ನಾನು ಧೈರ್ಯಗೊಂಡು ಇಸ್ರಾಯೇಲಿನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು,” ಎಂದನು. \c 8 \s1 ಎಜ್ರನೊಂದಿಗೆ ಹಿಂದಿರುಗಿದ ಕುಟುಂಬಗಳ ನಾಯಕರು \li4 \v 1 ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಬಾಬಿಲೋನಿನಿಂದ ನನ್ನ ಸಂಗಡ ಹೊರಟು ಬಂದವರ ಕುಟುಂಬಗಳಲ್ಲಿ ಮುಖ್ಯಸ್ಥರು ಯಾರೆಂದರೆ: \b \li1 \v 2 ಫೀನೆಹಾಸನ ವಂಶಜರಲ್ಲಿ \li2 ಗೇರ್ಷೋಮನೂ, \li1 ಈತಾಮಾರನ ವಂಶಜರಲ್ಲಿ \li2 ದಾನಿಯೇಲನೂ; \li1 ದಾವೀದನ ವಂಶಜರಲ್ಲಿ \li2 ಹಟ್ಟೂಷನೂ. \v 3 ಇವನು ಶೆಕನ್ಯನ ವಂಶಜನು. \li1 ಪರೋಷಿನ ವಂಶಜರಲ್ಲಿ \li2 ಜೆಕರ್ಯನೂ, ಅವನ ಸಂಗಡ ವಂಶಜರಲ್ಲಿ 150 ಮಂದಿ ಗಂಡಸರು. \li1 \v 4 ಪಹತ್ ಮೋವಾಬನ ವಂಶಜರಲ್ಲಿ \li2 ಜೆರಹ್ಯನ ಮಗನಾದ ಎಲಿಹೋಯೇನೈನೂ, ಅವನ ಸಂಗಡ 200 ಮಂದಿ ಗಂಡಸರು. \li1 \v 5 ಜತ್ತುವಿನ ವಂಶಜರಲ್ಲಿ \li2 ಯಹಜಿಯೇಲನ ಮಗನಾದ ಶೆಕನ್ಯನು ಮತ್ತು ಅವನ ಸಂಗಡ 300 ಮಂದಿ ಗಂಡಸರು. \li1 \v 6 ಅದೀನನ ವಂಶಜರಲ್ಲಿ \li2 ಯೋನಾತಾನನ ಮಗ ಏಬೆದನೂ, ಅವನ ಸಂಗಡ 50 ಮಂದಿ ಗಂಡಸರು. \li1 \v 7 ಏಲಾಮನ ವಂಶಜರಲ್ಲಿ \li2 ಅತಲ್ಯನ ಮಗ ಯೆಶಾಯನೂ, ಅವನ ಸಂಗಡ 70 ಮಂದಿ ಗಂಡಸರು. \li1 \v 8 ಶೆಫಟ್ಯನ ವಂಶಜರಲ್ಲಿ \li2 ಮೀಕಾಯೇಲನ ಮಗ ಜೆಬದ್ಯನೂ, ಅವನ ಸಂಗಡ 80 ಮಂದಿ ಗಂಡಸರು. \li1 \v 9 ಯೋವಾಬನ ವಂಶಜರಲ್ಲಿ \li2 ಯೆಹೀಯೇಲನ ಮಗ ಓಬದ್ಯನೂ, ಅವನ ಸಂಗಡ 218 ಮಂದಿ ಗಂಡಸರು. \li1 \v 10 ಬಾನೀಯ ವಂಶಜರಲ್ಲಿ \li2 ಯೋಸಿಫ್ಯನ ಮಗ ಶೆಲೋಮೀತನು ಮತ್ತು ಅವನ ಸಂಗಡ 160 ಮಂದಿ ಗಂಡಸರು. \li1 \v 11 ಬೇಬೈನ ವಂಶಜರಲ್ಲಿ \li2 ಬೆಬಾಯಿಯ ಮಗ ಜೆಕರ್ಯನು; ಅವನ ಸಂಗಡ 28 ಮಂದಿ ಗಂಡಸರು. \li1 \v 12 ಅಜ್ಗಾದನ ವಂಶಜರಲ್ಲಿ \li2 ಹಕ್ಕಾಟಾನನ ಮಗ ಯೋಹಾನಾನನೂ, ಅವನ ಸಂಗಡ 110 ಮಂದಿ ಗಂಡಸರು; \li1 \v 13 ಅದೋನೀಕಾಮಿನ ವಂಶಜರಲ್ಲಿ \li2 ಕಡೇ ಪುತ್ರರಾದ ಎಲೀಫೆಲೆಟ್, ಯೆವಿಯೇಲನು, ಶೆಮಾಯನು ಎಂಬ ಹೆಸರುಳ್ಳವರೂ, ಅವರ ಸಂಗಡ 60 ಮಂದಿ ಗಂಡಸರು; \li1 \v 14 ಬಿಗ್ವೈ ವಂಶಜರಲ್ಲಿ \li2 ಜಕ್ಕೂರನ ಮಗನಾದ ಊತೈ ಮತ್ತು ಅವನ ಸಂಗಡ 70 ಮಂದಿ ಗಂಡಸರು. \s1 ಯೆರೂಸಲೇಮಿಗೆ ಹಿಂದಿರುಗಿ ಬಂದದ್ದು \p \v 15 ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು, ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ, ಯಾಜಕರನ್ನೂ ಶೋಧಿಸಿ ನೋಡುವಾಗ, ಲೇವಿಯರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ. \v 16 ಆಗ ನಾನು ಎಲೀಯೆಜೆರನು, ಅರೀಯೇಲನು, ಶೆಮಾಯನು, ಎಲ್ನತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ, ಯೋಯಾರೀಬನು, ಎಲ್ನತಾನನು ಎಂಬ ಗ್ರಹಿಕೆಯುಳ್ಳವರನ್ನೂ ಕರೆಕಳುಹಿಸಿದೆನು. \v 17 ಕಾಸಿಫ್ಯದಲ್ಲಿರುವ ಅಧಿಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ, ಅವರು ನಮ್ಮ ದೇವರ ಆಲಯಕ್ಕೋಸ್ಕರ ಸೇವಕರನ್ನು ತರುವ ಹಾಗೆ ಅವರು ಕಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ, ಅವನ ಸಹೋದರರಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು. \v 18 ನಮ್ಮ ದೇವರ ಕೃಪಾಹಸ್ತವು ನಮ್ಮ ಮೇಲೆ ಇದ್ದುದರಿಂದ, ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗ ಮಹ್ಲೀಯ ಪುತ್ರರಲ್ಲಿ ಬುದ್ಧಿವಂತನಾದ ಶೇರೇಬ್ಯನೂ, ಅವನ ಪುತ್ರರೂ, ಸಹೋದರರೂ ಆದ ಹದಿನೆಂಟು ಮಂದಿಯನ್ನೂ, \v 19 ಹಷಬ್ಯನೂ, ಅವನ ಸಂಗಡ ಮೆರಾರೀಯ ಪುತ್ರರಲ್ಲಿ ಯೆಶಾಯನೂ, ಅವನ ಸಹೋದರರೂ, ಅವರ ಪುತ್ರರೂ ಆದ ಇಪ್ಪತ್ತು ಮಂದಿಯನ್ನೂ, \v 20 ದಾವೀದನೂ, ಪ್ರಧಾನರೂ, ಲೇವಿಯರನ್ನು ಸೇವಿಸುವುದಕ್ಕೆ ನೇಮಿಸಿದ ದೇವಾಲಯದ ಸೇವಕರಲ್ಲಿ ಇನ್ನೂರ ಇಪ್ಪತ್ತು ಮಂದಿ ಸೇವಕರನ್ನೂ, ನಮ್ಮ ಬಳಿಗೆ ಕರೆದುಕೊಂಡು ಬಂದರು. ಅವರೆಲ್ಲರ ಹೆಸರುಗಳು ದಾಖಲೆಯಾಗಿದ್ದವು. \p \v 21 ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು. \v 22 “ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು. \v 23 ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು. \p \v 24 ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೇರೇಬ್ಯ, ಹಷಬ್ಯ ಇವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ \v 25 ಅರಸನೂ, ಅವನ ಸಲಹೆಗಾರರೂ, ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ, ಬಂಗಾರವನ್ನೂ, ಸಲಕರಣೆಗಳನ್ನೂ ಅವರಿಗೆ ತೂಕಮಾಡಿ ಕೊಟ್ಟೆನು. \v 26 ಅವರ ಕೈಗೆ ಕೊಟ್ಟ ಸಲಕರಣೆಗಳ ತೂಕ 22 ಬೆಳ್ಳಿ ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಗ್ರಿಗಳ ತೂಕ 3.4 ಮೆಟ್ರಿಕ್ ಟನ್; ಬಂಗಾರ 3.4 ಮೆಟ್ರಿಕ್ ಟನ್. \v 27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8.4 ಕಿಲೋಗ್ರಾಂ, ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು. \p \v 28 ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ. \v 29 ನೀವು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ, ಪ್ರಧಾನರ ಮುಂದೆಯೂ ಇಸ್ರಾಯೇಲ್ ಕುಟುಂಬಗಳ ಪ್ರಧಾನರ ಮುಂದೆಯೂ ತೂಕಮಾಡುವವರೆಗೆ ಜಾಗ್ರತೆಯಾಗಿ ಕಾಪಾಡಿರಿ,” ಎಂದೆನು. \v 30 ಹಾಗೆಯೇ ಯಾಜಕರೂ, ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ, ಬಂಗಾರವನ್ನೂ, ವಸ್ತುಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು. \p \v 31 ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು. \v 32 ನಾವು ಯೆರೂಸಲೇಮಿಗೆ ಬಂದು, ಅಲ್ಲಿ ಮೂರು ದಿವಸ ವಿಶ್ರಮಿಸಿಕೊಂಡೆವು. \p \v 33 ತರುವಾಯ ನಾಲ್ಕನೆಯ ದಿವಸದಲ್ಲಿ ಆ ಬೆಳ್ಳಿಯೂ, ಬಂಗಾರವೂ, ಸಲಕರಣೆಗಳೂ ನಮ್ಮ ದೇವರ ಆಲಯದಲ್ಲಿ ಯಾಜಕರಾಗಿರುವ ಊರೀಯನ ಮಗ ಮೆರೇಮೋತನ ಕೈಯಿಂದ ತೂಕಮಾಡಿ ಕೊಟ್ಟೆವು. ಅವನ ಸಂಗಡ ಲೇವಿಯರಾದ ಫೀನೆಹಾಸನ ಮಗನಾಗಿರುವ ಎಲಿಯಾಜರನೂ, ಯೇಷೂವನ ಮಗ ಯೋಜಾಬಾದನೂ, ಬಿನ್ನೂಯ್ ಮಗ ನೋವದ್ಯನೂ ಇದ್ದರು. \v 34 ಅದರದರ ಲೆಕ್ಕದ ಪ್ರಕಾರವೂ, ತೂಕದ ಪ್ರಕಾರವೂ ಎಲ್ಲವುಗಳ ತೂಕವು ತಕ್ಷಣವೇ ಲಿಖಿತವಾಯಿತು. \p \v 35 ಸೆರೆಯಿಂದ ಮರಳಿ ಬಂದವರು ಇಸ್ರಾಯೇಲ್ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲರಿಗೋಸ್ಕರ ಹನ್ನೆರಡು ಹೋರಿಗಳನ್ನೂ, ತೊಂಬತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ದೋಷಪರಿಹಾರಕ್ಕಾಗಿ ಹನ್ನೆರಡು ಹೋತಗಳನ್ನೂ ಅರ್ಪಿಸಿದರು. ಇವೆಲ್ಲಾ ಯೆಹೋವ ದೇವರಿಗೆ ದಹನಬಲಿಯಾಗಿತ್ತು. \v 36 ಅವರು ಅರಸನ ಆಜ್ಞೆಗಳನ್ನು ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ, ಯಜಮಾನರಿಗೂ ಒಪ್ಪಿಸಿದರು. ಆಗ ಅವರು ಜನರಿಗೂ, ದೇವರ ಆಲಯಕ್ಕೂ ಸಹಾಯ ಮಾಡಿದರು. \c 9 \s1 ಅಂತರ ವಿವಾಹದ ಬಗ್ಗೆ ಎಜ್ರನ ಪ್ರಾರ್ಥನೆ \p \v 1 ಈ ಸಂಗತಿಗಳನ್ನು ಮಾಡಿದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು, “ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ನೆರೆಯವರಿಂದ ಪ್ರತ್ಯೇಕಿಸಿಕೊಳ್ಳಲಿಲ್ಲ. ಅವರು ಕಾನಾನ್ಯರು, ಹಿತ್ತಿಯರು, ಪೆರಿಜೀಯರು, ಯೆಬೂಸಿಯರು, ಅಮ್ಮೋನ್ಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಇವರ ಅಸಹ್ಯ ಸಂಗತಿಗಳ ಪದ್ಧತಿಗಳಂತೆ ನಡೆಯುತ್ತಾ ಇದ್ದಾರೆ. \v 2 ಇಸ್ರಾಯೇಲರು ತಮಗೂ, ತಮ್ಮ ಪುತ್ರರಿಗೂ ಅವರ ಪುತ್ರಿಯರನ್ನು ತೆಗೆದುಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ. ನಿಶ್ಚಯವಾಗಿ ಪ್ರಧಾನರು ಮತ್ತು ಅಧಿಕಾರಸ್ಥರು ಈ ಅಪನಂಬಿಗಸ್ತಿಕೆಗೆ ಮುಂದಾಳುಗಳಾದರು,” ಎಂದು ತಿಳಿಸಿದರು. \p \v 3 ನಾನು ಇದನ್ನು ಕೇಳಿದಾಗ ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು, ಸ್ತಬ್ಧನಾಗಿ ಕುಳಿತುಕೊಂಡೆನು. \v 4 ಆಗ ಸೆರೆಯಿಂದ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ, ನನ್ನ ಬಳಿಗೆ ಕೂಡಿಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವವರೆಗೆ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. \p \v 5 ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ, ನಾನು ನನ್ನ ಶೋಕ ಸ್ಥಿತಿಯಿಂದ ಎದ್ದು, ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದುಕೊಂಡವನಾಗಿ, ನನ್ನ ಮೊಣಕಾಲುಗಳನ್ನೂರಿ, ನನ್ನ ಕೈಗಳನ್ನು ನನ್ನ ದೇವರಾಗಿರುವ ಯೆಹೋವ ದೇವರ ಮುಂದೆ ಚಾಚಿ, \v 6 ಪ್ರಾರ್ಥಿಸಿದೆನು: \pm “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ. \v 7 ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ. \pm \v 8 “ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ \v 9 ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸಲು ನಮಗೆ ನವಜೀವನ ಕೊಟ್ಟು, ಯೆಹೂದ ಮತ್ತು ಯೆರೂಸಲೇಮಿನಲ್ಲಿ ನಮಗೆ ಸಂರಕ್ಷಣೆಯ ಗೋಡೆ ಸಿಗುವಂತೆ, ಪಾರಸಿಯ ರಾಜರ ಸಮ್ಮುಖದಲ್ಲಿ ನಮಗೆ ದಯೆಯನ್ನು ದಯಪಾಲಿಸಿದ್ದೀರಿ. \pm \v 10 “ಆದರೆ ಈಗ ನಮ್ಮ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ನಿಮ್ಮ ಆಜ್ಞೆಗಳನ್ನು ನಾವು ತೊರೆದಿದ್ದೇವೆ. \v 11 ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನೀವು ಆ ನಿಮ್ಮ ಆಜ್ಞೆಗಳನ್ನು ಕೊಟ್ಟಿದ್ದೀರಿ. ‘ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು, ಆ ದೇಶಗಳ ಜನರ ಅಶುದ್ಧತ್ವದಿಂದ ಮೈಲಿಗೆಯಾದ ದೇಶವಾಗಿದೆ. ಆ ಜನರು ತಮ್ಮ ಅಸಹ್ಯ ಅಭ್ಯಾಸಗಳಿಂದ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯವರೆಗೂ ತುಂಬಿಸಿದ್ದಾರೆ. \v 12 ಆದ್ದರಿಂದ ನೀವು ಪ್ರಬಲವಾಗಿ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಮಕ್ಕಳಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವ ಹಾಗೆ ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆಮಾಡಿಕೊಡಬೇಡಿರಿ. ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೆ ತೆಗೆದುಕೊಳ್ಳಬೇಡಿರಿ. ಅವರ ಸಮಾಧಾನವನ್ನೂ, ಅವರ ಮೇಲನ್ನೂ ಹುಡುಕಲೇ ಬೇಡಿರಿ,’ ಎಂದು ದೇವರೇ ನಮಗೆ ಹೇಳಿದಿರಲ್ಲವೇ? \pm \v 13 “ನಮ್ಮ ದುಷ್ಕಾರ್ಯ ಹಾಗೂ ನಮ್ಮ ಮಹಾ ಅಪರಾಧಕ್ಕಾಗಿ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ, ನಮ್ಮ ದೇವರಾಗಿರುವ ನೀವು ನಮ್ಮ ಪಾಪಗಳಿಗಿಂತ ಕಡಿಮೆ ಶಿಕ್ಷೆ ನೀಡಿದ್ದೀರಿ ಮತ್ತು ನಮ್ಮಲ್ಲಿ ಈ ರೀತಿಯಾಗಿ ಇಷ್ಟುಮಂದಿಯನ್ನು ಉಳಿಸಿದ್ದೀರಿ. \v 14 ನಾವು ನಿಮ್ಮ ಆಜ್ಞೆಗಳನ್ನು ಪುನಃ ಮೀರಿ ಅಸಹ್ಯ ಅಭ್ಯಾಸಕರಾದ ಈ ಜನರ ಸಂಗಡ ವಿವಾಹ ಸಂಬಂಧ ಮಾಡಬಹುದೇ? ಹಾಗೆ ಮಾಡಿದರೆ, ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದಂತೆ ದಂಡಿಸಲು, ನೀವು ನಮ್ಮ ಮೇಲೆ ಕೋಪಗೊಳ್ಳುವುದು ಯೋಗ್ಯವೇ? \v 15 ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರೇ, ನೀವು ನೀತಿವಂತರು! ನಾವು ಇಂದು ತಪ್ಪಿಸಿಕೊಂಡು ಉಳಿದಿದ್ದೇವೆ. ನಾವು ನಮ್ಮ ಅಪರಾಧಗಳ ನಿಮಿತ್ತ ನಿಮ್ಮ ಮುಂದೆ ನಿಲ್ಲಲು ಯೋಗ್ಯರಲ್ಲದಿದ್ದರೂ, ನಮ್ಮ ಅಪರಾಧಗಳೊಂದಿಗೆ ನಿಮ್ಮ ಮುಂದೆ ನಿಂತಿದ್ದೇವೆ,” ಎಂದು ಪ್ರಾರ್ಥನೆಮಾಡಿದೆ. \c 10 \s1 ಜನರು ಪಾಪದ ಅರಿಕೆಮಾಡಿದ್ದು \p \v 1 ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅತ್ತು ದೇವರ ಆಲಯದ ಮುಂದೆ ಅಡ್ಡಬಿದ್ದ ತರುವಾಯ ಇಸ್ರಾಯೇಲರಲ್ಲಿ ಸ್ತ್ರೀಯರೂ, ಪುರುಷರೂ, ಮಕ್ಕಳು ಮಹಾಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡು ಬಂದರು. ಜನರು ಬಹಳವಾಗಿ ಅತ್ತರು. \v 2 ಆಗ ಏಲಾಮನ ವಂಶಜರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ನಾವು ಅನ್ಯದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡದ್ದರಿಂದ, ನಮ್ಮ ದೇವರಿಗೆ ವಿರೋಧವಾಗಿ ದ್ರೋಹಮಾಡಿದ್ದೇವೆ. ಆದರೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲರಲ್ಲಿ ನಿರೀಕ್ಷೆ ಉಂಟು. \v 3 ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ. \v 4 ನೀನು ಏಳು, ಏಕೆಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ನಿಲ್ಲುತ್ತೇವೆ. ಧೈರ್ಯದಿಂದ ಅದನ್ನು ಮಾಡು,” ಎಂದನು. \p \v 5 ಆಗ ಎಜ್ರನು ಎದ್ದು, ಮಹಾಯಾಜಕರೂ ಲೇವಿಯರೂ ಸಮಸ್ತ ಇಸ್ರಾಯೇಲರೂ ಈ ಮಾತಿನ ಪ್ರಕಾರವಾಗಿ ಮಾಡಲು, ಅವರು ಆಣೆಯಿಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು. \v 6 ಆಮೇಲೆ ಎಜ್ರನು ಎದ್ದು ದೇವರ ಆಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಏಕೆಂದರೆ ಸೆರೆಯಿಂದ ಯೆರೂಸಲೇಮಿಗೆ ಬಂದಿದ್ದ ಯೆಹೂದ್ಯರ ಅಪನಂಬಿಗಸ್ತಿಕೆಯ ಬಗ್ಗೆ ತುಂಬಾ ದುಃಖಿತನಾಗಿದ್ದನು. \p \v 7 ತರುವಾಯ ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿಗೆ ಕೂಡಿಬರಬೇಕೆಂದು ಸಮಸ್ತ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಸಾರಲಾಗಿತ್ತು. \v 8 ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ, ಅವನ ಆಸ್ತಿಯೆಲ್ಲಾ ದಂಡವಾಗಿ ತೆಗೆದುಕೊಳ್ಳಲಾಗುವುದೆಂದೂ, ಅವನು ಸೆರೆಯಿಂದ ಬಂದವರ ಕೂಟದಿಂದ ಬಹಿಷ್ಕೃತನಾಗುವನು ಎಂದೂ ಪ್ರಕಟಿಸಿದರು. \b \p \v 9 ಆಗ ಯೆಹೂದ ಮತ್ತು ಬೆನ್ಯಾಮೀನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿದರು. ಅದು ಒಂಬತ್ತನೆಯ ತಿಂಗಳ, ಇಪ್ಪತ್ತನೆಯ ದಿವಸವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೋಸ್ಕರವೂ, ಮಳೆಗೋಸ್ಕರವೂ ನಡುಗಿ ಕುಳಿತುಕೊಂಡಿದ್ದರು. \v 10 ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ, “ನೀವು ಇಸ್ರಾಯೇಲರ ಅಪರಾಧವನ್ನು ಅಧಿಕವಾಗಿ ಮಾಡಲು, ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದರಿಂದ ದ್ರೋಹ ಮಾಡಿದಿರಿ. \v 11 ಆದ್ದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರ ಮುಂದೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತದ ಪ್ರಕಾರಮಾಡಿ, ಈ ದೇಶದ ಜನರಿಂದಲೂ, ಅನ್ಯ ಸ್ತ್ರೀಯರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ,” ಎಂದನು. \p \v 12 ಆಗ ಸಭೆಯೆಲ್ಲಾ ಉತ್ತರವಾಗಿ ದೊಡ್ಡ ಶಬ್ದದಿಂದ, “ನೀನು ಸರಿಯಾಗಿ ಹೇಳಿದೆ! ನೀನು ಹೇಳಿದ ಪ್ರಕಾರವೇ ನಾವು ಮಾಡಬೇಕು. \v 13 ಆದರೆ ಜನರು ಅನೇಕರು. ಇದು ಮಳೆಗಾಲವಾಗಿರುವುದರಿಂದ ಹೊರಗೆ ಇರಲಾರೆವು. ಇದಲ್ಲದೆ ಇದು ಒಂದೆರಡು ದಿನಗಳ ಕೆಲಸವಲ್ಲ. ಏಕೆಂದರೆ ಈ ಕಾರ್ಯದಲ್ಲಿ ನಮ್ಮ ಅಪರಾಧವು ದೊಡ್ಡದು. \v 14 ಆದಕಾರಣ ದಯಮಾಡಿ ಸಭೆಯ ಎಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಈ ಕಾರ್ಯದ ನಿಮಿತ್ತ ನಮ್ಮ ದೇವರ ಕಠಿಣ ಕೋಪವು ನಮ್ಮನ್ನು ಬಿಟ್ಟು ಹೋಗುವವರೆಗೆ, ನಮ್ಮ ಪಟ್ಟಣಗಳಲ್ಲಿ ಯಹೂದ್ಯರಲ್ಲದ ಸ್ತ್ರೀಯರನ್ನು ತೆಗೆದುಕೊಂಡವರು, ನೇಮಿಸಿದ ಕಾಲದಲ್ಲಿ ಬಂದು, ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ, ಅದರ ನ್ಯಾಯಾಧಿಪತಿಗಳೂ ಇರಲಿ,” ಎಂದರು. \v 15 ಆದರೆ ಅಸಾಯೇಲನ ಮಗ ಯೋನಾತಾನ್ ಹಾಗು, ತಿಕ್ವನ ಮಗ ಯಹ್ಜೆಯ ಇದನ್ನು ವಿರೋಧಿಸಿದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈನೂ ಅವರನ್ನು ಬೆಂಬಲಿಸಿದರು. \p \v 16 ಸೆರೆಯಿಂದ ಬಂದವರು ಇದೇ ಪ್ರಕಾರ ಮಾಡಿದರು. ಆದ್ದರಿಂದ ಯಾಜಕ ಎಜ್ರನು, ಕುಟುಂಬಗಳ ಮುಖ್ಯಸ್ಥರನ್ನಾಗಿ ಕುಟುಂಬಕ್ಕೆ ಒಬ್ಬೊಬ್ಬರನ್ನು ಆಯ್ದುಕೊಂಡನು. ಅವರನ್ನು ಹೆಸರು ಹಿಡಿದು ನೇಮಿಸಿದನು. ಈ ಕಾರ್ಯವನ್ನು ಶೋಧಿಸಲು ಹತ್ತನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಕುಳಿತುಕೊಂಡರು. \v 17 ಅನ್ಯ ಸ್ತ್ರೀಯರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಮುಗಿಸಿದರು. \s1 ಅಂತರ ವಿವಾಹದಿಂದ ಅಪರಾಧಿಗಳಾದವರು \li4 \v 18 ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: \li1 ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: \li2 ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು. \v 19 ಇವರು ತಮ್ಮ ಹೆಂಡತಿಯರನ್ನು ಹೊರಡಿಸಿಬಿಡುವೆವೆಂದು ಪ್ರತಿಜ್ಞೆ ಮಾಡಿ, ತಾವು ಅಪರಾಧಸ್ಥರಾದ್ದರಿಂದ ಅಪರಾಧ ಕಳೆಯುವುದಕ್ಕೆ ಮಂದೆಯಿಂದ ತಂದ ಒಂದು ಟಗರನ್ನು ಅರ್ಪಿಸಿದರು. \li1 \v 20 ಇಮ್ಮೇರನ ವಂಶಜರಲ್ಲಿ: \li2 ಹನಾನೀ, ಜೆಬದ್ಯ. \li1 \v 21 ಹಾರಿಮನ ವಂಶಜರಲ್ಲಿ: \li2 ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಉಜ್ಜೀಯ. \li1 \v 22 ಪಷ್ಹೂರನ ವಂಶಜರಲ್ಲಿ: \li2 ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೆಯೇಲ್, ಯೋಜಾಬಾದ್ ಮತ್ತು ಎಲ್ಲಾಸ. \b \li4 \v 23 ಲೇವಿಯರಲ್ಲಿ \li2 ಯೋಜಾಬಾದ್, ಶಿಮ್ಮೀ, ಕೆಲೀಟನೆಂಬ ಕೇಲಾಯ, ಪೆತಹ್ಯ, ಯೆಹೂದ, ಎಲೀಯೆಜೆರ್. \li1 \v 24 ಹಾಡುಗಾರರಲ್ಲಿ: \li2 ಎಲ್ಯಾಷೀಬ್. \li1 ದ್ವಾರಪಾಲಕರಲ್ಲಿ: \li2 ಶಲ್ಲೂಮ್, ಟೆಲೆಮ್, ಊರಿ. \b \li4 \v 25 ಇಸ್ರಾಯೇಲರಲ್ಲಿ: \li1 ಪರೋಷನ ವಂಶಜರಲ್ಲಿ: \li2 ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯಾಮಿನ್, ಎಲಿಯಾಜರ್, ಮಲ್ಕೀಯ, ಬೆನಾಯ. \li1 \v 26 ಏಲಾಮನ ವಂಶಜರಲ್ಲಿ: \li2 ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೀಮೋತ್, ಎಲೀಯ. \li1 \v 27 ಜತ್ತೂ ವಂಶಜರಲ್ಲಿ: \li2 ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೀಮೋತ್, ಜಾಬಾದ್ ಮತ್ತು ಅಜೀಜಾ. \li1 \v 28 ಬೇಬೈನ ವಂಶಜರಲ್ಲಿ: \li2 ಯೆಹೋಹಾನಾನ್, ಹನನ್ಯ, ಜಬ್ಬೈ, ಅತ್ಲೈ. \li1 \v 29 ಬಾನೀ ವಂಶಜರಲ್ಲಿ: \li2 ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್. \li1 \v 30 ಪಹತ್ ಮೋವಾಬಿನ ವಂಶಜರಲ್ಲಿ: \li2 ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲಯೇಲ್, ಬಿನ್ನೂಯ್, ಮನಸ್ಸೆ. \li1 \v 31 ಹಾರಿಮನ ವಂಶಜರಲ್ಲಿ: \li2 ಎಲೀಯೆಜೆರ್, ಇಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್, \v 32 ಬೆನ್ಯಾಮೀನ್, ಮಲ್ಲೂಕ್, ಶೆಮರ್ಯ. \li1 \v 33 ಹಾಷುಮ್ ವಂಶಜರಲ್ಲಿ: \li2 ಮತ್ತೆನೈ, ಮತ್ತತ್ತ, ಜಾಬಾದ್, ಎಲೀಫೆಲೆಟ್, ಯೆರೇಮೈ, ಮನಸ್ಸೆ, ಶಿಮ್ಮೀ. \li1 \v 34 ಬಾನೀ ವಂಶಜರಲ್ಲಿ: \li2 ಮಾದೈ, ಅಮ್ರಾಮ್, ಉಯೇಲ್, \v 35 ಬೆನಾಯ, ಬೇದೆಯ, ಕೆಲೂಹಿ. \v 36 ವನ್ಯಾಹ, ಮೆರೇಮೋತ್, ಎಲ್ಯಾಷೀಬ್, \v 37 ಮತ್ತನ್ಯ, ಮತ್ತೆನೈ, ಯಾಸೈ. \li1 \v 38 ಬಾನೀ, ಬಿನ್ನೂಯ್ ವಂಶಜರಲ್ಲಿ: \li2 ಶಿಮ್ಮೀ, \v 39 ಶೆಲೆಮ್ಯ, ನಾತಾನ್, ಅದಾಯ, \v 40 ಮಕ್ನದೆಬೈ, ಶಾಷೈ, ಶಾರೈ, \v 41 ಅಜರಯೇಲ್, ಶೆಲೆಮ್ಯ, ಶೆಮರ್ಯ, \v 42 ಶಲ್ಲೂಮ್, ಅಮರ್ಯ, ಯೋಸೇಫ್. \li1 \v 43 ನೆಬೋ ವಂಶಜರಲ್ಲಿ: \li2 ಯೆಹಿಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋಯೇಲ್ ಮತ್ತು ಬೆನಾಯ. \b \li4 \v 44 ಇವರೆಲ್ಲರು ಅನ್ಯ ಸ್ತ್ರೀಯರನ್ನು ಮದುವೆಯಾಗಿದ್ದರು. ಇವರಲ್ಲಿ ಕೆಲವರಿಗೆ ಈ ಹೆಂಡತಿಯರಿಂದ ಮಕ್ಕಳಾಗಿದ್ದರು.