\id GAL - Biblica® Open Kannada Contemporary Version \ide UTF-8 \h ಗಲಾತ್ಯದವರಿಗೆ \toc1 ಗಲಾತ್ಯದವರಿಗೆ ಪೌಲನು ಬರೆದ ಪತ್ರಿಕೆ \toc2 ಗಲಾತ್ಯದವರಿಗೆ \toc3 ಗಲಾತ್ಯ \mt1 ಗಲಾತ್ಯದವರಿಗೆ \mt2 ಪೌಲನು ಬರೆದ ಪತ್ರಿಕೆ \c 1 \p \v 1 ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ \v 2 ನನ್ನ ಜೊತೆಯಲ್ಲಿರುವ ಎಲ್ಲಾ ಪ್ರಿಯರೂ, \b \p ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದು: \b \p \v 3 ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಇರಲಿ. \v 4 ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು. \v 5 ದೇವರಿಗೆ ಯುಗಯುಗಾಂತರಗಳಿಗೂ ಮಹಿಮೆಯಾಗಲಿ. ಆಮೆನ್. \b \s1 ಬೇರೆ ಸುವಾರ್ತೆ ಇಲ್ಲ \p \v 6 ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ. \v 7 ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ. \v 8 ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೊಂದನ್ನು ನಾವೇ ಆಗಲಿ, ಪರಲೋಕದೊಳಗಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. \v 9 ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ. \p \v 10 ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ. \s1 ದೇವರಿಂದ ಕರೆಹೊಂದಿದ ಪೌಲ \p \v 11 ಪ್ರಿಯರೇ, ನಾನು ಸಾರಿದ ಸುವಾರ್ತೆಯು ಮಾನವೀಯವಾದದ್ದಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ. \v 12 ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು. \p \v 13 ನಾನು ಯೆಹೂದ್ಯ ವಿಶ್ವಾಸದಲ್ಲಿದ್ದಾಗ ನನ್ನ ಹಿಂದಿನ ನಡತೆಯನ್ನು ನೀವು ಕೇಳಿದ್ದೀರಷ್ಟೇ. ನಾನು ದೇವರ ಸಭೆಯನ್ನು ಮಿತಿಮೀರಿ ಹಿಂಸೆಪಡಿಸಿ ಹಾಳುಮಾಡಲು ಯತ್ನಿಸುತ್ತಿದ್ದೆನು. \v 14 ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು. \v 15 ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು, \v 16 ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ. \v 17 ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ, ನಾನು ಅರೇಬಿಯಾಕ್ಕೆ ಹೋದೆನು. ಅನಂತರ ಪುನಃ ದಮಸ್ಕಕ್ಕೆ ಹಿಂದಿರುಗಿದೆನು. \p \v 18 ಮೂರು ವರ್ಷಗಳ ನಂತರವೇ ನಾನು ಕೇಫನನ್ನು\f + \fr 1:18 \fr*\ft ಅಥವಾ \ft*\fqa ಪೇತ್ರ\fqa*\f* ಪರಿಚಯಮಾಡಿಕೊಳ್ಳಲು ಯೆರೂಸಲೇಮಿಗೆ ಹೋಗಿ ಅವನೊಂದಿಗೆ ಹದಿನೈದು ದಿವಸ ಇದ್ದೆನು. \v 19 ಆದರೆ ಕರ್ತ ಯೇಸುವಿನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ. \v 20 ಈಗ ನಾನು ನಿಮಗೆ ಬರೆಯುತ್ತಿರುವ ವಿಷಯಗಳು ಸುಳ್ಳಲ್ಲ ಎಂದು ದೇವರ ಮುಂದೆ ನಾನು ನಿಶ್ಚಯವಾಗಿ ನಿಮಗೆ ಹೇಳುತ್ತೇನೆ. \p \v 21 ಆಮೇಲೆ ಸಿರಿಯಾ ಮತ್ತು ಕಿಲಿಕ್ಯ ಪ್ರಾಂತಗಳಿಗೆ ಬಂದೆನು. \v 22 ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ. \v 23 ಆದರೆ ಅವರು, “ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದ ಇವನು, ತಾನು ನಾಶಮಾಡಲು ಪ್ರಯತ್ನಿಸಿದ್ದ ವಿಶ್ವಾಸವನ್ನೇ ಈಗ ಪ್ರಸಂಗಿಸುತ್ತಿದ್ದಾನೆ,” ಎಂಬುದನ್ನು ಮಾತ್ರ ಕೇಳಿದ್ದರು. \v 24 ಅವರು ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು. \c 2 \s1 ಅಪೊಸ್ತಲರಿಂದ ಪೌಲನ ಸ್ವೀಕಾರ \p \v 1 ಹದಿನಾಲ್ಕು ವರ್ಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಯೆರೂಸಲೇಮಿಗೆ ಹೋದೆನು. \v 2 ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ. \v 3 ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಅವನನ್ನು ಬಲಾತ್ಕಾರ ಮಾಡಲಿಲ್ಲ. \v 4 ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು. \v 5 ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ. \p \v 6 ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ. \v 7 ಅದಕ್ಕೆ ಬದಲಾಗಿ, ಯೆಹೂದ್ಯರಿಗೆ ಸುವಾರ್ತೆ ಸಾರುವುದು ಪೇತ್ರನಿಗೆ ಒಪ್ಪಿಸಿಕೊಟ್ಟಂತೆಯೇ, ಯೆಹೂದ್ಯರಲ್ಲದವರಿಗೆ ಸುವಾರ್ತೆ ಸಾರುವುದು ನನಗೆ ಒಪ್ಪಿಸಲಾಯಿತು ಎಂಬುದನ್ನು ಸಭೆಯ ನಾಯಕರು ಸಹ ಗ್ರಹಿಸಿಕೊಂಡರು. \v 8 ಏಕೆಂದರೆ, ಯೆಹೂದ್ಯರಿಗೆ ಅಪೊಸ್ತಲನಾಗಿರುವ ಪೇತ್ರನಲ್ಲಿ ಕಾರ್ಯಮಾಡಿದ ದೇವರೇ, ಯೆಹೂದ್ಯರಲ್ಲದವರಿಗೆ ನಾನು ಅಪೊಸ್ತಲನಾಗಿರಲು ನನ್ನಲ್ಲಿ ಕಾರ್ಯಮಾಡಿದರು. \v 9 ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ\f + \fr 2:9 \fr*\ft ಮೂಲಭಾಷೆಯಲ್ಲಿ \ft*\fqa ಕೇಫ.\fqa*\f* ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು. \v 10 ಅವರು ನಾವು ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಇದನ್ನು ಮಾಡುವುದರಲ್ಲಿ ಆಸಕ್ತನಾಗಿದ್ದೆನು. \s1 ಪೌಲನು ಪೇತ್ರನನ್ನು ಎದುರಿಸಿದ್ದು \p \v 11 ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ\f + \fr 2:11 \fr*\ft ಅಥವಾ \ft*\fqa ಮುಖಾಮುಖಿಯಾಗಿ\fqa*\f* ಎದುರಿಸಿದೆನು. \v 12 ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮುಂಚೆ ಪೇತ್ರನು ಯೆಹೂದ್ಯರಲ್ಲದವರೊಡನೆ ಊಟಮಾಡುತ್ತಿದ್ದನು. ಅವರು ಬಂದ ಮೇಲೆ ಯೆಹೂದ್ಯರಿಗೆ ಅವನು ಭಯಪಟ್ಟು ಯೆಹೂದ್ಯರಲ್ಲದವರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. \v 13 ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಕಪಟಮಾಡಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಒಳಗಾದನು. \p \v 14 ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ. \p \v 15 “ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆಂದು ಕರೆಯಲಾಗುವ ಯೆಹೂದ್ಯರಲ್ಲದವರಲ್ಲ. \v 16 ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ. \p \v 17 “ಆದರೆ, ನಾವು ಕ್ರಿಸ್ತ ಯೇಸುವಿನಲ್ಲಿ ನೀತಿವಂತರಾಗಲು ಪ್ರಯತ್ನಿಸುವ ನಾವೂ ಪಾಪಿಗಳಾಗಿ ಇರುವುದಾದರೆ, ಕ್ರಿಸ್ತ ಯೇಸು ಪಾಪಕ್ಕೆ ಪ್ರೋತ್ಸಾಹ ನೀಡಿದ ಹಾಗಾಗುವುದೋ? ಎಂದಿಗೂ ಇಲ್ಲ. \v 18 ನಾನು ಕೆಡವಿದ್ದನ್ನೇ ಪುನಃ ನಾನೇ ಕಟ್ಟಿದರೆ, ನನ್ನನ್ನು ನಿಯಮ ಉಲ್ಲಂಘಿಸಿದವನು ಎಂದು ರುಜುಪಡಿಸಿಕೊಳ್ಳುತ್ತೇನಲ್ಲಾ? \p \v 19 “ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ. \v 20 ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ. \v 21 ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!” \c 3 \s1 ನಂಬಿಕೆಯೋ ನಿಯಮವೋ? \p \v 1 ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ? \v 2 ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ? \v 3 ನೀವು ಇಷ್ಟು ಬುದ್ಧಿಯಿಲ್ಲದವರಾಗಿದ್ದೀರಾ? ನೀವು ಪವಿತ್ರ ಆತ್ಮರಲ್ಲಿ ಪ್ರಾರಂಭಿಸಿ ಈಗ ಮಾನವೀಯವಾಗಿ ಪರಿಪೂರ್ಣರಾಗಬೇಕೆಂದ್ದೀರಾ? \v 4 ನೀವು ಎಷ್ಟೋ ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? \v 5 ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ? \v 6 ಈ ರೀತಿಯಾಗಿ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅದು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.”\f + \fr 3:6 \fr*\ft \+xt ಆದಿ 15:6\+xt*\ft*\f* \p \v 7 ಆದ್ದರಿಂದ ನಂಬುವವರೇ, ಅಬ್ರಹಾಮನ ಮಕ್ಕಳೆಂದು ನೀವು ಅರ್ಥಮಾಡಿಕೊಳ್ಳಿರಿ. \v 8 ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,”\f + \fr 3:8 \fr*\ft \+xt ಆದಿ 12:3; 18:18; 22:18\+xt*\ft*\f* ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು. \v 9 ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು. \p \v 10 ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,”\f + \fr 3:10 \fr*\ft \+xt ಧರ್ಮೋ 27:26\+xt*\ft*\f* ಎಂದು ಬರೆದಿದೆ. \v 11 ಇದಲ್ಲದೆ ನಿಯಮದಿಂದ ದೇವರ ಮುಂದೆ ಯಾರೂ ನೀತಿವಂತರೆಂಬ ನಿರ್ಣಯವನ್ನು ಹೊಂದುವುದಿಲ್ಲವೆಂಬುದು ಸ್ಪಷ್ಟವಾಗಿದೆ. ಏಕೆಂದರೆ, “ನೀತಿವಂತನು ನಂಬಿಕೆಯಿಂದಲೇ ಬದುಕುವನು.”\f + \fr 3:11 \fr*\ft \+xt ಹಬ 2:4\+xt*\ft*\f* \v 12 ನಿಯಮವು ನಂಬಿಕೆಯನ್ನು ಆಧಾರಗೊಂಡದ್ದಲ್ಲ. ಆದರೆ, “ನಿಯಮಗಳ ಕ್ರಿಯೆಗಳನ್ನು ಮಾಡುವವನು ಅವುಗಳ ಮೂಲಕ ಬದುಕುವನು.”\f + \fr 3:12 \fr*\ft \+xt ಯಾಜಕ 18:5\+xt*\ft*\f* \v 13 ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,”\f + \fr 3:13 \fr*\ft \+xt ಧರ್ಮೋ 21:23\+xt*\ft*\f* ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು. \v 14 ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು. \s1 ನಿಯಮವೂ ವಾಗ್ದಾನವೂ \p \v 15 ಪ್ರಿಯರೇ, ನಾನು ದಿನನಿತ್ಯದ ವ್ಯವಹಾರದಂತೆ ಮಾತನಾಡುತ್ತಿದ್ದೇನೆ. ಮತ್ತೊಬ್ಬನೊಡನೆ ಯಾರಾದರೂ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದ ಮೇಲೆ ಯಾರೂ ಅದನ್ನು ರದ್ದು ಮಾಡುವುದಿಲ್ಲ, ಇಲ್ಲವೆ ಕೂಡಿಸುವುದಿಲ್ಲ. \v 16 ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,”\f + \fr 3:16 \fr*\ft \+xt ಆದಿ 12:7; 13:15; 24:7\+xt*\ft*\f* ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ. \v 17 ನಾನು ಹೇಳುವ ಮಾತಿನ ತಾತ್ಪರ್ಯ ಏನೆಂದರೆ, ದೇವರು ಸ್ಥಿರಪಡಿಸಿ ಮುಗಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರ್ಷಗಳ ತರುವಾಯ ಬಂದ ಮೋಶೆಯ ನಿಯಮವು ಆ ವಾಗ್ದಾನವನ್ನು ರದ್ದುಪಡಿಸಲಾಗದು ಮತ್ತು ವ್ಯರ್ಥಪಡಿಸಲಾಗದು. \v 18 ಏಕೆಂದರೆ ಆ ಬಾಧ್ಯತೆಯು ನಿಯಮದ ಪ್ರಕಾರವಾಗಿದ್ದರೆ, ಅದು ಇನ್ನು ವಾಗ್ದಾನದ ಮೇಲೆ ಆಧಾರವಾದದ್ದಲ್ಲ. ಆದರೆ ದೇವರು ತಮ್ಮ ಕೃಪೆಯಿಂದ ಅಬ್ರಹಾಮನಿಗೆ ವಾಗ್ದಾನದ ಮೂಲಕವೇ ಆ ಬಾಧ್ಯತೆಯನ್ನು ಕೊಟ್ಟಿದ್ದಾರೆ. \p \v 19 ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು. \v 20 ಒಂದು ಪಕ್ಷಕ್ಕಿಂತಲೂ ಹೆಚ್ಚಿನವನಾಗಿದ್ದರೆ ಮಾತ್ರ ಮಧ್ಯಸ್ಥನ ಅಗತ್ಯವಿರುವುದು; ದೇವರಾದರೋ ಒಬ್ಬರೇ. \p \v 21 ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು. \v 22 ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ. \s1 ದೇವಪುತ್ರರು \p \v 23 ನಂಬಿಕೆ ಬರುವುದಕ್ಕೆ ಮುಂಚೆ ನಾವು ನಿಯಮದ ಅಧೀನದಲ್ಲಿ ಇದ್ದೆವು. ಬರಲಿರುವ ಆ ನಂಬಿಕೆಯು ಪ್ರಕಟವಾಗುವ ತನಕ ನಾವು ಸೆರೆಯಾದವರಂತೆ ಇದ್ದೆವು. \v 24 ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ. \v 25 ಆದರೆ ಈಗ ನಂಬಿಕೆಯು ಬಂದಿರುವುದರಿಂದ, ಇನ್ನೆಂದಿಗೂ ನಾವು ಪೋಷಕ ಎಂಬ ನಿಯಮದ ಕೆಳಗೆ ಇಲ್ಲ. \p \v 26 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. \v 27 ಹೇಗೆಂದರೆ, ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿರಿ. \v 28 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ. \v 29 ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ. \c 4 \p \v 1 ಆದರೆ ನಾನು ಹೇಳುವುದೇನೆಂದರೆ, ವಾರಸುದಾರನು ತಾನು ಇಡೀ ಆಸ್ತಿಗೆಲ್ಲಾ ಧಣಿಯಾಗಿದ್ದರೂ ಬಾಲಕನಾಗಿರುವ ತನಕ ಅವನಿಗೂ ದಾಸನಿಗೂ ವ್ಯತ್ಯಾಸವಿರುವುದಿಲ್ಲ. \v 2 ಆದರೆ ಅವನ ತಂದೆಯು ಮುಂಚಿತವಾಗಿ ನೇಮಿಸಿದ ದಿನದವರೆಗೂ ಅವನು ಪೋಷಕರ ಹಾಗೂ ಆಡಳಿತಗಾರರ ಕೈಕೆಳಗಿರುವನು. \v 3 ಅದರಂತೆಯೇ ನಾವು ಬಾಲಕರಾಗಿದ್ದಾಗ ಲೋಕದ ಮೂಲಪಾಠಗಳಿಗೆ ಗುಲಾಮರಾಗಿದ್ದೆವು. \v 4 ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು. \v 5 ಹೀಗೆ ದೇವರು ನಿಯಮಕ್ಕೆ ಒಳಗಾದ ನಮ್ಮನ್ನು ವಿಮೋಚಿಸಿ, ನಾವು ಪುತ್ರರ ಸ್ಥಾನವನ್ನು ಹೊಂದುವಂತೆ ಮಾಡಿದರು. \v 6 ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ. \v 7 ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ ಪುತ್ರನಾಗಿದ್ದೀ. ನೀನು ದೇವರ ಮಗು ಎಂದ ಮೇಲೆ ದೇವರ ಮೂಲಕ ವಾರಸುದಾರನೂ ಆಗಿದ್ದೀ. \s1 ಗಲಾತ್ಯದವರ ಬಗ್ಗೆ ಪೌಲನ ಚಿಂತೆ \p \v 8 ಮುಂಚೆ ನೀವು ದೇವರನ್ನು ಅರಿಯದವರಾಗಿದ್ದಾಗ, ಸ್ವಾಭಾವಿಕವಾಗಿ ದೇವರಲ್ಲದವುಗಳಿಗೆ ನೀವು ಗುಲಾಮರಾಗಿದ್ದೀರಿ. \v 9 ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ? \v 10 ನೀವು ದಿನಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ. \v 11 ನಾವು ನಿಮ್ಮ ಮಧ್ಯದಲ್ಲಿ ಪ್ರಯಾಸಪಟ್ಟದ್ದು ವ್ಯರ್ಥವಾಯಿತೇನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ. \p \v 12 ಪ್ರಿಯರೇ, ನಾನು ನಿಮ್ಮ ಹಾಗೆ ಆದ್ದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೆ ಯಾವ ಕೇಡನ್ನೂ ಮಾಡಲಿಲ್ಲ. \v 13 ನಾನು ಮುಂಚೆ ನಿಮಗೆ ಸುವಾರ್ತೆ ಸಾರಿದ್ದು, ನನ್ನ ಶರೀರದ ಬಲಹೀನತೆಯಿಂದ ಎಂದು ನೀವು ಬಲ್ಲಿರಿ. \v 14 ನನ್ನ ದೇಹಸ್ಥಿತಿ ನಿಮಗೆ ಬೇಸರಗೊಳಿಸುವುದಾಗಿದ್ದರೂ ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸುವಿನಂತೆಯೂ ಸೇರಿಸಿಕೊಂಡಿರಿ. \v 15 ನೀವು ಕೋರಿದ ಆ ಶುಭವೆಲ್ಲಿ? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಿಮ್ಮ ವಿಷಯವಾಗಿ ನಾನು ಸಾಕ್ಷಿಕೊಡುತ್ತೇನೆ. \v 16 ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ? \p \v 17 ಅವರು ನಿಮ್ಮನ್ನು ಆಕರ್ಷಿಸಲು ಆಸಕ್ತರಾಗಿದ್ದಾರೆ. ಆದರೆ ಒಳ್ಳೆಯ ಅಭಿಪ್ರಾಯದಿಂದ ಅಲ್ಲ. ನೀವು ಅವರ ವಿಷಯದಲ್ಲಿ ಆಸಕ್ತರಾಗಬೇಕೆಂದು ಅವರು ನಿಮ್ಮನ್ನು ನಮ್ಮಿಂದ ಪ್ರತ್ಯೇಕಿಸುವುದಕ್ಕೆ ಅಪೇಕ್ಷಿಸುತ್ತಾರೆ. \v 18 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಉತ್ತಮ ಕಾರ್ಯಗಳಲ್ಲಿ ನೀವು ಆಸಕ್ತರಾಗಿರುವುದು ಒಳ್ಳೆಯದು. \v 19 ನನ್ನ ಮಕ್ಕಳೇ, ಕ್ರಿಸ್ತ ಯೇಸುವು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಾನು ನಿಮಗಾಗಿ ಪುನಃ ಪ್ರಸವವೇದನೆ ಪಡುತ್ತೇನೆ. \v 20 ನಾನು ಈಗ ನಿಮ್ಮ ಜೊತೆಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ, ಏಕೆಂದರೆ, ನಾನು ನಿಮ್ಮ ವಿಷಯದಲ್ಲಿ ಚಿಂತಿಸುವವನಾಗಿದ್ದೇನೆ. \s1 ಹಾಗರ್ ಮತ್ತು ಸಾರಳು \p \v 21 ಮೋಶೆಯ ನಿಯಮದ ಕೆಳಗಿರಲು ಬಯಸುವವರೇ, ನಿಯಮವು ಏನು ಹೇಳುತ್ತದೆಯೆಂದು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದೀರಾ? ನನಗೆ ಹೇಳಿರಿ. \v 22 ಏಕೆಂದರೆ ದಾಸಿಯಿಂದ ಒಬ್ಬನು, ಧರ್ಮಪತ್ನಿಯಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಪವಿತ್ರ ವೇದದಲ್ಲಿ ಬರೆದಿದೆ. \v 23 ದಾಸಿಯ ಮಗನು ಶಾರೀರಿಕವಾಗಿ ಹುಟ್ಟಿದವನು. ಆದರೆ ಧರ್ಮಪತ್ನಿಯ ಮಗನಾದರೋ ದೇವರ ವಾಗ್ದಾನದ ಮೂಲಕ ಹುಟ್ಟಿದನು. \p \v 24 ಈ ಸಂಗತಿಗಳು ಉಪಮಾನವಾಗಿವೆ. ಹೇಗೆಂದರೆ, ಇವರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು. ಅದೇ ಹಾಗರ್. \v 25 ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ. \v 26 ಆದರೆ ಸ್ವರ್ಗೀಯ ಯೆರೂಸಲೇಮ್ ಸ್ವತಂತ್ರಳು. ಈಕೆಯೇ ನಮ್ಮ ತಾಯಿ. \v 27 ಏಕೆಂದರೆ, \q1 “ಬಂಜೆಯೇ, ಹೆರದವಳೇ, ಆನಂದಿಸು. \q2 ಪ್ರಸವವೇದನೆ ಪಡದವಳೇ, \q1 ಸ್ವರವೆತ್ತಿ ಹರ್ಷದಿಂದ ಸ್ವರವೆತ್ತಿ ಕೂಗು; \q2 ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ \q2 ಎಷ್ಟೋ ಹೆಚ್ಚು ಮಕ್ಕಳಿದ್ದಾರೆ,”\f + \fr 4:27 \fr*\ft \+xt ಯೆಶಾಯ 54:1\+xt*\ft*\f* \m ಎಂದು ಪವಿತ್ರ ವೇದದಲ್ಲಿ ಬರೆದಿದೆ. \p \v 28 ಪ್ರಿಯರೇ, ನಾವು ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ. \v 29 ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ, ಈಗಲೂ ನಡೆಯುತ್ತದೆ. \v 30 ಆದರೆ ಪವಿತ್ರ ವೇದವು ಏನು ಹೇಳುತ್ತದೆ? “ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಏಕೆಂದರೆ ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಂದಿಗೂ ವಾರಸುದಾರನಾಗಬಾರದು.”\f + \fr 4:30 \fr*\ft \+xt ಆದಿ 21:10\+xt*\ft*\f* ಎಂದಲ್ಲವೇ? \v 31 ಹೀಗಿರುವಲ್ಲಿ ಪ್ರಿಯರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳೇ ಆಗಿದ್ದೇವೆ. \c 5 \s1 ಕ್ರಿಸ್ತ ಯೇಸುವಿನಲ್ಲಿ ಸ್ವಾತಂತ್ರ್ಯ \p \v 1 ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ. \p \v 2 ಇಗೋ, ಪೌಲನೆಂಬ ನಾನು ನಿಮಗೆ ಹೇಳುವುದೇನೆಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ, ಕ್ರಿಸ್ತ ಯೇಸುವಿನ ಮುಖಾಂತರ ನಿಮಗೆ ಏನೂ ಪ್ರಯೋಜನವಾಗುವುದಿಲ್ಲ. \v 3 ಸುನ್ನತಿ ಮಾಡಿಸಿಕೊಳ್ಳಲು ಬಯಸುವ ಪ್ರತಿಯೊಬ್ಬನೂ ನಿಯಮವನ್ನೆಲ್ಲಾ ಕೈಗೊಳ್ಳುವ ಹಂಗಿನಲ್ಲಿದ್ದಾನೆ ಎಂದು ಪುನಃ ದೃಢವಾಗಿ ಹೇಳುತ್ತೇನೆ. \v 4 ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ. \v 5 ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ. \v 6 ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ. \p \v 7 ನೀವು ಚೆನ್ನಾಗಿ ಓಡುತ್ತಿದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ತಡೆದವರು ಯಾರು? \v 8 ಈ ಪ್ರೇರಣೆಯು ನಿಮ್ಮನ್ನು ಕರೆದ ದೇವರಿಂದ ಬಂದದ್ದಲ್ಲ. \v 9 ಸ್ವಲ್ಪ ಹುಳಿಯು ಹಿಟ್ಟನ್ನೆಲ್ಲಾ ಹುಳಿಮಾಡುವುದು. \v 10 ನೀವು ಬೇರೆ ರೀತಿಯಿಂದ ಯೋಚಿಸುವುದಿಲ್ಲವೆಂದು ಕರ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಇದೆ. ಆದರೆ ನಿಮ್ಮನ್ನು ತೊಂದರೆ ಪಡಿಸುವವನು ಯಾವನಾದರೂ ಸರಿ, ಅವನು ದಂಡನೆಯನ್ನು ಅನುಭವಿಸುವನು. \v 11 ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ? \v 12 ನಿಮ್ಮನ್ನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ತೊಂದರೆ ಪಡಿಸುವವರಿಗೆ ಆ ಅಂಗಚ್ಛೇದವನ್ನಾದರೂ ಮಾಡಿಕೊಂಡರೆ ಲೇಸು ಎಂದು ಬಯಸುತ್ತೇನೆ! \s1 ಪವಿತ್ರಾತ್ಮರಿಗೆ ಅನುಗುಣವಾಗಿ ನಡೆಯತಕ್ಕದ್ದು \p \v 13 ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ. \v 14 ಏಕೆಂದರೆ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,”\f + \fr 5:14 \fr*\ft \+xt ಯಾಜಕ 19:18\+xt*\ft*\f* ಎಂಬ ಒಂದೇ ಆಜ್ಞೆಯಲ್ಲಿ ನಿಯಮವೆಲ್ಲಾ ಅಡಕವಾಗಿದೆ. \v 15 ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ. \p \v 16 ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ. \v 17 ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ. \v 18 ಆದರೆ ನೀವು ದೇವರ ಆತ್ಮದಿಂದ ನಡೆಸಿಕೊಳ್ಳುವವರಾದರೆ, ನಿಯಮದ ಅಧೀನತೆಯಲ್ಲಿ ಇರುವವರಲ್ಲ. \p \v 19 ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ, \v 20 ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ, \v 21 ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ. \p \v 22 ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ, \v 23 ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ. \v 24 ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ. \v 25 ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ. \v 26 ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ. \c 6 \s1 ಸರ್ವರಿಗೂ ಒಳಿತನ್ನು ಮಾಡೋಣ \p \v 1 ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. \v 2 ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ. \v 3 ಏನೂ ಅಲ್ಲದವನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿಕೊಂಡರೆ, ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ. \v 4 ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ. \v 5 ಏಕೆಂದರೆ ಪ್ರತಿಯೊಬ್ಬನೂ ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳಬೇಕು. \v 6 ವಾಕ್ಯದಲ್ಲಿ ಉಪದೇಶ ಹೊಂದುವವನು, ಉಪದೇಶ ಮಾಡುವವನೊಂದಿಗೆ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ. \p \v 7 ಮೋಸಹೋಗಬೇಡಿರಿ, ದೇವರು ಪರಿಹಾಸ್ಯಕ್ಕೆ ಒಳಗಾಗುವವರಲ್ಲ. ಏಕೆಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. \v 8 ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು. \v 9 ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು. \v 10 ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ. \b \s1 ಕಡೆಯ ಮಾತುಗಳು \p \v 11 ನನ್ನ ಕೈಯಿಂದ ಎಷ್ಟು ದೊಡ್ಡ ಅಕ್ಷರಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ. \b \p \v 12 ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ. \v 13 ಸುನ್ನತಿ ಮಾಡಿಸಿಕೊಳ್ಳುವ ತಾವಾದರೋ ನಿಯಮವನ್ನು ಕೈಗೊಂಡು ನಡೆಯುವುದಿಲ್ಲ. ಆದರೆ ಅವರು ನಿಮ್ಮ ಶರೀರದ ಸುನ್ನತಿಯಿಂದ ಹೆಚ್ಚಳಪಡುವಂತೆ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ. \v 14 ನನಗಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಹೆಚ್ಚಳ ಪಡುವುದು ಬೇಡವೇ ಬೇಡ. ಅವರ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. \v 15 ಸುನ್ನತಿಯಾಗುವುದರಿಂದ ಇಲ್ಲವೆ, ಸುನ್ನತಿಯಾಗದೆ ಇರುವುದರಿಂದ ಏನೂ ಪ್ರಯೋಜನವಿಲ್ಲ. ಆದರೆ ಹೊಸ ಸೃಷ್ಟಿಯೇ ಬೇಕು. \v 16 ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆಯೂ ದೇವರ ಇಸ್ರಾಯೇಲಿನ ಸಮಾಧಾನ ಹಾಗೂ ಕರುಣೆ ಇರಲಿ. \b \p \v 17 ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡಬಾರದು. ನಾನು ನನ್ನ ದೇಹದಲ್ಲಿ ಕರ್ತ ಆಗಿರುವ ಯೇಸುವಿನ ಗುರುತುಗಳನ್ನು ಪಡೆದಿದ್ದೇನೆ. \b \p \v 18 ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.