\id HAB - Biblica® Open Kannada Contemporary Version \ide UTF-8 \h ಹಬಕ್ಕೂಕ \toc1 ಹಬಕ್ಕೂಕ \toc2 ಹಬಕ್ಕೂಕ \toc3 ಹಬ \mt1 ಹಬಕ್ಕೂಕ \c 1 \p \v 1 ಪ್ರವಾದಿಯಾದ ಹಬಕ್ಕೂಕನು ಹೊಂದಿದ ಪ್ರವಾದನೆಯು: \b \s1 ಹಬಕ್ಕೂಕನ ದೂರು \q1 \v 2 ಯೆಹೋವ ದೇವರೇ, ನಾನು ಎಷ್ಟು ಕಾಲ ಸಹಾಯಕ್ಕಾಗಿ ಮೊರೆಯಿಡಬೇಕು. \q2 ನೀವು ನನ್ನ ಮೊರೆಗೆ ಎಷ್ಟು ಕಾಲ ಕಿವಿಗೊಡದಿರುವಿರಿ. \q1 “ಹಿಂಸೆಯಾಗುತ್ತಿದೆ,” ಎಂದು ಕೂಗುತ್ತಿದ್ದೇನೆ, \q2 ಆದರೂ ನೀವು ರಕ್ಷಿಸುವುದಿಲ್ಲ. \q1 \v 3 ಅನ್ಯಾಯವನ್ನು ನಾನು ನೋಡುವಂತೆ ಏಕೆ ಮಾಡುತ್ತೀರಿ? \q2 ತಪ್ಪನ್ನು ಏಕೆ ಸಹಿಸುತ್ತೀರಿ? \q1 ನಾಶವೂ ಹಿಂಸೆಯೂ ನನ್ನ ಮುಂದೆ ಇವೆ. \q2 ಹೋರಾಟವೂ ಒಡುಕೂ ಹೆಚ್ಚುತ್ತಲಿವೆ. \q1 \v 4 ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. \q2 ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. \q1 ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. \q2 ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ. \s1 ಯೆಹೋವ ದೇವರ ಉತ್ತರ \q1 \v 5 “ಜನಾಂಗಗಳ ಕಡೆಗೆ ನೋಡಿ ಲಕ್ಷ್ಯಗೊಟ್ಟು \q2 ಬಹಳವಾಗಿ ಆಶ್ಚರ್ಯಪಡಿರಿ. \q1 ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ \q2 ಆ ಕಾರ್ಯವನ್ನು ವಿವರಿಸಿ ಹೇಳಿದರೂ \q2 ನೀವದನ್ನು ನಂಬುವುದಿಲ್ಲ. \q1 \v 6 ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. \q2 ಅವರು ಉಗ್ರ ಮತ್ತು ಸಾಹಸಿ ಜನರು. \q1 ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ \q2 ವಿಶಾಲವಾದ ದೇಶದಲ್ಲಿ ಹಾದುಹೋಗುವರು. \q1 \v 7 ಅವರು ಭಯಂಕರವಾದವರು ಮತ್ತು ಕ್ರೂರವಾದವರು. \q2 ಅವರು ತಮಗೆ ತಾವೇ ಕಾನೂನಾಗಿದ್ದಾರೆ. \q2 ತಮ್ಮನ್ನು ತಾವೇ ಗೌರವಿಸಿಕೊಳ್ಳುವವರೂ ಆಗಿದ್ದಾರೆ. \q1 \v 8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿಯೂ, \q2 ಸಂಜೆಯ ತೋಳಗಳಿಗಿಂತ ಚುರುಕಾಗಿಯೂ ಇವೆ. \q1 ಅವರ ಅಶ್ವಸೈನ್ಯ ಎರಗುವುದು. \q2 ಅವರ ಕುದುರೆ ಸವಾರರು ದೂರದಿಂದ ಬರುವರು; \q1 ನುಂಗುವುದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿ ಬರುವರು. \q2 \v 9 ಅವರೆಲ್ಲರು ಹಿಂಸಿಸುವುದಕ್ಕೆ ಬರುವರು; \q1 ಅವರ ಸಮೂಹ, ಮರುಭೂಮಿಯ ಗಾಳಿಯಂತೆಯೇ ಮುಂದೆ ಬರುವುದು; \q2 ಸೆರೆಯವರನ್ನು ಮರಳಿನ ಹಾಗೆ ಕೂಡಿಸುವರು. \q1 \v 10 ಅವರ ಅರಸನನ್ನು ಧಿಕ್ಕರಿಸುವರು; \q2 ಪ್ರಧಾನರು ಅವರನ್ನು ಪರಿಹಾಸ್ಯ ಮಾಡುವರು; \q1 ಕೋಟೆಗಳಿಗೆಲ್ಲಾ ಕುಚೋದ್ಯ ಮಾಡುವರು; \q2 ಮಣ್ಣಿನ ದಿನ್ನೆಗಳನ್ನು ಮಾಡಿ, ಅವುಗಳನ್ನು ಹಿಡಿಯುವರು. \q1 \v 11 ಬಿರುಗಾಳಿಯಂತೆ ಕೊಚ್ಚಿಕೊಳ್ಳುತ್ತಾ ಮುಂದೆ ಸಾಗುವರು. \q2 ಅಪರಾಧಿ ಜನರವರು. ಅವರ ಸ್ವಂತ ಬಲ, ಅವರ ದೇವರು.” \s1 ಹಬಕ್ಕೂಕನ ಎರಡನೆಯ ದೂರು \q1 \v 12 ಯೆಹೋವ ದೇವರೇ, ನೀವು ಅನಾದಿಕಾಲದಿಂದ ಬಂದವರಲ್ಲವೇ? \q2 ನನ್ನ ದೇವರೇ, ನನ್ನ ಪರಿಶುದ್ಧರೇ, ನೀನು ಎಂದಿಗೂ ಸಾಯುವುದಿಲ್ಲ. \q1 ಯೆಹೋವ ದೇವರೇ, ನ್ಯಾಯತೀರ್ಪನ್ನು ಜಾರಿಗೊಳಿಸಲು ಅವರನ್ನು ನೇಮಿಸಿದ್ದೀರಿ. \q2 ನನ್ನ ಬಂಡೆಯೇ, ನೀವು ಶಿಕ್ಷಿಸಲು ಅವರನ್ನು ನೇಮಕ ಮಾಡಿದ್ದೀರಿ. \q1 \v 13 ನೀನು ಕೆಟ್ಟದ್ದನ್ನು ನೋಡದ ಹಾಗೆ ಶುದ್ಧ ಕಣ್ಣುಗಳುಳ್ಳವರು. \q2 ನೀವು ಅನ್ಯಾಯವನ್ನು ದೃಷ್ಟಿಸಲಾರಿರಿ, \q1 ವಂಚಿಸುವವರನ್ನು ಏಕೆ ಸಹಿಸಿಕೊಳ್ಳುತ್ತೀರಿ? \q2 ದುಷ್ಟನು ತನಗಿಂತ ನೀತಿವಂತನನ್ನು \q2 ನುಂಗಿ ಬಿಡುವ ವೇಳೆಯಲ್ಲಿ ಏಕೆ ಸುಮ್ಮನಿರುತ್ತೀರಿ? \q1 \v 14 ಮನುಷ್ಯರನ್ನು ಸಮುದ್ರದ ಮೀನುಗಳಂತೆಯೂ, \q2 ಆಳುವವನಿಲ್ಲದ ಕ್ರಿಮಿಗಳಂತೆಯೂ ಮಾಡಿರುತ್ತೀರಿ. \q1 \v 15 ದುಷ್ಟ ವೈರಿಯು ಅವುಗಳನ್ನು ಗಾಳದಿಂದ ಎತ್ತಿ, \q2 ತನ್ನ ಬಲೆಯಿಂದ ಅವುಗಳನ್ನು ಹಿಡಿದು, \q1 ತನ್ನ ಜಾಲದಿಂದ ಅವುಗಳನ್ನು ಕೂಡಿಸಿಡುತ್ತಾನೆ. \q2 ಅವನು ಹಿಗ್ಗುತ್ತಾನೆ, ಸಂತೋಷಪಡುತ್ತಾನೆ. \q1 \v 16 ಆದ್ದರಿಂದ ತಮ್ಮ ಬಲೆಗೆ ಬಲಿ ಅರ್ಪಿಸಿ, \q2 ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ. \q1 ಏಕೆಂದರೆ ಇವುಗಳಿಂದ ಅವರ ಭೋಜನ ಪುಷ್ಟಿಯಾಗಿಯೂ, \q2 ಅವರ ಆಹಾರ ರುಚಿಯುಳ್ಳದ್ದಾಗಿಯೂ ಇದೆ. \q1 \v 17 ಹೀಗಿರುವುದರಿಂದ ನಿರಂತರವಾಗಿ ಅವರು ತಮ್ಮ ಬಲೆಯನ್ನು ಬರಿದುಮಾಡಿ, \q2 ಕರುಣೆ ಇಲ್ಲದೆ ಜನಾಂಗಗಳನ್ನು ನಾಶ ಮಾಡುತ್ತಾ ಅವನು ಹೋಗಬೇಕೇ? \b \c 2 \q1 \v 1 ನಾನು ಕಾವಲುಗಾರನಾಗಿ ನಿಲ್ಲುವೆನು. \q2 ಕಾವಲು ಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. \q1 ಯೆಹೋವ ದೇವರು ನನಗೆ ಏನು ಹೇಳುವರೋ, \q2 ಯಾವ ಉತ್ತರ ಕೊಡುವರೋ, ಎಂದು ಎದುರು ನೋಡುವೆನು. \s1 ಯೆಹೋವ ದೇವರ ಉತ್ತರ \p \v 2 ಆಗ ಯೆಹೋವ ದೇವರು ನನಗೆ ಉತ್ತರಕೊಟ್ಟರು. \q1 ಪ್ರಕಟನೆಯನ್ನು ಬರೆ. \q2 ಅದನ್ನು ಓದುವವನು ಶೀಘ್ರವಾಗಿ ಓದುವಂತೆ, \q2 ಅದನ್ನು ಹಲಗೆಗಳ ಮೇಲೆ ಕೆತ್ತು. \q1 \v 3 ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. \q2 ಅದು ಅಂತ್ಯದ ಬಗ್ಗೆ ಮಾತಾಡುವುದು. \q2 ಅದು ಸುಳ್ಳಾಗದು. ಅದು ತಡವಾದರೂ, \q1 ಅದಕ್ಕೆ ಕಾದುಕೊಂಡಿರು. \q2 ಏಕೆಂದರೆ ಅದು ತಡಮಾಡದೆ \q2 ನಿಶ್ಚಯವಾಗಿ ಬರುವುದು. \b \b \q1 \v 4 ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ. \q2 ಆದರೆ ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು. \q1 \v 5 ಇದಲ್ಲದೆ ದ್ರಾಕ್ಷಾರಸವು ಮೋಸಕರ. \q2 ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. \q1 ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. \q2 ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; \q1 ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; \q2 ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ. \p \v 6 ಅವರೆಲ್ಲರೂ ಅವನನ್ನು ಅಪಹಾಸ್ಯದ ಮಾತುಗಳಿಂದ ಅವಮಾನ ಮಾಡುವುದಿಲ್ಲವೋ? \q1 ಕದ್ದುಕೊಂಡ ವಸ್ತುಗಳನ್ನು ರಾಶಿಯಾಗಿ ಕೂಡಿಸಿಟ್ಟುಕೊಳ್ಳುವವನಿಗೆ \q2 ಅಕ್ರಮ ಮಾರ್ಗದಿಂದ ಐಶ್ವರ್ಯವಂತನಾಗಿರುವವನಿಗೆ ಕಷ್ಟ. \q2 ಇದೆಷ್ಟರವರೆಗೆ ಮುಂದುವರಿಯಬೇಕು? \q1 \v 7 ನಿನ್ನ ಸಾಲಗಾರರು ಕ್ಷಣಮಾತ್ರದಲ್ಲಿ ಏಳರೋ? \q2 ಅವರು ಎಚ್ಚರಗೊಂಡು ನಿನಗೆ ಬೆದರಿಕೆ ಹಾಕುವರೋ? \q2 ಆಗ ನೀನು ಅವರಿಗೆ ಸುಲಿಗೆಯಾಗುವೆ. \q1 \v 8 ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, \q2 ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. \q1 ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. \q2 ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ. \b \q1 \v 9 ಅನ್ಯಾಯದ ಲಾಭದಿಂದ ತನ್ನ ನಿವಾಸ ಕಟ್ಟಿಕೊಳ್ಳುವವನಿಗೂ, \q2 ತನ್ನ ಗೂಡನ್ನು ಉನ್ನತದಲ್ಲಿಡುವವನಿಗೂ, \q2 ನಾಶದ ಹಿಡಿತದಿಂದ ತಪ್ಪಿಸಿಕೊಳ್ಳಬಯಸುವವನಿಗೂ ಕಷ್ಟ! \q1 \v 10 ನೀನು ಬಹು ಜನಾಂಗಗಳನ್ನು ನಿರ್ಮೂಲ ಮಾಡಿದ್ದು, \q2 ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು. \q2 ನಿನಗೆ ನೀನೇ ಕೆಡುಕು ಮಾಡಿಕೊಂಡಿದ್ದೀ. \q1 \v 11 ಗೋಡೆಯೊಳಗಿಂದ ಕಲ್ಲು ಕೂಗುತ್ತದೆ. \q2 ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ. \b \q1 \v 12 ಊರನ್ನು ನರಹತ್ಯದಿಂದ ಕಟ್ಟಿ, ಪಟ್ಟಣವನ್ನು \q2 ಅನ್ಯಾಯದಿಂದ ಸ್ಥಾಪಿಸುವವನಿಗೆ ಕಷ್ಟ! \q1 \v 13 ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. \q2 ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. \q2 ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ. \q1 \v 14 ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, \q2 ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು. \b \q1 \v 15 ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ, ನಿನ್ನ ನೆರೆಯವರಿಗೆ ಕುಡಿಸಿ, \q2 ಅವರ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, \q2 ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ! \q1 \v 16 ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. \q2 ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. \q1 ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. \q2 ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು. \q1 \v 17 ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. \q2 ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. \q1 ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; \q2 ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ. \b \q1 \v 18 “ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? \q2 ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? \q1 ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. \q2 ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ. \q1 \v 19 ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! \q2 ಅದು ಮಾರ್ಗದರ್ಶನ ನೀಡುವುದೇ? \q1 ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. \q2 ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.” \b \q1 \v 20 ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. \q2 ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ. \c 3 \s1 ಹಬಕ್ಕೂಕನ ಪ್ರಾರ್ಥನೆ \d \v 1 \tl ಶಿಗ್ಯೋನೋತ\tl* ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. \q1 \v 2 ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, \q2 ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. \q1 ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. \q2 ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, \q2 ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ. \b \q1 \v 3 ದೇವರು, ತೇಮಾನಿನಿಂದಲೂ; \q2 ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. \q1 ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. \q2 ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು. \q1 \v 4 ಅವರ ತೇಜಸ್ಸು ಸೂರ್ಯೋದಯದ ಹಾಗಿತ್ತು. \q2 ಕಿರಣಗಳು ಅವರ ಹಸ್ತಗಳಿಂದ ಮಿಂಚಿದವು. \q2 ಅದರಲ್ಲಿ ಅವರ ಬಲ ಅಡಗಿತ್ತು. \q1 \v 5 ಅವರ ಮುಂದೆ ವ್ಯಾಧಿಯು ಹೋಯಿತು. \q2 ವ್ಯಾಧಿಯು ಅವನ ಹೆಜ್ಜೆಗಳನ್ನು ಅನುಸರಿಸಿತು. \q1 \v 6 ಅವರು ನಿಂತುಕೊಂಡು ಭೂಮಿಯನ್ನು ನಡುಗಿಸಿದರು. \q2 ಅವರು ನೋಡಿ ಜನಾಂಗಗಳನ್ನು ನಡುಗುವಂತೆ ಮಾಡಿದರು. \q1 ಪುರಾತನ ಪರ್ವತಗಳು ಸೀಳಿಹೋದವು. \q2 ಹಳೆಯ ಕಾಲದ ಗುಡ್ಡಗಳು ಬಿದ್ದು ಹೋದವು. \q2 ಅವರ ಮಾರ್ಗಗಳು ನಿತ್ಯವಾದವುಗಳೇ. \q1 \v 7 ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು. \q2 ಮಿದ್ಯಾನಿನ ನಿವಾಸಗಳು ವೇದನೆಯಿಂದ ನಡುಗಿದವು. \b \q1 \v 8 ಯೆಹೋವ ದೇವರೇ, ನದಿಗಳ ಮೇಲೆ ರೌದ್ರಗೊಂಡಿರುವಿರೋ? \q2 ಪ್ರವಾಹಗಳ ಮೇಲೆ ನಿಮ್ಮ ಕೋಪವಿತ್ತೋ? \q1 ನೀವು ಕುದುರೆಗಳನ್ನು ಮತ್ತು ರಥಗಳನ್ನು ಮುನ್ನಡೆಸಿದಾಗ \q2 ವಿಜಯಕ್ಕೆ ನೀವು ಸಮುದ್ರದ ಮೇಲೆ ಕೋಪಗೊಂಡಿದ್ದೀರಾ? \q1 \v 9 ನಿನ್ನ ಬಿಲ್ಲನ್ನು ಹೊರ ತೆಗೆದಿ, \q2 ಅನೇಕ ಬಾಣಗಳಿಗಾಗಿ ಕರೆ ಕೊಟ್ಟಿದ್ದಿ, \q1 ಭೂಮಿಯನ್ನು ನದಿಗಳಿಂದ ಸೀಳಿಬಿಡುವೆ. \q2 \v 10 ಬೆಟ್ಟಗಳು ನಿನ್ನನ್ನು ಕಂಡು ನಡುಗಿದವು; \q1 ಜಲಪ್ರವಾಹವು ಹಾದುಹೋಯಿತು; \q2 ಸಾಗರವು ಗರ್ಜಿಸಿ; \q2 ತನ್ನ ತೆರೆಗಳನ್ನು ಮೇಲಕ್ಕೆ ಎತ್ತುತ್ತದೆ. \b \q1 \v 11 ನಿನ್ನ ಹಾರುವ ಬಾಣಗಳ ಬೆಳಗಿಗೂ, \q2 ನಿನ್ನ ಮಿಂಚುವ ಈಟಿಯ ಹೊಳಪಿಗೂ \q2 ಸೂರ್ಯ ಚಂದ್ರರು ಆಕಾಶದಲ್ಲಿ ಸ್ಥಿರವಾಗಿದ್ದಾರೆ. \q1 \v 12 ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ, \q2 ಕೋಪದಿಂದ ಜನಾಂಗಗಳನ್ನು ತುಳಿದು ಹಾಕಿದ್ದೀಯೆ. \q1 \v 13 ನಿನ್ನ ಜನರ ರಕ್ಷಣೆಗೋಸ್ಕರವೂ, \q2 ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. \q1 ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. \q2 ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ. \q1 \v 14 ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, \q2 ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. \q1 ಅವರು ಅಡಗಿಕೊಂಡಿರುವ ಬಡವರನ್ನು \q2 ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ? \q1 \v 15 ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ, \q2 ಮಹಾಜಲಗಳ ಸಮೂಹದಲ್ಲಿಯೂ ನಡೆದು ಹೋದೆ. \b \q1 \v 16 ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; \q2 ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; \q1 ನನ್ನ ಎಲುಬುಗಳು ಕ್ಷಯಗೊಂಡವು; \q2 ನನ್ನ ಕಾಲುಗಳು ನಡುಗಿದವು; \q1 ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ \q2 ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು. \q1 \v 17 ಅಂಜೂರದ ಗಿಡವು ಚಿಗುರದಿದ್ದರೂ, \q2 ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, \q1 ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, \q2 ಹೊಲಗಳು ಆಹಾರ ಕೊಡದಿದ್ದರೂ, \q1 ಕುರಿಹಟ್ಟಿಗಳು ಬರಿದಾಗಿ ಹೋದರೂ, \q2 ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ, \q1 \v 18 ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು. \q2 ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು. \b \q1 \v 19 ಸಾರ್ವಭೌಮ ಯೆಹೋವ ದೇವರು ನನ್ನ ಬಲವು. \q2 ಅವರು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ, \q2 ನನ್ನ, ಉನ್ನತ ಸ್ಥಳಗಳಲ್ಲಿ ನನ್ನನ್ನು ನಡೆಯುವಂತೆ ಮಾಡುತ್ತಾನೆ. \d ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.