\id HEB - Biblica® Open Kannada Contemporary Version \ide UTF-8 \h ಇಬ್ರಿಯರಿಗೆ \toc1 ಇಬ್ರಿಯರಿಗೆ ಬರೆದ ಪತ್ರಿಕೆ \toc2 ಇಬ್ರಿಯರಿಗೆ \toc3 ಇಬ್ರಿ \mt1 ಇಬ್ರಿಯರಿಗೆ \mt2 ಬರೆದ ಪತ್ರಿಕೆ \c 1 \s1 ಕ್ರಿಸ್ತ ಯೇಸುವೇ ದೇವರ ಅಂತಿಮ ಮಾತು \p \v 1 ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು, \v 2 ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು. \v 3 ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ. \v 4 ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ದೇವದೂತರಿಗಿಂತಲೂ ಶ್ರೇಷ್ಠರಾಗಿದ್ದಾರೆ. ಅವರಿಗಿಂತ ಅತಿ ಶ್ರೇಷ್ಠ ಹೆಸರನ್ನು ಬಾಧ್ಯವಾಗಿ ಹೊಂದಿದವರೂ ಆಗಿದ್ದಾರೆ. \s1 ಪುತ್ರ ಆಗಿರುವ ಕ್ರಿಸ್ತ ಯೇಸು ದೇವದೂತರಿಗಿಂತಲೂ ಶ್ರೇಷ್ಠರು \p \v 5 ದೇವರು ತಮ್ಮ ದೂತರೊಳಗೆ ಯಾರಿಗಾದರೂ ಹೀಗೆ ಎಂದಾದರೂ ಹೇಳಿದ್ದುಂಟೋ, \q1 “ನೀನು ನನ್ನ ಪುತ್ರನು; \q2 ಇಂದು ನಾನು ನಿನ್ನ ತಂದೆಯಾಗಿದ್ದೇನೆ!”\f + \fr 1:5 \fr*\ft \+xt ಕೀರ್ತನೆ 2:7\+xt*\ft*\f* \m ಎಂದೂ, \q1 “ನಾನು ಆತನ ತಂದೆಯಾಗಿರುವೆನು; \q2 ಆತನು ನನಗೆ ಮಗನಾಗಿರುವನು!”\f + \fr 1:5 \fr*\ft \+xt 2 ಸಮು 7:14; 1 ಪೂರ್ವ 17:13\+xt*\ft*\f* \m \v 6 ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, \q1 “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!”\f + \fr 1:6 \fr*\ft \+xt ಧರ್ಮೋ 32:43\+xt*\ft*\f* ಎಂದು ಹೇಳಿದ್ದಾರೆ. \m \v 7 ದೂತರ ವಿಷಯದಲ್ಲಿ ದೇವರು ಮಾತನಾಡುವಾಗ, \q1 “ಅವರು ತಮ್ಮ ದೂತರನ್ನು ಆತ್ಮಗಳಾಗಿಯೂ \q2 ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ!”\f + \fr 1:7 \fr*\ft \+xt ಕೀರ್ತನೆ 104:4\+xt*\ft*\f* ಎಂದು ಹೇಳಿದ್ದಾರೆ. \m \v 8 ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: \q1 “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. \q2 ನೀತಿದಂಡವೇ ನಿಮ್ಮ ರಾಜದಂಡವಾಗಿದೆ. \q1 \v 9 ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; \q2 ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ \q2 ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”\f + \fr 1:9 \fr*\ft \+xt ಕೀರ್ತನೆ 45:6,7\+xt*\ft*\f* \m \v 10 ಇದಲ್ಲದೆ ದೇವರು ಹೀಗೆಂದರು: \q1 “ಕರ್ತದೇವರೇ, ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ, \q2 ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ. \q1 \v 11 ಅವು ನಾಶವಾಗುವವು. ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. \q2 ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. \q1 \v 12 ಅವುಗಳನ್ನು ಮೇಲಂಗಿಯಂತೆ ಮಡಿಸುತ್ತಿರಿ, \q2 ಅವು ವಸ್ತ್ರದಂತೆ ಮಾರ್ಪಡುತ್ತವೆ. \q1 ಆದರೆ ನೀವು ಏಕರೀತಿಯಾಗಿದ್ದೀರಿ. \q2 ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ!”\f + \fr 1:12 \fr*\ft \+xt ಕೀರ್ತನೆ 102:25-27\+xt*\ft*\f* \m \v 13 ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, \q1 “ನಾನು ನಿನ್ನ ವಿರೋಧಿಗಳನ್ನು \q2 ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ \q2 ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!”\f + \fr 1:13 \fr*\ft \+xt ಕೀರ್ತನೆ 110:1\+xt*\ft*\f* \m ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ? \p \v 14 ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ? \c 2 \s1 ಲಕ್ಷ್ಯಕೊಡಲು ಎಚ್ಚರಿಕೆ \p \v 1 ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು. \v 2 ಏಕೆಂದರೆ ದೇವದೂತರ ಮೂಲಕ ಹೇಳಲಾದ ವಾಕ್ಯವೇ ದೃಢಪಡಿಸಲಾಯಿತು. ಆದ್ದರಿಂದ ಆ ವಾಕ್ಯವನ್ನು ಮೀರಿದವರಿಗೂ ಅವಿಧೇಯರಾದವರಿಗೂ ನ್ಯಾಯವಾದ ದಂಡನೆ ಕೊಡಲಾಯಿತು. \v 3 ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ. \v 4 ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ. \s1 ಯೇಸುವಿನ ಪೂರ್ಣ ಮಾನವೀಯತೆ \p \v 5 ನಾವು ಸಾರುತ್ತಿರುವ ಮುಂದಣ ಲೋಕವನ್ನು ದೇವರು ತಮ್ಮ ದೂತರಿಗೆ ಅಧೀನ ಮಾಡಲಿಲ್ಲವಲ್ಲ. \v 6 ಆದರೆ ಪವಿತ್ರ ವೇದದ ಒಂದು ಸ್ಥಳದಲ್ಲಿ ಒಬ್ಬನು ಹೀಗೆ ಸಾಕ್ಷಿ ಹೇಳಿದ್ದಾನೆ: \q1 “ಮನುಷ್ಯನನ್ನು ನೀನು ನೆನಸುವುದಕ್ಕೆ ಅವನು ಎಷ್ಟು ಮಾತ್ರದವನು? \q2 ಮನುಷ್ಯಪುತ್ರನನ್ನು ಲಕ್ಷ್ಯವಿಡುವುದಕ್ಕೆ ಅವನು ಎಷ್ಟರವನು? \q1 \v 7 ನೀನು ಆತನನ್ನು ದೇವದೂತರಿಗಿಂತ ಸ್ವಲ್ಪವೇ\f + \fr 2:7 \fr*\ft ಅಥವಾ \ft*\fqa ಸ್ವಲ್ಪ ಕಾಲಕ್ಕೆ\fqa*\f* ಕಡಿಮೆಯಾಗಿ ಮಾಡಿದೆಯಲ್ಲಾ? \q2 ಮಹಿಮೆಯನ್ನೂ ಮಾನವನ್ನೂ ಆತನಿಗೆ ಕಿರೀಟವನ್ನಾಗಿ ಇಟ್ಟೆ. \q2 \v 8 ಎಲ್ಲವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನ ಮಾಡಿದ್ದೀಯಲ್ಲವೇ?”\f + \fr 2:8 \fr*\ft \+xt ಕೀರ್ತನೆ 8:4,5,6\+xt*\ft*\f* \m ಹೀಗೆ ದೇವರು ಎಲ್ಲವನ್ನೂ ಆತನಿಗೆ ಅಧೀನ ಮಾಡಿದರೆಂಬುದರಲ್ಲಿ ಆತನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ ಎಂಬುದು ಸ್ವಷ್ಟವಾಗುತ್ತದೆ. ಆದರೆ ಈಗ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಇನ್ನೂ ಕಾಣುವದಿಲ್ಲ. \v 9 ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು. \p \v 10 ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು. \v 11 ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ, \v 12 ಹೇಳಿದ್ದು, \q1 “ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು. \q2 ಸಭಾ ಮಧ್ಯದಲ್ಲಿ ನಿಮಗೆ ಸ್ತುತಿ ಪದಗಳನ್ನು ಹಾಡುವೆನು.”\f + \fr 2:12 \fr*\ft \+xt ಕೀರ್ತನೆ 22:22\+xt*\ft*\f* \m \v 13 ಎಂದೂ ಪುನಃ, \q1 “ನಾನು ದೇವರ ಮೇಲೆ ಭರವಸೆ ಇಡುವೆನು.”\f + \fr 2:13 \fr*\ft \+xt ಯೆಶಾಯ 8:17\+xt*\ft*\f* \m ಎಂದೂ ಪುನಃ, \q1 “ಇಗೋ ನಾನೂ, ದೇವರು ನನಗೆ ದಯಪಾಲಿಸಿರುವ ಮಕ್ಕಳೂ ನನಗಿದ್ದಾರೆ.”\f + \fr 2:13 \fr*\ft \+xt ಯೆಶಾಯ 8:18\+xt*\ft*\f* \m ಎಂದು ಹೇಳಿದ್ದಾರೆ. \p \v 14 ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ \v 15 ಮರಣ ಭಯದಿಂದ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರ ಮಾನವತ್ವದಲ್ಲಿ ಪಾಲುಗಾರರಾದರು. \v 16 ಯೇಸು ನಿಜವಾಗಿಯೂ ದೂತರಿಗಾಗಿ ಹಾಗೆ ಮಾಡದೆ ಅಬ್ರಹಾಮನ ಸಂತತಿಯವರಿಗಾಗಿ ಹಾಗೆ ಮಾಡಿದರು. \v 17 ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು. \v 18 ಆದ್ದರಿಂದ ಯೇಸು ತಾವೇ ಶೋಧನೆಗೊಳಗಾಗಿ ಬಾಧೆಯನ್ನು ಅನುಭವಿಸಿರುವುದರಿಂದ, ಶೋಧನೆಗೆ ಒಳಗಾಗುವವರಿಗೆ ಸಹಾಯ ಮಾಡುವುದಕ್ಕೆ ಶಕ್ತರಾಗಿದ್ದಾರೆ. \c 3 \s1 ಮೋಶೆಗಿಂತ ಯೇಸು ಶ್ರೇಷ್ಠರು \p \v 1 ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ. \v 2 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸು ತಮ್ಮನ್ನು ನೇಮಿಸಿದವರಿಗೆ ನಂಬಿಗಸ್ತರಾಗಿದ್ದಾರೆ. \v 3 ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ, ಮೋಶೆಗಿಂತ ಯೇಸು ಹೆಚ್ಚಾದ ಮಹಿಮೆಗೆ ಯೋಗ್ಯರೆಂದು ಎಣಿಸಿಕೊಂಡಿದ್ದಾರೆ. \v 4 ಏಕೆಂದರೆ ಪ್ರತಿಯೊಂದು ಮನೆಯೂ ಯಾರೋ ಒಬ್ಬರಿಂದ ಕಟ್ಟಲಾಗುತ್ತದೆ. ಆದರೆ ಸಮಸ್ತವನ್ನು ಕಟ್ಟಿದವರು ದೇವರೇ. \v 5 “ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.”\f + \fr 3:5 \fr*\ft \+xt ಅರಣ್ಯ 12:7\+xt*\ft*\f* ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು. \v 6 ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ. \s1 ಅವಿಶ್ವಾಸದ ವಿರುದ್ಧ ಎಚ್ಚರಿಕೆ \p \v 7 ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, \q1 “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, \q2 \v 8 ಅರಣ್ಯದಲ್ಲಿದ್ದಾಗ ನನ್ನನ್ನು ಪರೀಕ್ಷಿಸಿದ \q1 ದಿನದಲ್ಲಿ ಕೋಪಕ್ಕೆ ಈಡುಮಾಡಿದಂತೆ, \q2 ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ. \q1 \v 9 ನಿಮ್ಮ ಪಿತೃಗಳು ನನ್ನನ್ನು ಕೆಣಕಿ ಪರೀಕ್ಷಿಸಿದರು, \q2 ನಲವತ್ತು ವರ್ಷ ನನ್ನ ಕಾರ್ಯಗಳನ್ನು ನೋಡಿದರು. \q1 \v 10 ಆದ್ದರಿಂದ ನಾನು ಆ ಸಂತತಿಯವರ ಮೇಲೆ ಕೋಪಿಸಿಕೊಂಡು, \q2 ‘ಅವರು ಯಾವಾಗಲೂ ತಮ್ಮ ಹೃದಯದಲ್ಲಿ ತಪ್ಪಿಹೋಗುತ್ತಾರೆ, \q2 ಅವರು ನನ್ನ ಮಾರ್ಗಗಳನ್ನು ತಿಳಿದುಕೊಳ್ಳಲಿಲ್ಲ.’ \q1 \v 11 ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ!’ \q2 ಎಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು!”\f + \fr 3:11 \fr*\ft \+xt ಕೀರ್ತನೆ 95:7-11\+xt*\ft*\f* \p \v 12 ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ. \v 13 ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. \v 14 ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ! \v 15 ಈಗಲೇ ಹೇಳಿದಂತೆ: \q1 “ನೀವು ಈ ಹೊತ್ತು ದೇವರ ಸ್ವರವನ್ನು ಕೇಳಿದರೆ, \q2 ತಿರುಗಿಬಿದ್ದಾಗ ನಡೆದಂತೆ \q2 ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”\f + \fr 3:15 \fr*\ft \+xt ಕೀರ್ತನೆ 95:7,8\+xt*\ft*\f* \p \v 16 “ದೇವರು ನುಡಿದದ್ದನ್ನು ಕೇಳಿ ಕೋಪಗೊಂಡು ವಿರೋಧಿಸಿದವರು ಯಾರು? ಆದರೂ ಮೋಶೆಯ ಮೂಲಕ ಈಜಿಪ್ಟಿನಿಂದ ಹೊರಟು ಬಂದವರೆಲ್ಲರೂ ಹಾಗೆ ಮಾಡಲಿಲ್ಲವಲ್ಲಾ? \v 17 ನಲವತ್ತು ವರ್ಷ ದೇವರು ಯಾರ ಮೇಲೆ ಕೋಪಗೊಂಡರು? ಪಾಪಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! \v 18 ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲ!” ಎಂದು ಯಾರನ್ನು ಕುರಿತು ಅವರು ಪ್ರಮಾಣ ಮಾಡಿದರು, ಅವಿಧೇಯರಾದವರ ಕುರಿತಲ್ಲವೇ? \v 19 ಅವರು ಸೇರಲಾರದೆ ಹೋದದ್ದು ಅವರ ಅವಿಶ್ವಾಸದಿಂದಲೇ ಎಂದು ಕಾಣುತ್ತೇವೆ. \c 4 \s1 ದೇವಜನರಿಗೆ ಸಬ್ಬತ್ ಒಂದು ವಿಶ್ರಾಂತಿ ದಿನ \p \v 1 ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ. \v 2 ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ. \v 3 ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, \q1 “ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ \q2 ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,”\f + \fr 4:3 \fr*\ft \+xt ಕೀರ್ತನೆ 95:11\+xt*\ft*\f* \m ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ. \v 4 ಪವಿತ್ರ ವೇದದ ಯಾವುದೋ ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು, “ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,”\f + \fr 4:4 \fr*\ft \+xt ಆದಿ 2:2\+xt*\ft*\f* ಎಂತಲೂ, \v 5 ಮೇಲಿನ ವಾಕ್ಯಕ್ಕೆ ಸಂಬಂಧಿಸಿ, “ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,” ಎಂದೂ ದೇವರು ಇನ್ನೊಂದು ಕಡೆ ಹೇಳಿದ್ದಾರೆ. \p \v 6 ಆದ್ದರಿಂದ ಯಾರಿಗೆ ಮೊದಲು ಸುವಾರ್ತೆಯು ಸಾರಲಾಯಿತೋ ಅವರು ಅವಿಧೇಯತೆಯ ನಿಮಿತ್ತ ಆ ವಿಶ್ರಾಂತಿಯಲ್ಲಿ ಸೇರದೆಹೋದರು. ಆದರೂ ಕೆಲವರು ಆ ವಿಶ್ರಾಂತಿಯಲ್ಲಿ ಪ್ರವೇಶಿಸುವ ಅವಕಾಶ ಇನ್ನೂ ಇರುವುದರಿಂದ ಅವರು ಸೇರುವರು. \v 7 ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: \q1 “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, \q2 ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”\f + \fr 4:7 \fr*\ft \+xt ಕೀರ್ತನೆ 95:7,8\+xt*\ft*\f* \m \v 8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ದೇವರು ಬೇರೊಂದು ದಿವಸವನ್ನು ಕುರಿತು ಹೇಳುತ್ತಿರಲಿಲ್ಲವಲ್ಲ. \v 9 ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ. \v 10 ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆದಂತೆ, ದೇವರ ವಿಶ್ರಾಂತಿಯನ್ನು ಪಡೆದವರು ಸಹ ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ವಿಶ್ರಾಂತಿ ಪಡೆಯುತ್ತಾರೆ. \v 11 ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ. \p \v 12 ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ. \v 13 ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ. \s1 ಯೇಸುವೇ ಶ್ರೇಷ್ಠ ಮಹಾಯಾಜಕರು \p \v 14 ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ. \v 15 ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ. \v 16 ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ. \c 5 \p \v 1 ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ. \v 2 ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು. \v 3 ಆ ಬಲಹೀನತೆಯ ಕಾರಣದಿಂದ ಆತನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಬೇಕಾದವನಾಗಿದ್ದಾನೆ. \v 4 ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು. \p \v 5 ಅದೇ ರೀತಿಯಾಗಿ ಕ್ರಿಸ್ತ ಯೇಸು ಮಹಾಯಾಜಕರಾಗುವ ಮಹಿಮೆಯನ್ನು ತಮ್ಮ ಮೇಲೆ ತಾವೇ ತೆಗೆದುಕೊಳ್ಳಲಿಲ್ಲ. ಆದರೆ ದೇವರು, \q1 “ನೀನು ನನ್ನ ಪುತ್ರನು, \q2 ಇಂದು ನಾನು ನಿನ್ನ ತಂದೆಯಾಗಿದ್ದೇನೆ!”\f + \fr 5:5 \fr*\ft \+xt ಕೀರ್ತನೆ 2:7\+xt*\ft*\f* ಎಂದು ಹೇಳಿದರು. \m \v 6 ದೇವರು ಇನ್ನೊಂದು ಸ್ಥಳದಲ್ಲಿ: \q1 “ನೀನು ಸದಾಕಾಲವೂ \q2 ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!”\f + \fr 5:6 \fr*\ft \+xt ಕೀರ್ತನೆ 110:4\+xt*\ft*\f* \m ಎಂದು ಹೇಳುತ್ತಾರೆ. \p \v 7 ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು. \v 8 ಕ್ರಿಸ್ತ ಯೇಸು ದೇವರ ಪುತ್ರರಾಗಿದ್ದರೂ ತಾವು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡರು. \v 9 ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು. \v 10 ಯೇಸು ದೇವರಿಂದ ನೇಮಕಗೊಂಡು, ಮೆಲ್ಕಿಜೆದೇಕನ ಕ್ರಮದ ಪ್ರಕಾರ ಮಹಾಯಾಜಕರಾದರು. \s1 ಬಿದ್ದು ಹೋಗುವುದರ ಬಗ್ಗೆ ಎಚ್ಚರಿಕೆ \p \v 11 ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ನೀವು ಗ್ರಹಿಸ ಬಯಸದಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ. \v 12 ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ. \v 13 ಹಾಲು ಕುಡಿಯುವವರು ಕೂಸಿನಂತಿದ್ದು ನೀತಿ ಬೋಧನೆಯಲ್ಲಿ ಅನುಭವ ಇಲ್ಲದವರಾಗಿದ್ದಾರೆ. \v 14 ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ. \c 6 \p \v 1 ಆದ್ದರಿಂದ ಕ್ರಿಸ್ತ ಯೇಸುವಿನ ವಿಷಯವಾದ ಪ್ರಾಥಮಿಕ ಉಪದೇಶಗಳನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ\f + \fr 6:1 \fr*\ft ಅಥವಾ \ft*\fqa ಉಪಯೊಗವಿಲ್ಲದ ಆಚರಣೆ\fqa*\f* ದೇವರ ಕಡೆಗೆ ತಿರುಗಿಕೊಳ್ಳುವುದೂ ದೇವರಲ್ಲಿ ನಂಬಿಕೆಯಿಡುವುದೂ \v 2 ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ. \v 3 ದೇವರು ಅನುಮತಿಸಿದರೆ ನಾವು ಇದನ್ನು ಮಾಡೋಣ. \p \v 4 ಒಂದು ಸಾರಿ ಬೆಳಕನ್ನು ಪಡೆದು, ಪರಲೋಕದ ವರವನ್ನು ರುಚಿ ನೋಡಿ, ಪವಿತ್ರಾತ್ಮ ದೇವರ ಪಾಲನ್ನು ಹೊಂದಿ, \v 5 ದೇವರ ವಾಕ್ಯದ ಒಳ್ಳೆತನವನ್ನೂ ಬರುವ ಲೋಕದ ಶಕ್ತಿಯನ್ನೂ ರುಚಿ ನೋಡಿದವರು \v 6 ಬಿದ್ದುಹೋದರೆ, ಅವರನ್ನು ತಿರುಗಿ ಪಶ್ಚಾತ್ತಾಪಕ್ಕೆ ನಡೆಸುವುದು ಅಸಾಧ್ಯ. ಏಕೆಂದರೆ ಅವರು ತಾವಾಗಿಯೇ ದೇವರ ಪುತ್ರ ಆಗಿರುವವರನ್ನು ಪುನಃ ಶಿಲುಬೆಗೆ ಹಾಕುವವರೂ ಅವರನ್ನು ಬಹಿರಂಗವಾಗಿ ಅವಮಾನ ಪಡಿಸುವವರೂ ಆಗಿರುತ್ತಾರೆ. \v 7 ಭೂಮಿಯು ತನ್ನ ಮೇಲೆ ಆಗಾಗ್ಗೆ ಬೀಳುವ ಮಳೆಯನ್ನು ಹೀರಿಕೊಂಡು ಅದು ತನ್ನ ಒಡೆಯನಿಗೆ ಯೋಗ್ಯವಾದ ಬೆಳೆಯನ್ನು ಕೊಡುವುದಾದರೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ. \v 8 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ನಿಷ್ಪ್ರಯೋಜಕವಾದದ್ದಾಗಿ ಶಾಪಕ್ಕೆ ಗುರಿಯಾಗಿ, ಕೊನೆಗದು ಬೆಂಕಿಗೆ ತುತ್ತಾಗುತ್ತದೆ. \p \v 9 ಪ್ರಿಯರೇ, ನಾವು ಈ ರೀತಿಯಾಗಿ ಮಾತನಾಡಿದರೂ ನಿಮ್ಮ ವಿಷಯವಾಗಿಯೂ ನೀವು ಉತ್ತಮವಾದವುಗಳನ್ನೂ ರಕ್ಷಣೆಯ ಕಾರ್ಯಗಳನ್ನೂ ಹೊಂದಿದ್ದೀರಿ ಎಂಬ ನಿಶ್ಚಯ ನಮಗಿದೆ. \v 10 ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ. \v 11 ಅಂತ್ಯದವರೆಗೆ ನೀವು ನಿಮ್ಮ ನಿರೀಕ್ಷೆಯ ಪೂರ್ಣ ನಿಶ್ಚಯವನ್ನು ಗ್ರಹಿಸುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ. \v 12 ನೀವು ಸೋಮಾರಿಗಳಾಗಿರಬಾರದು. ವಿಶ್ವಾಸದಿಂದಲೂ ತಾಳ್ಮೆಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಿರಬೇಕು. \s1 ದೇವರ ವಾಗ್ದಾನದ ನಿಶ್ಚಯ \p \v 13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮಗಿಂತಲೂ ಹೆಚ್ಚು ದೊಡ್ಡವರಾರೂ ಇಲ್ಲದ್ದರಿಂದ ತಮ್ಮ ಮೇಲೆ ಆಣೆಯಿಟ್ಟು, \v 14 “ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು, ನಿನ್ನ ಸಂತಾನವನ್ನು ಹೆಚ್ಚಿಸೇ ಹೆಚ್ಚಿಸುವೆನು,”\f + \fr 6:14 \fr*\ft \+xt ಆದಿ 22:17\+xt*\ft*\f* ಎಂದು ಹೇಳಿದರಷ್ಟೆ. \v 15 ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಪಡೆದುಕೊಂಡನು. \p \v 16 ಮನುಷ್ಯರು ನಿಜವಾಗಿಯೂ ದೊಡ್ಡವರ ಮೇಲೆ ಆಣೆ ಇಡುತ್ತಾರಷ್ಟೆ. ಆಣೆಯನ್ನು ದೃಢಪಡಿಸುವುದು ಪ್ರತಿಯೊಂದು ವಿವಾದಕ್ಕೂ ಅಂತ್ಯವಾಗಿರುವುದು. \v 17 ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು. \v 18 ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು. \v 19 ಈ ನಿರೀಕ್ಷೆಯು ನಮ್ಮ ಆತ್ಮಕ್ಕೆ ನಿಶ್ಚಯವಾದದ್ದೂ ಸ್ಥಿರವಾದದ್ದೂ ಆಗಿರುವ ಲಂಗರದ ಹಾಗಿದೆ. ಅದು ಅತಿ ಪರಿಶುದ್ಧಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದೂ ಆಗಿದೆ. \v 20 ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ. \c 7 \s1 ಯಾಜಕ ಮೆಲ್ಕಿಜೆದೇಕ \p \v 1 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ರಾಜರನ್ನು ಸೋಲಿಸಿ, ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಸಂಧಿಸಿ ಅವನನ್ನು ಆಶೀರ್ವದಿಸಿದನು. \v 2 ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, “ನೀತಿರಾಜನು” ಎಂದೂ ತರುವಾಯ “ಸಾಲೇಮಿನ ರಾಜ,” ಅಂದರೆ, “ಸಮಾಧಾನದ ಅರಸನು” ಎಂದರ್ಥ. \v 3 ಈ ಮೆಲ್ಕಿಜೆದೇಕನಿಗೆ ತಂದೆಯೂ, ತಾಯಿಯೂ, ವಂಶಾವಳಿಯೂ ಇಲ್ಲ. ಅವನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಅವನು ದೇವರ ಪುತ್ರ ಆಗಿರುವವರಿಗೆ ಹೋಲಿಕೆಯಾಗಿರುವ ನಿತ್ಯ ಯಾಜಕನಾಗಿ ಉಳಿಯುತ್ತಾನೆ. \p \v 4 ಮೆಲ್ಕಿಜೆದೇಕನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ಮೂಲ ಪಿತೃವಾದ ಅಬ್ರಹಾಮನು ಗೆದ್ದು ತಂದವುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಇವನಿಗೇ ಕೊಟ್ಟನಲ್ಲಾ. \v 5 ನಿಜವಾಗಿಯೂ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಮೋಶೆಯ ನಿಯಮದಲ್ಲಿ ಅಪ್ಪಣೆಯಿದೆ. \v 6 ಆದರೆ ವಂಶಾವಳಿಯಲ್ಲಿ ಸೇರದೆ ಇರುವ ಮೆಲ್ಕಿಜೆದೇಕನು ಅಬ್ರಹಾಮನಿಂದ ದಶಮಭಾಗವನ್ನು ತೆಗೆದುಕೊಂಡದ್ದಲ್ಲದೆ, ವಾಗ್ದಾನಗಳನ್ನು ಪಡೆದಿದ್ದ ಅಬ್ರಹಾಮನನ್ನು ಆಶೀರ್ವದಿಸಿದನು. \v 7 ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ದೊಡ್ಡವನು ಎಂಬುದರಲ್ಲಿ ವಿವಾದವಿಲ್ಲ. \v 8 ಇಲ್ಲಿ ದಶಮಭಾಗಗಳನ್ನು ತೆಗೆದುಕೊಳ್ಳುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು. ಆದರೆ ಅಲ್ಲಿ ತೆಗೆದುಕೊಳ್ಳುವ ಮೆಲ್ಕಿಜೆದೇಕನು ಜೀವಿಸುತ್ತಿದ್ದಾನೆಂದು ಸಾಕ್ಷಿ ಹೊಂದಿರುವವನು. \v 9 ಇದು ಮಾತ್ರವಲ್ಲದೆ ದಶಮಭಾಗಗಳನ್ನು ತೆಗೆದುಕೊಳ್ಳುವ ಲೇವಿಯೂ ಅಬ್ರಹಾಮನ ಮೂಲಕ ದಶಮಭಾಗಗಳನ್ನು ಕೊಟ್ಟ ಹಾಗಾಯಿತು. \v 10 ಹೇಗೆಂದರೆ, ಮೆಲ್ಕಿಜೆದೇಕನು ಅಬ್ರಹಾಮನನ್ನು ಸಂಧಿಸಿದಾಗ, ಲೇವಿಯು ತನ್ನ ಪಿತೃ ಆದ ಅಬ್ರಹಾಮನ ದೇಹದಲ್ಲಿ ಇದ್ದನು ಎಂದು ಪರಿಗಣಿಸಬಹುದು. \s1 ಯೇಸು ಮೆಲ್ಕಿಜೆದೇಕನಂಥ ಯಾಜಕ \p \v 11 ಲೇವಿಯರ ಯಾಜಕತ್ವದ ಆಧಾರದ ಮೇಲೆ ಜನರು ನಿಯಮವನ್ನು ಪಡೆದಿದ್ದರು. ಈ ಯಾಜಕತ್ವದ ಮೂಲಕವೇ ಪರಿಪೂರ್ಣತೆಯು ಉಂಟಾಗಿದ್ದರೆ, ಆರೋನನ ಕ್ರಮಾನುಸಾರವಾಗಿರದೆ ಮೆಲ್ಕಿಜೆದೇಕನ ಕ್ರಮದ ಪ್ರಕಾರ ಬೇರೊಬ್ಬ ಯಾಜಕನು ಎದ್ದೇಳುವ ಅವಶ್ಯವೇನಿತ್ತು? \v 12 ಯಾಜಕತ್ವವು ಬದಲಾದಾಗ ನಿಯಮವು ಸಹ ಬದಲಾಗುವುದು ಅಗತ್ಯ. \v 13 ಇವು ಯಾರ ವಿಷಯದಲ್ಲಿ ಹೇಳಿದೆಯೋ ಆ ವ್ಯಕ್ತಿ ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಎಂದೂ ಯಾರೂ ಬಲಿಪೀಠದ ಬಳಿ ಸೇವೆ ಮಾಡಿದವರಲ್ಲ. \v 14 ಹೀಗೆ ನಮ್ಮ ಕರ್ತ ಯೇಸು ಯೂದಾ ಗೋತ್ರಕ್ಕೆ ಸೇರಿದವರೆಂದು ತಿಳಿದ ಸಂಗತಿಯಾಗಿದೆ. ಈ ಗೋತ್ರವನ್ನು ಸಂಬಂಧಿಸಿ ಮೋಶೆಯು ಯಾಜಕರ ವಿಷಯವಾಗಿ ಏನನ್ನೂ ಹೇಳಲಿಲ್ಲ. \v 15 ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಏಳುತ್ತಾನೆಂಬುದು ಇನ್ನೂ ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ. \v 16 ಕ್ರಿಸ್ತ ಯೇಸು ಯಾಜಕರಾದುದು ಅಳಿವಿಲ್ಲದ ಜೀವದ ಶಕ್ತಿಗೆ ಅನುಸಾರವಾಗಿದೆಯೇ ಹೊರತು ನಿಯಮಾನುಸಾರವಾದ ದೈಹಿಕ ಹುಟ್ಟಿನಿಂದಲ್ಲ. \v 17 ಕರ್ತ ಯೇಸುವಿನ ವಿಷಯದಲ್ಲಿ, \q1 “ನೀನು ಸದಾಕಾಲವೂ, \q2 ಮೆಲ್ಕಿಜೆದೇಕನ ಕ್ರಮದ ಯಾಜಕನಾಗಿದ್ದೀ,”\f + \fr 7:17 \fr*\ft \+xt ಕೀರ್ತನೆ 110:4\+xt*\ft*\f* \m ಎಂಬ ಸಾಕ್ಷಿಯಿದೆ. \p \v 18 ಏಕೆಂದರೆ ಮೊದಲಿದ್ದ ಆಜ್ಞೆಯು ನಿರ್ಬಲವೂ ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು. \v 19 ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ. \p \v 20 ಇದಂತೂ ಆಣೆಯಿಲ್ಲದೆ ಆಗಿರುವಂಥದ್ದಲ್ಲ! ಲೇವಿಯರು ಆಣೆಯಿಲ್ಲದೆಯೇ ಯಾಜಕರಾದರು, \v 21 ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: \q1 “ ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. \q2 ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. \q2 ‘ನೀನು ಸದಾಕಾಲವೂ ಯಾಜಕನಾಗಿದ್ದೀ.’ ”\f + \fr 7:21 \fr*\ft \+xt ಕೀರ್ತನೆ 110:4\+xt*\ft*\f* \m \v 22 ಇದರಿಂದಲೇ ಯೇಸು ಎಷ್ಟೋ ಉತ್ತಮವಾದ ಒಡಂಬಡಿಕೆಗೆ ಹೊಣೆಗಾರರಾದರು. \p \v 23 ಒಂದು ಕಡೆ ಆ ಯಾಜಕರು ಮುಂದುವರಿಯದಂತೆ ಮರಣವು ಅಡ್ಡಿಯಾದದ್ದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು. \v 24 ಇನ್ನೊಂದು ಕಡೆ ಯೇಸುವಾದರೋ ಸದಾಕಾಲ ಇರುವುದರಿಂದ ನಿರಂತರವಾಗಿ ತಮ್ಮ ಯಾಜಕತ್ವವನ್ನು ಹೊಂದಿದವರಾಗಿದ್ದಾರೆ. \v 25 ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ. \p \v 26 ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ. \v 27 ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು. \v 28 ಏಕೆಂದರೆ ಮೋಶೆಯ ನಿಯಮವು ಬಲಹೀನರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಿಸುತ್ತದೆ. ಆದರೆ ಮೋಶೆಯ ನಿಯಮದ ತರುವಾಯ ದೇವರ ಆಣೆಯೊಡನೆ ಬಂದ ವಾಕ್ಯವು ನಿತ್ಯವಾಗಿ ಪರಿಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ. \c 8 \s1 ಹೊಸ ಒಡಂಬಡಿಕೆಯ ಮಹಾಯಾಜಕ \p \v 1 ನಾವು ಈಗ ಹೇಳುವ ವಿಷಯಗಳ ಮುಖ್ಯಾಂಶ ಇದು: ಪರಲೋಕದೊಳಗೆ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿರುವಂಥ ಮಹಾಯಾಜಕ ಒಬ್ಬರು ನಮಗಿದ್ದಾರೆ. \v 2 ಕ್ರಿಸ್ತ ಯೇಸು ಆಗಿರುವ ಇವರು ಪವಿತ್ರ ಸ್ಥಾನದಲ್ಲಿ ಅಂದರೆ, ಮನುಷ್ಯರಿಂದಲ್ಲ ದೇವರೇ ನಿರ್ಮಿಸಿದ ಪವಿತ್ರ ಸ್ಥಾನದ ನಿಜ ಗುಡಾರದಲ್ಲಿ ಸೇವೆಮಾಡುವವರಾಗಿದ್ದಾರೆ. \p \v 3 ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಯೇಸುವಿಗೆ ಸಹ ಏನಾದರೂ ಇರುವುದು ಅವಶ್ಯವಾಗಿದೆ. \v 4 ಯೇಸು ಭೂಮಿಯ ಮೇಲೆ ಇರುವುದಾದರೆ ಯಾಜಕರೇ ಆಗುತ್ತಿರಲಿಲ್ಲ. ಏಕೆಂದರೆ ಮೋಶೆಯ ನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ. \v 5 ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,”\f + \fr 8:5 \fr*\ft \+xt ವಿಮೋ 25:40\+xt*\ft*\f* ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ? \v 6 ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ. \p \v 7 ಆ ಮೊದಲನೆಯ ಒಡಂಬಡಿಕೆಯು ತಪ್ಪಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ. \v 8 ಆದರೆ ದೇವರು ಜನರಲ್ಲಿ ತಪ್ಪನ್ನು ಕಂಡುಹಿಡಿದು ಹೀಗೆಂದರು, \q1 “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ \q2 ಯೂದ ವಂಶದವರೊಂದಿಗೂ \q1 ಒಂದು ಹೊಸ ಒಡಂಬಡಿಕೆಯನ್ನು \q2 ಮಾಡಿಕೊಳ್ಳುವ ದಿನಗಳು ಬರುವವು. \q1 \v 9 ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, \q2 ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು \q2 ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. \q1 ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. \q2 ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, \q2 ಎಂದು ಕರ್ತದೇವರು ಹೇಳುತ್ತಾರೆ. \q1 \v 10 ಆ ದಿನಗಳ ತರುವಾಯ \q2 ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: \q1 ನಾನು ನನ್ನ ನಿಯಮಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. \q2 ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. \q1 ನಾನು ಅವರಿಗೆ ದೇವರಾಗಿರುವೆನು. \q2 ಅವರು ನನಗೆ ಪ್ರಜೆಯಾಗಿರುವರು. \q1 \v 11 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ, \q2 ತನ್ನ ಸಹೋದರನಿಗೂ, ‘ಕರ್ತದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. \q1 ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ \q2 ಎಲ್ಲರೂ ನನ್ನನ್ನು ಅರಿತುಕೊಳ್ಳುವರು. \q1 \v 12 ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು \q2 ಮತ್ತು ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ, \m ಎಂದು ಕರ್ತದೇವರು ನುಡಿಯುತ್ತಾರೆ.”\f + \fr 8:12 \fr*\ft \+xt ಯೆರೆ 31:31-34\+xt*\ft*\f* \p \v 13 ಇಲ್ಲಿ ದೇವರು “ಹೊಸ ಒಡಂಬಡಿಕೆ” ಎಂದು ಹೇಳಿರುವಾಗ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿದ್ದಾರೆ. ಅದು ಹಳೆಯದಾಗುತ್ತಾ ಕ್ಷೀಣವಾಗಿ ಅಳಿದು ಹೋಗಲಿದೆ. \c 9 \s1 ಭೂಲೋಕದ ಗುಡಾರದಲ್ಲಿ ಆರಾಧನೆ \p \v 1 ಮೊದಲನೆಯ ಒಡಂಬಡಿಕೆಯಲ್ಲಿ ದೈವಿಕ ಆರಾಧನೆಯ ಕ್ರಮಗಳಿದ್ದವು. ಮಾತ್ರವಲ್ಲದೆ ಮಾನವ ನಿರ್ಮಿತ ಪವಿತ್ರ ಸ್ಥಳವೂ ಇತ್ತು. \v 2 ಅದರೊಳಗೆ ಒಂದು ಗುಡಾರವು ಕಟ್ಟಲಾಗಿತ್ತು. ಅದರ ಪ್ರಥಮ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು. ಅದು ಪವಿತ್ರ ಸ್ಥಳ ಎಂದು ಕರೆಯಲಾಗಿತ್ತು. \v 3 ಎರಡನೆಯ ತೆರೆಯ ಆಚೆ ಅತಿ ಪವಿತ್ರ ಸ್ಥಳ ಎಂದು ಕರೆಯಲಾದ ಗುಡಾರವಿತ್ತು. \v 4 ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು. \v 5 ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು\f + \fr 9:5 \fr*\ft ಅಥವಾ \ft*\fqa ಕ್ಷಮಾಪಣೆಯ ಮುಚ್ಚಳ\fqa*\f* ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು. \p \v 6 ಇವುಗಳು ಹೀಗೆ ಸಿದ್ಧವಾದ ಬಳಿಕ ಯಾಜಕರು ಯಾವಾಗಲೂ ಹೊರಗಿನ ಗುಡಾರವನ್ನು ಪ್ರವೇಶಿಸಿ ದೈವಿಕ ಆರಾಧನೆಯನ್ನು ನಡೆಸುತ್ತಿದ್ದರು. \v 7 ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು. \v 8 ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ \v 9 ಈ ಗುಡಾರವು ಈ ಕಾಲವನ್ನು ಸೂಚಿಸುವ ಒಂದು ಮಾದರಿಯಾಗಿದೆ. ಆಗ ಆರಾಧಿಸುವವರ ಮನಸ್ಸಾಕ್ಷಿಯನ್ನು ಪರಿಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲಾಗುತ್ತಿದ್ದವು. \v 10 ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು. \s1 ಕ್ರಿಸ್ತ ಯೇಸುವಿನ ರಕ್ತ \p \v 11 ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು. \v 12 ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು. \v 13 ಹೋತ ಹೋರಿಗಳ ರಕ್ತವನ್ನೂ ಅಶುದ್ಧರಾದವರ ಮೇಲೆ ಚಿಮುಕಿಸಲಾಯಿತು. ಯಜ್ಞಪಶುಗಳ ಬೂದಿಯನ್ನೂ ಅವರ ಮೇಲೆ ತೂರಲಾಯಿತು. ಇದು ಅವರ ದೇಹವನ್ನು ಶುದ್ಧೀಕರಿಸಿತು. \v 14 ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ? \p \v 15 ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ. \p \v 16 ಮರಣ ಶಾಸನವು ಎಲ್ಲಿದೆಯೋ ಅಲ್ಲಿ ಅದನ್ನು ಮಾಡಿಕೊಂಡಾತನ ಮರಣ ಅವಶ್ಯ ಎಂಬುದನ್ನು ರುಜುಪಡಿಸಬೇಕು. \v 17 ಮರಣ ಶಾಸನವು ಬರೆದವನು ಜೀವದಿಂದಿರುವವರೆಗೂ ಅದು ಎಂದಿಗೂ ಜಾರಿಗೆ ಬರುವುದಿಲ್ಲ. \v 18 ಆದ್ದರಿಂದ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಪ್ರತಿಷ್ಠಾಪನೆ ಆಗಲಿಲ್ಲ. \v 19 ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು. \v 20 ಹಾಗೆ ಚಿಮುಕಿಸುವಾಗ ಮೋಶೆಯು, “ಇದು ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯ ರಕ್ತ,”\f + \fr 9:20 \fr*\ft \+xt ವಿಮೋ 24:8\+xt*\ft*\f* ಎಂದು ಹೇಳಿದನು. \v 21 ಅದೇ ರೀತಿಯಾಗಿ ಮೋಶೆಯು ಗುಡಾರದ ಮೇಲೆಯೂ ಸೇವೆಯ ಎಲ್ಲಾ ಉಪ ಪಾತ್ರೆಗಳ ಮೇಲೆಯೂ ರಕ್ತವನ್ನು ಚಿಮುಕಿಸಿದನು. \v 22 ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ. \p \v 23 ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತೆ ಇರುವ ವಸ್ತುಗಳನ್ನು ಈ ಯಜ್ಞಗಳಿಂದ ಶುದ್ಧಿಮಾಡುವುದು ಅವಶ್ಯವಾಗಿದೆ. ಹಾಗಾದರೆ ಪರಲೋಕದ ನಿಜ ವಸ್ತುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯಕವಾಗಿವೆ. \v 24 ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು. \v 25 ಇದಲ್ಲದೆ ಮಹಾಯಾಜಕನು ಪ್ರತಿವರ್ಷವೂ ತನ್ನ ಸ್ವಂತದ್ದಾಗಿರದ ರಕ್ತವನ್ನು ತೆಗದುಕೊಂಡು ಅತಿ ಪವಿತ್ರ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಯೇಸು ತಮ್ಮನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಪ್ರವೇಶಿಸಲಿಲ್ಲ. \v 26 ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು. \v 27 ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ. \v 28 ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ. \c 10 \s1 ಕ್ರಿಸ್ತ ಯೇಸುವಿನ ಒಂದೇ ಯಜ್ಞವು ಸದಾಕಾಲಕ್ಕೂ ಸಾರ್ಥಕವಾದದ್ದು \p \v 1 ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು. \v 2 ಒಂದು ವೇಳೆ ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಪಾಪದಿಂದ ಶುದ್ಧೀಕರಣ ಹೊಂದಿದ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ. \v 3 ಆ ಯಜ್ಞಗಳು ಪ್ರತಿವರ್ಷವೂ ಪಾಪಗಳ ಜ್ಞಾಪಕವನ್ನು ಉಂಟುಮಾಡುತ್ತಿತ್ತು. \v 4 ಏಕೆಂದರೆ ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದುಹಾಕುವುದು ಅಸಾಧ್ಯ. \p \v 5 ಆದ್ದರಿಂದ ಕ್ರಿಸ್ತ ಯೇಸು ಭೂಲೋಕದೊಳಗೆ ಬಂದಾಗ, \q1 “ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ, \q2 ಆದರೆ ನನಗೆ ದೇಹವನ್ನು ಸಿದ್ಧಮಾಡಿ ಕೊಟ್ಟಿರುವೆ; \q1 \v 6 ದಹನಬಲಿಗಳಲ್ಲಿಯೂ ಪಾಪಪರಿಹಾರ ಬಲಿಗಳಲ್ಲಿಯೂ \q2 ನೀನು ಸಂತೋಷಪಡುವುದಿಲ್ಲ. \q1 \v 7 ಆಗ ನಾನು ಹೀಗೆಂದೆನು, ‘ಓ, ದೇವರೇ, ಪವಿತ್ರ ವೇದದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವಂತೆ \q2 ನಾನು ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ.’ ”\f + \fr 10:7 \fr*\ft \+xt ಕೀರ್ತನೆ 40:6-8\+xt*\ft*\f* \m \v 8 ಮೋಶೆಯ ನಿಯಮದ ಪ್ರಕಾರವಾಗಿ ಅರ್ಪಿಸಲಾಗುತ್ತಿದ್ದಂತೆಯೇ, “ಯಜ್ಞವೂ ಅರ್ಪಣೆಯೂ ದಹನಬಲಿಗಳೂ ಪಾಪ ಪರಿಹಾರದ ಬಲಿಯೂ ನಿಮಗೆ ಇಷ್ಟವಾಗಿರಲಿಲ್ಲ. ಅವುಗಳಲ್ಲಿ ನಿಮಗೆ ಸಂತೋಷವಿರಲಿಲ್ಲ,” ಎಂದು ಮೊದಲು ಅವರು ಹೇಳಿ, \v 9 ತರುವಾಯ, “ಇಗೋ, ದೇವರೇ, ನಿಮ್ಮ ಚಿತ್ತವನ್ನು ನೆರವೇರಿಸಲು ಬಂದಿದ್ದೇನೆ!” ಎಂದು ಹೇಳಿದ್ದಾರೆ. ಹೀಗೆ ಅವರು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ರದ್ದು ಮಾಡಿದ್ದಾರೆ. \v 10 ಹೀಗೆ ಒಂದೇ ಸಾರಿ ಎಲ್ಲಾ ಕಾಲಕ್ಕೂ ಕ್ರಿಸ್ತ ಯೇಸು ತಮ್ಮ ದೇಹವನ್ನು ಸಮರ್ಪಿಸಿದ್ದರ ಮೂಲಕ ದೇವರ ಚಿತ್ತವನ್ನು ನೆರವೇರಿಸಿ, ನಮ್ಮನ್ನು ಶುದ್ಧರನ್ನಾಗಿ ಮಾಡಿದ್ದಾರೆ. \p \v 11 ಇದಲ್ಲದೆ ಪ್ರತಿ ಯಾಜಕನು ಅನುದಿನವೂ ಸೇವೆಮಾಡುತ್ತಾ ನಿಂತಿರುವನು. ಆದರೆ ಎಂದಿಗೂ ಪಾಪಗಳನ್ನು ತೆಗೆದುಹಾಕಲಾರದಂಥ ಯಜ್ಞಗಳನ್ನು ಪದೇಪದೇ ಅರ್ಪಿಸುತ್ತಿದ್ದನು. \v 12 ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು. \v 13 ಅಂದಿನಿಂದ ತಮ್ಮ ವಿರೋಧಿಗಳನ್ನು ತಮ್ಮ ಪಾದಪೀಠವಾಗಿ ಮಾಡಿಕೊಳ್ಳುವ ತನಕ ಕ್ರಿಸ್ತ ಯೇಸು ಕಾಯುತ್ತಿರುವರು. \v 14 ಏಕೆಂದರೆ ಕ್ರಿಸ್ತ ಯೇಸುವು ಒಂದೇ ಬಲಿ ಅರ್ಪಣೆಯಿಂದ ಪವಿತ್ರವಾಗುವವರನ್ನು ನಿರಂತರ ಪರಿಪೂರ್ಣರನ್ನಾಗಿ ಮಾಡಿದ್ದಾರೆ. \p \v 15 ಪವಿತ್ರಾತ್ಮ ದೇವರು ಸಹ ನಿಮಗೆ ಸಾಕ್ಷಿ ಕೊಡುವವರಾಗಿ, \q1 \v 16 “ಆ ದಿನಗಳ ತರುವಾಯ, \q2 ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: \q1 ನಾನು ನನ್ನ ನಿಯಮಗಳನ್ನು ಅವರ ಹೃದಯಗಳಲ್ಲಿ ಇಡುವೆನು. \q2 ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು, ಎಂದು ಕರ್ತದೇವರು ಹೇಳುತ್ತಾರೆ.”\f + \fr 10:16 \fr*\ft \+xt ಯೆರೆ 31:33\+xt*\ft*\f* \m \v 17 ತರುವಾಯ ಅವರು, \q1 “ನಾನು ಅವರ ಪಾಪಗಳನ್ನೂ ಅಧರ್ಮಗಳನ್ನೂ \q2 ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ!”\f + \fr 10:17 \fr*\ft \+xt ಯೆರೆ 31:34\+xt*\ft*\f* \m ಎಂದು ಹೇಳುತ್ತಾರೆ. \m \v 18 ಆದ್ದರಿಂದ, ಈಗ ಕ್ಷಮಾಪಣೆಯಾದ ಬಳಿಕ ಪಾಪ ಪರಿಹಾರದ ಬಲಿಯ ಅವಶ್ಯಕತೆ ಇಲ್ಲ. \s1 ವಿಶ್ವಾಸದಲ್ಲಿರಲು ಕರೆ \p \v 19 ಆದ್ದರಿಂದ ಪ್ರಿಯರೇ, ಯೇಸುವಿನ ರಕ್ತದಿಂದ ಅವರ ದೇಹವೆಂಬ ಪರದೆಯ ಮೂಲಕ ನಮಗೆ ತೆರೆಯಲಾದ \v 20 ಹೊಸ ಹಾಗೂ ಸಜೀವವಾದ ಮಾರ್ಗವಿರುವುದರಿಂದ ಅತಿಪರಿಶುದ್ಧವಾದ ಸ್ಥಳವನ್ನು ಪ್ರವೇಶಿಸಲು ಭರವಸೆಯಿದೆ. \v 21 ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವುದರಿಂದ \v 22 ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ. \v 23 ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು. \v 24 ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ. \v 25 ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ. \p \v 26 ಏಕೆಂದರೆ, ನಾವು ಸತ್ಯದ ಅರಿವನ್ನು ಹೊಂದಿದ ಮೇಲೆ ಬೇಕೆಂದು ಪಾಪ ಮಾಡುತ್ತಾ ಇದ್ದರೆ, ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. \v 27 ಆದರೆ ಖಂಡಿತವಾಗಿ ಎದುರು ನೋಡತಕ್ಕ ಭಯಂಕರವಾದ ನ್ಯಾಯತೀರ್ಪು ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಇರುವುವು. \v 28 ಮೋಶೆಯ ನಿಯಮವನ್ನು ಅಸಡ್ಡೆ ಮಾಡಿದವನಿಗೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕರುಣೆಯಿಲ್ಲದೆ ಮರಣದಂಡನೆಯಾಗುತ್ತಿತ್ತು. \v 29 ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ. \v 30 ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆನು,”\f + \fr 10:30 \fr*\ft \+xt ಧರ್ಮೋ 32:35\+xt*\ft*\f* ಎಂದು ಹೇಳಿದ ಕರ್ತದೇವರನ್ನು ನಾವು ಬಲ್ಲೆವು. ಇದಲ್ಲದೆ, “ಕರ್ತದೇವರು ತಮ್ಮ ಜನರಿಗೆ ನ್ಯಾಯತೀರಿಸುವರು,”\f + \fr 10:30 \fr*\ft \+xt ಧರ್ಮೋ 32:36; ಕೀರ್ತನೆ 135:14\+xt*\ft*\f* ಎಂದೂ ಹೇಳಲಾಗಿದೆ. \v 31 ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು. \p \v 32 ಆದರೆ ನೀವು ಬೆಳಕನ್ನು ಹೊಂದಿದ ಮೇಲೆ ಬಾಧೆಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪುಮಾಡಿಕೊಳ್ಳಿರಿ. \v 33 ಕೆಲವು ಸಾರಿ ನೀವು ನಿಂದೆಗಳನ್ನೂ ಉಪದ್ರವಗಳನ್ನೂ ಅನುಭವಿಸಿ ಬಹಿರಂಗ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸುವವರ ಭಾಗಿಗಳಾದಿರಿ. \v 34 ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ. \v 35 ಮಹಾ ಪ್ರತಿಫಲ ನಿಮಗಿರುವುದರಿಂದ ನಿಮ್ಮ ಧೈರ್ಯವನ್ನು ಕಳೆದುಕೊಳ್ಳಬೇಡಿರಿ. \p \v 36 ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ: \v 37 ಏಕೆಂದರೆ, \q1 “ಇನ್ನು ಸ್ವಲ್ಪ ಸಮಯದಲ್ಲಿಯೇ, \q2 ಬರಲಿರುವ ಒಬ್ಬರು ಬಂದೇ ಬರುವರು. \q2 ಅವರು ತಡಮಾಡುವುದಿಲ್ಲ.”\f + \fr 10:37 \fr*\ft \+xt ಯೆಶಾಯ 26:20; ಹಬ 2:3\+xt*\ft*\f* \m \v 38 ಆದರೆ, \q1 “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, \q2 ಅವನು ಹಿಂಜರಿದರೆ, \q2 ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”\f + \fr 10:38 \fr*\ft \+xt ಹಬ 2:4\+xt*\ft*\f* \m \v 39 ನಾವಾದರೋ ಹಿಂಜರಿದು ನಾಶವಾಗುವವರಲ್ಲ, ನಂಬುವವರಾಗಿ ಆ ರಕ್ಷಣೆಯನ್ನು ಹೊಂದುವವರಾಗಿದ್ದೇವೆ. \c 11 \s1 ನಂಬಿಕೆಯ ವೀರರು \p \v 1 ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ. \v 2 ಹಿರಿಯರು ನಂಬಿಕೆಯಿಂದಲೇ ಒಳ್ಳೆಯ ಸಾಕ್ಷಿಹೊಂದಿದರು. \p \v 3 ವಿಶ್ವವು ದೇವರ ವಾಕ್ಯದಿಂದ ಉಂಟಾದವೆಂದೂ ಕಾಣುವಂತವುಗಳು ಕಾಣದವುಗಳಿಂದ ಉಂಟಾದವು ಎಂಬುದನ್ನು ನಾವು ನಂಬಿಕೆಯಿಂದ ತಿಳಿದುಕೊಂಡದ್ದರಿಂದ ಗ್ರಹಿಸುತ್ತೇವೆ. \p \v 4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ. \p \v 5 ನಂಬಿಕೆಯಿಂದಲೇ ಹನೋಕನು ಮರಣ ಹೊಂದದೆ, ಒಯ್ಯಲಾದನು. “ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.”\f + \fr 11:5 \fr*\ft \+xt ಆದಿ 5:24\+xt*\ft*\f* ಅವನು ಒಯ್ಯಲಾಗುವುದಕ್ಕಿಂತ ಮುಂಚೆ ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿಹೊಂದಿದನು. \v 6 ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು. \p \v 7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು. \p \v 8 ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು. \v 9 ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ\f + \fr 11:9 \fr*\ft ಸ್ವಂತವಾಗಿರಲು ದೇವರು ಕೊಟ್ಟ ದೇಶ\ft*\f* ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು. \v 10 ಏಕೆಂದರೆ ದೇವರು ಯಾವುದನ್ನು ಕಟ್ಟುವವರೂ ಮಾಡುವವರೂ ಆಗಿದ್ದಾರೋ ಆ ಅಸ್ತಿವಾರಗಳುಳ್ಳ ಪಟ್ಟಣಕ್ಕೋಸ್ಕರ ಅವರು ಎದುರುನೋಡುತ್ತಿದ್ದರು. \v 11 ನಂಬಿಕೆಯಿಂದಲೇ ಸಾರಳು ಸಹ ವಾಗ್ದಾನ ಮಾಡಿದ ದೇವರು ನಂಬಿಗಸ್ತರು ಎಂದೆಣಿಸಿ ತಾನು ಪ್ರಾಯಮೀರಿದವಳಾಗಿದ್ದರೂ ಗರ್ಭವತಿಯಾಗುವುದಕ್ಕೆ ಸಾಮರ್ಥ್ಯ ಹೊಂದಿ, ಒಂದು ಮಗುವನ್ನು ಹೆತ್ತಳು. \v 12 ಆದ್ದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಮರಳಿನಂತೆ ಅಸಂಖ್ಯವಾಗಿಯೂ ಸಂತತಿಯವರು ಹುಟ್ಟಿದರು. \p \v 13 ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು. \v 14 ಇಂಥಾ ಸಂಗತಿಗಳನ್ನು ಹೇಳುವ ಜನರು ತಮ್ಮ ಸ್ವಂತ ದೇಶಕ್ಕಾಗಿ ಎದುರುನೋಡುತ್ತಿದ್ದರು. \v 15 ಒಂದು ವೇಳೆ ತಾವು ಬಿಟ್ಟುಬಂದ ದೇಶವನ್ನು ಕುರಿತು ಅವರು ಯೋಚಿಸುತ್ತಿದ್ದರೆ, ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು. \v 16 ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ. \p \v 17 ಅಬ್ರಹಾಮನು ಪರೀಕ್ಷೆಗೆ ಒಳಗಾದಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು. \v 18 ಅವನ ವಿಷಯದಲ್ಲಿ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,”\f + \fr 11:18 \fr*\ft \+xt ಆದಿ 21:12\+xt*\ft*\f* ಎಂದು ದೇವರು ಅವನಿಗೆ ಹೇಳಿದ್ದರೂ ವಾಗ್ದಾನ ಸ್ವೀಕರಿಸಿದವನು ತನ್ನ ಒಬ್ಬನೇ ಮಗನನ್ನು ಬಲಿಗಾಗಿ ಅರ್ಪಿಸಿದನು. \v 19 ತನ್ನ ದೇವರು ಸತ್ತವರೊಳಗಿಂದ ಎಬ್ಬಿಸಲು ಸಮರ್ಥರು ಎಂದು ಅಬ್ರಹಾಮನು ತಿಳಿದಿದ್ದನು. ಅವನು ಇಸಾಕನನ್ನು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು. \p \v 20 ನಂಬಿಕೆಯಿಂದಲೇ ಇಸಾಕನು ಮುಂದೆ ಬರಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು. \p \v 21 ನಂಬಿಕೆಯಿಂದಲೇ ಯಾಕೋಬನು ಮರಣ ಹೊಂದುವ ಸಮಯದಲ್ಲಿ ಯೋಸೇಫನ ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು. \p \v 22 ನಂಬಿಕೆಯಿಂದಲೇ ಯೋಸೇಫನು ಸಾಯುವಾಗ ಇಸ್ರಾಯೇಲರು ಹೊರಡುವುದನ್ನು ಕುರಿತು ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು. \p \v 23 ನಂಬಿಕೆಯಿಂದಲೇ ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರುವುದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ಅವನನ್ನು ಮೂರು ತಿಂಗಳು ಬಚ್ಚಿಟ್ಟರು. \p \v 24 ಮೋಶೆಯು ದೊಡ್ಡವನಾಗಿ ಬೆಳೆದ ಮೇಲೆ ನಂಬಿಕೆಯಿಂದಲೇ ಫರೋಹನ ಪುತ್ರಿಯ ಮಗನೆಂದು ಕರೆಯಿಸಿಕೊಳ್ಳಲು ನಿರಾಕರಿಸಿದ್ದನು. \v 25 ಮೋಶೆ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟ ಅನುಭವಿಸುವುದನ್ನೇ ಆರಿಸಿಕೊಂಡನು. \v 26 ಈಜಿಪ್ಟಿನ ನಿಕ್ಷೇಪಕ್ಕಿಂತಲೂ ಕ್ರಿಸ್ತ ಯೇಸುವಿಗಾಗಿ ನಿಂದೆಯನ್ನು ಹೊಂದುವುದು ಮಹಾಐಶ್ವರ್ಯವೆಂದೆಣಿಸಿಕೊಂಡನು. ಏಕೆಂದರೆ ಅವನು ತನ್ನ ಬಹುಮಾನಕ್ಕಾಗಿ ಎದುರು ನೋಡಿದನು. \v 27 ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು. \v 28 ಚೊಚ್ಚಲ ಮಕ್ಕಳನ್ನು ಸಂಹರಿಸುವ ದೂತನು ಇಸ್ರಾಯೇಲರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ ಮೋಶೆ ನಂಬಿಕೆಯಿಂದಲೇ ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದನು. \p \v 29 ನಂಬಿಕೆಯಿಂದಲೇ ಇಸ್ರಾಯೇಲರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿ ಮುಳುಗಿ ಹೋದರು. \p \v 30 ಇಸ್ರಾಯೇಲರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ, ಅವು ಬಿದ್ದು ಹೋದದ್ದು ನಂಬಿಕೆಯಿಂದಲೇ. \p \v 31 ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ. \p \v 32 ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು. \v 33 ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು, \v 34 ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು, \v 35 ಸ್ತ್ರೀಯರು ಸತ್ತು ಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಆದರೆ ಬೇರೆ ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಉತ್ತಮ ಪುನರುತ್ಥಾನ ಹೊಂದುವುದಕ್ಕಾಗಿ ತಮಗೆ ಬಿಡುಗಡೆಯನ್ನು ಸ್ವೀಕರಿಸದೆ ಹೋದರು, \v 36 ಇನ್ನೂ ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು ತಿಂದು ಬೇಡಿ ಸೆರೆವಾಸವನ್ನು ಸಹ ಅನುಭವಿಸಿದರು, \v 37 ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ \v 38 ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ. \p \v 39 ಇವರೆಲ್ಲರೂ ತಮ್ಮ ನಂಬಿಕೆಯ ಮೂಲಕ ಒಳ್ಳೆಯ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವಾದದ್ದನ್ನು ಹೊಂದಲಿಲ್ಲ. \v 40 ಏಕೆಂದರೆ ನಮ್ಮೊಂದಿಗೆ ಅವರು ಪರಿಪೂರ್ಣರಾಗಬೇಕೆಂದು ದೇವರು ನಮಗೋಸ್ಕರ ಉತ್ತಮವಾದದ್ದನ್ನು ಸಂಕಲ್ಪಿಸಿದ್ದಾರೆ. \c 12 \p \v 1 ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು, \v 2 ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ. \v 3 ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ. \s1 ದೇವರು ತಮ್ಮ ಪುತ್ರರನ್ನು ಶಿಕ್ಷಿಸುತ್ತಾರೆ \p \v 4 ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ, ಇನ್ನೂ ರಕ್ತವನ್ನು ಸುರಿಸುವಷ್ಟು ಅದನ್ನು ಎದುರಿಸಲಿಲ್ಲ. \v 5 ಒಬ್ಬ ತಂದೆ ಮಕ್ಕಳಾಗಿರುವ ನಿಮಗೆ ಎಚ್ಚರಿಸಲಾದ ಮಾತನ್ನು ನೀವು ಮರೆತಿದ್ದೀರಿ. ಅದು, \q1 “ನನ್ನ ಮಗನೇ, ಕರ್ತದೇವರ ಶಿಕ್ಷೆಯನ್ನು ಹಗುರವಾಗಿ ಎಣಿಸಬೇಡ. \q2 ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. \q1 \v 6 ಏಕೆಂದರೆ, ಕರ್ತದೇವರು ಯಾರನ್ನು ಪ್ರೀತಿಸುತ್ತಾರೋ ಅವರನ್ನು ಶಿಕ್ಷಿಸುತ್ತಾರೆ. \q2 ತಾವು ಸ್ವೀಕರಿಸುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾರೆ!”\f + \fr 12:6 \fr*\ft \+xt ಜ್ಞಾನೋಕ್ತಿ 3:11,12\+xt*\ft*\f* \m ಎಂಬುದಾಗಿದೆ. \p \v 7 ಶಿಸ್ತಿಗಾಗಿ ಕಷ್ಟವನ್ನು ನೀವು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳೆಂದು ನಡೆಸಿಕೊಳ್ಳುತ್ತಾರೆ. ಏಕೆಂದರೆ ತಂದೆಯಿಂದ ಶಿಸ್ತುಹೊಂದದ ಮಕ್ಕಳೆಲ್ಲಿ? \v 8 ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರರಾಗಿರದಿದ್ದರೆ, ನೀವು ಅಕ್ರಮವಾಗಿ ಹುಟ್ಟಿದ ಮಕ್ಕಳೇ ಹೊರತು ನಿಜ ಮಕ್ಕಳಲ್ಲ. \v 9 ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ? \v 10 ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ. \v 11 ಯಾವ ಶಿಕ್ಷೆಯಾದರೂ ಆ ಸಮಯಕ್ಕೆ ಸಂತೋಷಕರವಾಗಿ ತೋಚದೆ, ದುಃಖಕರವಾಗಿ ತೋಚುತ್ತದೆ. ತರುವಾಯ, ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನವುಳ್ಳ ನೀತಿಯ ಫಲವನ್ನು ಕೊಡುತ್ತದೆ. \p \v 12 ಆದ್ದರಿಂದ, ಜೋತು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ಬಲಪಡಿಸಿರಿ. \v 13 “ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿರಿ.”\f + \fr 12:13 \fr*\ft \+xt ಜ್ಞಾನೋಕ್ತಿ 4:26\+xt*\ft*\f* ಹೀಗೆ ಮಾಡಿದರೆ ಕುಂಟ ಕಾಲು ಉಳುಕಿಹೋಗದೆ ವಾಸಿಯಾಗುವುದು. \s1 ದೇವರನ್ನು ತಿರಸ್ಕರಿಸುವುದರ ವಿರುದ್ಧ ಎಚ್ಚರಿಕೆ \p \v 14 ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ. \v 15 ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ \v 16 ಯಾವ ಕಾಮುಕರಾಗಲಿ, ಏಸಾವನಂಥ ಪ್ರಾಪಂಚಿಕರಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆಯಿಂದ ನೋಡಿಕೊಳ್ಳಿರಿ. ಅವನು ಒಂದು ತುತ್ತು ಅನ್ನಕ್ಕಾಗಿ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು. \v 17 ತರುವಾಯ ಅವನು ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಬಯಸಿ, ಕಣ್ಣೀರನ್ನು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲಾದವನೆಂದು ನೀವು ಬಲ್ಲಿರಿ. \s1 ಭಯದ ಪರ್ವತವೂ ಆನಂದದ ಪರ್ವತವೂ \p \v 18 ನೀವು ಮುಟ್ಟಬಹುದಾದ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮಬ್ಬಿಗೂ ಕತ್ತಲೆಗೂ ಬಿರುಗಾಳಿಗೂ \v 19 ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು, ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು. \v 20 ಏಕೆಂದರೆ, “ಯಾವ ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ, ಅದನ್ನು ಕಲ್ಲೆಸೆದು ಕೊಲ್ಲಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕು,”\f + \fr 12:20 \fr*\ft \+xt ವಿಮೋ 19:12,13\+xt*\ft*\f* ಎಂದು ಆಜ್ಞಾಪಿಸಿದ್ದನ್ನು ಅವರು ತಾಳಲಾರದೆ ಹೋದರು. \v 21 ಇದಲ್ಲದೆ ಆ ದೃಶ್ಯವು ಎಷ್ಟೋ ಭಯಂಕರವಾದದ್ದರಿಂದ ಮೋಶೆಯು, “ನಾನು ಭಯದಿಂದಲೂ ನಡುಕದಿಂದಲೂ ತುಂಬಿದವನಾಗಿದ್ದೇನೆ!”\f + \fr 12:21 \fr*\ft \+xt ಧರ್ಮೋ 9:19\+xt*\ft*\f* ಎಂದು ಹೇಳಿದನು. \p \v 22 ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ \v 23 ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ \v 24 ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ. \p \v 25 ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು? \v 26 ಆ ಕಾಲದಲ್ಲಿ ದೇವರ ಧ್ವನಿಯು ಭೂಮಿಯನ್ನು ಕದಲಿಸಿತು. ಈಗಲಾದರೋ, “ಇನ್ನೊಂದು ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ!”\f + \fr 12:26 \fr*\ft \+xt ಹಗ್ಗಾ 2:6\+xt*\ft*\f* ಎಂದು ದೇವರು ವಾಗ್ದಾನಮಾಡಿದ್ದಾರೆ. \v 27 “ಇನ್ನೂ ಒಂದು ಸಾರಿ,” ಎಂಬ ಮಾತು ನಿರ್ಮಿತವಾಗಿರುವ ಕದಲುವ ವಸ್ತುಗಳು ತೆಗೆದುಹಾಕಲಾಗುವುದು ಎಂದೂ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿರುವುದು ಎಂಬುದನ್ನು ಸೂಚಿಸುತ್ತದೆ. \p \v 28 ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ. \v 29 ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”\f + \fr 12:29 \fr*\ft \+xt ಧರ್ಮೋ 4:24\+xt*\ft*\f* \c 13 \s1 ಮುಕ್ತಾಯದ ಪ್ರಬೋಧನೆಗಳು \p \v 1 ಪ್ರಿಯರೇ, ಒಬ್ಬರಿಗೊಬ್ಬರು ಪ್ರೀತಿಯಲ್ಲಿ ಮುಂದುವರೆಯಿರಿ. \v 2 ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ. \v 3 ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ. \p \v 4 ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು. \v 5 ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, \q1 “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, \q2 ಎಂದಿಗೂ ತೊರೆಯುವುದಿಲ್ಲ!”\f + \fr 13:5 \fr*\ft \+xt ಧರ್ಮೋ 31:6\+xt*\ft*\f* \m \v 6 ಆದ್ದರಿಂದ, \q1 “ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು. \q2 ಮನುಷ್ಯನು ನನಗೆ ಏನು ಮಾಡಬಲ್ಲನು?”\f + \fr 13:6 \fr*\ft \+xt ಕೀರ್ತನೆ 118:6,7\+xt*\ft*\f* \m ಎಂದು ನಾವು ಧೈರ್ಯವಾಗಿ ಹೇಳುವೆವು. \p \v 7 ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ. \v 8 ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು. \p \v 9 ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ. \v 10 ನಮಗೊಂದು ಬಲಿಪೀಠ ಉಂಟು. ಅದರ ಪದಾರ್ಥವನ್ನು ತಿನ್ನುವುದಕ್ಕೆ ಗುಡಾರದ ಸೇವೆ ಮಾಡುವವರಿಗೆ ಹಕ್ಕಿಲ್ಲ. \p \v 11 ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಮಹಾ ಪವಿತ್ರ ಸ್ಥಳದೊಳಗೆ ಹೋದ ಮೇಲೆ, ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಟ್ಟು ಬಿಡಲಾಗುತ್ತವಲ್ಲಾ. \v 12 ಅದರಂತೆ ಯೇಸು ಸಹ ತಮ್ಮ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವುದಕ್ಕೋಸ್ಕರ ಊರ ಹೊರಗೆ ಬಾಧೆಪಟ್ಟರು. \v 13 ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ. \v 14 ಏಕೆಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮಗಿಲ್ಲ. ಮುಂದೆ ಬರುವ ಪಟ್ಟಣವನ್ನು ಹುಡುಕುತ್ತಾ ಇದ್ದೇವೆ. \p \v 15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ. \v 16 ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ. \p \v 17 ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ. \p \v 18 ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ. \v 19 ನೀವು ಪ್ರಾರ್ಥನೆ ಮಾಡುವಂತೆ, ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ. ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ಪುನಃ ಬರುವೆನು. \s1 ಅಂತ್ಯಾಶೀರ್ವಾದ ಹಾಗೂ ಅಂತಿಮ ವಂದನೆಗಳು \p \v 20 ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು. \v 21 ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್. \b \b \p \v 22 ಪ್ರಿಯರೇ, ಈ ಪ್ರಬೋಧನೆಗಳನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ. \b \p \v 23 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು. \b \p \v 24 ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. \p ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ. \b \p \v 25 ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!