\id HOS - Biblica® Open Kannada Contemporary Version \ide UTF-8 \h ಹೋಶೇಯ \toc1 ಹೋಶೇಯ \toc2 ಹೋಶೇಯ \toc3 ಹೋಶೇ \mt1 ಹೋಶೇಯ \c 1 \p \v 1 ಯೆಹೂದದ ಅರಸರಾದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗ ಹೋಶೇಯನಿಗೆ ಯೆಹೋವ ದೇವರ ವಾಕ್ಯವು ಬಂದಿತು. \b \s1 ಹೋಶೇಯನ ಹೆಂಡತಿ ಮತ್ತು ಮಕ್ಕಳು \p \v 2 ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು. \v 3 ಆಗ ಅವನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಬ್ಬ ಮಗನನ್ನು ಹೆತ್ತಳು. \p \v 4 ಆಗ ಯೆಹೋವ ದೇವರು ಹೋಶೇಯನಿಗೆ, “ಈ ಮಗುವಿಗೆ ಇಜ್ರೆಯೇಲ್ ಎಂದು ಹೆಸರಿಡು. ಏಕೆಂದರೆ ಶೀಘ್ರದಲ್ಲಿಯೇ ನಾನು ಇಜ್ರೆಯೇಲ್ ಕಣಿವೆಯಲ್ಲಿ ರಕ್ತವನ್ನು ಸುರಿಸಿದ ಯೇಹುವಿನ ಮನೆತನದವರ ಮೇಲೆ ಮುಯ್ಯಿತೀರಿಸಿಕೊಳ್ಳುವೆನು. ಇಸ್ರಾಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು. \v 5 ಆ ದಿನದಲ್ಲಿ, ನಾನು ಇಸ್ರಾಯೇಲಿನ ಬಿಲ್ಲು ಶಕ್ತಿಯನ್ನು ಇಜ್ರೆಯೇಲ್ ಕಣಿವೆಯಲ್ಲಿ ಮುರಿದು ಹಾಕುವೆನು,” ಎಂದು ಹೇಳಿದರು. \p \v 6 ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವನ್ನು ಹೆತ್ತಳು. ಆಗ ಯೆಹೋವ ದೇವರು ಹೋಶೇಯನಿಗೆ, “ಅವಳನ್ನು ‘ಲೋರುಹಾಮಾ\f + \fr 1:6 \fr*\fq ಲೋರುಹಾಮಾ \fq*\ft ಇದರ ಅರ್ಥ \ft*\fqa ಅಪ್ರೀಯ\fqa*\f*’ ಎಂಬ ಹೆಸರಿನಿಂದ ಕರೆ. ಏಕೆಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನದವರಿಗೆ ಪ್ರೀತಿ ತೋರಿಸುವುದೇ ಇಲ್ಲ, ಅವರನ್ನು ಯಾವ ರೀತಿಯೂ ಕ್ಷಮಿಸುವದಿಲ್ಲ. \v 7 ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು. \p \v 8 ಗೋಮೆರಳು ಲೋರುಹಾಮಾಳನ್ನು ಎದೆಹಾಲಿನ ಸೇವನೆಯಿಂದ ಬಿಡಿಸಿದ ಮೇಲೆ ಪುನಃ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. \v 9 ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ\f + \fr 1:9 \fr*\fq ಲೋ ಅಮ್ಮಿ \fq*\ft ಇದರ ಅರ್ಥ \ft*\fqa ನನ್ನ ಜನರಲ್ಲ\fqa*\f* ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು. \p \v 10 “ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು. \v 11 ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು. \c 2 \p \v 1 “ನಿನ್ನ ಸಹೋದರರಿಗೆ, ‘ನನ್ನ ಜನರೇ’ ಎಂದೂ ನಿಮ್ಮ ಸಹೋದರಿಯರಿಗೆ, ‘ನನ್ನ ಪ್ರಿಯರೇ’ ಎಂದೂ ಹೇಳಿರಿ. \s1 ಇಸ್ರಾಯೇಲಿನ ದಂಡನೆ ಹಾಗೂ ಪುನಃಸ್ಥಾಪನೆ \q1 \v 2 “ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ, \q2 ಏಕೆಂದರೆ ಅವಳು ನನ್ನ ಹೆಂಡತಿಯಲ್ಲ, \q2 ಮತ್ತು ನಾನು ಅವಳ ಗಂಡನಲ್ಲ. \q1 ಅವಳು ತನ್ನ ವ್ಯಭಿಚಾರದ ನೋಟವನ್ನು \q2 ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ. \q1 \v 3 ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, \q2 ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. \q1 ಅವಳನ್ನು ಮರುಭೂಮಿಯಂತೆ ಮಾಡಿ, \q2 ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, \q2 ದಾಹದಿಂದ ಅವಳನ್ನು ಕೊಲ್ಲುವೆನು. \q1 \v 4 ನಾನು ಅವಳ ಮಕ್ಕಳಿಗೂ ಸಹ ಪ್ರೀತಿ ತೋರಿಸುವುದಿಲ್ಲ. \q2 ಏಕೆಂದರೆ ಅವರು ವ್ಯಭಿಚಾರದ ಮಕ್ಕಳಾಗಿದ್ದಾರೆ. \q1 \v 5 ಅವರ ತಾಯಿ ವಿಶ್ವಾಸದ್ರೋಹಿ \q2 ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. \q1 ಅವಳು, ‘ನನಗೆ ನನ್ನ ಅನ್ನಪಾನ, \q2 ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, \q1 ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ \q2 ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ. \q1 \v 6 ಆದ್ದರಿಂದ ನಾನು ಅವಳ ಮಾರ್ಗಕ್ಕೆ ಮುಳ್ಳುಗಳ ಬೇಲಿಹಾಕಿ ತಡೆಯುವೆನು. \q2 ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ \q2 ಅವಳ ಮುಂದೆ ಗೋಡೆಯನ್ನು ಕಟ್ಟುವೆನು. \q1 \v 7 ಅವಳು ತನ್ನ ಪ್ರೇಮಿಗಳನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವುದಿಲ್ಲ. \q2 ಹುಡುಕಿದರೂ ಅವರು ಸಿಕ್ಕುವುದಿಲ್ಲ. \q1 ಆಗ ಅವಳು ಹೀಗೆ ಎಂದುಕೊಳ್ಳುವಳು, \q2 ‘ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು. \q2 ಏಕೆಂದರೆ ಆಗ ನನ್ನ ಸ್ಥಿತಿ ಪ್ರಸ್ತುತ ಸ್ಥಿತಿಗಿಂತ ಉತ್ತಮವಾಗಿತ್ತು.’ \q1 \v 8 ಏಕೆಂದರೆ ಅವರು ಬಾಳನಿಗಾಗಿ ಉಪಯೋಗಿಸಿದ \q2 ಧಾನ್ಯ, ದ್ರಾಕ್ಷಾರಸ ಹಾಗೂ ಎಣ್ಣೆಯನ್ನು ನಾನೇ ಅವಳಿಗೆ ಕೊಟ್ಟು, \q1 ಬೆಳ್ಳಿಬಂಗಾರವನ್ನು ನಾನೇ ಧಾರಾಳವಾಗಿ ಹೆಚ್ಚಿಸಿದೆನೆಂದು ಅವಳು ತಿಳಿಯಲಿಲ್ಲ. \b \q1 \v 9 “ಆದ್ದರಿಂದ ನಾನು ತಿರುಗಿಕೊಂಡು, \q2 ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ, \q2 ನನ್ನ ದ್ರಾಕ್ಷಾರಸವನ್ನು ಅದರ ಸುಗ್ಗಿಯ ಸಮಯದಲ್ಲಿಯೂ ತೆಗೆದ ಹಾಗೆ, \q1 ಅವಳ ಬೆತ್ತಲೆತನವನ್ನು ಮುಚ್ಚವುದಕ್ಕಿದ್ದ ನನ್ನ ಉಣ್ಣೆಯನ್ನೂ, \q2 ನನ್ನ ನಾರುಬಟ್ಟೆಯನ್ನೂ ತೆಗೆದುಕೊಳ್ಳುವೆನು. \q1 \v 10 ಈಗ ಅವಳ ತುಚ್ಚತನವನ್ನು, \q2 ಅವಳ ಪ್ರೇಮಿಗಳ ಕಣ್ಣುಗಳ ಮುಂದೆ ಬಯಲು ಪಡಿಸುವೆನು. \q2 ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು. \q1 \v 11 ನಾನು ಅವಳಿಗೆ ಉಲ್ಲಾಸಕರವಾದ ಅವಳ ಹಬ್ಬ, \q2 ಅವಳ ಅಮಾವಾಸ್ಯೆ, ಅವಳ ಸಬ್ಬತ್ ದಿನದ ಆಚರಣೆ, \q2 ಅವಳ ಸಭಾ ಸಮಾರಂಭ ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು. \q1 \v 12 ತನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು, \q2 ಅವಳು ಹೇಳಿದ ಅವಳ ದ್ರಾಕ್ಷಿಬಳ್ಳಿಗಳನ್ನು, \q2 ಅವಳ ಅಂಜೂರದ ಮರಗಳನ್ನು ನಾನು ಹಾಳು ಮಾಡಿ, \q1 ಅವುಗಳನ್ನು ನಾನು ಕಾಡನ್ನಾಗಿ ಮಾಡುವೆನು. \q2 ಕಾಡುಮೃಗಗಳು ಅವುಗಳನ್ನು ನುಂಗುವವು. \q1 \v 13 ತರುವಾಯ ಅವಳು ನನ್ನನ್ನು ಮರೆತು \q2 ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, \q1 ಅವಳ ಪ್ರೇಮಿಗಳ ಹಿಂದೆ ಹೋಗಿ, \q2 ಬಾಳ್ ದೇವತೆಗಳಿಗೆ ಧೂಪ ಸುಟ್ಟ \q2 ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 14 ಆದ್ದರಿಂದ ನಾನು ಅವಳನ್ನು ಮೋಹಿಸಿ, \q2 ಅವಳನ್ನು ಮರುಭೂಮಿಯೊಳಗೆ ಕರೆದುಕೊಂಡು ಬಂದು, \q2 ಅವಳ ಸಂಗಡ ಹಿತಕರವಾಗಿ ಮಾತನಾಡುವೆನು. \q1 \v 15 ಅವಳ ದ್ರಾಕ್ಷಿತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. \q2 ಆಕೋರಿನ\f + \fr 2:15 \fr*\fq ಆಕೋರಿನ \fq*\ft ಅಂದರೆ \ft*\fqa ತೊಂದರೆ\fqa*\f* ಕಣಿವೆಯನ್ನೇ, ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. \q1 ಅಲ್ಲಿ ಅವಳು ತಾನು ಯೌವನದ ದಿವಸಗಳಲ್ಲಿಯೂ, \q2 ಈಜಿಪ್ಟ್ ದೇಶದೊಳಗಿಂದ ಹೊರಟು ಬಂದ \q2 ದಿವಸಗಳಲ್ಲಿಯೂ ಆದ ಹಾಗೆ ಆಡುವಳು. \b \q1 \v 16 ಯೆಹೋವ ದೇವರು ಹೀಗೆನ್ನುತ್ತಾರೆ, “ಆ ದಿವಸದಲ್ಲಿ,” \q2 “ನೀನು ನನ್ನನ್ನು ಇನ್ನು ಮೇಲೆ, ‘ನನ್ನ ಒಡೆಯ’ ಎಂದು ಕರೆಯದೆ, \q2 ‘ನನ್ನ ಪತಿ’ ಎಂದು ಕರೆಯುವೆ. \q1 \v 17 ನಾನು ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯಿಂದ ತೆಗೆದುಹಾಕುವೆನು. \q2 ಇನ್ನು ಮುಂದೆ ಅವರ ಹೆಸರನ್ನು ಕರೆಯಲಾಗುವುದಿಲ್ಲ. \q1 \v 18 ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, \q2 ಆಕಾಶದ ಪಕ್ಷಿಗಳ ಮತ್ತು \q2 ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. \q1 ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ \q2 ದೇಶದೊಳಗಿಂದ ಮುರಿದುಹಾಕಿ, \q2 ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು. \q1 \v 19 ನಿನ್ನನ್ನು ನನಗೆ ಸದಾಕಾಲಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು. \q2 ನೀತಿಯಿಂದಲೂ, ನ್ಯಾಯದಿಂದಲೂ, ಪ್ರೀತಿಯಿಂದಲೂ, ಅನುಕಂಪದಿಂದಲೂ, \q2 ನಿನ್ನನ್ನು ನನಗೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು. \q1 \v 20 ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. \q2 ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ. \b \q1 \v 21 “ಆ ದಿವಸಗಳಲ್ಲಿ, ನಾನು ಕೇಳುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ನಾನು ಆಕಾಶಗಳನ್ನು ಕೇಳುವೆನು. \q2 ಅವು ಭೂಮಿಯನ್ನು ಕೇಳುವುವು. \q1 \v 22 ಭೂಮಿಯು ಧಾನ್ಯವನ್ನೂ, \q2 ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೇಳುವುವು. \q2 ಅವು ಇಜ್ರೆಯೇಲಿಗೆ ಒಲಿಯುವುವು. \q1 \v 23 ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. \q2 ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. \q1 ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, \q2 ‘ನೀವು ನನ್ನ ಜನರು,’ ಎಂದು ಹೇಳುವೆನು. \q2 ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು. \c 3 \s1 ತನ್ನ ಪತ್ನಿಯೊಂದಿಗೆ ಹೋಶೇಯನ ಸಂಧಾನವಾದದ್ದು \p \v 1 ತರುವಾಯ ಯೆಹೋವ ದೇವರು ನನಗೆ, “ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು, ದ್ರಾಕ್ಷಿ ಉಂಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವ ದೇವರು ಪ್ರೀತಿಸುವ ಪ್ರಕಾರ, ನೀನು ಹೋಗಿ ನಿನ್ನ ಹೆಂಡತಿ ವ್ಯಭಿಚಾರಿಣಿಯಾಗಿದ್ದರೂ ಆಕೆಯನ್ನು ಪುನಃ ಪ್ರೀತಿಸು,” ಎಂದು ಹೇಳಿದನು. \p \v 2 ಅಂತೆಯೇ ನಾನು ಅವಳನ್ನು ನನಗಾಗಿ ಹದಿನೈದು ಶೆಕೆಲ್ ಬೆಳ್ಳಿ\f + \fr 3:2 \fr*\ft ಸುಮಾರು 170 ಗ್ರಾಂ\ft*\f* ಮತ್ತು ಸುಮಾರು ಒಂದು ಹೋಮೆರ್ ಹಾಗೂ ಒಂದು ಲೆಥೆಕ\f + \fr 3:2 \fr*\ft ಸುಮಾರು 195 ಕಿಲೋಗ್ರಾಂ\ft*\f* ಜವೆಗೋಧಿಗೂ ಕೊಂಡುಕೊಂಡೆನು. \v 3 ನಾನು ಅವಳಿಗೆ, “ನನ್ನೊಂದಿಗೆ ಬಹಳ ದಿವಸಗಳು ನನಗಾಗಿ ಇರಬೇಕು. ನೀನು ವ್ಯಭಿಚಾರವನ್ನು ಮಾಡಬಾರದು. ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಿನ್ನೊಂದಿಗೆ ಇರುವೆನು,” ಎಂದು ಹೇಳಿದೆನು. \p \v 4 ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು. \v 5 ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು. \c 4 \s1 ಇಸ್ರಾಯೇಲಿನ ವಿರುದ್ಧ ಆರೋಪ \q1 \v 1 ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: \q2 ದೇಶದ ನಿವಾಸಿಗಳಾದ ನಿಮ್ಮ ಮೇಲೆ \q2 ಯೆಹೋವ ದೇವರು ಆಪಾದನೆ ಹೊರಿಸಿದ್ದಾರೆ. \q1 “ಏಕೆಂದರೆ ದೇಶದಲ್ಲಿ ಸತ್ಯವೂ ಇಲ್ಲ, ದಯೆಯೂ ಇಲ್ಲ, \q2 ದೇವರ ತಿಳುವಳಿಕೆಯೂ ಇಲ್ಲ. \q1 \v 2 ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, \q2 ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. \q1 ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. \q2 ದೇಶವೆಲ್ಲಾ ರಕ್ತಮಯವಾಗಿದೆ. \q1 \v 3 ಆದ್ದರಿಂದ ದೇಶವು ದುಃಖಪಡುತ್ತಿದೆ. \q2 ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. \q1 ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, \q2 ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ. \b \q1 \v 4 “ಆದರೂ ಯಾವನಾದರೂ ವಾದಿಸದಿರಲಿ \q2 ಇಲ್ಲವೆ ಬೇರೆಯವರನ್ನು ಖಂಡಿಸದಿರಲಿ. \q1 ಏಕೆಂದರೆ ನಿಮ್ಮ ಜನರೆಲ್ಲರೂ \q2 ಯಾಜಕನೊಂದಿಗೆ ವಾದಿಸುವವರಾಗಿದ್ದಾರೆ. \q1 \v 5 ನೀನು ಹಗಲಿನಲ್ಲಿಯೂ, ರಾತ್ರಿಯಲ್ಲಿಯೂ ಬೀಳುವೆ. \q2 ಪ್ರವಾದಿಗಳು ನಿನ್ನ ಸಂಗಡ ಮುಗ್ಗರಿಸಿಬೀಳುವರು. \q1 ಆದ್ದರಿಂದ ನಾನು ನಿನ್ನ ತಾಯಿಯನ್ನು ನಾಶಮಾಡುವೆನು. \q2 \v 6 ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. \b \q1 “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. \q2 ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. \q1 ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, \q2 ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ. \q1 \v 7 ಯಾಜಕರು ಹೆಚ್ಚಿದ ಹಾಗೆಲ್ಲಾ \q2 ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ. \q2 ಆದ್ದರಿಂದ ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು. \q1 \v 8 ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ. \q2 ಅವರು ದುಷ್ಟತನದ ಮೇಲೆ ಅವರ ಮನಸ್ಸನ್ನು ಇಡುತ್ತಾರೆ. \q1 \v 9 ಯಾಜಕನು ಹೇಗೋ ಹಾಗೆಯೇ ಜನರು ಇರುವರು. \q2 ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, \q2 ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವೆನು. \b \q1 \v 10 “ಏಕೆಂದರೆ ಅವರು ತಿಂದರೂ ಸಾಕಾಗುವುದಿಲ್ಲ. \q2 ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿ ಆಗುವುದಿಲ್ಲ. \q1 ಏಕೆಂದರೆ ಅವರು ಯೆಹೋವ ದೇವರನ್ನೇ ಬಿಟ್ಟುಬಿಟ್ಟಿದ್ದಾರೆ. \q2 \v 11 ಮದ್ಯಪಾನ, ದ್ರಾಕ್ಷಾರಸ \q2 ಇವು ಜನರನ್ನು ಜ್ಞಾನಹೀನರನ್ನಾಗಿ ಮಾಡುತ್ತವೆ. \q1 \v 12 ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. \q2 ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. \q1 ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. \q2 ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ. \q1 \v 13 ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ. \q2 ಗುಡ್ಡಗಳ ಮೇಲೆ ಏಲಾ, ಲಿಬ್ನೆ, \q1 ಏಲಾ ಮರಗಳ ಕೆಳಗೆ ಅವುಗಳ ನೆರಳು \q2 ದಟ್ಟವಾಗಿರುವುದರಿಂದ ಧೂಪವನ್ನು ಸುಡುತ್ತಾರೆ. \q1 ಆದ್ದರಿಂದ ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವರು. \q2 ನಿಮ್ಮ ಸೊಸೆಯಂದಿರು ವ್ಯಭಿಚಾರಿಣಿಗಳಾಗುವರು. \b \q1 \v 14 “ನಿಮ್ಮ ಪುತ್ರಿಯರು \q2 ವ್ಯಭಿಚಾರ ಮಾಡುವಾಗಲೂ, \q1 ನಿಮ್ಮ ಸೊಸೆಯಂದಿರು \q2 ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. \q1 ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ \q2 ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. \q2 ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ. \b \q1 \v 15 “ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, \q2 ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. \b \q1 “ಗಿಲ್ಗಾಲಿಗೆ ಹೋಗದೆ, \q2 ಇಲ್ಲವೆ ಬೇತಾವೆನಿಗೆ ಏರದೇ, \q2 ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ. \q1 \v 16 ಹಠಮಾರಿ ಹಸುವಿನ ಹಾಗೆ \q2 ಇಸ್ರಾಯೇಲು ಹಟಮಾರಿಯಾಗಿದೆ. \q1 ಈಗ ಯೆಹೋವ ದೇವರು ಹುಲ್ಲುಗಾವಲಲ್ಲಿರುವ \q2 ಕುರಿಮರಿಯ ಹಾಗೆ ಅವರನ್ನು ಹೇಗೆ ಮೇಯಿಸುವರು? \q1 \v 17 ಎಫ್ರಾಯೀಮನು ವಿಗ್ರಹಗಳಿಗೆ ಸೇರಿಕೊಂಡಿದ್ದಾನೆ. \q2 ಅವನನ್ನು ಅವನಷ್ಟಕ್ಕೆ ಬಿಟ್ಟುಬಿಡು. \q1 \v 18 ಅವರು ಮಿತಿಮೀರಿ ಕುಡಿಯುತ್ತಾರೆ. \q2 ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ. \q2 ಅವರನ್ನು ಆಳುವವರು ಅವಮಾನ ಕಾರ್ಯಗಳಲ್ಲಿ ಇಷ್ಟಪಡುತ್ತಾರೆ. \q1 \v 19 ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸಿದೆ. \q2 ಅವರು ತಮ್ಮ ಬಲಿಗಳಿಂದ ನಾಚಿಕೆಪಡುವರು. \c 5 \s1 ಇಸ್ರಾಯೇಲರ ವಿರುದ್ಧ ತೀರ್ಪು \q1 \v 1 “ಯಾಜಕರೇ, ಇದನ್ನು ನೀವು ಕೇಳಿರಿ; \q2 ಇಸ್ರಾಯೇಲಿನ ಮನೆತನದವರೇ ಕೇಳಿಸಿಕೊಳ್ಳಿರಿ; \q1 ಅರಸನ ಮನೆಯವರೇ ಕಿವಿಗೊಡಿರಿ. \q2 ನೀವು ಮಿಚ್ಪದಲ್ಲಿ ಉರುಲಾಗಿಯೂ, \q1 ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದ ಕಾರಣ \q2 ನಿಮಗೆ ವಿರುದ್ಧವಾಗಿ ಈ ನ್ಯಾಯತೀರ್ಪು ಬಂದಿದೆ. \q1 \v 2 ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯನ್ನು ಮಾಡುವುದರಲ್ಲಿ ಮಗ್ನರಾಗಿದ್ದರೆ. \q2 ಆದರೂ ನಾನು ಅವರೆಲ್ಲರನ್ನು ಶಿಕ್ಷಿಸುವವನಾಗಿದ್ದೇನೆ. \q1 \v 3 ನಾನು ಎಫ್ರಾಯೀಮನ್ನು ಬಲ್ಲೆನು, \q2 ಇಸ್ರಾಯೇಲು ನನಗೆ ಮರೆಯಾದದ್ದಲ್ಲ. \q1 ಏಕೆಂದರೆ ಎಫ್ರಾಯೀಮೇ, ನೀನು ಈಗಲೇ ವ್ಯಭಿಚಾರ ಮಾಡಲು ತಿರುಗಿಕೊಂಡಿದ್ದೀ. \q2 ಇಸ್ರಾಯೇಲು ಸಹ ಅಪವಿತ್ರವಾಯಿತು. \b \q1 \v 4 “ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳದಂತೆ, \q2 ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. \q1 ವ್ಯಭಿಚಾರದ ಆತ್ಮವು ಅವರ ಹೃದಯದಲ್ಲಿದೆ. \q2 ಅವರು ಯೆಹೋವ ದೇವರನ್ನು ಸ್ವೀಕರಿಸಿಕೊಳ್ಳುವುದಿಲ್ಲ. \q1 \v 5 ಇಸ್ರಾಯೇಲಿನ ಗರ್ವವು ಅವರ ಮುಖದ ಮುಂದೆ ಸಾಕ್ಷಿಕೊಡುತ್ತದೆ. \q2 ಇಸ್ರಾಯೇಲು ಮತ್ತು ಎಫ್ರಾಯೀಮು ತಮ್ಮ ಪಾಪದಲ್ಲಿ ಎಡವಿ ಬೀಳುವವು. \q2 ಯೆಹೂದವು ಸಹ ಅವರೊಂದಿಗೆ ಬೀಳುವುದು. \q1 \v 6 ಅವರು ಯೆಹೋವ ದೇವರನ್ನು \q2 ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. \q1 ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, \q2 ಅವರು ಆತನನ್ನು ಕಾಣುವುದೇ ಇಲ್ಲ. \q1 \v 7 ಅವರು ಯೆಹೋವ ದೇವರಿಗೆ ಅಪನಂಬಿಗಸ್ತರಾಗಿದ್ದಾರೆ. \q2 ಅವರು ವ್ಯಭಿಚಾರದ ಮಕ್ಕಳನ್ನು ಪಡೆದಿದ್ದಾರೆ. \q1 ಅವರು ತಮ್ಮ ಅಮಾವಾಸ್ಯೆ ಹಬ್ಬಗಳನ್ನು ಆಚರಿಸಿದಾಗ, \q2 ಅವರ ಹೊಲಗಳು ನುಂಗಿಬಿಡಲಾಗುವವು. \b \q1 \v 8 “ಗಿಬೆಯದಲ್ಲಿ ತುತೂರಿಯನ್ನೂ \q2 ರಾಮದಲ್ಲಿ ಕೊಂಬನ್ನೂ ಊದಿರಿ. \q1 ಬೆನ್ಯಾಮೀನೇ, ನಿನ್ನ ಹಿಂದೆ ನೋಡು! \q2 ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು. \q1 \v 9 ಎಫ್ರಾಯೀಮು ಗದರಿಸುವ \q2 ದಿವಸದಲ್ಲೇ ಹಾಳಾಗುವುದು. \q1 ಇಸ್ರಾಯೇಲಿನ ಗೋತ್ರಗಳಲ್ಲಿ \q2 ನಾನು ನಿಶ್ಚಯವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ. \q1 \v 10 ಯೆಹೂದದ ನಾಯಕರು \q2 ಮೇರೆಗಳನ್ನು ಸರಿಸುವವರ ಹಾಗೆ ಇದ್ದರು. \q1 ಅವರ ಮೇಲೆ, \q2 ನೀರಿನ ಪ್ರವಾಹದಂತೆ ನನ್ನ ಕೋಪವನ್ನು ಸುರಿಸುವೆನು. \q1 \v 11 ಎಫ್ರಾಯೀಮು, ವಿಗ್ರಹಗಳನ್ನು ಅನುಸರಿಸಲು ಮನಸ್ಸು ಮಾಡಿದ ಕಾರಣ, \q2 ಅವನು ನ್ಯಾಯತೀರ್ಪಿಗೆ ಗುರಿಯಾಗಿ, ಹಿಂಸೆಗೆ ಒಳಗಾದನು. \q1 \v 12 ನಾನು ಎಫ್ರಾಯೀಮಿಗೆ ನುಸಿಯ ಹಾಗೆಯೂ, \q2 ಯೆಹೂದದ ಮನೆತನದವರಿಗೆ ಕೊಳೆಯುವಿಕೆಯ ಹಾಗೆಯೂ ಇರುವೆನು. \b \q1 \v 13 “ಎಫ್ರಾಯೀಮು ತನ್ನ ರೋಗವನ್ನು \q2 ಯೆಹೂದವು ತನ್ನ ಗಾಯವನ್ನು ನೋಡಿದಾಗ, \q1 ಎಫ್ರಾಯೀಮ್ ಅಸ್ಸೀರಿಯಕ್ಕೆ ತಿರುಗಿ, \q2 ಸಹಾಯಕ್ಕಾಗಿ ಮಹಾ ಅರಸನ ಬಳಿಗೆ ಕಳುಹಿಸಿತು. \q1 ಆದರೆ ನಿಮ್ಮನ್ನು ಗುಣಪಡಿಸಲು \q2 ಅವನು ಶಕ್ತನಲ್ಲ. \q2 ನಿಮ್ಮ ಗಾಯವನ್ನು ಗುಣಪಡಿಸಲಾರನು. \q1 \v 14 ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, \q2 ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. \q1 ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. \q2 ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು. \q1 \v 15 ಅಪರಾಧಗಳನ್ನು ಅರಿಕೆಮಾಡಿ, \q2 ನನ್ನ ಮುಖವನ್ನು ಹುಡುಕುವವರೆಗೂ, \q2 ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. \q1 ಅವರ ಕಷ್ಟದಲ್ಲಿ \q2 ಅವರು ನನ್ನನ್ನು ಬೇಗ ಹುಡುಕುವರು.” \c 6 \s1 ಪಶ್ಚಾತ್ತಾಪವಿಲ್ಲದ ಇಸ್ರಾಯೇಲರು \q1 \v 1 ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. \q1 ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, \q2 ಅವರೇ ನಮ್ಮನ್ನು ಸ್ವಸ್ಥ ಮಾಡುವರು. \q1 ಅವರು ಹೊಡೆದಿದ್ದಾನೆ, \q2 ಅವರೇ ನಮ್ಮನ್ನು ಕಟ್ಟುವರು. \q1 \v 2 ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. \q2 ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. \q2 ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು. \q1 \v 3 ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, \q2 ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. \q1 ಅವರ ಆಗಮನವು \q2 ಅರುಣೋದಯದಂತೆ ನಿಶ್ಚಯ. \q1 ಅವರು ಮಳೆಯಂತೆಯೂ ಮುಂಗಾರಿನಂತೆಯೂ, \q2 ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು. \b \q1 \v 4 ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? \q2 ಯೆಹೂದವೇ, ನಿನಗೆ ನಾನು ಏನು ಮಾಡಲಿ? \q1 ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, \q2 ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ. \q1 \v 5 ಆದ್ದರಿಂದ ನಾನು ನಿಮ್ಮ ಜನರನ್ನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು, \q2 ನನ್ನ ಬಾಯಿಮಾತುಗಳಿಂದ ಅವರನ್ನು ಸಂಹರಿಸಿದ್ದೇನೆ. \q2 ನನ್ನ ನ್ಯಾಯತೀರ್ಪುಗಳು ಸೂರ್ಯನ ಹಾಗೆ ಹೊರಟವು. \q1 \v 6 ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. \q2 ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ. \q1 \v 7 ಅವರು ಆದಾಮನಂತೆ ಒಡಂಬಡಿಕೆಯನ್ನು ಮೀರಿದ್ದಾರೆ. \q2 ಅಲ್ಲಿ ಅವರು ನನಗೆ ವಿರುದ್ಧವಾಗಿ ಅಪನಂಬಿಗಸ್ತಿಕೆಯಿಂದ ನಡೆದುಕೊಂಡಿದ್ದಾರೆ. \q1 \v 8 ಗಿಲ್ಯಾದ್ ಕೆಟ್ಟ ಕೆಲಸ ಮಾಡುವವರ ಮತ್ತು \q2 ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ. \q1 \v 9 ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ, \q2 ಯಾಜಕರ ಗುಂಪು ದಾರಿಹೋಕರಿಗಾಗಿ ಹೊಂಚುಹಾಕುತ್ತಾ \q1 ಶೆಕೆಮಿಗೆ ಹೋಗುವವರನ್ನು ದಾರಿಯಲ್ಲಿ ಕೊಲೆಮಾಡುತ್ತಾರೆ. \q2 ಅವರು ನೀಚತನವನ್ನು ಮಾಡುವವರಾಗಿದ್ದಾರೆ. \q1 \v 10 ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರವಾದ ಸಂಗತಿಯನ್ನು ನೋಡಿದೆನು. \q2 ಅಲ್ಲಿ ಎಫ್ರಾಯೀಮಿನ ವ್ಯಭಿಚಾರವು ನಡೆಯುತ್ತದೆ, \q2 ಇಸ್ರಾಯೇಲು ಅಪವಿತ್ರವಾಗಿದೆ. \b \q1 \v 11 “ಯೆಹೂದವೇ, ನಿನಗೂ ಸಹ, \q2 ತಕ್ಕ ಸುಗ್ಗಿಯು ನೇಮಕವಾಗಿದೆ. \b \q1 “ಸೆರೆಯಾದ ನನ್ನ ಜನರಿಗೆ, ಪುನಃಸ್ಥಾಪನೆಯಾಗುವುದು. \c 7 \q2 \v 1 ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ \q1 ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. \q2 ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. \q1 ಅವರು ಸುಳ್ಳನ್ನು ನಡೆಸುತ್ತಾರೆ. \q2 ಕಳ್ಳನು ಒಳಗೆ ಬರುತ್ತಾನೆ ಮತ್ತು \q2 ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ. \q1 \v 2 ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ \q2 ಜ್ಞಾಪಕ ಮಾಡುತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನೆಸಿಕೊಳ್ಳುವುದಿಲ್ಲ. \q1 ಈಗ ಅವರ ಪಾಪಗಳು ಅವರನ್ನು ಸುತ್ತಿಕೊಂಡಿವೆ. \q2 ಅವು ನನ್ನ ಮುಖದ ಮುಂದೆ ಇವೆ. \b \q1 \v 3 “ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ, \q2 ಅವರ ಸುಳ್ಳಿನಿಂದ ರಾಜಕುಮಾರನನ್ನೂ ಸಂತೋಷ ಪಡಿಸುತ್ತಾರೆ. \q1 \v 4 ಅವರೆಲ್ಲರು ವ್ಯಭಿಚಾರಿಗಳು, \q2 ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸುವ ಒಲೆಗೆ ಸಮಾನರಾಗಿದ್ದಾರೆ. \q1 ಅವನು ಹಿಟ್ಟು ನಾದಿದ ಮೇಲೆ, \q2 ಅದು ಹುಳಿಯಾಗುವ ತನಕ ಉರಿಸದೆ ಬಿಟ್ಟಿರುವ ಕೆಂಡಕ್ಕೆ ಸಮಾನರಾಗಿದ್ದಾರೆ. \q1 \v 5 ನಮ್ಮ ಅರಸನ ಹಬ್ಬದ ದಿವಸಗಳಲ್ಲಿ ರಾಜಕುಮಾರರು \q2 ದ್ರಾಕ್ಷಾರಸವನ್ನು ಕುಡಿದು ಮತ್ತರಾಗುತ್ತಾರೆ. \q2 ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ. \q1 \v 6 ಅವರು ಹೊಂಚುಹಾಕಿಕೊಂಡಿದ್ದಾಗ, \q2 ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ. \q1 ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ \q2 ಬೆಳಿಗ್ಗೆ ಅದು ಪ್ರಜ್ವಲಿಸುವ ಬೆಂಕಿಯ ಹಾಗೆ ಉರಿಯುತ್ತದೆ. \q1 \v 7 ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ. \q2 ಅವರು ತಮ್ಮ ನ್ಯಾಯಾಧಿಪತಿಗಳನ್ನು ನುಂಗಿಬಿಡುತ್ತಾರೆ. \q1 ಅವರ ಅರಸರೆಲ್ಲರು ಬಿದ್ದು ಹೋಗಿದ್ದಾರೆ. \q2 ಅವರಲ್ಲಿ ಒಬ್ಬನಾದರೂ ನನ್ನನ್ನು ಕರೆಯುವುದಿಲ್ಲ. \b \q1 \v 8 “ಎಫ್ರಾಯೀಮು ಜನಾಂಗಗಳೊಂದಿಗೆ ತನ್ನನ್ನು ಬೆರೆಸಿಕೊಂಡಿದೆ. \q2 ಎಫ್ರಾಯೀಮು ತಿರುವಿ ಹಾಕದ ರೊಟ್ಟಿಯಾಗಿದ್ದಾನೆ. \q1 \v 9 ವಿದೇಶಿಯರು ಅವನ ಶಕ್ತಿಯನ್ನು ಹೀರಿಬಿಟ್ಟಿದ್ದಾರೆ. \q2 ಅದು ಅವನಿಗೆ ಗೊತ್ತಿಲ್ಲ. \q1 ನರೆಕೂದಲು ಸಹ ಅವನ ಮೇಲೆ ಇದೆ. \q2 ಆದರೂ ಅವನು ತಿಳಿಯದೇ ಇದ್ದಾನೆ. \q1 \v 10 ಇಸ್ರಾಯೇಲಿನ ಗರ್ವವು \q2 ಅವನಿಗೆ ವಿರುದ್ಧವಾಗಿ ಸಾಕ್ಷಿಕೊಡುತ್ತದೆ. \q1 ಆದರೂ ಅವರು ತಮ್ಮ ಯೆಹೋವ ದೇವರ ಕಡೆಗೆ ತಿರುಗದೆ ಇದ್ದಾರೆ. \q2 ಆತನನ್ನು ಹುಡುಕದೇ ಇದ್ದಾರೆ. \b \q1 \v 11 “ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ \q2 ಪಾರಿವಾಳದ ಹಾಗಿದ್ದಾನೆ. \q1 ಈಗ ಅವರು ಈಜಿಪ್ಟನ್ನು ಕರೆಯುತ್ತಾರೆ. \q2 ಈಗ ಅವರು ಅಸ್ಸೀರಿಯದ ಆಶ್ರಯಕ್ಕೆ ಹೋಗುತ್ತಾರೆ. \q1 \v 12 ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು. \q2 ಆಕಾಶದ ಪಕ್ಷಿಗಳ ಹಾಗೆ, ಅವರನ್ನು ಕೆಳಗೆ ಇಳಿಸಿ, \q1 ಅವರು ಒಟ್ಟಿಗೆ ಸೇರುವುದನ್ನು ನಾನು ಕೇಳಿದಾಗ, \q2 ನಾನು ಅವುಗಳನ್ನು ಹಿಡಿಯುತ್ತೇನೆ. \q1 \v 13 ಅವರಿಗೆ ಕಷ್ಟ, \q2 ಏಕೆಂದರೆ ಅವರು ನನ್ನನ್ನು ಬಿಟ್ಟು ಹೋಗಿದ್ದಾರೆ. \q1 ಅವರು ನಾಶವಾಗಲಿ! \q2 ಏಕೆಂದರೆ ಅವರು ನನಗೆ ವಿರುದ್ಧವಾಗಿ ದ್ರೋಹ ಮಾಡಿದ್ದಾರೆ. \q1 ನಾನು ಅವರಿಗೆ ವಿಮೋಚನೆ ಮಾಡಿದ್ದರೂ, \q2 ಅವರು ನನಗೆ ವಿರುದ್ಧವಾಗಿ ಸುಳ್ಳು ಹೇಳಿದ್ದಾರೆ. \q1 \v 14 ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, \q2 ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. \q1 ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ \q2 ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, \q2 ಆದರೆ ಅವರು ನನ್ನಿಂದ ದೂರವಿರುತ್ತಾರೆ. \q1 \v 15 ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ. \q2 ಆದರೂ ಅವರು ನನಗೆ ವಿರುದ್ಧವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ. \q1 \v 16 ಅವರು ಮಹೋನ್ನತನಾದಾತನ ಕಡೆಗೆ ತಿರುಗಿಕೊಳ್ಳುವುದಿಲ್ಲ. \q2 ಅವರು ಮೋಸದ ಬಿಲ್ಲಿನ ಹಾಗೆ ಇದ್ದಾರೆ. \q1 ಅವರ ನಾಯಕರು ನಾಲಿಗೆಯ ಹುಚ್ಚು ಕೂಗಾಟದಿಂದ, \q2 ಖಡ್ಗದಿಂದ ಬೀಳುವರು. \q1 ಇದೇ ಈಜಿಪ್ಟ್ ದೇಶದಲ್ಲಿ \q2 ಅವರಿಗಿರುವ ನಿಂದೆಯಾಗಿದೆ. \c 8 \s1 ಇಸ್ರಾಯೇಲ್ ಸುಂಟರಗಾಳಿಯನ್ನು ಕೊಯ್ಲು ಮಾಡುವುದು \q1 \v 1 “ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ. \q2 ಅವರು ನನ್ನ ಒಡಂಬಡಿಕೆಯನ್ನು ಮೀರಿ, \q1 ನನ್ನ ನ್ಯಾಯ ಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ \q2 ಶತ್ರುಗಳು ಹದ್ದಿನ ಹಾಗೆ ಯೆಹೋವ ದೇವರ ಆಲಯದ ಮೇಲೆ ಬರುವರು. \q1 \v 2 ಇಸ್ರಾಯೇಲಿನವರು, ‘ನನ್ನ ದೇವರೇ, ನಾವು ನಿಮ್ಮನ್ನು ತಿಳಿದಿದ್ದೇವೆ,’ \q2 ಎಂದು ನನಗೆ ಕೂಗುತ್ತಿದ್ದಾರೆ. \q1 \v 3 ಆದರೆ ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. \q2 ಒಬ್ಬ ಶತ್ರುವು ಅವನನ್ನು ಹಿಂದಟ್ಟುವನು. \q1 \v 4 ಅವರು ಅರಸರನ್ನು ನೇಮಿಸಿದ್ದಾರೆ. \q2 ಆದರೆ ನನ್ನಿಂದಲ್ಲ. ಅವರು ನನ್ನ ಅನುಮತಿಯಿಲ್ಲದೆ \q1 ರಾಜಕುಮಾರರನ್ನು ಆಯ್ಕೆ ಮಾಡಿದ್ದಾರೆ. \q2 ಅವರು ತಾವು ನಾಶವಾಗುವಂತೆ \q1 ತಮ್ಮ ಬೆಳ್ಳಿಯಿಂದಲೂ, ತಮ್ಮ ಬಂಗಾರದಿಂದಲೂ \q2 ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. \q1 \v 5 ಸಮಾರ್ಯವೇ, ನಿನ್ನ ಬಸವ ವಿಗ್ರಹವನ್ನು ಬಿಸಾಡಿಬಿಡು. \q2 ನನ್ನ ಕೋಪವು ಅವರ ಮೇಲೆ ಉರಿಯುತ್ತದೆ. \q1 ಅವರು ಎಷ್ಟು ಕಾಲ ಶುದ್ಧತೆಗೆ ಅಸಮರ್ಥರಾಗಿರುತ್ತಾರೆ? \q2 \v 6 ಅವರು ಇಸ್ರಾಯೇಲಿನಿಂದ ಬಂದವರು. \q1 ಕಮ್ಮಾರನು ಈ ಬಸವ ವಿಗ್ರಹವನ್ನು ಮಾಡಿದನು. \q2 ಅದು ದೇವರಲ್ಲ, \q1 ಆದರೆ ಸಮಾರ್ಯದ \q2 ಬಸವನನ್ನು ಚೂರುಚೂರಾಗುವುದು. \b \q1 \v 7 “ಅವರು ಗಾಳಿಯನ್ನು ಬಿತ್ತಿದ್ದಾರೆ. \q2 ಬಿರುಗಾಳಿಯನ್ನು ಕೊಯ್ಯುತ್ತಾರೆ. \q1 ಇಸ್ರಾಯೇಲರ ಪೈರು ತೆನೆಗೆ ಬಾರದು. \q2 ಮೊಳಕೆಯು ಆಹಾರವನ್ನು ಕೊಡುವುದಿಲ್ಲ. \q1 ಒಂದು ವೇಳೆ ಅದು ಕೊಟ್ಟರೂ \q2 ವಿದೇಶಿಯರು ಅದನ್ನು ನುಂಗುತ್ತಾರೆ. \q1 \v 8 ಇಸ್ರಾಯೇಲನ್ನು ಕಬಳಿಸಲಾಗಿದೆ. \q2 ಅವರು ಜನಾಂಗಗಳಲ್ಲಿ \q2 ಬೇಡವಾದ ಪಾತ್ರೆಯ ಹಾಗೆ ಇದ್ದಾರೆ. \q1 \v 9 ಅವರು ಒಂಟಿಯಾದ ಕಾಡುಕತ್ತೆಯ ಹಾಗೆ \q2 ಅಸ್ಸೀರಿಯಗೆ ಹೋಗಿದ್ದಾರೆ. \q2 ಎಫ್ರಾಯೀಮು ಪ್ರೇಮಿಗಳಿಗೆ ತನ್ನನ್ನು ಮಾರಿಕೊಂಡಿದೆ. \q1 \v 10 ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ \q2 ಅವರನ್ನು ನಾನು ಈಗ ಒಟ್ಟುಗೂಡಿಸುವೆನು. \q1 ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು. \b \q1 \v 11 “ಎಫ್ರಾಯೀಮು ಪಾಪ ಪರಿಹಾರಕ್ಕಾಗಿ ಅನೇಕ ಬಲಿಪೀಠಗಳನ್ನು ಕಟ್ಟಿದ್ದರೂ, \q2 ಈ ಬಲಿಪೀಠಗಳೇ ಅವರ ಪಾಪಕ್ಕೆ ಕಾರಣವಾಗಿವೆ. \q1 \v 12 ನಾನು ನನ್ನ ನಿಯಮದ ಅನೇಕ ಸಂಗತಿಗಳನ್ನು ಅವನಿಗೆ ಬರೆದಿದ್ದೇನೆ. \q2 ಆದರೆ ಅವನು ಅವುಗಳನ್ನು ಅನ್ಯವಾದವುಗಳೆಂದು ಪರಿಗಣಿಸಿದನು. \q1 \v 13 ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, \q2 ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. \q2 ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. \q1 ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, \q2 ಅವರ ಪಾಪಗಳನ್ನು ಶಿಕ್ಷಿಸಿದರು. \q2 ಅವರು ಈಜಿಪ್ಟಿಗೆ ಹಿಂದಿರುಗುವರು. \q1 \v 14 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, \q2 ಅರಮನೆಗಳನ್ನು ಕಟ್ಟುತ್ತಾರೆ. \q2 ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. \q1 ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. \q2 ಅದು ಅವರ ಕೋಟೆಗಳನ್ನು ನುಂಗಿಬಿಡುವುದು.” \c 9 \s1 ಇಸ್ರಾಯೇಲರಿಗೆ ದಂಡನೆ \q1 \v 1 ಇಸ್ರಾಯೇಲೇ, ಬೇರೆ ಜನಾಂಗಗಳು ಉಲ್ಲಾಸಿಸುವ ಪ್ರಕಾರ \q2 ಸಂತೋಷ ಪಡಬೇಡ. \q1 ಏಕೆಂದರೆ ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ಮಾಡಿದ್ದೀಯೆ. \q2 ಎಲ್ಲಾ ಧಾನ್ಯದ ಕಣಗಳಲ್ಲಿ \q2 ವ್ಯಭಿಚಾರದ ಕೂಲಿಯನ್ನು ಪ್ರೀತಿ ಮಾಡಿದ್ದೀಯೆ. \q1 \v 2 ಧಾನ್ಯ ಕಣವು ಮತ್ತು ದ್ರಾಕ್ಷಿಯ ತೊಟ್ಟಿಯೂ ಅವರನ್ನು ಪೋಷಿಸುವುದಿಲ್ಲ. \q2 ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವುವು. \q1 \v 3 ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ. \q2 ಆದರೆ ಎಫ್ರಾಯೀಮು ಈಜಿಪ್ಟಿಗೆ ಹಿಂದಿರುಗುವುದು. \q2 ಅವರು ಅಸ್ಸೀರಿಯದಲ್ಲಿ ಅಶುದ್ಧವಾದವುಗಳನ್ನು ತಿನ್ನುವರು. \q1 \v 4 ಅವರು ದ್ರಾಕ್ಷಾರಸವನ್ನು ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಿಲ್ಲ. \q2 ಅವರ ಬಲಿಗಳು ಆತನಿಗೆ ಮೆಚ್ಚಿಗೆಯಾಗಿರುವುದಿಲ್ಲ. \q1 ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿರುವುವು. \q2 ಅದನ್ನು ತಿನ್ನುವವರೆಲ್ಲರೂ ಅಪವಿತ್ರರಾಗುವರು. \q1 ಏಕೆಂದರೆ ಅದು ಅವರ ಹೊಟ್ಟೆ ತುಂಬುವುದಕ್ಕೆ ಮಾತ್ರ ಸರಿಯೇ ಹೊರತು, \q2 ಯೆಹೋವ ದೇವರ ಆಲಯಕ್ಕೆ ಸಲ್ಲುವುದಿಲ್ಲ. \b \q1 \v 5 ಪರಿಶುದ್ಧ ದಿವಸದಲ್ಲಿಯೂ, \q2 ಯೆಹೋವ ದೇವರ ಹಬ್ಬಗಳ ದಿವಸದಲ್ಲಿಯೂ ನೀನು ಏನು ಮಾಡುತ್ತೀ? \q1 \v 6 ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ \q2 ಈಜಿಪ್ಟ್ ಅವರನ್ನು ಕೂಡಿಸುವುದು. \q2 ಮೋಫ್ ಪಟ್ಟಣವು ಅವರನ್ನು ಹೂಳುವುದು. \q1 ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. \q2 ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು. \q1 \v 7 ದಂಡನೆಯ ದಿವಸಗಳು ಬಂದಿವೆ, \q2 ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. \q2 ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. \q1 ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, \q2 ದ್ವೇಷವು ಹೆಚ್ಚಾಗಿರುವುದರಿಂದಲೂ, \q1 “ಪ್ರವಾದಿ ಮೂರ್ಖನೂ, \q2 ಪ್ರೇರಿತ ಮನುಷ್ಯನು ಹುಚ್ಚನೂ,” \q2 ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ. \q1 \v 8 ನನ್ನ ದೇವರೊಂದಿಗೆ ಪ್ರವಾದಿಯು \q2 ಎಫ್ರಾಯೀಮನ ಮೇಲೆ ಕಾವಲುಗಾರನಾಗಿದ್ದಾನೆ, \q1 ಆದರೂ ಅವನ ಮಾರ್ಗಗಳಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ \q2 ಮತ್ತು ಅವನ ದೇವರ ಮನೆಯಲ್ಲಿ ದ್ವೇಷವಿದೆ. \q1 \v 9 ಗಿಬೆಯದ ದಿವಸಗಳಲ್ಲಿ ಆದ ಹಾಗೆ \q2 ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ. \q1 ಆದ್ದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕ ಮಾಡಿಕೊಳ್ಳುವನು. \q2 ಅವರ ಪಾಪಕ್ಕೆ ತನ್ನ ದಂಡನೆಯನ್ನು ವಿಧಿಸುವನು. \b \q1 \v 10 “ನಾನು ಮರುಭೂಮಿಯಲ್ಲಿ ದ್ರಾಕ್ಷಾಫಲದ ಹಾಗೆ \q2 ಇಸ್ರಾಯೇಲನ್ನು ಕಂಡುಕೊಂಡೆನು. \q1 ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ \q2 ನಿಮ್ಮ ಪಿತೃಗಳನ್ನು ನೋಡಿದೆನು. \q1 ಆದರೆ ಅವರು ಬಾಳ್ ಪೆಯೋರನ ಹತ್ತಿರ ಬಂದು \q2 ನಾಚಿಕೆಯ ವಿಗ್ರಹಕ್ಕೆ ತಮ್ಮನ್ನು ಪ್ರತ್ಯೇಕಿಸಿಕೊಂಡರು. \q2 ಅವರು ಪ್ರೀತಿಸಿದ ವಿಗ್ರಹಗಳ ಹಾಗೆ ಅಸಹ್ಯರಾದರು. \q1 \v 11 ಎಫ್ರಾಯೀಮ್ ಘನತೆಯು ಪಕ್ಷಿಯಂತೆ ಹಾರಿಹೋಗುವುದು. \q2 ಜನನವಿಲ್ಲ, ಗರ್ಭಧಾರಣೆ ಇಲ್ಲ, ಪ್ರಸವವಿಲ್ಲ. \q1 \v 12 ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, \q2 ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ \q1 ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. \q2 ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ! \q1 \v 13 ಎಫ್ರಾಯೀಮ್ ಟೈರ್‌ನಂತಹ ಸುಂದರವಾದ ಸ್ಥಳದಲ್ಲಿ \q2 ನೆಡುವುದನ್ನು ನಾನು ಕಂಡೆನು. \q2 ಆದರೆ ಎಫ್ರಾಯೀಮ್ ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.” \b \q1 \v 14 ಯೆಹೋವ ದೇವರೇ, ಅವರಿಗೆ ಕೊಡಿರಿ. \q2 ಅವರಿಗೆ ನೀವು ಏನು ಕೊಡುತ್ತೀರಿ? \q1 ಗರ್ಭ ಸ್ರಾವ, ಗರ್ಭವನ್ನು ಮತ್ತು \q2 ಬತ್ತಿದ ಸ್ತನಗಳನ್ನು ಅವರಿಗೆ ಕೊಡಿರಿ. \b \q1 \v 15 ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. \q2 ಅಲ್ಲಿ ಅವರನ್ನು ಹಗೆ ಮಾಡಿದ್ದೇನೆ. \q1 ಅವರ ಪಾಪ ಕೃತ್ಯಗಳ ನಿಮಿತ್ತ ಅವರನ್ನು \q2 ನನ್ನ ಆಲಯದೊಳಗಿಂದ ಹೊರಡಿಸಿ, \q1 ಅವರನ್ನು ಇನ್ನು ಪ್ರೀತಿಸುವುದೇ ಇಲ್ಲ. \q2 ಅವರ ಅಧಿಕಾರಿಗಳೆಲ್ಲಾ ತಿರುಗಿ ಬೀಳುವವರೇ. \q1 \v 16 ಎಫ್ರಾಯೀಮು ಹೊಡೆತಕ್ಕೆ ಒಳಗಾಗಿದೆ. \q2 ಅವರ ಬೇರು ಒಣಗಿಹೋಗಿದೆ, \q2 ಅವರು ಫಲವನ್ನು ಕೊಡುವುದಿಲ್ಲ, \q1 ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ \q2 ಫಲವನ್ನು ಸಹ ನಾನು ಕೊಲ್ಲುವೆನು. \b \q1 \v 17 ನನ್ನ ದೇವರು ಅವರನ್ನು ತಳ್ಳಿಬಿಡುವರು. \q2 ಏಕೆಂದರೆ ಅವರು ಆತನಿಗೆ ವಿಧೇಯರಾಗಲಿಲ್ಲ. \q2 ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು. \b \c 10 \q1 \v 1 ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, \q2 ಅವನು ತನಗಾಗಿ ಫಲಫಲಿಸುತ್ತಾನೆ. \q1 ತನ್ನ ಬಹಳ ಫಲದ ಪ್ರಕಾರವಾಗಿ \q2 ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. \q1 ತನ್ನ ದೇಶದ ಅಭಿವೃದ್ಧಿಯ \q2 ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ. \q1 \v 2 ಅವರ ಹೃದಯವು ವಂಚಕವಾದದ್ದು. \q2 ಈಗ ಅವರು ಅಪರಾಧಗಳನ್ನು ಹೊರಬೇಕು. \q1 ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, \q2 ಅವರ ವಿಗ್ರಹಗಳನ್ನು ನಾಶಮಾಡುವರು. \b \q1 \v 3 ಆಗ ಅವರು, “ನಮಗೆ ಅರಸನಿಲ್ಲ, \q2 ಏಕೆಂದರೆ ನಾವು ಯೆಹೋವ ದೇವರಲ್ಲಿ ಭಯಭಕ್ತಿ ಇಟ್ಟವರಲ್ಲ. \q1 ಅರಸನು ನಮಗಿದ್ದರೂ \q2 ಏನು ಮಾಡುವನು?” ಎಂದುಕೊಳ್ಳುತ್ತಾರೆ. \q1 \v 4 ಅವರು ಮಾತುಗಳನ್ನಾಡಿ \q2 ಒಡಂಬಡಿಕೆಯನ್ನು ಮಾಡುವುದಕ್ಕೆ \q2 ಸುಳ್ಳು ಪ್ರಮಾಣವನ್ನು ಮಾಡುತ್ತಾರೆ. \q1 ಆದ್ದರಿಂದ ನ್ಯಾಯತೀರ್ಪು \q2 ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ. \q1 \v 5 ಬೇತಾವೆನಿನ ಬಸವ ವಿಗ್ರಹಕ್ಕೆ \q2 ಸಮಾರ್ಯದ ನಿವಾಸಿಗಳು ಭಯಪಡುವರು. \q1 ಅದರಲ್ಲಿ ಆನಂದಿಸಿದ ಜನರು ಅದಕ್ಕೋಸ್ಕರ ಗೋಳಾಡುವರು. \q2 ಅದರ ಯಾಜಕರು ನಡುಗುವರು. \q1 ಏಕೆಂದರೆ ಅದರ ವೈಭವವು \q2 ಅದರಿಂದ ಕುಂದಿಹೋಯಿತು. \q1 \v 6 ಅದು ಸಹ, ಮಹಾರಾಜನಿಗೆ \q2 ಕಾಣಿಕೆಯಾಗಿ ಅಸ್ಸೀರಿಯಕ್ಕೆ ಒಯ್ಯಲಾಗುವುದು. \q1 ಎಫ್ರಾಯೀಮು ನಾಚಿಕೆಯನ್ನು ಹೊಂದುವುದು. \q2 ಇಸ್ರಾಯೇಲ್ ಸಹ ತನ್ನ ಸಲಹೆಯ ಬಗ್ಗೆ ನಾಚಿಕೆಪಡುತ್ತದೆ. \q1 \v 7 ಸಮಾರ್ಯ ಹಾಗು ಅದರ ಅರಸನು \q2 ನೀರಿನ ಮೇಲಿನ ಕಡ್ಡಿಯ ಹಾಗೆ ಅಳಿದು ಹೋಗುವನು. \q1 \v 8 ಇಸ್ರಾಯೇಲಿನ ಪಾಪಕ್ಕೆ \q2 ಆಸ್ಪದವಾದ ಆವೆನಿನ ಉನ್ನತ ಪೂಜಾಸ್ಥಳಗಳು ಹಾಳಾಗಿ ಹೋಗುವುವು. \q1 ಮುಳ್ಳುಗಿಡಗಳೂ, ಕಳೆಗಳೂ \q2 ಬಲಿಪೀಠಗಳ ಮೇಲೆ ಬೆಳೆಯುವುವು. \q1 ಜನರು ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ! \q2 ಗುಡ್ಡಗಳಿಗೆ, ನಮ್ಮನ್ನು ಮುಚ್ಚಿಕೊಳ್ಳಿರಿ!” ಎನ್ನುವರು. \b \q1 \v 9 ಇಸ್ರಾಯೇಲೇ ನೀನು ಗಿಬೆಯದಲ್ಲಿದ್ದ ಕಾಲದಿಂದ \q2 ನನ್ನ ವಿರುದ್ಧ ಪಾಪ ಮಾಡುತ್ತಲೇ ಬಂದಿರುವೆ. \q1 ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. \q2 ಗಿಬೆಯದಲ್ಲಿ ಕೆಟ್ಟದ್ದನ್ನು ಮಾಡುವ ಜನರು ಯುದ್ಧಕ್ಕೆ ತುತ್ತಾಗಲಿದ್ದಾರೆ. \q1 \v 10 ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು. \q2 ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿಯಾಗುವುದು, \q2 ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು. \q1 \v 11 ಎಫ್ರಾಯೀಮು ಒಂದು ತರಬೇತಿ ಪಡೆದ ಕಡಸಾಗಿದೆ. \q2 ಅದು ತುಳಿಯುವುದನ್ನು ಇಷ್ಟಪಡುತ್ತದೆ. \q1 ಆದರೆ ನಾನು ಅದರ ಸುಂದರವಾದ \q2 ಕುತ್ತಿಗೆಯ ಮೇಲೆ ನೊಗವನ್ನು ಹೊರುತ್ತೇನೆ. \q1 ಎಫ್ರಾಯೀಮು ಸವಾರಿ ಮಾಡುವ ಹಾಗೆ ನಾನು ಮಾಡುವೆನು. \q2 ಯೆಹೂದ ಉಳುವನು. \q2 ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು. \q1 \v 12 ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. \q2 ಪ್ರೀತಿಯ ಫಲವನ್ನು ಕೊಯ್ಯಿರಿ. \q1 ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. \q2 ಏಕೆಂದರೆ ಆತನು ಬಂದು \q1 ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ \q2 ಯೆಹೋವ ದೇವರನ್ನು ಹುಡುಕುವ ಸಮಯ ಇದೇ. \q1 \v 13 ಆದರೆ ನೀವು ದುಷ್ಟತ್ವವನ್ನು ಬಿತ್ತಿ, \q2 ಅನ್ಯಾಯವನ್ನು ಕೊಯ್ದಿರಿ, \q1 ವಂಚನೆಯ ಫಲವನ್ನು ತಿಂದಿದ್ದೀರಿ. \q2 ಏಕೆಂದರೆ ನೀವು ನಿಮ್ಮ ಸ್ವಂತ ಬಲದಲ್ಲಿ \q2 ನಿಮ್ಮ ಶೂರರಲ್ಲಿಯೂ ಭರವಸೆಯಿಟ್ಟಿದ್ದೀರಿ. \q1 \v 14 ಆದ್ದರಿಂದ ನಿನ್ನ ಜನರಲ್ಲಿ ಗಲಭೆ ಉಂಟಾಗುವುದು. \q2 ಶಲ್ಮಾನ ರಾಜನು ಬೇತ್ ಅರ್ಬೇಲನ್ನು ಯುದ್ಧದ ದಿನದಲ್ಲಿ ನಾಶಮಾಡಿದ ಪ್ರಕಾರ, \q1 ನಿನ್ನ ಕೋಟೆಗಳೆಲ್ಲಾ ನಾಶವಾಗುವವು. \q2 ತಾಯಿ, ತನ್ನ ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿದ \q1 \v 15 ಹಾಗೆಯೇ, ಬಹಳ ದುಷ್ಟತ್ವದ ನಿಮಿತ್ತ \q2 ಬೇತೇಲಿಗೆ ಸಂಭವಿಸುವುದು. \q1 ಬೆಳಗಿನ ಜಾವದಲ್ಲಿ ಇಸ್ರಾಯೇಲಿನ \q2 ಅರಸನು ಸಂಪೂರ್ಣವಾಗಿ ನಾಶವಾಗುವನು. \c 11 \s1 ಇಸ್ರಾಯೇಲರಿಗೆ ದೇವರ ಪ್ರೀತಿ \q1 \v 1 “ಇಸ್ರಾಯೇಲನು ಹುಡುಗನಾಗಿದ್ದಾಗ, ನಾನು ಅವನನ್ನು ಪ್ರೀತಿ ಮಾಡಿದೆನು \q2 ಮತ್ತು ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು. \q1 \v 2 ನಾನು ಇಸ್ರಾಯೇಲನ್ನು ಹೆಚ್ಚಾಗಿ ಕರೆದ ಹಾಗೆಯೇ, \q2 ನನ್ನಿಂದ ಅವರು ದೂರ ಹೊರಟು ಹೋದರು. \q1 ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು. \q2 ಕೆತ್ತಿದ ವಿಗ್ರಹಗಳಿಗೆ ಧೂಪವನ್ನು ಸುಟ್ಟರು. \q1 \v 3 ನಾನು ಎಫ್ರಾಯೀಮಿನ ತೋಳುಗಳನ್ನು \q2 ಹಿಡಿದು ನಡೆಯುವುದನ್ನು ಕಲಿಸಿದೆನು. \q1 ಆದರೆ ನಾನು ಅವರನ್ನು ಸ್ವಸ್ಥ ಮಾಡಿದ್ದೇನೆಂದು \q2 ಅವರಿಗೆ ತಿಳಿಯಲಿಲ್ಲ. \q1 \v 4 ನಾನು ಅವರನ್ನು ಮನುಷ್ಯನ ಹಗ್ಗಗಳಿಂದಲೂ, \q2 ಪ್ರೀತಿಯ ಬಂಧನಗಳಿಂದಲೂ ಎಳೆದೆನು. \q1 ಅವರಿಗೆ ನಾನು ಚಿಕ್ಕ ಮಗುವನ್ನು \q2 ಕೆನ್ನೆಯವರೆಗೆ ಎತ್ತುವವರಂತೆ ಇದ್ದೆ, \q2 ಮತ್ತು ನಾನು ಅವರಿಗೆ ಬಾಗಿ ತಿನ್ನಿಸುತ್ತಿದ್ದೆ. \b \q1 \v 5 “ಅವರು ಮಾನಸಾಂತರಪಡಲು ನಿರಾಕರಿಸಿದ್ದರಿಂದ, \q2 ಪುನಃ ಈಜಿಪ್ಟಿಗೆ ಹಿಂದಿರುಗುವರು, \q2 ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವರು. \q1 \v 6 ಅವರ ಪಟ್ಟಣಗಳಲ್ಲಿ ಖಡ್ಗವು ಹೊಳೆಯುವುದು. \q2 ಅದು ಅವರ ಸುಳ್ಳು ಪ್ರವಾದಿಗಳನ್ನು ನುಂಗಿಹಾಕುತ್ತದೆ. \q2 ಮತ್ತು ಅವರ ಯೋಜನೆಗಳನ್ನು ಕೊನೆಗೊಳಿಸುತ್ತದೆ. \q1 \v 7 ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. \q2 ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ \q2 ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ. \b \q1 \v 8 “ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? \q2 ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? \q1 ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? \q2 ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? \q1 ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. \q2 ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ. \q1 \v 9 ನನ್ನ ಕೋಪದ ಉರಿಯನ್ನು ನಾನು ತೀರಿಸುವುದಿಲ್ಲ. \q2 ನಾನು ಎಫ್ರಾಯೀಮನ್ನು ತಿರುಗಿ ನಾಶಮಾಡುವುದಿಲ್ಲ. \q1 ಏಕೆಂದರೆ ನಾನು ಮನುಷ್ಯನಲ್ಲ, ದೇವರೇ. \q2 ನಿನ್ನ ಮಧ್ಯದಲ್ಲಿ ಪರಿಶುದ್ಧನಾಗಿದ್ದೇನೆ. \q2 ನಾನು ಅವರ ಪಟ್ಟಣಗಳ ವಿರುದ್ಧ ಬರುವುದಿಲ್ಲ. \q1 \v 10 ಅವರು ಯೆಹೋವ ದೇವರ ಹಿಂದೆ ಹೋಗುವರು. \q2 ಅವರು ಸಿಂಹದ ಹಾಗೆ ಗರ್ಜಿಸುವರು. \q1 ಅವರು ಗರ್ಜಿಸುವಾಗ \q2 ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು. \q1 \v 11 ಈಜಿಪ್ಟಿನಿಂದ ಪಕ್ಷಿಯಗಳಂತೆಯೂ \q2 ಅಸ್ಸೀರಿಯದಿಂದ ಪಾರಿವಾಳಗಳಂತೆಯೂ ಅವರು ಬರುವರು. \q1 ನಾನು ಅವರ ಮನೆಗಳಲ್ಲಿ ಇರುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \s1 ಇಸ್ರಾಯೇಲಿನ ಪಾಪ \q1 \v 12 ಎಫ್ರಾಯೀಮು ಸುಳ್ಳಿನಿಂದ ಮತ್ತು ಇಸ್ರಾಯೇಲಿನ \q2 ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ. \q1 ಯೆಹೂದ ಕೂಡ ಪರಿಶುದ್ಧರೂ ನಂಬಿಗಸ್ತರೂ \q2 ಆದ ದೇವರ ವಿರುದ್ಧ ಅಶಿಸ್ತಿನಿಂದ ಇದೆ. \c 12 \q1 \v 1 ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. \q2 ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. \q1 ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, \q2 ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, \q1 ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ. \q1 \v 2 ಯೆಹೂದರೊಂದಿಗೆ ಯೆಹೋವ ದೇವರು ಆಪಾದನೆ ಮಾಡಿ, \q2 ಯಾಕೋಬನನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ, \q2 ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ, ಅವನಿಗೆ ಪ್ರತಿಫಲವನ್ನು ಕೊಡುವರು. \q1 \v 3 ಗರ್ಭದಲ್ಲಿ ಅವನು ತನ್ನ ಸಹೋದರನನ್ನು ಹಿಮ್ಮಡಿಯಿಂದ ಹಿಡಿದು, \q2 ಮನುಷ್ಯನಾಗಿಯೇ ದೇವರೊಂದಿಗೆ ಹೋರಾಡಿದನು. \q1 \v 4 ಯಾಕೋಬನು ದೇವದೂತನ ಸಂಗಡ ಹೋರಾಡಿ ಜಯಿಸಿದನು. \q2 ಅವನು ಅತ್ತು ಆತನ ಅನುಗ್ರಹಕ್ಕಾಗಿ ವಿಜ್ಞಾಪನೆಯನ್ನು ಸಲ್ಲಿಸಿದನು. \q1 ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು. \q2 ಅಲ್ಲಿ ಅವನು ಆತನೊಂದಿಗೆ ಮಾತನಾಡಿದನು. \q1 \v 5 ಅವರೇ ಸರ್ವಶಕ್ತರಾದ ಯೆಹೋವ ದೇವರು; \q2 ಅವರ ಪ್ರಸಿದ್ಧ ಹೆಸರು ಯೆಹೋವ ದೇವರು ಎಂಬುದೇ. \q1 \v 6 ಆದರೆ ನೀನು ನಿನ್ನ ದೇವರ ಕಡೆಗೆ ತಿರುಗಿಕೋ. \q2 ಪ್ರೀತಿಯನ್ನೂ, ನ್ಯಾಯವನ್ನೂ ಪಾಲಿಸು \q2 ಮತ್ತು ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು. \b \q1 \v 7 ಅವನು ವ್ಯಾಪಾರಿಯಾಗಿದ್ದು, ಅವನ ಕೈಯಲ್ಲಿ ಮೋಸದ ತಕ್ಕಡಿ ಇದೆ. \q2 ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅವನ ದುರಾಶೆ. \q1 \v 8 ಎಫ್ರಾಯೀಮು ಹೆಚ್ಚಳ ಪಡುತ್ತಾ ಹೀಗೆಂದು ಹೇಳುತ್ತದೆ, \q2 “ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು. \q1 ನನ್ನ ಐಶ್ವರ್ಯದಿಂದಾಗಿ ಅವರು ನನ್ನಲ್ಲಿ \q2 ಯಾವ ಅಪರಾಧ ಅಥವಾ ಪಾಪವನ್ನು ಕಾಣುವುದಿಲ್ಲ.” \b \q1 \v 9 ಆದರೆ ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದಲೂ, \q2 ನಿನ್ನ ದೇವರಾಗಿರುವ ಯೆಹೋವ ದೇವರಾದ ನಾನು, \q1 ಜಾತ್ರೆಯ ದಿನಗಳಲ್ಲಿ ನೀವು ವನವಾಸ ಮಾಡಿದಂತೆ, \q2 ನಿಮ್ಮನ್ನು ಪುನಃ ಗುಡಾರದ ವಾಸಕ್ಕೆ ಗುರಿಪಡಿಸುವೆನು. \q1 \v 10 ನಾನು ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. \q2 ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. \q2 ಅವರ ಮುಖಾಂತರ ಸಾಮ್ಯಗಳನ್ನು ಜನರಿಗೆ ಹೇಳಿದ್ದೇನೆ. \b \q1 \v 11 ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? \q2 ಅಲ್ಲಿನ ಜನರು ಅಯೋಗ್ಯರೇ? \q1 ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆಯೇ? \q2 ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ \q2 ಕಲ್ಲು ಕುಪ್ಪೆಯ ಹಾಗಿವೆ, ಎಂದು ಹೇಳಿದನು. \q1 \v 12 ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು. \q2 ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ, \q2 ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು. \q1 \v 13 ಪ್ರವಾದಿಯಿಂದ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಬರಮಾಡಿ, \q2 ಆ ಪ್ರವಾದಿಯಿಂದಲೇ ಆತನು ಅವರನ್ನು ಕಾಪಾಡಿದರು. \q1 \v 14 ಆದರೂ ಎಫ್ರಾಯೀಮು ಬಹು ಕಠೋರವಾಗಿ ಆತನನ್ನು ರೇಗಿಸಿತು. \q2 ಆದ್ದರಿಂದ ಯೆಹೋವ ದೇವರು ಅದರ ರಕ್ತಾಪರಾಧವನ್ನು ಅದರ ಮೇಲೆ ಬರಮಾಡುವರು. \q2 ಅವನ ನಿಂದೆಯನ್ನು ಯೆಹೋವ ದೇವರು ಅವನ ಮೇಲೆ ಬರಮಾಡುವರು. \c 13 \s1 ಇಸ್ರಾಯೇಲಿನ ಮೇಲೆ ಯೆಹೋವ ದೇವರ ರೌದ್ರ \q1 \v 1 “ಪೂರ್ವದಲ್ಲಿ ಎಫ್ರಾಯೀಮು ಮಾತನಾಡುವಾಗ, \q2 ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು. \q2 ಆದರೆ ಬಾಳನ ಆರಾಧನೆಯಲ್ಲಿ ಅವನು ಅಪರಾಧಿಯಾಗಿ ಸತ್ತನು. \q1 \v 2 ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ. \q2 ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ, \q1 ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. \q2 ಅದೆಲ್ಲವೂ ಕಮ್ಮಾರರ ಕೈಕೆಲಸವೇ. \q1 ಅವರು ನರಬಲಿಯನ್ನು ಅರ್ಪಿಸುತ್ತಾರೆ, \q2 ಬಸವನ ವಿಗ್ರಹಕ್ಕೆ ಮುದ್ದಿಡುತ್ತಾರೆ,” \q2 ಎಂದು ಜನರು ಅವರ ಬಗ್ಗೆ ಹೇಳುತ್ತಾರೆ. \q1 \v 3 ಆದ್ದರಿಂದ ಅವರು ಪ್ರಾತಃಕಾಲದ ಮಂಜಿನ ಹಾಗೆಯೂ, \q2 ಬೇಗನೆ ಮಾಯವಾಗುವ ಇಬ್ಬನಿಯ ಹಾಗೆಯೂ, \q2 ಸುಳಿಗಾಳಿಯು ಕಣದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ, \q2 ಚಿಮಿಣಿಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು. \b \q1 \v 4 ಆದರೂ ನಾನು ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದ, \q2 ನಾನೇ ನಿನ್ನ ದೇವರಾಗಿರುವ ಯೆಹೋವನಾಗಿದ್ದೇನೆ. \q1 ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು. \q2 ಏಕೆಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ. \q1 \v 5 ನಾನು ನಿನ್ನನ್ನು ಮರುಭೂಮಿಯಲ್ಲಿಯೂ, \q2 ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ. \q1 \v 6 ನಾನು ಅವರಿಗೆ ಆಹಾರ ಕೊಟ್ಟೆನು, ಅವರು ತೃಪ್ತರಾದರು. \q2 ಅವರು ತೃಪ್ತರಾದಾಗ, ಅಹಂಕಾರಿಗಳಾದರು, \q2 ಅನಂತರ ಅವರು ನನ್ನನ್ನು ಮರೆತುಬಿಟ್ಟರು. \q1 \v 7 ಆದ್ದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು. \q2 ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚುಹಾಕುವೆನು. \q1 \v 8 ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. \q2 ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. \q1 ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. \q2 ಕಾಡುಮೃಗವು ಅವರನ್ನು ಸೀಳಿ ಹಾಕುವುದು. \b \q1 \v 9 “ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ \q2 ತಿರುಗಿಬಿದ್ದದರಿಂದ ನಾಶವಾಗಿದ್ದೀ. \q1 \v 10 ಈಗ ನಿನ್ನ ಅರಸನು ಎಲ್ಲಿ? \q2 ನಿನ್ನ ಪಟ್ಟಣಗಳೆಲ್ಲಾ ನಿನ್ನವರನ್ನು ಉದ್ಧರಿಸುವನೋ? \q1 ನನಗೆ ರಾಜ್ಯವನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು \q2 ಎಂದು ನನ್ನನ್ನು ಕೇಳಿಕೊಂಡಿಯಷ್ಟೆ. \q2 ಆ ನ್ಯಾಯಾಧಿಪತಿಗಳು ಎಲ್ಲಿ? \q1 \v 11 ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು \q2 ಮತ್ತು ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು. \q1 \v 12 ಎಫ್ರಾಯೀಮಿನ ದುಷ್ಕೃತ್ಯವು ಸಂಗ್ರಹವಾಗಿದೆ. \q2 ಅವನ ಪಾಪವು ದಾಖಲೆಯಾಗಿದೆ. \q1 \v 13 ಎಫ್ರಾಯೀಮಿಗೆ ಪ್ರಸವವೇದನೆ ಬಂದಿದೆ. \q2 ಅಷ್ಟೇ ಅಲ್ಲ. \q1 ಅದೊಂದು ಮಂಕು ಮಗುವಿನಂತಿದೆ. \q2 ಹುಟ್ಟಿ, ಹೊರಗೆ ಬರಬಹುದಾದರೂ, \q2 ಅವನು ಬಾರದೆ ಇದ್ದಾನೆ. \b \q1 \v 14 “ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. \q2 ಮರಣದಿಂದ ಅವರನ್ನು ಬಿಡಿಸುವೆನು. \q1 ಮರಣವೇ ನಿನ್ನ ಉಪದ್ರವ ಎಲ್ಲಿ? \q2 ಪಾತಾಳವೇ ನಿನ್ನ ವಿನಾಶವೆಲ್ಲಿ? \b \q1 “ಅನುಕಂಪವು ನನ್ನಿಂದ ದೂರವಾಗಿದೆ. \q2 \v 15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, \q1 ಕಾಡಿನಿಂದ ಯೆಹೋವ ದೇವರು ಬೀಸಮಾಡುವ \q2 ಪೂರ್ವ ಗಾಳಿಯು ಬರಲು, \q1 ಅವನ ಬುಗ್ಗೆಯು ಬತ್ತುವುದು. \q2 ಅವನ ಒರತೆಯು ಒಣಗುವುದು. \q1 ಅವನ ಬೊಕ್ಕಸಗಳ ನಿಧಿಯನ್ನು \q2 ಶತ್ರುಗಳು ಸೂರೆಮಾಡುವರು. \q1 \v 16 ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, \q2 ತನ್ನ ದೋಷಫಲವನ್ನು ಅನುಭವಿಸಲೇಬೇಕು. \q1 ಅದರ ಜನರು ಖಡ್ಗದಿಂದ ಹತರಾಗುವರು, \q2 ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. \q2 ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.” \c 14 \s1 ಆಶೀರ್ವಾದಕ್ಕಾಗಿ ಪಶ್ಚಾತ್ತಾಪ ಪಡುತ್ತಾರೆ \q1 \v 1 ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. \q2 ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ. \q1 \v 2 ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, \q2 ಯೆಹೋವ ದೇವರ ಕಡೆಗೆ ತಿರುಗಿಕೊಂಡು, \q1 ಅವರಿಗೆ ಹೇಳಿರಿ: \q2 “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, \q1 ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. \q2 ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು. \q1 \v 3 ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. \q2 ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. \q1 ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, \q2 ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. \q2 ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.” \b \q1 \v 4 “ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. \q2 ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. \q2 ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ. \q1 \v 5 ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. \q2 ಅವನು ತಾವರೆಯ ಹಾಗೆ ಬೆಳೆಯುವನು. \q1 ತನ್ನ ಬೇರುಗಳನ್ನು ಲೆಬನೋನಿನ \q2 ಹಾಗೆ ಆಳಕ್ಕೆ ಹರಡುವನು. \q2 \v 6 ಅವನ ಕೊಂಬೆಗಳು ಹರಡಿಕೊಂಡು, \q1 ಅವನ ಸೌಂದರ್ಯವು ಎಣ್ಣೆಮರಗಳ ಹಾಗೆಯೂ \q2 ಅವನ ಪರಿಮಳವು ಲೆಬನೋನಿನ ದೇವದಾರಿನ ಹಾಗೆಯೂ ಇರುವುದು. \q1 \v 7 ಆತನ ನೆರಳಿನಲ್ಲಿ ಜನರು ವಾಸಿಸುವರು, \q2 ಧಾನ್ಯದ ಹಾಗೆ ಜೀವಿಸುವರು, \q1 ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. \q2 ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು. \q1 \v 8 ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? \q2 ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. \q1 ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. \q2 ನಿನ್ನ ಫಲವು ನನ್ನಿಂದ ಬರುವುದು.” \b \q1 \v 9 ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. \q2 ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. \q1 ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. \q2 ನೀತಿವಂತರು ಅದರಲ್ಲಿ ನಡೆಯುವರು. \q2 ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.