\id JAS - Biblica® Open Kannada Contemporary Version \ide UTF-8 \h ಯಾಕೋಬನು \toc1 ಯಾಕೋಬನು ಬರೆದ ಪತ್ರಿಕೆ \toc2 ಯಾಕೋಬನು \toc3 ಯಾಕೋಬ \mt1 ಯಾಕೋಬನು \mt2 ಬರೆದ ಪತ್ರಿಕೆ \c 1 \p \v 1 ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, \b \p ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: \b \p ನಿಮಗೆ ಶುಭವಾಗಲಿ. \b \s1 ಕಷ್ಟಗಳು ಮತ್ತು ಶೋಧನೆಗಳು \p \v 2 ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ. \v 3 ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ. \v 4 ಆ ದೃಢ ನಿಷ್ಠೆಯು ನಿಮ್ಮಲ್ಲಿ ಪೂರ್ಣ ಕ್ರಿಯೆಯನ್ನು ಉಂಟುಮಾಡಿದಾಗ, ಆಗ ನೀವು ಪರಿಪಕ್ವತೆಗೆ ಬಂದವರೂ ಪರಿಪೂರ್ಣರೂ ಯಾವ ಕೊರತೆಯೂ ಇಲ್ಲದವರೂ ಆಗಿರುವಿರಿ. \v 5 ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು. \v 6 ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು. \v 7 ಅಂಥವನು ತಾನು ಕರ್ತ ದೇವರಿಂದ ಏನಾದರೂ ಹೊಂದುವೆನೆಂದು ನಿರೀಕ್ಷಿಸದೆ ಇರಲಿ. \v 8 ಅಂತಹ ವ್ಯಕ್ತಿ ಎರಡು ಮನಸ್ಸುಳ್ಳವನೂ ತನ್ನ ಮಾರ್ಗಗಳಲ್ಲೆಲ್ಲಾ ಚಂಚಲನೂ ಆಗಿದ್ದಾನೆ. \p \v 9 ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. \v 10 ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು. \v 11 ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು. \p \v 12 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು. \p \v 13 ಯಾರಿಗಾದರೂ ಶೋಧನೆ ಬಂದಾಗ, “ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು,” ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ. \v 14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಆಕರ್ಷಿಸಿ ಮರುಳುಗೊಂಡವನಾಗಿ ಶೋಧನೆಗೆ ಒಳಗಾಗುವನು. \v 15 ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ. \p \v 16 ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ. \v 17 ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ. \v 18 ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು. \s1 ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವುದು \p \v 19 ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ. \v 20 ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ. \v 21 ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ. \p \v 22 ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. \v 23 ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡ ಮನುಷ್ಯನಂತಿರುವನು. \v 24 ಏಕೆಂದರೆ ಇವನು ತನ್ನನ್ನು ಕನ್ನಡಿಯಲ್ಲಿ ನೋಡಿಕೊಂಡು ಹೋಗಿದ್ದರೂ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು. \v 25 ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು. \p \v 26 ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ. \v 27 ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ. \c 2 \s1 ಪಕ್ಷಪಾತವನ್ನು ಕುರಿತದ್ದು \p \v 1 ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು. \v 2 ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಹರಕು ಬಟ್ಟೆ ಹಾಕಿಕೊಂಡು ಬರಲು \v 3 ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಆ ವ್ಯಕ್ತಿಗೆ, “ನೀವು ಇಲ್ಲಿಯ ಗೌರವ ಪೀಠದಲ್ಲಿ ಕುಳಿತುಕೊಳ್ಳಿರಿ,” ಎಂತಲೂ ಆ ಬಡವನಿಗೆ, “ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ,” ಎಂತಲೂ ಹೇಳಿದರೆ, \v 4 ನೀವು ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿಗಳಾಗಿರುತ್ತೀರಲ್ಲವೇ? \p \v 5 ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? \v 6 ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? \v 7 ನೀವು ಕರೆಸಿಕೊಳ್ಳುವ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೇ? \p \v 8 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!”\f + \fr 2:8 \fr*\ft \+xt ಯಾಜಕ 19:18\+xt*\ft*\f* ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ. \v 9 ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದೀರಿ. ಮಾತ್ರವಲ್ಲದೆ ಮೋಶೆಯ ನಿಯಮದ ಪ್ರಕಾರ ಅಪರಾಧಿಗಳೆಂದು ನಿರ್ಣಯ ಹೊಂದುತ್ತೀರಿ. \v 10 ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ. \v 11 ಏಕೆಂದರೆ, “ವ್ಯಭಿಚಾರ ಮಾಡಬಾರದು,”\f + \fr 2:11 \fr*\ft \+xt ವಿಮೋ 20:14; ಧರ್ಮೋ 5:18\+xt*\ft*\f* ಎಂದು ಹೇಳಿದ ದೇವರೇ, “ನರಹತ್ಯೆ ಮಾಡಬಾರದು,”\f + \fr 2:11 \fr*\ft \+xt ವಿಮೋ 20:13; ಧರ್ಮೋ 5:17\+xt*\ft*\f* ಎಂತಲೂ ಹೇಳಿದರು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯೆ ಮಾಡಿದರೆ ನಿಯಮವನ್ನು ಮೀರಿದವನಾದೆ. \p \v 12 ಸ್ವಾತಂತ್ರ್ಯವನ್ನು ಉಂಟುಮಾಡುವ ನಿಯಮದಿಂದ ನಾವು ತೀರ್ಪುಹೊಂದುವೆವು ಎಂದು ತಿಳಿದು, ನಮ್ಮ ಮಾತುಗಳೂ ಕೃತ್ಯಗಳೂ ಅದಕ್ಕೆ ಅನುಸಾರವಾಗಿರಲಿ. \v 13 ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು. \s1 ನಂಬಿಕೆಯೂ ಸತ್ಕಾರ್ಯವೂ \p \v 14 ನನ್ನ ಪ್ರಿಯರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ? \v 15 ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ದಿನದ ಆಹಾರವೂ ಇಲ್ಲದಿರುವಾಗ, \v 16 ನಿಮ್ಮಲ್ಲಿ ಒಬ್ಬನು ಅವನಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ, “ಸಮಾಧಾನದಿಂದ ಹೋಗಿರಿ, ಚಳಿ ಕಾಯಿಸಿಕೊಳ್ಳಿರಿ, ಹೊಟ್ಟೆ ತುಂಬಿಸಿಕೊಳ್ಳಿರಿ,” ಎಂದು ಹೇಳಿದರೆ ಪ್ರಯೋಜನವೇನು? \v 17 ಅದರಂತೆಯೇ, ಕ್ರಿಯೆಗಳಿಲ್ಲದ ನಂಬಿಕೆಯು, ಕ್ರಿಯೆಗಳು ಇಲ್ಲದಿರುವುದರಿಂದ ಸತ್ತ ನಂಬಿಕೆಯಾಗಿರುತ್ತದೆ. \p \v 18 ಆದರೆ ಒಬ್ಬ ಮನುಷ್ಯನು, “ನಿನ್ನಲ್ಲಿ ನಂಬಿಕೆಯಿದೆ, ನನ್ನಲ್ಲಿ ಕ್ರಿಯೆಗಳಿವೆ,” ಎಂದು ವಾದಿಸಬಹುದು. \p ಅಂಥವನಿಗೆ, “ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ರುಜುಪಡಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ರುಜುಪಡಿಸುತ್ತೇನೆ,” ಎಂದು ಹೇಳಬಹುದು. \v 19 ದೇವರು ಒಬ್ಬರೇ ಎಂದು ನೀನು ನಂಬುತ್ತೀ, ಅದು ಒಳ್ಳೆಯದು, ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ. \p \v 20 ಮೂರ್ಖನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು\f + \fr 2:20 \fr*\ft ಕೆಲವು ಪ್ರತಿಗಳಲ್ಲಿ \ft*\fqa ವ್ಯರ್ಥವಾದದ್ದೆಂದು \fqa*\ft ಇದೆ.\ft*\f* ತಿಳಿದುಕೊಳ್ಳಲು ನಿನಗೆ ಪ್ರಮಾಣಗಳು ಬೇಕೋ? \v 21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ನೀತಿನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? \v 22 ಅಬ್ರಹಾಮನ ನಂಬಿಕೆಯೂ ಕ್ರಿಯೆಗಳೂ ಒಂದಾಗಿ ಕಾರ್ಯ ಸಾಧಿಸಿದವು. ಹೀಗೆ ಅವನು ಮಾಡಿದ ಕ್ರಿಯೆಗಳಿಂದಲೇ ಅವನ ನಂಬಿಕೆಯು ಸಂಪೂರ್ಣಗೊಂಡಿತು ಎಂದು ನೋಡುತ್ತೇವೆ. \v 23 ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,”\f + \fr 2:23 \fr*\ft \+xt ಆದಿ 15:6\+xt*\ft*\f* ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು. \v 24 ಹೀಗೆ ಮನುಷ್ಯನು ನಂಬಿಕೆಯಿಂದ ಮಾತ್ರವಲ್ಲ ಕ್ರಿಯೆಗಳಿಂದಲೂ ನೀತಿವಂತನೆಂದು ನಿರ್ಣಯ ಹೊಂದುತ್ತಾನೆ ಎಂದು ನೀವು ನೋಡುತ್ತೀರಿ. \p \v 25 ಅದೇ ರೀತಿಯಾಗಿ ರಹಾಬಳೆಂಬ ವೇಶ್ಯೆಯು ಸಹ ಗೂಢಚಾರರನ್ನು ಸೇರಿಸಿಕೊಂಡು, ಅವರನ್ನು ಬೇರೆ ದಾರಿಯಿಂದ ಕಳುಹಿಸಿದ ಕ್ರಿಯೆಗಳಿಂದಲೇ ಆಕೆಯು ನೀತಿನಿರ್ಣಯವನ್ನು ಹೊಂದಿದಳಲ್ಲವೇ? \v 26 ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ, ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿರುತ್ತದೆ. \c 3 \s1 ನಾಲಿಗೆಯನ್ನು ಬಿಗಿ ಹಿಡಿಯುವುದು ಅವಶ್ಯ \p \v 1 ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ. \v 2 ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ. \p \v 3 ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ, ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವುದಕ್ಕೆ ಆಗುತ್ತದೆ. \v 4 ಹಡಗುಗಳ ಉದಾಹರಣೆಯೂ ಅದರಂತೆ ಇದೆ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ನಡೆಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ಅವುಗಳನ್ನು ತಿರುಗಿಸುತ್ತಾನೆ. \v 5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಸಣ್ಣ ಬೆಂಕಿ ಕಿಡಿಯು ದೊಡ್ಡಕಾಡನ್ನೇ ಸುಟ್ಟುಬಿಡುತ್ತದೆ ನೋಡಿರಿ. \v 6 ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ. \p \v 7 ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಮಾನವರು ಹತೋಟಿಗೆ ತರುತ್ತಾರೆ ಮತ್ತು ತಂದಿದ್ದಾರೆ. \v 8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿಕೊಂಡಿದೆ. \p \v 9 ಅದೇ ನಾಲಿಗೆಯಿಂದ ನಮ್ಮ ತಂದೆಯಾದ ಕರ್ತದೇವರನ್ನು ಕೊಂಡಾಡುತ್ತೇವೆ, ಅದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಸೃಷ್ಟಿಸಲಾದ ಮನುಷ್ಯರನ್ನು ನಾವು ಶಪಿಸುತ್ತೇವೆ. \v 10 ಅದೇ ಬಾಯಿಂದ ಸ್ತುತಿ ಮತ್ತು ಶಾಪ ಬರುತ್ತವೆ. ನನ್ನ ಪ್ರಿಯರೇ, ಇವುಗಳು ಹೀಗಿರಬಾರದು. \v 11 ಒಂದೇ ಬುಗ್ಗೆಯಿಂದ ಸಿಹಿನೀರನ್ನೂ ಉಪ್ಪುನೀರನ್ನೂ ಒಂದೇ ಸ್ಥಳದಿಂದ ಹೊರಡಿಸುವುದುಂಟೇ? \v 12 ನನ್ನ ಪ್ರಿಯರೇ, ಅಂಜೂರದ ಮರವು ಎಣ್ಣೇಮರದ ಕಾಯನ್ನು ಬಿಡುವುದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಉಪ್ಪುನೀರಿನ ಬುಗ್ಗೆಯು ಸಿಹಿನೀರನ್ನು ಕೊಡಲು ಎಂದಿಗೂ ಸಾಧ್ಯವಿಲ್ಲ. \s1 ನಿಜವಾದ ಜ್ಞಾನದ ಲಕ್ಷಣಗಳು \p \v 13 ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ. \v 14 ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ. \v 15 ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು. \v 16 ಏಕೆಂದರೆ ನಿಮ್ಮಲ್ಲಿ ಹೊಟ್ಟೆಕಿಚ್ಚೂ ಸ್ವಾರ್ಥ ಉದ್ದೇಶವೂ ಇರುವಲ್ಲಿ ಗಲಿಬಿಲಿಯೂ ಸಕಲ ವಿಧವಾದ ಕೆಟ್ಟ ಅಭ್ಯಾಸವೂ ಇರುತ್ತವೆ. \p \v 17 ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ. \v 18 ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ. \c 4 \s1 ದೇವರಿಗೆ ಅಧೀನರಾಗಿರಿ \p \v 1 ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ? \v 2 ನೀವು ಬಯಸಿದರೂ ಪಡೆಯದೆ ಇದ್ದುದರಿಂದ ನೀವು ಕೊಲ್ಲುತ್ತೀರಿ. ದುರಾಶೆಯಿಂದ ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ ಮತ್ತು ಯುದ್ಧ ಮಾಡುತ್ತೀರಿ, ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. \v 3 ನೀವು ಬೇಡಿದರೂ ಬೇಡಿದ್ದನ್ನು ಪಡೆದುಕೊಳ್ಳುವುದಿಲ್ಲ. ಏಕೆಂದರೆ, ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂದು ದುರುದ್ದೇಶಕ್ಕಾಗಿ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುವುದಿಲ್ಲ. \p \v 4 ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ. \v 5 ಅಥವಾ ದೇವರು ನಮ್ಮಲ್ಲಿ ವಾಸವಾಗಿರಲು ನಮಗೆ ಕೊಟ್ಟಿರುವ ಪವಿತ್ರಾತ್ಮ ದೇವರು, ನಾವು ಅವರಿಗೆ ಮಾತ್ರ ಸೇರಿದವರಾಗಿರಬೇಕೆಂದು ಬಲವಾದ ಬಯಕೆ ಉಳ್ಳವರಾಗಿದ್ದಾರೆಂದು ಪವಿತ್ರ ವೇದವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸುತ್ತೀರೋ? \v 6 ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: \q1 “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. \q2 ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,”\f + \fr 4:6 \fr*\ft \+xt ಜ್ಞಾನೋಕ್ತಿ 3:34\+xt*\ft*\f* \m ಎಂದು ಹೇಳುತ್ತದೆ. \p \v 7 ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. \v 8 ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. \v 9 ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ, ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. \v 10 ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು. \p \v 11 ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ. \v 12 ನಿಯಮವನ್ನು ಕೊಟ್ಟವರೂ ನ್ಯಾಯಾಧಿಪತಿಯೂ ದೇವರೊಬ್ಬರೇ ಆಗಿರುತ್ತಾರೆ. ಅವರು ಉಳಿಸುವುದಕ್ಕೂ ನಾಶಮಾಡುವುದಕ್ಕೂ ಶಕ್ತರಾಗಿದ್ದಾರೆ. ಹೀಗಿರುವಾಗ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು? \s1 ನಾಳೆಯನ್ನು ಕುರಿತು ಕೊಚ್ಚಿಕೊಳ್ಳುವುದು \p \v 13 “ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು, ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ,” ಎನ್ನುವವರೇ ಕೇಳಿರಿ. \v 14 ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ. \v 15 ಆದ್ದರಿಂದ, “ಕರ್ತದೇವರ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ, ಆ ಕೆಲಸವನ್ನಾಗಲಿ ಮಾಡುವೆವು!” ಎಂದು ನೀವು ಹೇಳುವುದೇ ಸರಿ. \v 16 ಆದರೆ ನೀವು ನಿಮ್ಮ ಹೊಗಳಿಕೆಯ ಯೋಜನೆಗಳಲ್ಲಿ ಹೆಮ್ಮೆಪಡುತ್ತೀರಿ. ಅಂಥಾ ಅಹಂಭಾವವೆಲ್ಲಾ ಕೆಟ್ಟದ್ದೆ. \v 17 ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ. \c 5 \s1 ಐಶ್ವರ್ಯವಂತರನ್ನು ಖಂಡಿಸುವುದು \p \v 1 ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ. \v 2 ನಿಮ್ಮ ಐಶ್ವರ್ಯವು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿಹಿಡಿದಿದೆ. \v 3 ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದಿವೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದುಬಿಡುವುದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ. \v 4 ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ. \v 5 ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸಿಗೆ ಬಂದಂತೆ ಜೀವಿಸಿದ್ದೀರಿ. ವಧೆಯ ದಿವಸಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ. \v 6 ನಿಮ್ಮನ್ನು ವಿರೋಧ ಮಾಡದ ನಿರ್ದೋಷಿಗೆ ದಂಡನೆಯನ್ನು ವಿಧಿಸಿ, ಕೊಂದುಹಾಕಿದ್ದೀರಿ. \s1 ತಾಳ್ಮೆಯ ಅವಶ್ಯಕತೆ \p \v 7 ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. \v 8 ನೀವೂ ದೀರ್ಘಶಾಂತಿಯಿಂದಿರಿ. ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ. ಏಕೆಂದರೆ ಕರ್ತ ಯೇಸುವಿನ ಪುನರಾಗಮನ ಹತ್ತಿರವಾಯಿತು. \v 9 ಪ್ರಿಯರೇ, ನೀವು ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿರಿ. ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾರೆ. \p \v 10 ನನ್ನ ಪ್ರಿಯರೇ, ಕರ್ತದೇವರ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯವಾಗಿ ಆದರ್ಶವಾಗಿ ಇಟ್ಟುಕೊಳ್ಳಿರಿ. \v 11 ಇಗೋ, ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ, ಕರ್ತದೇವರು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ತಿಳಿದು, ಕರ್ತದೇವರು ಬಹಳ ಒಳ್ಳೆಯವರೂ ದಯಾಳುವೂ ಆಗಿದ್ದಾರೆಂದು ತಿಳಿದಿದ್ದೀರಷ್ಟೆ. \p \v 12 ಮುಖ್ಯವಾಗಿ ನನ್ನ ಪ್ರಿಯರೇ, ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ನಾವುದರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ “ಹೌದು” ಎನ್ನಿರಿ. ಇಲ್ಲವಾದರೆ “ಇಲ್ಲ” ಎನ್ನಿರಿ. ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. \s1 ಪ್ರಾರ್ಥನೆಯ ಶಕ್ತಿ \p \v 13 ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷ ಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ. \v 14 ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. \v 15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ. \v 16 ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ. \p \v 17 ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ. \v 18 ತಿರುಗಿ ಅವನು ಪ್ರಾರ್ಥನೆಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಿಸಿತು. \p \v 19 ಪ್ರಿಯರೇ, ನಿಮ್ಮಲ್ಲಿ ಯಾವನಾದರೂ ಸತ್ಯದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ, \v 20 ಅವನು ಆ ಪಾಪ ಮಾಡಿದವನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ, ಅವನ ಆತ್ಮವನ್ನು ಮರಣದಿಂದಲೂ ತಪ್ಪಿಸಿ, ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲಿ.