\id JER - Biblica® Open Kannada Contemporary Version \ide UTF-8 \h ಯೆರೆಮೀಯ \toc1 ಯೆರೆಮೀಯ \toc2 ಯೆರೆಮೀಯ \toc3 ಯೆರೆ \mt1 ಯೆರೆಮೀಯ \c 1 \p \v 1 ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು. \v 2 ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವ ದೇವರ ವಾಕ್ಯವು ಇವನಿಗೆ ಕೇಳಿಬಂತು. \v 3 ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು. \b \s1 ಯೆರೆಮೀಯನ ಕರೆ \p \v 4 ಯೆಹೋವ ದೇವರು ಈ ವಾಕ್ಯವನ್ನು ನನಗೆ ದಯಪಾಲಿಸಿದರು, \q1 \v 5 “ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ \q2 ಮುಂಚೆಯೇ ನಿನ್ನನ್ನು ತಿಳಿದಿದ್ದೆನು. \q1 ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; \q2 ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.” \p \v 6 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು. \p \v 7 ಆಗ ಯೆಹೋವ ದೇವರು ನನಗೆ, “ ‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು. \v 8 ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ. \p \v 9 ಆಗ ಯೆಹೋವ ದೇವರು ಕೈಚಾಚಿ, ನನ್ನ ಬಾಯಿಯನ್ನು ಮುಟ್ಟಿ ನನಗೆ, “ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ. \v 10 ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು. \p \v 11 ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ, “ಯೆರೆಮೀಯನೇ, ನೀನು ಏನು ಕಾಣುತ್ತೀ?” ಎಂದು ಕೇಳಿದರು. \p ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ,” ಎಂದೆನು. \p \v 12 ಆಗ ಯೆಹೋವ ದೇವರು ನನಗೆ, “ನೀನು ಚೆನ್ನಾಗಿ ನೋಡಿದ್ದೀ. ಏಕೆಂದರೆ ನನ್ನ ವಾಕ್ಯವನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆಂದು, ತಿಳಿದುಕೊ” ಎಂದರು. \p \v 13 ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, “ನೀನು ಏನು ನೋಡುತ್ತೀ?” ಎಂದು ಕೇಳಿದ್ದಕ್ಕೆ, \p ನಾನು, “ಬೇಯುವ ಮಡಕೆಯನ್ನು ನೋಡುತ್ತೇನೆ, ಅದರ ಬಾಯಿ ಉತ್ತರದ ಕಡೆಗೆ ಇದೆ,” ಎಂದೆನು. \p \v 14 ಆಗ ಯೆಹೋವ ದೇವರು ನನಗೆ, “ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವುದು. \v 15 ಏಕೆಂದರೆ ನಾನು ಉತ್ತರದಲ್ಲಿರುವ ರಾಜ್ಯಗಳ ಕುಲಗಳನ್ನೆಲ್ಲಾ ಕರೆಯುತ್ತೇನೆ. \q1 “ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು \q2 ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ, \q1 ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ \q2 ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು. \q1 \v 16 ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ \q2 ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. \q1 ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ \q2 ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು. \p \v 17 “ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ. \v 18 ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ, ಅದರ ಪ್ರಧಾನರಿಗೆ ವಿರೋಧವಾಗಿಯೂ, ಅದರ ಯಾಜಕರಿಗೆ ವಿರೋಧವಾಗಿಯೂ, ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತ್ತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ, ಕಬ್ಬಿಣದ ಸ್ತಂಭವಾಗಿಯೂ, ಕಂಚಿನ ಗೋಡೆಗಳಾಗಿಯೂ ಮಾಡಿದ್ದೇನೆ. \v 19 ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ. \c 2 \s1 ಇಸ್ರಾಯೇಲರು ಯೆಹೋವ ದೇವರನ್ನು ತೃಣೀಕರಿಸಿದ್ದು \p \v 1 ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು: \v 2 “ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: \b \p “ಯೆಹೋವ ದೇವರು ಹೀಗೆನ್ನುತ್ತಾರೆ, \q1 “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, \q2 ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, \q1 ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ \q2 ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, \q2 ಇದು ನಿನ್ನ ಹಿತಕ್ಕಾಗಿಯೇ. \q1 \v 3 ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, \q2 ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ \q1 ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. \q2 ಅವರಿಗೆ ಕೇಡು ಬರುವುದು,’ ” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 4 ಓ ಯಾಕೋಬಿನ ಮನೆತನವೇ, \q2 ಇಸ್ರಾಯೇಲಿನ ಮನೆತನದ ಎಲ್ಲಾ ಕುಲಗಳೇ, \q2 ಯೆಹೋವ ದೇವರ ವಾಕ್ಯವನ್ನು ನೀವು ಕೇಳಿರಿ. \p \v 5 ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ನಿಮ್ಮ ತಂದೆಗಳು ನನಗೆ ದೂರವಾಗಿ \q2 ವ್ಯರ್ಥತ್ವವನ್ನು ಹಿಂದಟ್ಟಿ, \q1 ವ್ಯರ್ಥವಾಗುವ ಹಾಗೆ \q2 ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ? \q1 \v 6 ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ \q2 ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, \q1 ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, \q2 ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ \q2 ಎಂದು ಪ್ರಶ್ನೆ ಮಾಡಲಿಲ್ಲ. \q1 \v 7 ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, \q2 ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. \q1 ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, \q2 ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ. \q1 \v 8 ಯಾಜಕರು, ‘ಯೆಹೋವ ದೇವರು ಎಲ್ಲಿ?’ \q2 ಎಂದು ಕೇಳಲಿಲ್ಲ. \q1 ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. \q2 ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. \q1 ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. \q2 ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು. \b \q1 \v 9 “ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q2 “ಇದಲ್ಲದೆ ನಿಮ್ಮ ಮಕ್ಕಳ ಸಂಗಡ ವ್ಯಾಜ್ಯವಾಡುವೆನು. \q1 \v 10 ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ. \q2 ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳಿದುಕೊಳ್ಳಿರಿ. \q2 ಅಂಥದ್ದು ಉಂಟೋ ಎಂದು ನೋಡಿರಿ. \q1 \v 11 ಜನಾಂಗವು ತಮ್ಮ ದೇವರುಗಳನ್ನು \q2 ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? \q1 ಆದರೆ ನನ್ನ ಜನರು \q2 ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ. \q1 \v 12 ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, \q2 ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 13 “ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. \q1 ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, \q2 ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ. \q1 \v 14 ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? \q2 ಅವನು ಏಕೆ ಸುಲಿಗೆಯಾದನು? \q1 \v 15 ಪ್ರಾಯದ ಸಿಂಹಗಳು \q2 ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. \q1 ಅವನ ದೇಶವನ್ನು ಹಾಳು ಮಾಡುತ್ತವೆ. \q2 ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ. \q1 \v 16 ನೋಫ್ ಮತ್ತು ತಹಪನೇಸ್ ಪಟ್ಟಣಗಳವರು \q2 ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ. \q1 \v 17 ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ \q2 ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ \q2 ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ? \q1 \v 18 ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ \q2 ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? \q1 ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ \q2 ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ? \q1 \v 19 ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. \q2 ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. \q1 ಹೀಗಿರುವುದರಿಂದ ನೀನು \q2 ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, \q1 ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, \q2 ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” \q2 ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. \b \q1 \v 20 “ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, \q2 ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. \q2 ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. \q1 ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, \q2 ಒಂದೊಂದು ಹಸುರಾದ ಮರದ ಕೆಳಗೂ \q2 ನೀನು ವೇಶ್ಯೆಯಾಗಿ ನಡೆದಿದ್ದೀ. \q1 \v 21 ಅತ್ಯುತ್ತಮ ಬೀಜದಿಂದ ಬೆಳೆದ \q2 ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. \q1 ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ \q2 ಹಾಳು ರೆಂಬೆಗಳಾದದ್ದು ಹೇಗೆ? \q1 \v 22 ನೀನು ಸಾಬೂನಿನಿಂದ ತೊಳೆದುಕೊಂಡರೂ, \q2 ಬಹಳ ಸಾಬೂನು ಹಾಕಿಕೊಂಡರೂ \q2 ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” \q2 ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. \q1 \v 23 “ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, \q2 ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? \q1 ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. \q2 ನೀನು ಮಾಡಿದ್ದನ್ನು ತಿಳಿದುಕೋ. \q1 ನೀನು ತೀವ್ರವಾಗಿ ಸಂಚಾರ ಮಾಡುವ \q2 ಹೆಣ್ಣು ಒಂಟೆಯೇ. \q1 \v 24 ಮರುಭೂಮಿಯ ಅಭ್ಯಾಸವುಳ್ಳ ಕಾಡುಕತ್ತೆಯೇ. \q2 ಅವಳ ಅತ್ಯಾಶೆಯಲ್ಲಿ ಗಾಳಿಯನ್ನು ಹೀರಿಕೊಳ್ಳುತ್ತಾಳೆ. \q2 ಅವಳ ಮದವನ್ನು ಯಾರು ತಡೆಯುವರು? \q1 ಅವಳನ್ನು ಹುಡುಕುವವರೆಲ್ಲರೂ ಆಯಾಸ ಪಡುವುದಿಲ್ಲ. \q2 ಅವಳ ಸಂಗಮಿಸುವ ಋತುಗಳಲ್ಲಿ ಅವಳನ್ನು ಕಾಣುವರು. \q1 \v 25 ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, \q2 ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. \q1 ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, \q2 ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, \q2 ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ. \b \q1 \v 26 “ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ \q2 ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. \q1 ಅವರ ಅರಸರು, ಅಧಿಪತಿಗಳು, \q2 ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು. \q1 \v 27 ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ \q2 ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. \q1 ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. \q2 ಆದರೂ ಅವರ ಕಷ್ಟಕಾಲದಲ್ಲಿ ಎದ್ದು, \q2 ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು. \q1 \v 28 ಆದರೆ ನೀನು ನಿನಗೋಸ್ಕರ ಮಾಡಿಕೊಂಡ \q2 ನಿನ್ನ ದೇವರುಗಳು ಎಲ್ಲಿ? \q2 ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, \q1 ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ \q2 ನಿನ್ನ ದೇವರುಗಳು ಇದ್ದಾರೆ. \b \q1 \v 29 “ಏಕೆ ನನ್ನ ಸಂಗಡ ವಾದಿಸುತ್ತೀರಿ? \q2 ನೀವೆಲ್ಲರೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದೀರಿ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 30 “ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. \q2 ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. \q1 ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ \q2 ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ. \p \v 31 “ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: \q1 “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? \q2 ಗಾಡಾಂಧಕಾರದ ದೇಶವಾದೆನೋ? \q1 ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, \q2 ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ \q2 ಎಂದು ಹೇಳುವುದು ಹೇಗೆ? \q1 \v 32 ಯುವತಿಯು ತನ್ನ ಆಭರಣಗಳನ್ನೂ \q2 ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? \q1 ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು \q2 ನನ್ನನ್ನು ಮರೆತುಬಿಟ್ಟಿದ್ದಾರೆ. \q1 \v 33 ಪ್ರಿಯಕರರನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಏಕೆ ಚಂದ ಮಾಡಿಕೊಳ್ಳುತ್ತೀ? \q2 ಇದರಿಂದ ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ. \q1 \v 34 ಇದಲ್ಲದೆ ನಿನ್ನ ಸೆರಗುಗಳಲ್ಲಿ \q2 ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. \q2 ಅಂತರಂಗದ ಶೋಧನೆಯಿಂದಲ್ಲ, \q1 ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ. \q2 \v 35 ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ \q2 ನಿಶ್ಚಯವಾಗಿ ದೇವರ ಕೋಪವು ನನ್ನನ್ನು ಬಿಟ್ಟು ತಿರುಗುವುದು,’ ಎಂದು ಹೇಳುತ್ತೀ. \q1 ನೀನು, ‘ನಾನು ಪಾಪಮಾಡಲಿಲ್ಲ’ ಎಂದು ಹೇಳುವುದರಿಂದ ಇಗೋ, \q2 ನಾನು ನಿನಗೆ ನ್ಯಾಯತೀರಿಸುವೆನು. \q1 \v 36 ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು \q2 ಏಕೆ ಬಹಳವಾಗಿ ತಿರುಗಾಡುತ್ತೀ? \q1 ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ \q2 ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ. \q1 \v 37 ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ \q2 ಇಟ್ಟುಕೊಂಡು ಹೊರಟು ಹೋಗುವೆ. \q1 ಏಕೆಂದರೆ ಯೆಹೋವ ದೇವರು ನೀನು ಭರವಸೆ ಇಟ್ಟವುಗಳನ್ನು ತಿರಸ್ಕರಿಸಿದ್ದಾರೆ, \q2 ಅವುಗಳ ಮುಖಾಂತರ ನಿನ್ನ ಕಾರ್ಯ ಸಫಲವಾಗುವುದಿಲ್ಲ.” \b \b \c 3 \q1 \v 1 “ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ, \q2 ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ, \q1 ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ, \q2 ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ? \q1 ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ. \q2 ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 2 “ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು. \q2 ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? \q1 ಮರುಭೂಮಿಯಲ್ಲಿ ಅರಬೀಯನ ಹಾಗೆ \q2 ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ. \q1 ಹೀಗೆ ನಿನ್ನ ವೇಶ್ಯೆತನಗಳಿಂದಲೂ, \q2 ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ. \q1 \v 3 ಆದ್ದರಿಂದ ಮಳೆಗಳು ನಿಂತುಹೋದವು, \q2 ಹಿಂಗಾರೇ ಆಗಲಿಲ್ಲ. \q1 ವೇಶ್ಯೆಯ ನೋಟ ನಿನಗಿತ್ತು. \q2 ನಾಚುವುದನ್ನು ನಿರಾಕರಿಸಿದೆ. \q1 \v 4 ಈಗಲೂ ನನಗೆ, ‘ನನ್ನ ತಂದೆಯೇ, \q2 ನನ್ನ ಯೌವನದ ಸ್ನೇಹಿತನು ನೀನೇ,’ \q2 ಎಂದು ನೀನು ಕರೆಯುತ್ತಿರುವೆ. \q1 \v 5 ಆತನು ನಿತ್ಯ ಕೋಪಮಾಡುವವನೋ? \q2 ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ? \q1 ಇಗೋ, ನೀನು ಹೀಗೆ ಮಾತನಾಡಿದರೇನು? \q2 ಆದರೆ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿದ್ದಿ.” \s1 ಅವಿಶ್ವಾಸವುಳ್ಳ ಇಸ್ರಾಯೇಲರು \p \v 6 ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ. \v 7 ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು ನನ್ನ ಬಳಿಗೆ ತಿರುಗಿಕೋ ಎಂದೆನು. ಆದರೆ ಅವಳು ತಿರುಗಿಕೊಳ್ಳಲಿಲ್ಲ. ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು. \v 8 ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು. \v 9 ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು. \v 10 ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ. \p \v 11 ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲ್, ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ. \v 12 ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು. \q1 “ ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’ \q2 ಎಂದು ಯೆಹೋವ ದೇವರು ಕರೆಯುತ್ತಾರೆ. \q2 ‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ. \q1 ಏಕೆಂದರೆ ನಾನು ಕರುಣಾಸಾಗರನು,’ \q2 ಎಂದು ಯೆಹೋವ ದೇವರು ಹೇಳುತ್ತಾರೆ. \q2 ‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ. \q1 \v 13 ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, \q2 ಒಂದೊಂದು ಹಸುರು ಮರದ ಕೆಳಗೆ \q1 ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, \q2 ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ \q2 ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” \q2 ಎಂದು ಯೆಹೋವ ದೇವರು ಹೇಳುತ್ತಾರೆ. \p \v 14 “ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು. \v 15 ನನ್ನ ಹೃದಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು. ಅವರು ತಿಳುವಳಿಕೆಯಿಂದಲೂ, ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು. \v 16 ನೀವು ದೇಶದಲ್ಲಿ ಅಭಿವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷವು,’ ಎಂದು ಇನ್ನು ಮೇಲೆ ಅವರು ಹೇಳದಿರುವರು. ಅದು ಮನಸ್ಸಿಗೆ ಬರುವುದಿಲ್ಲ, ಯಾರು ಅದನ್ನು ಸ್ಮರಿಸುವುದಿಲ್ಲ, ಅದರ ಬಗ್ಗೆ ವಿಚಾರಿಸುವುದೂ ಇಲ್ಲ; ಇನ್ನು ಮೇಲೆ ಸರಿಯಾಗುವುದಿಲ್ಲ ಎಂದು ಯೆಹೋವ ದೇವರು ನುಡಿಯುತ್ತಾರೆ. \v 17 ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು. \v 18 ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.” \p \v 19 ಯೆಹೋವ ದೇವರು ಹೇಳುವುದೇನೆಂದರೆ: \q1 “ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, \q2 ನಿನಗೆ ಮನೋಹರವಾದ ನಾಡನ್ನು ಎಂದರೆ, \q2 ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. \q1 ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ, \q2 ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ. \q1 \v 20 ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ, \q2 ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 21 ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. \q2 ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. \q1 ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, \q2 ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು. \b \q1 \v 22 “ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; \q2 ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” \b \q1 “ಇಗೋ, ನಿಮ್ಮ ಬಳಿಗೆ ಬರುತ್ತೇವೆ, \q2 ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ. \q1 \v 23 ನಿಶ್ಚಯವಾಗಿ ಗುಡ್ಡಗಳಿಂದಲೂ, \q2 ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ. \q1 ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು \q2 ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ. \q1 \v 24 ನಾಚಿಕೆಯಾದದ್ದು, ನಮ್ಮ ಚಿಕ್ಕತನದಿಂದ \q2 ನಮ್ಮ ತಂದೆಗಳ ಕಷ್ಟವನ್ನೂ, \q1 ಅವರ ಕುರಿಗಳನ್ನೂ, ಅವರ ದನಗಳನ್ನೂ, \q2 ಅವರ ಪುತ್ರರನ್ನೂ, ಅವರ ಪುತ್ರಿಯರನ್ನೂ ತಿಂದುಬಿಟ್ಟಿದೆ. \q1 \v 25 ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. \q2 ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. \q1 ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ \q2 ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ \q1 ವಿರೋಧವಾಗಿ ಪಾಪಮಾಡಿದ್ದೇವೆ. \q2 ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.” \b \c 4 \q1 \v 1 “ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ \q2 ನನ್ನ ಕಡೆ ಹಿಂದಿರುಗಿ ಬಾ,” \q2 ಎಂದು ಯೆಹೋವ ದೇವರು ನುಡಿಯುತ್ತಾರೆ. \q1 “ನೀನು ನಿನ್ನ ಅಸಹ್ಯಗಳನ್ನು \q2 ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ. \q1 \v 2 ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, \q2 ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. \q1 ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. \q2 ನನ್ನಲ್ಲಿಯೇ ಹೆಮ್ಮೆಪಡುವರು.” \p \v 3 ಏಕೆಂದರೆ ಯೆಹೋವ ದೇವರು ಯೆಹೂದದ ಮತ್ತು ಯೆರೂಸಲೇಮಿನ ಜನರಿಗೆ ಹೀಗೆ ಹೇಳುತ್ತಾರೆ: \q1 “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಗೆಯ್ಯಿರಿ. \q2 ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ. \q1 \v 4 ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; \q2 ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. \q1 ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, \q2 ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ \q2 ಯಾರೂ ಆರಿಸಲಾಗದ ಹಾಗೆ ಉರಿಯುವುದು.” \s1 ಉತ್ತರ ದಿಕ್ಕಿನಿಂದ ಬರುವ ಆಪತ್ತು \q1 \v 5 “ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ, \q2 ‘ಇಡೀ ದೇಶದಲ್ಲಿ ತುತೂರಿ ಊದಿರಿ!’ ಎಂದು ಹೇಳಿರಿ. \q1 ಗಟ್ಟಿಯಾಗಿ ಹೀಗೆ ಕೂಗಿರಿ, \q2 ‘ಕೂಡಿಕೊಂಡು ಕೋಟೆಯುಳ್ಳ \q2 ಪಟ್ಟಣಗಳಲ್ಲಿ ಪ್ರವೇಶಿಸೋಣ!’ ಎಂದು ಹೇಳಿರಿ. \q1 \v 6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; \q2 ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. \q1 ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, \q2 ದೊಡ್ಡ ನಾಶವನ್ನೂ ತರುತ್ತೇನೆ.” \b \q1 \v 7 ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. \q2 ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. \q1 ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. \q2 ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು. \q1 \v 8 ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. \q2 ಪ್ರಲಾಪಿಸಿರಿ, ಗೋಳಾಡಿರಿ. \q1 ಯೆಹೋವ ದೇವರ ಉಗ್ರಕೋಪದ ಉರಿಯು \q2 ನಮ್ಮಿಂದ ಹಿಂದಿರುಗಲಿಲ್ಲ. \b \q1 \v 9 ಆ ದಿವಸದಲ್ಲಿ, “ಅರಸನ ಹೃದಯವೂ ಎದೆಗುಂದುವುದು. \q2 ಅಧಿಪತಿಯ ಹೃದಯವೂ ಕುಗ್ಗುವುದು. \q1 ಯಾಜಕರು ಭ್ರಮೆಗೊಳ್ಳುವರು. \q2 ಪ್ರವಾದಿಗಳು ಸ್ತಬ್ಧರಾಗುವರು,” \q2 ಎಂದು ಯೆಹೋವ ದೇವರು ನುಡಿಯುತ್ತಾರೆ. \p \v 10 ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು. \p \v 11 ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ. \v 12 ಅದಕ್ಕಿಂತ ಬಿರುಸಾದ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವುದು. ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯತೀರ್ಪುಗಳನ್ನು ಕೊಡುವೆನು.” \q1 \v 13 ಇಗೋ, ಮೇಘಗಳ ಹಾಗೆ ಏರಿ ಬರುವನು. \q2 ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. \q1 ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. \q2 ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು. \q1 \v 14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; \q2 ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು. \q1 \v 15 ಏಕೆಂದರೆ ಒಂದು ಶಬ್ದವು ದಾನಿನಿಂದ ಪ್ರಕಟಮಾಡುತ್ತದೆ; \q2 ಎಫ್ರಾಯೀಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ. \q1 \v 16 “ಜನಾಂಗಗಳಿಗೆ ತಿಳಿಸಿರಿ. \q2 ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯಪಡಿಸಿರಿ. \q1 ಏನೆಂದರೆ, ‘ಮುತ್ತಿಗೆ ಹಾಕುವ ಸೈನ್ಯದವರು ದೂರದೇಶದಿಂದ ಬರುತ್ತಾರೆ, \q2 ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ಯುದ್ಧದ ಕೂಗನ್ನು ಎಬ್ಬಿಸುತ್ತಾರೆ. \q1 \v 17 ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿದ್ದಾರೆ. \q2 ಏಕೆಂದರೆ ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು,’ ” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 18 “ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, \q2 ಇವುಗಳನ್ನು ನಿನಗೆ ಉಂಟುಮಾಡಿದವು, \q1 ಇದೇ ನಿನ್ನ ಶಿಕ್ಷೆ. \q2 ಅದು ಕಹಿಯಾದದ್ದಲ್ಲವೋ? \q2 ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?” \b \q1 \v 19 ಓ, ನನ್ನ ಕರುಳು, ನನ್ನ ಕರುಳು! \q2 ನಾನು ನೋವಿನಿಂದ ನರಳುತ್ತೇನೆ. \q1 ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. \q2 ನಾನು ಮೌನವಾಗಿರಲಾರೆನು; \q1 ಓ ನನ್ನ ಪ್ರಾಣವೇ, \q2 ತುತೂರಿ ಶಬ್ದವನ್ನೂ, \q2 ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ. \q1 \v 20 ನಾಶನದ ಮೇಲೆ ನಾಶನದ ಸುದ್ದಿಬರುತ್ತಿದೆ. \q2 ದೇಶವೆಲ್ಲಾ ಹಾಳಾಯಿತು. \q1 ಫಕ್ಕನೆ ನನ್ನ ಗುಡಾರಗಳೂ, \q2 ಕ್ಷಣಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು. \q1 \v 21 ಎಷ್ಟರವರೆಗೆ ನಾನು ಯುದ್ಧದ ಧ್ವಜವನ್ನು ನೋಡುತ್ತಿರಲಿ? \q2 ತುತೂರಿಯ ಶಬ್ದವನ್ನು ಎಷ್ಟರವರೆಗೆ ನಾನು ಕೇಳಲಿ? \b \q1 \v 22 “ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. \q2 ನನ್ನನ್ನು ಅವರು ಅರಿಯರು; \q1 ಮೂರ್ಖ ಮಕ್ಕಳಾಗಿದ್ದಾರೆ, \q2 ಅವರು ಗ್ರಹಿಕೆಯಿಲ್ಲದವರು; \q1 ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, \q2 ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.” \b \q1 \v 23 ನಾನು ಭೂಮಿಯನ್ನು ನೋಡಿದೆನು, \q2 ಇಗೋ, ಅದು ನಿರಾಕಾರವಾಗಿಯೂ, ಹಾಳಾಗಿಯೂ, ಶೂನ್ಯವಾಗಿಯೂ ಇತ್ತು. \q1 ಆಕಾಶಗಳನ್ನು ಸಹ ನೋಡಿದೆನು, \q2 ಅವುಗಳಿಗೆ ಬೆಳಕಿರಲಿಲ್ಲ. \q1 \v 24 ಬೆಟ್ಟಗಳನ್ನು ನೋಡಿದೆನು, \q2 ಇಗೋ, ಅವು ನಡುಗಿದವು; \q2 ಗುಡ್ಡಗಳು ಹಗುರವಾಗಿ ಅದುರಿದವು. \q1 \v 25 ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; \q2 ಆಕಾಶದ ಪಕ್ಷಿಗಳೆಲ್ಲಾ ಹಾರಿ ಹೋಗಿದ್ದವು. \q1 \v 26 ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಮರುಭೂಮಿಯಾಯಿತು; \q2 ಅದರ ಪಟ್ಟಣಗಳೆಲ್ಲಾ ಯೆಹೋವ ದೇವರ ಮುಂದೆಯೂ, \q2 ಅವರ ಉಗ್ರಕೋಪದ ಉರಿಯ ಮುಂದೆಯೂ ಬಿದ್ದು ಹೋಗಿದ್ದವು. \p \v 27 ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: \q1 “ದೇಶವೆಲ್ಲಾ ಹಾಳಾಗುವುದು. \q2 ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ. \q1 \v 28 ಇದರ ನಿಮಿತ್ತ ಭೂಮಿಯು ದುಃಖಿಸುವುದು. \q2 ಮೇಲಿರುವ ಆಕಾಶವು ಕಪ್ಪಾಗುವುದು. \q1 ಏಕೆಂದರೆ ನಾನು ಅದನ್ನು ಹೇಳಿದ್ದರಿಂದ ನಿಶ್ಚಯಿಸಿದ್ದೇನೆ. \q2 ಮಾನಸಾಂತರ ಪಡುವುದಿಲ್ಲ. ಇಲ್ಲವೆ ಅದರಿಂದ ಹಿಂದಿರುಗುವುದಿಲ್ಲ.” \b \q1 \v 29 ರಾವುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ \q2 ಪಟ್ಟಣವೆಲ್ಲಾ ಓಡಿ ಹೋಗುವುದು. \q1 ಪೊದೆಗಳಲ್ಲಿ ಹೊಕ್ಕು, \q2 ಬಂಡೆಗಳನ್ನು ಹತ್ತುವರು. \q1 ಪಟ್ಟಣಗಳೆಲ್ಲಾ ನಾಶವಾಗುವುವು. \q2 ಅವುಗಳಲ್ಲಿ ಒಬ್ಬನಾದರೂ ವಾಸಮಾಡನು. \b \q1 \v 30 ಆಗ ನೀನು ನಿರ್ಜನನಾದಾಗ ಏನು ಮಾಡುವೆ? \q2 ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? \q2 ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? \q1 ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? \q2 ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. \q1 ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; \q2 ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ. \b \q1 \v 31 ಏಕೆಂದರೆ ಪ್ರಸವವೇದನೆ ಪಡುವವಳಂತೆ, \q2 ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ \q1 ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. \q2 ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, \q1 “ಅಯ್ಯೋ, ನನಗೀಗ ಕಷ್ಟ! \q2 ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” \q2 ಎಂದು ಅರಚಿಕೊಳ್ಳುತ್ತಾಳೆ. \c 5 \s1 ಒಬ್ಬನೂ ನೀತಿವಂತನು ಇಲ್ಲ \q1 \v 1 “ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, \q2 ನ್ಯಾಯವನ್ನು ಮಾಡುವವನೂ, \q2 ಸತ್ಯವನ್ನು ಹುಡುಕುವವನೂ \q1 ನಿಮಗೆ ಒಬ್ಬನಾದರೂ ಸಿಕ್ಕುವನೋ? \q2 ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, \q1 ತಿಳಿದು ಹುಡುಕಿರಿ; \q2 ಸಿಕ್ಕಿದರೆ ಅವಳಿಗೆ ಮನ್ನಿಸುವೆನು. \q1 \v 2 ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ \q2 ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.” \b \q1 \v 3 ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? \q2 ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; \q2 ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. \q1 ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. \q2 ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ. \q1 \v 4 ಆದ್ದರಿಂದ ನಾನು, “ನಿಶ್ಚಯವಾಗಿ ಇವರು ಬಡವರು ಮತ್ತು ಬುದ್ಧಿಹೀನರು. \q2 ಏಕೆಂದರೆ, ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ಅರಿಯರು. \q1 \v 5 ನಾನು ನಾಯಕರ ಬಳಿಗೆ ಹೋಗಿ, \q2 ಅವರ ಸಂಗಡ ಮಾತನಾಡುವೆನು. \q1 ಏಕೆಂದರೆ, ಅವರು ಯೆಹೋವ ದೇವರ ಮಾರ್ಗವನ್ನೂ \q2 ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿದಿದ್ದಾರೆ,” \q1 ಆದರೆ ಇವರು ಕೂಡ ಒಮ್ಮತವಾಗಿ ನೊಗವನ್ನು ಮುರಿದು, \q2 ಬಂಧನಗಳನ್ನು ಹರಿದುಬಿಟ್ಟಿದ್ದಾರೆ. \q1 \v 6 ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. \q2 ಕಾಡಿನ ತೋಳವು ಅವರನ್ನು ಸೂರೆಮಾಡುವುದು. \q1 ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. \q2 ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. \q1 ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. \q2 ಅವರ ಹಿಂಜಾರುವಿಕೆಯು ಹೆಚ್ಚಾಗಿವೆ. \b \q1 \v 7 ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? \q2 ನಿನ್ನ ಮಕ್ಕಳು ನನ್ನನ್ನು ಬಿಟ್ಟು \q2 ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. \q1 ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, \q2 ಅವರು ವ್ಯಭಿಚಾರ ಮಾಡಿದ್ದಾರೆ. \q2 ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ. \q1 \v 8 ಅವರು ಕುದುರೆಗಳಂತೆ, ಬಲಶಾಲಿ ಮತ್ತು ಕಾಮವನ್ನು ಹೊಂದಿದವರಾಗಿದ್ದಾರೆ. \q2 ತಮ್ಮ ತಮ್ಮ ನೆರೆಯವರ ಹೆಂಡತಿಯರನ್ನು ಕಂಡು ಹೇಕರಿಸುತ್ತಾರೆ. \q1 \v 9 ಇವುಗಳ ನಿಮಿತ್ತ ನಾನು ಶಿಕ್ಷಿಸಬಾರದೇ? \q2 ಇಂಥಾ ಜನಾಂಗಕ್ಕೆ ನನ್ನ ಪ್ರಾಣವು \q1 ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 10 ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. \q2 ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. \q1 ಅದರ ರೆಂಬೆಗಳನ್ನು ತೆಗೆದುಹಾಕಿರಿ \q2 ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ. \q1 \v 11 ಇಸ್ರಾಯೇಲನ ಮನೆತನದವರೂ, \q2 ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾರೆ, \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 12 ಆ ಜನರು ಯೆಹೋವ ದೇವರನ್ನು ಅಲ್ಲಗಳೆದಿದ್ದಾರೆ. \q2 “ಆತ ಏನು ಮಾಡಿಯಾನು? \q1 ನಮಗೆ ಕೇಡು ಬರುವುದೂ ಇಲ್ಲ, \q2 ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ, \q1 \v 13 ಪ್ರವಾದಿಗಳು ಆಡುವುದೆಲ್ಲಾ ಬರೀ ಗಾಳಿ ಮಾತುಗಳು, \q2 ದೈವೋಕ್ತಿ ಎಂಬುದು ಅವುಗಳಲ್ಲಿ ಇಲ್ಲ, \q2 ಅವರು ಹೇಳುವುದೆಲ್ಲಾ ಅವರಿಗೇ ತಗಲಲಿ,” ಎಂದುಕೊಂಡಿದ್ದಾರೆ. \p \v 14 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: \q1 “ಇಗೋ, ಅವರು ಹೀಗೆ ಮಾತಾಡಿದ್ದರಿಂದ \q2 ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, \q2 ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.” \q1 \v 15 ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ, \q2 ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆ. \q1 ಅದು ಬಲವಾದ ಜನಾಂಗವು. ಪೂರ್ವಕಾಲದ ಜನಾಂಗವು, \q2 ಆ ಜನಾಂಗದ ಭಾಷೆಯನ್ನು ನೀನರಿಯೆ; \q2 ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು. \q1 \v 16 ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ. \q2 ಅವರೆಲ್ಲರೂ ಪರಾಕ್ರಮಶಾಲಿಗಳೇ. \q1 \v 17 ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, \q2 ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. \q1 ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. \q2 ನಿನ್ನ ದ್ರಾಕ್ಷಿ ಲತೆಗಳನ್ನೂ, \q1 ಅಂಜೂರದ ಗಿಡಗಳನ್ನೂ ನುಂಗಿಬಿಡುವರು. \q2 ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು. \p \v 18 “ಆದರೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ಅಳಿಸಿಬಿಡುವುದಿಲ್ಲ,” ಎಂದು ಯೆಹೋವ ದೇವರು ಅನ್ನುತ್ತಾರೆ. \v 19 “ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’ \q1 \v 20 “ಯಾಕೋಬ ವಂಶಜರಲ್ಲಿ ಇದನ್ನು ತಿಳಿಸಿರಿ. \q2 ಯೆಹೂದದಲ್ಲಿ ಪ್ರಕಟಿಸಿರಿ. \q1 \v 21 ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, \q2 ಕಣ್ಣುಗಳಿದ್ದು ಕಾಣದವರೇ, \q2 ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ. \q1 \v 22 ನೀವು ನನಗೆ ಭಯಪಡುವುದಿಲ್ಲವೋ?” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? \q2 ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, \q1 ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. \q2 ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು. \q1 \v 23 ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. \q2 ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ. \q1 \v 24 ತಮ್ಮ ಹೃದಯದಲ್ಲಿ, \q2 ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ \q1 ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ \q2 ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ. \q1 \v 25 ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಇವೆ; \q2 ನಿಮ್ಮ ಪಾಪಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಗೆದಿವೆ. \b \q1 \v 26 “ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. \q2 ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; \q1 ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ \q2 ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ. \q1 \v 27 ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ, \q2 ಅವರ ಮನೆಗಳು ಮೋಸದಿಂದ ತುಂಬಿವೆ. \q1 ಆದ್ದರಿಂದ ಅವರು ಶಕ್ತಿವಂತರೂ, ಐಶ್ವರ್ಯವಂತರೂ ಆಗಿದ್ದಾರೆ. \q2 \v 28 ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. \q1 ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; \q2 ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; \q1 ಆದರೂ ಅವರು ಸಫಲವಾಗುತ್ತಾರೆ, \q2 ಬಡವರ ನ್ಯಾಯವನ್ನು ತೀರಿಸರು. \q1 \v 29 ಇವುಗಳ ನಿಮಿತ್ತ ನಾನು ದಂಡಿಸಬಾರದೋ?” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ಇಂಥಾ ಜನಾಂಗಕ್ಕೆ \q2 ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? \b \q1 \v 30 “ಭಯಂಕರವಾದ ಮತ್ತು ಆಶ್ಚರ್ಯವಾದ \q2 ಕಾರ್ಯವು ದೇಶದಲ್ಲಿ ನಡೆಯುತ್ತದೆ. \q1 \v 31 ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. \q2 ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. \q1 ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. \q2 ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ? \c 6 \s1 ಯೆರೂಸಲೇಮಿನ ಮುತ್ತಿಗೆ \q1 \v 1 “ಓ ಬೆನ್ಯಾಮೀನನ ಮಕ್ಕಳೇ! ನಿಮ್ಮ ಸುರಕ್ಷತೆಗಾಗಿ \q2 ಯೆರೂಸಲೇಮಿನಿಂದ ಓಡಿಹೋಗಿರಿ, \q1 ತೆಕೋವದಲ್ಲಿ ತುತೂರಿ ಊದಿರಿ; \q2 ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. \q1 ಏಕೆಂದರೆ ಕೇಡೂ ದೊಡ್ಡ ನಾಶವೂ \q2 ಉತ್ತರದ ಕಡೆಯಿಂದ ತೋರುತ್ತವೆ. \q1 \v 2 ಸುಂದರಿ ಮತ್ತು ಕೋಮಲಳಾದ \q2 ಚೀಯೋನಿನ ಮಗಳನ್ನು ನಾನು ನಾಶಮಾಡುತ್ತೇನೆ. \q1 \v 3 ಕುರುಬರು ತಮ್ಮ ಮಂದೆಗಳ ಸಂಗಡ ಅವಳ ವಿರುದ್ಧ ಬರುವರು. \q2 ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು. \q2 ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.” \b \q1 \v 4 “ಚೀಯೋನಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ. \q2 ಏಳಿರಿ, ಮಧ್ಯಾಹ್ನದಲ್ಲಿ ದಾಳಿಮಾಡೋಣ. \q1 ನಮಗೆ ಕಷ್ಟ! ಏಕೆಂದರೆ ಹೊತ್ತು ಮುಳುಗುತ್ತದೆ; \q2 ಸಂಜೆಯ ನೆರಳುಗಳು ಉದ್ದವಾಗುತ್ತವೆ. \q1 \v 5 ಏಳಿರಿ, ರಾತ್ರಿಯಲ್ಲಿ ದಾಳಿಮಾಡೋಣ. \q2 ಅವಳ ಕೋಟೆಗಳನ್ನು ನಾಶಮಾಡೋಣ.” \p \v 6 ಏಕೆಂದರೆ, ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, \q1 “ಚೀಯೋನ್ ಸುತ್ತಲಿರುವ ಮರಗಳನ್ನು ಕಡಿಯಿರಿ. \q2 ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ. \q1 ಇದೇ ನೀವು ದಂಡಿಸತಕ್ಕ ಪಟ್ಟಣವು. \q2 ಅವಳಲ್ಲಿ ಬರೀ ದಬ್ಬಾಳಿಕೆಯೇ ತುಂಬಿದೆ. \q1 \v 7 ಬುಗ್ಗೆಯು ನೀರನ್ನು ಹರಿಯ ಮಾಡುವಂತೆ, \q2 ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ. \q1 ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳ ಬರುತ್ತದೆ. \q2 ದುಃಖವೂ ಗಾಯಗಳೂ ಯಾವಾಗಲೂ ನನ್ನ ಮುಂದೆ ಇವೆ. \q1 \v 8 ಓ ಯೆರೂಸಲೇಮೇ, \q2 ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ, \q1 ನಾನು ನಿಮ್ಮನ್ನು ಹಾಳಾಗಿಯೂ, \q2 ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತೆಗೆದುಕೋ.” \p \v 9 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, \q1 “ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿ ಗಿಡದ ಹಾಗೆ \q2 ಪೂರ್ಣವಾಗಿ ಹಕ್ಕಲಾಯುವರು; \q1 ದ್ರಾಕ್ಷಿ ಕೂಡಿಸುವವನ ಹಾಗೆ \q2 ನಿನ್ನ ಕೈಯನ್ನು ರೆಂಬೆಗಳಲ್ಲಿ ಹಿಂದಕ್ಕೆ ತಿರುಗಿಸು.” \b \q1 \v 10 ನಾನು ಯಾರ ಸಂಗಡ ಮಾತನಾಡಲಿ? \q2 ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? \q1 ಇಗೋ, ಅವರು ಆಲೈಸಲಾರದ ಹಾಗೆ \q2 ಅವರ ಕಿವಿ ಮುಚ್ಚಿಹೋಗಿವೆ. \q1 ಇಗೋ, ಯೆಹೋವ ದೇವರ ವಾಕ್ಯವು ಅವನಿಗೆ ನಿಂದೆಯಾಗಿದೆ, \q2 ಅದರಲ್ಲಿ ಅವರಿಗೆ ಸಂತೋಷವಿಲ್ಲ. \q1 \v 11 ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. \q2 ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. \b \q1 “ಅದನ್ನು ದೂರ ಇರುವ ಮಕ್ಕಳ ಮೇಲೆ \q2 ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. \q1 ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, \q2 ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು. \q1 \v 12 ಅವರ ಮನೆಗಳೂ ಹೊಲಗಳೂ, \q2 ಹೆಂಡತಿಯರೂ ಸಹಿತವಾಗಿ ಬೇರೊಬ್ಬರ ಪಾಲಾಗುವುವು. \q1 ಏಕೆಂದರೆ, ದೇಶದ ನಿವಾಸಿಗಳ ಮೇಲೆ \q2 ನನ್ನ ಕೈಚಾಚುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 13 “ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, \q2 ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. \q1 ಪ್ರವಾದಿ ಮೊದಲುಗೊಂಡು ಯಾಜಕರವರೆಗೆ \q2 ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ. \q1 \v 14 ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. \q2 ಸಮಾಧಾನವಿಲ್ಲದಿರುವಾಗ, ‘ಸಮಾಧಾನ, ಸಮಾಧಾನ,’ ಎಂದು ಹೇಳುತ್ತಾರೆ. \q1 \v 15 ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? \q2 ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ. ಲಜ್ಜೆಯನ್ನೇ ಅರಿಯರು. \q2 ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. \q1 ನಾನು ಅವರನ್ನು ದಂಡಿಸುವ ಕಾಲದಲ್ಲಿ, \q2 ಅವರು ಕೆಳಗೆ ಬೀಳುವರು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \p \v 16 ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, \q2 ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, \q1 ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. \q2 ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, \q2 ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು. \q1 \v 17 ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ, \q2 ತುತೂರಿಯ ಶಬ್ದವನ್ನು ಆಲೈಸಿರಿ, ಎಂದೆನು. \q2 ಆದರೆ ಅವರು, ‘ನಾವು ಆಲೈಸುವುದಿಲ್ಲ,’ ಎಂದರು. \q1 \v 18 ಆದ್ದರಿಂದ ಜನಾಂಗಗಳೇ, ಕೇಳಿರಿ; \q2 ಓ ಸಾಕ್ಷಿಗಳೇ, ಅವರಲ್ಲಿ ಇರುವಂಥದ್ದನ್ನು ತಿಳಿದುಕೊಳ್ಳಿರಿ. \q1 \v 19 ಈ ಭೂಮಿಯೇ, ಕೇಳು. \q2 ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ \q2 ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. \q1 ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; \q2 ನನ್ನ ನಿಯಮವನ್ನು ತಿರಸ್ಕರಿಸಿದರು. \q1 \v 20 ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ \q2 ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? \q1 ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. \q2 ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.” \p \v 21 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ಇಗೋ, ನಾನು ಈ ಜನರ ಮುಂದೆ ಅಡೆತಡೆಗಳನ್ನು ಇಡುತ್ತೇನೆ. \q2 ತಂದೆಯೂ, ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು. \q2 ನೆರೆಯವರೂ, ಅವರ ಸ್ನೇಹಿತರೂ ನಾಶವಾಗುವರು.” \p \v 22 ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು. \q2 ದೊಡ್ಡ ಜನಾಂಗವು ಲೋಕದ ಕಟ್ಟಕಡೆಯಿಂದ ಎದ್ದು ಬರುತ್ತದೆ. \q1 \v 23 ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ; \q2 ಅವರು ಕ್ರೂರರು; ಕನಿಕರ ತೋರಿಸುವುದಿಲ್ಲ. \q1 ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. \q2 ಓ ಚೀಯೋನಿನ ಪುತ್ರಿಯೇ, \q1 ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ \q2 ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.” \b \q1 \v 24 ಅದರ ಕೀರ್ತಿಯನ್ನು ಕೇಳಿದ್ದೇವೆ; \q2 ನಮ್ಮ ಕೈಗಳು ಜೋಲಾಡುತ್ತವೆ, \q1 ಸಂಕಟವೂ, ಹೆರುವವಳಂತಿರುವ \q2 ನೋವೂ ನಮ್ಮನ್ನು ಹಿಡಿಯಿತು. \q1 \v 25 ಹೊಲಕ್ಕೆ ಹೋಗಬೇಡ; \q2 ದಾರಿಯಲ್ಲಿ ನಡೆಯಬೇಡ. \q1 ಏಕೆಂದರೆ ಶತ್ರುವಿನ ಖಡ್ಗವೂ, \q2 ಅಂಜಿಕೆಯೂ ಸುತ್ತಲೂ ಇವೆ. \q1 \v 26 ಓ ನನ್ನ ಮಗಳೇ, ನನ್ನ ಪ್ರಜೆಗಳೇ, \q2 ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು. \q1 ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ, \q2 ಬಹು ಕಠಿಣವಾದ ಗೋಳಾಟವನ್ನು ಮಾಡು. \q1 ನಾಶ ಮಾಡುವವನು ಫಕ್ಕನೆ \q2 ನಮ್ಮ ಮೇಲೆ ಬರುವನು. \b \q1 \v 27 “ನೀನು ನನ್ನ ಜನರ ಮಾರ್ಗವನ್ನು \q2 ಪರೀಕ್ಷಿಸಿ ತಿಳಿದುಕೊಳ್ಳುವಂತೆ, \q1 ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ \q2 ಲೋಹ ಶೋಧಕನನ್ನಾಗಿ ನೇಮಿಸಿದ್ದೇನೆ. \q1 \v 28 ಅವರೆಲ್ಲರು ಕಠಿಣ ದ್ರೋಹಿಗಳು, \q2 ಚಾಡಿ ಹೇಳುತ್ತಾ ತಿರುಗಾಡುವವರು. \q1 ಕಂಚು, ಕಬ್ಬಿಣಕ್ಕೆ ಸಮಾನರು, \q2 ಎಲ್ಲರೂ ಕೇಡಿಗರು. \q1 \v 29 ಕುಲುಮೆಯು ಸುಡುತ್ತದೆ, \q2 ಬೆಂಕಿಯೊಳಗಿಂದ ಸೀಸವು ಕರಗುತ್ತದೆ. \q1 ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಪರಿಶ್ರಮವೆಲ್ಲ ವ್ಯರ್ಥ, \q2 ಕೆಟ್ಟವರಿಂದ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ. \q1 \v 30 ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವುದು; \q2 ಏಕೆಂದರೆ, ಯೆಹೋವ ದೇವರು ಅವರನ್ನು ತಳ್ಳಿದ್ದಾರೆ.” \c 7 \s1 ಸುಳ್ಳು ಆರಾಧನೆ ನಿಷ್ಪ್ರಯೋಜಕ \p \v 1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ: \v 2 “ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: \p “ ‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. \v 3 ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆಮಾಡಿರಿ. ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು. \v 4 “ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ. \v 5 ಏಕೆಂದರೆ ನೀವು ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ, ಪೂರ್ಣವಾಗಿ ನೆಟ್ಟಗೆ ಮಾಡಿದರೆ; ಮನುಷ್ಯನಿಗೂ, ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯ ನಡೆಸಿದರೆ; \v 6 ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ; \v 7 ನಾನು ನಿಮ್ಮನ್ನು ಈ ಸ್ಥಳದಲ್ಲಿ ಎಂದರೆ, ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು. \v 8 ನೀವು ಪ್ರಯೋಜನವಿಲ್ಲದ ಮೋಸಕರ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ. \p \v 9 “ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ, \v 10 ಆಮೇಲೆ ಬಂದು ನನ್ನ ಹೆಸರನ್ನು ಹೊಂದಿರುವ ಈ ಆಲಯದಲ್ಲಿ ನನ್ನ ಮುಂದೆ ನಿಂತುಕೊಂಡು, “ನಾವು ಸುರಕ್ಷಿತರು” ಎಂದು ಹೇಳಿ ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲಾಗಿದ್ದೇವೆಂದು ಹೇಳುವಿರೋ? \v 11 ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ. \p \v 12 “ ‘ಆದರೆ ಈಗ ಶೀಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಎಂದರೆ, ನಾನು ಮೊದಲು ನನ್ನ ಹೆಸರನ್ನು ಸ್ಥಾಪಿಸಿದ ಸ್ಥಳಕ್ಕೆ ಹೋಗಿರಿ; ಅದಕ್ಕೆ ನಾನು, ನನ್ನ ಜನರಾದ ಇಸ್ರಾಯೇಲರ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ. \v 13 ಈಗ ಯೆಹೋವ ದೇವರು ಹೇಳುವುದೇನೆಂದರೆ, ನೀವು ಈ ಕೆಲಸಗಳನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮನ್ನು ಕರೆದರೂ, ನೀವು ಉತ್ತರ ಕೊಡದೆ ಹೋದಿರಿ. \v 14 ಆದಕಾರಣ ನನ್ನ ಹೆಸರಿನಿಂದ ಕರೆಯಲಾದಂಥ ಮತ್ತು ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ, ನಿಮ್ಮ ಪಿತೃಗಳಿಗೆ ಕೊಟ್ಟ ಸ್ಥಳಕ್ಕೂ, ಶೀಲೋವಿಗೆ ಮಾಡಿದ ಹಾಗೆ ಮಾಡುವೆನು. \v 15 ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’ \p \v 16 “ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ. ಏಕೆಂದರೆ ನಾನು ಅದನ್ನು ಕೇಳಿಸಿಕೊಳ್ಳುವುದಿಲ್ಲ. \v 17 ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡುವುದನ್ನು ನೀನು ನೋಡುವುದಿಲ್ಲವೋ? \v 18 ‘ಗಗನದ ಒಡತಿ,’ ಎಂದು ಇವರು ಕರೆಯುವ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯ ದೇವತೆಗಳಿಗೆ ಪಾನ ನೈವೇದ್ಯವನ್ನು ಅರ್ಪಿಸುತ್ತಾರೆ.” \v 19 ಯೆಹೋವ ದೇವರು ಅನ್ನುತ್ತಾನೆ: “ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖ ಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೇ?” \p \v 20 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ. \p \v 21 “ ‘ಇಸ್ರಾಯೇಲಿನ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ, ಮಾಂಸವನ್ನು ತಿನ್ನಿರಿ. \v 22 ಏಕೆಂದರೆ, ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ದಿವಸದಲ್ಲಿ, ದಹನಬಲಿಗಳ ಮತ್ತು ಬಲಿಗಳ ವಿಷಯ ನಾನು ಅವರ ಸಂಗಡ ಮಾತನಾಡಲಿಲ್ಲ; ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. \v 23 ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು. \v 24 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು. \v 25 ನಿಮ್ಮ ಪಿತೃಗಳು ಈಜಿಪ್ಟ್ ದೇಶವನ್ನು ಬಿಟ್ಟುಹೋದ ದಿನದಿಂದ ಇಂದಿನವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ಪ್ರತಿದಿನವೂ ನಿಮ್ಮ ಬಳಿಗೆ ಕಳುಹಿಸುತ್ತಾ ಬಂದೆನು. \v 26 ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’ \p \v 27 “ಆದ್ದರಿಂದ ನೀನು ಈ ಮಾತುಗಳನ್ನೆಲ್ಲಾ ಅವರಿಗೆ ಹೇಳಬೇಕು. ಆದರೆ ಅವರು ನಿನ್ನ ಮಾತನ್ನು ಕೇಳುವುದಿಲ್ಲ. ಅವರನ್ನು ನೀನು ಕರೆಯುವೆ. ಆದರೆ ಅವರು ನಿನಗೆ ಉತ್ತರ ಕೊಡುವುದಿಲ್ಲ. \v 28 ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ. \p \v 29 “ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ. \s1 ಸಂಹಾರದ ತಗ್ಗು \p \v 30 “ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ. \v 31 ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ. \v 32 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ದಿನಗಳು ಬರಲಿವೆ, ಆ ಕಣಿವೆಗೆ ತೋಫೆತ್ ಮತ್ತು ಬೆನ್ ಹಿನ್ನೋಮ್ ಎಂಬ ಹೆಸರುಗಳು ಹೋಗಿ, ಸಂಹಾರದ ಕಣಿವೆ ಎಂದು ಕರೆಯಲಾಗುವುದು. ಏಕೆಂದರೆ, ಸ್ಥಳವಿಲ್ಲದವರೆಗೂ ತೋಫೆತಿನಲ್ಲಿ ಅವರು ಹೂಳಿಡುವರು. \v 33 ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು. ಯಾರೂ ಅವುಗಳನ್ನು ಬೆದರಿಸುವುದಿಲ್ಲ. \v 34 ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು. \c 8 \p \v 1 “ ‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು. \v 2 ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು. \v 3 ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’ \s1 ಪಾಪ ಮತ್ತು ದಂಡನೆ \p \v 4 “ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ಅವರು ಬಿದ್ದು ಮತ್ತೆ ಏಳರೋ? \q2 ಹಿಂದಿರುಗಿದವನು ಮತ್ತೆ ಬರುವುದಿಲ್ಲವೋ? \q1 \v 5 ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ \q2 ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? \q1 ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, \q2 ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ. \q1 \v 6 ನಾನು ಕಿವಿಗೊಟ್ಟು ಕೇಳಿದೆನು. \q2 ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. \q1 ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” \q2 ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. \q1 ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, \q2 ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ. \q1 \v 7 ಹೌದು, ಆಕಾಶದಲ್ಲಿಯ ಬಕಪಕ್ಷಿಯು \q2 ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. \q1 ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ \q2 ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. \q1 ಆದರೆ ನನ್ನ ಜನರು ಯೆಹೋವ ದೇವರು \q2 ಅಪೇಕ್ಷಿಸುವುದನ್ನು ಅರಿಯರು. \b \q1 \v 8 “ ‘ “ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು \q2 ನಮ್ಮ ಸಂಗಡ ಇದೆ,” ಎಂದು ನೀವು ಹೇಳುವುದು ಹೇಗೆ? \q1 ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. \q2 ನಿಯಮಶಾಸ್ತ್ರಿಗಳ ಲೇಖನಿಯು ಮೋಸಕರವಾಗಿದೆ. \q1 \v 9 ಜ್ಞಾನಿಗಳು ನಾಚಿಕೊಂಡಿದ್ದಾರೆ. \q2 ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. \q1 ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. \q2 ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ. \q1 \v 10 ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, \q2 ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. \q1 ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ \q2 ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. \q1 ಪ್ರವಾದಿ ಮೊದಲುಗೊಂಡು ಯಾಜಕರವರೆಗೆ \q2 ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ. \q1 \v 11 ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. \q2 ಸಮಾಧಾನವಿಲ್ಲದಿರುವಾಗ, “ಸಮಾಧಾನ, ಸಮಾಧಾನ,” ಎಂದು ಹೇಳುತ್ತಾರೆ. \q1 \v 12 ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? \q2 ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. \q2 ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. \q1 ನಾನು ಅವರನ್ನು ದಂಡಿಸುವ ಕಾಲದಲ್ಲಿ, \q2 ಅವರು ಕೆಳಗೆ ಬೀಳುವರು, \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 13 “ ‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, \q2 ಎಂದು ಯೆಹೋವ ದೇವರು ಹೇಳುತ್ತಾರೆ. \q2 ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. \q1 ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. \q2 ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’ ” \b \q1 \v 14 ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? \q2 ನೀವು ಕೂಡಿಕೊಳ್ಳಿರಿ, \q1 ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, \q2 ಅಲ್ಲಿ ನಾಶವಾಗೋಣ. \q1 ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, \q2 ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, \q2 ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ. \q1 \v 15 ಸಮಾಧಾನಕ್ಕೆ ಕಾದುಕೊಂಡೆವು, \q2 ಆದರೆ ಒಳ್ಳೆಯದೇನೂ ಬರಲಿಲ್ಲ. \q1 ಆರೋಗ್ಯದ ಸಮಯಕ್ಕೆ ಕಾದಿದ್ದೆವು. \q2 ಆದರೆ ಇಗೋ, ಆತಂಕವನ್ನು ನೋಡುತ್ತೇವೆ. \q1 \v 16 ಅವನ ಕುದುರೆಗಳ ಶ್ವಾಸವು \q2 ದಾನಿನಿಂದ ಕೇಳಿಸಿತು. \q1 ಅವನ ಬಲವಾದವುಗಳ ಕೆನೆತದ \q2 ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. \q1 ಏಕೆಂದರೆ, ಅವರು \q2 ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, \q2 ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ. \b \q1 \v 17 “ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ. \q2 ಅವು ನಿಮ್ಮನ್ನು ಕಚ್ಚುವವು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 18 ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, \q2 ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. \q1 \v 19 ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: \q2 “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? \q2 ಅವಳ ಅರಸನು ಅವಳಲ್ಲಿ ಇಲ್ಲವೋ?” \b \q1 ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, \q2 ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ? \b \q1 \v 20 “ಸುಗ್ಗಿ ಮುಗಿಯಿತು. \q2 ಬೇಸಿಗೆ ಕಾಲ ತೀರಿತು. \q2 ನಾವಾದರೋ ರಕ್ಷಣೆ ಹೊಂದಲಿಲ್ಲ.” \b \q1 \v 21 ನನ್ನ ಜನರು ತುಳಿತಕ್ಕೆ ಒಳಗಾದದ್ದರಿಂದ ನಾನೂ ತುಳಿತಕ್ಕೆ ಒಳಗಾದೆನು. \q2 ದುಃಖಿಸಿದೆನು. ಭಯವು ನನ್ನನ್ನು ಹಿಡಿಯಿತು. \q1 \v 22 ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? \q2 ಅಲ್ಲಿ ವೈದ್ಯನಿಲ್ಲವೋ? \q2 ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ? \c 9 \q1 \v 1 ಓ, ನನ್ನ ತಲೆ ಚಿಲುಮೆಯೂ, \q2 ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, \q1 ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ \q2 ಹಗಲುರಾತ್ರಿ ಅಳುವೆನು. \q1 \v 2 ಆಹಾ, ಮರುಭೂಮಿಯಲ್ಲಿ \q2 ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, \q1 ಆಗ ನನ್ನ ಜನರನ್ನು ಬಿಟ್ಟು \q2 ಹೊರಟು ಹೋಗುತ್ತಿದ್ದೆನು. \q1 ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, \q2 ವಂಚಕರ ಕೂಟವೇ. \b \q1 \v 3 “ಅವರು ತಮ್ಮ ನಾಲಿಗೆಗಳನ್ನು \q2 ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. \q1 ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. \q2 ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, \q1 ನನ್ನನ್ನು ಅರಿಯದೆ ಇದ್ದಾರೆ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 4 “ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. \q2 ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. \q1 ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; \q2 ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು. \q1 \v 5 ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ \q2 ಸತ್ಯವನ್ನು ಮಾತನಾಡರು. \q1 ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. \q2 ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ. \q1 \v 6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಇದೆ. \q2 ಮೋಸದಿಂದಲೇ ನನ್ನನ್ನು ನಿರಾಕರಿಸುತ್ತಾರೆ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \p \v 7 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: \q1 “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. \q2 ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ \q2 ನಾನು ಇನ್ನೇನು ಮಾಡಲಿ? \q1 \v 8 ಅವರ ನಾಲಿಗೆ ಎಸೆದ ಬಾಣದಂತಿದೆ. \q2 ಅದು ಮೋಸವನ್ನಾಡುತ್ತದೆ. \q1 ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ, \q2 ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾರೆ. \q1 \v 9 ಇವುಗಳ ನಿಮಿತ್ತ ನಾನು ಅವರನ್ನು ದಂಡಿಸಬಾರದೋ?” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು \q2 ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?” \b \q1 \v 10 ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, \q2 ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. \q1 ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. \q2 ದನಗಳ ಕೂಗು ಕಿವಿಗೆ ಬೀಳುವುದಿಲ್ಲ. \q1 ಆಕಾಶದ ಪಕ್ಷಿಗಳೂ, \q2 ಮೃಗಗಳೂ ಸಹ ಓಡಿ ಹೋಗಿವೆ. \b \q1 \v 11 ಯೆರೂಸಲೇಮನ್ನು ದಿಬ್ಬಗಳಾಗಿಯೂ, \q2 ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. \q1 ಯೆಹೂದದ ಪಟ್ಟಣಗಳನ್ನು \q2 ನಿವಾಸವಿಲ್ಲದೆ ಹಾಳು ಮಾಡುತ್ತೇನೆ. \p \v 12 ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು? \p \v 13 ಯೆಹೋವ ದೇವರು ಹೇಳುವುದೇನೆಂದರೆ, “ನಾನು ಅವರ ಮುಂದೆ ಇಟ್ಟ ನನ್ನ ನಿಯಮವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ, \v 14 ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ, ತಮ್ಮ ಪಿತೃಗಳು ಅವರಿಗೆ ಬೋಧಿಸಿದ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.” \v 15 ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ. \v 16 ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.” \b \p \v 17 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, \q1 “ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; \q2 ಜಾಣೆಯರನ್ನು ಕರೆಕಳುಹಿಸಿರಿ, ಅವರು ಬರಲಿ. \q1 \v 18 ಅವರು ತ್ವರೆಪಟ್ಟು \q2 ನಮಗೋಸ್ಕರ ಗೋಳಾಟವನ್ನು ಎತ್ತಲಿ; \q1 ನಮ್ಮ ಕಣ್ಣುಗಳು ಕಣ್ಣೀರು ಸುರಿಸಲಿ; \q2 ನಮ್ಮ ರೆಪ್ಪೆಗಳು ನೀರು ಎರೆಯಲಿ. \q1 \v 19 ‘ನಾವು ಹೇಗೆ ಹಾಳಾದೆವು, \q2 ನಾವು ದೇಶವನ್ನು ಬಿಟ್ಟದ್ದರಿಂದಲೂ, \q2 ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ \q1 ಬಹಳವಾಗಿ ನಾಚಿಕೆ ಪಡುತ್ತೇವೆ, \q2 ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿಬಂತು.’ ” \b \q1 \v 20 ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. \q2 ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. \q1 ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, \q2 ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ. \q1 \v 21 ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. \q2 ನಮ್ಮ ಕೋಟೆಗಳಲ್ಲಿ ಸೇರಿತು. \q1 ಹೊರಗಡೆ ಮಕ್ಕಳನ್ನೂ, \q2 ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ. \p \v 22 ಯೆಹೋವ ದೇವರು ನನಗೆ ಹೀಗೆಂದರು: \q1 “ ‘ಮನುಷ್ಯರ ಹೆಣಗಳು \q2 ಗೊಬ್ಬರದಂತೆ ಬಯಲಿನಲ್ಲಿ ಬೀಳುವುವು. \q1 ಧಾನ್ಯ ಕೊಯ್ಯುವವನು ಉಳಿಸಿದ ಕೈಹಿಡಿಯಂತೆ \q2 ಕೂಡಿಸುವವನಿಲ್ಲದೆ ಬೀಳುವುವು.’ ” \p \v 23 ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. \q2 ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. \q2 ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ. \q1 \v 24 ಆದರೆ ಹೆಚ್ಚಳ ಪಡುವವನು, \q2 ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, \q1 ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು \q2 ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. \q2 ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \p \v 25-26 “ಇಗೋ, ನಾನು ಸುನ್ನತಿ ಇಲ್ಲದವರ ಸಂಗಡ ಸುನ್ನತಿ ಉಳ್ಳವರೆಲ್ಲರನ್ನೂ, ಈಜಿಪ್ಟನ್ನೂ, ಯೆಹೂದವನ್ನೂ, ಎದೋಮನ್ನೂ, ಅಮ್ಮೋನನ ಮಕ್ಕಳನ್ನೂ, ಮೋವಾಬನ್ನೂ, ಮರುಭೂಮಿಯ ನಿವಾಸಿಗಳಾಗಿರುವ ಕಟ್ಟಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿವಸಗಳು ಬರುತ್ತವೆ. ಏಕೆಂದರೆ ಈ ಜನಾಂಗಗಳವರು ಸುನ್ನತಿಯಿಲ್ಲದವರು. ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿ ಇಲ್ಲದವರಾಗಿದ್ದಾರೆ,” ಎಂದು ಯೆಹೋವ ದೇವರು ಅನ್ನುತ್ತಾರೆ. \c 10 \s1 ದೇವರು ಮತ್ತು ದೇವತೆಗಳು \p \v 1 ಇಸ್ರಾಯೇಲಿನ ವಂಶದವರೇ, ಯೆಹೋವ ದೇವರು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ. \v 2 ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. \q2 ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. \q2 ನೀವು ಅವುಗಳಿಗೆ ಹೆದರಬೇಡಿರಿ. \q1 \v 3 ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. \q2 ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. \q2 ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ. \q1 \v 4 ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ. \q2 ಮೊಳೆಗಳಿಂದಲೂ ಸುತ್ತಿಗೆಗಳಿಂದಲೂ ಚಲಿಸದ ಹಾಗೆ \q2 ಅದನ್ನು ಬಿಗಿಸುತ್ತಾರೆ. \q1 \v 5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, \q2 ಅವರ ವಿಗ್ರಹಗಳು ಮಾತನಾಡುವುದಿಲ್ಲ. \q1 ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, \q2 ಏಕೆಂದರೆ ಅವು ನಡೆಯಲಾರವು. \q1 ಅವುಗಳಿಗೆ ಭಯಪಡಬೇಡಿರಿ. \q2 ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. \q2 ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ. \b \q1 \v 6 ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. \q2 ನೀವು ಮಹೋತ್ತಮರು, \q2 ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು. \q1 \v 7 ಓ ಜನಾಂಗಗಳ ಅರಸರಾದವರೇ, \q2 ನಿಮಗೆ ಭಯಪಡದವನ್ಯಾರು? \q2 ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. \q1 ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, \q2 ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ \q2 ನಿಮ್ಮ ಹಾಗೆ ಯಾರೂ ಇಲ್ಲ. \b \q1 \v 8 ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. \q2 ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ. \q1 \v 9 ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, \q2 ಬಂಗಾರವನ್ನು ಊಫಜಿನಿಂದ ತರುತ್ತಾರೆ. \q1 ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. \q2 ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. \q2 ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ. \q1 \v 10 ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. \q2 ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. \q1 ಅವರ ರೌದ್ರದಿಂದ ಭೂಮಿ ಕಂಪಿಸುವುದು. \q2 ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು. \p \v 11 “ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’ ” \q1 \v 12 ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, \q2 ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, \q2 ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ. \q1 \v 13 ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, \q2 ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. \q1 ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. \q2 ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ. \b \q1 \v 14 ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. \q2 ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. \q1 ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, \q2 ಅವುಗಳಲ್ಲಿ ಉಸಿರೇ ಇಲ್ಲ. \q1 \v 15 ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. \q2 ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು. \q1 \v 16 ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. \q2 ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, \q1 ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. \q2 ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ. \s1 ಸಮೀಪಿಸುವ ಶತ್ರು ಬಾಧೆ \q1 \v 17 ಮುತ್ತಿಗೆಗೆ ಒಳಗಾದವರೇ, ನಿಮ್ಮ ದೇಶ ಬಿಡಲು \q2 ನಿಮ್ಮ ಸೊತ್ತುಗಳನ್ನು ಕೂಡಿಸಿರಿ. \q1 \v 18 ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: \q2 “ಇಗೋ, ನಾನು ಈ ಒಂದೇ ಸಾರಿ \q2 ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. \q1 ಅವರಿಗೆ ತಗಲುವ ಹಾಗೆ \q2 ಅವರನ್ನು ಸಂಕಟಪಡಿಸುತ್ತೇನೆ.” \b \q1 \v 19 ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, \q2 ನನ್ನ ಗಾಯವು ವಾಸಿಪಡಿಸಲಾಗದು. \q1 ಆದರೆ ನಾನು ನಿಶ್ಚಯವಾಗಿ, \q2 “ಇದು ನನ್ನ ರೋಗ, ಇದನ್ನು ನಾನು ಸಹಿಸಲೇಬೇಕಾಗಿದೆ,” ಎಂದೆನು. \q1 \v 20 ನನ್ನ ಗುಡಾರವು ಸೂರೆಯಾಯಿತು; \q2 ನನ್ನ ಹಗ್ಗಗಳೆಲ್ಲಾ ಹರಿದಿವೆ. \q1 ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ; ಅವರು ಇಲ್ಲ. \q2 ಇನ್ನು ಮೇಲೆ ನನ್ನ ಡೇರೆಯನ್ನು ಹರಡುವುದಕ್ಕೂ, \q2 ನನ್ನ ಪರದೆಗಳನ್ನು ನಿಲ್ಲಿಸುವುದಕ್ಕೂ ಒಬ್ಬನೂ ಇಲ್ಲ. \q1 \v 21 ಏಕೆಂದರೆ, ಕುರುಬರು ಪಶುಗಳಂತಾದರು. \q2 ಅವರು ಯೆಹೋವ ದೇವರನ್ನು ಹುಡುಕಲಿಲ್ಲ. \q1 ಆದ್ದರಿಂದ ಅವರು ಸಫಲವಾಗುವುದಿಲ್ಲ. \q2 ಅವರ ಮಂದೆಗಳೆಲ್ಲಾ ಚದರಿಸಲಾಗುವುವು. \q1 \v 22 ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, \q2 ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, \q1 ಸುದ್ದಿಯ ಶಬ್ದವೂ, \q2 ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ. \s1 ಯೆರೆಮೀಯನ ಪ್ರಾರ್ಥನೆ \q1 \v 23 ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, \q2 ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು. \q1 \v 24 ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, \q2 ನಿಮ್ಮ ಕೋಪದಲ್ಲಿ ಅಲ್ಲ. \q2 ಇಲ್ಲವಾದರೆ ನಾನು ಇಲ್ಲದೆಹೋಗುವೆನು. \q1 \v 25 ನಿಮ್ಮನ್ನು ತಿಳಿಯದವರ ಮೇಲೆಯೂ, \q2 ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, \q2 ನಿಮ್ಮ ಕೋಪವನ್ನು ಸುರಿದುಬಿಡಿರಿ. \q1 ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. \q2 ಹೌದು, ಅವರನ್ನು ನುಂಗಿದ್ದಲ್ಲದೆ, \q2 ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ. \c 11 \s1 ಒಡಂಬಡಿಕೆ ಮುರಿದಿದ್ದು \p \v 1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ, \v 2 “ಒಡಂಬಡಿಕೆಯ ಈ ವಚನಗಳನ್ನು ಕೇಳಿ, ಯೆಹೂದ್ಯರಿಗೂ ಯೆರೂಸಲೇಮಿನ ನಿವಾಸಿಗಳಿಗೂ ಸಾರು. \v 3 ನೀನು ಅವರಿಗೆ ಹೇಳಬೇಕಾದುದು: ಇಸ್ರಾಯೇಲ್ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ. \v 4 ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು. \v 5 ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” \p “ಓ ಯೆಹೋವ ದೇವರೇ, ಹಾಗೆಯೇ ಆಗಲಿ\f + \fr 11:5 \fr*\ft ಅಥವಾ \ft*\fqa ಆಮೆನ್\fqa*\f*,” ಎಂದೆನು. \p \v 6 ತರುವಾಯ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯ ಬೀದಿಗಳಲ್ಲಿಯೂ ಸಾರಿ ಹೇಳು. ‘ಹೇಗೆಂದರೆ, ಈ ಒಡಂಬಡಿಕೆಯ ಮಾತುಗಳನ್ನು ಕೇಳಿ, ಅವುಗಳನ್ನು ಮಾಡಿರಿ. \v 7 ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ. \v 8 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’ ” \p \v 9 ತರುವಾಯ, ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ. \v 10 ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ. \v 11 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ. \v 12 ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ. \v 13 ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’ \p \v 14 “ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು. \q1 \v 15 “ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, \q2 ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. \q2 ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? \q1 ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.” \b \q1 \v 16 ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ \q2 ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. \q1 ದೊಡ್ಡ ಗದ್ದಲದಿಂದ ಅದರ \q2 ಮೇಲೆ ಬೆಂಕಿ ಹತ್ತಿಸುವನು. \q2 ಅದರ ಕೊಂಬೆಗಳು ಮುರಿದು ಹೋಗುವುವು. \m \v 17 ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ. \s1 ಯೆರೆಮೀಯನ ವಿರುದ್ಧ ಒಳಸಂಚು \p \v 18 ಯೆಹೋವ ದೇವರು ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು. \v 19 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. \q1 “ಮರವನ್ನು ಫಲ ಸಹಿತ ನಾಶ ಪಡಿಸೋಣ, \q2 ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, \q2 ಅವನ ಹೆಸರೇ ಇಲ್ಲದಂತಾಗಲಿ.” \q1 \v 20 ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, \q2 ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, \q1 ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. \q2 ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ. \p \v 21 ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ, \v 22 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು. \v 23 ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.” \c 12 \s1 ಯೆರೆಮೀಯನು ದೂರು ಹೇಳಿಕೊಂಡದ್ದು \q1 \v 1 ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, \q2 ನೀವು ನೀತಿವಂತರೇ ಆಗಿದ್ದೀರಿ. \q1 ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. \q2 ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? \q2 ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ? \q1 \v 2 ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದು ಏಕೆ? ನೀವು ಅವರನ್ನು ನಾಟಿದ್ದೀರಿ, \q2 ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ, \q1 ನೀವು ಅವರ ಬಾಯಿಗೆ ಸಮೀಪ, \q2 ಅಂತರಿಂದ್ರಿಯಕ್ಕೆ ದೂರ. \q1 \v 3 ಯೆಹೋವ ದೇವರೇ, ನೀವು ನನ್ನನ್ನು ತಿಳಿದಿದ್ದೀರಿ, \q2 ನನ್ನನ್ನು ನೋಡುತ್ತಾ ನಿಮ್ಮೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀರಿ, \q2 ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡಿರಿ. \q1 \v 4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, \q2 ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? \q1 ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ \q2 ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; \q1 ಆಹಾ, ಅವನು ನಮ್ಮ ಅಂತ್ಯ ಗತಿಯನ್ನು \q2 ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ. \s1 ದೇವರ ಉತ್ತರ \q1 \v 5 “ಕಾಲಾಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ, \q2 ಕುದುರೆಗಳ ಸಂಗಡ ಹೇಗೆ ಹೋರಾಡುವೆ? \q2 ನೀನು ಸುರಕ್ಷಿತವಾದ ದೇಶದಲ್ಲಿ ಎಡವಿದರೆ, \q1 ಯೊರ್ದನಿನ ದಟ್ಟ ಅಡವಿಯಲ್ಲಿ ಹೇಗೆ ಸುಧಾರಿಸುವೆ? \q1 \v 6 ಏಕೆಂದರೆ, ನಿನ್ನ ಸಹೋದರರೂ, \q2 ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. \q2 ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. \q1 ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, \q2 ಅವರನ್ನು ನಂಬಬೇಡ. \b \q1 \v 7 “ನನ್ನ ಮನೆಯನ್ನು ಬಿಟ್ಟಿದ್ದೇನೆ, \q2 ನನ್ನ ಸೊತ್ತನ್ನು ತ್ಯಜಿಸಿದ್ದೇನೆ. \q1 ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು \q2 ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ. \q1 \v 8 ನನ್ನ ಸೊತ್ತು ನನಗೆ \q2 ಅಡವಿಯಲ್ಲಿರುವ ಸಿಂಹದ ಹಾಗಾಯಿತು. \q1 ಅದು ನನಗೆ ವಿರೋಧವಾಗಿ ಕೂಗುತ್ತದೆ. \q2 ಆದ್ದರಿಂದ ಅದನ್ನು ಹಗೆ ಮಾಡಿದ್ದೇನೆ. \q1 \v 9 ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. \q2 ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. \q2 ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ. \q1 \v 10 ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; \q2 ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; \q1 ನಾನು ಮೆಚ್ಚಿದ ಭಾಗವನ್ನು \q2 ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ. \q1 \v 11 ಅದನ್ನು ಹಾಳು ಮಾಡಿದ್ದಾರೆ. \q2 ಅದು ಒಣಗಿ ಬರಿದಾಗಿ ಹೋಗಿದೆ. \q1 ದೇಶವೆಲ್ಲಾ ಹಾಳಾಯಿತು. \q2 ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವುದಿಲ್ಲ. \q1 \v 12 ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ \q2 ನಾಶಮಾಡುವವರು ಬಂದಿದ್ದಾರೆ. \q1 ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ \q2 ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. \q2 ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ. \q1 \v 13 ಗೋಧಿಯನ್ನು ಬಿತ್ತಿದ್ದಾರೆ, \q2 ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, \q1 ಆದರೆ ಪ್ರಯೋಜನವಾಗುವುದಿಲ್ಲ. \q2 ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.” \p \v 14 ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು. \v 15 ನಾನು ಅವರನ್ನು ಕಿತ್ತು ಹಾಕಿದ ಮೇಲೆ, ನಾನು ಹಿಂದಿರುಗಿ ಅವರನ್ನು ಕರುಣಿಸುವೆನು. ತಮ್ಮ ತಮ್ಮ ಸೊತ್ತಿಗೂ, ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು. \v 16 ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು. \v 17 ಆದರೆ ಅವರು ಕೇಳದೆ ಹೋದರೆ, ಆ ಜನಾಂಗವನ್ನು ಸಂಪೂರ್ಣವಾಗಿ ಕಿತ್ತು ನಾಶಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ. \c 13 \s1 ನಡುಕಟ್ಟಿನ ಸಾಮ್ಯ \p \v 1 ಯೆಹೋವ ದೇವರು ನನಗೆ, “ನೀನು ಹೋಗಿ, ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು. \v 2 ನಾನು ಯೆಹೋವ ದೇವರ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆ. \p \v 3 ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು, \v 4 ಯೂಫ್ರೇಟೀಸ್ ನದಿಗೆ ಹೋಗಿ ಅದನ್ನು ಅಲ್ಲಿಯ ಬಂಡೆಯ ಸಂದಿಯೊಳಗೆ ಬಚ್ಚಿಡು,” ಎಂಬುದಾಗಿ ಯೆಹೋವ ದೇವರ ಎರಡನೆಯ ಆದೇಶ ನನಗೆ ಬಂದಿತು. \v 5 ಆಗ ಯೆಹೋವ ದೇವರ ಅಪ್ಪಣೆಯ ಮೇರೆಗೆ ನಾನು ಹೋಗಿ, ಯೂಫ್ರೇಟೀಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ. \p \v 6 ಬಹು ದಿನಗಳ ಮೇಲೆ ಯೆಹೋವ ದೇವರು ನನಗೆ, “ಹೊರಡು, ಯೂಫ್ರೇಟೀಸ್ ನದಿಗೆ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು. \v 7 ಆಗ ನಾನು ಯೂಫ್ರೇಟೀಸ್ ನದಿಗೆ ಹೋಗಿ ಹುಡುಕಿ, ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು. \p \v 8 ಆಗ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನೆಂದರೆ, \v 9 “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ, ಯೆರೂಸಲೇಮಿನ ಮಹಾ ಗರ್ವವನ್ನು ಕೆಡಿಸುವೆನು. \v 10 ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು. \v 11 ಯಾವ ಪ್ರಕಾರ ಇದು ಮನುಷ್ಯನ ನಡುವಿಗೆ ಹತ್ತಿಕೊಳ್ಳುವುದೋ, ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ, ಯೆಹೂದದ ಮನೆತನವನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು, ಆದರೆ ಅವರು ಕೇಳದೇ ಹೋದರು ಎಂದು ಯೆಹೋವ ದೇವರ ಅನ್ನುತ್ತಾರೆ.’ \s1 ದ್ರಾಕ್ಷಾರಸದ ಗಡಿಗೆಗಳು \p \v 12 “ಆದ್ದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು: ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವು. ಆಗ ಅವರು ನಿನಗೆ ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ,’ ಎಂದು ನಿನಗೆ ಹೇಳುವರು. \v 13 ಆಗ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು. \v 14 ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.” \s1 ಸೆರೆಯ ಬೆದರಿಕೆ \q1 \v 15 ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; \q2 ಏಕೆಂದರೆ ಯೆಹೋವ ದೇವರು ಮಾತನಾಡಿದ್ದಾರೆ. \q1 \v 16 ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು \q2 ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ \q2 ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. \q1 ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. \q2 ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು. \q1 \v 17 ನೀವು ಕೇಳದಿದ್ದರೆ, \q2 ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ \q2 ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, \q1 ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ \q2 ಬಹಳವಾಗಿ ಅಳುವೆನು. \q2 ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು. \b \q1 \v 18 ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, \q2 “ನೆಲದಲ್ಲಿ ಕೂತುಕೊಳ್ಳಿರಿ, \q1 ನಿಮ್ಮ ಅಂದದ ಕಿರೀಟವು ನಿಮ್ಮ \q2 ತಲೆಯಿಂದ ಕೆಳಗೆ ಬಿದ್ದಿದೆ.” \q1 \v 19 ದಕ್ಷಿಣ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, \q2 ಅವುಗಳನ್ನು ಬಿಡಿಸಲು ಯಾರೂ ಇಲ್ಲ. \q1 ಯೆಹೂದವೆಲ್ಲಾ ಸೆರೆಹೋಗಿದೆ, \q2 ಸಂಪೂರ್ಣವಾಗಿ ಸೆರೆಯಾಗಿದೆ. \b \q1 \v 20 ಚೀಯೋನೇ, ಕಣ್ಣೆತ್ತು, \q2 ಉತ್ತರ ದಿಕ್ಕಿನಿಂದ ಬರುವವರನ್ನು ನೋಡು, \q1 ನಿನಗೆ ಒಪ್ಪಿಸಿದ ಹಿಂಡು, \q2 ನಿನ್ನ ಅಂದವಾದ ಹಿಂಡು ಎಲ್ಲಿ? \q1 \v 21 ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು \q2 ಯೆಹೋವ ದೇವರು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? \q1 ವೇದನೆಯು ನಿನ್ನನ್ನು ಹೆರುವವಳೋ \q2 ಎಂಬಂತೆ ಹಿಡಿಯುವುದಲ್ಲವೆ? \q1 \v 22 ಒಂದು ವೇಳೆ, “ಇವು ನನಗೆ ಏಕೆ ಸಂಭವಿಸಿದವು?” \q2 ಎಂದು ನೀನು ಮನದೊಳಗೆ ಅಂದುಕೊಂಡರೆ, \q1 ನಿನ್ನ ನೆರಿಗೆಯು ಕೀಳಲಾಗುವುದು, \q2 ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ \q2 ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು. \q1 \v 23 ಕೂಷ್ಯನು\f + \fr 13:23 \fr*\ft ಅಥವಾ \ft*\fqa ಇಥಿಯೋಪಿಯದವನು\fqa*\f* ತನ್ನ ಚರ್ಮವನ್ನೂ, \q2 ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? \q1 ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ \q2 ಒಳ್ಳೆಯದನ್ನು ಮಾಡುವುದಕ್ಕಾದೀತೇ? \b \q1 \v 24 “ಅಡವಿಯ ಗಾಳಿಯಿಂದ ಹಾರಿಹೋಗುವ \q2 ಹೊಟ್ಟಿನಂತೆ ಅವರನ್ನು ಚದರಿಸುವೆನು. \q1 \v 25 ಇದೇ ನಿನ್ನ ಭಾಗವು, \q2 ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ಏಕೆಂದರೆ ನನ್ನನ್ನು ಮರೆತುಬಿಟ್ಟು, \q2 ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ. \q1 \v 26 ಆದ್ದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ, \q2 ನಿನ್ನ ಮುಖದ ಮೇಲೆ ಎತ್ತುವೆನು. \q1 \v 27 ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, \q2 ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, \q1 ಬಯಲಿನಲ್ಲಿಯೂ ನೀನು ನಡೆಸಿದ \q2 ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. \q1 ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! \q2 ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?” \c 14 \s1 ಕ್ಷಾಮ, ಬರ ಹಾಗು ಖಡ್ಗ \p \v 1 ಕ್ಷಾಮವನ್ನು ಕುರಿತು ಯೆರೆಮೀಯನಿಗೆ ಉಂಟಾದ ಯೆಹೋವ ದೇವರ ವಾಕ್ಯವು: \q1 \v 2 “ಯೆಹೂದವು ದುಃಖಪಡುತ್ತದೆ. \q2 ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, \q2 ಯೆರೂಸಲೇಮಿನ ಕೂಗು ಏರಿ ಬಂತು. \q1 \v 3 ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. \q2 ಇವರು ಬಾವಿಗಳಿಗೆ ಬರುತ್ತಾರೆ. \q2 ಆದರೆ ನೀರು ಸಿಕ್ಕಲ್ಲ. \q1 ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. \q2 ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, \q2 ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ. \q1 \v 4 ದೇಶದಲ್ಲಿ ಮಳೆ ಇಲ್ಲದ ಕಾರಣ \q2 ಭೂಮಿಯು ಬಿರುಕುಬಿಟ್ಟಿದೆ. \q1 ಒಕ್ಕಲಿಗರು ನಿರಾಶರಾಗಿ \q2 ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ. \q1 \v 5 ಹೌದು, ಜಿಂಕೆಯು ಸಹ ಹೊಲದಲ್ಲಿ ಹುಲ್ಲು ಇಲ್ಲದ್ದರಿಂದ, \q2 ತನ್ನ ಮರಿಯನ್ನು ಹಾಕಿ, ಬಿಟ್ಟು ಬಿಡುತ್ತದೆ. \q1 \v 6 ಕಾಡುಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು, \q2 ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ. \q1 ಹುಲ್ಲು ಇಲ್ಲದ ಕಾರಣ \q2 ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.” \b \q1 \v 7 ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, \q2 ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. \q1 ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; \q2 ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ. \q1 \v 8 ಓ ಇಸ್ರಾಯೇಲಿನ ನಿರೀಕ್ಷೆಯೇ, \q2 ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವವರೇ, \q1 ನೀನು ಏಕೆ ದೇಶದಲ್ಲಿ ಅನ್ಯನ ಹಾಗೆಯೂ, \q2 ರಾತ್ರಿ ಕಳೆಯುವುದಕ್ಕೆ ಇಳಿದುಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು? \q1 \v 9 ಏಕೆ ಸ್ತಬ್ಧನಂತೆಯೂ, \q2 ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? \q1 ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, \q2 ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, \q2 ನಮ್ಮನ್ನು ಕೈಬಿಡಬೇಡಿರಿ. \p \v 10 ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: \q1 “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. \q2 ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. \q1 ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. \q2 ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. \q2 ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.” \p \v 11 ಆಗ ಯೆಹೋವ ದೇವರು ನನಗೆ, “ಈ ಜನರಿಗೋಸ್ಕರ ಒಳ್ಳೆಯದಕ್ಕಾಗಿ ಪ್ರಾರ್ಥನೆ ಮಾಡಬೇಡ. \v 12 ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು. \p \v 13 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು. \p \v 14 ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. \v 15 ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ. \v 16 ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ. \b \p \v 17 “ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. \q1 “ ‘ನನ್ನ ಕಣ್ಣುಗಳು ರಾತ್ರಿ ಹಗಲು \q2 ಬಿಡದೆ ಕಣ್ಣೀರು ಸುರಿಸಲಿ. \q1 ನನ್ನ ಜನರ ಮಗಳಾದ ಕನ್ಯೆಯು \q2 ಕ್ರೂರವಾದ ಏಟಿನಿಂದಲೂ, \q2 ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ. \q1 \v 18 ನಾನು ಹೊಲಕ್ಕೆ ಹೋದರೆ ಇಗೋ, \q2 ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. \q1 ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, \q2 ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. \q1 ಹೌದು, ಪ್ರವಾದಿಯೂ, ಯಾಜಕನೂ \q2 ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ” \b \q1 \v 19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? \q2 ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? \q1 ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? \q2 ಸುಖವನ್ನು ನಿರೀಕ್ಷಿಸಿದೆವು, \q1 ಯಾವ ಮೇಲೂ ಆಗಲಿಲ್ಲ. \q2 ಕ್ಷೇಮ ಕಾಲವನ್ನು ಎದುರು ನೋಡಿದೆವು, \q2 ಹಾ, ಅಂಜಿಕೆಯೇ. \q1 \v 20 ಯೆಹೋವ ದೇವರೇ, ನಮ್ಮ ದುಷ್ಟತನವನ್ನೂ, \q2 ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ, \q2 ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವಲ್ಲಾ. \q1 \v 21 ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, \q2 ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. \q1 ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, \q2 ಅದನ್ನು ಭಂಗಪಡಿಸದಿರಿ. \q1 \v 22 ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? \q2 ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? \q1 ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, \q2 ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, \q2 ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ. \c 15 \p \v 1 ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ. \v 2 ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ಮರಣಕ್ಕೆ ಇರುವವರು ಮರಣಕ್ಕೆ; \q1 ಖಡ್ಗಕ್ಕೆ ಇರುವವರು ಖಡ್ಗಕ್ಕೆ; \q1 ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; \q1 ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು. \p \v 3 “ನಾನು ಅವರಿಗೆ ವಿರೋಧವಾಗಿ ನಾಲ್ಕು ವಿಧವಾದ ವಿನಾಶಗಳನ್ನು ಎಂದರೆ, ಕೊಲ್ಲುವುದಕ್ಕೆ ಖಡ್ಗವನ್ನೂ, ಹರಿಯುವುದಕ್ಕೆ ನಾಯಿಗಳನ್ನು, ನುಂಗುವುದಕ್ಕೂ ನಾಶಮಾಡುವುದಕ್ಕೂ ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ನೇಮಿಸುತ್ತೇನೆ ಎಂಬುದು ಯೆಹೋವ ದೇವರಾದ ನನ್ನ ಮಾತು. \v 4 ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು. \q1 \v 5 “ಯೆರೂಸಲೇಮೇ, ನಿನ್ನ ಮೇಲೆ ಯಾರು ಕನಿಕರಪಡುವರು, \q2 ನಿನಗೋಸ್ಕರ ಯಾರು ದುಃಖಿಸುವರು? \q2 ನಿನ್ನ ಕ್ಷೇಮವನ್ನು ಕುರಿತು ಕೇಳುವುದಕ್ಕೆ ಯಾರು ಹೋಗುವರು? \q1 \v 6 ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q2 “ನೀನು ಹಿಂಜಾರಿದೆ. \q1 ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. \q2 ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ. \q1 \v 7 ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. \q2 ನನ್ನ ಜನರನ್ನು ನಾಶಮಾಡಿ ಅವರಿಗೆ ಶೋಕವನ್ನು ನೀಡುವೆನು. \q1 ಅವರು ತಮ್ಮ ಮಾರ್ಗಗಳನ್ನು ಬಿಟ್ಟು, \q2 ಹಿಂದಿರುಗದೆ ಇದ್ದುದರಿಂದ \q1 \v 8 ಅವರ ವಿಧವೆಯರು ನನ್ನ ಭಾಗಕ್ಕೆ \q2 ಸಮುದ್ರದ ಉಸುಕಿಗಿಂತ ಹೆಚ್ಚಾಗಿರುವರು, \q1 ಯುವಕರ ತಾಯಿಗಳ ಮೇಲೆ ನಾಶ ಮಾಡುವವನನ್ನು \q2 ಮಧ್ಯಾಹ್ನದಲ್ಲೇ ಬರಮಾಡುವೆನು, \q1 ಅವರ ಮೇಲೆ ಕಳವಳವನ್ನೂ, \q2 ದಿಗಿಲನ್ನೂ ತಟ್ಟನೆ ಬೀಳಿಸುವೆನು. \q1 \v 9 ಏಳುಮಂದಿಯನ್ನು ಹೆತ್ತವಳು ಕುಂದುತ್ತಾಳೆ. \q2 ತನ್ನ ಪ್ರಾಣವನ್ನು ಬಿಡುತ್ತಾಳೆ. \q1 ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ. \q2 ಅವಳು ನಾಚಿಕೆಪಡುತ್ತಾಳೆ, ಅವಮಾನಗೊಳ್ಳುತ್ತಾಳೆ. \q1 ಇದಲ್ಲದೆ ಅವರ ಶೇಷವನ್ನು \q2 ಅವರ ಶತ್ರುಗಳ ಮುಂದೆ ಖಡ್ಗಕ್ಕೆ ಒಪ್ಪಿಸುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 10 ನನ್ನ ತಾಯಿಯೇ, ನನಗೆ ಕಷ್ಟ! \q2 ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, \q1 ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? \q2 ನಾನು ಬಡ್ಡಿಗೆ ಸಾಲ ಕೊಡಲಿಲ್ಲ. \q2 ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ. \p \v 11 ಇದಕ್ಕೆ ಯೆಹೋವ ದೇವರು, \q1 ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. \q2 ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ, \q2 ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು. \b \q1 \v 12 ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? \q2 ಕಂಚನ್ನು ಮುರಿಯುವುದು ಯಾರಿಂದಾದೀತು? ಎಂದು ಹೇಳಿದನು. \b \q1 \v 13 ನಿನ್ನ ಸಕಲ ಪ್ರಾಂತಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ \q2 ನಾನು ನಿನ್ನ ಸೊತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡು ಮಾಡಿ, \q1 \v 14 ನಿನ್ನ ಶತ್ರುಗಳ ಕೈಗೆ ಕೊಟ್ಟು, \q2 ನಿನ್ನನ್ನು ಗೊತ್ತಿಲ್ಲದ ದೇಶಕ್ಕೆ ಸಾಗಿಸಿಬಿಡುವೆನು. \q1 ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, \q2 ಅದು ನಿಮ್ಮನ್ನು ಸುಟ್ಟುಬಿಡುವುದು. \b \q1 \v 15 ಅದಕ್ಕೆ ನಾನು ಯೆಹೋವ ದೇವರೇ, ನೀನೇ ಬಲ್ಲೆ, \q2 ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿ ತೀರಿಸು, \q2 ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, \q1 ನನ್ನನ್ನು ನಿರ್ಮೂಲ ಮಾಡಬೇಡ ಏಕೆಂದರೆ ನೀವು ಕನಿಕರ ಉಳ್ಳವರು, \q2 ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ. \q1 \v 16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, \q2 ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. \q1 ಸೇನಾಧೀಶ್ವರನಾದ ದೇವರೇ, \q2 ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ! \q1 \v 17 ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, \q2 ಉಲ್ಲಾಸ ಪಡಲೂ ಇಲ್ಲ; \q1 ನೀವು ನನ್ನ ಮೇಲೆ ಕೈ ಇಟ್ಟಿದ್ದರಿಂದ ಒಂಟಿಗನಾಗಿ ಕೂತುಕೊಂಡೆನು; \q2 ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ; \q1 \v 18 ಏಕೆ ನನ್ನ ವ್ಯಥೆಯು ನಿರಂತರವಾಗಿದೆ? \q2 ನನ್ನ ಗಾಯವು ಗಡುಸಾಗಿ ಗುಣ ಹೋಗಲೊಲ್ಲದೇಕೆ? \q1 ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ? \q2 ಎಂದು ಅರಿಕೆಮಾಡಿಕೊಂಡೆನು. \p \v 19 ಆದಕಾರಣ ಯೆಹೋವ ದೇವರು ಹೀಗೆನ್ನುತ್ತಾರೆ: \q1 ನೀನು ಮಾನಸಾಂತರಪಟ್ಟರೆ, \q2 ನೀನು ನನಗೆ ಸೇವೆಮಾಡುವಂತೆ ನಾನು ನಿನ್ನನ್ನು ಪುನಃಸ್ಥಾಪಿಸುವೆನು. \q1 ನೀನು ತುಚ್ಛವಾದವುಗಳಿಗೆ ಬದಲಾಗಿ ಅಮೂಲ್ಯವಾದವುಗಳನ್ನೇ ಮಾತನಾಡುತ್ತಿದ್ದರೆ, \q2 ನೀನು ನನ್ನ ಬಾಯಿಯ ಹಾಗಿರುವೆ. \q1 ಅವರು ನಿನ್ನ ಕಡೆಗೆ ತಿರುಗಲಿ, \q2 ಆದರೆ ನೀನು ಅವರ ಕಡೆಗೆ ಹಿಂದಿರುಗಬೇಡ. \q1 \v 20 ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ \q2 ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. \q1 ನಿನಗೆ ವಿರೋಧವಾಗಿ ಯುದ್ಧಮಾಡುವರು. \q2 ಆದರೆ ನಿನ್ನನ್ನು ಜಯಿಸಲಾರರು. \q1 ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, \q2 ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 21 “ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, \q2 ದುಷ್ಟರ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.” \c 16 \s1 ವಿಪತ್ತಿನ ದಿನ \p \v 1 ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, \v 2 “ನೀನು ಮದುವೆಯಾಗಬೇಡ. ನಿನಗೆ ಪುತ್ರರಾಗಲಿ, ಪುತ್ರಿಯರಾಗಲಿ ಈ ಸ್ಥಳದಲ್ಲಿ ಹುಟ್ಟದಿರಲಿ.” \v 3 ಏಕೆಂದರೆ ಈ ಸ್ಥಳದಲ್ಲಿ ಹುಟ್ಟಿರುವ ಪುತ್ರಪುತ್ರಿಯರನ್ನು ಕುರಿತು ಮತ್ತು ಅವರ ತಾಯಂದಿರನ್ನೂ, ಅವರನ್ನು ಪಡೆದ ತಂದೆಗಳನ್ನೂ ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: \v 4 “ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.” \p \v 5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ದುಃಖದ ಮನೆಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡುವುದಕ್ಕೂ, ದುಃಖ ಪಡುವುದಕ್ಕೂ ಹೋಗಬೇಡ. ಏಕೆಂದರೆ ನಾನು ನನ್ನ ಸಮಾಧಾನವನ್ನೂ, ಪ್ರೀತಿಯನ್ನೂ, ಕನಿಕರವನ್ನೂ ಈ ಜನರಿಂದ ತೆಗೆದುಹಾಕಿದ್ದೇನೆ. \v 6 ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ. \v 7 ಸತ್ತವನಿಗಾಗಿ ದುಃಖ ಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗೂ ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ. \p \v 8 “ಅವರ ಸಂಗಡ ಕೂತುಕೊಂಡು ಉಣ್ಣುವುದಕ್ಕೂ ಕುಡಿಯುವುದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸಬೇಡ. \v 9 ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸದ ಸ್ವರವನ್ನೂ, ಸಂತೋಷದ ಸ್ವರವನ್ನೂ, ಮದುಮಗನ ಸ್ವರವನ್ನೂ, ಮದುಮಗಳ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿಬಿಡುವೆನು. \p \v 10 “ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು: \v 11 ‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ. \v 12 ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ. \v 13 ಆದ್ದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ, ನಿಮಗೂ, ನಿಮ್ಮ ಪಿತೃಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು. ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆ ಮಾಡುವಿರಿ ಮತ್ತು ನಾನು ನಿಮಗೆ ಕನಿಕರ ತೋರಿಸುವುದಿಲ್ಲ.’ \p \v 14 “ಆದ್ದರಿಂದ ಇಗೋ, ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಇನ್ನು ಹೇಳುವುದಿಲ್ಲ. \v 15 ‘ಆದರೆ ಯೆಹೋವ ದೇವರ ಜೀವದಾಣೆ, ಇಸ್ರಾಯೇಲರನ್ನು ಉತ್ತರ ದೇಶದಿಂದಲೂ, ನಾನು ಅವರನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ ಬರಮಾಡಿ, ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು,’ ಎಂದು ಹೇಳುವ ದಿನಗಳು ಬರುವುವು. \p \v 16 “ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು. \v 17 ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಇವೆ. ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ, ಅವರ ಅಕ್ರಮವು ನನ್ನ ದೃಷ್ಟಿಗೆ ಅಡಗಿರುವುದಿಲ್ಲ. \v 18 ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 19 ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, \q2 ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, \q1 ಭೂಮಿಯ ಅಂತ್ಯಗಳಿಂದ \q2 ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. \q1 “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. \q2 ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ. \q1 \v 20 ಮನುಷ್ಯನು ದೇವರುಗಳನ್ನು ತನಗೆ ಮಾಡುವುದುಂಟೇ? \q2 ಹಾಗೆ ಮಾಡಿಕೊಂಡರೂ ಅವು ದೇವರುಗಳಲ್ಲ!” \b \q1 \v 21 “ಆದ್ದರಿಂದ ಇಗೋ, ನಾನು ಇದೊಂದು ಸಾರಿ \q2 ಅವರಿಗೆ ತಿಳಿಯುವಂತೆ ಮಾಡುವೆನು. \q2 ನನ್ನ ಕೈಯನ್ನೂ, ನನ್ನ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. \q1 ನನ್ನ ಹೆಸರು ಯೆಹೋವ ದೇವರೇ, \q2 ಎಂದು ಅವರು ತಿಳಿದುಕೊಳ್ಳುವರು. \b \c 17 \q1 \v 1 “ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ, \q2 ವಜ್ರದ ಮೊನೆಯಿಂದಲೂ ಬರೆಯಲಾಗಿದೆ. \q1 ಅದು ಅವರ ಹೃದಯದ ಹಲಗೆಯ ಮೇಲೆಯೂ \q2 ಅವರ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲಾಗಿದೆ. \q1 \v 2 ಅವರ ಮಕ್ಕಳು ಅವರ ಬಲಿಪೀಠಗಳನ್ನೂ \q2 ಹಸಿರಾದ ಗಿಡಗಳಲ್ಲಿಯೂ \q1 ಎತ್ತರವಾದ ಗುಡ್ಡಗಳ ಮೇಲೆಯೂ \q2 ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ. \q1 \v 3 ನಾಡಿನಲ್ಲಿರುವ ನನ್ನ ಪರ್ವತವೇ, \q2 ನಿನ್ನ ಎಲ್ಲಾ ಪ್ರಾಂತಗಳಲ್ಲಿ \q1 ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ \q2 ನಾನು ಕೊಳ್ಳೆಗೆ ಒಪ್ಪಿಸುವೆನು. \q1 \v 4 ಆಗ ನಿನ್ನ ದೋಷದಿಂದಲೇ ನೀನು \q2 ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. \q1 ನಿನಗೆ ತಿಳಿಯದ ದೇಶದಲ್ಲಿ \q2 ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. \q1 ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. \q2 ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.” \p \v 5 ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, \q2 ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. \q2 ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು. \q1 \v 6 ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. \q2 ಒಳ್ಳೆಯದು ಬರುವಾಗ ನೋಡದೆ ಇರುವನು. \q1 ನಿವಾಸಿಗಳಿಲ್ಲದ ಚೌಳು ನೆಲವಾಗಿರುವ \q2 ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು. \b \q1 \v 7 “ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ, \q2 ಯಾವನಿಗೆ ಯೆಹೋವ ದೇವರು ಭರವಸೆಯಾಗಿದ್ದಾನೋ, ಆ ಮನುಷ್ಯನು ಧನ್ಯನು. \q1 \v 8 ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, \q2 ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. \q1 ಬಿಸಿಲಿನ ಧಗೆಗೆ ಭಯಪಡದೆ, \q2 ಹಸುರೆಲೆಯನ್ನು ಚಿಗುರಿಸುತ್ತಾ. \q1 ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ \q2 ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.” \b \q1 \v 9 ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ \q2 ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. \q2 ಅದನ್ನು ತಿಳಿಯುವವನ್ಯಾರು? \b \q1 \v 10 “ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. \q2 ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. \q1 ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, \q2 ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.” \b \q1 \v 11 ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, \q2 ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. \q1 ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. \q2 ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ. \b \q1 \v 12 ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾಸನವು \q2 ನಮ್ಮ ಪರಿಶುದ್ಧ ಸ್ಥಳವಾಗಿದೆ. \q1 \v 13 ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, \q2 ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, \q1 ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ \q2 ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ. \b \q1 \v 14 ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು. \q2 ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು. \q2 ಏಕೆಂದರೆ, ನೀವೇ ನನಗೆ ಸ್ತುತ್ಯರು. \q1 \v 15 ಇಗೋ, ಅವರು ನನಗೆ, “ಯೆಹೋವ ದೇವರ ವಾಕ್ಯವು ಎಲ್ಲಿ? \q2 ಅದು ಈಗ ನೆರವೇರಲಿ,” ಅನ್ನುತ್ತಾರೆ. \q1 \v 16 ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; \q2 ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; \q2 ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು. \q1 \v 17 ನೀವು ನನ್ನನ್ನು ಭಯಪಡಿಸಬೇಡಿ. \q2 ಕೇಡಿನ ದಿನದಲ್ಲಿ ನೀವೇ ನನ್ನ ಆಶ್ರಯವಾಗಿದ್ದೀರಿ. \q1 \v 18 ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; \q2 ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; \q1 ಆದರೆ ನಾನು ದಿಗಿಲು ಪಡದಿರಲಿ. \q2 ಆದರೆ ನಾನು ದಿಗಿಲು ಪಡದಂತೆ ಮಾಡುವ \q1 ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. \q2 ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ. \s1 ಸಬ್ಬತ್ ದಿನವನ್ನು ಪರಿಶುದ್ಧವಾಗಿಡಬೇಕು \p \v 19 ಯೆಹೋವ ದೇವರು ನನಗೆ, “ಹೋಗಿ, ಯೆಹೂದದ ಅರಸರು ಪ್ರವೇಶಿಸುವ, ಹೊರಡುವ ಜನರ ಬಾಗಿಲಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು, \v 20 ಅವರಿಗೆ ಹೀಗೆ ಹೇಳು: ‘ಯೆಹೂದದ ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. \v 21 ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮಗೆ ನೀವೇ ಎಚ್ಚರಿಕೆಯಾಗಿರಿ. ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತೆಗೆದುಕೊಂಡು ಬರಬೇಡಿರಿ. \v 22 ಸಬ್ಬತ್ ದಿನದಲ್ಲಿ ಹೊರೆಯನ್ನು ನಿಮ್ಮ ಮನೆಗಳಿಂದ ತೆಗೆದುಕೊಂಡು ಹೋಗಬೇಡಿರಿ. ಯಾವ ಕೆಲಸವನ್ನೂ ಮಾಡಬೇಡಿರಿ. ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರಕಾರವೇ, ಸಬ್ಬತ್ ದಿನವನ್ನು ಪರಿಶುದ್ಧವಾಗಿಡಬೇಕು. \v 23 ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು. \v 24 ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ, \v 25 ದಾವೀದನ ಸಿಂಹಾಸನದ ಮೇಲೆ ಕೂರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು, ಯೆಹೂದದ ಮನುಷ್ಯರಾಗಿಯೂ, ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು, ಅವರೂ, ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು. ಈ ಪಟ್ಟಣದಲ್ಲಿ ಎಂದೆಂದಿಗೂ ವಾಸಮಾಡಿದರು. \v 26 ಇದಲ್ಲದೆ ಯೆಹೂದದ ಪಟ್ಟಣಗಳಿಂದಲೂ, ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ, ಬೆನ್ಯಾಮೀನನ ದೇಶದಿಂದಲೂ, ಬಯಲಿನಿಂದಲೂ, ಬೆಟ್ಟಗಳಿಂದಲೂ, ದಕ್ಷಿಣದಿಂದಲೂ ದಹನಬಲಿಗಳನ್ನೂ, ಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತರುವರು. ಸ್ತೋತ್ರದ ಅರ್ಪಣೆಗಳನ್ನು ಯೆಹೋವ ದೇವರ ಆಲಯಕ್ಕೆ ತರುವರು. \v 27 ಆದರೆ ನೀವು ಸಬ್ಬತ್\f + \fr 17:27 \fr*\fq ಸಬ್ಬತ್ \fq*\ft ಅಂದರೆ \ft*\fqa ವಿಶ್ರಾಂತಿ ದಿನ\fqa*\f* ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ” \c 18 \s1 ಕುಂಬಾರನ ಮನೆಯಲ್ಲಿ \p \v 1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ, \v 2 “ನೀನು ಎದ್ದು ಕುಂಬಾರನ ಮನೆಗೆ ಇಳಿದು ಹೋಗು. ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೊಡುತ್ತೇನೆ,” ಎಂದರು. \v 3 ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು. ಇಗೋ, ಅವನು ಚಕ್ರದ ಮೇಲೆ ಕೆಲಸ ಮಾಡುತ್ತಿದ್ದನು. \v 4 ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟು ಹೋಯಿತು. ಆಗ ಕುಂಬಾರನಿಗೆ ಒಳ್ಳೆಯದೆಂದು ತೋರುವ ಪ್ರಕಾರ, ಅದನ್ನು ಮತ್ತೊಂದು ಪಾತ್ರೆಯನ್ನಾಗಿ ಮಾಡಿದನು. \p \v 5 ಅನಂತರ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, \v 6 “ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ. \v 7 ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವುದಕ್ಕೂ ಕೆಡವುದಕ್ಕೂ ನಾಶಮಾಡುವುದಕ್ಕೂ ಮಾತಾಡುತ್ತೇನೋ, \v 8 ನಾನು ಆ ಜನಾಂಗಕ್ಕೆ ವಿರೋಧವಾಗಿ ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ, ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು. \v 9 ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಮಾತನಾಡುತ್ತೇನೋ, \v 10 ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ, ನಾನು ಅದಕ್ಕೆ ಉಪಕಾರ ಮಾಡುತ್ತೇನೆಂದು ಹೇಳಿದ ಒಳ್ಳೆಯದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು. \p \v 11 “ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ. \v 12 ಆದರೆ ಅವರೋ ಏನೂ ಪ್ರಯೋಜನ ಇಲ್ಲ. ಏಕೆಂದರೆ ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು. ನಾವೆಲ್ಲರೂ ನಮ್ಮ ದುಷ್ಟ ಹೃದಯದ ಮೊಂಡುತನವನ್ನು ಅನುಸರಿಸುತ್ತೇವೆ,’ ಎಂದರು.” \b \p \v 13 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: \q1 “ಇತರ ಜನಾಂಗಗಳಲ್ಲಿ ವಿಚಾರಿಸಿರಿ. \q2 ಇಂಥವುಗಳನ್ನು ಯಾರು ಕೇಳಿದ್ದಾರೆ? \q1 ಇಸ್ರಾಯೇಲೆಂಬ ಕನ್ಯೆಯು \q2 ಮಹಾ ಭಯಂಕರವಾದದ್ದನ್ನು ಮಾಡಿದ್ದಾಳೆ. \q1 \v 14 ಹೊಲದ ಬಂಡೆಯಿಂದ ಬರುವ \q2 ಲೆಬನೋನಿನ ಹಿಮವು ತಪ್ಪುವುದೇ? \q1 ದೂರದಿಂದ ಇಳಿದು ಹರಿಯುವ \q2 ತಂಪಾದ ಪ್ರವಾಹದ ನೀರು ಬತ್ತುವುದೇ? \q1 \v 15 ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. \q2 ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. \q1 ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ \q2 ಅವರನ್ನು ಎಡವುವಂತೆ ಮಾಡಿ, \q1 ಮಾರ್ಗವಲ್ಲದ ಕಾಲು ದಾರಿಗಳಲ್ಲಿ \q2 ಅವರನ್ನು ನಡೆಯುವಂತೆ ಮಾಡಿವೆ. \q1 \v 16 ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, \q2 ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. \q1 ಅದನ್ನು ಹಾದುಹೋಗುವವರೆಲ್ಲರೂ \q2 ವಿಸ್ಮಿತರಾಗಿ ತಲೆ ಅಲ್ಲಾಡಿಸುವರು. \q1 \v 17 ಮೂಡಣ ಗಾಳಿಯಿಂದ ಆದ ಹಾಗೆ, \q2 ಅವರನ್ನು ಶತ್ರುವಿನ ಮುಂದೆ ಚದರಿಸುವೆನು. \q1 ಅವರ ಆಪತ್ತಿನ ದಿವಸದಲ್ಲಿ ಅವರಿಗೆ \q2 ಮುಖವನ್ನಲ್ಲ ಬೆನ್ನನ್ನು ತೋರಿಸುವೆನು.” \p \v 18 ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು. \q1 \v 19 ಓ ಯೆಹೋವ ದೇವರೇ, ನನಗೆ ಕಿವಿಗೊಡು. \q2 ನನ್ನ ಸಂಗಡ ವ್ಯಾಜ್ಯವಾಡುವವರ ಮಾತನ್ನು ಕೇಳು. \q1 \v 20 ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? \q2 ಏಕೆಂದರೆ, ಅವರು ನನ್ನ ಪ್ರಾಣಕ್ಕೆ ಕುಳಿಯನ್ನು ಅಗೆದಿದ್ದಾರೆ. \q1 ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವುದಕ್ಕೂ, \q2 ನಿನ್ನ ಉಗ್ರವನ್ನು ಅವರಿಂದ ತಿರುಗಿಸುವುದಕ್ಕೂ \q2 ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ. \q1 \v 21 ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. \q2 ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. \q1 ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. \q2 ಅವರ ಗಂಡಸರು ಹತರಾಗಲಿ. \q2 ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ. \q1 \v 22 ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ, \q2 ಕೂಗು ಅವರ ಮನೆಗಳೊಳಗಿಂದ ಕೇಳ ಬರಲಿ. \q1 ಏಕೆಂದರೆ, ನನ್ನನ್ನು ಹಿಡಿಯುವುದಕ್ಕೆ ಕುಳಿ ಅಗೆದಿದ್ದಾರೆ. \q2 ನನ್ನ ಕಾಲುಗಳಿಗೆ ಉರುಲುಗಳನ್ನು ಒಡ್ಡಿದ್ದಾರೆ. \q1 \v 23 ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ \q2 ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. \q1 ಅವರ ಅಕ್ರಮವನ್ನು ಮನ್ನಿಸಬೇಡಿ. \q2 ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. \q1 ಅವರು ನಿಮ್ಮ ಮುಂದೆ ಎಡವಿಬೀಳಲಿ. \q2 ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ. \c 19 \p \v 1 ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು, \v 2 ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು. \v 3 ‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು. \v 4 ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ, \v 5 ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ. \v 6 ಹೀಗಿರುವುದರಿಂದ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ದಿನಗಳು ಬರುವುವು. ಆಗ ಈ ಸ್ಥಳವು ಇನ್ನು ತೋಫೆತೆಂದು ಇಲ್ಲವೆ ಬೆನ್ ಹಿನ್ನೋಮ್ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲಾಗುವುದು. \p \v 7 “ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. \v 8 ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು. \v 9 ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’ \p \v 10 “ಆಗ ನೀನು, ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಮಡಕೆಯನ್ನು ಒಡೆದು, \v 11 ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ಯಾವ ಪ್ರಕಾರ ಒಬ್ಬನು ಕುಂಬಾರನ ಮಡಕೆಯನ್ನು ಅದು ತಿರುಗಿ ಒಂದುಗೂಡದ ಹಾಗೆ ಒಡೆಯುತ್ತಾನೋ, ಅದೇ ಪ್ರಕಾರ ನಾನು ಈ ಜನರನ್ನೂ, ಈ ಪಟ್ಟಣವನ್ನೂ ಒಡೆದುಬಿಡುವೆನು. ಆಗ ಹೂಳಿಡುವುದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಳಿಡುವರು. \v 12 ಹೀಗೆ ಈ ಸ್ಥಳಕ್ಕೂ, ಅದರ ನಿವಾಸಿಗಳಿಗೂ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು. \v 13 ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪ ಸುಟ್ಟು, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ, ಆ ಎಲ್ಲಾ ಮನೆಗಳ ನಿಮಿತ್ತವಾಗಿ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವುವು, ಎಂಬುದೇ.’ ” \p \v 14 ಆಗ ಯೆರೆಮೀಯನು, ಯೆಹೋವ ದೇವರು ಅವನನ್ನು ಪ್ರವಾದಿಸುವುದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಯೆಹೋವ ದೇವರ ಆಲಯದ ಅಂಗಳದಲ್ಲಿ ನಿಂತುಕೊಂಡು, ಜನರಿಗೆಲ್ಲಾ ಹೇಳಿದ್ದೇನೆಂದರೆ: \v 15 “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ” \c 20 \s1 ಯೆರೆಮೀಯನು ಮತ್ತು ಪಷ್ಹೂರನು \p \v 1 ಯೆರೆಮೀಯನು ಈ ಮಾತುಗಳನ್ನು ಪ್ರವಾದಿಸಲಾಗಿ, ಯೆಹೋವ ದೇವರ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗ ಪಷ್ಹೂರನು ಕೇಳಿದನು. \v 2 ಆಗ ಪಷ್ಹೂರನು ಪ್ರವಾದಿಯಾದ ಯೆರೆಮೀಯನನ್ನು ಹೊಡೆದು, ಅವನನ್ನು ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಬೆನ್ಯಾಮೀನನ ಮೇಲ್ಭಾಗದಲ್ಲಿದ್ದ ಬಾಗಿಲಲ್ಲಿದ್ದ ಮರದ ಉಪಕರಣಕ್ಕೆ ಕಟ್ಟಿದರು. \v 3 ಮಾರನೆ ದಿವಸದಲ್ಲಿ, ಪಷ್ಹೂರನು ಯೆರೆಮೀಯನನ್ನು ಬಂಧನದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ, “ಯೆಹೋವ ದೇವರು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ ಮಾಗೋರ್ ಮಿಸ್ಸಾಬೀಬ್ ಎಂದು ಕರೆಯುತ್ತಾರೆಂದು ಹೇಳಿದನು. \v 4 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲು ಪಡುವಂತೆ ಮಾಡುತ್ತೇನೆ. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ನಿನ್ನ ಕಣ್ಣುಗಳು ಅದನ್ನು ನೋಡುವುವು. ಯೆಹೂದ್ಯರನ್ನೆಲ್ಲಾ ನಾನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅವರನ್ನು ಬಾಬಿಲೋನಿಗೆ ಒಯ್ದು ಖಡ್ಗದಿಂದ ಕೊಲ್ಲುವನು. \v 5 ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ, ಅದರ ಎಲ್ಲಾ ನಿಧಿನಿಕ್ಷೇಪಗಳನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ, ಯೆಹೂದದ ಅರಸರ ಎಲ್ಲಾ ಭಂಡಾರಗಳನ್ನೂ ಅವರ ಶತ್ರುಗಳ ಕೈಗೆ ಒಪ್ಪಿಸುವೆನು. ಅವರು ಅವುಗಳನ್ನು ಸುಲಿದುಕೊಂಡು, ತೆಗೆದುಕೊಂಡು ಬಾಬಿಲೋನಿಗೆ ಒಯ್ಯುವರು. \v 6 ಪಷ್ಹೂರನೇ, ನೀನೂ, ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ. ಬಾಬಿಲೋನಿಗೆ ಹೋಗಿ ಅಲ್ಲಿಯೇ ಸಾಯುವೆ. ಅಲ್ಲಿಯೇ ಸಮಾಧಿಯಾಗುವೆ. ನಿನಗೂ, ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವುದು.’ ” \s1 ಯೆರೆಮೀಯನ ದೂರು \q1 \v 7 ಓ ಯೆಹೋವ ದೇವರೇ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆನು. \q2 ನೀವು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿರಿ. \q1 ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. \q2 ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡುತ್ತಾನೆ. \q1 \v 8 ಏಕೆಂದರೆ, ನಾನು ಮಾತನಾಡುವವನಾದ್ದರಿಂದ \q2 ಬಲತ್ಕಾರವೂ, ಕೊಳ್ಳೆಯೂ ಎಂದು ಗಟ್ಟಿಯಾಗಿ ಕೂಗುತ್ತೇನೆ. \q1 ಆದ್ದರಿಂದ ಯೆಹೋವ ದೇವರ ವಾಕ್ಯವು ನನಗೆ \q2 ಪ್ರತಿದಿನ ಪರಿಹಾಸ್ಯಕ್ಕೂ, ಗೇಲಿಗೂ ಗುರಿಮಾಡಿತು. \q1 \v 9 “ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. \q2 ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” \q2 ಎಂದು ಅಂದುಕೊಂಡೆನು. \q1 ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ \q2 ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. \q1 ಬಿಗಿ ಹಿಡಿದು ದಣಿದೆನು. \q2 ನನ್ನಿಂದ ಆಗದೆ ಹೋಯಿತು. \q1 \v 10 ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. \q2 “ಸುತ್ತಲೂ ಭಯವಿದೆ. \q2 ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” \q1 ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ \q2 ಒಂದು ವೇಳೆ ಅವನು ಮೋಸಗೊಂಡಾನು. \q1 “ಆಗ ನಾವು ಅವನನ್ನು ಗೆದ್ದು, \q2 ಅವನಲ್ಲಿ ಮುಯ್ಯಿಗೆ ಮುಯ್ಯಿ \q2 ತೀರಿಸಿಕೊಳ್ಳುವೆವು ಅನ್ನುತ್ತಾರೆ.” \b \q1 \v 11 ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ. \q2 ಆದ್ದರಿಂದ ನನ್ನನ್ನು ಹಿಂಸಿಸುವವರು ಎಡವುವರು, ಗೆಲ್ಲುವುದಿಲ್ಲ. \q1 ಅನುಕೂಲವಾಗದೆ ಇದ್ದುದರಿಂದ ಅವರು ಬಹಳವಾಗಿ ನಾಚಿಕೆಪಡುವರು. \q2 ಅವರ ಅವಮಾನವು ಎಂದಿಗೂ ಮರೆಯದ ಅವಮಾನವಾಗಿರುವುದು. \q1 \v 12 ಓ ಸೇನಾಧೀಶ್ವರ ಯೆಹೋವ ದೇವರೇ, ನೀತಿವಂತರನ್ನು ಪರಿಶೋಧಿಸುವವರೇ, \q2 ಅಂತರಿಂದ್ರಿಯಗಳನ್ನೂ, ಹೃದಯವನ್ನೂ ನೋಡುವವರೇ, \q1 ನೀವು ಅವರಿಗೆ ಪ್ರತಿದಂಡನೆ ಮಾಡುವುದನ್ನು ನಾನು ನೋಡುವಂತೆ ಮಾಡಿ. \q2 ಏಕೆಂದರೆ, ನಿಮಗೆ ನನ್ನ ವ್ಯಾಜ್ಯವನ್ನು ತಿಳಿಯಮಾಡಿದ್ದೇನೆ. \b \q1 \v 13 ಯೆಹೋವ ದೇವರಿಗೆ ಹಾಡಿರಿ, ಯೆಹೋವ ದೇವರನ್ನು ಸ್ತುತಿಸಿರಿ. \q2 ಏಕೆಂದರೆ, ಅವರು ಬಡವನ ಪ್ರಾಣವನ್ನು ಕೇಡು ಮಾಡುವವರ ಕೈಯಿಂದ ತಪ್ಪಿಸಿದ್ದಾರೆ. \b \q1 \v 14 ನಾನು ಹುಟ್ಟಿದ ದಿವಸವು ಶಾಪಗ್ರಸ್ತವಾಗಲಿ. \q2 ನನ್ನ ತಾಯಿ ನನ್ನನ್ನು ಹೆತ್ತ ದಿವಸವು ಶುಭವೆನಿಸಿಕೊಳ್ಳದಿರಲಿ. \q1 \v 15 ನನ್ನ ತಂದೆಗೆ, “ನಿನಗೆ ಗಂಡು ಕೂಸು ಹುಟ್ಟಿದೆ,” \q2 ಎಂಬ ಸಮಾಚಾರವನ್ನು ಹೇಳಿ ಬಹಳ \q2 ಸಂತೋಷ ಉಂಟುಮಾಡಿದವನು ಶಾಪಗ್ರಸ್ತನಾಗಲಿ! \q1 \v 16 ಆ ಮನುಷ್ಯನು, ಯೆಹೋವ ದೇವರು ಕನಿಕರಪಡದೆ ಕೆಡವಿಬಿಟ್ಟ \q2 ಪಟ್ಟಣಗಳ ಗತಿಯು ಅವನಿಗೆ ಬರಲಿ. \q1 ಅವನು ಬೆಳಿಗ್ಗೆ ಕೂಗನ್ನೂ, \q2 ಮಧ್ಯಾಹ್ನದಲ್ಲಿ ಆರ್ಭಟವನ್ನೂ ಕೇಳಲಿ. \q1 \v 17 ನಾನು ಗರ್ಭ ಬಿಟ್ಟಾಗಲೇ ಅವರು ನನ್ನನ್ನು ಕೊಲ್ಲದೆ ಹೋದದ್ದರಿಂದ, \q2 ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು, \q1 ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೆಯದಾಗಿತ್ತು. \q2 \v 18 ನಾನು ಕಷ್ಟವನ್ನೂ, ಚಿಂತೆಯನ್ನೂ ನೋಡುವುದಕ್ಕೂ, \q2 ನನ್ನ ದಿವಸಗಳು ನಾಚಿಕೆಯಲ್ಲಿ ಕಳೆದುಹೋಗುವುದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಏಕೆ? \c 21 \s1 ಯೆಹೋವ ದೇವರು ಚಿದ್ಕೀಯನ ಬೇಡಿಕೆಯನ್ನು ತಿರಸ್ಕರಿಸಿದ್ದು \p \v 1 ಅರಸನಾದ ಚಿದ್ಕೀಯನು ಮಲ್ಕೀಯನ ಮಗ ಪಷ್ಹೂರನನ್ನೂ, ಮಾಸೇಯನ ಮಗನಾದ ಯಾಜಕನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ, \v 2 “ನಮಗೋಸ್ಕರ ಯೆಹೋವ ದೇವರನ್ನು ವಿಚಾರಿಸು. ಏಕೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ. ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟು ಹೋಗುವಹಾಗೆ ಯೆಹೋವ ದೇವರು ಹಿಂದಿನ ಕಾಲದಂತೆಯೇ ತಮ್ಮ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುವರು,” ಎಂದು ಅವರ ಮೂಲಕ ವಿಜ್ಞಾಪಿಸಿದಾಗ, ಯೆರೆಮೀಯನಿಗೆ ಯೆಹೋವ ದೇವರ ವಾಕ್ಯವು ಬಂತು. \p \v 3 ಆಗ ಯೆರೆಮೀಯನು ಅವರಿಗೆ ಹೇಳಿದ್ದೇನೆಂದರೆ, “ಚಿದ್ಕೀಯನಿಗೆ ಹೀಗೆ ಹೇಳಿರಿ: \v 4 ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬಿಲೋನಿನ ಅರಸನಿಗೂ, ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವುದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನೂ, ನಾನು ಹಿಂದಕ್ಕೆ ತಳ್ಳಿ, ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿಬರುವಂತೆ ಮಾಡುವೆನು. \v 5 ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು. \v 6 ಈ ಪಟ್ಟಣದ ನಿವಾಸಿಗಳನ್ನೂ, ಮನುಷ್ಯರನ್ನೂ, ಮೃಗಗಳನ್ನೂ ಸಹಿತವಾಗಿ ಹೊಡೆಯುವೆನು. ಅವರು ದೊಡ್ಡ ವ್ಯಾಧಿಯಿಂದ ಸಾಯುವರು. \v 7 ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’ \p \v 8 “ಈ ಜನಕ್ಕೆ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಜೀವದ ಮಾರ್ಗವನ್ನೂ, ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ. \v 9 ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ\f + \fr 21:9 \fr*\fq ಕಸ್ದೀಯರ \fq*\ft ಅಂದರೆ \ft*\fqa ಬಾಬಿಲೋನಿನ ಜನರು\fqa*\f* ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು. \v 10 ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’ \p \v 11 “ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ, \v 12 ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, \q1 “ ‘ಬೆಳಿಗ್ಗೆ ನ್ಯಾಯತೀರಿಸಿರಿ, \q2 ಸುಲಿಗೆಯಾದವನನ್ನು ಬಲಾತ್ಕಾರಿಯ \q2 ಕೈಯೊಳಗಿಂದ ತಪ್ಪಿಸಿರಿ. \q1 ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, \q2 ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ \q2 ಯಾರೂ ಆರಿಸಲಾಗದ ಹಾಗೆ ಉರಿಯುವುದು. \q1 \v 13 ಇಗೋ, ತಗ್ಗಿನ ನಗರಿಯೇ, \q2 ಬಯಲಿನ ಬಂಡೆಯಲ್ಲಿ ವಾಸಮಾಡುವವರೇ, \q2 “ನಮ್ಮ ಮೇಲೆ ಯಾರು ಇಳಿದು ಬರುವರೆಂದು \q1 ನಮ್ಮ ನಿವಾಸಗಳಲ್ಲಿ ಯಾರು ಸೇರುವರೆಂದು, ಅನ್ನುವವರೇ, \q2 ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 14 ನಿಮ್ಮ ಕ್ರಿಯೆಗಳ ಫಲದ ಪ್ರಕಾರ \q2 ನಿಮ್ಮನ್ನು ಶಿಕ್ಷಿಸುತ್ತೇನೆ, \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. \q2 ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ” \c 22 \s1 ದುಷ್ಟ ಅರಸರ ಮೇಲೆ ನ್ಯಾಯ ದಂಡನೆ \p \v 1 ಯೆಹೋವ ದೇವರು ಹೀಗೆ ಹೇಳುತ್ತಾನೆ: “ಯೆಹೂದದ ಅರಸನ ಮನೆಗೆ ಇಳಿದು ಹೋಗಿ, ಅಲ್ಲಿ ಈ ವಾಕ್ಯವನ್ನು ಹೇಳು: \v 2 ‘ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಯೆಹೂದದ ಅರಸನೇ, ನೀನೂ, ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಸಹಿತವಾಗಿ ಯೆಹೋವ ದೇವರ ವಾಕ್ಯವನ್ನು ಕೇಳಿರಿ. \v 3 ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ. \v 4 ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ, ಆಗ ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವರೂ, ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡುವ ಅರಸರು ತಮ್ಮ ಸೇವಕರ ಮತ್ತು ತಮ್ಮ ಜನರಸಹಿತವಾಗಿ ಈ ಅರಮನೆಯ ಬಾಗಿಲುಗಳಿಂದ ಪ್ರವೇಶಿಸಿದರು. \v 5 ಆದರೆ ನೀವು ಈ ವಾಕ್ಯಗಳನ್ನು ಕೇಳದೆ ಹೋದರೆ, ಈ ಅರಮನೆ ಹಾಳಾಗುವುದು ಎಂದು ನನ್ನ ಮೇಲೆ ಆಣೆ ಇಡುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ.’ ” \p \v 6 ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: \q1 “ನೀನು ನನಗೆ ಗಿಲ್ಯಾದೂ, \q2 ಲೆಬನೋನಿನ ಗಿರಿಶೃಂಗ ಆಗಿದ್ದೀ. \q1 ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, \q2 ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು. \q1 \v 7 ನಿನಗೆ ವಿರೋಧವಾಗಿ ತಮ್ಮ ತಮ್ಮ ಆಯುಧಗಳಿಂದ \q2 ನಾಶಮಾಡುವವರನ್ನು ಸಿದ್ಧಮಾಡುತ್ತೇನೆ. \q1 ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು \q2 ಕಡಿದು ಬೆಂಕಿಯಲ್ಲಿ ಹಾಕುವರು. \p \v 8 “ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು. ‘ಯೆಹೋವ ದೇವರು ಈ ದೊಡ್ಡ ಪಟ್ಟಣಕ್ಕೆ ಏಕೆ ಈ ಪ್ರಕಾರ ಮಾಡಿದ್ದಾರೆ?’ ಎಂದು ಒಬ್ಬರಿಗೊಬ್ಬರು ಹೇಳಿಕೊಳ್ಳುವರು. \v 9 ‘ಆಗ ಅವರು ತಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮಸ್ಕರಿಸಿ ಸೇವಿಸಿದ್ದರಿಂದಲೇ,’ ಎಂದು ಅವರು ಉತ್ತರಕೊಡುವರು.” \q1 \v 10 ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. \q2 ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. \q1 ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. \q2 ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ. \m \v 11 ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ, ಈ ಸ್ಥಳದಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದೇ ಇಲ್ಲ. \v 12 ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದಲ್ಲಿಯೇ ಸಾಯುವನು. ಅವನು ಈ ದೇಶವನ್ನು ಇನ್ನು ನೋಡುವುದಿಲ್ಲ.” \q1 \v 13 “ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ \q2 ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳುವವನಿಗೂ, \q1 ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ \q2 ಸುಮ್ಮನೆ ಕೆಲಸ ತೆಗೆದುಕೊಳ್ಳುವವನೂ ಕಷ್ಟ! \q1 \v 14 ಅವನು, ‘ನಾನು ವಿಸ್ತಾರವಾದ ಅರಮನೆಯನ್ನೂ, \q2 ವಿಶಾಲವಾದ ಕೊಠಡಿಗಳನ್ನೂ ಕಟ್ಟಿಸಿಕೊಳ್ಳುವೆನೆಂದು ಹೇಳಿ.’ \q1 ಕಿಟಕಿಗಳನ್ನು ಕೊರೆದು, ದೇವದಾರಿನ ಹಲಗೆಗಳನ್ನು ಹಾಕಿ, \q2 ಕೆಂಪು ಬಣ್ಣವನ್ನು ಹಚ್ಚುವವನಿಗೂ ಕಷ್ಟ! \b \q1 \v 15 “ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? \q1 ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, \q1 ನೀತಿಯನ್ನೂ ಮಾಡಲಿಲ್ಲವೋ? \q2 ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ? \q1 \v 16 ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು. \q2 ಆಗ ಅವನಿಗೆ ಒಳ್ಳೆಯದಾಯಿತು. \q1 ನನ್ನನ್ನು ತಿಳಿದುಕೊಳ್ಳುವುದು ಇದೇ ಅಲ್ಲವೋ?” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 17 “ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ \q2 ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, \q1 ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, \q2 ಮತ್ಯಾವುದರ ಮೇಲೆಯೂ ಇರುವುದಿಲ್ಲ.” \m \v 18 ಆದ್ದರಿಂದ ಯೋಷೀಯನ ಮಗ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ಅವರು ಅವನನ್ನು ಕುರಿತು ಗೋಳಾಡಿ, \q2 ‘ಅಯ್ಯೋ, ನನ್ನ ಸಹೋದರನೇ, ಅಯ್ಯೋ, ನನ್ನ ಸಹೋದರಿಯೇ,’ ಎಂದು ಅನ್ನುವುದಿಲ್ಲ. \q1 ‘ಅಯ್ಯೋ, ದೊರೆಯೇ, ಅಯ್ಯೋ, ಅವನ ವೈಭವವೇ,’ \q2 ಎಂದು ಅವನನ್ನು ಕುರಿತು ಗೋಳಾಡುವುದಿಲ್ಲ. \q1 \v 19 ಕತ್ತೆಯನ್ನು ಹೂಳಿಡುವ ಪ್ರಕಾರ ಅವನನ್ನು ಹೂಳಿಡುವರು. \q2 ಅವನನ್ನು ಎಳೆದುಕೊಂಡು ಹೋಗಿ, \q2 ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.” \b \q1 \v 20 “ಲೆಬನೋನಿಗೆ ಹೋಗಿ ಕೂಗು, \q2 ಬಾಷಾನಿನಲ್ಲಿ ನಿನ್ನ ಸ್ವರವನ್ನೆತ್ತು, \q1 ಅಬಾರೀಮಿನಲ್ಲಿ ಮೊರೆಯಿಡು; \q2 ಏಕೆಂದರೆ ನಿನ್ನ ಜೊತೆಗಾರರು ನಾಶವಾಗಿದ್ದಾರೆ. \q1 \v 21 ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. \q2 ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. \q1 ನನ್ನ ಮಾತಿಗೆ ಕಿವಿಗೊಡದೆ ಇರುವುದೇ \q2 ನಿನ್ನ ಯೌವನದ ರೀತಿಯಾಗಿದೆ. \q1 \v 22 ನಿನ್ನ ಕುರುಬರನ್ನೆಲ್ಲಾ ಗಾಳಿ ಅಟ್ಟಿಸಿಕೊಂಡು ಹೋಗುವುದು. \q2 ನಿನ್ನ ಜೊತೆಗಾರರು ಸೆರೆಗೆ ಹೋಗುವರು. \q1 ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ, \q2 ಅವಮಾನವೂ ಆಗುವುದು. \q1 \v 23 ಓ, ‘ಲೆಬನೋನಿನಲ್ಲಿ’ ವಾಸಮಾಡುವವಳೇ, \q2 ದೇವದಾರುಗಳಲ್ಲಿ ಗೂಡು ಮಾಡಿಕೊಂಡವಳೇ, \q1 ನಿನ್ನ ಮೇಲೆ ಬೇನೆಗಳೂ, ಹೆರುವವಳಂತಿರುವ ವೇದನೆಯೂ \q2 ಬರುವಾಗ ಎಷ್ಟೋ ದುಃಖಕರವಾಗಿರುವೆ. \p \v 24 “ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ, \v 25 ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ, ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಹಾಗೂ ಬಾಬಿಲೋನಿಯ ಕೈಗೆ ಒಪ್ಪಿಸಿ ಬಿಡುತ್ತೇನೆ. \v 26 ನಿನ್ನನ್ನೂ, ನಿನ್ನ ಹೆತ್ತ ತಾಯಿಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಹಾಕಿಬಿಡುವೆನು. ನೀವು ಅಲ್ಲೇ ಸಾಯುವಿರಿ. \v 27 ಆದರೆ ಅವರು ತಿರುಗಿ ಬರುವುದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂದಿರುಗಲಾರರು,” ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 28 ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದುಹೋದ ಮಡಿಕೆಯೆ? \q2 ಮೆಚ್ಚುಗೆ ಇಲ್ಲದ ಪಾತ್ರೆಯೆ? \q1 ಏಕೆ ಕೊನ್ಯನೂ, ಅವನ ಸಂತಾನವೂ ಬೀದಿಪಾಲಾಗಿದ್ದಾರೆ, \q2 ತಮಗೆ ತಿಳಿಯದ ದೇಶಕ್ಕೆ ಗಡಿಪಾರಾಗಿದ್ದಾರೆ? \q1 \v 29 ಓ ದೇಶವೇ, ದೇಶವೇ, ದೇಶವೇ, \q2 ಯೆಹೋವ ದೇವರ ವಾಕ್ಯವನ್ನು ಕೇಳು. \q1 \v 30 ಯೆಹೋವ ದೇವರು ಹೀಗೆ ಹೇಳುತ್ತಾರೆ: \q2 “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, \q1 ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. \q2 ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ \q2 ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.” \c 23 \s1 ನೀತಿಯ ಕೊಂಬೆಗಳು \p \v 1 “ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ. \v 2 ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. \v 3 “ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು. \v 4 ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 5 “ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. \q2 “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. \q1 ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. \q2 ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು. \q1 \v 6 ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. \q2 ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. \q1 ಯೆಹೋವ ಚಿದ್ಕೇನು ಎಂದರೆ, \q2 ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು. \b \m \v 7 “ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ. \v 8 ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.” \s1 ಸುಳ್ಳು ಪ್ರವಾದಿಗಳು \p \v 9 ಪ್ರವಾದಿಗಳ ನಿಮಿತ್ತ: \q1 ನನ್ನ ಹೃದಯವು ನನ್ನಲ್ಲಿ ಮುರಿದಿದೆ. \q2 ನನ್ನ ಎಲುಬುಗಳೆಲ್ಲಾ ಕದಲುತ್ತವೆ. \q1 ಯೆಹೋವ ದೇವರ ನಿಮಿತ್ತವೂ, \q2 ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, \q1 ಮತ್ತನಾದ ಮನುಷ್ಯನ ಹಾಗೆಯೂ, \q2 ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ. \q1 \v 10 ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. \q2 ದೇಶವು ಶಾಪದಿಂದ ದುಃಖಿಸುತ್ತದೆ. \q2 ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. \q1 ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ \q2 ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ. \b \q1 \v 11 “ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. \q2 ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 12 “ಆದ್ದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ \q2 ಜಾರುವ ಸ್ಥಳಗಳ ಹಾಗಿರುವುದು. \q2 ಅವರು ಮುಗ್ಗರಿಸಿಬೀಳುವರು. \q1 ನಾನು ಕೇಡನ್ನು ದಂಡನೆಯ ವರ್ಷವನ್ನಾಗಿ \q2 ಅವರ ಮೇಲೆ ಬರಮಾಡುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 13 “ಸಮಾರ್ಯದ ಪ್ರವಾದಿಗಳಲ್ಲಿ \q2 ಅಸಹ್ಯಕರ ವಿಷಯವನ್ನು ನೋಡಿದ್ದೇನೆ. \q1 ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, \q2 ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ. \q1 \v 14 ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. \q2 ಅವರು ವ್ಯಭಿಚಾರ ಮಾಡಿ, \q2 ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, \q1 ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ \q2 ಅವರ ಕೈಗಳನ್ನು ಬಲಪಡಿಸುತ್ತಾರೆ. \q1 ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, \q2 ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.” \p \v 15 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: \q1 “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. \q2 ವಿಷದ ನೀರನ್ನು ಕುಡಿಯ ಕೊಡುವೆನು. \q1 ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ \q2 ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.” \p \v 16 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. \q2 ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. \q1 ಯೆಹೋವ ದೇವರ ಬಾಯಿಂದಲ್ಲ, \q2 ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ. \q1 \v 17 ಆದರೂ ನನ್ನನ್ನು ಅಸಹ್ಯಿಸುವವರಿಗೆ, \q2 ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ \q2 ಎಂದು ಹೇಳುತ್ತಲೇ ಇದ್ದಾರೆ. \q1 ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ \q2 ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ. \q1 \v 18 ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು \q2 ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? \q2 ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ? \q1 \v 19 ಇಗೋ, ಯೆಹೋವ ದೇವರ ಬಿರುಗಾಳಿಯು \q2 ಉಗ್ರವಾಗಿ ಹೊರಟಿದೆ. \q1 ಅಘೋರವಾದ ಆ ಬಿರುಗಾಳಿಯು \q2 ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು \q1 \v 20 ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ \q2 ಯೆಹೋವ ದೇವರ ಕೋಪವು ತಿರುಗುವುದಿಲ್ಲ. \q1 ಅಂತ್ಯ ದಿವಸಗಳಲ್ಲಿ ನೀವು \q2 ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ. \q1 \v 21 ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; \q2 ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ \q1 ನಾನು ಅವರ ಸಂಗಡ ಮಾತನಾಡಲಿಲ್ಲ. \q2 ಆದರೂ ಪ್ರವಾದಿಸಿದರು. \q1 \v 22 ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, \q2 ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, \q1 ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, \q2 ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.” \b \q1 \v 23 ಯೆಹೋವ ದೇವರು ಹೀಗೆನ್ನುತ್ತಾರೆ, \q2 “ಹತ್ತಿರದಲ್ಲಿ ಇದ್ದರೆ ಮಾತ್ರ ನಾನು ದೇವರೋ? \q2 ದೂರದಲ್ಲಿದ್ದರೆ ನಾನು ದೇವರಲ್ಲವೋ?” \q1 \v 24 ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ \q2 ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” \q2 ಎಂದು ಯೆಹೋವ ದೇವರು ಹೇಳುತ್ತಾರೆ. \p \v 25 “ ‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ. \v 26 ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ. \v 27 ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ. \v 28 ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ. \v 29 “ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ. \p \v 30 ಆದ್ದರಿಂದ ಇಗೋ, “ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರತಿಯೊಬ್ಬ ಪ್ರವಾದಿಗೆ ನಾನು ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. \v 31 “ಇಗೋ, ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಯೆಹೋವ ದೇವರು ನುಡಿಯುತ್ತಾರೆ,’ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆ. \v 32 ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ. \s1 ಸುಳ್ಳು ಪ್ರವಾದನೆಗಳು \p \v 33 “ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’ \v 34 ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ‘ಯೆಹೋವ ದೇವರು ಹೊರೆ,’ ಎಂದು ಹೇಳಿದ್ದೇಯಾದರೆ, ನಾನು ಅವನನ್ನೂ, ಅವನ ಮನೆಯವರನ್ನೂ ದಂಡಿಸುವೆನು. \v 35 ‘ಯೆಹೋವ ದೇವರು ಕೊಟ್ಟ ಉತ್ತರವೇನು? ಯೆಹೋವ ದೇವರು ನುಡಿದದ್ದು ಏನು?’ ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು, \v 36 ‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ. \v 37 ‘ಯೆಹೋವ ದೇವರಿಂದ ನಿಮಗೆ ಯಾವ ಉತ್ತರ ದೊರಕಿತು? ಯೆಹೋವ ದೇವರು ಏನು ನುಡಿದಿದ್ದಾರೆ?’ ಎಂದು ಪ್ರವಾದಿಯನ್ನು ಕೇಳಿರಿ. \v 38 ‘ಯೆಹೋವ ದೇವರ ಹೊರೆ,’ ಎಂದು ಹೇಳಬೇಡಿ. ಹೇಳಿದರೆ ಯೆಹೋವ ದೇವರು ಇಂತೆನ್ನುತ್ತಾನೆ: ‘ನಾನು ನಿಮಗೆ, ಯೆಹೋವ ದೇವರು ಹೊರೆ,’ ಎಂಬ ಮಾತನ್ನು ಎತ್ತಲೇಕೂಡದೆಂದು ಹೇಳಿ ಕಳುಹಿಸಿದರೂ, ನೀವು ಎತ್ತಿದ್ದೀರಿ. \v 39 ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು. \v 40 ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.” \c 24 \s1 ಅಂಜೂರ ಹಣ್ಣಿನ ಎರಡು ಬುಟ್ಟಿಗಳು \p \v 1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು. \v 2 ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು. \p \v 3 ಆಗ ಯೆಹೋವ ದೇವರು ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. \p ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ. \p \v 4 ಆಗ ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು: \v 5 “ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುವುದನ್ನು ಕೇಳು, ‘ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳುಹಿಸಿಬಿಟ್ಟು, ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂತವರು. ನಾನು ಅವರನ್ನು ಒಳ್ಳೆಯವರಂತೆ ಪರಿಗಣಿಸುತ್ತೇನೆ. \v 6 ಏಕೆಂದರೆ ನಾನು ಅವರ ಒಳ್ಳೆಯದರ ಮೇಲೆ ನನ್ನ ದೃಷ್ಟಿಯನ್ನು ಇಟ್ಟುಕೊಳ್ಳುತ್ತೇನೆ. ಈ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು. ಕೆಡವಿಹಾಕದೆ ಅವರನ್ನು ಕಟ್ಟುವೆನು. ಕೀಳದೆ ಅವರನ್ನು ನೆಡುವೆನು. \v 7 ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು. \p \v 8 “ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. \v 9 ‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು. \v 10 ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ” \c 25 \s1 ಎಪ್ಪತ್ತು ವರ್ಷಗಳ ಸೆರೆಯ ಕಾಲ \p \v 1 ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು. \v 2 ಪ್ರವಾದಿಯಾದ ಯೆರೆಮೀಯನು ಯೆಹೂದದ ಸಮಸ್ತ ಜನರಿಗೂ, ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನೆಂದರೆ: \v 3 ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ. \p \v 4 ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ. \v 5 ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ. \v 6 ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಆರಾಧಿಸುವುದಕ್ಕೂ ಹಿಂಬಾಲಿಸಬೇಡಿರಿ. ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ. ಆಗ ನಿಮಗೆ ಯಾವ ಕೇಡೂ ಮಾಡೆನು.” \p \v 7 “ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ. \p \v 8 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ನನ್ನ ಮಾತುಗಳನ್ನು ಕೇಳದ ಕಾರಣ \v 9 ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು. \v 10 ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು. \v 11 ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು. \p \v 12 “ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು. \v 13 ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು. \v 14 ಅನೇಕ ಜನಾಂಗಗಳೂ, ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆಗಳ ಪ್ರಕಾರವೂ, ಅವರ ಕೈಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. \s1 ಯೆಹೋವ ದೇವರ ರೌದ್ರದ ಪಾತ್ರೆ \p \v 15 ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ. \v 16 ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತ ಕದಲಿ ಓಲಾಡುವರು.” \v 17 ಆಗ ನಾನು ಪಾತ್ರೆಯನ್ನು ಯೆಹೋವ ದೇವರ ಕೈಯಿಂದ ತೆಗೆದುಕೊಂಡು, ಯೆಹೋವ ದೇವರು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. \b \li1 \v 18 ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು. \li1 \v 19 ಈಜಿಪ್ಟಿನ ಅರಸನಾದ ಫರೋಹನಿಗೂ, ಅವನ ಸೇವಕರಿಗೂ, ಅವನ ಅಧಿಕಾರಿಗಳಿಗೂ, ಅವನ ಎಲ್ಲಾ ಜನರಿಗೂ, \v 20 ವಿದೇಶೀಯ ಜನರೆಲ್ಲರಿಗೂ, \li1 ಊಚ್ ದೇಶದ ಅರಸರೆಲ್ಲರಿಗೂ, \li1 ಫಿಲಿಷ್ಟಿಯ ದೇಶದ ಅರಸರಾದ, ಅಷ್ಕೆಲೋನಿಗೂ, ಗಾಜಕ್ಕೂ, ಎಕ್ರೋನಿಗೂ, ಅಷ್ಡೋದಿನ ಉಳಿದವರಿಗೂ, \li1 \v 21 ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ, \li1 \v 22 ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, \li1 ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ, \li1 \v 23 ದೆದಾನಿಗೂ, ತೇಮಾಕ್ಕೂ, ಬೂಜಿಗೂ, ಕಟ್ಟಕಡೆಯ ಮೂಲೆಯವರೆಗೂ, \li1 \v 24 ಅರೇಬಿಯದ ಅರಸರೆಲ್ಲರಿಗೂ, ಮರುಭೂಮಿಯಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ, \li1 \v 25 ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ, \li1 \v 26 ಹತ್ತಿರದಲ್ಲಿಯೂ, ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿರುವ ಉತ್ತರ ದಿಕ್ಕಿನ ಅರಸರೆಲ್ಲರಿಗೂ, ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯಗಳಿಗೂ ಕುಡಿಸಿದೆನು. \li1 ಶೇಷಕಿನ ಅರಸನು ಅವರ ತರುವಾಯ ಕುಡಿಯುವನು. \b \p \v 27 “ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’ \v 28 ಅವರು ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಂಡು ಕುಡಿಯಲು ತಿರಸ್ಕರಿಸಿದರೆ, ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀವು ನಿಶ್ಚಯವಾಗಿ ಕುಡಿಯಬೇಕು. \v 29 ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’ \p \v 30 “ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, \q1 “ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, \q2 ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. \q2 ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, \q1 ದ್ರಾಕ್ಷಿ ತುಳಿಯುವವರ ಹಾಗೆ \q2 ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು. \q1 \v 31 ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. \q2 ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. \q1 ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. \q2 ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” \q2 ಎಂದು ಯೆಹೋವ ದೇವರು ಹೇಳುತ್ತಾರೆ. \p \v 32 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ಇಗೋ, ಜನಾಂಗದಿಂದ ಜನಾಂಗಕ್ಕೆ \q2 ಕೇಡು ಹೊರಡುವುದು. \q1 ಭೂಮಿಯ ಮೇರೆಗಳಿಂದ \q2 ಮಹಾ ಬಿರುಗಾಳಿ ಏಳುವುದು.” \m \v 33 ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು. \q1 \v 34 ಕುರುಬರೇ, ಗೋಳಿಟ್ಟು ಕೂಗಿರಿ. \q2 ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. \q1 ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. \q2 ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ. \q1 \v 35 ಆಗ ಕುರುಬರಿಗೆ ಓಡಿ ಹೋಗುವುದಕ್ಕೂ, \q2 ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವುದಕ್ಕೂ ಮಾರ್ಗವಿಲ್ಲದೆ ಹೋಗುವುದು. \q1 \v 36 ಕುರುಬರ ಕೂಗಿನ ಶಬ್ದವು, \q2 ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳಿಸುತ್ತಿದೆ. \q2 ಏಕೆಂದರೆ ಯೆಹೋವ ದೇವರು ಅವರ ಮೇವಿನ ಸ್ಥಳವನ್ನು ಹಾಳು ಮಾಡಿದ್ದಾರೆ. \q1 \v 37 ಸಮಾಧಾನವುಳ್ಳ ಗೋಮಾಳಗಳು \q2 ಯೆಹೋವ ದೇವರ ಕೋಪದ ದೆಸೆಯಿಂದ ಕೆಡವಿಬಿದ್ದವು. \q1 \v 38 ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. \q2 ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, \q1 ಅವರ ಕೋಪದ ಉರಿಯ ನಿಮಿತ್ತವೂ \q2 ಅವರ ದೇಶವು ಹಾಳಾಯಿತು. \c 26 \s1 ಯೆರೆಮೀಯನು ಯೆರೂಸಲೇಮಿಗೆ ನಾಶನವನ್ನು ನುಡಿದು ಯಾಜಕರ ಮತ್ತು ಪ್ರವಾದಿಗಳ ಕೋಪಕ್ಕೆ ಗುರಿಯಾದದ್ದು \p \v 1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಉಂಟಾಯಿತು. \v 2 “ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ. \v 3 ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು. \v 4 ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ, \v 5 ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ, \v 6 ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ” \p \v 7 ಹೀಗೆ ಯೆರೆಮೀಯನು ಈ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಸಾರುವುದನ್ನು ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಕೇಳುತ್ತಿದ್ದರು. \v 8 ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು. \v 9 ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು. \p \v 10 ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು. \v 11 ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು. \p \v 12 ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ. \v 13 ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು. \v 14 ನಾನಾದರೋ ನಿಮ್ಮ ಕೈಯಲ್ಲಿ ಇದ್ದೇನೆ. ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ. \v 15 ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು. \p \v 16 ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು. \p \v 17 ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟಕ್ಕೆಲ್ಲಾ ಹೇಳಿದ್ದೇನೆಂದರೆ: \v 18 “ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; \q2 ಯೆರೂಸಲೇಮು ಹಾಳುದಿಬ್ಬಗಳಾಗುವುದು; \q2 ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’\f + \fr 26:18 \fr*\ft \+xt ಮೀಕ 3:12\+xt*\ft*\f* \m \v 19 ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು. \p \v 20 ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು. \v 21 ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು. \v 22 ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು. \v 23 ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು. \p \v 24 ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು. \c 27 \s1 ಯೆಹೂದದವರು ನೆಬೂಕದ್ನೆಚ್ಚರನನ್ನು ಸೇವಿಸಬೇಕು \p \v 1 ಯೆಹೂದದ ಅರಸನಾದ ಯೋಷೀಯನ ಮಗನೂ, ಯೆಹೋಯಾಕೀಮನ\f + \fr 27:1 \fr*\fq ಯೆಹೋಯಾಕೀಮ \fq*\ft ಇನ್ನೊಂದು ಹೆಸರು \ft*\fqa ಜೆದಕಿಯಾ\fqa*\f* ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಯೆರೆಮೀಯನಿಗೆ ಬಂತು. \v 2 ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು. \v 3 ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು. \v 4 ‘ಇಸ್ರಾಯೇಲರ ದೇವರೂ ಸೇನಾಧೀಶ್ವರರೂ ಆದ ಯೆಹೋವ ದೇವರು ನಿಮ್ಮ ಯಜಮಾನರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾರೆ ಎಂಬುದಾಗಿ ಹೇಳಿ ಅವರು, “ತಮ್ಮ ತಮ್ಮ ಯಜಮಾನರಿಗೆ ಹೀಗೆ ಹೇಳಬೇಕು: \v 5 ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ. \v 6 ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ. \v 7 ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು. \p \v 8 “ ‘ “ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ. \v 9 ‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ. \v 10 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ. \v 11 ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.” ’ ” \p \v 12 ಯೆಹೂದದ ಅರಸ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿನ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನಿಗೂ, ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ. \v 13 ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯಬೇಕಾಗುವುದೆಂದು ಯೆಹೋವ ದೇವರೇ ನುಡಿದಿದ್ದಾರೆ. ಅಂಥ ಗತಿ ನಿಮಗೂ, ನಿಮ್ಮ ಪ್ರಜೆಗೂ ಏಕೆ ಬರಬೇಕು? \v 14 ‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ,’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. \v 15 ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.” \p \v 16 ಬಳಿಕ ನಾನು ಯಾಜಕರಿಗೂ, ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಯೆಹೋವ ದೇವರ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು,’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. \v 17 ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು? \v 18 ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಯೆಹೋವ ದೇವರ ವಾಕ್ಯ ಅವರಲ್ಲಿ ನೆಲಸಿದ್ದರೆ, ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ, ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸೇನಾಧೀಶ್ವರ ಯೆಹೋವ ದೇವರಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ. \v 19-20 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ, ಯೆಹೂದದ ಅರಸನೂ ಆದ ಯೆಕೊನ್ಯನನ್ನು ಮತ್ತು ಯೆಹೂದದ ಹಾಗೂ ಯೆರೂಸಲೇಮಿನ ಎಲ್ಲ ಮಂತ್ರಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ, ಕೆಲವು ವಸ್ತುಗಳನ್ನು ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ. \v 21 ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: \v 22 ‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.” \c 28 \s1 ಸುಳ್ಳು ಪ್ರವಾದಿಯಾದ ಹನನೀಯನು \p \v 1 ಅದೇ ವರ್ಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ ಗಿಬ್ಯೋನಿನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾದಿಯು ಯೆಹೋವ ದೇವರ ಆಲಯದಲ್ಲಿ ಯಾಜಕರ ಮುಂದೆಯೂ, ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನೆಂದರೆ, \v 2 “ಇಸ್ರಾಯೇಲಿನ ದೇವರೂ ಸೇನಾಧೀಶ್ವರ ಯೆಹೋವ ದೇವರೂ ಹೀಗೆ ಹೇಳುತ್ತಾರೆ: ‘ನಾನು ಬಾಬಿಲೋನಿನ ಅರಸನ ನೊಗವನ್ನು ಮುರಿದಿದ್ದೇನೆ. \v 3 ಎರಡು ವರ್ಷದೊಳಗಾಗಿ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದುಕೊಂಡು, ಬಾಬಿಲೋನಿಗೆ ಒಯ್ದ ಯೆಹೋವ ದೇವರ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು. \v 4 ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.” \p \v 5 ಆಗ ಪ್ರವಾದಿಯಾದ ಯೆರೆಮೀಯನು ಯಾಜಕರ ಮುಂದೆಯೂ, ಯೆಹೋವ ದೇವರ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯನಿಗೆ, \v 6 “ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ. \v 7 ಆದರೂ ನಾನು ನಿನಗೂ, ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು. \v 8 ನನಗೆ ಮುಂಚೆಯೂ, ನಿನಗೆ ಮುಂಚೆಯೂ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ, ದೊಡ್ಡ ರಾಜ್ಯಗಳಿಗೂ ವಿರೋಧವಾಗಿ ಯುದ್ಧವನ್ನು ಕೇಡನ್ನೂ, ವ್ಯಾಧಿಯನ್ನೂ ಕುರಿತು ಪ್ರವಾದಿಸಿದರು. \v 9 ಸಮಾಧಾನವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ, ಆ ಪ್ರವಾದಿಯ ವಾಕ್ಯವು ಉಂಟಾಗುವಾಗ, ಅವನು ಯೆಹೋವ ದೇವರಿಂದ ನಿಜವಾಗಿ ಕಳುಹಿಸಲಾದ ಪ್ರವಾದಿ, ಎಂದು ತಿಳಿಯತಕ್ಕದ್ದು,” ಎಂದನು. \p \v 10 ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯಿಂದ ನೊಗವನ್ನು ತೆಗೆದು, ಅದನ್ನು ಮುರಿದುಬಿಟ್ಟನು. \v 11 ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನೆಂದರೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇದೇ ಪ್ರಕಾರ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು,’ ” ಎಂದನು. ಆಗ ಪ್ರವಾದಿಯಾದ ಯೆರೆಮೀಯನು ತನ್ನ ಮಾರ್ಗವಾಗಿ ಹೊರಟುಹೋದನು. \p \v 12 ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ, ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ, \v 13 “ನೀನು ಹೋಗಿ ಹನನ್ಯನಿಗೆ ಹೀಗೆ ಹೇಳು: ‘ನೀವು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವಕ್ಕೆ ಬದಲಾಗಿ ನಿನ್ನ ಮೇಲೆ ಕಬ್ಬಿಣದ ನೊಗಗಳನ್ನು ಉಂಟುಮಾಡು,’ ಎಂದು ಯೆಹೋವ ದೇವರು ಹೇಳುತ್ತಾರೆ. \v 14 ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ” \p \v 15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನೆಂದರೆ, “ಹನನೀಯನೇ, ಕೇಳು. ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಆದರೆ ನೀನು ಈ ಜನರನ್ನು ಸುಳ್ಳಿನಲ್ಲಿ ಭರವಸೆ ಇಡುವಂತೆ ಮಾಡುತ್ತೀ. \v 16 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’ ” ಎಂದನು. \p \v 17 ಹಾಗೆಯೇ ಪ್ರವಾದಿಯಾದ ಹನನ್ಯನು ಅದೇ ವರ್ಷದಲ್ಲಿ ಏಳನೆಯ ತಿಂಗಳಲ್ಲಿ ಸತ್ತನು. \c 29 \s1 ಸೆರೆಯಾಗಿದ್ದವರಿಗೆ ಪತ್ರ \p \v 1 ಪ್ರವಾದಿಯಾದ ಯೆರೆಮೀಯನು ಸೆರೆಯಲ್ಲಿರುವ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಒಯ್ದ ಜನರೆಲ್ಲರಿಗೂ \v 2 ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು. \v 3 ಯೆಹೂದದ ಅರಸನಾದ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರೀಯನ ಕೈಯಿಂದಲೂ ಕಳುಹಿಸಿದ ಪತ್ರ: \pm \v 4 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮಿನಿಂದ ಬಾಬಿಲೋನಿಗೆ ನಾನು ಕರೆದೊಯ್ದ ಸೆರೆಯವರೆಲ್ಲರಿಗೆ ಹೇಳುವುದೇನೆಂದರೆ: \v 5 “ಮನೆಗಳನ್ನು ಕಟ್ಟಿ ವಾಸಮಾಡಿರಿ. ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ. \v 6 ಮದುವೆಮಾಡಿಕೊಂಡು, ಪುತ್ರಪುತ್ರಿಯರನ್ನು ಪಡೆಯಿರಿ. ನಿಮ್ಮ ಪುತ್ರರಿಗೆ ಹೆಂಡತಿಯರನ್ನು ಹುಡುಕಿರಿ. ನಿಮ್ಮ ಪುತ್ರಿಯರನ್ನು ಮದುವೆಮಾಡಿಕೊಡಿರಿ; ಅವರು ಪುತ್ರಪುತ್ರಿಯರನ್ನು ಹೆರಲಿ. ಹೀಗೆ ನೀವು ಕಡಿಮೆಯಾಗದೆ, ಅಲ್ಲಿ ಹೆಚ್ಚಿರಿ. \v 7 ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.” \v 8 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳೂ ನಿಮ್ಮ ಶಕುನದವರೂ ನಿಮಗೆ ಮೋಸಮಾಡದಿರಲಿ. ನೀವು ಕೇಳುವ ನಿಮ್ಮ ಕನಸುಗಳಿಗೆ ಕಿವಿಗೊಡಬೇಡಿರಿ. \v 9 ಏಕೆಂದರೆ ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. \pm \v 10 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು. \v 11 ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ. \v 12 ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು. \v 13 ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ. \v 14 ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.” \pm \v 15 ಆದರೆ, “ಯೆಹೋವ ದೇವರು ನಮಗೆ ಬಾಬಿಲೋನಿನಲ್ಲಿ ಪ್ರವಾದಿಗಳನ್ನು ಎಬ್ಬಿಸಿದ್ದಾನೆ,” ಎಂದು ನೀವು ಹೇಳಿದ್ದರಿಂದ, \v 16 ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ, ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ \v 17 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ಅವರಲ್ಲಿ ಖಡ್ಗವನ್ನೂ ಕ್ಷಾಮವನ್ನೂ ವ್ಯಾಧಿಯನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿರುವುದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರಗಳ ಹಾಗೆ ಮಾಡುವೆನು. \v 18 ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು. \v 19 ಏಕೆಂದರೆ ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ. ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಿಗ್ಗೆ ಪುನಃ ಕಳುಹಿಸಿದೆನು. ಆದರೆ ಅವರು ಕೇಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. \pm \v 20 ಆದ್ದರಿಂದ ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಕಳುಹಿಸಿದ ಸೆರೆಯವರೆಲ್ಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ, \v 21 ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗ ಅಹಾಬನ ವಿಷಯವೂ, ಮಾಸೇಯನ ಮಗ ಚಿದ್ಕೀಯನ ವಿಷಯವೂ, ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ. ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದುಹಾಕುವನು. \v 22 ಬಾಬಿಲೋನಿನಲ್ಲಿರುವ ಯೆಹೂದದ ಸೆರೆಯವರೆಲ್ಲರು ಅವರಿಂದ ಶಾಪವನ್ನು ತೆಗೆದುಕೊಂಡು, ‘ಬಾಬಿಲೋನಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ, ಅಹಾಬನ ಹಾಗೆಯೂ ಯೆಹೋವ ದೇವರು ನಿನಗೆ ಮಾಡಲಿ,’ ಎಂದು ಹೇಳುವರು. \v 23 ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. \s1 ಶೆಮಾಯನಿಗೆ ಸಂದೇಶ \p \v 24 ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು: \v 25 “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ, ಮಾಸೇಯನ ಮಗ ಯಾಜಕನಾದ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದೆಯಲ್ಲಾ? \v 26 ‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ. \v 27 ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಗದರಿಸಲಿಲ್ಲ? \v 28 ಏಕೆಂದರೆ, ಅವನು ಸೆರೆಯು ಬಹಳ ದೀರ್ಘವಾಗುವುದು, ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ; ಎಂದು ನಮಗೆ ಬಾಬಿಲೋನಿಗೆ ಹೇಳಿ ಕಳುಹಿಸಿದ್ದಾನೆ.’ ” \p \v 29 ಆಗ ಯಾಜಕನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆಮೀಯನಿಗೆ ಓದಿ ಹೇಳಿದನು. \v 30 ಆಗ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು: \v 31 “ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸಬೇಕಾದದ್ದೇನೆಂದರೆ, ‘ಯೆಹೋವ ದೇವರು ನೆಹೆಲಾಮ್ಯನಾದ ಶೆಮಾಯನ ವಿಷಯವಾಗಿ ಹೀಗೆ ಹೇಳುತ್ತಾರೆ. ಶೆಮಾಯನು, ನಾನು ಅವನನ್ನು ಕಳುಹಿಸದೆ ಇರುವಾಗ, ನಿಮಗೆ ಪ್ರವಾದಿಸಿ, ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಇಡಮಾಡಿದ ಕಾರಣ, \v 32 ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ” \c 30 \s1 ಇಸ್ರಾಯೇಲಿನ ಪುನರುದ್ಧಾರ \p \v 1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ, \v 2 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ನೀನು ಬರೆದಿಡು. \v 3 ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.” \p \v 4 ಯೆಹೋವ ದೇವರು ಇಸ್ರಾಯೇಲನ್ನೂ, ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ, \v 5 “ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ನಾವು ನಡುಗುವಿಕೆಯ ಮತ್ತು \q2 ಭಯದ ಧ್ವನಿಯನ್ನು ಕೇಳಿದ್ದೇವೆಯೇ ಹೊರತು, ಸಮಾಧಾನದ್ದಲ್ಲ. \q1 \v 6 ಈಗ ವಿಚಾರಿಸಿ ನೋಡಿರಿ. \q2 ಪುರುಷನು ಮಗುವನ್ನು ಹೆರಬಲ್ಲನೇ. \q1 ನಾನು ಏಕೆ ಪುರುಷರೆಲ್ಲರೂ ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ \q2 ನಡುವಿನ ಮೇಲಕ್ಕೆ ಕೈ ಇಟ್ಟವರ ಹಾಗೆ ನೋಡುತ್ತೇನೆ; \q2 ಏಕೆ ಮುಖಗಳೆಲ್ಲಾ ಕಳೆಗುಂದಿದವು? \q1 \v 7 ಅಯ್ಯೋ, ಈ ದಿನವು ಘೋರವಾದದ್ದು, \q2 ಅದಕ್ಕೆ ಎಣೆ ಇಲ್ಲ; \q1 ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; \q2 ಆದರೂ ಅವರು ಅದರಿಂದ ಪಾರಾಗುವರು.’ \b \q1 \v 8 “ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ, \q2 ‘ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದು ಬಿಟ್ಟು, \q1 ಬಂಧನಗಳನ್ನು ಕಿತ್ತು ಹಾಕುವೆನು; \q2 ಇನ್ನು ವಿದೇಶಿಯರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು. \q1 \v 9 ಆದರೆ ಅವರು ತಮ್ಮ ದೇವರಾದ ಯೆಹೋವ ದೇವರಿಗೂ, \q2 ನಾನು ಅವರಿಗೋಸ್ಕರ ಎಬ್ಬಿಸುವ \q2 ಅವರ ಅರಸನಾದ ದಾವೀದನಿಗೂ ಸೇವೆಮಾಡುವರು. \b \q1 \v 10 “ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, \q2 ಇಸ್ರಾಯೇಲೇ ಹೆದರಬೇಡ,’ \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ \q2 ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. \q1 ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. \q2 ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು. \q1 \v 11 ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು \q2 ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ \q2 ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. \q1 ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. \q2 ನಾನು ಶಿಕ್ಷಿಸದೆ ಬಿಡುವುದಿಲ್ಲ.’ \p \v 12 “ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ ‘ನಿನ್ನ ಗಾಯವು ಗುಣವಾಗದಂಥಾದ್ದು. \q2 ನಿನ್ನ ಬಾಸುಂಡೆಯು ಅಘೋರವಾದದ್ದು. \q1 \v 13 ನಿನಗೋಸ್ಕರ ವಾದಿಸುವವರು ಯಾರೂ ಇರುವುದಿಲ್ಲ. \q2 ನಿನ್ನ ಗಾಯವನ್ನು ನಿನಗೆ ಕಟ್ಟುವ ಹಾಗೆ \q2 ವಾಸಿಮಾಡುವ ಔಷಧಗಳು ನಿನಗೆ ಇಲ್ಲ. \q1 \v 14 ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, \q2 ನಿನ್ನನ್ನು ಹುಡುಕುವುದಿಲ್ಲ. \q1 ನಿನ್ನ ಅಕ್ರಮಗಳು ಬಹಳವೂ, \q2 ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ \q1 ಶತ್ರುವಿನ ಗಾಯದಿಂದಲೂ, \q2 ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ; \q1 \v 15 ನಿನ್ನ ಗಾಯದ ನೋವಿನ ನಿಮಿತ್ತ ಏಕೆ ಕೂಗುತ್ತೀ? \q2 ನಿನ್ನ ದುಃಖವು ಗುಣವಾಗದಂಥಾದ್ದೇ. \q1 ನಿನ್ನ ಅಕ್ರಮ ಬಹಳವಾಗಿರುವುದರಿಂದಲೂ, \q2 ನಿನ್ನ ಪಾಪಗಳು ಪ್ರಬಲವಾಗಿರುವುದರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ. \b \q1 \v 16 “ ‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು. \q2 ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಹೋಗುವನು. \q1 ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು. \q2 ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು. \q1 \v 17 ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, \q2 ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, \q1 ನಿನಗೆ ಕ್ಷೇಮವನ್ನುಂಟು ಮಾಡಿ, \q2 ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ \q2 ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ. \p \v 18 “ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, \q1 “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. \q2 ಅವನ ನಿವಾಸಗಳನ್ನು ಕರುಣಿಸುತ್ತೇನೆ. \q1 ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. \q2 ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು. \q1 \v 19 ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, \q2 ಹರ್ಷಧ್ವನಿಯೂ ಹೊರಡುವುದು. \q1 ಅವರನ್ನು ಹೆಚ್ಚು ಮಾಡುವೆನು. \q2 ಅವರು ಕೊಂಚವಾಗಿರರು, \q1 ಅವರನ್ನು ಘನಪಡಿಸುವೆನು. \q2 ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ. \q1 \v 20 ಅವರ ಮಕ್ಕಳು ಸಹ ಪೂರ್ವಕಾಲದ ಹಾಗೆ ಇರುವರು. \q2 ಅವರ ಸಭೆಯು ನನ್ನ ಮುಂದೆ ಸ್ಥಾಪಿತವಾಗುವುದು. \q2 ಅವರನ್ನು ಬಾಧಿಸುವವರೆಲ್ಲರನ್ನು ಶಿಕ್ಷಿಸುವೆನು. \q1 \v 21 ಅವರ ಪ್ರಮುಖನು ಅವರೊಳಗೆ ಇರುವರು. \q2 ಅವರನ್ನು ಆಳುವವನು ಅವರ ಮಧ್ಯದಲ್ಲಿಂದ ಹೊರಡುವನು. \q1 ನಾನು ಅವನನ್ನು ಹತ್ತಿರ ಬರಮಾಡುವೆನು. \q2 ಅವನು ನನಗೆ ಸಮೀಪಿಸುವನು. \q2 ಆದರೆ ನನಗೆ ಸಮೀಪಿಸುವುದಕ್ಕೆ ತನ್ನ ಹೃದಯ ನಿಶ್ಚಯಮಾಡಿಕೊಂಡ ಇವನ್ಯಾರು,’ \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 22 ‘ನೀವು ನನಗೆ ಪ್ರಜೆಯಾಗಿರುವಿರಿ. \q2 ನಾನು ನಿಮಗೆ ದೇವರಾಗಿರುವೆನು.’ ” \b \q1 \v 23 ಇಗೋ, ಯೆಹೋವ ದೇವರ ಬಿರುಗಾಳಿ \q2 ರೌದ್ರವಾಗಿ ಹೊರಡುತ್ತದೆ. \q1 ಅದು ಬಡಿದುಕೊಂಡು ಹೋಗುವ ಬಿರುಗಾಳಿಯೇ. \q2 ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವುದು. \q1 \v 24 ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, \q2 ನೆರವೇರಿಸುವ ತನಕ \q2 ಆತನ ರೋಷವು ಹಿಂದಿರುಗದು; \q1 ಕಟ್ಟಕಡೆಯ ದಿನಗಳಲ್ಲಿ \q2 ನೀವು ಇದನ್ನು ಗ್ರಹಿಸುವಿರಿ. \c 31 \p \v 1 “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ. \p \v 2 ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ನಾನು ಅವರಿಗೆ ವಿಶ್ರಾಂತಿ ಕೊಡುವುದಕ್ಕೆ ಹೋಗಲಾಗಿ, \q2 ಖಡ್ಗಕ್ಕೆ ತಪ್ಪಿಸಿಕೊಂಡ ಇಸ್ರಾಯೇಲಿನ \q2 ಜನರಿಗೆ ಮರುಭೂಮಿಯಲ್ಲಿ ದಯೆ ದೊರಕಿತು.” \p \v 3 ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, \q1 “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. \q2 ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ. \q1 \v 4 ಇಸ್ರಾಯೇಲಿನ ಕನ್ಯೆಯೇ, \q2 ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. \q1 ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು \q2 ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ. \q1 \v 5 ಸಮಾರ್ಯದ ಪರ್ವತಗಳಲ್ಲಿ ತಿರುಗಿ \q2 ದ್ರಾಕ್ಷಿಗಿಡಗಳನ್ನು ನೆಡುವೆ. \q1 ರೈತರು ನೆಟ್ಟು ಸಾಧಾರಣವಾದವುಗಳಂತೆ \q2 ಫಲ ಅನುಭವಿಸುವರು. \q1 \v 6 ಒಂದು ದಿನ ಬರುವದು, \q2 ಆಗ ಎಫ್ರಾಯೀಮನ ಪರ್ವತಗಳ ಮೇಲಿರುವ ಕಾವಲುಗಾರರು, \q1 ‘ಏಳಿರಿ, ಚೀಯೋನಿಗೆ, \q2 ನಮ್ಮ ಯೆಹೋವ ದೇವರ ಬಳಿಗೆ ಹೋಗೋಣ,’ ” ಎಂದು ಕೂಗುವರು. \p \v 7 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, \q1 “ಯಾಕೋಬನ ವಿಷಯ ಸಂತೋಷದಿಂದ ಹಾಡಿ, \q2 ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. \q1 ಸಾರಿರಿ. ಸ್ತುತಿಸಿರಿ. \q2 ‘ಯೆಹೋವ ದೇವರೇ, ನಿನ್ನ ಜನರನ್ನೂ, \q2 ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ. \q1 \v 8 ಇಗೋ, ನಾನು ಅವರನ್ನು ಉತ್ತರ ದೇಶದಿಂದ ತಂದು \q2 ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ. \q1 ಅವರಲ್ಲಿ ಕುರುಡರೂ, ಕುಂಟರೂ, ಗರ್ಭಿಣಿಯಾದವರೂ, \q2 ದಿನತುಂಬಿದ ಗರ್ಭಿಣಿಯರೂ ಇರುವರು. \q2 ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗಿ ಬರುವರು. \q1 \v 9 ಅವರು ಅಳುತ್ತಾ ಬರುವರು. \q2 ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. \q1 ಅವು ಎಡವದ ಸಮದಾರಿಯಲ್ಲಿ \q2 ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. \q1 ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. \q2 ಎಫ್ರಾಯೀಮನು ನನ್ನ ಚೊಚ್ಚಲ ಮಗನೇ. \b \q1 \v 10 “ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: \q2 ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! \q1 ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, \q2 ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ. \q1 \v 11 ಏಕೆಂದರೆ ಯೆಹೋವ ದೇವರು ಯಾಕೋಬ್ಯರನ್ನು ವಿಮೋಚಿಸಿದ್ದಾರೆ. \q2 ಅವರಿಗಿಂತ ಬಲಿಷ್ಠರ ಕೈಯೊಳಗಿಂದ ಅವರನ್ನು ಬಿಡಿಸಿದ್ದಾರೆ. \q1 \v 12 ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; \q2 ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, \q1 ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು \q2 ಅನುಭವಿಸಲು ಪ್ರವಾಹದಂತೆ ಬರುವರು. \q1 ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; \q2 ಅವರು ಇನ್ನು ಮುಂದೆ ದುಃಖಪಡುವುದಿಲ್ಲ. \q1 \v 13 ಆಗ ಕನ್ನಿಕೆಯರೂ, ಪ್ರಾಯದವರೂ, \q2 ವೃದ್ಧರ ಸಹಿತವಾಗಿ ನಾಟ್ಯವಾಡುತ್ತಾ ಹರ್ಷಿಸುವರು. \q1 ಏಕೆಂದರೆ ನಾನು ಅವರ ದುಃಖವನ್ನು ಆನಂದಕ್ಕೆ ಬದಲಾಯಿಸುವೆನು. \q2 ನಾನು ಅವರನ್ನು ಆಧರಿಸಿ, ಅವರ ದುಃಖದಿಂದ ಬಿಡಿಸಿ, ಅವರಿಗೆ ಸಂತೋಷವನ್ನುಂಟು ಮಾಡುವೆನು. \q1 \v 14 ಇದಲ್ಲದೆ ಯಾಜಕರನ್ನು ಹೇರಳವಾಗಿ ತೃಪ್ತಿಗೊಳಿಸುವೆನು. \q2 ನನ್ನ ಜನರು ನನ್ನ ಒಳ್ಳೆಯತನದಿಂದ ತೃಪ್ತಿಪಡುವರು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \p \v 15 ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: \q1 “ರಾಮದಲ್ಲಿ ರೋದನೆಯೂ, \q2 ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. \q1 ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, \q2 ಆದರಣೆ ಹೊಂದದೆ ಹೋಗಿದ್ದಾಳೆ. \q2 ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.” \p \v 16 ಯೆಹೋವ ದೇವರು ಇಂತೆನ್ನುತ್ತಾರೆ: \q1 “ನಿನ್ನ ಧ್ವನಿಯು ಗೋಳಾಡದಿರಲಿ; \q2 ನಿನ್ನ ಕಣ್ಣು ನೀರು ಸುರಿಸದಿರಲಿ; \q1 ನಿನ್ನ ಪ್ರಯಾಸವು ಸಾರ್ಥಕವಾಗುವುದು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q2 “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು. \q1 \v 17 ನಿನ್ನ ಭವಿಷ್ಯದಲ್ಲಿ ನಿರೀಕ್ಷೆಯಿದೆ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q2 “ಏಕೆಂದರೆ ನಿನ್ನ ಮಕ್ಕಳು ತಮ್ಮ ಸ್ವಂತ ದೇಶಕ್ಕೆ ತಿರುಗಿ ಬರುವರು.” \b \q1 \v 18 “ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. \q2 ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. \q2 ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. \q1 ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. \q2 ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ. \q1 \v 19 ನಾನು ನಿಮ್ಮಿಂದ ದೂರವಾದ ಮೇಲೆಯೇ \q2 ಪಶ್ಚಾತ್ತಾಪ ಪಟ್ಟೆನು; \q1 ತಿಳುವಳಿಕೆ ಹೊಂದಿದ ಮೇಲೆಯೇ \q2 ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. \q1 ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, \q2 ಹೌದು, ತುಂಬಾ ನಾಚಿಕೆಪಟ್ಟೆನು.’ \q1 \v 20 ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? \q2 ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? \q1 ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, \q2 ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. \q1 ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ \q2 ಅವನನ್ನು ಕನಿಕರಿಸುವೆನು,’ ” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 21 “ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ \q1 ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ \q2 ನಿನ್ನ ಹೃದಯವನ್ನು ಇಟ್ಟುಕೋ. \q1 ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, \q2 ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು. \q1 \v 22 ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ \q2 ಎಷ್ಟರವರೆಗೆ ಅಡ್ಡಾಡುವೆ? \q1 ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. \q2 ಹೆಂಗಸು ಗಂಡಸನ್ನು ಕಾಪಾಡುವಳು.” \p \v 23 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು. \v 24 ಯೆಹೂದದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ, ಮಂದೆಯ ಸಂಗಡ ಹೊರಡುವವರೂ ವಾಸವಾಗುವರು. \v 25 ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ. ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.” \p \v 26 ಅಷ್ಟರಲ್ಲಿ ಎಚ್ಚೆತ್ತು ನೋಡಿದೆನು. ನನ್ನ ನಿದ್ದೆ ನನಗೆ ಮಧುರವಾಗಿತ್ತು. \p \v 27 ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು. \v 28 ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. \v 29 “ಆ ದಿನಗಳಲ್ಲಿ, \q1 “ ‘ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದದ್ದರಿಂದ, \q2 ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳುವುದಿಲ್ಲ.’ \m \v 30 ಆದರೆ ಒಬ್ಬೊಬ್ಬನು ಸ್ವಂತ ಪಾಪಕ್ಕಾಗಿ ಸಾಯುವನು. ಹುಳಿ ದ್ರಾಕ್ಷಿಯನ್ನು ತಿಂದ ಮನುಷ್ಯನು ಯಾವನೋ, ಅವನ ಹಲ್ಲುಗಳು ಚಳಿತು ಹೋಗುವುವು.” \q1 \v 31 ಯೆಹೋವ ದೇವರು ಹೇಳುವುದನ್ನು ಕೇಳಿ: \q2 “ನಾನು ಇಸ್ರಾಯೇಲ್ ವಂಶದವರೊಂದಿಗೂ, \q1 ಯೆಹೂದ ವಂಶದವರೊಂದಿಗೂ \q2 ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು. \q1 \v 32 ಈ ಒಡಂಬಡಿಕೆಯು ನಾನು \q2 ಇವರ ಪೂರ್ವಜರನ್ನು ಕೈಹಿಡಿದು \q1 ಈಜಿಪ್ಟ್ ದೇಶದಿಂದ ಕರೆದು ತಂದಾಗ, \q2 ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. \q1 ನಾನು ಅವರಿಗೆ ಯಜಮಾನನಾಗಿ ಇದ್ದರೂ, \q2 ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 33 “ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ \q2 ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. \q1 “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. \q2 ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. \q1 ನಾನು ಅವರಿಗೆ ದೇವರಾಗಿರುವೆನು, \q2 ಅವರು ನನಗೆ ಪ್ರಜೆಯಾಗಿರುವರು. \q1 \v 34 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ \q2 ತನ್ನ ಸಹೋದರನಿಗೂ, \q1 ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. \q2 ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. \q1 ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ಅವರ ಪಾಪಗಳನ್ನು ಇನ್ನೆಂದಿಗೂ \q2 ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.” \p \v 35 ಇದು ಯೆಹೋವ ದೇವರಾದ ನನ್ನ ನುಡಿ, \q1 ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು \q2 ಸೂರ್ಯನನ್ನು ನೇಮಿಸಿದವರು. \q1 ಇರುಳಲ್ಲಿ ಬೆಳಕು ನೀಡಲು \q2 ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. \q1 ಅಲೆಗಳು ಭೋರ್ಗರೆಯುವಷ್ಟು \q2 ಸಮುದ್ರವನ್ನು ಕೆರಳಿಸುವವರು, \q2 ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು. \q1 \v 36 “ಈ ನಿಯಮಗಳು ನನ್ನ ಸನ್ನಿಧಿಯಿಂದ ಯಾವಾಗ ಇಲ್ಲದೆ ಹೋಗುವುವೋ, \q2 ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ \q1 ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತುಹೋಗುವುದು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \p \v 37 ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ, \q2 ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ, \q1 ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು, \q2 ಇಸ್ರಾಯೇಲ್ ವಂಶವನ್ನು ನಾನು ನಿರಾಕರಿಸಿ ಬಿಡಲು ಸಾಧ್ಯ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \p \v 38 ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ಹನನೇಲನ ಬುರುಜು ಮೊದಲುಗೊಂಡು ಮೂಲೆಯ ಬಾಗಿಲಿನವರೆಗೂ ಪಟ್ಟಣವು ಕರ್ತರಿಗೆ ಕಟ್ಟಲಾಗುವ ದಿನಗಳು ಬರಲಿದೆ. \v 39 ಅಳತೆ ದಾರವು ಅದಕ್ಕೆ ಎದುರಾಗಿ ಗಾರೇಬಿನ ಗುಡ್ಡದ ಮೇಲೆ ನೇರವಾಗಿ ಹೊರಟು, ಗೋಯದವರೆಗೂ ಆವರಿಸಿಕೊಳ್ಳುವುದು. \v 40 ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.” \c 32 \s1 ಯೆರೆಮೀಯನು ಹೊಲವನ್ನು ಕೊಂಡದ್ದು \p \v 1 ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷವಾಗಿದ್ದ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವು. \v 2 ಆಗ ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕಿತ್ತು. ಪ್ರವಾದಿಯಾದ ಯೆರೆಮೀಯನು ಯೆಹೂದದ ಅರಸನ ಅರಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಬಂಧಿಸಲಾಗಿದ್ದನು. \p \v 3 ಯೆಹೂದದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವ ದೇವರೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ವಶಪಡಿಸಿಕೊಳ್ಳುವನು. \v 4 ಈ ಯೆಹೂದದ ಅರಸ ಚಿದ್ಕೀಯನು ಬಾಬಿಲೋನಿಯರ ಕೈಯಿಂದ ತಪ್ಪಿಸಿಕೊಳ್ಳಲಾಗದೆ, ಅದರ ಅರಸನ ವಶವಾಗುವುದು ಖಂಡಿತ. ಅವನ ಮುಂದೆ ಸಾಕ್ಷಾತ್ತಾಗಿ ನಿಂತು ಮುಖಾಮುಖಿಯಾಗಿ ಮಾತನಾಡುವನು. \v 5 ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರಿಸುವವರೆಗೂ ಅವನು ಅಲ್ಲಿಯೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಯೆಹೋವ ದೇವರ ನುಡಿ,’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು. \p \v 6 ಆಗ ಯೆರೆಮೀಯನು ತಿಳಿಸಿದ್ದು, “ಯೆಹೋವ ದೇವರ ವಾಕ್ಯವು ನನಗೆ ಬಂತು, \v 7 ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು, ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು,’ ಎಂದು ಹೇಳುವನು. \p \v 8 “ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು, ಯೆಹೋವ ದೇವರ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆ ಬಂದು, ‘ಬೆನ್ಯಾಮೀನಿನ ದೇಶದಲ್ಲಿರುವ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಬಾಧ್ಯದ ಅಧಿಕಾರವೂ ನಿನ್ನದು; ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ,’ ಎಂದು ಬೇಡಿಕೊಂಡು ಹೇಳಿದನು. \p “ಆಗ ಅದು ಯೆಹೋವ ದೇವರ ವಾಕ್ಯವೆಂದು ನಾನು ತಿಳಿದುಕೊಂಡೆನು. \v 9 ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು, ಅವನಿಗೆ ಹದಿನೇಳು ಬೆಳ್ಳಿನಾಣ್ಯ\f + \fr 32:9 \fr*\fq ಹದಿನೇಳು ಬೆಳ್ಳಿನಾಣ್ಯ \fq*\ft ಸುಮಾರು 200 ಗ್ರಾಂ ಬೆಳ್ಳಿ\ft*\f* ತೂಕಮಾಡಿ ಕ್ರಯಕೊಟ್ಟೆನು. \v 10 ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆಹಾಕಿ, ಸಾಕ್ಷಿಗಳನ್ನಿಟ್ಟು, ಬೆಳ್ಳಿಯನ್ನು ತ್ರಾಸಿನಲ್ಲಿ ತೂಕಮಾಡಿದೆನು. \v 11 ಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕು ಬಂದಿ ಷರತ್ತುಗಳಿಂದ ಕೂಡಿ ಮುದ್ರಿತವಾದ ಪತ್ರವನ್ನೂ, ಮುಚ್ಚಿದ್ದ ಪತ್ರವನ್ನೂ ತೆಗೆದುಕೊಂಡು, \v 12 ಮಹ್ಸೇಯನ ಮೊಮ್ಮಗನೂ, ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆ. ನನ್ನ ಚಿಕ್ಕಪ್ಪನ ಮಗ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲ ಯೆಹೂದ್ಯರ ಎದುರಿನಲ್ಲಿ ಈ ಕ್ರಯಪತ್ರವನ್ನು ಕೊಟ್ಟೆ. \p \v 13 “ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇನೆಂದರೆ: \v 14 ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. ಈ ಪತ್ರಗಳನ್ನೂ, ಮುದ್ರೆ ಹಾಕಿದ ಈ ಕ್ರಯ ಪತ್ರವನ್ನೂ, ತೆರೆದಿರುವ ಈ ಪತ್ರವನ್ನೂ ತೆಗೆದು, ಅವು ಬಹು ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು. \v 15 ಇಸ್ರಾಯೇಲಿನ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಈ ದೇಶದಲ್ಲಿ ತಿರುಗಿ ಮನೆಗಳೂ, ಹೊಲಗಳೂ, ದ್ರಾಕ್ಷಿಯ ತೋಟಗಳೂ ಸ್ವಾಧೀನವಾಗುವುವೆಂದು ಹೇಳುತ್ತಾರೆ.’ \p \v 16 “ನಾನು ಆ ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನಿಗೆ ಕೊಟ್ಟ ಮೇಲೆ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದೆನು: \pm \v 17 “ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ. \v 18 ನೀವು ಸಾವಿರಾರು ತಲೆಗಳವರೆಗೆ ಪ್ರೀತಿ, ದಯೆತೋರಿಸಿ, ತಂದೆಗಳ ಅಕ್ರಮಗಳನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸುರಿಸುವವರಾಗಿದ್ದೀರಿ. ಮಹತ್ವವುಳ್ಳವರೂ, ಪರಾಕ್ರಮವುಳ್ಳ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಎಂಬುದು ನಿಮ್ಮ ಹೆಸರು. \v 19 ನೀವು ನಿಮ್ಮ ಯೋಜನೆಯಲ್ಲಿ ದೊಡ್ಡವರು, ಕ್ರಿಯೆಯಲ್ಲಿ ಬಲಿಷ್ಠರು. ನಿಮ್ಮ ಕಣ್ಣುಗಳು ಮನುಷ್ಯರ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರವಾಗಿಯೂ ಕೊಡುವ ಹಾಗೆ ತೆರೆದಿವೆ. \v 20 ನೀವು ಈ ದಿನದವರೆಗೂ ಈಜಿಪ್ಟ್ ದೇಶದಲ್ಲಿಯೂ ಇಸ್ರಾಯೇಲಿನಲ್ಲಿಯೂ ಜನಾಂಗಗಳೊಳಗೂ ಗುರುತುಗಳನ್ನೂ, ಲಕ್ಷಣಗಳನ್ನೂ ಇಟ್ಟಿದ್ದೀರಿ. ಇಂದಿನವರೆಗೂ ನಿಮಗೆ ಹೆಸರನ್ನು ಸ್ಥಿರಪಡಿಸಿಕೊಂಡಿದ್ದೀರಿ. \v 21 ನಿಮ್ಮ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ, ಲಕ್ಷಣಗಳಿಂದಲೂ, ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದಿದ್ದೀರಿ. \v 22 ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀರಿ. \v 23 ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ. \pm \v 24 “ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ. \v 25 ಆದರೂ ಓ ಸಾರ್ವಭೌಮ ಯೆಹೋವ ದೇವರೇ, ನೀನು ನನಗೆ, ‘ಹೊಲವನ್ನು ಹಣಕ್ಕೆ ಕೊಂಡುಕೋ, ಸಾಕ್ಷಿಗಳನ್ನು ಇಡು,’ ಎಂದು ಹೇಳಿದ್ದೀ. ಆದರೂ ಪಟ್ಟಣವು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಲಾಗಿದೆಯಲ್ಲಾ?” \p \v 26 ಆಗ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ, \v 27 “ಇಗೋ, ನಾನೇ ಯೆಹೋವ ದೇವರು, ಸಮಸ್ತ ಜನರ ದೇವರು, ನನಗೆ ಯಾವುದಾದರೂ ಅಸಾಧ್ಯವಾದ ಕಾರ್ಯ ಉಂಟೋ? \v 28 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿಯರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸುತ್ತೇನೆ. ಅವನು ಅದನ್ನು ವಶಪಡಿಸಿಕೊಳ್ಳುವನು. \v 29 ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರು ಬಂದು, ಈ ಪಟ್ಟಣಕ್ಕೆ ಬೆಂಕಿ ಹಚ್ಚಿ; ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವನ್ನರ್ಪಿಸಿ, ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ ಅವುಗಳನ್ನೂ ಸುಟ್ಟುಬಿಡುವರು. \p \v 30 “ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ. \v 31 ಈ ಪಟ್ಟಣವು ಕಟ್ಟಿದ ದಿನದಿಂದ ಈ ದಿನದವರೆಗೂ ನನ್ನ ಕೋಪಕ್ಕೂ, ನನ್ನ ಉಗ್ರಕ್ಕೂ ಗುರಿಯಾಗಿತ್ತು. ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. \v 32 ಇಸ್ರಾಯೇಲರೂ, ಯೆಹೂದದ ಮಕ್ಕಳೂ, ಅವರೂ, ಅವರ ಅರಸರೂ, ಅವರ ಪ್ರಧಾನರೂ, ಅವರ ಯಾಜಕರೂ, ಅವರ ಪ್ರವಾದಿಗಳೂ, ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದರು \v 33 ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ನಾನು ಅವರಿಗೆ ಬೋಧಿಸಿದೆನು. ಪುನಃ ಬೋಧಿಸಿದೆನು. ಆದರೂ ಉಪದೇಶ ಹೊಂದುವುದಕ್ಕೆ ಅವರು ಕಿವಿಗೊಡಲಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ. \v 34 ಆದರೆ ನನ್ನ ಹೆಸರಿನಿಂದ ಕರೆಯಲಾಗಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟಿದ್ದಾರೆ. \v 35 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿ ಕೊಡುವುದಕ್ಕಾಗಿ ಬೆನ್ ಹಿನ್ನೋಮ್ ತಗ್ಗಿನಲ್ಲಿ ಬಾಳ್ ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೇ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆ ಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ. \p \v 36 “ ‘ಹೀಗಾದರೂ ಈಗ ಅದು ಖಡ್ಗದಿಂದಲೂ ಬರದಿಂದಲೂ ವ್ಯಾಧಿಯಿಂದಲೂ ಬಾಬಿಲೋನಿನ ಅರಸನ ಕೈವಶವಾಗಿದೆ,’ ಎಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: \v 37 ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು. \v 38 ಅವರು ನನ್ನ ಜನರಾಗಿರುವರು. ನಾನು ಅವರಿಗೆ ದೇವರಾಗಿರುವೆನು. \v 39 ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು. \v 40 ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ. \v 41 ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ. \p \v 42 “ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ, ಹಾಗೆಯೇ ನಾನು ವಾಗ್ದಾನ ಮಾಡಿದ ಸಮೃದ್ಧಿಯನ್ನೆಲ್ಲಾ ಅವರ ಮೇಲೆ ಬರಮಾಡುವೆನು. \v 43 ‘ಜನಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ,’ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು. \v 44 ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು, ಪತ್ರಗಳನ್ನು ಬರೆದು ಮುದ್ರೆಹಾಕಿ, ಸಾಕ್ಷಿಗಳನ್ನು ಇಟ್ಟುಕೊಳ್ಳುವರು. ಏಕೆಂದರೆ ನಾನು ಅವರ ಸೆರೆಯಿಂದ ಹಿಂದಿರುಗುವಂತೆ ಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ. \c 33 \s1 ಪುನಃಸ್ಥಾಪನೆಯ ವಾಗ್ದಾನ \p \v 1 ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು. \v 2 “ಭೂಮಿಯನ್ನು ಸೃಷ್ಟಿಮಾಡುವ ಯೆಹೋವ ದೇವರೂ ಅದನ್ನು ಸ್ಥಾಪಿಸುವುದಕ್ಕಾಗಿ ಅದನ್ನು ರೂಪಿಸಿದ ಯೆಹೋವನೆಂಬ ಹೆಸರುಳ್ಳವನೂ ಹೇಳುವುದೇನೆಂದರೆ, \v 3 ‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’ \v 4 ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ. \v 5 ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ. \p \v 6 “ ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು. \v 7 ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು. \v 8 ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು. \v 9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’ \p \v 10 “ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ \v 11 ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, \q1 “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, \q2 ಏಕೆಂದರೆ ಯೆಹೋವ ದೇವರು ಒಳ್ಳೆಯವರು. \q2 ಆತನ ಪ್ರೀತಿ ಶಾಶ್ವತವಾಗಿರುತ್ತದೆ.” \m ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. \p \v 12 “ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿ ಕುರುಬರು ತಮ್ಮ ಹಿಂಡುಗಳಿಗೆ ವಿಶ್ರಾಂತಿ ನೀಡಲು ಮತ್ತೆ ಹುಲ್ಲುಗಾವಲುಗಳು ಇರುತ್ತವೆ. \v 13 ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ, ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಮಂದೆಗಳು ಎಣಿಸುವವನ ಕೈಕೆಳಗೆ ಹಾದುಹೋಗುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ. \p \v 14 “ ‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು. \q1 \v 15 “ ‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ \q2 ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. \q2 ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು. \q1 \v 16 ಆಗ ಯೆಹೂದ್ಯರು ಸುರಕ್ಷಿತರಾಗಿರುವರು. \q2 ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. \q1 ಯೆಹೋವ ಚಿದ್ಕೇನು ಅಂದರೆ \q2 ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’ \m \v 17 ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ \v 18 ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’ ” \p \v 19 ಯೆಹೋವ ದೇವರು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದರು: \v 20 “ಯೆಹೋವ ದೇವರಾದ ನನ್ನ ನುಡಿ ಇದು: ‘ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೇ? \v 21 ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು. \v 22 ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ” \p \v 23 ಇದಲ್ಲದೆ ಯೆಹೋವ ದೇವರು ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು: \v 24 “ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ? \v 25 ಯೆಹೋವನಾದ ನಾನು ಹೇಳುವುದನ್ನು ಕೇಳು: ‘ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆ ಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆ ಹೋಗಿದ್ದರೆ, \v 26 ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ” \c 34 \s1 ಚಿದ್ಕೀಯನಿಗೆ ಎಚ್ಚರಿಕೆ \p \v 1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ: \v 2 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು. \v 3 ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ. \p \v 4 “ ‘ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವ ದೇವರ ವಾಗ್ದಾನವನ್ನು ಕೇಳು. ನಿನ್ನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಖಡ್ಗದಿಂದ ಸಾಯುವುದಿಲ್ಲ. \v 5 ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’ ” \p \v 6 ಆಗ ಪ್ರವಾದಿಯಾದ ಯೆರೆಮೀಯನು ಈ ವಾಕ್ಯಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು. \v 7 ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಎಂದರೆ, ಲಾಕೀಷಿಗೂ ಅಜೇಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿದನು. ಏಕೆಂದರೆ ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ಮಾತ್ರ ನಿಂತಿದ್ದವು. \s1 ಗುಲಾಮರಿಗೆ ಸ್ವತಂತ್ರ \p \v 8 ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು. \v 9 ಪ್ರತಿಯೊಬ್ಬರೂ ತಮ್ಮ ಗಂಡು ಮತ್ತು ಹೆಣ್ಣು ಹಿಬ್ರಿಯ ಗುಲಾಮರನ್ನು ಇಬ್ಬರನ್ನೂ ಮುಕ್ತಗೊಳಿಸಬೇಕು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಬಂಧನದಲ್ಲಿ ಇಟ್ಟುಕೊಳ್ಳಲಿಲ್ಲ. \v 10 ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡರು. ಇನ್ನು ಮುಂದೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಳ್ಳುವುದಿಲ್ಲ ಎಂದು ಅವರು ಒಪ್ಪಿದರು ಮತ್ತು ಅವರನ್ನು ಬಿಡುಗಡೆ ಮಾಡಿದರು. \v 11 ಆದರೆ ನಂತರ ಅವರು ತಮ್ಮ ಮನಸ್ಸನ್ನು ಬದಲಾಯಿಸಿದರು ಮತ್ತು ಅವರು ಬಿಡುಗಡೆ ಮಾಡಿದ ಗುಲಾಮರನ್ನು ಮರಳಿ ತೆಗೆದುಕೊಂಡು ಅವರನ್ನು ಮತ್ತೆ ಗುಲಾಮರನ್ನಾಗಿ ಮಾಡಿದರು. \p \v 12 ಆದ್ದರಿಂದ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾಗಿ: \v 13 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ದಾಸರ ದೇಶದೊಳಗಿಂದ ಹೊರಗೆ ತಂದ ದಿವಸದಲ್ಲಿ ಅವರ ಸಂಗಡ ಒಡಂಬಡಿಕೆ ಮಾಡಿ, \v 14 ‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’\f + \fr 34:14 \fr*\ft \+xt ಧರ್ಮೋ 15:12\+xt*\ft*\f* ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ. \v 15 ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ. \v 16 ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ. \p \v 17 “ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು. \v 18 ನನ್ನ ಒಡಂಬಡಿಕೆಯನ್ನು ಮೀರಿದ ಮನುಷ್ಯರನ್ನೂ, ಕರುವನ್ನೂ ಎರಡು ಭಾಗಮಾಡಿ, ಅದರ ತುಂಡುಗಳ ನಡುವೆ ದಾಟಿ ಹೋಗಿ, ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನ್ನೂ, \v 19 ಯೆಹೂದದ ಪ್ರಧಾನರನ್ನೂ, ಯೆರೂಸಲೇಮಿನ ಪ್ರಧಾನರನ್ನೂ, ಕಂಚುಕಿಯರನ್ನೂ, ಯಾಜಕರನ್ನೂ, ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ, \v 20 ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು. \p \v 21 “ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ, ನಿಮ್ಮನ್ನು ಬಿಟ್ಟುಹೋಗಿರುವ ಬಾಬಿಲೋನಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು. \v 22 ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.” \c 35 \s1 ರೇಕಾಬ್ಯರು \p \v 1 ಯೋಷೀಯನ ಮಗನಾದ ಯೆಹೂದದ ಅರಸ ಯೆಹೋಯಾಕೀಮನ ಕಾಲದಲ್ಲಿ ಯೆರೆಮೀಯನಾದ ನನಗೆ ಯೆಹೋವ ದೇವರಿಂದ ಬಂದ ವಾಕ್ಯ ಇದು: \v 2 “ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರನ್ನು ಯೆಹೋವ ದೇವರ ಆಲಯದ ಒಂದು ಕೋಣೆಯೊಳಕ್ಕೆ ಕರೆದು, ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.” \p \v 3 ಆಗ ನಾನು ಹಬಚ್ಚಿನ್ಯನ ಮಗ, ಯೆರೆಮೀಯನ ಮಗನಾದ, ಯಾಜನ್ಯನೂ, ಅವನ ಸಹೋದರರನ್ನೂ, ಅವನ ಪುತ್ರರೆಲ್ಲರನ್ನೂ ರೇಕಾಬನ ಸಮಸ್ತ ಮನೆಯವರನ್ನೂ ಕರೆಯುವುದಕ್ಕೆ ಹೋದೆನು. \v 4 ಕರೆದುಕೊಂಡು ಯೆಹೋವ ದೇವರ ಆಲಯಕ್ಕೆ ದ್ವಾರಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಪುತ್ರರ ಕೊಠಡಿಗೆ ತಂದು, \v 5 ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಹೂಜೆಗಳನ್ನೂ, ಪಂಚ ಪಾತ್ರೆಗಳನ್ನೂ ಇಟ್ಟು ಅವರಿಗೆ, “ದ್ರಾಕ್ಷಾರಸ ಕುಡಿಯಿರಿ,” ಎಂದನು. \p \v 6 ಆದರೆ ಅವರು, “ನಾವು ದ್ರಾಕ್ಷಾರಸ ಕುಡಿಯುವುದಿಲ್ಲ; ಏಕೆಂದರೆ ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಈ ಆಜ್ಞೆಯನ್ನು ಕೊಟ್ಟನು. ಅದು ಏನೆಂದರೆ ನೀವಾದರೂ, ನಿಮ್ಮ ಮಕ್ಕಳಾದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬೇಡಿರಿ; \v 7 ಮನೆ ಕಟ್ಟಬೇಡಿರಿ, ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷಿತೋಟವನ್ನು ನೆಡಬೇಡಿರಿ, ಅಂಥದ್ದು ನಿಮಗಿರಬಾರದು. ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿವಸಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು. \v 8 ಈ ಪ್ರಕಾರ ನಾವು ನಮ್ಮ ಪೂರ್ವಜನಾದ ರೇಕಾಬನ ಮಗ ಯೆಹೋನಾದಾಬನ ಮಾತನ್ನು, ಅವನು ನಮಗೆ ಆಜ್ಞಾಪಿಸಿದ್ದೆಲ್ಲದರಲ್ಲಿ ನಾವೂ, ನಮ್ಮ ಹೆಂಡತಿಯರೂ, ನಮ್ಮ ಪುತ್ರರೂ, ನಮ್ಮ ಪುತ್ರಿಯರೂ ನಮ್ಮ ದಿವಸಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ, \v 9 ವಾಸಮಾಡುವುದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ಇದ್ದೇವೆ. ನಮಗೆ ದ್ರಾಕ್ಷಿ ತೋಟಗಳೂ, ಹೊಲಗಳೂ, ಬೀಜವೂ ಇಲ್ಲ. \v 10 ಗುಡಾರಗಳಲ್ಲಿ ವಾಸಮಾಡುತ್ತೇವೆ. ನಮ್ಮ ಪೂರ್ವಜನಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಕೇಳಿ ನಡೆದಿದ್ದೇವೆ. \v 11 ಆದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ, ‘ನಾವು ಬನ್ನಿ, ಕಸ್ದೀಯರ ದಂಡಿಗೂ, ಅರಾಮಿನ ದಂಡಿಗೂ ತಪ್ಪಿಸಿಕೊಂಡು, ಯೆರೂಸಲೇಮಿಗೆ ಹೋಗೋಣ,’ ಎಂದೆವು. ಹೀಗೆ ಯೆರೂಸಲೇಮಿನಲ್ಲಿಯೇ ಉಳಿದುಕೊಂಡಿದ್ದೇವೆ,” ಎಂದರು. \p \v 12 ಆದ್ದರಿಂದ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ, \v 13 “ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ. \v 14 ರೇಕಾಬನ ಮಗ ಯೆಹೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.” \v 15 ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ. \v 16 ರೇಕಾಬನ ಮಗ ಯೆಹೋನಾದಾಬನ ಸಂತಾನದವರು ತಮ್ಮ ಪೂರ್ವಜನು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆ ಹೋದರು. \p \v 17 “ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ” \p \v 18 ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆನ್ನುತ್ತಾರೆ: ನೀವು ನಿಮ್ಮ ಪೂರ್ವಜನಾದ ಯೆಹೋನಾದಾಬನ ಅಪ್ಪಣೆಯನ್ನು ಕೇಳಿ, ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ \v 19 ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆ ಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು, ಇಸ್ರಾಯೇಲರ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಇದನ್ನು ನುಡಿದಿದ್ದಾರೆ,” ಎಂದನು. \c 36 \s1 ಯೆಹೋಯಾಕೀಮನು ಪ್ರವಾದನೆಯ ಗ್ರಂಥಗಳನ್ನು ಸುಟ್ಟದ್ದು \p \v 1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಈ ವಾಕ್ಯವು ಬಂದಿತು: \v 2 “ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. \v 3 ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು. \p \v 4 ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆದನು. ಬಾರೂಕನು ಯೆರೆಮೀಯನ ಬಾಯಿಂದ ಯೆಹೋವ ದೇವರು ಅವನಿಗೆ ಹೇಳಿದ್ದ ಮಾತುಗಳನ್ನೆಲ್ಲಾ ಕೇಳಿ, ಗ್ರಂಥದ ಸುರುಳಿಯನ್ನು ಬರೆದನು. \v 5 ಆಮೇಲೆ ಯೆರೆಮೀಯನು ಬಾರೂಕನಿಗೆ ಆಜ್ಞಾಪಿಸಿದ್ದೇನೆಂದರೆ, “ನಾನು ಇಲ್ಲಿ ಬಂಧಿಸಲಾಗಿದ್ದೇನೆ. ಯೆಹೋವ ದೇವರ ಆಲಯಕ್ಕೆ ಹೋಗಲಾರೆನು. \v 6 ಆದ್ದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ, ನೀನು ಬರೆದು ಸುರುಳಿಯಲ್ಲಿ ಯೆಹೋವ ದೇವರ ಆಲಯದೊಳಗೆ ಉಪವಾಸದ ದಿವಸದಲ್ಲಿ ಯೆಹೋವ ದೇವರ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು. \v 7 ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.” \p \v 8 ಆಗ ನೇರೀಯನ ಮಗ ಬಾರೂಕನು ಪ್ರವಾದಿಯಾದ ಯೆರೆಮೀಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿ, ಸುರುಳಿಯಲ್ಲಿನ ಯೆಹೋವ ದೇವರ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಓದಿದನು. \v 9 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು. \v 10 ಆಗ ಬಾರೂಕನು ಪುಸ್ತಕದಿಂದ ಯೆರೆಮೀಯನ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಲೇಖಕನಾಗಿರುವ ಶಾಫಾನನ ಮಗನಾಗಿರುವ ಗೆಮರೀಯನ ಕೊಠಡಿಯಲ್ಲಿ ಮೇಲಿನ ಅಂಗಳದಲ್ಲಿ, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರು ಕೇಳುವಂತೆ ಓದಿ ಹೇಳಿದನು. \p \v 11 ಶಾಫಾನನ ಮೊಮ್ಮಗನೂ, ಗೆಮರೀಯನ ಮಗನೂ ಆದ ಮೀಕಾಯನು ಸುರುಳಿಯಿಂದ ಓದಲಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿದನು. ಅಲ್ಲಿಂದ ಅರಮನೆಯಲ್ಲಿದ್ದ ಲೇಖಕನ ಕೊಠಡಿಗೆ ಇಳಿದು ಹೋದನು. \v 12 ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶಾಫಾನನ ಮಗ ಗೆಮರೀಯನು, ಹನನ್ಯನ ಮಗ ಚಿದ್ಕೀಯನು ಹೀಗೆ ರಾಜ್ಯಾಧಿಕಾರಿಗಳೆಲ್ಲರೂ ಕುಳಿತುಕೊಂಡಿದ್ದರು. \v 13 ಆಗ ಮೀಕಾಯನು ಅವರಿಗೆ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ, ತಾನು ಕೇಳಿದ ವಾಕ್ಯಗಳನ್ನೆಲ್ಲಾ ತಿಳಿಸಿದನು. \v 14 ಅಧಿಕಾರಿಗಳೆಲ್ಲರು ಸೇರಿ ನೆತನ್ಯನ ಮಗನೂ, ಶೆಲೆಮ್ಯನ ಮೊಮ್ಮಗನೂ, ಕೂಷಿಯ ಮರಿಮಗನೂ ಆದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿದನು. “ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ,” ಎಂದು ಹೇಳಿ ಕಳುಹಿಸಿದರು. ಅಂತೆಯೇ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು. \v 15 ಆಗ ಅವರು ಅವನಿಗೆ, “ಈಗ ಕುಳಿತುಕೊಂಡು ನಮಗೆ ಓದಿ ಹೇಳು,” ಎಂದರು. \p ಆಗ ಬಾರೂಕನು ಅವರಿಗೆ ಓದಿ ಹೇಳಿದನು. \v 16 ಆಗ ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು, “ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇವೆ,” ಎಂದು ಬಾರೂಕನಿಗೆ ಹೇಳಿದರು. \v 17 ಅವರು ಬಾರೂಕನಿಗೆ, “ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದೆ, ನಮಗೆ ತಿಳಿಸು,” ಎಂದರು. \p \v 18 ಆಗ ಬಾರೂಕನು ಅವರಿಗೆ, “ಅವನು ಈ ವಾಕ್ಯಗಳನ್ನೆಲ್ಲಾ ನನಗೆ ಹೇಳಿಕೊಟ್ಟನು. ನಾನು ಅವುಗಳನ್ನು ಮಸಿಯಿಂದ ಸುರುಳಿಯಲ್ಲಿ ಬರೆದೆನು,” ಎಂದನು. \p \v 19 ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು. \p \v 20 ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರುಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು ಮತ್ತು ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು. \v 21 ಹೀಗೆ ಅರಸನು ಯೆಹೂದಿಯನ್ನು, ಆ ಸುರುಳಿಯನ್ನು ತೆಗೆದುಕೊಂಡು ಬರುವ ಹಾಗೆ ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು. ಯೆಹೂದಿಯು ಅದನ್ನು ಅರಸನಿಗೂ, ಅರಸನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನರಿಗೂ ಓದಿ ಹೇಳಿದನು. \v 22 ಆಗ ಒಂಬತ್ತನೆಯ ತಿಂಗಳಿನ ಅರಸನು ಚಳಿಗಾಲದ ಮನೆಯಲ್ಲಿ ಕುಳಿತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು. \v 23 ಆಗ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿಯಿಂದ ಕೊಯ್ದು, ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರುಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟುಹೋಗುವವರೆಗೂ ಹಾಕಿಬಿಟ್ಟನು. \v 24 ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ. \v 25 ಹೀಗಾದರೂ ಎಲ್ನಾಥಾನನೂ, ದೆಲಾಯನೂ, ಗೆಮರೀಯನೂ ಆ ಸುರುಳಿಯನ್ನು ಸುಡಬಾರದೆಂದು ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ. \v 26 ಆದರೆ ಅರಸನು ರಾಜಪುತ್ರ ಯೆರಹ್ಮೇಲನಿಗೂ, ಅಜ್ರಿಯೇಲನ ಮಗನಾದ ಸೆರಾಯನಿಗೂ, ಅಬ್ದೆಯೇಲನ ಮಗ ಶೆಲೆಮ್ಯನಿಗೂ, ಲೇಖಕನಾದ ಬಾರೂಕನನ್ನೂ, ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಯೆಹೋವ ದೇವರು ಅವರನ್ನು ಅಡಗಿಸಿದ್ದರು. \p \v 27 ಅರಸನು ಆ ಸುರುಳಿಯನ್ನು ಬಾರೂಕನು ಯೆರೆಮೀಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ, ಸುಟ್ಟ ಮೇಲೆ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು: \v 28 “ನೀನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. \v 29 ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ. \v 30 ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು. \v 31 ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’ ” \p \v 32 ಆಗ ಯೆರೆಮೀಯನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗ ಲೇಖಕನಾದ ಬಾರೂಕನಿಗೆ ಕೊಟ್ಟನು. ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಸುರುಳಿಯ ವಾಕ್ಯಗಳನ್ನೆಲ್ಲಾ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲಾದವು. \c 37 \s1 ಸೆರೆಮನೆಯಲ್ಲಿ ಯೆರೆಮೀಯನು \p \v 1 ಯೋಷೀಯನ ಮಗ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಅರಸನನ್ನಾಗಿ ಮಾಡಿದನು. ಅವನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ, ಅರಸನಾಗಿ ಆಳಿದನು. \v 2 ಆದರೆ ಅವನೂ ಅವನ ಸೇವಕರೂ ದೇಶದ ಜನರೂ ಯೆಹೋವ ದೇವರ ಪ್ರವಾದಿಯಾದ ಯೆರೆಮೀಯನಿಂದ ಹೇಳಿಸಿದ ವಾಕ್ಯಗಳಿಗೆ ಕಿವಿಗೊಡಲಿಲ್ಲ. \p \v 3 ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ, ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ, ಪ್ರವಾದಿಯಾದ ಯೆರೆಮೀಯನ ಬಳಿಗೆ ಕಳುಹಿಸಿ, “ನಮಗೋಸ್ಕರ ನಮ್ಮ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸು,” ಎಂದು ಹೇಳಿಸಿದನು. \p \v 4 ಆಗ ಯೆರೆಮೀಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು. ಏಕೆಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ. \v 5 ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ, ಯೆರೂಸಲೇಮನ್ನು ಬಿಟ್ಟುಹೋದರು. \p \v 6 ಆಗ ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಯೆರೆಮೀಯನಿಗೆ ಬಂದಿತು: \v 7 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನೆಂದರೆ, ಇಗೋ, ನಿಮ್ಮ ಸಹಾಯಕ್ಕೆ ಹೊರಟ, ‘ಫರೋಹನ ಸೈನ್ಯವು, ಅದರ ಸ್ವದೇಶವಾದ ಈಜಿಪ್ಟಿಗೆ ಹಿಂದಿರುಗುವುದು. \v 8 ಕಸ್ದೀಯರು ತಿರುಗಿಕೊಂಡು, ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು.’ \p \v 9 “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಕಸ್ದೀಯರು ನಿಜವಾಗಿ ನಮ್ಮನ್ನು ಬಿಟ್ಟು ಹೋಗುವರು,’ ಎಂದುಕೊಂಡು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ; ಏಕೆಂದರೆ ಅವರು ತೊಲಗುವುದೇ ಇಲ್ಲ. \v 10 ನಿಮ್ಮ ಸಂಗಡ ಯುದ್ಧಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿದ್ದಾಗ್ಯೂ, ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು, ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.” \p \v 11 ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ, ಯೆರೂಸಲೇಮನ್ನು ಬಿಟ್ಟುಹೋದ ಮೇಲೆ, \v 12 ಯೆರೆಮೀಯನು ಬೆನ್ಯಾಮೀನನ ದೇಶಕ್ಕೆ ಹೋಗುವುದಕ್ಕೂ, ಜನರ ಮಧ್ಯದಿಂದ ತನ್ನ ಪಾಲನ್ನು ತೆಗೆದುಕೊಳ್ಳುವುದಕ್ಕೂ ಯೆರೂಸಲೇಮಿನಿಂದ ಹೊರಟನು. \v 13 ಆಗ ಅವನು ಬೆನ್ಯಾಮೀನನ ಬಾಗಿಲಲ್ಲಿ ಇರುವಾಗ, ಅಲ್ಲಿ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನಾದ ಇರೀಯನೆಂಬ ಪಹರೆಯ ನಾಯಕನು ಇದ್ದನು. ಇವನು ಪ್ರವಾದಿಯಾದ ಯೆರೆಮೀಯನನ್ನು, “ನೀನು ಕಸ್ದೀಯರ ಪಕ್ಷಕ್ಕೆ ಸೇರುತ್ತೀ,” ಎಂದು ಹೇಳಿ ಹಿಡಿದನು. \p \v 14 ಆದರೆ ಯೆರೆಮೀಯನು ಹೇಳಿದ್ದೇನೆಂದರೆ, ಸುಳ್ಳು; ನಾನು ಕಸ್ದೀಯರ ಕಡೆಗೆ ಸೇರುವವನಲ್ಲ. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆಮೀಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು. \v 15 ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು. \p \v 16 ಯೆರೆಮೀಯನು ಆ ಬಂಧಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದನು. \v 17 ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. \p ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು. \p \v 18 ಇದಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇನೆಂದರೆ: “ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ, ನಿನ್ನ ಸೇವಕರಿಗೂ, ಈ ಜನರಿಗೂ ವಿರೋಧವಾಗಿ ಏನು ಅಪರಾಧ ಮಾಡಿದ್ದೇನೆ? \v 19 ಬಾಬಿಲೋನಿನ ಅರಸನು ನಿಮ್ಮ ಮೇಲೆಯೂ, ಈ ದೇಶದ ಮೇಲೆಯೂ ಬರುವುದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? \v 20 ಆದ್ದರಿಂದ ಈಗ ಕಿವಿಗೊಡು. ನನ್ನ ಒಡೆಯನಾದ ಅರಸನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀಕಾರವಾಗಲಿ. ಲೇಖಕನಾದ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ,” ಎಂದನು. \p \v 21 ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು. \c 38 \s1 ಯೆರೆಮೀಯನನ್ನು ಬಾವಿಯೊಳಗೆ ಹಾಕಿದ್ದು \p \v 1 ಮತ್ತಾನನ ಮಗ ಶೆಫಟ್ಯ, ಪಷ್ಹೂರನ ಮಗ ಗೆದಲ್ಯ, ಶೆಲೆಮ್ಯನ ಮಗ ಯೂಕಲ ಹಾಗೂ ಮಲ್ಕೀಯನ ಮಗ ಪಷ್ಹೂರ, ಇವರು ಯೆರೆಮೀಯನು ಜನರೆಲ್ಲರಿಗೆ ಹೇಳುತ್ತಿದ್ದುದನ್ನು ಕೇಳುತ್ತಿದ್ದರು. \v 2 “ಯೆಹೋವ ದೇವರು ಹೀಗೆನ್ನುತ್ತಾರೆ: ‘ನಗರದಲ್ಲಿ ನಿಲ್ಲುವವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವರು. ನಗರವನ್ನು ಬಿಟ್ಟು ಹೋಗಿ, ಬಾಬಿಲೋನಿಯರನ್ನು ಮೊರೆಹೋಗುವವರು ಬದುಕುವರು. ತಮ್ಮ ಪ್ರಾಣದೊಂದಿಗೆ ತಪ್ಪಿಸಿಕೊಂಡವರು, ಬದುಕುವರು. \v 3 ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ,’ ಎಂದು ಯೆಹೋವ ದೇವರು ಸಾರುತ್ತಿದ್ದಾರೆ.” \p \v 4 ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು. \p \v 5 ಆಗ ಅರಸನಾದ ಚಿದ್ಕೀಯನು, “ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡುವುದಿಲ್ಲ,” ಎಂದನು. \p \v 6 ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು. \p \v 7 ಆಗ ಅರಸನು ಮನೆಯಲ್ಲಿರುವ ಕಂಚುಕಿಯಾದ ಕೂಷ್ಯನಾದ ಎಬೆದ್ಮೆಲೆಕನು ಅವರು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದರೆಂದು ಕೇಳಿದಾಗ, ಅರಸನು ಬೆನ್ಯಾಮೀನನ ಬಾಗಿಲಲ್ಲಿ ಕೂತಿರಲಾಗಿ, \v 8 ಎಬೆದ್ಮೆಲೆಕನು ಅರಸನ ಅರಮನೆಯನ್ನು ಬಿಟ್ಟು, ಹೊರಟು ಅರಸನ ಸಂಗಡ ಮಾತನಾಡಿ, \v 9 “ನನ್ನ ಒಡೆಯನಾದ ಅರಸನೇ, ಈ ಮನುಷ್ಯರು ಬಾವಿಯಲ್ಲಿ ಹಾಕಿದ ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಏಕೆಂದರೆ ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ,” ಎಂದನು. \p \v 10 ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಪ್ರವಾದಿಯಾದ ಯೆರೆಮೀಯನನ್ನು ಅವನು ಸಾಯುವುದಕ್ಕಿಂತ ಮುಂಚೆ ಬಾವಿಯೊಳಗಿಂದ ಮೇಲಕ್ಕೆತ್ತು,” ಎಂದು ಆಜ್ಞಾಪಿಸಿದನು. \p \v 11 ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರೆದುಕೊಂಡು, ಖಜಾನೆ ಕೆಳಗಿರುವ ಅರಮನೆಗೆ ಹೋಗಿ, ಅಲ್ಲಿಂದ ಹರಿದುಹೋದ ಹಳೆಯ ಬಟ್ಟೆಗಳನ್ನೂ, ಸವೆದು ಹೋದ ಹಳೆಯ ವಸ್ತ್ರಗಳನ್ನೂ ತೆಗೆದುಕೊಂಡು, ಅವುಗಳನ್ನು ಹಗ್ಗಗಳಂತೆ ಯೆರೆಮೀಯನ ಬಳಿಗೆ ಬಾವಿಯೊಳಗೆ ಇಳಿಸಿದನು. \v 12 ಕೂಷ್ಯನಾದ ಎಬೆದ್ಮೆಲೆಕನು ಯೆರೆಮೀಯನಿಗೆ, “ಈ ಹರಿದು ಸವೆದು ಹೋದ ಹಳೆಯ ಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ,” ಎಂದನು. ಯೆರೆಮೀಯನು ಹಾಗೆ ಮಾಡಿದನು. \v 13 ಹೀಗೆ ಹಗ್ಗಗಳಿಂದ ಯೆರೆಮೀಯನನ್ನು ಎಳೆದು, ಅವನನ್ನು ಬಾವಿಯೊಳಗಿಂದ ಎತ್ತಿದನು. ಆಮೇಲೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ಉಳಿದನು. \s1 ಚಿದ್ಕೀಯನು ಯೆರೆಮೀಯನನ್ನು ಮತ್ತೆ ಪ್ರಶ್ನಿಸಿದ್ದು \p \v 14 ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ತನ್ನ ಬಳಿಗೆ ಕರೆಯಿಸಿ, ಯೆಹೋವ ದೇವರ ಆಲಯದಲ್ಲಿರುವ ಮೂರನೆಯ ದ್ವಾರಕ್ಕೆ ಕರೆದುಕೊಂಡು ಹೋದನು. ಆಗ ಅರಸನು ಯೆರೆಮೀಯನಿಗೆ, “ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವುದನ್ನಾದರೂ ಬಚ್ಚಿಡಬೇಡ,” ಎಂದನು. \p \v 15 ಆಗ ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ, ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವುದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ, ನೀನು ನನ್ನನ್ನು ಕೇಳುವುದಿಲ್ಲ,” ಎಂದು ಹೇಳಿದನು. \p \v 16 ಹೀಗೆ ಅರಸನಾದ ಚಿದ್ಕೀಯನು ಯೆರೆಮೀಯನಿಗೆ ಅಂತರಂಗದಲ್ಲಿ ಪ್ರಮಾಣಮಾಡಿ, “ನಮಗೆ ಈ ಪ್ರಾಣವನ್ನು ಉಂಟುಮಾಡಿದ ಯೆಹೋವ ದೇವರ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವುದಿಲ್ಲ,” ಎಂದನು. \p \v 17 ಆಗ ಯೆರೆಮೀಯನು ಚಿದ್ಕೀಯನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿಶ್ಚಯವಾಗಿ ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ, ನಿನ್ನ ಪ್ರಾಣವು ಬದುಕುವುದು. ಈ ಪಟ್ಟಣವು ಬೆಂಕಿಯಿಂದ ಸುಡಲಾಗುವುದಿಲ್ಲ. ನೀನೂ, ನಿನ್ನ ಮನೆಯವರೂ ಬದುಕುವಿರಿ. \v 18 ಆದರೆ ನೀನು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ, ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲಾಗುವುದು. ಅವರು ಅದನ್ನು ಬೆಂಕಿಯಿಂದ ಸುಡುವರು. ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವುದಿಲ್ಲ,’ ” ಎಂದನು. \p \v 19 ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು. \p \v 20 ಆದರೆ ಯೆರೆಮೀಯನು, “ಅವರು ನಿನ್ನನ್ನು ಒಪ್ಪಿಸುವುದಿಲ್ಲ” ನಾನು ನಿನಗೆ ಹೇಳುವ ಯೆಹೋವ ದೇವರ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೆಯದಾಗುವುದು. ನಿನ್ನ ಪ್ರಾಣ ಬದುಕುವುದು. \v 21 ಆದರೆ ನೀನು ಶರಣಾಗತಿಯನ್ನು ನಿರಾಕರಿಸಿದರೆ, ಯೆಹೋವ ದೇವರು ನನಗೆ ತೋರಿಸಿದ ಮಾತು ಇದೇ: \v 22 ಇಗೋ, ಯೆಹೂದದ ಅರಸನ ಅರಮನೆಯಲ್ಲಿ ಉಳಿದ ಹೆಂಗಸರೆಲ್ಲರು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಕರೆತರಲಾಗಿ ಹೇಳುವುದೇನೆಂದರೆ, \q1 “ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, \q2 ನಿನ್ನನ್ನು ಗೆದ್ದಿದ್ದಾರೆ. \q1 ನಿನ್ನ ಕಾಲುಗಳು ಕೆಸರಿನಲ್ಲಿ ಹೂತಿರುವುದನ್ನು ನೋಡಿ, \q2 ಹಿಂದಿರುಗಿದ್ದಾರೆಂದು ನಿಂದಿಸುವರು. \p \v 23 “ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು. \p \v 24 ಆಗ ಚಿದ್ಕೀಯನು ಯೆರೆಮೀಯನಿಗೆ, “ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು. \v 25 ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿದ್ದೇನೆಂದು ಕೇಳಿ, ‘ನಿನ್ನ ಬಳಿಗೆ ಬಂದು, ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು. ನಾವು ನಿನ್ನನ್ನು ಕೊಂದುಹಾಕುವುದಿಲ್ಲ. ಅರಸನು ನಿನ್ನ ಸಂಗಡ ಮಾತಾಡಿದ್ದನ್ನು ಸಹ ತಿಳಿಸು,’ ಎಂದು ಹೇಳಿದರೆ, \v 26 ನೀನು ಅವರಿಗೆ, ‘ನನ್ನನ್ನು ತಿರುಗಿ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯುವ ಹಾಗೆ ತೆಗೆದುಕೊಂಡು ಹೋಗಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು,’ ಎಂದು ಹೇಳಿದನು.” \p \v 27 ಆಗ ಪ್ರಧಾನರೆಲ್ಲರೂ ಯೆರೆಮೀಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು. ಆಗ ಅವರು ಸುಮ್ಮನಾದರು. ಏಕೆಂದರೆ ಆ ಕಾರ್ಯದ ವಿಷಯವನ್ನು ಅವರು ಗ್ರಹಿಸಲಿಲ್ಲ. \p \v 28 ಈ ಪ್ರಕಾರ ಯೆರೂಸಲೇಮು ಸೆರೆಯಾಗುವ ದಿವಸದವರೆಗೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ವಾಸವಾಗಿದ್ದನು. \s1 ಯೆರೂಸಲೇಮಿನ ಪತನ \p ಯೆರೂಸಲೇಮು ಹಿಡಿಯಲಾಗುವಾಗ ಅಲ್ಲೇ ಇದ್ದನು. \c 39 \nb \v 1 ಯೆಹೂದದ ಅರಸನಾದ ಚಿದ್ಕೀಯನ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯದೊಂದಿಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದನ್ನು ಮುತ್ತಿಗೆ ಹಾಕಿದರು. \v 2 ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣವು ಒಡೆಯಲಾಯಿತು. \v 3 ನೇರ್ಗಲ್ ಸರೆಚರ್, ಸಮ್ಗರ್‌ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಚೋಯಿಸರ ಮುಖ್ಯಸ್ಥ ನೇರ್ಗಲ್ ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲಾ ಪದಾಧಿಕಾರಿಗಳು ಪುರಪ್ರವೇಶ ಮಾಡಿ, ಮಧ್ಯಮ ದ್ವಾರದೊಳಗೆ ಕುಳಿತುಕೊಂಡರು. \v 4 ಇವರನ್ನು ನೋಡಿ ಯೆಹೂದದ ಅರಸನಾದ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು. \p \v 5 ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. \v 6 ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಶ್ರೇಷ್ಠರನ್ನೂ ರಿಬ್ಲದಲ್ಲಿ ಕೊಲ್ಲಿಸಿದನು. \v 7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು. \p \v 8 ಅರಮನೆಯನ್ನೂ, ಜನರ ಮನೆಗಳನ್ನೂ, ಬಾಬಿಲೋನಿಯರು ಬೆಂಕಿಯಿಂದ ಸುಟ್ಟರು. ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು. \v 9 ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. \v 10 ಆದರೆ ಜನರೊಳಗೆ ಏನಿಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶದಲ್ಲಿ ಬಿಟ್ಟು, ಅವರಿಗೆ ಆಗಲೇ ದ್ರಾಕ್ಷಿತೋಟಗಳನ್ನೂ, ಹೊಲಗಳನ್ನೂ ಕೊಟ್ಟನು. \p \v 11 ಇದಲ್ಲದೆ ಯೆರೆಮೀಯನ ವಿಷಯವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇನೆಂದರೆ: \v 12 “ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು. \v 13 ಹೀಗೆ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನನ್ನೂ, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳನ್ನೂ ಕಳುಹಿಸಿದನು. \v 14 ಅವರು ಕಳುಹಿಸಿ ಯೆರೆಮೀಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ, ಶಾಫಾನನ ಮೊಮ್ಮಗನೂ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮನೆಗೆ ಕರೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು. \p \v 15 ಯೆರೆಮೀಯನು ಸೆರೆಮನೆಯ ಅಂಗಳದಲ್ಲಿರುವಾಗ ಯೆಹೋವ ದೇವರ ವಾಕ್ಯವು ಅವನಿಗೆ ಹೇಳಿದ್ದೇನೆಂದರೆ: \v 16 “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ, ಹೇಳತಕ್ಕದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಒಳ್ಳೆಯದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ. ಅವು ಆ ದಿವಸಗಳಲ್ಲಿ ನಿನ್ನ ಮುಂದೆಯೇ ನೆರವೇರುವುವು. \v 17 ಆದರೆ ಆ ದಿವಸದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲಾಗುವುದಿಲ್ಲ. \v 18 ಏಕೆಂದರೆ ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು. ನೀನು ಖಡ್ಗದಿಂದ ಬೀಳುವುದಿಲ್ಲ. ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ, ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವುದೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂಬುದು. \c 40 \s1 ಯೆರೆಮೀಯನ ಬಿಡುಗಡೆ \p \v 1 ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು. \v 2 ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ. \v 3 ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ. \v 4 ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು. \v 5 ಯೆರೆಮೀಯನು ಇನ್ನು ಹಿಂದಿರುಗದೆ ಇರುವಾಗ, ನೆಬೂಜರದಾನನು ಹೇಳಿದ್ದೇನೆಂದರೆ: “ಬಾಬಿಲೋನಿನ ಅರಸನು ಯೆಹೂದದ ಪಟ್ಟಣಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನ ಬಳಿಗೆ ತಿರುಗಿಕೋ; ಅವನ ಸಂಗಡ ಜನರೊಳಗೆ ವಾಸಮಾಡು. ಇಲ್ಲವೆ ಎಲ್ಲಿ ಹೋಗುವುದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ, ಅಲ್ಲಿಗೆ ಹೋಗು,” ಎಂದು ಹೇಳಿ, \p ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ, ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು. \v 6 ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು. \s1 ಗೆದಲ್ಯನನ್ನು ಕೊಂದದ್ದು \p \v 7 ಬಾಬಿಲೋನಿನ ಅರಸನು ಅಹೀಕಾಮನ ಮಗ ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಮತ್ತು ಬಾಬಿಲೋನಿಗೆ ಸೆರೆಹೋಗದೆ ಇದ್ದ ದೇಶಿಯರಲ್ಲಿ ಬಡವರಾದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿಯನ್ನು ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ ಕೇಳಿದಾಗ, \v 8 ನೆತನ್ಯನ ಮಗ ಇಷ್ಮಾಯೇಲನೂ; ಕಾರೇಹನ ಮಗ ಯೋಹಾನಾನ್, ಯೋನಾತಾನ್; ತನ್ಹುಮೆತನ ಮಗ ಸೆರಾಯ್; ನೆಟೋಫದವನಾದ ಏಫಯನ ಪುತ್ರರೂ; ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ; ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. \v 9 ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ ‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು. \v 10 ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು. \p \v 11 ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ \v 12 ಯೆಹೂದ್ಯರೆಲ್ಲರೂ, ಅವರು ಓಡಿಸಲಾಗಿದ್ದ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು, ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ, ಬೇಸಿಗೆ ಕಾಲದ ಹಣ್ಣುಗಳನ್ನೂ ಕೂಡಿಸಿದರು. \p \v 13 ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, \v 14 “ಅಮ್ಮೋನನ ಮಕ್ಕಳ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದಿದೆಯೋ?” ಎಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ. \p \v 15 ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು. \p \v 16 ಆದರೆ ಅಹೀಕಾಮನ ಮಗ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಈ ಕೆಲಸ ಮಾಡಬೇಡ, ಏಕೆಂದರೆ ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ,” ಎಂದನು. \c 41 \p \v 1 ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ, \v 2 ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು. \v 3 ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಅಲ್ಲಿ ಸಿಕ್ಕಿದ ಯೆಹೂದ್ಯರೆಲ್ಲರನ್ನೂ, ಕಸ್ದೀಯರೆಲ್ಲರನ್ನೂ, ಸೈನಿಕರನ್ನೂ ಇಷ್ಮಾಯೇಲನು ಕೊಂದುಹಾಕಿದನು. \p \v 4 ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೆಯ ದಿನದಲ್ಲಿ, ಅದು ಯಾರಿಗೂ ತಿಳಿಯದ ವೇಳೆಯಲ್ಲಿ \v 5 ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು. \v 6 ಆಗ ನೆತನ್ಯನ ಮಗ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು. ಅವರನ್ನು ಎದುರುಗೊಂಡ ಮೇಲೆ ಅವರಿಗೆ, “ಅಹೀಕಾಮನ ಮಗ ಗೆದಲ್ಯನ ಬಳಿಗೆ ಬನ್ನಿ,” ಎಂದನು. \v 7 ಆಗ ಅವರು ಪಟ್ಟಣದ ಮಧ್ಯಕ್ಕೆ ಬಂದಾಗ, ನೆತನ್ಯನ ಮಗ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು, ಬಾವಿಯೊಳಗೆ ಹಾಕಿಬಿಟ್ಟರು. \v 8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ. \v 9 ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು. \p \v 10 ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು. \p \v 11 ಆದರೆ ಕಾರೇಹನ ಮಗ ಯೋಹಾನಾನನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ, \v 12 ಆ ಮನುಷ್ಯರನ್ನೆಲ್ಲಾ ಕರೆದುಕೊಂಡು ನೆತನ್ಯನ ಮಗ ಇಷ್ಮಾಯೇಲನ ಸಂಗಡ ಯುದ್ಧಮಾಡುವುದಕ್ಕೆ ಹೋಗಿ, ಗಿಬ್ಯೋನಿನಲ್ಲಿರುವ ದೊಡ್ಡ ಕೆರೆಯ ಬಳಿಯಲ್ಲಿ ಅವನನ್ನು ಕಂಡರು. \v 13 ಆಗ ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ, ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ನೋಡಿದಾಗ, ಸಂತೋಷಪಟ್ಟರು. \v 14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರು ಸುತ್ತಿಕೊಂಡು ತಿರುಗಿಕೊಂಡು, ಕಾರೇಹನ ಮಗನಾದ ಯೋಹಾನಾನನ ಬಳಿಗೆ ಬಂದರು. \v 15 ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಜನರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು, ಅಮ್ಮೋನ್ಯರ ಬಳಿಗೆ ಹೋದನು. \s1 ಈಜಿಪ್ಟಿಗೆ ಪಲಾಯನ \p \v 16 ಆಗ ಕಾರೇಹನ ಮಗನಾದ ಯೋಹಾನಾನನೂ, ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗ ಗೆದಲ್ಯನನ್ನು ಕೊಂದುಹಾಕಿದ ತರುವಾಯ, ತಪ್ಪಿಸಿಬಿಟ್ಟಿದ್ದ ಉಳಿದ ಜನರೆಲ್ಲರನ್ನು ಎಂದರೆ, ಗಿಬ್ಯೋನನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಕಂಚುಕಿಯರನ್ನೂ ಮಿಚ್ಪದಿಂದ ಕರೆದುಕೊಂಡು ಹೊರಟು, \v 17 ಈಜಿಪ್ಟಿಗೆ ಹೋಗುವುದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು. \v 18 ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು. \c 42 \p \v 1 ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ, ಹೋಷಾಯನ ಮಗನಾದ ಎಜನೀಯನೂ\f + \fr 42:1 \fr*\fq ಎಜನೀಯ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಅಜರ್ಯ\fqa*\f*, ಕಿರಿಯರು ಮೊದಲುಗೊಂಡು ಹಿರಿಯರವರೆಗೆ ಜನರೆಲ್ಲರು ಹತ್ತಿರ ಬಂದು, \v 2 ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ, \v 3 ನಾವು ನಡೆಯತಕ್ಕ ಮಾರ್ಗವನ್ನೂ, ನಾವು ಮಾಡತಕ್ಕ ಕಾರ್ಯವನ್ನೂ ನಿನ್ನ ದೇವರಾದ ಯೆಹೋವ ದೇವರು ನಮಗೆ ತಿಳಿಸುವ ಹಾಗೆ, ನಿನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆ ಮಾಡು,” ಎಂದರು. \p \v 4 ಆಗ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಾನು ಕೇಳಿದ್ದೇನೆ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆ ಮಾಡುತ್ತೇನೆ. ಯೆಹೋವ ದೇವರು ನಿಮಗೆ ಯಾವ ಉತ್ತರವನ್ನು ಕೊಡುವರೋ, ಅದನ್ನು ನಿಮಗೆ ತಿಳಿಸುವೆನು. ಒಂದು ಮಾತನ್ನಾದರೂ ನಿಮ್ಮಿಂದ ಹಿಂದೆಗೆಯುವುದಿಲ್ಲ,” ಎಂದು ಹೇಳಿದನು. \p \v 5 ಆಗ ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾರೋ, ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ, ಯೆಹೋವ ದೇವರು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳುವಾಗ, ನಮಗೆ ಒಳ್ಳೆಯದಾಗುವ ಹಾಗೆ, \v 6 ನಾವು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ, ಆ ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಅದು ಹಿತವಾದರೂ ಸರಿಯೇ, ಅಹಿತವಾದರೂ ಸರಿಯೇ ಕೇಳುವೆವು,” ಎಂದರು. \p \v 7 ಹತ್ತು ದಿವಸಗಳಾದ ಮೇಲೆ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂತು. \v 8 ಆಗ ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೇನಾಪತಿಗಳೆಲ್ಲರನ್ನೂ, ಕಿರಿಯರು ಮೊದಲುಗೊಂಡು ಹಿರಿಯರೆಲ್ಲರವರೆಗೆ ಜನರೆಲ್ಲರನ್ನೂ ಕರೆದು, \v 9 ಅವರಿಗೆ ಹೇಳಿದ್ದೇನೆಂದರೆ, “ಯಾರ ಮುಂದೆ ನಿಮ್ಮ ವಿಜ್ಞಾಪನೆಯನ್ನು ತರುವುದಕ್ಕೆ ನನ್ನನ್ನು ಕಳುಹಿಸಿದ್ದೀರೋ, ಆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: \v 10 ‘ನೀವು ಇನ್ನು ಈ ದೇಶದಲ್ಲಿ ವಾಸಮಾಡಿದರೆ, ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತು ಹಾಕದೆ ನೆಡುವೆನು. ಏಕೆಂದರೆ ನಾನು ನಿಮಗೆ ಮಾಡಿರುವ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಡುತ್ತೇನೆ. \v 11 ನೀವು ಭಯಪಡುವ ಬಾಬಿಲೋನಿನ ಅರಸನಿಗೆ ಭಯಪಡಬೇಡಿರಿ; ಅವನಿಗೆ ಭಯಪಡಬೇಡಿರೆಂದು ಯೆಹೋವ ದೇವರು ಹೇಳುತ್ತಾರೆ; ಏಕೆಂದರೆ ನಿಮ್ಮನ್ನು ರಕ್ಷಿಸುವುದಕ್ಕೂ, ಅವನ ಕೈಯಿಂದ ನಿಮ್ಮನ್ನು ತಪ್ಪಿಸುವುದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ. \v 12 ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ನಿಮ್ಮನ್ನು ಕರುಣಿಸಿ, ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡುವನು.’ \p \v 13 “ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ‘ನಾವು ಈ ದೇಶದಲ್ಲಿ ವಾಸಮಾಡುವುದಿಲ್ಲ’ ಎಂದು ಹೇಳಿದರೆ, \v 14 ನೀವು, ‘ಇಲ್ಲ, ನಾವು ಈಜಿಪ್ಟ್ ದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧವನ್ನು ನೋಡುವುದಿಲ್ಲ, ತುತೂರಿಯ ಶಬ್ದವನ್ನು ಕೇಳುವುದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವುದಿಲ್ಲ.’ ಅಲ್ಲಿ ವಾಸಮಾಡುವೆವೆಂದು ಹೇಳಿದರೆ, \v 15 ಯೆಹೂದದ ಶೇಷವೇ, ಹಾಗಾದರೆ ಈಗ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಈಜಿಪ್ಟಿಗೆ ಹೋಗುವಹಾಗೆ ಇಟ್ಟರೆ ಮತ್ತು ನೀವು ಅಲ್ಲಿ ತಂಗುವುದಕ್ಕೆ ಹೋದರೆ, \v 16 ನೀವು ಭಯಪಡುವ ಖಡ್ಗವು ಈಜಿಪ್ಟ್ ದೇಶದಲ್ಲಿ ನಿಮ್ಮನ್ನು ಹಿಡಿಯುವುದು. ನೀವು ಹೆದರಿಕೊಳ್ಳುವ ಕ್ಷಾಮವು ಈಜಿಪ್ಟ್ ದೇಶಕ್ಕೆ ನಿಮ್ಮನ್ನು ಹಿಂದಟ್ಟುವುದು, ನೀವು ಅಲ್ಲೇ ಸಾಯುವಿರಿ. \v 17 ಈಜಿಪ್ಟಿಗೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನಿಡುವ ಮನುಷ್ಯರಿಗೆಲ್ಲಾ ಹೀಗಾಗುವುದು. ಅವರು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವರು. ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವುದಿಲ್ಲ.’ \v 18 ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’ \p \v 19 “ಯೆಹೂದದ ಶೇಷವೇ, ಯೆಹೋವ ದೇವರು ನಿಮ್ಮ ವಿಷಯವಾಗಿ ಹೇಳಿದ್ದೇನೆಂದರೆ: ‘ಈಜಿಪ್ಟಿಗೆ ಹೋಗಬೇಡಿರಿ,’ ಇದನ್ನು ಖಚಿತಪಡಿಸಿಕೊಳ್ಳಿ: ನಾನು ಇಂದು ನಿಮಗೆ ಎಚ್ಚರಿಕೆ ನೀಡುತ್ತೇನೆ. \v 20 ನೀವೇ ನನ್ನ ಬಳಿಗೆ ಬಂದು ನಮ್ಮ ದೇವರಾದ ಯೆಹೋವ ದೇವರನ್ನು ನಮಗಾಗಿ ಪ್ರಾರ್ಥಿಸು, ‘ನಮ್ಮ ದೇವರಾದ ಯೆಹೋವ ದೇವರು ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು,’ ಎಂದು ಹೇಳಿ ಮಾರಣಾಂತಿಕ ತಪ್ಪನ್ನು ಮಾಡಿದ್ದೀರಿ. \v 21 ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಶಬ್ದವನ್ನಾದರೂ ಅವರು ಯಾವುದರ ವಿಷಯವಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೋ ಅದರಲ್ಲಿ ಯಾವುದನ್ನಾದರೂ ಕೇಳಲಿಲ್ಲ. \v 22 ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು. \c 43 \p \v 1 ಯೆರೆಮೀಯನು ಜನರೆಲ್ಲರಿಗೆ ಅವರ ದೇವರಾದ ಯೆಹೋವ ದೇವರು ಯಾವ ವಿಷಯವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದರೋ, ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ, \v 2 ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಗರ್ವಿಷ್ಠ ಮನುಷ್ಯರೆಲ್ಲರೂ ಮಾತನಾಡಿ ಯೆರೆಮೀಯನಿಗೆ, “ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾಗಿರುವುದಕ್ಕೆ ಈಜಿಪ್ಟಿಗೆ ಹೋಗಬಾರದೆಂದು ಹೇಳುವುದಕ್ಕೆ ನಮ್ಮ ದೇವರಾದ ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. \v 3 ಆದರೆ ಅವರು ನಮ್ಮನ್ನು ಕೊಂದುಹಾಕುವ ಹಾಗೆಯೂ, ನಮ್ಮನ್ನು ಬಾಬಿಲೋನಿಗೆ ಸೆರೆ ಒಯ್ಯುವ ಹಾಗೆಯೂ, ನಮ್ಮನ್ನು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರೇಪಿಸಿದ್ದಾನೆ,” ಎಂದರು. \p \v 4 ಈ ಪ್ರಕಾರ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ, ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ, ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ. \v 5 ಆದರೆ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವುದಕ್ಕೆ ತಿರುಗಿ ಬಂದ ಯೆಹೂದದಲ್ಲಿ ಉಳಿದವರನ್ನು, \v 6 ಅಂದರೆ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ, ಪ್ರವಾದಿಯಾದ ಯೆರೆಮೀಯನನ್ನೂ, ನೇರೀಯನ ಮಗ ಬಾರೂಕನನ್ನೂ ತೆಗೆದುಕೊಂಡು ಈಜಿಪ್ಟ್ ದೇಶಕ್ಕೆ ಹೋದರು. \v 7 ಏಕೆಂದರೆ ಅವರು ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ. ಹೀಗೆ ಅವರು ಈಜಿಪ್ಟಿಗೆ ಹೋಗಿ ತಹಪನೇಸಿಗೆ ಬಂದರು. \p \v 8 ಆಗ ತಹಪನೇಸಿನಲ್ಲಿ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು. \v 9 “ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದ್ಯರ ಮುಂದೆ ಬಚ್ಚಿಟ್ಟು, ಅವರಿಗೆ ಹೇಳತಕ್ಕದ್ದೇನೆಂದರೆ: \v 10 ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು. ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು. \v 11 ಅವನು ಬಂದು ಈಜಿಪ್ಟ್ ದೇಶವನ್ನು ಹೊಡೆದು, ಮರಣಕ್ಕೆ ಇರುವವರನ್ನು ಮರಣಕ್ಕೂ, ಸೆರೆಗೆ ಇರುವವರನ್ನು ಸೆರೆಗೂ, ಖಡ್ಗಕ್ಕೆ ಇರುವವರನ್ನು ಖಡ್ಗಕ್ಕೂ ಒಪ್ಪಿಸುವನು. \v 12 ನಾನು ಈಜಿಪ್ಟ್ ದೇವರುಗಳ ಆಲಯಗಳಲ್ಲಿ ಬೆಂಕಿ ಹಚ್ಚುವೆನು. ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು. ಕುರುಬನು ತನ್ನ ಉಡುಪನ್ನು ಹೇನುಗಳಿಂದ ಶುದ್ಧೀಕರಿಸುವಂತೆ ಅವನು ಈಜಿಪ್ಟ್ ದೇಶವನ್ನು ಶುದ್ಧವಾಗಿಸಿಕೊಂಡು ಅಲ್ಲಿಂದ ಸಮಾಧಾನವಾಗಿ ಹೊರಟು ಹೋಗುತ್ತಾನೆ. \v 13 ಇದಲ್ಲದೆ ಈಜಿಪ್ಟಿನ ದೇಶದಲ್ಲಿರುವ ಸೂರ್ಯ ದೇವಾಲಯವನ್ನು ಒಡೆದುಹಾಕಿ, ಈಜಿಪ್ಟ್ ದೇವರುಗಳ ಆಲಯಗಳನ್ನು ಬೆಂಕಿಯಿಂದ ಸುಡುವನು.’ ” \c 44 \s1 ಮೂರ್ತಿ ಪೂಜೆಯಿಂದ ವಿನಾಶ \p \v 1 ಈಜಿಪ್ಟ್ ದೇಶದ ಕೆಳಗಿನ ಪ್ರಾಂತದ ಮಿಗ್ದೋಲ್, ತಹಪನೇಸ್, ಮೆಂಫೀಸ್ ಪಟ್ಟಣಗಳಲ್ಲಿಯೂ ಹಾಗೂ ಈಜಿಪ್ಟನ ದಕ್ಷಿಣ ಭಾಗವಾದ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆಮೀಯನಿಗೆ ಬಂದ ವಾಕ್ಯವು: \v 2 “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ಕಂಡಿದ್ದೀರಿ. \v 3 ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ. \v 4 ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು. \v 5 ಆದರೆ ತಮ್ಮ ಕೆಟ್ಟತನದಿಂದ ತಿರುಗದೆ, ಬೇರೆ ದೇವರುಗಳಿಗೆ ಧೂಪಸುಡುವುದನ್ನು ಬಿಡದೆ ಕೇಳಲಿಲ್ಲ, ನೀವು ಕಿವಿಗೊಡಲಿಲ್ಲ. \v 6 ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು. \p \v 7 “ಆದ್ದರಿಂದ ಈಗ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: ಏಕೆ ನಿಮಗೆ ಉಳಿದಿರುವವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ, ಹೆಂಗಸರನ್ನೂ, ಮಗುವನ್ನೂ, ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು, ನಿಮ್ಮ ಪ್ರಾಣಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳುತ್ತೀರಿ? \v 8 ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ? \v 9 ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ಪಿತೃಗಳು ಕೆಟ್ಟತನಗಳನ್ನೂ, ಯೆಹೂದದ ಅರಸರ ಕೆಟ್ಟತನಗಳನ್ನೂ, ಅವರ ಹೆಂಡತಿಯರ ಕೆಟ್ಟತನಗಳನ್ನೂ, ನಿಮ್ಮ ಸ್ವಂತ ಕೆಟ್ಟತನಗಳನ್ನೂ, ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ? \v 10 ಈ ದಿನದವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ. ನಾನು ನಿಮ್ಮ ಮುಂದೆಯೂ, ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನಿಯಮದಲ್ಲಿ ನಡೆಯಲಿಲ್ಲ. \p \v 11 “ಆದ್ದರಿಂದ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನ ಮೇಲೆ ವಿಪತ್ತನ್ನು ಬರಮಾಡಲು ಮತ್ತು ಎಲ್ಲಾ ಯೆಹೂದವನ್ನು ನಾಶಮಾಡಲು ನಿರ್ಧರಿಸಿದ್ದೇನೆ. \v 12 ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು. \v 13 ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಈಜಿಪ್ಟ್ ದೇಶದಲ್ಲಿ ವಾಸಮಾಡುವವರನ್ನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಶಿಕ್ಷಿಸುವೆನು. \v 14 ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು. \p \v 15 ಆಗ ತಮ್ಮ ಹೆಂಡತಿಯರು ಅನ್ಯ ದೇವತೆಗಳಿಗೆ ಧೂಪ ಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು: \v 16 “ಯೆಹೋವ ದೇವರ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು. \v 17 ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ. \v 18 ಆದರೆ ನಾವು ಗಗನದ ಒಡತಿಗೆ ಧೂಪ ಸುಡುವುದನ್ನೂ, ಪಾನಾರ್ಪಣೆಗಳನ್ನೂ ಅವಳಿಗೆ ಹೊಯ್ಯುವುದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು. ಖಡ್ಗದಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.” \p \v 19 ಇದಲ್ಲದೆ, “ನಾವು ಗಗನದ ಒಡತಿಗೆ ಧೂಪ ಸುಟ್ಟು, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ದಾಗ, ನಮ್ಮ ಗಂಡಂದಿರನ್ನು ಬಿಟ್ಟು, ಅವಳ ಪೂಜೆಗೋಸ್ಕರ ದೋಸೆಗಳನ್ನು ಮಾಡಿ, ಅವಳಿಗೆ ಪಾನಾರ್ಪಣೆಗಳನ್ನು ಅರ್ಪಿಸಿದೆವೋ?” ಎಂದರು. \p \v 20 ಆಗ ಯೆರೆಮೀಯನು ಜನರೆಲ್ಲರಿಗೂ, ಗಂಡಸರಿಗೂ, ಹೆಂಗಸರಿಗೂ, ತನಗೆ ಉತ್ತರ ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನೆಂದರೆ, \v 21 “ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ? \v 22 ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ. \v 23 ನೀವು ಧೂಪ ಸುಟ್ಟು, ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಯೆಹೋವ ದೇವರ ಮಾತನ್ನು ಕೇಳದೆ, ದೈವನಿಯಮವನ್ನೂ, ದೈವತೀರ್ಪುಗಳನ್ನೂ, ದೈವಷರತ್ತುಗಳನ್ನೂ ಅನುಸರಿಸದೆ, ದೇವರಿಗೆ ವಿಧೇಯರಾಗದೆ ಇದ್ದುದರಿಂದಲೇ, ಈ ಕೇಡು ಈ ದಿನ ನಿಮಗೆ ಸಂಭವಿಸಿದೆ,” ಎಂದನು. \p \v 24 ಇದಲ್ಲದೆ, ಯೆರೆಮೀಯನು ಎಲ್ಲಾ ಜನರಿಗೂ, ಎಲ್ಲಾ ಹೆಂಗಸರಿಗೂ, “ಈಜಿಪ್ಟ್ ದೇಶದಲ್ಲಿರುವ ಯೆಹೂದ್ಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. \v 25 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೂ, ನಿಮ್ಮ ಹೆಂಡತಿಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವೆವೆಂದೂ, ನಿಮ್ಮ ಬಾಯಿಗಳಿಂದ ಹೇಳಿ ನಿಮ್ಮ ಕೈಗಳಿಂದ ಸಹ ಈಡೇರಿಸಿದ್ದೀರಿ.’ \p “ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವಿರಿ. \v 26 ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ. \v 27 ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು. \v 28 ಆದರೆ ಖಡ್ಗಕ್ಕೆ ತಪ್ಪಿಸಿಕೊಂಡ ಸ್ವಲ್ಪ ಜನರು ಈಜಿಪ್ಟ್ ದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂದಿರುಗಿ ಹೋಗುವರು. ಆಗ ಈಜಿಪ್ಟ್ ದೇಶದಲ್ಲಿ ತಂಗುವುದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವುದೋ, ಅವರ ಮಾತು ನಿಲ್ಲುವುದೋ ಎಂಬುದನ್ನು ತಿಳಿದುಕೊಳ್ಳುವರು. \p \v 29 “ ‘ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವುವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನೆಂಬುದಕ್ಕೆ ಇದೇ ನಿಮಗೆ ಗುರುತು,’ ಎಂದು ಯೆಹೋವ ದೇವರು ಹೇಳುತ್ತಾರೆ. \v 30 ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರುವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ, ಹಾಗೆಯೇ ಈಜಿಪ್ಟಿನ ಅರಸನಾದ ಫರೋಹ ಹೋಫ್ರನನ್ನು ಅವನ ಪ್ರಾಣವನ್ನು ಹುಡುಕುವ ಅವನ ಶತ್ರುಗಳ ಕೈಯಲ್ಲಿ ಒಪ್ಪಿಸುತ್ತೇನೆ.’ ” \c 45 \s1 ಬಾರೂಕನಿಗೆ ಸಂದೇಶ \p \v 1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ, ಸುರುಳಿಯಲ್ಲಿ ಬರೆದ ಮೇಲೆ ಪ್ರವಾದಿಯಾದ ಯೆರೆಮೀಯನು ಅವನಿಗೆ ಹೇಳಿದ ವಾಕ್ಯವೇನೆಂದರೆ, \v 2 “ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ನಿನ್ನನ್ನು ಕುರಿತು ಹೀಗೆ ಹೇಳುತ್ತಾರೆ. \v 3 ‘ಈಗ ನನಗೆ ಕಷ್ಟ! ಏಕೆಂದರೆ, ಯೆಹೋವ ದೇವರು ನನ್ನ ನೋವಿಗೆ ಚಿಂತೆಯನ್ನು ಕೂಡಿಸಿದ್ದಾರೆ. ನಿಟ್ಟುಸಿರು ಬಿಡುವುದರಿಂದ ದಣಿದಿದ್ದೇನೆ. ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿಯಲ್ಲಾ.’ \v 4 ಆದರೆ ನಿಮಗೆ ಹೇಳಲು ಯೆಹೋವ ದೇವರು ನನಗೆ ಹೇಳಿದ್ದಾರೆ. ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ. ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ. \v 5 ಹಾಗಾದರೆ ನೀನು ನಿನಗೋಸ್ಕರ ದೊಡ್ಡವುಗಳನ್ನು ಹುಡುಕುತ್ತೀಯೋ? ಹುಡುಕಬೇಡ. ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ. ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನೀನು ಉಳಿಸಿಕೊಳ್ಳುವಂತೆ ಮಾಡುವೆನು, ಎಂದು ನಿನಗೆ ಹೇಳಿದ್ದಾರೆ,’ ಎಂದನು.” \c 46 \s1 ಈಜಿಪ್ಟನ್ನು ಕುರಿತು ಸಂದೇಶ \p \v 1 ಇತರ ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು: \b \p \v 2 ಈಜಿಪ್ಟನ್ನು ಕುರಿತದ್ದು: \b \p ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ: \q1 \v 3 “ಗುರಾಣಿಯನ್ನೂ, ಖೇಡ್ಯವನ್ನೂ ಸಿದ್ಧಮಾಡಿರಿ; \q2 ಯುದ್ಧಕ್ಕೆ ಸಮೀಪಿಸಿರಿ; \q1 \v 4 ರಾಹುತರೇ, ಕುದುರೆಗಳನ್ನು ಕಟ್ಟಿರಿ; \q2 ವಾಹನಾಶ್ವಗಳನ್ನು ಹತ್ತಿರಿ. \q1 ಎದ್ದು ಶಿರಸ್ತ್ರಾಣಗಳನ್ನು ಹಾಕಿಕೊಂಡು \q2 ಯುದ್ಧಕ್ಕೆ ನಿಂತುಕೊಳ್ಳಿರಿ; \q1 ಈಟಿಗಳನ್ನು ಮೆರುಗು ಮಾಡಿರಿ; \q2 ಕವಚಗಳನ್ನು ತೊಟ್ಟುಕೊಳ್ಳಿರಿ. \q1 \v 5 ಆಹಾ, ನಾನು ಕಂಡದ್ದೇನು? \q2 ಅವರು ದಿಗಿಲುಪಟ್ಟು ಹಿಂದಿರುಗಿದ್ದನ್ನು, \q2 ಅವರ ಪರಾಕ್ರಮಶಾಲಿಗಳು ಪೆಟ್ಟುತಿಂದಿದ್ದಾರೆ. \q1 ಹಿಂದೆ ನೋಡದೆ ಓಡಿಹೋಗುತ್ತಾರೆ, \q2 ಏಕೆಂದರೆ ಸುತ್ತಲು ದಿಗಿಲು ಕವಿದಿದೆ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 6 “ವೇಗಶಾಲಿಗಳು ಓಡಿ ಹೋಗದಿರಲಿ; \q2 ಪರಾಕ್ರಮಶಾಲಿಯು ತಪ್ಪಿಸಿಕೊಳ್ಳದಿರಲಿ; \q1 ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ \q2 ಅವರು ಎಡವಿಬೀಳುವರು. \b \q1 \v 7 “ನೈಲ್ ನದಿಯಂತೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ \q2 ಬರುವವನು ಯಾರು? \q1 \v 8 ಈಜಿಪ್ಟ್ ನೈಲ್ ನದಿಯ ಪ್ರಳಯದ ಹಾಗೆ ಏರುತ್ತದೆ; \q2 ಅದರ ನೀರು ನದಿಗಳ ಹಾಗೆ ಕದಲುತ್ತವೆ; \q1 ‘ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ; ಪಟ್ಟಣವನ್ನೂ, \q2 ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ,’ ಎಂದು ಅವಳು ಹೇಳುತ್ತಾಳೆ. \q1 \v 9 ಕುದುರೆಗಳೇ ಬನ್ನಿರಿ; \q2 ಸಾರಥಿಗಳೇ ಓಡಾಡಿರಿ; \q1 ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ, ಪೂಟ್ಯರೂ, \q2 ಬಿಲ್ಲನ್ನು ಹಿಡಿದು ಬಗ್ಗಿಸುವ ಲೂದ್ಯರೂ ಹೊರಗೆ ಬರಲಿ. \q1 \v 10 ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. \q2 ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, \q1 ಖಡ್ಗವು ಸಂಹರಿಸಿ \q2 ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. \q1 ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ \q2 ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ. \b \q1 \v 11 “ಈಜಿಪ್ಟಿನ ಮಗಳಾದ ಕನ್ನಿಕೆಯೇ, \q2 ಗಿಲ್ಯಾದಿಗೆ ಹೋಗಿ ತೈಲವನ್ನು ತೆಗೆದುಕೋ. \q1 ನೀನು ಬಹಳ ಔಷಧವನ್ನು ತೆಗೆದುಕೊಳ್ಳುವುದು ವ್ಯರ್ಥವಾಗಿದೆ. \q2 ಏಕೆಂದರೆ ನಿನಗೆ ಗುಣವಾಗುವುದಿಲ್ಲ! \q1 \v 12 ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿವೆ; \q2 ನಿನ್ನ ಕೂಗು ದೇಶವನ್ನು ತುಂಬಿಸಿದೆ. \q1 ಏಕೆಂದರೆ ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ. \q2 ಇಬ್ಬರೂ ಬಿದ್ದು ಹೋಗಿದ್ದಾರೆ.” \p \v 13 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಬಂದು ಈಜಿಪ್ಟ್ ದೇಶವನ್ನು ಹೇಗೆ ಹೊಡೆಯುವನೆಂಬುದರ ವಿಷಯವಾಗಿ ಯೆಹೋವ ದೇವರು ಪ್ರವಾದಿಯಾದ ಯೆರೆಮೀಯನಿಗೆ ಹೇಳಿದ ವಾಕ್ಯವು: \q1 \v 14 “ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, \q2 ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, \q1 ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, \q2 ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ. \q1 \v 15 ನಿನ್ನ ಬಲಿಷ್ಠರು ಏಕೆ ಬಡಕೊಂಡು ಹೋಗಿದ್ದಾರೆ? \q2 ಯೆಹೋವ ದೇವರು ಅವರನ್ನು ಓಡಿಸಿದ್ದರಿಂದ ಅವರು ನಿಲ್ಲಲಿಲ್ಲ. \q1 \v 16 ಅವರು ಪದೇಪದೇ ಎಡವುತ್ತಾರೆ. \q2 ಹೌದು, ಒಬ್ಬರ ಮೇಲೊಬ್ಬರು ಬಿದ್ದರು. \q1 ‘ಅವರು ಉಪದ್ರವ ಪಡಿಸುವವರ ಖಡ್ಗವನ್ನು ಬಿಟ್ಟು, \q2 ಸ್ವಂತ ಜನರ ಬಳಿಗೂ, ನಾವು ಹುಟ್ಟಿದ ದೇಶದ ಬಳಿಗೂ \q2 ತಿರುಗಿ ಹೋಗೋಣ,’ ಎಂದು ಹೇಳಿದರು. \q1 \v 17 ಈಜಿಪ್ಟಿನ ಅರಸನಾದ ಫರೋಹನು ನಾಶವಾದನು; \q2 ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ. \b \q1 \v 18 “ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, \q2 ‘ನನ್ನ ಜೀವದಾಣೆ,’ \q1 ಬೆಟ್ಟಗಳಲ್ಲಿ ತಾಬೋರಿನಂತೆಯೂ, \q2 ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು. \q1 \v 19 ಈಜಿಪ್ಟಿನ ಯುವತಿಯಾದ ನಿವಾಸಿಯೇ, \q2 ಸೆರೆಯ ಸಾಮಾನುಗಳನ್ನು ಸಜ್ಜುಗೊಳಿಸಿಕೋ; \q1 ಏಕೆಂದರೆ ನೋಫ್ ಪಟ್ಟಣವು ಹಾಳಾಗುವುದು; \q2 ನಿವಾಸಿಗಳಿಲ್ಲದ ಬೀಡಾಗುವುದು. \b \q1 \v 20 “ಈಜಿಪ್ಟ್ ದೇಶವು ಬಹಳ ಅಂದವಾದ ಕಡಸಾಗಿದೆ; \q2 ಆದರೆ ಉತ್ತರದಿಂದ ತೊಣಚೆಯು ಬಂದೇ ಬರುತ್ತದೆ. \q1 \v 21 ಅದರೊಳಗಿರುವ ಅದರ ಸಂಬಳದವರು \q2 ಕೊಬ್ಬಿದ ಕರುಗಳಂತಿದ್ದಾರೆ; \q1 ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; \q2 ಅವರು ನಿಲ್ಲಲಿಲ್ಲ; \q1 ಏಕೆಂದರೆ ಅವರ ಆಪತ್ತಿನ ದಿವಸವೂ, \q2 ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು. \q1 \v 22 ಅದರ ಶಬ್ದವು ಸರ್ಪದಂತೆ ಹೊರಡುವುದು; \q2 ಏಕೆಂದರೆ ಅವರು ದಂಡಿನ ಸಂಗಡ ಸಂಚರಿಸಿ, \q1 ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ \q2 ಅದಕ್ಕೆ ವಿರೋಧವಾಗಿ ಬರುವರು. \q1 \v 23 ಆದರೆ ಅಡವಿಯನ್ನು ಅದು ಶೋಧಿಸಕೂಡದ್ದಾಗಿದ್ದರೂ, \q2 ಕಡಿದುಹಾಕುವರು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ಏಕೆಂದರೆ ಅವರು ಮಿಡತೆಗಳಿಗಿಂತ \q2 ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ. \q1 \v 24 ಈಜಿಪ್ಟಿನ ಮಗಳು ನಾಚಿಕೆಪಡುವಳು. \q2 ಉತ್ತರದ ಜನರ ಕೈಗೆ ಸಿಕ್ಕಿಬೀಳುವಳು.” \p \v 25 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ತೆಬೆಸ್ ನಗರದಲ್ಲಿನ ಆಮೋನ್ ದೇವತೆಯನ್ನೂ, ಫರೋಹನನ್ನೂ, ಈಜಿಪ್ಟನ್ನೂ, ಅದರ ದೇವರುಗಳನ್ನೂ, ಅದರ ಅರಸರನ್ನೂ, ಅಂತೂ ಫರೋಹನನ್ನೂ, ಅವನಲ್ಲಿ ನಂಬಿಕೆ ಇಡುವ ಎಲ್ಲರನ್ನೂ ದಂಡಿಸುವೆನು. \v 26 ಅವರ ಪ್ರಾಣವನ್ನೂ ಹುಡುಕುವವರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ, ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸಿಬಿಡುವೆನು. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸವಾಗುವುದೆಂದು ಯೆಹೋವ ದೇವರು ಹೇಳುತ್ತಾರೆ. \q1 \v 27 “ಆದರೆ ನೀನು, ನನ್ನ ಸೇವಕನಾದ ಯಾಕೋಬನೇ, \q2 ನೀನು ಭಯಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; \q1 ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೂ, \q2 ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ \q1 ದೇಶದಿಂದಲೂ ರಕ್ಷಿಸುವೆನು; \q2 ಅವನನ್ನು ಭಯಪಡಿಸುವುದಕ್ಕೆ ಯಾರು ಇರುವುದಿಲ್ಲ. \q1 \v 28 ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q2 “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; \q1 ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, \q2 ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; \q2 ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; \q1 ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; \q2 ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.” \c 47 \s1 ಫಿಲಿಷ್ಟಿಯರನ್ನು ಕುರಿತು ಸಂದೇಶ \p \v 1 ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು: \b \p \v 2 ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, \q2 ಅದು ತುಂಬಿ ತುಳುಕುವ ಪ್ರಳಯವಾಗುವುದು; \q1 ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, \q2 ಅದರ ನಿವಾಸಿಗಳನ್ನೂ ಆಕ್ರಮಿಸುವುವು; \q1 ಆಗ ಮನುಷ್ಯರು ಕೂಗುವರು; \q2 ದೇಶದ ನಿವಾಸಿಗಳೆಲ್ಲರು ಗೋಳಾಡುವರು. \q1 \v 3 ಅವನ ಬಲವಾದ ಕುದುರೆಗಳ ಗೊರಸುಗಳ \q2 ತುಳಿಯುವಿಕೆಯ ಶಬ್ದದಿಂದಲೂ \q2 ಅವನ ರಥಗಳ ಘೋಷದಿಂದಲೂ \q1 ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ \q2 ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು. \q1 \v 4 ಏಕೆಂದರೆ ಫಿಲಿಷ್ಟಿಯರೆಲ್ಲರನ್ನು \q2 ಸೂರೆ ಮಾಡುವುದಕ್ಕೂ ಟೈರಿನಿಂದಲೂ \q1 ಸೀದೋನಿನಿಂದಲೂ ಉಳಿದವರನ್ನು \q2 ಕಡಿದುಬಿಡುವುದಕ್ಕೂ ಆ ದಿವಸ ಬಂತು. \q1 ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು \q2 ಕಫ್ತೋರಿನ\f + \fr 47:4 \fr*\ft ಅದು, ಕ್ರೇತ\ft*\f* ದೇಶದ ಉಳಿದವರನ್ನೂ ಸೂರೆಮಾಡುವನು. \q1 \v 5 ಗಾಜಾ ಊರು ಬೋಳಿಸಿಕೊಂಡಿದೆ. \q2 ಅಷ್ಕೆಲೋನ್ ನಾಶನ ಹೊಂದಿದೆ. \q1 ಫಿಲಿಷ್ಟಿಯದ ಬಯಲುಸೀಮೆಯಲ್ಲಿ ಉಳಿದ ಪಟ್ಟಣವೇ \q2 ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ? \b \q1 \v 6 “ಅಯ್ಯೋ, ಯೆಹೋವ ದೇವರ ಖಡ್ಗವೇ, \q2 ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ? \q1 ನಿನ್ನ ಒರೆಯಲ್ಲಿ ಅಡಗಿಕೋ; \q2 ವಿಶ್ರಮಿಸಿಕೋ, ಸುಮ್ಮನಿರು. \q1 \v 7 ಅದು ಹೇಗೆ ಸುಮ್ಮನಿರುವುದು? \q2 ಅಷ್ಕೆಲೋನಿಗೆ ವಿರೋಧವಾಗಿ ಮತ್ತು \q1 ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ? \q2 ಅಲ್ಲಿ ಅದನ್ನು ನೇಮಿಸಿದ್ದಾನೆ.” \c 48 \s1 ಮೋವಾಬನ್ನು ಕುರಿತಾಗಿ ಸಂದೇಶ \p \v 1 ಮೋವಾಬನ್ನು ಕುರಿತದ್ದು: \b \p ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ನೆಬೋ ಊರಿನವರಿಗೆ ಕಷ್ಟ! ಆ ಊರು ಸೂರೆಯಾಯಿತು; \q2 ಕಿರ್ಯಾತಯಿಮು ಶತ್ರುವಿನ ಕೈವಶವಾಗಿ ಅವಮಾನಕ್ಕೆ ಗುರಿಯಾಗಿದೆ; \q2 ಬಲವಾದ ಕೋಟೆಯು ಸಹ ಚದರಿ ನಾಚಿಕೆಗೆ ಈಡಾಗಿದೆ. \q1 \v 2 ಮೋವಾಬಿನ ಸ್ತೋತ್ರ ಇನ್ನು ಮೇಲೆ ಇರುವುದೇ ಇಲ್ಲ; \q2 ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; \q2 ಬನ್ನಿ, ರಾಷ್ಟ್ರವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ; \q1 ಮದ್ಮೆನೇ, ನೀನು ಸಹ ಸುಮ್ಮನಾಗುವೆ; \q2 ಖಡ್ಗವು ನಿನ್ನನ್ನು ಹಿಂದಟ್ಟುವುದು. \q1 \v 3 ಹೊರೊನಯಿಮಿನಿಂದ ಕೂಗುವ ಸ್ವರವು, \q2 ಸೂರೆಯು, ದೊಡ್ಡ ನಾಶವು, ಹೊರಡುವುದು. \q1 \v 4 ಮೋವಾಬು ನಾಶವಾಯಿತು: \q2 ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು. \q1 \v 5 ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; \q2 ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶದ ಶಬ್ದವನ್ನು ಕೇಳಿದ್ದಾರೆ. \q1 \v 6 ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; \q2 ಮರುಭೂಮಿಯಲ್ಲಿರುವ ಒಣ ಗಿಡದ ಹಾಗಿರಿ. \q1 \v 7 ಏಕೆಂದರೆ ನಿನ್ನ ಕ್ರಿಯೆಗಳಲ್ಲಿಯೂ, \q2 ನಿನ್ನ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟಿದ್ದರಿಂದ, \q1 ನೀನು ಸಹ ಸೆರೆಯಾಗುವಿ ಮತ್ತು ಕೆಮೋಷನು, ಅವನ ಯಾಜಕರು, \q2 ಅವನ ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು. \q1 \v 8 ಒಂದೊಂದು ಪಟ್ಟಣದ ಮೇಲೆ \q2 ವಿನಾಶಕನು ಬರುವನು; \q1 ಯೆಹೋವ ದೇವರು ಹೇಳಿದ ಹಾಗೆಯೇ, ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳಲಾರದು. \q2 ತಗ್ಗೂ ಸಹ ನಾಶವಾಗುವುದು; \q2 ಮತ್ತು ಬಯಲು ಹಾಳಾಗುವುದು. \q1 \v 9 ಹಾರಿಹೋಗುವ ಹಾಗೆ ಮೋವಾಬಿಗೆ \q2 ರೆಕ್ಕೆಗಳನ್ನು ಕೊಡಿರಿ; \q1 ಏಕೆಂದರೆ ಅದರ ಪಟ್ಟಣಗಳು ಹಾಳಾಗುವುವು; \q2 ಅವುಗಳಲ್ಲಿ ನಿವಾಸಿಗಳಿರುವುದಿಲ್ಲ. \b \q1 \v 10 “ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; \q2 ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ. \b \q1 \v 11 “ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; \q2 ಅದು ತನ್ನ ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತೆ ಸುಮ್ಮನೆ ಇತ್ತು; \q1 ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯಲಾಗುವುದಿಲ್ಲ; \q2 ಸೆರೆಗೆ ಹೋಗಲಿಲ್ಲ; \q1 ಆದ್ದರಿಂದ ಅದರ ರುಚಿ ಅದರಲ್ಲಿ ಉಂಟು; \q2 ಅದರ ವಾಸನೆ ಬೇರೆ ಆಗಲಿಲ್ಲ. \q1 \v 12 ಆದ್ದರಿಂದ ಇಗೋ, ದಿನಗಳು ಬರುವವು” \q2 ಎಂದು ಯೆಹೋವ ದೇವರು ಅನ್ನುತ್ತಾರೆ; \q1 ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; \q2 ಅವರು ಅದು ಅಲೆದಾಡುವಂತೆ ಮಾಡುವರು; \q1 ಅದರ ಪಾತ್ರೆಗಳನ್ನು ಬರಿದುಮಾಡಿ, \q2 ತಮ್ಮ ಬುದ್ದಲಿಗಳನ್ನು ಒಡೆಯುವರು. \q1 \v 13 ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ \q2 ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ, \q2 ಹಾಗೆಯೇ ಮೋವಾಬು ಕೆಮೋಷನ ವಿಷಯ ನಾಚಿಕೆಪಡುವುದು. \b \q1 \v 14 “ ‘ನಾವು ಪರಾಕ್ರಮಶಾಲಿಗಳೂ, \q2 ಯುದ್ಧಕ್ಕೆ ಬಲಿಷ್ಠರೂ,’ ಎಂದು ನೀವು ಹೇಳುವುದು ಹೇಗೆ? \q1 \v 15 ಮೋವಾಬು ಸೂರೆಯಾಯಿತು. \q2 ಅದರ ಪಟ್ಟಣಗಳು ಏರಿ ಹೋದವು, \q2 ಅದರ ಶ್ರೇಷ್ಠ ಯೌವನಸ್ಥರು ಹತರಾಗುವುದಕ್ಕೆ ಹೋಗಿದ್ದಾರೆ,” \q2 ಎಂದು ಸರ್ವಶಕ್ತ ಯೆಹೋವ ಎಂಬ ಹೆಸರುಳ್ಳ ರಾಜಾಧಿರಾಜರ ನುಡಿ. \q1 \v 16 “ಮೋವಾಬಿಗೆ ಆಪತ್ತು ಬರುವುದಕ್ಕೆ ಸಮೀಪವಾಯಿತು. \q2 ಅದರ ಕೇಡು ಬಹು ತ್ವರೆಪಡುತ್ತದೆ. \q1 \v 17 ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; \q2 ಅದರ ಹೆಸರನ್ನು ಬಲ್ಲವರೆಲ್ಲರೇ, \q1 ‘ಬಲವಾದ ಕೋಲೂ, \q2 ಮಹಿಮೆಯ ಬೆತ್ತವೂ ಹೇಗೆ ಮುರಿದುಹೋಯಿತು?’ ಎಂದು ಹೇಳಿರಿ. \b \q1 \v 18 “ದೀಬೋನಿನ ನಿವಾಸಿಯಾದ ಮಗಳೇ, \q2 ನಿನ್ನ ವೈಭವದಿಂದ ಇಳಿದು ಬಾ; \q2 ಒಣಭೂಮಿಯ ಬಾಯಾರಿದವಳಂತೆ ಕೂತುಕೋ, \q1 ಏಕೆಂದರೆ ಮೋವಾಬನ್ನು ವಿನಾಶ ಮಾಡುವವನು \q2 ನಿನ್ನ ಮೇಲೆ ಬರುವನು; \q2 ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿಬಿಡುವನು. \q1 \v 19 ಅರೋಯೇರಿನ ನಿವಾಸಿಯೇ, \q2 ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; \q1 ಓಡಿ ಹೋಗುವವನನ್ನೂ, \q2 ತಪ್ಪಿಸಿಕೊಳ್ಳುವವನನ್ನೂ ಏನಾಯಿತೆಂದು ಕೇಳು. \q1 \v 20 ಮೋವಾಬು ಚದರಿಹೋಯಿತೆಂದು ನಾಚಿಕೆಗೆ ಈಡಾಗಿದೆ. \q2 ಗೋಳಾಡಿರಿ, ಕೂಗಿರಿ; \q2 ಮೋವಾಬು ಹಾಳಾಯಿತೆಂದು ಅರ್ನೋನಿನಲ್ಲಿ ತಿಳಿಸಿರಿ. \q1 \v 21 ಇದಲ್ಲದೆ ಬಯಲುಸೀಮೆಯ ಮೇಲೆ ನ್ಯಾಯ ತೀರ್ವಿಕೆ ಬಂತು; \q2 ಹೋಲೋನ್, ಯಹಚ, ಮೇಫಾತ್, \q2 \v 22 ದೀಬೋನ್, ನೆಬೋ, ಬೇತ್ ದಿಬ್ಲಾತಯಿಮ್, \q2 \v 23 ಕಿರ್ಯಾತಯಿಮ್, ಬೇತ್ ಗಾಮುಲ್, ಬೇತ್ ಮೆಯೋನ್, \q2 \v 24 ಬೊಚ್ರ, ಕೆರೀಯೋತ್, \q2 ಹೀಗೆ ಸಮೀಪದಲ್ಲಾಗಲಿ, ದೂರದಲ್ಲಾಗಲಿ ಇರುವ, \q2 ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು. \q1 \v 25 ಮೋವಾಬಿನ ಕೊಂಬು ಕಡಿದು ಹಾಕಲಾಗಿದೆ; \q2 ಅದರ ತೋಳು ಮುರಿಯಲಾಗಿದೆ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 26 “ಅದನ್ನು ನೀವು ಅಮಲೇರಿಸಿರಿ; \q2 ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; \q1 ಮೋವಾಬು ಸಹ ತಾನೇ ವಾಂತಿ ಮಾಡಿದ್ದರಲ್ಲಿ ಹೊರಳಾಡುವುದು; \q2 ಅದೇ ಹಾಸ್ಯಕ್ಕಾಗಿರುವುದು. \q1 \v 27 ಏಕೆಂದರೆ ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕ್ಕಾಗಿರಲಿಲ್ಲವೋ? \q2 ಅದು ಕಳ್ಳರೊಳಗೆ ಸಿಕ್ಕಿತೇನೋ, \q1 ಏಕೆಂದರೆ ನೀನು ಅದರ ವಿಷಯ \q2 ಯಾವಾಗ ಮಾತನಾಡಿದಂದಿನಿಂದ ತಲೆ ಅಲ್ಲಾಡಿಸಿದ್ದೀಯಲ್ಲಾ. \q1 \v 28 ಮೋವಾಬಿನಲ್ಲಿ ವಾಸವಾಗಿರುವವರೇ, \q2 ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರಿ; \q1 ಸಂದುಗಳ ಬಾಯಿಗಳ ಪಕ್ಕಗಳಲ್ಲಿ \q2 ಗೂಡು ಕಟ್ಟುವ ಪಾರಿವಾಳದ ಹಾಗಿರಿ. \b \q1 \v 29 “ಮೋವಾಬಿನ ಹೆಮ್ಮೆಯನ್ನು ಕುರಿತು, \q2 ಅದರ ಮಹಾ ಗರ್ವವನ್ನು ಕುರಿತು, \q1 ಅದರ ಡಂಭವನ್ನೂ, ಅಹಂಕಾರವನ್ನೂ, ಬಡಾಯಿಯನ್ನೂ, \q2 ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ. \q1 \v 30 ನಾನು ಅದರ ಕೋಪೋದ್ರೇಕವನ್ನು ಬಲ್ಲೆನೆಂದು, ಅದು ವ್ಯರ್ಥ”, \q2 ಎಂದು ಯೆಹೋವ ದೇವರು ಅನ್ನುತ್ತಾರೆ; \q2 “ಆದರೆ ಅದು ಹಾಗೆ ಆಗುವುದಿಲ್ಲ; ಅವನ ಸುಳ್ಳುಗಳು ಸರಿಬೀಳುವುದಿಲ್ಲ. \q1 \v 31 ಆದ್ದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; \q2 ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; \q2 ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವುದು. \q1 \v 32 ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲು \q2 ನಿನ್ನ ನಿಮಿತ್ತವಾಗಿ ಅಳುವೆನು; \q1 ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. \q2 ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; \q1 ನಿನ್ನ ಹಣ್ಣುಗಳ ಮೇಲೆಯೂ, \q2 ನಿನ್ನ ದ್ರಾಕ್ಷಿ ಸುಗ್ಗಿಯ ಮೇಲೆಯೂ ವಿನಾಶ ಮಾಡುವವನು ಬಿದ್ದಿದ್ದಾನೆ. \q1 \v 33 ಫಲವುಳ್ಳ ಹೊಲದಿಂದಲೂ, \q2 ಮೋವಾಬಿನ ದೇಶದಿಂದಲೂ ಸಂತೋಷವೂ, \q1 ಉಲ್ಲಾಸವೂ ತೆಗೆಯಲಾಗಿವೆ; \q2 ಏಕೆಂದರೆ ದ್ರಾಕ್ಷಿ ಆಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; \q1 ಅವರ ಆರ್ಭಟದ ಸಂಗಡ ಅವರು ಯಾರೂ ತುಳಿಯುವುದಿಲ್ಲ; \q2 ಆರ್ಭಟವೇ ಆರ್ಭಟವಾಗುವುದಿಲ್ಲ. \b \q1 \v 34 “ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಲೆಯವರೆಗೂ, \q2 ಯಹಚಿನವರೆಗೂ, ಚೋಗರ್ ಮೊದಲ್ಗೊಂಡು \q1 ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ \q2 ಮೂರು ವರ್ಷದ ಕಡಸಿನಂತೆ ತಮ್ಮ ಶಬ್ದವನ್ನೆತ್ತಿದ್ದರು; \q2 ಏಕೆಂದರೆ ನಿಮ್ರೀಮ್‌ನ ನೀರು ಸಹ ಹಾಳಾದವು. \q1 \v 35 ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ, \q2 ತನ್ನ ದೇವರುಗಳಿಗೆ ಧೂಪಸುಡುವವನನ್ನೂ \q2 ಮೋವಾಬಿನಲ್ಲಿ ನಿಲ್ಲಿಸಿಬಿಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 36 “ಆದ್ದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. \q2 ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. \q2 ಏಕೆಂದರೆ ಅವನು ಮಾಡಿಕೊಂಡ ದ್ರವ್ಯ ನಾಶವಾಯಿತು. \q1 \v 37 ಏಕೆಂದರೆ ಎಲ್ಲಾ ತಲೆಗಳು ಬೋಳಾಗುವುವು; \q2 ಎಲ್ಲಾ ಗಡ್ಡಗಳು ಕ್ಷೌರವಾಗುವುವು; \q1 ಎಲ್ಲಾ ಕೈಗಳ ಮೇಲೆ ಗಾಯಗಳು, \q2 ಸೊಂಟಗಳ ಮೇಲೆ ಗೋಣಿತಟ್ಟು ಇರುವುವು. \q1 \v 38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, \q2 ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿ ಇರುವುದು. \q1 ಏಕೆಂದರೆ ಯಾರಿಗೂ ಬೇಡದ ಮಡಕೆಯ ಹಾಗೆ \q2 ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆ” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 39 “ಆಹಾ, ಭಂಗವಾಯಿತು! ಕಿರುಚಿಕೊಳ್ಳುತ್ತಾರಲ್ಲಾ! \q2 ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! \q1 ಅದರ ನೆರೆಹೊರೆಯವರು ಅಣಕಿಸುವುದಕ್ಕೂ, \q2 ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.” \p \v 40 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ಇಗೋ, ಅವನು ಹದ್ದಿನ ಹಾಗೆ ಹಾರಿ, \q2 ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು. \q1 \v 41 ಕೆರೀಯೋತ್ ಅವನಿಗೆ ವಶವಾಗುವುದು; \q2 ಬಲವಾದ ಕೋಟೆಗಳು ಅವನ ಕೈವಶವಾಗುವುವು; \q1 ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ \q2 ಹೆರುವ ಹೆಣ್ಣಿನ ಎದೆಯದಂತೆ ಅದರುವುದು. \q1 \v 42 ಏಕೆಂದರೆ ಮೋವಾಬು ಅದು ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ, \q2 ಜನಾಂಗವಲ್ಲದ ಹಾಗೆ ನಾಶವಾಗುವುದು. \q1 \v 43 ಮೋವಾಬಿನ ನಿವಾಸಿಯೇ, ಹೆದರಿಕೆಯೂ, \q2 ಕುಳಿಯೂ, ಬೋನೂ ನಿನ್ನ ಮೇಲೆ ಇರುವುವು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 44 “ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು. \q2 ಗುಂಡಿಯೊಳಗಿಂದ ಏರಿಬರುವವನು, \q1 ಬೋನಿನಲ್ಲಿ ಸಿಕ್ಕಿಬೀಳುವನು. \q2 ಏಕೆಂದರೆ ನಾನು ಅದರ ಮೇಲೆ ಅಂದರೆ, \q1 ಮೋವಾಬಿನ ಮೇಲೆಯೇ \q2 ಅವರ ದಂಡನೆಯ ವರ್ಷವನ್ನು ತರುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 45 “ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ \q2 ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; \q1 ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ, \q2 ಸೀಹೋನನ ಮಧ್ಯದಿಂದ ಜ್ವಾಲೆಯೂ ಹೊರಟು \q1 ಮೋವಾಬಿನ ಮೂಲೆಯನ್ನೂ, \q2 ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವುದು. \q1 \v 46 ಮೋವಾಬೇ, ನೀನೇ ಅಯ್ಯೋ! \q2 ಕೆಮೋಷಿನ ಜನರು ನಾಶವಾದರು; \q1 ಏಕೆಂದರೆ ನಿನ್ನ ಗಂಡು ಹೆಣ್ಣುಮಕ್ಕಳು, \q2 ಗಡೀಪಾರಾಗಿ ಸೆರೆಯಾದರು. \b \q1 \v 47 “ಆದರೂ ನಾನು ಕಡೇ ದಿವಸಗಳಲ್ಲಿ \q2 ಮೋವಾಬಿನ ಸಮೃದ್ಧಿಯನ್ನು ತಿರುಗಿ ತರುತ್ತೇನೆ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \p ಈವರೆಗೆ ಮೋವಾಬಿನ ನ್ಯಾಯ ತೀರ್ವಿಕೆಯು ಇರುವುದು. \b \c 49 \s1 ಅಮ್ಮೋನ್ಯರ ಕುರಿತು ಸಂದೇಶ \p \v 1 ಅಮ್ಮೋನ್ಯರನ್ನು ಕುರಿತದ್ದು: \b \p ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ಇಸ್ರಾಯೇಲಿಗೆ ಪುತ್ರರಿಲ್ಲವೋ? \q2 ಅವನಿಗೆ ಬಾಧ್ಯಸ್ಥನಿಲ್ಲವೋ? \q1 ಮಲ್ಕಾಮ್\f + \fr 49:1 \fr*\fq ಮಲ್ಕಾಮ್ \fq*\ft ಅಥವಾ \ft*\fqa ಅವರ ಅರಸನು\fqa*\f* ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? \q2 ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ? \q1 \v 2 ಆದ್ದರಿಂದ ಇಗೋ, ದಿನಗಳು ಬರುವುವು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ \q2 ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; \q1 ಅದು ಹಾಳು ದಿಬ್ಬವಾಗುವುದು; \q2 ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. \q1 ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ \q2 ಬಾಧ್ಯವನ್ನು ಹೊಂದುವುದು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 3 “ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು; \q2 ರಬ್ಬಾದ ನಿವಾಸಿಗಳೇ ಗೋಳಾಡಿರಿ; \q1 ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; \q2 ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; \q1 ಏಕೆಂದರೆ ಮಲ್ಕಾಮ್ ದೇವತೆ, ಅವನ ಯಾಜಕರು, \q2 ಅವನ ಪ್ರಧಾನರು ಒಟ್ಟಾಗಿ ಸೆರೆಗೆ ಹೋಗುವರು. \q1 \v 4 ಹಿಂದಿರುಗು, ಹಿಂಜರಿದು ಹೋದ ಮಗಳೇ, \q2 ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, \q1 ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, \q2 ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? \q2 ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ? \q1 \v 5 ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ \q2 ನಿನ್ನ ಮೇಲೆ ಭಯವನ್ನು ಬರಮಾಡುವೆನು,” \q2 ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. \q1 “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; \q2 ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ. \b \q1 \v 6 “ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \s1 ಎದೋಮ್ಯರ ಕುರಿತು ಸಂದೇಶ \p \v 7 ಎದೋಮ್ಯರನ್ನು ಕುರಿತದ್ದು: \b \p ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. \q1 “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? \q2 ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? \q2 ಅವರ ಜ್ಞಾನವು ಕ್ಷೀಣಿಸಿದೆಯೇ? \q1 \v 8 ದೇದಾನಿನ ನಿವಾಸಿಗಳೇ, ಓಡಿಹೋಗಿರಿ; \q2 ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; \q1 ಏಕೆಂದರೆ ಏಸಾವನ ಆಪತ್ತನ್ನೂ, \q2 ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ. \q1 \v 9 ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ \q2 ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ? \q1 ಕಳ್ಳರು ರಾತ್ರಿ ವೇಳೆಯಲ್ಲಿ ನುಗ್ಗಿದರೆ \q2 ತಮಗೆ ಸಾಕಾಗುವವರೆಗೂ ಕದಿಯುವುದಿಲ್ಲವೇ? \q1 \v 10 ಆದರೆ ನಾನು ಏಸಾವನನ್ನು ಬರಿದು ಮಾಡಿದ್ದೇನೆ; \q2 ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; \q2 ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; \q1 ಅವನ ಸಂತಾನವು ಹಾಳಾಯಿತು; \q2 ಅವನ ಸಹೋದರರೂ, \q2 ಅವನ ನೆರೆಯವರೂ, ಅವನೂ ಇಲ್ಲವಾದರು. \q1 \v 11 ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು. \q2 ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.” \p \v 12 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ. \v 13 ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ. \q1 \v 14 ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. \q2 ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; \q1 “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, \q2 ಯುದ್ಧಕ್ಕಾಗಿ ಏಳಿರಿ!” \b \q1 \v 15 “ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, \q2 ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು. \q1 \v 16 ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, \q2 ಉನ್ನತದಲ್ಲಿ ನಿವಾಸಮಾಡಿಕೊಂಡವನೇ, \q1 ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ \q2 ನಿನ್ನನ್ನು ಮೋಸಗೊಳಿಸಿದೆ. \q1 ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, \q2 ಅಲ್ಲಿಂದ ನಿನ್ನನ್ನು ಇಳಿಸುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 17 “ಎದೋಮು ಸಹ ಹಾಳಾಗುವುದು; \q2 ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು \q2 ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು. \q1 \v 18 ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, \q2 ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, \q1 ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; \q2 ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 19 “ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ \q2 ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; \q2 ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು \q1 ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. \q2 ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. \q1 ನನಗೆ ಸಮಾನನು ಯಾರು? \q2 ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? \q2 ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?” \b \q1 \v 20 ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ \q2 ಮಾಡಿದ ಆಲೋಚನೆಯನ್ನೂ, \q2 ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ \q1 ಮಾಡಿದ ಯೋಜನೆಗಳನ್ನೂ ಕೇಳಿರಿ. \q2 ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. \q2 ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು. \q1 \v 21 ಎದೋಮ್ಯರು ತಟ್ಟನೆ ಬೀಳುವ ಶಬ್ದದಿಂದ ಭೂಮಿಯು ಕಂಪಿಸುವುದು. \q2 ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಪ್ರತಿಧ್ವನಿಸುವುದು. \q1 \v 22 ಇಗೋ, ಅವನು ಹದ್ದಿನಂತೆ ಹಾರುವನು; \q2 ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; \q1 ಎದೋಮಿನ ಪರಾಕ್ರಮಶಾಲಿಗಳು ಹೃದಯವು \q2 ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು. \s1 ದಮಸ್ಕದ ವಿಷಯವಾಗಿ ಸಂದೇಶ \p \v 23 ದಮಸ್ಕದ ವಿಷಯವಾಗಿ: \q1 “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, \q2 ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; \q1 ಸಮುದ್ರದಂತೆ ಕಳವಳಪಡುತ್ತದೆ; \q2 ಅದು ಸುಮ್ಮನಿರಲಾರದು. \q1 \v 24 ದಮಸ್ಕವು ನಿತ್ರಾಣವಾಯಿತು; \q2 ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; \q2 ಭಯವು ಅದನ್ನು ಹಿಡಿದುಕೊಂಡಿದೆ; \q1 ಹೆರುವ ಸ್ತ್ರೀಯ ಹಾಗೆ ಸಂಕಟವೂ, \q2 ವೇದನೆಗಳೂ ಅದನ್ನು ಹಿಡಿದಿವೆ. \q1 \v 25 ಹೊಗಳಿಕೆಯ ಪಟ್ಟಣವೂ \q2 ನನ್ನ ಸಂತೋಷದ ಪಟ್ಟಣವೂ ಬಿಡಲಾಗಿದೆ ಅಲ್ಲವೋ? \q1 \v 26 ಆದ್ದರಿಂದ ಅದರ ಯೌವನಸ್ಥರು ಅದರ ಚೌಕಗಳಲ್ಲಿ ಬೀಳುವರು; \q2 ಯುದ್ಧಭಟರೆಲ್ಲರೂ ಆ ದಿವಸದಲ್ಲಿ ಕಡಿದುಹಾಕಲಾಗುವರು,” \q2 ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. \q1 \v 27 “ಏಕೆಂದರೆ ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; \q2 ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವುದು.” \s1 ಕೇದಾರಿನ ಹಾಗೂ ಹಾಚೋರಿನ ವಿಷಯವಾಗಿ ಸಂದೇಶ \p \v 28 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: \b \p ಯೆಹೋವ ದೇವರು ಹೀಗೆ ಹೇಳುತ್ತಾರೆ, \q1 “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. \q2 ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ. \q1 \v 29 ಅವರ ಗುಡಾರಗಳನ್ನೂ, \q2 ಅವರ ಮಂದೆಗಳನ್ನೂ ತೆಗೆದುಕೊಳ್ಳುವರು. \q2 ಅವರ ಗುಡಾರದ ಪರದೆಗಳನ್ನೂ, ಅವರ ಎಲ್ಲಾ ಸಾಮಾನುಗಳನ್ನೂ, \q1 ಅವರ ಒಂಟೆಗಳನ್ನೂ ವಶಮಾಡಿಕೊಳ್ಳುವರು; \q2 ಸುತ್ತಲೂ ಭಯ, ಎಂದು ಅವರಿಗೆ ಕೂಗುವರು. \b \q1 \v 30 “ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, \q2 ದೂರಕ್ಕೆ ಹೋಗಿ ಬಿಡಿರಿ, ಆಳವಾದ ಗುಹೆಯಲ್ಲಿ ವಾಸವಾಗಿರಿ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 ಏಕೆಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು \q2 ನಿಮಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ; \q2 ನಿಮಗೆ ವಿರೋಧವಾಗಿ ಯೋಜನೆಯನ್ನು ಮಾಡಿದ್ದಾನೆ. \b \q1 \v 31 “ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ \q2 ಜನಾಂಗದ ಬಳಿಗೆ ಹೋಗಿರಿ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ಅದಕ್ಕೆ ಬಾಗಿಲುಗಳು ಇಲ್ಲ; ಅಗುಳಿಗಳು ಇಲ್ಲ; \q2 ಅದರ ಜನರು ಅಪಾಯದಿಂದ ದೂರ ವಾಸಿಸುತ್ತಾರೆ. \q1 \v 32 ಅವರ ಒಂಟೆಗಳು ಕೊಳ್ಳೆಯಾಗುವುವು; \q2 ಅವರ ದನಗಳ ಸಮೂಹವು ಸುಲಿಗೆಯಾಗುವುದು; \q1 ಕಟ್ಟಕಡೆಯ ಮೂಲೆಗಳಲ್ಲಿ\f + \fr 49:32 \fr*\fq ಕಟ್ಟಕಡೆಯ ಮೂಲೆಗಳಲ್ಲಿ \fq*\ft ಅಥವಾ \ft*\fqa ಮುಂದಲೆಗೂದಲು ಕತ್ತರಿಸಿಕೊಳ್ಳುವ ಜನರು\fqa*\f* ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; \q2 ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 33 ಹಾಚೋರು ನರಿಗಳ ನಿವಾಸವೂ, \q2 ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. \q1 ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. \q2 ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ. \s1 ಏಲಾಮ್ ಕುರಿತಾದ ಸಂದೇಶ \p \v 34 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು: \b \p \v 35 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, \q1 “ಇಗೋ, ನಾನು ಏಲಾಮಿನ ಬಿಲ್ಲನ್ನೂ, \q2 ಅವರ ಪರಾಕ್ರಮವನ್ನೂ, ಶ್ರೇಷ್ಠತ್ವವನ್ನೂ ಮುರಿಯುತ್ತೇನೆ \q1 \v 36 ಆಕಾಶದ ನಾಲ್ಕು ದಿಕ್ಕುಗಳಿಂದ \q2 ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ತಂದು, \q1 ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; \q2 ಏಲಾಮಿನಿಂದ ಓಡಿಸಲಾದವರು \q2 ಸೇರದ ಜನಾಂಗವು ಇರುವುದಿಲ್ಲ. \q1 \v 37 ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ, \q2 ಅವರ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರುವಂತೆ ಮಾಡುವೆನು; \q1 ಅವರ ಮೇಲೆ ಕೇಡನ್ನೂ, \q2 ನನ್ನ ಕೋಪದ ಉಗ್ರವನ್ನೂ ಬರಮಾಡುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ಅವನನ್ನು ಮುಗಿಸಿಬಿಡುವವರೆಗೆ ಖಡ್ಗವನ್ನು \q2 ಅವರ ಹಿಂದೆ ಕಳುಹಿಸುವೆನು. \q1 \v 38 ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, \q2 ಅದರೊಳಗಿಂದ ಅರಸನನ್ನೂ, ಪ್ರಧಾನರನ್ನೂ ನಾಶಮಾಡುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 39 “ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವುದೇನೆಂದರೆ, \q2 ನಾನು ಏಲಾಮಿನ ಸಮೃದ್ಧಿಯನ್ನು ತಿರುಗಿ ತರುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \c 50 \s1 ಬಾಬಿಲೋನಿನ ವಿಷಯವಾಗಿ ಸಂದೇಶ \p \v 1 ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಯೆಹೋವ ದೇವರು ನುಡಿಸಿದ ವಾಕ್ಯ ಇದು: \q1 \v 2 “ಜನಾಂಗಗಳಲ್ಲಿ ಪ್ರಚುರಪಡಿಸಿರಿ, \q2 ಧ್ವಜವನ್ನೆತ್ತಿ ಪ್ರಕಟಿಸಿರಿ; \q2 ಮರೆಮಾಡದೇ ಹೀಗೆ ಸಾರಿರಿ, \q1 ‘ಬಾಬಿಲೋನ್ ಶತ್ರುವಶವಾಯಿತು; \q2 ಬೇಲ್ ದೇವತೆಗೆ ನಾಚಿಕೆಯಾಯಿತು; \q2 ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. \q1 ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. \q2 ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’ \q1 \v 3 ಏಕೆಂದರೆ ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; \q2 ಅದು ಅವಳ ದೇಶವನ್ನು ಹಾಳುಮಾಡಿಬಿಡುವುದು; \q1 ಅವಳಲ್ಲಿ ಯಾರೂ ವಾಸಿಸುವುದಿಲ್ಲ; \q2 ಮನುಷ್ಯರೂ, ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ. \b \q1 \v 4 “ಆ ದಿವಸಗಳಲ್ಲಿಯೂ ಆ ಕಾಲದಲ್ಲಿಯೂ \q1 ಇಸ್ರಾಯೇಲರು ಬರುವರು; ಅವರೂ, ಯೆಹೂದ್ಯರೂ ಒಟ್ಟಾಗಿ ಕೂಡಿಕೊಳ್ಳುವರು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ಅವರು ಅಳುತ್ತಾ ಹೋಗಿ, \q2 ತಮ್ಮ ದೇವರಾದ ಯೆಹೋವ ದೇವರನ್ನು ಹುಡುಕುವರು. \q1 \v 5 ಚೀಯೋನಿನ ಕಡೆಗೆ ಅಭಿಮುಖರಾಗಿ \q2 ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; \q1 ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ \q2 ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು. \b \q1 \v 6 “ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; \q2 ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; \q2 ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; \q1 ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; \q2 ಮಲಗುವ ಸ್ಥಳವನ್ನು ಮರೆತುಬಿಟ್ಟರು. \q1 \v 7 ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ; \q2 ಅವರ ಎದುರಾಳಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ; \q1 ಏಕೆಂದರೆ ನೀತಿಯ ನಿವಾಸವಾದ ಯೆಹೋವ ದೇವರಿಗೆ, \q2 ಹೌದು, ಅವರ ಪೂರ್ವಜರ ನಿರೀಕ್ಷೆಯಾದ ಯೆಹೋವ ದೇವರಿಗೆ \q2 ವಿರೋಧವಾಗಿ ಪಾಪಮಾಡಿದ್ದಾರೆ,’ ಎಂದುಕೊಂಡರು. \b \q1 \v 8 “ಬಾಬಿಲೋನಿನೊಳಗಿಂದ ಓಡಿಹೋಗಿರಿ; \q2 ಬಾಬಿಲೋನಿನ ಸೀಮೆಯಿಂದ ಹೊರಡಿರಿ; \q2 ಮಂದೆಯ ಮುಂದೆ ಹೋತಗಳ ಹಾಗೆ ಇರಿ. \q1 \v 9 ಏಕೆಂದರೆ ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ, \q2 ಬಾಬಿಲೋನಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. \q1 ಅವರು ಅದಕ್ಕೆ ವಿರೋಧವಾಗಿ ಯುದ್ಧ ಸಿದ್ಧಮಾಡುವರು. \q2 ಅಲ್ಲಿಂದ ಅದು ಹಿಡಿಯಲಾಗುವುದು. \q1 ಅವರ ಬಾಣಗಳು ಬಲಿಷ್ಠನಾದ ಪ್ರವೀಣ ಶೂರನಂತಿರುವುವು. \q2 ಯಾವುದೂ ವ್ಯರ್ಥವಾಗಿ ತಿರುಗದು. \q1 \v 10 ಬಾಬಿಲೋನಿನ\f + \fr 50:10 \fr*\fq ಬಾಬಿಲೋನಿನ \fq*\ft ಅಥವಾ \ft*\fqa ಕಸ್ದೀಯ\fqa*\f* ದೇಶವು ಸುಲಿಗೆಯಾಗುವುದು; \q2 ಅದನ್ನು ಸುಲಿದುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವುದು, \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 11 “ಏಕೆಂದರೆ ನನ್ನ ಸೊತ್ತನ್ನು ನಾಶಮಾಡಿದವರೇ, \q2 ನೀವು ಸಂತೋಷಿಸಿದ್ದರಿಂದಲೂ, \q1 ನೀವು ಉಲ್ಲಾಸಿಸಿದ್ದರಿಂದಲೂ, ಕೊಬ್ಬಿದ ಕಡಸಿನ ಹಾಗೆ ಗರ್ವ ಪಟ್ಟದ್ದರಿಂದಲೂ, \q2 ಗಂಡು ಕುದುರೆಗಳ ಹಾಗೆ ಹೂಂಕರಿಸಿದ್ದರಿಂದಲೂ, \q1 \v 12 ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; \q2 ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; \q1 ಇಗೋ, ಜನಾಂಗಗಳಲ್ಲಿ ಅಂತ್ಯವಾದದ್ದು ಕಾಡೂ, \q2 ಒಣ ಭೂಮಿಯೂ, ಮರುಭೂಮಿಯೂ ಆಗುವುದು. \q1 \v 13 ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ; \q2 ಸಂಪೂರ್ಣ ಹಾಳಾಗುವುದು; \q1 ಬಾಬಿಲೋನನ್ನು ಹಾದುಹೋಗುವವರೆಲ್ಲರು \q2 ಅದರ ಎಲ್ಲಾ ಗಾಯಗಳ ವಿಷಯ ವಿಸ್ಮಯಪಟ್ಟು ಸಿಳ್ಳುಹಾಕುವರು. \b \q1 \v 14 “ಬಿಲ್ಲನ್ನು ಬಗ್ಗಿಸುವವರೇ, \q2 ಬಾಬಿಲೋನಿಗೆ ವಿರೋಧವಾಗಿ ಸುತ್ತಲೂ ಯುದ್ಧ ಸಿದ್ಧಮಾಡಿರಿ; \q1 ಅದಕ್ಕೆ ಎಸೆಯಿರಿ; ಬಾಣಗಳನ್ನು ಕಡಿಮೆ ಮಾಡಬೇಡಿರಿ; \q2 ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿತಲ್ಲಾ. \q1 \v 15 ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; \q2 ಅದರ ಬುರುಜುಗಳು ಬಿದ್ದು ಹೋದವು; \q2 ಅದರ ಪೌಳಿಗೋಡೆಯನ್ನು ಕೆಡವಲಾಯಿತು. \q1 ಅದು ಯೆಹೋವ ದೇವರ ಪ್ರತಿದಂಡನೆ; \q2 ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. \q2 ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ. \q1 \v 16 ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು \q2 ಹಿಡಿಯುವವನನ್ನೂ ಬಾಬಿಲೋನಿನೊಳಗಿಂದ ಕಡಿದುಬಿಡಿರಿ; \q1 ಕಷ್ಟಪಡುವ ಖಡ್ಗದ ಭಯದಿಂದ \q2 ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; \q2 ತಮ್ಮ ತಮ್ಮ ದೇಶಗಳಿಗೆ ಓಡಿಹೋಗುವರು. \b \q1 \v 17 “ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; \q2 ಸಿಂಹಗಳು ಅವನನ್ನು ಓಡಿಸಿಬಿಟ್ಟವು; \q1 ಮೊದಲು ಅಸ್ಸೀರಿಯನ ಅರಸನು \q2 ಅವನನ್ನು ತಿಂದುಬಿಟ್ಟನು. \q1 ಕಡೆಯಲ್ಲಿ ಬಾಬಿಲೋನಿನ ಅರಸನಾದ \q2 ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.” \p \v 18 ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: \q1 “ಇಗೋ, ನಾನು ಅಸ್ಸೀರಿನ ಅರಸನನ್ನು ಶಿಕ್ಷಿಸಿದ ಹಾಗೆ \q2 ಬಾಬಿಲೋನಿನ ಅರಸನನ್ನೂ, ಅವನ ದೇಶವನ್ನೂ ಶಿಕ್ಷಿಸುತ್ತೇನೆ. \q1 \v 19 ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; \q2 ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; \q1 ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, \q2 ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.” \q1 \v 20 ಯೆಹೋವ ದೇವರು ಹೇಳುತ್ತಾರೆ, \q2 “ಆ ದಿವಸಗಳಲ್ಲಿಯೂ, \q1 ಆ ಕಾಲದಲ್ಲಿಯೂ ಇಸ್ರಾಯೇಲಿನ ಅಕ್ರಮವನ್ನು ಹುಡುಕಿದರೂ, \q2 ಅಲ್ಲಿ ಏನೂ ಇರದು; \q1 ಯೆಹೂದದ ಪಾಪಗಳನ್ನು ಹುಡುಕಿದರೂ \q2 ಅವು ಸಿಕ್ಕುವುದಿಲ್ಲ. \q2 ಏಕೆಂದರೆ ನಾನು ಉಳಿಸುವವರನ್ನು ಮನ್ನಿಸುತ್ತೇನೆ. \b \q1 \v 21 “ಮೆರಾಥಯಿಮ್ ದೇಶಕ್ಕೆ ವಿರೋಧವಾಗಿ, \q2 ಪೆಕೋದಿನ ನಿವಾಸಿಗಳಿಗೆ ವಿರೋಧವಾಗಿಯೂ ದಂಡೆತ್ತಿ ಹೋಗು; \q1 ಅವರನ್ನು ಹಿಂದಟ್ಟಿ ಸಂಹರಿಸು. ಸಂಪೂರ್ಣ ನಾಶಮಾಡು.” \q2 “ನಾನು ನಿನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾಡು, \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 22 ಯುದ್ಧದ ಶಬ್ದವೂ, \q2 ದೊಡ್ಡ ನಾಶನವೂ ದೇಶದಲ್ಲಿ ಇರುವುದು. \q1 \v 23 ಇಗೋ, ಲೋಕವನ್ನೆಲ್ಲಾ ಹೊಡೆದ \q2 ಸುತ್ತಿಗೆಯು ಮುರಿದು ತುಂಡುತುಂಡಾಯಿತು! \q1 ಹೇಗೆ ಬಾಬೆಲ್ ರಾಜ್ಯವು \q2 ಜನಾಂಗಗಳ ನಡುವೆ ಹಾಳಾಯಿತಲ್ಲಾ! \q1 \v 24 ನಾನು ಬೋನನ್ನು ಇಟ್ಟೆನು; \q2 ಹೌದು, ಬಾಬಿಲೋನೇ ನೀನು ಸಿಕ್ಕಿಕೊಂಡೆ. \q1 ಆದರೆ ನಿನಗೆ ತಿಳಿಯದೆ ಇತ್ತು. \q2 ನೀನು ಯೆಹೋವ ದೇವರಿಗೆ ವಿರೋಧವಾಗಿ ಜಗಳವಾಡಿದ್ದರಿಂದಲೇ ಸಿಕ್ಕಿಕೊಂಡೆ ಮತ್ತು ವಶವಾದೆ. \q1 \v 25 ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು, \q2 ತನ್ನ ರೋಷದ ಆಯುಧಗಳನ್ನು ಹೊರಗೆ ತಂದಿದ್ದಾರೆ. \q1 ಏಕೆಂದರೆ ಬಾಬಿಲೋನಿನ ದೇಶದಲ್ಲಿ \q2 ಸಾರ್ವಭೌಮ ಸೇನಾಧೀಶ್ವರ ಯೆಹೋವ ದೇವರಿಗೆ ಕೆಲಸವಿದೆ. \q1 \v 26 ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ. \q2 ಅದರ ಕಣಜಗಳನ್ನು ತೆರೆಯಿರಿ. \q2 ಅದನ್ನು ದಿಬ್ಬಗಳಂತೆ ತುಳಿಯಿರಿ. \q1 ಸಂಪೂರ್ಣವಾಗಿ ನಾಶಮಾಡಿರಿ. \q2 ಅದಕ್ಕೆ ಒಂದೂ ಉಳಿಯದಿರಲಿ. \q1 \v 27 ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, \q2 ಅವು ವಧ್ಯಸ್ಥಾನಕ್ಕೆ ಹೋಗಲಿ, \q1 ಅವುಗಳ ಗತಿಯನ್ನು ಏನೆಂದು ಹೇಳಲಿ! \q2 ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ. \q1 \v 28 ಅವರು ಚೀಯೋನಿನಲ್ಲಿ \q2 ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, \q1 ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, \q2 ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ. \b \q1 \v 29 “ಬಾಬಿಲೋನಿಗೆ ವಿರೋಧವಾಗಿ \q2 ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; \q1 ಅದರ ಸುತ್ತಲು ದಂಡಿಳಿಸಿರಿ \q2 ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. \q1 ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ \q2 ಅದು ಮಾಡಿದಂತೆಯೇ ಅದಕ್ಕೆ ಮಾಡಿ. \q1 ಏಕೆಂದರೆ ಅದು ಅಹಂಕಾರದಿಂದ \q2 ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು. \q1 \v 30 ಆದ್ದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; \q2 ಅದರ ಸೈನಿಕರೆಲ್ಲಾ ಆ ದಿವಸದಲ್ಲಿ ಸುಮ್ಮನಾಗುವರು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 31 “ಅತಿ ಗರ್ವಿಷ್ಠನೇ, ಇಗೋ, \q2 ನಾನು ನಿನಗೆ ವಿರೋಧವಾಗಿದ್ದೇನೆ,” \q1 ಎಂದು ಸೈನ್ಯಗಳ ದೇವರಾದ \q2 ಯೆಹೋವ ದೇವರು ಹೇಳುತ್ತಾರೆ. \q1 “ಏಕೆಂದರೆ ನಿನ್ನ ದಿವಸವೂ, \q2 ನಿನ್ನ ಶಿಕ್ಷೆಯ ಕಾಲವೂ ಬಂತು. \q1 \v 32 ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. \q2 ಅದನ್ನು ಯಾರೂ ಎತ್ತರು. \q1 ಅದರ ನಗರಗಳಿಗೆ ಬೆಂಕಿ ಹೊತ್ತಿಸುವೆನು. \q2 ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.” \p \v 33 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, \q1 “ಇಸ್ರಾಯೇಲರೂ, ಯೆಹೂದ್ಯರೂ ಕೂಡ ಹಿಂಸೆಗೆ ಗುರಿಯಾಗಿದ್ದಾರೆ; \q2 ಅವರನ್ನು ಸೆರೆಗೆ ಒಯ್ಯುವವರೆಲ್ಲರು \q1 ಅವರನ್ನು ಬಿಟ್ಟುಬಿಡುವುದಿಲ್ಲವೆಂದು, \q2 ಬಲವಾಗಿ ಪಟ್ಟುಹಿಡಿದಿದ್ದಾರೆ. \q1 \v 34 ಅವರ ವಿಮೋಚಕನು ಬಲಿಷ್ಠನೇ, \q2 ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; \q1 ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, \q2 ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, \q2 ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು. \b \q1 \v 35 “ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ಅದರ ಜನಸಾಮಾನ್ಯರನ್ನು, ಪ್ರಧಾನರನ್ನು, \q2 ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಖಡ್ಗ, \q1 \v 36 ಸುಳ್ಳು ಪ್ರವಾದಿಗಳ ವಿರೋಧವಾಗಿ ಖಡ್ಗ ಉಂಟು; \q2 ಅವರು ಮೂರ್ಖರಾಗುವರು; \q1 ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; \q2 ಅವರು ಭಯಭ್ರಾಂತಿ ಪಡುವರು. \q1 \v 37 ಅದರ ಕುದುರೆಗಳಿಗೆ ವಿರೋಧವಾಗಿಯೂ, \q2 ಅವರ ರಥಗಳಿಗೆ ವಿರೋಧವಾಗಿಯೂ, \q2 ಅವರೊಳಗಿರುವ ಎಲ್ಲಾ ಸಕಲ ಜನರಿಗೆ ವಿರೋಧವಾಗಿಯೂ ಖಡ್ಗ ಉಂಟು; \q1 ಅವರ ಹೆಂಗಸರಂತೆ ಅಶಕ್ತರಾಗುವರು; \q2 ಅದರ ಬೊಕ್ಕಸಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವು ಕೊಳ್ಳೆಯಾಗುವುವು. \q1 \v 38 ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; \q2 ಅದು ಬತ್ತಿಹೋಗುವುದು; \q1 ಏಕೆಂದರೆ ಅದು ವಿಗ್ರಹಗಳ ದೇಶವೇ, \q2 ಅವರು ಭಯಂಕರವಾದ ವಿಗ್ರಹಗಳಿಂದ ಹುಚ್ಚರಾದರು. \b \q1 \v 39 “ಆದ್ದರಿಂದ ಅರಣ್ಯದ ಕಾಡುಮೃಗಗಳು, \q2 ನರಿಗಳು ಕೂಡ ಅಲ್ಲಿ ವಾಸಮಾಡುವುವು; \q1 ಉಷ್ಟ್ರಪಕ್ಷಿಗಳೂ ಸಹ ಅದರಲ್ಲಿ ವಾಸಮಾಡುವುವು; \q2 ತಲತಲಾಂತರಗಳವರೆಗೂ ಯಾರೂ ಅದರಲ್ಲಿ ತಂಗುವುದಿಲ್ಲ. \q1 \v 40 ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ \q2 ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, \q1 ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; \q2 ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” \q2 ಎಂದು ಯೆಹೋವ ದೇವರು ಅನ್ನುತ್ತಾರೆ. \b \q1 \v 41 “ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು \q2 ಅನೇಕ ಅರಸರು ಎಚ್ಚರಗೊಳ್ಳುವರು. ಅವರು ಲೋಕದ ಕಟ್ಟಕಡೆಯಿಂದ ಬರುತ್ತಾರೆ. \q1 \v 42 ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. \q2 ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. \q1 ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. \q2 ಬಾಬಿಲೋನಿನ ಮಗಳೇ, \q1 ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ \q2 ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ. \q1 \v 43 ಬಾಬಿಲೋನಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ; \q2 ಅವನ ಕೈಗಳು ನಿತ್ರಾಣವಾದವು; \q1 ಸಂಕಟವೂ, ಹೆರುವ ಸ್ತ್ರೀಯ ಹಾಗೆ \q2 ನೋವೂ ಅವನನ್ನು ಹಿಡಿದವು. \q1 \v 44 ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ \q2 ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; \q1 ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; \q2 ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? \q1 ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? \q2 ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?” \b \q1 \v 45 ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, \q2 ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; \q1 ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; \q2 ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು. \q1 \v 46 ಬಾಬಿಲೋನು ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುವುದು; \q2 ಅದರ ಕೂಗು ಜನಾಂಗಗಳೊಳಗೆ ಕೇಳಬಂತು. \c 51 \p \v 1 ಯೆಹೋವ ದೇವರು ಹೀಗೆ ಹೇಳುತ್ತಾರೆ, \q1 “ಇಗೋ, ನಾನು ಬಾಬಿಲೋನಿಗೆ ವಿರೋಧವಾಗಿಯೂ, \q2 ನನಗೆದುರಾಗಿ ಎದ್ದಿರುವ ಲೇಬ್ ಕಾಮೈ\f + \fr 51:1 \fr*\fq ಲೇಬ್ ಕಾಮೈ \fq*\ft ರಹಸ್ಯ ಭಾಷೆಯಲ್ಲಿ \ft*\fqa ಬಾಬಿಲೋನ್.\fqa*\f* ಪ್ರಜೆಗಳ ವಿರೋಧವಾಗಿಯೂ ನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು. \q1 \v 2 ವಿದೇಶಿಯರನ್ನು ಬಾಬಿಲೋನಿಗೆ ಕಳುಹಿಸುವೆನು; \q2 ಅವರು ಅದನ್ನು ತೂರಿ ಅದರ ದೇಶವನ್ನು ಬರಿದು ಮಾಡುವರು; \q1 ಏಕೆಂದರೆ ದುರ್ದಿನದಲ್ಲಿ ಸುತ್ತಲಾಗಿ \q2 ಅದಕ್ಕೆ ವಿರೋಧವಾಗಿರುವರು. \q1 \v 3 ಬಿಲ್ಲು ಬಗ್ಗಿಸುವವನಿಗೆ ವಿರೋಧವಾಗಿಯೂ, \q2 ಕವಚದಲ್ಲಿ ತನ್ನನ್ನು ಹೆಚ್ಚಿಸಿಕೊಳ್ಳುವವನಿಗೆ ವಿರೋಧವಾಗಿಯೂ \q2 ಬಿಲ್ಲಿನವನು ತನ್ನ ಬಿಲ್ಲನ್ನು ಬಗ್ಗಿಸಲಿ; \q1 ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; \q2 ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ. \q1 \v 4 ಈ ಪ್ರಕಾರ ಬಾಬಿಲೋನಿಯರ ದೇಶದಲ್ಲಿ ಹತರಾಗಿ ಬೀಳುವರು. \q2 ಅದರ ಬೀದಿಗಳಲ್ಲಿಯೇ ಕತ್ತಿಗೆ ತುತ್ತಾಗುವರು. \q1 \v 5 ಏಕೆಂದರೆ ಅವರ ದೇಶವು ಇಸ್ರಾಯೇಲಿನ \q2 ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ \q1 ಸೇನಾಧೀಶ್ವರ ಯೆಹೋವ ದೇವರು \q2 ಇಸ್ರಾಯೇಲನ್ನಾಗಲಿ, ಯೆಹೂದವನ್ನಾಗಲಿ ಕೈಬಿಡಲಿಲ್ಲ. \b \q1 \v 6 “ಬಾಬಿಲೋನಿನೊಳಗಿಂದ ಓಡಿಹೋಗಿರಿ; \q2 ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; \q2 ಅದರ ಪಾಪದಲ್ಲಿ ನಾಶವಾಗಬೇಡಿರಿ; \q1 ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯ ಕಾಲವು; \q2 ಆತನೇ ಅದಕ್ಕೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ. \q1 \v 7 ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ \q2 ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; \q1 ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; \q2 ಆದ್ದರಿಂದ ಜನಾಂಗಗಳು ಹುಚ್ಚರಾದರು. \q1 \v 8 ಇದ್ದಕ್ಕಿದ್ದ ಹಾಗೆ ಬಾಬಿಲೋನ್ ಬಿದ್ದು ಹಾಳಾಗಿದೆ; \q2 ಅದರ ವಿಷಯ ಗೋಳಾಡಿರಿ; \q1 ಅದರ ನೋವಿಗೆ ತೈಲ ತೆಗೆದುಕೊಳ್ಳಿರಿ; \q2 ಒಂದು ವೇಳೆ ವಾಸಿಯಾದೀತು. \b \q1 \v 9 “ ‘ನಾವು ಬಾಬಿಲೋನನ್ನು ವಾಸಿಮಾಡಲು ಪ್ರಯತ್ನಿಸಿದೆವು; \q2 ಆದರೆ ಅದು ವಾಸಿಯಾಗಲಿಲ್ಲ; \q1 ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; \q2 ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; \q2 ಆಕಾಶಗಳವರೆಗೂ ಏರುತ್ತದೆ.’ \b \q1 \v 10 “ ‘ಯೆಹೋವ ದೇವರು ನಮ್ಮ ನೀತಿಯನ್ನು ಹೊರಗೆ ತಂದಿದ್ದಾರೆ; \q2 ಬನ್ನಿ, ನಮ್ಮ ದೇವರಾದ ಯೆಹೋವ ದೇವರ ಕ್ರಿಯೆಯನ್ನು \q2 ಚೀಯೋನಿನಲ್ಲಿ ಸಾರಿ ಹೇಳೋಣ.’ \b \q1 \v 11 “ಬಾಣಗಳನ್ನು ಮೆರುಗು ಮಾಡಿರಿ; \q2 ಡಾಲುಗಳನ್ನು ಎತ್ತಿಕೊಳ್ಳಿರಿ, \q1 ಯೆಹೋವ ದೇವರು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾರೆ; \q2 ಆತನ ಆಲೋಚನೆ ಬಾಬಿಲೋನಿಗೆ ವಿರೋಧವಾಗಿ ಅದನ್ನು ನಾಶಮಾಡುವುದಕ್ಕೆ ಇದೆ. \q1 ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯು, \q2 ಅವರ ದೇವಾಲಯದ ಪ್ರತಿದಂಡನೆಯಾಗಿದೆ. \q1 \v 12 ಬಾಬಿಲೋನಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ; \q2 ಪಹರೆಯನ್ನು ಬಲಪಡಿಸಿರಿ; \q1 ಕಾವಲುಗಾರರನ್ನು ನಿಲ್ಲಿಸಿರಿ; \q2 ಹೊಂಚಿಕೊಳ್ಳುವವರನ್ನು ಸಿದ್ಧಮಾಡಿರಿ; \q1 ಏಕೆಂದರೆ ಯೆಹೋವ ದೇವರು ಬಾಬಿಲೋನಿನ ನಿವಾಸಿಗಳಿಗೆ ವಿರೋಧವಾಗಿ \q2 ತಾನು ಹೇಳಿದ್ದನ್ನು ಯೋಚಿಸಿದ್ದನ್ನು ಮಾಡಿದ್ದಾರೆ. \q1 \v 13 ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, \q2 ಬಹಳ ದ್ರವ್ಯಗಳುಳ್ಳವಳೇ, \q1 ನಿನ್ನ ಅಂತ್ಯವೂ, \q2 ನಿನ್ನ ನಾಶನದ ಕಾಲವು ಬಂತು. \q1 \v 14 ಸೇನಾಧೀಶ್ವರ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟು: \q2 ನಿಶ್ಚಯವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುತ್ತೇನೆಂದು \q2 ಅವರು ನಿನಗೆ ವಿರೋಧವಾಗಿ ಆರ್ಭಟವನ್ನು ಎತ್ತುವರು. \b \q1 \v 15 “ಅವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, \q2 ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, \q2 ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ. \q1 \v 16 ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, \q2 ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. \q1 ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ; \q2 ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ. \b \q1 \v 17 “ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ; \q2 ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ; \q1 ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ; \q2 ಅವುಗಳಲ್ಲಿ ಉಸಿರೇ ಇಲ್ಲ. \q1 \v 18 ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ; \q2 ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು. \q1 \v 19 ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ; \q2 ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, \q1 ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. \q2 ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ. \b \q1 \v 20 “ನೀನು ನನ್ನ ಗದೆಯೂ, \q2 ನನ್ನ ಯುದ್ಧದ ಆಯುಧಗಳೇ, \q1 ನಿನ್ನಿಂದ ಜನಾಂಗಗಳನ್ನು ಚೂರುಚೂರಾಗಿ ಒಡೆದು ಬಿಡುತ್ತೇನೆ, \q2 ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ. \q1 \v 21 ನಿನ್ನಿಂದ ಕುದುರೆಯನ್ನೂ, ಅದರ ಮೇಲೆ ಹತ್ತಿದವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; \q2 ನಿನ್ನಿಂದ ರಥವನ್ನೂ, ಅದರಲ್ಲಿ ಸವಾರಿ ಮಾಡುವವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ. \q1 \v 22 ನಿನ್ನಿಂದ ಗಂಡಸರನ್ನೂ, ಹೆಂಗಸರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; \q2 ನಿನ್ನಿಂದ ಹಿರಿಯರನ್ನೂ, ಕಿರಿಯರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; \q2 ನಿನ್ನಿಂದ ಯುವಕನನ್ನೂ ಯುವತಿಯನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ. \q1 \v 23 ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; \q2 ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; \q2 ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ. \p \v 24 “ಬಾಬಿಲೋನಿನವರು ಮತ್ತು ಕಸ್ದೀಯರು ಚೀಯೋನಿನಲ್ಲಿ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು” ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 25 “ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ, \q2 ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 “ನಿನ್ನ ಮೇಲೆ ನನ್ನ ಕೈಯನ್ನು ಚಾಚಿ, \q2 ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ, \q2 ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ. \q1 \v 26 ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, \q2 ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು. \q2 ನೀನು ಎಂದೆಂದಿಗೂ ಹಾಳಾಗುವೆ,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 27 “ದೇಶದಲ್ಲಿ ಧ್ವಜವನ್ನೆತ್ತಿರಿ; \q2 ಜನಾಂಗಗಳಲ್ಲಿ ತುತೂರಿಯನ್ನೂದಿರಿ; \q1 ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; \q2 ಅರಾರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು \q2 ಅದಕ್ಕೆ ವಿರೋಧವಾಗಿ ಕರೆಯಿರಿ; \q1 ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; \q2 ಬಿರುಸಾದ ಮಿಡತೆ ದಂಡಿನಂತೆ ಕುದುರೆಗಳನ್ನು ಬರಮಾಡಿರಿ. \q1 \v 28 ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ, \q2 ಮೇದ್ಯರ ಅರಸರನ್ನೂ, \q1 ಅದರ ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, \q2 ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ. \q1 \v 29 ಆಗ ದೇಶವು ನೊಂದು ನಡುಗುವುದು. \q2 ಏಕೆಂದರೆ ಬಾಬಿಲೋನ್ ದೇಶವು \q1 ನಿರ್ಜನವಾಗಲಿ ಎಂದು ಅದರ ವಿರೋಧವಾಗಿ \q2 ಯೆಹೋವ ದೇವರ ಉದ್ದೇಶಗಳು ಸ್ಥಿರವಾಗಿವೆ. \q1 \v 30 ಬಾಬಿಲೋನಿನ ಪರಾಕ್ರಮಶಾಲಿಗಳು ಯುದ್ಧಮಾಡುವುದನ್ನು ಬಿಟ್ಟಿದ್ದಾರೆ; \q2 ಅವರ ಭದ್ರಸ್ಥಾನಗಳಲ್ಲಿ ನಿಂತಿದ್ದಾರೆ. \q1 ಅವರ ಪರಾಕ್ರಮತನ ತಪ್ಪಿತು; \q2 ಅವರು ಬಲಹೀನರಾಗಿದ್ದಾರೆ. \q1 ಆ ದೇಶದ ನಿವಾಸಗಳನ್ನು ಸುಟ್ಟಿದ್ದಾರೆ; \q2 ಅದರ ಹೆಬ್ಬಾಗಿಲುಗಳು ಮುರಿದುಹೋಗಿವೆ. \q1 \v 31 ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನ ಕಡೆ ಓಡುತ್ತಾನೆ. \q2 ಒಬ್ಬ ದೂತ ಇನ್ನೊಬ್ಬ ದೂತನ ಕಡೆಗೆ ಓಡಿಹೋಗಿ, \q1 ಬಾಬಿಲೋನಿನ ಅರಸನಿಗೆ ಈ ಸಮಾಚಾರವನ್ನು ತಿಳಿಸುತ್ತಾನೆ, \q2 ನಿನ್ನ ರಾಜಧಾನಿಯನ್ನು ಎಲ್ಲಾ ಕಡೆಯಿಂದ ಆಕ್ರಮಿಸಿದ್ದಾರೆ, \q1 \v 32 ಹಾಯ್ಗಡಗಳನ್ನು ಹಿಡಿದಿದ್ದಾರೆ, \q2 ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, \q2 ರಣವೀರರು ಬೆಚ್ಚಿಬಿದ್ದಿದ್ದಾರೆ.” \p \v 33 ಏಕೆಂದರೆ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: \q1 “ತುಳಿಯುವ ವೇಳೆಯಲ್ಲಿ ಕಣವು ಹೇಗೋ, \q2 ಹಾಗೆಯೇ ಬಾಬಿಲೋನಿನ ಮಗಳು ಇದ್ದಾಳೆ. \q2 ಇನ್ನು ಸ್ವಲ್ಪ ಕಾಲವಾದ ಮೇಲೆ ಅವಳಿಗೆ ಸುಗ್ಗಿಕಾಲ ಬರುವುದು.” \b \q1 \v 34 “ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮ್ಮನ್ನು ನುಂಗಿಬಿಟ್ಟಿದ್ದಾನೆ. \q2 ನಮ್ಮನ್ನು ಜಜ್ಜಿದ್ದಾನೆ. \q2 ನಮ್ಮನ್ನು ಬರೀ ಪಾತ್ರೆಯಾಗಿ ಮಾಡಿದ್ದಾನೆ. \q1 ಘಟಸರ್ಪದ ಹಾಗೆ ನಮ್ಮನ್ನು ನುಂಗಿಬಿಟ್ಟಿದ್ದಾನೆ. \q2 ನಮ್ಮನ್ನು ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ. \q2 ನಮ್ಮನ್ನು ಉಗುಳಿಬಿಟ್ಟಿದ್ದಾನೆ. \q1 \v 35 ನಮಗೂ, ನಮ್ಮ ಶರೀರಕ್ಕೂ ಮಾಡಿರುವ ಬಲಾತ್ಕಾರವು \q2 ಬಾಬಿಲೋನಿನ ಮೇಲೆ ಇರಲಿ,” ಎಂದು ಚೀಯೋನ್ ನಿವಾಸಿಗಳು ಹೇಳುತ್ತಾರೆ; \q1 “ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ,” \q2 ಎಂದು ಯೆರೂಸಲೇಮು ಹೇಳುವುದು. \p \v 36 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. \q1 “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. \q2 ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. \q1 ಅದರ ಸಮುದ್ರವನ್ನು ಒಣಗಿಸುತ್ತೇನೆ. \q2 ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ. \q1 \v 37 ಬಾಬಿಲೋನ್ ದಿಬ್ಬಗಳಾಗುವುದು. \q2 ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವಾಗಿ \q1 ಆಶ್ಚರ್ಯಕ್ಕೂ, ನಾಶಕ್ಕೂ, \q2 ಸಿಳ್ಳಿಡುವಿಕೆಗೂ ಒಳಗಾಗುವುದು. \q1 \v 38 ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು. \q2 ಸಿಂಹಗಳ ಮರಿಗಳ ಹಾಗೆ ಶಬ್ದಮಾಡುವರು. \q1 \v 39 ಅವರು ಉರಿಗೊಂಡಿರುವಾಗ, \q2 ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ, \q2 ಅವರು ಅದರಿಂದ ಸಂಭ್ರಮಪಟ್ಟು, \q1 ಎಂದಿಗೂ ಎಚ್ಚರಗೊಳ್ಳದೆ, \q2 ದೀರ್ಘ ನಿದ್ರೆ ಮಾಡುವಂತೆ ತಲೆಗೇರುವತನಕ ಕುಡಿಸುವೆನು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \q1 \v 40 “ಕುರಿ, ಟಗರು, ಹೋತಗಳ ಹಾಗೆ \q2 ಅವರನ್ನು ವಧ್ಯಸ್ಥಾನಕ್ಕೆ ಬರಮಾಡುವೆನು. \q2 ಇದು ಯೆಹೋವನಾದ ನನ್ನ ನುಡಿ. \b \q1 \v 41 “ಶೇಷಕ್ ಹೇಗೆ ಶತ್ರುವಶವಾಗಿದೆ, \q2 ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; \q1 ಬಾಬಿಲೋನ್ ಜನಾಂಗಗಳೊಳಗೆ \q2 ಹೇಗೆ ಎಷ್ಟು ನಿರ್ಜನವಾಯಿತು! \q1 \v 42 ಸಮುದ್ರವೇ ಬಾಬಿಲೋನಿನ ಮೇಲೆ ನುಗ್ಗಿಬಿಟ್ಟಿದೆ, \q2 ಲೆಕ್ಕವಿಲ್ಲದೆ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ. \q1 \v 43 ಕಾಡು, ಕಗ್ಗಾಡು, ಬೆಂಗಾಡು \q2 ಆಗಿವೆ ಅದರ ನಗರಗಳು. \q1 ಆ ದೇಶದೊಳು ಯಾರೂ ವಾಸಿಸರು, \q2 ಯಾವ ಮನುಷ್ಯನೂ ಹಾದು ಹೋಗನು. \q1 \v 44 ಏಕೆಂದರೆ ನಾನು ಬಾಬಿಲೋನಿನಲ್ಲಿರುವ ಬೇಲ್‌ನನ್ನು ದಂಡಿಸಿ, \q2 ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ಕಕ್ಕಿಸುವೆನು. \q1 ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವುದಿಲ್ಲ. \q2 ಹೌದು, ಬಾಬಿಲೋನಿನ ಗೋಡೆ ಬೀಳುವುದು. \b \q1 \v 45 “ನನ್ನ ಜನರೇ, ಅದರೊಳಗಿಂದ ಹೊರಡಿರಿ. \q2 ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು \q2 ಯೆಹೋವ ದೇವರ ಕೋಪಕ್ಕೆ ತಪ್ಪಿಸಿರಿ. \q1 \v 46 ನಿಮ್ಮ ಹೃದಯವು ಕುಂದದ ಹಾಗೆ \q2 ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಗೆ ನೀವು ಭಯಪಡದ ಹಾಗೆ, \q1 ಒಂದು ವರ್ಷದಲ್ಲಿ ಒಂದು ಸುದ್ದಿಯೂ \q2 ಇನ್ನೊಂದು ವರ್ಷದಲ್ಲಿ ಇನ್ನೊಂದು ಸುದ್ದಿಯೂ ಬರುವುದು. \q1 ದೇಶದಲ್ಲಿ ಬಲಾತ್ಕಾರವಿರುವುದು, \q2 ಆಳುವವನು ಆಳುವವನಿಗೆ ವಿರೋಧವಾಗಿರುವನು. \q1 \v 47 ಆದ್ದರಿಂದ ಇಗೋ, ದಿನಗಳು ಬರುವುವು. \q2 ಆಗ ನಾನು ಬಾಬಿಲೋನಿನ ವಿಗ್ರಹಗಳಿಗೆ ದಂಡಿಸುವೆನು. \q1 ಆದರೆ ದೇಶವೆಲ್ಲಾ ನಾಚಿಕೆಪಡುವುದು. \q2 ಹತರಾದವರ ದೇಹಗಳು ಅದರ ಮಧ್ಯದಲ್ಲಿ ಅಲ್ಲಿ ಇಲ್ಲಿ ಬಿದ್ದಿವೆ. \q1 \v 48 ಆಗ ಭೂಮಿ ಆಕಾಶಗಳೂ, \q2 ಅಲ್ಲಿನ ಸಮಸ್ತವೂ ಬಾಬಿಲೋನಿನ ನಾಶವನ್ನು ನೋಡಿ \q1 ಜಯಘೋಷ ಮಾಡುವುವು. \q2 ಹಾಳುಮಾಡುವರು, ಉತ್ತರದಿಂದ ಬಂದು ಹಾಳುಮಾಡುವರು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 49 “ಬಾಬಿಲೋನ್‌ನಿಂದಾಗಿ ಭೂಮಿಯಲ್ಲೆಲ್ಲಾ ಹತರಾದಂತೆಯೇ, \q2 ಇಸ್ರಾಯೇಲಿನ ಹತ್ಯೆಯಿಂದಾಗಿ ಬಾಬಿಲೋನ್ ಬೀಳಬೇಕು. \q1 \v 50 ಖಡ್ಗದಿಂದ ತಪ್ಪಿಸಿಕೊಂಡವರೇ, \q2 ನಡೆಯಿರಿ, ನಿಲ್ಲಬೇಡಿರಿ. \q1 ದೂರದಲ್ಲಿ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ, \q2 ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.” \b \q1 \v 51 “ನಾಚಿಕೆ ಪಡುತ್ತೇವೆ, \q2 ಏಕೆಂದರೆ ನಿಂದೆಯನ್ನು ಕೇಳಿದ್ದೇವೆ. \q2 ಅವಮಾನ ನಿಮ್ಮ ಮುಖಗಳನ್ನು ಮುಚ್ಚಿದೆ. \q1 ಏಕೆಂದರೆ ವಿದೇಶಿಗಳು ಯೆಹೋವ ದೇವರ ಆಲಯದ \q2 ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸಿದ್ದಾರೆ.” \b \q1 \v 52 “ಇಗೋ, ಅಂಥ ದಿನಗಳು ಬರುತ್ತವೆ,” ಎಂದು ಯೆಹೋವ ದೇವರು ಹೇಳುತ್ತಾರೆ, \q2 “ಅದು ನಾನು ಬಾಬಿಲೋನಿನ ವಿಗ್ರಹಗಳನ್ನು \q1 ದಂಡಿಸುವ ದಿನಗಳು. \q2 ಆಗ ಆ ದೇಶದೊಳೆಲ್ಲ ಗಾಯಪಟ್ಟವರು ನರಳಾಡುವರು. \q1 \v 53 ಬಾಬಿಲೋನ್ ಆಕಾಶಕ್ಕೆ ಏರಿದರೂ, \q2 ಅದರ ಬಲದ ಉನ್ನತಸ್ಥಾನವನ್ನು ಭದ್ರಮಾಡಿದರೂ, \q2 ಸೂರೆಮಾಡುವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರು,” \q2 ಎಂದು ಯೆಹೋವ ದೇವರು ಹೇಳುತ್ತಾರೆ. \b \q1 \v 54 “ಬಾಬಿಲೋನಿನಿಂದ ಕೂಗುವ ಶಬ್ದವು! \q2 ಕಸ್ದೀಯರ ದೇಶದಿಂದ ದೊಡ್ಡ ನಾಶದ ಶಬ್ದವೂ ಬರುವುದು. \q1 \v 55 ಏಕೆಂದರೆ ಯೆಹೋವ ದೇವರು ಬಾಬಿಲೋನನ್ನು ಸೂರೆಮಾಡಿದ್ದಾರೆ; \q2 ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿದ್ದಾರೆ; \q1 ಅವಳ ತೆರೆಗಳು ನೀರಿನ ಹಾಗೆ ಘೋಷಿಸುವಾಗ, \q2 ಅವುಗಳ ಶಬ್ದದ ಧ್ವನಿಯು ಹೊರಟಿತು. \q1 \v 56 ಏಕೆಂದರೆ ವಿನಾಶ ಮಾಡುವವನು ಅದರ ಮೇಲೆ ಅಂದರೆ ಬಾಬಿಲೋನಿನ ಮೇಲೆಯೇ ಬಂದಿದ್ದಾನೆ. \q2 ಅದರ ಪರಾಕ್ರಮಶಾಲಿಗಳು ಸೆರೆಯಾಗಿಬಿಟ್ಟಿದ್ದಾರೆ. \q2 ಅವಳ ಬಿಲ್ಲುಗಳು ಮುರಿದುಹೋಗಿವೆ. \q1 ಏಕೆಂದರೆ ಪ್ರತಿದಂಡನೆಗಳ ದೇವರಾದ ಯೆಹೋವ ದೇವರು ನಿಶ್ಚಯವಾಗಿ \q2 ಮುಯ್ಯಿಗೆ ಮುಯ್ಯಿ ತೀರಿಸುವರು. \q1 \v 57 ಇದಲ್ಲದೆ ನಾನು ಅವಳ ಪ್ರಧಾನರನ್ನೂ, \q2 ಅವಳ ಜ್ಞಾನಿಗಳನ್ನೂ, ಅವಳ ಅಧಿಪತಿಗಳನ್ನೂ, \q1 ಅವಳ ಅಧಿಕಾರಿಗಳನ್ನೂ, ಅವಳ ಪರಾಕ್ರಮಶಾಲಿಗಳನ್ನೂ ಮತ್ತರಾಗಿ ಮಾಡುತ್ತೇನೆ. \q2 ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವುದಿಲ್ಲ,” \q2 ಎಂದು ಸೇನಾಧೀಶ್ವರ ಯೆಹೋವ ದೇವರು ಎಂಬ ಹೆಸರುಳ್ಳ ರಾಜಾಧಿರಾಜರು ಸಾರುತ್ತಾರೆ. \p \v 58 ಮಾತ್ರವಲ್ಲದೆ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: \q1 “ಬಾಬಿಲೋನಿನ ಅಗಲವಾದ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. \q2 ಅವಳ ಎತ್ತರವಾದ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗುವುವು; \q1 ಜನರು ವ್ಯರ್ಥಕ್ಕಾಗಿಯೂ, \q2 ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸಪಡುವರು.” \p \v 59 ಪ್ರವಾದಿಯಾದ ಯೆರೆಮೀಯನು ಮಹ್ಸೇಯನ ಮಗನಾದ ನೇರೀಯನ ಮಗ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬಿಲೋನಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಅಂಗರಕ್ಷಕ ಸೇನೆಯ ನಾಯಕನಾಗಿದ್ದನು. \v 60 ಹೀಗೆ ಯೆರೆಮೀಯನು ಬಾಬಿಲೋನಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬಿಲೋನಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಗ್ರಂಥದಲ್ಲಿ ಬರೆದನು. \v 61 ಯೆರೆಮೀಯನು ಸೆರಾಯನಿಗೆ ಹೇಳಿದ್ದೇನೆಂದರೆ, “ನೀನು ಬಾಬಿಲೋನಿಗೆ ಬಂದು \v 62 ಈ ವಾಕ್ಯಗಳನ್ನೆಲ್ಲಾ ಓದುತ್ತಿರುವಾಗ ಹೇಳತಕ್ಕದ್ದೇನೆಂದರೆ, ‘ಓ ಯೆಹೋವ ದೇವರೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯರಾಗಲಿ, ಮೃಗಗಳಾಗಲಿ, ನಿವಾಸಿಗಳಾಗಲಿ ಎಂದಿಗೂ ಇರದಂತೆ, ಅದು ಸದಾಕಾಲ ಹಾಳಾಗಿಯೇ ಉಳಿಯಲಿ,’ ಎಂದು ನೀವೇ ಮಾತನಾಡ್ದಿದೀರಿ. \v 63 ನೀನು ಈ ಗ್ರಂಥವನ್ನು ಓದಿ ಮುಗಿಸಿದ ಮೇಲೆ, ಅದಕ್ಕೆ ಕಲ್ಲು ಕಟ್ಟಿ, ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ, \v 64 ಹೀಗೆ ಹೇಳು, ‘ಈ ಪ್ರಕಾರ ಬಾಬಿಲೋನ್ ಮುಳುಗಿ ಹೋಗುವುದು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು. ಅವರು ಬೀಳುವರು.’ ” \b \b \p ಇಲ್ಲಿಯ ತನಕ ಯೆರೆಮೀಯನ ವಾಕ್ಯಗಳು. \b \c 52 \s1 ಯೆರೂಸಲೇಮಿನ ಪತನ \p \v 1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್. \v 2 ಅವನು ಯೆಹೋಯಾಕೀಮನು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. \v 3 ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. \p ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು. \p \v 4 ಅವನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು. \v 5 ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆಹಾಕಿದನು. \p \v 6 ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು. \v 7 ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು. \v 8 ಆಗ ಬಾಬಿಲೋನಿಯರ ದಂಡು ಅರಸನಾದ ಚಿದ್ಕೀಯನನ್ನು ಯೆರಿಕೋವಿನ ಬಯಲಿನಲ್ಲಿ ಹಿಂದಟ್ಟಿದರು; ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು. \v 9 ಅನಂತರ ಬಾಬಿಲೋನಿಯರು ಚಿದ್ಕೀಯನನ್ನು ಹಿಡಿದರು. \p ಅವನನ್ನು ಹಮಾತ್ ನಾಡಿನ ರಿಬ್ಲದಲ್ಲಿರುವ ತಮ್ಮ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. \v 10 ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಪದಾಧಿಕಾರಿಗಳನ್ನು ರಿಬ್ಲದಲ್ಲಿ ಕೊಲ್ಲಿಸಿದನು. \v 11 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ, ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟನು. \p \v 12 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು, \v 13 ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು. \v 14 ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು. \v 15 ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವರಾದ ಕೆಲವರನ್ನೂ, ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು. \v 16 ಆದರೆ ನೆಬೂಜರದಾನನು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು. \p \v 17 ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಎಲ್ಲಾ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು. \v 18 ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು. \v 19 ಕಾವಲುಗಾರರ ಅಧಿಪತಿಯು ಬೋಗುಣಿಗಳನ್ನೂ, ಅಗ್ನಿ ಪಾತ್ರೆಗಳನ್ನೂ, ಬಟ್ಟಲುಗಳನ್ನೂ ಬೋಗುಣಿಗಳನ್ನೂ, ದೀಪಸ್ತಂಭಗಳನ್ನೂ, ಸೌಟುಗಳನ್ನೂ, ಪಾನಾರ್ಪಣೆಯ ಪಾತ್ರೆ ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು. \p \v 20 ಅರಸನಾದ ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ನೀರನ್ನು ಸಂಗ್ರಹಿಸಲು ಮಾಡಿದ ದೊಡ್ಡ ಕಂಚಿನ ಪಾತ್ರೆ, ಪೀಠಗಳನ್ನು ಹೊರುವ ಹನ್ನೆರಡು ಕಂಚಿನ ಹೋರಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು. \v 21 ಕಂಬಗಳಲ್ಲಿ ಮೊದಲನೆಯ ಕಂಬ ಎಂಟು ಮೀಟರ್ ಎತ್ತರವಿತ್ತು, ಅದರ ಸುತ್ತಳತೆ ಸುಮಾರು ಐದು ಮೀಟರ್. \v 22 ಕಂಬದ ಮೇಲೆ ಎತ್ತರವಾದ ಒಂದು ಕಂಚಿನ ಕುಂಭವಿತ್ತು, ಆ ಕುಂಭದ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು. ಎರಡನೆಯ ಕಂಬವು ದಾಳಿಂಬೆ ಹಣ್ಣುಗಳಿಂದ ಹಾಗೆಯೇ ಅಲಂಕಾರವಾಗಿತ್ತು. \v 23 ನಾಲ್ಕು ಪಕ್ಕಗಳಲ್ಲಿ ತೊಂಬತ್ತಾರು ದಾಳಿಂಬೆ ಹಣ್ಣುಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಿಗೆ ನೂರು ದಾಳಿಂಬೆ ಹಣ್ಣುಗಳಿದ್ದವು. \p \v 24 ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು. \v 25 ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಏಳುಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು. \v 26 ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು. \v 27 ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. \p ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು. \b \li4 \v 28 ನೆಬೂಕದ್ನೆಚ್ಚರನು ಸೆರೆಯಾಗಿ ಒಯ್ದ ಜನರ ಪಟ್ಟಿ ಹೀಗಿದೆ: \b \li1 ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು \li2 3,023 ಮಂದಿ ಯೆಹೂದ್ಯರನ್ನು; \li1 \v 29 ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷದಲ್ಲಿ \li2 832 ಮಂದಿಯನ್ನು ಅವನು ಯೆರೂಸಲೇಮಿನಿಂದ ಸೆರೆಗೊಯ್ದನು; \li1 \v 30 ನೆಬೂಕದ್ನೆಚ್ಚರನು ಇಪ್ಪತ್ತು ಮೂರನೆಯ ವರ್ಷದಲ್ಲಿ \li2 ಕಾವಲಿನ ಅಧಿಪತಿಯಾದ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. \b \li4 ಹೀಗೆ ಸೆರೆಯಾದವರ ಮೊತ್ತ 4,600 ಮಂದಿ. \s1 ಯೆಹೋಯಾಖೀನನು ಸೆರೆಯಿಂದ ಬಿಡುಗಡೆಯಾದದ್ದು \p \v 31 ಯೆಹೂದದ ಅರಸನಾದ ಯೆಹೋಯಾಖೀನನ\f + \fr 52:31 \fr*\fq ಯೆಹೋಯಾಖೀನ \fq*\ft ಇದು \ft*\fqa ಚಿದ್ಕೀಯನ \fqa*\ft ಇನ್ನೊಂದು ಹೆಸರು\ft*\f* ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿವಸದಲ್ಲಿ ಆದದ್ದೇನೆಂದರೆ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು. \v 32 ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು. \v 33 ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು. \v 34 ಅವನ ಜೀವಿತ ಕಾಲವೆಲ್ಲಾ ಸಾಯುವ ತನಕ, ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.