\id JOB - Biblica® Open Kannada Contemporary Version \ide UTF-8 \h ಯೋಬ \toc1 ಯೋಬ \toc2 ಯೋಬ \toc3 ಯೋಬ \mt1 ಯೋಬ \c 1 \s1 ಪೀಠಿಕೆ \p \v 1 ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು. \v 2 ಅವನಿಗೆ ಏಳುಮಂದಿ ಪುತ್ರರೂ ಮೂರು ಮಂದಿ ಪುತ್ರಿಯರೂ ಇದ್ದರು. \v 3 ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು. \p \v 4 ಅವನ ಪುತ್ರರು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸಿ, ತಮ್ಮ ಸಂಗಡ ಊಟಮಾಡುವದಕ್ಕೆ ತಮ್ಮ ಮೂವರು ಸಹೋದರಿಯರನ್ನು ಆಹ್ವಾನಿಸುತ್ತಿದ್ದರು. \v 5 ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು. \p \v 6 ಒಂದು ದಿನ, ದೇವದೂತರು\f + \fr 1:6 \fr*\fq ದೇವದೂತರು \fq*\ft ಹೀಬ್ರೂ ಭಾಷೆಯಲ್ಲಿ \ft*\fqa ದೇವ ಮಕ್ಕಳು\fqa*\f* ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿಬಂದಾಗ, ಸೈತಾನನು\f + \fr 1:6 \fr*\fq ಸೈತಾನನು \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಎದುರಾಳಿ\fqa*\f* ಸಹ ಅವರೊಂದಿಗೆ ಸೇರಿಬಂದನು. \v 7 ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಕೇಳಿದರು. \p ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು. \p \v 8 ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು. \p \v 9 ಆಗ ಸೈತಾನನು ಉತ್ತರವಾಗಿ ಯೆಹೋವ ದೇವರಿಗೆ, “ಲಾಭವಿಲ್ಲದೆ ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿದ್ದಾನೋ? \v 10 ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ. \v 11 ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು. \p \v 12 ಯೆಹೋವ ದೇವರು ಸೈತಾನನಿಗೆ, “ಅವನಲ್ಲಿರುವ ಎಲ್ಲವೂ ನಿನ್ನ ಅಧಿಕಾರದಲ್ಲಿ ಇವೆ. ಆದರೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ,” ಎಂದರು. \p ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋದನು. \p \v 13 ಒಂದು ದಿನ ಯೋಬನ ಪುತ್ರಪುತ್ರಿಯರು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತಾ ಔತಣಮಾಡುತ್ತಿದ್ದರು. \v 14 ಒಬ್ಬ ದೂತನು ಯೋಬನ ಬಳಿಗೆ ಬಂದು, “ಎತ್ತುಗಳು ಉಳುಮೆ ಮಾಡುತ್ತಾ ಇದ್ದವು. ಹೆಣ್ಣು ಕತ್ತೆಗಳು ಹತ್ತಿರದಲ್ಲೆ ಮೇಯುತ್ತಾ ಇದ್ದವು. \v 15 ಶೆಬದವರು ಅವುಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಸೇವಕರನ್ನು ಸಹ ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು. \p \v 16 ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬ ದೂತನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಸೇವಕರನ್ನೂ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು. \p \v 17 ಇವನು ಇನ್ನೂ ಮಾತನಾಡುತ್ತಿರಲು, ಇನ್ನೊಬ್ಬ ದೂತನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಒಂಟೆಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಆಳುಗಳನ್ನು ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು. \p \v 18 ಇವನು ಇನ್ನೂ ಮಾತನಾಡುತ್ತಿರಲು, ಮತ್ತೊಬ್ಬ ದೂತನು ಬಂದು, “ನಿನ್ನ ಪುತ್ರ ಪುತ್ರಿಯರೂ ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ದ್ರಾಕ್ಷಾರಸ ಕಡಿಯುತ್ತಾ ಔತಣ ಮಾಡುತ್ತಿರುವಾಗ, \v 19 ಇದ್ದಕ್ಕಿದ್ದಂತೆ ಮರುಭೂಮಿ ಕಡೆಯಿಂದ ದೊಡ್ಡ ಗಾಳಿ ಬೀಸಿ, ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು. ಮನೆಯು ಯೌವನಸ್ಥರ ಮೇಲೆ ಬಿತ್ತು, ಅವರು ಸತ್ತುಹೋದರು. ನಾನೊಬ್ಬನು ಮಾತ್ರ, ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು. \p \v 20 ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ, \q1 \v 21 ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, \q2 ಬೆತ್ತಲೆಯಾಗಿ ಗತಿಸಿ ಹೋಗುವೆನು. \q1 ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; \q2 ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.” \p \v 22 ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪು ಹೊರಿಸಲಿಲ್ಲ. \b \c 2 \p \v 1 ಇನ್ನೊಂದು ದಿನ, ದೇವದೂತರು\f + \fr 2:1 \fr*\fq ದೇವದೂತರು \fq*\ft ಹೀಬ್ರೂ ಭಾಷೆಯಲ್ಲಿ \ft*\fqa ದೇವ ಮಕ್ಕಳು\fqa*\f* ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿ ಬಂದಿದ್ದರು. ಸೈತಾನನು ಸಹ ಅವರೊಂದಿಗೆ ಯೆಹೋವ ದೇವರ ಮುಂದೆ ಬಂದನು. \v 2 ಆಗ ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದರು. \p ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು. \p \v 3 ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು. \p \v 4 ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ,” ಎಂದ ಹಾಗೆ, “ಒಬ್ಬ ಮನುಷ್ಯನು ತನ್ನ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ಕೊಡುವನು. \v 5 ಆದರೆ ಈಗ ನಿಮ್ಮ ಕೈಚಾಚಿ, ಅವನ ಎಲುಬನ್ನೂ ಅವನ ಮಾಂಸವನ್ನೂ ಹೊಡೆದರೆ, ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ಶಪಿಸುವನು,” ಎಂದನು. \p \v 6 ಆಗ ಯೆಹೋವ ದೇವರು ಸೈತಾನನಿಗೆ, “ಹಾಗಾದರೆ ಅವನು ನಿನ್ನ ಕೈಯಲ್ಲಿ ಇದ್ದಾನೆ. ಅವನ ಪ್ರಾಣವನ್ನು ಮಾತ್ರ ಮುಟ್ಟಬಾರದು,” ಎಂದರು. \p \v 7 ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋಗಿ, ಯೋಬನಿಗೆ ಅಂಗಾಲಿನಿಂದ ನೆತ್ತಿಯವರೆಗೆ ಕೆಟ್ಟ ಹುಣ್ಣುಗಳು ಬರುವಂತೆ ಅವನನ್ನು ಬಾಧಿಸಿದನು. \v 8 ಯೋಬನು ಮುರಿದ ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯ ಮೇಲೆ ಕುಳಿತುಕೊಂಡನು. \p \v 9 ಆಗ ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ಯಥಾರ್ಥತ್ವವನ್ನು ಬಿಡಲಿಲ್ಲವೇ? ದೇವರನ್ನು ಶಪಿಸಿ ಸತ್ತುಹೋಗು,” ಎಂದಳು. \p \v 10 ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ\f + \fr 2:10 \fr*\fq ಹುಚ್ಚಳಂತೆ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ನೈತಿಕ ಕೊರತೆಯನ್ನು ಸೂಚಿಸುತ್ತದೆ\fqa*\f* ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. \p ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ. \b \p \v 11 ಯೋಬನ ಮೂವರು ಸ್ನೇಹಿತರು, ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಅವನಿಗೆ ಬಂದ ಈ ಎಲ್ಲಾ ಕಷ್ಟನಷ್ಟವನ್ನು ಕುರಿತು ಕೇಳಿ, ಯೋಬನಿಗೆ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸುವುದಕ್ಕೆ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡು, ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು. \v 12 ಅವರು ಯೋಬನನ್ನು ದೂರದಿಂದ ನೋಡಿದಾಗ, ಅವನನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಅವರು ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು. ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಧೂಳನ್ನು ತಮ್ಮ ತಲೆಯ ಮೇಲೆ ಸುರಿಸಿಕೊಂಡರು. \v 13 ಅನಂತರ ಯೋಬನು ಅನುಭವಿಸುತ್ತಿದ್ದ ಬಾಧೆಯು ಎಷ್ಟು ಕ್ರೂರವೆಂದು ಅವರು ನೋಡಿ, ಅವನ ಸಂಗಡ ಏಳು ಹಗಲು, ಏಳು ರಾತ್ರಿ ನೆಲದ ಮೇಲೆ ಕುಳಿತುಕೊಂಡಿದ್ದರು. ಒಬ್ಬನಾದರೂ ಒಂದು ಮಾತನ್ನೂ ಯೋಬನಿಗೆ ಹೇಳಲಿಲ್ಲ. \c 3 \s1 ಯೋಬನು ಮಾತನಾಡಿದನು \p \v 1 ಆಮೇಲೆ ಯೋಬನು ತನ್ನ ಬಾಯಿತೆರೆದು, ತನ್ನ ಜನ್ಮ ದಿವಸವನ್ನು ಶಪಿಸಿದನು. \v 2 ಯೋಬನು ಇಂತೆಂದನು: \q1 \v 3 “ನಾನು ಹುಟ್ಟಿದ ದಿವಸವೂ, \q2 ‘ಗಂಡು ಮಗುವನ್ನು ಗರ್ಭಧರಿಸಿದೆ!’ ಎಂದು ಹೇಳಿದ ರಾತ್ರಿಯೂ ನಾಶವಾಗಲಿ. \q1 \v 4 ಆ ದಿವಸವು ಕತ್ತಲಾಗಲಿ, \q2 ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, \q2 ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ. \q1 \v 5 ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ; \q2 ಮೋಡವು ಅದರ ಮೇಲೆ ಕವಿಯಲಿ; \q2 ಕತ್ತಲೆ ಅದನ್ನು ಭಯಪಡಿಸಲಿ. \q1 \v 6 ಆ ರಾತ್ರಿಯನ್ನು ಅಂಧಕಾರವು ಮುತ್ತಲಿ; \q2 ವರ್ಷದ ದಿನಗಳಲ್ಲಿ ಆ ದಿನವನ್ನು ಸೇರಿಸದಿರಲಿ. \q2 ಅದು ತಿಂಗಳುಗಳನ್ನು ಲೆಕ್ಕಿಸದಿರಲಿ. \q1 \v 7 ಇಗೋ ಆ ರಾತ್ರಿಯು ಬಂಜೆಯಾಗಲಿ; \q2 ಅದರಲ್ಲಿ ಆನಂದ ಧ್ವನಿಯು ಕೇಳದಿರಲಿ. \q1 \v 8 ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ \q2 ದಿನಗಳನ್ನು ಶಪಿಸುವುದರಲ್ಲಿಯೂ ನಿಪುಣರಾದವರು ಆ ದಿನವನ್ನು ಶಪಿಸಲಿ. \q1 \v 9 ಅದರ ಮುಂಜಾನೆಯ ನಕ್ಷತ್ರಗಳು ಕಪ್ಪಾಗಲಿ; \q2 ಅದು ಬೆಳಕಿಗೋಸ್ಕರ ಕಾದುಕೊಂಡರೂ ಬಾರದಿರಲಿ \q2 ಅರುಣೋದಯವು ಆ ದಿನವನ್ನು ನೋಡದಿರಲಿ. \q1 \v 10 ಏಕೆಂದರೆ ಆ ದಿನವು ನನ್ನ ತಾಯಿಯ ಗರ್ಭದ ಬಾಗಿಲನ್ನು ಮುಚ್ಚಲಿಲ್ಲ, \q2 ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ. \b \q1 \v 11 “ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? \q2 ನಾನು ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ? \q1 \v 12 ತಾಯಿಯ ಮಡಿಲು ನನ್ನನ್ನು ಸ್ವಿಕರಿಸಿದ್ದೇಕೆ? \q2 ತಾಯಿಯ ಮೊಲೆಹಾಲು ಕುಡಿಯಮಾಡಿದ್ದೇಕೆ? \q1 \v 13 ಆಗ ಸತ್ತಿದ್ದರೆ ನಾನು ಶಾಂತವಾಗಿ ಮಲಗಿಕೊಳ್ಳುತ್ತಿದ್ದೆನು; \q2 ನಾನು ವಿಶ್ರಾಂತಿಯಲ್ಲಿರುತ್ತಿದ್ದೆನು. \q1 \v 14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು \q2 ತಮಗಾಗಿ ಕಟ್ಟಿಸಿಕೊಂಡ ರಾಜರೊಂದಿಗೂ ಮಂತ್ರಿಗಳೊಡನೆಯೂ ನಾನಿರುತ್ತಿದ್ದೆನು. \q1 \v 15 ಬಂಗಾರವನ್ನು ಕೂಡಿಸಿಟ್ಟು, ತಮ್ಮ ಮನೆಗಳನ್ನು ಬೆಳ್ಳಿಯಿಂದ \q2 ತುಂಬಿಸಿದ ಅಧಿಪತಿಗಳ ಸಂಗಡ ವಿಶ್ರಮಿಸಿಕೊಳ್ಳುತ್ತಿದ್ದೆನು. \q1 \v 16 ಗರ್ಭಸ್ರಾವವಾಗಿ ಹೂಣಿಟ್ಟ ಪಿಂಡದಂತೆಯೂ \q2 ಬೆಳಕನ್ನು ನೋಡದ ಕೂಸುಗಳಂತೆಯೂ ನಾನೇಕೆ ಆಗಲಿಲ್ಲ? \q1 \v 17 ಅಲ್ಲಿ ದುಷ್ಟರು ತೊಂದರೆ ಕೊಡುವುದು ಇರುವುದಿಲ್ಲ. \q2 ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿರುತ್ತಾರೆ. \q1 \v 18 ಸೆರೆಯವರು ಕೂಡ ಶಾಂತವಾಗಿರುತ್ತಾರೆ; \q2 ಬಾಧೆಪಡಿಸುವವನ ಶಬ್ದವನ್ನು ಕೇಳುವುದಿಲ್ಲ. \q1 \v 19 ಅಲ್ಲಿ ಕಿರಿಯರು ಹಿರಿಯರು ಎಂಬ ಭೇದ ಇಲ್ಲಾ; \q2 ಗುಲಾಮರು ಯಜಮಾನರಿಂದ ಬಿಡುಗಡೆಯಾಗಿರುತ್ತಾರೆ. \b \q1 \v 20 “ಕಷ್ಟದಲ್ಲಿ ಇರುವವನಿಗೆ ಬೆಳಕೂ \q2 ಕಹಿ ಮನಸ್ಸುಳ್ಳವರಿಗೆ ಜೀವವನ್ನು ಕೊಡುವುದೇಕೆ? \q1 \v 21 ಅವರು ನಿಕ್ಷೇಪಕ್ಕಾಗಿ ಅಗಿಯುವ ಆಶೆಗಿಂತಲೂ \q2 ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು. \q1 \v 22 ಅವರು ಸಮಾಧಿ ಸೇರಿದ ಮೇಲೆ \q2 ಸಂತೋಷ ಸಂಭ್ರಮದಿಂದ ಹರ್ಷಿಸುವರೋ? \q1 \v 23 ದೇವರು ಸುತ್ತಲೂ ಬೇಲಿಹಾಕಿ, \q2 ದಾರಿ ಮುಚ್ಚಿದ ಮೇಲೆ ಅವರಿಗೆ ಬೆಳಕು ಏಕೆ? \q1 \v 24 ನಿಟ್ಟುಸಿರೇ ನನ್ನ ದೈನಂದಿನ ಆಹಾರವಾಗಿದೆ; \q2 ನನ್ನ ನರಳಾಟವು ಜಲಧಾರೆಯಂತಿದೆ. \q1 \v 25 ನನಗೆ ಭಯ ಹುಟ್ಟಿದೊಡನೆ ಆಪತ್ತು ಬಂದೊದಗುತ್ತದೆ; \q2 ಯಾವುದಕ್ಕೆ ಹೆದರುತ್ತೇನೋ, ಅದೇ ತಪ್ಪದೆ ಸಂಭವಿಸುತ್ತದೆ. \q1 \v 26 ನನಗೆ ಶಾಂತಿ ಇಲ್ಲ, ವಿಶ್ರಾಂತಿಯೂ ಇಲ್ಲ; \q2 ನಾನು ಸಮಾಧಾನವಾಗಿಯೂ ಇಲ್ಲ, ಯಾವಾಗಲೂ ಕಳವಳವೇ ಇರುತ್ತದೆ.” \c 4 \s1 ಎಲೀಫಜನ ವಾದ \p \v 1 ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟನು: \q1 \v 2 “ಒಬ್ಬನು ನಿನ್ನ ಸಂಗಡ ಮಾತಾಡ ತೊಡಗಿದರೆ, ನಿನಗೆ ಬೇಸರಿಕೆ ಉಂಟಾಗುವುದೋ? \q2 ಮಾತಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು? \q1 \v 3 ಅನೇಕರಿಗೆ ನೀನು ಶಿಕ್ಷಣ ಕೊಟ್ಟದ್ದನ್ನೂ \q2 ಬಲಹೀನ ಕೈಗಳನ್ನು ಬಲಪಡಿಸಿದ್ದನ್ನೂ ಯೋಚಿಸು. \q1 \v 4 ಎಡವಿ ಬೀಳುವವನನ್ನು ನಿನ್ನ ನುಡಿಗಳು ಎದ್ದು ನಿಲ್ಲಿಸಿದವು. \q2 ಬಲಹೀನವಾದ ಮೊಣಕಾಲುಗಳನ್ನು ಬಲಪಡಿಸಿದೆ. \q1 \v 5 ಈಗ ಆಪತ್ತು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತಿರುವೆ; \q2 ನಿನಗೂ ಕಡುಕಷ್ಟ ತಟ್ಟಿದ್ದರಿಂದ ಕಳವಳಪಡುತ್ತಿರುವೆ. \q1 \v 6 ನಿನ್ನ ಭಯಭಕ್ತಿಯೇ ನಿನಗೆ ಭರವಸೆಯೂ \q2 ನಿನ್ನ ಸನ್ಮಾಮಾರ್ಗಗಳು ನಿನ್ನ ನಿರೀಕ್ಷೆಯೂ ಆಗಿರಬೇಕಲ್ಲವೇ? \b \q1 \v 7 “ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? \q2 ನೀತಿವಂತರು ಅಳಿದು ಹೋದದ್ದು ಎಲ್ಲಿ? \q1 \v 8 ನಾನು ಕಂಡ ಹಾಗೆ ಕೆಟ್ಟತನವನ್ನು ಊಳುವವರೂ \q2 ದುಷ್ಟತನವನ್ನು ಬಿತ್ತುವವರೂ ಅದನ್ನೇ ಕೊಯ್ಯುವರು. \q1 \v 9 ದೇವರ ಉಸಿರಿನಿಂದ ಅವರು ಕ್ಷಯಿಸಿ ಹೋಗುತ್ತಾರೆ. \q2 ದೇವರ ದಂಡನೆಯಿಂದ ಅಂಥವರು ನಾಶವಾಗುತ್ತಾರೆ; \q1 \v 10 ಸಿಂಹಗಳು ಗರ್ಜಿಸಬಹುದು ಮತ್ತು ಕೂಗಬಹುದು, \q2 ಆದರೂ ಪ್ರಾಯದ ಸಿಂಹಗಳ ಹಲ್ಲುಗಳು ಮುರಿದುಹೋಗಿವೆ. \q1 \v 11 ಸಿಂಹವು ಬೇಟೆ ಇಲ್ಲದ್ದರಿಂದ ನಾಶವಾಗುತ್ತದೆ; \q2 ಸಿಂಹದ ಮರಿಗಳು ಚದರಿಹೋಗುವವು. \b \q1 \v 12 “ಒಂದು ಮಾತು ನನಗೆ ಗುಟ್ಟಾಗಿ ತಿಳಿದುಬಂತು, \q2 ಅದರ ಪಿಸುಮಾತು ನನ್ನ ಕಿವಿಗೆ ಬಿತ್ತು. \q1 \v 13 ರಾತ್ರಿ ಕನಸಿನ ಆಲೋಚನೆಗಳಲ್ಲಿಯೂ \q2 ಗಾಢನಿದ್ರೆಯು ಜನರಿಗೆ ಹತ್ತುವಾಗಲೂ \q1 \v 14 ಭಯವೂ ನಡುಕವೂ ನನ್ನನ್ನು ಹಿಡಿದು, \q2 ನನ್ನ ಎಲ್ಲಾ ಎಲುಬುಗಳನ್ನು ನಡುಗಿಸಿತು. \q1 \v 15 ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು, \q2 ಆಗ ನನ್ನ ಮೈ ರೋಮವೆಲ್ಲಾ ನಿಮಿರಿ ನಿಂತವು. \q1 \v 16 ಆ ಆತ್ಮ ನಿಂತಿದ್ದರೂ \q2 ಅದು ಏನೆಂದು ನನಗೆ ತಿಳಿಯಲಿಲ್ಲ. \q1 ಅದರ ರೂಪವು ನನ್ನ ಕಣ್ಣು ಮುಂದೆ ನಿಂತಿತ್ತು, \q2 ಆಗ ಒಂದು ಸೂಕ್ಷ್ಮ ಸ್ವರವು ಕೇಳಿಸಿತು: \q1 \v 17 ‘ಮನುಷ್ಯನು ದೇವರಿಗಿಂತ ಹೆಚ್ಚು ನೀತಿವಂತನಾಗಿರಲು ಸಾಧ್ಯವೇ? \q2 ಮಾನವನು ಸೃಷ್ಟಿಕರ್ತ ದೇವರಿಗಿಂತಲೂ ಶುದ್ಧನಾಗಿರಲು ಸಾಧ್ಯವೇ? \q1 \v 18 ತಮ್ಮ ಸೇವಕರಲ್ಲಿ ದೇವರು ನಂಬದೆ, \q2 ತಮ್ಮ ದೂತರಲ್ಲಿಯೇ ತಪ್ಪು ಕಂಡಿರಲು, \q1 \v 19 ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, \q2 ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, \q2 ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ? \q1 \v 20 ಬೆಳಿಗ್ಗೆಯಿಂದ ಸಂಜೆಯವರೆಗೆ ಜೀವಿಸಿದ ಅವರು ನಾಶವಾಗುತ್ತಾರೆ; \q2 ಯಾರ ಗಮನಕ್ಕೂ ಬಾರದೇ ನಿತ್ಯ ನಾಶವಾಗುತ್ತಾರೆ. \q1 \v 21 ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದು, \q2 ಅವರು ಜ್ಞಾನವಿಲ್ಲದೆ ಸಾಯುವರು.’ \b \c 5 \q1 \v 1 “ಈಗ ನೀನು ಕರೆದರೆ, ನಿನಗೆ ಉತ್ತರ ಕೊಡುವವರು ಇದ್ದಾರೋ? \q2 ಪರಿಶುದ್ಧರಲ್ಲಿ ಯಾರ ಕಡೆಗೆ ನೀನು ತಿರುಗಿಕೊಳ್ಳುವೆ? \q1 \v 2 ಮೂಢನನ್ನು ಅಸಮಾಧಾನವು ಕೊಲ್ಲುವುದು; \q2 ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು. \q1 \v 3 ಮೂಢನು ಬೇರೂರುವುದನ್ನು ನಾನು ನೋಡಿದೆನು, \q2 ಕೂಡಲೇ ಅವನ ಮನೆ ಶಾಪಕ್ಕಿಡಾಗುವುದನ್ನು ಕಂಡೆನು. \q1 \v 4 ಅವನ ಮಕ್ಕಳು ಭದ್ರತೆಯಿಲ್ಲದವರಾಗುವರು; \q2 ಬಿಡಿಸತಕ್ಕವರಿಲ್ಲದೆ ಅವರು ನ್ಯಾಯಸ್ಥಾನದಲ್ಲಿ ಸೋತುಹೋಗುವರು. \q1 \v 5 ಹಸಿದವರು ಅವನ ಪೈರನ್ನು ತಿಂದುಬಿಡುವರು; \q2 ಮುಳ್ಳುಬೇಲಿ ಹಾಕಿದ್ದರೂ ಅದನ್ನು ತೆಗೆದುಕೊಳ್ಳುವರು; \q2 ಅವನ ಆಸ್ತಿಯನ್ನು ಬಾಯಾರಿಕೆಯಾದವರು ನುಂಗಿಬಿಡುವರು. \q1 \v 6 ಮಣ್ಣಿನಿಂದ ಕಷ್ಟಗಳು ಹುಟ್ಟುವುದಿಲ್ಲ; \q2 ಭೂಮಿಯಿಂದ ತೊಂದರೆ ಮೊಳೆಯುವುದಿಲ್ಲ. \q1 \v 7 ಆದರೂ ಕಿಡಿಗಳು ಹಾರುವ ಪ್ರಕಾರವೇ, \q2 ಮನುಷ್ಯನು ಶ್ರಮೆಹೊಂದಲು ಹುಟ್ಟುತ್ತಾನೆ. \b \q1 \v 8 “ನಾನು ನೀನಾಗಿದ್ದರೆ ದೇವರಿಗೇ ಬೇಡಿಕೊಳ್ಳುತ್ತಿದ್ದೆ; \q2 ನನ್ನ ವಿಷಯವನ್ನು ದೇವರ ಮುಂದೆಯೇ ಇಡುತ್ತಿದ್ದೆ. \q1 \v 9 ದೇವರು ಸಂಶೋಧನೆ ಮಾಡಲಾಗದಷ್ಟು ಮಹಾಕಾರ್ಯಗಳನ್ನೂ, \q2 ಅಸಂಖ್ಯವಾದ ಅದ್ಭುತ ಕೃತ್ಯಗಳನ್ನೂ ಮಾಡುತ್ತಾರೆ. \q1 \v 10 ಭೂಮಿಯ ಮೇಲೆ ಮಳೆಯನ್ನು ಕೊಡುತ್ತಾರೆ; \q2 ಹೊಲಗಳ ಮೇಲೆ ನೀರನ್ನು ಸುರಿಸುತ್ತಾರೆ. \q1 \v 11 ದೇವರು ತಗ್ಗಿದವರನ್ನು ಉನ್ನತದಲ್ಲಿಡುತ್ತಾರೆ; \q2 ದುಃಖವುಳ್ಳವರನ್ನು ಭದ್ರತೆಗೆ ಒಯ್ಯುತ್ತಾರೆ. \q1 \v 12 ದೇವರು ವಂಚಕರ ಯೋಜನೆಗಳನ್ನು ಭಂಗಪಡಿಸುತ್ತಾರೆ. \q2 ಕುಯುಕ್ತಿಯುಳ್ಳವರ ಕೈಗಳು ಯಾವುದೇ ಯಶಸ್ಸನ್ನು ಸಾಧಿಸದಂತೆ ಮಾಡುತ್ತಾರೆ. \q1 \v 13 ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, \q2 ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ. \q1 \v 14 ಕುತಂತ್ರರು ಹಗಲಿನಲ್ಲಿಯೇ ಕತ್ತಲೆಯನ್ನು ಸಂಧಿಸುತ್ತಾರೆ; \q2 ಮಧ್ಯಾಹ್ನದಲ್ಲಿ ರಾತ್ರಿಯಂತೆ ತಡಕಾಡುತ್ತಾರೆ. \q1 \v 15 ದೇವರು ದಿಕ್ಕಿಲ್ಲದವರನ್ನು ದಬ್ಬಾಳಿಕೆಮಾಡುವವರ ಬಾಯಿಯೆಂಬ ಖಡ್ಗದಿಂದಲೂ, \q2 ಬಲಿಷ್ಠರ ಕೈಯೊಳಗಿಂದಲೂ ರಕ್ಷಿಸುತ್ತಾರೆ. \q1 \v 16 ಆದ್ದರಿಂದ ಬಡವರಿಗೆ ನಿರೀಕ್ಷೆಯುಂಟಾಗುವುದು; \q2 ಅನ್ಯಾಯವು ತನ್ನ ಬಾಯಿ ಮುಚ್ಚಿಕೊಳ್ಳುವುದು. \b \q1 \v 17 “ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು; \q2 ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ. \q1 \v 18 ಗಾಯ ಮಾಡುವವರೂ ಗಾಯ ಕಟ್ಟುವವರೂ ದೇವರೇ; \q2 ಹೊಡೆಯುವುದೂ ಗುಣಪಡಿಸುವುದೂ ದೇವರ ಕೈಯೇ. \q1 \v 19 ದೇವರು ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವರು; \q2 ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು. \q1 \v 20 ಬರದಲ್ಲಿ ನಿನ್ನನ್ನು ಮರಣದೊಳಗಿಂದಲೂ, \q2 ಯುದ್ಧದಲ್ಲಿ ಖಡ್ಗದ ಬಲದಿಂದಲೂ ದೇವರು ವಿಮೋಚಿಸುವರು. \q1 \v 21 ನೀನು ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ; \q2 ನಾಶ ಬಂದಾಗ ನೀನು ಭಯಪಡುವುದಿಲ್ಲ. \q1 \v 22 ನೀನು ನಾಶಕ್ಕೂ, ಕ್ಷಾಮಕ್ಕೂ ನಗುವೆ; \q2 ಕಾಡುಮೃಗಗಳಿಗೂ ನೀನು ಭಯಪಡುವುದಿಲ್ಲ. \q1 \v 23 ಹೊಲದ ಕಲ್ಲುಗಳ ಸಂಗಡ ನಿನಗೆ ಒಪ್ಪಂದ ಇರುವುದು; \q2 ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನವಾಗಿರುವವು. \q1 \v 24 ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ನೀನು ತಿಳಿದುಕೊಳ್ಳುವೆ, \q2 ನಿನ್ನ ಆಸ್ತಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ. \q1 \v 25 ನಿನ್ನ ಸಂತತಿಯು ಬಹಳವಾಗಿದೆ ಎಂದೂ, \q2 ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವೆ. \q1 \v 26 ಸಿವುಡು ತನ್ನ ಕಾಲದಲ್ಲಿ ಮನೆಗೆ ಸೇರುವಂತೆ \q2 ನೀನು ಪೂರ್ಣ ಪ್ರಾಯದವನಾಗಿ ಸಮಾಧಿ ಸೇರುವೆ. \b \q1 \v 27 “ಇದನ್ನು ನಾವು ಪರಿಶೋಧಿಸಿದ್ದೇವೆ; ಇದು ಸತ್ಯವಾದದ್ದು, \q2 ಇದನ್ನು ನೀನು ಕೇಳಿ ತಿಳಿದುಕೋ, ಇದನ್ನು ನೀನು ಅನ್ವಯಿಸು.” \c 6 \s1 ಯೋಬನ ವಾದ \p \v 1 ಅದಕ್ಕೆ ಯೋಬನು ಉತ್ತರವಾಗಿ ಹೀಗೆಂದನು: \q1 \v 2 “ಅಯ್ಯೋ, ನನ್ನ ವ್ಯಥೆಯನ್ನು ತೂಕಮಾಡಿ ನೋಡಿದರೆ ಒಳ್ಳೇದು, \q2 ನನ್ನ ದುಃಖವನ್ನೆಲ್ಲಾ ತಕ್ಕಡಿಗೆ ಹಾಕಿದರೆ ಲೇಸು. \q1 \v 3 ಏಕೆಂದರೆ ನನ್ನ ಕಷ್ಟ ಈಗಲೇ ಸಮುದ್ರದ ಮರಳಿಗಿಂತ ಭಾರವಾಗಿದೆ; \q2 ನನ್ನ ಮಾತುಗಳು ದುಡುಕಿದ್ದರಲ್ಲಿ ಆಶ್ಚರ್ಯವಿಲ್ಲ. \q1 \v 4 ಸರ್ವಶಕ್ತರ ಬಾಣಗಳು ನನ್ನಲ್ಲಿ ನಾಟಿವೆ; \q2 ಅವುಗಳ ವಿಷವನ್ನು ನನ್ನ ಆತ್ಮವು ಹೀರುತ್ತಿದೆ; \q2 ದೇವರ ವಿಷಯವಾದ ಹೆದರಿಕೆಗಳು ನನ್ನನ್ನು ಸುತ್ತುವರೆದಿವೆ. \q1 \v 5 ಹುಲ್ಲು ಇರುವಾಗ ಕಾಡುಕತ್ತೆಯು ಅರಚುವುದೋ? \q2 ಮೇವು ಇದ್ದರೆ ಎತ್ತು ಕೂಗುವುದೋ? \q1 \v 6 ರುಚಿ ಇಲ್ಲದ ಆಹಾರನ್ನು ಉಪ್ಪಿಲ್ಲದೆ ತಿನ್ನಬಹುದೋ? \q2 ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿಯುಂಟೋ\f + \fr 6:6 \fr*\fq ರುಚಿಯುಂಟೋ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಅನಿಶ್ಚಿತ\fqa*\f*? \q1 \v 7 ಮುಟ್ಟಲು ಕೂಡ ನನಗೆ ಇಷ್ಟವಾಗಲಿಲ್ಲ, \q2 ಅಂಥ ಆಹಾರವು ನನಗೆ ಬೇಸರ. \b \q1 \v 8 “ದೇವರು ನನ್ನ ವಿಜ್ಞಾಪನೆಯನ್ನು ಲಾಲಿಸಿದರೆ ಸಾಕು, \q2 ನಾನು ನಿರೀಕ್ಷಿಸಿದ್ದನ್ನು ದೇವರು ಕೊಟ್ಟರೆ ಲೇಸು. \q1 \v 9 ನನ್ನನ್ನು ಜಜ್ಜುವುದು ದೇವರಿಗೆ ಮೆಚ್ಚಿಗೆಯಾದರೆ, \q2 ದೇವರು ತಮ್ಮ ಕೈಚಾಚಿ ನನ್ನ ಪ್ರಾಣವನ್ನು ತೆಗೆದುಕೊಳ್ಳಲಿ. \q1 \v 10 ಹಾಗಿದ್ದರೆ, ಇದು ನನಗೆ ಆದರಣೆಯಾಗಿರುವುದು; \q2 ಪರಿಶುದ್ಧ ದೇವರ ಮಾತುಗಳನ್ನು ನನ್ನ ಅತ್ಯಂತ ಯಾತನೆಯಲ್ಲಿಯೂ ನಾನು ನಿರಾಕರಿಸಲಿಲ್ಲ; \q2 ಇದರಿಂದ ಬರುವ ಆನಂದವು ನನಗೆ ಇನ್ನೂ ಇರುವುದು. \b \q1 \v 11 “ನಾನು ನಿರೀಕ್ಷೆಯಿಂದಿರಲು, ನನಗೆ ಶಕ್ತಿ ಎಲ್ಲಿದೆ? \q2 ನಾನು ಸಹನೆಯಿಂದಿರಲು, ನನಗೆ ಭವಿಷ್ಯ ಏನಿದೆ? \q1 \v 12 ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? \q2 ನನ್ನ ಶರೀರ ಕಂಚಿನ ಶರೀರವೋ? \q1 \v 13 ನನಗೆ ಸಹಾಯವು ಇಲ್ಲದೆ ಹೋಗಿದೆಯಲ್ಲಾ? \q2 ಈಗ ಯಶಸ್ಸು ಸಹ ನನ್ನಿಂದ ತೊಲಗಿಹೋಗಿದೆಯಲ್ಲಾ. \b \q1 \v 14 “ಒಬ್ಬನು ಸರ್ವಶಕ್ತರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ, \q2 ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು. \q1 \v 15 ಆದರೆ ನನ್ನ ಸಹೋದರರಾದರೋ, ಉಕ್ಕಿ ಹರಿಯುವ ತೊರೆಯಂತೆಯೂ, \q2 ಬತ್ತಿದ ಹಳ್ಳದಂತೆಯೂ ಅಪನಂಬಿಗಸ್ತರಾಗಿದ್ದಾರೆ. \q1 \v 16 ಅವು ಮಂಜುಗಡ್ಡೆಯಿಂದ ಕಪ್ಪಾಗಿವೆ, \q2 ಅವುಗಳಲ್ಲಿ ಹಿಮ ಅಡಗಿಕೊಳ್ಳುತ್ತದೆ. \q1 \v 17 ಉಷ್ಣ ಸಮಯದಲ್ಲಿ ಅವು ಹರಿಯುವದಿಲ್ಲ; \q2 ಸೆಕೆಯಾದಾಗ ಬತ್ತಿ ಅದರ ಸ್ಥಳದಿಂದ ಮಾಯವಾಗುತ್ತವೆ. \q1 \v 18 ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣ ಮಾಡುವ ವರ್ತಕರ ಗುಂಪುಗಳು, \q2 ದಾರಿತಪ್ಪಿ ಮರಳುಗಾಡಿನಲ್ಲಿ ಅಲೆದು ನಾಶವಾಗುತ್ತವೆ. \q1 \v 19 ತೇಮದ ವರ್ತಕರ ಗುಂಪುಗಳು ನೀರಿಗಾಗಿ ಹಂಬಲಿಸುತ್ತಾರೆ; \q2 ಶೆಬದ ವ್ಯಾಪಾರಿಗಳು ನಿರೀಕ್ಷೆಯಿಂದ ನೋಡುತ್ತಾರೆ. \q1 \v 20 ಅವರು ನಿರೀಕ್ಷಿಸಿದ್ದರಿಂದ ವ್ಯಥೆಗೊಂಡರು; \q2 ಅವರು ಬಂದು ಸ್ಥಳಸೇರಿದರೂ ನಿರಾಶರಾದರು. \q1 \v 21 ಈಗ ನೀವು ಸಹ ಹಾಗೆಯೇ ನಿಸ್ಸಹಾಯಕರಾಗಿ ಇದ್ದೀರಿ; \q2 ಏಕೆಂದರೆ ನೀವು ನನ್ನ ವಿಪತ್ತನ್ನು ಕಂಡು ಹಿಂಜರಿಯುತ್ತೀರಿ. \q1 \v 22 ನಾನು ನಿಮ್ಮನ್ನು, ‘ನನಗೆ ದಾನಮಾಡಿರಿ,’ ಎಂದು ಬಿನ್ನವಿಸಿದೆನೋ? \q2 ‘ನಿಮ್ಮ ಆಸ್ತಿಯಿಂದ ನನಗಾಗಿ ಈಡು ಕೊಡಿರಿ,’ ಎಂದೆನೋ? \q1 \v 23 ‘ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ,’ ಎಂದೂ, \q2 ‘ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರಿ,’ ಎಂದೂ ನಾನು ಕೇಳಿದೆನೋ? \b \q1 \v 24 “ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; \q2 ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ. \q1 \v 25 ಯಥಾರ್ಥ ಮಾತುಗಳು ಎಷ್ಟೋ ನೋವನ್ನು ತರುತ್ತವೆ! \q2 ಆದರೆ ನಿಮ್ಮ ತರ್ಕವು ರುಜುಪಡಿಸುವುದೇನು? \q1 \v 26 ನಾನು ಹೇಳಿದ ಮಾತುಗಳನ್ನು ತಿದ್ದಬೇಕೆನ್ನುವಿರೋ? \q2 ಬೇಸರದ ನನ್ನ ಮಾತುಗಳು ನಿಮಗೆ ಗಾಳಿಮಾತುಗಳೋ? \q1 \v 27 ತಂದೆಯಿಲ್ಲದವರಿಗಾಗಿ ಚೀಟು ಹಾಕುತ್ತೀರಿ, \q2 ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ. \b \q1 \v 28 “ಆದ್ದರಿಂದ ಈಗ ಸ್ವಲ್ಪ ದಯೆಯುಳ್ಳವರಾಗಿ ನನ್ನನ್ನು ದೃಷ್ಟಿಸಿರಿ; \q2 ನಾನು ನಿಮ್ಮೆದುರಿನಲ್ಲಿ ಸುಳ್ಳು ಹೇಳುವೆನೋ? \q1 \v 29 ಕರುಣೆ ತೋರಿಸಿರಿ, ಅನ್ಯಾಯವಾಗದಿರಲಿ; \q2 ಪುನಃ ಯೋಚಿಸಿರಿ, ನನ್ನ ಪ್ರಾಮಾಣಿಕತೆಯು ಪ್ರಶ್ನಿಸಲಾಗಿದೆ. \q1 \v 30 ನನ್ನ ನಾಲಿಗೆಯಲ್ಲಿ ದುಷ್ಟತನ ಇದೆಯೋ? \q2 ವಿಪತ್ತುಗಳ ವಿವೇಚನೆಯು ನನಗಿಲ್ಲವೋ? \b \c 7 \q1 \v 1 “ಮನುಷ್ಯರಿಗೆ ಭೂಮಿಯಲ್ಲಿ ಕಠಿಣ ದುಡಿತ ಇಲ್ಲವೇ? \q2 ಮಾನವನ ದಿನಗಳು ಜೀತದಾಳಿನ ದಿನಗಳ ಹಾಗಲ್ಲವೋ? \q1 \v 2 ಗುಲಾಮನು ಸಾಯಂಕಾಲದ ನೆರಳನ್ನು ಅಪೇಕ್ಷಿಸುವ ಪ್ರಕಾರವೂ, \q2 ನಾನು ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾರವೂ ಇದ್ದೇನೆ. \q1 \v 3 ನನಗೆ ನಿರರ್ಥಕತೆಯ ತಿಂಗಳುಗಳನ್ನು ನೀಡಲಾಗಿದೆ; \q2 ಬೇಸರಿಕೆಯ ರಾತ್ರಿಗಳು ನನಗೆ ನೇಮಕವಾಗಿವೆ. \q1 \v 4 ಮಲಗುವ ವೇಳೆಯಲ್ಲಿ, ‘ಯಾವಾಗ ಏಳುವೆನೋ?’ ಅಂದುಕೊಳ್ಳುವೆನು, \q2 ರಾತ್ರಿ ಬೆಳೆಯುತ್ತಾ ಹೋಗುತ್ತದೆ; ಉದಯದವರೆಗೂ ಹೊರಳಿ ಹೊರಳಿ ಸಾಕಾಗುತ್ತದೆ. \q1 \v 5 ನನ್ನ ದೇಹವು ಹುಳಹಕ್ಕಳೆಗಳನ್ನೂ ಧರಿಸಿಕೊಂಡಿದೆ; \q2 ನನ್ನ ಚರ್ಮವು ಕಜ್ಜಿಯಿಂದ ಬಿರಿದು ಹೋಗಿದೆ. \b \q1 \v 6 “ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; \q2 ದಿನಗಳು ನಿರೀಕ್ಷೆ ಇಲ್ಲದೆ ಮುಗಿಯುತ್ತವೆ. \q1 \v 7 ಓ ದೇವರೇ, ನನ್ನ ಜೀವವು ಕೇವಲ ಉಸಿರೆಂದು ನೆನಪುಮಾಡಿಕೊಳ್ಳಿರಿ. \q2 ನನ್ನ ಕಣ್ಣು ತಿರುಗಿ ಸಂತೋಷವನ್ನು ಕಾಣುವುದಿಲ್ಲ. \q1 \v 8 ನನ್ನನ್ನು ನೋಡುವವನ ಕಣ್ಣು, ಇನ್ನು ಮೇಲೆ ನನ್ನನ್ನು ನೋಡದು; \q2 ನೀವು ನನ್ನನ್ನು ನೋಡಿದರೂ, ನಾನು ಬದುಕಿರುವುದಿಲ್ಲ. \q1 \v 9 ಮೋಡವು ಕರಗಿ ಹೋಗುವ ಹಾಗೆಯೇ, \q2 ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು. \q1 \v 10 ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವುದಿಲ್ಲ; \q2 ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು. \b \q1 \v 11 “ಆದ್ದರಿಂದ ನಾನು ನನ್ನ ಬಾಯಿ ಮುಚ್ಚುವುದಿಲ್ಲ; \q2 ಆತ್ಮವೇದನೆಯಿಂದ ಮಾತಾಡುವೆನು, \q2 ನನ್ನ ಆತ್ಮದ ಕಹಿಯಲ್ಲಿ ನಾನು ವಾದಿಸುವೆನು. \q1 \v 12 ನೀವು ನನಗೆ ಕಾವಲಿಡುವುದಕ್ಕೆ ನಾನೇನು ಸಮುದ್ರವೋ? \q2 ಇಲ್ಲವೆ ತಿಮಿಂಗಿಲವೋ? \q1 \v 13 ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು; \q2 ನನ್ನ ಮಂಚವು ನನ್ನ ಚಿಂತೆಯನ್ನು ಶಮನ ಮಾಡಲಿ ಎಂದುಕೊಳ್ಳುವಾಗ, \q1 \v 14 ನೀವು ಸ್ವಪ್ನಗಳಿಂದ ನನ್ನನ್ನು ಹೆದರಿಸುತ್ತೀರಿ; \q2 ದರ್ಶನಗಳಿಂದ ನನ್ನನ್ನು ಭಯಪಡಿಸುತ್ತೀರಿ. \q1 \v 15 ಆದ್ದರಿಂದ ನನ್ನ ದೇಹದಲ್ಲಿ ಸಂಕಟಪಡುವುದಕ್ಕಿಂತಲೂ ಉಸಿರುಕಟ್ಟಿ, \q2 ನಾನು ನನ್ನ ಪ್ರಾಣಬಿಡುವುದು ಲೇಸು. \q1 \v 16 ನಾನು ನನ್ನ ಜೀವನವನ್ನು ದ್ವೇಷಿಸುತ್ತೇನೆ; ನಿರಂತರ ನಾನು ಬದುಕಲೊಲ್ಲೆನು; \q2 ನನ್ನನ್ನು ಬಿಟ್ಟುಬಿಡಿರಿ; ನನ್ನ ಬಾಳಿನ ದಿನಗಳಿಗೆ ಅರ್ಥವಿಲ್ಲ. \b \q1 \v 17 “ದೇವರೇ, ಮಾನವನು ಎಷ್ಟರವನು? \q2 ನೀವು ಮಾನವನಿಗೆ ಬಹು ಗೌರವ ಕೊಡುತ್ತೀರಿ, ಅವನ ಕಡೆಗೆ ಗಮನಹರಿಸುತ್ತೀರಿ. \q1 \v 18 ಮನುಷ್ಯನನ್ನು ಪ್ರತಿ ಉದಯದಲ್ಲಿ ವಿಚಾರಿಸುತ್ತೀರಿ, \q2 ನೀವು ಕ್ಷಣಕ್ಷಣಕ್ಕೆ ಅವನನ್ನು ಪರೀಕ್ಷಿಸುವುದೇಕೆ? \q1 \v 19 ನೀವು ನನ್ನ ಕಡೆಯಿಂದ ದೃಷ್ಟಿಯನ್ನು ತೊಲಗಿಸುವುದಿಲ್ಲವೋ? \q2 ನಾನು ಒಂದು ಕ್ಷಣ ಉಗುಳು ನುಂಗುವುದಕ್ಕೂ ನನ್ನನ್ನು ಬಿಡುವುದಿಲ್ಲ? \q1 \v 20 ಮನುಷ್ಯರನ್ನು ಕಾಯುವವರೇ, ನಾನು ಪಾಪಮಾಡಿದ್ದರೆ, \q2 ನಾವು ಮಾಡುವ ಪ್ರತಿಯೊಂದನ್ನೂ ನೋಡುವವರೇ, ನಾನು ನಿಮಗೆ ಏನು ಮಾಡಿದೆ? \q1 ನಾನು ನಿಮಗೆ ಭಾರವಾಗಿದ್ದೇನೋ? \q2 ನನ್ನನ್ನು ನಿಮ್ಮ ಗುರಿಯಾಗಿ ಇಟ್ಟುಕೊಳ್ಳುವುದು ಏಕೆ? \q1 \v 21 ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? \q2 ನನ್ನ ಪಾಪವನ್ನು ಕ್ಷಮಿಸಬಾರದೇ? \q1 ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; \q2 ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.” \c 8 \s1 ಬಿಲ್ದದನ ವಾದ \p \v 1 ಆಗ, ಶೂಹ್ಯನಾದ ಬಿಲ್ದದನು ಈ ಪ್ರಕಾರ ಉತ್ತರಕೊಟ್ಟನು: \q1 \v 2 “ನೀನು ಎಷ್ಟರವರೆಗೆ ಇವುಗಳನ್ನು ನುಡಿಯುತ್ತಿರುವೆ? \q2 ನೀನು ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ. \q1 \v 3 ದೇವರು ತೀರ್ಪಿಗೆ ವಿರುದ್ಧವಾದದ್ದನ್ನು ಮಾಡುತ್ತಾರೋ? \q2 ಸರ್ವಶಕ್ತರು ನೀತಿಗೆ ವಿರುದ್ಧವಾದದ್ದನ್ನು ಮಾಡುವರೋ? \q1 \v 4 ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪಮಾಡಿದ್ದರೆ, \q2 ದೇವರು ಅವರ ಪಾಪಕ್ಕಾಗಿ ಅವರನ್ನು ದಂಡಿಸುವರು. \q1 \v 5 ಆದರೆ ನೀನೇ ದೇವರನ್ನು ಜಾಗ್ರತೆಯಾಗಿ ಹುಡುಕಿ, \q2 ಸರ್ವಶಕ್ತರಿಗೆ ಬಿನ್ನಹ ಮಾಡು. \q1 \v 6 ನೀನು ಶುದ್ಧನೂ, ಯಥಾರ್ಥನೂ ಆಗಿದ್ದರೆ, \q2 ನಿಶ್ಚಯವಾಗಿ ಈಗಲೇ ದೇವರು ನಿನಗೋಸ್ಕರ ಎಚ್ಚೆತ್ತು, \q2 ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವರು. \q1 \v 7 ನಿನ್ನ ಆರಂಭವು ಅಲ್ಪವಾಗಿದ್ದರೂ, \q2 ನಿನ್ನ ಅಂತ್ಯವು ಬಹಳವಾಗಿ ವೃದ್ಧಿ ಹೊಂದುವುದು. \b \q1 \v 8 “ಪೂರ್ವಿಕರನ್ನು ವಿಚಾರಿಸು; \q2 ಅವರ ಪಿತೃಗಳು ಕಲಿತಿದ್ದನ್ನು ಕಂಡುಕೊಳ್ಳುವುದಕ್ಕೆ ಸಿದ್ಧನಾಗು. \q1 \v 9 ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯದವರೂ ಆಗಿದ್ದೇವೆ; \q2 ಏಕೆಂದರೆ ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿನಂತಿವೆ. \q1 \v 10 ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? \q2 ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ? \q1 \v 11 ಕೆಸರಿಲ್ಲದೆ ಆಪು ಹುಲ್ಲು ಬೆಳೆಯುವುದೋ? \q2 ನೀರಿಲ್ಲದೆ ಜಂಬು ಹುಲ್ಲು ಮೊಳೆಯುವುದೋ? \q1 \v 12 ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ, \q2 ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಒಣಗಿಹೋಗುವುದು. \q1 \v 13 ದೇವರನ್ನು ಮರೆಯುವವರೆಲ್ಲರ ದಾರಿ ಹಾಗೆಯೇ; \q2 ಭಕ್ತಿಹೀನರ ನಿರೀಕ್ಷೆಯು ನಾಶವಾಗುವುದು. \q1 \v 14 ಅಂಥವರ ಭರವಸೆಯು ಭಂಗವಾಗುವುದು\f + \fr 8:14 \fr*\ft ಈ ಪದಕ್ಕೆ ಹೀಬ್ರೂ ಭಾಷೆಯಲ್ಲಿ ಅರ್ಥವು ಅನಿಶ್ಚಿತವಾಗಿದೆ\ft*\f*; \q2 ಅವರ ಆಶ್ರಯವು ಜೇಡರ ಹುಳದ ಮನೆಯಂತಿರುವುದು. \q1 \v 15 ಅಂಥಾ ಮನೆ ಮೇಲೆ ಒರಗಿಕೊಂಡರೆ, ಅದು ನಿಲ್ಲದು; \q2 ಅದನ್ನು ಬಿಗಿಹಿಡಿದರೆ, ಅದು ತಡೆಯಲಾರದು. \q1 \v 16 ಸೂರ್ಯನ ಮುಂದೆ ಭಕ್ತಿಹೀನರು ಹಸುರು ಬಳ್ಳಿಯಂತೆ ಇದ್ದಾರೆ; \q2 ಆ ಬಳ್ಳಿಯು ತೋಟದಲ್ಲೆಲ್ಲಾ ಹಬ್ಬುತ್ತಿದೆ. \q1 \v 17 ಅವರ ಬೇರುಗಳು ಬಂಡೆಗಳ ರಾಶಿಯ ಮೇಲೆ ಸುತ್ತಿ, \q2 ಕಲ್ಲುಗಳ ನಡುವೆ ನುಗ್ಗುತ್ತವೆ. \q1 \v 18 ಭಕ್ತಿಹೀನನನ್ನು ಅವನ ಸ್ಥಳದಿಂದ ಕಿತ್ತುಹಾಕಿದರೆ, \q2 ‘ನಾನು ನಿನ್ನನ್ನು ಎಂದಿಗೂ ನೋಡಿಲ್ಲ,’ ಎಂದು ಆ ನೆಲವು ಅವನನ್ನು ಅಲ್ಲಗಳೆಯುವುದು. \q1 \v 19 ಹೀಗೆ ಭಕ್ತಿಹೀನನ ಜೀವವು ಒಣಗಿಹೋಗುವುದು; \q2 ಆದರೆ ಆ ಮಣ್ಣಿನ ನೆಲದಿಂದ ಬೇರೆ ಸಸಿಗಳು ಮೊಳೆಯುವುದು. \b \q1 \v 20 “ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; \q2 ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ. \q1 \v 21 ದೇವರು ನಿನ್ನ ಬಾಯನ್ನು ನಗೆಯಿಂದ ತುಂಬಿಸುವರು; \q2 ನಿನ್ನ ತುಟಿಗಳನ್ನು ಜಯ ಧ್ವನಿಯಿಂದಲೂ ತುಂಬಿಸುವರು. \q1 \v 22 ನಿನ್ನ ಶತ್ರುಗಳಿಗೆ ನಾಚಿಕೆಯಾಗುವುದು; \q2 ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವುದು.” \c 9 \s1 ಯೋಬನ ಪ್ರತಿವಾದ \p \v 1 ಅದಕ್ಕೆ ಯೋಬನು ಉತ್ತರಿಸುತ್ತಾ ಇಂತೆಂದನು: \q1 \v 2 “ನಿಜಕ್ಕೂ, ಇದು ಸತ್ಯ ಎಂದು ಬಲ್ಲೆನು; \q2 ಆದರೆ ಮನುಷ್ಯರು ದೇವರ ಮುಂದೆ ತಮ್ಮ ಮುಗ್ಧತೆಯನ್ನು ಪ್ರಮಾಣಿಕರಿಸುವುದು ಹೇಗೆ? \q1 \v 3 ದೇವರ ಸಂಗಡ ವ್ಯಾಜ್ಯವಾಡಲು ಮನುಷ್ಯನು ಬಯಸಿದರೂ, \q2 ದೇವರ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಕೊಡಲಾರನು. \q1 \v 4 ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; \q2 ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು? \q1 \v 5 ದೇವರು ಪರ್ವತಗಳನ್ನು ಅವುಗಳಿಗೆ ತಿಳಿಯದ ಹಾಗೆ ಸರಿಸುತ್ತಾರೆ; \q2 ತಮ್ಮ ಎದುರಿನಲ್ಲಿ ಅವುಗಳನ್ನು ತಿರುಗಿಸುತ್ತಾರೆ. \q1 \v 6 ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾರೆ; \q2 ಅದರ ಸ್ತಂಭಗಳು ನಡುಗುತ್ತವೆ. \q1 \v 7 ದೇವರು ಸೂರ್ಯನಿಗೆ ಪ್ರಕಾಶಿಸದಂತೆ ಅಪ್ಪಣೆ ಕೊಟ್ಟರೆ, ಪ್ರಕಾಶಿಸುತ್ತಿರಲಿಲ್ಲ; \q2 ನಕ್ಷತ್ರಗಳಿಗೆ ಮುದ್ರೆ ಹಾಕಿದ್ದರೆ, ನಕ್ಷತ್ರವೂ ಮಿನುಗುತ್ತಿರಲಿಲ್ಲ. \q1 \v 8 ದೇವರೊಬ್ಬರೇ ಆಕಾಶಗಳನ್ನು ಹರಡಿಸುತ್ತಾರೆ; \q2 ದೇವರು ಸಮುದ್ರದ ತೆರೆಗಳ ಮೇಲೆ ನಡೆಯುತ್ತಾರೆ. \q1 \v 9 ಸಪ್ತರ್ಷಿಮಂಡಲವನ್ನೂ, ಮೃಗಶಿರವನ್ನೂ, \q2 ಕೃತ್ತಿಕೆಯನ್ನೂ ದಕ್ಷಿಣ ದಿಕ್ಕಿನ ನಕ್ಷತ್ರಗ್ರಹಗಳನ್ನೂ ನಿರ್ಮಿಸಿದವರು ದೇವರೇ. \q1 \v 10 ದೇವರು ಕಂಡು ಹಿಡಿಯಲಾರದಂಥ ಮಹತ್ಕಾರ್ಯಗಳನ್ನೂ, \q2 ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾರೆ. \q1 \v 11 ದೇವರು ನನ್ನ ಮುಂದೆ ಹಾದುಹೋದಾಗ, ನನಗೆ ಅವರು ಕಾಣುವುದಿಲ್ಲ; \q2 ದೇವರು ದಾಟಿ ಹೋಗುತ್ತಾರೆ; ಆದರೆ ನಾನು ಅವರನ್ನು ಗ್ರಹಿಸಿಕೊಳ್ಳುವುದಿಲ್ಲ. \q1 \v 12 ದೇವರು ತೆಗೆದುಕೊಂಡರೆ, ಅವರಿಗೆ ಅಡ್ಡಿ ಮಾಡುವವರು ಯಾರು? \q2 ದೇವರನ್ನು, ‘ನೀವು ಏನು ಮಾಡುತ್ತೀರಿ?’ ಎಂದು ಕೇಳುವವರ‍್ಯಾರು. \q1 \v 13 ದೇವರು ತಮ್ಮ ಬೇಸರವನ್ನು ವ್ಯಕ್ತಪಡಿಸುತ್ತಾರೆ; \q2 ರಹಾಬನ\f + \fr 9:13 \fr*\fq ರಹಾಬನ \fq*\ft ಅಥವಾ \ft*\fqa ಲೆವಿಯಾತಾನ ಎಂಬ ಪ್ರಾಣಿ\fqa*\f* ಸಹಾಯಕರು ಸಹ ದೇವರ ಕಾಲಿಗೆ ಅಡ್ಡಬಿದ್ದರಲ್ಲಾ. \b \q1 \v 14 “ದೇವರೊಂದಿಗೆ ವಾದಿಸಲು ನಾನು ಅಶಕ್ತನು; \q2 ದೇವರಿಗೆ ತಕ್ಕ ಉತ್ತರ ಕೊಡಲು ನಾನು ಎಷ್ಟರವನು? \q1 \v 15 ನಾನು ನೀತಿವಂತನಾಗಿದ್ದರೂ ಉತ್ತರ ಕೊಡೆನು; \q2 ಆದರೆ ನನ್ನ ನ್ಯಾಯಾಧಿಪತಿಗೆ ಕರುಣೆಗೋಸ್ಕರ ಮೊರೆಯಿಡುವೆನು. \q1 \v 16 ನಾನು ಕರೆಯಲು ದೇವರು ನನಗೆ ಉತ್ತರ ಕೊಟ್ಟರೂ, \q2 ನನ್ನ ವಿಜ್ಞಾಪನೆಗೆ ದೇವರು ಕಿವಿಗೊಡುವರೆಂದು ನಾನು ನಂಬುತ್ತಿರಲಿಲ್ಲ. \q1 \v 17 ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ; \q2 ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸುತ್ತಾರೆ. \q1 \v 18 ನಾನು ಉಸಿರಾಡಲು ಕಷ್ಟಪಡುತ್ತಿದ್ದೇನೆ, \q2 ದೇವರು ಕಹಿಯಾದವುಗಳಿಂದ ನನ್ನನ್ನು ತುಂಬಿಸುತ್ತಾರೆ. \q1 \v 19 ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ! \q2 ನ್ಯಾಯದ ವಿಷಯದಲ್ಲಿ ವಾದಿಸಬೇಕಾದರೆ, ದೇವರಿಗೆ ಸವಾಲು ಹಾಕುವವರು ಯಾರು? \q1 \v 20 ನಾನು ನೀತಿವಂತನಾಗಿದ್ದರೂ, ನನ್ನ ಸ್ವಂತ ಬಾಯೇ ನನ್ನನ್ನು ಖಂಡಿಸುತ್ತದೆ; \q2 ನಾನು ನಿರ್ದೋಷಿಯಾಗಿದ್ದರೂ, ದೇವರು ನನ್ನನ್ನು ಅಪರಾಧಿ ಎಂದು ನಿರೂಪಿಸುವರು. \b \q1 \v 21 “ನಾನು ನಿರ್ದೋಷಿಯೇ ಹೌದು, \q2 ನನ್ನ ಬಗ್ಗೆ ನನಗೆ ಚಿಂತೆ ಇಲ್ಲ; \q2 ನನ್ನ ಬಾಳನ್ನೇ ತಿರಸ್ಕಾರ ಮಾಡುತ್ತೇನೆ. \q1 \v 22 ಇದೆಲ್ಲಾ ಒಂದೇ ವಿಷಯ; ಆದ್ದರಿಂದ ನಾನು ಇದನ್ನು ಹೇಳುತ್ತೇನೆ: \q2 ‘ನಿರ್ದೋಷಿಯನ್ನೂ, ಕೆಟ್ಟವನನ್ನೂ ದೇವರು ದಂಡಿಸುತ್ತಾರೆ.’ \q1 \v 23 ವಿಪತ್ತು ಅಕಸ್ಮಾತ್ತಾಗಿ ಮರಣವನ್ನು ತಂದರೆ, \q2 ನಿರಪರಾಧಿಯ ಬುದ್ಧಿಹೀನತೆಗೆ ದೇವರು ನಗುವರು. \q1 \v 24 ಲೋಕವು ಕೆಟ್ಟವರ ಕೈವಶವಾಗಿದೆ; \q2 ನ್ಯಾಯಾಧಿಪತಿಗಳ ಮುಖಕ್ಕೆ ಮುಸುಕುಹಾಕಲಾಗಿದೆ; \q2 ಇದನ್ನು ಅನುಮತಿಸಿದವರು ದೇವರಲ್ಲದೆ ಮತ್ತೆ ಯಾರು? \b \q1 \v 25 “ಆದರೆ ನನ್ನ ದಿನಗಳು ಅಂಚೆಯವನಿಗಿಂತಲೂ ತ್ವರೆಯಾಗಿವೆ; \q2 ಆನಂದವನ್ನೂ ನೋಡದೆ ದಿನಗಳು ಓಡಿಹೋಗುತ್ತವೆ. \q1 \v 26 ಆಪಿನ ದೋಣಿಗಳು ದಾಟಿ ಹೋಗುವಂತೆಯೂ, \q2 ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ದಿನಗಳು ವೇಗವಾಗಿ ಗತಿಸಿಹೋಗುತ್ತವೆ. \q1 \v 27 ‘ನಾನು ನನ್ನ ದೂರುಗಳನ್ನು ಮರೆತು, \q2 ನನ್ನ ಭಾರವನ್ನು ಬಿಟ್ಟು, ಆದರಣೆ ಹೊಂದುವೆನು,’ ಎಂದು ತೀರ್ಮಾನಿಸಿಕೊಂಡರೆ, \q1 \v 28 ನನಗಾದ ವ್ಯಥೆಗಳಿಗೆಲ್ಲಾ ನಾನು ಇನ್ನೂ ಹೆದರುತ್ತಿದ್ದೇನೆ; \q2 ದೇವರು ನನ್ನನ್ನು ನಿರಪರಾಧಿ ಎಂದು ಎಣಿಸುವುದಿಲ್ಲವೆಂದು ಸಹ ನನಗೆ ಗೊತ್ತಿದೆ. \q1 \v 29 ನಾನು ಈಗಾಗಲೇ ಅಪರಾಧಿ ಎಂದು ನಿರ್ಣಯವಾಗಿರುವಾಗ, \q2 ನಾನು ಏಕೆ ವ್ಯರ್ಥವಾಗಿ ಹೋರಾಡಬೇಕು? \q1 \v 30 ನಾನು ಹಿಮದ ನೀರಿನಲ್ಲಿ ಸ್ನಾನಮಾಡಿ, \q2 ಸಾಬೂನಿನಿಂದ ನನ್ನ ಕೈಗಳನ್ನು ತೊಳೆದುಕೊಂಡರೂ, \q1 \v 31 ದೇವರು ನನ್ನನ್ನು ಕುಣಿಯಲ್ಲಿ ಮುಳುಗಿಸಿ ಬಿಡುವರು; \q2 ನನ್ನ ಸ್ವಂತ ವಸ್ತ್ರಗಳೇ ನನ್ನನ್ನು ಅಸಹ್ಯಪಡಬೇಕಾಗುವುದು. \b \q1 \v 32 “ದೇವರು ನನ್ನಂಥ ಕೇವಲ ಮನುಷ್ಯನಲ್ಲ, ನಾನು ದೇವರೊಂದಿಗೆ ವಾದಿಸುವುದು ಹೇಗೆ? \q2 ನಾವಿಬ್ಬರೂ ನ್ಯಾಯಾಲಯದ ಮುಂದೆ ಕೂಡಿ ವಾದಿಸುವುದು ಹೇಗೆ? \q1 \v 33 ನಮ್ಮಿಬ್ಬರನ್ನು ಒಟ್ಟು ಸೇರಿಸುವ \q2 ಮಧ್ಯಸ್ಥ ಒಂದು ವೇಳೆ ನಮ್ಮ ನಡುವೆ ಇದ್ದಿದ್ದರೆ, \q1 \v 34 ದೇವರ ಶಿಕ್ಷೆಯಕೋಲನ್ನು ನನ್ನ ಮೇಲಿನಿಂದ ತೊಲಗಿಸುವ ಒಬ್ಬ ಮಧ್ಯಸ್ಥ ಇದ್ದಿದ್ದರೆ, \q2 ದೇವರ ಭೀತಿಗೆ ನಾನು ಎಂದಿಗೂ ಹೆದರದೆ ಇರುತ್ತಿದ್ದೆ. \q1 \v 35 ಆಗ ನಾನು ದೇವರೊಂದಿಗೆ ಭಯಪಡದೆ ಮಾತನಾಡುತ್ತಿದ್ದೆ; \q2 ನನ್ನ ಸ್ವಂತ ಶಕ್ತಿಯಿಂದ ಈಗ ನಾನು ಅದನ್ನೆಲ್ಲಾ ನನಗೆ ಮಾಡಲು ಸಾಧ್ಯವಿಲ್ಲ. \b \c 10 \q1 \v 1 “ನನ್ನ ಜೀವನವೇ ನನಗೆ ಬೇಸರವಾಗಿದೆ; \q2 ನನ್ನ ದೂರುಗಳನ್ನು ಮನಬಿಚ್ಚಿ ನುಡಿಯುವೆನು; \q2 ನನ್ನ ಪ್ರಾಣದ ಕಹಿಯಿಂದ ಮಾತನಾಡುವೆನು. \q1 \v 2 ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. \q2 ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ. \q1 \v 3 ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ? \q2 ನೀವು ನನ್ನನ್ನು ಅಲಕ್ಷ್ಯ ಮಾಡುವಿರೋ? \q2 ನೀವು ದುಷ್ಟರ ಯೋಜನೆಯನ್ನು ಮೆಚ್ಚುವಿರೋ? \q1 \v 4 ನಿಮಗೆ ಮಾಂಸದ ಕಣ್ಣುಗಳುಂಟೋ? \q2 ಮನುಷ್ಯರು ನೋಡುವಂತೆಯೇ ನೀವೂ ನೋಡುತ್ತೀರೋ? \q1 \v 5 ದೇವರೇ, ನಿಮ್ಮ ದಿನಗಳು ಮನುಷ್ಯರ ದಿನಗಳ ಹಾಗಿವೆಯೋ? \q2 ನಿಮ್ಮ ವರ್ಷಗಳು ಮನುಷ್ಯರ ವರ್ಷಗಳಂತಿವೆಯೋ? \q1 \v 6 ಏಕೆಂದರೆ ನನ್ನ ತಪ್ಪುಗಳನ್ನು ಹುಡುಕುವ ನಿಮಗೆ ಗೊತ್ತಿದೆ; \q2 ಹೌದು, ನನ್ನ ಪಾಪವನ್ನು ವಿಚಾರಿಸುವ ನಿಮಗೇ ಗೊತ್ತಿದೆ. \q1 \v 7 ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, \q2 ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ? \b \q1 \v 8 “ನಿಮ್ಮ ಕೈಗಳು ನನ್ನನ್ನು ನಿರ್ಮಿಸಿದೆ, ನೀವೇ ನನ್ನನ್ನು ರೂಪಿಸಿದವರು; \q2 ಈಗ ನೀವೇ ನನಗೆ ವಿಮುಖರಾಗಿ ನನ್ನನ್ನು ತೆಗೆದುಹಾಕುವಿರಾ? \q1 \v 9 ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ. \q2 ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ? \q1 \v 10 ನೀವು ಹಾಲಿನಂತೆ ನನ್ನನ್ನು ಸುರಿಸಲಿಲ್ಲವೋ? \q2 ಮೊಸರಿನ ಹಾಗೆ ಹೆಪ್ಪುಗಟ್ಟಿಸಲಿಲ್ಲವೋ? \q1 \v 11 ದೇವರೇ, ನೀವು ಚರ್ಮವನ್ನೂ, ಮಾಂಸವನ್ನೂ ನನಗೆ ಹೊದಿಸಿದ್ದೀರಿ; \q2 ನೀವು ಎಲುಬು ನರಗಳಿಂದಲೂ ನನ್ನನ್ನು ಹೆಣೆದಿರುವಿರಿ. \q1 \v 12 ದೇವರೇ, ನೀವು ನನಗೆ ಜೀವ ಕೊಟ್ಟಿರಿ, \q2 ನೀವು ನನಗೆ ಒಡಂಬಡಿಕೆಯ ಪ್ರೀತಿಯನ್ನೂ ತೋರಿಸಿದ್ದೀರಿ; \q2 ನಿಮ್ಮ ಪರಾಮರಿಕೆಯಿಂದ ನನ್ನ ಆತ್ಮವನ್ನು ಕಾಪಾಡಿದ್ದೀರಿ. \b \q1 \v 13 “ಆದರೂ ನೀವು ಇವುಗಳನ್ನು ನಿಮ್ಮ ಹೃದಯದಲ್ಲಿ ಮರೆಮಾಡಿಕೊಂಡಿದ್ದೀರಿ; \q2 ಇದು ನಿಮ್ಮ ಉದ್ದೇಶ ಎಂದು ನನಗೆ ಗೊತ್ತಿದೆ: \q1 \v 14 ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ, \q2 ನೀವು ಅದನ್ನು ಕಂಡುಹಿಡಿದು ನನ್ನ ಅಪರಾಧಕ್ಕಾಗಿ \q2 ನನ್ನನ್ನು ದಂಡಿಸದೇ ಬಿಡುವುದಿಲ್ಲ ಎಂಬುದೇ. \q1 \v 15 ನಾನು ಅಪರಾಧಿಯಾಗಿದ್ದರೆ ನನಗೆ ಕಷ್ಟ! \q2 ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತಲಾರೆ; \q1 ಏಕೆಂದರೆ, ನಾಚಿಕೆಯಿಂದ ನಾನು ತುಂಬಿದ್ದೇನೆ, \q2 ನಾನು ಬಾಧೆಯಿಂದ ಮುಳುಗಿಹೋಗಿದ್ದೇನೆ. \q1 \v 16 ನಾನು ತಲೆಯೆತ್ತಿದರೆ, ಸಿಂಹದಂತೆ ನನ್ನನ್ನು ಬೇಟೆಯಾಡುತ್ತೀರಿ; \q2 ನನ್ನ ವಿರುದ್ಧ ನಿಮ್ಮ ಅದ್ಭುತ ಶಕ್ತಿಯನ್ನು ಪ್ರದರ್ಶಿಸುವಿರಿ. \q1 \v 17 ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ತರುತ್ತೀರಿ; \q2 ನನ್ನ ಮೇಲೆ ಅಧಿಕಬೇಸರಗೊಳ್ಳುತ್ತೀರಿ; \q2 ಅಲೆ ಅಲೆಯಾಗಿ ನಿಮ್ಮ ಸೈನ್ಯವು ನನಗೆ ಎದುರಾಗಿವೆ. \b \q1 \v 18 “ಹಾಗಾದರೆ ಏಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದ್ದೀರಿ? \q2 ಯಾರೂ ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು. \q1 \v 19 ನಾನು ಬದುಕಿರದೇ, \q2 ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು. \q1 \v 20 ನನ್ನ ಅಲ್ಪದಿನಗಳು ಮುಗಿದಿಲ್ಲವೋ? \q2 ಸ್ವಲ್ಪ ಹೊತ್ತು ಆನಂದಿಸಲು ನನ್ನನ್ನು ಬಿಟ್ಟುಬಿಡಿರಿ. \q1 \v 21 ನಾನು ಹಿಂದಿರುಗಲಾಗದ ಮಬ್ಬಾಗಿರುವ \q2 ಕತ್ತಲೆಯ ದೇಶಕ್ಕೆ ಸೇರಲಿರುವೆನು. \q1 \v 22 ಆ ದೇಶದಲ್ಲಿ ಕಾರ್ಗತ್ತಲೂ, \q2 ಗಾಢಾಂಧಕಾರವೂ ಮರಣದ ತುಂಬಿರುವುದು. \q2 ಕ್ರಮವಿಲ್ಲದ ಆ ದೇಶದಲ್ಲಿ ಬೆಳಕೂ ಕತ್ತಲೆಯೇ.” \c 11 \s1 ಚೋಫರನ ವಾದ \p \v 1 ಆಗ ನಾಮಾಥ್ಯನಾದ ಚೋಫರನು ಹೀಗೆಂದನು: \q1 \v 2 “ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? \q2 ಬಾಯಿ ಬಡುಕನು ನೀತಿವಂತನೆಂದು ಎನಿಸಿಕೊಳ್ಳುವನೋ? \q1 \v 3 ನಿನ್ನ ವ್ಯರ್ಥ ಮಾತಿಗೆ ಮನುಷ್ಯರು ಮೌನವಾಗಿರಬೇಕೋ? \q2 ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ಖಂಡಿಸುವುದಿಲ್ಲವೋ? \q1 \v 4 ಏಕೆಂದರೆ ನೀನು, ‘ನನ್ನ ನಂಬಿಕೆ ತಪ್ಪಿಲ್ಲದ್ದು, \q2 ನಿಮ್ಮ ದೃಷ್ಟಿಯಲ್ಲಿ ನಾನು ಶುದ್ಧನಾಗಿದ್ದೇನೆ,’ ಎಂದು ದೇವರಿಗೆ ಹೇಳಿದ್ದೀ. \q1 \v 5 ಆಹಾ, ದೇವರು ಮಾತನಾಡಿ, \q2 ನಿನ್ನ ವಿರೋಧವಾಗಿ ತಮ್ಮ ತುಟಿಗಳನ್ನು ತೆರೆದು, \q1 \v 6 ಜ್ಞಾನದ ಮರ್ಮಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು, \q2 ನಿಜ ಜ್ಞಾನಕ್ಕೆ ಎರಡು ಬದಿಗಳಿವೆ; \q2 ದೇವರು ನಿನ್ನ ಪಾಪಗಳನ್ನು ತಮ್ಮ ಲಕ್ಷ್ಯಕ್ಕೆ ತರಲಿಲ್ಲ ಎಂದು ತಿಳಿದುಕೋ. \b \q1 \v 7 “ನೀನು ದೇವರ ರಹಸ್ಯಗಳನ್ನು ಕಂಡುಕೊಳ್ಳುವಿಯಾ? \q2 ಸರ್ವಶಕ್ತರ ಮಿತಿಯನ್ನು ನಿನ್ನಿಂದ ಪರೀಕ್ಷಿಸಲಾದೀತೇ? \q1 \v 8 ಅದು ಆಕಾಶಕ್ಕಿಂತಲೂ ಎತ್ತರವಾಗಿದೆ; ಆಗ ನೀನೇನು ಮಾಡುವಿ? \q2 ಅದು ಪಾತಾಳಕ್ಕಿಂತಲೂ ಆಳವಾಗಿದೆ; ಆಗ ನೀನೇನು ತಿಳುಕೊಳ್ಳುವಿ? \q1 \v 9 ಅದರ ಅಳತೆ ಭೂಮಿಗಿಂತ ಉದ್ದವೂ, \q2 ಸಮುದ್ರಕ್ಕಿಂತ ಅಗಲವೂ ಆಗಿದೆ. \b \q1 \v 10 “ದೇವರು ಬಂದು ನಿನ್ನನ್ನು ಸೆರೆಮನೆಯಲ್ಲಿಟ್ಟರೂ, \q2 ನ್ಯಾಯವಿಚಾರಣೆಗೆ ಕರೆದರೂ, ದೇವರನ್ನು ತಡೆಯುವವರು ಯಾರು? \q1 \v 11 ಖಂಡಿತವಾಗಿ ದೇವರು ಮೋಸಗಾರರನ್ನು ಗುರುತಿಸುತ್ತಾರೆ; \q2 ದೇವರು ದುಷ್ಟತನವನ್ನು ನೋಡಿ ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾರೋ? \q1 \v 12 ಒಂದು ಕಾಡುಕತ್ತೆ ಮರಿಗೆ ಹೇಗೆ ಮನುಷ್ಯನಾಗಲು ಸಾಧ್ಯವಿಲ್ಲವೋ, \q2 ಹಾಗೆಯೇ ದಡ್ಡ ಮನುಷ್ಯನು ಜ್ಞಾನಿಯಾಗಲು ಸಾಧ್ಯವಿಲ್ಲ. \b \q1 \v 13 “ಆದರೂ ನೀನು ನಿನ್ನ ಹೃದಯವನ್ನು ದೇವರಿಗೆ ಸಮರ್ಪಿಸಿ, \q2 ನಿನ್ನ ಕೈಗಳನ್ನು ದೇವರ ಕಡೆಗೆ ಚಾಚಿ, \q1 \v 14 ನಿನ್ನ ಕೈಯಲ್ಲಿರುವ ಪಾಪವನ್ನು ದೂರಮಾಡಿಬಿಟ್ಟು, \q2 ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಿಸಲು ಅನುಮತಿಸದಿದ್ದರೆ, \q1 \v 15 ನೀನು ದೋಷದಿಂದ ಬಿಡುಗಡೆಯಾಗಿ ನಿನ್ನ ಮುಖವನ್ನು ಎತ್ತುವಿ; \q2 ಹೌದು, ನೀನು ಸ್ಥಿರವಾಗಿದ್ದು, ಹೆದರದೆ ಇರುವಿ. \q1 \v 16 ಖಂಡಿತವಾಗಿ ನಿನ್ನ ಕಷ್ಟವನ್ನು ಮರೆತುಬಿಡುವಿ; \q2 ಹರಿದುಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ. \q1 \v 17 ನಿನ್ನ ಜೀವಮಾನವು ಮಧ್ಯಾಹ್ನಕ್ಕಿಂತ ಪ್ರಜ್ವಲಿಸುವುದು; \q2 ನಿನ್ನ ಕತ್ತಲೆಯು ಬೆಳಗಿನಂತೆ ಇರುವುದು. \q1 \v 18 ನೀನು ನಿರೀಕ್ಷೆ ಇದೆ ಎಂದು ಭರವಸೆಯಿಂದ ಇರುವಿ; \q2 ನೀನು ನಿನ್ನ ಬಗ್ಗೆ ಯೋಚಿಸಿ ಭರವಸೆಯಿಂದ ವಿಶ್ರಾಂತಿ ತೆಗೆದುಕೊಳ್ಳುವಿ. \q1 \v 19 ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; \q2 ಅನೇಕರು ನಿನ್ನಿಂದ ಮೆಚ್ಚಿಕೆಯನ್ನು ಅಪೇಕ್ಷಿಸುವರು. \q1 \v 20 ಆದರೆ ದುಷ್ಟರ ಕಣ್ಣುಗಳು ಕುಂದುವವು; \q2 ಅವರು ತಪ್ಪಿಸಿಕೊಳ್ಳುವುದಿಲ್ಲ; \q2 ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.” \c 12 \s1 ಯೋಬನ ಉತ್ತರ \p \v 1 ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು: \q1 \v 2 “ನಿಸ್ಸಂದೇಹವಾಗಿ ನೀವೇ ಆ ಜನರು; \q2 ನಿಮ್ಮ ಸಂಗಡಲೇ ಜ್ಞಾನವು ಸಾಯುವುದು. \q1 \v 3 ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; \q2 ನಾನು ನಿಮಗಿಂತ ಕಡಿಮೆ ಇಲ್ಲ; \q2 ಇಂಥಾ ವಿಷಯಗಳನ್ನು ತಿಳಿಯದಿರುವವನು ಯಾರು? \b \q1 \v 4 “ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು; \q2 ನಾನು ದೇವರಿಗೆ ಪ್ರಾರ್ಥಿಸಿದೆ; \q2 ದೇವರು ನನಗೆ ಉತ್ತರಕೊಟ್ಟರು; \q1 \v 5 ಸುಖಜೀವಿಗಳಾಗಿರುವ ಜನರು ತೊಂದರೆಯಲ್ಲಿ ಇರುವವರನ್ನು ಅಪಹಾಸ್ಯ ಮಾಡುತ್ತಾರೆ, \q2 ಎಡವಿ ಬೀಳುವ ಜನರಿಗೆ ಕಾದಿದೆ ಆಪತ್ತು. \q1 \v 6 ಕಳ್ಳರ ಗುಡಾರಗಳು ವೃದ್ಧಿಯಾಗಿವೆ; \q2 ದೇವರನ್ನು ಕೆರಳಿಸುವವರು ನಿಶ್ಚಿಂತರಾಗಿದ್ದಾರೆ; \q2 ದೇವರೇ ತಮ್ಮ ಕೈಯಲ್ಲಿ ಇರುವುದಾಗಿ ತಿಳಿಯುತ್ತಾರೆ. \b \q1 \v 7 “ಆದರೂ ಮೃಗಗಳನ್ನು ಕೇಳು, ಅವು ನಿನಗೆ ಬೋಧಿಸುವುವು; \q2 ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವುವು. \q1 \v 8 ಭೂಮಿಯ ಸಂಗಡ ಮಾತನಾಡು, ಅದು ನಿನಗೆ ಬೋಧಿಸುವುದು, \q2 ಸಮುದ್ರದ ಮೀನುಗಳು ನಿನಗೆ ವಿವರಿಸುವುವು. \q1 \v 9 ಯೆಹೋವ ದೇವರ ಕೈ ಇವುಗಳನ್ನೆಲ್ಲಾ ಮಾಡಿತೆಂದು \q2 ಇವುಗಳಲ್ಲಿ ತಿಳಿಯದಿರುವುದು ಯಾವುದು? \q1 \v 10 ದೇವರ ಕೈಯಲ್ಲಿ ಎಲ್ಲಾ ಜೀವಿಗಳ ಪ್ರಾಣವೂ \q2 ಎಲ್ಲಾ ಮನುಷ್ಯರ ಶ್ವಾಸವೂ ಇವೆ. \q1 \v 11 ಬಾಯಿಯು ಆಹಾರವನ್ನು ರುಚಿ ನೋಡುವಂತೆ \q2 ಕಿವಿಯು ನುಡಿಗಳನ್ನು ವಿವೇಚಿಸುವುದಿಲ್ಲವೇ? \q1 \v 12 ಮುದುಕರಲ್ಲಿ ಜ್ಞಾನವು ಇರುವುದಿಲ್ಲವೋ? \q2 ದೀರ್ಘಾಯುಷ್ಯರಲ್ಲಿ ತಿಳುವಳಿಕೆಯನ್ನು ತರುವುದಿಲ್ಲವೋ? \b \q1 \v 13 “ಜ್ಞಾನವೂ, ಶಕ್ತಿಯೂ ದೇವರಲ್ಲಿವೆ; \q2 ಸಮಾಲೋಚನೆಯೂ, ಗ್ರಹಿಕೆಯೂ ದೇವರವೇ. \q1 \v 14 ದೇವರು ಕೆಡವಿದ್ದನ್ನು ತಿರುಗಿ ಕಟ್ಟಲಾಗುವುದಿಲ್ಲ; \q2 ದೇವರು ಸೆರೆಯಲ್ಲಿ ಹಾಕುವ ಮನುಷ್ಯನನ್ನು ಯಾರೂ ಬಿಡಿಸಲಾಗುವುದಿಲ್ಲ. \q1 \v 15 ದೇವರು ಮಳೆಯನ್ನು ತಡೆಹಿಡಿಯುತ್ತಾರೆ, ಭೂಮಿ ಒಣಗುತ್ತದೆ; \q2 ದೇವರು ನೀರನ್ನು ಬಿಟ್ಟರೆ, ಭೂಮಿಯನ್ನು ಹಾಳುಮಾಡುತ್ತದೆ. \q1 \v 16 ಬಲವೂ, ಜ್ಞಾನವೂ ದೇವರಲ್ಲಿವೆ; \q2 ವಂಚಕ ಹಾಗು ವಂಚಿತ ದೇವರಿಗೆ ಒಳಪಟ್ಟವರು. \q1 \v 17 ದೇವರು ಸಲಹೆಗಾರರನ್ನು ಸೆರೆಹಿಡಿಯುತ್ತಾರೆ; \q2 ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾರೆ. \q1 \v 18 ದೇವರು ಅರಸರಿಂದ ಹಾಕಲಾದ ಬಂಧನಗಳನ್ನು ಬಿಚ್ಚಿ, \q2 ಅವರ ನಡುಗಳಿಗೆ ವಸ್ತ್ರವನ್ನು ಕಟ್ಟುತ್ತಾರೆ. \q1 \v 19 ದೇವರು ಯಾಜಕರನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ; \q2 ಪ್ರಧಾನರನ್ನು ಕೆಡವಿಬಿಡುತ್ತಾರೆ. \q1 \v 20 ದೇವರು ವಿಶ್ವಾಸಾರ್ಹ ಸಲಹೆಗಾರರನ್ನು ಮೌನಗೊಳಿಸುತ್ತಾರೆ; \q2 ವೃದ್ಧರ ವಿವೇಚನೆಯನ್ನು ತೆಗೆದುಬಿಡುತ್ತಾರೆ. \q1 \v 21 ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾರೆ; \q2 ಬಲಿಷ್ಠರ ಬಲವನ್ನು ಸಡಿಲಿಸುತ್ತಾರೆ. \q1 \v 22 ದೇವರು ಕತ್ತಲೆಯೊಳಗಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾರೆ, \q2 ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾರೆ. \q1 \v 23 ದೇಶಗಳನ್ನು ಬೆಳೆಸುವುದೂ, ದಂಡಿಸುವುದೂ ದೇವರ ಕೈಯಲ್ಲಿದೆ; \q2 ದೇಶಗಳನ್ನು ವಿಸ್ತಾರಮಾಡುವುದೂ, ಚದರಿಸುವುದೂ ದೇವರ ಅಧಿಕಾರದಲ್ಲಿದೆ. \q1 \v 24 ದೇವರು ಭೂಮಿಯ ಮುಖ್ಯಸ್ಥರ ವಿವೇಚನೆಯನ್ನು ತೆಗೆದುಬಿಡುತ್ತಾರೆ; \q2 ಅಂಥವರು ಮಾರ್ಗವಿಲ್ಲದ ಅಲೆಯ ಮಾಡುವುದೂ ದೇವರಿಗೆ ಸಾಧ್ಯ. \q1 \v 25 ನಾಯಕರು ಬೆಳಕು ಇಲ್ಲದ ಕತ್ತಲೆಯಲ್ಲಿ ತಡಕಾಡುವಂತೆಯೂ \q2 ಅವರು ಮತ್ತೇರಿದವರಂತೆ ದಿಗ್ಭ್ರಮೆಗೊಳಿಸುವಂತೆಯೂ ಮಾಡಲು ದೇವರು ಶಕ್ತರು. \b \c 13 \q1 \v 1 “ಇಗೋ, ನನ್ನ ಕಣ್ಣು ಎಲ್ಲವನ್ನು ನೋಡಿದೆ; \q2 ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿದೆ. \q1 \v 2 ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದುಕೊಂಡಿದ್ದೇನೆ; \q2 ನಾನು ನಿಮಗಿಂತ ಕಡಿಮೆಯಾದವನಲ್ಲ. \q1 \v 3 ನಾನು ಸರ್ವಶಕ್ತರ ಸಂಗಡ ಖಂಡಿತವಾಗಿ ಮಾತನಾಡುವೆನು; \q2 ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು. \q1 \v 4 ಆದರೆ ನೀವು ಸುಳ್ಳನ್ನು ಕಲ್ಪಿಸುವವರು; \q2 ನೀವೆಲ್ಲರು ವ್ಯರ್ಥ ವೈದ್ಯರೇ. \q1 \v 5 ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು; \q2 ಮೌನವೇ ನಿಮಗೆ ಜ್ಞಾನವು. \q1 \v 6 ಈಗ ನನ್ನ ವಾದವನ್ನು ಕೇಳಿಸಿಕೊಳ್ಳಿರಿ; \q2 ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ. \q1 \v 7 ದೇವರ ಪರವಾಗಿ ಮಾತಾಡುವ ನೀವು ಅನ್ಯಾಯದಿಂದ ಮಾತಾಡುವಿರೋ? \q2 ದೇವರಿಗೋಸ್ಕರ ಮಾತಾಡುವ ನೀವು ವಂಚನೆಯಿಂದ ಮಾತಾಡುವಿರೋ? \q1 \v 8 ನೀವು ದೇವರಿಗೆ ಪಕ್ಷಪಾತವನ್ನು ತೋರಿಸುವಿರೋ? \q2 ದೇವರ ಪರವಾಗಿ ನೀವು ವಾದಿಸುವಿರೋ? \q1 \v 9 ದೇವರು ನಿಮ್ಮನ್ನು ಶೋಧಿಸಿದರೆ, ಅದು ನಿಮಗೆ ಒಳ್ಳೇದೋ? \q2 ಒಬ್ಬ ಮನುಷ್ಯನು ಇನ್ನೊಬ್ಬನನ್ನು ವಂಚಿಸುವ ಪ್ರಕಾರ, ನೀವೂ ದೇವರನ್ನು ವಂಚಿಸುವಿರೋ? \q1 \v 10 ನೀವು ರಹಸ್ಯವಾಗಿ ಪಕ್ಷಪಾತಮಾಡಿದರೂ, \q2 ದೇವರು ನಿಶ್ಚಯವಾಗಿಯೂ ನಿಮ್ಮನ್ನು ಖಂಡಿಸುವರು. \q1 \v 11 ದೇವರ ವೈಭವವು ನಿಮ್ಮನ್ನು ಹೆದರಿಸುವುದಿಲ್ಲವೋ? \q2 ದೈವಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ? \q1 \v 12 ನಿಮ್ಮ ನೀತಿವಚನಗಳು ಬೂದಿಯ ಗಾದೆಗಳು; \q2 ನಿಮ್ಮ ವಾದಗಳು ಬರೀ ಮಣ್ಣಿನ ಗೋಡೆಯೇ. \b \q1 \v 13 “ಸುಮ್ಮನಿರಿ, ನನ್ನನ್ನು ಮಾತನಾಡಲು ಬಿಡಿರಿ; \q2 ನನಗೇನಾದರೂ ಆಗಲಿ. \q1 \v 14 ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು; \q2 ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು. \q1 \v 15 ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; \q2 ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು. \q1 \v 16 ಇದೇ ನನ್ನ ಬಿಡುಗಡೆಗೆ ಕಾರಣವಾಗಿರುವುದು; \q2 ಭಕ್ತಿಹೀನರು ದೇವರ ಮುಂದೆ ಬರಲು ಧೈರ್ಯಮಾಡುವುದಿಲ್ಲ. \q1 \v 17 ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ \q2 ಮತ್ತು ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ. \q1 \v 18 ಇಗೋ, ನನ್ನ ನ್ಯಾಯವನ್ನು ಕ್ರಮಪಡಿಸಿದೆನು; \q2 ನಾನು ನೀತಿವಂತನೆಂದು ನಿರ್ಣಯ ಹೊಂದುವುದು ನನಗೆ ಗೊತ್ತೇ ಇದೆ. \q1 \v 19 ಯಾರಾದರೂ ನನ್ನ ವಿರುದ್ಧ ದೂರನ್ನು ತರಬಹುದೋ? \q2 ಹಾಗಿದ್ದರೆ ನಾನು ಮೌನವಾಗಿದ್ದು ಸತ್ತು ಹೋಗುವೆನು. \b \q1 \v 20 “ದೇವರೇ, ಈ ಎರಡು ಸಂಗತಿಗಳನ್ನು ಮಾತ್ರ ನನಗೆ ದಯಪಾಲಿಸಿರಿ; \q2 ಆಗ ನಿಮ್ಮಿಂದ ನಾನು ಅಡಗಿಕೊಳ್ಳುವುದಿಲ್ಲ: \q1 \v 21 ನಿಮ್ಮ ಕೈಯನ್ನು ನನ್ನಿಂದ ದೂರಮಾಡಿರಿ; \q2 ನಿಮ್ಮ ಭಯವು ನನ್ನನ್ನು ಹೆದರಿಸದಿರಲಿ. \q1 \v 22 ಆಮೇಲೆ ನೀವು ನನ್ನನ್ನು ಕರೆದರೆ, ನಾನು ಉತ್ತರಿಸುವೆನು; \q2 ಅಥವಾ ನಾನು ಮಾತಾಡಿದರೆ, ನೀವು ಉತ್ತರಕೊಡಿರಿ. \q1 \v 23 ನಾನು ಎಷ್ಟೋ ಅಕ್ರಮಗಳನ್ನೂ, ಪಾಪಗಳನ್ನೂ ಮಾಡಿದ್ದೇನೆ. \q2 ನನ್ನ ಅಪರಾಧವನ್ನೂ, ಪಾಪವನ್ನೂ ನನಗೆ ತೋರಿಸಿಕೊಡಿರಿ. \q1 \v 24 ಏಕೆ ನಿಮ್ಮ ಮುಖವನ್ನು ಮರೆಮಾಡುತ್ತೀರಿ? \q2 ನನ್ನನ್ನು ನಿಮ್ಮ ಶತ್ರುವಿನ ಹಾಗೆ ಏಕೆ ಭಾವಿಸುತ್ತೀರಿ? \q1 \v 25 ಗಾಳಿಯಿಂದ ಹಾರಿಹೋಗುವ ಎಲೆಯನ್ನು ತೊಂದರೆಪಡಿಸುವಿರೋ? \q2 ಒಣಗಿದ ಕೊಳೆಯನ್ನು ಬೆನ್ನಟ್ಟುವಿರೋ? \q1 \v 26 ಏಕೆಂದರೆ ನನಗೆ ವಿರೋಧವಾಗಿ ಕಹಿಯಾದ ತೀರ್ಪನ್ನು ನೀವು ಬರೆದಿರುವಿರಿ; \q2 ನನ್ನ ಯೌವನದ ಪಾಪಗಳನ್ನು ನನ್ನ ಮೇಲೆ ಹೊರಿಸಿರುವಿರಿ. \q1 \v 27 ನನ್ನ ಪಾದಗಳನ್ನು ಸಂಕೋಲೆಗಳಿಂದ ಕಟ್ಟಿಹಾಕಿದ್ದೀರಿ, \q2 ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕಿದ್ದೀರಿ; \q2 ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡುತ್ತೀರಿ. \b \q1 \v 28 “ಆದ್ದರಿಂದ ಮಾನವನು ಕೊಳೆತ ವಸ್ತುವಿನಂತೆಯೂ, \q2 ನುಸಿಹಿಡಿದ ಬಟ್ಟೆಯಂತೆಯೂ ಅಳಿದು ಹೋಗುತ್ತಾನೆ. \b \c 14 \q1 \v 1 “ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನೂ, \q2 ಕಷ್ಟಸಂಕಟಗಳಿಂದ ತುಂಬಿದವನೂ ಆಗಿದ್ದಾನೆ. \q1 \v 2 ಅವನು ಹೂವಿನ ಹಾಗೆ ಅರಳಿ ಬಾಡುವನು; \q2 ಅವನು ನೆರಳಿನಂತೆ ಓಡಿಹೋಗುತ್ತಾನೆ, ಶಾಶ್ವತವಾಗಿರುವದಿಲ್ಲ. \q1 \v 3 ಹಾಗಾದರೆ ಇಂಥವನ ಮೇಲೆ ದೇವರೇ, ನೀವು ನಿಮ್ಮ ಕಣ್ಣಿಟ್ಟೀದೀರಲ್ಲಾ? \q2 ನಿಮ್ಮ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುತ್ತೀರೋ? \q1 \v 4 ಅಶುದ್ಧತೆಯಿಂದ ಶುದ್ಧವಾದದ್ದನ್ನು ತರುವವನು ಯಾರು? \q2 ಯಾರೂ ತರಲಾರರು! \q1 \v 5 ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ; \q2 ಅವನ ತಿಂಗಳುಗಳ ಲೆಕ್ಕ ದೇವರೇ ನಿಮ್ಮ ಬಳಿಯಲ್ಲಿ ಇದೆ; \q2 ಅವನು ದಾಟಲಾರದ ಹಾಗೆ ಅವನಿಗೆ ಮೇರೆಗಳನ್ನು ನೇಮಿಸಿದ್ದೀರಿ. \q1 \v 6 ಆದ್ದರಿಂದ ಅವನು ವಿಶ್ರಾಂತಿ ಪಡೆಯಲೆಂದು \q2 ನಿಮ್ಮ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸಿಬಿಡಿರಿ; \q2 ಅವನು ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ. \b \q1 \v 7 “ಮರಕ್ಕೆ ಸಹ ಒಂದು ನಿರೀಕ್ಷೆ ಇದೆ: \q2 ಅದೇನೆಂದರೆ, ಮರವನ್ನು ಕಡಿದು ಹಾಕಿದರೂ \q1 ತಾನು ಮತ್ತೆ ಚಿಗುರುವೆನೆಂಬ ನಿರೀಕ್ಷೆ ಅದಕ್ಕಿದೆ; \q2 ಚಿಗುರುವುದನ್ನು ಆ ಮರವು ನಿಲ್ಲಿಸುವುದೇ ಇಲ್ಲ. \q1 \v 8 ಅದರ ಬೇರು ಭೂಮಿಯಲ್ಲಿ ಹಳೆಯದಾದರೂ, \q2 ನೆಲದಲ್ಲಿ ಅದರ ಬುಡ ಸತ್ತಿದ್ದರೂ, \q1 \v 9 ನೀರಿನ ವಾಸನೆಯಿಂದ ಅದು ಮೊಳೆತು, \q2 ಗಿಡದ ಹಾಗೆ ಅದು ಕೊಂಬೆಗಳನ್ನು ಬಿಡುವುದು. \q1 \v 10 ಆದರೆ ಮನುಷ್ಯನು ಸತ್ತು ಬಿದ್ದಿರುತ್ತಾನೆ; \q2 ಅವನು ಕೊನೆಯುಸಿರೆಳೆದಾಗ ಅವನ ಅಂತ್ಯವಾಗುತ್ತದೆ. \q1 \v 11 ಸರೋವರದ ನೀರು ಒಣಗಿ ಹೋಗುವಂತೆಯೂ, \q2 ಬರಗಾಲದಲ್ಲಿ ನದಿಗಳು ಬತ್ತಿಹೋಗುವಂತೆಯೂ, \q1 \v 12 ಮನುಷ್ಯನು ಸತ್ತು ಮಲಗಿದರೆ ಏಳುವುದೇ ಇಲ್ಲ; \q2 ಆಕಾಶಗಳು ಅಳಿದು ಹೋಗುವವರೆಗೆ ಅವನು ಎಚ್ಚರಗೊಳ್ಳುವುದಿಲ್ಲ; \q2 ನಿದ್ರೆಯಿಂದ ಎಬ್ಬಿಸಲಾಗುವುದೂ ಇಲ್ಲ. \b \q1 \v 13 “ದೇವರೇ, ನೀವು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, \q2 ನಿಮ್ಮ ಶಿಕ್ಷೆ ಮುಗಿಯುವವರೆಗೂ ನನ್ನನ್ನು ಅಡಗಿಸಿರಿ! \q1 ನೀವು ನನಗೆ ಒಂದು ಕಾಲವನ್ನು ನಿಗದಿಪಡಿಸಿ, \q2 ಅನಂತರ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು! \q1 \v 14 ಒಬ್ಬ ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? \q2 ಆದರೂ ನನಗೆ ನೇಮಕ ಮಾಡಿದ ಪರಿಶ್ರಮದ ದಿನವೆಲ್ಲಾ, \q2 ನನಗೆ ಬಿಡುಗಡೆಯಾಗುವವರೆಗೆ ನಾನು ಕಾದುಕೊಂಡಿರುವೆನು. \q1 \v 15 ದೇವರೇ, ನೀವು ನನ್ನನ್ನು ಕರೆಯುವಿರಿ, ನಾನು ನಿಮಗೆ ಉತ್ತರಕೊಡುವೆನು; \q2 ನಿಮ್ಮ ಈ ಸೃಷ್ಟಿಯ ಮೇಲೆ ನೀವು ಹಂಬಲಿಸುವಿರಿ. \q1 \v 16 ಆಗ ನೀವು ನನ್ನ ಹೆಜ್ಜೆಗಳನ್ನು ಲೆಕ್ಕಿಸುವಿರಿ; \q2 ಆದರೆ ನೀವು ನನ್ನ ಪಾಪದ ಬಗ್ಗೆ ದಾಖಲೆ ಇಡುವುದಿಲ್ಲ. \q1 \v 17 ನನ್ನ ಅಪರಾಧಗಳನ್ನು ಮೂಟೆಕಟ್ಟಿ ಮುದ್ರೆ ಹಾಕಿಬಿಡುವಿರಿ; \q2 ನೀವು ನನ್ನ ಅನ್ಯಾಯವನ್ನು ಮರೆಮಾಡುವಿರಿ. \b \q1 \v 18 “ಆದರೂ ಬೆಟ್ಟವು ಬಿದ್ದು ಹಾಳಾಗುವಂತೆಯೂ, \q2 ಬಂಡೆಯು ತನ್ನ ಸ್ಥಳದಿಂದ ತೊಲಗುವಂತೆಯೂ, \q1 \v 19 ನೀರು ಕಲ್ಲುಗಳನ್ನು ಸವೆಯಿಸುವಂತೆಯೂ, \q2 ಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವಂತೆಯೂ, \q2 ಮನುಷ್ಯನ ನಿರೀಕ್ಷೆಯನ್ನು ನೀವು ನಾಶಮಾಡುತ್ತೀರಿ. \q1 \v 20 ನೀವು ಅವನ ಮೇಲೆ ಶಾಶ್ವತವಾಗಿ ಮೇಲುಗೈ ಸಾಧಿಸಿರುವದರಿಂದ ಅವನು ಹೊರಟು ಹೋಗುವನು; \q2 ನೀವು ಅವನ ಮುಖಭಾವವನ್ನು ಮಾರ್ಪಡಿಸಿ, ಅವನನ್ನು ಕಳುಹಿಸಿಬಿಡುತ್ತೀರಿ. \q1 \v 21 ಮಕ್ಕಳು ಘನತೆಯನ್ನು ಹೊಂದಿದರೆ, ಅದು ಸತ್ತವರಿಗೆ ತಿಳಿಯುವುದಿಲ್ಲ; \q2 ಅವರ ಮಕ್ಕಳು ಕಡಿಮೆ ಸ್ಥಿತಿಗೆ ಬಂದರೆ ಸಹ, ಅದನ್ನು ಸತ್ತವರು ಗ್ರಹಿಸಿಕೊಳ್ಳುವುದಿಲ್ಲ. \q1 \v 22 ಆದರೆ ಸತ್ತವರು ತಮ್ಮ ದೇಹದ ನೋವನ್ನು ಅನುಭವಿಸುವರು, \q2 ಅವರ ಆತ್ಮವು ಅವರಿಗಾಗಿ ಮಾತ್ರ ಪ್ರಲಾಪಿಸುತ್ತಿರುವುದು.” \c 15 \s1 ಎಲೀಫಜನ ಪ್ರತಿವಾದ \p \v 1 ಆಗ ತೇಮಾನ್ಯನಾದ ಎಲೀಫಜನು ಹೀಗೆಂದನು: \q1 \v 2 “ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು \q2 ಪೂರ್ವದಿಕ್ಕಿನ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವುದು ಉಂಟೋ? \q1 \v 3 ನಿಷ್ಪ್ರಯೋಜಕವಾದ ನುಡಿಗಳಿಂದಲೂ, \q2 ಕೆಲಸಕ್ಕೆ ಬಾರದ ಮಾತುಗಳಿಂದಲೂ ಜ್ಞಾನಿಯು ವಾದಿಸುವನೋ? \q1 \v 4 ನೀನಾದರೋ ದೇವರ ಭಯಭಕ್ತಿಯನ್ನು ಹಾಳುಮಾಡುತ್ತಿರುವೆ. \q2 ದೇವರ ಮೇಲಿನ ಭಕ್ತಿಯನ್ನು ಕಡಿಮೆ ಮಾಡುತ್ತಿರುವೆ. \q1 \v 5 ಏಕೆಂದರೆ ನಿನ್ನ ಪಾಪವೇ ನಿನ್ನ ಬಾಯಿಯನ್ನು ಪ್ರೇರೇಪಿಸುತ್ತದೆ; \q2 ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆಯ್ದುಕೊಳ್ಳುತ್ತಿರುವೆ. \q1 \v 6 ನಾನಲ್ಲ, ನಿನ್ನ ಬಾಯಿಯೇ ನಿನ್ನನ್ನು ಖಂಡಿಸುತ್ತದೆ; \q2 ಹೌದು, ನಿನ್ನ ತುಟಿಗಳೇ ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. \b \q1 \v 7 “ನೀನು ಮೊದಲು ಹುಟ್ಟಿದ ಪುರುಷನೋ? \q2 ಬೆಟ್ಟಗಳಿಗೆ ಮುಂಚಿತವಾಗಿ ಹುಟ್ಟಿದವನೋ? \q1 \v 8 ನೀನು ದೇವರ ಆಲೋಚನಾ ಸಭೆಯಲ್ಲಿ ಸದಸ್ಯನೋ? \q2 ಜ್ಞಾನವು ನಿನಗೆ ಮಾತ್ರ ಮೀಸಲೋ? \q1 \v 9 ನಮಗೆ ತಿಳಿಯದೆ ಇರುವುದನ್ನು ನೀನು ಏನು ತಿಳಿದುಕೊಂಡಿರುವೆ? \q2 ನಮ್ಮಲ್ಲಿ ಇಲ್ಲದ ಯಾವ ಒಳನೋಟವನ್ನು ನೀನು ಅರ್ಥಮಾಡಿಕೊಂಡಿರುವೆ? \q1 \v 10 ತಲೆ ನರೆತವರೂ, ಹೆಚ್ಚು ಮುದುಕರಾದವರೂ, \q2 ನಿನ್ನ ತಂದೆಗಿಂತ ವೃದ್ಧರಾದವರೂ ನಮ್ಮಲ್ಲಿ ಇದ್ದಾರೆ. \q1 \v 11 ದೇವರ ಸಂತೈಸುವಿಕೆಗಳೂ \q2 ಮೃದುವಾದ ಹಿತವಚನಗಳು ನಿನಗೆ ಸಾಕಾಗಿರುವುದಿಲ್ಲವೋ? \q1 \v 12 ನಿನ್ನ ಹೃದಯವು ನಿನ್ನನ್ನು ಸೆಳೆದಿರುವುದು ಏಕೆ? \q2 ಏಕೆ ನಿನ್ನ ಕಣ್ಣು ಕಿಡಿಕಾರುತ್ತಿದೆ? \q1 \v 13 ನೀನು ದೇವರ ವಿರುದ್ಧ ನಿನ್ನ ಕೋಪವನ್ನು ಹೊರಹಾಕುತ್ತಿರುವೆ? \q2 ನಿನ್ನ ಬಾಯಿಂದ ಕೋಪದ ಮಾತುಗಳನ್ನು ಹೊರಡಿಸುತ್ತೀಯಲ್ಲಾ? \b \q1 \v 14 “ಮನುಷ್ಯನು ಎಷ್ಟರವನು? ಅವನು ಶುದ್ಧನಿರಲು ಸಾಧ್ಯವೇ? \q2 ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ? \q1 \v 15 ದೇವರು ತಮ್ಮ ಪರಿಶುದ್ಧರನ್ನು ಆತುಕೊಂಡಿರುವುದಿಲ್ಲ; \q2 ಆಕಾಶಗಳೂ ದೇವರ ದೃಷ್ಟಿಯಲ್ಲಿ ಶುದ್ಧವಲ್ಲ. \q1 \v 16 ಹಾಗಿರುವಾಗ, ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು, \q2 ದೇವರ ದೃಷ್ಟಿಯಲ್ಲಿ ಎಷ್ಟು ಅಲ್ಪನೂ ಅಶುದ್ಧನೂ ಆಗಿದ್ದಾನಲ್ಲವೇ? \b \q1 \v 17 “ಕೇಳು, ನಾನು ನಿನಗೆ ವಿವರಿಸುತ್ತೇನೆ, \q2 ನಾನು ನೋಡಿದ್ದನ್ನು ನಿನಗೆ ಹೇಳುತ್ತೇನೆ, \q1 \v 18 ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನ್ನೇ \q2 ಮರೆಮಾಡದೆ ನಮಗೆ ಪ್ರಕಟಿಸಿದರು. \q1 \v 19 ಅವರಿಗೆ ದೇಶವು ಕೊಡಲಾಗಿತ್ತು; \q2 ಅವರ ಮಧ್ಯದಲ್ಲಿ ಅಂದು ಪರದೇಶೀಯರು ಹಾದುಹೋಗುವಂತಿರಲಿಲ್ಲ. \q1 \v 20 ಜ್ಞಾನಿಗಳು ಹೇಳಿದ್ದೇನೆಂದರೆ: ದುಷ್ಟನು ತನ್ನ ಜೀವಮಾನವೆಲ್ಲಾ ವೇದನೆಪಡುತ್ತಾನೆ; \q2 ನಿರ್ದಯನು ತನ್ನ ವರ್ಷಗಳೆಲ್ಲ ತೊಂದರೆಗಳನ್ನು ಸಂಗ್ರಹಿಸುತ್ತಾನೆ. \q1 \v 21 ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; \q2 ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ. \q1 \v 22 ಕತ್ತಲೆಯೊಳಗಿಂದ ಪಾರಾಗುತ್ತೇನೆಂದು ದುಷ್ಟನು ನಂಬುವುದಿಲ್ಲ; \q2 ಅವನ ಖಡ್ಗವು ಅವನಿಗಾಗಿ ಕಾದಿದೆ. \q1 \v 23 ಅವನು ಆಹಾರ ಎಲ್ಲಿ ಎಂದು ರಣಹದ್ದಿನ ಹಾಗೆ ಅಲೆಯುತ್ತಾನೆ; \q2 ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ. \q1 \v 24 ಇಕ್ಕಟ್ಟೂ, ಸಂಕಟವೂ ಅವನನ್ನು ಹೆದರಿಸಿ, \q2 ಆಕ್ರಮಣ ಮಾಡಲು ಸಿದ್ಧನಾದ ರಾಜನಂತೆ ತೊಂದರೆಗಳು ಅವನನ್ನು ಆವರಿಸುತ್ತವೆ, \q1 \v 25 ಏಕೆಂದರೆ ದುಷ್ಟನು ದೇವರಿಗೆ ವಿರೋಧವಾಗಿ ಮುಷ್ಠಿ ತೋರಿಸಿದನಲ್ಲಾ, \q2 ಸರ್ವಶಕ್ತರ ಎದುರು ನಿಂತು ಶೂರನಂತೆ ಮೆರೆದನಲ್ಲಾ. \q1 \v 26 ದೇವರ ವಿರೋಧವಾಗಿ ಬಲವುಳ್ಳ ದೊಡ್ಡ \q2 ಗುರಾಣಿಯೊಂದಿಗೆ ಓಡುತ್ತಾನೆ. \b \q1 \v 27 “ದುಷ್ಟನು ತನ್ನ ಮುಖದಲ್ಲಿ ಕೊಬ್ಬೇರಿಸಿಕೊಂಡು, \q2 ತನ್ನ ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದಾನೆ. \q1 \v 28 ಹಾಳಾದ ಪಟ್ಟಣಗಳಲ್ಲಿಯೂ, \q2 ಯಾರೂ ವಾಸಿಸದ, \q2 ಕುಸಿಯಲು ಸಿದ್ಧವಾದಂಥ ಮನೆಗಳಲ್ಲಿಯೂ ವಾಸಮಾಡಿಕೊಂಡಿದ್ದಾನೆ. \q1 \v 29 ದುಷ್ಟನು ಐಶ್ವರ್ಯವಂತನಾಗುವುದಿಲ್ಲ; ಆದರೂ ಅವನ ಆಸ್ತಿಯು ಸ್ಥಿರವಲ್ಲ; \q2 ಅವನ ಸೊತ್ತು ಭೂಮಿಯ ಮೇಲೆ ವಿಸ್ತಾರವಾಗುವುದಿಲ್ಲ. \q1 \v 30 ಕತ್ತಲೆಯೊಳಗಿಂದ ಅವನು ಪಾರಾಗುವದಿಲ್ಲ; \q2 ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು; \q2 ದೇವರ ಬಾಯಿಯ ಶ್ವಾಸದಿಂದ ಅವನು ತೊಲಗಿ ಹೋಗುವನು. \q1 \v 31 ದುಷ್ಟನು ವ್ಯರ್ಥವಾದದ್ದನ್ನು ನಂಬಿ ಮೋಸಹೋಗದಿರಲಿ. \q2 ಏಕೆಂದರೆ, ವ್ಯರ್ಥವಾದವುಗಳಿಂದ ಅವನಿಗಾಗುವ ಪ್ರತಿಫಲವು ಶೂನ್ಯವೇ. \q1 \v 32 ದುಷ್ಟನು ತನ್ನ ಸಮಯಕ್ಕಿಂತ ಮೊದಲು ಬತ್ತಿ ಹೋಗುವನು; \q2 ಅವನ ಕೊಂಬೆಯು ಹಸಿರಾಗಿರುವುದಿಲ್ಲ. \q1 \v 33 ದ್ರಾಕ್ಷೆಯ ಬಳ್ಳಿಯಂತೆ ಅವನು ತನ್ನ ಮಾಗದ ಫಲವನ್ನು ಹಾಳುಮಾಡಿಕೊಳ್ಳುವನು; \q2 ದುಷ್ಟನು ಹೂವುಗಳನ್ನು ಉದುರಿಸುವ ಓಲಿವ್ ಎಣ್ಣೆಯ ಮರದ ಹಾಗೆ ಇರುವನು. \q1 \v 34 ದೇವರಿಲ್ಲದವರ ಸಹವಾಸ ಬಂಜರು, \q2 ಬೆಂಕಿಯು ಲಂಚಕೋರರ ಮನೆಗಳನ್ನು ಸುಟ್ಟುಹಾಕುವುದು. \q1 \v 35 ಅವರು ಹಿಂಸೆಯನ್ನು ಗರ್ಭಧರಿಸಿ, ಕೆಟ್ಟದ್ದನ್ನು ಹೆರುವರು; \q2 ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.” \c 16 \s1 ಯೋಬನ ಉತ್ತರ \p \v 1 ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ: \q1 \v 2 “ನಾನು ಇವುಗಳ ಹಾಗೆ ಅನೇಕ ಮಾತುಗಳನ್ನು ಕೇಳಿದ್ದೇನೆ; \q2 ನೀವೆಲ್ಲರೂ ಆದರಣೆ ಕೊಡುವವರಲ್ಲ, ಬಾಧಿಸುವವರೇ. \q1 \v 3 ನಿಮ್ಮ ವ್ಯರ್ಥ ಮಾತುಗಳಿಗೆ ಅಂತ್ಯ ಇಲ್ಲವೋ? \q2 ನನ್ನೊಂದಿಗೆ ವಾದಿಸಲು ನಿಮ್ಮನ್ನು ಒತ್ತಾಯಪಡಿಸಿದ್ದೇನು? \q1 \v 4 ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ, \q2 ನಾನು ಸಹ ನಿಮ್ಮ ಹಾಗೆ ಮಾತಾಡುತ್ತಿದ್ದೆ; \q1 ನಾನು ನಿಮ್ಮ ವಿರುದ್ಧ ಪದಪ್ರಯೋಗಿಸಿ ಮಾತಾಡಬಹುದಾಗಿತ್ತು; \q2 ಹೌದು, ನಿಮ್ಮ ವಿಷಯದಲ್ಲಿ ಗೇಲಿ ಮಾಡುತ್ತಾ, ನಾನು ನನ್ನ ತಲೆಯಾಡಿಸಬಹುದಾಗಿತ್ತು. \q1 \v 5 ಆದರೆ, ನಾನು ನನ್ನ ಬಾಯಿಮಾತಿನಿಂದ ನಿಮ್ಮನ್ನು ಪ್ರೋತ್ಸಾಹಿಸುವೆನು; \q2 ನನ್ನ ಆದರಣೆಯ ಮಾತುಗಳು ನಿಮಗೆ ಉಪಶಮನ ಮಾಡುವುದು. \b \q1 \v 6 “ನಾನು ಮಾತನಾಡಿದರೂ ನನ್ನ ನೋವಿಗೆ ಉಪಶಮನವಾಗುವುದಿಲ್ಲ; \q2 ನಾನು ಮೌನವಾಗಿದ್ದರೂ, ನನ್ನ ನೋವು ನಿವಾರಣೆಯಾಗುವುದಿಲ್ಲ. \q1 \v 7 ದೇವರೇ, ನೀವು ನನ್ನನ್ನು ಬಲಹೀನಪಡಿಸಿದ್ದೀರಿ; \q2 ನೀವು ನನ್ನ ಕುಟುಂಬದವರನ್ನೆಲ್ಲಾ ಇಲ್ಲದಂತೆ ಮಾಡಿದ್ದೀರಿ. \q1 \v 8 ನೀವು ನನ್ನ ಮುಖವೆಲ್ಲಾ ಸುಕ್ಕುಗಳಿಂದ ತುಂಬಿಸಿದ್ದೀರಿ; \q2 ನನ್ನ ಬಿಕ್ಕಟ್ಟೇ ನನಗೆ ವಿರೋಧವಾಗಿ ಎದ್ದು ಸಾಕ್ಷಿ ಕೊಡುತ್ತವೆ; \q1 \v 9 ದೇವರು ತಮ್ಮ ಬೇಸರದಲ್ಲಿ ನನ್ನನ್ನು ದಂಡಿಸಿದ್ದಾರೆ; \q2 ನನ್ನ ದೇವರು ನನ್ನ ಮೇಲೆ ಅತೃಪ್ತರಾಗಿದ್ದಾರೆ; \q2 ನನ್ನ ವೈರಿಯು ನನ್ನನ್ನು ದ್ವೇಷದಿಂದ ನೋಡುತ್ತಿದ್ದಾನೆ. \q1 \v 10 ನನ್ನ ಮೇಲೆ ಜನರು ತಮ್ಮ ಬಾಯಿ ಕಿಸಿಯುತ್ತಾರೆ; \q2 ನಿಂದಿಸಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ, \q2 ನನಗೆ ವಿರೋಧವಾಗಿ ಕೂಡಿಕೊಳ್ಳುತ್ತಾರೆ. \q1 \v 11 ದೇವರು ನನ್ನನ್ನು ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾರೆ; \q2 ಹೌದು, ದುಷ್ಟರ ಕೈಗೆ ನನ್ನನ್ನು ಎಸೆದುಬಿಟ್ಟಿದ್ದಾರೆ. \q1 \v 12 ನಾನು ನೆಮ್ಮದಿಯಿಂದ ಇದ್ದಾಗ ದೇವರು ನನ್ನನ್ನು ಚದರಿಸಿದ್ದಾರೆ; \q2 ನಾನು ಮಡಕೆ ಒಡೆದುಬಿದ್ದಂತೆ ಇದ್ದೇನೆ. \q1 ನನ್ನನ್ನು ತಮಗೆ ಗುರಿ ಹಲಗೆಯಾಗಿ ನಿಲ್ಲಿಸಿಕೊಂಡಿದ್ದಾರೆ. \q2 \v 13 ದೇವರ ಬಾಣಗಳು ನನ್ನನ್ನು ಸುತ್ತುವರಿದಿವೆ; \q1 ನಾನು ಕರುಣೆಯಿಲ್ಲದೆ ನೆಲದ ಮೇಲೆ ಪಿತ್ತವನ್ನು ಸುರಿದು ಬಿದ್ದವನಂತೆ ಇದ್ದೇನೆ. \q2 ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾರೆ. \q1 \v 14 ದೇವರು ಮತ್ತೆ ಮತ್ತೆ ನನ್ನನ್ನು ಮುರಿಯುತ್ತಿದ್ದಾರೆ; \q2 ಅದು ಶೂರನು ಓಡಿಬಂದು ನನ್ನ ಮೇಲೆ ದಾಳಿಮಾಡಿದಂತಿದೆ. \b \q1 \v 15 “ನಾನು ಗೋಣಿತಟ್ಟು ಹೊಲಿದು ನನ್ನ ಮೈಮೇಲೆ ಹಾಕಿಕೊಂಡಿದ್ದೇನೆ; \q2 ನನ್ನ ಗೌರವವನ್ನು ಧೂಳಿನಲ್ಲಿ ಮರೆಮಾಡಿದ್ದೇನೆ. \q1 \v 16 ನನ್ನ ಮುಖವು ಅಳುವುದರಿಂದ ಕೆಂಪಾಯಿತು; \q2 ನನ್ನ ರೆಪ್ಪೆಗಳ ಮೇಲೆ ಮರಣದ ಅಂಧಕಾರವು ಕವಿದಿದೆ. \q1 \v 17 ಆದರೂ ನನ್ನ ಕೈಗಳಲ್ಲಿ ಹಿಂಸಾಚಾರವಿಲ್ಲ; \q2 ನನ್ನ ಪ್ರಾರ್ಥನೆಯು ಶುದ್ಧವಾಗಿದೆ. \b \q1 \v 18 “ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ, \q2 ನನ್ನ ಕೂಗು ವಿಶ್ರಾಂತಿ ಹೊಂದದಿರಲಿ! \q1 \v 19 ಈಗಲೂ ಪರಲೋಕದಲ್ಲಿ ನನಗೆ ಒಬ್ಬ ಸಾಕ್ಷಿ ಇದ್ದಾರೆ; \q2 ಹೌದು, ನನ್ನ ವಕೀಲರು ಉನ್ನತದಲ್ಲಿದ್ದಾರೆ. \q1 \v 20 ಆದರೆ ನನ್ನ ಮಿತ್ರ ನನಗಾಗಿ ವಿಜ್ಞಾಪನೆಮಾಡುತ್ತಿದ್ದಾರೆ; \q2 ನನ್ನ ಕಣ್ಣುಗಳು ದೇವರ ಮುಂದೆ ಕಣ್ಣೀರು ಸುರಿಸುತ್ತವೆ. \q1 \v 21 ಒಬ್ಬ ಮನುಷ್ಯನು ತನ್ನ ಮಿತ್ರನಿಗೋಸ್ಕರ ಬೇಡಿಕೊಳ್ಳುವಂತೆ, \q2 ಅವರು ಸಹ ಮನುಷ್ಯನಿಗಾಗಿ ದೇವರ ಮುಂದೆ ವಾದಿಸುತ್ತಿದ್ದಾರೆ. \b \q1 \v 22 “ನಾನು ಹಿಂದಿರುಗಿ ಬಾರದ ದಾರಿಯನ್ನು ಹಿಡಿಯಲು, \q2 ಇನ್ನೂ ಕೆಲವೇ ವರ್ಷಗಳು ಉಳಿದಿವೆ. \c 17 \q1 \v 1 ನನ್ನ ಆತ್ಮ ಮುರಿದುಹೋಗಿದೆ; \q2 ನನ್ನ ದಿನಗಳು ಮುಗಿದಿವೆ; \q2 ಸಮಾಧಿ ನನಗೆ ಸಿದ್ಧವಾಗಿದೆ. \q1 \v 2 ಅಪಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರೆ; \q2 ಅವರ ಹಗೆತನದ ಬಗ್ಗೆ ನಾನು ಎಚ್ಚರವಾಗಿರಬೇಕು. \b \q1 \v 3 “ದೇವರೇ, ನೀವು ಹಕ್ಕಾಗಿ ಕೇಳುವ ಈಡನ್ನು ನೀವೇ ನನಗೆ ಕೊಡಿರಿ; \q2 ನಿಮ್ಮನ್ನು ಬಿಟ್ಟು ಯಾರು ನನಗೆ ಭದ್ರತೆಯನ್ನು ಕೊಡುವವರು? \q1 \v 4 ತಿಳುವಳಿಕೆ ಪ್ರವೇಶಿಸದಂತೆ ನೀವು ನನ್ನ ಸ್ನೇಹಿತರ ಮನಸ್ಸನ್ನು ಮುಚ್ಚಿರುವಿರಿ; \q2 ಆದ್ದರಿಂದ ನೀವು ಅವರನ್ನು ಜಯಿಸುವುದಕ್ಕೆ ಬಿಡುವುದಿಲ್ಲ. \q1 \v 5 ಯಾರು ಸ್ವಂತ ಲಾಭಕ್ಕಾಗಿ ಸ್ನೇಹಿತರಿಗೆ ದ್ರೋಹ ಮಾಡುತ್ತಾರೋ, \q2 ಅಂಥವರ ಮಕ್ಕಳ ಕಣ್ಣುಗಳು ಮಂಕಾಗಿಬಿಡುವುದು. \b \q1 \v 6 “ದೇವರು ನನ್ನನ್ನು ಜನರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾರೆ; \q2 ನನ್ನನ್ನು ಕಾಣುವವರು ನನ್ನ ಮುಖಕ್ಕೆ ಉಗುಳುವಂತೆ ಮಾಡಿದ್ದಾರೆ. \q1 \v 7 ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ; \q2 ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಇವೆ. \q1 \v 8 ಪ್ರಾಮಾಣಿಕರು ಇದನ್ನು ನೋಡಿ ಬೆರಗಾಗಿದ್ದಾರೆ; \q2 ನಿರಪರಾಧಿಯು ಭಕ್ತಿಹೀನರ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ. \q1 \v 9 ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; \q2 ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು. \b \q1 \v 10 “ಆದರೆ ನೀವೆಲ್ಲರೂ ಬಂದು ಮತ್ತೆ ವಾದ ಮಾಡಲು ಪ್ರಯತ್ನಿಸಿರಿ! \q2 ನಿಮ್ಮಲ್ಲಿ ನಾನು ಒಬ್ಬ ಜ್ಞಾನಿಯನ್ನು ಸಹ ಕಂಡುಕೊಳ್ಳಲಿಲ್ಲ. \q1 \v 11 ನನ್ನ ದಿನಗಳು ಮುಗಿದು ಹೋದವು; \q2 ನನ್ನ ಹೃದಯದ ಬಯಕೆಯಾಗಿರುವ ನನ್ನ ಉದ್ದೇಶಗಳು ಭಂಗವಾದವು. \q1 \v 12 ನನ್ನ ಸ್ನೇಹಿತರು ರಾತ್ರಿಯನ್ನು ಹಗಲು ಎಂದು ಸಾಧಿಸುತ್ತಾರೆ; \q2 ಕತ್ತಲಿಂದ ಬೆಳಕು ಬೇಗ ಬರಲಿದೆ ಎನ್ನುತ್ತಾರೆ. \q1 \v 13 ಸಮಾಧಿಯೇ ನನ್ನ ಮನೆಯೆಂದು ನಾನು ನಿರೀಕ್ಷಿಸಿದರೆ, \q2 ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿಕೊಂಡರೆ, \q1 \v 14 ಸಮಾಧಿಗೆ, ‘ನೀನು ನನ್ನ ತಂದೆ’ ಎಂದೂ, \q2 ಹುಳಕ್ಕೆ, ‘ನನ್ನ ತಾಯಿ, ನನ್ನ ತಂಗಿ’ ಎಂದೂ ನಾನು ಕರೆಯುವುದಾದರೆ, \q1 \v 15 ನನ್ನ ನಿರೀಕ್ಷೆ ಎಲ್ಲಿ? \q2 ನನ್ನ ನಿರೀಕ್ಷೆಯನ್ನು ಯಾರು ನೋಡುವರು? \q1 \v 16 ನಿರೀಕ್ಷೆಯು ನನ್ನ ಸಂಗಡ ಪಾತಾಳಕ್ಕೆ ಇಳಿದು ಬರುವುದೇ? \q2 ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?” \c 18 \s1 ಬಿಲ್ದದನ ವಾದ \p \v 1 ಆಗ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೀಗೆಂದನು: \q1 \v 2 “ಯೋಬನೇ, ಈ ಮಾತುಗಳನ್ನು ನೀನು ಯಾವಾಗ ಕೊನೆಗೊಳಿಸುತ್ತೀ? \q2 ವಿವೇಕಿಯಾಗು, ಆಮೇಲೆ ಮಾತನಾಡೋಣ. \q1 \v 3 ನಮ್ಮನ್ನು ಮೃಗಗಳೆಂದು ಎಣಿಸಿರುವೆಯಾ? \q2 ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ? \q1 \v 4 ಕೋಪದಿಂದ ನಿನ್ನನ್ನು ನೀನೇ ಸೀಳಿಕೊಳ್ಳುವೆಯಾ? \q2 ನಿನ್ನ ನಿಮಿತ್ತ ಭೂಮಿ ಹಾಳಾಗಬೇಕೋ? \q2 ಬಂಡೆಯು ತನ್ನ ಸ್ಥಳದಿಂದ ತೊಲಗಬೇಕೋ? \b \q1 \v 5 “ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿಹೋಗುವುದು; \q2 ಅವನ ಬಾಳಿನ ಬೆಂಕಿಯ ಜ್ವಾಲೆಯು ಉರಿಯದೆ ಹೋಗುವುದು. \q1 \v 6 ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು; \q2 ಅವನ ಮೇಲಣ ತೂಗು ದೀಪವು ಆರಿಹೋಗುವುದು. \q1 \v 7 ಅವನ ಬಲವುಳ್ಳ ಹೆಜ್ಜೆಗಳು ದುರ್ಬಲಗೊಳ್ಳುವುದು; \q2 ಅವನ ಯೋಜನೆಗಳೇ ಅವನನ್ನು ಕೆಡವಿಹಾಕುವವು. \q1 \v 8 ಏಕೆಂದರೆ ದುಷ್ಟನು ತನ್ನ ಹೆಜ್ಜೆಗಳಿಂದಲೇ ಬಲೆಯಲ್ಲಿ ಬೀಳುವನು; \q2 ಅವನು ಕುಣಿಯಲ್ಲಿ ಬಿದ್ದು ಅಲೆದಾಡುವನು. \q1 \v 9 ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು; \q2 ಉರುಳು ಅವನನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು. \q1 \v 10 ನೆಲದ ಮೇಲೆ ಪಾಶವೂ, \q2 ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವುವು. \q1 \v 11 ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, \q2 ಅವನ ಕಾಲುಗಳನ್ನು ಓಡುವಂತೆ ಮಾಡುವುವು. \q1 \v 12 ಅವನ ಬಲವು ಕುಸಿಯುವುದು; \q2 ವಿನಾಶವು ಅವನ ಬೀಳುವಿಕೆಗಾಗಿ ಸಿದ್ಧವಾಗಿರುವುದು. \q1 \v 13 ಅದು ಅವನ ಚರ್ಮದ ಬಲವನ್ನು ತಿಂದುಬಿಡುವುದು; \q2 ಮರಣದ ಚೊಚ್ಚಲತನವು ಅವನ ಅಂಗಾಂಗಗಳನ್ನು ನುಂಗಿಬಿಡುವುದು. \q1 \v 14 ಅವನು ಭದ್ರತೆಯ ಗುಡಾರದಿಂದ ಹೊರಬೀಳುವನು. \q2 ಅವನು ಭಯಂಕರ ಅರಸನ ಬಳಿಗೆ ಸಾಗಬೇಕಾಗುವುದು. \q1 \v 15 ಬೆಂಕಿಯು ಅವನ ಮನೆಯನ್ನು ಸುಡುವುದು; \q2 ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು. \q1 \v 16 ಬುಡದಿಂದ ಅವನ ಬೇರುಗಳು ಒಣಗುವುವು; \q2 ಮೇಲಿನಿಂದ ಅವನ ರೆಂಬೆಯು ಬಾಡುವುದು. \q1 \v 17 ಅವನ ಸ್ಮರಣೆಯು ಭೂಮಿಯಿಂದ ಅಳಿದುಹೋಗುವುದು; \q2 ನಾಡಿನಲ್ಲಿ ಅವನ ಹೆಸರು ಇಲ್ಲದೆ ಹೋಗುವುದು. \q1 \v 18 ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; \q2 ಅವನು ಲೋಕದಿಂದ ಬಹಿಷ್ಕರಿಸಲಾಗುವನು. \q1 \v 19 ಅವನ ಜನರಲ್ಲಿ ಅವನಿಗೆ ಮಗನೂ, ಮೊಮ್ಮಗನೂ ಇರುವುದಿಲ್ಲ, \q2 ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ. \q1 \v 20 ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು; \q2 ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು. \q1 \v 21 ನಿಶ್ಚಯವಾಗಿ ದುಷ್ಟರ ನೆಲೆಯು ಹೀಗೆಯೇ ಇರುವುದು; \q2 ದೇವರನ್ನು ಅರಿಯದವನ ಸ್ಥಿತಿ ಇದೇ.” \c 19 \s1 ಯೋಬನ ಉತ್ತರ \p \v 1 ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ: \q1 \v 2 “ಎಷ್ಟರವರೆಗೆ ನನ್ನ ನೋಯಿಸಿ, \q2 ನನ್ನನ್ನು ಮಾತುಗಳಿಂದ ಜಜ್ಜುವಿರಿ? \q1 \v 3 ಈಗ ಹತ್ತು ಸಾರಿ ನನ್ನನ್ನು ನಿಂದಿಸಿದ್ದೀರಿ; \q2 ನಾಚಿಕೆಯಿಲ್ಲದೆ ನೀವು ನನ್ನ ಮೇಲೆ ಆಕ್ರಮಣ ಮಾಡುತ್ತೀರಿ. \q1 \v 4 ನಿಜವಾಗಿ ನಾನು ತಪ್ಪು ಮಾಡಿದ್ದರೆ ನಿಮಗೇನು? \q2 ನನ್ನ ತಪ್ಪು ನನ್ನ ಸಂಗಡ ಇರಲಿ. \q1 \v 5 ನೀವು ನನಗಿಂತ ಉತ್ತಮರು ಎಂದು ಭಾವಿಸುತ್ತಿದ್ದೀರಿ; \q2 ನನಗಾದ ಹೀನಸ್ಥಿತಿಯನ್ನು ನನಗೆ ವಿರೋಧವಾಗಿ ಉಪಯೋಗಿಸುತ್ತೀರಿ. \q1 \v 6 ದೇವರಿಂದಲೇ ನನಗೆ ಅನ್ಯಾಯವಾಗಿದೆ; \q2 ದೇವರು ತಮ್ಮ ಬಲೆಯನ್ನು ನನ್ನ ಮೇಲೆ ಬೀಸಿದ್ದಾರೆಂದು ನಿಮಗೆ ತಿಳಿದಿರಲಿ. \b \q1 \v 7 “ ‘ಹಿಂಸೆ,’ ಎಂದು ನಾನು ಕೂಗಿಕೊಂಡರೂ ನನಗೆ ಉತ್ತರ ಕೊಡುವವರಿಲ್ಲ; \q2 ಗಟ್ಟಿಯಾಗಿ ಮೊರೆಯಿಟ್ಟರೂ ನ್ಯಾಯ ದೊರಕುವುದಿಲ್ಲ. \q1 \v 8 ನಾನು ಮುಂದೆ ಹೋಗದಂತೆ ದೇವರು ನನ್ನ ದಾರಿಗೆ ಬೇಲಿ ಹಾಕಿದ್ದಾರೆ; \q2 ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾರೆ. \q1 \v 9 ದೇವರು ನನ್ನ ಘನತೆಯನ್ನು ತೆಗೆದುಹಾಕಿದ್ದಾರೆ; \q2 ನನ್ನ ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾರೆ. \q1 \v 10 ನನ್ನ ಸುತ್ತಲೂ ದಾಳಿಯಾಗಿದ್ದರಿಂದ, ನಾನು ಕ್ಷಯಿಸುತ್ತಿದ್ದೇನೆ; \q2 ಮರವನ್ನು ಕೀಳುವ ಹಾಗೆ ದೇವರು ನನ್ನ ನಿರೀಕ್ಷೆಯನ್ನು ಕಿತ್ತುಹಾಕಿದ್ದಾರೆ. \q1 \v 11 ದೇವರ ಶಿಕ್ಷೆಯು ನನ್ನ ಮೇಲೆ ಉರಿಯುತ್ತಿದೆ; \q2 ನಾನು ದೇವರಿಗೆ ವೈರಿಯಂತೆ ಪರಿಗಣಿಸಲಾಗಿದ್ದೇನೆ. \q1 \v 12 ದೇವರ ಸೇನೆ ಒಟ್ಟಿಗೆ ಬಂದು, \q2 ನನಗೆ ವಿರೋಧವಾಗಿ ದಿಬ್ಬನ್ನು ಕಟ್ಟಿ, \q2 ನನ್ನ ಗುಡಾರದ ಸುತ್ತಲೂ ಇಳಿದಿವೆ. \b \q1 \v 13 “ದೇವರು ನನ್ನ ಕುಟುಂಬದವರನ್ನು ನನ್ನಿಂದ ಅಗಲಿಸಿದ್ದಾರೆ; \q2 ನನ್ನ ಪರಿಚಿತರೆಲ್ಲರೂ ನನ್ನನ್ನು ತೊರೆದಿದ್ದಾರೆ. \q1 \v 14 ನನ್ನ ಬಂಧುಗಳು ನನ್ನನ್ನು ಕೈಬಿಟ್ಟಿದ್ದಾರೆ; \q2 ನನ್ನ ಆಪ್ತ ಸ್ನೇಹಿತರು ನನ್ನನ್ನು ಮರೆತುಬಿಟ್ಟಿದ್ದಾರೆ. \q1 \v 15 ನನ್ನ ಅತಿಥಿಗಳು, ನನ್ನ ದಾಸದಾಸಿಯರೂ ನನ್ನನ್ನು ಅನ್ಯನೆಂದು ಎಣಿಸುತ್ತಾರೆ; \q2 ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ. \q1 \v 16 ನನ್ನ ಸೇವಕನನ್ನು ಕರೆದರೂ, ಅವನು ನನಗೆ ಉತ್ತರ ಕೊಡುವುದಿಲ್ಲ; \q2 ನನ್ನ ಬಾಯಿತೆರೆದು ಅವನನ್ನು ಬೇಡಿಕೊಂಡರೂ ಅವನು ಬರುವುದಿಲ್ಲ. \q1 \v 17 ನನ್ನ ಶ್ವಾಸವು ನನ್ನ ಹೆಂಡತಿಗೆ ಅಸಹ್ಯವಾಗಿದೆ, \q2 ನನ್ನ ಕುಟುಂಬದವರಿಗೆ ನಾನು ಹೇಸಿಕೆಯಾದೆ. \q1 \v 18 ಚಿಕ್ಕವರೂ ಸಹ ನನ್ನನ್ನು ತಿರಸ್ಕರಿಸುತ್ತಾರೆ; \q2 ನಾನು ಕಾಣಿಸಿಕೊಂಡಾಗ ನನ್ನನ್ನು ಹಾಸ್ಯಮಾಡುತ್ತಾರೆ. \q1 \v 19 ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಕಂಡು ಅಸಹ್ಯಪಡುತ್ತಾರೆ; \q2 ನಾನು ಪ್ರೀತಿ ಮಾಡಿದವರೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. \q1 \v 20 ನಾನು ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ; \q2 ನಾನು ನನ್ನ ಹಲ್ಲು ಚರ್ಮದಿಂದಲೇ ತಪ್ಪಿಸಿಕೊಂಡೆನು.\f + \fr 19:20 \fr*\ft ಅಥವಾ \ft*\fqa ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದೆನು\fqa*\f* \b \q1 \v 21 “ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ, \q2 ಏಕೆಂದರೆ ದೇವರ ಕೈ ನನ್ನನ್ನು ದಂಡಿಸಿದೆ. \q1 \v 22 ದೇವರಂತೆ ನೀವು ನನ್ನನ್ನು ಏಕೆ ಹಿಂಸಿಸುತ್ತೀರಿ? \q2 ನನಗೆ ತೊಂದರೆಪಡಿಸಿದ್ದು ಸಾಲದೋ? \b \q1 \v 23 “ಆಹಾ, ನನ್ನ ಮಾತುಗಳು ದಾಖಲಿಸಿದ್ದರೆ, \q2 ಆ ಮಾತುಗಳನ್ನು ಸುರುಳಿಗಳಲ್ಲಿ ಬರೆದಿದ್ದರೆ, \q1 \v 24 ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು \q2 ಅವುಗಳನ್ನು ಶಾಶ್ವತ ಶಾಸನವಾಗಿ ಮಾಡಿದ್ದರೆ ಎಷ್ಟೋ ಒಳಿತು! \q1 \v 25 ನನ್ನ ವಿಮೋಚಕರು ಜೀವಿಸುತ್ತಿದ್ದಾರೆ ಎಂದು ತಿಳಿದಿದ್ದೇನೆ. \q2 ಕಡೆಯ ದಿನದಲ್ಲಿ ಭೂಮಿಯ ಮೇಲೆ ನನ್ನ ವಿಮೋಚಕರು ಬಂದು ನಿಲ್ಲುವರೆಂದೂ ತಿಳಿದಿದ್ದೇನೆ. \q1 \v 26 ನನ್ನ ಚರ್ಮವು ಬಿರಿದು ಹಾಳಾದ ಬಳಿಕವೂ, \q2 ನಾನು ದೇಹದಾರಿಯಾಗಿಯೇ ದೇವರನ್ನು ನೋಡುವೆನು. \q1 \v 27 ದೇವರನ್ನು ನಾನೇ ನೋಡುವೆನು; \q2 ಬೇರೆಯವರಲ್ಲ, ನನ್ನ ಕಣ್ಣಾರೆ ಅವರನ್ನು ಕಾಣುವೆನು; \q2 ಅದಕ್ಕಾಗಿ ನನ್ನ ಹೃದಯವು ನನ್ನೊಳಗೆ ಹಂಬಲಿಕೆಯಿಂದ ಹಾರೈಸುತ್ತಿದೆ! \b \q1 \v 28 “ ‘ಸ್ನೇಹಿತರೇ, ಅವನ ದುರ್ಗತಿಗೆ ಕಾರಣ ಅವನಲ್ಲಿಯೇ ಇದೆ, \q2 ನಾವು ಅವನಿಗೆ ಹೇಗೆ ತೊಂದರೆಕೊಡೋಣ?’ ಎಂದು ನೀವು ಹೇಳಿದರೆ, \q1 \v 29 ನೀವು ಖಡ್ಗಕ್ಕೆ ಭಯಪಡಬೇಕಾಗುತ್ತದೆ; \q2 ಏಕೆಂದರೆ, ಕ್ರೋಧವು ದಂಡನೆಯನ್ನು ಖಡ್ಗದಿಂದ ತರುವುದು. \q2 ಆಗ ನ್ಯಾಯತೀರ್ಪು ಉಂಟೆಂದು ನಿಮಗೆ ತಿಳಿಯುವುದು.” \c 20 \s1 ಚೋಫರನ ವಾದ \p \v 1 ನಾಮಾಥ್ಯನಾದ ಚೋಫರನು ಉತ್ತರಕೊಟ್ಟು ಹೇಳಿದ್ದೇನೆಂದರೆ: \q1 \v 2 “ನಾನು ತುಂಬಾ ಕಳವಳಗೊಂಡದ್ದರಿಂದ, \q2 ನನ್ನ ಆಲೋಚನೆಗಳು ನನ್ನನ್ನು ಉತ್ತರಿಸಲು ಪ್ರೇರೇಪಿಸಿದವು. \q1 \v 3 ನನ್ನನ್ನು ಅವಮಾನಿಸುವ ಖಂಡನೆಯನ್ನು ನಾನು ಕೇಳಿದ್ದೇನೆ; \q2 ಆದ್ದರಿಂದ ನನ್ನ ತಿಳುವಳಿಕೆಯು ನನ್ನನ್ನು ಉತ್ತರಿಸಲು ಪ್ರೇರೇಪಿಸುತ್ತದೆ. \b \q1 \v 4 “ದೇವರು ಮನುಷ್ಯನನ್ನು\f + \fr 20:4 \fr*\ft ಅಥವಾ \ft*\fqa ಆದಾಮ\fqa*\f* \q2 ಭೂಮಿಯಲ್ಲಿ ಇರಿಸಿದ ಕಾಲದಿಂದ ವಿಷಯ ಹೇಗಿದೆ ಎಂಬುದು ನಿನಗೆ ನಿಶ್ಚಯವಾಗಿ ಗೊತ್ತಿದೆ. \q1 \v 5 ದುಷ್ಟರ ಜಯವು ಅಲ್ಪ ಕಾಲ, \q2 ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ. \q1 \v 6 ಹೆಮ್ಮೆಯು ಆಕಾಶಕ್ಕೆ ಏರಿದರೂ, \q2 ಅವನ ತಲೆ ಮೇಘಕ್ಕೆ ಮುಟ್ಟಿದರೂ, \q1 \v 7 ಗೊಬ್ಬರದ ಹಾಗೆ ಶಾಶ್ವತವಾಗಿ ಅವನು ನಾಶವಾಗುವನು; \q2 ಅವನನ್ನು ನೋಡಿದವರು, ‘ಅವನೆಲ್ಲಿ?’ ಎಂದು ಕೇಳುವರು. \q1 \v 8 ಭಕ್ತಿಹೀನನು ಕನಸಿನ ಹಾಗೆ ಹಾರಿಹೋಗುವನು, ಇನ್ನೆಂದಿಗೂ ಸಿಗಲಾರನು; \q2 ಅವನು ಕತ್ತಲೆಯ ಹಾಗೆ ಕಾಣದೆ ಹೋಗುವನು. \q1 \v 9 ಅವನನ್ನು ನೋಡಿದವರು ಇನ್ನು ಮುಂದೆ ನೋಡರು; \q2 ಅವನ ಸ್ಥಳವು ಇನ್ನು ಅವನನ್ನು ಕಾಣದು. \q1 \v 10 ಅವನ ಮಕ್ಕಳು ಬಡವರ ದಯೆಯನ್ನು ಬೇಡುವರು; \q2 ಅವನ ಮಕ್ಕಳ ಕೈಗಳು ಅವನ ಸಂಪತ್ತನ್ನು ಹಿಂತಿರುಗಿಸಬೇಕಾಗುವುದು. \q1 \v 11 ಅವನ ಎಲುಬುಗಳು ಯೌವನದ ಶಕ್ತಿಯಿಂದ ತುಂಬಿತ್ತು, \q2 ಅದು ಅವನ ಸಂಗಡ ಧೂಳಿನಲ್ಲಿ ಮಲಗುವುದು. \b \q1 \v 12 “ಅವನ ಕೆಟ್ಟತನವು ಬಾಯಿಗೆ ಸಿಹಿಯಾಗಿತ್ತು, \q2 ಅವನು ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟುಕೊಂಡಿದ್ದನು. \q1 \v 13 ಅದನ್ನು ಬಿಟ್ಟುಕೊಡಲು ಇಷ್ಟಪಡದೆ, \q2 ತನ್ನ ಬಾಯಿಯೊಳಗೆ ದೀರ್ಘಸಮಯ ಇಟ್ಟುಕೊಂಡರೂ, \q1 \v 14 ಅವನ ಆಹಾರವು ಅವನ ಕರುಳಲ್ಲಿ ಹುಳಿಯಾಗಿ, \q2 ಅದು ಅವನೊಳಗಿನ ಸರ್ಪಗಳ ವಿಷವಾಗುವುದು. \q1 \v 15 ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; \q2 ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡಿಸಿ ಬಿಡುವನು. \q1 \v 16 ಅವನು ಸರ್ಪಗಳ ವಿಷವನ್ನು ಹೀರುವನು; \q2 ಹಾವಿನ ನಾಲಿಗೆ ಅವನನ್ನು ಕೊಲ್ಲುವುದು. \q1 \v 17 ಅವನು ಜೇನು, ಮೊಸರೂ ಹರಿಯುವ ಹಳ್ಳಗಳನ್ನೂ, \q2 ಸಮೃದ್ಧಿಯಾಗಿ ಹರಿಯುವ ನದಿಗಳನ್ನೂ ನೋಡನು. \q1 \v 18 ಅವನು ತನ್ನ ಪ್ರಯಾಸದ ಫಲವನ್ನು ಸವಿಯದೆ ಪರರಿಗೆ ಕೊಡಬೇಕಾಗುವುದು; \q2 ಅವನು ತಾನು ಪಡೆದ ಲಾಭದ ಆನಂದವನ್ನು ಅನುಭವಿಸುವುದಿಲ್ಲ. \q1 \v 19 ಏಕೆಂದರೆ ಅವನು ಬಡವರನ್ನು ಜಜ್ಜಿ ಅವರನ್ನು ನಿರ್ಗತಿಕರನ್ನಾಗಿ ಮಾಡಿದನು; \q2 ತಾನು ನಿರ್ಮಿಸದ ಮನೆಗಳನ್ನು ವಶಪಡಿಸಿಕೊಂಡಿದ್ದಾನೆ. \b \q1 \v 20 “ಖಂಡಿತವಾಗಿ ಅವನ ಆಕಾಂಕ್ಷೆಗೆ ತೃಪ್ತಿ ಇರುವುದಿಲ್ಲ; \q2 ಅವನು ತನ್ನ ಇಷ್ಟ ಸಂಪತ್ತಿನಲ್ಲಿ ಏನೂ ಉಳಿಸಿಕೊಳ್ಳುವುದಿಲ್ಲ. \q1 \v 21 ಅವನಿಗೆ ಆಹಾರವು ಉಳಿಯದು; \q2 ಆದ್ದರಿಂದ ಅವನ ಸಮೃದ್ಧಿಯು ಅಸ್ಥಿರವಾಗಿರುವುದು. \q1 \v 22 ಅವನ ಸಮೃದ್ಧಿಯಿಂದ ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು; \q2 ಘೋರ ದುಃಖವು ಅವನ ಮೇಲೆ ಬರುವುದು. \q1 \v 23 ಅವನ ಹೊಟ್ಟೆ ತುಂಬುವಾಗ, \q2 ದೇವದಂಡನೆ ಅವನ ಮೇಲೆ ಬರುವುದು; \q2 ಹೌದು, ದೇವದಂಡನೆಯು ಅವನ ಮೇಲೆ ಸುರಿಯುವುದು. \q1 \v 24 ಅವನು ಕಬ್ಬಿಣದ ಆಯುಧಕ್ಕೆ ತಪ್ಪಿಸಿಕೊಂಡು ಓಡಿಹೋದರೆ, \q2 ಕಂಚಿನ ಬಾಣ ಅವನನ್ನು ತಿವಿಯುವುದು. \q1 \v 25 ಅವನು ಆ ಬಾಣವನ್ನು ಎಳೆದರೆ, ಅದು ಬೆನ್ನಿನಿಂದ ಹೊರಡುವುದು; \q2 ಅವನ ಪಿತ್ತಕೋಶದಿಂದ ಅದರ ಮಿಂಚುವ ಮೊನೆ ಬರುವುದು; \q1 ಸಾವಿನ ಭಯವು ಅವನನ್ನೂ ಆವರಿಸುವುದು. \q2 \v 26 ಅವನ ನಿಕ್ಷೇಪಗಳಲ್ಲಿ ಅಂಧಕಾರವು ಪೂರ್ಣವಾಗಿ ಕವಿಯುವುದು; \q1 ಯಾರೂ ಹೊತ್ತಿಸದ ಬೆಂಕಿ ಅವನನ್ನು ದಹಿಸುವುದು; \q2 ಅವನ ಗುಡಾರದಲ್ಲಿ ಉಳಿದದ್ದೆಲ್ಲ ನಾಶವಾಗುವುದು. \q1 \v 27 ಆಕಾಶವು ಅವನ ಅಪರಾಧವನ್ನು ಪ್ರಕಟಿಸುವುದು; \q2 ಭೂಮಿಯು ಅವನಿಗೆ ವಿರೋಧವಾಗಿ ಏಳುವುದು. \q1 \v 28 ಅವನ ಮನೆಯ ಧನಧಾನ್ಯವು ತೊಲಗಿ ಹೋಗುವುದು; \q2 ದೇವದಂಡನೆಯ ದಿನದಲ್ಲಿ ಅದು ಪ್ರವಾಹದಿಂದ ಕೊಚ್ಚಿಕೊಂಡು ಹೋಗುವುದು. \q1 \v 29 ದುಷ್ಟನಿಗೆ ದೇವರಿಂದ ಬರುವ ಪಾಲೂ, \q2 ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.” \c 21 \s1 ಯೋಬನ ಉತ್ತರ \p \v 1 ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ: \q1 \v 2 “ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ, \q2 ಇವು ನೀವು ನನಗೆ ನೀಡುವ ಆದರಣೆಗಳಾಗಿರಲಿ. \q1 \v 3 ನಾನು ಮಾತನಾಡುವಾಗ, ನನ್ನನ್ನು ಸಹಿಸಿಕೊಳ್ಳಿರಿ; \q2 ನಾನು ಮಾತನಾಡಿದ ಮೇಲೆ ನೀವು ಪರಿಹಾಸ್ಯ ಮಾಡಬಹುದು. \b \q1 \v 4 “ನಾನೇನು ಮನುಷ್ಯನ ವಿಷಯವಾಗಿ ದೂರು ಹೇಳುತ್ತಿದ್ದೇನೋ? \q2 ನಾನೇಕೆ ಬೇಸರಪಡಬಾರದು. \q1 \v 5 ನನ್ನ ಕಡೆಗೆ ಗಮನಿಸಿರಿ; \q2 ನೀವು ನಿಮ್ಮ ಬಾಯಿಯ ಮೇಲೆ ಕೈ ಇಟ್ಟು ಬೆರಗಾಗಿರಿ. \q1 \v 6 ನಾನು ಈ ವಿಷಯವನ್ನು ನೆನಪು ಮಾಡಿಕೊಂಡಾಗ ಭಯಪಡುತ್ತೇನೆ; \q2 ನನ್ನ ದೇಹಕ್ಕೆ ನಡುಕ ಹಿಡಿಯುತ್ತದೆ. \q1 \v 7 ದುಷ್ಟರು ವೃದ್ಧರಾಗುವವರೆಗೆ ಏಕೆ ಬದುಕುತ್ತಾರೆ? \q2 ಅಂಥವರು ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು? \q1 \v 8 ಅವರೊಂದಿಗೆ ಅವರ ಸಂತಾನದವರು ಅವರ ಮುಂದೆ ಸುಸ್ಥಿರವಾಗುವುದನ್ನೂ, \q2 ಅವರ ಮಕ್ಕಳು ನೆಲೆಯಾಗಿರುವುದನ್ನೂ ನೋಡುವರು. \q1 \v 9 ಅವರ ಮನೆ ಸುರಕ್ಷಿತವಾಗಿ ನಿರ್ಭಯದಿಂದಿರುವುದು; \q2 ದೇವರ ದಂಡನೆಯ ಕೋಲು ಅವರ ಮೇಲೆ ಬೀಳದಿರುವುದು. \q1 \v 10 ಅವರ ಹೋರಿಯು ಅಭಿವೃದ್ಧಿಯಾಗಿರುವುದು; \q2 ಅವರ ಆಕಳು ತಪ್ಪದೆ ಈಯುವುದು. \q1 \v 11 ಅವರ ಮಕ್ಕಳು ಮಂದೆಯಾಗಿ ಹೊರನಡೆಯುತ್ತಾರೆ; \q2 ಅವರ ಚಿಕ್ಕವರು ಕುಣಿದಾಡುತ್ತಾ ಹೋಗುತ್ತಾರೆ. \q1 \v 12 ಅವರು ದಮ್ಮಡಿಯಿಂದಲೂ, ಕಿನ್ನರಿಯಿಂದಲೂ ಹಾಡುತ್ತಾರೆ; \q2 ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. \q1 \v 13 ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ; \q2 ಕೊನೆಗೆ ಸಮಾಧಾನದಿಂದ ಸಮಾಧಿಗೆ ಸೇರುತ್ತಾರೆ.\f + \fr 21:13 \fr*\ft ಅಥವಾ \ft*\fqa ಕ್ಷಣಮಾತ್ರದಲ್ಲಿ\fqa*\f* \q1 \v 14 ಆದರೂ ಇವರು ದೇವರಿಗೆ, ‘ನಮ್ಮನ್ನು ಬಿಟ್ಟುಬಿಡು, \q2 ನಿಮ್ಮ ಮಾರ್ಗಗಳ ತಿಳುವಳಿಕೆ ನಮಗೆ ಬೇಡ. \q1 \v 15 ಸರ್ವಶಕ್ತರು ಯಾರು, ನಾವು ಅವರ ಸೇವೆ ಏಕೆ ಮಾಡಬೇಕು? \q2 ನಾವು ದೇವರಿಗೆ ಪ್ರಾರ್ಥನೆಮಾಡಿ ನಮಗೆ ಪ್ರಯೋಜನವೇನು?’ ಎಂದಿದ್ದಾರೆ. \q1 \v 16 ಆದರೆ ಅವರ ಸುಖವು ಅವರ ಕೈಯಲ್ಲಿ ಇಲ್ಲ; \q2 ಆದ್ದರಿಂದ ಆ ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ. \b \q1 \v 17 “ಆದರೂ ಎಷ್ಟು ಸಾರಿ ದುಷ್ಟರ ದೀಪವು ಆರಿಹೋಗುತ್ತದೆ? \q2 ಎಷ್ಟು ಸಾರಿ ವಿಪತ್ತು ಅವರ ಮೇಲೆ ಬರುತ್ತದೆ? \q2 ದೇವರು ವೇದನೆಗಳನ್ನು ತಮ್ಮ ಬೇಸರದಿಂದ ಹಂಚುವುದು ಎಷ್ಟು ಸಾರಿ? \q1 \v 18 ಅವರು ಗಾಳಿಯ ಮುಂದೆ ಹುಲ್ಲಿನ ಹಾಗೆ ಆದದ್ದು ಎಷ್ಟು ಸಾರಿ? \q2 ಬಿರುಗಾಳಿಯು ಹೊಡಕೊಂಡು ಹೋಗುವ ಹೊಟ್ಟಿನ ಹಾಗೆ ಕೊಚ್ಚಿಕೊಂಡು ಹೋದದ್ದು ಎಷ್ಟು ಸಾರಿ? \q1 \v 19 ‘ದೇವರು ದುಷ್ಟರ ಮಕ್ಕಳಿಗೆ ಅವರ ಅಪರಾಧ ಫಲವನ್ನು ಕಾದಿಡುತ್ತಾರೆ,’ \q2 ಎಂದು ಹೇಳುತ್ತಾರಲ್ಲಾ? \q2 ಆ ದುಷ್ಟರು ಅನುಭವಿಸುವ ಹಾಗೆ ದೇವರು ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸಲಿ. \q1 \v 20 ದುಷ್ಟರು ತಮ್ಮ ವಿನಾಶವನ್ನು ತಾವಾಗಿಯೇ ನೋಡಲಿ; \q2 ಸರ್ವಶಕ್ತರ ದಂಡನೆಯನ್ನು ಅವನು ಅನುಭವಿಸಲಿ. \q1 \v 21 ದುಷ್ಟರಿಗೆ ನೇಮಕವಾದ ತಿಂಗಳುಗಳು ಮುಗಿದು ಹೋದ ಮೇಲೆ \q2 ತಾವು ಬಿಟ್ಟುಹೋಗುವ ಕುಟುಂಬದವರ ಚಿಂತೆ ಅವರಿಗೆ ಎಲ್ಲಿ? \b \q1 \v 22 “ದೇವರಿಗೆ ಅರಿವನ್ನು ಬೋಧಿಸಬಹುದೇ? \q2 ಉನ್ನತರಿಗೂ ನ್ಯಾಯತೀರಿಸುವುದು ದೇವರೇ ಅಲ್ಲವೇ? \q1 \v 23 ಒಬ್ಬ ವ್ಯಕ್ತಿಯು ಸುಖವಾಗಿಯೂ, ಸಮೃದ್ಧನಾಗಿಯೂ, \q2 ನೆಮ್ಮದಿಯಿಂದ ಇರುವಾಗಲೂ ಸಾಯುತ್ತಾನೆ. \q1 \v 24 ಅವನ ದೇಹ ಚೆನ್ನಾಗಿ ಬೆಳೆದು ಪೋಷಣೆಯಾಗಿರುತ್ತದೆ; \q2 ಅವನ ಎಲುಬುಗಳು ಮಜ್ಜೆಯಿಂದ ತುಂಬಿರುತ್ತದೆ. \q1 \v 25 ಮತ್ತೊಬ್ಬನು ಎಂದಿಗೂ ಒಳ್ಳೆಯದನ್ನು ಅನುಭವಿಸದೆ, \q2 ಕಹಿಯಾದ ಮನೋವ್ಯಥೆಪಡುತ್ತಾ ಸಾಯುತ್ತಾನೆ. \q1 \v 26 ಇವರಿಬ್ಬರೂ ಮಣ್ಣಿಗೆ ಸೇರುತ್ತಾರೆ; \q2 ಹುಳುಗಳು ಅವರನ್ನು ಮುತ್ತಿಕೊಳ್ಳುತ್ತವೆ. \b \q1 \v 27 “ನೋಡಿರಿ, ನಿಮ್ಮ ಆಲೋಚನೆಗಳನ್ನು ನಾನು ಬಲ್ಲೆನು. \q2 ನೀವು ನನಗೆ ವಿರೋಧವಾಗಿ ಮಾಡುವ ಕುಯುಕ್ತಿಗಳನ್ನೂ ತಿಳಿದಿದ್ದೇನೆ. \q1 \v 28 ನೀವು, ‘ಪ್ರಧಾನನ ಮನೆ ಈಗ ಎಲ್ಲಿದೆ? \q2 ದುಷ್ಟರು ವಾಸಿಸಿದ ಗುಡಾರ ಎಲ್ಲಿ?’ ಎನ್ನುತ್ತೀರಿ. \q1 \v 29 ಮಾರ್ಗದಲ್ಲಿ ಹಾದು ಹೋಗುವವರನ್ನು ನೀವು ವಿಚಾರಿಸಲಿಲ್ಲವೋ? \q2 ಅವರ ಅನುಭವಗಳು ನಿಮಗೆ ಹಿಡಿಸಲಿಲ್ಲವೋ? \q1 \v 30 ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; \q2 ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ. \q1 \v 31 ದುಷ್ಟರ ಮಾರ್ಗವನ್ನು ಮುಖಾಮುಖಿಯಾಗಿ ಅವರಿಗೆ ತೋರಿಸುವವರು ಯಾರು? \q2 ಅವರು ಮಾಡಿದ ದುಷ್ಕೃತ್ಯಗಳಿಗೆ ಮುಯ್ಯಿ ತೀರಿಸುವವರು ಯಾರು? \q1 \v 32 ದುಷ್ಟರನ್ನು ಸಮಾಧಿಗೆ ಒಯ್ಯುತ್ತಾರೆ. \q2 ಅವರ ಗೋರಿಗೆ ಕಾವಲು ಇಡುತ್ತಾರೆ. \q1 \v 33 ಕಣಿವೆಯಲ್ಲಿನ ಮಣ್ಣು ಅವರಿಗೆ ಸಿಹಿಯಾಗಿರುತ್ತದೆ; \q2 ಪ್ರತಿಯೊಬ್ಬರೂ ಅವರನ್ನು ಹಿಂಬಾಲಿಸುತ್ತಾರೆ. \q2 ಹೀಗೆ ಅವರನ್ನು ಲೆಕ್ಕವಿಲ್ಲದಷ್ಟು ಜನರು ಹಿಂಬಾಲಿಸುತ್ತಾರೆ. \b \q1 \v 34 “ವ್ಯರ್ಥವಾದ ನಿಮ್ಮ ಮಾತುಗಳಿಂದ ನೀವು ನನ್ನನ್ನು ಸಂತೈಸುವುದು ಹೇಗೆ? \q2 ನಿಮ್ಮ ಉತ್ತರಗಳಲ್ಲಿ ವಿಶ್ವಾಸದ್ರೋಹ ಬಿಟ್ಟು ಮತ್ತೇನೂ ಉಳಿದಿರುವುದಿಲ್ಲ.” \c 22 \s1 ಎಲೀಫಜನ ವಾದ \p \v 1 ಆಮೇಲೆ ತೇಮಾನ್ಯನಾದ ಎಲೀಫಜನು ಹೀಗೆಂದನು: \q1 \v 2 “ಮನುಷ್ಯನಿಂದ ದೇವರಿಗೆ ಪ್ರಯೋಜನವೇನು? \q2 ಒಬ್ಬನು ಜ್ಞಾನಿಯಾಗಿದ್ದರೂ ದೇವರಿಗೆ ಪ್ರಯೋಜನವಾಗಿರುವನೇ? \q1 \v 3 ನೀನು ನೀತಿವಂತನಾಗಿದ್ದರೆ, ಸರ್ವಶಕ್ತರಿಗೆ ಮೆಚ್ಚಿಕೆಯೋ? \q2 ನಿನ್ನ ಮಾರ್ಗಗಳು ನಿರ್ದೋಷವಾಗಿದ್ದರೆ, ದೇವರಿಗೆ ಲಾಭವೇನು? \b \q1 \v 4 “ನಿನ್ನ ಭಕ್ತಿಗಾಗಿ ದೇವರು ನಿನ್ನನ್ನು ಗದರಿಸುತ್ತಾರೋ? \q2 ನಿನ್ನ ಭಕ್ತಿಗಾಗಿ ದೇವರು ನ್ಯಾಯತೀರ್ಪಿಗೆ ಗುರಿಪಡಿಸುತ್ತಾರೆಯೇ? \q1 \v 5 ನಿನ್ನ ದುಷ್ಟತನವು ಬಹಳವಲ್ಲವೋ? \q2 ನಿನ್ನ ಪಾಪಗಳಿಗೆ ಅಂತ್ಯವೇ ಇಲ್ಲಾ. \q1 \v 6 ನೀನು ಕಾರಣವಿಲ್ಲದೆ ನಿನ್ನ ಸಹೋದರರಿಂದ ಈಡು ತೆಗೆದುಕೊಂಡಿದ್ದೀ; \q2 ಅವರ ವಸ್ತ್ರಗಳನ್ನು ಸಹ ನೀನು ಕಿತ್ತುಕೊಂಡಿರುವೆ. \q1 \v 7 ನೀನು ದಣಿದವರಿಗೆ ನೀರು ಕೊಡಲಿಲ್ಲ; \q2 ಹಸಿದವರಿಗೆ ಆಹಾರವನ್ನು ಬಡಿಸಲಿಲ್ಲ. \q1 \v 8 ನೀನು ಬಲಿಷ್ಠನಾಗಿದ್ದರೂ, ಜಮೀನು ಬಹಳವಾಗಿದ್ದರೂ, \q2 ಗೌರವಕ್ಕೆ ಯೋಗ್ಯನಾದ ಮನುಷ್ಯನಾಗಿ ಊರಲ್ಲಿ ವಾಸಿಸಿದರೂ, \q1 \v 9 ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; \q2 ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ. \q1 \v 10 ಆದ್ದರಿಂದ ನಿನ್ನ ಸುತ್ತಲೂ ಉರುಲುಗಳು ಕಾದಿವೆ; \q2 ಹಠಾತ್ತಾಗಿ ಬರುವ ವಿಪತ್ತು ನಿನ್ನನ್ನು ತಲ್ಲಣಗೊಳಿಸುತ್ತದೆ. \q1 \v 11 ಇದಲ್ಲದೆ ನೀನು ಕಾಣದಷ್ಟು ಕತ್ತಲು ನಿನಗಿರುವುದು; \q2 ಜಲಪ್ರವಾಹವೂ ನಿನ್ನನ್ನು ಮುಳುಗಿಸುವುದು. \b \q1 \v 12 “ದೇವರು ಸ್ವರ್ಗದಲ್ಲಿ ಇದ್ದಾರಲ್ಲವೇ? \q2 ನಕ್ಷತ್ರಮಂಡಲವನ್ನು ನೋಡು, ಅವು ಎಷ್ಟು ಉನ್ನತ! \q1 \v 13 ನೀನಾದರೋ, ‘ದೇವರಿಗೆ ಏನು ಗೊತ್ತು? \q2 ಕಾರ್ಗತ್ತಲಿರುವಾಗ ದೇವರು ನ್ಯಾಯತೀರಿಸಲು ಸಾಧ್ಯವೇ? \q1 \v 14 ದಟ್ಟವಾದ ಮೋಡಗಳು ದೇವರಿಗೆ ಪರದೆಯ ಹಾಗಿರುವುದರಿಂದ \q2 ದೇವರು ನಮ್ಮನ್ನು ನೋಡಲು ಸಾಧ್ಯವಿಲ್ಲ. \q1 ದೇವರು ಆಕಾಶಮಂಡಲದ ಮೇಲ್ಗಡೆಯಲ್ಲಿ ನಡೆದಾಡುತ್ತಾರೆ,’ \q2 ಎಂದು ಹೇಳಿಕೊಂಡಿರುವೆ ಅಲ್ಲವೇ? \q1 \v 15 ದುಷ್ಟರು ಮೊದಲಿನಿಂದಲೂ ನಡೆದ \q2 ದಾರಿಯಲ್ಲಿ ನೀನು ನಡೆಯುವಿಯಾ? \q1 \v 16 ಅಕಾಲ ಮರಣವು ಅವರನ್ನು ಅಪಹರಿಸಿತು; \q2 ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು. \q1 \v 17 ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು! \q2 ಸರ್ವಶಕ್ತ ನಮಗೇನು ಮಾಡಲು ಸಾಧ್ಯ?’ ಎಂದು ಹೇಳಿಕೊಳ್ಳುತ್ತಿದ್ದರು. \q1 \v 18 ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರು. \q2 ಅಬ್ಬಾ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! \q1 \v 19 ನೀತಿವಂತರು ದುಷ್ಟರ ದುರ್ಗತಿಯನ್ನು ನೋಡಿ ಹಿಗ್ಗುವರು. \q2 ನಿರ್ದೋಷಿಗಳು ಹೀಗೆಂದು ದುಷ್ಟರನ್ನು ಅಣಕಿಸುವರು: \q1 \v 20 ‘ನಮಗೆ ವಿರುದ್ಧವಾಗಿ ಎದ್ದವರು ಹಾಳಾಗಿ ಹೋದರು. \q2 ಅವರ ಸೊತ್ತನ್ನು ಬೆಂಕಿಯು ನಾಶಮಾಡಿತು!’ \b \q1 \v 21 “ದೇವರಿಗೆ ಅಧೀನವಾಗಿ, ದೇವರೊಂದಿಗೆ ಸಮಾಧಾನದಿಂದಿರು; \q2 ಇದರಿಂದ ನಿನಗೆ ಸಮೃದ್ಧಿ ಬರುವುದು. \q1 \v 22 ದೇವರ ಬಾಯಿಂದಲೇ ಶಿಕ್ಷಣವನ್ನು ಸ್ವೀಕರಿಸು; \q2 ದೇವರ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ. \q1 \v 23 ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, \q2 ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, \q2 ನೀನು ಪುನಃಸ್ಥಾಪಿತವಾಗುವೆ. \q1 \v 24 ನೀನು ಬಂಗಾರವನ್ನು ಧೂಳಿನಂತೆಯೂ, \q2 ಓಫೀರ್ ದೇಶದ ಬಂಗಾರವನ್ನು ನದಿಯ ಕಲ್ಲುಗಳಂತೆಯೂ ಎಣಿಸು. \q1 \v 25 ಆಗ ಸರ್ವಶಕ್ತರು ನಿನಗೆ ಬಂಗಾರವಾಗಿರುವರು. \q2 ದೇವರು ನಿನಗೆ ಸಮೃದ್ಧಿಯಾದ ಬೆಳ್ಳಿಯೂ ಆಗಿರುವರು. \q1 \v 26 ನಿಶ್ಚಯವಾಗಿ ಸರ್ವಶಕ್ತರಲ್ಲಿ ನೀನು ಆನಂದಗೊಳ್ಳುವೆ. \q2 ನಿನ್ನ ಮುಖವನ್ನು ದೇವರ ಕಡೆಗೆ ಎತ್ತುವೆ. \q1 \v 27 ನೀನು ದೇವರಿಗೆ ಪ್ರಾರ್ಥನೆಮಾಡುವೆ, \q2 ನಿನ್ನ ಪ್ರಾರ್ಥನೆಯನ್ನು ದೇವರು ಕೇಳುವರು; \q2 ನೀನು ಮಾಡಿದ ಹರಕೆಗಳನ್ನು ಸಲ್ಲಿಸುವೆ. \q1 \v 28 ನೀನು ಏನಾದರೂ ನಿರ್ಣಯಿಸಿದ್ದರೆ, \q2 ಅದು ನಿನಗೆ ನೆರವೇರುವುದು ಮತ್ತು ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು. \q1 \v 29 ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, \q2 ‘ಮೇಲಕ್ಕೆ ಎತ್ತು!’ ಎಂದು ನೀನು ದೇವರಿಗೆ ಮೊರೆಯಿಡಲು, \q2 ದೇವರು ಬಿದ್ದವರನ್ನು ರಕ್ಷಿಸುವರು. \q1 \v 30 ನಿರ್ದೋಷಿಯಾಗಿ ಇಲ್ಲದವರನ್ನು ಸಹ ದೇವರು ವಿಮೋಚಿಸುತ್ತಾರೆ; \q2 ನಿನ್ನ ಕೈಗಳ ಶುದ್ಧತ್ವದಿಂದ ಅಂಥವರು ಬಿಡುಗಡೆಯಾಗುವರು.” \c 23 \s1 ಯೋಬನ ಉತ್ತರ \p \v 1 ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ: \q1 \v 2 “ಇಂದಿಗೂ ನನ್ನ ದೂರು ಕಹಿಯಾಗಿದೆ; \q2 ನಾನು ನಿಟ್ಟುಸಿರಿಟ್ಟರೂ ದೇವರ ಹಸ್ತವು ಭಾರವಾಗಿದೆ. \q1 \v 3 ದೇವರನ್ನು ಎಲ್ಲಿ ಕಂಡುಕೊಳ್ಳಬೇಕೆಂದು ನನಗೆ ತಿಳಿದಿದ್ದರೆ, ಎಷ್ಟೋ ಒಳ್ಳೆಯದು! \q2 ಸಾಧ್ಯವಾದರೆ ನಾನು ದೇವರು ವಾಸಿಸುವ ಸ್ಥಳದ ತನಕ ಹೋಗುತ್ತಿದ್ದೆ. \q1 \v 4 ನನ್ನ ನ್ಯಾಯವನ್ನು ದೇವರ ಮುಂದೆ ವಿವರಿಸುತ್ತಿದ್ದೆ; \q2 ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುತ್ತಿದ್ದೆ. \q1 \v 5 ದೇವರು ನನಗೆ ಉತ್ತರವಾಗಿ ಕೊಡುವ ಮಾತುಗಳನ್ನು ಕಂಡುಹಿಡಿದು, \q2 ದೇವರು ನನಗೆ ಹೇಳುವುದನ್ನು ಪರಿಗಣಿಸುತ್ತಿದ್ದೆ. \q1 \v 6 ದೇವರು ನನ್ನನ್ನು ಕಠಿಣವಾಗಿ ವಿರೋಧಿಸುತ್ತಾರೋ? \q2 ಇಲ್ಲ, ಖಂಡಿತವಾಗಿ ಅವರು ನನ್ನ ವಿರುದ್ಧ ಆರೋಪಗಳನ್ನು ಹೊರಿಸುವುದಿಲ್ಲ. \q1 \v 7 ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; \q2 ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು. \b \q1 \v 8 “ಒಂದು ವೇಳೆ ನಾನು ಪೂರ್ವದೆಡೆಗೆ ಹೋದರೂ ದೇವರು ನನಗೆ ಕಾಣಿಸುವುದಿಲ್ಲ; \q2 ಪಶ್ಚಿಮದೆಡೆಗೆ ಹೋದರೂ ದೇವರು ಕಾಣಿಸುವುದಿಲ್ಲ. \q1 \v 9 ಉತ್ತರದಲ್ಲಿ ಹುಡುಕಿದರೂ ದೇವರನ್ನು ನೋಡಲಾರೆನು; \q2 ದಕ್ಷಿಣದೆಡೆಗೆ ತಿರುಗಿಕೊಂಡರೂ ದೇವರು ಕಾಣಿಸುವುದಿಲ್ಲ. \q1 \v 10 ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; \q2 ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು. \q1 \v 11 ನನ್ನ ಪಾದಗಳು ದೇವರ ಹೆಜ್ಜೆಯ ಜಾಡಿನಲ್ಲಿ ನಿಕಟವಾಗಿ ಅನುಸರಿಸಿವೆ; \q2 ದೇವರ ಮಾರ್ಗವನ್ನು ಬಿಟ್ಟು ನಾನು ತೊಲಗದಂತೆ ನೋಡಿಕೊಂಡೆನು. \q1 \v 12 ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; \q2 ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು \q2 ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ. \b \q1 \v 13 “ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? \q2 ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ. \q1 \v 14 ನನಗೆ ನೇಮಿಸಿದ್ದನ್ನು ದೇವರು ಈಡೇರಿಸುತ್ತಾರೆ. \q2 ಇಂಥ ಅನೇಕ ಯೋಜನೆಗಳು ದೇವರಲ್ಲಿವೆ. \q1 \v 15 ಆದ್ದರಿಂದ ನಾನು ದೇವರ ಮುಂದೆ ಗಾಬರಿಗೊಳ್ಳುತ್ತೇನೆ; \q2 ಇದನ್ನೆಲ್ಲಾ ಗ್ರಹಿಸಿಕೊಳ್ಳುವಾಗ ನಾನು ದೇವರಿಗೆ ಭಯಪಡುತ್ತೇನೆ. \q1 \v 16 ದೇವರು ನನ್ನ ಹೃದಯವನ್ನು ಹೆದರಿಸಿದ್ದಾರೆ; \q2 ಸರ್ವಶಕ್ತರು ನನ್ನನ್ನು ಗಾಬರಿಪಡಿಸಿದ್ದಾರೆ. \q1 \v 17 ಆದರೂ ನಾನು ಅಂಧಕಾರದಿಂದ ಮೌನವಾಗಲಿಲ್ಲ; \q2 ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲಿನ ನಿಮಿತ್ತ ನಾನು ಮಾತಾಡದೆ ಇರುವುದಿಲ್ಲ. \b \c 24 \q1 \v 1 “ಸರ್ವಶಕ್ತರು ತೀರ್ಪಿನ ಕಾಲವನ್ನು ನಿಗದಿಪಡಿಸದೆ ಇರುವುದೇಕೆ? \q2 ದೇವರನ್ನು ತಿಳಿದವರು ದೇವರ ದಿನಗಳಿಗೋಸ್ಕರ ವ್ಯರ್ಥವಾಗಿ ನೋಡುತ್ತಿರುವುದು ಏಕೆ? \q1 \v 2 ಕೆಲವರು ಗಡಿಗಳ ಕಲ್ಲುಗಳನ್ನು ಬದಲಿಸುತ್ತಾರೆ, \q2 ಕದ್ದ ಮಂದೆಗಳನ್ನು ತೆಗೆದುಕೊಂಡು ಸಾಕಿಕೊಳ್ಳುತ್ತಾರೆ. \q1 \v 3 ದಿಕ್ಕಿಲ್ಲದವರ ಕತ್ತೆಗಳನ್ನು ಹೊಡೆದುಕೊಂಡು ಹೋಗುತ್ತಾರೆ; \q2 ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ. \q1 \v 4 ದರಿದ್ರನನ್ನು ದಾರಿಯಿಂದ ತೊಲಗಿಸುತ್ತಾರೆ; \q2 ದೇಶದ ಬಡವರು ಕೂಡ ಅವರಿಂದ ಓಡಿ ಅಡಗಿಕೊಳ್ಳುತ್ತಾರೆ. \q1 \v 5 ಕಾಡುಕತ್ತೆಗಳ ಹಾಗೆ ಬಡವರು \q2 ತಮ್ಮ ಆಹಾರಕ್ಕಾಗಿ ಅಲೆಯುತ್ತಾರೆ; \q2 ಪಾಳುಭೂಮಿಯಿಂದ ಅವರಿಗೂ, ಅವರ ಮಕ್ಕಳಿಗೂ ಆಹಾರ ಸಿಗುತ್ತದೆ. \q1 \v 6 ಬಡವರು ಹೊಲಗಳಲ್ಲಿ ಮೇವನ್ನು ಕೊಯ್ದು, \q2 ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುತ್ತಾರೆ.\f + \fr 24:6 \fr*\fq ಹಕ್ಕಲಾಯುತ್ತಾರೆ \fq*\ft ಅಂದರೆ \ft*\fqa ಕೊಯ್ಲುಗಾರನು ಬಿಟ್ಟುಹೋದ ಹಣ್ಣುಗಳನ್ನು ಆರಿಸುತ್ತಾರೆ.\fqa*\f* \q1 \v 7 ಸಾಕಷ್ಟು ಬಟ್ಟೆ ಇಲ್ಲದೆ ಅವರು ರಾತ್ರಿಯನ್ನು ಕಳೆಯುತ್ತಾರೆ; \q2 ಚಳಿಯಲ್ಲಿ ಅವರಿಗೆ ಹೊದ್ದುಕೊಳ್ಳುವುದಕ್ಕೆ ಇಲ್ಲ. \q1 \v 8 ಬೆಟ್ಟಗಳ ಮಳೆಯಿಂದ ನೆನೆದುಹೋಗುತ್ತಾರೆ; \q2 ಬಂಡೆಗಳಲ್ಲಿ ಆಶ್ರಯವನ್ನು ಪಡೆಯುತ್ತಾರೆ. \q1 \v 9 ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ; \q2 ಬಡವನ ಶಿಶುವನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ. \q1 \v 10 ಬಡವರೋ ಸಾಕಷ್ಟು ಬಟ್ಟೆಯಿಲ್ಲದವರಾಗಿ ಅಲೆಯುತ್ತಾರೆ; \q2 ಹಸಿದವರಾಗಿ ಸಿವುಡುಗಳನ್ನು ಹೊರುತ್ತಾರೆ. \q1 \v 11 ಯಜಮಾನರ ಮಾಳಿಗೆಗಳ ಮೇಲೆ ಓಲಿವ್ ಎಣ್ಣೆಗಾಣಗಳನ್ನು ಆಡಿಸುತ್ತಾರೆ; \q2 ದಾಹಗೊಂಡೇ ದ್ರಾಕ್ಷೆಯ ತೊಟ್ಟಿಗಳಲ್ಲಿ ಕೆಲಸ ಮಾಡುತ್ತಾರೆ. \q1 \v 12 ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ; \q2 ಗಾಯಪಟ್ಟವರ ಪ್ರಾಣವು ಸಹಾಯಕ್ಕಾಗಿ ಕೂಗುತ್ತದೆ; \q2 ಆದರೂ ದೇವರು ಯಾರ ಮೇಲೆಯೂ ತಪ್ಪು ಹೊರಿಸುವುದಿಲ್ಲ. \b \q1 \v 13 “ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ; \q2 ಅಂಥವರು ಬೆಳಕಿನ ಮಾರ್ಗಗಳನ್ನು ಅರಿಯದವರು; \q2 ಬೆಳಕಿನ ದಾರಿಗಳಲ್ಲಿ ವಾಸವಾಗಿರದವರೂ ಆಗಿದ್ದಾರೆ. \q1 \v 14 ಕೊಲೆಗಾರನು ಮುಂಜಾನೆಯೇ ಎದ್ದು, \q2 ದಿಕ್ಕಿಲ್ಲದವರನ್ನೂ, ಬಡವರನ್ನೂ ಸಂಹರಿಸುತ್ತಾನೆ; \q2 ರಾತ್ರಿಯಲ್ಲಿ ಕಳ್ಳನಂತೆ ವರ್ತಿಸುತ್ತಾನೆ. \q1 \v 15 ವ್ಯಭಿಚಾರಿಯು ಸಂಜೆಯನ್ನು ಎದುರುನೋಡುತ್ತಿರುವನು. \q2 ತರುವಾಯ, ‘ಯಾವ ಕಣ್ಣೂ ನನ್ನನ್ನು ನೋಡುವುದಿಲ್ಲ,’ ಎಂದು ಹೇಳುತ್ತಾನೆ; \q2 ಯಾರು ತನ್ನನ್ನು ಕಾಣದಂತೆ ಮುಖವನ್ನು ಮುಚ್ಚಿಕೊಳ್ಳುತ್ತಾನೆ. \q1 \v 16 ಕಳ್ಳರು ಕತ್ತಲಲ್ಲಿ ಕನ್ನ ಕೊರೆದು ಮನೆಗಳೊಳಗೆ ನುಗ್ಗುತ್ತಾರೆ. \q2 ಹಗಲಿನಲ್ಲಿ ತಮ್ಮ ಮನೆಬಾಗಿಲುಗಳನ್ನು ಮುಚ್ಚಿಕೊಳ್ಳುತ್ತಾರೆ; \q2 ಅವರು ಬೆಳಕಿನಲ್ಲಿ ಏನೂ ಮಾಡಲು ಬಯಸುವುದಿಲ್ಲ. \q1 \v 17 ಅವರೆಲ್ಲರಿಗೂ ಕಾರ್ಗತ್ತಲು ಬೆಳಕಿನಂತಿರುವುದು; \q2 ಕತ್ತಲೆಯ ಭೀತಿಯೇ ಅವರಿಗೆ ಸ್ನೇಹಿತರು. \b \q1 \v 18 “ಆದರೂ ಅವರು ನೀರಿನ ಮೇಲಿನ ಗುಳ್ಳೆಯಂತೆ ಇದ್ದಾರೆ. \q2 ಅವರ ಜಮೀನು ಶಾಪಕ್ಕೆ ಒಳಪಟ್ಟಿರುವುದರಿಂದ, \q2 ಯಾರೂ ಅವರ ದ್ರಾಕ್ಷೆಯ ತೋಟಕ್ಕೆ ಹೋಗುವುದಿಲ್ಲ. \q1 \v 19 ಬರಗಾಲದ ಬಿಸಿಲು ಹಿಮದ ನೀರನ್ನು ಹೀರಿಕೊಳ್ಳುವಂತೆ, \q2 ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ. \q1 \v 20 ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು; \q2 ಹುಳವು ಅಂಥವರ ಹೆಣವನ್ನು ರುಚಿಯಿಂದ ತಿಂದುಬಿಡುವುದು; \q1 ಇನ್ನು ಅವರ ನೆನಪು ಇರುವುದಿಲ್ಲ; \q2 ಮರದ ಹಾಗೆ ದುಷ್ಟರು ಮುರಿದುಹೋಗುವರು. \q1 \v 21 ದುಷ್ಟರು ಆಸ್ತಿಯ ವಿಷಯದಲ್ಲಿ ಬಂಜೆಯರನ್ನು ಮೋಸಮಾಡುತ್ತಾನೆ; \q2 ದುಷ್ಟರು ವಿಧವೆಯರಿಗೆ ದಯೆ ತೋರಿಸುವುದಿಲ್ಲ. \q1 \v 22 ಆದರೆ ದೇವರು ತಮ್ಮ ಶಕ್ತಿಯಿಂದ ಬಲಿಷ್ಠರನ್ನು ಎಳೆದೊಯ್ಯುತ್ತಾರೆ; \q2 ಬಲಿಷ್ಠರು ಉದ್ಧಾರವಾಗಿದ್ದರೂ ಅವರಿಗೆ ಜೀವನದ ಭರವಸೆ ಇಲ್ಲ. \q1 \v 23 ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು; \q2 ಆದರೆ ದೇವರ ಕಣ್ಣುಗಳು ಅವರ ಮಾರ್ಗಗಳ ಮೇಲಿರುವುದು. \q1 \v 24 ಅವರು ಸ್ವಲ್ಪಕಾಲ ಉನ್ನತವಾಗಿದ್ದು ನಂತರ ಇಲ್ಲದೆ ಹೋಗುತ್ತಾರೆ; \q2 ಅವರು ಎಲ್ಲಾ ಮನುಷ್ಯರಂತೆ ಕೊಯ್ದ ತೆನೆಯ ಹಾಗೆ \q2 ಕೆಳಗೆ ಬಿದ್ದು ಕಾಳಿನಂತೆ ಬೇರ್ಪಡುತ್ತಾರೆ. \b \q1 \v 25 “ಈ ಮಾತು ನಿಜ ಇಲ್ಲದಿದ್ದರೆ, ಯಾರು ನನ್ನನ್ನು ಸುಳ್ಳುಗಾರನನ್ನಾಗಿ ಸ್ಥಾಪಿಸಬಲ್ಲರು? \q2 ಯಾರು ನನ್ನ ಮಾತನ್ನು ವ್ಯರ್ಥಮಾಡಬಲ್ಲರು?” \c 25 \s1 ಬಿಲ್ದದನ ಉತ್ತರ \p \v 1 ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನೆಂದರೆ: \q1 \v 2 “ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; \q2 ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ. \q1 \v 3 ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ? \q2 ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ? \q1 \v 4 ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? \q2 ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ? \q1 \v 5 ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ; \q2 ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ. \q1 \v 6 ಹೀಗಿರುವಲ್ಲಿ ಹುಳುವಿನಂಥ ಮನುಷ್ಯನು ದೇವರ ದೃಷ್ಟಿಯಲ್ಲಿ ಎಷ್ಟೋ ಕಡಿಮೆ! \q2 ಕ್ರಿಮಿಯಂಥ ಮನವರು ಎಷ್ಟೋ ಅಲ್ಪರು!” \c 26 \s1 ಯೋಬನ ಉತ್ತರ \p \v 1 ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು: \q1 \v 2 “ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ? \q2 ತ್ರಾಣವಿಲ್ಲದ ಕೈಯನ್ನು ಹೇಗೆ ರಕ್ಷಿಸಿದೆ? \q1 \v 3 ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ? \q2 ನೀನು ಯಾವ ವಿವೇಕದ ಮಾತುಗಳನ್ನು ಬಹಳವಾಗಿ ಪ್ರದರ್ಶಿಸಿದೆ. \q1 \v 4 ಈ ಮಾತುಗಳನ್ನು ಹೇಳಲು ನಿನಗೆ ಯಾರು ಸಹಾಯ ಮಾಡಿದರು? \q2 ಯಾರ ಆತ್ಮವು ನಿನ್ನ ಬಾಯಿಂದ ಮಾತಾಡಿದ್ದು? \b \q1 \v 5 “ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ \q2 ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ. \q1 \v 6 ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; \q2 ನಾಶಲೋಕವು ದೇವರಿಗೆ ಮರೆಯಾಗಿಲ್ಲ. \q1 \v 7 ದೇವರು ಉತ್ತರ ದಿಕ್ಕಿನ ಆಕಾಶವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾರೆ; \q2 ದೇವರು ಭೂಮಿಯನ್ನು ಏನೂ ಇಲ್ಲದರ ಮೇಲೆ ತೂಗು ಹಾಕಿದ್ದಾರೆ. \q1 \v 8 ತಮ್ಮ ಮೇಘಗಳಲ್ಲಿ ನೀರನ್ನು ತುಂಬಿ ಕಟ್ಟುತ್ತಾರೆ; \q2 ಆದರೂ ಮೋಡವು ಅದರ ಭಾರದಿಂದ ಒಡೆದುಹೋಗುವುದಿಲ್ಲ. \q1 \v 9 ದೇವರು ತಮ್ಮ ಪೂರ್ಣಚಂದ್ರ ಸಿಂಹಾಸನವನ್ನು ಮರೆಮಾಡುತ್ತಾರೆ. \q2 ಅದರ ಮುಂದೆ ಮೋಡವನ್ನು ಕವಿಸುತ್ತಾರೆ. \q1 \v 10 ಬೆಳಕು ಮತ್ತು ಕತ್ತಲುಗಳ ಸಂಧಿಸುವ ಸ್ಥಾನದಲ್ಲಿ, \q2 ಸಮುದ್ರದ ಮೇಲೆ ಸುತ್ತಲೂ ವೃತ್ತ ಮೇರೆಯನ್ನು ಹಾಕಿದ್ದಾರೆ. \q1 \v 11 ಆಕಾಶಮಂಡಲದ ಸ್ತಂಭಗಳು ಕಂಪಿಸುತ್ತವೆ; \q2 ದೇವರ ಗದರಿಕೆಗೆ ಅವು ಬೆರಗಾಗಿ ಕದಲುತ್ತವೆ. \q1 \v 12 ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ; \q2 ದೇವರು ತಮ್ಮ ಜ್ಞಾನದಿಂದ ಘಟಸರ್ಪನಾದ ರಹಾಬನನ್ನು ಹೊಡೆದುಹಾಕುತ್ತಾರೆ. \q1 \v 13 ದೇವರ ಶ್ವಾಸದಿಂದ ಆಕಾಶಮಂಡಲವು ಶುಭ್ರವಾಗಿದೆ; \q2 ದೇವರು ಹಸ್ತವು ಹರಿದೋಡುವ ಸರ್ಪವನ್ನು ಇರಿಯುತ್ತದೆ. \q1 \v 14 ಇಗೋ, ಇವು ದೇವರ ಕಾರ್ಯಗಳಲ್ಲಿ ಕೆಲವು ಮಾತ್ರ; \q2 ದೇವರನ್ನು ಕುರಿತು ಪಿಸುಧ್ವನಿ ಮಾತ್ರ ಕೇಳಿದ್ದೇವೆ; \q2 ಹಾಗಾದರೆ, ದೇವರ ಪರಾಕ್ರಮದ ಗುಡುಗನ್ನು ಯಾರು ಗ್ರಹಿಸಿಕೊಳ್ಳುವರು?” \c 27 \s1 ಯೋಬನ ಕೊನೆಯ ಮಾತುಗಳು \p \v 1 ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ: \q1 \v 2 ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ, \q2 ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತರ ಆಣೆ, \q1 \v 3 “ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ; \q2 ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಆಡುತ್ತಿದೆ. \q1 \v 4 ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ. \q2 ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವುದಿಲ್ಲ. \q1 \v 5 ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ; \q2 ನಾನು ಸಾಯುವ ತನಕ, ನನ್ನ ಪ್ರಾಮಾಣಿಕತ್ವವನ್ನು ಬಿಡುವುದಿಲ್ಲ. \q1 \v 6 ನನ್ನ ನಿಷ್ಕಪಟತೆಯನ್ನು ದೃಢವಾಗಿ ಹಿಡುಕೊಂಡಿದ್ದೇನೆ; \q2 ಅದನ್ನು ಎಂದಿಗೂ ನಾನು ಹೋಗಗೊಡಿಸುವುದಿಲ್ಲ; \q2 ನಾನು ಜೀವಂತವಾಗಿ ಇರುವವರೆಗೂ ನನ್ನ ಮನಸ್ಸಾಕ್ಷಿಯು ನನ್ನನ್ನು ನಿಂದಿಸುವುದಿಲ್ಲ. \b \q1 \v 7 “ನನ್ನ ಶತ್ರು ದುಷ್ಟನ ಹಾಗಿರಲಿ; \q2 ನನ್ನ ವಿರುದ್ಧ ಏಳುವವನು ಅನ್ಯಾಯವಂತನ ಹಾಗಿರಲಿ. \q1 \v 8 ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, \q2 ಅವನಿಗೆ ನಿರೀಕ್ಷೆ ಎಲ್ಲಿ? \q1 \v 9 ಭಕ್ತಿಹೀನನಿಗೆ ಯಾತನೆ ಬಂದರೆ, \q2 ದೇವರು ಅವನ ಮೊರೆಯನ್ನು ಕೇಳುವರೋ? \q1 \v 10 ಭಕ್ತಿಹೀನನು ಸರ್ವಶಕ್ತರಲ್ಲಿ ಆನಂದವಾಗಿರುವನೋ? \q2 ಸರ್ವಕಾಲದಲ್ಲಿಯೂ ದೇವರನ್ನು ಕರೆಯುವನೋ? \b \q1 \v 11 “ನಾನು ದೇವರ ಶಕ್ತಿಯ ಬಗ್ಗೆ ನಿಮಗೆ ಬೋಧಿಸುವೆನು; \q2 ಸರ್ವಶಕ್ತರ ಮಾರ್ಗಗಳನ್ನು ನಾನು ಮರೆಮಾಡೆನು. \q1 \v 12 ನೀವೆಲ್ಲರೂ ಇದನ್ನು ನೋಡಿದ್ದರೂ, \q2 ಮತ್ತೆ ಏಕೆ ಈ ಪ್ರಕಾರ ವ್ಯರ್ಥವಾಗಿ ವಾದಿಸುತ್ತೀರಿ? \b \q1 \v 13 “ಇದು ದುಷ್ಟರಿಗೆ ದೇವರಿಂದ ಬಂದ ಪಾಲಾಗಿದೆ; \q2 ಹಿಂಸಕರಿಗೆ ಸರ್ವಶಕ್ತರಿಂದ ಹೊಂದುವ ಪಾಲು ಹೀಗಿರುತ್ತವೆ: \q1 \v 14 ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; \q2 ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು. \q1 \v 15 ಅವರ ಮನೆಯಲ್ಲಿ ಯಾರಾದರೂ ಉಳಿದರೆ, ವ್ಯಾಧಿಯಿಂದ ಸತ್ತು ಸಮಾಧಿ ಸೇರುವರು; \q2 ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ. \q1 \v 16 ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ, \q2 ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿಕೊಂಡಿದ್ದರೂ, \q1 \v 17 ಅವರು ಕೂಡಿಸಿಟ್ಟಿದ್ದನ್ನು ನೀತಿವಂತರು ಹಂಚಿಕೊಳ್ಳುವರು; \q2 ಅವರ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು. \q1 \v 18 ದುಷ್ಟರು ಕಟ್ಟಿಕೊಂಡ ಮನೆಯು ಜೇಡ ಹುಳದ ಗೂಡಿನಂತೆಯೂ, \q2 ಕಾವಲುಗಾರನ ಗುಡಿಸಿಲಂತೆಯೂ ದುರ್ಬಲವಾಗಿರುವುದು. \q1 \v 19 ದುಷ್ಟರು ಧನಿಕರಾಗಿ ನಿದ್ರಿಸಿದರೂ ಮತ್ತೆ ನಿದ್ರೆಬಾರದು; \q2 ಅವರು ತಮ್ಮ ಕಣ್ಣನ್ನು ತೆರೆಯುತ್ತಲೇ ಆಸ್ತಿ ಇಲ್ಲವಾಗಿರುವುದು. \q1 \v 20 ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು; \q2 ರಾತ್ರಿಯಲ್ಲಿ ಬಿರುಗಾಳಿ ಅಂಥವರನ್ನು ಅಪಹರಿಸುವುದು. \q1 \v 21 ಪೂರ್ವದಿಕ್ಕಿನ ಗಾಳಿ ದುಷ್ಟರನ್ನು ಬಡಿಯಲು, ಅವರು ಕೊಚ್ಚಿಕೊಂಡು ಹೋಗುವರು; \q2 ಅದು ಅವರನ್ನು ಅವರ ಸ್ಥಳದಿಂದ ಹಾರಿಸಿಬಿಡುವುದು. \q1 \v 22 ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, \q2 ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು. \q1 \v 23 ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; \q2 ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.” \c 28 \s1 ಜ್ಞಾನದ ಅನ್ವೇಷಣೆ \q1 \v 1 ಬೆಳ್ಳಿ ದೊರಕುವ ಗಣಿ ಇದೆ. \q2 ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ. \q1 \v 2 ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ; \q2 ಅದಿರನ್ನು ತಾಮ್ರವಾಗಲು ಕರಗಿಸುತ್ತಾರೆ. \q1 \v 3 ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ; \q2 ಕಾರ್ಗತ್ತಲಲ್ಲಿಯೂ ಮರೆಯಾಗಿರುವ ಲೋಹಗಳಿಗಾಗಿ \q2 ಭೂಮಿಯ ಆಳ ಪ್ರದೇಶದೊಳಗೆ ಅವರು ಶೋಧಿಸುತ್ತಾರೆ. \q1 \v 4 ಜನ ನಿವಾಸದಿಂದ ದೂರವಾಗಿ ಗಣಿ ತೋಡಿ, \q2 ಮನುಷ್ಯರು ನಡೆದಾಡದ ಸ್ಥಳಗಳಲ್ಲಿ ಇತರರಿಂದ \q2 ಪ್ರತ್ಯೇಕವಾಗಿ ಕೆಲಸ ಮಾಡುತ್ತಾರೆ. \q1 \v 5 ಭೂಮಿ ಆಹಾರವನ್ನು ಕೊಡುತ್ತದೆ; \q2 ಆದರೆ ಅದರ ಕೆಳಭಾಗವು ಬೆಂಕಿಯ ಹಾಗೆ ಬದಲಾಗುವುದು. \q1 \v 6 ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ; \q2 ಅದರ ಧೂಳಿನಲ್ಲಿ ಬಂಗಾರದ ಗಟ್ಟಿಗಳು ಇರುತ್ತವೆ. \q1 \v 7 ಆ ದಾರಿ ಯಾವ ಪಕ್ಷಿಗೂ ತಿಳಿಯದು; \q2 ಹದ್ದಿನ ಕಣ್ಣು ಸಹ ಅದನ್ನು ಕಂಡಿಲ್ಲ. \q1 \v 8 ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ; \q2 ಸಿಂಹವು ಅದನ್ನು ದಾಟಲಿಲ್ಲ. \q1 \v 9 ಮಾನವನ ಹಸ್ತವು ಬಂಡೆಗಳನ್ನು ಒಡೆಯುತ್ತದೆ; \q2 ಪರ್ವತಗಳ ಬುಡಗಳನ್ನು ಸಹ ಬರಿದಾಗಿ ಮಾಡುತ್ತವೆ. \q1 \v 10 ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ; \q2 ಅವರ ಕಣ್ಣು ಅದರ ಎಲ್ಲಾ ಸಂಪತ್ತನ್ನು ನೋಡುತ್ತದೆ. \q1 \v 11 ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ; \q2 ಅಡಗಿದ್ದ ಸಂಗತಿಗಳನ್ನು ಬೆಳಕಿಗೆ ತರುತ್ತಾರೆ. \b \q1 \v 12 ಆದರೆ ಜ್ಞಾನವು ಎಲ್ಲಿ ದೊರಕುವುದು? \q2 ಗ್ರಹಿಕೆ ಇರುವ ಸ್ಥಳ ಎಲ್ಲಿ? \q1 \v 13 ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; \q2 ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು. \q1 \v 14 ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ; \q2 ಸಮುದ್ರವು, “ಜ್ಞಾನವು ನನ್ನ ಬಳಿಯಲ್ಲಿ ಇಲ್ಲ,” ಎನ್ನುತ್ತದೆ. \q1 \v 15 ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು; \q2 ಜ್ಞಾನದ ಬೆಲೆಗೆ ಬೆಳ್ಳಿಯನ್ನು ತೂಕಮಾಡಲಾಗದು. \q1 \v 16 ಜ್ಞಾನವನ್ನು ಓಫಿರಿನ ಬಂಗಾರಕ್ಕೂ, \q2 ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು. \q1 \v 17 ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ; \q2 ಬಂಗಾರದ ಆಭರಣಗಳು ಸಹ ಜ್ಞಾನಕ್ಕೆ ಸಮವಲ್ಲ. \q1 \v 18 ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; \q2 ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ! \q1 \v 19 ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ; \q2 ಶುದ್ಧ ಬಂಗಾರದಿಂದಲೂ ಜ್ಞಾನವನ್ನು ಕೊಂಡುಕೊಳ್ಳಲಾಗದು. \b \q1 \v 20 ಆದರೆ ಜ್ಞಾನವು ಎಲ್ಲಿಂದ ಬರುವುದು? \q2 ಗ್ರಹಿಕೆಯ ಸ್ಥಳವು ಎಲ್ಲಿ? \q1 \v 21 ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; \q2 ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು. \q1 \v 22 ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು \q2 ನಮ್ಮ ಕಿವಿಗಳಿಂದ ಕೇಳಿದ್ದೇವೆ ಅಷ್ಟೇ,” ಎನ್ನುತ್ತವೆ. \q1 \v 23 ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; \q2 ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ. \q1 \v 24 ದೇವರೊಬ್ಬರೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ, \q2 ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವರಾಗಿದ್ದಾರೆ. \q1 \v 25 ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ, \q2 ನೀರುಗಳನ್ನು ತಕ್ಕ ಪ್ರಮಾಣಗಳಿಂದ ಅಳತೆಮಾಡಿ, \q1 \v 26 ಮಳೆಗೆ ಕಟ್ಟಳೆಯನ್ನೂ, \q2 ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ \q1 \v 27 ಜ್ಞಾನವನ್ನು ಕಂಡು ಲಕ್ಷಿಸಿದರು. \q2 ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು. \q1 \v 28 ದೇವರು ಮನುಷ್ಯನಿಗೆ, \q2 “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! \q2 ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು. \c 29 \s1 ಯೋಬನ ಕೊನೆಯ ಸಂಭಾಷಣೆ \p \v 1 ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ: \q1 \v 2 “ಕಳೆದುಹೋದ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಒಳ್ಳೆಯದು; \q2 ಆಗ ದೇವರು ನನ್ನನ್ನು ಕಾಪಾಡುತ್ತಿದ್ದರಲ್ಲವೆ? \q1 \v 3 ದೇವರ ದೀಪವು ನನ್ನ ತಲೆಯ ಮೇಲೆ ಬೆಳಗುತ್ತಿತ್ತು; \q2 ನಾನು ದೇವರ ಬೆಳಕಿನಿಂದ ಕತ್ತಲಲ್ಲಿ ನಡೆಯುತ್ತಿದ್ದೆ. \q1 \v 4 ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ \q2 ದೇವರ ಸ್ನೇಹವು ನನ್ನ ಗುಡಾರದ ಮೇಲೆ ಇರುತ್ತಿತ್ತು. \q1 \v 5 ಆಗ ಸರ್ವಶಕ್ತರು ನನ್ನ ಸಂಗಡ ಇರುತ್ತಿದ್ದರು; \q2 ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು. \q1 \v 6 ನನ್ನ ಹೆಜ್ಜೆಗಳನ್ನು ಮೊಸರಿನಿಂದ ತೊಳೆಯುತ್ತಾ ಇದ್ದೆನು; \q2 ಬಂಡೆಯಿಂದ ನನಗೆ ಓಲಿವ್ ಎಣ್ಣೆ ಪ್ರವಾಹವಾಗಿ ಸುರಿಸುತ್ತಿತ್ತು. \b \q1 \v 7 “ನಾನು ಪಟ್ಟಣದ ಮುಂಬಾಗಿಲಿಗೆ ಹೋದಾಗ, \q2 ಬೀದಿಯಲ್ಲಿ ನನ್ನ ಪೀಠದ ಮೇಲೆ ಕುಳಿತುಕೊಂಡಾಗ, \q1 \v 8 ಯುವಕರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು; \q2 ವೃದ್ಧರು ಸಹ ಎದ್ದು ನಿಲ್ಲುತ್ತಿದ್ದರು. \q1 \v 9 ಪ್ರಧಾನರು ನುಡಿಗಳನ್ನು ಬಿಗಿ ಹಿಡಿದು, \q2 ತಮ್ಮ ಬಾಯಿಯ ಮೇಲೆ ಕೈ ಇಟ್ಟುಕೊಳ್ಳುತ್ತಿದ್ದರು. \q1 \v 10 ಘನವಂತರು ಮೌನ ತಾಳುತ್ತಿದ್ದರು; \q2 ಅವರ ನಾಲಿಗೆ ಅವರ ಬಾಯಿಯ ಅಂಗಳಕ್ಕೆ ಅಂಟಿರುತ್ತಿತ್ತು. \q1 \v 11 ಕೇಳಿದ ಕಿವಿಯು ನನ್ನನ್ನು ಹರಸುತ್ತಿತ್ತು; \q2 ನೋಡಿದವರು ನನ್ನನ್ನು ಗೌರವಿಸುತ್ತಿದ್ದರು. \q1 \v 12 ಏಕೆಂದರೆ ಅಂಗಲಾಚುವ ಬಡವನನ್ನೂ, \q2 ಸಹಾಯಕನಿಲ್ಲದ ಅನಾಥನನ್ನೂ ನಾನು ರಕ್ಷಿಸುವವನಾಗಿದ್ದೆನು. \q1 \v 13 ಸಾಯುತ್ತಿದ್ದವರ ಆಶೀರ್ವಾದವು ನನ್ನ ಮೇಲೆ ಬರುತ್ತಿತ್ತು; \q2 ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ಮಾಡುತ್ತಿದ್ದೆನು. \q1 \v 14 ನಾನು ನೀತಿಯನ್ನು ನನ್ನ ಬಟ್ಟೆಯಂತೆ ಧರಿಸಿದ್ದೆನು; \q2 ನನ್ನ ನ್ಯಾಯವು ನಿಲುವಂಗಿಯ ಹಾಗೆಯೂ ಪೇಟದ ಹಾಗೆಯೂ ಇರುತ್ತಿತ್ತು. \q1 \v 15 ನಾನು ಕುರುಡನಿಗೆ ಕಣ್ಣೂ, \q2 ಕುಂಟನಿಗೆ ಕಾಲೂ ಆಗಿದ್ದೆನು. \q1 \v 16 ದರಿದ್ರರಿಗೆ ನಾನು ತಂದೆಯಾಗಿದ್ದೆನು; \q2 ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು. \q1 \v 17 ದುಷ್ಟರ ದವಡೆಗಳನ್ನು ಮುರಿಯುತ್ತಿದ್ದೆನು; \q2 ದುಷ್ಟರ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ಬಿಡಿಸುತ್ತಿದ್ದೆನು. \b \q1 \v 18 “ಆಗ ನಾನು, ‘ನನ್ನ ಮನೆಯಲ್ಲಿಯೇ ನಾನು ಸಾಯುವೆನು; \q2 ಮರಳಿನಂತೆ ನನ್ನ ದಿವಸಗಳು ಇರುತ್ತವೆ, \q1 \v 19 ನನ್ನ ಬೇರು ನೀರಿನ ಬಳಿ ಹಬ್ಬಿರುತ್ತದೆ; \q2 ರಾತ್ರಿಯಿಡಿ ನನ್ನ ಕೊಂಬೆಯ ಮೇಲೆ ಮಂಜು ಬಿದ್ದಿರುತ್ತದೆ. \q1 \v 20 ನನ್ನ ಘನವು ನನ್ನಲ್ಲಿ ಹೊಸದಾಗಿ ಇರುತ್ತದೆ; \q2 ನನ್ನ ಬಿಲ್ಲು ಸಹ ನನ್ನ ಕೈಯಲ್ಲಿ ಎಂದೆಂದಿಗೂ ಬಲಗೊಳ್ಳುತ್ತಾ ಇರುತ್ತದೆ,’ \q2 ಎಂದೆಲ್ಲಾ ಹೇಳುತ್ತಿದ್ದೆನು. \b \q1 \v 21 “ಜನರು ನನಗೆ ಕಿವಿಗೊಟ್ಟು ಎದುರುನೋಡುತ್ತಿದ್ದರು. \q2 ನನ್ನ ಆಲೋಚನೆ ಕೇಳಲು ಮೌನವಾಗಿರುತ್ತಿದ್ದರು. \q1 \v 22 ನನ್ನ ಮಾತಿನ ಮೇಲೆ ಅವರು ಬೇರೆ ಮಾತನಾಡುತ್ತಿರಲಿಲ್ಲ; \q2 ನನ್ನ ನುಡಿ ಅವರ ಕಿವಿಗೆ ಬೀಳುತ್ತಿತ್ತು. \q1 \v 23 ಮಳೆಯಂತೆ ನನ್ನನ್ನು ಎದುರುನೋಡುತ್ತಿದ್ದರು. \q2 ಮುಂಗಾರಿನ ಮಳೆಯಹಾಗೆ ನನ್ನ ಮಾತುಗಳಲ್ಲಿ ಉಲ್ಲಾಸಿಸುತ್ತಿದ್ದರು. \q1 \v 24 ನಾನು ಅವರನ್ನು ನೋಡಿ ಮುಗುಳ್ನಗಿದಾಗ, ಅವರು ಅದನ್ನು ನಂಬಲಿಲ್ಲ; \q2 ನನ್ನ ಮುಖದ ಕಾಂತಿ ಅವರಿಗೆ ಅಮೂಲ್ಯವಾಗಿತ್ತು. \q1 \v 25 ನಾನು ಅವರ ಪ್ರಧಾನನಾಗಿ ಕೂತು \q2 ಸೈನ್ಯಗಳ ನಡುವೆ ಅರಸನಂತೆ ಆಸೀನನಾಗಿದ್ದೆನು. \q2 ನಾನು ದುಃಖಿಸುವವರನ್ನು ಸಂತೈಸುವವನಾಗಿಯೂ ಇದ್ದೆನು. \b \c 30 \q1 \v 1 “ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು, \q2 ನನ್ನನ್ನು ನೋಡಿ ಪರಿಹಾಸ್ಯ ಮಾಡುತ್ತಾರೆ. \q1 ಇವರ ಪಿತೃಗಳನ್ನು ನನ್ನ ಕುರಿಮಂದೆಯ \q2 ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆನು. \q1 \v 2 ಇವರ ಕೈಗಳ ಬಲದಿಂದ ನನಗೇನಾಗುತ್ತಿತ್ತು? \q2 ಆಗ ಅವರ ಚೈತನ್ಯವು ಕುಗ್ಗಿಹೋಗಿತ್ತು! \q1 \v 3 ಅವರು ಬಡತನದಿಂದಲೂ ಹಸಿವಿನಿಂದಲೂ ಬಳಲಿಹೋಗಿದ್ದರು. \q2 ನಿರ್ಜನ ಮತ್ತು ಕತ್ತಲೆಯಾದ \q2 ಮರುಭೂಮಿಗಳ ಕಡೆಗೆ ಆಹಾರಕ್ಕಾಗಿ ಓಡಾಡುತ್ತಿದ್ದರು. \q1 \v 4 ಪೊದೆಗಳಲ್ಲಿನ ಉಪ್ಪಿನ ಸೊಪ್ಪು ಸಂಗ್ರಹಿಸುತ್ತಿದ್ದರು. \q2 ಜಾಲಿಯ ಬೇರುಗಳೇ ಅವರ ಆಹಾರವಾಗಿತ್ತು. \q1 \v 5 ಜನರು ಅವರನ್ನು ಹೊರಗೆ ಹಾಕುತ್ತಿದ್ದರು; \q2 ಕಳ್ಳರು ಎಂಬಂತೆ ಅವರನ್ನು ಓಡಿಸುತ್ತಿದ್ದರು. \q1 \v 6 ಆಗ ಅವರು ಭಯಂಕರ ತಗ್ಗುಗಳ ಸಂದುಗಳಲ್ಲಿಯೂ, \q2 ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸಿಸುತ್ತಿದ್ದರು. \q1 \v 7 ಪೊದೆಗಳ ನಡುವೆ ಇದ್ದುಕೊಂಡು ಅರಚುತ್ತಿದ್ದರು. \q2 ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುತ್ತಿದ್ದರು. \q1 \v 8 ಆಗ ಅವರು ಹುಚ್ಚರಂತೆಯೂ ಹೆಸರಿಲ್ಲದ ಮಕ್ಕಳಂತೆಯೂ \q2 ನಾಡಿನಿಂದ ಹೊರಗೆ ಅಲೆದಾಡುತ್ತಿದ್ದರು. \b \q1 \v 9 “ಆದರೆ ಈಗ ನಾನು ಅವರ ಹಾಸ್ಯದ ಹಾಡೂ, \q2 ಅವರಿಗೆ ಗಾದೆಯೂ ಆಗಿದ್ದೇನೆ. \q1 \v 10 ಈಗ ನನ್ನನ್ನು ಕಂಡು ಅಸಹ್ಯಪಟ್ಟು, ನನ್ನಿಂದ ದೂರಸರಿಯುತ್ತಿದ್ದಾರೆ. \q2 ನನ್ನ ಮುಖದ ಮೇಲೆ ಉಗುಳಲೂ ಹಿಂಜರಿಯುವದಿಲ್ಲ. \q1 \v 11 ಏಕೆಂದರೆ, ದೇವರು ನನ್ನ ಬಿಲ್ಲಿನ ಹಗ್ಗವನ್ನು ಸಡಲಿಸಿ, \q2 ಅವರಿಂದ ನನ್ನನ್ನು ಬಾಧಿಸಿದ್ದಾರೆ. \q2 ಆದ್ದರಿಂದ ಈಗ ಅವರು ಯಾವುದೇ ನಿರ್ಬಂಧವಿಲ್ಲದಂತೆ ನನ್ನ ಮೇಲೆ ಹೀಗೆಲ್ಲಾ ವರ್ತಿಸುತ್ತಿದ್ದಾರೆ. \q1 \v 12 ಬಲಗಡೆಯಲ್ಲಿ ಯುವಕರು ಎದ್ದಿದ್ದಾರೆ; \q2 ಅವರು ನನ್ನ ಕಾಲುಗಳಿಗೆ ಬಲೆ ಹಾಕಿದ್ದಾರೆ. \q2 ನನ್ನನ್ನು ನಾಶಮಾಡಲು ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಿದ್ದಾರೆ. \q1 \v 13 ನನ್ನ ದಾರಿಯನ್ನೂ ಕಡಿದುಹಾಕಿದ್ದಾರೆ; \q2 ಅವರು ನನ್ನನ್ನು ನಾಶಮಾಡಲು ಯಶಸ್ವಿಯಾಗುತ್ತಿದ್ದಾರೆ; \q2 ‘ಅವನಿಗೆ ಸಹಾಯಕನಿಲ್ಲ,’ ಎಂದು ಹೇಳುತ್ತಿದ್ದಾರೆ. \q1 \v 14 ಆ ಯುವಕರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬರುತ್ತಿದ್ದಾರೆ; \q2 ನಾಶನದಲ್ಲಿರುವ ನನ್ನ ಮೇಲೆ ಅವರು ಉರುಳಿಬೀಳಲಿದ್ದಾರೆ. \q1 \v 15 ವಿಪತ್ತುಗಳು ನನ್ನ ಮೇಲೆ ತಿರುಗಿಬಿದ್ದು, \q2 ನನ್ನ ಮಾನಮರ್ಯಾದೆ ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿದೆ; \q2 ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಗುತ್ತಿದೆ. \b \q1 \v 16 “ಆದರೆ ಈಗ ನನ್ನ ಪ್ರಾಣವು ನನ್ನಲ್ಲಿಯೇ ಕರಗಿಹೋಗಿದೆ; \q2 ಸಂಕಟದ ದಿವಸಗಳು ನನ್ನನ್ನು ಬಿಗಿಹಿಡಿದಿವೆ. \q1 \v 17 ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ಕೊರೆಯುತ್ತಿವೆ; \q2 ನನ್ನ ಸಂಕಟಗಳು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ. \q1 \v 18 ದೇವರ ಅಧಿಕ ಬಲದಲ್ಲಿ ನನ್ನ ಬಟ್ಟೆಯು ರೋಗದಿಂದ ಬಿಗಿಯಾಗಿ, \q2 ಅಂಗಿಯ ಕೊರಳ ಪಟ್ಟಿಯಂತೆ ನನ್ನನ್ನು ಸುತ್ತಿಕೊಂಡಿದೆ. \q1 \v 19 ದೇವರು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾರೆ; \q2 ನಾನು ಧೂಳಿಗೂ ಬೂದಿಗೂ ಸಮಾನನಾಗಿದ್ದೇನೆ. \b \q1 \v 20 “ದೇವರೇ, ನಿಮಗೆ ಮೊರೆಯಿಡುತ್ತೇನೆ ಆದರೆ ನೀವು ನನಗೆ ಉತ್ತರ ಕೊಡುವುದಿಲ್ಲ, \q2 ನಾನು ಎದ್ದುನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿರಿ. \q1 \v 21 ನೀವು ನನಗೆ ಕ್ರೂರರಾಗಿದ್ದೀರಿ, \q2 ನಿಮ್ಮ ಹಸ್ತ ಶಕ್ತಿಯಿಂದ ನನಗೆ ಹಿಂಸೆಕೊಡುತ್ತೀರಿ. \q1 \v 22 ನನ್ನನ್ನು ಗಾಳಿಗೆ ಎತ್ತಿ ತೂರಿಬಿಟ್ಟಿರುವಿರಿ, \q2 ನನ್ನನ್ನು ಬಿರುಗಾಳಿಗೆ ತೊಳಲಾಡುವಂತೆ ಮಾಡಿದ್ದೀರಿ. \q1 \v 23 ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, \q2 ಸೇರಿಸುವಿರಿ ಎಂದು ನನಗೆ ಗೊತ್ತಿದೆ. \b \q1 \v 24 “ಆದರೂ ಮುರಿದ ಮನುಷ್ಯನಾಗಿರುವ ನಾನು ಸಹಾಯಕ್ಕಾಗಿ ಕೈಚಾಚಬಾರದೆ? \q2 ಆಪತ್ತಿಗೆ ಒಳಪಟ್ಟವನಾದ ನಾನು ಕೂಗಿಕೊಳ್ಳಬಾರದೆ? \q1 \v 25 ಕಷ್ಟದಲ್ಲಿ ಇದ್ದವರಿಗೋಸ್ಕರ ನಾನು ಕಣ್ಣೀರಿಡಲಿಲ್ಲವೆ? \q2 ದರಿದ್ರನಿಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೆ? \q1 \v 26 ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರಲು ಕೇಡು ಬಂದೊದಗಿತು; \q2 ನಾನು ಬೆಳಕನ್ನು ಎದುರು ನೋಡಲು, ಅಂಧಕಾರ ಬಂದು ಕವಿಯಿತು. \q1 \v 27 ನನ್ನ ಹೃದಯವು ಯಾವಾಗಲೂ ಅಶಾಂತಿಯಿಂದ ಕುದಿಯುತ್ತಿದೆ; \q2 ಸಂಕಟಗಳ ದಿವಸಗಳು ನನ್ನನ್ನು ಎದುರಿಸುತ್ತಿವೆ. \q1 \v 28 ಬಿಸಿಲು ನನ್ನ ಮೇಲೆ ಬೀಳದಿದ್ದರೂ ನಾನು ಕಪ್ಪಾಗಿ ಹೋದೆನು; \q2 ನಾನು ಸಭೆಯಲ್ಲಿ ಎದ್ದು ನಿಂತು ಸಹಾಯಕ್ಕಾಗಿ ಕೂಗಿದೆನು. \q1 \v 29 ನಾನು ನರಿಗಳಿಗೆ ಸಹೋದರನಾದೆನು; \q2 ಗೂಬೆಗಳಿಗೆ ನಾನು ಜೊತೆಯವನಾದೆನು. \q1 \v 30 ನನ್ನ ಮೇಲಿನ ಚರ್ಮವು ಕಪ್ಪಾಗಿ ಉದುರುತ್ತಿದೆ; \q2 ನನ್ನ ಶರೀರ ಜ್ವರದಿಂದ ಬಿಸಿಯಾಗಿದೆ. \q1 \v 31 ನನ್ನ ಕಿನ್ನರಿಯಲ್ಲಿ ಗೋಳಾಟದ ಧ್ವನಿಯು ಕೇಳಿಸುತ್ತಿದೆ. \q2 ನನ್ನ ಕೊಳಲಿನಲ್ಲಿ ಅಳುವವರ ಸ್ವರವೇ ಕೇಳಿಬರುತ್ತಿದೆ. \b \c 31 \q1 \v 1 “ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು \q2 ನನ್ನ ಕಣ್ಣುಗಳೊಂದಿಗೆ ನಾನು ಒಡಂಬಡಿಕೆಯನ್ನು ಮಾಡಿಕೊಂಡೆನು. \q1 \v 2 ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವರು? \q2 ಸರ್ವಶಕ್ತರು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವುದು? \q1 \v 3 ದುಷ್ಟರಿಗೆ ವಿಪತ್ತು ಇಲ್ಲವೋ? \q2 ಕೆಡುಕರಿಗೆ ವಿನಾಶ ಇಲ್ಲವೋ? \q1 \v 4 ದೇವರು ನನ್ನ ಮಾರ್ಗಗಳನ್ನು ನೋಡಿ, \q2 ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಾರಲ್ಲವೆ? \b \q1 \v 5 “ನಾನು ಕಪಟವಾಗಿ ನಡೆದುಕೊಂಡಿದ್ದರೆ, \q2 ಮೋಸಕ್ಕೆ ನನ್ನ ಕಾಲು ತ್ವರೆಪಟ್ಟಿದ್ದರೆ, \q1 \v 6 ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ; \q2 ನಾನು ನಿರ್ದೋಷಿ ಎಂದು ದೇವರು ತಿಳಿದುಕೊಳ್ಳಲಿ. \q1 \v 7 ನಾನು ದಾರಿತಪ್ಪಿ ನಡೆದಿದ್ದರೆ, \q2 ನನ್ನ ಕಣ್ಣು ಕಂಡವುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, \q2 ನನ್ನ ಅಂಗೈಗಳಲ್ಲಿ ದೋಷ ಅಂಟಿಕೊಂಡಿದ್ದರೆ, \q1 \v 8 ನಾನು ಬಿತ್ತುವುದನ್ನು ಬೇರೊಬ್ಬನು ಉಣ್ಣಲಿ; \q2 ನನ್ನ ಬೆಳೆಯು ಬುಡಮೇಲಾಗಲಿ. \b \q1 \v 9 “ನನ್ನ ಹೃದಯವು ಪರಸ್ತ್ರೀಗೆ ಮರುಳಾಗಿ, \q2 ನನ್ನ ನೆರೆಯವನ ಬಾಗಿಲ ಹತ್ತಿರ ನಾನು ಹೊಂಚುಹಾಕಿದ್ದರೆ, \q1 \v 10 ನನ್ನ ಹೆಂಡತಿ ಮತ್ತೊಬ್ಬನಿಗೋಸ್ಕರ ಧಾನ್ಯಬೀಸಲಿ, \q2 ಮತ್ತೊಬ್ಬರು ಅವಳ ಸಂಗಡ ಮಲಗಲಿ. \q1 \v 11 ಏಕೆಂದರೆ ನಾನು ಹಾಗೆಲ್ಲಾ ಮಾಡಿದ್ದರೆ, ಅಂಥ ನಡತೆ ದುಷ್ಕಾರ್ಯವಾಗುತ್ತಿತ್ತು, \q2 ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾಗುತ್ತಿತ್ತು. \q1 \v 12 ಅದು ನಾಶಲೋಕದವರೆಗೆ ದಹಿಸುವಂಥಾ ಅಗ್ನಿಯಾಗುತ್ತಿತ್ತು, \q2 ಅದು ನನ್ನ ಆದಾಯವನ್ನೆಲ್ಲಾ ನಿರ್ಮೂಲ ಮಾಡುತ್ತಿತ್ತು. \b \q1 \v 13 “ಒಂದು ವೇಳೆ ನನಗೂ \q2 ನನ್ನ ದಾಸದಾಸಿಯರಿಗೂ ನನ್ನ ಮೇಲೆ ವ್ಯಾಜ್ಯವಾದಾಗ, \q2 ನಾನು ಅವರ ನ್ಯಾಯವನ್ನು ತಿರಸ್ಕರಿಸಿದ್ದರೆ, \q1 \v 14 ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡುತ್ತಿದ್ದೆನು? \q2 ದೇವರು ವಿಚಾರಿಸುವಾಗ, ನಾನು ಅವರಿಗೆ ಏನು ಉತ್ತರಕೊಡುತ್ತಿದ್ದೆನು? \q1 \v 15 ಗರ್ಭದಲ್ಲಿ ನನ್ನನ್ನು ಉಂಟುಮಾಡಿದ ದೇವರೇ ಅವರನ್ನೂ ಉಂಟು ಮಾಡಿದ್ದಾರಲ್ಲವೇ? \q2 ಅವರನ್ನೂ, ನನ್ನನ್ನೂ ತಾಯಂದಿರ ಗರ್ಭದಲ್ಲಿ ರೂಪಿಸಿದ ದೇವರು ಒಬ್ಬರೇ ಅಲ್ಲವೇ? \b \q1 \v 16 “ನಾನು ಬಡವರ ಬಯಕೆಗಳನ್ನು ಭಂಗಪಡಿಸಿದೆನೋ? \q2 ವಿಧವೆಯ ಕಣ್ಣುಗಳನ್ನು ನಾನು ಮಂಕಾಗಿಸಿದೆನೋ? \q1 \v 17 ದಿಕ್ಕಿಲ್ಲದವರು ಊಟ ಉಣ್ಣದ ಹಾಗೆ, \q2 ನಾನು ಮಾತ್ರ ತುತ್ತನ್ನೆಲ್ಲಾ ಒಂಟಿಯಾಗಿ ತಿಂದೆನೋ? \q1 \v 18 ಇಲ್ಲಾ, ನನ್ನ ಯೌವನಕಾಲದಿಂದ ನಾನು ಅನಾಥರನ್ನು ತಂದೆಯಂತೆ ಬೆಳೆಸಿದೆನು. \q2 ಹುಟ್ಟಿದಂದಿನಿಂದ ವಿಧವೆಯರಿಗೆ ಮಾರ್ಗದರ್ಶಿಯಾಗಿದ್ದೆನು. \q1 \v 19 ಬಟ್ಟೆ ಇಲ್ಲದೆ ಕಷ್ಟಪಡುವವರನ್ನೂ, \q2 ಹೊದಿಕೆ ಇಲ್ಲದೆ ನಡುಗುವವರನ್ನೂ ನಾನು ನೋಡಿದಾಗೆಲ್ಲಾ, \q1 \v 20 ಆ ಬಡವರು ನನ್ನ ಕುರಿ ಉಣ್ಣೆಯಿಂದ ಬೆಚ್ಚಗಾಗಿ, \q2 ತಮ್ಮ ಅಂತರಾಳದಿಂದ ನನ್ನನ್ನು ಹರಸಲಿಲ್ಲವೋ? \q1 \v 21 ನ್ಯಾಯಸ್ಥಾನದಲ್ಲಿ ನನಗೆ ಬೆಂಬಲ ಉಂಟೆಂದು ಕಂಡು, \q2 ನಾನು ದಿಕ್ಕಿಲ್ಲದವರ ಮೇಲೆ ನನ್ನ ಕೈಮಾಡಿದ್ದರೆ, \q1 \v 22 ನನ್ನ ಹೆಗಲು, ಬೆನ್ನಿನ ಕೀಲು ತಪ್ಪಿಹೋಗಲಿ; \q2 ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ. \q1 \v 23 ಏಕೆಂದರೆ ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗೆ ಹೆದರಿಕೆಯಾಯಿತು; \q2 ದೇವರ ಪ್ರಭಾವದ ಭಯದ ನಿಮಿತ್ತ ನಾನು ಇಂಥ ಕೃತ್ಯವನ್ನು ಮಾಡುವುದಕ್ಕೆ ಸಾಧ್ಯವಾಗಲಿಲ್ಲ. \b \q1 \v 24 “ನಾನು ಬಂಗಾರದಲ್ಲಿ ನನ್ನ ನಿರೀಕ್ಷೆಯನ್ನು ಇಟ್ಟಿದ್ದರೆ, \q2 ಅಪರಂಜಿಗೆ, ‘ನೀನು ನನ್ನ ಭದ್ರತೆ,’ ಎಂದು ಹೇಳಿದ್ದರೆ, \q1 \v 25 ನನ್ನ ಐಶ್ವರ್ಯವು ಬಹಳ ಎಂದು ಕೊಚ್ಚಿಕೊಂಡಿದ್ದರೆ, \q2 ನನ್ನ ಕೈ ಬಹಳ ಸಂಪಾದಿಸಿದೆ ಎಂದು ನಾನು ಸಂತೋಷಪಟ್ಟಿದ್ದರೆ, \q1 \v 26 ನಾನು ಸೂರ್ಯನು ಹೊಳೆಯುವುದನ್ನು ಗಮನಿಸಿ, \q2 ಚಂದ್ರನು ಪ್ರಭೆಯಲ್ಲಿ ಚಲಿಸುವುದನ್ನು ನೋಡಿ, \q1 \v 27 ನನ್ನ ಹೃದಯವು ಮರುಳುಗೊಂಡು, \q2 ನನ್ನ ಕೈ ಅವುಗಳನ್ನು ನನ್ನ ಬಾಯಿಂದ ಗೌರವದಿಂದ ಮುಗಿದಿದ್ದರೆ, \q1 \v 28 ಇದು ಸಹ ನ್ಯಾಯಾಧಿಪತಿಯ ದಂಡನೆಗೆ ಯೋಗ್ಯವಾಗುತ್ತಿತ್ತು; \q2 ಏಕೆಂದರೆ, ಆಗ ನಾನು ಉನ್ನತದಲ್ಲಿರುವ ದೇವರಿಗೆ ದ್ರೋಹಿಯಾಗುತ್ತಿದ್ದೆನು. \b \q1 \v 29 “ವೈರಿಯ ನಾಶಕ್ಕೆ ನಾನು ಸಂತೋಷಪಟ್ಟು, \q2 ವೈರಿಗೆ ಕೇಡು ಬಂದಾಗ ಹಿಗ್ಗಿಕೊಂಡು ಗರ್ವಪಟ್ಟೆನೋ? \q1 \v 30 ಇಲ್ಲ, ಅವನ ಸಾಯಲಿ ಎಂದು ನಾನು ಶಾಪ ಕೊಡಲಿಲ್ಲ. \q2 ನಾನು ನನ್ನ ಬಾಯಿಂದ ಅಂಥ ಪಾಪಮಾಡಲಿಲ್ಲ. \q1 \v 31 ನನ್ನ ಮನೆಯ ಕೆಲಸದವರು, \q2 ‘ಯೋಬನು ನೀಡಿದ ಭೋಜನದಿಂದ ತೃಪ್ತರಾಗದವರು ಯಾರು?’ ಎಂದು ಹೇಳಿಕೊಳ್ಳುತ್ತಿದ್ದರಲ್ಲವೆ? \q1 \v 32 ಆದರೆ ಯಾವ ಪರದೇಶಸ್ಥರೂ ಬೀದಿಯಲ್ಲಿ ತಂಗಬೇಕಾಗಿರಲಿಲ್ಲ; \q2 ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿಟ್ಟಿದ್ದೆನು. \q1 \v 33 ನಾನು ಹೃದಯದಲ್ಲಿ ನನ್ನ ಅಪರಾಧ ಪ್ರಜ್ಞೆಯನ್ನು ಅಡಗಿಸಿ, \q2 ಮಾನವರಂತೆ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ. \q1 \v 34 ನಾನು ದೊಡ್ಡ ಸಮೂಹಕ್ಕೆ ಹೆದರಿದೆನೋ? \q2 ಕುಲಗಳ ಅವಹೇಳನಕ್ಕೆ ಕಳವಳಗೊಂಡರೂ, \q2 ಬಾಗಿಲಿನಿಂದ ಹೊರಗೆ ಹೋಗದೆ ಮೌನವಾಗಿದ್ದೆನೋ? \b \q1 \v 35 “ನನ್ನ ಕರೆಗೆ ಕಿವಿಗೊಡತಕ್ಕವರು ಒಬ್ಬರು ಈಗ ಇದ್ದರೆ ಎಷ್ಟೋ ಲೇಸು! \q2 ಸರ್ವಶಕ್ತರು ನನಗೆ ಉತ್ತರಕೊಡಲಿ; \q2 ನನ್ನ ವಿರೋಧಿಯು ನನ್ನ ಆಪಾದನಾ ಪತ್ರವನ್ನು ಬರೆದು ಕೊಡಲಿ. \q1 \v 36 ನಾನು ನನ್ನ ಹೆಗಲಲ್ಲಿ ಆ ಲಿಖಿತವನ್ನು ನಿಶ್ಚಯವಾಗಿ ಹೊತ್ತು ನಡೆಯುತ್ತಿದ್ದೆ; \q2 ಅದನ್ನು ಕಿರೀಟವಾಗಿ ಧರಿಸಿಕೊಳ್ಳುತ್ತಿದ್ದೆನು. \q1 \v 37 ನನ್ನ ಹೆಜ್ಜೆಗಳ ಲೆಕ್ಕವನ್ನು ದೇವರಿಗೆ ಒಪ್ಪಿಸುತ್ತಿದ್ದೆನು; \q2 ಒಬ್ಬ ಅಧಿಪತಿಯಂತೆ ನಾನು ದೇವರನ್ನು ಸಮೀಪಿಸುತ್ತಿದ್ದೆನು. \b \q1 \v 38 “ನನ್ನ ಹೊಲ ನನಗೆ ವಿರೋಧವಾಗಿ ಪ್ರತಿಭಟಿಸಿದ್ದರೆ, \q2 ಅದರ ನೇಗಿಲ ಗೆರೆಗಳೆಲ್ಲಾ ದೂರಿ ಅಳುತ್ತಿದ್ದರೆ, \q1 \v 39 ಕೂಲಿಕೊಡದೆ ಭೂಮಿಯ ಫಲವನ್ನು ನಾನು ತಿಂದಿದ್ದರೆ, \q2 ಅದರ ಯಜಮಾನರ ಪ್ರಾಣಹಾನಿಗೆ ಕಾರಣನಾಗಿದ್ದರೆ, \q1 \v 40 ಗೋಧಿಗೆ ಬದಲಾಗಿ ಮುಳ್ಳುಗಳೂ, \q2 ಜವೆಗೋಧಿಗೆ ಬದಲಾಗಿ ಕಳೆಗಳೂ ಬೆಳೆಯಲಿ.” \p ಹೀಗೆ ಯೋಬನ ಮಾತುಗಳು ಮುಗಿದವು. \c 32 \s1 ಎಲೀಹುವಿನ ವಾದ \p \v 1 ಯೋಬನು ತಾನು ನೀತಿವಂತನೆಂದು ಸಾಧಿಸಿದ್ದನು. ಆದ್ದರಿಂದ ಆ ಮೂರು ಸ್ನೇಹಿತರು ಯೋಬನಿಗೆ ಉತ್ತರ ಕೊಡುವುದನ್ನು ನಿಲ್ಲಸಿಬಿಟ್ಟರು. \v 2 ಆಗ ರಾಮ ಗೋತ್ರದ ಬೂಜ್ಯನಾದ ಬರಕೇಲನ ಮಗ ಎಲೀಹು, ಯೋಬನ ಮೇಲೆ ಬಹು ಕೋಪಗೊಂಡನು. ಯೋಬನು ದೇವರಿಗಿಂತ ತನ್ನನ್ನು ನ್ಯಾಯವಂತನೆಂದು ಸ್ಥಾಪಿಸಿದ್ದರಿಂದ, ಎಲೀಹು ಅವನ ಮೇಲೆ ಕೋಪಗೊಂಡನು. \v 3 ಯೋಬನ ಮೂವರು ಸ್ನೇಹಿತರ ಮೇಲೆಯೂ ಎಲೀಹು ಕೋಪಗೊಂಡನು. ಅವರು ಉತ್ತರ ಕಂಡುಕೊಳ್ಳದೆ, ಯೋಬನನ್ನು ಖಂಡಿಸಿದ್ದರಿಂದ ಎಲೀಹುವಿನ ಕೋಪ ಉರಿಯಿತು. \v 4 ಎಲೀಹು, ಯೋಬನ ಮಾತುಗಳು ಮುಗಿಯುವವರೆಗೂ ಕಾದಿದ್ದನು. ಏಕೆಂದರೆ ಅವನಿಗಿಂತ ಅವರೆಲ್ಲರೂ ಹಿರಿಯರಾಗಿದ್ದರು. \v 5 ಆ ಮೂವರ ಮಾತಿನಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ, ಅವನ ಕೋಪ ಮತ್ತಷ್ಟು ಉರಿಯಿತು. \p \v 6 ಆಗ ಬೂಜ್ಯನಾದ ಬರಕೇಲನ ಮಗ ಎಲೀಹು ಹೇಳಿದ್ದೇನೆಂದರೆ: \q1 “ನಾನು ಪ್ರಾಯದಲ್ಲಿ ಯುವಕನು, \q2 ನೀವು ಪ್ರಾಯಸ್ಥರು. \q1 ಆದ್ದರಿಂದ ನಾನು ಸಂಕೋಚಗೊಂಡು \q2 ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವುದಕ್ಕೆ ಭಯಪಟ್ಟೆನು. \q1 \v 7 ‘ದಿನ ಗತಿಸಿದವರು ಮಾತನಾಡಲಿ, \q2 ಬಹಳ ವರ್ಷದವರು ಜ್ಞಾನವನ್ನು ಬೋಧಿಸಲಿ,’ ಎಂದುಕೊಂಡೆನು. \q1 \v 8 ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; \q2 ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ. \q1 \v 9 ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; \q2 ಮುದುಕರೇ ನ್ಯಾಯವನ್ನು ಬಲ್ಲವರಲ್ಲ. \b \q1 \v 10 “ಆದಕಾರಣ, ನಾನು ಹೇಳುತ್ತಿದ್ದೇನೆ: ನನ್ನ ಮಾತನ್ನು ಕೇಳಿಸಿಕೊಳ್ಳಿರಿ, \q2 ನನಗೆ ಗೊತ್ತಿದ್ದನ್ನು ನಾನು ತಿಳಿಸುತ್ತೇನೆ. \q1 \v 11 ನೀವು ಮಾತಾಡಿ ಮುಗಿಸುವ ತನಕ ನಾನು ಕಾದಿದ್ದೆ. \q2 ನೀವು ಹೇಳುತ್ತಿದ್ದ ಕಾರಣಗಳನ್ನೂ, \q1 ಏನು ಹೇಳಬೇಕೆಂದು ಹುಡುಕುತ್ತಿದ್ದ ಪದಗಳನ್ನೂ ನಾನು ಕೇಳುತ್ತಿದ್ದೆನು. \q2 \v 12 ನಾನು ನಿಮ್ಮ ಮಾತಿಗೆ ಪೂರ್ಣ ಲಕ್ಷ್ಯವಿಟ್ಟಿದ್ದೆನು. \q1 ಆದರೆ, ನಿಮ್ಮಲ್ಲಿ ಯೋಬನ ತಪ್ಪನ್ನು ರುಜುಪಡಿಸುವವರೂ, \q2 ಯೋಬನ ವಾದಗಳಿಗೆ ಸರಿಯಾಗಿ ಉತ್ತರ ಕೊಡುವವರೂ ನಿಮ್ಮಲ್ಲಿ ಯಾರೂ ಇಲ್ಲ. \q1 \v 13 ‘ನಾವು ಯೋಬನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ ದೇವರೇ ಅವನನ್ನು ಖಂಡಿಸಿಬಿಡಲಿ, \q2 ಇದು ಮನುಷ್ಯನಿಂದಾಗುವುದಿಲ್ಲ,’ ಎಂಬುದಾಗಿ ಅಂದುಕೊಳ್ಳಬೇಡಿರಿ. \q1 \v 14 ಯೋಬನು ನನಗೆ ವಿರೋಧವಾಗಿ ನುಡಿಗಳನ್ನು ಪ್ರಯೋಗ ಮಾಡಲಿಲ್ಲ; \q2 ನಿಮ್ಮ ವಾದಗಳಿಂದ ನಾನು ಅವನಿಗೆ ಉತ್ತರ ಕೊಡುವುದಿಲ್ಲ. \b \q1 \v 15 “ಯೋಬನೇ, ಇವರು ವಿಸ್ಮಯಗೊಂಡು ಇನ್ನು ಉತ್ತರ ಕೊಡದವರಾಗಿದ್ದಾರೆ; \q2 ಇವರಿಗೆ ಮಾತನಾಡಲು ಪದಗಳೇ ಸಿಕ್ಕುತ್ತಾಯಿಲ್ಲ. \q1 \v 16 ಇವರು ಇನ್ನು ಉತ್ತರ ಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, \q2 ನಾನೂ ಕಾದುಕೊಂಡಿರಬೇಕೋ? \q1 \v 17 ನಾನು ನನ್ನ ಪಾಲಿನ ಉತ್ತರವನ್ನು ಹೇಳುವೆನು, \q2 ನಾನೇ ನನ್ನ ಅಭಿಪ್ರಾಯವನ್ನು ತಿಳಿಸುವೆನು. \q1 \v 18 ಏಕೆಂದರೆ ಅನೇಕ ವಿಷಯಗಳಿಂದ ನಾನು ತುಂಬಿದ್ದೇನೆ; \q2 ನನ್ನೊಳಗಿನ ಆತ್ಮವು ನನ್ನನ್ನು ಒತ್ತಾಯಪಡಿಸುತ್ತಿದೆ. \q1 \v 19 ನನ್ನ ಅಂತರಾತ್ಮವು ತೆರೆಯದ ದ್ರಾಕ್ಷಾರಸದ ಹಾಗೆ ಇದೆ; \q2 ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಇದೆ. \q1 \v 20 ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು; \q2 ನನ್ನ ತುಟಿಗಳನ್ನು ತೆರೆದು ಉತ್ತರಕೊಡುವೆನು. \q1 \v 21 ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು; \q2 ನಾನು ಯಾವ ಮನುಷ್ಯನನ್ನು ಹೊಗಳೆನು. \q1 \v 22 ಹೊಗಳುವುದರಲ್ಲಿ ನಾನು ಪ್ರವೀಣನಾಗಿದ್ದರೆ, \q2 ನನ್ನ ಸೃಷ್ಟಿಕರ್ತ ಆಗಿರುವವರು ನನ್ನನ್ನು ಬೇಗ ತೆಗೆದುಕೊಂಡು ಹೋಗಲಿ. \b \c 33 \q1 \v 1 “ಆದ್ದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು. \q2 ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ. \q1 \v 2 ಈಗ ನಾನು ಮಾತಾಡಲು ಪ್ರಾರಂಭಿಸಿದ್ದೇನೆ; \q2 ನನ್ನ ಮಾತುಗಳು ನನ್ನ ನಾಲಿಗೆಯ ತುದಿಯಲ್ಲಿವೆ. \q1 \v 3 ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುತ್ತವೆ; \q2 ನನ್ನ ತುಟಿಗಳು ನಾನು ತಿಳಿದುಕೊಂಡಿದ್ದನ್ನೇ ಯಥಾರ್ಥವಾಗಿ ಹೇಳುತ್ತವೆ. \q1 \v 4 ದೇವರ ಆತ್ಮರು ನನ್ನನ್ನು ಉಂಟುಮಾಡಿದರು. \q2 ಸರ್ವಶಕ್ತರ ಶ್ವಾಸವೇ ನನಗೆ ಜೀವವನ್ನು ಕೊಟ್ಟಿತು. \q1 \v 5 ನಿನಗೆ ಸಾಧ್ಯವಾದರೆ ನನಗೆ ಉತ್ತರಕೊಡು; \q2 ನನ್ನ ಎದುರಿನಲ್ಲೇ ನಿನ್ನ ವ್ಯಾಜ್ಯವನ್ನು ವಾದಿಸು. \q1 \v 6 ನೋಡು, ದೇವರ ದೃಷ್ಟಿಯಲ್ಲಿ ನಾನು ನಿನ್ನಂತೆಯೇ ಇದ್ದೇನೆ; \q2 ನಾನು ಸಹ ಜೇಡಿಮಣ್ಣಿನಿಂದ ರೂಪಿತವಾಗಿದ್ದೇನೆ. \q1 \v 7 ಆದ್ದರಿಂದ ನನ್ನ ಭೀತಿ ನಿನ್ನನ್ನು ಎಚ್ಚರಿಸದಿರಲಿ; \q2 ನನ್ನ ಒತ್ತಾಯ ನಿನ್ನ ಮೇಲೆ ಭಾರವಾಗಿರಬಾರದು. \b \q1 \v 8 “ನಿಶ್ಚಯವಾಗಿ, ನೀನು ಆಡಿದ್ದೆಲ್ಲಾ ನನ್ನ ಕಿವಿಗೆ ಬಿದ್ದಿವೆ. \q2 ನಾನೇ ಈ ರೀತಿಯಾಗಿ ನೀನು ಆಡಿದ ಮಾತುಗಳನ್ನು ಕೇಳಿದ್ದೇನೆ: \q1 \v 9 ‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; \q2 ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ. \q1 \v 10 ಆದರೂ ದೇವರು ನನ್ನಲ್ಲಿ ತಪ್ಪು ಕಂಡುಹಿಡಿಯುತ್ತಿದ್ದಾರೆ; \q2 ದೇವರು ನನ್ನನ್ನು ಶತ್ರುವೆಂದು ಎಣಿಸುತ್ತಿದ್ದಾರೆ. \q1 \v 11 ದೇವರು ನನ್ನ ಕಾಲುಗಳಿಗೆ ಕೋಳ ಹಾಕಿದ್ದಾರೆ; \q2 ದೇವರು ನನ್ನ ಎಲ್ಲಾ ಹಾದಿಗಳನ್ನೂ ಪರಿಶೋಧಿಸುತ್ತಿದ್ದಾರೆ.’ \b \q1 \v 12 “ಹೀಗೆಲ್ಲಾ ನೀನು ಮಾತಾಡಿದ್ದು ಸರಿಯಲ್ಲವೆಂದು ನಾನು ನಿನಗೆ ಹೇಳುತ್ತೇನೆ. \q2 ಏಕೆಂದರೆ ದೇವರು ಮನುಷ್ಯರಿಗಿಂತ ಬಹಳ ದೊಡ್ಡವರು. \q1 \v 13 ದೇವರು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ಕೊಡಲಿಲ್ಲ ಎಂದು \q2 ನೀನು ದೇವರೊಂದಿಗೆ ವ್ಯಾಜ್ಯವಾಡುವುದೇಕೆ? \q1 \v 14 ಏಕೆಂದರೆ ದೇವರು ಮಾತನಾಡುತ್ತಾರೆ. ಹೌದು, ವಿವಿಧ ರೀತಿಯಿಂದ ಮಾತನಾಡುತ್ತಾರೆ; \q2 ಆದರೂ ಯಾರು ದೇವರ ಸ್ವರವನ್ನು ಗ್ರಹಿಸಿಕೊಳ್ಳುವುದಿಲ್ಲ. \q1 \v 15 ಸ್ವಪ್ನದಲ್ಲಿ, ರಾತ್ರಿಯ ದರ್ಶನದಲ್ಲಿ, \q2 ಗಾಢನಿದ್ರೆಯು ಮನುಷ್ಯರಿಗೆ ಬಂದಾಗ, \q2 ಹಾಸಿಗೆಯ ಮೇಲಿನ ತೂಕಡಿಕೆಗಳಲ್ಲಿ ಸಹ, \q1 \v 16 ದೇವರು ಮನುಷ್ಯರ ಕಿವಿಗಳನ್ನು ತೆರೆದು, \q2 ಎಚ್ಚರಿಕೆಗಳಿಂದ ಮುದ್ರೆಹಾಕಿ ಮಾತಾಡುತ್ತಾರೆ. \q1 \v 17 ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವದಕ್ಕೂ, \q2 ಅವನ ಗರ್ವವನ್ನು ಅಡಗಿಸುವುದಕ್ಕೂ ದೇವರು ಹಾಗೆ ಮಾಡುತ್ತಾರೆ. \q1 \v 18 ಮನುಷ್ಯನ ಪ್ರಾಣವನ್ನು ಕುಣಿಯಿಂದ ತಡೆಯುತ್ತಾರೆ, \q2 ಅವನ ಜೀವವನ್ನು ಖಡ್ಗದಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾರೆ. \b \q1 \v 19 “ಇದಲ್ಲದೆ ಮನುಷ್ಯನು ತನ್ನ ಹಾಸಿಗೆಯಲ್ಲಿ ನೋವಿನಿಂದ ಬಿದ್ದಿರುವಾಗ, \q2 ಅವನ ಎಲುಬುಗಳಿಗೆ ನೋವು ಉಂಟಾದಾಗ, ದೇವರು ಅವನನ್ನು ತಿದ್ದುತ್ತಾರೆ. \q1 \v 20 ಆಗ ಮನುಷ್ಯನು ತನ್ನ ಹಸಿವನ್ನು ಕಳೆದುಕೊಳ್ಳುತ್ತಾನೆ, \q2 ಅವನ ಜೀವಕ್ಕೆ ಸವಿ ಊಟವೂ ಅಸಹ್ಯವಾಗುವುದು. \q1 \v 21 ಅವನ ಶರೀರವು ಕಾಣದ ಹಾಗೆ ಸವೆಯುವುದು; \q2 ಕಾಣದಿದ್ದ ಅವನ ಎಲುಬುಗಳು ಸಹ ಬಯಲಾಗುತ್ತವೆ. \q1 \v 22 ಹೀಗೆ ಮನುಷ್ಯನ ಆತ್ಮವು ಸಮಾಧಿಗೆ ಸಮೀಪಿಸುವುದು. \q2 ಅವನ ಪ್ರಾಣವು ಸಾವಿನ ಸಂದೇಶವಾಹಕರ ಹತ್ತಿರವಾಗುವುದು. \q1 \v 23 ಆಗ ಸಹಸ್ರ ದೂತರಲ್ಲಿ ಒಬ್ಬನು ಮಧ್ಯಸ್ಥನಾಗಿ ಆ ಮನುಷ್ಯನ \q2 ಯಥಾರ್ಥತೆಯನ್ನು ತಿಳಿಸುವುದಕ್ಕೆ \q2 ಅವನ ಬಳಿಯಲ್ಲಿದ್ದರೆ, \q1 \v 24 ಆ ಮಧ್ಯಸ್ಥನು ಅವನನ್ನು ಕರುಣಿಸಿ ದೇವರಿಗೆ, \q2 ‘ಅಧೋಲೋಕವೆಂಬ ಕುಣಿಗೆ ಇಳಿಯುವುದರಿಂದ ಇವನನ್ನು ಕಾಪಾಡಿರಿ; \q2 ನಾನು ಇವನಿಗಾಗಿ ವಿಮೋಚನೆಯ ಕ್ರಯವನ್ನು ಕಂಡುಹಿಡಿದಿದ್ದೇನೆ. \q1 \v 25 ಅವನ ದೇಹವು ಮಗುವಿನ ದೇಹಕ್ಕಿಂತ ಮೃದುವಾಗಿರಲಿ; \q2 ಅವನು ಪುನಃ ತನ್ನ ಯೌವನದ ದಿನಗಳಿಗೆ ಹಿಂದಿರುಗಲಿ,’ ಎಂದು ಹೇಳುತ್ತಿದ್ದನು. \q1 \v 26 ಆಗ ಆ ಮನುಷ್ಯನು ದೇವರಿಗೆ ಪ್ರಾರ್ಥನೆಮಾಡುವನು; \q2 ದೇವರು ಅವನಿಗೆ ತಮ್ಮ ಮೆಚ್ಚುಗೆಯನ್ನು ನೀಡುವರು; \q1 ಅವನು ಆನಂದ ಧ್ವನಿಯಿಂದ ದೇವರ ಮುಖವನ್ನು ನೋಡುವನು; \q2 ದೇವರು ಅವನನ್ನು ನೀತಿವಂತನೆಂದು ಪುನಃಸ್ಥಾಪಿಸುವರು. \q1 \v 27 ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: \q2 ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. \q1 ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. \q2 ದೇವರು ಮುಯ್ಯಿತೀರಿಸಲಿಲ್ಲ, \q1 \v 28 ದೇವರು ನನ್ನನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾರೆ; \q2 ನಾನು ಜೀವ ಬೆಳಕನ್ನು ಆನಂದಿಸಲು ಬಾಳುವೆನು.’ \b \q1 \v 29 “ನೋಡು, ದೇವರು ಎರಡು ಸಾರಿಯಲ್ಲದೆ, \q2 ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮನುಷ್ಯರಿಗಾಗಿ ಮಾಡುವರು. \q1 \v 30 ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ ಬಂದು, \q2 ಜೀವ ಬೆಳಕನ್ನು ಅನುಭವಿಸುವಂತೆಯೇ ದೇವರು ಹೀಗೆ ಮಾಡುವರು. \b \q1 \v 31 “ಯೋಬನೇ, ನನ್ನ ಮಾತನ್ನು ಗಮನಕೊಟ್ಟು ಕೇಳು. \q2 ಮೌನವಾಗಿದ್ದು ಕೇಳು, ಈಗ ನಾನು ಮಾತನಾಡುತ್ತೇನೆ. \q1 \v 32 ನಿನಗೆ ಹೇಳುವುದಕ್ಕೆ ಏನಾದರೂ ಇದ್ದರೆ ಹೇಳು, ನನಗೆ ಉತ್ತರಕೊಡು, ಮಾತನಾಡು, \q2 ಏಕೆಂದರೆ ನಾನು ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ. \q1 \v 33 ಇಲ್ಲವಾದರೆ ನಾನು ಹೇಳುವುದನ್ನು ಕೇಳು; \q2 ಮೌನವಾಗಿರು, ಈಗ ನಾನು ನಿನಗೆ ಜ್ಞಾನವನ್ನು ಬೋಧಿಸುತ್ತೇನೆ.” \c 34 \p \v 1 ಎಲೀಹು ಮುಂದುವರೆಸಿ ಹೇಳಿದ್ದೇನೆಂದರೆ: \q1 \v 2 ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; \q2 ಪಂಡಿತರೇ, ನನಗೆ ಕಿವಿಗೊಡಿರಿ. \q1 \v 3 ಏಕೆಂದರೆ ಆಹಾರವನ್ನು ನಾಲಿಗೆ ರುಚಿ ನೋಡುವಂತೆ, \q2 ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ. \q1 \v 4 ನಾವು ಸರಿಯಾದುದನ್ನೇ ಆಯ್ದುಕೊಳ್ಳೋಣ; \q2 ಒಳ್ಳೆಯದು ಏನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ. \b \q1 \v 5 “ಏಕೆಂದರೆ ಯೋಬನು, ‘ನಾನು ನಿರ್ದೋಷಿಯಾಗಿದ್ದೇನೆ. \q2 ಆದರೆ ದೇವರು ನನಗೆ ನ್ಯಾಯವನ್ನು ನಿರಾಕರಿಸಿದ್ದಾರೆ. \q1 \v 6 ನನ್ನಲ್ಲಿ ನ್ಯಾಯವಿದ್ದರೂ \q2 ನನ್ನನ್ನು ಸುಳ್ಳುಗಾರನೆಂದು ಪರಿಗಣಿಸಲಾಗಿದೆ; \q1 ನಾನು ನಿರ್ದೋಷಿಯಾಗಿದ್ದರೂ \q2 ದೇವರ ಬಾಣವು ಗುಣಪಡಿಸಲಾಗದ ಗಾಯವನ್ನು ನನಗೆ ಉಂಟುಮಾಡಿದೆ,’ ಎಂದು ಹೇಳುತ್ತಿದ್ದಾನೆ.” \q1 \v 7 ಯೋಬನಿಗೆ ಸಮಾನನು ಯಾರು? \q2 ಅವನು ನೀರು ಕುಡಿಯುವಂತೆ ಅಪಹಾಸ್ಯ ಮಾಡುತ್ತಿದ್ದಾನೆ. \q1 \v 8 ಯೋಬನು ದುಷ್ಕರ್ಮಿಗಳೊಂದಿಗೆ ಸಹವಾಸ ಇಟ್ಟುಕೊಳ್ಳುತ್ತಾ \q2 ದುಷ್ಟಜನರ ಸಂಗಡ ನಡೆದಾಡುತ್ತಾನೆ. \q1 \v 9 “ಏಕೆಂದರೆ ಅವನು, ‘ದೇವರನ್ನು ಮೆಚ್ಚಿಸಲು ಪ್ರಯತ್ನಿಸುವುದರಿಂದ \q2 ಮನುಷ್ಯನಿಗೆ ಯಾವುದೇ ಲಾಭವಿಲ್ಲ,’ ಎಂದು ಹೇಳುತ್ತಾನೆ.” \b \q1 \v 10 “ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, \q2 ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. \q2 ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ. \q1 \v 11 ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; \q2 ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ. \q1 \v 12 ನಿಶ್ಚಯವಾಗಿ ದೇವರು ಕೆಟ್ಟದ್ದನ್ನು ಮಾಡುವುದಿಲ್ಲ, \q2 ಸರ್ವಶಕ್ತರು ನ್ಯಾಯವನ್ನು ಡೊಂಕು ಮಾಡುವುದಿಲ್ಲ. \q1 \v 13 ಭೂಮಿಯ ಮೇಲೆ ದೇವರನ್ನು ನೇಮಿಸಿದವರು ಯಾರು? \q2 ಸರ್ವಲೋಕವನ್ನು ದೇವರ ವಶಕ್ಕೆ ಒಪ್ಪಿಸಿಕೊಟ್ಟವರು ಯಾರು? \q1 \v 14 ಒಂದು ವೇಳೆ, ದೇವರು ತಮ್ಮ ಆತ್ಮವನ್ನೂ, ಶ್ವಾಸವನ್ನೂ, \q2 ನಮ್ಮಿಂದ ಹಿಂದಕ್ಕೆ ತೆಗೆದುಕೊಳ್ಳಲು ಮನಸ್ಸುಮಾಡುವುದಾದರೆ, \q1 \v 15 ಎಲ್ಲಾ ಮನುಷ್ಯರೂ ಒಟ್ಟಿಗೆ ಅಳಿದುಹೋಗುವರು; \q2 ಇಡೀ ಮಾನವಕುಲವು ಧೂಳಿಗೆ ಹಿಂದಿರುಗುವುದು.” \b \q1 \v 16 “ಯೋಬನೇ, ಅರ್ಥಮಾಡಿಕೊಂಡು, ಇದನ್ನು ಕೇಳಿಸಿಕೋ; \q2 ನನ್ನ ಮಾತಿಗೆ ಕಿವಿಗೊಡು. \q1 \v 17 ನ್ಯಾಯವನ್ನು ದ್ವೇಷಿಸುವ ದೇವರು, ಆಳ್ವಿಕೆಮಾಡಲು ಸಾಧ್ಯವೇ? \q2 ನೀತಿವಂತರೂ, ಸರ್ವಶಕ್ತರೂ ಆಗಿರುವ ದೇವರ ಮೇಲೆ ನೀನು ತಪ್ಪುಹೊರಿಸುವಿಯೋ? \q1 \v 18 ದೇವರು ಅರಸನಿಗೆ, ‘ನೀನು ಮೂರ್ಖ,’ ಎಂದು ಹೇಳಬಲ್ಲರು. \q2 ದೇವರು ಪ್ರಧಾನರಿಗೆ, ‘ನೀವು ದುಷ್ಟರು’ ಎಂದು ಕರೆಯಬಲ್ಲರು ಅಲ್ಲವೇ? \q1 \v 19 ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? \q2 ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? \q2 ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ. \q1 \v 20 ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; \q2 ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; \q2 ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.” \b \q1 \v 21 “ಏಕೆಂದರೆ ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಇರುತ್ತದೆ; \q2 ದೇವರು ಮನುಷ್ಯನ ಪ್ರತಿಯೊಂದು ಹೆಜ್ಜೆಯನ್ನೂ ನೋಡುತ್ತಾರೆ. \q1 \v 22 ಆದ್ದರಿಂದ ದೇವರ ದೃಷ್ಟಿಯಿಂದ ದುಷ್ಟರು ಅಡಗಿಕೊಳ್ಳಲು, \q2 ಗಾಢಾಂಧಕಾರವೂ ಇಲ್ಲ, ನೆರಳೂ ಇರುವುದಿಲ್ಲ. \q1 \v 23 ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ. \q2 ಮನುಷ್ಯನು ನ್ಯಾಯವಿಚಾರಣೆಗೆ ಬರಬೇಕೆಂದು ದೇವರು ಕರೆಯುವ ಅವಶ್ಯಕತೆಯೂ ಇಲ್ಲ. \q1 \v 24 ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. \q2 ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ. \q1 \v 25 ಏಕೆಂದರೆ, ದೇವರು ಅಂಥವರ ದುಷ್ಕಾರ್ಯಗಳನ್ನು ತಿಳಿದಿದ್ದಾರೆ. \q2 ರಾತ್ರಿಯಲ್ಲಿ ಅವರನ್ನು ಕೆಡವಿ ದಂಡನೆಗೆ ಗುರಿಮಾಡುವರು. \q1 \v 26 ಅವರ ದುಷ್ಟತನಕ್ಕಾಗಿ \q2 ದೇವರು ಎಲ್ಲರು ನೋಡುವಂತೆ ಅವರನ್ನು ಶಿಕ್ಷಿಸುವರು. \q1 \v 27 ಅವರು ದೇವರನ್ನು ಹಿಂಬಾಲಿಸದೆ, \q2 ದೇವರ ಮಾರ್ಗಗಳನ್ನೆಲ್ಲಾ ಅಲಕ್ಷ್ಯ ಮಾಡಿದ್ದರಷ್ಟೆ. \q1 \v 28 ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು \q2 ದೇವರು ದಿಕ್ಕಿಲ್ಲದವರ ಕೂಗನ್ನು ಆಲೈಸಿದ್ದರು. \q1 \v 29 ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? \q2 ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, \q1 ದೇವದರ್ಶನ ಪಡೆಯಬಲ್ಲವರು ಯಾರು? \q2 \v 30 ಭಕ್ತಿಹೀನನು ಆಳಬಾರದು, \q2 ಯಾರೂ ಜನರಿಗೆ ಉರುಲಾಗಬಾರದು, ಎಂಬುದೇ ಇದರಲ್ಲಿ ದೇವರ ಉದ್ದೇಶ.” \b \q1 \v 31 “ಒಂದು ವೇಳೆ, ಯಾರಾದರೂ ದೇವರಿಗೆ, \q2 ‘ನಾನು ಪಾಪಮಾಡಿದ್ದೇನೆ, ಆದರೆ ಇನ್ನು ಮುಂದೆ ಪಾಪಮಾಡುವುದಿಲ್ಲ. \q1 \v 32 ದೇವರೇ, ನಾನು ಕಾಣದಿರುವುದನ್ನು ನನಗೆ ಬೋಧಿಸಿರಿ. \q2 ನಾನು ತಪ್ಪುಮಾಡಿದ್ದರೂ, ಇನ್ನು ಮೇಲೆ ಅದನ್ನು ಮಾಡುವುದಿಲ್ಲ,’ ಎಂದು ಹೇಳಿದ್ದರೆ ಸರಿ. \q1 \v 33 ಆದರೆ ನೀನು ಪಶ್ಚಾತ್ತಾಪಪಡಲು ನಿರಾಕರಿಸಿದಾಗ, \q2 ದೇವರು ನಿನಗೆ ತಕ್ಕ ದಂಡನೆಯನ್ನು ಕೊಡಬಾರದೆ? \q1 ಇದನ್ನು ನೀನೇ ತೀರ್ಮಾನಿಸು, ನಾನು ತೀರ್ಮಾನಿಸುವುದಿಲ್ಲ; \q2 ಆದ್ದರಿಂದ ನಿನಗೆ ತಿಳಿದದ್ದನ್ನು ನನಗೆ ತಿಳಿಸು.” \b \q1 \v 34 “ತಿಳುವಳಿಕೆಯುಳ್ಳವರೂ, ನನ್ನನ್ನು ಆಲಿಸಿದ \q2 ಜ್ಞಾನಿಗಳೂ ನಿನ್ನ ವಿಷಯವಾಗಿ: \q1 \v 35 ‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡಿದ್ದಾನೆ; \q2 ಅವನ ಮಾತುಗಳು ಬುದ್ಧಿಯಿಲ್ಲದ ಮಾತುಗಳು. \q1 \v 36 ಯೋಬನನ್ನು ಕಡೆಯವರೆಗೆ ಪರೀಕ್ಷಿಸಬೇಕೆಂದು ಬಯಸುತ್ತೇವೆ. \q2 ಏಕೆಂದರೆ ಅವನು ದುಷ್ಟರ ಹಾಗೆ ಉತ್ತರ ಕೊಡುತ್ತಾನೆ. \q1 \v 37 ಯೋಬನು ತನ್ನ ಪಾಪಕ್ಕೆ ದೇವರಿಗೆ ಎದುರಾಗಿ ಪ್ರತಿಭಟನೆಯನ್ನು ಸಹ ಕೂಡಿಸುತ್ತಿದ್ದಾನೆ; \q2 ಅಪಹಾಸ್ಯದಿಂದ ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; \q2 ದೇವರಿಗೆ ವಿರುದ್ಧ ಹೆಚ್ಚು ಮಾತುಗಳನ್ನಾಡುತ್ತಾನೆ,’ ಎಂದು ನನಗೆ ಹೇಳುತ್ತಿದ್ದಾರೆ.” \c 35 \p \v 1 ಎಲೀಹು ಮತ್ತೆ ಹೇಳಿದ್ದೇನೆಂದರೆ: \q1 \v 2 “ಯೋಬನೇ, ‘ನನ್ನ ನೀತಿಯು ದೇವರ ನೀತಿಗಿಂತ ದೊಡ್ಡದು,’ ಎಂದು \q2 ನೀನು ಹೇಳಿದ್ದು ಸರಿಯೆಂದು ನೆನಸುತ್ತೀಯೋ? \q1 \v 3 ಏಕೆಂದರೆ, ‘ನೀತಿಯಿಂದ ನನಗೇನು ಪ್ರಯೋಜನವಾಯಿತು? \q2 ನಾನು ಪಾಪಮಾಡದೆ ಇದ್ದುದರಿಂದ ನನಗೆ ಲಾಭವೇನು? ಎಂದು ನೀನು ದೇವರಿಗೆ ಕೇಳಿದಿ.’ \b \q1 \v 4 “ನಾನು ನಿನಗೂ, ನಿನ್ನ ಸಂಗಡ \q2 ಇರುವ ಸ್ನೇಹಿತರಿಗೂ ಈಗ ಉತ್ತರ ಕೊಡುತ್ತೇನೆ. \q1 \v 5 ಆಕಾಶಗಳನ್ನು ದೃಷ್ಟಿಸಿ ನೋಡು; \q2 ನಿನಗಿಂತಲೂ ಎತ್ತರವಾಗಿರುವ ಮೇಘಗಳನ್ನು ದೃಷ್ಟಿಸು. \q1 \v 6 ನೀನು ಪಾಪಮಾಡಿದರೆ, ಅದು ದೇವರನ್ನು ಹೇಗೆ ಬಾಧಿಸುತ್ತದೆ? \q2 ನಿನ್ನ ಪಾಪಗಳು ಹೆಚ್ಚಾಗಿದ್ದರೆ, ಅದು ದೇವರಿಗೆ ಏನು ಮಾಡುವುದು? \q1 \v 7 ನೀನು ನೀತಿವಂತನಾಗಿದ್ದರೆ, ದೇವರಿಗೇನು ಕೊಟ್ಟಂತಾಯಿತು? \q2 ಅಥವಾ ದೇವರು ನಿನ್ನ ಕೈಯಿಂದ ಏನು ತೆಗೆದುಕೊಂಡಂತಾಯಿತು? \q1 \v 8 ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು; \q2 ನಿನ್ನ ನೀತಿಯಿಂದ ಬೇರೆ ಜನರಿಗೆ ಮಾತ್ರ ಲಾಭವಾಗುವುದು. \b \q1 \v 9 “ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ; \q2 ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ. \q1 \v 10 ಆದರೆ, ‘ರಾತ್ರಿಯಲ್ಲಿ ಗೀತೆಗಳನ್ನು ಕೊಡುವ \q2 ನನ್ನ ಸೃಷ್ಟಿಕರ್ತರಾದ ದೇವರು ಎಲ್ಲಿ? \q1 \v 11 ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ? \q2 ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುವ ದೇವರು ಎಲ್ಲಿ?’ \q2 ಎಂದು ಯಾರೂ ಹೇಳುವುದಿಲ್ಲ. \q1 \v 12 ಜನರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುತ್ತಾರೆ; \q2 ಆದರೂ ದೇವರು ಅವರಿಗೆ ಉತ್ತರವನ್ನು ದಯಪಾಲಿಸುವುದಿಲ್ಲ. \q1 \v 13 ನಿಶ್ಚಯವಾಗಿ ವ್ಯರ್ಥಮಾತನ್ನು ದೇವರು ಕೇಳುವುದಿಲ್ಲ; \q2 ಸರ್ವಶಕ್ತರು ಬರೀಮಾತನ್ನು ಲಕ್ಷಿಸುವುದಿಲ್ಲ. \q1 \v 14 ಹೀಗಿರಲು, ‘ದೇವರು ಕಾಣುವುದಿಲ್ಲ, \q2 ನನ್ನ ವ್ಯಾಜ್ಯವು ದೇವರ ಮುಂದೆ ಇದೆ; \q1 ದೇವರಿಗಾಗಿ ಕಾದಿರುತ್ತೇನೆ,’ ಎಂದು ನೀನು ಹೇಳಿದರೆ, \q2 ದೇವರು ನಿನಗೆ ಕಿವಿಗೊಡುವರೋ? \q1 \v 15 ದೇವರು ಕೋಪದಿಂದ ದುಷ್ಟರನ್ನು ದಂಡಿಸದೆ ಇರುವ ಕಾರಣ, \q2 ‘ಆಹಾ, ದೇವರು ದ್ರೋಹವನ್ನು ಅಷ್ಟಾಗಿ ಗಮನಿಸುವುದಿಲ್ಲ,’ \q2 ಎಂದು ನೀನು ಹೇಳುವಾಗ ದೇವರು ಕೇಳಿಸಿಕೊಳ್ಳುವರೋ? \q1 \v 16 ಆದ್ದರಿಂದ ಯೋಬನಾದ ನೀನು ವ್ಯರ್ಥವಾಗಿ ಬಾಯಿತೆರೆದು, \q2 ತಿಳುವಳಿಕೆಯಿಲ್ಲದೆ ಬಹಳ ಮಾತಾಡಿರುವಿ.” \c 36 \p \v 1 ಎಲೀಹು ಮುಂದುವರಿದು ಹೇಳಿದ್ದೇನೆಂದರೆ: \q1 \v 2 “ನನ್ನನ್ನು ಸ್ವಲ್ಪ ತಾಳಿಕೋ, ನಾನು ನಿನಗೆ ತೋರಿಸಿಕೊಡುತ್ತೇನೆ. \q2 ಏಕೆಂದರೆ ದೇವರ ಪರವಾಗಿ ಇನ್ನೂ ಹೇಳತಕ್ಕ ಮಾತುಗಳು ಇವೆ. \q1 \v 3 ನಾನು ನನ್ನ ತಿಳುವಳಿಕೆಯನ್ನು ದೂರದಿಂದ ಪಡೆದುಕೊಳ್ಳುತ್ತೇನೆ. \q2 ನನ್ನ ಸೃಷ್ಟಿಕರ್ತ ನ್ಯಾಯವಂತರು ಎಂದು ನಿರೂಪಿಸುವೆನು. \q1 \v 4 ನಿಜವಾಗಿ ನನ್ನ ಮಾತುಗಳು ಸುಳ್ಳಲ್ಲ; \q2 ತಿಳುವಳಿಕೆಯಲ್ಲಿ ಸಂಪೂರ್ಣನಾದ ಒಬ್ಬನಾಗಿ ನಾನು ನಿನ್ನ ಬಳಿಯಲ್ಲಿಯೇ ಇದ್ದೇನೆ. \b \q1 \v 5 “ನೋಡು, ದೇವರು ಸರ್ವಶಕ್ತರು, \q2 ಆದರೂ ಯಾರನ್ನೂ ತಿರಸ್ಕಾರ ಮಾಡುವುದಿಲ್ಲ. \q2 ಶಕ್ತಿವಂತರಾದ ದೇವರು ತಮ್ಮ ಉದ್ದೇಶದಲ್ಲಿ ದೃಢವಾಗಿದ್ದಾರೆ. \q1 \v 6 ದುಷ್ಟರು ಬಹುಕಾಲ ಬಾಳಲು ದೇವರು ಅನುಮತಿಸುವುದಿಲ್ಲ; \q2 ಆದರೆ ದೇವರು ಬಾಧೆಪಡುವವರಿಗೆ ಅವರ ಹಕ್ಕುಗಳನ್ನು ಕೊಡುತ್ತಾರೆ. \q1 \v 7 ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; \q2 ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; \q2 ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು. \q1 \v 8 ಒಂದು ವೇಳೆ ಜನರು ಸಂಕಟದ ಸಂಕೋಲೆಗಳಿಂದ ಬಂಧಿತರಾಗಿ, \q2 ಬಾಧೆಯ ಹಗ್ಗಗಳಿಂದ ಹಿಡಿಯಲಾಗಿದ್ದರೆ, \q1 \v 9 ದೇವರು ಅವರ ಕೃತ್ಯವನ್ನೂ \q2 ಸೊಕ್ಕಿನ ದ್ರೋಹಗಳನ್ನೂ ಅವರಿಗೆ ಹೇಳುವರು. \q1 \v 10 ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು, \q2 ಜನರು ದುಷ್ಟತನವನ್ನು ಬಿಟ್ಟು ತಿರುಗಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುವರು. \q1 \v 11 ಒಂದು ವೇಳೆ, ಜನರು ವಿಧೇಯರಾಗಿ ದೇವರನ್ನು ಸೇವಿಸಿದರೆ, \q2 ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿ ಕಳೆಯುವರು. \q2 ತಮ್ಮ ವರ್ಷಗಳನ್ನು ಸಂತೃಪ್ತಿಯಲ್ಲಿಯೂ ಪೂರೈಸುವರು. \q1 \v 12 ಅವರು ವಿಧೇಯರಾಗದಿದ್ದರೆ, \q2 ಸಂಕಟದ ಸಾಗರದಲ್ಲಿ ಸಾಗಿಹೋಗುವರು; \q2 ತಿಳುವಳಿಕೆಯಿಲ್ಲದ ಬಾಳನ್ನು ಬಾಳುವರು. \b \q1 \v 13 “ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು; \q2 ದೇವರು ಅವರನ್ನು ಬಂಧಿಸಿದರೂ, ಅವರು ದೇವರಿಗೆ ಮೊರೆ ಇಡುವುದಿಲ್ಲ. \q1 \v 14 ಅವರು ತಮ್ಮ ಯೌವನದಲ್ಲಿ, \q2 ಪುರುಷಗಾಮಿಗಳ ಮಂದಿರದಲ್ಲಿ ಗತಿಸಿಹೋಗುವರು. \q1 \v 15 ಶ್ರಮೆ ಪಡುವವರನ್ನು ದೇವರು ಅವರ ಶ್ರಮೆಯ ಮೂಲಕವೇ ಬಿಡುಗಡೆ ಮಾಡುವರು; \q2 ದೇವರು ಅವರ ಹಿಂಸೆಯ ಮೂಲಕವೇ ಅವರೊಂದಿಗೆ ಮಾತನಾಡುವರು. \b \q1 \v 16 “ದೇವರು ನಿನ್ನನ್ನು ಇಕ್ಕಟ್ಟಿನೊಳಗಿಂದ ಬಿಡಿಸುವರು; \q2 ಇಕ್ಕಟ್ಟಿಲ್ಲದ ವಿಶಾಲ ಸ್ಥಳವು ನಿನಗೆ ದೊರೆಯುವುದು; \q2 ನಿನ್ನ ಆದರಣೆಗಾಗಿ ನಿನ್ನ ಮೇಜು ಉತ್ತಮ ಆಹಾರಗಳಿಂದ ತುಂಬಿರುವುದು. \q1 \v 17 ಆದರೆ ಈಗ ನೀನು ದುಷ್ಟರಿಗೆ ಬರಬೇಕಾದ ತೀರ್ಪಿನಿಂದ ತುಂಬಿರುವೆ. \q2 ನ್ಯಾಯವಿಚಾರಣೆಯೂ, ತೀರ್ಪೂ ನಿನ್ನನ್ನು ಹಿಡಿದಿರುತ್ತವೆ. \q1 \v 18 ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; \q2 ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು. \q1 \v 19 ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ \q2 ಕಷ್ಟಾನುಭವವಿಲ್ಲದೆ ಸಾಗಿಸಲು ಸಾಧ್ಯವೇ? \q1 \v 20 ಜನರನ್ನು ಅವರ ಮನೆಗಳಿಂದ ಎಳೆದುಕೊಂಡು \q2 ಹೋಗುವುದಕ್ಕೆ ರಾತ್ರಿಯನ್ನು ಬಯಸಬೇಡ. \q1 \v 21 ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! \q2 ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ. \b \q1 \v 22 “ದೇವರು ತಮ್ಮ ಶಕ್ತಿಯಲ್ಲಿ ಉನ್ನತರಾಗಿದ್ದಾರೆ. \q2 ದೇವರಂಥ ಬೋಧಕರು ಯಾರಿದ್ದಾರೆ? \q1 \v 23 ದೇವರ ಮಾರ್ಗವನ್ನು ದೇವರಿಗೆ ನೇಮಿಸಿದವರ‍್ಯಾರು? \q2 ‘ನೀವು ಮಾಡಿರುವುದು ಅನ್ಯಾಯ,’ ಎಂದು ದೇವರಿಗೆ ಹೇಳುವವರು ಯಾರು? \q1 \v 24 ಮನುಷ್ಯರು ಹೊಗಳಿ ಹಾಡುವ ಹಾಡುಗಳಿಂದ, \q2 ದೇವರ ಕೃತ್ಯಗಳನ್ನು ಉನ್ನತಪಡಿಸಲು ನೆನಸಿಕೋ. \q1 \v 25 ಎಲ್ಲಾ ಮನುಷ್ಯರು ದೇವರ ಕೃತ್ಯಗಳನ್ನು ಕಂಡಿದ್ದಾರೆ; \q2 ಹೌದು, ಮನುಷ್ಯರು ದೂರದಿಂದ ನೋಡುತ್ತಾರೆ. \q1 \v 26 ದೇವರು ಮಹೋನ್ನತರು; ದೇವರು ನಮ್ಮ ಅರಿವಿಗೆ ನಿಲುಕರು. \q2 ದೇವರ ವರ್ಷಗಳು ಅಸಂಖ್ಯಾತವಾಗಿವೆ. \b \q1 \v 27 “ದೇವರು ನೀರಿನ ಹನಿಗಳನ್ನು ಕೂಡಿಸಿದಾಗ, \q2 ಮಂಜಿನಿಂದ ತಿಳಿಮಳೆ ಸುರಿಯುತ್ತವೆ. \q1 \v 28 ಮೋಡಗಳು ಮಳೆಗರೆಯುತ್ತವೆ. \q2 ಮನುಷ್ಯರ ಮೇಲೆ ಸಮೃದ್ಧಿಯಾಗಿ ಚಿಮುಕಿಸುತ್ತವೆ. \q1 \v 29 ಮೋಡಗಳ ವಿಸ್ತೀರ್ಣತೆಯನ್ನೂ, \q2 ದೇವರ ಗುಡಾರದಿಂದ ಗುಡುಗುವುದನ್ನೂ ಗ್ರಹಿಸಿಕೊಳ್ಳುವವರು ಯಾರು? \q1 \v 30 ಇಗೋ, ದೇವರು ಮಿಂಚನ್ನು ತಮ್ಮ ಸುತ್ತಲು ಚದರಿಸುತ್ತಾರೆ. \q2 ಸಮುದ್ರದ ಆಳವನ್ನು ಸಹ ಆವರಿಸುತ್ತಾರೆ. \q1 \v 31 ಈ ರೀತಿಯಾಗಿ ದೇವರು ದೇಶಗಳನ್ನು ಆಳುತ್ತಾರೆ\f + \fr 36:31 \fr*\fq ಆಳುತ್ತಾರೆ \fq*\ft ಅಥವಾ \ft*\fqa ಪೋಷಿಸುತ್ತಾರೆ\fqa*\f* \q2 ಸಮೃದ್ಧಿಯಾಗಿ ದೇವರು ಆಹಾರ ಕೊಡುತ್ತಾರೆ. \q1 \v 32 ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು, \q2 ಅದನ್ನು ಗುರಿಮುಟ್ಟುವಂತೆ ಆಜ್ಞಾಪಿಸುತ್ತಾರೆ. \q1 \v 33 ಬಿರುಗಾಳಿಯು ಬರುತ್ತಿದೆ ಎಂದು ದೇವರ ಸಿಡಿಲು ತಿಳಿಸುತ್ತದೆ; \q2 ದನಕರುಗಳು ಸಹ ದೇವರ ಆಗಮನವನ್ನು ತಿಳಿಸುತ್ತವೆ. \b \c 37 \q1 \v 1 “ಇದನ್ನು ನೋಡಿದಾಗ ನನ್ನ ಹೃದಯವು ನಡುಗಿ, \q2 ಅದರ ಸ್ಥಳದಿಂದ ಜಿಗಿಯುವಂತಾಗುತ್ತದೆ. \q1 \v 2 ದೇವರ ಧ್ವನಿಯ ಘರ್ಜನೆಯನ್ನು ಕೇಳಿರಿ. \q2 ದೇವರ ಬಾಯಿಂದ ಹೊರಡುವ ಮಾತನ್ನು ಲಕ್ಷ್ಯಕೊಟ್ಟು ಆಲಿಸಿರಿ. \q1 \v 3 ತಮ್ಮ ಮಿಂಚನ್ನು ದೇವರು ಆಕಾಶಮಂಡಲದಲ್ಲಿ ಹರಡುತ್ತಾರೆ; \q2 ಅದನ್ನು ಭೂಮಿಯ ಅಂಚುಗಳವರೆಗೆ ಕಳುಹಿಸುತ್ತಾರೆ. \q1 \v 4 ಮಿಂಚಿನ ತರುವಾಯ ಘರ್ಜನೆಯ ಶಬ್ದ ಕೇಳಿಬರುವುದು; \q2 ದೇವರು ಮಹತ್ತಿನ ಶಬ್ದದಿಂದ ಗುಡುಗುತ್ತಾರೆ; \q1 ದೇವರ ಸ್ವರ ಕೇಳುವಾಗ \q2 ಅದನ್ನು ತಡೆಯಲಾಗದು. \q1 \v 5 ದೇವರು ತಮ್ಮ ಸ್ವರದಿಂದ ಅದ್ಭುತಕಾರ್ಯಗಳನ್ನು ಗುಡುಗುತ್ತಾರೆ; \q2 ನಾವು ಗ್ರಹಿಸಲಾಗದ ಮಹಾತ್ಕಾರ್ಯಗಳನ್ನು ದೇವರು ಮಾಡುತ್ತಾರೆ. \q1 \v 6 ದೇವರು ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎಂದು ಹೇಳುತ್ತಾರೆ. \q2 ಮಳೆಗೆ, ‘ಭೂಮಿಯ ಮೇಲೆ ರಭಸದಿಂದ ಸುರಿ’ ಎಂದು ಆಜ್ಞಾಪಿಸುತ್ತಾರೆ. \q1 \v 7 ಹೀಗೆ ದೇವರು ತಮ್ಮ ಕೃತ್ಯವನ್ನು ಜನರೆಲ್ಲರೂ ತಿಳುಕೊಳ್ಳುವಂತೆ ಮಾಡುತ್ತಾರೆ. \q2 ಸ್ವಲ್ಪಕಾಲ ಮನುಷ್ಯರ ದುಡಿಮೆಯನ್ನು ನಿಲ್ಲಿಸುತ್ತಾರೆ. \q1 \v 8 ಆಗ ಮೃಗಗಳು ಅಡಗುವ ಸ್ಥಳಕ್ಕೆ ಹೋಗುತ್ತವೆ, \q2 ತಮ್ಮ ಗುಹೆಗಳಲ್ಲಿ ಉಳಿಯುತ್ತವೆ. \q1 \v 9 ದಕ್ಷಿಣದಿಕ್ಕಿನಿಂದ ಬಿರುಗಾಳಿಯು ಬೀಸುತ್ತದೆ. \q2 ಉತ್ತರದಿಂದ ಚಳಿಯೂ ಬರುತ್ತದೆ. \q1 \v 10 ದೇವರ ಶ್ವಾಸದಿಂದ ನೀರು ಮಂಜುಗಡ್ಡೆ ಆಗುವುದು; \q2 ವಿಶಾಲ ಸಮುದ್ರದ ನೀರು ಗಟ್ಟಿಯಾಗುವುದು. \q1 \v 11 ಮೋಡವನ್ನು ತೇವಾಂಶದಿಂದ ಭಾರಮಾಡುತ್ತಾರೆ; \q2 ಮೇಘಮಂಡಲವು ದೇವರ ಮಿಂಚನ್ನು ಚದರಿಸುತ್ತದೆ. \q1 \v 12 ಭೂಲೋಕದಲ್ಲೆಲ್ಲಾ ಸಿಡಿಲುಗಳಿಗೆ \q2 ದೇವರು ಆಜ್ಞಾಪಿಸಲು, \q2 ಎಲ್ಲಾ ಕೆಲಸವನ್ನು ಮಾಡುವಂತೆ ಅವು ತಿರುಗುತ್ತವೆ. \q1 \v 13 ಜನರ ಶಿಕ್ಷಣಕ್ಕಾಗಿಯೂ, ಭೂಮಿಯ ಹಿತಕ್ಕಾಗಿಯೂ ದೇವರು ತಮ್ಮ ಪ್ರೀತಿಯನ್ನು ತೋರಿಸಲು, \q2 ಮೇಘಗಳನ್ನು ಬರಮಾಡುತ್ತಾರೆ. \b \q1 \v 14 “ಆದ್ದರಿಂದ ಯೋಬನೇ, ಇದಕ್ಕೆ ಕಿವಿಗೊಡು; \q2 ಮೌನವಾಗಿ ನಿಂತು ದೇವರ ಅದ್ಭುತಗಳನ್ನು ಧ್ಯಾನಿಸು. \q1 \v 15 ದೇವರು ಮೋಡಗಳಿಗೆ ಅಪ್ಪಣೆ ಕೊಡುವುದನ್ನು ಅರಿತಿರುವೆಯಾ? \q2 ದೇವರ ಮೇಘದ ಸಿಡಿಲು ಹೊಳೆಯುವುದನ್ನೂ ನೀನು ತಿಳಿದಿರುವೆಯಾ? \q1 \v 16 ಮೋಡಗಳ ತೂಗಾಟವನ್ನು ಬಲ್ಲೆಯಾ? \q2 ಜ್ಞಾನಪೂರ್ಣರಾದ ದೇವರ ಅದ್ಭುತಗಳನ್ನೂ ತಿಳಿದುಕೊಂಡಿರುವೆಯಾ? \q1 \v 17 ಭೂಮಿಯು ದಕ್ಷಿಣ ಗಾಳಿಯಿಂದ ಸ್ತಬ್ಧವಾಗಿರುವಾಗ, \q2 ನಿನ್ನ ವಸ್ತ್ರ ಹೇಗೆ ಬಿಸಿಯಾಗಿರುತ್ತವೆ? \q1 \v 18 ಎರಕ ಹೊಯ್ದ ಬಲವಾಗಿರುವ ಕನ್ನಡಿಯ ಹಾಗೆ, \q2 ನೀನು ದೇವರ ಸಂಗಡ ಸೇರಿಕೊಂಡು ಆಕಾಶಮಂಡಲವನ್ನು ವಿಸ್ತರಿಸಬಲ್ಲೆಯಾ? \b \q1 \v 19 “ನಾವು ದೇವರಿಗೆ ಏನು ಹೇಳಬೇಕೆಂದು ನಮಗೆ ತಿಳಿಸು; \q2 ನಮ್ಮ ಅಂಧಕಾರದಿಂದ ನಾವು ಏನೂ ವಾದಿಸಲು ಸಾಧ್ಯವಿಲ್ಲ. \q1 \v 20 ನಾನು ಮಾತನಾಡಬೇಕೆಂದು ದೇವರಿಗೆ ಹೇಳಿಕಳುಹಿಸಬೇಕೆ? \q2 ಹಾಗೆ ಮನುಷ್ಯನು ಮಾತನಾಡಿದರೆ, ನಿಜವಾಗಿಯೂ ಬದುಕಿರಲು ಸಾಧ್ಯವೇ? \q1 \v 21 ಗಾಳಿ ಬೀಸಿ ಆಕಾಶ ಶುಭ್ರವಾದಾಗ, \q2 ಪ್ರಜ್ವಲಿಸುವ ಸೂರ್ಯನನ್ನು ದೃಷ್ಟಿಸಲಾಗದು \q2 ಹೌದು, ಯಾರೂ ದಿಟ್ಟಿಸಿ ನೋಡಲಾರರು. \q1 \v 22 ಉತ್ತರದಿಂದ ಹೊನ್ನಿನ ಹೊಳಪು ಬರುತ್ತದೆ; \q2 ಅದರಂತೆಯೇ ದೇವರ ವಿಸ್ಮಯ ತೇಜಸ್ಸಿನಿಂದ ಬರುತ್ತಾರೆ. \q1 \v 23 ಇಂಥಾ ಸರ್ವಶಕ್ತರನ್ನು ನಾವು ಕಂಡುಹಿಡಿಯಲಾಗದು; ದೇವರು ಶಕ್ತಿಯಲ್ಲಿ ಉನ್ನತರಾಗಿದ್ದಾರೆ; \q2 ನ್ಯಾಯತೀರ್ಪಿನಲ್ಲಿಯೂ, ಮಹಾ ನೀತಿಯಲ್ಲಿಯೂ ದೇವರು ದಬ್ಬಾಳಿಕೆ ನಡೆಸುವವರಲ್ಲ. \q1 \v 24 ಆದ್ದರಿಂದ ಮನುಷ್ಯರು ದೇವರಿಗೆ ಭಯಪಡುತ್ತಾರೆ; \q2 ಆದರೆ ತಾವೇ ಜ್ಞಾನಿಗಳೆಂದು ತಿಳಿದಿರುವವರು ದೇವರು ಲಕ್ಷಿಸುವುದಿಲ್ಲ.” \c 38 \s1 ಯೆಹೋವ ದೇವರು ಮಾತಾಡುತ್ತಾರೆ \p \v 1 ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಹೀಗೆಂದು ಉತ್ತರಕೊಟ್ಟರು: \q1 \v 2 “ಅಜ್ಞಾನದ ಮಾತುಗಳಿಂದ \q2 ನನ್ನ ಯೋಜನೆಗಳನ್ನು ಮಂಕುಮಾಡುವ ನೀನು ಯಾರು? \q1 \v 3 ಶೂರನ ಹಾಗೆ ನಡುವನ್ನು ಕಟ್ಟಿಕೋ, \q2 ನಾನು ನಿನ್ನನ್ನು ಪ್ರಶ್ನೆಮಾಡುವೆನು; \q2 ನೀನೇ ನನಗೆ ಉತ್ತರಕೊಡು. \b \q1 \v 4 “ನಾನು ಭೂಮಿಗೆ ಅಸ್ತಿವಾರ ಹಾಕಿದಾಗ, ನೀನು ಎಲ್ಲಿ ಇದ್ದೀ? \q2 ನಿನಗೆ ತಿಳುವಳಿಕೆ ಇದ್ದರೆ ನನಗೆ ಹೇಳು. \q1 \v 5 ಭೂಮಿಯ ಅಳತೆಯನ್ನು ಗೊತ್ತುಮಾಡಿದವರು ಯಾರು? ನಿಶ್ಚಯವಾಗಿ ನಿನಗೆ ಗೊತ್ತಿರಬೇಕಲ್ಲಾ? \q2 ಭೂಮಿಯ ಮೇಲೆ ನೂಲು ಹಿಡಿದವರು ಯಾರು? \q1 \v 6 ಯಾವುದರ ಮೇಲೆ ಭೂಮಿಯ ಅಸ್ತಿವಾರ ಸ್ಥಿರಪಡಿಸಲಾಗಿದೆ? \q2 ಅದಕ್ಕೆ ಮೂಲೆಗಲ್ಲನ್ನು ಇಟ್ಟವರು ಯಾರು? \q1 \v 7 ಉದಯದ ನಕ್ಷತ್ರಗಳು ಕೂಡಿ ಹಾಡುತ್ತಿರುವಾಗ, ದೇವದೂತರೆಲ್ಲರೂ ಹರ್ಷಧ್ವನಿಮಾಡುತ್ತಿರುವಾಗ, \q2 ಭೂಮಿಗೆ ಮೂಲೆಗಲ್ಲು ಹಾಕಿದವರಾರು? \b \q1 \v 8 “ಭೂಗರ್ಭವನ್ನು ನುಗ್ಗಿಕೊಂಡು ಬಂದ, \q2 ಸಮುದ್ರವನ್ನು ದ್ವಾರಗಳಿಂದ ಮುಚ್ಚಿದವರು ಯಾರು? \q1 \v 9 ನಾನು ಸಮುದ್ರಕ್ಕೆ ಮೇಘವನ್ನು ವಸ್ತ್ರವನ್ನಾಗಿ ತೊಡಿಸಿ, \q2 ಅದಕ್ಕೆ ಕಾರ್ಗತ್ತಲನ್ನು ಉಡಿಸಿದೆನು. \q1 \v 10 ನಾನು ಸಮುದ್ರಕ್ಕೆ ಮಿತಿಗಳನ್ನು ನಿಗದಿಪಡಿಸಿ, \q2 ಅಗುಳಿಗಳನ್ನೂ, ಬಾಗಿಲುಗಳನ್ನೂ ಇಟ್ಟೆನು. \q1 \v 11 ‘ಇಲ್ಲಿಯ ತನಕ ಬರಬಹುದು, ಇದನ್ನು ಮೀರಿ ಬರಕೂಡದು; \q2 ಇಲ್ಲಿಗೇ ನಿನ್ನ ತೆರೆಗಳ ಹೆಮ್ಮೆ ನಿಲ್ಲಲಿ,’ ಎಂದು ಆಜ್ಞಾಪಿಸಿದೆನು. \b \q1 \v 12 “ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ, ‘ಅರುಣೋದಯವಾಗಲಿ,’ ಎಂದು ಆಜ್ಞಾಪಿಸಿರುವೆಯಾ? \q2 ಮುಂಜಾನೆಯ ಬೆಳಗಿಗೆ ಅದರ ಸ್ಥಳವನ್ನು ತಿಳಿಯಪಡಿಸಿರುವೆಯಾ? \q1 \v 13 ‘ದುಷ್ಟರನ್ನು ಅದರೊಳಗಿಂದ ಒದರಿಬಿಡು,’ \q2 ಎಂದು ನೀನು ಭೂಮಿಯ ಅಂಚುಗಳನ್ನು ಹಿಡಿದು ಉದಯಕ್ಕೆ ಎಂದಾದರೂ ಅಪ್ಪಣೆಮಾಡಿದೆಯಾ? \q1 \v 14 ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಭೂಮಿ ರೂಪ ತಾಳುತ್ತದೆ; \q2 ನೆರಿಗೆ ಕಟ್ಟಿದ ಉಡಿಗೆಯಂತೆ ಭೂಮಿಯ ವಿಶೇಷತೆಗಳು ಕಾಣಿಸುತ್ತವೆ. \q1 \v 15 ಅದರಂತೆ ದುಷ್ಟರಿಗೆ ಬೆಳಕು ನಿರಾಕರಿಸಲಾಗುವುದು; \q2 ಅವರ ಹಿಂಸಾಚಾರವೂ ಮುರಿದು ಹೋಗುವುದು. \b \q1 \v 16 “ನೀನು ಎಂದಾದರೂ ಸಮುದ್ರದ ಬುಗ್ಗೆಗಳಲ್ಲಿ ನಡೆದಿರುವೆಯೋ? \q2 ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ? \q1 \v 17 ನಿನಗೆ ಮರಣದ ಬಾಗಿಲುಗಳು ತೋರಿಸಲಾಗಿದೆಯೋ? \q2 ಘೋರಾಂಧಕಾರದ ಬಾಗಿಲುಗಳನ್ನು ನೀನು ಕಂಡಿರುವೆಯೋ? \q1 \v 18 ಭೂವಿಸ್ತಾರಗಳನ್ನು ನೀನು ಗ್ರಹಿಸಿರುವೆಯೋ? \q2 ಇದನ್ನೆಲ್ಲಾ ನೀನು ತಿಳಿದಿದ್ದರೆ ನನಗೆ ಹೇಳು ನೋಡೋಣ. \b \q1 \v 19 “ಬೆಳಕಿನ ನಿವಾಸಕ್ಕೆ ಹೋಗುವ ಮಾರ್ಗವೆಲ್ಲಿ? \q2 ಕತ್ತಲು ವಾಸಮಾಡುವ ಸ್ಥಳವೆಲ್ಲಿ? \q1 \v 20 ನೀನು ಬೆಳಕನ್ನೂ ಕತ್ತಲನ್ನೂ ಅವುಗಳ ಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? \q2 ಅವು ತಮ್ಮ ಮನೆಗಳಿಗೆ ಹೋಗುವ ಹಾದಿಗಳನ್ನು ನೀನು ಬಲ್ಲೆಯಾ? \q1 \v 21 ನಿಜವಾಗಿಯೂ ನೀನು ಆಗ ಹುಟ್ಟಿದ್ದರೆ, ಇವೆಲ್ಲಾ ನಿನಗೆ ಗೊತ್ತಾಗುತಿತ್ತು. \q2 ಮತ್ತು ಈಗ ನೀನು ಬಹಳ ವರ್ಷಗಳ ವೃದ್ಧನಾಗಿರುತ್ತಿದ್ದೆ. \b \q1 \v 22 “ಯೋಬನೇ, ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿರುವೆಯಾ? \q2 ಕಲ್ಮಳೆಯ ಉಗ್ರಾಣಗಳನ್ನು ನೋಡಿರುವೆಯಾ? \q1 \v 23 ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿ ಇಟ್ಟಿರುವೆನು; \q2 ಯುದ್ಧಕದನಗಳ ದಿನಗಳಿಗಾಗಿಯೂ ಕಾದಿಟ್ಟಿರುವೆನು. \q1 \v 24 ಬೆಳಕಿನ ಮೂಲ ಮಾರ್ಗ ಎಲ್ಲಿದೆ? \q2 ಪೂರ್ವ ಗಾಳಿಯ ಮಾರ್ಗವು ಯಾವುದು? \q1 \v 25 ಮಳೆಯ ಪ್ರವಾಹಕ್ಕೆ ಕಾಲುವೆಗಳನ್ನು ಕಡಿದವರು ಯಾರು? \q2 ಸಿಡಿಲಿಗೆ ಮಾರ್ಗವನ್ನು ನೇಮಿಸಿದವರು ಯಾರು? \q1 \v 26 ಮಳೆ ಮನುಷ್ಯರಿಲ್ಲದ ಕಾಡಿನಲ್ಲಿಯೂ \q2 ನಿರ್ಜನ ಪ್ರದೇಶದಲ್ಲಿಯೂ, ಸುರಿಯುವುದು. \q1 \v 27 ಹಾಳು ಬೈಲುಗಳಿಗೆ ತೃಪ್ತಿಯನ್ನು ಉಂಟುಮಾಡುವುದು; \q2 ಹಸಿರಾದ ಹುಲ್ಲನ್ನು ಮೊಳಿಸುವುದು. \q1 \v 28 ಮಳೆಗೆ ತಂದೆ ಇದ್ದಾನೆಯೇ? \q2 ಮಂಜಿನ ಹನಿಗಳನ್ನು ಹೆತ್ತವಳಿದ್ದಾಳೆಯೆ? \q1 \v 29 ಯಾರ ಗರ್ಭದಿಂದ ಹಿಮಗಡ್ಡೆ ಹೊರಡುತ್ತದೆ? \q2 ಆಕಾಶದ ಇಬ್ಬನಿಯನ್ನು ಹೆತ್ತವರು ಯಾರು? \q1 \v 30 ಕಲ್ಲಿನ ಹಾಗೆ ನೀರು ಗಟ್ಟಿಯಾಗುವುದು ಯಾವಾಗ? \q2 ಸಮುದ್ರದ ಮೇಲ್ಭಾಗವು ಹೆಪ್ಪುಗಟ್ಟುವುದು ಯಾವಾಗ? \b \q1 \v 31 “ನೀನು ಕೃತ್ತಿಕೆಯ ಸರಪಣಿಯನ್ನು ಬಂಧಿಸಬಲ್ಲೆಯಾ? \q2 ಮೃಗಶಿರದ ಸಂಕೋಲೆಯನ್ನು ಬಿಚ್ಚಬಲ್ಲೆಯಾ? \q1 \v 32 ನೀನು ನಕ್ಷತ್ರರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ಬರಮಾಡುವೆಯಾ? \q2 ಸಪ್ತರ್ಷಿ ತಾರೆಗಳನ್ನು ಅವುಗಳ ಪರಿವಾರ ಸಹಿತವಾಗಿ ನೀನು ನಡೆಸುವೆಯಾ? \q1 \v 33 ಖಗೋಳದ ನಿಯಮಗಳನ್ನು ನೀನು ತಿಳಿದಿರುವೆಯಾ? \q2 ದೇವರ ಆಳಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿರುವೆಯಾ? \b \q1 \v 34 “ನೀರು ಪ್ರವಾಹವಾಗಿ ನಿನ್ನನ್ನು ತಲುಪುವಂತೆ, \q2 ನಿನ್ನ ಧ್ವನಿಯೆತ್ತಿ ಮೋಡಗಳಿಗೆ ಅಪ್ಪಣೆಕೊಡುವೆಯಾ? \q1 \v 35 ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು, \q2 ‘ಇಗೋ, ನಾವು ಇಲ್ಲಿದ್ದೇವೆ,’ ಎಂದು ನಿನಗೆ ಹೇಳುತ್ತವೆಯೋ? \q1 \v 36 ಇಬಿಸ್ ಪಕ್ಷಿಗೆ ಜ್ಞಾನವನ್ನು ಕೊಟ್ಟವರು ಯಾರು? \q2 ಕೋಳಿಹುಂಜಕ್ಕೆ ಅರಿವನ್ನು ಕೊಟ್ಟವರು ಯಾರು? \q1 \v 37 ಮೋಡಗಳನ್ನು ಎಣಿಸುವ ಜ್ಞಾನ ಯಾರಿಗೆ ಇದೆ? \q2 ಆಕಾಶದಲ್ಲಿನ ಬುದ್ದಲಿಗಳನ್ನು ಸಾಗಿಸುವವರು ಯಾರು? \q1 \v 38 ಧೂಳುಮಣ್ಣನ್ನು ಒತ್ತಟ್ಟಿಗೆ ಸೇರುವಂತೆ ಮಾಡುವವರು ಯಾರು? \q2 ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆ ಯಾರು ಮಾಡುವರು? \b \q1 \v 39 “ಗುಹೆಯಲ್ಲಿ ಮಲಗಿರುವ ಸಿಂಹದ ಆಹಾರಕ್ಕೋಸ್ಕರ ನೀನು ಬೇಟೆಯಾಡುವೆಯಾ? \q2 ಪ್ರಾಯದ ಸಿಂಹಗಳ ಹಸಿವೆಯನ್ನು ನೀನು ನೀಗಿಸುವೆಯಾ? \q1 \v 40 ಪೊದೆಯಲ್ಲಿ ಹೊಂಚು ಹಾಕಿರುವ, \q2 ಪ್ರಾಯದ ಸಿಂಹಗಳ ಹಸಿವೆಯನ್ನು ತೀರಿಸುವೆಯಾ? \q1 \v 41 ಹಸಿದ ಕಾಗೆ ಮರಿಗಳು ಆಹಾರ ಇಲ್ಲದೆ ಅಲೆದು, \q2 ದೇವರಿಗೆ ಮೊರೆ ಇಡುವಾಗ, \q2 ತಾಯಿ ಕಾಗೆಗೆ ಆಹಾರವನ್ನು ಒದಗಿಸುವವರು ಯಾರು? \b \c 39 \q1 \v 1 “ಕಾಡುಮೇಕೆಗಳು ಈಯುವ ಕಾಲವನ್ನು ನೀನು ತಿಳಿದಿರುವೆಯಾ? \q2 ಜಿಂಕೆಗಳ ಹೆರಿಗೆಯನ್ನು ನೋಡಿರುವೆಯಾ? \q1 \v 2 ಅವುಗಳ ಗರ್ಭ ತುಂಬುವ ತಿಂಗಳುಗಳನ್ನು ಎಣಿಸಿರುವೆಯಾ? \q2 ಅವು ಈಯುವ ಕಾಲವನ್ನು ತಿಳಿದಿರುವಿಯೋ? \q1 \v 3 ಅವು ಬಗ್ಗಿ ಮರಿಗಳನ್ನು ಹಾಕುತ್ತವೆ; \q2 ಅದರ ಪ್ರಸವ ವೇದನೆಯನ್ನು ಮರೆತುಬಿಡುತ್ತವೆ. \q1 \v 4 ಅವುಗಳ ಮರಿಗಳು ಪುಷ್ಟಿಯಾಗಿ ಕಾಡಿನಲ್ಲಿ ಬೆಳೆಯುತ್ತವೆ; \q2 ಅವು ತಾಯಿಯನ್ನು ಅಗಲಿದ ಬಳಿಕ ತಿರುಗಿ ಬರುವುದಿಲ್ಲ. \b \q1 \v 5 “ಕಾಡುಕತ್ತೆಗೆ ಸ್ವತಂತ್ರವನ್ನು ಕೊಟ್ಟವರು ಯಾರು? \q2 ಕಾಡುಕತ್ತೆಯ ಕಟ್ಟನ್ನು ಬಿಚ್ಚಿದವರು ಯಾರು? \q1 \v 6 ಮರುಭೂಮಿಯನ್ನು ಅದರ ನಿವಾಸವನ್ನಾಗಿ ಕೊಟ್ಟಿರುವುದು ನಾನೇ. \q2 ಸವಳುಬಯಲನ್ನು ಅದರ ವಾಸ ಸ್ಥಳವಾಗಿಯೂ ನೇಮಿಸಿದ್ದು ನಾನೇ. \q1 \v 7 ಪಟ್ಟಣದ ಗದ್ದಲವನ್ನು ಕಾಡುಕತ್ತೆಯು ಧಿಕ್ಕರಿಸುತ್ತದೆ; \q2 ಅದು ಓಡಿಸುವವನ ಕೂಗನ್ನು ಲಕ್ಷಿಸುವುದಿಲ್ಲ. \q1 \v 8 ಬೆಟ್ಟಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; \q2 ಹಸುರಾಗಿರುವುದನ್ನು ಎಲ್ಲಿದ್ದರೂ ಹುಡುಕುತ್ತಲೇ ಇರುವುದು. \b \q1 \v 9 “ಕಾಡುಕೋಣವು ನಿನ್ನ ಸೇವೆ ಮಾಡಲು ಎಂದಾದರೂ ಒಪ್ಪಿದೆಯೆ? \q2 ಅದು ರಾತ್ರಿಯಲ್ಲಿ ನಿನ್ನ ಗೋದಲಿಯ ಬಳಿಯಲ್ಲಿ ಉಳಿದುಕೊಂಡಿದೆಯೆ? \q1 \v 10 ಕಾಡುಕೋಣವನ್ನು ಹಗ್ಗದಿಂದ ನೇಗಿಲ ಸಾಲಿಗೆ ಕಟ್ಟಿರುವೆಯಾ? \q2 ಅದು ಕಣಿವೆಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೆ? \q1 \v 11 ಅದರ ಶಕ್ತಿ ಹೆಚ್ಚಾಗಿರುವುದರಿಂದ ನೀನು ಕೆಲಸಕ್ಕಾಗಿ ಅದನ್ನೇ ನಂಬಿರುವೆಯಾ? \q2 ನಿನ್ನ ಭಾರವಾದ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯಾ? \q1 \v 12 ಅದು ನಿನ್ನ ಧಾನ್ಯ ತೆನೆಗಳನ್ನು ಮನೆಗೆ ತರುವುದೆಂದು ನಂಬುವೆಯಾ? \q2 ನಿನ್ನ ಕಣದಲ್ಲಿ ಕಾಳು ಕೂಡಿಸುವದೆಂದೂ ಅದನ್ನು ನಿರೀಕ್ಷಿಸುವೆಯಾ? \b \q1 \v 13 “ಉಷ್ಟ್ರಪಕ್ಷಿ ಸಂತೋಷದಿಂದ ರೆಕ್ಕೆ ಬಡಿಯುತ್ತದೆ. \q2 ಆದರೂ ಕೊಕ್ಕರೆಯ ರೆಕ್ಕೆ ಗರಿಗಳೊಂದಿಗೆ \q2 ಅವುಗಳನ್ನು ಹೋಲಿಸಲಾಗದು. \q1 \v 14 ಏಕೆಂದರೆ ಉಷ್ಟ್ರಪಕ್ಷಿಯು ತನ್ನ ಮೊಟ್ಟೆಗಳನ್ನು ನೆಲದಲ್ಲಿ ಬಿಟ್ಟು, \q2 ಕೇವಲ ಮರಳಿನಿಂದ ಅವುಗಳಿಗೆ ಕಾವು ಕೊಡುತ್ತದೆ. \q1 \v 15 ಜನರು ಕಾಲಿನಿಂದ ಮೊಟ್ಟೆಗಳನ್ನು ಮೆಟ್ಟಿಯಾರು, \q2 ಇಲ್ಲವೆ ಕಾಡುಮೃಗ ಅದನ್ನು ಅವುಗಳನ್ನು ತುಳಿದೀತು ಎಂಬ ಚಿಂತೆ ಆ ಪಕ್ಷಿಗೆ ಇಲ್ಲ. \q1 \v 16 ತನ್ನ ಮರಿಗಳನ್ನು ತನ್ನವುಗಳಲ್ಲ ಎಂಬಂತೆ ಕ್ರೂರವಾಗಿ ನಡೆಸುತ್ತದೆ; \q2 ಉಷ್ಟ್ರಪಕ್ಷಿಯು ತನ್ನ ಹೆರಿಗೆ ವ್ಯರ್ಥವಾದರೂ ಅದಕ್ಕೆ ಚಿಂತೆ ಇಲ್ಲ. \q1 \v 17 ಏಕೆಂದರೆ ದೇವರು ಉಷ್ಟ್ರಪಕ್ಷಿಗೆ ಜ್ಞಾನವನ್ನು ಮರೆಮಾಡಿ, \q2 ತಿಳುವಳಿಕೆಯನ್ನು ಅದಕ್ಕೆ ಕೊಡಲಿಲ್ಲವಷ್ಟೆ. \q1 \v 18 ಆದರೂ ಆ ಪಕ್ಷಿ ತನ್ನ ರೆಕ್ಕೆಗಳನ್ನು ಹರಡಿ ಓಡಿದಾಗ, \q2 ಅದು ಕುದುರೆ ಸವಾರನನ್ನು ಸಹ ನೋಡಿ ಅಣಕಿಸುತ್ತದೆ. \b \q1 \v 19 “ಯೋಬನೇ, ಕುದುರೆಗೆ ಶಕ್ತಿ ಕೊಟ್ಟವನು ನೀನೋ? \q2 ಅದರ ಕೊರಳಿಗೆ ಜುಟ್ಟುಗುಡುಗನ್ನು ಹೊದಿಸಿದವನು ನೀನೋ? \q1 \v 20 ಮಿಡತೆಯ ಹಾಗೆ ಅದನ್ನು ಹಾರುವಂತೆ ಮಾಡಿದವನು ನೀನೋ? \q2 ಅದರ ಕೆನೆತದ ಪ್ರಭಾವ ಭಯಂಕರವಾಗಿದೆಯಲ್ಲಾ? \q1 \v 21 ಕುದುರೆಯು ನೆಲವನ್ನು ಕೆರೆಯುತ್ತಾ ತನ್ನ ಶಕ್ತಿಯಲ್ಲಿ ಹಿಗ್ಗುತ್ತದೆ; \q2 ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೊರಡುತ್ತದೆ. \q1 \v 22 ಭಯವನ್ನು ಕಂಡು ನಗುತ್ತದೆ; ಯಾವುದಕ್ಕೂ ಹೆದರುವುದಿಲ್ಲ; \q2 ಖಡ್ಗಕ್ಕೆ ಸಹ ಹಿಂದೆಗೆಯುವುದಿಲ್ಲ. \q1 \v 23 ಅದರ ಮೇಲೆ ಬತ್ತಳಿಕೆಯೂ, \q2 ಪ್ರಜ್ವಲಿಸುವ ಭಲ್ಲೆಯೂ, ಭರ್ಜಿಯೂ ಥಳಥಳಿಸುತ್ತವೆ. \q1 \v 24 ಕುದುರೆ ಕಹಳೆಯ ನಾದವನ್ನು ಕೇಳಿದರೂ \q2 ಭೀಕರ ಉತ್ಸಾಹದಲ್ಲಿ ನೆಲನುಂಗುವಂತೆ ನಿಲ್ಲದೆ ಓಡುತ್ತದೆ. \q1 \v 25 ರಣಕಹಳೆ ಮೊಳಗಿದಾಗ ಕುದುರೆ ಕೆನೆಯುತ್ತದೆ. \q2 ಅದು ಅಧಿಪತಿಗಳ ಗರ್ಜನೆಯನ್ನೂ ಕಾಳಗದ ಆರ್ಭಟವನ್ನೂ \q2 ದೂರದಿಂದಲೇ ಮೂಸಿ ನೋಡಿ ತಿಳಿಯುತ್ತದೆ. \b \q1 \v 26 “ಯೋಬನೇ, ಗಿಡುಗವು ತನ್ನ ರೆಕ್ಕೆಗಳನ್ನು ಹರಡಿ, \q2 ದಕ್ಷಿಣದ ಕಡೆಗೆ ಹಾರುವುದು ನಿನ್ನ ಜ್ಞಾನದಿಂದಲೋ? \q1 \v 27 ರಣಹದ್ದು ಎತ್ತರಕ್ಕೆ ಹಾರುವುದೂ, \q2 ಉನ್ನತ ಸ್ಥಳದಲ್ಲಿ ಗೂಡುಕಟ್ಟುವುದು ನಿನ್ನ ಅಪ್ಪಣೆಯಿಂದಲೋ? \q1 \v 28 ಅದು ಬಂಡೆಯ ಸಂದುಗಳಲ್ಲಿ ರಾತ್ರಿಯನ್ನು ಕಳೆಯುತ್ತದೆ; \q2 ಶಿಲಾಶಿಖರದ ದುರ್ಗಗಳಲ್ಲಿಯೂ ಅದು ತಂಗುತ್ತದೆ. \q1 \v 29 ಅಲ್ಲಿಂದಲೇ ಆಹಾರವನ್ನು ಹುಡುಕುತ್ತದೆ; \q2 ಅದರ ಕಣ್ಣುಗಳು ದೂರದಿಂದಲೇ ನೋಡುತ್ತವೆ. \q1 \v 30 ಅದರ ಮರಿಗಳು ತಂದ ಬೇಟೆಯನ್ನು ತಿಂದುಬಿಡುತ್ತವೆ; \q2 ಹೆಣ ಬಿದ್ದಲ್ಲಿಯೇ ರಣಹದ್ದು ಇರುವುದು.” \c 40 \p \v 1 ಯೆಹೋವ ದೇವರು ಯೋಬನಿಗೆ ಮತ್ತೆ ಇಂತೆಂದರು: \q1 \v 2 “ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, \q2 ದೇವರಿಗೇ ಪಾಠ ಕಲಿಸಿಕೊಡುವೆಯಾ? \q2 ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!” \p \v 3 ಆಗ ಯೋಬನು ಯೆಹೋವ ದೇವರಿಗೆ ಉತ್ತರವಾಗಿ, \q1 \v 4 “ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? \q2 ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ. \q1 \v 5 ಒಂದು ಸಾರಿ ಮಾತಾಡಿದೆ, ಈಗ ನನಗೆ ಕೊಡುವುದಕ್ಕೆ ಉತ್ತರ ಇಲ್ಲ; \q2 ಮತ್ತೆ ಮಾತಾಡುತ್ತಿದ್ದೇನೆ, ಆದರೆ ಮಾತಾಡಲು ನನಗೆ ಇನ್ನೇನೂ ಇಲ್ಲ,” ಎಂದನು. \p \v 6 ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರಕೊಟ್ಟು ಹೇಳಿದ್ದೇನೆಂದರೆ: \q1 \v 7 “ಈಗ ಶೂರನಂತೆ ನಿನ್ನ ನಡು ಕಟ್ಟಿಕೋ; \q2 ನಾನು ನಿನಗೆ ಪ್ರಶ್ನೆಮಾಡುತ್ತೇನೆ; \q2 ನೀನು ನನಗೆ ಉತ್ತರಕೊಡು. \b \q1 \v 8 “ನನ್ನ ನ್ಯಾಯವನ್ನು ನೀನು ಅಪಕೀರ್ತಿ ಮಾಡುತ್ತೀಯೋ? \q2 ನೀನು ನಿನ್ನ ನ್ಯಾಯವನ್ನು ಸ್ಥಾಪಿಸಲು ನನ್ನನ್ನು ಅಪರಾಧಿ ಎಂದು ನಿರ್ಣಯಿಸುತ್ತೀಯೋ? \q1 \v 9 ದೇವರಾದ ನನಗಿರುವ ಭುಜಬಲ ನಿನಗಿದೆಯೋ? \q2 ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ? \q1 \v 10 ಹಾಗಾದರೆ, ಮಹಿಮೆ ಘನತೆಗಳಿಂದ ನಿನ್ನನ್ನು ಅಲಂಕರಿಸಿಕೋ; \q2 ನೀನು ಗೌರವ ಪ್ರಭಾವಗಳನ್ನೂ ಧರಿಸಿಕೋ. \q1 \v 11 ನಿನ್ನ ಕಡುಕೋಪವನ್ನು ಎಲ್ಲಾ \q2 ಗರ್ವಿಷ್ಠರ ಮೇಲೆ ಸುರಿಸಿ, ಅವರನ್ನು ತಗ್ಗಿಸು. \q1 \v 12 ಹೌದು, ಗರ್ವಿಷ್ಠರನ್ನೆಲ್ಲಾ ನೋಡಿ ತಗ್ಗಿಸಿಬಿಡು; \q2 ದುಷ್ಟರನ್ನು ಅವರು ನಿಂತಿರುವ ಸ್ಥಳದಲ್ಲಿಯೇ ಕೆಡವಿಬಿಡು. \q1 \v 13 ಅವರೆಲ್ಲರನ್ನು ಒಟ್ಟಾಗಿ ಧೂಳಿನಲ್ಲಿ ಅಡಗಿಸಿಬಿಡು; \q2 ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕುಹಾಕು. \q1 \v 14 ನೀನು ಹಾಗೆ ಮಾಡಿದರೆ, ನಿನ್ನ ಬಲ ನಿನ್ನನ್ನು ರಕ್ಷಿಸಬಲ್ಲದೆಂದು \q2 ನಾನೇ ಒಪ್ಪಿಕೊಳ್ಳುವೆನು. \b \q1 \v 15 “ನಾನು ನಿನ್ನ ಹಾಗೆ ಸೃಷ್ಟಿಮಾಡಿದ \q2 ನೀರಾನೆಯನ್ನು ನೋಡು; \q2 ಅದು ಎತ್ತಿನ ಹಾಗೆ ಹುಲ್ಲನ್ನು ತಿನ್ನುತ್ತದೆ. \q1 \v 16 ಅದರ ಸೊಂಟದಲ್ಲಿ ಎಂಥಾ ಬಲ ಅಡಕವಾಗಿದೆ. \q2 ಅದರ ಹೊಟ್ಟೆಯ ನರಗಳಲ್ಲಿ ಸಹ ಎಂಥಾ ಶಕ್ತಿಯಿದೆ! \q1 \v 17 ನೀರಾನೆಯು ತನ್ನ ಬಾಲವನ್ನು ದೇವದಾರು ಮರದಂತೆ ಬಗ್ಗಿಸುತ್ತದೆ; \q2 ಅದರ ತೊಡೆಯ ನರಗಳೋ ಹೆಣೆದುಕೊಂಡಿವೆ. \q1 \v 18 ಅದರ ಮೂಳೆಗಳು ಕಂಚಿನ ಸಲಿಕೆಗಳಂತೆ ಬಲವಾಗಿವೆ; \q2 ಅದರ ಕೈಕಾಲುಗಳು ಕಬ್ಬಿಣದ ಕಂಬಿಗಳ ಹಾಗೆ ಇರುತ್ತವೆ. \q1 \v 19 ದೇವರ ಸೃಷ್ಟಿಗಳಲ್ಲಿ ಅದು ಮುಖ್ಯವಾದದ್ದು; \q2 ಸೃಷ್ಟಿಕರ್ತ ದೇವರು ಅದಕ್ಕೆ ಕೋರೆಹಲ್ಲಿನ ಖಡ್ಗವನ್ನು ಒದಗಿಸಿದ್ದಾರೆ. \q1 \v 20 ಪರ್ವತಗಳಲ್ಲಿ ಅದಕ್ಕೆ ಮೇವು ಸಿಗುತ್ತದೆ; \q2 ಎಲ್ಲಾ ಕಾಡುಮೃಗಗಳು ಅಲ್ಲಿ ಆಡುತ್ತವೆ. \q1 \v 21 ನೀರಾನೆಯು ತಾವರೆ ಗಿಡಗಳಡಿಯಲ್ಲಿಯೂ ಆಪಿನ ಮರೆಯಲ್ಲಿಯೂ, \q2 ಜವುಗು ಭೂಮಿಯಲ್ಲಿಯೂ ವಿಶ್ರಮಿಸಿಕೊಳ್ಳುತ್ತದೆ. \q1 \v 22 ತಾವರೆ ಎಲೆಗಳು ನೆರಳನ್ನು ಅದಕ್ಕೆ ಹರಡುತ್ತವೆ; \q2 ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ. \q1 \v 23 ಹೊಳೆ ಉಕ್ಕಿ ಬಂದರೂ ನೀರಾನೆಯು ಹೆದರುವುದಿಲ್ಲ. \q2 ಯೊರ್ದನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು. \q1 \v 24 ಅದು ನೋಡುತ್ತಿರುವಾಗ ಯಾರಾದರೂ ಅದನ್ನು ಹಿಡಿಯಬಲ್ಲರೋ? \q2 ಅದರ ಮೂಗನ್ನು ಗಾಳದಿಂದ ಚುಚ್ಚಬಲ್ಲರೋ? \b \c 41 \q1 \v 1 “ಯೋಬನೇ, ಲಿವ್ಯಾತಾನ್ ಮೊಸಳೆಯನ್ನು ಗಾಳದಿಂದ ಎಳೆಯಬಲ್ಲೆಯಾ? \q2 ಹಗ್ಗದಿಂದ ಅದರ ನಾಲಿಗೆಯನ್ನು ಬಿಗಿಯಬಲ್ಲೆಯಾ? \q1 \v 2 ಅದರ ಮೂಗಿನಲ್ಲಿ ಗಾಳ ಇಡುವೆಯಾ? \q2 ಅದರ ದವಡೆಗೆ ಮುಳ್ಳಿನಿಂದ ಚುಚ್ಚುವೆಯಾ? \q1 \v 3 ಅದು ಅನೇಕ ಸಾರಿ ಕರುಣೆಗಾಗಿ ನಿನಗೆ ವಿಜ್ಞಾಪನೆಮಾಡಿತೇ? \q2 ನಿನ್ನ ಸಂಗಡ ನಮ್ರತೆಯಿಂದ ಮಾತನಾಡೀತೇ? \q1 \v 4 ನೀನು ಅದನ್ನು ಇಡೀ ಜೀವಮಾನಕ್ಕೂ ಆಳಾಗಿ ಸೇರಿಸಿಕೊಳ್ಳುವಂತೆ, \q2 ನಿನ್ನೊಂದಿಗೆ ಒಡಂಬಡಿಕೆ ಮಾಡಿಕೊಂಡೀತೆ? \q1 \v 5 ಸಾಕುಪಕ್ಷಿಯಂತೆ ಅದನ್ನು ಆಡಿಸಬಲ್ಲೆಯಾ? \q2 ಮನೆಯಲ್ಲಿರುವ ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟಿ ಹಾಕಬಲ್ಲೆಯಾ? \q1 \v 6 ಬೆಸ್ತರು ಅದಕ್ಕಾಗಿ ವ್ಯಾಪಾರ ಒಪ್ಪಂದ ಮಾಡುತ್ತಾರೆಯೆ? \q2 ಅವರು ಅದನ್ನು ವರ್ತಕರಲ್ಲಿ ಹಂಚಿ ಮಾರುವರೆ? \q1 \v 7 ಆ ಮೊಸಳೆಯ ಚರ್ಮವನ್ನು ಮುಳ್ಳುಗಳಿಂದ ಚುಚ್ಚಬಲ್ಲೆಯಾ? \q2 ಅದರ ತಲೆಯನ್ನು ಮೀನು ಹಿಡಿಯುವ ಈಟಿಯಿಂದ ತಿವಿಯಬಲ್ಲೆಯಾ? \q1 \v 8 ಅದರ ಮೇಲೆ ನಿನ್ನ ಕೈಹಾಕಿ ನೋಡು! \q2 ಆ ಹೋರಾಟವನ್ನು ನೆನೆಸಿಕೊಂಡರೆ, ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ! \q1 \v 9 ಅದನ್ನು ಹಿಡಿಯಬಹುದೆಂಬ ನಿರೀಕ್ಷೆಯು ವ್ಯರ್ಥವಾದದ್ದು; \q2 ಹಿಡಿಯ ಬಂದವನು ನೋಡಿದ ಮಾತ್ರಕ್ಕೆ ಹೆದರಿ ಬಿದ್ದುಹೋಗುವನು. \q1 \v 10 ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; \q2 ಹೀಗಿರುವಾಗ, ನನಗೆ ಎದುರಾಗಿ ನಿಲ್ಲಲು ಶಕ್ತರು ಯಾರು? \q1 \v 11 ನಾನು ಸಾಲ ತೀರಿಸಬೇಕೆಂದು ನನಗೆ ವಿರೋಧವಾಗಿ ಹಕ್ಕು ಸಾಧಿಸುವವರು ಯಾರು? \q2 ಆಕಾಶದ ಕೆಳಗೆ ಇರುವಂಥ ಪ್ರತಿಯೊಂದೂ ನನ್ನದೇ. \b \q1 \v 12 “ನಾನು ಲಿವ್ಯಾತಾನ್ ಮೊಸಳೆಯ ದೇಹದ ಭಾಗಗಳನ್ನೂ ಬಲವನ್ನೂ, \q2 ಅದರ ಆಕರ್ಷಕ ಸೊಬಗನ್ನೂ ವರ್ಣಿಸದೆ ಸುಮ್ಮನಿರಲಾರೆನು. \q1 \v 13 ಅದರ ಹೊರ ವಸ್ತ್ರವನ್ನು ತೆಗೆಯಬಲ್ಲವರು ಯಾರು? \q2 ಅದರ ಜೋಡು ದವಡೆಗಳೊಳಗೆ ಕಡಿವಾಣದಿಂದ ನುಗ್ಗಬಲ್ಲವರು ಯಾರು? \q1 \v 14 ಅದರ ಮುಖದ ಕದಗಳನ್ನು ತೆರೆಯಬಲ್ಲವರು ಯಾರು? \q2 ಅದರ ಹಲ್ಲುಗಳ ಸುತ್ತಲೂ ಭಯಭೀತಿ ಆವರಿಸಿರುವುದು. \q1 \v 15 ಗುರಾಣಿಗಳ ಸಾಲುಗಳು ಅದರ ಬೆನ್ನಿಗೆ ಹೆಮ್ಮೆಯಾಗಿವೆ; \q2 ಅವು ಒಟ್ಟಿಗೆ ಬಿಗಿಯಾಗಿ ಮುದ್ರಿಸಲಾಗಿವೆ. \q1 \v 16 ಗಾಳಿಯೂ ಅವುಗಳ ನಡುವೆ ನುಗ್ಗದಂತೆ, \q2 ಒಂದಕ್ಕೊಂದು ಹೊಂದಿಕೊಂಡಿವೆ. \q1 \v 17 ಆ ಅಡ್ಡಣಗಳು ಒಂದಕ್ಕೊಂದು ಅಂಟಿಕೊಂಡಿವೆ; \q2 ಪ್ರತ್ಯೇಕಿಸಲಾಗದಂತೆ ಹಿಡಿದುಕೊಂಡಿವೆ. \q1 \v 18 ಅದರ ಸೀನಿನ ತುಂತುರುಗಳು ಬೆಳಕಿನ ಹೊಳಪನ್ನು ಹೊರಹಾಕುವುದು; \q2 ಅದರ ಕಣ್ಣುಗಳು ಉದಯದ ಕಿರಣಗಳ ಹಾಗೆ ಇವೆ. \q1 \v 19 ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; \q2 ಬೆಂಕಿಯ ಕಿಡಿಗಳು ಹಾರುತ್ತವೆ. \q1 \v 20 ಆಪುಹುಲ್ಲಿಗೆ ಬೆಂಕಿಯಿಟ್ಟಾಗ ಕುದಿಯುವ ಪಾತ್ರೆಯೊಳಗಿಂದ ಆವಿ ಬರುವಂತೆ, \q2 ಅದರ ಮೂಗಿನೊಳಗಿಂದ ಹೊಗೆ ಹಾಯುವುದು. \q1 \v 21 ಅದರ ಶ್ವಾಸವೇ ಇದ್ದಲನ್ನು ಹೊತ್ತಿಸುವುದು; \q2 ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡುವುದು. \q1 \v 22 ಅದರ ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿರುವುದು; \q2 ಅದರ ಮುಂದೆ ಭಯವು ಸಾಗುತ್ತಿರುವುದು. \q1 \v 23 ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; \q2 ಅವು ಸ್ಥಿರವಾಗಿದ್ದು ಕದಲದೆ ಇರುತ್ತವೆ. \q1 \v 24 ಅದರ ಹೃದಯವು ಬಂಡೆಯಂತೆಯೂ, \q2 ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ. \q1 \v 25 ಅದು ಎದ್ದರೆ ಶೂರರು ಸಹ ಹೆದರುತ್ತಾರೆ; \q2 ಅದರ ಹೊಡೆತಕ್ಕೆ ಭಯಭ್ರಾಂತರಾಗಿ ಹಿಂಜರಿಯುವರು. \q1 \v 26 ಖಡ್ಗದಿಂದ ಹೊಡೆದರೆ ಅದಕ್ಕೇನೂ ಆಗುವುದಿಲ್ಲ; \q2 ಭರ್ಜಿ, ಬಾಣ, ಕವಚ ಇವುಗಳಿಂದಲೂ ಅದಕ್ಕೆ ಏನು ಆಗುವುದಿಲ್ಲ. \q1 \v 27 ಕಬ್ಬಿಣವು ಅದಕ್ಕೆ ಒಣಹುಲ್ಲಿನಂತೆಯೂ, \q2 ಕಂಚು ಅದಕ್ಕೆ ಕೊಳೆತ ಕಟ್ಟಿಗೆಯಂತೆಯೂ ಇರುವುದು. \q1 \v 28 ಲಿವ್ಯಾತಾನ್ ಮೊಸಳೆಯನ್ನು ಬಿಲ್ಲುಬಾಣಗಳು ಓಡಿಸಲು ಅಸಾಧ್ಯ; \q2 ಕವಣೆಯ ಕಲ್ಲು ಅದಕ್ಕೆ ಹೊಟ್ಟಿಗೆ ಸಮಾನ. \q1 \v 29 ದೊಣ್ಣೆಗಳು ಅದಕ್ಕೆ ಒಣಹುಲ್ಲಿನ ಹಾಗೆ ಇರುವುದು; \q2 ಭರ್ಜಿ ಅದಕ್ಕೆ ತಾಕಿದರೆ, ಅದು ನಗುವುದು. \q1 \v 30 ಅದರ ಹೊಟ್ಟೆಯ ಅಡಿಯಲ್ಲಿ ಚೂಪಾದ ಒಡೆದ ಮಡಕೆಗಳಂತಿವೆ, \q2 ಅದು ಕೆಸರಿನ ಮೇಲೆ ತೆನೆಬಡಿಯುವ ಯಂತ್ರದಿಂದ ಆಗುವ ಗುರುತಿನಂತಿರುವುದು. \q1 \v 31 ಅದು ಆಳವಾದ ನೀರನ್ನು ಕುದಿಯುವ ಹಂಡೆಯ ನೀರಿನಂತೆ ಕಲಕುವುದು; \q2 ಸಮುದ್ರವನ್ನು ತೈಲದ ಪಾತ್ರೆಯ ಹಾಗೆಯೂ ಕದಲಿಸುವುದು. \q1 \v 32 ಸಾಗರಕ್ಕೆ ನೆರೆ ಬಂತೋ ಎಂಬಂತೆ, \q2 ಅದು ತಾನು ಬಂದ ಹಾದಿಯನ್ನೇ ಬೆಳ್ಳಗಾಗುವಂತೆ ಮಾಡುವುದು. \q1 \v 33 ಭೂಮಿಯ ಮೇಲೆ ಇದಕ್ಕೆ ಸಮಾನವಾದದ್ದು ಇಲ್ಲ; \q2 ಇದು ಭಯಭೀತಿಯಿಲ್ಲದ ಸೃಷ್ಟಿ. \q1 \v 34 ಇದು ಪ್ರತಿ ಅಹಂಕಾರಿಯನ್ನು ನೋಡುವುದು; \q2 ಗರ್ವಪಡುವ ಎಲ್ಲರ ಮೇಲೆ ಇದು ರಾಜನಾಗಿರುವುದು.” \c 42 \s1 ದೇವರಿಗೆ ಯೋಬನ ಉತ್ತರ \p \v 1 ಆಗ ಯೋಬನು ಯೆಹೋವ ದೇವರಿಗೆ ಕೊಟ್ಟ ಉತ್ತರ: \q1 \v 2 “ತಮಗೆ ಎಲ್ಲಾ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ನಾನು ಬಲ್ಲೆ; \q2 ತಮ್ಮ ಯಾವ ಉದ್ದೇಶವನ್ನೂ ಅಡ್ಡಿಮಾಡಲು ಸಾಧ್ಯವಿಲ್ಲ ಎಂಬುದನ್ನು ಸಹ ತಿಳಿದಿದ್ದೇನೆ. \q1 \v 3 ‘ತಿಳುವಳಿಕೆಯಿಲ್ಲದೆ ನನ್ನ ಯೋಜನೆಯನ್ನು ಮಂಕುಮಾಡುವ ನೀನು ಯಾರು?’ \q2 ಎಂದು ತಾವು ಪ್ರಶ್ನಿಸಿದ್ದೀರಿ. \q1 ನಿಶ್ಚಯವಾಗಿ, ತಾವು ಹೇಳಿದಂತೆ ನನಗೆ ಅರ್ಥವಾಗದವುಗಳನ್ನು ಮಾತಾಡಿಬಿಟ್ಟೆ, \q2 ನನಗೆ ತಿಳಿಯದ ಸಂಗತಿಗಳನ್ನೂ ನನ್ನ ಬುದ್ಧಿಗೆ ಮೀರಿದ \q2 ಅದ್ಭುತಗಳನ್ನೂ ಕುರಿತು ಟೀಕಿಸಿಬಿಟ್ಟೆ. \b \q1 \v 4 “ತಾವು ನನಗೆ, ‘ನಾನು ನಿನ್ನನ್ನು ಪ್ರಶ್ನೆಮಾಡುವೆನು; \q2 ನೀನೇ ನನಗೆ ಉತ್ತರಕೊಡು,’ ಎಂದು ಅಪ್ಪಣೆ ಕೊಟ್ಟಿದ್ದೀರಿ. \q1 \v 5 ಇದುವರೆಗೆ ತಮ್ಮನ್ನು ಕುರಿತು ನಾನು ಬೇರೆಯವರಿಂದ ಕೇಳಿದ್ದೆ; \q2 ಆದರೆ ಈಗ ತಮ್ಮನ್ನು ಕಣ್ಣಾರೆ ಕಂಡಿದ್ದೇನೆ. \q1 \v 6 ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, \q2 ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು. \s1 ಸಮಾಪ್ತಿ \p \v 7 ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ. \v 8 ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು. \v 9 ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಯೆಹೋವ ದೇವರು ತಮಗೆ ಹೇಳಿದಂತೆ ಮಾಡಿದರು. ಯೆಹೋವ ದೇವರು ಯೋಬನ ಪ್ರಾರ್ಥನೆಯನ್ನು ಸ್ವೀಕರಿಸಿದರು. \p \v 10 ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದ ತರುವಾಯ ಯೆಹೋವ ದೇವರು ಅವನ ಸಂಪತ್ತನ್ನು ಪುನಃಸ್ಥಾಪಿಸಿದರು. ಯೆಹೋವ ದೇವರು ಯೋಬನಿಗೆ ಮೊದಲು ಇದ್ದವುಗಳಿಗಿಂತ ಎರಡರಷ್ಟು ಕೊಟ್ಟರು. \v 11 ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು. \p \v 12 ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು. \v 13 ಅವನಿಗೆ ಏಳು ಪುತ್ರರೂ ಮೂರು ಪುತ್ರಿಯರೂ ಹುಟ್ಟಿದರು. \v 14 ಯೋಬನು ಮೊದಲನೆಯವಳಿಗೆ ಯೆಮೀಮಳೆಂದೂ ಎರಡನೆಯವಳಿಗೆ ಕೆಚೀಯಳೆಂದೂ ಮೂರನೆಯವಳಿಗೆ ಕೆರೆನ್ ಹಪ್ಪೂಕ್ ಎಂದೂ ಹೆಸರಿಟ್ಟನು. \v 15 ಯೋಬನ ಪುತ್ರಿಯರ ಹಾಗೆ ಸೌಂದರ್ಯವತಿಯರು ದೇಶದಲ್ಲೆಲ್ಲೂ ಇರಲಿಲ್ಲ. ಅವರ ತಂದೆ ಅವರ ಅಣ್ಣತಮ್ಮಂದಿರಿಗೆ ಕೊಟ್ಟಹಾಗೆ ಅವರಿಗೂ ಸೊತ್ತನ್ನು ಹಂಚಿದನು. \p \v 16 ತರುವಾಯ ಯೋಬನು ನೂರ ನಾಲ್ವತ್ತು ವರ್ಷ ಬಾಳಿದನು. ನಾಲ್ಕನೆಯ ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು. \v 17 ಅನಂತರ ಯೋಬನು, ದಿನತುಂಬಿದ ಮುದುಕನಾಗಿ ಸತ್ತನು.