\id JON - Biblica® Open Kannada Contemporary Version \ide UTF-8 \h ಯೋನನು \toc1 ಯೋನನು \toc2 ಯೋನನು \toc3 ಯೋನ \mt1 ಯೋನನು \c 1 \s1 ಯೋನನು ಯೆಹೋವ ದೇವರಿಂದ ಓಡಿಹೋದದ್ದು \p \v 1 ಯೆಹೋವ ದೇವರ ವಾಕ್ಯವು ಅಮಿತ್ತೈಯನ ಮಗ ಯೋನನಿಗೆ ಬಂದಿತು: \v 2 “ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು. \p \v 3 ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು. \p \v 4 ಆದರೆ ಯೆಹೋವ ದೇವರು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದರು. ಸಮುದ್ರದಲ್ಲಿ ಮಹಾ ಬಿರುಗಾಳಿ ಉಂಟಾಗಿ, ಹಡಗು ಒಡೆಯುವುದರಲ್ಲಿತ್ತು. \v 5 ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ, ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸರಕುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು. \p ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಇಳಿದು ಹೋಗಿ, ಮಲಗಿಕೊಂಡು ಗಾಢ ನಿದ್ರೆಯಲ್ಲಿದ್ದನು. \v 6 ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು. \p \v 7 ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು. \v 8 ಆಗ ಅವರು ಅವನಿಗೆ, “ನಮಗಾಗಿ ಈ ಕಷ್ಟವನ್ನೆಲ್ಲಾ ಉಂಟುಮಾಡಿದ್ದಕ್ಕೆ ಯಾರು ಜವಾಬ್ದಾರರೆಂದು ನಮಗೆ ತೋರಿಸು. ನಿನ್ನ ಕೆಲಸವೇನು? ಎಲ್ಲಿಂದ ಬಂದೆ? ನಿನ್ನ ದೇಶ ಯಾವುದು? ನೀನು ಯಾವ ಜನಾಂಗದವನು?” ಎಂದು ಪ್ರಶ್ನಿಸಿದರು. \p \v 9 ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು. \p \v 10 ಆಗ ಆ ಮನುಷ್ಯರು ಬಹಳ ಭಯಪಟ್ಟು, “ನೀನು ಏನು ಮಾಡಿದ್ದೀ?” ಎಂದು ಅವನನ್ನು ಕೇಳಿದರು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಅವನು ಓಡಿ ಹೋಗುತ್ತಿದ್ದಾನೆಂದು ಆ ಮನುಷ್ಯರಿಗೆ ತಿಳಿದಿತ್ತು. ಏಕೆಂದರೆ ಅವನೇ ಇದನ್ನು ಅವರಿಗೆ ಹೇಳಿದ್ದನು. \p \v 11 ಆಗ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುತ್ತಿತ್ತು. ನಾವಿಕರು ಯೋನನಿಗೆ, “ಸಮುದ್ರ ಶಾಂತವಾಗಬೇಕಾದರೆ, ನಿನ್ನನ್ನು ಏನು ಮಾಡಬೇಕು? ಹೇಳು,” ಎಂದು ಕೇಳಿದರು. \p \v 12 ಅವನು ಅವರಿಗೆ, “ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ಶಾಂತವಾಗುವುದು. ಏಕೆಂದರೆ ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ, ನಿಮ್ಮ ಮೇಲೆ ಬಂತೆಂದು ಬಲ್ಲೆನು,” ಎಂದನು. \p \v 13 ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟುಹಾಕಿದರು. ಆದರೆ ಅವರಿಂದಾಗದೆ ಹೋಯಿತು. ಏಕೆಂದರೆ ಸಮುದ್ರವು ಅವರಿಗೆ ಎದುರಾಗಿ, ಹೆಚ್ಚೆಚ್ಚಾಗಿ ತೆರೆಗಳಿಂದ ರೋಷಗೊಂಡಿತು. \v 14 ಆಗ ಅವರು ಯೆಹೋವ ದೇವರಿಗೆ ಕೂಗಿ, “ಯೆಹೋವ ದೇವರೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ. ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡಿರಿ. ಯೆಹೋವ ದೇವರೇ, ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?” ಎಂದು ಹೇಳಿದರು. \v 15 ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು. ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿಬಿಟ್ಟಿತು. \v 16 ಆಗ ಆ ಜನರು, ಯೆಹೋವ ದೇವರಿಗೆ ಬಹಳವಾಗಿ ಭಯಪಟ್ಟು, ಅವರಿಗೆ ಬಲಿ ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು. \s1 ಯೋನನ ಪ್ರಾರ್ಥನೆ \p \v 17 ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು. \c 2 \nb \v 1 ಆಗ ಯೋನನು ಮೀನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು. \v 2 ಅವನು ಹೀಗೆ ಹೇಳಿದನು: \q1 “ನಾನು ನನ್ನ ವ್ಯಥೆಯಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟೆನು. \q2 ಅವರು ನನ್ನ ಕೂಗನ್ನು ಕೇಳಿದರು. \q1 ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ನಾನು ಕೂಗಿದೆನು, \q2 ಆಗ ನನ್ನ ಕರೆಯನ್ನು ನೀವು ಕೇಳಿದಿರಿ. \q1 \v 3 ನನ್ನನ್ನು ನೀವು ಅಗಾಧದಲ್ಲಿಯೂ, \q2 ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿರಿ. \q2 ಪ್ರವಾಹಗಳು ನನ್ನನ್ನು ಸುತ್ತಿಕೊಂಡವು. \q1 ನಿಮ್ಮ ಎಲ್ಲಾ ಅಲೆಗಳೂ ನಿಮ್ಮ ತೆರೆಗಳೂ \q2 ನನ್ನ ಮೇಲೆ ದಾಟಿಹೋದವು. \q1 \v 4 ಆಗ ನಾನು ಹೇಳಿದ್ದು, \q2 ‘ನಿಮ್ಮ ಕಣ್ಣುಗಳ ಎದುರಿನಿಂದ ಬಹಿಷ್ಕೃತನಾಗಿದ್ದೇನೆ. \q1 ಆದರೂ ನಾನು ನಿಮ್ಮ ಪರಿಶುದ್ಧ \q2 ಮಂದಿರದ ಕಡೆಗೆ ಪುನಃ ನೋಡುವೆನು.’ \q1 \v 5 ನನ್ನನ್ನು ಸುತ್ತುತ್ತಿದ್ದ ನೀರು, ನನ್ನನ್ನು ಭಯಪಡಿಸಿತು. \q2 ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು. \q2 ಜಂಬು ಹುಲ್ಲು ನನ್ನ ತಲೆಗೆ ಸುತ್ತಲಾಗಿತ್ತು. \q1 \v 6 ಬೆಟ್ಟಗಳ ಅಡಿಗಳ ಪರ್ಯಂತರ ಇಳಿದು ಹೋದೆನು. \q2 ಕೆಳಗಿನ ಭೂಮಿಯು ನನ್ನನ್ನು ಶಾಶ್ವತವಾಗಿ ನಿರ್ಬಂಧಿಸಿತು. \q1 ಆದರೂ ದೇವರಾದ ನನ್ನ ಯೆಹೋವ ದೇವರೇ, \q2 ನೀವು ನನ್ನ ಪ್ರಾಣವನ್ನು ತಗ್ಗಿನಿಂದ ಮೇಲಕ್ಕೆ ಎಬ್ಬಿಸಿದ್ದೀರಿ. \b \q1 \v 7 “ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ, \q2 ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು. \q1 ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ \q2 ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು. \b \q1 \v 8 “ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, \q2 ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು. \q1 \v 9 ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು. \q2 ನಾನು ಮಾಡಿದ ಹರಕೆಯನ್ನು ತೀರಿಸುವೆನು. \q1 ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು.” \p \v 10 ಆಗ ಯೆಹೋವ ದೇವರು ಮೀನಿಗೆ ಹೇಳಿದ್ದರಿಂದ, ಅದು ಯೋನನನ್ನು ಒಣಭೂಮಿಯ ಮೇಲೆ ಕಾರಿಬಿಟ್ಟಿತು. \c 3 \s1 ಯೋನನು ನಿನೆವೆಗೆ ಹೋದದ್ದು \p \v 1 ಯೆಹೋವ ದೇವರ ವಾಕ್ಯವು ಎರಡನೆಯ ಸಾರಿ ಯೋನನಿಗೆ ಬಂದಿತು. \v 2 “ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು. \p \v 3 ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು. \v 4 ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು. \v 5 ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು. \p \v 6 ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು. \v 7 ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: \pmo “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: \pm “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ. \v 8 ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ. \v 9 ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?” \p \v 10 ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು. \c 4 \s1 ದೇವರ ಕರುಣೆಯ ಮೇಲೆ ಯೋನನ ಕೋಪ \p \v 1 ಆದರೆ ಯೋನನು ತುಂಬಾ ಬೇಸರಗೊಂಡನು. ಅವನಿಗೆ ಬಹು ಕೋಪ ಬಂತು. \v 2 ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು. \v 3 ಆದ್ದರಿಂದ ಯೆಹೋವ ದೇವರೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆಯಿರಿ, ಏಕೆಂದರೆ ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು. \p \v 4 ಆದರೆ ಯೆಹೋವ ದೇವರು, “ನೀನು ಹೀಗೆ ಕೋಪ ಮಾಡಿಕೊಳ್ಳುವುದು ಸರಿಯೋ?” ಎಂದು ಯೋನನಿಗೆ ಹೇಳಿದರು. \p \v 5 ಆಗ ಯೋನನು ಪಟ್ಟಣವನ್ನು ಬಿಟ್ಟು, ಪಟ್ಟಣದ ಪೂರ್ವದಿಕ್ಕಿನ ಕಡೆಯಲ್ಲಿ ಕುಳಿತುಕೊಂಡು, ಗುಡಿಸಲನ್ನು ಕಟ್ಟಿಕೊಂಡು, ಪಟ್ಟಣದಲ್ಲಿ ಏನಾಗುವುದೆಂದು ನೋಡುವವರೆಗೆ ಗುಡಿಸಲಿನ ನೆರಳಿನಲ್ಲಿ ಕುಳಿತುಕೊಂಡನು. \v 6 ದೇವರಾದ ಯೆಹೋವ ದೇವರು ಒಂದು ಸೋರೆ ಬಳ್ಳಿಯನ್ನು ಹಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು, ಅವನ ತಲೆಗೆ ನೆರಳು ಕೊಟ್ಟು, ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದರು. ಯೋನನು ಆ ಸೋರೆ ಬಳ್ಳಿಯ ವಿಷಯವಾಗಿ ಬಹಳ ಸಂತೋಷಪಟ್ಟನು. \v 7 ಮಾರನೆಯ ದಿವಸ ಉದಯವಾದಾಗ, ದೇವರು ಒಂದು ಹುಳುವನ್ನು ಸಿದ್ಧಮಾಡಿದರು. ಅದು ಸೋರೆ ಬಳ್ಳಿಯನ್ನು ಒಣಗುವ ಹಾಗೆ ಹೊಡೆಯಿತು. \v 8 ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು. \p \v 9 ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. \p ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು. \p \v 10 ಆದರೆ ಯೆಹೋವ ದೇವರು, “ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ, ಒಂದೇ ರಾತ್ರಿಯಲ್ಲಿ ನಾಶವಾದಂಥ ಸೋರೆ ಬಳ್ಳಿಗಾಗಿ ಚಿಂತಿಸಿದೆಯಲ್ಲಾ, \v 11 ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.