\id JOS - Biblica® Open Kannada Contemporary Version \ide UTF-8 \h ಯೆಹೋಶುವ \toc1 ಯೆಹೋಶುವ \toc2 ಯೆಹೋಶುವ \toc3 ಯೆಹೋ \mt1 ಯೆಹೋಶುವ \c 1 \s1 ಯೆಹೋಶುವನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದು \p \v 1 ಯೆಹೋವ ದೇವರ ಸೇವಕನಾದ ಮೋಶೆಯ ಮರಣದ ತರುವಾಯ, ನೂನನ ಮಗ ಮತ್ತು ಮೋಶೆಯ ಸೇವಕ ಆಗಿರುವ ಯೆಹೋಶುವನಿಗೆ ಯೆಹೋವ ದೇವರು: \v 2 “ನನ್ನ ಸೇವಕನಾದ ಮೋಶೆಯು ಮರಣಹೊಂದಿದನು. ಈಗ ನೀನು ಇಸ್ರಾಯೇಲರಾದ ಈ ಜನರೆಲ್ಲರ ಸಹಿತವಾಗಿ ಎದ್ದು, ಯೊರ್ದನ್ ನದಿಯನ್ನು ದಾಟಿ, ಇಸ್ರಾಯೇಲರಿಗೆ ನಾನು ಕೊಡುವ ದೇಶಕ್ಕೆ ಹೋಗು. \v 3 ನಾನು ಮೋಶೆಗೆ ವಾಗ್ದಾನ ಮಾಡಿದ ಪ್ರಕಾರ ನೀವು ಪಾದವಿಡುವ ಎಲ್ಲಾ ಸ್ಥಳವನ್ನು ನಾನು ನಿಮಗೆ ಕೊಟ್ಟಿದ್ದೇನೆ. \v 4 ಮರುಭೂಮಿಯೂ ಈ ಲೆಬನೋನ್ ಮೊದಲುಗೊಂಡು ಯೂಫ್ರೇಟೀಸ್ ಮಹಾ ನದಿಯವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಸೀಮೆ ಸೂರ್ಯನು ಅಸ್ತಮಿಸುವ ಮಹಾಸಾಗರದವರೆಗೂ\f + \fr 1:4 \fr*\ft ಅಂದರೆ, ಮೆಡಿಟೆರೆನಿಯನ್ ಸಮುದ್ರ\ft*\f* ವಿಸ್ತರಿಸಿಕೊಳ್ಳುವುದು. \v 5 ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. \v 6 ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ. \p \v 7 “ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ. \v 8 ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ. \v 9 ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು. \p \v 10 ಆಗ ಯೆಹೋಶುವನು ಅಧಿಕಾರಿಗಳಿಗೆ ಆಜ್ಞಾಪಿಸಿ: \v 11 “ನೀವು ಪಾಳೆಯದ ಮಧ್ಯದಲ್ಲಿ ನಡೆದುಹೋಗಿ ಜನರಿಗೆ, ‘ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನ್ ನದಿಯನ್ನು ದಾಟಿ ಹೋಗಬೇಕು,’ ಎಂದು ತಿಳಿಸಿರಿ,” ಎಂದನು. \p \v 12 ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ, \v 13 “ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕಮಾಡಿಕೊಳ್ಳಿರಿ. ‘ನಿಮ್ಮ ದೇವರಾದ ಯೆಹೋವ ದೇವರು ಈ ದೇಶವನ್ನು ನಿಮಗೆ ಕೊಟ್ಟು ನಿಮ್ಮನ್ನು ವಿಶ್ರಾಂತಿಪಡಿಸಿದ್ದಾರೆ.’ \v 14 ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳು ಮೋಶೆ ನಿಮಗೆ ಕೊಟ್ಟ ಯೊರ್ದನ್ ನದಿಯ ಈಚೆ ಇರುವ ದೇಶದಲ್ಲೇ ಇರಲಿ. ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು, ನದಿದಾಟಿ, \v 15 ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು. \p \v 16 ಆಗ ಅವರು ಯೆಹೋಶುವನಿಗೆ ಉತ್ತರವಾಗಿ, “ನೀನು ನಮಗೆ ಆಜ್ಞಾಪಿಸುವುದನ್ನೆಲ್ಲಾ ಮಾಡುವೆವು. ಎಲ್ಲಿಗೆ ಕಳುಹಿಸುತ್ತೀಯೋ, ಅಲ್ಲಿಗೆ ಹೋಗುವೆವು. \v 17 ನಾವು ಮೋಶೆಯ ಎಲ್ಲಾ ಮಾತು ಕೇಳಿದ ಹಾಗೆಯೇ ನಿನ್ನ ಮಾತು ಕೇಳುವೆವು. ನಿನ್ನ ದೇವರಾದ ಯೆಹೋವ ದೇವರು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ. \v 18 ನೀನು ಆಜ್ಞಾಪಿಸುವ ಎಲ್ಲದರಲ್ಲಿ ಯಾರು ನಿನ್ನ ಮಾತುಗಳನ್ನು ಕೇಳದೆ, ನಿನ್ನ ಬಾಯಿ ಮಾತಿಗೆ ಎದುರು ಬೀಳುವರೋ ಅವರು ಮರಣಕ್ಕೆ ಗುರಿಯಾಗಬೇಕು. ಬಲಿಷ್ಠನಾಗಿರು, ಧೈರ್ಯದಿಂದಿರು,” ಎಂದರು. \c 2 \s1 ರಾಹಾಬಳು ಮತ್ತು ಗೂಢಚಾರರು \p \v 1 ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು. \p \v 2 ಯೆರಿಕೋವಿನ ಅರಸನಿಗೆ, “ಇಗೋ, ಇಸ್ರಾಯೇಲರಲ್ಲಿ ಕೆಲವರು ದೇಶವನ್ನು ಗೂಢಚಾರ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾರೆ,” ಎಂದು ತಿಳಿಸಲಾಯಿತು. \v 3 ಆಗ ಯೆರಿಕೋವಿನ ಅರಸನು ರಾಹಾಬಳಿಗೆ, “ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರೆದುಕೊಂಡು ಬಾ. ಏಕೆಂದರೆ ಅವರು ದೇಶವನ್ನೆಲ್ಲಾ ಗೂಢಚಾರ ಮಾಡಲು ಬಂದಿದ್ದಾರೆ,” ಎಂದನು. \p \v 4 ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು, “ನನ್ನ ಬಳಿಗೆ ಇಬ್ಬರು ಮನುಷ್ಯರು ಬಂದಿದ್ದರು. ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು. \v 5 ಪಟ್ಟಣದ ಬಾಗಿಲು ಮುಚ್ಚುವ ಮುಸ್ಸಂಜೆ ವೇಳೆಯಲ್ಲಿ ಆ ಮನುಷ್ಯರು ಹೊರಟು ಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ. ಅವರನ್ನು ಬೇಗ ಹಿಂದಟ್ಟಿರಿ. ನಿಮಗೆ ಸಿಕ್ಕುವರು,” ಎಂದಳು. \v 6 ಆದರೆ ಆಕೆಯು ಅವರನ್ನು ಮಾಳಿಗೆಯ ಮೇಲೆ ಏರಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನೊಳಗೆ ಬಚ್ಚಿಟ್ಟಿದ್ದಳು. \v 7 ಆ ಮನುಷ್ಯರು ಯೊರ್ದನ್ ನದಿ ದಾರಿ ಹಿಡಿದು ಹೋಗಿ ನದಿ ದಾಟುವ ಸ್ಥಳದವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ, ಪಟ್ಟಣದ ಹೆಬ್ಬಾಗಿಲು ಮುಚ್ಚಿದರು. \p \v 8 ಗೂಢಚಾರರು ಮಲಗುವುದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ, ಅವರ ಬಳಿಗೆ ಬಂದು, \v 9 “ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. \v 10 ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ. \v 11 ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ. \p \v 12 “ಈಗ ನೀವು ನನಗೊಂದು ಪ್ರಮಾಣಮಾಡಬೇಕು. ನಾನು ನಿಮಗೆ ದಯೆ ತೋರಿಸಿದ್ದರಿಂದ ನೀವು ನನಗೂ ನನ್ನ ತಂದೆಯ ಮನೆಗೂ ದಯೆ ತೋರಿಸಬೇಕು. ನನಗೆ ನಿಶ್ಚಯವಾದ ಗುರುತನ್ನು ಕೊಡಬೇಕು. \v 13 ನನ್ನ ತಂದೆಯನ್ನೂ ನನ್ನ ತಾಯಿಯನ್ನೂ, ನನ್ನ ಸಹೋದರರನ್ನೂ ನನ್ನ ಸಹೋದರಿಯರನ್ನೂ, ಅವರಲ್ಲಿರುವ ಎಲ್ಲರನ್ನೂ ಜೀವದಿಂದಿರಿಸಿ, ನಮ್ಮ ಪ್ರಾಣವನ್ನು ಸಾವಿನಿಂದ ತಪ್ಪಿಸಬೇಕು ಎಂದು ಯೆಹೋವ ದೇವರ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದಳು. \p \v 14 ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು. \p \v 15 ಆಗ ಆಕೆಯು ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿಬಿಟ್ಟಳು. ಏಕೆಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. \v 16 ಆಕೆಯು ಅವರಿಗೆ, “ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ, ಅವರು ತಿರುಗಿ ಬರುವವರೆಗೂ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು, ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ,” ಎಂದಳು. \p \v 17 ಆಗ ಆ ಮನುಷ್ಯರು ಆಕೆಗೆ, “ನೀನು ನಮ್ಮಿಂದ ಮಾಡಿಸಿದ ಈ ನಿನ್ನ ಪ್ರಮಾಣದಿಂದ ಬಿಡುಗಡೆಯಾಗಿರುವೆವು. \v 18 ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ, ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕಡುಗೆಂಪು ಹಗ್ಗವನ್ನು ಕಟ್ಟಿ, ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ, ನಿನ್ನ ಸಹೋದರರನ್ನೂ, ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು. \v 19 ಯಾವನಾದರೂ ನಿನ್ನ ಮನೆಯ ಬಾಗಿಲಿನಿಂದ ಹೊರಗೆ ಹೊರಟು ಬೀದಿಗೆ ಬಂದರೆ, ಅವನ ರಕ್ತವು ಅವನ ತಲೆಯ ಮೇಲೆ ಇರುವುದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಮಾಡಿದರೆ, ಅವನ ರಕ್ತ ಅಪರಾಧವು ನಮ್ಮ ತಲೆಯ ಮೇಲೆ ಇರುವುದು. \v 20 ಆದರೆ ನೀನು ಈ ನಮ್ಮ ಕಾರ್ಯವನ್ನು ಬಹಿರಂಗಪಡಿಸಿದರೆ, ನೀನು ನಮಗೆ ಇಟ್ಟ ಆಣೆಯಿಂದ ನಾವು ಬಿಡುಗಡೆಯಾಗಿರುವೆವು,” ಎಂದರು. \p \v 21 ಅದಕ್ಕೆ ಆಕೆಯು, “ನಿಮ್ಮ ಮಾತುಗಳ ಪ್ರಕಾರವೇ ಆಗಲಿ,” ಎಂದು ಹೇಳಿದಳು. \p ಅನಂತರ ಅವರನ್ನು ಕಳುಹಿಸಿಬಿಟ್ಟಳು. ಅವರು ಹೋದಾಗ, ಆ ಕಡುಗೆಂಪು ಹಗ್ಗವನ್ನು ಕಿಟಿಕಿಯಲ್ಲಿ ಕಟ್ಟಿದಳು. \p \v 22 ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರುಗಿ ಬರುವವರೆಗೂ ಮೂರು ದಿನ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವರನ್ನು ಹುಡುಕಿ ಕಾಣದೆ ಹೋದರು. \v 23 ಆಗ ಅವರಿಬ್ಬರು ಹಿಂದಿರುಗಿ ಬೆಟ್ಟದಿಂದ ಇಳಿದು, ನದಿಯನ್ನು ದಾಟಿ, ನೂನನ ಮಗ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವರಿಗೆ ವಿವರಿಸಿದರು. \v 24 ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು. \c 3 \s1 ಯೊರ್ದನ್ ನದಿಯನ್ನು ದಾಟಿದ್ದು \p \v 1 ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು. \v 2 ಮೂರು ದಿನಗಳಾದ ಮೇಲೆ ಅಧಿಕಾರಿಗಳು ಪಾಳೆಯದೊಳಗೆ ಹಾದು ಹೋಗಿ, \v 3 ಜನರಿಗೆ ಆಜ್ಞಾಪಿಸಿ, “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷ ಹೊರುವುದನ್ನು ಕಾಣುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು. \v 4 ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ\f + \fr 3:4 \fr*\ft ಸುಮಾರು 900 ಮೀಟರ್\ft*\f* ಅಂತರ ಇರಬೇಕು. ಅದರ ಹತ್ತಿರ ಬರಬೇಡಿರಿ. ನೀವು ಹೋಗಬೇಕಾದ ಮಾರ್ಗ ನಿಮಗೆ ತಿಳಿಯುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇದುವರೆಗೆ ಪ್ರಯಾಣ ಮಾಡಿರುವುದಿಲ್ಲ,” ಎಂದರು. \p \v 5 ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು. \p \v 6 ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು. \p \v 7 ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು. \v 8 ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನ್ ನದಿಯ ಅಂಚಿಗೆ ಬಂದಾಗ, ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು. \p \v 9 ಆಗ ಯೆಹೋಶುವನು ಇಸ್ರಾಯೇಲರಿಗೆ, “ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿರಿ. \v 10 ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ. \v 11 ಇಗೋ, ಸಮಸ್ತ ಭೂಮಿಗೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನ್ ನದಿಯನ್ನು ದಾಟಿ ಹೋಗುವುದು. \v 12 ಆದ್ದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬರಾಗಿ ತೆಗೆದುಕೊಳ್ಳಿರಿ. \v 13 ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು. \p \v 14 ಆದ್ದರಿಂದ ಜನರು ಯೊರ್ದನ್ ನದಿಯನ್ನು ದಾಟಲು ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಜನರಿಗೆ ಮುಂದಾಗಿ ಹೊತ್ತುಕೊಂಡು ಹೋದರು. \v 15 ಎಂದಿನಂತೆ ಯೊರ್ದನ್ ನದಿಯು ಸುಗ್ಗಿಕಾಲದಲ್ಲಿ ದಡ ತುಂಬಿ ಹರಿಯುತ್ತಾ ಇತ್ತು. ಮಂಜೂಷವನ್ನು ಹೊರುವ ಯಾಜಕರ ಕಾಲುಗಳು ನೀರಿನ ಅಂಚಿನಲ್ಲಿ ಇಡುತ್ತಲೇ, \v 16 ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ\f + \fr 3:16 \fr*\ft ಅಥವಾ \ft*\fqa ಮೃತ ಸಮುದ್ರ\fqa*\f* ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು. \v 17 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು. \c 4 \p \v 1 ಜನರೆಲ್ಲರು ಯೊರ್ದನ್ ನದಿಯ ಆಚೆಗೆ ದಾಟಿದ ಮೇಲೆ, ಯೆಹೋವ ದೇವರು ಯೆಹೋಶುವನೊಂದಿಗೆ ಮಾತನಾಡಿ, \v 2 “ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಮಂದಿ ಗಂಡಸರನ್ನು ಆರಿಸಿಕೊಂಡು, \v 3 ಯೊರ್ದನ್ ನದಿ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಲ್ಲಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಅವುಗಳನ್ನು ನಿಮ್ಮ ಸಂಗಡ ಆಚೆದಡಕ್ಕೆ ತಂದು, ನೀವು ಈ ರಾತ್ರಿಯಲ್ಲಿ ಇಳಿದುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾಪಿಸು,” ಎಂದರು. \p \v 4 ಆಗ ಯೆಹೋಶುವನು ಇಸ್ರಾಯೇಲರಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಆರಿಸಿಕೊಂಡ ಹನ್ನೆರಡು ಮಂದಿ ಗಂಡಸರನ್ನು ಕರೆದನು. \v 5 ಯೆಹೋಶುವನು ಅವರಿಗೆ, “ನೀವು ಯೊರ್ದನ್ ನದಿ ಮಧ್ಯದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮಂಜೂಷದ ಮುಂದೆ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನೂ ಒಂದೊಂದು ಕಲ್ಲನ್ನು ಭುಜದ ಮೇಲೆ ಹೊತ್ತುಕೊಂಡು ಬನ್ನಿರಿ. \v 6 ಏಕೆಂದರೆ ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳೇನು?’ ಎಂದು ಕೇಳುವಾಗ, \v 7 ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು. \p \v 8 ಆಗ ಇಸ್ರಾಯೇಲರು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು. ಯೆಹೋವ ದೇವರು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನ್ ನದಿಯ ಮಧ್ಯದಿಂದ ತೆಗೆದುಕೊಂಡು, ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ಇಟ್ಟರು. \v 9 ಯೆಹೋಶುವನು ಯೊರ್ದನ್ ನದಿ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ಇಟ್ಟ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದವರೆಗೂ ಅಲ್ಲಿಯೇ ಇವೆ. \p \v 10 ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ, ಯೆಹೋವ ದೇವರು ಆಜ್ಞಾಪಿಸಿದ್ದೆಲ್ಲಾ ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿ ನಡುವೆಯೇ ನಿಂತರು. ಜನರು ತ್ವರೆಯಾಗಿ ಆಚೆಗೆ ದಾಟಿಹೋದರು. \v 11 ಜನರೆಲ್ಲರೂ ಆಚೆಗೆ ದಾಟಿದ ಮೇಲೆ ಯೆಹೋವ ದೇವರ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು. \v 12 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಗೋತ್ರದವರು ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಾಯೇಲರಿಗಿಂತ ಮುಂದಾಗಿ ಹಾದುಹೋದರು. \v 13 ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಯೆಹೋವ ದೇವರ ಮುಂದೆ ಯುದ್ಧಮಾಡುವುದಕ್ಕೆ ಯೆರಿಕೋವಿನ ಬಯಲುಗಳಿಗೆ ಹಾದುಬಂದರು. \p \v 14 ಆ ದಿನದಲ್ಲಿ ಯೆಹೋವ ದೇವರು ಯೆಹೋಶುವನನ್ನು ಇಸ್ರಾಯೇಲರೆಲ್ಲರ ಮುಂದೆ ಘನಪಡಿಸಿದರು. ಅವರು ಮೋಶೆಯನ್ನು ಗೌರವಿಸಿದ ಹಾಗೆಯೇ, ಅವನಿಗೂ ಅವನು ಬದುಕಿದ ದಿನಗಳಲ್ಲೆಲ್ಲಾ ಗೌರವ ಕೊಟ್ಟರು. \p \v 15 ಯೆಹೋವ ದೇವರು ಯೆಹೋಶುವನ ಸಂಗಡ ಮಾತನಾಡಿ, \v 16 “ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲೆ ಬರಬೇಕೆಂದು ಆಜ್ಞಾಪಿಸು,” ಎಂದು ಹೇಳಿದರು. \p \v 17 ಆಗ ಯೆಹೋಶುವನು ಯಾಜಕರಿಗೆ, “ಯೊರ್ದನಿನಿಂದ ಮೇಲಕ್ಕೆ ಬನ್ನಿರಿ,” ಎಂದು ಆಜ್ಞಾಪಿಸಿದನು. \p \v 18 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿ ಮಧ್ಯದಲ್ಲಿಂದ ಏರಿ, ತಮ್ಮ ಅಂಗಾಲುಗಳನ್ನು ಒಣನೆಲದ ಮೇಲೆ ಇಟ್ಟಕೂಡಲೇ ನೀರು ಮುಂಚಿನಂತೆ ಬಂದು ಯೊರ್ದನ್ ನದಿಯ ದಡ ತುಂಬಿ ಹರಿಯಿತು. \p \v 19 ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನಿನಿಂದ ಹೊರಟು, ಯೆರಿಕೋವಿನ ಪೂರ್ವದಿಕ್ಕಿನ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದುಕೊಂಡರು. \v 20 ಅವರು ಯೊರ್ದನಿನಿಂದ ತೆಗೆದುಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು. \v 21 ಅವನು ಇಸ್ರಾಯೇಲರಿಗೆ, “ನಿಮ್ಮ ಮಕ್ಕಳು, ‘ಈ ಕಲ್ಲುಗಳು ಏನು?’ ಎಂದು ಮುಂದಿನ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳುವಾಗ, \v 22 ನೀವು ಅವರಿಗೆ, ‘ಇಸ್ರಾಯೇಲರು ಒಣನೆಲದಲ್ಲಿ ಈ ಯೊರ್ದನ್ ನದಿಯನ್ನು ದಾಟಿ ಬಂದರು. \v 23 ನೀವು ಯೊರ್ದನ್ ನದಿ ನೀರನ್ನು ದಾಟಿ ಬರುವವರೆಗೂ, ನಿಮ್ಮ ದೇವರಾದ ಯೆಹೋವ ದೇವರು ಆ ನದಿಯ ನೀರನ್ನು ಒಣಗಿ ಹೋಗುವಂತೆ ಮಾಡಿದರು. ಕೆಂಪು ಸಮುದ್ರವನ್ನು ನಾವು ದಾಟುವವರೆಗೂ ನಮ್ಮ ಮುಂದೆ ಬತ್ತಿಸಿದಂತೆ, ಯೊರ್ದನ್ ನದಿ ನೀರನ್ನೂ ಬತ್ತಿಸಿದರು. \v 24 ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು. \c 5 \p \v 1 ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು. \s1 ಗಿಲ್ಗಾಲಿನಲ್ಲಿ ಸುನ್ನತಿ ಸಂಸ್ಕಾರ \p \v 2 ಆ ಕಾಲದಲ್ಲಿ ಯೆಹೋವ ದೇವರು ಯೆಹೋಶುವನಿಗೆ, “ನೀನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲರಿಗೆ ಸುನ್ನತಿ ಮಾಡು,” ಎಂದರು. \v 3 ಆಗ ಯೆಹೋಶುವನು ತಾನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲರಿಗೆ ಗಿಬೆಯಾತ್ ಹಾರಲೋತ್\f + \fr 5:3 \fr*\fq ಗಿಬೆಯಾತ್ ಹಾರಲೋತ್ \fq*\ft ಅಂದರೆ \ft*\fqa ಅಗ್ರ ಚರ್ಮದ ಬೆಟ್ಟ\fqa*\f* ಎಂಬ ಸ್ಥಳದಲ್ಲಿ ಸುನ್ನತಿ ಮಾಡಿದನು. \p \v 4 ಯೆಹೋಶುವನು ಸುನ್ನತಿ ಮಾಡಿದ ಕಾರಣವೇನೆಂದರೆ: ಈಜಿಪ್ಟಿನಿಂದ ಹೊರಟ ಗಂಡಸರಲ್ಲಿ ಯುದ್ಧಮಾಡುವ ಸೈನ್ಯದವರೆಲ್ಲರೂ ಮರುಭೂಮಿಯ ಮಾರ್ಗದಲ್ಲಿ ಸತ್ತುಹೋದರು. \v 5 ಈಜಿಪ್ಟಿನಿಂದ ಹೊರಟ ಗಂಡಸರೆಲ್ಲರಿಗೂ ಸುನ್ನತಿ ಆಗಿತ್ತು. ಆದರೆ ಈಜಿಪ್ಟಿನಿಂದ ಹೊರಟಾಗ ಮರುಭೂಮಿಯೊಳಗೆ ಮಾರ್ಗದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿ ಆಗಿರಲಿಲ್ಲ. \v 6 ಈಜಿಪ್ಟಿನಿಂದ ಹೊರಟ ಇಸ್ರಾಯೇಲರು ಯೆಹೋವ ದೇವರ ಸ್ವರಕ್ಕೆ ವಿಧೇಯರಾಗದಿದ್ದರಿಂದ ಅವರು, ತಮ್ಮ ಯುದ್ಧವೀರರೆಲ್ಲಾ ನಾಶವಾಗುವ ತನಕ ನಾಲ್ವತ್ತು ವರ್ಷಗಳವರೆಗೆ ಮರುಭೂಮಿಯಲ್ಲಿ ಅಲೆದಾಡುತ್ತಿದ್ದರು. ಏಕೆಂದರೆ ಯೆಹೋವ ದೇವರು ಅವರ ತಂದೆಗಳಿಗೆ ವಾಗ್ದಾನಮಾಡಿದ್ದ, ಹಾಲು ಜೇನು ಹರಿಯುವ ದೇಶವನ್ನು ಅವರು ಕಾಣುವುದಿಲ್ಲ ಎಂದು ಯೆಹೋವ ದೇವರು ಅವರಿಗೆ ಆಣೆಯಿಟ್ಟಿದ್ದರು. \v 7 ಅವರಿಗೆ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿ ಮಾಡಿಸಿದನು. ಅವರಿಗೆ ಮಾರ್ಗದಲ್ಲಿ ಸುನ್ನತಿ ಮಾಡದೆ ಇದ್ದುದರಿಂದ ಅವರು ಸುನ್ನತಿ ಇಲ್ಲದವರಾಗಿದ್ದರು. \v 8 ಜನರೆಲ್ಲರೂ ಸುನ್ನತಿ ಮಾಡಿಸಿಕೊಂಡ ತರುವಾಯ ಅವರು ವಾಸಿಯಾಗುವವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು. \p \v 9 ಆಗ ಯೆಹೋವ ದೇವರು ಯೆಹೋಶುವನಿಗೆ, “ಈ ದಿನ ಈಜಿಪ್ಟಿನ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದರು. ಆದ್ದರಿಂದ ಆ ಸ್ಥಳವು ಇಂದಿನವರೆಗೂ ಗಿಲ್ಗಾಲ್\f + \fr 5:9 \fr*\fq ಗಿಲ್ಗಾಲ್ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಉರುಳಿ ಹೋಗುವುದು\fqa*\f* ಎಂದು ಕರೆಯಲಾಗಿದೆ. \p \v 10 ಇಸ್ರಾಯೇಲರು ಗಿಲ್ಗಾಲಿನಲ್ಲಿ ಇಳಿದುಕೊಂಡು ತಿಂಗಳಿನ ಹದಿನಾಲ್ಕನೆಯ ದಿವಸ ಸಂಜೆಯಲ್ಲಿ ಯೆರಿಕೋವಿನ ಬಯಲುಗಳಲ್ಲಿ ಪಸ್ಕವನ್ನು ಆಚರಿಸಿದರು. \v 11 ಪಸ್ಕದ ಮರುದಿವಸ ಅವರು ಆ ದೇಶದ ಬೆಳೆಯನ್ನು ಅಂದರೆ ಹುಳಿಯಿಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು. \v 12 ಅವರು ಆ ದೇಶದ ಧಾನ್ಯವನ್ನು ತಿಂದ ಮರುದಿವಸದಲ್ಲೇ ಮನ್ನವು ನಿಂತುಹೋಯಿತು. ಇಸ್ರಾಯೇಲರಿಗೆ ಮನ್ನ ಮತ್ತೆ ಸಿಕ್ಕಲಿಲ್ಲ. ಅವರು ಆ ವರುಷದಲ್ಲಿ ಕಾನಾನ್ ದೇಶದ ಫಲವನ್ನು ತಿಂದರು. \s1 ಯೆರಿಕೋವಿನ ಪತನ \p \v 13 ಇದಾದ ಮೇಲೆ ಯೆಹೋಶುವನು ಯೆರಿಕೋವಿನ ಬಳಿಯಲ್ಲಿ ಇದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಆಗ ಒಬ್ಬ ಮನುಷ್ಯನು ಅವನಿಗೆದುರಾಗಿ ನಿಂತಿದ್ದನು. ಆತನ ಕೈಯಲ್ಲಿ ಹಿರಿದ ಖಡ್ಗ ಇರುವುದನ್ನು ಕಂಡನು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ, “ನೀವು ನಮ್ಮವರೋ ಅಥವಾ ಶತ್ರು ಕಡೆಯವರೋ?” ಎಂದು ಕೇಳಿದನು. \p \v 14 ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು. \p \v 15 ಅದಕ್ಕೆ ಯೆಹೋವ ದೇವರ ಸೈನ್ಯದ ಅಧಿಪತಿಯು ಯೆಹೋಶುವನಿಗೆ, “ನಿನ್ನ ಕೆರಗಳನ್ನು ನಿನ್ನ ಕಾಲುಗಳಿಂದ ತೆಗೆದಿಡು. ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು,” ಎಂದನು. ಹಾಗೆಯೇ ಯೆಹೋಶುವನು ಮಾಡಿದನು. \c 6 \p \v 1 ಆಗ ಯೆರಿಕೋವಿನ ಜನರು ಇಸ್ರಾಯೇಲರ ನಿಮಿತ್ತವಾಗಿ, ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದರು. \p \v 2 ಆಗ ಯೆಹೋವ ದೇವರು ಯೆಹೋಶುವನಿಗೆ, “ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧ ವೀರರನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ. \v 3 ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣವನ್ನು ಒಂದು ಸಾರಿ ಸುತ್ತಬೇಕು. ಈ ಪ್ರಕಾರ ಆರು ದಿವಸ ಮಾಡಬೇಕು. \v 4 ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು. \v 5 ಅವರು ಟಗರು ಕೊಂಬುಗಳ ತುತೂರಿಗಳಿಂದ ದೀರ್ಘಧ್ವನಿಗೈಯುವಾಗ, ಆ ತುತೂರಿಯ ಧ್ವನಿಯನ್ನು ಕೇಳುವ ಜನರೆಲ್ಲರೂ ಮಹಾ ರಭಸದಿಂದ ಆರ್ಭಟಿಸಬೇಕು. ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದುಹೋಗುವುದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಒಳಗೆ ನುಗ್ಗಿಹೋಗಬಹುದು,” ಎಂದು ಹೇಳಿದರು. \p \v 6 ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ. ಏಳುಮಂದಿ ಯಾಜಕರು ಏಳು ಟಗರು ಕೊಂಬುಗಳ ತುತೂರಿಗಳೊಂದಿಗೆ ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು. \v 7 ಜನರಿಗೆ, “ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ದರು ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು. \p \v 8 ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ, ಏಳು ಟಗರು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಮುಂದೆ ನಡೆದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರನ್ನು ಹಿಂಬಾಲಿಸಿತು. \v 9 ಹೀಗೆ ಯುದ್ಧ ಸನ್ನದ್ಧರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು. \v 10 ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಶಬ್ದವು ಕೇಳಿಸಲೂಬಾರದು. ನಿಮ್ಮ ಬಾಯಿಂದ ಯಾವ ಮಾತು ಹೊರಡಲೂಬಾರದು, ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು. \v 11 ಹೀಗೆಯೇ ಯೆಹೋವ ದೇವರ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ರಾತ್ರಿಯನ್ನು ಕಳೆದರು. \p \v 12 ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡರು. \v 13 ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧವಾದ ಜನರು ಅವರ ಮುಂದೆ ಹೋದರು. ಆದರೆ ಹಿಂದಿನ ಸೈನ್ಯದವರು ಯೆಹೋವ ದೇವರ ಮಂಜೂಷದ ಹಿಂದೆ ನಡೆದರು. ಯಾಜಕರು ತುತೂರಿಗಳನ್ನು ಊದುತ್ತಾ ಹೊರಟರು. \v 14 ಹೀಗೆ ಎರಡನೆಯ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿಬಂದು ಪಾಳೆಯಕ್ಕೆ ಹಿಂದಿರುಗಿದರು. ಹೀಗೆಯೇ ಆರು ದಿನ ಮಾಡಿದರು. \p \v 15 ಆದರೆ ಏಳನೆಯ ದಿನ ಸೂರ್ಯೋದಯವಾಗುವಾಗ, ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು. ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿಬಂದರು. \v 16 ಏಳನೆಯ ಸಾರಿ ಯಾಜಕರು ತುತೂರಿಗಳನ್ನು ಊದುವಾಗ, ಯೆಹೋಶುವನು ಜನರಿಗೆ, “ಆರ್ಭಟಿಸಿರಿ! ಯೆಹೋವ ದೇವರು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾರೆ. \v 17 ಆದರೂ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರಿಗೆ ಅರ್ಪಿತವಾದವುಗಳು. ರಾಹಾಬಳೆಂಬ ವೇಶ್ಯೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಆಕೆಯು ಬಚ್ಚಿಟ್ಟಿದ್ದಳು. \v 18 ಆದರೆ ಅರ್ಪಿತವಾದವುಗಳನ್ನು ನೀವು ಮುಟ್ಟಬೇಡಿರಿ. ಹಾಗೆ ಅವುಗಳನ್ನು ತೆಗೆದುಕೊಂಡು ನಿಮಗೆ ನಾಶನವನ್ನು ತಂದುಕೊಳ್ಳಬೇಡಿರಿ. ಇಸ್ರಾಯೇಲಿನ ಪಾಳೆಯವೇ ಶಾಪಕ್ಕೆ ಈಡು ಮಾಡಿ, ತೊಂದರೆ ಪಡಿಸದಂತೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರಿ. \v 19 ಎಲ್ಲಾ ಬೆಳ್ಳಿಬಂಗಾರ, ಕಂಚು, ಕಬ್ಬಿಣ ಪಾತ್ರೆಗಳು ಯೆಹೋವ ದೇವರಿಗೆ ಅರ್ಪಿತವಾಗಿರಬೇಕು. ಅವು ಯೆಹೋವ ದೇವರ ಭಂಡಾರಕ್ಕೆ ಸೇರಿರಬೇಕು,” ಎಂದು ಆಜ್ಞಾಪಿಸಿದನು. \p \v 20 ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು. \v 21 ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀಪುರುಷರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆಗಳನ್ನೂ ಖಡ್ಗದಿಂದ ಸಂಪೂರ್ಣವಾಗಿ ನಾಶಮಾಡಿದರು. \p \v 22 ಆ ನಾಡನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ ಯೆಹೋಶುವನು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳನ್ನೂ ಅವಳಿಗೆ ಇರುವ ಸಮಸ್ತವನ್ನೂ ನೀವು ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತೆಗೆದುಕೊಂಡು ಬನ್ನಿರಿ,” ಎಂದನು. \v 23 ಅದರಂತೆ ಆ ಯೌವನಸ್ಥರು ಒಳಗೆ ಹೋಗಿ, ರಾಹಾಬಳನ್ನೂ ಅವಳ ತಂದೆಯನ್ನೂ ಅವಳ ತಾಯಿಯನ್ನೂ ಅವಳ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಗೋತ್ರದ ಎಲ್ಲಾ ಸಂಬಂಧಿಕರನ್ನೂ ಹೊರಗೆ ಕರೆತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು. \p \v 24 ಆದರೆ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿಬಂಗಾರವನ್ನೂ ಕಂಚು ಕಬ್ಬಿಣ ಪಾತ್ರೆಗಳನ್ನು ಮಾತ್ರ ಯೆಹೋವ ದೇವರ ಮನೆಯ ಭಂಡಾರದಲ್ಲಿ ಇಟ್ಟರು. \v 25 ಆದರೆ ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ, ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿವಸದವರೆಗೂ ಇಸ್ರಾಯೇಲರಲ್ಲಿ ವಾಸವಾಗಿದ್ದಾಳೆ. ಏಕೆಂದರೆ ಯೆರಿಕೋವನ್ನು ಸಂಚರಿಸಿ ನೋಡಲು, ಯೆಹೋಶುವನು ಕಳುಹಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು. \p \v 26 ಆ ಕಾಲದಲ್ಲಿ ಯೆಹೋಶುವನು ಅವರಿಗೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಯೆರಿಕೋವೆಂಬ ಈ ನಗರವನ್ನು ಮತ್ತೆ ಕಟ್ಟುವವನು, ಯೆಹೋವ ದೇವರ ದೃಷ್ಟಿಯಲ್ಲಿ ಶಾಪಗ್ರಸ್ತನಾಗುವನು. \q1 “ಅದರ ಅಸ್ತಿವಾರವನ್ನು ಹಾಕುವವನು, \q2 ಅವನು ತನ್ನ ಚೊಚ್ಚಲು ಮಗನನ್ನು ಕಳೆದುಕೊಳ್ಳುವನು. \q1 ಪಟ್ಟಣದ ಬಾಗಿಲುಗಳನ್ನಿಡುವಾಗ \q2 ತನ್ನ ಕಿರಿ ಮಗನನ್ನು ಕಳೆದುಕೊಳ್ಳುವನು.” \p \v 27 ಯೆಹೋವ ದೇವರು ಯೆಹೋಶುವನ ಸಂಗಡ ಇದ್ದರು. ಅವನ ಕೀರ್ತಿ ದೇಶದಲ್ಲೆಲ್ಲಾ ಹರಡಿತು. \c 7 \s1 ಆಕಾನನ ಪಾಪ \p \v 1 ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ\f + \fr 7:1 \fr*\ft ಕೆಲವು ಪ್ರತಿಗಳಲ್ಲಿ ಜಬ್ದೀಯ\ft*\f* ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು. \p \v 2 ಆಗ ಯೆಹೋಶುವನು ಕೆಲವರನ್ನು ಕರೆದು, “ನೀವು ದೇಶವನ್ನು ಸಂಚರಿಸಿ ಸುತ್ತಿ ನೋಡಿ ಬನ್ನಿರಿ,” ಎಂದು ಹೇಳಿ, ಯೆರಿಕೋವಿನಿಂದ ಜನರನ್ನು ಬೇತೇಲಿನ ಪೂರ್ವದಕಡೆ ಬೇತಾವೆನಿನ ಬಳಿಯಲ್ಲಿರುವ ಆಯಿ ಎಂಬ ಪಟ್ಟಣಕ್ಕೆ ಕಳುಹಿಸಿದನು. ಆಗ ಅವರು ಹೋಗಿ ಆಯಿ ಎಂಬ ಪಟ್ಟಣವನ್ನು ರಹಸ್ಯವಾಗಿ ನೋಡಿ ಬಂದರು. \p \v 3 ಯೆಹೋಶುವನ ಬಳಿಗೆ ತಿರುಗಿಬಂದು ಅವನಿಗೆ, “ಜನರೆಲ್ಲರೂ ಹೋಗುವ ಅವಶ್ಯಕತೆ ಇಲ್ಲ, ಆಯಿ ಎಂಬ ಪಟ್ಟಣವನ್ನು ಹೊಡೆಯುವುದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಹೋದರೆ ಸಾಕು. ಸೈನ್ಯವನ್ನು ಕಳುಹಿಸಿ ದಣಿಸಬೇಡ. ಏಕೆಂದರೆ ಸ್ವಲ್ಪ ಜನರು ಮಾತ್ರ ಅಲ್ಲಿ ಇದ್ದಾರೆ,” ಎಂದರು. \v 4 ಆದ್ದರಿಂದ ಜನರಲ್ಲಿ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಅಲ್ಲಿಗೆ ಹೋದರು. ಆದರೆ ಅವರು ಆಯಿ ಎಂಬ ಪಟ್ಟಣದ ಮನುಷ್ಯರನ್ನು ಎದುರಿಸಲಾಗದೆ ಓಡಿಹೋದರು. \v 5 ಆಯಿ ಎಂಬ ಪಟ್ಟಣದವರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಪಟ್ಟಣದ ಬಾಗಿಲಿನಿಂದ ಪ್ರಾರಂಭಿಸಿ ಶೆಬಾರಿಮಿನವರೆಗೂ ಅವರನ್ನು ಹಿಂದಟ್ಟಿ, ಅವರನ್ನು ಹೊಡೆದರು. ಆದ್ದರಿಂದ ಜನರ ಹೃದಯವು ಕರಗಿ ನೀರಿನಂತಾಯಿತು. \p \v 6 ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು. \v 7 ಇದಲ್ಲದೆ ಯೆಹೋಶುವನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ನಮ್ಮನ್ನು ಅಮೋರಿಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕಾಗಿ ನೀವು ಈ ಜನರನ್ನು ಯೊರ್ದನ್ ನದಿ ದಾಟಿಸಿದ್ದು ಏಕೆ? ನಾವು ಯೊರ್ದನ್ ನದಿ ಆಚೆಯಲ್ಲಿ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು. \v 8 ಯೆಹೋವ ದೇವರೇ, ಈಗ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದರಲ್ಲಾ. ನಾನು ಏನು ಹೇಳಲಿ. \v 9 ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು. \p \v 10 ಯೆಹೋವ ದೇವರು ಯೆಹೋಶುವನಿಗೆ, “ನೀನು ಎದ್ದೇಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇನು? \v 11 ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. \v 12 ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನು ತೋರಿಸಿದ್ದಾರೆ. ಅದರಿಂದ ಅವರು ನಾಶನಕ್ಕೆ ಪಾತ್ರರಾದರು. ನೀವು ಶಾಪಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ, ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವುದಿಲ್ಲ. \p \v 13 “ನೀನು ಎದ್ದು ಜನರನ್ನು ಶುದ್ಧೀಕರಿಸಿ, ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ, ಏಕೆಂದರೆ, ‘ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು, ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವವರೆಗೂ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರೆ,’ ಎಂದು ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುತ್ತಾರೆ. \p \v 14 “ ‘ಆದ್ದರಿಂದ ಬೆಳಿಗ್ಗೆ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಯೆಹೋವ ದೇವರು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರವಾಗಿಯೂ ಯೆಹೋವ ದೇವರು ಹಿಡಿಯುವ ಕುಟುಂಬವು ಮನೆಮನೆಯಾಗಿಯೂ ಯೆಹೋವ ದೇವರು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ. \v 15 ಆಗ ಶಾಪಕ್ಕೀಡಾದದ್ದನ್ನು ತೆಗೆದುಕೊಂಡವನೆಂದು ಹಿಡಿಯಲಾಗುವನು. ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ, ಇಸ್ರಾಯೇಲಿನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲಾಗಬೇಕು, ಎಂದು ಅವರಿಗೆ ಹೇಳು,’ ಎಂದರು.” \p \v 16 ಮರುದಿನ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರ ಗೋತ್ರವಾಗಿ ಕರೆದಾಗ, ಯೆಹೂದ ಗೋತ್ರವು ಸಿಕ್ಕಿಕೊಂಡಿತು. \v 17 ಅವನು ಯೆಹೂದ ಕುಟುಂಬವನ್ನು ಕರೆದಾಗ, ಜೆರಹನ ಗೋತ್ರ ಸಿಕ್ಕಿಕೊಂಡಿತು. ಜೆರಹನ ಗೋತ್ರವನ್ನು ಕರೆದಾಗ ಜಿಮ್ರಿಯು ಸಿಕ್ಕಿಕೊಂಡಿತು. \v 18 ಅವನ ಕುಟುಂಬಗಳು ಕುಟುಂಬಗಳಾಗಿ, ವ್ಯಕ್ತಿಗಳು ವ್ಯಕ್ತಿಗಳಾಗಿ ಬಂದಾಗ, ಜಿಮ್ರಿಯ ಮಗನಾದ ಕರ್ಮೀಯ ಮಗನಾದ ಆಕಾನನೂ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಸಿಕ್ಕಿದನು. \p \v 19 ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು. \p \v 20 ಆಕಾನನು ಯೆಹೋಶುವನಿಗೆ, “ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಇಂಥಿಂಥವುಗಳನ್ನು ಮಾಡಿದ್ದೇನೆ. \v 21 ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು. \p \v 22 ಆಗ ಯೆಹೋಶುವನು ದೂತರನ್ನು ಕಳುಹಿಸಿದನು. ಅವರು ಡೇರೆಗಳಿಗೆ ಓಡಿದರು. ಆ ಡೇರೆಯಲ್ಲಿ ಹೂತಿಟ್ಟವುಗಳನ್ನು ತೆಗೆದರು. ಬೆಳ್ಳಿಯು ಅದರ ಕೆಳಗೆ ಮರೆಮಾಡಲಾಗಿತ್ತು. \v 23 ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲರ ಬಳಿಗೂ ತಂದು, ಯೆಹೋವ ದೇವರ ಮುಂದೆ ಇಟ್ಟರು. \p \v 24 ಆಗ ಯೆಹೋಶುವನೂ ಅವನೊಂದಿಗೆ ಇಸ್ರಾಯೇಲರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಪುತ್ರಪುತ್ರಿಯರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ಕಣಿವೆಗೆ ತಂದರು. \v 25 ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. \p ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು, \v 26 ಅವರ ಮೇಲೆ ಕಲ್ಲುಕುಪ್ಪೆ ಕೂಡಿಸಿದರು. ಅದು ಈ ದಿನದವರೆಗೂ ಇದೆ. ಆಗ ಯೆಹೋವ ದೇವರು ತಮ್ಮ ಕೋಪದ ಉರಿಯನ್ನು ಬಿಟ್ಟು ತಿರುಗಿದರು. ಆದ್ದರಿಂದ ಆ ಸ್ಥಳವು ಈವರೆಗೂ ಆಕೋರಿನ ಕಣಿವೆ ಎಂದು ಕರೆಯಲಾಗುತ್ತದೆ. \c 8 \s1 ಆಯಿ ಎಂಬ ಪಟ್ಟಣದ ಪತನ \p \v 1 ಆಗ ಯೆಹೋವ ದೇವರು ಯೆಹೋಶುವನಿಗೆ, “ಭಯಪಡಬೇಡ, ನಿರುತ್ಸಾಹಗೊಳ್ಳಬೇಡ, ನೀನು ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಎದ್ದು ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗು. ನೋಡು, ನಾನು ಆಯಿ ಎಂಬ ಪಟ್ಟಣದ ಅರಸನನ್ನೂ ಅವನ ಜನರನ್ನೂ ಅವನ ಪಟ್ಟಣವನ್ನೂ ಅವನ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ. \v 2 ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದೆಯೋ ಹಾಗೆಯೇ ಆಯಿ ಎಂಬ ಪಟ್ಟಣಕ್ಕೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನು ಮಾತ್ರವೇ ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಲು ಸ್ಥಳಮಾಡಿಕೊಳ್ಳಿರಿ,” ಎಂದರು. \p \v 3 ಆಗ ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗಲು ಯೆಹೋಶುವನೂ, ಸಮಸ್ತ ಸೈನಿಕರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆಯ್ದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು. \v 4 ಅವರಿಗೆ ಆಜ್ಞಾಪಿಸಿ, “ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರಿ, ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ. ನೀವೆಲ್ಲರೂ ಸಿದ್ಧವಾಗಿರಿ. \v 5 ಆದರೆ ನಾನೂ, ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಸೇರುವೆವು. ಆಗ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು. \v 6 ಆಗ ಅವರು, ‘ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿಹೋಗುತ್ತಾರೆ,’ ಎಂದು ಹೇಳಿಕೊಳ್ಳುವರು. ಪಟ್ಟಣದ ಬಳಿಯಿಂದ ದೂರದವರೆಗೂ ಅವರು ಬರುವವರೆಗೆ ನಾವು ಓಡಿ ಹೋಗುತ್ತಲೇ ಇರುವೆವು. \v 7 ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಡುವರು. \v 8 ನೀವು ಪಟ್ಟಣವನ್ನು ಹಿಡಿದ ತರುವಾಯ, ಬೆಂಕಿ ಹಚ್ಚಿ, ಅದನ್ನು ಸುಟ್ಟುಬಿಟ್ಟು, ಯೆಹೋವ ದೇವರ ಆಜ್ಞೆಯ ಪ್ರಕಾರವೇ ಮಾಡಿರಿ. ನಾನು ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ,” ಎಂದನು. \p \v 9 ಯೆಹೋಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿ ಎಂಬ ಪಟ್ಟಣಕ್ಕೂ ನಡುವೆ ಆಯಿ ಎಂಬ ಪಟ್ಟಣಕ್ಕೆ ಪಶ್ಚಿಮದ ಕಡೆ ಅಡಗಿಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಉಳಿದನು. \p \v 10 ಉದಯಕಾಲದಲ್ಲಿ ಯೆಹೋಶುವನು ಎದ್ದು ಸೈನ್ಯವನ್ನು ಲೆಕ್ಕ ಮಾಡಿ, ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿ ಎಂಬ ಪಟ್ಟಣಕ್ಕೆ ಏರಿಹೋದರು. \v 11 ಅವನ ಸಂಗಡ ಇದ್ದ ಸೈನಿಕರೆಲ್ಲಾ ನಡೆದು ಪಟ್ಟಣದ ಸಮೀಪವಾಗಿ ಬಂದು ಸೇರಿ, ಆಯಿ ಎಂಬ ಪಟ್ಟಣದ ಉತ್ತರ ದಿಕ್ಕಿನಲ್ಲಿ ಪಾಳೆಯಲ್ಲಿ ಇಳಿದುಕೊಂಡರು. ಆದರೆ ಆಯಿ ಎಂಬ ಪಟ್ಟಣಕ್ಕೂ ಅವರಿಗೂ ಮಧ್ಯದಲ್ಲಿ ಒಂದು ಕಣಿವೆ ಇತ್ತು. \v 12 ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆಯ್ದುಕೊಂಡು, ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ, ಆಯಿ ಎಂಬ ಪಟ್ಟಣದ ನಡುವೆ ಹೊಂಚಿಹಾಕಿಕೊಂಡಿರಲು ಅವರನ್ನು ಇಟ್ಟನು. \v 13 ಪಟ್ಟಣಕ್ಕೆ ಉತ್ತರದಲ್ಲಿರುವ ಸಕಲ ಸೈನ್ಯದ ಜನರನ್ನೂ, ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಗಾರರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಯ ಮಧ್ಯಕ್ಕೆ ಹೋದನು. \p \v 14 ಆಯಿ ಎಂಬ ಪಟ್ಟಣದ ಅರಸನು ಇದನ್ನು ಕಂಡಾಗ, ಆ ಪಟ್ಟಣದ ಜನರು ತ್ವರೆಪಟ್ಟು, ಉದಯಕಾಲದಲ್ಲಿ ಎದ್ದು, ನಿಶ್ಚಯಿಸಿದ ವೇಳೆಯಲ್ಲಿ ಆಯಿ ಎಂಬ ಪಟ್ಟಣದ ಅರಸನೂ ಅವನ ಜನರೆಲ್ಲರೂ ಇಸ್ರಾಯೇಲಿಗೆ ಎದುರಾಗಿ ಯುದ್ಧಮಾಡಲು ಬಯಲಿಗೆ ಹೊರಟರು. ಅವನೂ ಅವನ ಜನರೂ ಅರಾಬಾ ಎಂಬ ತಗ್ಗಾದ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವವರನ್ನು ಅರಿಯದೆ ಇದ್ದನು. \v 15 ಅವರ ಮುಂದೆ ಯೆಹೋಶುವನೂ ಇಸ್ರಾಯೇಲರೆಲ್ಲರೂ ಸೋತವರ ಹಾಗೆ ಮರುಭೂಮಿಯ ಮಾರ್ಗವಾಗಿ ಓಡಿಹೋದರು. \v 16 ಆಗ ಆಯಿ ಎಂಬ ಪಟ್ಟಣದಲ್ಲಿರುವ ಜನರೆಲ್ಲರನ್ನು ಕರೆದುಕೊಂಡು ಹಿಂದಟ್ಟುವುದಕ್ಕೆ ಕರೆಯಲಾದವರು ಯೆಹೋಶುವನನ್ನು ಹಿಂದಟ್ಟಿದರು. ಹೀಗೆ ಅವರು ಆ ಪಟ್ಟಣದಿಂದ ಹೊರಬಂದರು. \v 17 ಆಯಿ ಎಂಬ ಪಟ್ಟಣದಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇರಲಿಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲರನ್ನು ಹಿಂದಟ್ಟಿದರು. \p \v 18 ಆಗ ಯೆಹೋವ ದೇವರು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಪಟ್ಟಣಕ್ಕೆ ಎದುರಾಗಿ ಚಾಚು. ಏಕೆಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದರು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು. \v 19 ಆಗ ಹೊಂಚುಗಾರರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಪಟ್ಟಣದಲ್ಲಿ ಪ್ರವೇಶಿಸಿ, ಸೆರೆಹಿಡಿದು ಕೂಡಲೆ ಅದಕ್ಕೆ ಬೆಂಕಿಯನ್ನು ಹಚ್ಚಿದರು. \p \v 20 ಆಯಿ ಎಂಬ ಪಟ್ಟಣದ ಮನುಷ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳುವುದನ್ನು ಕಂಡರು. ಹೇಗಾದರೂ ಓಡಿಹೋಗಲು ಅವರಿಗೆ ತ್ರಾಣ ಇಲ್ಲದೆ ಹೋಯಿತು. ಆಗ ಮರುಭೂಮಿಗೆ ಓಡಿ ಹೋದ ಇಸ್ರಾಯೇಲರು ಹಿಂದಟ್ಟಿದವರ ಕಡೆಗೆ ತಿರುಗಿದರು. \v 21 ಪಟ್ಟಣವು ಹೊಂಚುಗಾರರಿಗೆ ಸ್ವಾಧೀನವಾದುದನ್ನೂ ಹೊಗೆ ಆಕಾಶಕ್ಕೆ ಏರುತ್ತಿದ್ದುದನ್ನೂ ಕಂಡಾಗ ಯೆಹೋಶುವನೂ ಇಸ್ರಾಯೇಲರೂ ಹಿಂದಿರುಗಿ ಆಯಿ ಎಂಬ ಪಟ್ಟಣದ ಜನರ ಮೇಲೆ ಬಿದ್ದರು. \v 22 ಅವರು ಪಟ್ಟಣದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ, ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲರ ಮಧ್ಯದಲ್ಲಿ ಸಿಕ್ಕಿದರು. ಅವರಲ್ಲಿ ಇಬ್ಬರೂ ತಪ್ಪಿಸಿಕೊಂಡ ಹಾಗೆಯೂ ಅವರನ್ನು ಹೊಡೆದರು. \v 23 ಆಯಿ ಎಂಬ ಪಟ್ಟಣದ ಅರಸನನ್ನು ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ತಂದರು. \p \v 24 ಇಸ್ರಾಯೇಲರು ಮರುಭೂಮಿಯಲ್ಲಿಯೂ ಬಯಲಿನಲ್ಲಿಯೂ ಓಡಿಸಿದ ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಖಡ್ಗದಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು. \v 25 ಆ ದಿನದಲ್ಲಿ ಆಯಿ ಎಂಬ ಪಟ್ಟಣದಲ್ಲಿಯ ಹನ್ನೆರಡು ಸಾವಿರ ಜನರು ಹತರಾದರು. \v 26 ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಸಂಪೂರ್ಣ ನಾಶವಾಗುವವರೆಗೂ ಯೆಹೋಶುವನು ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ. \v 27 ಯೆಹೋವ ದೇವರು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇಲರು ಆ ಪಟ್ಟಣದ ಪಶುಪ್ರಾಣಿಗಳನ್ನೂ, ಕೊಳ್ಳೆಯನ್ನೂ ತಮಗೋಸ್ಕರ ಇಟ್ಟುಕೊಂಡರು. \p \v 28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟುಬಿಟ್ಟು, ಅದನ್ನು ಮರಳಿ ಕಟ್ಟಲಾಗದಂತೆ ಹಾಳು ದಿಬ್ಬವಾಗಿ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಉಳಿದಿದೆ. \v 29 ಆಯಿ ಎಂಬ ಪಟ್ಟಣದ ಅರಸನನ್ನು ಸಾಯಂಕಾಲದವರೆಗೂ ಒಂದು ಮರದಲ್ಲಿ ತೂಗಿಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶುವನು ಅವನ ಹೆಣವನ್ನು ಮರದಿಂದ ಇಳಿಸಿ, ಅದನ್ನು ಆ ಪಟ್ಟಣದ ಬಾಗಿಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿದರು. ಆ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಇಟ್ಟರು. ಅದು ಇಂದಿನವರೆಗೂ ಇದೆ. \s1 ಏಬಾಲ್ ಬೆಟ್ಟದಲ್ಲಿ ಒಡಂಬಡಿಕೆಯ ನವೀಕರಣ \p \v 30 ಆಗ ಯೆಹೋಶುವನು ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು. \v 31 ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ, ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಯೆಹೋವ ದೇವರಿಗೆ ಉಳಿಮುಟ್ಟದ ಪೂರ್ಣವಾದ ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನ ಸಮರ್ಪಣೆಗಳನ್ನೂ ಅರ್ಪಿಸಿದರು. \v 32 ಅಲ್ಲಿ ಅವನು ಇಸ್ರಾಯೇಲರ ಸಮಕ್ಷಮದಲ್ಲಿ ಮೋಶೆ ಬರೆದಿದ್ದ ಮೋಶೆಯ ನಿಯಮದ ಪ್ರತಿಯನ್ನು ಬರೆದನು. \v 33 ಇಸ್ರಾಯೇಲರೆಲ್ಲರೂ ಅವರ ಹಿರಿಯರೂ ಅವರ ಅಧಿಕಾರಿಗಳೂ ಅವರ ನ್ಯಾಯಾಧಿಪತಿಗಳೂ ಪರದೇಶಸ್ಥರೂ ಸ್ವದೇಶಸ್ಥರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಮುಂದೆಯೂ ನಿಂತರು. ಯೆಹೋವ ದೇವರ ಸೇವಕ ಮೋಶೆ ಇಸ್ರಾಯೇಲರನ್ನು ಆಶೀರ್ವದಿಸುವಂತೆ ಮುಂಚೆ ವಾಕ್ಯಗಳನ್ನು ಕೊಟ್ಟಾಗ ಆಜ್ಞಾಪಿಸಿದ ಹಾಗೆಯೇ ನಿಂತರು. \p \v 34 ತರುವಾಯ ಯೆಹೋಶುವನು ದೇವರ ನಿಯಮ ಗ್ರಂಥದಲ್ಲಿ ಬರೆದಿರುವ ಎಲ್ಲಾ ಮಾತುಗಳನ್ನೂ ಆಶೀರ್ವಾದಗಳನ್ನೂ, ಶಾಪಗಳನ್ನೂ ಓದಿದನು. \v 35 ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ, ಮಕ್ಕಳಿಗೂ, ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು. \c 9 \s1 ಗಿಬ್ಯೋನ್ಯರ ಮೋಸ \p \v 1 ಯೊರ್ದನ್ ನದಿಯ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದುರಾದ ಮೆಡಿಟೆರಿಯನ್ ಸಮುದ್ರದ ಸಮಸ್ತ ಪ್ರಾಂತಗಳಲ್ಲಿಯೂ ಇರುವ ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಅರಸರು ಇದನ್ನು ಕೇಳಿದರು. \v 2 ಆಗ ಅವರು ಯೆಹೋಶುವನಿಗೂ ಇಸ್ರಾಯೇಲರಿಗೂ ವಿರುದ್ಧ ಯುದ್ಧಮಾಡುವುದಕ್ಕೆ ಒಟ್ಟಾಗಿ ಕೂಡಿಕೊಂಡರು. \p \v 3 ಆದರೆ ಗಿಬ್ಯೋನಿನ ನಿವಾಸಿಗಳು ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಕೇಳಿದಾಗ, \v 4 ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ, ಅವರು ರಾಯಭಾರಿಗಳ ಹಾಗೆ ತೋರಿಸುವಂತೆ ಹಳೆಯ ಗೋಣಿ ಚೀಲಗಳನ್ನೂ ತೇಪೆ ಹಾಕಿದ ಹಳೆಯದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು, ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು ಹೋದರು. \v 5 ತೇಪೆ ಹಾಕಿದ ಹಳೆಯದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು ಹಳೆಯ ಬಟ್ಟೆಗಳನ್ನು ತೊಟ್ಟುಕೊಂಡು, ಒಣಗಿ ಬೂಷ್ಟು ಹಿಡಿದ ರೊಟ್ಟಿಯನ್ನೂ ತೆಗೆದುಕೊಂಡರು. \v 6 ಅನಂತರ ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಸೇರಿ ಯೆಹೋಶುವನ ಬಳಿಗೆ ಬಂದರು. ಅವರು ಅವನಿಗೂ ಇಸ್ರಾಯೇಲರಿಗೂ, “ನಾವು ದೂರದೇಶದಿಂದ ಬಂದೆವು. ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ,” ಎಂದರು. \p \v 7 ಆಗ ಇಸ್ರಾಯೇಲರು ಹಿವ್ವಿಯರಾದ ಅವರಿಗೆ, “ನೀವು ಒಂದು ವೇಳೆ ನಮ್ಮ ಹತ್ತಿರದಲ್ಲಿ ವಾಸಿಸುವವರು ಆಗಿರಬಹುದು. ನಾವು ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವುದು ಹೇಗೆ?” ಎಂದರು. \p \v 8 ಅದಕ್ಕವರು ಯೆಹೋಶುವನಿಗೆ, “ನಾವು ನಿನ್ನ ಸೇವಕರು,” ಎಂದರು. \p ಆಗ ಯೆಹೋಶುವನು ಅವರಿಗೆ, “ನೀವು ಯಾರು? ಎಲ್ಲಿಂದ ಬಂದಿರಿ?” ಎಂದನು. \p \v 9 ಅವರು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರ ಹೆಸರಿನ ಮಹತ್ವ ಕೇಳಿ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದಿದ್ದೇವೆ. ಏಕೆಂದರೆ ದೇವರ ಕೀರ್ತಿಯನ್ನೂ, ಅವರು ಈಜಿಪ್ಟಿನಲ್ಲಿ ಮಾಡಿದ ಎಲ್ಲವನ್ನೂ ಕೇಳಿದ್ದೇವೆ. \v 10 ಯೊರ್ದನ್ ನದಿಗೆ ಆಚೆ ಇರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ, ಅಷ್ಟಾರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದ್ದೇವೆ. \v 11 ನಮ್ಮ ಹಿರಿಯರೂ, ನಮ್ಮ ದೇಶವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇನೆಂದರೆ, ‘ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದುಕೊಂಡು ಅವರೆದುರಿಗೆ ಹೋಗಿ, ಅವರಿಗೆ ನಾವು ನಿಮ್ಮ ಸೇವಕರು ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ ಎಂದು ಹೇಳಿರಿ,’ ಎಂದರು. \v 12 ಆದರೆ ನಿಮ್ಮ ಬಳಿಗೆ ಬರುವುದಕ್ಕೆ ನಾವು ಹೊರಟ ದಿನದಲ್ಲಿ ನಮ್ಮ ಮಾರ್ಗ ಪ್ರಯಾಣಕ್ಕೆ ನಮ್ಮ ಮನೆಯೊಳಗೆ ನಮ್ಮ ಒಲೆಯ ಮೇಲೆ ಬಿಸಿ ರೊಟ್ಟಿಗಳನ್ನು ತೆಗೆದುಕೊಂಡೆವು. \v 13 ಈಗ ಅವು ಒಣಗಿ ಬೂಷ್ಟು ಹಿಡಿದವುಗಳಗಿವೆ. ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸದಾಗಿದ್ದವು. ಇಗೋ, ಈಗ ಅವು ಹರಿದು ಹೋಗಿವೆ. ಇದಲ್ಲದೆ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಪ್ರಯಾಣ ಬಹಳ ದೂರವಾದ್ದರಿಂದ ಹಳೆಯದಾಗಿವೆ,” ಎಂದರು. \p \v 14 ಆಗ ಇಸ್ರಾಯೇಲರು ಅವರ ಆಹಾರದಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಅವರು ಯೆಹೋವ ದೇವರಿಂದ ಆಲೋಚನೆಯನ್ನು ಕೇಳಲಿಲ್ಲ. \v 15 ಯೆಹೋಶುವನು ಅವರ ಸಂಗಡ ಸಮಾಧಾನದ ಒಡಂಬಡಿಕೆ ಮಾಡಿಕೊಂಡನು. ಅವರನ್ನು ಜೀವದಿಂದ ಉಳಿಸುವುದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಅವರಿಗೆ ಪ್ರಮಾಣ ಮಾಡಿದರು. \p \v 16 ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ, ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ, ತಮ್ಮಲ್ಲಿ ಇರುವವರೆಂದೂ ತಿಳಿದುಬಂತು. \v 17 ಆಗ ಇಸ್ರಾಯೇಲರು ಪ್ರಯಾಣ ಮಾಡುವಾಗ ಮೂರನೆಯ ದಿವಸದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ ಯಾರೀಮ್ ಎಂಬ ಅವರ ಪಟ್ಟಣಗಳಿಗೆ ಬಂದರು. \v 18 ಆದರೆ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದ್ದರಿಂದ ಇಸ್ರಾಯೇಲರು ಅವರ ಮೇಲೆ ದಾಳಿಮಾಡಲಿಲ್ಲ. \p ಆದರೆ ಇಸ್ರಾಯೇಲರೆಲ್ಲರೂ ಪ್ರಧಾನರಿಗೆ ವಿರೋಧವಾಗಿ ಗೊಣಗುಟ್ಟಿದರು. \v 19 ಆಗ ಸಕಲ ಪ್ರಧಾನರು ಎಲ್ಲಾ ಜನರಿಗೆ, “ನಾವು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಅವರಿಗೆ ಪ್ರಮಾಣ ಮಾಡಿದ್ದೇವು. ಆದ್ದರಿಂದ ಅವರನ್ನು ನಾವು ಮುಟ್ಟಕೂಡದು. \v 20 ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಉಳಿಸಬೇಕು. ಆದರೆ ನಾವು ಅವರಿಗೆ ಹೀಗೆ ಮಾಡೋಣ. \v 21 ಅದು ಏನೆಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರು ಜೀವದಿಂದ ಇರಲಿ. ಆದರೆ ಅವರು ಇಸ್ರಾಯೇಲಿನ ಎಲ್ಲಾ ಸಮೂಹಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಪ್ರಧಾನರ ಮಾತಿನಂತೆಯೇ ಆಯಿತು. \p \v 22 ತರುವಾಯ ಯೆಹೋಶುವನು ಗಿಬ್ಯೋನ್ಯರನ್ನು ಕರೆಯಿಸಿ ಅವರಿಗೆ, “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ, ‘ನಾವು ನಿಮಗೆ ಬಹಳ ದೂರವಾಗಿರುವವರು,’ ಎಂದು ಹೇಳಿ ನಮ್ಮನ್ನು ಮೋಸಗೊಳಿಸಿದ್ದೇಕೆ? \v 23 ಈಗ ನೀವು ಶಾಪಗ್ರಸ್ತರು, ನೀವು ಯಾವಾಗಲೂ ದಾಸತ್ವದಿಂದ ಬಿಡುಗಡೆಯಾಗುವುದಿಲ್ಲ. ನೀವು ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರುವಿರಿ,” ಎಂದು ಹೇಳಿದನು. \p \v 24 ಅದಕ್ಕವರು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವುದಕ್ಕೂ, ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡುವುದಕ್ಕೂ ತಮ್ಮ ಸೇವಕ ಮೋಶೆಗೆ ಆಜ್ಞಾಪಿಸಿದ್ದಾರೆಂದು, ನಿಮ್ಮ ಸೇವಕರಾದ ನಾವು ಕೇಳಿದೆವು. ಆದ್ದರಿಂದ ನಾವು ನಮ್ಮ ಪ್ರಾಣಕ್ಕಾಗಿ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು. \v 25 ಇಗೋ, ಈಗಲೂ ನಾವು ನಿನ್ನ ಕೈಯಲ್ಲಿಯೇ ಇದ್ದೇವೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿಯೂ, ಸರಿಯಾಗಿಯೂ ತೋಚುವ ಹಾಗೆ ನಮಗೆ ಮಾಡು,” ಎಂದು ಉತ್ತರಕೊಟ್ಟರು. \p \v 26 ಆ ಪ್ರಕಾರವೇ ಯೆಹೋಶುವನು ಅವರಿಗೆ ಹೇಳಿದಂತೆ ಮಾಡಿದನು. ಅವರನ್ನು ಕೊಂದು ಹಾಕದ ಹಾಗೆ ಇಸ್ರಾಯೇಲರ ಕೈಯಿಂದ ತಪ್ಪಿಸಿದನು. \v 27 ಯೆಹೋಶುವನು ಆ ದಿನ ಇರುವ ಹಾಗೆ ಗಿಬ್ಯೋನಿನವರ ಸಮೂಹಕ್ಕೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿರುವ ಅವರ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ. \c 10 \s1 ಸೂರ್ಯನು ನಿಂತುಕೊಂಡದ್ದು \p \v 1 ಈ ಸಮಯದಲ್ಲಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡು, ಅದರ ಅರಸನನ್ನು ಸಂಹರಿಸಿಬಿಟ್ಟು ಸಂಪೂರ್ಣ ನಾಶಮಾಡಿದನೆಂಬ ಸಂಗತಿಯನ್ನು ಅವನು ಕೇಳಿದ್ದನು. ಹಾಗೆಯೇ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದರೆಂದೂ ಕೇಳಿದ್ದನು. \v 2 ಅದೋನೀಚೆದೆಕನು ಅವನ ಜನರೂ ಬಹು ಭಯಪಟ್ಟರು. ಏಕೆಂದರೆ ಗಿಬ್ಯೋನ್ ಒಂದು ರಾಜಧಾನಿಯಷ್ಟು ಶ್ರೇಷ್ಠ ಪಟ್ಟಣವೂ ಅದು ಆಯಿ ಪಟ್ಟಣಕ್ಕಿಂತಲೂ ದೊಡ್ಡದಾಗಿತ್ತು. ಇದಲ್ಲದೆ ಅದರಲ್ಲಿರುವ ಜನರು ಪರಾಕ್ರಮಶಾಲಿಗಳಾಗಿದ್ದರು. \v 3 ಆದ್ದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ದೂತರನ್ನು ಕಳುಹಿಸಿದನು: \v 4 “ಗಿಬ್ಯೋನರು ಯೆಹೋಶುವನ ಮತ್ತು ಇಸ್ರಾಯೇಲರ ಸಂಗಡ ಸಮಾಧಾನ ಮಾಡಿಕೊಂಡದ್ದರಿಂದ ನಾವು ಅದನ್ನು ದಾಳಿಮಾಡುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ,” ಎಂದು ಹೇಳಿ ಕಳುಹಿಸಿದನು. \p \v 5 ಹಾಗೆಯೇ ಅಮೋರಿಯರ ಐದು ಮಂದಿ ಅರಸರಾದ, ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಒಟ್ಟುಸೇರಿದರು. ಇವರೂ ಇವರ ಸೈನ್ಯವೂ ಹೊರಟುಹೋಗಿ ಗಿಬ್ಯೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು. \p \v 6 ಆಗ ಗಿಬ್ಯೋನಿನ ಜನರು, “ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿಬಂದಿದ್ದಾರೆ. ನಿನ್ನ ಸೇವಕರರಾದ ನಮ್ಮನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು, ನಮ್ಮನ್ನು ಕಾಪಾಡು! ನಮಗೆ ಸಹಾಯಮಾಡು,” ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು. \p \v 7 ಆಗ ಯೆಹೋಶುವನು ಗಿಲ್ಗಾಲಿನಿಂದ, ಸಮಸ್ತ ಯುದ್ಧವೀರರೂ ಉಳಿದ ಪರಾಕ್ರಮಶಾಲಿಗಳ ಸಮೇತ ಹೊರಟನು. \v 8 ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು. \p \v 9 ಆದ್ದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣಮಾಡಿ, ತಕ್ಷಣವೇ ಅವರ ಮೇಲೆ ದಾಳಿಮಾಡಿದನು. \v 10 ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು. \v 11 ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು. \p \v 12 ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, \q1 “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; \q2 ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.” \q1 \v 13 ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ \q2 ತೀರಿಸುವವರೆಗೆ ಸೂರ್ಯ ಚಂದ್ರರು \q2 ನೆಲೆಯಾಗಿ ನಿಂತಿದ್ದರು. \m ಇದು ಯಾಷಾರ್ ಪುಸ್ತಕದಲ್ಲಿ ಬರೆದಿದೆ. \p ಹೀಗೆ ಸೂರ್ಯ ಅಸ್ತಮಿಸಲು ತ್ವರೆಮಾಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿತು. \v 14 ಯೆಹೋವ ದೇವರು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥ ಆ ದಿನಕ್ಕೆ ಸಮಾನವಾದ ದಿನವು ಹಿಂದೆಯೂ ಇಲ್ಲ, ಮುಂದೆಯೂ ಇಲ್ಲ. ಏಕೆಂದರೆ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು. \p \v 15 ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿದನು. \s1 ಐದು ಜನ ಅಮೋರಿಯ ಅರಸರ ವಿನಾಶ \p \v 16 ಆದರೆ ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು. \v 17 ಆ ಐದು ಮಂದಿ ಅರಸರು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಯಿತು. \v 18 ಆಗ ಯೆಹೋಶುವನು, “ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಹೊರಳಿಸಿರಿ. ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಕೆಲವರನ್ನು ನೇಮಿಸಿರಿ. \v 19 ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ದಾಳಿಮಾಡಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ. ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದನು. \p \v 20 ಯೆಹೋಶುವನೂ ಇಸ್ರಾಯೇಲರೂ ಅವರನ್ನು ಸಂಪೂರ್ಣವಾಗಿ ಸಂಹರಿಸಿದರು. ಆದರೂ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿಕೊಂಡರು. \v 21 ಇಸ್ರಾಯೇಲರು ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಹಿಂದಿರುಗಿ ಬಂದರು. ಇಸ್ರಾಯೇಲರಿಗೆ ವಿರೋಧವಾಗಿ ಒಬ್ಬನೂ ಮಾತಾಡಲಿಲ್ಲ. \p \v 22 ಆಗ ಯೆಹೋಶುವನು, “ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸರನ್ನು ಗವಿಯೊಳಗಿಂದ ನನ್ನ ಬಳಿಗೆ ತನ್ನಿರಿ,” ಎಂದನು. \v 23 ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ, ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು. \v 24 ಅವರನ್ನು ಯೆಹೋಶುವನ ಬಳಿ ತೆಗೆದುಕೊಂಡು ಬಂದಾಗ, ಯೆಹೋಶುವನು ಇಸ್ರಾಯೇಲರೆಲ್ಲರನ್ನು ಕರೆಸಿ ತನ್ನ ಸಂಗಡ ಬಂದ ಯುದ್ಧಭಟರಾದ ಅಧಿಕಾರಿಗಳಿಗೆ, “ನೀವು ಸಮೀಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸರ ಕೊರಳಿನ ಮೇಲೆ ಇಡಿರಿ,” ಎಂದನು. ಆಗ ಅವರು ಸಮೀಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕೊರಳಿನ ಮೇಲೆ ಇಟ್ಟರು. \p \v 25 ಆಗ ಯೆಹೋಶುವನು ಅವರಿಗೆ, “ಭಯಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರಿ. ಏಕೆಂದರೆ ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಯೆಹೋವ ದೇವರು ಹೀಗೆಯೇ ಮಾಡುವರು,” ಎಂದನು. \v 26 ಆ ತರುವಾಯ ಯೆಹೋಶುವನು ಅವರನ್ನು ದಂಡಿಸಿ, ಐದು ಮರಗಳಲ್ಲಿ ತೂಗುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಮರಗಳಲ್ಲಿ ತೂಗಾಡುತ್ತಿದ್ದವು. \p \v 27 ಆದರೆ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಆಜ್ಞಾಪಿಸಲು, ಶವವನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿಯಲ್ಲಿಯೇ ಅವರನ್ನು ಹಾಕಿ, ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು. \s1 ದಕ್ಷಿಣದ ಪಟ್ಟಣಗಳನ್ನು ಜಯಿಸಿದ್ದು \p \v 28 ಆ ದಿನದಲ್ಲಿ ಯೆಹೋಶುವನು ಮಕ್ಕೇದ ಊರನ್ನು ಸ್ವಾಧೀನಪಡಿಸಿಕೊಂಡನು. ಅದರ ಅರಸನನ್ನೂ ಜನರನ್ನೂ ಖಡ್ಗಕ್ಕೆ ತುತ್ತಾಗುವಂತೆ ಮಾಡಿದನು. ಅದರಲ್ಲಿರುವ ಎಲ್ಲವನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ, ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೂ ಮಾಡಿದನು. \p \v 29 ಆಗ ಯೆಹೋಶುವನೂ ಅವನ ಸಂಗಡ ಇದ್ದ ಸಮಸ್ತ ಇಸ್ರಾಯೇಲರೆಲ್ಲರೂ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದರು. \v 30 ಯೆಹೋವ ದೇವರು ಲಿಬ್ನವನ್ನೂ, ಅದರ ಅರಸನನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟರು. ಯೆಹೋಶುವನು ಅದನ್ನೂ, ಅದರಲ್ಲಿರುವ ಎಲ್ಲರನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಖಡ್ಗದಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು. \p \v 31 ಅಲ್ಲಿಂದ ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೋಗಿ, ಅದರ ಎದುರಿಗೆ ಪಾಳೆಯ ಮಾಡಿಕೊಂಡು, ಅದರ ಮೇಲೆ ಯುದ್ಧಮಾಡಿದನು. \v 32 ಯೆಹೋವ ದೇವರು ಲಾಕೀಷನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಅವರು ಅದನ್ನು ಎರಡನೆಯ ದಿವಸದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲರನ್ನು ಖಡ್ಗದಿಂದ ಹೊಡೆದರು. \v 33 ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಯೆಹೋಶುವನು ಒಬ್ಬರೂ ಉಳಿಯದಂತೆ ಅವನನ್ನೂ, ಅವನ ಜನರನ್ನೂ ಸದೆಬಡಿದನು. \p \v 34 ಯೆಹೋಶುವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಲಾಕೀಷಿನಿಂದ ಎಗ್ಲೋನಿಗೆ ಹೋಗಿ, ಅದಕ್ಕೆದುರಾಗಿ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು. \v 35 ಅದೇ ದಿನದಲ್ಲಿ ಎಗ್ಲೋನನ್ನು ಹಿಡಿದು, ಅದರ ಜನರನ್ನು ಖಡ್ಗದಿಂದ ಹೊಡೆದರು. ಅವರು ಲಾಕೀಷಿಗೆ ಮಾಡಿದ ಹಾಗೆ ಅದಕ್ಕೆ ಮಾಡಿ, ಅದೇ ದಿನದಲ್ಲಿ ಅದರಲ್ಲಿರುವ ಸಕಲ ಜನರನ್ನು ಸಂಪೂರ್ಣವಾಗಿ ನಾಶಮಾಡಿದರು. \p \v 36 ಅನಂತರ ಯೆಹೋಶುವನು ಸಮಸ್ತ ಇಸ್ರಾಯೇಲರ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟುಹೋಗಿ, ಅದರ ಮೇಲೆ ಯುದ್ಧಮಾಡಿದನು. \v 37 ಹೆಬ್ರೋನನ್ನು ಹಿಡಿದು ಅದನ್ನೂ, ಅದರ ಅರಸನನ್ನೂ ಅದರ ಸಮಸ್ತ ಊರುಗಳನ್ನೂ ಅವುಗಳಲ್ಲಿರುವ ಸಮಸ್ತ ಜನರನ್ನೂ ಖಡ್ಗದಿಂದ ಸದೆಬಡಿದು ಎಗ್ಲೋನಿಗೆ ಮಾಡಿದ ಹಾಗೆ ಒಬ್ಬರನ್ನೂ ಉಳಿಸದೆ, ಅದನ್ನೂ, ಅದರಲ್ಲಿರುವ ಎಲ್ಲರನ್ನೂ ಸಂಪೂರ್ಣ ನಾಶಮಾಡಿದನು. \p \v 38 ಯೆಹೋಶುವನು ಸಮಸ್ತ ಇಸ್ರಾಯೇಲರ ಕೂಡ ದೆಬೀರಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದನು. \v 39 ದೆಬೀರನ್ನೂ ಅದರ ಅರಸನನ್ನೂ, ಅದರ ಸಮಸ್ತ ಊರುಗಳನ್ನೂ ಹಿಡಿದು ಅವುಗಳನ್ನು ಖಡ್ಗದಿಂದ ದಾಳಿಮಾಡಿ, ಒಬ್ಬರನ್ನೂ ಉಳಿಸದೆ ಅದರಲ್ಲಿದ್ದ ಎಲ್ಲರನ್ನೂ, ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು. \p \v 40 ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು. \v 41 ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದವರೆಗೂ ಇರುವವರನ್ನೂ, ಗೋಷೆನಿನ ಸಮಸ್ತ ಪ್ರಾಂತವನ್ನೂ ಗಿಬ್ಯೋನಿನವರೆಗೆ ಸೋಲಿಸಿದನು. \v 42 ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು. \p \v 43 ಅನಂತರ ಯೆಹೋಶುವನು ಇಸ್ರಾಯೇಲರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿ ಬಂದನು. \c 11 \s1 ಉತ್ತರದ ಅರಸರನ್ನು ಸೋಲಿಸಿದ್ದು \p \v 1 ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ, ಸಮೀಪ ರಾಜ್ಯಗಳ ಅರಸರಿಗೆ ಒಂದು ಸಂದೇಶವನ್ನು ಕಳುಹಿಸಿದನು: ಎಂದರೆ ಮಾದೋನಿನ ಅರಸನಾದ ಯೋಬಾಬನಿಗೂ ಶಿಮ್ರೋನಿನ ಅರಸನಿಗೂ ಅಕ್ಷಾಫಿನ ಅರಸನಿಗೂ \v 2 ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೆತಿಗೆ ದಕ್ಷಿಣಕ್ಕಿರುವ ಬಯಲಿನಲ್ಲಿಯೂ ಕಣಿವೆಗಳಲ್ಲಿ ಮತ್ತು ಪಶ್ಚಿಮದಲ್ಲಿ ದೋರಿನ ಪ್ರಾಂತಗಳಲ್ಲಿ ಇರುವ ಅರಸರಿಗೂ \v 3 ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿಯರ, ಹಿತ್ತಿಯರ, ಪೆರಿಜೀಯರ, ಯೆಬೂಸಿಯರ ಬಳಿಗೂ, ಮಿಚ್ಪಾ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿ ಕಳುಹಿಸಿದನು. \v 4 ಅವರೆಲ್ಲರು ಸಮುದ್ರ ದಡದ ಮರಳಿನ ಹಾಗೆ ಅಸಂಖ್ಯರಾಗಿದ್ದರು. ಅವರು ಬಹು ರಥಗಳೂ ಕುದುರೆಗಳೂ ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು. \v 5 ಈ ಎಲ್ಲಾ ಅರಸರು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟುಗೂಡಿ ಮೇರೋಮ ಎಂಬ ಜಲಾಶಯದ ಬಳಿಯಲ್ಲಿ ಇಳಿದುಕೊಂಡರು. \p \v 6 ಆಗ ಯೆಹೋವ ದೇವರು ಯೆಹೋಶುವನಿಗೆ, “ಅವರಿಗೆ ಭಯಪಡಬೇಡ, ಏಕೆಂದರೆ ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರೂ ಸಂಹಾರವಾಗುವಂತೆ ಇಸ್ರಾಯೇಲರಿಗೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು,” ಎಂದರು. \p \v 7 ಆಗ ಯೆಹೋಶುವನೂ ಅವನ ಸಂಗಡ ಇದ್ದ ಸೈನಿಕರೆಲ್ಲರೂ ಬಂದು ಫಕ್ಕನೆ ಮೇರೋಮ ಜಲಾಶಯದ ಬಳಿಯಲ್ಲಿ ಅವರ ಮೇಲೆ ದಾಳಿಮಾಡಿದರು. \v 8 ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿಕೊಟ್ಟರು. ಇವರು ಅವರನ್ನು ಹೊಡೆದು ದೊಡ್ಡ ಸೀದೋನ್, ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಕಣಿವೆಯವರೆಗೂ ಹಿಂದಟ್ಟಿ, ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ಎಲ್ಲರನ್ನು ಸಂಹರಿಸಿದರು. \v 9 ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರವೇ ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದುಬಿಟ್ಟು, ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು. \p \v 10 ಆ ಕಾಲದಲ್ಲಿ ಯೆಹೋಶುವನು ಹಿಂದಿರುಗಿ ಹಾಚೋರನ್ನು ಹಿಡಿದು, ಅದರ ಅರಸನನ್ನು ಖಡ್ಗದಿಂದ ಸಂಹರಿಸಿದನು. ಏಕೆಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ಶಿರಸ್ಸಾಗಿತ್ತು. \v 11 ಅವರು ಒಬ್ಬರನ್ನಾದರೂ ಉಳಿಸದೆ, ಅದರಲ್ಲಿದ್ದ ಪ್ರತಿಯೊಬ್ಬರನ್ನೂ ಖಡ್ಗದಿಂದ ಸಂಹರಿಸಿದನು. ಹಾಚೋರನ್ನು ಬೆಂಕಿಯಿಂದ ಸುಟ್ಟುಬಿಟ್ಟನು. \p \v 12 ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ, ಅವುಗಳ ಸಮಸ್ತ ಅರಸರನ್ನೂ ಹಿಡಿದು ಖಡ್ಗದಿಂದ ದಾಳಿಮಾಡಿ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು. \v 13 ಆದರೆ ದಿನ್ನೆಯ ಮೇಲೆ ನಿಂತಿರುವ ಪಟ್ಟಣಗಳನ್ನೆಲ್ಲಾ ಇಸ್ರಾಯೇಲರು ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟುಬಿಟ್ಟನು. \v 14 ಆ ಪಟ್ಟಣಗಳ ಎಲ್ಲಾ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನೆಲ್ಲಾ ಇಸ್ರಾಯೇಲರು ತಮಗೋಸ್ಕರ ಸುಲಿಗೆ ಮಾಡಿಕೊಂಡರು. ಖಡ್ಗದಿಂದ ಜನರನ್ನು ನಾಶಮಾಡಿದರು. ಒಬ್ಬರನ್ನೂ ಅವರು ಉಳಿಸಲಿಲ್ಲ. \v 15 ಯೆಹೋವ ದೇವರು ತಮ್ಮ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದನು. ಯೆಹೋಶುವನೂ ಹಾಗೆಯೇ ಮಾಡಿದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಯೆಹೋಶುವನು ಒಂದನ್ನೂ ಮೀರದೆ ಎಲ್ಲವನ್ನೂ ಮಾಡಿದನು. \p \v 16 ಈ ಪ್ರಕಾರ ಗೋಷೆನ್ ಸೀಮೆ, ಅದರ ಕಣಿವೆ, ಬಯಲು ಪ್ರದೇಶ, ದಕ್ಷಿಣದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು. \v 17 ಯೆಹೋಶುವನು ಸೇಯೀರಿಗೆ ಏರಿಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ಕಣಿವೆಯಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರಿಗೆ ಮರಣದಂಡನೆ ವಿಧಿಸಿದನು. \v 18 ಯೆಹೋಶುವನು ಬಹಳ ಕಾಲ ಈ ಅರಸುಗಳೆಲ್ಲರ ಸಂಗಡ ಯುದ್ಧ ಮಾಡುತ್ತಿದ್ದನು. \v 19 ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲರ ಸಂಗಡ ಸಮಾಧಾನ ಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ. ಅವರು ಬೇರೆ ಎಲ್ಲವುಗಳನ್ನು ಯುದ್ಧಮಾಡಿ ತೆಗೆದುಕೊಂಡರು. \v 20 ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು. \p \v 21 ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ, ದೆಬೀರಿನಲ್ಲಿಯೂ, ಅನಾಬಿನಲ್ಲಿಯೂ, ಯೆಹೂದದ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲ್ ಪ್ರಾಂತದ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯರನ್ನು ಕಡಿದುಬಿಟ್ಟು, ಅವರನ್ನೂ, ಅವರ ಪಟ್ಟಣಗಳನ್ನೂ ಪೂರ್ಣವಾಗಿ ನಾಶಮಾಡಿದನು. \v 22 ಅನಾಕ್ಯರು ಇಸ್ರಾಯೇಲರ ದೇಶದಲ್ಲಿ ಒಬ್ಬರೂ ಉಳಿಯಲಿಲ್ಲ. ಗಾಜದಲ್ಲಿಯೂ, ಗತ್‌ನಲ್ಲಿಯೂ, ಅಷ್ಡೋದಿನಲ್ಲಿಯೂ ಮಾತ್ರ ಕೆಲವರು ಉಳಿದರು. \p \v 23 ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು. \c 12 \s1 ಅಪಜಯಗೊಂಡ ಅರಸರ ಪಟ್ಟಿ \li4 \v 1 ಇಸ್ರಾಯೇಲರು ಯೊರ್ದನ್ ನದಿಯ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ಕಣಿವೆಯಿಂದ ಹೆರ್ಮೋನ್ ಬೆಟ್ಟದವರೆಗೂ ಅರಾಬಾ ಎಲ್ಲಾ ಪೂರ್ವ ಭಾಗಗಳನ್ನು ಒಳಗೊಂಡಂತೆ ಭೂಪ್ರದೇಶವನ್ನು ಸ್ವಾಧೀನ ಮಾಡಿಸಿಕೊಂಡ ದೇಶಗಳ ಅರಸರು ಯಾರಾರೆಂದರೆ: \b \li1 \v 2 ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. \li2 ಅವನು ಅರ್ನೋನ್ ಕಣಿವೆಯ ಮಧ್ಯಭಾಗದ ದಾರಿಯ ಬಳಿಯಲ್ಲಿ ಇರುವ ಅರೋಯೇರ್ ನಗರದಿಂದ, ಅರ್ಧ ಗಿಲ್ಯಾದಿನಿಂದಲೂ ಅಮ್ಮೋನಿಯರ ಮೇರೆಯಾದ ಯಬ್ಬೋಕ್ ನದಿಯವರೆಗೆ ಆಳುತ್ತಿದ್ದನು. \li2 \v 3 ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೆತ್\f + \fr 12:3 \fr*\fq ಕಿನ್ನೆರೆತ್ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಗಲಿಲಾಯ\fqa*\f* ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷೀಮೋತನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಸಹ ಅವನ ರಾಜ್ಯವಾಗಿತ್ತು. \li1 \v 4 ಅಷ್ಟಾರೋತ್ ಮತ್ತು ಎದ್ರೈ ಎಂಬ ಊರುಗಳಲ್ಲಿ ವಾಸಮಾಡಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ಎರಡನೆಯವನು. \li2 \v 5 ಅವನು ಹೆರ್ಮೋನ್ ಬೆಟ್ಟವನ್ನೂ ಸಲ್ಕಾ ನಗರವನ್ನೂ ಗೆಷೂರಿಯರ ಮತ್ತು ಮಾಕಾತೀಯರ ಮೇರೆಯವರೆಗೂ ಇದ್ದ ಇಡೀ ಬಾಷಾನ್ ನಾಡನ್ನು ಆಳುತ್ತಿದ್ದನು. ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದವರೆಗೂ ಅವನು ಆಳಿಕೊಂಡಿದ್ದನು. \b \li4 \v 6 ಯೆಹೋವ ದೇವರ ಸೇವಕನಾದ ಮೋಶೆಯೂ ಇಸ್ರಾಯೇಲರೂ ಅವರನ್ನು ಸೋಲಿಸಿ, ಅವರ ರಾಜ್ಯವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದ ಅರ್ಧ ಗೋತ್ರದವರಿಗೂ ಸೊತ್ತಾಗಿ ಕೊಟ್ಟನು. \b \p \v 7 ಯೆಹೋಶುವನು ಇಸ್ರಾಯೇಲರ ಸಮೇತ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶದ ಅರಸರನ್ನೂ, \v 8 ಇಳಿಜಾರಿನ ಪ್ರದೇಶ, ಬೆಟ್ಟದ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ್, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ನಾಡುಗಳನ್ನು ಇಸ್ರಾಯೇಲ್ ಕುಲಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. \b \li4 ಆ ಅರಸರ ಪಟ್ಟಿ ಹೀಗಿದೆ: \b \li1 \v 9 ಯೆರಿಕೋವಿನ ಅರಸನು \li1 ಬೇತೇಲ್ ಬಳಿಯಲ್ಲಿರುವ ಆಯಿ ಪಟ್ಟಣದ ಅರಸನು. \li1 \v 10 ಯೆರೂಸಲೇಮಿನ ಅರಸನು. \li1 ಹೆಬ್ರೋನಿನ ಅರಸನು. \li1 \v 11 ಯರ್ಮೂತಿನ ಅರಸನು. \li1 ಲಾಕೀಷಿನ ಅರಸನು. \li1 \v 12 ಎಗ್ಲೋನಿನ ಅರಸನು. \li1 ಗೆಜೆರಿನ ಅರಸನು. \li1 \v 13 ದೆಬೀರಿನ ಅರಸನು. \li1 ಗೆದೆರಿನ ಅರಸನು. \li1 \v 14 ಹೊರ್ಮಾದ ಅರಸನು. \li1 ಅರಾದಿನ ಅರಸನು. \li1 \v 15 ಲಿಬ್ನದ ಅರಸನು. \li1 ಅದುಲ್ಲಾಮಿನ ಅರಸನು. \li1 \v 16 ಮಕ್ಕೇದದ ಅರಸನು. \li1 ಬೇತೇಲಿನ ಅರಸನು. \li1 \v 17 ತಪ್ಪೂಹದ ಅರಸನು. \li1 ಹೇಫೆರಿನ ಅರಸನು. \li1 \v 18 ಅಫೇಕದ ಅರಸನು. \li1 ಲಷ್ಷಾರೋನಿನ ಅರಸನು. \li1 \v 19 ಮಾದೋನಿನ ಅರಸನು. \li1 ಹಾಚೋರಿನ ಅರಸನು. \li1 \v 20 ಶಿಮ್ರೋನ್ ಮೆರೋನಿನ ಅರಸನು. \li1 ಅಕ್ಷಾಫಿನ ಅರಸನು. \li1 \v 21 ತಾನಕದ ಅರಸನು. \li1 ಮೆಗಿದ್ದೋವಿನ ಅರಸನು. \li1 \v 22 ಕೆದೆಷಿನ ಅರಸನು. \li1 ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು. \li1 \v 23 ನೆಪೊತ್ ದೋರ್ ಪ್ರಾಂತದ ದೋರಿನ ಅರಸನು. \li1 ಗಿಲ್ಗಾಲದಲ್ಲಿಯ ಗೊಯ್ಮದ ಅರಸನು. \li1 \v 24 ತಿರ್ಚದ ಅರಸನು. \b \li2 ಹೀಗೆ ಒಟ್ಟು ಮೂವತ್ತೊಂದು ಮಂದಿ ಅರಸರು ಅಪಜಯಗೊಂಡರು. \c 13 \s1 ಸ್ವಾಧೀನಪಡಿಸಿಕೊಳ್ಳತಕ್ಕ ಪ್ರದೇಶಗಳು \p \v 1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವ ದೇವರು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನ ಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ. \b \li4 \v 2 “ಅವು ಯಾವುವೆಂದರೆ: \b \li1 “ಫಿಲಿಷ್ಟಿಯರ ಮತ್ತು ಗೆಷೂರ್ಯರ ದೇಶವೆಲ್ಲಾ ಅಂದರೆ, \v 3 ಈಜಿಪ್ಟಿಗೆ ಎದುರಾದ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗೂ ಅಂದರೆ, ಗಾಜಾ, ಅಷ್ಡೋದ್, ಅಷ್ಕೆಲೋನ್, ಗಾತ್, ಎಕ್ರೋನ್ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ \li1 ದಕ್ಷಿಣ ಪ್ರಾಂತ್ಯದಲ್ಲಿದ್ದ ಅವ್ವೀಯರ ಸೀಮೆ; \v 4 ಸೀದೋನ್ಯರ ಆರಾ ಪ್ರದೇಶದಿಂದ ಅಫೇಕ್ ಮತ್ತು ಅಮೋರಿಯರ ಮೇರೆಯವರೆಗೆ ಕಾನಾನ್ಯರ ಎಲ್ಲಾ ದೇಶವು, \li1 \v 5 ಅದರೊಂದಿಗೆ ಗೆಬಾಲ್ಯರ ಪ್ರಾಂತ್ಯ, \li1 ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಲ್ಗಾದಿನಿಂದ ಹಮಾತಿನ ದಾರಿಯವರೆಗೂ ಇರುವ ಲೆಬನೋನಿನ ಪೂರ್ವ ಪ್ರದೇಶ. \b \p \v 6 “ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಸೀದೋನ್ಯರನ್ನೂ ನಾನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ, ಇಸ್ರಾಯೇಲರಿಗೆ ಸೊತ್ತಾಗಿ ಪಾಲು ಕೊಡಬೇಕು. \v 7 ಈಗ ಈ ದೇಶವನ್ನು ಒಂಬತ್ತು ಗೋತ್ರಗಳಿಗೂ ಮನಸ್ಸೆ ಕುಲದ ಅರ್ಧ ಗೋತ್ರಕ್ಕೆ ಸೊತ್ತಾಗಿ ಪಾಲು ಮಾಡಿಕೊಡು,” ಎಂದು ಹೇಳಿದರು. \s1 ಯೊರ್ದನ್ ನದಿ ಪೂರ್ವದಿಕ್ಕಿನಲ್ಲಿರುವ ಪ್ರದೇಶದ ವಿಭಜನೆ \li4 \v 8 ಮನಸ್ಸೆ ಕುಲದ ಉಳಿದ ಅರ್ಧ ಗೋತ್ರದವರೂ ರೂಬೇನ್ಯರೂ ಗಾದ್ಯರೂ ತಮ್ಮ ಸೊತ್ತನ್ನು ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಬೇಕೆಂದು ನಿರ್ಣಯಿಸಿದ ಸ್ಥಳಗಳು ಅವರಿಗೆ ಕೊಡಲಾದವು. ಅವುಗಳು ಯಾವುವೆಂದರೆ: \li1 \v 9 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬಾದ ಸಮನಾದ ಭೂಮಿಯೂ \v 10 ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸ ಸೀಹೋನನಿಗೆ ಸೇರಿದ ಅಮ್ಮೋನಿಯರ ಮೇರೆಯವರೆಗೂ ಇದ್ದ ಸಕಲ ಪಟ್ಟಣಗಳು. \li1 \v 11 ಅದರೊಂದಿಗೆ ಗಿಲ್ಯಾದ್, ಗೆಷೂರ್ಯರ, ಮಾಕಾತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಸಲೆಕಾವರೆಗೆ ಇರುವ ಇಡೀ ಬಾಷಾನ್ ಪೂರ್ತಿಯಾಗಿ. \v 12 ಅಂದರೆ, ಬಾಷಾನಿನಲ್ಲಿ ಅಷ್ಟಾರೋತ್, ಎದ್ರೈ ಎಂಬ ಊರುಗಳಲ್ಲಿ ಆಳಿದ ರೆಫಾಯರ ವಂಶಸ್ಥನಾದ ಓಗನ ಸಮಸ್ತ ರಾಜ್ಯವೆಲ್ಲಾ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ, ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು. \v 13 ಆದಾಗ್ಯೂ ಇಸ್ರಾಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿಬಿಡಲಿಲ್ಲ. ಏಕೆಂದರೆ ಗೆಷೂರ್ಯರೂ ಮಾಕಾತೀಯರೂ ಈ ದಿನದವರೆಗೆ ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದಾರೆ. \b \li1 \v 14 ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಅವನು ಅವರಿಗೆ ಹೇಳಿದ ಪ್ರಕಾರ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದ್ದರಿಂದ, ಇಸ್ರಾಯೇಲಿನ ದೇವರೇ ಅವರ ಸೊತ್ತು. \b \li4 \v 15 ಮೋಶೆಯು ರೂಬೇನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಕೊಟ್ಟ ಸೊತ್ತು ಇವು: \li1 \v 16 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮೊದಲುಗೊಂಡು, ಮೇದೆಬಾದ ಬಳಿಯಲ್ಲಿರುವ ಸಕಲ ಸಮನಾದ ಭೂಮಿಯೂ, \v 17 ಸಮನಾದ ಭೂಮಿಯಲ್ಲಿರುವ ಹೆಷ್ಬೋನ್ ಪಟ್ಟಣವೂ ಅದರ ಎಲ್ಲಾ ಪಟ್ಟಣಗಳಾದ ದೀಬೋನ್, ಬಾಮೋತ್ ಬಾಳ್, ಬೇತ್ ಬಾಳ್ ಮೆಯೋನ್, \v 18 ಯಹಚ, ಕೆದೇಮೋತ್, ಮೇಫಾತ್, \v 19 ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ ಶಹರ್, \v 20 ಬೇತ್ ಪೆಗೋರ್ ಎಂಬ ಪಟ್ಟಣಗಳೂ ಪಿಸ್ಗಾದ ಕೆಳಗಡೆ ಇರುವ ಸೀಮೆ, ಬೇತ್ ಯೆಷೀಮೋತ್, \v 21 ಸಮನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗೊಳಗಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಸೆದೆಬಡಿದನು. \v 22 ಇದಲ್ಲದೆ ಇಸ್ರಾಯೇಲರು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮನೆಂಬ ಕಣಿ ಹೇಳುವವನನ್ನು ಖಡ್ಗದಿಂದ ಕೊಂದುಹಾಕಿದರು. \li4 \v 23 ಯೊರ್ದನ್ ನದಿಯು ರೂಬೇನ್ ಗೋತ್ರಗಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ದೊರಕಿದ ಸೊತ್ತು. \b \li4 \v 24 ಮೋಶೆಯು ಗಾದನ ಗೋತ್ರಗಳಿಗೆ ಅವರ ಕುಟುಂಬಗಳ ಪ್ರಕಾರ ಕೊಟ್ಟ ಸೊತ್ತು ಇವು: \li1 \v 25 ಯಜ್ಜೇರ್ ಪ್ರದೇಶ, ಗಿಲ್ಯಾದಿನ ಸಮಸ್ತ ಪಟ್ಟಣಗಳೂ ರಬ್ಬಾ ಊರಿನ ಎದುರಾಗಿರುವ ಅರೋಯೇರ್ ಪಟ್ಟಣವರೆಗೂ ಇರುವ ಅಮ್ಮೋನಿಯರ ಅರ್ಧ ದೇಶವು. \v 26 ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೊನೀಮ್ ಎಂಬ ಊರುಗಳವರೆಗೂ ಮಹನಯಿಮಿನಿಂದ ದೆಬೀರ್\f + \fr 13:26 \fr*\fq ದೆಬೀರ್ \fq*\ft ಪದವನ್ನು \ft*\fqa ಲೋದೆಬಾರ್ \fqa*\ft ಎಂದು ಸಹ ಕರೆಯಲಾಗುತ್ತದೆ\ft*\f* ಮೇರೆಯವರೆಗೂ ಇರುವ ದೇಶವು. \v 27 ತಗ್ಗಿನಲ್ಲಿರುವ ಬೇತ್‌ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಪೋನ್ ಎಂಬ ಪಟ್ಟಣಗಳು ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನ್ ನದಿ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವು ಅವರ ಮೇರೆಗೆ ಒಳಗಾದವು. \li4 \v 28 ಈ ಪಟ್ಟಣಗಳೂ, ಇವುಗಳ ಗ್ರಾಮಗಳೂ ಗಾದ್ಯರಿಗೆ ಅವರ ಕುಟುಂಬಗಳ ಪ್ರಕಾರ ಸೊತ್ತಾಗಿವೆ. \b \li4 \v 29 ಇದಲ್ಲದೆ ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಕೊಟ್ಟ ಸೊತ್ತು ಇವು: \li1 \v 30 ಮಹನಯಿಮಿನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ, ಬಾಷಾನಿನಲ್ಲಿರುವ ಯಾಯೀರನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು. \v 31 ಗಿಲ್ಯಾದಿನ ಅರ್ಧ ಭಾಗ, ಬಾಷಾನಿನಲ್ಲಿರುವ ಓಗ್ ರಾಜನ ಪಟ್ಟಣಗಳಾದ ಅಷ್ಟಾರೋತ್, ಎದ್ರೈ, \li4 ಇವೆಲ್ಲವೂ ಮನಸ್ಸೆಯ ಮಗ ಮಾಕೀರನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನರಿಗೆ ಕೊಟ್ಟನು. \b \li4 \v 32 ಹೀಗೆಯೇ ಮೋಶೆಯು ಯೊರ್ದನ್ ನದಿಗೆ ಆಚೆ ಯೆರಿಕೋವಿನ ಪೂರ್ವದಿಕ್ಕಿನಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಬಾಧ್ಯತೆಯಾಗಿ ಹಂಚಿದ ದೇಶಗಳು ಇವೆ. \v 33 ಆದರೆ ಲೇವಿಯರ ಗೋತ್ರಕ್ಕೆ ಮೋಶೆಯು ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ದೇವರು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲರ ದೇವರಾದ ಯೆಹೋವ ದೇವರೇ ಅವರ ಸೊತ್ತು. \c 14 \s1 ಯೊರ್ದನ್ ನದಿಯ ಪಶ್ಚಿಮದ ಪ್ರದೇಶವನ್ನು ಹಂಚಿಕೊಟ್ಟದ್ದು \p \v 1 ಯಾಜಕನಾದ ಎಲಿಯಾಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಮುಖ್ಯಸ್ಥರೂ ಜನರಿಗೆ ಸೊತ್ತಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲರು ಬಾಧ್ಯವಾಗಿ ಪ್ರದೇಶಗಳನ್ನು ಹೊಂದಿದರು. \v 2 ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಬತ್ತುವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಸೊತ್ತಾಗಿ ಪಾಲು ಹಂಚಿದರು. \v 3 ಏಕೆಂದರೆ ಮೋಶೆಯು ಯೊರ್ದನ್ ನದಿ ಆಚೆ ಎರಡೂವರೆ ಗೋತ್ರಗಳಿಗೆ ಸೊತ್ತನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಸೊತ್ತನ್ನೂ ಕೊಡಲಿಲ್ಲ, \v 4 ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು. \v 5 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರಮಾಡಿ, ದೇಶವನ್ನು ಹಂಚಿಕೊಡಲಾಯಿತು. \s1 ಕಾಲೇಬನಿಗೆ ಹೆಬ್ರೋನು ಕೊಟ್ಟಿದ್ದು \p \v 6 ಯೆಹೂದದ ಗೋತ್ರದವರು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಬಂದರು. ಆಗ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಅವನಿಗೆ, “ಕಾದೇಶ್ ಬರ್ನೇಯದಲ್ಲಿ ಯೆಹೋವ ದೇವರು ನನ್ನನ್ನೂ, ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ. \v 7 ದೇಶವನ್ನು ಸಂಚರಿಸಿ ನೋಡಲು ಯೆಹೋವ ದೇವರ ಸೇವಕನಾದ ಮೋಶೆಯು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ ನಾನು ನಾಲ್ವತ್ತು ವರ್ಷ ಪ್ರಾಯದವನಾಗಿದ್ದೆನು. ನನ್ನ ಮನಸ್ಸಿಗೆ ಬಂದಿದ್ದ ವರದಿಯನ್ನು ತಂದು ತಿಳಿಸಿದೆನು. \v 8 ಆದರೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದೆನು. \v 9 ಆ ದಿವಸದಲ್ಲಿ ಮೋಶೆಯು ನನಗೆ, ‘ನೀನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ನಿನ್ನ ಪಾದ ಮೆಟ್ಟಿದ ದೇಶವು ನಿನಗೂ, ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವುದು,’\f + \fr 14:9 \fr*\ft \+xt ಧರ್ಮೋ 1:36\+xt*\ft*\f* ಎಂದು ಆಣೆ ಇಟ್ಟು ಹೇಳಿದನು. \p \v 10 “ಈಗ ಯೆಹೋವ ದೇವರು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲರು ಮರುಭೂಮಿಯಲ್ಲಿ ಸಂಚರಿಸಿದ ನಾಲ್ವತ್ತೈದು ವರ್ಷ ಯೆಹೋವ ದೇವರು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾರೆ. ಈಗ ನಾನು ಇಂದು ಎಂಬತ್ತೈದು ವರ್ಷ ಪ್ರಾಯದವನಾಗಿದ್ದೇನೆ. \v 11 ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲಿಷ್ಠನಾಗಿ ಇದ್ದೆನೋ, ಹಾಗೆಯೇ ಈಗಲೂ ಬಲಿಷ್ಠನಾಗಿದ್ದೇನೆ. ನಾನು ಯುದ್ಧ ಮಾಡುವದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳವನಾಗಿದ್ದೇನೆ. \v 12 ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು. \p \v 13 ಆಗ ಯೆಹೋಶುವನು ಯೆಫುನ್ನೆಯ ಮಗ ಕಾಲೇಬನನ್ನು ಆಶೀರ್ವದಿಸಿ, ಅವನಿಗೆ ಹೆಬ್ರೋನನ್ನು ಸೊತ್ತಾಗಿ ಕೊಟ್ಟನು. \v 14 ಹೀಗೆಯೇ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ಹೆಬ್ರೋನು ಇಂದಿನವರೆಗೂ ಅವನ ಸೊತ್ತಾಗಿದೆ. \v 15 ಹೆಬ್ರೋನಿನ ಮೊದಲಿನ ಹೆಸರು ಕಿರ್ಯತ್ ಅರ್ಬ. “ಅರ್ಬ” ಎಂಬುವವನು ಅನಾಕ್ಯರಲ್ಲಿ ಪ್ರಮುಖನಾಗಿದ್ದನು. \p ದೇಶವು ಯುದ್ಧವಿಲ್ಲದೆ ಶಾಂತವಾಗಿತ್ತು. \c 15 \s1 ಯೆಹೂದ ಗೋತ್ರದವರಿಗೆ ಹಂಚಿಕೊಟ್ಟದ್ದು \li4 \v 1 ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವುದೆಂದರೆ: ಕಟ್ಟಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಚಿನ್ ಮರುಭೂಮಿಯ ದಕ್ಷಿಣ ಭಾಗ. \b \li1 \v 2 ಲವಣ ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ, \v 3 ಅಕ್ರಬ್ಬೀಮ್\f + \fr 15:3 \fr*\fq ಅಕ್ರಬ್ಬೀಮ್ \fq*\ft ಎಂದರೆ \ft*\fqa ಚೇಳುಗಳು\fqa*\f* ಎಂಬ ಕಣಿವೆಯ ದಕ್ಷಿಣಮಾರ್ಗವಾಗಿ ಚಿನಿಗೆ ಹೋಗುವದು. ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಚ್ರೋನನಿಂದ ಅದ್ದಾರವರೆಗೂ ಮುಂದುವರೆದು ಅಲ್ಲಿ ತಿರಿಗಿಕೊಂಡು ಕರ್ಕದವರೆಗೂ ವಿಸ್ತರಿಸಿಕೊಂಡಿತ್ತು, \v 4 ಅಲ್ಲಿಂದ ಈಜಿಪ್ಟನ ಅಚ್ಮೋನ ನದಿಗೆ ಬಂದು ಮೆಡಿಟೆರಿಯನ್ ಸಮುದ್ರದವರೆಗೆ ಹೋಗಿ ಸೇರುವುದು. ಇದೇ ಯೆಹೂದದ ದಕ್ಷಿಣ ಮೇರೆ. \li1 \v 5 ಅದರ ಪೂರ್ವದ ಮೇರೆ, ಯೊರ್ದನ್ ನದಿ ಕೊನೆಯ ಮಟ್ಟಿಗಿರುವ ಲವಣ ಸಮುದ್ರವು. \li1 ಉತ್ತರ ಕಡೆಗೆ ಯೊರ್ದನ್ ನದಿ ಮೇರೆ ಕೊನೆ ಹತ್ತಿರ ಸಮುದ್ರದ ಮುಖದ್ವಾರದಿಂದ ಇತ್ತು; \v 6 ಅಲ್ಲಿಂದ ಬೇತ್ ಹೊಗ್ಲಾಕ್ಕೂ, ಅಲ್ಲಿಂದ ಉತ್ತರಕ್ಕಿರುವ ಬೇತ್ ಅರಾಬನ್ನು ದಾಟಿ, ರೂಬೇನನ ಮಗ ಬೋಹನನ ಬಂಡೆಯ ವರೆಗೆ ಇತ್ತು. \v 7 ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಗೆ ತಿರುಗಿಕೊಂಡು ದಕ್ಷಿಣದಲ್ಲಿರುವ ಅದುಮೀಮಿನ ದಿಬ್ಬೆಗೆ ಎದುರಾಗಿರುವ ಗಿಲ್ಗಾಲಿಗೂ, ಅಲ್ಲಿಂದ ಏನ್ ಷೆಮೆಷ್ ಎಂಬ ಬುಗ್ಗೆಗೂ, ಅಲ್ಲಿಂದ ಏನ್ ರೋಗೆಲ್‌ವರೆಗೂ ಇತ್ತು. \v 8 ಅಲ್ಲಿಂದ ಯೆಬೂಸಿಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗನ್ನು ದಾಟಿ, ಉತ್ತರಕ್ಕಿರುವ ರೆಫಾಯಿಮ್ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕೆ ಬೆನ್ ಹಿನ್ನೋಮನ ತಗ್ಗಿನ ಮುಂದಿರುವ ಬೆಟ್ಟದ ಶಿಖರದವರೆಗೂ ಹೋಗುತ್ತದೆ. \v 9 ಆ ಬೆಟ್ಟದ ಶಿಖರದಿಂದ ನೆಫ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣಗಳಿಗೂ ಅಲ್ಲಿಂದ ಕಿರ್ಯತ್ ಯಾರೀಮ್ ಆದ ಬಾಲಾ ಎಂಬ ಊರಿನವರೆಗೆ ಹೋಗುತ್ತದೆ. \v 10 ಬಾಲಾದಿಂದ ಪಶ್ಚಿಮಕ್ಕಿರುವ ಸೇಯೀರ್ ಬೆಟ್ಟವನ್ನು ಸುತ್ತಿ, ಅಲ್ಲಿಂದ ಕೆಸಾಲೋನಿನ ಯಾರೀಮ್ ಬೆಟ್ಟದ ಉತ್ತರಕ್ಕೂ ಅಲ್ಲಿಂದ ಬೇತ್ ಷೆಮೆಷ್ ಕಡೆಗೆ ಇಳಿದು ತಿಮ್ನಾಗೆ ಹೋಯಿತು. \v 11 ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೂ, ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯಬ್ನೆಯೇಲಿಗೆ ಹೊರಟು ಸಮುದ್ರ ತೀರದಲ್ಲಿ ಮುಗಿಯುತ್ತದೆ. \li1 \v 12 ಅದು ಪಶ್ಚಿಮದ ಮೇರೆಯ ಮೆಡಿಟರೇನಿಯನ್ ಮಹಾಸಾಗರವಾಗಿದೆ. \b \li4 ಇದೇ ಯೆಹೂದ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ. \b \p \v 13 ಇದಲ್ಲದೆ ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರ ಯೆಫುನ್ನೆಯ ಮಗ ಕಾಲೇಬನಿಗೆ ಅನಾಕನ ತಂದೆಯ ಕಿರ್ಯತ್ ಅರ್ಬ ಎಂಬ ಹೆಬ್ರೋನನ್ನು ಯೆಹೂದನ ಮಕ್ಕಳ ನಡುವೆ ಸೊತ್ತಾಗಿ ಕೊಟ್ಟನು. \v 14 ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ, ಅಹೀಮನ್, ತಲ್ಮೈರನ್ನು ಹೊರಡಿಸಿಬಿಟ್ಟನು. \v 15 ಕಾಲೇಬನು ಅಲ್ಲಿಂದ ಹೊರಟು, ಕಿರ್ಯತ್ ಸೇಫೆರ್ ಎಂದು ಅನ್ನಿಸಿಕೊಳ್ಳುತ್ತಿದ್ದ ದೆಬೀರಿನ ವಾಸಿಗಳ ವಿರೋಧವಾಗಿ ಹೋದನು. \v 16 ಅಲ್ಲಿ ಕಾಲೇಬನು, “ಕಿರ್ಯತ್ ಸೇಫೆರನ್ನು ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು. \v 17 ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು. \p \v 18 ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು. \p \v 19 ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನೀನು ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು. \b \li4 \v 20 ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸೊತ್ತಿನ ವಿವರ: \b \li1 \v 21 ದಕ್ಷಿಣದ ಕಟ್ಟಕಡೆಗಿರುವ ಎದೋಮಿನ ಮೇರೆಗೆ ಸರಿಯಾಗಿ ಯೆಹೂದ ಗೋತ್ರಕ್ಕೆ ಇರುವ ಪಟ್ಟಣಗಳು. ಅವು: \li2 ಕಬ್ಜಯೇಲ್, ಏದೆರ್, ಯಾಗೂರ್, \v 22 ಕೀನಾ, ದೀಮೋನಾ, ಅದಾದಾ, \v 23 ಕೆದೆಷ್, ಹಾಚೋರ್, ಇತ್ನಾನ್, \v 24 ಜೀಫ್, ಟೆಲೆಮ್, ಬೆಯಾಲೋತ್, \v 25 ಹಾಚೋರ್ ಹದತ್ತಾ, ಕಿರ್ಯೋತ್ ಹೆಚ್ರೋನ್, ಎಂಬುವ ಹಾಚೋರ್, \v 26 ಅಮಾಮ್, ಶೆಮ, ಮೋಲಾದ, \v 27 ಹಜರ್ ಗದ್ದಾ, ಹೆಷ್ಮೋನ್, ಬೇತ್ ಪೆಲೆಟ್, \v 28 ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ, \v 29 ಬಾಲಾ, ಇಯೀಮ್, ಎಚೆಮ್, \v 30 ಎಲ್ತೋಲದ್, ಕೆಸೀಲ್, ಹೊರ್ಮಾ, \v 31 ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ, \v 32 ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬವುಗಳೇ ಪಟ್ಟಣಗಳೆಲ್ಲಾ ಇಪ್ಪತ್ತೊಂಬತ್ತು ಮತ್ತು ಅವುಗಳ ಗ್ರಾಮಗಳು. \li1 \v 33 ಪಶ್ಚಿಮದ ತಗ್ಗಿನ ದೇಶ \li2 ಎಷ್ಟಾವೋಲ್, ಚೊರ್ಗಾ, ಅಶ್ಣಾ, \v 34 ಜಾನೋಹ, ಏಂಗನ್ನೀಮ್, ತಪ್ಪೂಹ, ಏನಾಮ್, \v 35 ಯರ್ಮೂತ್, ಅದುಲ್ಲಾಮ್, ಸೋಕೋ, ಅಜೇಕಾ, \v 36 ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. \li2 \v 37 ಚೆನಾನ್, ಹದಾಷಾ, ಮಿಗ್ದಲ್ಗಾದ್, \v 38 ದಿಲಾನ್, ಮಿಚ್ಪೆ, ಯೊಕ್ತೇಲ್, \v 39 ಲಾಕೀಷ್, ಬೊಚ್ಕತ್, ಎಗ್ಲೋನ್, \v 40 ಕಬ್ಬೋನ್, ಲಹ್ಮಾಸ್, ಕಿತ್ಲೀಷ್, \v 41 ಗೆದೇರೋತ್, ಬೇತ್‌ದಾಗೋನ್, ನಾಮಾ, ಮಕ್ಕೇದಾ, ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು. \li2 \v 42 ಇದಲ್ಲದೆ ಲಿಬ್ನಾ, ಎತೆರ್, ಆಷಾನ್, \v 43 ಇಪ್ತಾಹ, ಅಶ್ಣಾ, ನೆಜೀಬ್, \v 44 ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳು. \li2 \v 45 ಎಕ್ರೋನ್ ಅದರ ಪಟ್ಟಣಗಳು ಗ್ರಾಮಗಳು ಸಹ. \v 46 ಎಕ್ರೋನಿನ ಪಶ್ಚಿಮ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು. \v 47 ಅಷ್ಡೋದ್ ಪಟ್ಟಣ ಮತ್ತು ಅದರ ಸುತ್ತಲಿನ ಪಟ್ಟಣಗಳೂ ಗ್ರಾಮಗಳೂ, ಗಾಜಾ, ಅದರ ಪಟ್ಟಣಗಳು, ಅದರ ಗ್ರಾಮಗಳು. ಈಜಿಪ್ಟಿನ ಕಲ್ಲಿನ ನಾಲೆ, ಮೆಡಿಟೆರಿಯನ್ ಸಮುದ್ರ, ಅದರ ಮೇರೆ ಇವುಗಳವರೆಗೂ ಇತ್ತು. \li1 \v 48 ಬೆಟ್ಟಗಳಲ್ಲಿರುವ ಪ್ರದೇಶಗಳು: \li2 ಶಾಮೀರ್, ಯತ್ತೀರ್, ಸೋಕೋ, \v 49 ದನ್ನಾ, ದೆಬೀರ್ ಎಂಬ ಕಿರ್ಯತ್ ಸನ್ನಾ, \v 50 ಅನಾಬ್, ಎಷ್ಟೆಮೋ, ಅನೀಮ್, \v 51 ಗೋಷೆನ್, ಹೋಲೋನ್ ಮತ್ತು ಗಿಲೋ ಎಂಬ ಹನ್ನೊಂದು ಪಟ್ಟಣಗಳು ಅವುಗಳ ಗ್ರಾಮಗಳು. \li2 \v 52 ಅರಬ್, ರೂಮಾ\f + \fr 15:52 \fr*\fq ರೂಮಾ \fq*\ft ಅಥವಾ \ft*\fqa ದೂಮಾ\fqa*\f*, ಎಷಾನ್, \v 53 ಯಾನೂಮ್, ಬೇತ್ ತಪ್ಪೂಹ, ಅಫೇಕಾ, \v 54 ಹುಮ್ಟಾ, ಹೆಬ್ರೋನೆಂಬ ಕಿರ್ಯತ್ ಅರ್ಬ, ಚೀಯೋರ್ ಎಂಬ ಒಂಬತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು. \li2 \v 55 ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ, \v 56 ಇಜ್ರೆಯೇಲ್, ಯೊಗ್ದೆಯಾಮ್, ಜಾನೋಹ, \v 57 ಕಯಿನ್, ಗಿಬೆಯ, ತಿಮ್ನಾ ಎಂಬ ಹತ್ತು ಪಟ್ಟಣಗಳು, ಅವುಗಳ ಗ್ರಾಮಗಳು. \li2 \v 58 ಹಲ್ಹೂಲ್, ಬೇತ್ ಚೂರ್, ಗೆದೋರ್, \v 59 ಮಾರಾತ್, ಬೇತ್ ಅನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು. \li2 \v 60 ಕಿರ್ಯತ್ ಯಾರೀಮ್ ಎಂಬ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. \li1 \v 61 ಮರುಭೂಮಿಯಲ್ಲಿರುವ \li2 ಬೇತ್ ಅರಾಬಾ, ಮಿದ್ದೀನ್, ಸೆಕಾಕಾ, \v 62 ನಿಬ್ಷಾನ್, ಉಪ್ಪಿನ ಪಟ್ಟಣವು ಮತ್ತು ಏನ್ಗೆದಿ ಎಂಬ ಪಟ್ಟಣಗಳನ್ನು ಒಳಗೊಂಡ ಆರು ಪಟ್ಟಣಗಳು ಅವುಗಳ ಗ್ರಾಮಗಳು. \b \p \v 63 ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ. \c 16 \s1 ಮನಸ್ಸೆ ಹಾಗೂ ಎಫ್ರಾಯೀಮ್ ಪಾಲು \li1 \v 1 ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಉಂಟಾದ ಸೊತ್ತಿನ ವಿವರ: ಯೆರಿಕೋವಿನ ಬಳಿಯಲ್ಲಿರುವ ಯೊರ್ದನ್ ನದಿಯಿಂದ ಪೂರ್ವದಲ್ಲಿರುವ ಯೆರಿಕೋವಿನ ಜಲದವರೆಗೂ ಮತ್ತು ಬೇತೇಲಿನ ಬೆಟ್ಟಗಳವರೆಗೂ ಇರುವ ಮರುಭೂಮಿಯ ಮಾರ್ಗವಾಗಿ ಹೋಗಿತ್ತು. \v 2 ಬೇತೇಲಿನಿಂದ ಅಂದರೆ ಲೂಜ್ ಅಲ್ಲಿಂದ ಅರ್ಕಿಯ ಮೇರೆಗಳಾದ ಅಟಾರೋತನ್ನು ದಾಟಿ, \v 3 ಪಶ್ಚಿಮಕ್ಕೆ ಯಫ್ಲೇಟ್ಯರ ಮೇರೆಗೂ ಕೆಳಗಡೆಯಾದ ಬೇತ್ ಹೋರೋನ್ ಮೇರೆಯವರೆಗೂ ಅಲ್ಲಿಂದ ಗೆಜೆರಿನವರೆಗೂ ಹೋಗಿ ಮೆಡಿಟೆರಿಯನ್ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. \b \li4 \v 4 ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯೀಮರು ತಮಗೆ ಸೊತ್ತಾಗಿ ತೆಗೆದುಕೊಂಡರು. \b \b \li4 \v 5 ಅವರ ಕುಟುಂಬಗಳ ಪ್ರಕಾರ ಎಫ್ರಾಯೀಮ್ ಗೋತ್ರದ ಪ್ರದೇಶ ಹೀಗಿತ್ತು: \b \li1 ಪೂರ್ವದಿಕ್ಕಿನ ಅಟಾರೋತ್ ಅದ್ದಾರಿನಿಂದ ಪ್ರಾರಂಭಿಸಿ, ಮೇಲಿನ ಬೇತ್ ಹೋರೋನಿನವರೆಗೂ ಇತ್ತು. \v 6 ಅಲ್ಲಿಂದ ಮೆಡಿಟೆರಿಯನ್ ಸಮುದ್ರದ ಪಶ್ಚಿಮ ಮೇರೆಗೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಪೂರ್ವಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಪೂರ್ವದ ಕಡೆಗೆ ಹಾದು ಹೋಗಿತ್ತು. \v 7 ಯಾನೋಹದಿಂದ ಅಟಾರೋತ್‌ಗೂ ನಾರಾ ಎಂಬ ಊರುಗಳ ಮೇಲೆ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನ್ ನದಿಗೆ ಮುಗಿಯುವುದು. \v 8 ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಮೆಡಿಟೆರೆನಿಯನ್ ಸಮುದ್ರದವರೆಗೆ ಮುಗಿಯುವುದು. ಇದು ಎಫ್ರಾಯೀಮನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರವೇ ದೊರೆತ ಸೊತ್ತು. \li1 \v 9 ಇದಲ್ಲದೆ ಎಫ್ರಾಯೀಮ್ ಹಾಗೂ ಮನಸ್ಸೆ ಗೋತ್ರದವರ ಮಧ್ಯೆ ಕೊಡಲಾದ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಪ್ರತ್ಯೇಕವಾಗಿ ಕೊಡಲಾಗಿತ್ತು. \b \p \v 10 ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ. \c 17 \p \v 1 ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗ ದೊರೆಯಿತು. ಏಕೆಂದರೆ ಅವನು ಯೋಸೇಫನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದುದರಿಂದ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಅವನ ಪಾಲಿಗೆ ಬಂದವು. \v 2 ಮನಸ್ಸೆಯ ಉಳಿದವರಿಗೆ ಅಬೀಯೆಜೆರನ ಮಕ್ಕಳಿಗೂ ಹೇಲೆಕ್‌ನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮ್ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆಮೀದಾನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಸೊತ್ತು ದೊರೆಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು. \p \v 3 ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ, ಹೇಫೆರನ ಮಗನೂ ಆದ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಆದರೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಪುತ್ರಿಯರು ಇದ್ದರು. \v 4 ಇವರು ಯಾಜಕನಾದ ಎಲಿಯಾಜರನ ಬಳಿಗೂ ನೂನನ ಮಗ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆ, “ನಮ್ಮ ಸಹೋದರರಲ್ಲಿ ನಮಗೂ ಸೊತ್ತನ್ನು ಕೊಡುವಂತೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರು,” ಎಂದರು. ಆದ್ದರಿಂದ ಅವರ ತಂದೆಗಳ ಸಹೋದರರ ಜೊತೆಗೆ ಅವರಿಗೂ ಯೆಹೋವ ದೇವರ ವಾಕ್ಯದ ಪ್ರಕಾರ ಸೊತ್ತನ್ನು ಕೊಟ್ಟನು. \v 5 ಯೊರ್ದನ್ ನದಿ ಆಚೆಯಲ್ಲಿರುವ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳ ಜೊತೆಗೆ ಮನಸ್ಸೆಗೆ ಬಿದ್ದ ಚೀಟಿನಲ್ಲಿ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು. \v 6 ಏಕೆಂದರೆ ಮನಸ್ಸೆಯ ಪುತ್ರಿಯರು ಸಹ ಅವನ ಪುತ್ರರಲ್ಲಿ ಸೊತ್ತನ್ನು ಹೊಂದಿದ್ದರು. ಆದರೆ ಉಳಿದ ಮನಸ್ಸೆಯ ಪುತ್ರರಿಗೆ ಗಿಲ್ಯಾದ್ ನಾಡು ದೊರೆಯಿತು. \b \li1 \v 7 ಮನಸ್ಸೆಯ ಮೇರೆ, ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿನವರೆಗೂ ಇತ್ತು. ಅಲ್ಲಿಂದ ದಕ್ಷಿಣ ಕಡೆಯಿರುವ ಎನ್ ತಪ್ಪೂಹದ ನಿವಾಸಗಳಿಗೆ ಹೋಗುತ್ತದೆ. \v 8 ತಪ್ಪೂಹದ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯೀಮನ ಮಕ್ಕಳದ್ದಾಗಿತ್ತು. \v 9 ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದುಹೋಗುವುದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯೀಮನದಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ಹೋಗಿರುವುದು. \v 10 ನದಿಯ ದಕ್ಷಿಣ ಸೀಮೆ ಎಫ್ರಾಯೀಮನದು; ಉತ್ತರ ಸೀಮೆ ಮನಸ್ಸೆಯದು, ಮೆಡಿಟೆರೆನಿಯನ್ ಸಮುದ್ರವು ಅದರ ಮೇರೆಯಾಗಿರುವುದು. ಉತ್ತರಕ್ಕೆ ಇರುವ ಆಶೇರ್ ಗೋತ್ರದವರ ಪ್ರಾಂತವೂ ಪೂರ್ವಕ್ಕೆ ಇರುವ ಇಸ್ಸಾಕಾರ್ ಗೋತ್ರವೂ ಇರುವುದು. \li1 \v 11 ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದಲ್ಲಿಯೂ ಇರುವ ಸೀಮೆಗಳಾದ ಬೇತ್ ಷೆಯಾನ, ಅದರ ಗ್ರಾಮಗಳೂ ಇಬ್ಲೆಯಾಮ್ ಅದರ ಗ್ರಾಮಗಳೂ ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಗೆ ಸೇರಿದವು. ಮೂರನೆಯ ಊರು ನಾಫೋತ್ ಆಗಿರುತ್ತದೆ. \b \p \v 12 ಆದರೆ ಮನಸ್ಸೆಯ ಸಂತತಿಯರಿಗೆ ಆ ಪಟ್ಟಣಗಳ ನಿವಾಸಿಗಳಾದ ಕಾನಾನ್ಯರನ್ನು ಹೊರಡಿಸುವುದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ನಿರ್ಧರಿಸಿದ್ದರು. \v 13 ಆದರೆ ಇಸ್ರಾಯೇಲರು ಬಲಗೊಂಡಾಗ, ಕಾನಾನ್ಯರನ್ನು ಹೊರಡಿಸದೆ ಅವರನ್ನು ಜೀತದಾಳುಗಳನ್ನಾಗಿ ಮಾಡಿಕೊಂಡರು. \p \v 14 ಯೋಸೇಫನ ಸಂತತಿಯರು ಯೆಹೋಶುವನಿಗೆ, “ಯೆಹೋವ ದೇವರು ನಮ್ಮನ್ನು ಈವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ, ನಾವು ಮಹಾ ಜನಾಂಗವಾಗಿದ್ದೇವೆ. ಹೀಗಿರುವಾಗ ನೀವು ನಮಗೆ ಸೊತ್ತಾಗಿ ಒಂದೇ ಒಂದು ಭಾಗವನ್ನು ಮಾತ್ರ ಪಾಲನ್ನಾಗಿ ಕೊಟ್ಟಿದ್ದು ಏಕೆ?” ಎಂದು ಕೇಳಿದರು. \p \v 15 ಅದಕ್ಕೆ ಯೆಹೋಶುವನು ಉತ್ತರವಾಗಿ ಅವರಿಗೆ, “ನೀವು ಹೆಚ್ಚು ಜನರಾಗಿದ್ದರೆ ಮತ್ತು ನಿಮಗೆ ಎಫ್ರಾಯೀಮ್ ಪರ್ವತವು ಸಾಲದಿದ್ದರೆ, ನೀವು ಪೆರಿಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡನ್ನು ಕಡಿದು ನಿಮಗೆ ಸ್ಥಳಮಾಡಿಕೊಳ್ಳಿರಿ,” ಎಂದನು. \p \v 16 ಅದಕ್ಕೆ ಯೋಸೇಫನ ಸಂತತಿಯರು, “ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿರುವ ಬೇತ್ ಷೆಯಾನ್‌ನಲ್ಲಿಯೂ ಇಜ್ರೆಯೇಲ್ ಕಣಿವೆಯಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಇವೆ,” ಎಂದರು. \p \v 17 ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯೀಮನಿಗೂ ಮನಸ್ಸೆಗೂ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವುದು. \v 18 ಏಕೆಂದರೆ ಅದು ಅಡವಿಯಾಗಿದೆ. ಅದನ್ನು ನೀವು ಕಡಿಯಬೇಕು. ಅದರ ಅಂತ್ಯಗಳವರೆಗೂ ನಿಮ್ಮದಾಗಿರುವುದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿಬಿಡಲು ನಿಮಗೆ ಸಾಧ್ಯ,” ಎಂದನು. \c 18 \s1 ಉಳಿದ ಪ್ರದೇಶಗಳ ಪಾಲು \p \v 1 ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು. \v 2 ಆದರೆ ಇಸ್ರಾಯೇಲರಲ್ಲಿ ತಮ್ಮ ಬಾಧ್ಯತೆಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು. \p \v 3 ಯೆಹೋಶುವನು ಇಸ್ರಾಯೇಲರಿಗೆ, “ನಿಮ್ಮ ತಂದೆಗಳ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಎಷ್ಟರವರೆಗೆ ಆಲಸ್ಯ ಮಾಡುವಿರಿ? \v 4 ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ. ನಾನು ಅವರನ್ನು ಕಳುಹಿಸುವೆನು. ಅವರು ಎದ್ದು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯತೆಗಳ ಪ್ರಕಾರ ಅದನ್ನು ಅಳತೆಮಾಡಿ ವಿವರವಾಗಿ ಬರೆಯಲಿ. ತರುವಾಯ ನನ್ನ ಬಳಿಗೆ ಅವರು ಬರಲಿ. \v 5 ನೀವು ಅದನ್ನು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೆಹೂದವು, ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲೆಸಬೇಕು. \v 6 ನೀವು ದೇಶವನ್ನು ಏಳು ಪಾಲಾಗಿ ವಿತರಿಸಬೇಕು ಮತ್ತು ಅದರ ವಿವರಗಳನ್ನು ಇಲ್ಲಿ ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಮಗಾಗಿ ಚೀಟುಗಳನ್ನು ಹಾಕುವೆನು. \v 7 ಆದರೆ ಲೇವಿಯರಿಗೆ ನಿಮ್ಮೊಳಗೆ ಪಾಲಿಲ್ಲ. ಏಕೆಂದರೆ ಅವರಿಗೆ ಯೆಹೋವ ದೇವರ ಯಾಜಕತ್ವವೇ ಅವರ ಸೊತ್ತು. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಯೆಹೋವ ದೇವರ ಸೇವಕನಾದ ಮೋಶೆಯಿಂದಲೇ ತಮಗೆ ಸೊತ್ತನ್ನು ತೆಗೆದುಕೊಂಡಿದ್ದಾರೆ,” ಎಂದನು. \p \v 8 ಆ ಮನುಷ್ಯರು ನಾಡನ್ನು ಅಳತೆ ಮಾಡುವುದಕ್ಕಾಗಿ ಹೊರಟು ಹೋಗುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ನೀವು ಹೋಗಿ ದೇಶವೆಲ್ಲಾ ಸಂಚರಿಸಿ, ಅದನ್ನು ಅಳತೆಮಾಡಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ನಾನು ಇಲ್ಲಿ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ನಿಮಗೆ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ಬನ್ನಿರಿ,” ಎಂದು ಅಪ್ಪಣೆಕೊಟ್ಟನು. \v 9 ಆ ಮನುಷ್ಯರು ಆ ನಾಡಿಗೆ ಹೋಗಿ, ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಗ್ರಂಥದಲ್ಲಿ ಬರೆದುಕೊಂಡು ಶೀಲೋವಿನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರುಗಿ ಬಂದರು. \b \li4 \v 10 ಆಗ ಯೆಹೋಶುವನು ಅವರಿಗೆ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ಚೀಟುಗಳನ್ನು ಹಾಕಿದನು. ಅಲ್ಲಿ ಯೆಹೋಶುವನು ಇಸ್ರಾಯೇಲರಿಗೆ ನಾಡನ್ನು ಅವರ ಗೋತ್ರಗಳ ಪ್ರಕಾರ ಪಾಲುಗಳನ್ನು ಹಂಚಿಕೊಟ್ಟನು. \s1 ಬೆನ್ಯಾಮೀನನ ಪಾಲು \li4 \v 11 ಬೆನ್ಯಾಮೀನನ ಸಂತತಿಯವರಿಗೆ ಅವರ ಕುಟುಂಬಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಸೊತ್ತು ಯೆಹೂದ ಮತ್ತು ಯೋಸೇಫನ ಗೋತ್ರದವರ ಪ್ರಾಂತಗಳಿಗೆ ನಡುವೆಯಿತ್ತು. \li1 \v 12 ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆನ ಮರುಭೂಮಿಗೆ ಮುಗಿಯುವುದು. \v 13 ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು, ಲೂಜಿನ ದಕ್ಷಿಣದ ಕಡೆಗೆ ಹೋಗಿ, ಅಟಾರೋತ್ ಅದ್ದಾರಿನ ಕೆಳಗಿನ ಬೇತ್ ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವುದು. \li1 \v 14 ಇದಲ್ಲದೆ ಆ ಮೇರೆಯು ದಕ್ಷಿಣ ಎಲ್ಲೆಗೆ ಎದುರಾಗಿರುವ ಬೇತ್ ಹೋರೋನಿಗೆ ಎದುರಾಗಿ ಬೆಟ್ಟವನ್ನು ಹಿಡಿದು, ದಕ್ಷಿಣವಾಗಿ ಸುತ್ತಿಕೊಂಡು ಕಿರ್ಯತ್ ಯಾರೀಮ್ ಎಂಬ ಯೆಹೂದ ಗೋತ್ರದ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವುದು. ಇದು ಪಶ್ಚಿಮ ಎಲ್ಲೆಯಾಗಿತ್ತು. \li1 \v 15 ಆ ದಕ್ಷಿಣ ಎಲ್ಲೆಯೂ ಕಿರ್ಯತ್ ಯಾರೀಮ್ ತುದಿಯಿಂದ ಹೊರಟು, ಪಶ್ಚಿಮಕ್ಕೆ ಹೋಗಿ, ನೆಫ್ತೋಹದ ಜಲಬುಗ್ಗೆಯ ಬಳಿ ಮುಗಿಯುತ್ತದೆ. \v 16 ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ತಗ್ಗಿನ ಈಚೆಗೂ ರೆಫಾಯಿಮ್ ತಗ್ಗಿನ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ, ಅಲ್ಲಿಂದ ದಕ್ಷಿಣದಲ್ಲಿ ಯೆಬೂಸಿಯರ ಮೇರೆಯಾದ ಬೆನ್ ಹಿನ್ನೋಮಿನ ಹಳ್ಳದ ಕಣಿವೆ ಮಾರ್ಗವಾಗಿ ಏನ್ ರೋಗೆಲಿಗೆ ಬರುತ್ತದೆ. \v 17 ಅಲ್ಲಿಂದ ಏನ್ ಷೆಮೆಷ್, ಅಲ್ಲಿಂದ ಅದುಮೀಮ್ ಎಂಬ ದಿಬ್ಬೆಗೆ ಎದುರಾಗಿ ಗೆಲೀಲೋತಿಗೂ, ಅಲ್ಲಿಂದ ರೂಬೇನನ ಪುತ್ರನಾದ ಬೋಹನನ ಕಲ್ಲಿಗೆ ಏರಿಹೋಗಿ, \v 18 ಅಲ್ಲಿಂದ ಬೇತ್ ಅರಾಬಾದ ಎದುರಾಗಿ ಉತ್ತರ ಭಾಗಕ್ಕೆ ಹೊರಟು, ಅರಾಬಾ ತಗ್ಗಿಗೆ ಇಳಿದು ಬರುತ್ತದೆ. \v 19 ಅಲ್ಲಿಂದ ಆ ಮೇರೆ ಬೇತ್ ಹೊಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು, ಯೊರ್ದನ್ ನದಿ ಮುಖ ದ್ವಾರಕ್ಕೆ ಉತ್ತರವಾದ ಲವಣ ಸಮುದ್ರ\f + \fr 18:19 \fr*\ft ಅಥವಾ \ft*\fqa ಮೃತ ಸಮುದ್ರ\fqa*\f* ಎಂಬ ಲವಣ ಸಮುದ್ರದ ಉತ್ತರ ಮೂಲೆಯಲ್ಲಿ ಮುಗಿಯುತ್ತದೆ. ಇದೇ ದಕ್ಷಿಣ ಭಾಗದ ಮೇರೆ. \li1 \v 20 ಪೂರ್ವದಿಕ್ಕಿನಲ್ಲಿ ಯೊರ್ದನ್ ನದಿಯೇ ಅದರ ಮೇರೆಯಾಗಿತ್ತು. \li4 ಇದು ಬೆನ್ಯಾಮೀನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಸೊತ್ತಾಗಿತ್ತು. \b \li4 \v 21 ಬೆನ್ಯಾಮೀನನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರಕಿರುವ ಪಟ್ಟಣಗಳ ವಿವರ: \li1 ಯೆರಿಕೋ, ಬೇತ್ ಹೊಗ್ಲಾ, ಏಮೆಕ್ ಕೆಚ್ಚೀಚ್ ತಗ್ಗು, \v 22 ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್, \v 23 ಅವ್ವೀಮ್, ಪಾರಾ, ಒಫ್ರಾ, \v 24 ಕೆಫೆರ್ ಅಮ್ಮೋನಿ, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಆಗಿರುತ್ತವೆ. \li1 \v 25 ಇದಲ್ಲದೆ ಗಿಬ್ಯೋನ್, ರಾಮಾ, ಬೇರೋತ್, \v 26 ಮಿಚ್ಪೆ, ಕೆಫೀರಾ, ಮೋಚಾ, \v 27 ರೆಕೆಮ್, ಇರ್ಪೇಲ್, ತರಲಾ, \v 28 ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯ, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ. \li4 ಇವೇ ಬೆನ್ಯಾಮೀನ್ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು. \c 19 \s1 ಸಿಮೆಯೋನನ ಪಾಲು \li4 \v 1 ಎರಡನೆಯ ಚೀಟು ಬಿದ್ದ ಭಾಗವು ಸಿಮೆಯೋನನ ಗೋತ್ರದವರದಾಗಿತ್ತು. ಸಿಮೆಯೋನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು. ಅವರ ಸೊತ್ತು ಯೆಹೂದ ಗೋತ್ರದ ಸೊತ್ತಿನ ಮಧ್ಯದಲ್ಲಿತ್ತು. \v 2 ಅವರಿಗೆ ಸೇರಿದ ಪಟ್ಟಣಗಳು ಯಾವುವೆಂದರೆ: \li1 ಬೇರ್ಷೆಬಾ ಅಥವಾ ಶೆಬಾ, ಮೋಲಾದಾ, \v 3 ಹಚರ್ ಷೂವಾಲ್, ಬಾಲಾ, ಎಚೆಮ್, \v 4 ಎಲ್ತೋಲದ್, ಬೆತೂಲ್, ಹೊರ್ಮಾ, \v 5 ಚಿಕ್ಲಗ್, ಬೇತ್ ಮರ್ಕಾಬೋತ್, ಹಚರ್‌ಸೂಸಾ, \v 6 ಬೇತ್ ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿದ್ದವು. \li1 \v 7 ಇದಲ್ಲದೆ ಆಯಿನ್, ರಿಮ್ಮೋನ್, ಎತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳೂ ಆಗಿದ್ದವು. \v 8 ಇದರೊಂದಿಗೆ ಬಾಲಾತ್ ಬೇರಿನವರೆಗೂ ಇರುವ ಎಲ್ಲಾ ಪಟ್ಟಣ ಮತ್ತು ಅದರ ಗ್ರಾಮಗಳೂ ಬಾಲತ್ ಬೇರ್ ಎಂಬುದು ದಕ್ಷಿಣದಲ್ಲಿರುವ ನೆಗೇವಿನ ರಾಮದಲ್ಲಿ ಇರುತ್ತದೆ. \li4 ಇದೇ ಸಿಮೆಯೋನನ ಗೋತ್ರದವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು. \v 9 ಸಿಮೆಯೋನನ ಗೋತ್ರದವರಿಗೆ ಬಾಧ್ಯತೆ ಯೆಹೂದ ಗೋತ್ರದವರ ಭಾಗದಿಂದ ಸಿಕ್ಕಿತು. ಏಕೆಂದರೆ ಯೆಹೂದ ಗೋತ್ರದ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ, ಸಿಮೆಯೋನನ ಗೋತ್ರದವರು ಯೆಹೂದ ಗೋತ್ರದವರ ಎಲ್ಲೆಯ ಒಳಗಿಂದಲೇ ತಮ್ಮ ಪಾಲನ್ನು ಹೊಂದಿದರು. \s1 ಜೆಬುಲೂನನ ಪಾಲು \li4 \v 10 ಮೂರನೆಯ ಚೀಟು ಬಿದ್ದ ಭಾಗ ಜೆಬುಲೂನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಬಿದ್ದಿತು. \li1 ಅವರ ಬಾಧ್ಯತೆಯ ಮೇರೆ ಸಾರೀದ್ ವರೆಗೂ ಇತ್ತು. \v 11 ಅಲ್ಲಿಂದ ಪಶ್ಚಿಮ ಕಡೆಗೆ ಹೋಗಿ, ಮರಾಳಕ್ಕೆ ಏರಿ, ದಬ್ಬೆಷೆತಿಗೆ ಹೋಗಿ, ಯೊಕ್ನೆಯಾಮಿಗೆ ಎದುರಾದ ಹಳ್ಳಕ್ಕೆ ಹೋಗುತ್ತದೆ. \v 12 ಅದು ಸಾರೀದಿನಿಂದ ಸೂರ್ಯನು ಉದಯಿಸುವ ಪೂರ್ವದಿಕ್ಕಿನ ಕಿಸ್ಲೋತ್ ತಾಬೋರಿನ ಮೇರೆಗೆ ತಿರುಗಿ, ಅಲ್ಲಿಂದ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ. \v 13 ಅಲ್ಲಿಂದ ಪೂರ್ವದಿಕ್ಕಿನಲ್ಲಿ ಮುಂದುವರೆದು ಗತ್‌ಹೇಫೆರನ್ನು ಮತ್ತು ಎತ್‌ಕಾಚೀನನ್ನು ದಾಟಿ, ರಿಮ್ಮೋನವರೆಗೂ ಹೋಗಿ ನೇಯಗೆ ತಿರುಗುತ್ತದೆ. \v 14 ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಯೇಲನ ಹಳ್ಳದ ತಗ್ಗಿಗೆ ಮುಗಿಯುತ್ತದೆ. \li1 \v 15 ಈ ಮೇರೆಯಲ್ಲಿರುವ ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳ ಗ್ರಾಮಗಳು ಸಹ ಒಳಪಟ್ಟಿರುತ್ತದೆ \li4 \v 16 ಜೆಬುಲೂನಿನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ, ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು. \s1 ಇಸ್ಸಾಕಾರನ ಪಾಲು \li4 \v 17 ನಾಲ್ಕನೆಯ ಚೀಟು ಇಸ್ಸಾಕಾರನ ಸಂತತಿಯವರಿಗೆ ಬಿದ್ದಿತು. \v 18 ಅವರ ಮೇರೆಯು: ಇಜ್ರೆಯೇಲ್ \li1 ಕೆಸುಲೋತ್, ಶೂನೇಮ್, \v 19 ಹಫಾರಯಿಮ್, ಶಿಯೋನ್, ಅನಾಹರತ್, \v 20 ರಬ್ಬೀತ್, ಕಿಷ್ಯೋನ್, ಎಬೆಜ್, \v 21 ರೆಮೆತ್, ಏಂಗನ್ನೀಮ್, ಏನ್ ಹದ್ದಾ, ಬೇತ್ ಪಚ್ಚೇಚ್ ಎಂಬ ತೀರಗಳನ್ನು ಒಳಗೊಂಡಿತ್ತು. \li1 \v 22 ಆ ಎಲ್ಲೆಯು ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳಿಗೆ ಸೇರಿ ಯೊರ್ದನ್ ನದಿ ತೀರದಲ್ಲಿ ಮುಗಿಯುತ್ತದೆ. \li1 ಅಲ್ಲಿ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು. \li4 \v 23 ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ, ಅವುಗಳ ಗ್ರಾಮಗಳೂ ಅವರಿಗೆ ದೊರೆತ ಪಾಲು. \s1 ಆಶೇರನ ಪಾಲು \li4 \v 24 ಚೀಟು ಬಿದ್ದ ಐದನೆಯ ಭಾಗವು ಆಶೇರನ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರ ದೊರೆಯಿತು. \v 25 ಅವರ ಮೇರೆ: \li1 ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್, \v 26 ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲ್, ಶೀಹೋರ್ ಲಿಬ್ನತ್ ಕಡೆ ಹೋಗಿ, \v 27 ಅಲ್ಲಿಂದ ಪೂರ್ವದ ಕಡೆಯಾಗಿ ಬೇತ್‌ದಾಗೋನಿಗೆ ತಿರುಗುತ್ತದೆ. ಅನಂತರ ಜೆಬುಲೂನಿಗೂ ಬೇತ್ ಏಮೆಕಿಗೆ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಯೇಲ್ ತಗ್ಗಿಗೂ ನೆಗೀಯೇಲ್ ಕಡೆ ಹಾದು, ಎಡಭಾಗದಲ್ಲಿರುವ ಕಾಬೂಲ್ ಕಡೆ ಮುಂದುವರೆಯುತ್ತದೆ. \v 28 ಅಲ್ಲಿಂದ ಅಬ್ದೋನ್\f + \fr 19:28 \fr*\fq ಅಬ್ದೋನ್ \fq*\ft ಕೆಲವು ಮೂಲ ಪ್ರತಿಗಳಲ್ಲಿ \ft*\fqa ಎಬ್ರೋನ್\fqa*\f*, ರೆಹೋಬ್, ಹಮ್ಮೋನ್, ಕಾನಾ ಹಾಗೂ ಸೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ. \v 29 ಅಲ್ಲಿಂದ ರಾಮಾ, ಟೈರ್ ಎಂಬ ಕೋಟೆಪಟ್ಟಣದವರೆಗೂ ಹೋಗುತ್ತದೆ. ಅಲ್ಲಿಂದ ಹೋಸಾ ಕಡೆ ಹೊರಟು ಮೆಡಿಟೆರಿಯನ್ ಸಮುದ್ರದ ಬಳಿ ಅಕ್ಜೀಬ್ ಮೇರೆಯ ಅಂಚಿಗೆ ಮುಗಿಯುತ್ತದೆ. \v 30 ಅದಕ್ಕೆ ಉಮ್ಮಾ, ಅಫೇಕ್ ಮತ್ತು ರೆಹೋಬ್ \li1 ಒಟ್ಟು ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು. \li4 \v 31 ಇದೇ ಆಶೇರನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ. \s1 ನಫ್ತಾಲಿಗೆ ದೊರೆತ ಭಾಗ \li4 \v 32 ಆರನೆಯ ಚೀಟು ಬಿದ್ದ ಭಾಗವು ನಫ್ತಾಲಿಯ ಗೋತ್ರದ್ದಾಗಿತ್ತು. ನಫ್ತಾಲಿಯ ಗೋತ್ರದ ಅವರ ಕುಟುಂಬಗಳ ಪ್ರಕಾರ ಪಾಲು ದೊರೆಯಿತು. \li1 \v 33 ಅವರ ಮೇರೆಯು ಹೆಲೇಫ್ ಮತ್ತು ಚಾನನ್ನೀಮ್ ಎಂಬ ಕಡೆಯಲ್ಲಿ ಇರುವ ಅಲ್ಲೋನ್ ಮರದಿಂದ, ಆದಾಮಿ ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮ್ ತನಕ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಗಿಯುತ್ತದೆ. \v 34 ಆ ಮೇರೆಯು ಪಶ್ಚಿಮಕ್ಕೆ ಅಜ್ನೋತ್ ತಾಬೋರ್ ಕಡೆಗೆ ತಿರುಗಿ, ಅಲ್ಲಿಂದ ಹುಕ್ಕೋಕ್ ಹೊರಟು, ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನ್ನೂ ಮತ್ತು ಯೆಹೂದಿಯರ ಮೇರೆಗೂ ಪೂರ್ವದಿಕ್ಕಿನಲ್ಲಿ ಯೊರ್ದನ್ ನದಿಯನ್ನು ಮುಟ್ಟಿ ಬರುವುದು. \li1 \v 35 ಇದರಲ್ಲಿರುವ ಕೋಟೆಗಳುಳ್ಳ ಪಟ್ಟಣಗಳು ಯಾವುವೆಂದರೆ: ಜಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್, \v 36 ಅದಾಮಾ, ರಾಮಾ, ಹಾಚೋರ್, \v 37 ಕೆದೆಷ್, ಎದ್ರೈ, ಎನ್ ಹಾಚೋರ್, \v 38 ಇರೋನ್, ಮಿಗ್ದಲ್ ಎಲ್, ಹೊರೇಮ್, ಬೇತ್ ಅನಾತ್ ಹಾಗೂ ಬೇತ್ ಷೆಮೆಷ್. \li1 ಮೊದಲಾದ ಹತ್ತೊಂಬತ್ತು ಕೋಟೆಪಟ್ಟಣಗಳೂ, ಅವುಗಳ ಗ್ರಾಮಗಳು. \li4 \v 39 ಇದೇ ನಫ್ತಾಲಿಯ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಸೊತ್ತಾಗಿ ಸಿಕ್ಕಿದ ಪಟ್ಟಣಗಳೂ ಅವುಗಳ ಗ್ರಾಮಗಳು. \s1 ದಾನ್ ಗೋತ್ರಕ್ಕೆ ದೊರೆತ ಭಾಗ \li4 \v 40 ಇದಲ್ಲದೆ ಏಳನೆಯ ಚೀಟು ಬಿದ್ದ ಭಾಗವು ದಾನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು. \v 41 ಅವರಿಗೆ ದೊರೆತ ಸೊತ್ತಿನ ವಿವರ: \li1 ಚೊರ್ಗಾ, ಎಷ್ಟಾವೋಲ್, ಈರ್ ಷೆಮೆಷ್, \v 42 ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ, \v 43 ಏಲೋನ್, ತಿಮ್ನಾ, ಎಕ್ರೋನ್, \v 44 ಎಲ್ತೆಕೇ, ಗಿಬ್ಬೆತೋನ್, ಬಾಲಾತ್, \v 45 ಯೆಹುದ್, ಬೆನೇ ಬೆರಕ್, ಗತ್ ರಿಮ್ಮೋನ್, \v 46 ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪ ಊರಿಗೆ ಎದುರಾದ ಮೇರೆಯು ಸಹ ದೊರಕಿತು. \li4 \v 47 ಇದಲ್ಲದೆ ದಾನನ ಗೋತ್ರದ ಮೇರೆಯು ಅವರಿಗೆ ಸಾಲದ್ದರಿಂದ ಅವರು ಹೊರಟುಹೋಗಿ ಲೆಷೆಮಿನ ಮೇಲೆ ಖಡ್ಗದಿಂದ ಯುದ್ಧಮಾಡಿ, ಅದನ್ನು ಸೋಲಿಸಿ, ಸ್ವಾಧೀನಮಾಡಿಕೊಂಡರು. ಅವರು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು. \li4 \v 48 ಈ ಪಟ್ಟಣಗಳೂ, ಅವುಗಳ ಗ್ರಾಮಗಳೂ, ದಾನ್ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ. \s1 ಯೆಹೋಶುವನಿಗೆ ಕೊಟ್ಟ ಭಾಗ \li1 \v 49 ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡ ಮೇಲೆ ಇಸ್ರಾಯೇಲರು ನೂನನ ಮಗನಾದ ಯೆಹೋಶುವನಿಗೆ ತಮ್ಮ ಮಧ್ಯದಲ್ಲಿ ಪಾಲನ್ನು ಕೊಟ್ಟರು. \v 50 ಅವನು ಕೇಳಿದ ಎಫ್ರಾಯೀಮ್ ಬೆಟ್ಟದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಯೆಹೋವ ದೇವರ ಆಜ್ಞೆಯ ಪ್ರಕಾರ ಕೊಟ್ಟರು. ಅವನು ಪಟ್ಟಣವನ್ನು ಕಟ್ಟಿಕೊಂಡು ಅಲ್ಲಿಯೇ ನೆಲೆಸಿದನು. \b \li4 \v 51 ಯಾಜಕನಾದ ಎಲಿಯಾಜರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಚೀಟುಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಹಂಚಿಕೊಳ್ಳುವ ಕೆಲಸವನ್ನು ಪೂರೈಸಿದರು. \c 20 \s1 ಆಶ್ರಯ ಪಟ್ಟಣಗಳು \p \v 1 ಯೆಹೋವ ದೇವರು ಯೆಹೋಶುವನಿಗೆ, \v 2 “ನಾನು ಮೋಶೆಯ ಮುಖಾಂತರ ನಿನಗೆ ಹೇಳಿದ ಆಶ್ರಯದ ಪಟ್ಟಣಗಳನ್ನು ಗೊತ್ತುಮಾಡಿಕೊಳ್ಳುವಂತೆ ನೀನು ಇಸ್ರಾಯೇಲರಿಗೆ ಹೇಳು. \v 3 ಯಾವನಾದರು ಅರಿಯದೆ ಅಕಸ್ಮಾತ್ತಾಗಿ ಕೈತಪ್ಪಿ ಕೊಂದುಹಾಕಿದರೆ, ಅಂಥವನು ಅಲ್ಲಿಗೆ ಓಡಿಹೋಗಲಿ. ಅವನಿಗೆ ರಕ್ತದ ಸೇಡು ತೀರಿಸುವವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರಲಿ. \v 4 ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು, ಪಟ್ಟಣದ ಬಾಗಿಲ ದ್ವಾರದಲ್ಲಿ ನಿಂತುಕೊಂಡು, ಆ ಪಟ್ಟಣದ ಹಿರಿಯರ ಮುಂದೆ ತನ್ನ ವ್ಯಾಜ್ಯವನ್ನು ತಿಳಿಸಬೇಕು. ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಳ್ಳಲಿ. ಅವರು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಲಿ. \v 5 ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ, ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು. ಏಕೆಂದರೆ ಅವನು ತನ್ನ ನೆರೆಯವನನ್ನು ಅಕಸ್ಮಾತ್ತಾಗಿ ಕೊಂದನು ಮತ್ತು ಪೂರ್ವದಲ್ಲಿ ಅವನ ಬಗ್ಗೆ ದ್ವೇಷ ಇರಲಿಲ್ಲ. \v 6 ಇದಲ್ಲದೆ ಅವನು ನ್ಯಾಯ ವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆ ದಿವಸಗಳಲ್ಲಿ ಇರುವ ಮಹಾಯಾಜಕನು ಮರಣ ಹೊಂದುವವರೆಗೂ ಆ ಪಟ್ಟಣದಲ್ಲೇ ವಾಸವಾಗಿರಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿ ಹೋದ ತನ್ನ ಪಟ್ಟಣಕ್ಕೂ, ತನ್ನ ಮನೆಗೂ ತಿರುಗಿಬರಬಹುದು,” ಎಂದು ಹೇಳಿದರು. \p \v 7 ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು. \v 8 ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು. \v 9 ಕೈತಪ್ಪಿ ಅರಿಯದೆ ಅಕಸ್ಮಾತ್ತಾಗಿ ಕೊಂದವನು ಯಾವನಾದರೂ ನ್ಯಾಯಸಭೆಯ ಮುಂದೆ ಬಂದು ನಿಲ್ಲುವ ತನಕ, ಸೇಡು ತೀರಿಸಿಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿಹೋಗುವುದಕ್ಕೆ ಇಸ್ರಾಯೇಲರೆಲ್ಲರಿಗೂ, ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲಾದ ಪಟ್ಟಣಗಳು ಇವೇ. \c 21 \s1 ಲೇವಿಯರಿಗಾಗಿ ಪಟ್ಟಣಗಳು \p \v 1 ಲೇವಿ ಗೋತ್ರದ ಹಿರಿಯರು, ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲರ ಗೋತ್ರಗಳ ಹಿರಿಯರ ಬಳಿಗೂ ಯಾಜಕನಾದ ಎಲಿಯಾಜರನ ಬಳಿಗೂ ಬಂದರು. \v 2 ಅವರು ಕಾನಾನ್ ದೇಶದ ಶೀಲೋವಿನಲ್ಲಿ ಅವರನ್ನು ಸಂಧಿಸಿ, “ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ್ದಾರೆ,” ಎಂದರು. \b \li4 \v 3 ಹಾಗೆಯೇ ಇಸ್ರಾಯೇಲರು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಯೆಹೋವ ದೇವರ ಆಜ್ಞೆಯ ಪ್ರಕಾರ ಪಟ್ಟಣಗಳನ್ನೂ ಗೋಮಾಳಗಳನ್ನೂ ಕೊಟ್ಟರು. ಅವುಗಳ ವಿವರ: \b \li1 \v 4 ಕೊಹಾತ್ಯರ ಗೋತ್ರಗಳಿಗೆ ಚೀಟು ಬಂದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೆಹೂದದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ, ಬೆನ್ಯಾಮೀನನ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು. \li1 \v 5 ಕೊಹಾತ್ಯರಿಗೆ ಎಫ್ರಾಯೀಮನ ಗೋತ್ರದಲ್ಲಿಯೂ, ದಾನನ ಗೋತ್ರದಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹತ್ತು ಪಟ್ಟಣಗಳು ಚೀಟಿಯಿಂದ ದೊರಕಿದವು. \li1 \v 6 ಗೇರ್ಷೋನ್ಯರಿಗೆ ಇಸ್ಸಾಕಾರನ ಗೋತ್ರದಲ್ಲಿಯೂ, ಆಶೇರನ ಗೋತ್ರದಲ್ಲಿಯೂ, ನಫ್ತಾಲಿಯ ಗೋತ್ರದಲ್ಲಿಯೂ, ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು. \li1 \v 7 ಇದಲ್ಲದೆ ಮೆರಾರೀಯರಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ, ಗಾದನ ಗೋತ್ರದಲ್ಲಿಯೂ, ಜೆಬುಲೂನನ ಗೋತ್ರದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು. \b \li4 \v 8 ಈ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗೋಮಾಳಗಳನ್ನೂ ಇಸ್ರಾಯೇಲರು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ, ಲೇವಿಯರಿಗೆ ಚೀಟು ಹಾಕಿಕೊಟ್ಟರು. \b \li1 \v 9 ಅವರು ಯೆಹೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರದಲ್ಲಿಯೂ ಕೆಲವು ಪಟ್ಟಣಗಳನ್ನು ಕೊಟ್ಟರು. \v 10 ಲೇವಿಯರಿಗೆ ಮೊದಲನೆಯ ಚೀಟು ಬಿದ್ದ ಕಾರಣ, ಲೇವಿ ಗೋತ್ರಕ್ಕೆ ಸೇರಿದ ಕೊಹಾತ್ಯರಾದ ಆರೋನನ ಸಂತತಿಯರಿಗೆ ಯೆಹೂದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ ಕೂಡಲಾದ ಪಟ್ಟಣಗಳ ವಿವರ: \li2 \v 11 ಯೆಹೂದದ ಬೆಟ್ಟಗಳಲ್ಲಿರುವ ಅನಾಕನ ಪಿತೃವಾದ ಕಿರ್ಯತ್ ಅರ್ಬನ ಹೆಸರಿದ್ದ ಪಟ್ಟಣವಾದ ಹೆಬ್ರೋನನ್ನೂ, ಅದರ ಸುತ್ತಲಿರುವ ಗೋಮಾಳಗಳನ್ನೂ ಅವರಿಗೆ ಕೊಟ್ಟರು. \v 12 ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೂ ಬಾಧ್ಯತೆಯಾಗಿ ಕೊಟ್ಟರು. \v 13 ಹೀಗೆಯೇ ಯಾಜಕನಾದ ಆರೋನನ ವಂಶದವರಿಗೆ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಕೊಟ್ಟರು. ಲಿಬ್ನಾವನ್ನೂ \v 14 ಯತ್ತೀರನ್ನೂ ಎಷ್ಟೆಮೋವನ್ನೂ \v 15 ಹೋಲೋನನ್ನೂ ದೆಬೀರನ್ನೂ \v 16 ಆಯಿನ್, ಯುಟ್ಟಾ, ಬೇತ್ ಷೆಮೆಷ್ ಎಂಬ ಆ ಎರಡು ಗೋತ್ರಗಳಿಂದ ಈ ಒಂಬತ್ತು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು. \li1 \v 17 ಇದಲ್ಲದೆ ಬೆನ್ಯಾಮೀನನ ಗೋತ್ರದಲ್ಲಿ \li2 ಗಿಬ್ಯೋನನ್ನೂ ಗೆಬಾನನ್ನೂ \v 18 ಅನಾತೋತನ್ನೂ ಅಲ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು. \li4 \v 19 ಯಾಜಕನಾದ ಆರೋನನ ವಂಶದವರಿಗೆ ಒಟ್ಟು ಹದಿಮೂರು ಪಟ್ಟಣಗಳೂ, ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \b \li4 \v 20 ಇದಲ್ಲದೆ ಲೇವಿಯರಾದ ಕೊಹಾತ್ಯನ ಗೋತ್ರದ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯೀಮನ ಗೋತ್ರದಲ್ಲಿ ಚೀಟಿಯಿಂದ ದೊರಕಿದ ಪಟ್ಟಣಗಳ ವಿವರ: \li1 \v 21 ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯೀಮನ ಬೆಟ್ಟಗಳಲ್ಲಿರುವ, \li2 ಶೆಕೆಮನ್ನೂ ಗೆಜೆರನ್ನೂ \v 22 ಕಿಬ್‌ಚೈಮ್ ಮತ್ತು ಬೇತ್ ಹೋರೋನ್ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \li1 \v 23 ಇದಲ್ಲದೆ ದಾನ್ಯನ ಗೋತ್ರದಲ್ಲಿ, \li2 ಎಲ್ತೆಕೇಯನ್ನೂ ಗಿಬ್ಬೆತೋನನ್ನೂ \v 24 ಅಯ್ಯಾಲೋನನ್ನೂ ಗತ್ ರಿಮ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \li1 \v 25 ಮನಸ್ಸೆಯ ಅರ್ಧಗೋತ್ರದಲ್ಲಿ, \li2 ತಾನಕನ್ನೂ ಗತ್ ರಿಮ್ಮೋನನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \li4 \v 26 ಹೀಗೆ ಉಳಿದಂಥ ಕೊಹಾತ್ಯನ ಗೋತ್ರಗಳಲ್ಲಿ ಹತ್ತು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \b \li4 \v 27 ಲೇವಿ ಗೋತ್ರದ ಗೇರ್ಷೋನ್ಯರಿಗೆ \li1 ಮನಸ್ಸೆಯ ಅರ್ಧಗೋತ್ರದಲ್ಲಿ \li2 ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿನಲ್ಲಿರುವ ಗೋಲಾನನ್ನೂ ಬೆಯೆಷ್ಟೆರಾವನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \li1 \v 28 ಇದಲ್ಲದೆ ಇಸ್ಸಾಕಾರನ ಗೋತ್ರದ ಸೊತ್ತಿನಿಂದ \li2 ಕಿಷ್ಯೋನನ್ನೂ ದಾಬೆರತನ್ನೂ \v 29 ಯರ್ಮೂತ್ ಮತ್ತು ಏಂಗನ್ನೀಮನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \li1 \v 30 ಆಶೇರನ ಗೋತ್ರದ ಸೊತ್ತಿನಿಂದ \li2 ಮಿಷಾಲನ್ನೂ, ಅಬ್ದೋನನ್ನೂ \v 31 ಹೆಲ್ಕತನ್ನೂ ರೆಹೋಬನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \li1 \v 32 ನಫ್ತಾಲಿಯ ಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ \li2 ಗಲಿಲಾಯದಲ್ಲಿರುವ ಕೆದೆಷನ್ನೂ ಹಮ್ಮೋತ್ ದೋರನ್ನೂ ಕರ್ತಾನನ್ನೂ ಹೀಗೆ ಮೂರು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \li4 \v 33 ಗೇರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಹದಿಮೂರು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \b \li4 \v 34 ಉಳಿದ ಲೇವಿಯರಾದ ಮೆರಾರೀಯ ಕುಟುಂಬಗಳಿಗೆ \li1 ಜೆಬುಲೂನನ ಗೋತ್ರದ ಸೊತ್ತಿನಿಂದ \li2 ಯೊಕ್ನೆಯಾಮ್, ಕರ್ತಾ, \v 35 ದಿಮ್ನಾ, ನಹಲಾಲ್, ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \li1 \v 36 ಇದಲ್ಲದೆ ರೂಬೇನನ ಗೋತ್ರದಲ್ಲಿ \li2 ಬೆಚೆರನ್ನೂ ಯಹಚವನ್ನೂ \v 37 ಕೆದೇಮೋತನ್ನೂ ಮೇಫಾತನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \li1 \v 38 ಗಾದ್ಯರ ಗೋತ್ರದಲ್ಲಿ, \li2 ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನ ರಾಮೋತನ್ನೂ, ಮಹನಯಿಮನ್ನೂ, \v 39 ಹೆಷ್ಬೋನನ್ನೂ ಯಜ್ಜೇರನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. \li4 \v 40 ಹೀಗೆಯೇ ಲೇವಿ ಗೋತ್ರದ ಉಳಿದಂಥ ಮೆರಾರೀಯರ ಕುಟುಂಬಗಳ ಪ್ರಕಾರ ಚೀಟಿಯಿಂದ ದೊರೆತ ಪಟ್ಟಣಗಳು ಹನ್ನೆರಡು. \b \li4 \v 41 ಇಸ್ರಾಯೇಲರ ನಡುವೆ ಲೇವಿಯರಿಗೆ ಒಟ್ಟು ನಾಲ್ವತ್ತೆಂಟು ಪಟ್ಟಣಗಳು ಅವುಗಳ ಗೋಮಾಳ ಸಹಿತವಾಗಿ ದೊರಕಿದವು. \v 42 ಈ ಪಟ್ಟಣಗಳ ಸುತ್ತಲೂ ಪ್ರತಿ ಒಂದಕ್ಕೂ ಗೋಮಾಳಗಳಿದ್ದವು. ಎಲ್ಲ ಪಟ್ಟಣಗಳಿಗೂ ಹೀಗೆಯೇ ಇದ್ದವು. \b \p \v 43 ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು. \v 44 ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು. \v 45 ಯೆಹೋವ ದೇವರು ಇಸ್ರಾಯೇಲರಿಗೆ ಹೇಳಿದ ಅತಿ ಶ್ರೇಷ್ಠವಾಗ್ದಾನಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ. ಎಲ್ಲಾ ನೆರವೇರಿದವು. \c 22 \s1 ಪೂರ್ವದ ಗೋತ್ರಗಳವರು ಹಿಂದಿರುಗಿದ್ದು \p \v 1 ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧ ಗೋತ್ರದವರನ್ನೂ ಕರಿಸಿ ಅವರಿಗೆ, \v 2 “ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಗೊಂಡು, ನಾನು ನಿಮಗೆ ಆಜ್ಞಾಪಿಸಿದ ಎಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾಗಿದ್ದೀರಿ. \v 3 ನೀವು ಬಹಳ ದಿವಸಗಳಿಂದ ಇಂದಿನವರೆಗೂ ನಿಮ್ಮ ಸಹೋದರರನ್ನು ಕೈಬಿಡದೆ, ನಿಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಅಪ್ಪಣೆಯನ್ನು ಪಾಲಿಸುತ್ತಾ ಬಂದಿದ್ದೀರಿ. \v 4 ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ. \v 5 ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು. \p \v 6 ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿಬಿಟ್ಟಾಗ ಅವರು ತಮ್ಮ ಗುಡಾರಗಳಿಗೆ ಹೋದರು. \v 7 ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸೊತ್ತನ್ನು ಕೊಟ್ಟಿದ್ದನು. ಇದಲ್ಲದೆ ಅವರ ಅರ್ಧ ಗೋತ್ರಕ್ಕೆ ಯೆಹೋಶುವನು ಸಹ ಯೊರ್ದನ್ ನದಿ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸೊತ್ತನ್ನು ಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಅವರ ಗುಡಾರಗಳಿಗೆ ಕಳುಹಿಸುವಾಗ ಅವರನ್ನು ಆಶೀರ್ವದಿಸಿ ಅವರಿಗೆ, \v 8 “ನೀವು ಬಹು ಆಸ್ತಿಯುಳ್ಳವರಾಗಿ ಪಶುಗಳು, ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂದಿರುಗಿ, ನಿಮ್ಮ ಗುಡಾರಗಳಿಗೆ ಹೋಗಿರಿ. ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ,” ಎಂದನು. \p \v 9 ರೂಬೇನನ ಗೋತ್ರದವರು, ಗಾದ್ಯ ಗೋತ್ರದವರು, ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು, ಯೆಹೋವ ದೇವರು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ತಾವು ವಶಮಾಡಿಕೊಂಡ ತಮ್ಮ ಗಿಲ್ಯಾದ್ ನಾಡಿಗೆ ಹೋದರು. \p \v 10 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದಲ್ಲಿರುವ ಯೊರ್ದನ್ ನದಿ ಪ್ರಾಂತಕ್ಕೆ ಬಂದಾಗ, ಅಲ್ಲಿ ದೊಡ್ಡ ಬಲಿಪೀಠವನ್ನು ಕಟ್ಟಿದರು. \v 11 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲರು ದಾಟಿಬಂದ ಯೊರ್ದನ್ ನದಿ ಪ್ರಾಂತದಲ್ಲಿ ಬಲಿಪೀಠವನ್ನು ಕಟ್ಟಿದರೆಂಬ ಸುದ್ದಿ ಇಸ್ರಾಯೇಲರಿಗೆ ಮುಟ್ಟಿತು. \v 12 ಇಸ್ರಾಯೇಲರು ಅದನ್ನು ಕೇಳಿದಾಗ, ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಶೀಲೋವಿನಲ್ಲಿ ಕೂಡಿದರು. \p \v 13 ಅವರು ಗಿಲ್ಯಾದ್ ನಾಡಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಯಾಜಕ ಎಲಿಯಾಜರನ ಮಗ ಫೀನೆಹಾಸನನ್ನೂ \v 14 ಅವನ ಸಂಗಡ ಇಸ್ರಾಯೇಲಿನ ಗೋತ್ರದ ಪ್ರತಿಯೊಂದು ಗೋತ್ರದಿಂದ ಒಬ್ಬೊಬ್ಬನನ್ನು ಅಂದರೆ ಮುಖ್ಯಸ್ಥನ ಪ್ರಕಾರ ಹತ್ತು ಮಂದಿ ಪ್ರಧಾನರನ್ನೂ ಕಳುಹಿಸಿದರು. \p \v 15 ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು, \v 16 “ಯೆಹೋವ ದೇವರ ಸರ್ವ ಸಮೂಹವು ಹೇಳುವುದೇನೆಂದರೆ: ‘ನೀವು ಈ ಹೊತ್ತು ಯೆಹೋವ ದೇವರ ಕಡೆಗೆ ತಿರುಗದೆ, ಅವರಿಗೆ ವಿರೋಧವಾಗಿ ತಿರುಗಿಬೀಳುವ ಹಾಗೆ ನಿಮಗೆ ಒಂದು ಬಲಿಪೀಠವನ್ನು ಕಟ್ಟಿಕೊಂಡು, ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು? \v 17 ಪೆಯೋರದವರ ದುಷ್ಟತನವು ನಮಗೆ ಅಲ್ಪವೋ? ಯೆಹೋವ ದೇವರ ಜನರ ಮೇಲೆ ವ್ಯಾಧಿ ಬಂದಿದ್ದರೂ ಈ ದಿನದವರೆಗೂ ಆ ಪಾಪದಿಂದ ನಾವು ಶುದ್ಧವಾಗಲಿಲ್ಲ. \v 18 ನೀವು ಈಗ ಯೆಹೋವ ದೇವರ ಕಡೆಯಿಂದ ತಿರುಗಿ ಹೋಗುತ್ತೀರಲ್ಲಾ? \p “ ‘ಈ ಹೊತ್ತು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬಿದ್ದರೆ, ನಾಳೆ ಅವರು ಇಸ್ರಾಯೇಲ್ ಜನಾಂಗದ ಮೇಲೆ ರೌದ್ರವುಳ್ಳವರಾಗುವರು. \v 19 ನೀವು ಸ್ವಾಧೀನಪಡಿಸುವ ನಾಡು ಅಶುದ್ಧವಾಗಿದ್ದರೆ, ಯೆಹೋವ ದೇವರ ಗುಡಾರವಿರುವ ಯೆಹೋವ ದೇವರ ನಾಡಿಗೆ ನೀವು ಬಂದು, ನಮ್ಮ ಮಧ್ಯದಲ್ಲಿ ಸೊತ್ತನ್ನು ತೆಗೆದುಕೊಳ್ಳಿರಿ. ಯೆಹೋವ ದೇವರ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವುದರಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿ ಬೀಳಬೇಡಿರಿ. ನಮಗೆ ವಿರೋಧವಾಗಿಯೂ ತಿರುಗಿ ಬೀಳಬೇಡಿರಿ. \v 20 ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’ ” ಎಂದು ಹೇಳಿದರು. \p \v 21 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರಿಗೆ ಉತ್ತರವಾಗಿ, \v 22 “ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ. \v 23 ನಾವು ಯೆಹೋವ ದೇವರ ಕಡೆಗೆ ತಿರುಗಿಕೊಂಡು ದಹನಬಲಿಗಳನ್ನಾದರೂ, ಧಾನ್ಯ ಸಮರ್ಪಣೆಯನ್ನಾದರೂ, ಸಮಾಧಾನದ ಸಮರ್ಪಣೆಗಳನ್ನಾದರೂ, ಅದರ ಮೇಲೆ ಅರ್ಪಿಸುವುದಕ್ಕೋಸ್ಕರ ಬಲಿಪೀಠವನ್ನು ನಮಗಾಗಿ ಕಟ್ಟಿದ್ದರೆ, ಯೆಹೋವ ದೇವರು ಅದನ್ನು ವಿಚಾರಿಸಲಿ. \p \v 24 “ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವ ದೇವರಲ್ಲಿ ನಿಮಗೇನು ಪಾಲಿದೆ? \v 25 ರೂಬೇನ್ಯರೇ, ಗಾದ್ಯರೇ ಯೆಹೋವ ದೇವರು ನಿಮಗೂ ನಮಗೂ ನಡುವೆ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದರಿಂದ ಯೆಹೋವ ದೇವರ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲ,’ ಎಂದು ಹೇಳಿ, ನಮ್ಮ ಮಕ್ಕಳನ್ನು ಯೆಹೋವ ದೇವರಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು. \p \v 26 “ಆದ್ದರಿಂದ, ‘ನಾವು ಸಿದ್ಧರಾಗಿ ಬಲಿಪೀಠವನ್ನು ಕಟ್ಟೋಣ ಎಂದು ಹೇಳಿದ ಕಾರಣ, ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕೆ ಅಲ್ಲ.’ \v 27 ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ. \p \v 28 “ಇದಲ್ಲದೆ ನಾವು, ‘ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತತಿಯವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ: ಯೆಹೋವ ದೇವರ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿರಿ, ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ. ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು. \p \v 29 “ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು. \p \v 30 ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರೂ ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರು ಹೇಳಿದ ಮಾತುಗಳನ್ನು ಕೇಳಿದಾಗ ಅವರಿಗೆ ಮೆಚ್ಚಿಕೆಯಾಯಿತು. \v 31 ಯಾಜಕನಾಗಿರುವ ಎಲಿಯಾಜರನ ಪುತ್ರ ಫೀನೆಹಾಸನು ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರಿಗೆ, “ನೀವು ಯೆಹೋವ ದೇವರಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಅವರು ನಮ್ಮ ಮಧ್ಯದಲ್ಲಿರುತ್ತಾರೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವ ದೇವರ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ,” ಎಂದನು. \p \v 32 ಯಾಜಕನಾದ ಎಲಿಯಾಜರನ ಮಗ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನ್ಯರನ್ನೂ ಗಾದ್ಯರನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲರ ಬಳಿಗೆ ತಿರುಗಿಬಂದು, ಅವರಿಗೆ ವರ್ತಮಾನವನ್ನು ತಿಳಿಸಿದರು. \v 33 ಆ ಮಾತನ್ನು ಇಸ್ರಾಯೇಲರು ಕೇಳಿ ಸಂತೋಷಪಟ್ಟು ದೇವರನ್ನು ಕೊಂಡಾಡಿದರು. ಆದ್ದರಿಂದ ಅವರು ರೂಬೇನ್ಯರೂ ಗಾದ್ಯರೂ ನಿವಾಸವಾಗಿದ್ದ ನಾಡಿನ ಮೇಲೆ ಯುದ್ಧಮಾಡಿ ಅವರನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು. \p \v 34 ರೂಬೇನ್ಯರೂ ಗಾದ್ಯರೂ ಆ ಬಲಿಪೀಠಕ್ಕೆ, “ನಮ್ಮ ನಡುವೆ ಯೆಹೋವ ದೇವರೇ ದೇವರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ,\f + \fr 22:34 \fr*\fq ಸಾಕ್ಷಿ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಏದ್\fqa*\f*” ಎಂದು ಹೆಸರಿಟ್ಟರು. \c 23 \s1 ನಾಯಕರಿಗೆ ಯೆಹೋಶುವನ ವಿದಾಯ \p \v 1 ಯೆಹೋವ ದೇವರು ಇಸ್ರಾಯೇಲರನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅವರಿಗೆ ವಿಶ್ರಾಂತಿಕೊಟ್ಟ ಬಹಳ ದಿವಸಗಳ ತರುವಾಯ ಯೆಹೋಶುವನ ದಿವಸಗಳು ಗತಿಸಿ ವೃದ್ಧನಾದನು. \v 2 ಒಂದು ದಿನ ಅವನು ಸಮಸ್ತ ಇಸ್ರಾಯೇಲರನ್ನೂ ಅವರ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿ ಅವರಿಗೆ, “ನಾನು ದಿನತುಂಬಿದ ವೃದ್ಧನಾಗಿದ್ದೇನೆ. \v 3 ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿದ ಎಲ್ಲವನ್ನೂ ನೋಡಿದ್ದೀರಿ. ನಿಮಗೋಸ್ಕರವಾಗಿ ಯುದ್ಧ ಮಾಡಿದವರು ನಿಮ್ಮ ದೇವರಾದ ಯೆಹೋವ ದೇವರು. \v 4 ನಾನು ಯೊರ್ದನ್ ನದಿ ಮೊದಲುಗೊಂಡು ಪಶ್ಚಿಮಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ರಾಷ್ಟ್ರಗಳನ್ನು ಸೋಲಿಸಿ, ಉಳಿದ ಸಕಲ ನಾಡನ್ನು ನಿಮ್ಮ ಗೋತ್ರಗಳಿಗೆ ಸೊತ್ತಾಗಿ ಕೊಟ್ಟಿದ್ದೇನೆ. \v 5 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಉಳಿದವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು, ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿ ಬಿಡುವರು. ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. \p \v 6 “ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ. \v 7 ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವರುಗಳ ಹೆಸರುಗಳನ್ನು ಸ್ಮರಿಸಲೂ ಬೇಡಿರಿ. ಅವುಗಳ ಮೇಲೆ ಆಣೆಯೂ ಇಡಬೇಡಿರಿ. ಅವುಗಳಿಗೆ ಆರಾಧನೆ ಮಾಡಬಾರದು. ಅಡ್ಡಬೀಳಲೂಬಾರದು. \v 8 ಆದರೆ, ಈವರೆಗೂ ಹೇಗೋ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿರಿ. \p \v 9 “ಯೆಹೋವ ದೇವರು ನಿಮ್ಮ ಮುಂದೆ ಬಲವಾದ ದೊಡ್ಡ ರಾಷ್ಟ್ರಗಳನ್ನು ಸಹ ಹೊರಡಿಸಿಬಿಟ್ಟರು. ನಿಮ್ಮ ಮುಂದೆ ಈವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು. \v 10 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು. \v 11 ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವ ದೇವರನ್ನೇ ಪ್ರೀತಿಸಿರಿ. \p \v 12 “ಆದರೆ, ನೀವು ದೇವರಿಂದ ತಿರುಗಿಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಂಡು ಅವರೊಂದಿಗೆ ಮದುವೆ ಮಾಡಿಕೊಟ್ಟರೆ, ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ, \v 13 ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ. \p \v 14 “ಭೂನಿವಾಸಿಗಳೆಲ್ಲರು ಹೋಗುವ ಮಾರ್ಗವಾಗಿ ಇಂದು ನಾನು ಹೋಗಬೇಕಾಗಿದೆ. ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೆಯ ವಾಗ್ದಾನಗಳಲ್ಲಿ ಒಂದೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ. ಅವುಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು. \v 15 ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಒಳ್ಳೆಯ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ \v 16 ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು. \c 24 \s1 ಶೆಕೆಮಿನಲ್ಲಿ ಒಡಂಬಡಿಕೆಯ ನವೀಕರಣ \p \v 1 ಅನಂತರ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ, ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿದನು. ಅವರು ದೇವರ ಮುಂದೆ ಬಂದು ನಿಂತರು. \p \v 2 ಯೆಹೋಶುವನು ಅವರೆಲ್ಲರಿಗೂ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ‘ಪೂರ್ವದಲ್ಲಿ ನಿಮ್ಮ ಮೂಲ ಪುರುಷರಾದ ಅಬ್ರಹಾಮನಿಗೂ ನಾಹೋರನಿಗೂ ತಂದೆಯಾದ ತೆರಹನು ಯೂಫ್ರೇಟೀಸ್ ನದಿಯ ಆಚೆ ವಾಸವಾಗಿದ್ದಾಗ ಅವರೆಲ್ಲರೂ ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು. \v 3 ಆದರೆ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿ ಇದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ಕರೆದುಕೊಂಡು ಬಂದು, ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ, ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು. ಅವನಿಗೆ ಇಸಾಕನನ್ನು ಕೊಟ್ಟೆನು. \v 4 ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯೀರ್ ಪರ್ವತದ ನಾಡನ್ನು ಸೊತ್ತಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಈಜಿಪ್ಟಿಗೆ ಹೋದರು. \p \v 5 “ ‘ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ, ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಈಜಿಪ್ಟನ್ನು ಬಾಧಿಸಿದೆನು. ತರುವಾಯ ನಿಮ್ಮನ್ನು ಹೊರಗೆ ತಂದೆನು. \v 6 ನಾನು ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಈಜಿಪ್ಟಿನವರು ರಥಗಳ ಮತ್ತು ರಾಹುತರ ಸಂಗಡ ನಿಮ್ಮ ಪೂರ್ವಜರನ್ನು ಕೆಂಪು ಸಮುದ್ರದವರೆಗೂ ಹಿಂದಟ್ಟಿದರು. \v 7 ಆಗ, ಅವರು ಯೆಹೋವ ದೇವರಾಗಿರುವ ನನಗೆ ಕೂಗಿದಾಗ ನಾನು ನಿಮಗೂ ಈಜಿಪ್ಟಿನವರಿಗೂ ಮಧ್ಯದಲ್ಲಿ ಅಂಧಕಾರವನ್ನು ಇಟ್ಟು, ಸಮುದ್ರವನ್ನು ಅವರ ಮೇಲೆ ಬರಮಾಡಿ, ಅವರನ್ನು ಮುಚ್ಚಿಬಿಟ್ಟೆನು. \p \v 8 “ ‘ನಾನು ಈಜಿಪ್ಟಿನಲ್ಲಿ ಮಾಡಿದ್ದನ್ನು ನಿಮ್ಮ ಕಣ್ಣುಗಳು ಕಂಡವು. ಮರುಭೂಮಿಯಲ್ಲಿ ಬಹುಕಾಲದವರೆಗೆ ವಾಸವಾಗಿದ್ದೀರಿ. ಅನಂತರ ಯೊರ್ದನ್ ನದಿ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ, ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು. \v 9 ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗನಾದ ಬಾಲಾಕನು ಎದ್ದು, ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು. \v 10 ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು. \p \v 11 “ ‘ನೀವು ಯೊರ್ದನ್ ನದಿಯನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿಗಳೂ ನಿಮ್ಮ ಸಂಗಡ ಯುದ್ಧಮಾಡಿದರು. ಹಾಗೆಯೇ ಅಮೋರಿಯರೂ ಪೆರಿಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದೆನು. \v 12 ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ. \v 13 ನೀವು ವ್ಯವಸಾಯಮಾಡದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು. ನೀವು ಅವುಗಳಲ್ಲಿ ವಾಸವಾಗಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿತೋಟಗಳ ಫಲವನ್ನೂ ಹಿಪ್ಪೆತೋಪುಗಳ ಫಲವನ್ನೂ ಅನುಭವಿಸುತ್ತಿದ್ದೀರಿ,’ ಎಂಬುದೇ. \p \v 14 “ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ. \v 15 ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು. \p \v 16 ಜನರು ಯೆಹೋಶುವನಿಗೆ ಉತ್ತರವಾಗಿ, “ನಾವು ಯೆಹೋವ ದೇವರನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ. \v 17 ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು. \v 18 ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನರನ್ನು ಯೆಹೋವ ದೇವರು ನಮ್ಮ ಮುಂದೆ ಹೊರಡಿಸಿಬಿಟ್ಟರು. ಆದ್ದರಿಂದ ನಾವು ಯೆಹೋವ ದೇವರನ್ನೇ ಸೇವಿಸುವೆವು. ಏಕೆಂದರೆ ಅವರು ನಮ್ಮ ದೇವರು,” ಎಂದರು. \p \v 19 ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸಲಾರಿರಿ. ಏಕೆಂದರೆ ಅವರು ಪರಿಶುದ್ಧ ದೇವರು, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ತೀಕ್ಷ್ಣ ದೇವರು. ಅವರು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸರು. \v 20 ನೀವು ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿದರೆ, ಅವರು ನಿಮಗೆ ಒಳ್ಳೆಯದನ್ನು ಮಾಡದೆ ಕೇಡನ್ನು ಬರಮಾಡಿ ನಿಮ್ಮನ್ನು ದಹಿಸಿಬಿಡುವರು,” ಎಂದು ಹೇಳಿದನು. \p \v 21 ಅದಕ್ಕೆ ಜನರು ಯೆಹೋಶುವನಿಗೆ, “ಇಲ್ಲ! ನಾವು ಯೆಹೋವ ದೇವರನ್ನೇ ಸೇವಿಸುವೆವು,” ಎಂದರು. \p \v 22 ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸುವುದಕ್ಕೆ ಅವರನ್ನು ಆಯ್ದುಕೊಂಡಿರುವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ,” ಎಂದನು. \p ಅದಕ್ಕವರು, “ಹೌದು, ನಾವೇ ಸಾಕ್ಷಿಗಳಾಗಿದ್ದೇವೆ,” ಎಂದರು. \p \v 23 ಆಗ ಯೆಹೋಶುವನು ಅವರಿಗೆ, “ಹಾಗಾದರೆ, ಈಗ ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೊರೆದು, ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಸಿರಿ,” ಎಂದನು. \p \v 24 ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಸೇವೆಸಲ್ಲಿಸಿ, ಅವರ ಮಾತಿಗೆ ವಿಧೇಯರಾಗುವೆವು,” ಎಂದರು. \p \v 25 ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು. \v 26 ಈ ಮಾತುಗಳನ್ನು ಯೆಹೋಶುವನು ದೇವರ ನಿಯಮದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ಎತ್ತಿ, ಅದನ್ನು ಯೆಹೋವ ದೇವರ ಪರಿಶುದ್ಧಸ್ಥಳದ ಬಳಿಯಲ್ಲಿ ಇದ್ದ ಏಲಾ ಮರದ ಕೆಳಗೆ ನೆಟ್ಟನು. \p \v 27 ಯೆಹೋಶುವನು ಜನರಿಗೆ, “ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಏಕೆಂದರೆ ಇದು ಯೆಹೋವ ದೇವರು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿದೆ. ಆದ್ದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ,” ಎಂದು ಹೇಳಿದನು. \p \v 28 ಹೀಗೆ ಯೆಹೋಶುವನು ಜನರನ್ನು ಅವರವರ ಸೊತ್ತಿನ ಕಡೆಗೆ ಕಳುಹಿಸಿಬಿಟ್ಟನು. \s1 ಯೆಹೋಶುವನ ಮರಣ \p \v 29 ಇವುಗಳಾದ ತರುವಾಯ ನೂನನ ಮಗ ಯೆಹೋಶುವನೆಂಬ ಯೆಹೋವ ದೇವರ ಸೇವಕನು ನೂರಹತ್ತು ವರುಷ ವಯಸ್ಸಿನವನಾಗಿ ಮರಣಹೊಂದಿದನು. \v 30 ಅವನನ್ನು ಎಫ್ರಾಯೀಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ ಸೆರಹ ಎಂಬ ಅವನ ಸೊತ್ತಿನ ಮೇರೆಯಲ್ಲಿ ಹೂಳಿಟ್ಟರು. \p \v 31 ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು. \p \v 32 ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು. \p \v 33 ಆರೋನನ ಮಗ ಎಲಿಯಾಜರನೂ ಮರಣಹೊಂದಿದನು. ಅವನನ್ನು ಅವನ ಮಗ ಫೀನೆಹಾಸನಿಗೆ ಎಫ್ರಾಯೀಮ್ ಬೆಟ್ಟದ ದೇಶದಲ್ಲಿ ಕೊಡಲಾದ ಗಿಬೆಯದಲ್ಲಿ ಸಮಾಧಿಮಾಡಿದರು.