\id MAT - Biblica® Open Kannada Contemporary Version \ide UTF-8 \h ಮತ್ತಾಯ \toc1 ಮತ್ತಾಯನು ಬರೆದ ಸುವಾರ್ತೆ \toc2 ಮತ್ತಾಯ \toc3 ಮತ್ತಾಯ \mt1 ಮತ್ತಾಯನು \mt2 ಬರೆದ ಸುವಾರ್ತೆ \c 1 \s1 ಯೇಸುಸ್ವಾಮಿಯ ವಂಶಾವಳಿ \li4 \v 1 ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು: \b \li1 \v 2 ಅಬ್ರಹಾಮನು ಇಸಾಕನ ತಂದೆ, \li1 ಇಸಾಕನು ಯಾಕೋಬನ ತಂದೆ, \li1 ಯಾಕೋಬನು ಯೂದ ಮತ್ತು ಅವನ ಅಣ್ಣ ತಮ್ಮಂದಿರ ತಂದೆ, \li1 \v 3 ಯೂದನು ಪೆರೆಸ ಮತ್ತು ಜೆರಹನ ತಂದೆ, ತಾಮಾರಳು ಇವರ ತಾಯಿ, \li1 ಪೆರೆಸನು ಹೆಚ್ರೋನನ ತಂದೆ, \li1 ಹೆಚ್ರೋನನು ಅರಾಮನ ತಂದೆ, \li1 \v 4 ಅರಾಮನು ಅಮ್ಮೀನಾದಾಬನ ತಂದೆ, \li1 ಅಮ್ಮೀನಾದಾಬನು ನಹಶೋನನ ತಂದೆ, \li1 ನಹಶೋನನು ಸಲ್ಮೋನನ ತಂದೆ, \li1 \v 5 ಸಲ್ಮೋನನು ಬೋವಜನ ತಂದೆ, ಬೋವಜನ ತಾಯಿ ರಾಹಾಬಳು, \li1 ಬೋವಜನು ಓಬೇದನ ತಂದೆ, ಓಬೇದನ ತಾಯಿ ರೂತಳು, \li1 ಓಬೇದನು ಇಷಯನ ತಂದೆ, \li1 \v 6 ಇಷಯನು ರಾಜನಾದ ದಾವೀದನ ತಂದೆ. \b \li1 ದಾವೀದನು ಸೊಲೊಮೋನನ ತಂದೆ, ಇವನ ತಾಯಿ ಊರೀಯನ ಹೆಂಡತಿಯಾಗಿದ್ದವಳು, \li1 \v 7 ಸೊಲೊಮೋನನು ರೆಹಬ್ಬಾಮನ ತಂದೆ, \li1 ರೆಹಬ್ಬಾಮನು ಅಬೀಯನ ತಂದೆ, \li1 ಅಬೀಯನು ಆಸನ ತಂದೆ, \li1 \v 8 ಆಸನು ಯೆಹೋಷಾಫಾಟನ ತಂದೆ, \li1 ಯೆಹೋಷಾಫಾಟನು ಯೆಹೋರಾಮನ ತಂದೆ, \li1 ಯೆಹೋರಾಮನು ಉಜ್ಜೀಯನ ತಂದೆ, \li1 \v 9 ಉಜ್ಜೀಯನು ಯೋತಾಮನ ತಂದೆ, \li1 ಯೋತಾಮನು ಆಹಾಜನ ತಂದೆ, \li1 ಆಹಾಜನು ಹಿಜ್ಕೀಯನ ತಂದೆ, \li1 \v 10 ಹಿಜ್ಕೀಯನು ಮನಸ್ಸೆಯ ತಂದೆ, \li1 ಮನಸ್ಸೆಯು ಆಮೋನನ ತಂದೆ, \li1 ಆಮೋನನು ಯೋಷೀಯನ ತಂದೆ, \li1 \v 11 ಯೋಷೀಯನಿಗೆ ಯೆಕೊನ್ಯ\f + \fr 1:11 \fr*\ft ಯೆಹೋಯಾಕೀನನು ಎಂದು ಸಹ ಕರೆಯಲಾಗುತ್ತಿತ್ತು.\ft*\f* ಮತ್ತು ಅವನ ಸಹೋದರರು ಹುಟ್ಟಿದರು, ಈ ಸಮಯದಲ್ಲಿಯೇ ಯೆಹೂದ್ಯರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. \b \li4 \v 12 ಬಾಬಿಲೋನಿಗೆ ಸೆರೆಹೋದ ಮೇಲೆ: \li1 ಯೆಕೊನ್ಯನು ಶೆಯಲ್ತೀಯೇಲನನ್ನು ಪಡೆದನು, \li1 ಶೆಯಲ್ತೀಯೇಲನು ಜೆರುಬ್ಬಾಬೆಲನ ತಂದೆ, \li1 \v 13 ಜೆರುಬ್ಬಾಬೆಲನು ಅಬಿಹೂದನ ತಂದೆ, \li1 ಅಬಿಹೂದನು ಎಲಿಯಕೀಮನ ತಂದೆ, \li1 ಎಲಿಯಕೀಮನು ಅಜೋರನ ತಂದೆ, \li1 \v 14 ಅಜೋರನು ಸದೋಕನ ತಂದೆ, \li1 ಸದೋಕನು ಅಖೀಮನ ತಂದೆ, \li1 ಅಖೀಮನು ಎಲಿಹೂದನ ತಂದೆ, \li1 \v 15 ಎಲಿಹೂದನು ಎಲಿಯಾಜರನ ತಂದೆ, \li1 ಎಲಿಯಾಜರನು ಮತ್ತಾನನ ತಂದೆ, \li1 ಮತ್ತಾನನು ಯಾಕೋಬನ ತಂದೆ, \li1 \v 16 ಯಾಕೋಬನು ಯೋಸೇಫನ ತಂದೆ, ಯೋಸೇಫನು ಮರಿಯಳ ಪತಿ, ಮರಿಯಳು ಕ್ರಿಸ್ತ ಎಂದು ಕರೆಯಲಾದ, ಯೇಸುಸ್ವಾಮಿಯ ತಾಯಿ. \b \li4 \v 17 ಈ ರೀತಿಯಲ್ಲಿ ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿಗೆ ಸೆರೆ ಹೋಗುವವರೆಗೆ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿಗೆ ಸೆರೆಹೋದ ದಿನದಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು. \s1 ಕ್ರಿಸ್ತ ಯೇಸುವಿನ ಜನನ \p \v 18 ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು. \v 19 ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು. \p \v 20 ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ. \v 21 ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು\f + \fr 1:21 \fr*\fq ಯೇಸು \fq*\ft ಎಂಬುದು ಗ್ರೀಕ್ ರೂಪವಾದ \ft*\fqa ಯೆಹೋಶುವಾ \fqa*\ft ಇದರ ಅರ್ಥ \ft*\fqa ಯೆಹೋವ ದೇವರು ರಕ್ಷಿಸುವರು\fqa*\f*’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು. \p \v 22 ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು: \v 23 “ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’\f + \fr 1:23 \fr*\ft \+xt ಯೆಶಾಯ 7:14\+xt*\ft*\f* ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು. \p \v 24 ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. \v 25 ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು. \c 2 \s1 ಪೂರ್ವದೇಶದ ಜ್ಞಾನಿಗಳ ಭೇಟಿ \p \v 1 ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು, \v 2 “ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು. \p \v 3 ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು. \v 4 ರಾಜನು ಯೆಹೂದ್ಯರ ಮುಖ್ಯಯಾಜಕರನ್ನೂ ನಿಯಮ ಬೋಧಕರನ್ನೂ ಕರೆದು, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು. \v 5 ಅದಕ್ಕೆ ಅವರು, “ಯೂದಾಯ ಪ್ರಾಂತದ ಬೇತ್ಲೆಹೇಮಿನಲ್ಲಿಯೇ,” ಏಕೆಂದರೆ, ಪ್ರವಾದಿಯು ಬರೆದಿರುವದು ಈ ರೀತಿಯಾಗಿದೆ: \q1 \v 6 “ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, \q2 ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. \q1 ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು \q2 ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’\f + \fr 2:6 \fr*\ft \+xt ಮೀಕ 5:2,4\+xt*\ft*\f*” \m ಎಂದು ಹೇಳಿದರು. \p \v 7 ಆಗ ಹೆರೋದನು ಆ ಜ್ಞಾನಿಗಳನ್ನು ರಹಸ್ಯವಾಗಿ ಕರೆದು, ಆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸೂಕ್ಷ್ಮವಾಗಿ ವಿಚಾರಿಸಿದನು. \v 8 “ನೀವು ಹೋಗಿ ಆ ಮಗುವಿನ ವಿಷಯ ಜಾಗರೂಕತೆಯಿಂದ ವಿಚಾರಿಸಿ. ಆ ಮಗು ಸಿಕ್ಕಿದ ಮೇಲೆ ನನಗೆ ತಿಳಿಸಿರಿ, ಆಗ ನಾನೂ ಬಂದು ಅದನ್ನು ಆರಾಧಿಸುವೆನು,” ಎಂದು ಹೇಳಿ ಅವರನ್ನು ಬೇತ್ಲೆಹೇಮಿಗೆ ಕಳುಹಿಸಿದನು. \p \v 9 ರಾಜನ ಮಾತನ್ನು ಕೇಳಿ ಅವರು ಹೊರಟಾಗ, ಪೂರ್ವದೇಶದಲ್ಲಿ ಅವರು ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು, ಅವರ ಮುಂದೆ ಮುಂದೆ ಸಾಗುತ್ತಾ, ಆ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತಿತು. \v 10 ಅವರು ನಕ್ಷತ್ರವನ್ನು ಕಂಡು, ಬಹಳವಾಗಿ ಸಂತೋಷಪಟ್ಟರು. \v 11 ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು\f + \fr 2:11 \fr*\fq ರಕ್ತಬೋಳ \fq*\ft ಒಂದು ವಿಧವಾದ ಅರಬ್ ದೇಶದ \ft*\fqa ಮರದ ರಸಗಂಧ\fqa*\f* ಕಾಣಿಕೆಯಾಗಿ ಸಮರ್ಪಿಸಿದರು. \v 12 ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು. \s1 ಈಜಿಪ್ಟಿಗೆ ಪಲಾಯನ \p \v 13 ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು. \p \v 14 ಆಗ ಯೋಸೇಫನು ಎದ್ದು, ಆ ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಅದೇ ರಾತ್ರಿ ಈಜಿಪ್ಟಿಗೆ ಹೊರಟುಹೋದನು. \v 15 ಹೀಗೆ ಹೆರೋದನು ಸಾಯುವವರೆಗೆ ಯೋಸೇಫನು ಅಲ್ಲೇ ಇದ್ದನು. ಕರ್ತನು ತನ್ನ ಪ್ರವಾದಿಯ ಮೂಲಕ: “ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು,”\f + \fr 2:15 \fr*\ft \+xt ಹೋಶೇ 11:1\+xt*\ft*\f* ಎಂದು ಹೇಳಿದ ಮಾತು ಇದರಿಂದ ನೆರವೇರಿತು. \p \v 16 ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು. \v 17 ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಮಾತು ನೆರವೇರಿತು: \q1 \v 18 “ರಾಮದಲ್ಲಿ ರೋದನೆಯು ಕೇಳಿಸಿತು, \q2 ಗೋಳಾಟವೂ ಮಹಾ ಪ್ರಲಾಪವೂ ಕೇಳಿಬಂತು. \q1 ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, \q2 ಆದರಣೆ ಹೊಂದದೆ ಹೋಗಿದ್ದಾಳೆ. \q2 ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”\f + \fr 2:18 \fr*\ft \+xt ಯೆರೆ 31:15\+xt*\ft*\f* \s1 ನಜರೇತಿಗೆ ಹಿಂದಿರುಗುವಿಕೆ \p \v 19 ಹೆರೋದನು ಸತ್ತಮೇಲೆ ಈಜಿಪ್ಟಿನಲ್ಲಿದ್ದ ಯೋಸೇಫನಿಗೆ ಕರ್ತನ ದೂತನು ಕನಸಿನಲ್ಲಿ ಕಾಣಿಸಿಕೊಂಡು, \v 20 “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹಿಂದಿರುಗು, ಮಗುವಿನ ಪ್ರಾಣ ತೆಗೆಯಬೇಕೆಂದಿದ್ದವರು ಸತ್ತುಹೋದರು,” ಎಂದು ಹೇಳಿದನು. \p \v 21 ಆಗ ಅವನು ಎದ್ದು ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು. \v 22 ಆದರೆ ಹೆರೋದನ ಮಗ ಅರ್ಖೆಲಾಯನು, ತಂದೆಯ ಬದಲಾಗಿ ಯೂದಾಯ ಪ್ರಾಂತವನ್ನು ಆಳುತ್ತಿದ್ದಾನೆಂದು ಕೇಳಿ, ಅಲ್ಲಿಗೆ ಹೋಗಲು ಭಯಪಟ್ಟನು. ಆಗ ಕನಸಿನಲ್ಲಿ ಹೊಂದಿದ ಎಚ್ಚರಿಕೆಯ ಪ್ರಕಾರ ಯೋಸೇಫನು ಗಲಿಲಾಯ ಪ್ರಾಂತಕ್ಕೆ ಹೋದನು. \v 23 ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು. \c 3 \s1 ಸ್ನಾನಿಕ ಯೋಹಾನನು ಮಾರ್ಗ ಸಿದ್ಧಮಾಡಿದ್ದು \p \v 1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು, \v 2 “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು. \q1 \v 3 “ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, \q2 ಅವರ ದಾರಿಗಳನ್ನು ಸರಾಗಮಾಡಿರಿ,’ \q1 ಎಂದು ಅರಣ್ಯದಲ್ಲಿ ಕೂಗುವ ಸ್ವರವು,”\f + \fr 3:3 \fr*\ft \+xt ಯೆಶಾಯ 40:3\+xt*\ft*\f* \m ಎಂದು ಪ್ರವಾದಿಯಾದ ಯೆಶಾಯನ ಮೂಲಕ ಸೂಚಿತನಾದವನು ಇವನೇ. \p \v 4 ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು\f + \fr 3:4 \fr*\ft ನೋಡಿರಿ \+xt 2 ಅರಸು 1:8\+xt* ವಚನದಲ್ಲಿ ಪ್ರವಾದಿ ಎಲೀಯನ ಉಡುಪು ಹಾಗು \+xt ಜೆಕರ್ಯ 13:4\+xt*\ft*\f*. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು. \v 5 ಯೆರೂಸಲೇಮಿನಿಂದಲೂ ಯೂದಾಯ ಪ್ರಾಂತದ ಎಲ್ಲಾ ಸ್ಥಳಗಳಿಂದಲೂ ಯೊರ್ದನ್ ನದಿ ಸುತ್ತಲಿರುವ ಪ್ರದೇಶದಿಂದಲೂ ಜನರು ಅವನ ಬಳಿಗೆ ಬರುತ್ತಿದ್ದರು. \v 6 ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. \p \v 7 ಆದರೆ ಫರಿಸಾಯರು\f + \fr 3:7 \fr*\ft ಫರಿಸಾಯರು ಅಂದರೆ ಯೆಹೂದ್ಯರಲ್ಲಿ ಕಟ್ಟುನಿಟ್ಟಾದ ಧಾರ್ಮಿಕ ಪಂಗಡದವರು\ft*\f* ಹಾಗೂ ಸದ್ದುಕಾಯರಲ್ಲಿ\f + \fr 3:7 \fr*\ft ಸದ್ದುಕಾಯರು ಅಂದರೆ ಯೆಹೂದ್ಯರಲ್ಲಿ ಅದ್ಭುತ ಅನುಭವಗಳನ್ನು ನಂಬದ ಪಂಗಡದವರು. ಉದಾಹರಣೆ: ಮರಣದ ನಂತರ ಜೀವಿತ, ದೇವದೂತರು\ft*\f* ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು? \v 8 ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ. \v 9 ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ. \v 10 ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು. \p \v 11 “ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ\f + \fr 3:11 \fr*\ft ಅಂದರೆ, \ft*\fqa ಗುಲಾಮನಾಗಿರುವುದಕ್ಕೂ\fqa*\f* ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು. \v 12 ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು. \s1 ಯೇಸುವಿನ ದೀಕ್ಷಾಸ್ನಾನ \p \v 13 ಆಮೇಲೆ ಯೇಸು ಯೋಹಾನನಿಂದ ದೀಕ್ಷಾಸ್ನಾನ ಪಡೆಯಲು ಗಲಿಲಾಯದಿಂದ ಯೊರ್ದನ್ ನದಿಗೆ ಬಂದರು. \v 14 ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು. \p \v 15 ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು. \p \v 16 ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು. \v 17 ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು. \c 4 \s1 ಯೇಸುವಿನ ಶೋಧನೆ \p \v 1 ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು. \v 2 ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು. \v 3 ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು. \p \v 4 ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’\f + \fr 4:4 \fr*\ft \+xt ಧರ್ಮೋ 8:3\+xt*\ft*\f*” ಎಂದರು. \p \v 5 ಆಮೇಲೆ ಸೈತಾನನು ಯೇಸುವನ್ನು ಪವಿತ್ರ ನಗರಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ, \v 6 “ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: \q1 “ ‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, \q2 ನಿನ್ನ ಪಾದಗಳು ಕಲ್ಲಿಗೆ ತಗಲದಂತೆ \q2 ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’\f + \fr 4:6 \fr*\ft \+xt ಕೀರ್ತನೆ 91:11,12\+xt*\ft*\f*” \m ಎಂದನು. \p \v 7 ಅದಕ್ಕೆ ಯೇಸು, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು’\f + \fr 4:7 \fr*\ft \+xt ಧರ್ಮೋ 6:16\+xt*\ft*\f* ಎಂಬುದನ್ನು ಸಹ ಪವಿತ್ರ ವೇದದಲ್ಲಿ ಬರೆದಿದೆ,” ಎಂದರು. \p \v 8 ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ, \v 9 “ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವೆಲ್ಲವನ್ನು ನಿನಗೆ ಕೊಡುವೆನು,” ಎಂದನು. \p \v 10 ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’\f + \fr 4:10 \fr*\ft \+xt ಧರ್ಮೋ 6:13\+xt*\ft*\f* ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು. \p \v 11 ಆಗ ಸೈತಾನನು ಯೇಸುವನ್ನು ಬಿಟ್ಟುಹೋದನು. ದೇವದೂತರು ಬಂದು ಅವರಿಗೆ ಉಪಚಾರ ಮಾಡಿದರು. \s1 ಯೇಸುವಿನ ಉಪದೇಶದ ಪ್ರಾರಂಭ \p \v 12 ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು. \v 13 ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು. \v 14 ಹೀಗೆ ಪ್ರವಾದಿ ಯೆಶಾಯನ ಮುಖಾಂತರ ಹೇಳಿಸಿರುವ ಈ ಮಾತು ನೆರವೇರಿತು. ಅದೇನೆಂದರೆ: \q1 \v 15 “ಜೆಬುಲೂನ್ ನಾಡು ಮತ್ತು ನೆಫ್ತಲೀಮ್ ನಾಡು, \q2 ಯೊರ್ದನ್ ನದಿಯ ಆಚೆ ಸರೋವರದ ಕಡೆ, \q2 ಯೆಹೂದ್ಯರಲ್ಲದವರಿರುವ ಗಲಿಲಾಯ ನಾಡು, \q1 \v 16 ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ \q2 ಮಹಾ ಬೆಳಕು ಕಾಣಿಸಿತು; \q1 ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ \q2 ಬೆಳಕು ಉದಯಿಸಿತು.”\f + \fr 4:16 \fr*\ft \+xt ಯೆಶಾಯ 9:1,2\+xt*\ft*\f* \p \v 17 ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು. \s1 ಯೇಸು ಪ್ರಥಮ ಶಿಷ್ಯರನ್ನು ಕರೆದದ್ದು \p \v 18 ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಪೇತ್ರ ಎನಿಸಿಕೊಂಡ ಸೀಮೋನನನ್ನೂ ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು. \v 19 ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು. \v 20 ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. \p \v 21 ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನನನ್ನು ಕಂಡರು. ಅವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಅವರನ್ನೂ ಕರೆದರು. \v 22 ಕೂಡಲೇ, ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು. \s1 ಯೇಸು ಅಸ್ವಸ್ಥರನ್ನು ಗುಣಪಡಿಸಿದ್ದು \p \v 23 ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು. \v 24 ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು. \v 25 ಗಲಿಲಾಯ, ದೆಕಪೊಲಿ,\f + \fr 4:25 \fr*\ft ಅಂದರೆ, ಹತ್ತು ಪಟ್ಟಣಗಳು\ft*\f* ಯೆರೂಸಲೇಮ್, ಯೂದಾಯ ಹಾಗೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಜನರು ದೊಡ್ಡ ಗುಂಪಾಗಿ ಯೇಸುವನ್ನು ಹಿಂಬಾಲಿಸಿದರು. \c 5 \s1 ಪರ್ವತ ಪ್ರಸಂಗಕ್ಕೆ ಮುನ್ನುಡಿ \p \v 1 ಯೇಸು ಜನರ ಗುಂಪನ್ನು ಕಂಡು, ಒಂದು ಬೆಟ್ಟವನ್ನೇರಿ ಕುಳಿತುಕೊಂಡರು. ಶಿಷ್ಯರು ಅವರ ಬಳಿಗೆ ಬಂದರು. \v 2 ಮತ್ತು ಯೇಸು ಅವರಿಗೆ ಉಪದೇಶಿಸಲು ಪ್ರಾರಂಭಿಸಿದರು. \s1 ಧನ್ಯವಾಕ್ಯಗಳು \m ಅವರು ಹೀಗೆ ಹೇಳಿದರು: \q1 \v 3 “ಆತ್ಮದಲ್ಲಿ ಬಡವರಾಗಿರುವವರು ಧನ್ಯರು, \q2 ಪರಲೋಕ ರಾಜ್ಯವು ಅವರದು. \q1 \v 4 ದುಃಖಿಸುವವರು ಧನ್ಯರು, \q2 ಅವರು ಆದರಣೆ ಹೊಂದುವರು. \q1 \v 5 ಸಾತ್ವಿಕರು ಧನ್ಯರು, \q2 ಅವರು ಭೂಮಿಗೆ ಬಾಧ್ಯರಾಗುವರು. \q1 \v 6 ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, \q2 ಅವರು ತೃಪ್ತಿಹೊಂದುವರು. \q1 \v 7 ಕರುಣೆಯುಳ್ಳವರು ಧನ್ಯರು, \q2 ಅವರು ಕರುಣೆ ಪಡೆಯುವರು. \q1 \v 8 ಹೃದಯದಲ್ಲಿ ಶುದ್ಧರಾಗಿರುವವರು ಧನ್ಯರು, \q2 ಅವರು ದೇವರನ್ನು ಕಾಣುವರು. \q1 \v 9 ಸಮಾಧಾನ ಪಡಿಸುವವರು ಧನ್ಯರು, \q2 ಅವರು ದೇವರ ಮಕ್ಕಳೆನಿಸಿಕೊಳ್ಳುವರು. \q1 \v 10 ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು, \q2 ಪರಲೋಕ ರಾಜ್ಯವು ಅವರದು. \p \v 11 “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. \v 12 ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು. \s1 ಉಪ್ಪು ಮತ್ತು ಬೆಳಕು \p \v 13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ. \p \v 14 “ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು. \v 15 ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ. \v 16 ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು. \s1 ಮೋಶೆಯ ನಿಯಮವನ್ನು ಈಡೇರಿಸಿದ್ದು \p \v 17 “ಮೋಶೆಯ ನಿಯಮವನ್ನಾಗಲಿ, ಪ್ರವಾದನೆಗಳನ್ನಾಗಲಿ ರದ್ದು ಮಾಡುವುದಕ್ಕೆ ನಾನು ಬಂದೆನೆಂದು ಭಾವಿಸಬೇಡಿರಿ; ನಾನು ಅವುಗಳನ್ನು ರದ್ದುಗೊಳಿಸಲು ಬರಲಿಲ್ಲ, ನೆರವೇರಿಸಲು ಬಂದಿದ್ದೇನೆ. \v 18 ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. \v 19 ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು. \v 20 ನಿಮ್ಮ ನೀತಿಯು ಫರಿಸಾಯರ ಮತ್ತು ನಿಯಮ ಬೋಧಕರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ, ನೀವು ಪರಲೋಕ ರಾಜ್ಯವನ್ನು ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ. \s1 ನರಹತ್ಯೆ \p \v 21 “ ‘ನರಹತ್ಯೆ ಮಾಡಬಾರದು,\f + \fr 5:21 \fr*\ft \+xt ವಿಮೋ 20:13\+xt*\ft*\f* ಯಾವನಾದರೂ ನರಹತ್ಯೆ ಮಾಡಿದರೆ ಅವನು ನ್ಯಾಯತೀರ್ಪಿಗೆ ಗುರಿಯಾಗುವನು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ. \v 22 ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ\f + \fr 5:22 \fr*\ft ಕೆಲವು ಹಸ್ತಪ್ರತಿಗಳ ಪ್ರಕಾರ \ft*\fqa ಅವನು ತನ್ನ ಸಹೋದರನ ಮೇಲೆ ಯಾವುದೇ ಕಾರಣವಿಲ್ಲದೆ ಕೋಪಗೊಂಡಿದ್ದಾನೆ.\fqa*\f* ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು. \p \v 23 “ಆದ್ದರಿಂದ, ನೀನು ನಿನ್ನ ಕಾಣಿಕೆಯನ್ನು ಸಮರ್ಪಿಸಲು ಬಲಿಪೀಠದ ಬಳಿಗೆ ತಂದಾಗ, ನಿನ್ನ ಸಹೋದರನಿಗೆ ಅಥವಾ ನಿನ್ನ ಸಹೋದರಿಗೆ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, \v 24 ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು. \p \v 25 “ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ. \v 26 ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ. \s1 ವ್ಯಭಿಚಾರ \p \v 27 “ ‘ವ್ಯಭಿಚಾರ ಮಾಡಬಾರದು,’\f + \fr 5:27 \fr*\ft \+xt ವಿಮೋ 20:14\+xt*\ft*\f* ಎಂದು ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ. \v 28 ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ. \v 29 ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು. \v 30 ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು. \s1 ವಿವಾಹ ವಿಚ್ಛೇದನ \p \v 31 “ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಡುವವನು ಆಕೆಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ,’\f + \fr 5:31 \fr*\ft \+xt ಧರ್ಮೋ 24:1\+xt*\ft*\f* ಎಂದು ಹೇಳಿದೆಯಷ್ಟೆ. \v 32 ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. \s1 ಆಣೆಗಳು \p \v 33 “ ‘ಇದಲ್ಲದೆ ನೀನು ಆಣೆಯಿಟ್ಟರೆ ಅದನ್ನು ಮೀರಬಾರದು, ಕರ್ತನಿಗೆ ಮಾಡಿದ ಆಣೆಗಳನ್ನು ನೆರವೇರಿಸಲೇಬೇಕು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿರುವುದನ್ನು ಕೇಳಿದ್ದೀರಿ. \v 34 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಆಣೆಯಿಡಲೇ ಬೇಡಿರಿ. ಪರಲೋಕದ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಸಿಂಹಾಸನವು; \v 35 ಭೂಮಿಯ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಪಾದಪೀಠವು. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ಮಹಾರಾಜನ ಪಟ್ಟಣವಾಗಿದೆ. \v 36 ನಿನ್ನ ತಲೆಯ ಮೇಲೂ ಆಣೆಯಿಡುವುದು ಬೇಡ, ಏಕೆಂದರೆ ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ. \v 37 ಆದ್ದರಿಂದ ನಿಮ್ಮ ಮಾತು ಹೌದಾದರೆ ‘ಹೌದು’ ಇಲ್ಲವಾದರೆ ‘ಇಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಿನದು ಕೆಡುಕನಿಂದ ಬಂದದ್ದು. \s1 ಕಣ್ಣಿಗೆ ಕಣ್ಣು \p \v 38 “ ‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು,’\f + \fr 5:38 \fr*\ft \+xt ವಿಮೋ 21:24; ಯಾಜಕ 24:20; ಧರ್ಮೋ 19:21\+xt*\ft*\f* ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ. \v 39 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು. \v 40 ನಿನ್ನೊಡನೆ ವ್ಯಾಜ್ಯ ಮಾಡಿ ನಿನ್ನ ಅಂಗಿಯನ್ನು ನಿನ್ನಿಂದ ಕಿತ್ತುಕೊಳ್ಳುವವನಿಗೆ, ನಿನ್ನ ಮೇಲಂಗಿಯನ್ನೂ ಕೊಟ್ಟುಬಿಡು. \v 41 ಯಾವನಾದರೂ ನಿನ್ನನ್ನು ಒಂದು ಕಿಲೋಮೀಟರು ದೂರ ಬಾ ಎಂದು ಒತ್ತಾಯ ಮಾಡಿದರೆ, ಅವನೊಡನೆ ಎರಡು ಕಿಲೋಮೀಟರು ದೂರ ಹೋಗು; \v 42 ಕೇಳುವವನಿಗೆ ಕೊಡು, ನಿನ್ನಿಂದ ಸಾಲ ಕೇಳುವವನ ಕಡೆಯಿಂದ ಮುಖ ತಿರುಗಿಸಿಕೊಳ್ಳಬೇಡ. \s1 ವೈರಿಗಳನ್ನು ಪ್ರೀತಿಸುವುದು \p \v 43 “ ‘ನಿನ್ನ ನೆರೆಯವನನ್ನು ಪ್ರೀತಿಸಿ,\f + \fr 5:43 \fr*\ft \+xt ಯಾಜಕ 19:18\+xt*\ft*\f* ನಿನ್ನ ವೈರಿಯನ್ನು ದ್ವೇಷಿಸು,’ ಎಂದು ಹೇಳಿರುವುದನ್ನು ಕೇಳಿದ್ದೀರಿ. \v 44 ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ. \v 45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ. \v 46 ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ? \v 47 ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ? \v 48 ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ. \c 6 \s1 ದಾನಧರ್ಮ ಮಾಡುವುದು \p \v 1 “ಜನರು ನೋಡಲಿ ಎಂದು ಅವರ ಮುಂದೆ, ನಿಮ್ಮ ದಾನಧರ್ಮಗಳನ್ನು ಮಾಡದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಕ್ಕುವುದಿಲ್ಲ. \p \v 2 “ಆದ್ದರಿಂದ ನೀನು ದಾನಧರ್ಮ ಮಾಡುವಾಗ, ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳ ಹಾಗೆ ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ತುತೂರಿಯನ್ನು ಊದಿಸಬೇಡ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. \v 3 ಆದರೆ ನೀನು ದಾನಧರ್ಮ ಮಾಡುವಾಗ, ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೆ ತಿಳಿಯದಿರಲಿ. \v 4 ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು. \s1 ಪ್ರಾರ್ಥನೆ \p \v 5 “ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. \v 6 ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು. \v 7 ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ. \v 8 ನೀವು ಅವರಂತೆ ಇರಬೇಡಿರಿ, ಏಕೆಂದರೆ ನೀವು ಕೇಳುವುದಕ್ಕೆ ಮೊದಲೇ, ನಿಮ್ಮ ತಂದೆಗೆ ನಿಮ್ಮ ಅಗತ್ಯಗಳು ತಿಳಿದಿವೆ. \p \v 9 “ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: \q1 “ ‘ಪರಲೋಕದಲ್ಲಿರುವ ನಮ್ಮ ತಂದೆಯೇ, \q1 ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ, \q1 \v 10 ನಿಮ್ಮ ರಾಜ್ಯವು ಬರಲಿ; \q1 ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ \q2 ಭೂಲೋಕದಲ್ಲಿಯೂ ನೆರವೇರಲಿ. \q1 \v 11 ನಮ್ಮ ಅನುದಿನದ ಆಹಾರವನ್ನು ನಮಗೆ ಈ ದಿನವೂ ದಯಪಾಲಿಸಿರಿ. \q1 \v 12 ನಮಗೆ ಸಾಲಮಾಡಿದವರನ್ನು\f + \fr 6:12 \fr*\ft ಅಥವಾ \ft*\fqa ತಪ್ಪುಮಾಡಿದವರನ್ನು\fqa*\f* ನಾವು ಕ್ಷಮಿಸಿದಂತೆ, \q2 ನಮ್ಮ ಸಾಲಗಳನ್ನು ಕ್ಷಮಿಸಿರಿ. \q1 \v 13 ನಮ್ಮನ್ನು ಶೋಧನೆಗೆ ಸೇರಿಸದೆ, \q2 ಕೇಡಿನಿಂದ ತಪ್ಪಿಸಿರಿ. \q1 ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ \q2 ಸದಾಕಾಲ ನಿಮ್ಮದೇ. ಆಮೆನ್.\f + \fr 6:13 \fr*\fq ಏಕೆಂದರೆ…ನಿಮ್ಮದೇ. ಆಮೆನ್ \fq*\ft ಕೆಲವು ಪುರಾತನ ಪ್ರತಿಗಳಲ್ಲಿ ಈ ಪದಗಳಿರುವುದಿಲ್ಲ\ft*\f*’ \m \v 14 ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು. \v 15 ಆದರೆ ನೀವು ಬೇರೆಯವರ ತಪ್ಪುಗಳನ್ನು ಕ್ಷಮಿಸದಿದ್ದರೆ, ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ. \s1 ಉಪವಾಸ \p \v 16 “ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. \v 17 ಆದರೆ ನೀನು ಉಪವಾಸ ಮಾಡುವಾಗ, ತಲೆಗೆ ಎಣ್ಣೆ ಹಚ್ಚಿಕೊಂಡು, ಮುಖ ತೊಳೆದುಕೋ. \v 18 ಹೀಗೆ ಮಾಡಿದರೆ, ಕಾಣದಿರುವ ನಿನ್ನ ತಂದೆಯ ಹೊರತು ಬೇರೆ ಯಾರಿಗೂ ನೀನು ಉಪವಾಸದಿಂದಿರುವುದು ತಿಳಿಯುವುದಿಲ್ಲ ಮತ್ತು ಗುಟ್ಟಾಗಿ ಮಾಡುವುದನ್ನು ಕಾಣುವ ನಿನ್ನ ತಂದೆ, ನಿನಗೆ ಪ್ರತಿಫಲ ಕೊಡುವರು. \s1 ಸ್ವರ್ಗದಲ್ಲಿ ನಿಕ್ಷೇಪ \p \v 19 “ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು. \v 20 ಆದರೆ ಪರಲೋಕದಲ್ಲಿ ನಿಮಗಾಗಿ ನಿಕ್ಷೇಪವನ್ನು ಕೂಡಿಟ್ಟುಕೊಳ್ಳಿರಿ, ಅಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದಿಲ್ಲ. ಕಳ್ಳರು ಕನ್ನ ಕೊರೆದು ಕದಿಯುವುದಿಲ್ಲ. \v 21 ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು. \p \v 22 “ಕಣ್ಣು ದೇಹಕ್ಕೆ ದೀಪವಾಗಿದೆ. ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು. \v 23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವುದಾದರೆ ಅದು ಎಂತಹ ಕಾರ್ಗತ್ತಲಲ್ಲವೇ! \p \v 24 “ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ. \s1 ಚಿಂತಿಸಬೇಡಿರಿ \p \v 25 “ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ? \v 26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ? \v 27 ನೀವು ಚಿಂತಿಸುವುದರಿಂದ ನಿಮ್ಮ ಜೀವನಕ್ಕೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?\f + \fr 6:27 \fr*\ft ಅಥವಾ \ft*\fqa ಒಂದು ಮೊಳ\fqa*\f* \p \v 28 “ನೀವು ಉಡುಪಿನ ವಿಷಯ ಚಿಂತಿಸುವುದೇಕೆ? ಅಡವಿಯಲ್ಲಿ ಹೂವುಗಳು ಬೆಳೆಯುವುದನ್ನು ಗಮನಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ. \v 29 ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ. \v 30 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ? \v 31 ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ. \v 32 ಇವೆಲ್ಲವನ್ನು ದೇವರನ್ನು ಅರಿಯದವರು ಹುಡುಕುತ್ತಾರೆ. ಇವೆಲ್ಲಾ ನಿಮಗೆ ಅವಶ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಯು ತಿಳಿದಿದ್ದಾರೆ. \v 33 ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು. \v 34 ಆದ್ದರಿಂದ, ನಾಳೆಯ ವಿಷಯವಾಗಿ ಚಿಂತಿಸಬೇಡಿರಿ. ನಾಳೆಯ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು, ಆ ದಿನದ ಪಾಡು ಆ ದಿನಕ್ಕೆ ಸಾಕು. \c 7 \s1 ತೀರ್ಪು ಮಾಡುವುದು \p \v 1 “ತೀರ್ಪುಮಾಡಬೇಡಿರಿ, ಆಗ ನಿಮಗೂ ಸಹ ತೀರ್ಪಾಗುವುದಿಲ್ಲ. \v 2 ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು. \p \v 3 “ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ? \v 4 ನಿನ್ನ ಕಣ್ಣಿನಲ್ಲಿಯೇ ಮರದ ದಿಮ್ಮಿ ಇರುವಾಗ, ನಿನ್ನ ಸಹೋದರನಿಗೆ, ‘ನಾನು ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆದುಬಿಡುತ್ತೇನೆ,’ ಎಂದು ನೀನು ಹೇಳುವುದು ಹೇಗೆ? \v 5 ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು. ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು, ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು. \p \v 6 “ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು. \s1 ಬೇಡಿರಿ, ಹುಡುಕಿರಿ, ತಟ್ಟಿರಿ \p \v 7 “ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು. \v 8 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು. \p \v 9 “ನಿಮ್ಮಲ್ಲಿ ಯಾವನಾದರೂ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? \v 10 ಇಲ್ಲವೆ ಮೀನನ್ನು ಕೇಳಿದರೆ ಅವನಿಗೆ ಹಾವನ್ನು ಕೊಡುವನೇ? \v 11 ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ! \v 12 ಆದ್ದರಿಂದ, ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಬಯಸುತ್ತೀರೋ, ಅದರಂತೆಯೇ ನೀವು ಅವರಿಗೆ ಮಾಡಿರಿ; ಇದೇ ನಿಯಮ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶವು. \s1 ಇಕ್ಕಟ್ಟಾದ ಹಾಗೂ ವಿಶಾಲ ಬಾಗಿಲು \p \v 13 “ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು. \v 14 ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ. \s1 ಮರ ಹಾಗೂ ಫಲ \p \v 15 “ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ. \v 16 ಅವರವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಿಂದ ದ್ರಾಕ್ಷಿಯನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಕೀಳುವರೋ? \v 17 ಅದರಂತೆಯೇ, ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಆದರೆ ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ. \v 18 ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು, ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡಲಾರದು. \v 19 ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು. \v 20 ಆದ್ದರಿಂದ ಅವರವರ ಫಲಗಳಿಂದಲೇ ನೀವು ಅವರನ್ನು ತಿಳಿದುಕೊಳ್ಳುವಿರಿ. \s1 ನಿಜ ಹಾಗೂ ಸುಳ್ಳು ಶಿಷ್ಯರು \p \v 21 “ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು. \v 22 ಆ ದಿನದಲ್ಲಿ, ‘ಕರ್ತದೇವರೇ, ಕರ್ತದೇವರೇ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು. \v 23 ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’\f + \fr 7:23 \fr*\ft \+xt ಕೀರ್ತನೆ 6:8; ಕೀರ್ತನೆ 119:115\+xt*\ft*\f* ಎಂದು ಹೇಳಿಬಿಡುವೆನು. \s1 ಬುದ್ಧಿವಂತ ಹಾಗೂ ಬುದ್ಧಿಹೀನ \p \v 24 “ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ. \v 25 ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು. \v 26 ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ. \v 27 ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು,” ಎಂದರು. \p \v 28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. \v 29 ಏಕೆಂದರೆ, ಯೇಸು ಅವರ ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು. \c 8 \s1 ಯೇಸು ಕುಷ್ಠರೋಗಿಯನ್ನು ಸ್ವಸ್ಥಮಾಡಿದ್ದು \p \v 1 ಯೇಸು ಪರ್ವತವನ್ನು ಇಳಿದು ಬಂದಾಗ, ಜನರು ದೊಡ್ಡ ಸಮೂಹವಾಗಿ ಅವರನ್ನು ಹಿಂಬಾಲಿಸಿದರು. \v 2 ಅಲ್ಲಿಗೆ ಕುಷ್ಠರೋಗಿಯಾಗಿದ್ದ ಒಬ್ಬನು ಬಂದು, ಯೇಸುವಿನ ಮುಂದೆ ಮೊಣಕಾಲೂರಿ, “ಕರ್ತನೇ, ನೀವು ಮನಸ್ಸು ಮಾಡಿದರೆ, ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದನು. \p \v 3 ಆಗ ಯೇಸು ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು. \v 4 ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು\f + \fr 8:4 \fr*\ft \+xt ಯಾಜಕ 14:1-7\+xt*\ft*\f* ಅರ್ಪಿಸು,” ಎಂದು ಹೇಳಿದರು. \s1 ಯೇಸು ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು \p \v 5 ಯೇಸು ಕಪೆರ್ನೌಮಿಗೆ ಪ್ರವೇಶಿಸಿದಾಗ, ಒಬ್ಬ ಶತಾಧಿಪತಿಯು ಅವರ ಬಳಿಗೆ ಬಂದು, \v 6 “ಸ್ವಾಮೀ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಘೋರವಾಗಿ ನರಳುತ್ತಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾನೆ,” ಎಂದು ಹೇಳಿಕೊಂಡನು. \p \v 7 ಯೇಸು ಅವನಿಗೆ, “ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ,” ಎಂದರು. \p \v 8 ಅದಕ್ಕೆ ಶತಾಧಿಪತಿಯು, “ಸ್ವಾಮೀ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ. ಆದರೆ, ನೀವು ಒಂದು ಮಾತು ಮಾತ್ರ ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು. \v 9 ಏಕೆಂದರೆ ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು’ ಎಂದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ, ‘ಬಾ’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿದನು. \p \v 10 ಯೇಸು ಇದನ್ನು ಕೇಳಿ, ಆಶ್ಚರ್ಯಪಟ್ಟು ತಮ್ಮ ಹಿಂದೆ ಬರುತ್ತಿದ್ದವರಿಗೆ, “ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. \v 11 ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು. \v 12 ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ,” ಎಂದರು. \p \v 13 ಅನಂತರ ಯೇಸು ಆ ಶತಾಧಿಪತಿಗೆ, “ಹೋಗು, ನೀನು ನಂಬಿದಂತೆಯೇ ನಿನಗಾಗಲಿ,” ಎಂದು ಹೇಳಿದರು. ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು. \s1 ಯೇಸು ಅನೇಕರನ್ನು ಗುಣಪಡಿಸಿದ್ದು \p \v 14 ತರುವಾಯ ಯೇಸು ಪೇತ್ರನ ಮನೆಗೆ ಬಂದು, ಅವನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು. \v 15 ಯೇಸು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟುಹೋಯಿತು. ಆಕೆಯು ಎದ್ದು ಅವರನ್ನು ಉಪಚರಿಸಿದಳು. \p \v 16 ಸಂಜೆಯಾದಾಗ, ದೆವ್ವಹಿಡಿದ ಅನೇಕರನ್ನು ಜನರು ಯೇಸುವಿನ ಬಳಿಗೆ ಕರೆತಂದರು. ಯೇಸು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ, ಎಲ್ಲಾ ರೋಗಪೀಡಿತರನ್ನೂ ಸ್ವಸ್ಥಪಡಿಸಿದರು. \v 17 ಹೀಗೆ, \q1 “ಅವರು ತಾವೇ ನಮ್ಮ ಬಲಹೀನತೆಗಳನ್ನು ತೆಗೆದುಕೊಂಡು, \q2 ನಮ್ಮ ರೋಗಗಳನ್ನು ಹೊತ್ತುಕೊಂಡರು,”\f + \fr 8:17 \fr*\ft \+xt ಯೆಶಾಯ 53:4\+xt*\ft*\f* \m ಎಂದು ಯೆಶಾಯ ಪ್ರವಾದಿಯು ಹೇಳಿದ್ದು ನೆರವೇರಿತು. \s1 ಯೇಸುವನ್ನು ಹಿಂಬಾಲಿಸುವ ಕ್ರಯ \p \v 18 ಯೇಸು ತಮ್ಮ ಸುತ್ತಲಿದ್ದ ಜನರ ದೊಡ್ಡ ಸಮೂಹವನ್ನು ಕಂಡು, ಆಚೆದಡಕ್ಕೆ ಹೋಗಲು ಅಪ್ಪಣೆಕೊಟ್ಟರು. \v 19 ಆಗ ಒಬ್ಬ ನಿಯಮ ಬೋಧಕ ಬಂದು ಯೇಸುವಿಗೆ, “ಬೋಧಕರೇ, ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು,” ಎಂದನು. \p \v 20 ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ\f + \fr 8:20 \fr*\fq ಮನುಷ್ಯಪುತ್ರನು \fq*\ft ಎಂಬುದು ಯೇಸುವನ್ನು ಸೂಚಿಸುತ್ತದೆ. \ft*\fqa ಯೇಸು \fqa*\ft ಈ ರೀತಿಯಾಗಿ ತಮ್ಮ ಬಗ್ಗೆ ಮಾತನಾಡುತ್ತಿದ್ದರು.\ft*\f* ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು. \p \v 21 ಮತ್ತೊಬ್ಬ ಶಿಷ್ಯನು ಅವರಿಗೆ, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು. \p \v 22 ಆದರೆ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ,” ಎಂದು ಹೇಳಿದರು. \s1 ಯೇಸು ಬಿರುಗಾಳಿಯನ್ನು ನಿಲ್ಲಿಸಿದ್ದು \p \v 23 ಯೇಸುವು ದೋಣಿಯನ್ನು ಹತ್ತಲು, ಶಿಷ್ಯರು ಸಹ ಅವರ ಸಂಗಡ ಹೋದರು. \v 24 ಇದ್ದಕ್ಕಿದ್ದ ಹಾಗೆ, ಸರೋವರದಲ್ಲಿ ದೊಡ್ಡ ಬಿರುಗಾಳಿ ಎದ್ದ ಕಾರಣ ದೋಣಿಯು ಅಲೆಗಳಿಂದ ಮುಚ್ಚುತ್ತಿತ್ತು. ಆದರೆ ಯೇಸು ನಿದ್ರಿಸುತ್ತಿದ್ದರು. \v 25 ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಕರ್ತನೇ, ಕಾಪಾಡು! ನಾವು ಮುಳುಗುತ್ತಿದ್ದೇವೆ!” ಎಂದರು. \p \v 26 ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು. \p \v 27 ಆದರೆ ಶಿಷ್ಯರು ಆಶ್ಚರ್ಯದಿಂದ, “ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದರು. \s1 ಯೇಸು ಇಬ್ಬರಲ್ಲಿದ್ದ ಅನೇಕ ದೆವ್ವಗಳನ್ನು ಬಿಡಿಸಿದ್ದು \p \v 28 ಯೇಸು ಆಚೆಯ ಕಡೆಯಲ್ಲಿದ್ದ ಗದರೇನರ\f + \fr 8:28 \fr*\ft ಕೆಲವು ಹಸ್ತಪ್ರತಿಗಳಲ್ಲಿ \ft*\fq ಗದರೇನ \fq*\ft ಇಲ್ಲವೆ \ft*\fqa ಗೆರಸೇನ \fqa*\ft ಎಂದಿವೆ.\ft*\f* ಪ್ರಾಂತಕ್ಕೆ ಬಂದಾಗ, ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಬಂದು ಯೇಸುವಿಗೆ ಎದುರಾದರು. ಅವರು ಬಹು ಕ್ರೂರಿಗಳಾಗಿದ್ದುದರಿಂದ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ. \v 29 ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು. \p \v 30 ಆಗ ಅವರಿಂದ ಸ್ವಲ್ಪ ದೂರದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. \v 31 “ನೀನು ನಮ್ಮನ್ನು ಹೊರಗೆ ಹಾಕುವುದಾದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು. \p \v 32 ಯೇಸು ಅವುಗಳಿಗೆ, “ಹೋಗಿರಿ,” ಎಂದರು. ಆಗ ಅವು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆಗ ಆ ಹಿಂಡೆಲ್ಲಾ ಕಡಿದಾದ ಬದಿಯಿಂದ ಓಡಿಹೋಗಿ ಸರೋವರದೊಳಗೆ ಬಿದ್ದು ಸತ್ತು ಹೋದವು. \v 33 ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ, ಪಟ್ಟಣದೊಳಕ್ಕೆ ಹೋಗಿ ದೆವ್ವ ಹಿಡಿದಿದ್ದವರಿಗೆ ಸಂಭವಿಸಿದ್ದನ್ನು ವರದಿಮಾಡಿದರು. \v 34 ಆಗ ಪಟ್ಟಣದವರೆಲ್ಲರೂ ಯೇಸುವನ್ನು ಕಾಣುವುದಕ್ಕೆ ಹೊರಗೆ ಬಂದರು. ಅವರು ಯೇಸುವನ್ನು ಕಂಡು, ತಮ್ಮ ಪ್ರಾಂತವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. \c 9 \s1 ಯೇಸು ಪಾರ್ಶ್ವವಾಯು ರೋಗಿಯನ್ನು ಸ್ವಸ್ಥಮಾಡಿದ್ದು \p \v 1 ಯೇಸು ದೋಣಿ ಹತ್ತಿ, ಸರೋವರವನ್ನು ದಾಟಿ ತಮ್ಮ ಸ್ವಂತ ಪಟ್ಟಣಕ್ಕೆ ಬಂದರು. \v 2 ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು. \p \v 3 ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. \p \v 4 ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ? \v 5 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ? \v 6 ಆದರೆ ಮನುಷ್ಯಪುತ್ರನಾದ ನನಗೆ ಈ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು. \v 7 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು. \v 8 ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು. \s1 ಮತ್ತಾಯನ ಕರೆಯುವಿಕೆ \p \v 9 ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. \p \v 10 ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ಅಪಖ್ಯಾತಿಯ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು. \v 11 ಫರಿಸಾಯರು ಇದನ್ನು ಕಂಡು, “ನಿಮ್ಮ ಬೋಧಕನು ಸುಂಕದವರ ಮತ್ತು ಅಪಖ್ಯಾತಿಯ ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು. \p \v 12 ಆದರೆ ಯೇಸು ಇದನ್ನು ಕೇಳಿ ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ. \v 13 ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’\f + \fr 9:13 \fr*\ft \+xt ಹೋಶೇ 6:6\+xt*\ft*\f* ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು. \s1 ಯೇಸುವಿಗೆ ಉಪವಾಸದ ವಿಷಯ ಪ್ರಶ್ನಿಸಿದ್ದು \p \v 14 ಬಳಿಕ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವೂ, ಫರಿಸಾಯರೂ ಉಪವಾಸ ಮಾಡುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು. \p \v 15 ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು. \p \v 16 “ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಏಕೆಂದರೆ ಅದು ಆ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು. \v 17 ಅಂತೆಯೇ ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ಅವರು ಹಾಗೇನಾದರೂ ಮಾಡಿದರೆ ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ. ಆಗ ಅವೆರಡೂ ಉಳಿಯುತ್ತವೆ,” ಎಂದರು. \s1 ಸತ್ತ ಬಾಲಕಿ ಮತ್ತು ರೋಗಿಯಾದ ಸ್ತ್ರೀ \p \v 18 ಯೇಸು ಇದೆಲ್ಲವನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ, ಸಭಾಮಂದಿರದ ಒಬ್ಬ ಅಧಿಕಾರಿಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ನೀವು ಬಂದು ಆಕೆಯ ಮೇಲೆ ನಿಮ್ಮ ಕೈಯನ್ನಿಡಿರಿ; ಆಗ ಅವಳು ಬದುಕುವಳು,” ಎಂದು ಹೇಳಿದನು. \v 19 ಯೇಸು ಎದ್ದು ತಮ್ಮ ಶಿಷ್ಯರೊಂದಿಗೆ ಆ ಅಧಿಕಾರಿಯ ಹಿಂದೆ ಹೋದರು. \p \v 20 ಆಗ ಅಲ್ಲಿ ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀಯು ಹಿಂಬದಿಯಿಂದ ಬಂದು, ಯೇಸುವಿನ ನಿಲುವಂಗಿಯ ಅಂಚನ್ನು ಮುಟ್ಟಿ, \v 21 “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದು ಆಕೆಯು ತನ್ನೊಳಗೆ ಹೇಳಿಕೊಂಡಳು. \p \v 22 ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು. \p \v 23 ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು, \v 24 ಅವರಿಗೆ, “ಹೊರಗೆ ಹೋಗಿರಿ, ಬಾಲಕಿಯು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಅದಕ್ಕವರು ನಕ್ಕು ಯೇಸುವನ್ನು ಹಾಸ್ಯಮಾಡಿದರು. \v 25 ಆದರೆ ಜನರನ್ನು ಹೊರಗೆ ಕಳುಹಿಸಿದ ಮೇಲೆ ಯೇಸು ಒಳಗೆ ಹೋಗಿ, ಬಾಲಕಿಯ ಕೈಯನ್ನು ಹಿಡಿದು ಎಬ್ಬಿಸಿದಾಗ ಬಾಲಕಿಯು ಎದ್ದಳು. \v 26 ಈ ಸಮಾಚಾರವು ನಾಡಿನಲ್ಲೆಲ್ಲಾ ಹರಡಿತು. \s1 ಯೇಸು ಕುರುಡರನ್ನು ಮತ್ತು ಮೂಕನನ್ನು ಸ್ವಸ್ಥಮಾಡಿದ್ದು \p \v 27 ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು. \p \v 28 ಯೇಸು ಮನೆಗೆ ಬಂದಾಗ, ಆ ಕುರುಡರು ಅವರ ಬಳಿಗೆ ಬಂದರು. ಆಗ ಯೇಸು ಅವರಿಗೆ, “ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ?” ಎಂದು ಕೇಳಿದರು. \p ಅದಕ್ಕವರು ಯೇಸುವಿಗೆ, “ಹೌದು ಕರ್ತನೆ,” ಎಂದರು. \p \v 29 ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗಾಗಲಿ,” ಎಂದು ಹೇಳಿದರು. \v 30 ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, “ಇದು ಯಾರಿಗೂ ತಿಳಿಯಬಾರದು,” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು. \v 31 ಆದರೆ ಸ್ವಸ್ಥರಾದವರು ಹೊರಟುಹೋಗಿ, ಆ ನಾಡಿನಲ್ಲೆಲ್ಲಾ ಯೇಸುವಿನ ಕೀರ್ತಿಯನ್ನು ಹರಡಿದರು. \p \v 32 ಯೇಸು ಮತ್ತು ಶಿಷ್ಯರು ಹೊರಟು ಹೋಗುತ್ತಿದ್ದಾಗ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುವಿನ ಬಳಿಗೆ ತಂದರು. \v 33 ದೆವ್ವ ಬಿಡಿಸಿದ ಮೇಲೆ, ಆ ಮೂಕನು ಮಾತನಾಡಿದನು. ಜನರು ಆಶ್ಚರ್ಯಪಟ್ಟು, “ಇಂಥದ್ದನ್ನು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ,” ಎಂದು ಹೇಳಿದರು. \p \v 34 ಆದರೆ ಫರಿಸಾಯರು, “ದೆವ್ವಗಳ ಅಧಿಪತಿಯಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು. \s1 ಕೆಲಸದವರು ಕೆಲವರೇ \p \v 35 ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು. \v 36 ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು. \v 37 ಆಗ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಬಹಳವಾಗಿದೆ, ಕೆಲಸದವರೋ ಕೆಲವರು. \v 38 ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ,” ಎಂದರು. \c 10 \s1 ಯೇಸು ಶಿಷ್ಯರನ್ನು ಕಳುಹಿಸಿದ್ದು \p \v 1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ಅಶುದ್ಧಾತ್ಮಗಳನ್ನು ಓಡಿಸುವುದಕ್ಕೂ ಎಲ್ಲಾ ತರವಾದ ವ್ಯಾಧಿಯನ್ನೂ ರೋಗವನ್ನೂ ಸ್ವಸ್ಥಮಾಡುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. \b \li4 \v 2 ಆ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿದ್ದವು: \b \li1 ಮೊದಲನೆಯವನು, ಪೇತ್ರ ಎಂದು ಎನಿಸಿಕೊಂಡ ಸೀಮೋನ, ಅವನ ಸಹೋದರ ಅಂದ್ರೆಯ; \li1 ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನ; \li1 \v 3 ಫಿಲಿಪ್ಪ, ಬಾರ್ತೊಲೊಮಾಯ; \li1 ತೋಮ, ಸುಂಕದವನಾದ ಮತ್ತಾಯ; \li1 ಅಲ್ಫಾಯನ ಮಗ ಯಾಕೋಬ, ತದ್ದಾಯ; \li1 \v 4 ಕಾನಾನ್ಯನಾದ ಸೀಮೋನ\f + \fr 10:4 \fr*\ft ರೋಮನ್ನರ ವಿರುದ್ಧ ಹೋರಾಡಿದ ರಾಜಕೀಯ ಪಂಗಡ\ft*\f* ಮತ್ತು ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ. \b \p \v 5 ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟಿದ್ದೇನೆಂದರೆ: “ಯೆಹೂದ್ಯರಲ್ಲದವರ ಬಳಿಗೆ ಹೋಗಬೇಡಿರಿ, ಸಮಾರ್ಯರ ಊರನ್ನೂ ಪ್ರವೇಶಿಸಬೇಡಿರಿ. \v 6 ಆದರೆ ತಪ್ಪಿಹೋದ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ. \v 7 ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ. \v 8 ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ. \p \v 9 “ನಿಮ್ಮ ನಡುಕಟ್ಟುಗಳಲ್ಲಿ ಬಂಗಾರ, ಬೆಳ್ಳಿ ಮತ್ತು ತಾಮ್ರದ ನಾಣ್ಯಗಳನ್ನು ಇಟ್ಟುಕೊಳ್ಳಬೇಡಿರಿ. \v 10 ಪ್ರಯಾಣಕ್ಕೆ ಚೀಲವನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಪಾದರಕ್ಷೆಗಳನ್ನಾಗಲಿ, ಕೋಲುಗಳನ್ನಾಗಲಿ ತೆಗೆದುಕೊಳ್ಳಬೇಡಿರಿ. ಏಕೆಂದರೆ ಕೆಲಸದವನು ತನ್ನ ಜೀವನಾಧಾರಕ್ಕೆ ಅರ್ಹನು. \v 11 ನೀವು ಯಾವುದಾದರೂ ಒಂದು ಪಟ್ಟಣವನ್ನು, ಇಲ್ಲವೆ ಹಳ್ಳಿಯನ್ನು ಪ್ರವೇಶಿಸುವಾಗ, ಅದರಲ್ಲಿ ಯೋಗ್ಯ ವ್ಯಕ್ತಿ ಯಾರೆಂದು ವಿಚಾರಿಸಿರಿ, ಅಲ್ಲಿಂದ ಹೊರಡುವವರೆಗೆ ಅಲ್ಲಿಯೇ ತಂಗಿರಿ. \v 12 ನೀವು ಒಂದು ಮನೆಯೊಳಗೆ ಪ್ರವೇಶಿಸಿದಾಗ, ಆ ಮನೆಯವರನ್ನು ಹರಸಿರಿ. \v 13 ಆ ಮನೆಯು ಅಯೋಗ್ಯವಾಗಿದ್ದರೆ, ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ. \v 14 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ, ನೀವು ಆ ಮನೆಯನ್ನು ಇಲ್ಲವೆ ಆ ಪಟ್ಟಣವನ್ನು ಬಿಟ್ಟು ಹೊರಡುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. \v 15 ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು\f + \fr 10:15 \fr*\ft ಈ ಎರಡು ಪಟ್ಟಣಗಳ ದುಷ್ಟಜನರನ್ನು ನಾಶಮಾಡಲು ದೇವರು ಬೆಂಕಿಯ ಮಳೆಯನ್ನು ಸುರಿಸಿದರು. ನೋಡಿರಿ ಆದಿ \+xt 19:1-19\+xt*\ft*\f* ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. \p \v 16 “ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ. \v 17 ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು. \v 18 ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ. \v 19 ಆದರೆ ಅವರು ನಿಮ್ಮನ್ನು ಬಂಧಿಸುವಾಗ, ನೀವು ಹೇಗೆ ಇಲ್ಲವೆ ಏನು ಮಾತನಾಡಬೇಕೆಂದು ಯೋಚಿಸಬೇಡಿರಿ. ನೀವು ಏನು ಮಾತನಾಡಬೇಕೆಂಬುದು ಆ ಗಳಿಗೆಯಲ್ಲೇ ನಿಮಗೆ ತಿಳಿಸಲಾಗುವುದು, \v 20 ಏಕೆಂದರೆ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮೊಳಗಿಂದ ಮಾತನಾಡುವರು. \p \v 21 “ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು. \v 22 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು. \v 23 ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. \p \v 24 “ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ತನ್ನ ಯಜಮಾನನಿಗಿಂತ ಶ್ರೇಷ್ಠನಲ್ಲ. \v 25 ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’\f + \fr 10:25 \fr*\fq ಬೆಲ್ಜೆಬೂಲನು \fq*\ft ಅಂದರೆ \ft*\fqa ದೆವ್ವಗಳ ರಾಜ\fqa*\f* ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ! \p \v 26 “ಆದ್ದರಿಂದ ಅವರಿಗೆ ಹೆದರಬೇಡಿರಿ, ಪ್ರಕಟಗೊಳ್ಳದಂತೆ ಯಾವುದೂ ಮುಚ್ಚಿಡಲಾಗುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ. \v 27 ನಾನು ನಿಮಗೆ ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ. ನೀವು ಕಿವಿಯಲ್ಲಿ ಕೇಳುವುದನ್ನು ಮಾಳಿಗೆಯ ಮೇಲೆ ಸಾರಿರಿ. \v 28 ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ. \v 29 ಒಂದು ರೂಪಾಯಿಗೆ\f + \fr 10:29 \fr*\ft ಇದು ಒಂದು ತಾಮ್ರದ ನಾಣ್ಯ. ಇದರ ಬೆಲೆ ಒಂದು ರೂಪಾಯಿಯ ಹದಿನಾರನೆಯ ಭಾಗ. ಅಂದರೆ ಒಬ್ಬ ಮನುಷ್ಯನ ಅರ್ಧಗಂಟೆಯ ಕೂಲಿಗೆ ಸಮ.\ft*\f* ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ. \v 30 ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. \v 31 ಆದ್ದರಿಂದ ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು. \p \v 32 “ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. \v 33 ಯಾವನಾದರೂ ಜನರ ಮುಂದೆ ನನ್ನನ್ನು ನಿರಾಕರಿಸಿದರೆ, ನಾನು ಸಹ ಅವನನ್ನು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನಿರಾಕರಿಸುವೆನು. \p \v 34 “ನಾನು ಭೂಮಿಯ ಮೇಲೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿರಿ. ಸಮಾಧಾನವನ್ನಲ್ಲ, ಖಡ್ಗವನ್ನು ತರಲು ಬಂದೆನು. \v 35 ಹೇಗೆಂದರೆ, \q1 “ ‘ಮಗನಿಗೂ ಅವನ ತಂದೆಗೂ, \q2 ಮಗಳಿಗೂ ಆಕೆಯ ತಾಯಿಗೂ, \q1 ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವುದಕ್ಕೆ ನಾನು ಬಂದೆನು. \q2 \v 36 ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.’\f + \fr 10:36 \fr*\ft \+xt ಮೀಕ 7:6\+xt*\ft*\f* \p \v 37 “ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. \v 38 ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ. \v 39 ತನ್ನ ಪ್ರಾಣವನ್ನು ಕಂಡುಕೊಳ್ಳುವವನು ಅದನ್ನು ಕಳೆದುಕೊಳ್ಳುವನು. ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು. \p \v 40 “ನಿಮ್ಮನ್ನು ಸ್ವಾಗತಿಸುವವರು ನನ್ನನ್ನು ಸ್ವಾಗತಿಸುತ್ತಾರೆ. ನನ್ನನ್ನು ಸ್ವಾಗತಿಸಿದವರು, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವಾಗತಿಸುತ್ತಾರೆ. \v 41 ಪ್ರವಾದಿಯೆಂದು ಪ್ರವಾದಿಯನ್ನು ಸ್ವಾಗತಿಸುವವರು ಪ್ರವಾದಿಯ ಪ್ರತಿಫಲವನ್ನು ಪಡೆಯುವರು; ನೀತಿವಂತನೆಂದು ನೀತಿವಂತನನ್ನು ಸ್ವಾಗತಿಸುವವರು ನೀತಿವಂತನ ಪ್ರತಿಫಲವನ್ನು ಪಡೆಯುವರು. \v 42 ಯಾವನಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಕೇವಲ ಒಂದು ಲೋಟ ತಣ್ಣೀರನ್ನು ಕುಡಿಯುವುದಕ್ಕೆ ಕೊಡುವವನು ತನ್ನ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ಸತ್ಯವಾಗಿ ನಾನು ನಿಮಗೆ ಹೇಳುತ್ತೇನೆ.” \c 11 \s1 ಯೇಸು ಮತ್ತು ಸ್ನಾನಿಕ ಯೋಹಾನನು \p \v 1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶ ಕೊಟ್ಟಾದ ಮೇಲೆ, ಗಲಿಲಾಯ ಪ್ರದೇಶದ ಪಟ್ಟಣಗಳಲ್ಲಿ ಬೋಧಿಸುವುದಕ್ಕೂ ಶುಭವರ್ತಮಾನವನ್ನು ಸಾರುವುದಕ್ಕೂ ಅಲ್ಲಿಂದ ಹೊರಟು ಹೋದರು. \p \v 2 ಆಗ ಸೆರೆಮನೆಯಲ್ಲಿ ಯೋಹಾನನು ಕ್ರಿಸ್ತನ ಕಾರ್ಯಗಳನ್ನು ಕೇಳಿ, ತನ್ನ ಶಿಷ್ಯರನ್ನು ಕಳುಹಿಸಿ ಯೇಸುವಿಗೆ, \v 3 “ಬರಬೇಕಾದ ಮೆಸ್ಸೀಯ ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ವಿಚಾರಿಸಿದನು. \p \v 4 ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೋಹಾನನಿಗೆ ಹೋಗಿ ತಿಳಿಸಿರಿ; \v 5 ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ. \v 6 ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,”\f + \fr 11:6 \fr*\ft ಕ್ರಿಸ್ತನು ಬಂದಾಗ ಇವೆಲ್ಲವೂ ನೆರವೇರುವಂತೆ ಪ್ರವಾದಿಸಲಾಗಿದೆ. ನೋಡಿರಿ, \+xt ಯೆಶಾಯ 35:5-6; 26:19; 29:18-19; 42:18; 61:1\+xt*\ft*\f* ಎಂದರು. \p \v 7 ಅವರು ಹೊರಟು ಹೋಗುತ್ತಿದ್ದಾಗ, ಯೇಸು ಯೋಹಾನನ ಕುರಿತಾಗಿ ಜನಸಮೂಹಕ್ಕೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ? \v 8 ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸುವವರು ರಾಜರ ಅರಮನೆಗಳಲ್ಲಿ ಇರುತ್ತಾರೆ. \v 9 ಆದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ. \v 10 ಯೋಹಾನನ ಕುರಿತು ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: \q1 “ ‘ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧಮಾಡುವಂತೆ \q2 ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ.’\f + \fr 11:10 \fr*\ft \+xt ಮಲಾಕಿ 3:1\+xt*\ft*\f* \m \v 11 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಹುಟ್ಟಲಿಲ್ಲ; ಆದರೂ ಪರಲೋಕ ರಾಜ್ಯದಲ್ಲಿರುವ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ. \v 12 ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ,\f + \fr 11:12 \fr*\ft ಅಂದರೆ, \ft*\fqa ಒತ್ತಾಯದಿಂದ ಪ್ರಗತಿಯಾಗಿದೆ\fqa*\f* ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ. \v 13 ಯೋಹಾನನ ಕಾಲದ ತನಕ ಮೋಶೆಯ ನಿಯಮ ಹಾಗು ಎಲ್ಲ ಪ್ರವಾದಿಗಳು ದೇವರ ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು. \v 14 ನೀವು ಇದನ್ನು ಸ್ವೀಕರಿಸುವುದಕ್ಕೆ ಮನಸ್ಸಿದ್ದರೆ, ಬರತಕ್ಕ ಎಲೀಯನು ಈ ಯೋಹಾನನೇ. \v 15 ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ. \p \v 16 “ಆದರೆ ಈ ಸಂತತಿಯನ್ನು ನಾನು ಯಾವುದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ಇತರರನ್ನು ಕರೆಯುತ್ತಾ: \q1 \v 17 “ ‘ನಾವು ನಿಮಗಾಗಿ ಕೊಳಲೂದಿದೆವು, \q2 ನೀವು ಕುಣಿಯಲಿಲ್ಲ; \q1 ನಾವು ಶೋಕಗೀತೆ ಹಾಡಿದೆವು, \q2 ನೀವು ಗೋಳಾಡಲಿಲ್ಲ,’ \m ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ. \p \v 18 “ಏಕೆಂದರೆ ಯೋಹಾನನು ಅನ್ನಪಾನಗಳನ್ನು ತೆಗೆದುಕೊಳ್ಳಲಿಲ್ಲ. ಅದಕ್ಕೆ ಅವರು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದರು. \v 19 ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು. ಅದಕ್ಕೆ ಅವರು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕೃತ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದು ಹೇಳಿದರು. \s1 ಮಾನಸಾಂತರ ಪಡದ ಊರುಗಳನ್ನು ಗದರಿಸಿದ್ದು \p \v 20 ತರುವಾಯ ತಮ್ಮ ಹೆಚ್ಚಾದ ಮಹತ್ಕಾರ್ಯಗಳು ನಡೆದ ಪಟ್ಟಣಗಳು, ದೇವರ ಕಡೆಗೆ ತಿರುಗಿಕೊಳ್ಳದೆ ಇದ್ದುದರಿಂದ ಯೇಸು ಅವುಗಳನ್ನು ಗದರಿಸತೊಡಗಿ, \v 21 “ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು. \v 22 ಆದರೂ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು. \v 23 ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ\f + \fr 11:23 \fr*\fq ಪಾತಾಳ \fq*\ft ಅಂದರೆ \ft*\fqa ಸತ್ತವರ ಸ್ಥಳ\fqa*\f* ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ\f + \fr 11:23 \fr*\ft ನೋಡಿರಿ \+xt ಆದಿ 19:24-29\+xt*\ft*\f* ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು. \v 24 ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಸೊದೋಮ್ ಪಟ್ಟಣದ ಗತಿಯು ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು. \s1 ಕಷ್ಟಪಡುವವರಿಗೆ ವಿಶ್ರಾಂತಿ \p \v 25 ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. \v 26 ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು. \p \v 27 “ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು. \p \v 28 “ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. \v 29 ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ. \v 30 ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ,” ಎಂದು ಹೇಳಿದರು. \c 12 \s1 ಸಬ್ಬತ್ ದಿನಕ್ಕೆ ಒಡೆಯ \p \v 1 ಯೇಸು ಒಂದು ಸಬ್ಬತ್\f + \fr 12:1 \fr*\ft ಇದು ವಾರದ ಏಳನೆಯ ದಿನ, ಈ ದಿನವನ್ನು ಯೆಹೂದ್ಯರು ಪವಿತ್ರ ದಿನ ಭಾವಿಸುತ್ತಿದ್ದರು. ಈ ದಿನದಲ್ಲಿ ಅವರು ಆರಾಧನೆ ಮತ್ತು ವಿಶ್ರಾಂತಿ ಮಾಡುತ್ತಿದ್ದರು.\ft*\f* ದಿನ ಪೈರಿನ ಹೊಲವನ್ನು ಹಾದುಹೋಗುತ್ತಿದ್ದಾಗ, ಅವರ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು. \v 2 ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು. \p \v 3 ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ? \v 4 ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ?\f + \fr 12:4 \fr*\ft \+xt 1 ಸಮು 21:1-6\+xt*\ft*\f* \v 5 ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಉಲ್ಲಂಘಿಸಿದರೂ ನಿರ್ದೋಷಿಗಳಾಗಿದ್ದಾರೆಂದು ನೀವು ನಿಯಮದಲ್ಲಿ ಓದಲಿಲ್ಲವೇ? \v 6 ದೇವಾಲಯಕ್ಕಿಂತಲೂ ದೊಡ್ಡವನು ಇಲ್ಲಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ. \v 7 ಆದರೆ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’\f + \fr 12:7 \fr*\ft \+xt ಹೋಶೇ 6:6\+xt*\ft*\f* ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ, ನಿರಪರಾಧಿಗಳನ್ನು ಖಂಡಿಸುತ್ತಿರಲಿಲ್ಲ. \v 8 ಏಕೆಂದರೆ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದೇನೆ,” ಎಂದು ಹೇಳಿದರು. \p \v 9 ಯೇಸು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದರು. \v 10 ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯಸಮ್ಮತವೋ?” ಎಂದು ಕೇಳಿದರು. \p \v 11 ಅದಕ್ಕೆ ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ, ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ? \v 12 ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಮೌಲ್ಯವುಳ್ಳವನಾಗಿದ್ದಾನಲ್ಲವೇ? ಆದ್ದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವುದು ನ್ಯಾಯಸಮ್ಮತವಾಗಿದೆ!” ಎಂದು ಹೇಳಿದರು. \p \v 13 ಆಗ ಯೇಸು ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದರು. ಅವನು ಕೈಚಾಚಿದಾಗ ಅದು ಸಂಪೂರ್ಣ ವಾಸಿಯಾಗಿ ಇನ್ನೊಂದು ಕೈಯಂತೆಯೇ ಆಯಿತು. \v 14 ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು. \s1 ದೇವರಿಗೆ ಮೆಚ್ಚಿಕೆಯಾದ ಸೇವಕನು \p \v 15 ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದರು. ದೊಡ್ಡ ಜನರ ಗುಂಪು ಅವರನ್ನು ಹಿಂಬಾಲಿಸಿತು. ಯೇಸು ಅವರಲ್ಲಿ ಅಸ್ವಸ್ಥರಾದವರನ್ನು ಗುಣಪಡಿಸಿದರು. \v 16 ಆದರೆ ಯೇಸು ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವರನ್ನು ಎಚ್ಚರಿಸಿದರು. \v 17 ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ: \q1 \v 18 “ಈತನು ನಾನು ಆರಿಸಿಕೊಂಡ ನನ್ನ ದಾಸನು, \q2 ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. \q1 ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, \q2 ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು. \q1 \v 19 ಈತನು ಜಗಳವಾಡುವವನಲ್ಲ, ಕೂಗಾಡುವವನಲ್ಲ; \q2 ಬೀದಿಗಳಲ್ಲಿ ಈತನ ಸ್ವರವನ್ನು ಯಾರೂ ಕೇಳಿಸಿಕೊಳ್ಳುವುದೂ ಇಲ್ಲ. \q1 \v 20 ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, \q2 ಜಜ್ಜಿದ ದಂಟನ್ನು ಮುರಿಯುವವನಲ್ಲ, \q1 ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ. \q2 \v 21 ಈತನ ಹೆಸರಿನಲ್ಲಿಯೇ ಯೆಹೂದ್ಯರಲ್ಲದವರು ನಿರೀಕ್ಷೆ ಇಡುವರು.”\f + \fr 12:21 \fr*\ft \+xt ಯೆಶಾಯ 42:1-4\+xt*\ft*\f* \s1 ಯೇಸು ಮತ್ತು ಬೆಲ್ಜೆಬೂಲ \p \v 22 ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು. \v 23 ಆಗ ಜನರೆಲ್ಲರೂ ವಿಸ್ಮಯಗೊಂಡವರಾಗಿ, “ದಾವೀದನ ಪುತ್ರನು ಈತನೇ ಅಲ್ಲವೇ?”\f + \fr 12:23 \fr*\ft ದೇವರು ಅರಸನಾದ ದಾವೀದನಿಗೆ ಮುಂಬರುವ ಕ್ರಿಸ್ತನ ಬಗ್ಗೆ ತಿಳಿಸಿದ ಪ್ರವಾದನೆಯ ಸೂಚನೆಯೇ ಈ ದಾವೀದನ ಪುತ್ರ ಮತ್ತು ಇಸ್ರಾಯೇಲ್ ಜನರಲ್ಲಿ ದಾವೀದನ ಕುಟುಂಬದಲ್ಲಿ ವಿಮೋಚಕನಾದ ಮೆಸ್ಸೀಯನು ಹುಟ್ಟುವನೆಂಬ ನಿರೀಕ್ಷೆಯಿತ್ತು.\ft*\f* ಎಂದರು. \p \v 24 ಆದರೆ ಫರಿಸಾಯರು ಇದನ್ನು ಕೇಳಿದಾಗ, “ಈತನು ದೆವ್ವಗಳನ್ನು ಓಡಿಸುತ್ತಿರುವುದು ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದಲೇ,” ಎಂದರು. \p \v 25 ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ. \v 26 ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ? \v 27 ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಜನರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು. \v 28 ನಾನು ದೇವರ ಆತ್ಮನಿಂದ ದೆವ್ವಗಳನ್ನು ಓಡಿಸುವುದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ. \p \v 29 “ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು. \p \v 30 “ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ. \v 31 ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ. \v 32 ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ. \p \v 33 “ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು. \v 34 ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ. \v 35 ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. \v 36 ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. \v 37 ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು,” ಎಂದು ಹೇಳಿದರು. \s1 ಯೋನನ ಸೂಚಕಕಾರ್ಯವು \p \v 38 ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು. \p \v 39 ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ\f + \fr 12:39 \fr*\ft ಯೋನನು 8ನೇ ಶತಮಾನದ ಪ್ರವಾದಿ. ದೇವರು ಇವನನ್ನು ಮಹಾನಗರ ನಿನೆವೆಗೆ ಪ್ರವಾದಿಸಲು ಕಳುಹಿಸಿದ್ದನು.\ft*\f* ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ. \v 40 ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು. \v 41 ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ. \v 42 ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು\f + \fr 12:42 \fr*\ft \+xt 1 ಅರಸು 10:1-13; 2 ಪೂರ್ವ 9:1-12\+xt*\ft*\f* ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ. \p \v 43 “ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು, \v 44 ‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಆ ಮನೆಯು ಬರಿದಾಗಿಯೂ ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ. \v 45 ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು. \s1 ಕ್ರಿಸ್ತ ಯೇಸುವಿನ ತಾಯಿ ಮತ್ತು ಸಹೋದರರು \p \v 46 ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು. \v 47 ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು. \p \v 48 ಅದಕ್ಕೆ ಯೇಸು ತಮಗೆ ಹೇಳಿದವನಿಗೆ ಉತ್ತರವಾಗಿ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ, \v 49 ಶಿಷ್ಯರ ಕಡೆಗೆ ತಮ್ಮ ಕೈಚಾಚಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು. \v 50 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು. \c 13 \s1 ಬಿತ್ತುವವನ ಸಾಮ್ಯ \p \v 1 ಅದೇ ದಿನದಲ್ಲಿ ಯೇಸು ಮನೆಯಿಂದ ಹೊರಟುಹೋಗಿ ಸರೋವರದ ಬಳಿಯಲ್ಲಿ ಕುಳಿತುಕೊಂಡರು. \v 2 ಆಗ ಜನರ ದೊಡ್ಡ ಸಮೂಹವು ಯೇಸುವಿನ ಬಳಿಗೆ ಕೂಡಿಬಂದದ್ದರಿಂದ ಅವರು ದೋಣಿಯನ್ನು ಹತ್ತಿ ಕುಳಿತುಕೊಂಡರು, ಆ ಸಮೂಹದವರೆಲ್ಲಾ ದಡದ ಮೇಲೆ ನಿಂತಿದ್ದರು. \v 3 ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು; \v 4 ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು, ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. \v 5 ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು. \v 6 ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು. \v 7 ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. \v 8 ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು. \v 9 ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.” \p \v 10 ತರುವಾಯ ಶಿಷ್ಯರು ಬಂದು ಯೇಸುವಿಗೆ, “ನೀವು ಸಾಮ್ಯಗಳಲ್ಲಿ ಅವರೊಡನೆ ಮಾತನಾಡುವುದೇಕೆ?” ಎಂದು ಕೇಳಿದರು. \p \v 11 ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ. \v 12 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.” \v 13 ಆದ್ದರಿಂದ, ನಾನು ಅವರೊಡನೆ ಸಾಮ್ಯಗಳಲ್ಲಿ ಮಾತನಾಡುತ್ತೇನೆ: \q1 “ಏಕೆಂದರೆ ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; \q2 ಕೇಳಿದರೂ ತಿಳಿದುಕೊಳ್ಳುವುದಿಲ್ಲ; ಅವರು ಗ್ರಹಿಸುವುದೂ ಇಲ್ಲ. \m \v 14 ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ, \q1 “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; \q2 ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ. \q1 \v 15 ಈ ಜನರ ಹೃದಯವು ಕಠೋರವಾಗಿದೆ; \q2 ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, \q2 ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. \q1 ಇಲ್ಲವಾದರೆ ತಾವು ಕಣ್ಣಿನಿಂದ ಕಂಡು, \q2 ಕಿವಿಯಿಂದ ಕೇಳಿ. \q2 ತಮ್ಮ ಹೃದಯದಿಂದ ತಿಳಿದು, \q1 ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’\f + \fr 13:15 \fr*\ft \+xt ಯೆಶಾಯ 6:9,10\+xt*\ft*\f* \m ಎಂಬುದೇ. \v 16 ಆದರೆ ನಿಮ್ಮ ಕಣ್ಣುಗಳು ಕಾಣುವುದರಿಂದಲೂ ನಿಮ್ಮ ಕಿವಿಗಳು ಕೇಳುವುದರಿಂದಲೂ ನೀವು ಧನ್ಯರು. \v 17 ನಾನು ಸತ್ಯವಾಗಿ ನಿಮಗೆ ಹೇಳುತ್ತೇನೆ, ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ. \p \v 18 “ಆದ್ದರಿಂದ ಬಿತ್ತುವವನ ಸಾಮ್ಯದ ಅರ್ಥವನ್ನು ನೀವು ಕೇಳಿರಿ: \v 19 ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು. \v 20 ಕಲ್ಲು ನೆಲದ ಮೇಲೆ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ. \v 21 ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.\f + \fr 13:21 \fr*\ft ಅಂದರೆ \ft*\fqa ವಿಶ್ವಾಸದಲ್ಲಿ ಬೀಳುತ್ತಾರೆ.\fqa*\f* \v 22 ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ. \v 23 ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.” \s1 ಕಳೆಯನ್ನು ಕುರಿತು ಸಾಮ್ಯ \p \v 24 ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. \v 25 ಆದರೆ ಜನರು ನಿದ್ರಿಸುತ್ತಿರುವಾಗ, ಅವನ ವೈರಿಯು ಬಂದು ಗೋಧಿಯ ನಡುವೆ ಕಳೆಯನ್ನು ಬಿತ್ತಿ ಹೊರಟುಹೋದನು. \v 26 ಗೋಧಿಯು ಮೊಳೆತು ಬೆಳೆಯುತ್ತಿರುವಾಗ, ಕಳೆ ಸಹ ಕಾಣಿಸಿಕೊಂಡಿತು. \p \v 27 “ಮನೆಯ ಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, ‘ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದೆಯಲ್ಲಾ? ಆದರೆ ಈ ಕಳೆಯು ಎಲ್ಲಿಂದ ಬಂತು?’ ಎಂದು ಕೇಳಿದರು. \p \v 28 “ಯಜಮಾನನು ಅವರಿಗೆ, ‘ವೈರಿಯು ಇದನ್ನು ಮಾಡಿದ್ದಾನೆ,’ ಎಂದನು. \p “ಆಗ ಸೇವಕರು ಅವನಿಗೆ, ‘ನಾವು ಹೋಗಿ ಅವುಗಳನ್ನು ಕಿತ್ತುಹಾಕೋಣವೇ?’ ಎಂದು ಕೇಳಿದರು. \p \v 29 “ಆದರೆ ಯಜಮಾನನು, ‘ಬೇಡ, ನೀವು ಕಳೆಯನ್ನು ಕೀಳುವಾಗ, ಅವುಗಳೊಂದಿಗೆ ಗೋಧಿಯನ್ನೂ ಕಿತ್ತುಬಿಟ್ಟೀರಿ. \v 30 ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.” \s1 ಸಾಸಿವೆಕಾಳಿನ ಸಾಮ್ಯ \p \v 31 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ. \v 32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದ್ದರೂ ಅದು ಬೆಳೆದಾಗ, ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು, ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡುತ್ತವೆ.” \p \v 33 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ\f + \fr 13:33 \fr*\ft ಸುಮಾರು ಮೂವತ್ತು ಸೇರು\ft*\f* ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.” \p \v 34 ಯೇಸು ಇವೆಲ್ಲವನ್ನು ಜನಸಮೂಹದೊಂದಿಗೆ ಸಾಮ್ಯಗಳಲ್ಲಿಯೇ ಹೇಳಿದರು; ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. \v 35 ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: \q1 “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. \q2 ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”\f + \fr 13:35 \fr*\ft \+xt ಕೀರ್ತನೆ 78:2\+xt*\ft*\f* \s1 ಕಳೆಯ ಸಾಮ್ಯದ ವಿವರಣೆ \p \v 36 ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ,” ಎಂದರು. \p \v 37 ಯೇಸು ಉತ್ತರವಾಗಿ ಅವರಿಗೆ, “ಒಳ್ಳೆಯ ಬೀಜ ಬಿತ್ತುವವನು ಮನುಷ್ಯಪುತ್ರನು. \v 38 ಹೊಲವು ಈ ಲೋಕ; ಒಳ್ಳೆಯ ಬೀಜವು ದೇವರ ರಾಜ್ಯದ ಮಕ್ಕಳು; ಕಳೆಯು ಕೆಡುಕನ ಮಕ್ಕಳಾಗಿದ್ದಾರೆ. \v 39 ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ. \p \v 40 “ಹೇಗೆ ಕಳೆಯನ್ನು ಕಿತ್ತು ಬೆಂಕಿಯಲ್ಲಿ ಸುಡುವರೋ, ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವುದು. \v 41 ಮನುಷ್ಯಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಪಾಪಕ್ಕೆ ಆತಂಕವಾದ ಎಲ್ಲವನ್ನೂ, ಕೇಡುಮಾಡುವ ಎಲ್ಲರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ, \v 42 ದೂತರು ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು. \v 43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ. \s1 ಹೂಳಿಟ್ಟ ನಿಕ್ಷೇಪ ಹಾಗೂ ಮುತ್ತುಗಳ ಸಾಮ್ಯ \p \v 44 “ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ. \p \v 45 “ಪರಲೋಕ ರಾಜ್ಯವು ಒಳ್ಳೆಯ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. \v 46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ. \s1 ಬಲೆಯ ಸಾಮ್ಯ \p \v 47 “ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ. \v 48 ಬಲೆ ತುಂಬಿದಾಗ, ಬೆಸ್ತರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಬುಟ್ಟಿಗಳಲ್ಲಿ ತುಂಬಿಸಿ, ಕೆಟ್ಟವುಗಳನ್ನು ಹೊರಗೆ ಬಿಸಾಡುತ್ತಾರೆ. \v 49 ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ, \v 50 ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು,” ಎಂದು ಹೇಳಿದರು. \p \v 51 ಯೇಸು ಶಿಷ್ಯರಿಗೆ, “ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ?” ಎಂದು ಕೇಳಿದರು. \p ಅದಕ್ಕೆ, ಅವರು ಯೇಸುವಿಗೆ, “ಹೌದು,” ಎಂದು ಹೇಳಿದರು. \p \v 52 ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು. \s1 ಗೌರವವಿಲ್ಲದ ಪ್ರವಾದಿ \p \v 53 ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟು ಹೋದರು. \v 54 ಯೇಸು ತಮ್ಮ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಅವರಿಗೆ ಬೋಧನೆ ಮಾಡಲು ಪ್ರಾರಂಭಿಸಲು, ಅವರು ವಿಸ್ಮಯಗೊಂಡು, “ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದವು? \v 55 ಈತನು ಬಡಗಿಯ ಪುತ್ರನಲ್ಲವೇ? ಮರಿಯಳೆಂಬುವಳು ಈತನ ತಾಯಿಯಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಎಂಬುವರು ಈತನ ತಮ್ಮಂದಿರಲ್ಲವೇ? \v 56 ಈತನ ತಂಗಿಯರೆಲ್ಲರೂ ನಮ್ಮೊಂದಿಗೆ ಇದ್ದಾರಲ್ಲವೇ? ಹಾಗಾದರೆ, ಇವೆಲ್ಲವು ಈತನಿಗೆ ಎಲ್ಲಿಂದ ಬಂದವು?” ಎಂದು ಮಾತನಾಡಿಕೊಂಡರು. \v 57 ಅವರು ಯೇಸುವನ್ನು ತಾತ್ಸಾರ ಮಾಡಿದರು. \p ಆದರೆ ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು. \p \v 58 ಯೇಸು ಅವರ ಅಪನಂಬಿಕೆಯ ದೆಸೆಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲ. \c 14 \s1 ಸ್ನಾನಿಕನಾದ ಯೋಹಾನನ ಶಿರಚ್ಛೇದನ \p \v 1 ಆ ಕಾಲದಲ್ಲಿ ಚತುರಾಧಿಪತಿಯಾದ\f + \fr 14:1 \fr*\ft ನಾಲ್ಕರಲ್ಲಿ ಒಂದು ಭಾಗವನ್ನು ಆಳುವವನು\ft*\f* ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ, \v 2 ತನ್ನ ಸೇವಕರಿಗೆ, “ಈತನು ಸ್ನಾನಿಕನಾದ ಯೋಹಾನನೇ. ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ! ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಹೇಳಿದನು. \p \v 3 ಹೆರೋದನು ತನ್ನ ಸಹೋದರ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ, ಯೋಹಾನನನ್ನು ಹಿಡಿಸಿ, ಕಟ್ಟಿ ಸೆರೆಯಲ್ಲಿ ಹಾಕಿಸಿದ್ದನು. \v 4 ಏಕೆಂದರೆ ಯೋಹಾನನು, “ನೀನು ಅವಳನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಅವನಿಗೆ ಹೇಳಿದ್ದನು. \v 5 ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು. \p \v 6 ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು. \v 7 ಆದ್ದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅರಸನು ಆಣೆಯಿಟ್ಟು ಪ್ರಮಾಣ ಮಾಡಿದನು. \v 8 ಅವಳು ತನ್ನ ತಾಯಿಯ ಸಲಹೆ ಪಡೆದು, “ಸ್ನಾನಿಕನಾದ ಯೋಹಾನನ ತಲೆಯನ್ನು ಇಲ್ಲಿಯೇ ಒಂದು ತಟ್ಟೆಯಲ್ಲಿ ನನಗೆ ತರಿಸಿಕೊಡು,” ಎಂದು ಹೇಳಿದಳು. \v 9 ಆಗ ಅರಸನು ದುಃಖಪಟ್ಟರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು. \v 10 ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿದ್ದ ಯೋಹಾನನ ತಲೆಯನ್ನು ಕಡಿಸಿದನು. \v 11 ಇದಲ್ಲದೆ ಅವನ ತಲೆಯನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು. \v 12 ಬಳಿಕ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ತಿಳಿಸಿದರು. \s1 ಯೇಸು ಐದು ಸಾವಿರ ಜನರಿಗೆ ಊಟಮಾಡಿಸಿದ್ದು \p \v 13 ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು. \v 14 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು, ಅವರ ಮೇಲೆ ಕನಿಕರಪಟ್ಟು, ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದರು. \p \v 15 ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು,” ಎಂದರು. \p \v 16 ಆದರೆ ಯೇಸುವು, “ಅವರು ಹೋಗಬೇಕಾಗಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದು ಹೇಳಿದರು. \p \v 17 ಅವರು ಯೇಸುವಿಗೆ, “ನಮ್ಮ ಹತ್ತಿರ ಐದು ರೊಟ್ಟಿ ಎರಡು ಮೀನುಗಳು ಮಾತ್ರ ಇವೆ,” ಎಂದು ಉತ್ತರಕೊಟ್ಟರು. \p \v 18 ಯೇಸು, “ಅವುಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದರು. \v 19 ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು. \v 20 ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು. \v 21 ಊಟಮಾಡಿದವರಲ್ಲಿ ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ ಇದ್ದರು. \s1 ಯೇಸು ನೀರಿನ ಮೇಲೆ ನಡೆದದ್ದು \p \v 22 ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಆಚೆದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು. \v 23 ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ, ಪ್ರಾರ್ಥನೆಮಾಡಲು ಏಕಾಂತವಾಗಿ ಬೆಟ್ಟಕ್ಕೆ ಹೋದರು. ಸಂಜೆಯಾದಾಗ ಯೇಸು ಒಬ್ಬರೇ ಅಲ್ಲಿ ಇದ್ದರು. \v 24 ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು. \p \v 25 ರಾತ್ರಿ ಮೂರು ಗಂಟೆಯಲ್ಲಿ ಯೇಸು ಸರೋವರದ ಮೇಲೆ, ನಡೆಯುತ್ತಾ ಶಿಷ್ಯರ ಬಳಿಗೆ ಬಂದರು. \v 26 ಯೇಸು ಸರೋವರದ ಮೇಲೆ ನಡೆಯುವುದನ್ನು ಶಿಷ್ಯರು ಕಂಡು ಕಳವಳಪಟ್ಟು, “ಅದು ಭೂತ,” ಎಂದು ಭೀತಿಯಿಂದ ಕೂಗಿಕೊಂಡರು. \p \v 27 ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು. \p \v 28 ಆಗ ಪೇತ್ರನು ಯೇಸುವಿಗೆ, “ಸ್ವಾಮೀ, ನೀವೇ ಆಗಿದ್ದರೆ, ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರಲು ನನಗೆ ಅಪ್ಪಣೆಕೊಡಿರಿ,” ಎಂದನು. \p \v 29 ಅದಕ್ಕೆ ಯೇಸು, “ಬಾ,” ಎಂದರು. \p ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು. \v 30 ಆದರೆ ಬಲವಾದ ಗಾಳಿಯನ್ನು ಕಂಡು, ಅವನು ಭಯಪಟ್ಟು ಮುಳುಗುತ್ತಾ, “ಸ್ವಾಮಿ, ನನ್ನನ್ನು ಕಾಪಾಡಿರಿ!” ಎಂದು ಕೂಗಿ ಹೇಳಿದನು. \p \v 31 ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು. \p \v 32 ಅವರು ದೋಣಿ ಹತ್ತಿದಾಗ, ಗಾಳಿ ನಿಂತುಹೋಯಿತು. \v 33 ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು. \p \v 34 ಅವರು ಸರೋವರವನ್ನು ದಾಟಿ, ಗೆನೆಜರೇತ್ ಊರಿಗೆ ಬಂದರು. \v 35 ಆಗ ಅಲ್ಲಿದ್ದ ಜನರು ಯೇಸುವಿನ ಗುರುತು ಹಿಡಿದು, ಸುತ್ತುಮುತ್ತಲಿನ ಊರುಗಳಿಗೆಲ್ಲಾ ಹೇಳಿ ಕಳುಹಿಸಿ, ರೋಗಿಗಳನ್ನೆಲ್ಲಾ ಯೇಸುವಿನ ಬಳಿಗೆ ತಂದರು. \v 36 ಅವರು ಯೇಸುವಿನ ಉಡುಪಿನ ಅಂಚನ್ನಾದರೂ ಸ್ಪರ್ಶಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು. \c 15 \s1 ಶುದ್ಧವೂ ಅಶುದ್ಧವೂ \p \v 1 ಯೆರೂಸಲೇಮಿನಿಂದ ಫರಿಸಾಯರು ಮತ್ತು ನಿಯಮ ಬೋಧಕರು ಯೇಸುವಿನ ಬಳಿಗೆ ಬಂದು, \v 2 “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯವನ್ನು ಏಕೆ ಮೀರುತ್ತಾರೆ? ಅವರು ಊಟಕ್ಕೆ ಮುಂಚೆ ತಮ್ಮ ಕೈಗಳನ್ನು ಏಕೆ ತೊಳೆದುಕೊಳ್ಳುವುದಿಲ್ಲ?” ಎಂದರು. \p \v 3 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ನೀವು ದೇವರ ಆಜ್ಞೆಯನ್ನು ಏಕೆ ಮೀರುತ್ತೀರಿ? \v 4 ‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’\f + \fr 15:4 \fr*\ft \+xt ವಿಮೋ 20:12; ಧರ್ಮೋ 5:16\+xt*\ft*\f* ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’\f + \fr 15:4 \fr*\ft \+xt ವಿಮೋ 21:17; ಯಾಜಕ 20:9\+xt*\ft*\f* ಎಂದು ದೇವರು ಹೇಳಿದ್ದಾರೆ. \v 5 ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ, \v 6 ‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ. \v 7 ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ: \q1 \v 8 “ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, \q2 ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. \q1 \v 9 ಅವರು ಮನುಷ್ಯರ ಆಜ್ಞೆಗಳನ್ನು ಉಪದೇಶಗಳನ್ನಾಗಿ ಬೋಧಿಸುವುದರಿಂದ \q2 ನನ್ನನ್ನು ಆರಾಧಿಸುವುದು ವ್ಯರ್ಥ.’\f + \fr 15:9 \fr*\ft \+xt ಯೆಶಾಯ 29:13\+xt*\ft*\f*” \p \v 10 ಯೇಸು ಜನಸಮೂಹವನ್ನು ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ. \v 11 ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ, ಆದರೆ ಬಾಯೊಳಗಿಂದ ಹೊರಗೆ ಬರುವಂಥದ್ದೇ ಮನುಷ್ಯನನ್ನು ಅಶುದ್ಧ ಮಾಡುತ್ತದೆ,” ಎಂದು ಹೇಳಿದರು. \p \v 12 ತರುವಾಯ ಯೇಸುವಿನ ಶಿಷ್ಯರು ಬಂದು, “ಫರಿಸಾಯರು ನಿಮ್ಮ ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿಮಗೆ ತಿಳಿಯಿತೇ?” ಎಂದು ಕೇಳಿದರು. \p \v 13 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಪರಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊಂದು ಗಿಡವು ಬೇರುಸಹಿತವಾಗಿ ಕಿತ್ತುಹಾಕಲಾಗುವುದು. \v 14 ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು. \p \v 15 ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸು,” ಎಂದನು. \p \v 16 ಅದಕ್ಕೆ ಯೇಸು, “ನೀವು ಸಹ ಇನ್ನೂ ಬುದ್ಧಿಯಿಲ್ಲದವರಾಗಿದ್ದೀರಾ?” ಎಂದು ಕೇಳಿ, \v 17 “ಬಾಯೊಳಕ್ಕೆ ಹೋಗಿ ಹೊಟ್ಟೆಯಲ್ಲಿ ಸೇರುವುದೆಲ್ಲವೂ ವಿಸರ್ಜಿತವಾಗುವುದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? \v 18 ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವು ಹೃದಯದೊಳಗಿಂದ ಬಂದು ಮನುಷ್ಯನನ್ನು ಅಶುದ್ಧ ಮಾಡುತ್ತವೆ. \v 19 ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ. \v 20 ಇವುಗಳೇ ಮನುಷ್ಯನನ್ನು ಅಶುದ್ಧ ಮಾಡುತ್ತವೆ; ಆದರೆ ಕೈತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ,” ಎಂದರು. \s1 ಕಾನಾನ್ಯ ಸ್ತ್ರೀಯ ನಂಬಿಕೆ \p \v 21 ಯೇಸು ಅಲ್ಲಿಂದ ಹೊರಟು ಟೈರ್ ಸೀದೋನ್ ಪ್ರದೇಶಕ್ಕೆ ಬಂದರು. \v 22 ಆಗ, ಕಾನಾನ್ಯ ಸ್ತ್ರೀಯೊಬ್ಬಳು\f + \fr 15:22 \fr*\ft ಯೆಹೂದ್ಯ ಅಲ್ಲದ ಸ್ತ್ರೀ\ft*\f* ಬಂದು ಅವರಿಗೆ, “ಸ್ವಾಮೀ, ದಾವೀದನ ಪುತ್ರನೇ, ನನ್ನನ್ನು ಕರುಣಿಸು. ನನ್ನ ಮಗಳು ದೆವ್ವದ ಕಾಟದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು. \p \v 23 ಆದರೆ ಯೇಸು ಆಕೆಗೆ ಉತ್ತರ ಕೊಡಲಿಲ್ಲ. ಆಗ ಶಿಷ್ಯರು ಯೇಸುವಿನ ಬಳಿ ಬಂದು, “ಆಕೆಯನ್ನು ಕಳುಹಿಸಿಬಿಡು, ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ” ಎಂದು ಕೇಳಿಕೊಂಡರು. \p \v 24 ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು. \p \v 25 ಆಕೆಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮೀ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡಳು. \p \v 26 ಆಗ ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದು ಹೇಳಿದರು. \p \v 27 ಆಗ ಆಕೆಯು, “ಸ್ವಾಮೀ, ಅದು ನಿಜವೇ, ಆದರೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ನಾಯಿಮರಿಗಳು ತಿನ್ನುತ್ತವಲ್ಲಾ,” ಎಂದಳು. \p \v 28 ಯೇಸು ಉತ್ತರವಾಗಿ ಆಕೆಗೆ, “ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ,” ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು. \s1 ಯೇಸು ನಾಲ್ಕು ಸಾವಿರ ಜನರಿಗೆ ಊಟ ಕೊಟ್ಟಿದ್ದು \p \v 29 ಯೇಸು ಅಲ್ಲಿಂದ ಹೊರಟು ಗಲಿಲಾಯ ಸರೋವರದ ಸಮೀಪಕ್ಕೆ ಬಂದು, ಬೆಟ್ಟವನ್ನು ಹತ್ತಿ ಅಲ್ಲಿ ಕುಳಿತುಕೊಂಡರು. \v 30 ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು, ಕುರುಡರನ್ನು, ಮೂಕರನ್ನು, ಊನವಾದವರನ್ನು ಮತ್ತು ಬೇರೆ ಅನೇಕ ರೋಗಿಗಳನ್ನು ತಮ್ಮೊಂದಿಗೆ ಕರೆದುಕೊಂಡು ಬಂದು ಯೇಸುವಿನ ಪಾದದ ಬಳಿಯಲ್ಲಿ ಬಿಟ್ಟರು. ಯೇಸು ಅವರನ್ನೆಲ್ಲಾ ಸ್ವಸ್ಥಪಡಿಸಿದರು. \v 31 ಮೂಕರು ಮಾತನಾಡುವುದನ್ನೂ ಊನವಾದವರು ಸ್ವಸ್ಥರಾಗಿರುವುದನ್ನೂ ಕುಂಟರು ನಡೆದಾಡುವುದನ್ನೂ ಕುರುಡರು ಕಾಣುವುದನ್ನೂ ಜನಸಮೂಹದವರು ಕಂಡು ಆಶ್ಚರ್ಯಪಟ್ಟರು. ಅವರು ಇಸ್ರಾಯೇಲಿನ ದೇವರನ್ನು ಕೊಂಡಾಡಿದರು. \p \v 32 ಯೇಸು ತಮ್ಮ ಶಿಷ್ಯರನ್ನು ಕರೆದು, “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ,” ಎಂದರು. \p \v 33 ಅದಕ್ಕೆ ಶಿಷ್ಯರು, “ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ನಿರ್ಜನ ಪ್ರದೇಶದಲ್ಲಿ ನಮಗೆ ಎಲ್ಲಿಂದ ರೊಟ್ಟಿ ಸಿಕ್ಕೀತು?” ಎಂದರು. \p \v 34 ಯೇಸು ಅವರಿಗೆ, “ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದರು. \p ಶಿಷ್ಯರು, “ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ,” ಎಂದರು. \p \v 35 ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟರು. \v 36 ಅನಂತರ ಯೇಸು ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಡಲು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. \v 37 ಅವರೆಲ್ಲರೂ ಊಟಮಾಡಿ ತೃಪ್ತರಾದರು. ಅನಂತರ ಶಿಷ್ಯರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು. \v 38 ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರಿದ್ದರು. \v 39 ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಊರಿಗೆ ಬಂದರು. \c 16 \s1 ಸೂಚಕಕಾರ್ಯವನ್ನು ಕೇಳಿದ್ದು \p \v 1 ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು. \p \v 2 ಯೇಸು ಉತ್ತರವಾಗಿ ಅವರಿಗೆ, “ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ, ‘ಒಳ್ಳೆಯ ಹವಾಮಾನ ಇರುವುದು’ ಎಂದೂ \v 3 ಬೆಳಿಗ್ಗೆ ಆಕಾಶವು ಮೋಡ ಕವಿದು ಕೆಂಪಾಗಿದ್ದರೆ, ‘ಇಂದು ಬಿರುಗಾಳಿ ಇರುವುದು’ ಎಂದೂ ನೀವು ಹೇಳುತ್ತೀರಿ. ಆಕಾಶದಲ್ಲಾಗುವ ಸೂಚನೆಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಕಾಲದ ಸೂಚನೆಗಳನ್ನು ನೀವು ಗ್ರಹಿಸಲಾರಿರಿ. \v 4 ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು. \s1 ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯ \p \v 5 ಶಿಷ್ಯರು ರೊಟ್ಟಿಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಆಚೆದಡಕ್ಕೆ ಬಂದಿದ್ದರು. \v 6 ಆಗ ಯೇಸು ಅವರಿಗೆ, “ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ಬಗ್ಗೆ ಎಚ್ಚರಿಕೆ ವಹಿಸಿ ಜಾಗರೂಕರಾಗಿರಿ,” ಎಂದು ಹೇಳಿದರು. \p \v 7 ಅದಕ್ಕೆ ಅವರು ತಮ್ಮತಮ್ಮಲ್ಲಿಯೇ, “ನಾವು ರೊಟ್ಟಿ ತಂದಿಲ್ಲವೆಂದು ಹೀಗೆ ಹೇಳುತ್ತಾರೆ,” ಎಂದು ಮಾತನಾಡಿಕೊಂಡರು. \p \v 8 ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ಅಲ್ಪ ವಿಶ್ವಾಸದವರೇ, ನೀವು ರೊಟ್ಟಿ ಇಲ್ಲವೆಂದು ನಿಮ್ಮಲ್ಲಿ ಏಕೆ ಮಾತನಾಡಿಕೊಳ್ಳುತ್ತೀರಿ? \v 9 ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ, ಎಷ್ಟು ಬುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ? \v 10 ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಬುಟ್ಟಿಗಳನ್ನು ತುಂಬಿದಿರಿ? \v 11 ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು. \v 12 ಆಗ ಅವರು, ರೊಟ್ಟಿ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಯೇಸು ಹೇಳಿದ್ದನ್ನು ಗ್ರಹಿಸಿಕೊಂಡರು. \s1 ಪೇತ್ರನ ಅರಿಕೆ \p \v 13 ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತಗಳಿಗೆ ಬಂದಾಗ ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು. \p \v 14 ಅದಕ್ಕೆ ಅವರು, “ಕೆಲವರು ಸ್ನಾನಿಕನಾದ ಯೋಹಾನನು ಎಂದು ಹೇಳುತ್ತಾರೆ, ಇನ್ನು ಕೆಲವರು ಎಲೀಯನು ಎನ್ನುತ್ತಾರೆ, ಬೇರೆಯವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ” ಎಂದರು. \p \v 15 ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು. \p \v 16 ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು. \p \v 17 ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು. \v 18 ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು.\f + \fr 16:18 \fr*\fq ಪೇತ್ರ \fq*\ft ಅಂದರೆ, \ft*\fqa ಬಂಡೆ \fqa*\ft ಎಂದು ಅರ್ಥ\ft*\f* ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು. \v 19 ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು,” ಎಂದರು. \v 20 ತರುವಾಯ ಯೇಸು, ತಾನೇ ಕ್ರಿಸ್ತ ಎಂಬುದನ್ನು ಯಾರಿಗೂ ಹೇಳಬಾರದೆಂದು ತಮ್ಮ ಶಿಷ್ಯರಿಗೆ ಆಜ್ಞಾಪಿಸಿದರು. \s1 ಯೇಸು ತಮ್ಮ ಮರಣವನ್ನು ಮುಂತಿಳಿಸಿದ್ದು \p \v 21 ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು. \p \v 22 ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು. \p \v 23 ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು. \p \v 24 ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. \v 25 ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು. \v 26 ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು? \v 27 ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು. \p \v 28 “ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು. \c 17 \s1 ಯೇಸು ರೂಪಾಂತರ ಹೊಂದಿದ್ದು \p \v 1 ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಅವನ ಸಹೋದರ ಯೋಹಾನನನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. \v 2 ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು. ಅವರ ಮುಖವು ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಬೆಳಗಿತು. \v 3 ಇದಲ್ಲದೆ ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಯೇಸುವಿನೊಂದಿಗೆ ಮಾತನಾಡುತ್ತಿದ್ದರು. \p \v 4 ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲಿಯೇ ಇರುವುದು ಒಳ್ಳೆಯದು. ನಿಮಗೆ ಮನಸ್ಸಿದ್ದರೆ ನಾನು ನಿಮಗೊಂದು, ಮೋಶೆಗೊಂದು, ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ಕಟ್ಟುವೆನು,” ಎಂದು ಹೇಳಿದನು. \p \v 5 ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು. \p \v 6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. \v 7 ಆಗ ಯೇಸು ಬಂದು ಅವರನ್ನು ಮುಟ್ಟಿ, “ಏಳಿರಿ, ಹೆದರಬೇಡಿರಿ,” ಎಂದು ಹೇಳಿದರು. \v 8 ಅವರು ತಮ್ಮ ಕಣ್ಣೆತ್ತಿ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ. \p \v 9 ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು. \p \v 10 ಆಗ ಯೇಸುವಿನ ಶಿಷ್ಯರು ಅವರಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು. \p \v 11 ಯೇಸು ಉತ್ತರವಾಗಿ ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವುಗಳನ್ನು ಪುನಃ ಸ್ಥಾಪಿಸುವುದು ನಿಜವೇ. \v 12 ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು. \v 13 ಸ್ನಾನಿಕ ಯೋಹಾನನ ವಿಷಯದಲ್ಲಿ ಯೇಸು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು. \s1 ಮೂರ್ಛಾರೋಗಿಯಾದ ಹುಡುಗನ ಸ್ವಸ್ಥತೆ \p \v 14 ಅವರು ಜನಸಮೂಹದ ಬಳಿಗೆ ಬಂದಾಗ, ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ, \v 15 “ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು. ಏಕೆಂದರೆ ಅವನು ಮೂರ್ಛಾರೋಗದಿಂದ ಬಹಳವಾಗಿ ಕಷ್ಟಪಡುತ್ತಾನೆ. ಅನೇಕ ಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ. \v 16 ನಾನು ಅವನನ್ನು ನಿಮ್ಮ ಶಿಷ್ಯರ ಬಳಿಗೆ ಕರೆತಂದೆನು. ಆದರೆ ಅವರು ಅವನನ್ನು ಸ್ವಸ್ಥ ಮಾಡದೆ ಹೋದರು,” ಎಂದು ಹೇಳಿದನು. \p \v 17 ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು. \v 18 ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು. \p \v 19 ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಓಡಿಸುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು. \p \v 20 ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ. \v 21 \it ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.\it*\f + \fr 17:21 \fr*\ft ಕೆಲವು ಹಸ್ತಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \s1 ಯೇಸು ತಮ್ಮ ಮರಣವನ್ನು ಎರಡನೆಯ ಬಾರಿ ಮುಂತಿಳಿಸಿದ್ದು \p \v 22 ಅವರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದಾಗ ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. \v 23 ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು. \s1 ಯೇಸು ದೇವಾಲಯದ ತೆರಿಗೆ ಕೊಟ್ಟದ್ದು \p \v 24 ತರುವಾಯ ಯೇಸು ಕಪೆರ್ನೌಮಿಗೆ ಬಂದಾಗ, ದೇವಾಲಯದ ತೆರಿಗೆಗಾಗಿ ಎರಡು ಬೆಳ್ಳಿ ನಾಣ್ಯಗಳನ್ನು\f + \fr 17:24 \fr*\ft ಮೂಲಭಾಷೆಯಲ್ಲಿ ದ್ರಹ್ಮ. ಒಂದು ದ್ರಹ್ಮ ನಾಣ್ಯದ ಮೌಲ್ಯವು, ಒಂದು ದಿನದ ಕೂಲಿ\ft*\f* ವಸೂಲಿಮಾಡುವವರು ಪೇತ್ರನ ಬಳಿಗೆ ಬಂದರು. ಅವರು ಪೇತ್ರನಿಗೆ, “ನಿಮ್ಮ ಬೋಧಕನು ತೆರಿಗೆ ಕಟ್ಟುವುದಿಲ್ಲವೋ?” ಎಂದು ಕೇಳಿದರು. \p \v 25 ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು. \p ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, “ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?” ಎಂದು ಕೇಳಿದರು. \p \v 26 “ಪರರಿಂದ,” ಎಂದು ಪೇತ್ರನು ಹೇಳಿದನು. \p ಯೇಸು ಅವನಿಗೆ, “ಹಾಗಾದರೆ ಪುತ್ರನು ಕಟ್ಟಬೇಕಾಗಿಲ್ಲ. \v 27 ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು. \c 18 \s1 ಪರಲೋಕದಲ್ಲಿ ದೊಡ್ಡವನು \p \v 1 ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು?” ಎಂದು ಕೇಳಿದರು. \p \v 2 ಆಗ ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಬಳಿಗೆ ಕರೆದು, ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, \v 3 “ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. \v 4 ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು. \v 5 ಯಾರಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಂಡರೆ ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ. \s1 ಪಾಪಕ್ಕೆ ಕಾರಣವಾಗಿರುವುದು \p \v 6 “ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದ ಆಳದಲ್ಲಿ ಮುಳುಗಿಸಿಡುವುದೇ ಲೇಸು, ಎಂದರು. \v 7 ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ! \v 8 ನಿಮ್ಮ ಕೈಯಾಗಲೀ ಕಾಲಾಗಲೀ ನಿಮ್ಮನ್ನು ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಇಲ್ಲವೆ ಎರಡು ಕಾಲುಳ್ಳವರಾಗಿ ನಿತ್ಯ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ಇಲ್ಲವೆ ಊನರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು. \v 9 ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ನೀವು ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು. \s1 ಕಳೆದುಹೋದ ಕುರಿಯ ಸಾಮ್ಯ \p \v 10 “ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ. \v 11 \it ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.\it*\f + \fr 18:11 \fr*\ft ಕೆಲವು ಹಸ್ತಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \p \v 12 “ಆಗ ನಿಮಗೆ ಏನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳಿರಲಾಗಿ, ಅವುಗಳಲ್ಲಿ ಒಂದು ತಪ್ಪಿಸಿಕೊಂಡುಹೋದರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಬಿಟ್ಟು ಬೆಟ್ಟಗಳಿಗೆ ಹೋಗಿ, ತಪ್ಪಿಸಿಕೊಂಡದ್ದನ್ನು ಹುಡುಕುವುದಿಲ್ಲವೇ? \v 13 ಅವನು ಅದನ್ನು ಕಂಡರೆ, ತಪ್ಪಿಸಿಕೊಳ್ಳದ ತೊಂಬತ್ತೊಂಬತ್ತು ಕುರಿಗಳಿಗಿಂತ ಈ ಒಂದು ಕುರಿಯ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆಂದು ನಿಮಗೆ ನಿಜವಾಗಿ ಹೇಳುತ್ತೇನೆ. \v 14 ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬರಾದರೂ ನಾಶವಾಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ. \s1 ಸಹೋದರನು ನಿಮಗೆ ವಿರುದ್ಧವಾಗಿ ಪಾಪಮಾಡಿದರೆ \p \v 15 “ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ. \v 16 ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’\f + \fr 18:16 \fr*\ft \+xt ಧರ್ಮೋ 19:15\+xt*\ft*\f* \v 17 ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ. \p \v 18 “ನೀವು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀರೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀವು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. \p \v 19 “ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು. \v 20 ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ,” ಎಂದರು. \s1 ಕರುಣಿಸದ ಸೇವಕನ ಸಾಮ್ಯ \p \v 21 ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?” ಎಂದು ಕೇಳಿದನು. \p \v 22 ಅದಕ್ಕೆ ಯೇಸು, “ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ. \p \v 23 “ಆದ್ದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕ ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. \v 24 ಅವನು ಲೆಕ್ಕ ತೆಗೆದುಕೊಳ್ಳಲು ಪ್ರಾರಂಭಿಸಿದಾಗ, ಹತ್ತು ಕೋಟಿ ಚಿನ್ನದ ನಾಣ್ಯಗಳ\f + \fr 18:24 \fr*\ft ಗ್ರೀಕ್ ಭಾಷೆಯಲ್ಲಿ ಹತ್ತು ಸಾವಿರ \ft*\fqa ತಲಾಂತು. \fqa*\ft ದೊಡ್ಡ ಮೊತ್ತದ ಹಣ\ft*\f* ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು. \v 25 ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು. \p \v 26 “ಆಗ ಆ ಸೇವಕನು ಮೊಣಕಾಲೂರಿ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ನಿನ್ನ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಹೇಳಿದನು. \v 27 ಆಗ ಅರಸನು ಸೇವಕನ ಮೇಲೆ ಕನಿಕರಪಟ್ಟು, ಅವನನ್ನು ಬಿಡುಗಡೆ ಮಾಡಿ ಅವನ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು. \p \v 28 “ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು\f + \fr 18:28 \fr*\ft ಒಂದು ದಿನಾರಿಯ ಬೆಳ್ಳಿ ನಾಣ್ಯವು ಒಂದು ದಿನದ ಕೂಲಿಗೆ ಸಮವಾಗಿತ್ತು\ft*\f* ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು. \p \v 29 “ಆಗ ಅವನ ಜೊತೆಯ ಸೇವಕನು ಮೊಣಕಾಲೂರಿ ಅವನಿಗೆ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅವನನ್ನು ಬೇಡಿಕೊಂಡನು. \p \v 30 “ಆದರೆ ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ, ತನ್ನ ಸಾಲವನ್ನು ತೀರಿಸುವವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. \v 31 ಅವನ ಜೊತೆಯ ಸೇವಕರು ನಡೆದದ್ದನ್ನು ನೋಡಿ, ಬಹಳ ವ್ಯಥೆಪಟ್ಟು ಹೋಗಿ ತಮ್ಮ ಅರಸನಿಗೆ ನಡೆದದ್ದೆಲ್ಲವನ್ನು ವರದಿಮಾಡಿದರು. \p \v 32 “ಆಗ ಅರಸನು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ, ‘ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡಿದ್ದರಿಂದ ನಾನು ನಿನ್ನ ಸಾಲವನ್ನೆಲ್ಲಾ ಮನ್ನಿಸಿದೆನು. \v 33 ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೆ ಸೇವಕನ ಮೇಲೆ ಕರುಣೆ ತೋರಿಸಬೇಕಿತ್ತಲ್ಲವೇ?’ ಎಂದು ಹೇಳಿ, \v 34 ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅರಸನು ಅವನನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಸೆರೆಮನೆಯ ಅಧಿಕಾರಿಯ ವಶಕ್ಕೆ ಒಪ್ಪಿಸಿದನು. \p \v 35 “ಅದರಂತೆಯೇ ನಿಮ್ಮಲ್ಲಿ ಪ್ರತಿಯೊಬ್ಬರು ಹೃದಯಪೂರ್ವಕವಾಗಿ ತನ್ನ ಸಹೋದರನನ್ನು ಕ್ಷಮಿಸದೆ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ಸಹ ನಿಮಗೆ ಹಾಗೆಯೇ ಮಾಡುವರು,” ಎಂದರು. \c 19 \s1 ವಿವಾಹ ವಿಚ್ಛೇದನದ ವಿಷಯ \p \v 1 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಗಲಿಲಾಯದಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. \v 2 ಜನರ ದೊಡ್ಡ ಸಮೂಹಗಳು ಅವರನ್ನು ಹಿಂಬಾಲಿಸಿದವು, ಯೇಸು ಅವರನ್ನು ಅಲ್ಲಿ ಸ್ವಸ್ಥಮಾಡಿದರು. \p \v 3 ಫರಿಸಾಯರಲ್ಲಿ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಅವರ ಬಳಿಗೆ ಬಂದು, “ಒಬ್ಬ ಪುರುಷನು ಯಾವ ಕಾರಣದಿಂದಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು. \p \v 4 ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.\f + \fr 19:4 \fr*\ft \+xt ಆದಿ 1:27\+xt*\ft*\f* \v 5 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು,’\f + \fr 19:5 \fr*\ft \+xt ಆದಿ 2:24\+xt*\ft*\f* ಎಂದು ಹೇಳಿದ್ದನ್ನು ನೀವು ಓದಲಿಲ್ಲವೇ? \v 6 ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು,” ಎಂದು ಹೇಳಿದರು. \p \v 7 ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟು ಬಿಡಬಹುದೆಂದು ಮೋಶೆಯು ಏಕೆ ಅಪ್ಪಣೆಕೊಟ್ಟನು?” ಎಂದು ಕೇಳಿದರು. \p \v 8 ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ದೆಸೆಯಿಂದ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ನಿಮಗೆ ಅನುಮತಿ ಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ. \v 9 ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ, ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು, ಮತ್ತೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರ ಮಾಡುವವನಾಗಿದ್ದಾನೆ,” ಎಂದರು. \p \v 10 ಆಗ ಶಿಷ್ಯರು ಯೇಸುವಿಗೆ, “ಸತಿಪತಿಯರ ಸಂಬಂಧ ಹೀಗಿರುವುದಾದರೆ, ಮದುವೆ ಆಗದಿರುವುದೇ ಒಳ್ಳೆಯದು,” ಎಂದರು. \p \v 11 ಆದರೆ ಯೇಸು ಅವರಿಗೆ, “ಯಾರಿಗೆ ಇದು ಅನುಮತಿಸಲಾಗಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಸ್ವೀಕರಿಸಲಾರರು. \v 12 ತಮ್ಮ ತಾಯಿಯ ಗರ್ಭದಿಂದ ಹುಟ್ಟಿದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಕೆಲವರು ಮನುಷ್ಯರಿಂದ ಮಾಡಲಾದ ನಪುಂಸಕರು ಇದ್ದಾರೆ. ಇನ್ನು ಕೆಲವರು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರೂ ಇದ್ದಾರೆ. ಇದನ್ನು ಸ್ವೀಕರಿಸಬಲ್ಲವನು ಸ್ವೀಕರಿಸಲಿ,” ಎಂದರು. \s1 ಯೇಸುವಿನ ಬಳಿಗೆ ಬಂದ ಚಿಕ್ಕಮಕ್ಕಳು \p \v 13 ಯೇಸು ತಮ್ಮ ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೆಲವು ಜನರು ಚಿಕ್ಕಮಕ್ಕಳನ್ನು ಯೇಸುವಿನ ಬಳಿಗೆ ತಂದರು. ಆದರೆ ಶಿಷ್ಯರು ಅವರನ್ನು ಗದರಿಸಿದರು. \p \v 14 ಆದರೆ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ,” ಎಂದರು. \v 15 ತರುವಾಯ ಯೇಸು ಮಕ್ಕಳ ಮೇಲೆ ತಮ್ಮ ಕೈಯಿಟ್ಟು ಆಶೀರ್ವದಿಸಿ ಅಲ್ಲಿಂದ ಹೊರಟು ಹೋದರು. \s1 ಧನಿಕ ಯುವಕನು \p \v 16 ಆಗ ಒಬ್ಬನು ಬಂದು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. \p \v 17 “ನೀನು ಒಳ್ಳೆಯದನ್ನು ಕುರಿತು ನನ್ನನ್ನು ಕೇಳುವುದೇಕೆ? ಒಬ್ಬಾತನೇ ಒಳ್ಳೆಯವನು. ಆದರೆ ನೀನು ಜೀವದಲ್ಲಿ ಪ್ರವೇಶಿಸಬೇಕಾದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆದುಕೋ,” ಎಂದು ಯೇಸು ಉತ್ತರಕೊಟ್ಟರು. \p \v 18 ಅವನು ಯೇಸುವಿಗೆ, “ಅವು ಯಾವುವು?” ಎಂದು ಕೇಳಿದನು. \p ಅದಕ್ಕೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, \v 19 ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,”\f + \fr 19:19 \fr*\ft \+xt ವಿಮೋ 20:12-16; ಧರ್ಮೋ 5:16-20; ಯಾಜಕ 19:18\+xt*\ft*\f* ಎಂದು ಹೇಳಿದರು. \p \v 20 ಆ ಯೌವನಸ್ಥನು ಯೇಸುವಿಗೆ, “ಇವೆಲ್ಲವನ್ನೂ ನಾನು ಕೈಗೊಂಡಿದ್ದೇನೆ, ಇನ್ನು ನನಗೇನು ಕಡಿಮೆಯಾಗಿದೆ?” ಎಂದು ಕೇಳಿದನು. \p \v 21 ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. \p \v 22 ಆದರೆ ಆ ಯುವಕನು ಯೇಸು ಹೇಳಿದ್ದನ್ನು ಕೇಳಿ, ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು. \p \v 23 ಆಗ ಯೇಸು ತಮ್ಮ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. \v 24 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ಪುನಃ ನಿಮಗೆ ಹೇಳುತ್ತೇನೆ,” ಎಂದರು. \p \v 25 ಇದನ್ನು ಕೇಳಿದಾಗ ಯೇಸುವಿನ ಶಿಷ್ಯರು ಅತ್ಯಂತ ವಿಸ್ಮಯಗೊಂಡು, “ಹಾಗಾದರೆ ಯಾರು ರಕ್ಷಣೆಹೊಂದುವರು?” ಎಂದು ಕೇಳಿದರು. \p \v 26 ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು. \p \v 27 ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ! ನಮಗೆ ಏನು ದೊರೆಯುವುದು?” ಎಂದು ಕೇಳಿದನು. \p \v 28 ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ. \v 29 ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು. \v 30 ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು. \c 20 \s1 ದ್ರಾಕ್ಷಿಯ ತೋಟದ ಕೂಲಿಯಾಳುಗಳ ಸಾಮ್ಯ \p \v 1 “ಪರಲೋಕ ರಾಜ್ಯವನ್ನು ತನ್ನ ದ್ರಾಕ್ಷಿಯ ತೋಟಕ್ಕೆ ಕೂಲಿಯಾಳುಗಳನ್ನು ಕರೆಯುವುದಕ್ಕಾಗಿ ಬೆಳಿಗ್ಗೆ ಹೊರಟ ಒಬ್ಬ ಯಜಮಾನನಿಗೆ ಹೋಲಿಸಲಾಗಿದೆ. \v 2 ಅವನು ದಿನಕ್ಕೆ ಒಂದು ಬೆಳ್ಳಿನಾಣ್ಯ\f + \fr 20:2 \fr*\ft ಒಂದು ದಿನಾರಿಯ ನಾಣ್ಯವು ಒಂದು ದಿನದ ಕೂಲಿಗೆ ಸಮವಾಗಿತ್ತು\ft*\f* ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿಕೊಂಡು ತನ್ನ ದ್ರಾಕ್ಷಿಯ ತೋಟಕ್ಕೆ ಅವರನ್ನು ಕಳುಹಿಸಿಕೊಟ್ಟನು. \p \v 3 “ಅವನು ಸುಮಾರು ಒಂಬತ್ತು ಗಂಟೆಗೆ ಹೊರಗೆ ಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವುದನ್ನು ಕಂಡು, \v 4 ಅವರಿಗೆ, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುತ್ತೇನೆ,’ ಎಂದು ಹೇಳಿದನು. \v 5 ಆಗ ಅವರು ಹೊರಟು ಹೋದರು. \p “ಅವನು ಸುಮಾರು ಹನ್ನೆರಡು ಗಂಟೆಗೂ ಅನಂತರ ಮೂರು ಗಂಟೆಗೂ ತಿರುಗಿ ಹೋಗಿ ಹಾಗೆಯೇ ಮಾಡಿದನು. \v 6 ತರುವಾಯ ಸುಮಾರು ಐದು ಗಂಟೆಗೆ ಅವನು ಹೊರಗೆ ಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವುದನ್ನು ಕಂಡು, ‘ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವುದೇಕೆ?’ ಎಂದು ಕೇಳಿದನು. \p \v 7 “ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. \p “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು. \p \v 8 “ಸಂಜೆಯಾದಾಗ, ದ್ರಾಕ್ಷಿಯ ತೋಟದ ಯಜಮಾನನು ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನವರೆಗೆ ಕೂಲಿಯನ್ನು ಕೊಡು,’ ಎಂದು ಹೇಳಿದನು. \p \v 9 “ಆಗ ಐದು ಗಂಟೆಗೆ ಕರೆದವರು ಬಂದಾಗ ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು. \v 10 ಆಗ ಮೊದಲು ಬಂದವರು, ತಮಗೆ ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಲ್ಲಿ ಪ್ರತಿಯೊಬ್ಬನಿಗೂ ಅದೇ ರೀತಿಯಲ್ಲಿ ಒಂದೊಂದೇ ಬೆಳ್ಳಿನಾಣ್ಯ ಸಿಕ್ಕಿತು. \v 11 ಅವರು ಅದನ್ನು ತೆಗೆದುಕೊಂಡಾಗ, ಯಜಮಾನನ ವಿರೋಧವಾಗಿ ಗೊಣುಗುಟ್ಟುತ್ತಾ, \v 12 ‘ಕಡೆಯವರಾದ ಇವರು ಒಂದೇ ತಾಸು ಕೆಲಸಮಾಡಿದ್ದಾರೆ, ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸಮಾಡಿದ ನಮ್ಮನ್ನು ನೀನು ಇವರಿಗೆ ಸಮಮಾಡಿದ್ದಿ,’ ಎಂದರು. \p \v 13 “ಆದರೆ ಯಜಮಾನನು ಅವರಲ್ಲಿ ಒಬ್ಬನಿಗೆ ಉತ್ತರವಾಗಿ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ಒಂದು ಬೆಳ್ಳಿ ನಾಣ್ಯಕ್ಕೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಲ್ಲವೇ? \v 14 ನಿನ್ನ ಕೂಲಿ ತೆಗೆದುಕೊಂಡು ಹೋಗು. ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವುದು ನನ್ನ ಇಷ್ಟ. \v 15 ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು. \p \v 16 “ಹೀಗೆ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು. \s1 ಯೇಸು ತಮ್ಮ ಮರಣದ ವಿಷಯ ಪ್ರವಾದಿಸಿದ್ದು \p \v 17 ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ಪ್ರತ್ಯೇಕವಾಗಿ ಕರೆದು ಅವರಿಗೆ, \v 18 “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸುವರು. \v 19 ಇದಲ್ಲದೆ ನನ್ನನ್ನು ಹಾಸ್ಯಮಾಡುವುದಕ್ಕೂ ಕೊರಡೆಗಳಿಂದ ಹೊಡೆಯುವುದಕ್ಕೂ ಶಿಲುಬೆಗೆ ಹಾಕುವುದಕ್ಕೂ ಯೆಹೂದ್ಯರಲ್ಲದವರ ಕೈಗೆ ಒಪ್ಪಿಸಿಕೊಡುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. \s1 ತಾಯಿಯ ಬೇಡಿಕೆ \p \v 20 ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುವಿನ ಬಳಿಗೆ ಬಂದು, ಅವರ ಮುಂದೆ ಮೊಣಕಾಲೂರಿ ಬೇಡಿಕೊಂಡಳು. \p \v 21 ಯೇಸು, “ನಿನ್ನ ಬೇಡಿಕೆ ಏನು?” ಎಂದು ಕೇಳಿದರು. \p “ನಿಮ್ಮ ರಾಜ್ಯದಲ್ಲಿ ಈ ನನ್ನ ಇಬ್ಬರು ಪುತ್ರರಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹಿಸಬೇಕು,” ಎಂದು ಬೇಡಿಕೊಂಡಳು. \p \v 22 ಯೇಸು ಉತ್ತರವಾಗಿ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೇ?” ಎಂದು ಕೇಳಿದರು. \p ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು. \p \v 23 ಅದಕ್ಕೆ ಯೇಸು, “ನನ್ನ ಪಾತ್ರೆಯಿಂದ ನೀವು ಕುಡಿಯುವಿರಿ, ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ, ನನ್ನ ತಂದೆಯಿಂದ ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದು ಹೇಳಿದರು. \p \v 24 ಬೇರೆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. \v 25 ಆದರೆ ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು, “ಯೆಹೂದ್ಯರಲ್ಲದವರ ಅಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆಂದೂ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರವನ್ನು ನಡೆಸುತ್ತಾರೆಂದೂ ನಿಮಗೆ ತಿಳಿದಿದೆ. \v 26 ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ. \v 27 ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ, ಅವನು ನಿಮ್ಮ ಆಳಾಗಿರಲಿ. \v 28 ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು. \s1 ಯೇಸು ಇಬ್ಬರು ಕುರುಡರಿಗೆ ದೃಷ್ಟಿಕೊಟ್ಟದ್ದು \p \v 29 ಯೇಸು ಮತ್ತು ಅವರ ಶಿಷ್ಯರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ, ಜನರು ದೊಡ್ಡ ಸಮೂಹವಾಗಿ ಯೇಸುವನ್ನು ಹಿಂಬಾಲಿಸಿದರು. \v 30 ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಯೇಸು ಹಾದು ಹೋಗುತ್ತಿದ್ದಾರೆಂದು ಕೇಳಿ, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಕೂಗಿ ಹೇಳಿದರು. \p \v 31 ಅವರು ಸುಮ್ಮನಿರುವಂತೆ ಜನರ ಸಮೂಹವು ಅವರನ್ನು ಗದರಿಸಿತು. ಆದರೂ ಅವರು, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು. \p \v 32 ಆಗ ಯೇಸು ನಿಂತು, ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಿದರು. \p \v 33 ಅವರು ಯೇಸುವಿಗೆ, “ಕರ್ತದೇವರೇ, ನಮಗೆ ಕಣ್ಣು ಕಾಣುವಂತೆ ಮಾಡು,” ಎಂದರು. \p \v 34 ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದರು. ಕೂಡಲೇ ಅವರ ಕಣ್ಣುಗಳು ದೃಷ್ಟಿಯನ್ನು ಪಡೆದವು. ಅವರೂ ಯೇಸುವನ್ನು ಹಿಂಬಾಲಿಸಿದರು. \c 21 \s1 ಯೆರೂಸಲೇಮಿನಲ್ಲಿ ಯೇಸು ಅರಸನಂತೆ ಪ್ರವೇಶ \p \v 1 ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಬೇತ್ಫಗೆ ಬಂದಾಗ, ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ, \v 2 ಅವರಿಗೆ, “ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ತಕ್ಷಣವೇ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಿರುವುದನ್ನು ನೀವು ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. \v 3 ಯಾವನಾದರೂ ನಿಮಗೆ ಏನಾದರೂ ಕೇಳಿದರೆ, ನೀವು ಅವನಿಗೆ, ‘ಇವು ಕರ್ತದೇವರಿಗೆ ಅವಶ್ಯವಾಗಿವೆ’ ಎಂದು ಹೇಳಿರಿ. ಆಗ ಅವನು ಅವುಗಳನ್ನು ಕೂಡಲೇ ಕಳುಹಿಸುವನು,” ಎಂದು ಹೇಳಿದರು. \p \v 4 ಇದೆಲ್ಲವೂ ಪವಿತ್ರ ವೇದದಲ್ಲಿ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಆಯಿತು. ಅದೇನೆಂದರೆ, \q1 \v 5 “ಚೀಯೋನಿನ ಪುತ್ರಿಗೆ ಹೇಳಿರಿ,\f + \fr 21:5 \fr*\fq ಚೀಯೋನ \fq*\ft ಅಂದರೆ \ft*\fqa ಯೆರೂಸಲೇಮ\fqa*\f* \q2 ‘ಇಗೋ, ನಿನ್ನ ಅರಸನು, \q1 ಸಾತ್ವಿಕನಾಗಿ, ಕತ್ತೆಯನ್ನೂ, \q2 ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’ ”\f + \fr 21:5 \fr*\ft \+xt ಜೆಕರ್ಯ 9:9\+xt*\ft*\f* \p \v 6 ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆ ಕೊಟ್ಟಂತೆಯೇ ಮಾಡಿದರು. \v 7 ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದರು; ಯೇಸು ಅದರ ಮೇಲೆ ಕೂತುಕೊಂಡರು. \v 8 ಆಗ ಜನರ ದೊಡ್ಡ ಸಮೂಹವು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರಗಳಿಂದ ಕೊಂಬೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು. \v 9 ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, \q1 “ದಾವೀದನ ಪುತ್ರನಿಗೆ ಹೊಸನ್ನ\f + \fr 21:9 \fr*\fq ಹೊಸನ್ನ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ನಮ್ಮನ್ನು ರಕ್ಷಿಸು\fqa*\f*!” \b \q1 “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!”\f + \fr 21:9 \fr*\ft \+xt ಕೀರ್ತನೆ 118:25,26\+xt*\ft*\f* \b \q1 “ಮಹೋನ್ನತದಲ್ಲಿ ಜಯ!” \m ಎಂದು ಘೋಷಿಸಿದರು. \p \v 10 ಯೆರೂಸಲೇಮಿಗೆ ಪ್ರವೇಶಿಸಿದಾಗ, ಪಟ್ಟಣದಲ್ಲಿ ಕೋಲಾಹಲವುಂಟಾಗಿ, “ಇವರು ಯಾರು?” ಎಂದು ಕೇಳಿದರು. \p \v 11 ಅದಕ್ಕೆ ಜನಸಮೂಹವು, “ಇವರು ಯೇಸು, ಗಲಿಲಾಯದ ನಜರೇತಿನ ಪ್ರವಾದಿ,” ಎಂದು ಹೇಳಿತು. \s1 ದೇವಾಲಯದಲ್ಲಿ ಯೇಸು \p \v 12 ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು. \v 13 ಯೇಸು ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’\f + \fr 21:13 \fr*\ft \+xt ಯೆಶಾಯ 56:7\+xt*\ft*\f* ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,”\f + \fr 21:13 \fr*\ft \+xt ಯೆರೆ 7:11\+xt*\ft*\f* ಎಂದು ಹೇಳಿದರು. \p \v 14 ಆಗ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಅವರ ಬಳಿಗೆ ಬಂದರು. ಯೇಸು ಅವರನ್ನು ಸ್ವಸ್ಥಮಾಡಿದರು. \v 15 ಯೇಸು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯದಲ್ಲಿ, “ದಾವೀದನ ಪುತ್ರನಿಗೆ ಹೊಸನ್ನ,” ಎಂದು ಕೂಗುವುದನ್ನು ಮುಖ್ಯಯಾಜಕರೂ ನಿಯಮ ಬೋಧಕರೂ ಕಂಡು ಕೋಪಗೊಂಡರು. \p \v 16 “ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. \p ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, \q1 “ ‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ \q2 ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’\f + \fr 21:16 \fr*\ft \+xt ಕೀರ್ತನೆ 8:2\+xt*\ft*\f* \m ಎಂಬುದನ್ನು ಓದಲಿಲ್ಲವೋ?” ಎಂದರು. \p \v 17 ಯೇಸು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ, ಅಲ್ಲಿ ರಾತ್ರಿ ಉಳಿದುಕೊಂಡರು. \s1 ಅಂಜೂರದ ಮರವು ಒಣಗಿದ್ದು \p \v 18 ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ, ಯೇಸುವಿಗೆ ಹಸಿವಾಯಿತು. \v 19 ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು. \p \v 20 ಶಿಷ್ಯರು ಅದನ್ನು ಕಂಡು ಆಶ್ಚರ್ಯದಿಂದ, “ಇಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ?” ಎಂದು ಕೇಳಿದರು. \p \v 21 ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು. \v 22 ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು. \s1 ಯೇಸುವಿನ ಅಧಿಕಾರವನ್ನು ಪ್ರಶ್ನೆ ಮಾಡಿದ್ದು \p \v 23 ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು. \p \v 24 ಅದಕ್ಕೆ ಯೇಸು, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಎಂದು ಹೇಳಿ, \v 25 ದೀಕ್ಷಾಸ್ನಾನ ಕೊಡುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ?” ಎಂದು ಕೇಳಿದ್ದಕ್ಕೆ, \p ಅವರು ತಮ್ಮತಮ್ಮೊಳಗೆ ತರ್ಕಿಸುತ್ತಾ, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು. \v 26 ‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು. \p \v 27 ತರುವಾಯ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದರು. \p ಅದಕ್ಕೆ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು. \s1 ಇಬ್ಬರು ಪುತ್ರರ ಸಾಮ್ಯ \p \v 28 ಅನಂತರ ಯೇಸು, “ನಿಮಗೇನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷಿಯ ತೋಟದಲ್ಲಿ ಕೆಲಸ ಮಾಡು,’ ಎಂದು ಹೇಳಿದನು. \p \v 29 “ಮಗನು ಉತ್ತರವಾಗಿ, ‘ನಾನು ಹೋಗುವುದಿಲ್ಲ’ ಎಂದು ಹೇಳಿ, ಅನಂತರ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು. \p \v 30 “ಆಮೇಲೆ ತಂದೆ ಎರಡನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಉತ್ತರವಾಗಿ, ‘ಅಪ್ಪಾ, ನಾನು ಹೋಗುತ್ತೇನೆ,’ ಎಂದು ಹೇಳಿದರೂ ಹೋಗಲಿಲ್ಲ. \p \v 31 “ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ನಡೆದವನು?” ಎಂದು ಕೇಳಲು ಅವರು ಯೇಸುವಿಗೆ, \p “ಮೊದಲನೆಯವನೇ,” ಎಂದರು. \p ಆಗ ಯೇಸು ಅವರಿಗೆ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. \v 32 ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.” \s1 ಗೇಣಿಗೆದಾರರ ಸಾಮ್ಯ \p \v 33 “ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು. \v 34 ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು. \p \v 35 “ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. \v 36 ಯಜಮಾನನು ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು. ಗೇಣಿಗೆದಾರರು ಅವರಿಗೂ ಹಾಗೆಯೇ ಮಾಡಿದರು. \v 37 ಕೊನೆಗೆ ಯಜಮಾನನು, ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು’ ಎಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು. \p \v 38 “ಆದರೆ ಗೇಣಿಗೆದಾರರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಬನ್ನಿರಿ, ನಾವು ಇವನನ್ನು ಕೊಂದು ಇವನ ಆಸ್ತಿಯನ್ನು ಕಿತ್ತುಕೊಳ್ಳೋಣ,’ ಎಂದುಕೊಂಡು, \v 39 ಅವನನ್ನು ಹಿಡಿದು ದ್ರಾಕ್ಷಿಯ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದುಹಾಕಿದರು. \p \v 40 “ಹೀಗಿರುವುದರಿಂದ ದ್ರಾಕ್ಷಿತೋಟದ ಯಜಮಾನನೇ ಬಂದಾಗ, ಆ ಗೇಣಿಗೆದಾರರಿಗೆ ಏನು ಮಾಡುವನು?” ಎಂದು ಯೇಸು ಕೇಳಲು, \p \v 41 ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು. \p \v 42 ಯೇಸು ಅವರಿಗೆ, \q1 “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ \q2 ಮುಖ್ಯವಾದ ಮೂಲೆಗಲ್ಲಾಯಿತು. \q1 ಇದು ಕರ್ತನಿಂದಲೇ ಆಯಿತು. \q2 ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’\f + \fr 21:42 \fr*\ft \+xt ಕೀರ್ತನೆ 118:22,23\+xt*\ft*\f* \m ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ? \p \v 43 “ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ. \v 44 ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು, ಆದರೆ ಇದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು. \p \v 45 ಮುಖ್ಯಯಾಜಕರೂ ಫರಿಸಾಯರೂ ಯೇಸುವಿನ ಸಾಮ್ಯಗಳನ್ನು ಕೇಳಿದಾಗ, ತಮ್ಮ ವಿಷಯದಲ್ಲಿಯೇ ಅದನ್ನು ಹೇಳಿದರೆಂದು ಅರ್ಥಮಾಡಿಕೊಂಡರು. \v 46 ಅವರು ಯೇಸುವನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೂ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿಯೆಂದು ನಂಬಿದ್ದರು. \c 22 \s1 ಮದುವೆ ಔತಣದ ಸಾಮ್ಯ \p \v 1 ಯೇಸು ಪುನಃ ಸಾಮ್ಯಗಳ ಮೂಲಕ ಅವರ ಕೂಡ ಮಾತನಾಡುತ್ತಾ: \v 2 “ಪರಲೋಕ ರಾಜ್ಯವು ಮಗನ ಮದುವೆ ಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. \v 3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ. \p \v 4 “ಅವನು ಪುನಃ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ, ‘ಇಗೋ ಔತಣವು ಸಿದ್ಧವಾಗಿದೆ. ಶ್ರೇಷ್ಠ ಔತಣ ಮಾಡಿಸಿದ್ದೇನೆ: ಎಲ್ಲವೂ ಸಿದ್ಧವಾಗಿವೆ. ಮದುವೆಗೆ ಬನ್ನಿರಿ ಎಂದು ಆಹ್ವಾನಿತರಿಗೆ ಹೇಳಿರಿ,’ ಎಂದನು. \p \v 5 “ಆದರೆ ಅವರು ಅದನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟು ಹೋದರು. \v 6 ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನಪಡಿಸಿ, ಅವರನ್ನು ಕೊಂದುಹಾಕಿದರು. \v 7 ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು. \p \v 8 “ತರುವಾಯ ಅವನು ತನ್ನ ಸೇವಕರಿಗೆ, ‘ಮದುವೆಯ ಔತಣ ಸಿದ್ಧವಾಗಿದೆ, ಆದರೆ ಆಹ್ವಾನಿತರು ಸಿದ್ಧರಾಗಿರಲಿಲ್ಲ. \v 9 ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು. \v 10 ಆಗ ಆ ಸೇವಕರು ಮುಖ್ಯ ಬೀದಿಗಳಿಗೆ ಹೋಗಿ ತಾವು ಕಂಡ ಕೆಟ್ಟವರನ್ನೂ ಒಳ್ಳೆಯವರನ್ನೂ ಕರೆತಂದರು. ಹೀಗೆ ಮದುವೆ ಮಂಟಪವು ಅತಿಥಿಗಳಿಂದ ತುಂಬಿಹೋಯಿತು. \p \v 11 “ಅನಂತರ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದಾಗ, ಅಲ್ಲಿ ಮದುವೆಯ ವಸ್ತ್ರವಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಕಂಡನು. \v 12 ಅರಸನು ಆ ಮನುಷ್ಯನಿಗೆ, ‘ಸ್ನೇಹಿತನೇ, ಮದುವೆಯ ವಸ್ತ್ರವಿಲ್ಲದೆ ನೀನು ಒಳಗೆ ಹೇಗೆ ಬಂದೆ?’ ಎಂದು ಕೇಳಲು ಅವನು ಸುಮ್ಮನಿದ್ದನು. \p \v 13 “ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು. \p \v 14 “ಹೀಗೆಯೇ ಆಹ್ವಾನಿತರಾದವರು ಅನೇಕರು, ಆದರೆ ಆಯ್ಕೆಯಾದವರು ಕೆಲವರು ಮಾತ್ರ,” ಎಂದನು. \s1 ಚಕ್ರವರ್ತಿಗೆ ತೆರಿಗೆ ಕೊಡುವುದು \p \v 15 ಆಗ ಫರಿಸಾಯರು ಹೊರಟುಹೋಗಿ ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು. \v 16 ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ\f + \fr 22:16 \fr*\ft ಈ ಜನರು ಹೆರೋದನ ತಲೆಮಾರಿನವರು ಮತ್ತು ರೋಮನ್ನರ ಆಳ್ವಿಕೆ ಬಯಸುವವರಾಗಿದ್ದರು\ft*\f* ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ. \v 17 ಆದ್ದರಿಂದ ಕೈಸರನಿಗೆ ತೆರಿಗೆ\f + \fr 22:17 \fr*\ft ರೋಮನವರು ಅಲ್ಲದವರು ತೆರಿಗೆ ಕಟ್ಟಬೇಕಾಗಿತ್ತು.\ft*\f* ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು. \p \v 18 ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? \v 19 ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ,” ಎಂದರು. ಆಗ ಅವರು ಒಂದು ನಾಣ್ಯವನ್ನು ತಂದು ಕೊಟ್ಟರು. \v 20 ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಇದರ ಮೇಲಿರುವ ಲಿಪಿ ಯಾರದು?” ಎಂದು ಕೇಳಿದರು. \p \v 21 ಅದಕ್ಕೆ ಅವರು, “ಕೈಸರನದು,” ಎಂದರು. \p ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು. \p \v 22 ಅವರು ಇದನ್ನು ಕೇಳಿ ಆಶ್ಚರ್ಯಪಟ್ಟು, ಯೇಸುವನ್ನು ಬಿಟ್ಟು ಹೊರಟು ಹೋದರು. \s1 ಪುನರುತ್ಥಾನದಲ್ಲಿ ಮದುವೆ ಬಗ್ಗೆ ಪ್ರಶ್ನೆ \p \v 23 ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಯೇಸುವಿನ ಬಳಿಗೆ ಬಂದು, \v 24 “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ವಿಧವೆಯನ್ನು ಮದುವೆಯಾಗಿ ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ. \v 25 ಹೀಗಿರಲಾಗಿ ನಮ್ಮಲ್ಲಿ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಮಾಡಿಕೊಂಡು ಸತ್ತನು. ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು. \v 26 ಅದರಂತೆಯೇ ಎರಡನೆಯವನು ಮತ್ತು ಮೂರನೆಯವನು ಹೀಗೆ ಏಳನೆಯವನವರೆಗೂ ಸಂಭವಿಸಿತು. \v 27 ಕಡೆಯದಾಗಿ, ಆ ಸ್ತ್ರೀಯೂ ಸತ್ತಳು. \v 28 ಆದ್ದರಿಂದ, ಪುನರುತ್ಥಾನದ ಜೀವನದಲ್ಲಿ, ಆ ಏಳುಮಂದಿಯಲ್ಲಿ ಆಕೆ ಯಾರಿಗೆ ಹೆಂಡತಿಯಾಗಿರುವಳು? ಏಕೆಂದರೆ ಅವರೆಲ್ಲರೂ ಆಕೆಯನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದು ಕೇಳಿದರು. \p \v 29 ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ. \v 30 ಏಕೆಂದರೆ ಪುನರುತ್ಥಾನದ ಜೀವನದಲ್ಲಿ ಅವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ. \v 31 ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ, \v 32 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’\f + \fr 22:32 \fr*\ft \+xt ವಿಮೋ 3:6\+xt*\ft*\f* ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು. \p \v 33 ಜನಸಮೂಹದವರು ಇದನ್ನು ಕೇಳಿದಾಗ, ಯೇಸುವಿನ ಬೋಧನೆಗೆ ವಿಸ್ಮಯಗೊಂಡರು. \s1 ಮಹಾ ಆಜ್ಞೆ \p \v 34 ಯೇಸು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿದಾಗ ಅವರು ಯೇಸುವಿನ ಬಳಿಗೆ ಬಂದರು. \v 35 ಅವರಲ್ಲಿ ಮೋಶೆಯ ನಿಯಮ ಬೋಧಕನಾಗಿದ್ದ ಒಬ್ಬನು, ಯೇಸುವನ್ನು ಪರೀಕ್ಷಿಸುವುದಕ್ಕಾಗಿ, \v 36 “ಬೋಧಕರೇ, ನಿಯಮದಲ್ಲಿ ಅತ್ಯಂತ ಮಹಾ ಆಜ್ಞೆ ಯಾವುದು?” ಎಂದು ಪ್ರಶ್ನಿಸಿದನು. \p \v 37 ಯೇಸು ಅವನಿಗೆ, “ ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’\f + \fr 22:37 \fr*\ft \+xt ಧರ್ಮೋ 6:5\+xt*\ft*\f* \v 38 ಇದೇ ಅತ್ಯಂತ ಮಹಾ ಆಜ್ಞೆಯೂ ಮೊದಲನೆಯ ಆಜ್ಞೆಯೂ ಆಗಿದೆ. \v 39 ಇದರಂತೆಯೇ ಇರುವ ಎರಡನೆಯ ಆಜ್ಞೆಯು: ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’\f + \fr 22:39 \fr*\ft \+xt ಯಾಜಕ 19:18\+xt*\ft*\f* ಎಂಬುದೇ. \v 40 ಇಡೀ ನಿಯಮವೂ ಪ್ರವಾದಿಗಳ ಗ್ರಂಥಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ,” ಎಂದರು. \s1 ಕ್ರಿಸ್ತನು ಯಾರ ಪುತ್ರನು \p \v 41 ಫರಿಸಾಯರು ಕೂಡಿಬಂದಿದ್ದಾಗ ಯೇಸು ಅವರಿಗೆ, \v 42 “ಕ್ರಿಸ್ತನ ವಿಷಯವಾಗಿ ನಿಮ್ಮ ಅಭಿಪ್ರಾಯವೇನು? ಆತನು ಯಾರ ಪುತ್ರನು?” ಎಂದು ಕೇಳಿದ್ದಕ್ಕೆ ಅವರು ಯೇಸುವಿಗೆ, \p “ದಾವೀದನ ಪುತ್ರನು,” ಎಂದರು. \p \v 43 “ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು, \q1 \v 44 “ ‘ಕರ್ತದೇವರು ನನ್ನ ಕರ್ತದೇವರಿಗೆ\f + \fr 22:44 \fr*\ft ಅಂದರೆ \ft*\fqa ತಂದೆಯಾದ ದೇವರು ಕ್ರಿಸ್ತ ಯೇಸುವಿಗೆ\fqa*\f*: \q2 “ನಾನು ನಿನ್ನ ವಿರೋಧಿಗಳನ್ನು \q1 ನಿನ್ನ ಪಾದದಡಿಯಲ್ಲಿ ಹಾಕುವವರೆಗೆ \q2 ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು,” ’\f + \fr 22:44 \fr*\ft \+xt ಕೀರ್ತನೆ 110:1\+xt*\ft*\f* \m ಎಂದು ಹೇಳಿದನಲ್ಲವೇ? \v 45 ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವುದಾದರೆ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದನು. \v 46 ಅದಕ್ಕೆ ಯಾರೂ ಒಂದು ಮಾತನ್ನು ಸಹ ಯೇಸುವಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರಿಗೂ ಧೈರ್ಯ ಬರಲಿಲ್ಲ. \c 23 \s1 ಯೇಸು ಮತ್ತು ಯೆಹೂದಿ ನಾಯಕರು \p \v 1 ಯೇಸು ಜನಸಮೂಹಕ್ಕೂ ತಮ್ಮ ಶಿಷ್ಯರಿಗೂ \v 2 ಹೇಳಿದ್ದೇನೆಂದರೆ: “ನಿಯಮ ಬೋಧಕರೂ ಫರಿಸಾಯರೂ ಮೋಶೆಯ ಆಸನದಲ್ಲಿ ಕುಳಿತಿದ್ದಾರೆ. \v 3 ಆದ್ದರಿಂದ ಅವರು ನಿಮಗೆ ಹೇಳುವುದನ್ನೆಲ್ಲಾ ಅನುಸರಿಸಿ ನಡೆಯಿರಿ. ಆದರೆ ಅವರ ನಡತೆಗಳ ಪ್ರಕಾರ ನೀವು ನಡೆಯಬೇಡಿರಿ. ಏಕೆಂದರೆ ಅವರು ಹೇಳಿದಂತೆ ಮಾಡುವುದಿಲ್ಲ. \v 4 ಹೊರುವುದಕ್ಕೆ ಭಾರವಾದ ಮತ್ತು ಹೊರಲಾಗದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಅವರು ಹೊರಿಸುತ್ತಾರೆ. ತಾವಾದರೋ ತಮ್ಮ ಬೆರಳಿನಿಂದಲೂ ಅವುಗಳನ್ನು ಮುಟ್ಟುವುದಿಲ್ಲ. \p \v 5 “ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡುತ್ತಾರೆ. ಅವರು ತಮ್ಮ ಬಾಹುಗಳ ಮೇಲೆ ದೇವರ ವಾಕ್ಯವುಳ್ಳ ಡಬ್ಬಿಗಳನ್ನು ಮತ್ತು ಹಣೆಯ ಮೇಲೆ ಅಗಲ ಪಟ್ಟಿಗಳನ್ನು ಮಾಡಿ ಉಡುಪುಗಳ ಅಂಚುಗಳನ್ನು ಉದ್ದಮಾಡುತ್ತಾರೆ. \v 6 ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ \v 7 ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ, ‘ಬೋಧಕರೇ,’ ಎಂದು ಕರೆಯಿಸಿಕೊಳ್ಳಲು ಅವರು ಇಚ್ಛಿಸುತ್ತಾರೆ. \p \v 8 “ಆದರೆ ನೀವು, ‘ಬೋಧಕರು,’ ಎಂದು ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ನಿಮಗಿರುವ ಬೋಧಕರು ಒಬ್ಬರೇ ನೀವೆಲ್ಲರೂ ಸಹೋದರರು. \v 9 ಭೂಮಿಯಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿರಿ, ಪರಲೋಕದಲ್ಲಿ ಇರುವವರೇ ನಿಮ್ಮ ತಂದೆ. \v 10 ಗುರುವೆಂದೂ ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ಕ್ರಿಸ್ತನೊಬ್ಬನೇ ನಿಮ್ಮ ಗುರುವು. \v 11 ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು. \v 12 ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವವರು ತಗ್ಗಿನ ಅನುಭವ ಹೊಂದುವರು. ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಉನ್ನತ ಅನುಭವ ಹೊಂದುವರು. \s1 ನಿಯಮ ಬೋಧಕರು ಮತ್ತು ಫರಿಸಾಯರ ಮೇಲಿನ ಸಪ್ತ ತಿದ್ದುವಿಕೆಗಳು \p \v 13 “ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ. \p \v 14 \it “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ. ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ. ಆದ್ದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.\it*\f + \fr 23:14 \fr*\ft ಇದು ಕೆಲವು ಹಳೆಯ ಮೂಲ ಹಸ್ತಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \p \v 15 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ ನಿಮಗೆ ಕಷ್ಟ! ಏಕೆಂದರೆ ಒಬ್ಬನನ್ನು ಮತಾಂತರ ಮಾಡುವುದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ. ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ. \p \v 16 “ಕುರುಡರಾದ ಮಾರ್ಗದರ್ಶಕರೇ! ನಿಮಗೆ ಕಷ್ಟ, ‘ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಎನ್ನುತ್ತೀರಿ. ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ. \v 17 ಮೂರ್ಖರೇ, ಕುರುಡರೇ, ಯಾವುದು ದೊಡ್ಡದು? ಚಿನ್ನವೋ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? \v 18 ‘ಯಾರಾದರೂ ಬಲಿಪೀಠದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ. \v 19 ಕುರುಡರೇ, ಯಾವುದು ದೊಡ್ಡದು? ಕಾಣಿಕೆಯೋ ಕಾಣಿಕೆಯನ್ನು ಪಾವನ ಮಾಡುವ ಬಲಿಪೀಠವೋ? \v 20 ಆದ್ದರಿಂದ, ಬಲಿಪೀಠದ ಮೇಲೆ ಆಣೆಯಿಡುವವನು ಅದರ ಮೇಲೆಯೂ ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಡುವವನಾಗಿದ್ದಾನೆ. \v 21 ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆಯೂ ಅದರಲ್ಲಿ ವಾಸಿಸುವ ದೇವರ ಮೇಲೆಯೂ ಆಣೆಯಿಡುವವನಾಗಿದ್ದಾನೆ. \v 22 ಪರಲೋಕದ ಮೇಲೆ ಆಣೆಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಆಸೀನರಾದ ದೇವರ ಮೇಲೆಯೂ ಆಣೆಯಿಡುವವನಾಗಿದ್ದಾನೆ. \p \v 23 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪುದೀನ, ಸದಾಪು, ಜೀರಿಗೆಗಳ ದಶಮಭಾಗವನ್ನು ಸಲ್ಲಿಸುತ್ತೀರಿ. ಆದರೆ ನಿಯಮದ ನ್ಯಾಯನೀತಿ, ಕರುಣೆ, ನಂಬಿಕೆ ಎಂಬ ಈ ಪ್ರಮುಖವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗಳೊಂದಿಗೆ ಆ ಬೇರೆಯವುಗಳನ್ನು ಬಿಟ್ಟುಬಿಡದೆ ಮಾಡಬೇಕಾಗಿತ್ತು. \v 24 ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೆ ಸೋಸುತ್ತೀರಿ ಒಂಟೆ ನುಂಗುತ್ತೀರಿ. \p \v 25 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. \v 26 ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗವನ್ನು ಶುಚಿಮಾಡು. ಆಗ ಅವುಗಳ ಹೊರಭಾಗವೂ ಶುಚಿಯಾಗುವುದು. \p \v 27 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಸುಣ್ಣ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ. ಆದರೆ ಒಳಗೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರುತ್ತವೆ. \v 28 ಅದರಂತೆಯೇ, ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ನೀವು ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ. \p \v 29 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ. \v 30 ಆದರೆ, ‘ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಪಿತೃಗಳೊಂದಿಗೆ ಪಾಲುಗಾರರಾಗುತ್ತಿರಲಿಲ್ಲ’ ಎಂದು ಹೇಳುತ್ತೀರಿ. \v 31 ಆದ್ದರಿಂದ ನೀವು ಆ ಪ್ರವಾದಿಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. \v 32 ಹಾಗಾದರೆ ನಿಮ್ಮ ಪಿತೃಗಳ ಅಪರಾಧದ ಅಳತೆಯನ್ನು ನೀವೇ ಪೂರ್ಣಗೊಳಿಸಿರಿ. \p \v 33 “ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ? \v 34 ಆದ್ದರಿಂದ ನೋಡಿರಿ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ನಿಯಮ ಬೋಧಕರನ್ನೂ ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಏರಿಸುವಿರಿ. ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸುವಿರಿ. \v 35 ಹೀಗೆ ನೀತಿವಂತನಾದ ಹೇಬೆಲನ\f + \fr 23:35 \fr*\ft ನೋಡಿರಿ \+xt ಆದಿ 4:8\+xt*\ft*\f* ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ\f + \fr 23:35 \fr*\ft ನೋಡಿರಿ \+xt 2 ಪೂರ್ವ 24:20-22\+xt*\ft*\f* ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು\f + \fr 23:35 \fr*\fq ರಕ್ತಾಪರಾಧ \fq*\ft ಅಂದರೆ \ft*\fqa ಕೊಲೆಗೆ ಹೊಣೆ\fqa*\f* ನಿಮ್ಮ ಮೇಲೆ ಬರುವುದು. \v 36 ನಿಮಗೆ ನಿಜವಾಗಿ ಹೇಳುತ್ತೇನೆ: ಇವೆಲ್ಲವೂ ಈ ಸಂತತಿಯವರ ಮೇಲೆ ಬರುವವು. \p \v 37 “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು. \v 38 ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು. \v 39 ಏಕೆಂದರೆ, ‘ಕರ್ತನ ಹೆಸರಿನಲ್ಲಿ ಬರುವವರು ಧನ್ಯರು’\f + \fr 23:39 \fr*\ft \+xt ಕೀರ್ತನೆ 118:26\+xt*\ft*\f* ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಎಂದರು. \c 24 \s1 ಯುಗದ ಅಂತ್ಯದ ಸೂಚನೆಗಳು \p \v 1 ಯೇಸು ದೇವಾಲಯದಿಂದ ಹೊರಗೆ ಹೋದಾಗ ಅವರ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕಾಗಿ ಯೇಸುವಿನ ಬಳಿಗೆ ಬಂದರು. \v 2 ಆಗ ಯೇಸು ಅವರಿಗೆ, “ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು. \p \v 3 ಯೇಸು ಓಲಿವ್ ಗುಡ್ಡದ ಮೇಲೆ ಕುಳಿತುಕೊಂಡಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಈ ಸಂಗತಿಗಳು ಸಂಭವಿಸುವುದು ಯಾವಾಗ? ನಿನ್ನ ಆಗಮನದ ಹಾಗೂ ಲೋಕಾಂತ್ಯದ ಸೂಚನೆ ಏನು? ನಮಗೆ ತಿಳಿಸು,” ಎಂದು ಕೇಳಿದರು. \p \v 4 ಆಗ ಯೇಸು ಉತ್ತರವಾಗಿ ಅವರಿಗೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ. \v 5 ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. \v 6 ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ. \v 7 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ. \v 8 ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ. \p \v 9 “ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ\f + \fr 24:9 \fr*\ft ಅಂದರೆ ಯೇಸುವಿನ ಹಿಂಬಾಲಕರು ಆಗಿರುವುದರಿಂದ\ft*\f* ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು. \v 10 ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು. \v 11 ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿಸುವರು. \v 12 ಅನ್ಯಾಯವು ಹೆಚ್ಚಾಗುವುದರಿಂದ ಬಹುಜನರ ಪ್ರೀತಿಯು ತಣ್ಣಗಾಗುವುದು. \v 13 ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು. \v 14 ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು. \p \v 15 “ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’\f + \fr 24:15 \fr*\ft \+xt ದಾನಿ 9:27; 11:31; 12:11\+xt*\ft*\f* ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ. \v 16 ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. \v 17 ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತೆಗೆದುಕೊಳ್ಳುವುದಕ್ಕೆ ಕೆಳಗೆ ಇಳಿಯದಿರಲಿ. \v 18 ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗದಿರಲಿ. \v 19 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! \v 20 ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಆಗದಂತೆ ಪ್ರಾರ್ಥಿಸಿರಿ. \v 21 ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ. \p \v 22 “ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು. \v 23 ಆಗ ಯಾರಾದರೂ ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ! ಅಗೋ ಅಲ್ಲಿದ್ದಾನೆ!’ ಎಂದು ಹೇಳಿದರೆ ಅವನನ್ನು ನಂಬಬೇಡಿರಿ. \v 24 ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. \v 25 ನೋಡಿರಿ, ಮುಂಚಿತವಾಗಿ ನಾನು ನಿಮಗೆ ಹೇಳಿದ್ದೇನೆ. \p \v 26 “ಅವರು ನಿಮಗೆ, ‘ನೋಡಿ, ಆತನು ಅರಣ್ಯದಲ್ಲಿದ್ದಾನೆ’ ಎಂದು ಹೇಳಿದರೆ ಹೋಗಬೇಡಿರಿ. ‘ನೋಡಿ, ಆತನು ಒಳ ಕೋಣೆಯಲ್ಲಿದ್ದಾನೆ,’ ಎಂದು ಹೇಳಿದರೂ ನಂಬಬೇಡಿರಿ. \v 27 ಏಕೆಂದರೆ ಮಿಂಚು ಪೂರ್ವದಿಂದ ಮಿನುಗಿ ಪಶ್ಚಿಮದವರೆಗೆ ಹೊಳೆಯುವಂತೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು. \v 28 ಹೆಣ ಇದ್ದಲ್ಲಿಗೆ, ಹದ್ದುಗಳು ಬಂದು ಸೇರುತ್ತವೆ.\f + \fr 24:28 \fr*\ft ಈ ಸಂಕೇತಗಳು ಕೊನೆಯ ದಿನಗಳನ್ನು ಸೂಚಿಸುತ್ತವೆ.\ft*\f* \p \v 29 “ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, \q1 “ ‘ಸೂರ್ಯನು ಕತ್ತಲಾಗುವನು; \q2 ಚಂದ್ರನು ಕಾಂತಿಹೀನನಾಗುವನು. \q1 ಆಕಾಶದಿಂದ ನಕ್ಷತ್ರಗಳು ಬೀಳುವವು; \q2 ಮತ್ತು ಆಕಾಶದ ಶಕ್ತಿಗಳು\f + \fr 24:29 \fr*\ft ಅಥವಾ \ft*\fqa ಆಕಾಶದ ಗೋಳಗಳು\fqa*\f* ಕದಲುವವು.’\f + \fr 24:29 \fr*\ft \+xt ಯೆಶಾಯ 13:10; 34:4\+xt*\ft*\f* \p \v 30 “ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.\f + \fr 24:30 \fr*\ft ನೋಡಿರಿ \+xt ದಾನಿ 7:13-14\+xt*\ft*\f* \v 31 ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು. \p \v 32 “ಅಂಜೂರ ಮರದ ದೃಷ್ಟಾಂತದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ. \v 33 ಅದೇ ಪ್ರಕಾರ, ಇವೆಲ್ಲವೂ ಆಗುವುದನ್ನು ನೀವು ಕಾಣುವಾಗ, ಅಂತ್ಯವು ಬಾಗಿಲ ಹತ್ತಿರದಲ್ಲಿಯೇ ಇದೆ ಎಂದು ತಿಳಿದುಕೊಳ್ಳಿರಿ. \v 34 ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. \v 35 ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ. \s1 ತಿಳಿಯದ ದಿನ ಹಾಗೂ ಗಳಿಗೆ \p \v 36 “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಮನುಷ್ಯಪುತ್ರನಾದ ನನಗೂ ತಿಳಿಯದು. \v 37 ಆದರೆ ನೋಹನ ದಿವಸಗಳು ಇದ್ದಂತೆಯೇ, ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು. \v 38 ಪ್ರಳಯವು ಬರುವುದಕ್ಕಿಂತ ಮುಂಚಿನ ಆ ದಿವಸಗಳಲ್ಲಿ, ನೋಹನು ನಾವೆಯಲ್ಲಿ ಸೇರಿದ ದಿವಸದವರೆಗೆ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. \v 39 ಜಲಪ್ರಳಯವು ಬಂದು ಅವರನ್ನು ಕೊಚ್ಚಿಕೊಂಡು ಹೋಗುವವರೆಗೂ ಅವರಿಗೆ ಅದು ತಿಳಿದಿರಲಿಲ್ಲ. ಹಾಗೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು. \v 40 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು. \v 41 ಇಬ್ಬರು ಹೆಂಗಸರು ಬೀಸುವ ಕಲ್ಲಿನಲ್ಲಿ ಬೀಸುತ್ತಿರುವಾಗ, ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬಳನ್ನು ಬಿಡಲಾಗುವುದು. \p \v 42 “ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ. \v 43 ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕದಂತೆ ಕಾಯುತ್ತಿದ್ದನೆಂದು ನೀವು ತಿಳಿದುಕೊಳ್ಳಿರಿ. \v 44 ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ. \p \v 45 “ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಸೇವಕನು ಯಾರು? \v 46 ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು. \v 47 ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. \v 48 ಆದರೆ ದುಷ್ಟ ಸೇವಕನು ತನ್ನ ಹೃದಯದಲ್ಲಿ, ‘ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ,’ ಎಂದು ಹೇಳಿಕೊಂಡು \v 49 ತನ್ನ ಜೊತೆಯ ಸೇವಕರನ್ನು ಹೊಡೆಯುತ್ತಾ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸುವುದಾದರೆ, \v 50 ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, \v 51 ಅವನನ್ನು ಕ್ರೂರವಾಗಿ ಹಿಂಸಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು. \c 25 \s1 ಹತ್ತು ಮಂದಿ ಕನ್ಯೆಯರ ಸಾಮ್ಯ \p \v 1 “ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು. \v 2 ಅವರಲ್ಲಿ ಐದು ಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು. \v 3 ಬುದ್ಧಿಹೀನರು, ತಮ್ಮ ದೀಪಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. \v 4 ಬುದ್ಧಿವಂತೆಯರೋ, ತಮ್ಮ ದೀಪಗಳೊಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. \v 5 ಮದುಮಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸುತ್ತಾ ನಿದ್ರೆ ಹೋದರು. \p \v 6 “ಮಧ್ಯರಾತ್ರಿಯಲ್ಲಿ, ‘ನೋಡಿರಿ, ಮದುಮಗನು ಬರುತ್ತಿದ್ದಾನೆ, ಅವನನ್ನು ಎದುರುಗೊಳ್ಳುವುದಕ್ಕಾಗಿ ಹೊರಡಿರಿ,’ ಎಂಬ ಕೂಗಾಯಿತು. \p \v 7 “ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು. \v 8 ಬುದ್ಧಿಹೀನರು ಬುದ್ಧಿವಂತೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿರಿ, ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ,’ ಎಂದರು. \p \v 9 “ಆದರೆ ಬುದ್ಧಿವಂತೆಯರು ಉತ್ತರವಾಗಿ, ‘ಹಾಗಲ್ಲ, ಅದು ನಮಗೂ ಸಾಲದೆ ಹೋದೀತು. ಆದ್ದರಿಂದ ನೀವು ಮಾರುವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡುಕೊಳ್ಳಿರಿ,’ ಎಂದರು. \p \v 10 “ಅವರು ಕೊಂಡುಕೊಳ್ಳುವುದಕ್ಕೆ ಹೋದಾಗ, ಮದುಮಗನು ಬಂದನು. ಆಗ ಸಿದ್ಧವಾಗಿದ್ದವರು ಆತನೊಂದಿಗೆ ಮದುವೆಯ ಔತಣಕ್ಕೆ ಒಳಗೆ ಹೋದರು. ತರುವಾಯ ಬಾಗಿಲು ಮುಚ್ಚಲಾಯಿತು. \p \v 11 “ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದರು. \p \v 12 “ಆದರೆ ಆತನು ಉತ್ತರವಾಗಿ, ‘ನಾನು ನಿಮ್ಮನ್ನು ಅರಿಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ,’ ಎಂದನು. \p \v 13 “ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು. \s1 ಚಿನ್ನದ ನಾಣ್ಯಗಳ ಸಾಮ್ಯ \p \v 14 “ಪರಲೋಕ ರಾಜ್ಯವು ದೂರದೇಶಕ್ಕೆ ಪ್ರಯಾಣ ಮಾಡುವ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ. \v 15 ಅವನು ಒಬ್ಬನಿಗೆ ಐದು ಚಿನ್ನದ ನಾಣ್ಯಗಳನ್ನು,\f + \fr 25:15 \fr*\ft ಮೂಲಭಾಷೆಯಲ್ಲಿ \ft*\fqa ತಲಾಂತು. \fqa*\ft ಅಂದರೆ ಒಬ್ಬ ಕೂಲಿಕಾರನ 20 ವರ್ಷದ ಕೂಲಿ\ft*\f* ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು; ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಕೂಡಲೇ ಪ್ರಯಾಣಮಾಡಿದನು. \v 16 ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು. \v 17 ಅದೇ ಪ್ರಕಾರ, ಎರಡು ಚಿನ್ನದ ನಾಣ್ಯಗಳನ್ನು ಹೊಂದಿದವನು ಸಹ ಇನ್ನು ಬೇರೆ ಎರಡು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು. \v 18 ಆದರೆ ಒಂದು ಚಿನ್ನದ ನಾಣ್ಯವನ್ನು ಹೊಂದಿದವನು ಹೋಗಿ ಭೂಮಿಯನ್ನು ಅಗೆದು, ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು. \p \v 19 “ಬಹುಕಾಲವಾದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ಕೇಳಿದನು. \v 20 ಆಗ ಐದು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಬಂದು ಬೇರೆ ಐದು ಚಿನ್ನದ ನಾಣ್ಯಗಳನ್ನು ತಂದು, ‘ಒಡೆಯನೇ, ನೀನು ನನಗೆ ಐದು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಅವುಗಳಲ್ಲದೆ ಇನ್ನೂ ಬೇರೆ ಐದು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು. \p \v 21 “ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು. \p \v 22 “ಎರಡು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಸಹ ಬಂದು, ‘ಒಡೆಯನೇ, ನೀನು ನನಗೆ ಎರಡು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಇನ್ನೂ ಎರಡು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು. \p \v 23 “ಆಗ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ, ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು. \p \v 24 “ಆಗ ಒಂದು ಚಿನ್ನದ ನಾಣ್ಯ ಹೊಂದಿದ್ದವನು ಬಂದು, ‘ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು. \v 25 ಆದ್ದರಿಂದ ನಾನು ಭಯಪಟ್ಟು ಹೋಗಿ ನಿನ್ನ ಚಿನ್ನದ ನಾಣ್ಯವನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ನೋಡು, ನೀನು ಕೊಟ್ಟಿದ್ದನ್ನು ನಿನಗೇ ಕೊಡುತ್ತೇನೆ,’ ಎಂದನು. \p \v 26 “ಅದಕ್ಕೆ ಅವನ ಯಜಮಾನನು ಉತ್ತರವಾಗಿ, ‘ಮೈಗಳ್ಳನಾದ ದುಷ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ. \v 27 ಹಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಕೊಡಬೇಕಾಗಿತ್ತು; ನಾನು ಬಂದಾಗ ಹಣವನ್ನು ಬಡ್ಡಿ ಸಮೇತವಾಗಿ ಪಡೆದುಕೊಳ್ಳುತ್ತಿದ್ದೆನು,’ ಎಂದು ಹೇಳಿ, \p \v 28 “ತನ್ನ ಸೇವಕರಿಗೆ, ‘ಅವನಿಂದ ಆ ಚಿನ್ನದ ನಾಣ್ಯವನ್ನು ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳು ಇದ್ದವನಿಗೆ ಕೊಡಿರಿ. \v 29 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು. \v 30 ನಿಷ್ಪ್ರಯೋಜಕನಾದ ಆ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು,’ ಎಂದನು. \s1 ಕುರಿ ಆಡುಗಳ ಸಾಮ್ಯ \p \v 31 “ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು. \v 32 ನನ್ನ ಮುಂದೆ ಎಲ್ಲಾ ಜನಾಂಗದವರನ್ನು ಒಟ್ಟುಗೂಡಿಸಲಾಗುವುದು. ಆಗ ಕುರುಬನು ತನ್ನ ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸುವಂತೆಯೇ ನಾನು ಅವರನ್ನು ಪ್ರತ್ಯೇಕಿಸುವೆನು. \v 33 ನಾನು ಕುರಿಗಳನ್ನು ನನ್ನ ಬಲಗಡೆಯಲ್ಲಿಯೂ ಆಡುಗಳನ್ನು ಎಡಗಡೆಯಲ್ಲಿಯೂ ನಿಲ್ಲಿಸುವೆನು. \p \v 34 “ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ. \v 35 ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಟ್ಟಿರಿ. \v 36 ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು. \p \v 37 “ಆಗ ಆ ನೀತಿವಂತರು ಉತ್ತರವಾಗಿ ನನಗೆ, ‘ಕರ್ತನೇ, ನೀನು ಯಾವಾಗ ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವುದಕ್ಕೆ ಕೊಟ್ಟೆವು? \v 38 ನೀನು ಪರದೇಶಿಯಾಗಿರುವುದನ್ನು ನಾವು ಯಾವಾಗ ಕಂಡು ನಿನಗೆ ಆಶ್ರಯ ಕೊಟ್ಟೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? \v 39 ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನ ಬಳಿಗೆ ಬಂದೆವು?’ ಎಂದು ಕೇಳುವರು. \p \v 40 “ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು. \p \v 41 “ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. \v 42 ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ. \v 43 ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಳ್ಳಲಿಲ್ಲ. ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ. ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂದರ್ಶಿಸಲಿಲ್ಲ,’ ಎಂದು ಹೇಳುವೆನು. \p \v 44 “ಆಗ ಅವರು ಸಹ ಉತ್ತರವಾಗಿ ನನಗೆ, ‘ಕರ್ತನೇ, ನೀನು ಹಸಿದಿದ್ದನ್ನೂ ಬಾಯಾರಿದ್ದನ್ನೂ ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ಯಾವಾಗ ನೋಡಿ ನಿನಗೆ ಉಪಚಾರಮಾಡಲಿಲ್ಲ?’ ಎಂದು ಕೇಳುವರು. \p \v 45 “ಆಗ ನಾನು ಅವರಿಗೆ ಉತ್ತರವಾಗಿ, ‘ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ನೀವು ಇವರಲ್ಲಿ ಅತ್ಯಲ್ಪನಾದ ಒಬ್ಬನಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡಲಿಲ್ಲ,’ ಎಂದು ಹೇಳುವೆನು. \p \v 46 “ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು. \c 26 \s1 ಯೇಸುವಿನ ವಿರುದ್ಧ ಪಿತೂರಿ \p \v 1 ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತಮ್ಮ ಶಿಷ್ಯರಿಗೆ, \v 2 “ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಇರುವುದೆಂದು ನೀವು ಬಲ್ಲಿರಿ. ಆಗ ಮನುಷ್ಯಪುತ್ರನಾದ ನನ್ನನ್ನು ಶಿಲುಬೆಗೆ ಹಾಕಲು ಹಿಡಿದುಕೊಡುವರು,” ಎಂದರು. \p \v 3 ಆಗ ಮುಖ್ಯಯಾಜಕರೂ ಜನರ ಹಿರಿಯರೂ ಒಟ್ಟಾಗಿ ಸೇರಿ, ಕಾಯಫನೆಂಬ ಮಹಾಯಾಜಕನ ಅರಮನೆಗೆ ಬಂದು \v 4 ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. \v 5 ಆದರೆ ಅವರು, “ಜನರಲ್ಲಿ ಗದ್ದಲವಾದೀತು, ಹಬ್ಬದಲ್ಲಿ ಬೇಡ,” ಎಂದರು. \s1 ಬೇಥಾನ್ಯದಲ್ಲಿ ಯೇಸು \p \v 6 ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದರು. \v 7 ಯೇಸು ಅಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯೊಂದಿಗೆ ಯೇಸುವಿನ ಬಳಿಗೆ ಬಂದು, ಅದನ್ನು ಅವರ ತಲೆಯ ಮೇಲೆ ಸುರಿದಳು. \p \v 8 ಯೇಸುವಿನ ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಏಕೆ ಈ ವ್ಯರ್ಥ ಖರ್ಚು? \v 9 ಈ ತೈಲವನ್ನು ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದರು. \p \v 10 ಯೇಸು ಅದನ್ನು ತಿಳಿದವರಾಗಿ ಅವರಿಗೆ, “ನೀವು ಏಕೆ ಈ ಸ್ತ್ರೀಗೆ ತೊಂದರೆಪಡಿಸುತ್ತೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ. \v 11 ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ.\f + \fr 26:11 \fr*\ft \+xt ಧರ್ಮೋ 15:11\+xt*\ft*\f* ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವುದಿಲ್ಲ. \v 12 ಈಕೆ ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದರಿಂದ, ನನ್ನ ಶವಸಂಸ್ಕಾರಕ್ಕೆ ಸಿದ್ಧಮಾಡಿದ್ದಾಳೆ. \v 13 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು. \s1 ಯೇಸುವನ್ನು ಹಿಡಿದುಕೊಡಲು ಯೂದನು ಒಪ್ಪಿದ್ದು \p \v 14 ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತ ಎಂಬುವನು ಮುಖ್ಯಯಾಜಕರ ಬಳಿಗೆ ಹೋಗಿ, \v 15 “ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು. \v 16 ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭವನ್ನು ಕಾಯುತ್ತಿದ್ದನು. \s1 ಕರ್ತನ ಭೋಜನ \p \v 17 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀವು ಪಸ್ಕದ ಊಟ ಮಾಡಲು ನಾವು ನಿಮಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ಬಯಸುತ್ತೀರಿ?” ಎಂದು ಕೇಳಿದರು. \p \v 18 ಅದಕ್ಕೆ ಯೇಸು, “ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ, ‘ನನ್ನ ಸಮಯವು ಸಮೀಪವಾಗಿದೆ. ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕರು ಕೇಳುತ್ತಾರೆ’ ಎಂಬುದಾಗಿ ಅವನಿಗೆ ಹೇಳಿರಿ,” ಎಂದರು. \v 19 ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಮಾಡಿದರು. \p \v 20 ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡರು. \v 21 ಅವರು ಊಟಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು,” ಎಂದರು. \p \v 22 ಆಗ ಅವರು ದುಃಖಪಟ್ಟು, “ಕರ್ತನೇ, ಅವನು ನಾನಲ್ಲವಲ್ಲಾ?” ಎಂದು ಅವರಲ್ಲಿ ಪ್ರತಿಯೊಬ್ಬರೂ ಯೇಸುವನ್ನು ಕೇಳಲಾರಂಭಿಸಿದರು. \p \v 23 ಅದಕ್ಕೆ ಯೇಸು ಉತ್ತರವಾಗಿ, “ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನಗೆ ದ್ರೋಹ ಮಾಡುವನು. \v 24 ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು. \p \v 25 ಆಗ ಯೇಸುವನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ಅವನು ನಾನಲ್ಲವಲ್ಲಾ?” ಎಂದನು. \p “ನೀನೇ ಹೇಳಿದ್ದೀ,” ಎಂದು ಯೇಸು ಉತ್ತರಕೊಟ್ಟರು. \p \v 26 ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು ತಮ್ಮ ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ,” ಎಂದರು. \p \v 27 ಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟು, “ನೀವೆಲ್ಲರೂ ಇದರಲ್ಲಿರುವುದನ್ನು ಕುಡಿಯಿರಿ. \v 28 ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ. \v 29 ನಾನು ನಿಮಗೆ ಹೇಳುವುದೇನೆಂದರೆ, ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ,” ಎಂದರು. \p \v 30 ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು. \s1 ಪೇತ್ರನು ತನ್ನನ್ನು ಅಲ್ಲಗಳೆಯುವನೆಂದು ಯೇಸು ಮುಂತಿಳಿಸಿದ್ದು \p \v 31 ಆಗ ಯೇಸು ಅವರಿಗೆ, “ನೀವೆಲ್ಲರೂ ಈ ರಾತ್ರಿ ನನ್ನನ್ನು ಬಿಟ್ಟು ಓಡಿಹೋಗುವಿರಿ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: \q1 “ ‘ಏಕೆಂದರೆ ನಾನು ಕುರುಬನನ್ನು ಹೊಡೆಯುವೆನು, \q2 ಮಂದೆಯ ಕುರಿಗಳು ಚದರಿಹೋಗುವುವು,’\f + \fr 26:31 \fr*\ft \+xt ಜೆಕರ್ಯ 13:7\+xt*\ft*\f* \m \v 32 ಆದರೆ ನಾನು ಎದ್ದ ಮೇಲೆ, ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗುವೆನು,” ಎಂದು ಹೇಳಿದರು. \p \v 33 ಆಗ ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದನು. \p \v 34 ಯೇಸು ಅವನಿಗೆ, “ಈ ರಾತ್ರಿಯಲ್ಲಿ ಹುಂಜ ಕೂಗುವುದಕ್ಕಿಂತ ಮುಂಚೆ, ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು. \p \v 35 ಅದಕ್ಕೆ ಪೇತ್ರನು ಯೇಸುವಿಗೆ, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದನು. ಅದರಂತೆಯೇ ಉಳಿದ ಶಿಷ್ಯರೆಲ್ಲರೂ ಹೇಳಿದರು. \s1 ಗೆತ್ಸೇಮನೆ \p \v 36 ತರುವಾಯ ಯೇಸು ತಮ್ಮ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ, “ನಾನು ಅಲ್ಲಿಗೆ ಹೋಗಿ ಪ್ರಾರ್ಥಿಸುವವರೆಗೆ ನೀವು ಇಲ್ಲೇ ಕುಳಿತುಕೊಳ್ಳಿರಿ,” ಎಂದರು. \v 37 ಯೇಸು ತಮ್ಮ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಪುತ್ರರನ್ನೂ ಕರೆದುಕೊಂಡು ಹೋಗಿ, ದುಃಖಿಸುವುದಕ್ಕೂ ಬಹು ವ್ಯಥೆಪಡುವುದಕ್ಕೂ ಆರಂಭಿಸಿದರು. \v 38 ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು. \p \v 39 ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು. \p \v 40 ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಏನು, ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? \v 41 ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು. \p \v 42 ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು. \p \v 43 ಯೇಸು ಹಿಂತಿರುಗಿದಾಗ, ಅವರು ತಿರುಗಿ ನಿದ್ರೆ ಮಾಡುವುದನ್ನು ಕಂಡರು. ಅವರ ಕಣ್ಣುಗಳು ಭಾರವಾಗಿದ್ದವು. \v 44 ಯೇಸು ಅವರನ್ನು ಬಿಟ್ಟು ಹೊರಟುಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಪುನಃ ಹೇಳಿ ಪ್ರಾರ್ಥಿಸಿದರು. \p \v 45 ತರುವಾಯ ಯೇಸು ತಮ್ಮ ಶಿಷ್ಯರ ಬಳಿಗೆ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಇಗೋ, ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗುವ ಸಮಯವು ಸಮೀಪಿಸಿದೆ. \v 46 ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು. \s1 ಯೇಸುವನ್ನು ಬಂಧಿಸಿದ್ದು \p \v 47 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು. \v 48 ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು; ಆತನನ್ನು ಹಿಡಿಯಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು. \v 49 ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ, ನಮಸ್ಕಾರ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು. \p \v 50 ಅದಕ್ಕೆ ಯೇಸು ಅವನಿಗೆ, “ಸ್ನೇಹಿತನೇ, ನೀನು ಮಾಡಲು ಬಂದ ಕೆಲಸವನ್ನು ಮುಗಿಸು,”\f + \fr 26:50 \fr*\ft ಅಥವಾ \ft*\fqa ಸ್ನೇಹಿತನೇ, ನೀನು ಇಲ್ಲಿ ಬಂದದ್ದು ಏಕೆ?\fqa*\f* ಎಂದು ಹೇಳಿದರು. \p ಕೂಡಲೇ ಆ ಜನರು ಮುಂದೆ ಬಂದು, ಯೇಸುವನ್ನು ಹಿಡಿದು ಬಂಧಿಸಿದರು. \v 51 ಆಗ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಖಡ್ಗವನ್ನು ಹಿರಿದು, ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು. \p \v 52 ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ತಿರುಗಿ ಅದರ ಒರೆಯಲ್ಲಿ ಹಾಕು. ಖಡ್ಗವನ್ನು ಹಿಡಿದವರೆಲ್ಲರೂ ಖಡ್ಗದಿಂದ ನಾಶವಾಗುವರು. \v 53 ನಾನು ಈಗ ನನ್ನ ತಂದೆಗೆ ಕೇಳಿಕೊಂಡರೆ ಅವರು ಈಗಲೇ ಹನ್ನೆರಡು ದಳಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡಲಾರರೆಂದು ನೀನು ನೆನಸುತ್ತೀಯಾ? \v 54 ಹಾಗಾದರೆ ಇವುಗಳು ಹೀಗೆಯೇ ಆಗಬೇಕೆಂಬ ಪವಿತ್ರ ವೇದದ ವಾಕ್ಯಗಳು ನೆರವೇರುವುದು ಹೇಗೆ?” ಎಂದರು. \p \v 55 ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. \v 56 ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು. \s1 ಯೇಸು ನ್ಯಾಯಸಭೆಯ ಮುಂದೆ \p \v 57 ಯೇಸುವನ್ನು ಹಿಡಿದಿದ್ದವರು ಅವರನ್ನು ಮಹಾಯಾಜಕನಾದ ಕಾಯಫನ ಬಳಿಗೆ ತೆಗೆದುಕೊಂಡು ಹೋದರು. ಅಲ್ಲಿ ನಿಯಮ ಬೋಧಕರೂ ಹಿರಿಯರೂ ಕೂಡಿ ಬಂದಿದ್ದರು. \v 58 ಆದರೆ ಪೇತ್ರನು ಮಹಾಯಾಜಕನ ಅರಮನೆಗೆ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ, ಒಳಗೆ ಹೋಗಿ ಅಂತ್ಯವೇನಾಗುವುದೆಂದು ನೋಡಲು ಸೇವಕರೊಂದಿಗೆ ಕುಳಿತುಕೊಂಡನು. \p \v 59 ಆಗ ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಯೇಸುವನ್ನು ಕೊಲ್ಲಿಸಬೇಕೆಂದು ಸುಳ್ಳುಸಾಕ್ಷಿಗಾಗಿ ಹುಡುಕಿದರು. \v 60 ಬಹುಮಂದಿ ಸುಳ್ಳುಸಾಕ್ಷಿಗಳು ಬಂದರೂ ಅವರಿಗೆ ಸರಿಯಾದ ಸಾಕ್ಷ್ಯವು ದೊರೆಯಲಿಲ್ಲ. \p ಕಡೆಯಲ್ಲಿ ಇಬ್ಬರು ಸುಳ್ಳುಸಾಕ್ಷಿಗಳು ಬಂದು, \v 61 “ನಾನು ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಈತನು ಹೇಳಿದನು,” ಎಂದರು. \p \v 62 ಮಹಾಯಾಜಕನು ಎದ್ದು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವುದು ಏನು?” ಎಂದು ಕೇಳಿದನು. \v 63 ಆದರೆ ಯೇಸು ಸುಮ್ಮನಿದ್ದರು. \p ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು. \p \v 64 ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,”\f + \fr 26:64 \fr*\ft \+xt ಕೀರ್ತನೆ 110:1; ದಾನಿ 7:13\+xt*\ft*\f* ಎಂದರು. \p \v 65 ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈತನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಏತಕ್ಕೆ? ನೋಡಿ, ಈಗ ಈತನ ದೇವದೂಷಣೆಯನ್ನು ನೀವೇ ಕೇಳಿದ್ದೀರಲ್ಲಾ \v 66 ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಿದ್ದಕ್ಕೆ ಅವರು ಉತ್ತರವಾಗಿ, \p “ಈತನು ಮರಣಕ್ಕೆ ಪಾತ್ರನು,” ಎಂದರು. \p \v 67 ಆಮೇಲೆ ಅವರು ಯೇಸುವಿನ ಮುಖದ ಮೇಲೆ ಉಗುಳಿ ಅವರನ್ನು ಗುದ್ದಿದರು. ಬೇರೆ ಕೆಲವರು ಅವರ ಕೆನ್ನೆಗೆ ಹೊಡೆದು, \v 68 “ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು,” ಎಂದರು. \s1 ಪೇತ್ರನು ಯೇಸುವನ್ನು ನಿರಾಕರಿಸಿದ್ದು \p \v 69 ಆಗ ಪೇತ್ರನು ಹೊರಾಂಗಣದಲ್ಲಿ ಕುಳಿತಿರಲು, ಒಬ್ಬ ದಾಸಿಯು ಅವನ ಬಳಿಗೆ ಬಂದು, “ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು,” ಎಂದಳು. \p \v 70 ಆದರೆ ಅವನು ಎಲ್ಲರ ಮುಂದೆ, “ನೀನು ಏನು ಹೇಳುತ್ತೀಯೋ ನನಗೆ ತಿಳಿಯದು,” ಎಂದು ನಿರಾಕರಿಸಿದನು. \p \v 71 ಅವನು ಮುಖ್ಯ ದ್ವಾರದೊಳಗೆ ಹೋದಾಗ, ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ, “ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು. \p \v 72 ಆಗ ಅವನು ಆಣೆ ಮಾಡಿ, “ನಾನು ಆ ಮನುಷ್ಯನನ್ನು ಅರಿಯೆನು,” ಎಂದು ತಿರುಗಿ ನಿರಾಕರಿಸಿದನು. \p \v 73 ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು. ನಿಜವಾಗಿಯೂ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ,” ಎಂದರು. \p \v 74 ಅದಕ್ಕೆ ಅವನು, “ಆ ಮನುಷ್ಯನನ್ನು ನಾನು ಅರಿಯೆನು,” ಎಂದು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಪ್ರಾರಂಭಿಸಿದನು. \p ಕೂಡಲೇ ಹುಂಜ ಕೂಗಿತು. \v 75 ಆಗ ಪೇತ್ರನು, “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು. \c 27 \s1 ಯೂದನು ನೇಣು ಹಾಕಿಕೊಂಡದ್ದು \p \v 1 ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು. \v 2 ಅವರು ಯೇಸುವನ್ನು ಕಟ್ಟಿ, ಕರೆದುಕೊಂಡು ಹೋಗಿ ರಾಜ್ಯಪಾಲ ಪಿಲಾತನಿಗೆ ಒಪ್ಪಿಸಿದರು. \p \v 3 ಯೇಸುವಿಗೆ ದ್ರೋಹಮಾಡಿದ ಯೂದನು ಗುರುವಿಗೆ ಮರಣ ದಂಡನೆಯ ತೀರ್ಪಾದದ್ದನ್ನು ಕಂಡು ವಿಷಾದಿಸಿ, ಆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಮರಳಿ ತಂದನು. \v 4 ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. \p ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು. \p \v 5 ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು. \p \v 6 ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು. \v 7 ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಳಿಡುವುದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು. \v 8 ಈ ಕಾರಣದಿಂದ ಆ ಹೊಲವನ್ನು “ರಕ್ತದ ಹೊಲ” ಎಂದು ಈ ದಿನದವರೆಗೆ ಕರೆಯಲಾಗುತ್ತಿದೆ. \v 9 ಹೀಗೆ ಪ್ರವಾದಿ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ, “ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, \v 10 ಕರ್ತನು ನನಗೆ ಆಜ್ಞಾಪಿಸಿದಂತೆ ಅವುಗಳನ್ನು, ‘ಕುಂಬಾರನ ಹೊಲ’ ಕೊಳ್ಳಲು ಕೊಟ್ಟರು,”\f + \fr 27:10 \fr*\ft \+xt ಜೆಕರ್ಯ 11:12,13; ಯೆರೆ 19:1-13; 32:6-9\+xt*\ft*\f* ಎಂಬುದು. \s1 ಪಿಲಾತನು ಯೇಸುವನ್ನು ಮರಣದಂಡನೆಗೆ ಒಪ್ಪಿಸಿದ್ದು \p \v 11 ಯೇಸು ರಾಜ್ಯಪಾಲನ ಮುಂದೆ ನಿಂತಿದ್ದರು. ಆಗ ಅವನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. \p ಅದಕ್ಕೆ ಯೇಸು ಅವನಿಗೆ, “ನೀನೇ ಹೇಳುತ್ತಿದ್ದಿ,” ಎಂದರು. \p \v 12 ಆಗ ಮುಖ್ಯಯಾಜಕರೂ ಹಿರಿಯರೂ ಯೇಸುವಿನ ಮೇಲೆ ದೂರು ಹೇಳುತ್ತಿದ್ದರೂ ಅವರು ಏನೂ ಉತ್ತರ ಕೊಡಲಿಲ್ಲ. \v 13 ಆಗ ಪಿಲಾತನು ಯೇಸುವಿಗೆ, “ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುತ್ತಿರುವುದು ನಿನಗೆ ಕೇಳಿಸುವುದಿಲ್ಲವೋ?” ಎಂದನು. \v 14 ಒಂದು ಮಾತಿಗಾದರೂ ಯೇಸು ಅವನಿಗೆ ಉತ್ತರ ಕೊಡದೆ ಇದ್ದುದರಿಂದ ರಾಜ್ಯಪಾಲನು ಅತ್ಯಾಶ್ಚರ್ಯಪಟ್ಟನು. \p \v 15 ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯಾಳನ್ನು ರಾಜ್ಯಪಾಲನು ಬಿಟ್ಟುಕೊಡುವ ಪದ್ಧತಿಯಿತ್ತು. \v 16 ಆ ಸಮಯದಲ್ಲಿ ಬರಬ್ಬನೆಂಬ\f + \fr 27:16 \fr*\ft ಬರಬ್ಬನ ಪ್ರಾರಂಭದ ಹೆಸರು ಯೇಸು\ft*\f* ಪ್ರಸಿದ್ಧ ಸೆರೆಯಾಳು ಅವರಲ್ಲಿ ಇದ್ದನು. \v 17 ಜನಸಮೂಹ ಕೂಡಿಬಂದಿದ್ದಾಗ ಪಿಲಾತನು ಅವರಿಗೆ, “ನಿಮಗೆ ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು. \v 18 ಯೇಸುವನ್ನು ಅವರು ಹೊಟ್ಟೆಕಿಚ್ಚಿನಿಂದ ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು. \p \v 19 ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು. \p \v 20 ಆದರೆ ಮುಖ್ಯಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸುವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹವನ್ನು ಒಡಂಬಡಿಸಿದರು. \p \v 21 ರಾಜ್ಯಪಾಲನು ಅವರಿಗೆ, “ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕೆನ್ನುತ್ತೀರಿ?” ಎಂದು ಕೇಳಲು ಅವರು, \p “ಬರಬ್ಬನನ್ನು,” ಎಂದರು. \p \v 22 ಪಿಲಾತನು ಅವರಿಗೆ, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಅವರೆಲ್ಲರೂ, \p “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಹೇಳಿದರು. \p \v 23 ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, \p “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು. \p \v 24 ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು. \p \v 25 ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು. \p \v 26 ಆಗ ಪಿಲಾತನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. \s1 ಯೇಸುವನ್ನು ಸೈನಿಕರು ಅಪಹಾಸ್ಯಮಾಡಿದ್ದು \p \v 27 ತರುವಾಯ ರಾಜ್ಯಪಾಲನ ಸೈನಿಕರು ಯೇಸುವನ್ನು ರಾಜಭವನದೊಳಕ್ಕೆ ತೆಗೆದುಕೊಂಡುಹೋಗಿ ಸೈನ್ಯದ ಪೂರ್ಣತಂಡವನ್ನು ಯೇಸುವಿನ ಸುತ್ತಲೂ ಕೂಡಿಸಿದರು. \v 28 ಅವರು ಯೇಸುವಿನ ಬಟ್ಟೆಗಳನ್ನು ತೆಗೆದುಹಾಕಿ ಕಡುಗೆಂಪು ನಿಲುವಂಗಿಯನ್ನು ಅವರಿಗೆ ತೊಡಿಸಿದರು. \v 29 ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು, ಯೇಸುವಿನ ತಲೆಯ ಮೇಲಿಟ್ಟು, ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವನ್ನು ಹಾಸ್ಯಮಾಡಿದರು. \v 30 ಅವರು ಯೇಸುವಿನ ಮೇಲೆ ಉಗುಳಿ, ಆ ಬೆತ್ತವನ್ನು ತೆಗೆದುಕೊಂಡು ಅವರ ತಲೆಯ ಮೇಲೆ ಮತ್ತೆ ಮತ್ತೆ ಹೊಡೆದರು. \v 31 ಹೀಗೆ ಹಾಸ್ಯ ಮಾಡಿದ ಮೇಲೆ, ಆ ನಿಲುವಂಗಿಯನ್ನು ಯೇಸುವಿನಿಂದ ತೆಗೆದುಹಾಕಿ ಅವರ ವಸ್ತ್ರವನ್ನು ಹೊದಿಸಿ, ಯೇಸುವನ್ನು ಶಿಲುಬೆಗೆ ಹಾಕುವುದಕ್ಕಾಗಿ ನಡೆಸಿಕೊಂಡು ಹೋದರು. \s1 ಯೇಸುವನ್ನು ಶಿಲುಬೆಗೆ ಹಾಕಿದರು \p \v 32 ಅವರು ಹೊರಗೆ ಹೋಗುತ್ತಿರುವಾಗ, ಕುರೇನೆ ಗ್ರಾಮದ ಸೀಮೋನನೆಂಬ ಮನುಷ್ಯನನ್ನು ಕಂಡು, ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು. \v 33 ಆಮೇಲೆ ಅವರು “ಗೊಲ್ಗೊಥಾ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಬಂದರು. ಅದರ ಅರ್ಥ “ತಲೆಬುರುಡೆಯ ಸ್ಥಳ” ಎಂಬುದು. \v 34 ಆಗ ಅವರು ಯೇಸುವಿಗೆ ಕಹಿ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಯೇಸು ಅದನ್ನು ರುಚಿ ನೋಡಿ ಕುಡಿಯಲು ಇಷ್ಟಪಡಲಿಲ್ಲ. \v 35 ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ, ಅವರ ಬಟ್ಟೆಗಳಿಗಾಗಿ ಸೈನಿಕರು ಚೀಟುಹಾಕಿ ಹಂಚಿಕೊಂಡರು \v 36 ಮತ್ತು ಅವರು ಅಲ್ಲಿ ಕೆಳಗೆ ಕುಳಿತು ಕಾವಲು ಕಾಯುತ್ತಿದ್ದರು. \v 37 ಯೇಸುವಿನ ತಲೆಯ ಮೇಲ್ಭಾಗದಲ್ಲಿ ಅವರ ವಿರುದ್ಧ ದೋಷಾರೋಪಣೆಯನ್ನು ಬರೆದಿಟ್ಟರು. ಅದೇನೆಂದರೆ: \pc \sc ಈತನು ಯೆಹೂದ್ಯರ ಅರಸನಾದ ಯೇಸು.\sc* \p \v 38 ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು. \v 39 ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ, \v 40 “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು. \v 41 ಅದೇ ಮೇರೆಗೆ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವನ್ನು ಹಾಸ್ಯಮಾಡಿ, \v 42 “ಈತನು ಬೇರೆಯವರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು! ಈತನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗೆ ಇಳಿದು ಬರಲಿ. ಆಗ ನಾವು ಈತನನ್ನು ನಂಬುವೆವು. \v 43 ಈತನು ದೇವರಲ್ಲಿ ಭರವಸೆ ಇಟ್ಟಿದ್ದಾನೆ. ದೇವರಿಗೆ ಈತನಲ್ಲಿ ಇಷ್ಟವಿದ್ದರೆ, ದೇವರೇ ಈತನನ್ನು ಈಗ ಬಿಡಿಸಲಿ, ಏಕೆಂದರೆ ಈತನು, ‘ನಾನು ದೇವಪುತ್ರನು’ ಎಂದು ಹೇಳಿದ್ದಾನೆ,” ಎಂದರು. \v 44 ಯೇಸುವಿನ ಜೊತೆಗೆ ಶಿಲುಬೆಗೇರಿಸಲಾಗಿದ್ದ ಕಳ್ಳರು ಸಹ ಅದೇ ರೀತಿಯಾಗಿ ಅವರನ್ನು ನಿಂದಿಸಿದರು. \s1 ಯೇಸುವಿನ ಮರಣ \p \v 45 ಆಗ ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. \v 46 ಸುಮಾರು ಮೂರು ಗಂಟೆಗೆ ಯೇಸು, \tl “ಏಲೀ, ಏಲೀ, ಲಮಾ ಸಬಕ್ತಾನೀ?”\tl* ಅಂದರೆ, “ನನ್ನ ದೇವರೇ, ನನ್ನ ದೇವರೇ ಏಕೆ ನನ್ನನ್ನು ಕೈಬಿಟ್ಟಿದ್ದೀ?”\f + \fr 27:46 \fr*\ft \+xt ಕೀರ್ತನೆ 22:1\+xt*\ft*\f* ಎಂದು ಮಹಾಧ್ವನಿಯಿಂದ ಕೂಗಿ ಹೇಳಿದರು. \p \v 47 ಆಗ ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈತನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು. \p \v 48 ಕೂಡಲೇ ಅವರಲ್ಲಿ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯುವುದಕ್ಕೆ ಕೊಟ್ಟನು. \v 49 ಉಳಿದವರು, “ಇರಲಿ ಬಿಡು, ಎಲೀಯನು ಬಂದು ಈತನನ್ನು ರಕ್ಷಿಸುವನೇನೋ ನೋಡೋಣ,” ಎಂದರು. \p \v 50 ಯೇಸು ತಿರುಗಿ ಗಟ್ಟಿಯಾಗಿ ಕೂಗಿ, ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು. \p \v 51 ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು. \v 52 ಇದಲ್ಲದೆ ಸಮಾಧಿಗಳು ತೆರೆದುಕೊಂಡವು. ಮರಣ ಹೊಂದಿದ ಅನೇಕ ಭಕ್ತರ ದೇಹಗಳು ಎದ್ದವು. \v 53 ಯೇಸು ಪುನರುತ್ಥಾನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪವಿತ್ರ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. \p \v 54 ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು. \p \v 55 ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ, ಅವರಿಗೆ ಸೇವೆಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. \v 56 ಅವರಲ್ಲಿ ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಜೆಬೆದಾಯನ ಮಕ್ಕಳ ತಾಯಿ ಇದ್ದರು. \s1 ಯೇಸುವಿನ ಸಮಾಧಿ \p \v 57 ಸಂಜೆಯಾದಾಗ, ಅರಿಮಥಾಯ ಊರಿನ ಯೋಸೇಫನೆಂಬ ಹೆಸರುಳ್ಳ ಧನವಂತನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು. \v 58 ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ಕೇಳಿಕೊಂಡನು. ಆಗ ಪಿಲಾತನು ದೇಹವನ್ನು ಅವನಿಗೆ ಒಪ್ಪಿಸುವಂತೆ ಅಪ್ಪಣೆಕೊಟ್ಟನು. \v 59 ಯೋಸೇಫನು ಆ ದೇಹವನ್ನು ತೆಗೆದುಕೊಂಡ ಮೇಲೆ, ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತ್ತಿ, \v 60 ಬಂಡೆಯಲ್ಲಿ ತಾನು ಕೊರೆದಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು, ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು. \v 61 ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು. \s1 ಸಮಾಧಿಯ ಹತ್ತಿರ ಕಾವಲುಗಾರರು \p \v 62 ಮರುದಿನ, ಅಂದರೆ ಪಸ್ಕಹಬ್ಬದ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರು, ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು, \v 63 “ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ. \v 64 ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ಆತನನ್ನು ಕದ್ದುಕೊಂಡು ಹೋಗಿ, ಯೇಸು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿಯಾರು. ಆಗ ಮೊದಲನೆಯ ಮೋಸಕ್ಕಿಂತ ಕಡೆಯ ಮೋಸವು ಕೆಡುಕಾದೀತು. ಆದಕಾರಣ ಮೂರನೆಯ ದಿನದವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆಕೊಡಬೇಕು,” ಎಂದರು. \p \v 65 ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲಾ, ಹೋಗಿ ನಿಮಗೆ ತಿಳಿದಮಟ್ಟಿಗೆ ಅದನ್ನು ಭದ್ರಪಡಿಸಿರಿ,” ಎಂದನು. \v 66 ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ, ಕಾವಲನ್ನು ಇಟ್ಟರು. \c 28 \s1 ಯೇಸುವಿನ ಪುನರುತ್ಥಾನ \p \v 1 ಸಬ್ಬತ್ ಮುಗಿದ ಮೇಲೆ, ವಾರದ ಮೊದಲನೆಯ ದಿನ ಬೆಳಗಾಗುವಾಗ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು. \p \v 2 ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಪರಲೋಕದಿಂದ ಇಳಿದುಬಂದು, ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಅದರ ಮೇಲೆ ಕುಳಿತುಕೊಂಡನು. \v 3 ಅವನ ರೂಪವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. \v 4 ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತಂತಾದರು. \p \v 5 ಆ ದೂತನು ಸ್ತ್ರೀಯರಿಗೆ, “ನೀವು ಭಯಪಡಬೇಡಿರಿ. ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು. \v 6 ಅವರು ಇಲ್ಲಿ ಇಲ್ಲ. ಅವರು ಹೇಳಿದಂತೆಯೇ ಜೀವಂತರಾಗಿ ಎದ್ದಿದ್ದಾರೆ. ಕರ್ತನನ್ನು ಇಟ್ಟಿದ್ದ ಸ್ಥಳವನ್ನು ಬಂದು ನೋಡಿರಿ. \v 7 ಬೇಗನೆ ಹೋಗಿ ಅವರ ಶಿಷ್ಯರಿಗೆ, ‘ಅವರು ಮರಣದಿಂದ ಎದ್ದಿದ್ದಾರೆ. ಅವರು ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ. ನೀವು ಅಲ್ಲಿಯೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ಇದೇ ನಾನು ನಿಮಗೆ ತಿಳಿಸಬೇಕಾದ ಸಂಗತಿ,” ಎಂದನು. \p \v 8 ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು, ಶಿಷ್ಯರಿಗೆ ತಿಳಿಸುವುದಕ್ಕಾಗಿ ಓಡಿಹೋದರು. \v 9 ಅವರು ಶಿಷ್ಯರಿಗೆ ತಿಳಿಸುವುದಕ್ಕೆ ಹೋಗುತ್ತಿದ್ದಾಗ, ಯೇಸು ಅವರನ್ನು ಸಂಧಿಸಿ, “ಶುಭವಾಗಲಿ” ಎಂದರು. ಅವರು ಬಂದು ಯೇಸುವಿನ ಪಾದಗಳನ್ನು ಹಿಡಿದು ಅವರನ್ನು ಆರಾಧಿಸಿದರು. \v 10 ಆಗ ಯೇಸು ಅವರಿಗೆ, “ಭಯಪಡಬೇಡಿರಿ, ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ಹೋಗಿ ಅವರಿಗೆ ಹೇಳಿರಿ,” ಎಂದರು. \s1 ಕಾವಲುಗಾರರ ವರದಿ \p \v 11 ಅವರು ಹೋಗುತ್ತಿರುವಾಗ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಮುಖ್ಯಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು. \v 12 ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು, \v 13 “ ‘ನಾವು ನಿದ್ರೆ ಮಾಡುತ್ತಿದ್ದಾಗ ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋದರು,’ ಎಂದು ನೀವು ಹೇಳಿರಿ. \v 14 ಇದು ರಾಜ್ಯಪಾಲನ ಕಿವಿಗೆ ಬಿದ್ದರೆ, ನೀವು ತಪ್ಪಿಸಿಕೊಳ್ಳುವ ಹಾಗೆ ನಾವು ಅವನನ್ನು ಸಮಾಧಾನಪಡಿಸುವೆವು,” ಎಂದರು. \v 15 ಹೀಗೆ ಅವರು ಆ ಹಣವನ್ನು ತೆಗೆದುಕೊಂಡು ತಮಗೆ ಕಲಿಸಿದಂತೆ ವರದಿಮಾಡಿದರು. ಈ ಕಥೆಯು ಈ ದಿನದವರೆಗೂ ಯೆಹೂದ್ಯರಲ್ಲಿ ಹಬ್ಬಿದೆ. \s1 ಮಹಾ ಆದೇಶವು \p \v 16 ಆಗ ಹನ್ನೊಂದು ಮಂದಿ ಶಿಷ್ಯರು ಯೇಸು ತಮಗೆ ನೇಮಿಸಿದ ಗಲಿಲಾಯದಲ್ಲಿರುವ ಬೆಟ್ಟಕ್ಕೆ ಹೋದರು. \v 17 ಅವರು ಯೇಸುವನ್ನು ಕಂಡು ಆರಾಧಿಸಿದರು. ಆದರೆ ಕೆಲವರು ಸಂದೇಹ ಪಟ್ಟರು. \v 18 ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ. \v 19 ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ, \v 20 ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.