\id MIC - Biblica® Open Kannada Contemporary Version \ide UTF-8 \h ಮೀಕ \toc1 ಮೀಕ \toc2 ಮೀಕ \toc3 ಮೀಕ \mt1 ಮೀಕ \c 1 \p \v 1 ಯೆಹೂದದ ಅರಸರಾದ ಯೋತಾಮನ ಆಹಾಜನ, ಹಿಜ್ಕೀಯನ, ದಿವಸಗಳಲ್ಲಿ ಮೊರೇಷೆತಿನವನಾದ ಮೀಕನಿಗೆ ಬಂದ ಯೆಹೋವ ದೇವರ ವಾಕ್ಯವು. ಅವನು ಸಮಾರ್ಯ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡ ದರ್ಶನ. \b \b \q1 \v 2 ಎಲ್ಲಾ ಜನಗಳೇ ಕೇಳಿರಿ, \q2 ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. \q1 ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ \q2 ವಿರೋಧವಾಗಿ ಸಾಕ್ಷಿ ಹೇಳುವರು. \s1 ಸಮಾರ್ಯಕ್ಕೂ ಯೆರೂಸಲೇಮಿಗೂ ದಂಡನೆ \q1 \v 3 ಯೆಹೋವ ದೇವರು ತಮ್ಮ ವಾಸಸ್ಥಾನದಿಂದ ಇಳಿದು ಬರುತ್ತಾರೆ. \q2 ಅವರು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ಸಂಚರಿಸುತ್ತಾರೆ. \q1 \v 4 ಬೆಂಕಿಯ ಮುಂದೆ ಮೇಣದ ಹಾಗೆಯೂ \q2 ಇಳಿಜಾರಿನ ಸ್ಥಳದಲ್ಲಿ ರಭಸವಾಗಿ ಹರಿಯುವ ನೀರಿನ ಹಾಗೆಯೂ \q1 ಬೆಟ್ಟಗಳು ಆತನ ಕೆಳಗೆ ಕರಗುವುವು; \q2 ತಗ್ಗುಗಳು ಸೀಳುವುವು. \q1 \v 5 ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ \q2 ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, \q1 ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? \q1 ಯೆಹೂದದ ಉನ್ನತ ಪೂಜಾಸ್ಥಳ ಯಾವುದು? \q2 ಅದು ಯೆರೂಸಲೇಮು ಅಲ್ಲವೋ? \b \q1 \v 6 ಹೀಗಿರುವುದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬವನ್ನಾಗಿಯೂ \q2 ದ್ರಾಕ್ಷಿಬಳ್ಳಿ ನೆಡುವ ಸ್ಥಳವನ್ನಾಗಿಯೂ ಮಾಡುವೆನು. \q1 ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು, \q2 ಅದರ ಅಸ್ತಿವಾರಗಳನ್ನು ಹೊರಗೆಡಹುವೆನು. \q1 \v 7 ಅದರ ವಿಗ್ರಹಗಳೆಲ್ಲಾ ತುಂಡುಗಳಾಗುವಂತೆ ಮಾಡುವೆನು. \q2 ಅದರ ಆಲಯದ ಕಾಣಿಕೆಗಳೆಲ್ಲಾ ಬೆಂಕಿಯಿಂದ ಸುಟ್ಟುಹೋಗುವುದು. \q2 ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು. \q1 ಅದು ವೇಶ್ಯಾವೃತ್ತಿಯ ಕೂಲಿಯಿಂದ ಕೂಡಿಸಿಕೊಂಡವು. \q2 ವೇಶ್ಯಾವೃತ್ತಿಯ ಕೂಲಿಯನ್ನಾಗಿಯೇ ಅವುಗಳನ್ನು ಉಪಯೋಗಿಸಬೇಕಾಗುತ್ತದೆ. \s1 ಗೋಳಾಟ ಮತ್ತು ಕೂಗಾಟ \q1 \v 8 ಆದ್ದರಿಂದ ನಾನು ಗೋಳಾಡಿ ಅರಚುವೆನು. \q2 ಬರಿಗಾಲಿನಲ್ಲಿಯೂ ಬೆತ್ತಲೆಯಾಗಿಯೂ ಹೋಗುವೆನು. \q1 ನರಿಗಳ ಹಾಗೆ ಕೂಗುವೆನು, \q2 ಉಷ್ಟ್ರಪಕ್ಷಿಯಂತೆ ನರಳುವೆನು. \q1 \v 9 ಸಮಾರ್ಯದ ಗಾಯವು ಗುಣವಾಗದಂಥದ್ದು, \q2 ಅದು ಯೆಹೂದಕ್ಕೆ ಬಂತು; \q1 ನನ್ನ ಜನರ ಬಾಗಿಲಿಗೂ \q2 ಯೆರೂಸಲೇಮಿನವರೆಗೂ ಅದು ತಲುಪಿತು. \q1 \v 10 ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; \q2 ಸ್ವಲ್ಪವಾದರೂ ಅಳಬೇಡ; \q1 ಬೇತ್ ಒಫ್‌ರಾಹದಲ್ಲಿ\f + \fr 1:10 \fr*\fq ಬೇತ್ ಒಫ್ \fq*\ft ಅಂದರೆ \ft*\fqa ಧೂಳಿನ ಮನೆ\fqa*\f* \q2 ಧೂಳಿನಲ್ಲಿ ಹೊರಳಾಡು. \q1 \v 11 ಶಾಫೀರಿನ ನಿವಾಸಿಯೇ, \q2 ನಗ್ನತೆಯಿಂದಲೂ ನಾಚಿಕೆಯಿಂದಲೂ ಹಾದುಹೋಗಿರಿ, \q1 ಚಾನಾನಿನಲ್ಲಿ ವಾಸಿಸುವವರು \q2 ಹೊರಗೆ ಬರುವುದಿಲ್ಲ, \q1 ಬೇತ್ ಎಚೆಲು ನರಳುತ್ತಿದೆ. \q2 ಅದು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದಿಲ್ಲ. \q1 \v 12 ಕೇಡು ಯೆಹೋವ ದೇವರಿಂದ ಇಳಿದು \q2 ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ \q1 ಮಾರೋತಿನವರು ಮೇಲುಂಟಾಗುವುದಿಲ್ಲವೋ ಎಂದು \q2 ವೇದನೆ ಪಡುತ್ತಾರೆ. \q1 \v 13 ಲಾಕೀಷಿನ ನಿವಾಸಿಗಳೇ, \q2 ಕುದುರೆಗಳನ್ನು ರಥಕ್ಕೆ ಕಟ್ಟಿರಿ, \q1 ಚೀಯೋನ್ ಮಗಳ ಪಾಪವು ನಿನ್ನಿಂದ ಪ್ರಾರಂಭವಾಯಿತು \q2 ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿ ಬಂದವು. \q1 \v 14 ಹೀಗಿರುವುದರಿಂದ ಮೋರೆಶತ್ ಗತ್ \q2 ಊರಿಗೆ ಅಗಲಿ ಹೋಗುವ ಕಾಣಿಕೆಗಳನ್ನು ಕೊಡುವೆ. \q1 ಅಕ್ಜೀಬಿನ ಮನೆತನಗಳು \q2 ಇಸ್ರಾಯೇಲಿನ ಅರಸರಿಗೆ ಮೋಸಮಾಡುವುವು. \q1 \v 15 ಮಾರೇಷದ ನಿವಾಸಿಯೇ, \q2 ನಿನಗೆ ವಿರೋಧವಾಗಿ ಜಯಶಾಲಿಗಳನ್ನು ನಾನು ತರುವೆನು. \q1 ಇಸ್ರಾಯೇಲಿನ ಮಹಿಮೆಯಾದಾತನು \q2 ಅದುಲ್ಲಾಮಿನ ಮಟ್ಟಿಗೂ ಬರುವನು. \q1 \v 16 ನಿನ್ನ ಮುದ್ದುಮಕ್ಕಳಿಗೋಸ್ಕರ \q2 ತಲೆ ಬೋಳಿಸಿಕೊಂಡು ಕ್ಷೌರಮಾಡಿಸಿಕೋ. \q1 ನಿನ್ನ ಬೋಳುತನವನ್ನು ಹದ್ದಿನಂತೆ ಮಾಡಿಕೋ. \q2 ಏಕೆಂದರೆ ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗುವರು. \c 2 \s1 ಮನುಷ್ಯನ ಯೋಜನೆ ಹಾಗೂ ದೇವರ ಯೋಜನೆ \q1 \v 1 ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, \q2 ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! \q1 ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. \q2 ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ. \q1 \v 2 ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. \q2 ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. \q1 ಮನುಷ್ಯನಿಗೂ ಅವನ ಮನೆಗೂ \q2 ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ. \p \v 3 ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ, \q1 “ಇಗೋ, ನಾನು ಈ ವಂಶಕ್ಕೆ ವಿರೋಧವಾಗಿ ನಾಶನವನ್ನು ಯೋಚಿಸುತ್ತೇನೆ. \q2 ಇದರಿಂದ ನೀವು ನಿಮ್ಮನ್ನು ರಕ್ಷಿಸಿಕೊಳ್ಳಲಾರಿರಿ. \q1 ಅಹಂಕಾರವಾಗಿ ನಡೆಯದೆ ಇರುವಿರಿ. \q2 ಇದು ವಿಪತ್ತಿನ ಕಾಲವೇ, \q1 \v 4 ಆ ದಿನದಲ್ಲಿ ಜನರು ನಿಮ್ಮನ್ನು ಅಪಹಾಸ್ಯ ಮಾಡುವರು. \q2 ‘ನಾವು ಸಂಪೂರ್ಣವಾಗಿ ಹಾಳಾಗಿದ್ದೇವೆ. \q1 ನನ್ನ ಪ್ರಜೆಗಳ ಆಸ್ತಿ ವಿಭಾಗವಾಗಿದೆ. \q2 ಆತನು ಅದನ್ನು ನನ್ನಿಂದ ತೆಗೆದುಕೊಳ್ಳುವನು. \q1 ಆತನು ನಮ್ಮ ಹೊಲಗಳನ್ನು ದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ,’ ” \q2 ಎಂಬ ದುಃಖದಾಯಕ ಸಂಗೀತದಿಂದ ಹಾಸ್ಯಮಾಡುವರು. \b \q1 \v 5 ಆದ್ದರಿಂದ ಚೀಟುಹಾಕಿ ದೇಶವನ್ನು \q2 ಹಂಚುವದಕ್ಕೆ ಯೆಹೋವ ದೇವರ ಸಭೆಯಲ್ಲಿ ನಿನಗೆ ಯಾರೂ ಇರುವುದಿಲ್ಲ. \s1 ಸುಳ್ಳು ಪ್ರವಾದಿಗಳು \q1 \v 6 “ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. \q2 ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” \q2 ಎಂದು ಅವರ ಪ್ರವಾದಿಗಳು ಹೇಳುತ್ತಾರೆ. \q1 \v 7 ಯಾಕೋಬಿನ ಮನೆತನದವರೇ, \q2 “ಯೆಹೋವ ದೇವರ ಆತ್ಮವು ಕೋಪಗೊಂಡಿದೆಯೇ? \q2 ಅವರು ಇಂಥ ಕಾರ್ಯ ಮಾಡುವರೋ?” \b \q1 “ಯಥಾರ್ಥವಾಗಿ ನಡೆಯುವವನಿಗೆ \q2 ನನ್ನ ಮಾತುಗಳು ಒಳ್ಳೆಯದನ್ನು ಮಾಡುವುದಿಲ್ಲವೋ? \q1 \v 8 ಇತ್ತೀಚೆಗೆ ನನ್ನ ಜನರು \q2 ವೈರಿಯ ಹಾಗೆ ಎದ್ದಿದ್ದಾರೆ. \q1 ಯುದ್ಧದಿಂದ ತಿರುಗಿಕೊಂಡು ನಿರ್ಭಯವಾಗಿ \q2 ಹೋಗುವವರ ವಸ್ತ್ರದ ಸಂಗಡ \q2 ನಿಲುವಂಗಿಯನ್ನು ನೀವು ಕಿತ್ತುಕೊಳ್ಳುತ್ತೀರಿ. \q1 \v 9 ನನ್ನ ಜನರ ಸ್ತ್ರೀಯರನ್ನು \q2 ಅವರ ರಮ್ಯವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ. \q1 ಅವರ ಮಕ್ಕಳಿಂದ \q2 ನನ್ನ ಆಶೀರ್ವಾದವನ್ನು ಎಂದೆಂದಿಗೂ ತೆಗೆದಿದ್ದೀರಿ. \q1 \v 10 ಎದ್ದು ಹೋಗಿರಿ; \q2 ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, \q1 ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, \q2 ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ. \q1 \v 11 ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, \q2 ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ \q1 ದೊರೆಯುವುದೆಂದು ನಾನು ಪ್ರವಾದಿಸುವೆನು,’ \q2 ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು. \s1 ಇಸ್ರಾಯೇಲಿಗೆ ರಕ್ಷಣೆ ವಾಗ್ದಾನ \q1 \v 12 “ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. \q2 ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. \q1 ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ \q2 ಅವರನ್ನು ಒಟ್ಟಾಗಿ ಕೂಡಿಸುವೆನು. \q2 ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು. \q1 \v 13 ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. \q2 ಅವರು ಬಾಗಿಲು ತೆರೆದು ಹೊರಗೆ ಹೋಗುವರು. \q1 ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. \q2 ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.” \c 3 \s1 ನಾಯಕರನ್ನು ಪ್ರವಾದಿಗಳನ್ನು ಗದರಿಸಿದ್ದು \p \v 1 ಆಗ ನಾನು, \q1 “ಯಾಕೋಬಿನ ಮುಖ್ಯಸ್ಥರೇ, \q2 ಇಸ್ರಾಯೇಲಿನ ಮನೆತನದ ಪ್ರಧಾನರೇ, \q1 ಈಗ ಕೇಳಿರಿ. ನೀವು ನ್ಯಾಯವನ್ನು ಪ್ರೀತಿಸಬಾರದೇ. \q2 \v 2 ಒಳ್ಳೆಯದನ್ನು ದ್ವೇಷಮಾಡಿ ಕೆಟ್ಟದ್ದನ್ನು ಪ್ರೀತಿ ಮಾಡುವವರೇ, \q1 ಅವರ ಮೇಲಿನಿಂದ ಅವರ ಚರ್ಮವನ್ನೂ ನನ್ನ ಜನರ \q2 ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತು ಕೊಳ್ಳುವವರೇ, \q1 \v 3 ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. \q2 ಅವರ ಚರ್ಮವನ್ನು ಸುಲಿದುಹಾಕುತ್ತಾರೆ. \q2 ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. \q1 ಹಂಡೆಯಲ್ಲಿನ ತುಂಡುಗಳಂತೆ, ಮಡಕೆಯಲ್ಲಿನ ಮಾಂಸದ ಚೂರುಗಳಂತೆ \q2 ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.” \b \q1 \v 4 ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; \q2 ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. \q1 ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, \q2 ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು. \p \v 5 ಯೆಹೋವ ದೇವರು ಹೇಳುವುದೇನೆಂದರೆ, \q1 “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ \q2 ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. \q1 ಆದರೆ ಅವರಿಗೆ ತಿನ್ನಲು ಏನೂ ಕೊಡದವನ \q2 ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು. \q1 \v 6 ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; \q2 ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. \q1 ಪ್ರವಾದಿಗಳಿಗೆ ಸೂರ್ಯ ಮುಳುಗುವುದು. \q2 ಅವರ ಮೇಲೆ ಹಗಲು ಕತ್ತಲೆಯಾಗುವುದು. \q1 \v 7 ಆಗ ದರ್ಶಿಗಳು ನಾಚಿಕೆಪಡುವರು, \q2 ಶಕುನಗಾರರು ಅವಮಾನಗೊಳ್ಳುವರು. \q1 ದೇವರಿಂದ ಉತ್ತರವಿಲ್ಲದ ಕಾರಣ, \q2 ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.” \q1 \v 8 ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ \q2 ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ \q1 ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ \q2 ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ. \b \q1 \v 9 ಯಾಕೋಬನ ಮನೆತನದವರ ಪ್ರಧಾನರೇ, \q2 ಇಸ್ರಾಯೇಲಿನ ಮನೆತನದವರ \q1 ನ್ಯಾಯಾಧಿಪತಿಗಳೇ, ನ್ಯಾಯವನ್ನು ನಿಂದಿಸಿ \q2 ಸರಿಯಾದದ್ದನ್ನೆಲ್ಲಾ ಡೊಂಕುಮಾಡುವವರೇ, \q1 \v 10 ಚೀಯೋನನ್ನು ರಕ್ತದಿಂದಲೂ \q2 ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. \q1 \v 11 ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. \q2 ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. \q2 ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. \q1 ಆದರೂ ಯೆಹೋವ ದೇವರ ಮೇಲೆ ಆತುಕೊಂಡು, \q2 “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? \q2 ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ. \q1 \v 12 ಆದಕಾರಣ ನಿಮ್ಮ ನಿಮಿತ್ತವೇ, \q2 ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. \q1 ಯೆರೂಸಲೇಮು ಹಾಳುದಿಬ್ಬಗಳಾಗುವುದು. \q2 ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು. \c 4 \s1 ಯೆಹೋವ ದೇವರ ಬೆಟ್ಟ \p \v 1 ಅಂತ್ಯಕಾಲದಲ್ಲಿ, \q1 ಯೆಹೋವ ದೇವರ ಮಂದಿರದ ಪರ್ವತವು \q2 ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ \q1 ಬೆಳೆದು ನೆಲೆಗೊಳ್ಳುವುದು, \q2 ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು. \p \v 2 ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, \q1 “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ \q2 ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. \q1 ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. \q2 ನಾವು ಅವರ ದಾರಿಗಳಲ್ಲಿ ನಡೆಯುವೆವು. \q1 ಚೀಯೋನಿನಿಂದ ದೇವರ ನಿಯಮವೂ \q2 ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.” \q1 \v 3 ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ \q2 ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. \q1 ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ \q2 ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. \q1 ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. \q2 ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ. \q1 \v 4 ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ \q2 ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. \q1 ಭಯಪಡಿಸುವವನು ಯಾರೂ ಇರುವುದಿಲ್ಲ. \q2 ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ. \q1 \v 5 ಎಲ್ಲಾ ಜನಾಂಗಗಳಲ್ಲಿ ಪ್ರತಿಯೊಬ್ಬನು \q2 ತನ್ನ ತನ್ನ ದೇವರ ಹೆಸರಿನಲ್ಲಿ ನಡೆಯುವನು. \q1 ಆದರೆ ನಾವು ನಮ್ಮ ದೇವರಾದ \q2 ಯೆಹೋವ ದೇವರ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು. \s1 ದೇವರ ಯೋಜನೆ \q1 \v 6 ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಆ ದಿವಸದಲ್ಲಿ” \q2 ನಾನು ಕುಂಟಾದವರನ್ನು ಒಟ್ಟುಗೂಡಿಸುವೆನು. \q1 ನಾನು ತಳ್ಳಿಬಿಟ್ಟದ್ದನ್ನೂ ಕಷ್ಟಪಡಿಸಿದವರನ್ನೂ \q2 ಒಂದಾಗಿ ಸೇರಿಸುವೆನು. \q1 \v 7 “ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನು \q2 ಬಲವಾದ ಜನಾಂಗವಾಗಿಯೂ ಮಾಡುವೆನು. \q1 ಯೆಹೋವ ದೇವರು ಇಂದಿನಿಂದ ಸದಾಕಾಲವೂ \q2 ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು. \q1 \v 8 ಕುರಿಮಂದೆಯ ಬುರುಜೇ, \q2 ಚೀಯೋನ್ ಪುತ್ರಿಯ ದುರ್ಗವೇ, \q1 ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು. \q2 ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.” \b \q1 \v 9 ಈಗ ಏಕೆ ಗಟ್ಟಿಯಾಗಿ ಕೂಗುತ್ತೀ? \q2 ನಿನ್ನಲ್ಲಿ ಅರಸನಿಲ್ಲವೋ? \q1 ನಿನ್ನ ಅಧಿಕಾರಿಯು ನಾಶವಾದನೋ? \q2 ಹೆರುವವಳಂತೆ ನಿನಗೆ ವೇದನೆ ಬಂದಿರುವುದೋ? \q1 \v 10 ಚೀಯೋನ್ ಪುತ್ರಿಯೇ ಹೆರುವವಳಂತೆ \q2 ವೇದನೆ ತಾಳಿಕೋ, \q1 ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟು \q2 ಹೊಲದಲ್ಲಿ ವಾಸಮಾಡಿ \q1 ಬಾಬಿಲೋನಿಗೆ ಹೋಗುವೆ, \q2 ಅಲ್ಲಿ ನಿನಗೆ ಬಿಡುಗಡೆಯಾಗುವುದು. \q1 ಅಲ್ಲಿ ಯೆಹೋವ ದೇವರು ನಿನ್ನನ್ನು \q2 ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು. \b \q1 \v 11 ಆದರೆ ಈಗ ಅನೇಕ ಜನಾಂಗಗಳು \q2 ನಿನಗೆ ವಿರೋಧವಾಗಿ ಕೂಡಿಬಂದಿವೆ. \q1 ಅವರು, “ಯೆರೂಸಲೇಮನ್ನು ಕೆಡಿಸೋಣ. \q2 ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ. \q1 \v 12 ಆದರೆ ಯೆಹೋವ ದೇವರ ಯೋಚನೆಗಳು \q2 ಅವರಿಗೆ ತಿಳಿದಿಲ್ಲ. \q1 ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ. \q2 ಏಕೆಂದರೆ ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವರು. \q1 \v 13 ಚೀಯೋನ್ ಪುತ್ರಿಯೇ, ಎದ್ದು ತುಳಿ. \q2 ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ \q1 ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. \q2 ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. \q1 ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ \q2 ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು. \c 5 \s1 ಇಸ್ರಾಯೇಲರನ್ನು ರಕ್ಷಿಸುವ ಅಧಿಪತಿ \q1 \v 1 ಬೇತ್ಲೆಹೇಮಿನಿಂದ ಒಬ್ಬ ಅಧಿಪತಿಯು ಸೈನ್ಯಗಳ ಪಟ್ಟಣವೇ, ಗುಂಪುಗಳಾಗಿ ಕೂಡಿಕೊಳ್ಳಿರಿ. \q2 ನಮ್ಮ ಮೇಲೆ ಮುತ್ತಿಗೆ ಹಾಕಿದ್ದಾರೆ. \q1 ಇಸ್ರಾಯೇಲಿನ ಅಧಿಪತಿಯನ್ನು \q2 ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ. \b \q1 \v 2 ಆದರೆ ಎಫ್ರಾತದ ಬೇತ್ಲೆಹೇಮೇ, \q2 ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ \q1 ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು \q2 ನಿನ್ನೊಳಗಿಂದ ನನಗಾಗಿ ಹೊರಡುವನು. \q1 ಆತನ ಮೂಲವು ಪೂರ್ವದಿಂದಲೂ \q2 ಅನಾದಿ ಕಾಲದಿಂದಲೂ ಆದದ್ದು. \b \q1 \v 3 ಆದ್ದರಿಂದ ಹೆರುವವಳು ಒಬ್ಬ ಮಗನನ್ನು \q2 ಹೆರುವ ಕಾಲದವರೆಗೂ ಇಸ್ರಾಯೇಲನ್ನು ಕೈಬಿಡಲಾಗುವುದು. \q1 ಆಗ ಅವನ ಸಹೋದರರಲ್ಲಿ ಉಳಿದವರು \q2 ಇಸ್ರಾಯೇಲರ ಬಳಿಗೆ ಹಿಂದಿರುಗುವರು. \b \q1 \v 4 ಆತನು ಯೆಹೋವ ದೇವರ ಬಲದಲ್ಲಿಯೂ \q2 ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ \q2 ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. \q1 ಅವರು ನೆಲೆಯಾಗಿರುವರು, \q2 ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು. \b \q1 \v 5 ಆತನೇ ಅವರ ಸಮಾಧಾನವಾಗಿರುವನು. \q2 ಅಸ್ಸೀರಿಯದವನು ನಮ್ಮ ನಾಡಿಗೆ ಮುತ್ತಿಗೆ ಹಾಕುವಾಗ \q2 ನಮ್ಮ ಕೋಟೆಗಳ ಮೂಲಕ ಸೈನ್ಯವಾಗಿ ಹೋಗುವಾಗ \q1 ನಾವು ಅವನಿಗೆ ವಿರೋಧವಾಗಿ ಏಳು ಕುರುಬರನ್ನೂ \q2 ಎಂಟು ಸೇನಾಪತಿಗಳನ್ನೂ ಎಬ್ಬಿಸುವೆವು. \q1 \v 6 ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ \q2 ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. \q1 ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು \q2 ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ \q2 ಆತನು ನಮ್ಮನ್ನು ತಪ್ಪಿಸುವನು. \b \q1 \v 7 ಇದಲ್ಲದೆ ಯಾಕೋಬನ ಶೇಷವು \q2 ಅನೇಕ ಜನಾಂಗಳ ಮಧ್ಯದಲ್ಲಿ \q1 ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ \q2 ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. \q1 ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, \q2 ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ. \q1 \v 8 ಯಾಕೋಬನ ಜನಶೇಷವು ದೇಶದೇಶಗಳೊಳಗೆ \q2 ಅನೇಕ ಜನಾಂಗಗಳ ಮಧ್ಯದಲ್ಲಿ, \q1 ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ \q2 ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. \q1 ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, \q2 ಯಾರೂ ಬಿಡಿಸಲಾರರು, \q1 \v 9 ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತವಾಗಿರುವುದು. \q2 ನಿನ್ನ ಶತ್ರುಗಳೆಲ್ಲರು ನಾಶಹೊಂದುವರು. \p \v 10 ಯೆಹೋವ ದೇವರು ಹೀಗೆ ಘೋಷಿಸುತ್ತಾರೆ: \q1 “ಆ ದಿವಸದಲ್ಲಿ, ನಾನು ನಿನ್ನ ಮಧ್ಯದೊಳಗಿರುವ ನಿನ್ನ ಕುದುರೆಗಳನ್ನು ಕಡಿದುಬಿಟ್ಟು \q2 ನಿನ್ನ ರಥಗಳನ್ನು ನಾಶಮಾಡುವೆನು. \q1 \v 11 ನಿನ್ನ ದೇಶದ ಪಟ್ಟಣಗಳನ್ನು ನಾಶಮಾಡಿಬಿಟ್ಟು \q2 ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು. \q1 \v 12 ನಿನ್ನ ಮಂತ್ರತಂತ್ರವನ್ನು ನಾಶಮಾಡುವೆನು; \q2 ಕಣಿ ಹೇಳುವವರು ನಿನಗೆ ಇನ್ನು ಇರುವುದಿಲ್ಲ. \q1 \v 13 ನಿನ್ನ ಕೆತ್ತಿದ ವಿಗ್ರಹಗಳನ್ನೂ \q2 ನಿಂತಿರುವ ನಿನ್ನ ಪ್ರತಿಮೆಗಳನ್ನೂ ಸಹ ನಿನ್ನ ಮಧ್ಯದೊಳಗಿಂದ ಕಡಿದುಬಿಡುವೆನು. \q1 ಇನ್ನು ನಿನ್ನ ಸ್ವಂತ ಕೈಗಳು ರೂಪಿಸಿದ್ದನ್ನು \q2 ನೀನು ಆರಾಧಿಸದಂತೆ ಮಾಡುವೆನು. \q1 \v 14 ನಿನ್ನ ಅಶೇರ ಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಹಾಕಿ \q2 ನಿನ್ನ ಪಟ್ಟಣಗಳನ್ನು ನಾಶಮಾಡುವೆನು. \q1 \v 15 ನನಗೆ ಕಿವಿಗೊಡದೆ ಇದ್ದ ಜನಾಂಗಗಳಿಗೆ \q2 ಕೋಪದಿಂದಲೂ ಉಗ್ರದಿಂದಲೂ ಮುಯ್ಯಿಗೆ ಮುಯ್ಯಿತೀರಿಸುವೆನು.” \c 6 \s1 ಇಸ್ರಾಯೇಲರ ವಿರುದ್ಧ ಯೆಹೋವ ದೇವರ ವ್ಯಾಜ್ಯ \p \v 1 ಯೆಹೋವ ದೇವರು ಹೇಳುವುದನ್ನು ಈಗ ಕೇಳಿರಿ, \q1 ಎದ್ದೇಳು, ಬೆಟ್ಟಗಳ ಮುಂದೆ ವ್ಯಾಜ್ಯವಾಡು; \q2 ನೀನು ಹೇಳುವುದನ್ನು ಗುಡ್ಡಗಳು ಕೇಳಲಿ. \b \q1 \v 2 ಬೆಟ್ಟಗಳೇ, ಯೆಹೋವ ದೇವರ ಆಪಾದನೆಯನ್ನು ಕೇಳಿರಿ. \q2 ಭೂಮಿಯ ಶಾಶ್ವತವಾದ ಅಸ್ತಿವಾರಗಳೇ ಕಿವಿಗೊಡಿರಿ. \q1 ಏಕೆಂದರೆ ಯೆಹೋವ ದೇವರಿಗೆ ತಮ್ಮ ಜನರ ವಿರುದ್ಧ ವ್ಯಾಜ್ಯವಿದೆ, \q2 ಅವರು ಇಸ್ರಾಯೇಲಿನ ವಿರುದ್ಧ ಆರೋಪಿಸುತ್ತಾರೆ. \b \q1 \v 3 ನನ್ನ ಜನರೇ, ನಾನು ನಿಮಗೆ ಏನು ಮಾಡಿದ್ದೇನೆ? \q2 ನಾನು ನಿಮ್ಮ ಮೇಲೆ ಭಾರ ಹಾಕಿದ್ದೇನೋ? ನನಗೆ ಉತ್ತರಕೊಡಿರಿ. \q1 \v 4 ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, \q2 ದಾಸತ್ವದ ದೇಶದೊಳಗಿಂದ ನಿನ್ನನ್ನು ವಿಮೋಚಿಸಿ, \q1 ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು \q2 ನಿನಗೆ ನಾಯಕರನ್ನಾಗಿ ಕಳುಹಿಸಿದೆನು. \q1 \v 5 ನನ್ನ ಜನರೇ, \q2 ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ \q2 ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ \q1 ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ \q2 ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. \q2 ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ. \b \q1 \v 6 ನಾನು ಯಾವುದರೊಂದಿಗೆ ಯೆಹೋವ ದೇವರ ಮುಂದೆ ಬಂದು, \q2 ಯಾವುದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? \q1 ದಹನಬಲಿಗಳ ಮತ್ತು \q2 ಒಂದು ವರ್ಷದ ಕರುಗಳ ಸಂಗಡ ಆತನ ಮುಂದೆ ಹೋಗಲೇ? \q1 \v 7 ಯೆಹೋವ ದೇವರು ಸಾವಿರ ಟಗರುಗಳಿಗಾದರೂ \q2 ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಮೆಚ್ಚುವರೋ? \q1 ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗನನ್ನೂ \q2 ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನೂ ಕೊಡಲೋ? \q1 \v 8 ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. \q2 ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ \q1 ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ \q2 ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ? \s1 ಇಸ್ರಾಯೇಲರ ವಂಚನೆ ಮತ್ತು ಶಿಕ್ಷೆ \q1 \v 9 ಕೇಳು! ಯೆಹೋವ ದೇವರು ಪಟ್ಟಣವನ್ನು ಕರೆಯುತ್ತಿದ್ದಾರೆ. \q2 ನಿಮ್ಮ ನಾಮಕ್ಕೆ ಭಯಪಡುವುದು ಜ್ಞಾನ. \q2 ಕೋಲು ಮತ್ತು ಅದನ್ನು ನೇಮಿಸಿದ ವ್ಯಕ್ತಿಯನ್ನು ಎಚ್ಚರಿಕೆಯಿಂದ ಆಲಿಸಿರಿ. \q1 \v 10 ದುಷ್ಟಮನೆತನವೇ ನೀನು ಕೆಟ್ಟದ್ದಾಗಿ ಸಂಪಾದಿಸಿದ್ದನ್ನು ಶಾಪಗ್ರಸ್ತರಾದ \q2 ಕಡಿಮೆ ಅಳತೆಯನ್ನು ನಾನು ಮರೆಯಬೇಕೋ? \q1 \v 11 ನಾನು ದುಷ್ಟತ್ವದ ತಕ್ಕಡಿಗಳುಳ್ಳವರನ್ನು \q2 ಮೋಸವಾದ ಕಲ್ಲುಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ? \q1 \v 12 ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. \q2 ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. \q2 ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ. \q1 \v 13 ಆದ್ದರಿಂದ ನಾನು ಸಹ ನಿನ್ನನ್ನು ಹೊಡೆದು \q2 ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು. \q1 \v 14 ನೀನು ಉಂಡರೂ ತೃಪ್ತಿಯಾಗದೆ ಇರುವೆ; \q2 ನಿನ್ನೊಳಗೆ ಹಸಿವೆಯು ಇರುವುದು; \q1 ನೀವು ಸಂಗ್ರಹಿಸುತ್ತೀರಿ ಆದರೆ ಏನನ್ನೂ ಉಳಿಸುವುದಿಲ್ಲ, \q2 ಏಕೆಂದರೆ ನೀವು ಉಳಿಸುವದನ್ನು ನಾನು ಕತ್ತಿಗೆ ಕೊಡುತ್ತೇನೆ. \q1 \v 15 ನೀನು ಬೀಜ ಬಿತ್ತಿ ಕೊಯ್ಯದೆ ಇರುವೆ; \q2 ಹಿಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವೆ; \q2 ದ್ರಾಕ್ಷಾರಸಮಾಡಿ ಕುಡಿಯದೆ ಇರುವೆ. \q1 \v 16 ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. \q2 ಅಹಾಬ್ ಮನೆತನದ ದುರಾಚಾರಗಳನ್ನೂ \q2 ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. \q1 ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. \q2 ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. \q2 ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ. \c 7 \s1 ಇಸ್ರಾಯೇಲಿನ ಕೊರಗುವಿಕೆ \q1 \v 1 ಎಂತಹ ಸಂಕಟ ನನ್ನದು! \q1 ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವವರ ಹಾಗೆಯೂ \q2 ದ್ರಾಕ್ಷಿ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ. \q1 ತಿನ್ನುವುದಕ್ಕೆ ಗೊಂಚಲೇ ಇಲ್ಲ. \q2 ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣುಗಳೂ ಇಲ್ಲ. \q1 \v 2 ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. \q2 ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; \q1 ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, \q2 ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ. \q1 \v 3 ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ \q2 ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. \q1 ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. \q2 ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; \q2 ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ. \q1 \v 4 ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ \q2 ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ. \q2 ದೇವರು ನಿನ್ನನ್ನು ಭೇಟಿಮಾಡುವ ದಿನ ಬಂದಿದೆ, \q1 ನಿನ್ನ ಕಾವಲುಗಾರರು ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಾರೆ. \q2 ಈಗ ನೀವು ಭಯಭೀತರಾಗುವ ಸಮಯ. \q1 \v 5 ನೆರೆಯವನಲ್ಲಿ ನಂಬಿಕೆ ಇಡಬೇಡಿರಿ; \q2 ಆಪ್ತಸ್ನೇಹಿತನಲ್ಲಿ ಭರವಸೆ ಇಡಬೇಡಿರಿ; \q1 ನಿನ್ನ ಎದೆಯಲ್ಲಿ ಮಲಗುವವಳಿಗೆ \q2 ನಿನ್ನ ಬಾಯಿಯ ಬಾಗಿಲುಗಳನ್ನು ಕಾಯಿ. \q1 \v 6 ಏಕೆಂದರೆ ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ. \q2 ಮಗಳು ತನ್ನ ತಾಯಿಗೂ, \q1 ಸೊಸೆಗೂ ಆಕೆಯ ಅತ್ತೆಗೂ ವಿರೋಧವಾಗಿ ಏಳುತ್ತಾರೆ. \q2 ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು. \b \q1 \v 7 ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. \q2 ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. \q2 ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು. \s1 ಇಸ್ರಾಯೇಲು ಎದ್ದೇಳುವುದು \q1 \v 8 ನನ್ನ ಶತ್ರುವೇ, ನನ್ನ ಮೇಲೆ ಸಂತೋಷ ಪಡಬೇಡ, \q2 ನಾನು ಬಿದ್ದಿದ್ದರೂ ತಿರುಗಿ ಏಳುವೆನು. \q1 ನಾನು ಕತ್ತಲೆಯಲ್ಲಿ ಕುಳಿತುಕೊಂಡರೂ \q2 ಯೆಹೋವ ದೇವರೇ ನನಗೆ ಬೆಳಕಾಗಿರುವರು. \q1 \v 9 ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ \q2 ಅವರು ನನ್ನ ವ್ಯಾಜ್ಯವಾಡಿ \q1 ನನ್ನ ನ್ಯಾಯವನ್ನು ನಡೆಸುವ ತನಕ \q2 ಅವರ ಕೋಪವನ್ನು ತಾಳುವೆನು. \q1 ಆತನು ನನ್ನನ್ನು ಬೆಳಕಿಗೆ ತರುವನು. \q2 ಆತನ ನೀತಿಯನ್ನು ನೋಡುವೆನು. \q1 \v 10 ಆಗ ನನ್ನ ಶತ್ರು ಇದನ್ನು ನೋಡುವನು. \q2 ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, \q1 “ನಿನ್ನ ಯೆಹೋವ ದೇವರು ಎಲ್ಲಿ?” \q2 ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. \q1 ಇದನ್ನು ನಾನು ಕಣ್ಣಾರೆ ಕಾಣುವೆನು. \q2 ಆ ಶತ್ರುಗಳಾದರೋ ಬೀದಿಯ ಕಸದಂತೆ \q2 ದಾರಿಹೋಕರ ತುಳಿತಕ್ಕೆ ಈಡಾಗುವರು. \b \q1 \v 11 ನಿನ್ನ ಗೋಡೆಗಳು ಪುನಃ ಕಟ್ಟುವ \q2 ಆ ದಿವಸ ಬರುವುದು. ಮತ್ತು ನಿಮ್ಮ ಮಿತಿಗಳನ್ನು ಹೆಚ್ಚಿಸುವ ದಿನ ಬರುತ್ತದೆ. \q1 \v 12 ಆ ದಿವಸದಲ್ಲಿ \q2 ಅಸ್ಸೀರಿಯರಿಂದಲೂ ಈಜಿಪ್ಟ್ ಪಟ್ಟಣಗಳಿಂದಲೂ \q1 ಯೂಫ್ರೇಟೀಸ್ ನದಿಯವರೆಗೂ \q2 ಸಮುದ್ರದಿಂದ ಸಮುದ್ರದವರೆಗೂ \q2 ಬೆಟ್ಟದಿಂದ ಬೆಟ್ಟದವರೆಗೂ ಜನರೆಲ್ಲರು ನಿನ್ನ ಬಳಿಗೆ ಬರುವರು. \q1 \v 13 ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ \q2 ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು. \s1 ಸ್ತೋತ್ರ ಮತ್ತು ಪ್ರಾರ್ಥನೆ \q1 \v 14 ನಿನ್ನ ಜನರನ್ನೂ ಏಕಾಂತವಾಗಿ \q2 ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ \q1 ನಿನ್ನ ಬಾಧ್ಯತೆಯ ಮಂದೆಯನ್ನೂ \q2 ನಿನ್ನ ಕೋಲಿನಿಂದ ಮೇಯಿಸು. \q1 ಅವರು ಪೂರ್ವದ ದಿವಸಗಳಲ್ಲಾದ ಹಾಗೆ \q2 ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ. \b \q1 \v 15 ನೀನು ಈಜಿಪ್ಟ್ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ \q2 ಅವರಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು. \b \q1 \v 16 ಜನಾಂಗಗಳು ನೋಡಿ ನಾಚಿಕೊಳ್ಳುವರು \q2 ತಮ್ಮ ತಮ್ಮ ಶಕ್ತಿಗೆ ವಂಚಿತರಾಗಿ ನಾಚಿಕೆಪಡುವರು. \q1 ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; \q2 ಅವರ ಕಿವಿಗಳು ಕಿವುಡಾಗಿ ಹೋಗುವುವು. \q1 \v 17 ಅವರು ಹಾವಿನಂತೆ, \q2 ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. \q1 ಅವರು ರಂಧ್ರಗಳಿಂದ ಹೊರಗೆ ಬರುವರು. \q2 ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. \q2 ನಿನಗೆ ಭಯಪಡುವರು. \q1 \v 18 ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, \q2 ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, \q2 ನಿನ್ನ ಹಾಗೆ ಇರುವ ದೇವರು ಯಾರು? \q1 ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. \q2 ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ. \q1 \v 19 ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; \q2 ನಮ್ಮ ಅಕ್ರಮಗಳನ್ನು ತುಳಿದುಬಿಡುವನು; \q2 ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು. \q1 \v 20 ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ \q2 ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, \q2 ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.