\id NEH - Biblica® Open Kannada Contemporary Version \ide UTF-8 \h ನೆಹೆಮೀಯ \toc1 ನೆಹೆಮೀಯ \toc2 ನೆಹೆಮೀಯ \toc3 ನೆಹೆ \mt1 ನೆಹೆಮೀಯ \c 1 \s1 ನೆಹೆಮೀಯನ ಪ್ರಾರ್ಥನೆ \p \v 1 ಹಕಲ್ಯನ ಮಗ ನೆಹೆಮೀಯನ ಮಾತುಗಳು: \b \b \p ಇಪ್ಪತ್ತನೆಯ ವರ್ಷದ, ಕಿಸ್ಲೇವ್ ಎಂಬ ಮಾರ್ಗಶಿರ ತಿಂಗಳಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆನು. \v 2 ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆ ಹೋದವರಿಂದ ಉಳಿದಿರುವ ಯೆಹೂದ್ಯರ ಮತ್ತು ಯೆರೂಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆನು. \p \v 3 ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು. \p \v 4 ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ. \v 5 ನಾನು ನನ್ನ ಪ್ರಾರ್ಥನೆಯಲ್ಲಿ: \pm “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ, \v 6 ಕೃಪೆಮಾಡಿ ನನಗೆ ಕಿವಿಗೊಡಿರಿ, ಕಟಾಕ್ಷಿಸಿ ನೋಡಿರಿ, ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿರಿ. ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಾಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ. ಅವರು ನಿಮಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ. ನಾನೂ, ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು. \v 7 ನಾವು ನಿಮಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು. ನೀವು ನಿಮ್ಮ ದಾಸನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ. \pm \v 8 “ದಯಮಾಡಿ ನಿಮ್ಮ ಸೇವಕನಾದ ಮೋಶೆಗೆ ಹೇಳಿದ ಈ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಮೋಶೆಯ ಮುಖಾಂತರ, ‘ನೀವು ದ್ರೋಹ ಮಾಡಿದರೆ, ನಾನು ನಿಮ್ಮನ್ನು ಜನಾಂಗಗಳ ನಡುವೆ ಚದರಿಸಿಬಿಡುವೆನು. \v 9 ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ. \pm \v 10 “ಅವರು ನಿಮ್ಮ ಮಹಾಶಕ್ತಿಯಿಂದಲೂ, ನಿಮ್ಮ ಭುಜಪರಾಕ್ರಮಗಳಿಂದ ನೀವು ವಿಮೋಚಿಸಿದ ನಿಮ್ಮ ಸೇವಕರೂ, ನಿಮ್ಮ ಜನರೂ ಆಗಿರುತ್ತಾರೆ. \v 11 ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. \p ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು. \c 2 \s1 ಅರ್ತಷಸ್ತನು ನೆಹೆಮೀಯನನ್ನು ಯೆರೂಸಲೇಮಿಗೆ ಕಳುಹಿಸಿದ್ದು \p \v 1 ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷದ, ನಿಸಾನ ತಿಂಗಳಲ್ಲಿ, ಅವನ ಮುಂದೆ ದ್ರಾಕ್ಷಾರಸವನ್ನು ತೆಗೆದುಕೊಂಡು ಅರಸನಿಗೆ ಕೊಟ್ಟೆನು. ನಾನು ಅವನ ಸಮ್ಮುಖದಲ್ಲಿ ಹಿಂದೆ ಎಂದೂ ದುಃಖಿತನಾಗಿದ್ದಿಲ್ಲ. \v 2 ಆದಕಾರಣ ಅರಸನು ನನಗೆ, “ನಿನಗೆ ಕಾಯಿಲೆ ಇಲ್ಲದೆ ಇರುವಾಗ, ನಿನ್ನ ಮುಖವು ದುಃಖದಿಂದಿರುವುದೇನು? ನಿನಗೆ ರೋಗ ಏನೂ ಇಲ್ಲವಲ್ಲ? ಇದು ಮನೋವೇದನೆಯೇ ಹೊರತು ಬೇರೇನೂ ಅಲ್ಲ,” ಎಂದನು. \p ಆಗ ನಾನು ಬಹು ಭಯಪಟ್ಟು ಅರಸನಿಗೆ, \v 3 “ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು. \p \v 4 ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು. \p ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ \v 5 ಅರಸನಿಗೆ, “ಅರಸನಿಗೆ ಮೆಚ್ಚಿಗೆಯಾದರೆ ಮತ್ತು ನಿಮ್ಮ ಸೇವಕನಿಗೆ ನಿಮ್ಮ ಮುಂದೆ ದಯೆ ದೊರಕಿದರೆ, ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವುದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು,” ಎಂದೆನು. \p \v 6 ರಾಣಿಯು ಅವನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ, “ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರುಗಿ ಯಾವಾಗ ಬರುತ್ತೀ?” ಎಂದನು. ನಾನು ಅರಸನಿಗೆ ಸಮಯ ಗೊತ್ತು ಮಾಡಿದೆನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿಸಿದನು. \p \v 7 ತರುವಾಯ ನಾನು ಅರಸನಿಗೆ, “ಯೂಫ್ರೇಟೀಸ್ ನದಿ ಆಚೆಯ ರಾಜ್ಯಪಾಲರು ತಮ್ಮ ಪ್ರಾಂತಗಳಲ್ಲಿ ಹಾದು, ಯೆಹೂದದ ನಾಡಿಗೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಬೇಕಾಗುತ್ತದೆ. \v 8 ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು. \v 9 ಆಗ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು, ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ, ಕುದುರೆ ಸವಾರರನ್ನೂ ಕಳುಹಿಸಿದನು. \p \v 10 ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು. \s1 ನೆಹೆಮೀಯನು ಯೆರೂಸಲೇಮಿನ ಗೋಡೆಗಳನ್ನು ಪರೀಕ್ಷಿಸಿದ್ದು \p \v 11 ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ, ನಾನೂ, ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು. \v 12 ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟಿದ್ದನ್ನು ಯಾರಿಗೂ ತಿಳಿಸಲಿಲ್ಲ. ನಾನು ಸವಾರಿಮಾಡುತ್ತಿದ್ದ ವಾಹನ ಪಶುವಿನ ಹೊರತು ಬೇರೆ ಪಶು ನನ್ನೊಂದಿಗಿರಲಿಲ್ಲ. \p \v 13 ನಾನು ರಾತ್ರಿಯಲ್ಲಿ ಕಣಿವೆಯ ಬಾಗಿಲಿಂದ ಹೊರಟು, ಸರ್ಪದ ಬಾವಿಯನ್ನು ದಾಟಿ, ತಿಪ್ಪೆ ದಿಬ್ಬೆಯ ಬಾಗಿಲಿಗೆ ಬಂದು, ಯೆರೂಸಲೇಮಿನ ಕೆಡವಿ ಹಾಕಲಾದ ಗೋಡೆಗಳನ್ನೂ, ಬೆಂಕಿಯಿಂದ ಸುಡಲಾದ ಅದರ ಬಾಗಿಲುಗಳನ್ನೂ ಚೆನ್ನಾಗಿ ಕಂಡೆನು. \v 14 ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು, ಅರಸನ ಕೊಳಕ್ಕೆ ಹೋದೆನು. ನನ್ನ ವಾಹನ ಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ, \v 15 ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆನು. \v 16 ನಾನು ಎಲ್ಲಿ ಹೋದೆನೆಂದೂ, ಏನು ಮಾಡಿದೆನೆಂದೂ ಅಧಿಕಾರಿಗಳು ತಿಳಿಯದೆ ಇದ್ದರು. ಅಲ್ಲಿಯವರೆಗೆ ನಾನು ಯೆಹೂದ್ಯರಿಗಾದರೂ, ಯಾಜಕರಿಗಾದರೂ, ಶ್ರೀಮಂತರಿಗಾದರೂ, ಅಧಿಕಾರಿಗಳಿಗಾದರೂ, ಕೆಲಸ ಮಾಡುವ ಇತರ ಜನರಿಗಾದರೂ ಗೊತ್ತಿರಲಿಲ್ಲ. \p \v 17 ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ. \v 18 ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. \p ಆಗ ಅವರು, “ಬನ್ನಿ, ಪುನಃ ಕಟ್ಟೋಣ,” ಎಂದು ಹೇಳಿ, ಆ ಒಳ್ಳೆಯ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು. \p \v 19 ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು. \p \v 20 ಆಗ ನಾನು ಅವರಿಗೆ, “ಪರಲೋಕದ ದೇವರು ನಮಗೆ ಸಫಲತೆ ಅನುಗ್ರಹಿಸುವರು. ಅವರ ಸೇವಕರಾದ ನಾವು ಪುನಃ ಕಟ್ಟುವ ಕಾರ್ಯ ಪ್ರಾರಂಭಿಸುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಯಾವುದೇ ಪಾಲಾದರೂ ಹಕ್ಕಾದರೂ ಐತಿಹಾಸಿಕ ಬಾಧ್ಯತೆಯಾದರೂ ಇರುವುದಿಲ್ಲ,” ಎಂದು ಹೇಳಿದೆನು. \c 3 \s1 ಗೋಡೆಯನ್ನು ಕಟ್ಟುವವರು \p \v 1 ಆಗ ಮಹಾಯಾಜಕನಾದ ಎಲ್ಯಾಷೀಬನೂ, ಅವನ ಕುಟುಂಬದ ಯಾಜಕರೂ ಕುರಿ ಬಾಗಿಲನ್ನು ಕಟ್ಟಿ, ಅದನ್ನು ಪ್ರತಿಷ್ಠಿಸಿ, ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಶತ ಗೋಪುರದವರೆಗೆ ಗೋಡೆ ಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು. \v 2 ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು, ನಂತರ ಇಮ್ರಿಯ ಮಗನಾದ ಜಕ್ಕೂರನು. \b \p \v 3 ಮೀನು ಬಾಗಿಲನ್ನು ಪುನಃ ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು, ಅದಕ್ಕೆ ಬಾಗಿಲು, ತಿರುಗಣಿ ಅಗುಳಿಗಳನ್ನು ಹಚ್ಚಿದರು. ಅಲ್ಲಿಂದ ಮುಂದಕ್ಕೆ ಗೋಡೆಯನ್ನು \v 4 ಜೀರ್ಣೋದ್ಧಾರ ಮಾಡಿಸಿದವನು ಊರೀಯನ ಮಗನೂ, ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ, ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾಣನ ಮಗನಾದ ಚಾದೋಕ್, \v 5 ಅಲ್ಲಿಂದ ಮುಂದಕ್ಕೆ ತೆಕೋವದವರು ಗೋಡೆಯನ್ನು ದುರಸ್ತಿ ಮಾಡಿಸಿದರು. ಆದರೆ ತೆಕೋವದವರಲ್ಲಿ ಶ್ರೇಷ್ಠರಾದವರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ. \b \p \v 6 ಹಳೆಯದು ಎಂಬ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ, ಇವರು ಅದರ ಮೇಲೆ ತೊಲೆಗಳನ್ನಿಟ್ಟು, ಅದಕ್ಕೆ ಬಾಗಿಲು ತಿರುಗಣಿ ಅಗುಳಿಗಳನ್ನು ಹಚ್ಚಿದರು. \v 7 ಅಲ್ಲಿಂದ ಯೂಫ್ರೇಟೀಸ್ ನದಿಯ ರಾಜ್ಯಪಾಲನ ಅಧಿಕಾರದಲ್ಲಿರುವ ಸ್ಥಳಗಳಿಂದ ಗಿಬ್ಯೋನ್ ಮತ್ತು ಮಿಚ್ಪ ಊರುಗಳ, ಗಿಬ್ಯೋನಿನವನಾದ ಮೆಲೆಟ್ಯ, ಮೇರೊನೋತಿನವನಾದ ಯಾದೋನ್ ಇವರೂ, ಜೀರ್ಣೋದ್ಧಾರ ಮಾಡಿದರು. \v 8 ಇದರ ಆಚೆಗೆ ಹರ್ಹಯನ ಮಗನಾದ ಅಕ್ಕಸಾಲಿಗರ ಉಜ್ಜೀಯೇಲ್, ಆಮೇಲೆ ಗಾಣಿಗನಾದ ಹನನ್ಯ, ಇವರು ಅಗಲವಾದ ಗೋಡೆಯವರೆಗೂ ಯೆರೂಸಲೇಮನ್ನು ಕಟ್ಟಿ ಭದ್ರಪಡಿಸಿದರು. \v 9 ಇದರ ಆಚೆಗೆ ಯೆರೂಸಲೇಮಿನ ಅರೆನಾಡೊಡೆಯನೂ, ಹೂರನ ಮಗನೂ ಆದ ರೆಫಾಯ. \v 10 ಇವನ ಮುಂದಕ್ಕೆ ಹರೂಮಫನ ಮಗನಾದ ಯೆದಾಯ, ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆಗೆ ಹಷಬ್ನೆಯನ ಮಗನಾದ ಹಟ್ಟೂಷ್. \v 11 ಗೋಡೆಯ ಇನ್ನೊಂದು ಭಾಗವನ್ನೂ, ಒಲೆ ಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರಿಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನಾದ ಹಷ್ಷೂಬನೂ \v 12 ಇವನ ಸಮೀಪದಲ್ಲಿ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರೆನಾಡೊಡೆಯನೂ, ಹಲ್ಲೋಹೇಷನ ಮಗನೂ ಆದ ಶಲ್ಲೂಮನೂ, ಅವನ ಕುಮಾರಿಯರೂ. \b \p \v 13 ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರೂ. ಇವರು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ 450 ಮೀಟರ್ ಗೋಡೆಯನ್ನು ಕಟ್ಟಿದರು. \b \p \v 14 ತಿಪ್ಪೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಬೇತ್ ಹಕ್ಕೆರೆಮಿನ ನಾಡೊಡೆಯನೂ, ರೇಕಾಬನ ಮಗನೂ ಆದ ಮಲ್ಕೀಯನೂ, ಇವರು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು. \b \p \v 15 ಬುಗ್ಗೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ನಾಡೊಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್, ಇವನು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಮಾಳಿಗೆಯನ್ನು ಹಾಕಿ, ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ದಾವೀದನ ನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು. \v 16 ಇವನ ಆಚೆ ಎಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ ಚೂರಿನ ಅರೆನಾಡೊಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು. \p \v 17 ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನೀಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು. \v 18 ಇವರ ನಂತರ, ಇವರ ಬಂಧುಗಳಲ್ಲಿ ಕೆಯೀಲದ ಎರಡನೆಯ ಅರೆನಾಡೊಡೆಯನೂ, ಹೇನಾದಾದನ ಮಗನೂ ಆದ ಬಿನ್ನೂಯ್\f + \fr 3:18 \fr*\fq ಬಿನ್ನೂಯ್ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಬವ್ವೈ\fqa*\f*. \v 19 ಇವನ ಸಮೀಪದಲ್ಲಿ ಗೋಡೆಯ ಮೂಲೆಯಲ್ಲಿರುವ ಆಯುಧ ಶಾಲೆಗೆ ಹೋಗುವ ಮೆಟ್ಟಿಲು ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ, ಯೇಷೂವನ ಮಗನೂ ಆದ ಏಜೆರನು ಜೀರ್ಣೋದ್ಧಾರ ಮಾಡಿದನು. \v 20 ಇವನ ನಂತರ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಉತ್ಸಾಹದಿಂದ ಭದ್ರಪಡಿಸಿದನು. \v 21 ಇವನ ನಂತರ, ಗೋಡೆಯ ಇನ್ನೊಂದು ಭಾಗವನ್ನು ಎಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ ಹಕ್ಕೋಚನ ಮೊಮ್ಮಗನೂ, ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು. \p \v 22 ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಸುತ್ತಲಿನ ಪ್ರದೇಶದ ಯಾಜಕರು. \v 23 ಇವರ ಆಚೆ, ಬೆನ್ಯಾಮೀನ್ ಹಷ್ಷೂಬರು, ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ತರುವಾಯ ಅನನ್ಯನ ಮೊಮ್ಮಗನೂ, ಮಾಸೇಯನ ಮಗನೂ ಆದ ಅಜರ್ಯ, ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. \v 24 ಇವನ ಆಚೆ, ಅಜರ್ಯನ ಮನೆಯಿಂದ ಮೂಲೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್. \v 25 ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿ ಬರುವ ಮೂಲೆ ಬುರುಜಿನ ಎದುರಿನ ಭಾಗವನ್ನು ಊಜೈಯ ಮಗನಾದ ಪಾಲಾಲನೂ, ಇವನ ಆಚೆಯಲ್ಲಿ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು. \v 26 ಆ ಮೂಲೆ ಬುರುಜಿನ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ನಿವಾಸ ಸ್ಥಾನವು. \v 27 ಆ ದೊಡ್ಡ ಮೂಲೆ ಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು. \b \p \v 28 ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು. \v 29 ಇವರ ಆಚೆ, ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು. \v 30 ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ, ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್, ಇವನ ಆಚೆ, ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್. \v 31 ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ, ಇವನು ದಂಡು ಕೊಡುವ ಬಾಗಿಲಿನೆದುರಿನಲ್ಲಿರುವ ದೇವಾಲಯದ ಸೇವಕರ ಮತ್ತು ವರ್ತಕರ ಕೇರಿಯವರೆಗೂ ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು. \v 32 ಈ ಮೂಲೆಯುಪ್ಪರಿಗೆಗೂ, ಕುರಿ ಬಾಗಿಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಕಸಾಲಿಗರು, ವರ್ತಕರು ಇವರೇ. \c 4 \s1 ಪುನಃ ಕಟ್ಟುವುದಕ್ಕೆ ವಿರೋಧ \p \v 1 ನಾವು ಗೋಡೆಯನ್ನು ಪುನಃ ಕಟ್ಟುವ ವರ್ತಮಾನವನ್ನು ಸನ್ಬಲ್ಲಟನು ಕೇಳಿದಾಗ, ಅವನು ಕೋಪಗೊಂಡು, ಯೆಹೂದ್ಯರಿಗೆ ಗೇಲಿಮಾಡಿ, \v 2 ತಮ್ಮ ಜೊತೆ ಕೆಲಸ ಮಾಡುವವರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ, “ಈ ಬಲಹೀನರಾದ ಯೆಹೂದ್ಯರು ಮಾಡುವುದೇನು? ಅವರು ತಮ್ಮ ಗೋಡೆಯನ್ನು ಪುನಃ ಕಟ್ಟುತ್ತಾರೆಯೇ? ಬಲಿಯನ್ನು ಅರ್ಪಿಸುವರೋ? ಪಟ್ಟಣವು ಬೆಂಕಿಯಲ್ಲಿ ಸುಟ್ಟುಹೋದಾಗ, ಕಲ್ಲಿನ ತುಂಡುಗಳ ರಾಶಿಯಿಂದ ಕಟ್ಟಡಕ್ಕೆ ಸೂಕ್ತವಾದ ಕಲ್ಲುಗಳನ್ನು ಹೊರತೆಗೆಯಲು ಅವರಿಗೆ ಸಾಧ್ಯವಾಗುತ್ತದೆಯೇ?” ಎಂದು ಹೇಳಿದನು. \p \v 3 ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ, ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು. \b \p \v 4 ನಮ್ಮ ದೇವರೇ, ಆಲಿಸಿರಿ; ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ. ನೀವು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ಬರಮಾಡಿ, ಸೆರೆಯ ದೇಶದಲ್ಲಿ ಅವರನ್ನು ಸೂರೆಯಾಗಿ ಒಪ್ಪಿಸಿರಿ. \v 5 ಅವರು ಕಟ್ಟುವವರ ಮುಂದೆ ನಿಮ್ಮನ್ನು ಕೆಣಕಿದ್ದರಿಂದ ನೀವು ಅವರ ಅಪರಾಧವನ್ನು ಮುಚ್ಚಬೇಡಿರಿ. ನಿಮ್ಮ ಮುಂದೆ ಇರುವ ಅವರ ಪಾಪಗಳನ್ನು ಅಳಿಸಿಬಿಡಬೇಡಿರಿ ಎಂದು ನಾನು ಪ್ರಾರ್ಥಿಸಿದೆ. \b \p \v 6 ಹೀಗೆ ನಾವು ಪುನಃ ಗೋಡೆ ಕಟ್ಟುವುದನ್ನು ಮುಂದುವರಿಸಿದೆವು. ಗೋಡೆ ಅರ್ಧ ಎತ್ತರದವರೆಗೂ ಆಯಿತು. ಏಕೆಂದರೆ ಜನರು ಕೆಲಸ ಮಾಡುವುದಕ್ಕೆ ಮನಸ್ಸುಳ್ಳವರಾಗಿದ್ದರು. \p \v 7 ಯೆರೂಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂದು ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನ್ಯರೂ ಅಷ್ಡೋದ್ಯರೂ ಕೇಳಿದಾಗ ಬಹು ಕೋಪಗೊಂಡರು. \v 8 ಅವರು ಯೆರೂಸಲೇಮಿಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೂ, ಅಭ್ಯಂತರಿಸುವುದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು. \v 9 ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆಮಾಡಿ, ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲು ಇಟ್ಟೆವು. \p \v 10 ಆಗ ಯೆಹೂದದವರು, “ಹೊರೆ ಹೊರುವವರ ಬಲವು ಕುಂದಿಹೋಯಿತು; ಕಲ್ಲುಮಣ್ಣಿನ ರಾಶಿ ಬಹಳವಾಗಿದೆ; ಈ ಗೋಡೆಯನ್ನು ಪುನಃ ಕಟ್ಟುವುದು ನಮ್ಮಿಂದಾಗದು,” ಎಂದರು. \p \v 11 ನಮ್ಮ ವೈರಿಗಳು, “ಅವರು ತಿಳಿಯದ ಹಾಗೆಯೂ, ನೋಡದ ಹಾಗೆಯೂ ನಾವು ಅವರ ನಡುವೆ ಬಂದು, ಅವರನ್ನು ಕೊಂದುಹಾಕಿ, ಕೆಲಸವನ್ನು ನಿಲ್ಲಿಸಿಬಿಡೋಣ,” ಎಂದುಕೊಳ್ಳುತ್ತಿದ್ದರು. \p \v 12 ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದು, “ನೀವು ತಿರುಗಿಕೊಳ್ಳುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಯುದ್ಧಕ್ಕೆ ಬಂದಾರು,” ಎಂದು ನಮಗೆ ಹತ್ತು ಬಾರಿ ಹೇಳಿದರು. \p \v 13 ಆದಕಾರಣ ನಾನು ಗೋಡೆಯ ಹಿಂದೆ ಇರುವ ತಗ್ಗಿನ ಸ್ಥಳಗಳಲ್ಲಿಯೂ, ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು. ತಮ್ಮ ಖಡ್ಗಗಳನ್ನೂ, ತಮ್ಮ ಈಟಿಗಳನ್ನೂ, ತಮ್ಮ ಬಿಲ್ಲುಗಳನ್ನೂ ಹಿಡಿದುಕೊಂಡಿರುವ ಜನರನ್ನು, ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು. \v 14 ನಾನು ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು ಶ್ರೇಷ್ಠರಿಗೂ, ಅಧಿಕಾರಸ್ಥರಿಗೂ, ಇತರ ಜನರಿಗೂ ಸಂಬೋಧಿಸಿ, “ನೀವು ಅವರಿಗೋಸ್ಕರ ಭಯಪಡಬೇಡಿರಿ. ದೊಡ್ಡವನಾಗಿಯೂ, ಭಯಂಕರನಾಗಿಯೂ ಇರುವ ಯೆಹೋವ ದೇವರನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಪುತ್ರರಿಗೋಸ್ಕರ, ಪುತ್ರಿಯರಿಗೋಸ್ಕರ, ನಿಮ್ಮ ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ,” ಎಂದೆನು. \p \v 15 ನಿಮ್ಮ ಶತ್ರುಗಳು ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ದೇವರು ಅದನ್ನು ವ್ಯರ್ಥ ಮಾಡಿದನೆಂದು ತಿಳಿದುಕೊಂಡರು. ನಮ್ಮನ್ನು ಬಿಟ್ಟುಹೋದರು. ನಾವೆಲ್ಲರು ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ಮತ್ತೆ ಕೈಹಾಕಿದೆವು. \p \v 16 ಅಂದಿನಿಂದ ನನ್ನ ಸೇವಕರಲ್ಲಿ ಅರ್ಧ ಜನರು ಕೆಲಸದಲ್ಲಿ ನಿರತರಾದರು; ಮಿಕ್ಕ ಅರ್ಧ ಜನರು ಈಟಿಗಳನ್ನೂ, ಗುರಾಣಿಗಳನ್ನೂ, ಬಿಲ್ಲುಗಳನ್ನೂ, ಕವಚಗಳನ್ನೂ ಧರಿಸಿದರು. ಪ್ರಧಾನರು ಗೋಡೆ ಕಟ್ಟುವವರಾದ ಯೆಹೂದ ಮನೆಯವರ ಹಿಂದೆ ನಿಂತರು. \v 17 ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತು, ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಾ ಇದ್ದರು. \v 18 ಕಟ್ಟುವವರಲ್ಲಿ ಪ್ರತಿಯೊಬ್ಬರೂ ತಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವವನು ನನ್ನ ಬಳಿಯಲ್ಲಿದ್ದನು. \p \v 19 ಆಗ ನಾನು ಶ್ರೇಷ್ಠರಿಗೂ, ಅಧಿಕಾರಿಗಳಿಗೂ, ಇತರ ಜನರಿಗೂ, “ಕೆಲಸವು ದೊಡ್ಡದೂ, ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ, ಒಬ್ಬರಿಗೊಬ್ಬರು ದೂರವಾಗಿದ್ದೇವೆ. \v 20 ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ, ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವರು,” ಎಂದು ಹೇಳಿದೆನು. \p \v 21 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧಮಂದಿ ಭರ್ಜಿ ಹಿಡಿದುಕೊಂಡಿದ್ದರು. \v 22 ಇದಲ್ಲದೆ ನಾನು ಆ ಸಮಯದಲ್ಲಿ ಜನರಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವಂತೆಯೂ, ಹಗಲಿನಲ್ಲಿ ಕೆಲಸ ನಡೆಸುವಂತೆಯೂ ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇಮಿನಲ್ಲೇ ವಾಸಮಾಡಬೇಕು,” ಎಂದು ಅಪ್ಪಣೆ ಮಾಡಿದೆನು. \v 23 ನಾನೂ, ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ಸ್ನಾನದ ಸಮಯದಲ್ಲಿ ಹೊರತು, ಬೇರೆ ಸಮಯದಲ್ಲಿ ನಮ್ಮ ವಸ್ತ್ರಗಳನ್ನು ತೆಗೆದುಹಾಕಲಿಲ್ಲ. \c 5 \s1 ನೆಹೆಮೀಯನು ಬಡವರಿಗೆ ಸಹಾಯಮಾಡಿದನು \p \v 1 ತರುವಾಯ ಜನರೂ, ಅವರ ಹೆಂಡತಿಯರೂ ತಮ್ಮ ಸಹೋದರರಾದ ಯೆಹೂದ್ಯರ ವಿರುದ್ಧ ಬಹಳ ಗೋಳಾಡ ತೊಡಗಿದರು. \v 2 ಅವರಲ್ಲಿ ಕೆಲವರು, “ನಾವೂ, ನಮ್ಮ ಪುತ್ರರೂ, ನಮ್ಮ ಪುತ್ರಿಯರೂ ಅನೇಕರಾದುದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತೆಗೆದುಕೊಳ್ಳೋಣ,” ಎಂದರು. \p \v 3 ಕೆಲವರು, “ಈ ಬರಗಾಲದಲ್ಲಿ ನಾವು ಧಾನ್ಯ ಕೊಂಡುಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ, ಮನೆಗಳನ್ನೂ ಒತ್ತೆ ಇಟ್ಟೆವು,” ಎಂದರು. \p \v 4 ಇನ್ನು ಕೆಲವರು, “ಅರಸನಿಗೆ ತೆರಿಗೆಯನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ, ನಮ್ಮ ದ್ರಾಕ್ಷಿತೋಟಗಳ ಮೇಲೆಯೂ ಸಾಲವನ್ನು ತೆಗೆದುಕೊಳ್ಳಬೇಕಾಯಿತು. \v 5 ನಾವು ನಮ್ಮ ಸಹೋದರರ ಹಾಗೆಯೇ ಒಂದೇ ರಕ್ತಮಾಂಸದವರಾಗಿದ್ದೇವೆ; ನಮ್ಮ ಮಕ್ಕಳು ಅವರ ಮಕ್ಕಳ ಹಾಗೆಯೇ ಕ್ಷೇಮವಾಗಿದ್ದಾರೆ; ಆದರೂ ನಮ್ಮ ಪುತ್ರಪುತ್ರಿಯರನ್ನೂ ಗುಲಾಮರಾಗುವುದಕ್ಕೆ ತಂದಿದ್ದೇವೆ. ನಮ್ಮ ಪುತ್ರಿಯರಲ್ಲಿ ಕೆಲವರು ಆಗಲೇ ಗುಲಾಮರಾಗಿದ್ದಾರೆ. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಏಕೆಂದರೆ ನಮ್ಮ ಹೊಲಗಳೂ, ದ್ರಾಕ್ಷಿ ತೋಟಗಳೂ ಪರರ ಪಾಲಾಗಿವೆ,” ಎಂದರು. \p \v 6 ಅವರ ಕೂಗನ್ನೂ, ಈ ಆರೋಪಗಳನ್ನೂ ನಾನು ಕೇಳಿ ಬಹಳವಾಗಿ ಕೋಪಿಸಿಕೊಂಡೆನು. \v 7 ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೇಷ್ಠರನ್ನೂ, ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೇ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ, ಅವರಿಗೆ ವಿರೋಧವಾಗಿ ಮಹಾ ಸಭೆಯನ್ನು ಕೂಡಿಸಿದೆ. \v 8 “ಇತರ ಜನರಿಗೆ ಗುಲಾಮರಾಗಿ ಮಾರಟವಾಗಿರುವ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿಯಿದ್ದಷ್ಟು ಬಿಡಿಸುತ್ತಿದ್ದೆವು. ಆದರೆ ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ. ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎಂದೆನು. ಆಗ ಅವರು ಹೇಳಲು ಏನೂ ಸಿಗದ ಕಾರಣ ಅವರು ಮೌನವಾಗಿದ್ದರು. \p \v 9 ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ. \v 10 ನಾನು, ನನ್ನ ಸಹೋದರರು, ಸೇವಕರು ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ. \v 11 ಅವರ ಹೊಲ, ದ್ರಾಕ್ಷಿತೋಟ, ಓಲಿವ್ ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟು ಬಿಡಿ; ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿ ಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ. \p \v 12 ಅದಕ್ಕವರು, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ಏನೂ ಕೇಳುವುದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ,” ಎಂದರು. \p ಆಗ ನಾನು ಯಾಜಕರನ್ನು ಕರೆದು, ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತೆಗೆದುಕೊಂಡೆನು. \v 13 ನಾನು ನನ್ನ ಬಟ್ಟೆಯನ್ನು ಝಾಡಿಸಿ, “ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಅವನ ಆಸ್ತಿಪಾಸ್ತಿಯಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಿ, ಬರಿದಾಗಲಿ,” ಎಂದೆನು. \p ಅದಕ್ಕೆ ಸಭೆಯವರೆಲ್ಲರೂ, “ಆಮೆನ್” ಎಂದು ಹೇಳಿ ಯೆಹೋವ ದೇವರನ್ನು ಸ್ತುತಿಸಿದರು. ಜನರು ತಾವು ಕೊಟ್ಟ ಮಾತಿನ ಪ್ರಕಾರ ನಡೆದುಕೊಂಡರು. \p \v 14 ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ರಾಜ್ಯಪಾಲನಾದ ಕಾಲ ಮೊದಲ್ಗೊಂಡು ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷ ಮೊದಲ್ಗೊಂಡು ಮೂವತ್ತೆರಡನೆಯ ವರ್ಷದವರೆಗೆ ಹನ್ನೆರಡು ವರ್ಷವಾಗಿ ನಾನೂ, ನನ್ನ ಸಹೋದರರೂ ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ತಿನ್ನಲಿಲ್ಲ. \v 15 ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ. \v 16 ಆ ಗೋಡೆ ಕಟ್ಟುವುದರಲ್ಲೇ ನಿರತನಾಗಿದ್ದೆ ಮತ್ತು ನನ್ನ ಎಲ್ಲಾ ಸೇವಕರು ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆ. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ. \p \v 17 ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರೂ, ಯೆಹೂದ್ಯರೂ, ಅಧಿಕಾರಿಗಳೂ ನೂರ ಐವತ್ತು ಮಂದಿ ನನ್ನ ಪಂಕ್ತಿಯಲ್ಲೇ ಊಟಮಾಡುತ್ತಿದ್ದರು. \v 18 ಪ್ರತಿದಿನಕ್ಕೆ ಒಂದು ಎತ್ತು, ಉತ್ತಮವಾದ ಆರು ಕುರಿಗಳು, ಕೋಳಿಗಳು, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವು ನನಗೋಸ್ಕರ ಸಿದ್ಧವಾಗುತ್ತಿದ್ದವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದುದರಿಂದ ನಾನು ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ಬೇಡಲಿಲ್ಲ. \p \v 19 “ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಎಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಮಾಡಿರಿ,” ಎಂದು ಪ್ರಾರ್ಥಿಸಿದೆ. \c 6 \s1 ಪುನಃ ಕಟ್ಟುವುದಕ್ಕೆ ಇನ್ನೂ ವಿರೋಧಗಳು \p \v 1 ನಾನು ಹೆಬ್ಬಾಗಿಲುಗಳಲ್ಲಿ ಬಾಗಿಲುಗಳನ್ನು ಇಡುವುದಕ್ಕಿಂತ ಮುಂಚೆ ನಾನು ಗೋಡೆಯಲ್ಲಿ ಒಂದು ಸಂದನ್ನೂ ಬಿಡದೆ ಪುನಃ ಕಟ್ಟಿದೆನೆಂದು ಸನ್ಬಲ್ಲಟನೂ, ಟೋಬೀಯನೂ, ಅರಬಿಯನಾದ ಗೆಷೆಮನೂ, ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ, \v 2 ಸನ್ಬಲ್ಲಟನೂ, ಗೆಷೆಮನೂ ನನಗೆ, “ಓನೋ ಎಂಬ ಬಯಲಿನಲ್ಲಿರುವ ಗ್ರಾಮಗಳಲ್ಲಿ ಎದುರುಗೊಳ್ಳೋಣ ಬಾ,” ಎಂದರು. \p ಆದರೆ ಅವರು ನನಗೆ ಕೇಡು ಮಾಡಲು ಯೋಜಿಸಿಕೊಂಡಿದ್ದರು. \v 3 ಆದಕಾರಣ ನಾನು ಅವರ ಬಳಿಗೆ ದೂತರನ್ನು ಕಳುಹಿಸಿ, “ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ, ಬರಲಾರೆನು. ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವುದು,” ಎಂದು ಹೇಳಿದೆನು. \v 4 ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಉತ್ತರ ಕಳುಹಿಸಿದೆನು. \p \v 5 ಐದನೆಯ ಸಾರಿ ಸನ್ಬಲ್ಲಟನು ತನ್ನ ದೂತನ ಕೈಯಲ್ಲಿ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು. \v 6 ಅದರಲ್ಲಿ ಹೀಗೆ ಬರೆದಿತ್ತು: \pm “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ, ಯೆಹೂದ್ಯರೂ ತಿರುಗಿಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಪುನಃ ಕಟ್ಟಿಸುತ್ತಿದ್ದೀ. \v 7 ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದೂ ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವುದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನಾಂಗಗಳಲ್ಲಿ ಸುದ್ದಿ ಉಂಟು. ಈಗ ಈ ವರ್ತಮಾನ ಅರಸನಿಗೆ ತಿಳಿಸಲಾಗುವುದು. ಆದಕಾರಣ ನಾವು ಕೂಡಿಕೊಂಡು ಯೋಚನೆ ಮಾಡಿಕೊಳ್ಳೋಣ ಬಾ.” \p \v 8 ಆಗ ನಾನು, “ನೀನು ಹೇಳಿದ ಕಾರ್ಯಗಳಲ್ಲಿ ಯಾವುದೂ ಮಾಡಿದ್ದಿಲ್ಲ. ನೀವು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸಿಕೊಂಡಿರುವೆ,” ಎಂದು ಹೇಳಿ ಕಳುಹಿಸಿದೆನು. \p \v 9 ಹೀಗೆ, “ಅವರ ಕೈಗಳು ಬಲಹೀನವಾಗುವುವು. ಕೆಲಸವು ಪೂರ್ತಿಯಾಗುವುದಿಲ್ಲ,” ಎಂದುಕೊಂಡು ಅವರೆಲ್ಲರು ನಮ್ಮನ್ನು ಭಯಪಡಿಸಿದರು. \p ನಾನಾದರೋ, “ದೇವರೇ, ನನ್ನ ಕೈಗಳನ್ನು ಬಲಪಡಿಸಿರಿ,” ಎಂದು ಪ್ರಾರ್ಥಿಸಿದೆನು. \p \v 10 ತರುವಾಯ ನಾನು ಅಡಗಿಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯ, ಇವನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನು, “ನಾವಿಬ್ಬರೂ ದೇವರ ಆಲಯದಲ್ಲಿ ಪವಿತ್ರಸ್ಥಾನದೊಳಗೆ ಹೋಗಿ, ಮಂದಿರದ ಬಾಗಿಲನ್ನು ಮುಚ್ಚಿಕೊಳ್ಳೋಣ ಬಾ, ಏಕೆಂದರೆ ಈ ರಾತ್ರಿಯೇ ನಿನ್ನನ್ನು ಕೊಂದುಹಾಕಲು ಬರುತ್ತಾರೆ,” ಎಂದು ಹೇಳಿದನು. \p \v 11 ಅದಕ್ಕೆ ನಾನು, “ನನ್ನಂಥಾ ಮನುಷ್ಯನು ಓಡಿ ಹೋಗುವನೋ? ನನ್ನಂಥವನು ಬದುಕಬೇಕೆಂದು ದೇವರ ಆಲಯದೊಳಗೆ ಹೋಗಬಹುದೇ? ನಾನು ಒಳಗೆ ಹೋಗುವುದಿಲ್ಲ,” ಎಂದೆನು. \v 12 ಆಗ ದೇವರು ಅವನನ್ನು ಕಳುಹಿಸಲಿಲ್ಲ. ಟೋಬೀಯನೂ, ಸನ್ಬಲ್ಲಟನೂ ಶೆಮಾಯನಿಗೆ ಲಂಚಕೊಟ್ಟು, ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿಸಿದರೆಂದು ನನಗೆ ಗೊತ್ತಾಯಿತು. \v 13 ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವಂತೆಯೂ ಅವರು ನನ್ನನ್ನು ನಿಂದಿಸುವುದಕ್ಕೆ ಅಪಕೀರ್ತಿಯ ಕಾರಣವು ಅವರಿಗೆ ಸಿಕ್ಕುವಂತೆಯೂ ಶೆಮಾಯನಿಗೆ ಲಂಚಕೊಟ್ಟಿದ್ದರು. \b \p \v 14 ನನ್ನ ದೇವರೇ, ನೀವು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ, ಸನ್ಬಲ್ಲಟನನ್ನೂ, ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೊಳ್ಳಿರಿ. \v 15 ಹೀಗೆ ಗೋಡೆಯು ಐವತ್ತೆರಡು ದಿವಸಗಳಲ್ಲಿ ಏಲುಲ್ ತಿಂಗಳದ ಇಪ್ಪತ್ತೈದನೆಯ ದಿವಸದಲ್ಲಿ ಮುಗಿಯಿತು. \s1 ಪೂರ್ಣಗೊಂಡ ಗೋಡೆಗೆ ವಿರೋಧ \p \v 16 ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು. \p \v 17 ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಶ್ರೇಷ್ಠರು ಟೋಬೀಯನ ಬಳಿಗೆ ಬಹಳ ಪತ್ರಗಳನ್ನು ಕಳುಹಿಸಿದರು. ಟೋಬೀಯನಿಂದ ಉತ್ತರ ಅವರಿಗೆ ಬರುತ್ತಿದ್ದವು. \v 18 ಏಕೆಂದರೆ ಅವನು ಆರಹನ ಮಗ ಶೆಕನ್ಯನ ಅಳಿಯನಾದುದರಿಂದ ಅವನ ಮಗ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತೆಗೆದುಕೊಂಡಿದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ನಂಬಿಗಸ್ತರಾಗಿರುವುದಾಗಿ ಪ್ರಮಾಣ ಮಾಡಿದರು. \v 19 ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ, ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀಯನೂ ನನ್ನನ್ನು ಭಯಪಡಿಸುವುದಕ್ಕೆ ಪತ್ರಗಳನ್ನು ಕಳುಹಿಸಿದನು. \c 7 \p \v 1 ನಾನು ಗೋಡೆಯನ್ನು ಪುನಃ ಕಟ್ಟಿಸಿ, ಬಾಗಿಲುಗಳನ್ನು ನಿಲ್ಲಿಸಿ, ತರುವಾಯ ಬಾಗಿಲು ಕಾಯುವವರನ್ನು, ಹಾಡುಗಾರರನ್ನು, ಲೇವಿಯರನ್ನು ನೇಮಿಸಿದೆನು. \v 2 ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು. \v 3 ಆಗ ನಾನು ಅವರಿಗೆ, “ಬಿಸಿಲು ಏರುವುದಕ್ಕಿಂತ ಮೊದಲೇ ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು. ಇದಲ್ಲದೆ ನೀವು ಸಮೀಪದಲ್ಲಿ ನಿಂತಿರುವಾಗ, ಕದಗಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ. ಯೆರೂಸಲೇಮಿನ ನಿವಾಸಿಗಳಲ್ಲಿ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾಗಿ ಕಾವಲಾಗಿರಲು ನೇಮಿಸಿರಿ,” ಎಂದು ಹೇಳಿದೆನು. \s1 ಹಿಂದಿರುಗಿ ಬಂದ ಸೆರೆಯವರ ಪಟ್ಟಿ \p \v 4 ಪಟ್ಟಣವು ವಿಸ್ತಾರವಾಗಿಯೂ, ದೊಡ್ಡದಾಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚವಾಗಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ. \v 5 ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸುವ ಹಾಗೆ ಶ್ರೇಷ್ಠರನ್ನೂ, ಅಧಿಕಾರಸ್ಥರನ್ನೂ, ಸಾಮಾನ್ಯ ಜನರನ್ನೂ ಸಭೆಯಾಗಿಸೇರಲು, ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿಸಿದರು. ಆಗ ನಾನು ಮೊದಲು ಬಂದವರ ವಂಶಾವಳಿಯ ಪಟ್ಟಿಯನ್ನು ಕಂಡೆನು. ಅದರಲ್ಲಿ ಬರೆದದ್ದೇನೆಂದರೆ: \b \li4 \v 6 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ \v 7 ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ. \b \li4 ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ: \li1 \v 8 ಪರೋಷನ ವಂಶಜರು 2,172 ಮಂದಿ ಇದ್ದರು. \li1 \v 9 ಶೆಫಟ್ಯನ ವಂಶಜರು 372 ಮಂದಿ ಇದ್ದರು. \li1 \v 10 ಆರಹನ ವಂಶಜರು 652 ಮಂದಿ ಇದ್ದರು. \li1 \v 11 ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,818 ಮಂದಿ ಇದ್ದರು. \li1 \v 12 ಏಲಾಮನ ವಂಶಜರು 1,254 ಮಂದಿ ಇದ್ದರು. \li1 \v 13 ಜತ್ತೂವಿನ ವಂಶಜರು 845 ಮಂದಿ ಇದ್ದರು. \li1 \v 14 ಜಕ್ಕೈನ ವಂಶಜರು 760 ಮಂದಿ ಇದ್ದರು. \li1 \v 15 ಬಿನ್ನೂಯನ ವಂಶಜರು 648 ಮಂದಿ ಇದ್ದರು. \li1 \v 16 ಬೇಬೈನ ವಂಶಜರು 628 ಮಂದಿ ಇದ್ದರು. \li1 \v 17 ಅಜ್ಗಾದನ ವಂಶಜರು 2,322 ಮಂದಿ ಇದ್ದರು. \li1 \v 18 ಅದೋನೀಕಾಮಿನ ವಂಶಜರು 667 ಮಂದಿ ಇದ್ದರು. \li1 \v 19 ಬಿಗ್ವೈ ವಂಶಜರು 2,067 ಮಂದಿ ಇದ್ದರು. \li1 \v 20 ಅದೀನನ ವಂಶಜರು 655 ಮಂದಿ ಇದ್ದರು. \li1 \v 21 ಹಿಜ್ಕೀಯನ ಮಗನಾದ ಆಟೇರ್ ವಂಶಜರು 98 ಮಂದಿ ಇದ್ದರು. \li1 \v 22 ಹಾಷುಮನ ವಂಶಜರು 328 ಮಂದಿ ಇದ್ದರು. \li1 \v 23 ಬೇಚೈಯ ವಂಶಜರು 324 ಮಂದಿ ಇದ್ದರು. \li1 \v 24 ಹಾರೀಫನ ವಂಶಜರು 112 ಮಂದಿ ಇದ್ದರು. \li1 \v 25 ಗಿಬ್ಯೋನನ ವಂಶಜರು 95 ಮಂದಿ ಇದ್ದರು. \b \li1 \v 26 ಬೇತ್ಲೆಹೇಮಿನವರೂ ನೆಟೋಫದವರೂ 188 ಮಂದಿ ಇದ್ದರು. \li1 \v 27 ಅನಾತೋತ್ ಊರಿನವರು 128 ಮಂದಿ ಇದ್ದರು. \li1 \v 28 ಬೇತ್ ಅಜ್ಮಾವೆತಿನವರು 42 ಮಂದಿ ಇದ್ದರು. \li1 \v 29 ಕಿರ್ಯತ್ ಯಾರೀಮ್, ಕೆಫೀರಾ, ಬೇರೋತ್ ಎಂಬ ಪಟ್ಟಣದವರು 743 ಮಂದಿ ಇದ್ದರು. \li1 \v 30 ರಾಮಾ ಗೆಬ ಎಂಬ ಪಟ್ಟಣದವರು 621 ಮಂದಿ ಇದ್ದರು. \li1 \v 31 ಮಿಕ್ಮಾಷದ ಜನರು 122 ಮಂದಿ ಇದ್ದರು. \li1 \v 32 ಬೇತೇಲ್ ಮತ್ತು ಆಯಿ ಎಂಬ ಪಟ್ಟಣದವರು 123 ಮಂದಿ ಇದ್ದರು. \li1 \v 33 ಮತ್ತೊಂದು ನೆಬೋ ಊರಿನವರು 52 ಮಂದಿ ಇದ್ದರು. \li1 \v 34 ಮತ್ತೊಬ್ಬ ಏಲಾಮನ ವಂಶಜರು 1,254 ಮಂದಿ ಇದ್ದರು. \li1 \v 35 ಹಾರಿಮನ ವಂಶಜರು 320 ಮಂದಿ ಇದ್ದರು. \li1 \v 36 ಯೆರಿಕೋವಿನ ವಂಶಜರು 345 ಮಂದಿ ಇದ್ದರು. \li1 \v 37 ಲೋದ್, ಹಾದೀದ್, ಓನೋ ಎಂಬ ಊರಿನ ಜನರು 721 ಮಂದಿ ಇದ್ದರು. \li1 \v 38 ಸೆನಾಹನ ವಂಶಜರು 3,930 ಮಂದಿ ಇದ್ದರು. \b \li4 \v 39 ಯಾಜಕರು: \li1 ಯೇಷೂವನ ಕುಟುಂಬದವರಾದ ಯೆದಾಯನ ವಂಶಜರು 973. \li1 \v 40 ಇಮ್ಮೇರನ ವಂಶಜರು 1,052. \li1 \v 41 ಪಷ್ಹೂರನ ವಂಶಜರು 1,247. \li1 \v 42 ಹಾರಿಮನ ವಂಶಜರು 1,017. \b \li1 \v 43 ಲೇವಿಯರು: \li2 ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74. \b \li1 \v 44 ಹಾಡುಗಾರರು: \li2 ಆಸಾಫನ 148 ವಂಶಜರು. \b \li1 \v 45 ದೇವಾಲಯದ ದ್ವಾರಪಾಲಕರಾದ, \li2 ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು 138. \b \li1 \v 46 ದೇವಾಲಯದ ಸೇವಕರು: \li2 ಜೀಹ, ಹಸೂಫ, ಟಬ್ಬಾವೋತ್, \li2 \v 47 ಕೆರೋಸ್, ಸೀಯ, ಪದೋನ್, \li2 \v 48 ಲೆಬಾನ, ಹಗಾಬ, ಶಲ್ಮೈ, \li2 \v 49 ಹಾನಾನ್, ಗಿದ್ದೇಲ್, ಗಹರ್, \li2 \v 50 ರೆವಾಯ, ರೆಚೀನ್, ನೆಕೋದ, \li2 \v 51 ಗಜ್ಜಾಮ್, ಉಜ್ಜ, ಪಾಸೇಹ, \li2 \v 52 ಬೇಸೈ, ಮೆಯನೀಮ್, ನೆಫೀಸೀಮ್\f + \fr 7:52 \fr*\fq ನೆಫೀಸೀಮ್ \fq*\ft ಅಥವಾ \ft*\fqa ನೆಫೀಷೆಸೀಮ್\fqa*\f*, \li2 \v 53 ಬಕ್ಬೂಕ್, ಹಕ್ಕೂಫ, ಹರ್ಹೂರ್, \li2 \v 54 ಬಚ್ಲೂತ್, ಮೆಹೀದ, ಹರ್ಷ, \li2 \v 55 ಬರ್ಕೋಸ್, ಸೀಸೆರ, ತೆಮಹ, \li2 \v 56 ನೆಚೀಹ, ಹಟೀಫ, ಇವರ ವಂಶಜರು. \li1 \v 57 ಸೊಲೊಮೋನನ ಸೇವಕರ ವಂಶಜರು: \li2 ಸೋಟೈ, ಸೋಫೆರೆತ್, ಪೆರೀದ, \li2 \v 58 ಯಾಲ, ದರ್ಕೋನ್, ಗಿದ್ದೇಲ್, \li2 \v 59 ಶೆಫಟ್ಯ, ಹಟ್ಟೀಲ್, \li2 ಪೋಕೆರೆತ್ ಹಚ್ಚೆಬಾಯೀಮ್, ಆಮೋನ್ ಮುಂತಾದವರ ಮಕ್ಕಳು. \li4 \v 60 ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ. \b \li4 \v 61 ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ: \li1 \v 62 ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು ಒಟ್ಟು 642 ಮಂದಿ. \b \li4 \v 63 ಯಾಜಕರಲ್ಲಿ, \li1 ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. \li2 ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ ಅವನ ಹೆಸರನ್ನು ಇಟ್ಟುಕೊಂಡನು. \li4 \v 64 ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು. \v 65 ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು. \b \li4 \v 66 ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360. \v 67 ಅವರ ಹೊರತಾಗಿ ಅವರ ದಾಸರೂ ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 245 ಮಂದಿಯೂ ಇದ್ದರು. \v 68 ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು. \v 69 435 ಒಂಟೆಗಳು, 6,720 ಕತ್ತೆಗಳು ಇದ್ದವು. \b \pm \v 70 ಕುಟುಂಬಗಳ ಕೆಲವು ಮುಖ್ಯಸ್ಥರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ರಾಜ್ಯಪಾಲನು ಬೊಕ್ಕಸಕ್ಕೆ 8.4 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 50 ಪಾತ್ರೆಗಳನ್ನೂ, 530 ಯಾಜಕರ ಅಂಗಿಗಳನ್ನೂ ಕೊಟ್ಟನು. \v 71 ಇದಲ್ಲದೆ ಮುಖ್ಯವಾದ ಪಿತೃಗಳಲ್ಲಿ ಕೆಲವರು ಕೆಲಸದ ಬೊಕ್ಕಸಕ್ಕೆ 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 1.2 ಮೆಟ್ರಿಕ್ ಟನ್ ಬೆಳ್ಳಿಯನ್ನು ಕೊಟ್ಟರು. \v 72 ಮಿಕ್ಕಾದ ಜನರು ಕೊಟ್ಟದ್ದೇನೆಂದರೆ: 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ 1.1 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 67 ಯಾಜಕರ ಅಂಗಿಗಳನ್ನೂ ಕೊಟ್ಟರು. \pm \v 73 ಹೀಗೆಯೇ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ಸಾಮಾನ್ಯ ಜನರೂ, ದೇವಾಲಯದ ಸೇವಕರೂ, ಸಮಸ್ತ ಇಸ್ರಾಯೇಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. \s1 ಎಜ್ರನು ದೇವರ ನಿಯಮವನ್ನು ಓದಿದ್ದು \p ಏಳನೆಯ ತಿಂಗಳು ಬಂದಾಗ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. \c 8 \nb \v 1 ಜನರೆಲ್ಲರು ಏಕವಾಗಿ ನೀರು ಬಾಗಿಲಿಗೆ ಎದುರಾಗಿರುವ ಬೀದಿಯಲ್ಲಿ ಕೂಡಿಕೊಂಡು ಬಂದರು. ಯೆಹೋವ ದೇವರು ಇಸ್ರಾಯೇಲರಿಗೆ ಆಜ್ಞಾಪಿಸಿದ ಮೋಶೆಯ ನಿಯಮದ ಗ್ರಂಥವನ್ನು ತೆಗೆದುಕೊಂಡು ಬರಲು ಜನರು ನಿಯಮಶಾಸ್ತ್ರಿಯಾದ ಎಜ್ರನಿಗೆ ಹೇಳಿದರು. \p \v 2 ಹೀಗೆಯೇ ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಯಾಜಕನಾದ ಎಜ್ರನು ದೇವರ ನಿಯಮವನ್ನು ತೆಗೆದುಕೊಂಡು ಬಂದನು. \v 3 ಅನಂತರ ಎಜ್ರನು ನೀರಿನ ಬಾಗಿಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದವರೆಗೆ ಓದಿದನು. ಜನರೆಲ್ಲರು ನಿಯಮದ ಗ್ರಂಥಕ್ಕೆ ಕಿವಿಗೊಟ್ಟರು. \p \v 4 ಆಗ ನಿಯಮಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡಲಾಗಿದ್ದ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನ ಬಲಗಡೆಯಲ್ಲಿ ಮತ್ತಿತ್ಯ. ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ, ಅವನಿಗೆ ಎಡಗಡೆಯಲ್ಲಿ ಪೆದಾಯ್, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ನಿಂತಿದ್ದರು. \p \v 5 ಎಜ್ರನು ಸಕಲ ಜನರ ಕಣ್ಣು ಮುಂದೆ ದೇವರ ಗ್ರಂಥವನ್ನು ತೆರೆದನು. ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ನಿಂತಿದ್ದನು. ಅವನು ಅದನ್ನು ತೆರೆದಾಗ, ಜನರೆಲ್ಲರು ಎದ್ದು ನಿಂತರು. \v 6 ಆಗ ಎಜ್ರನು ಮಹಾ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಉತ್ತರವಾಗಿ, “ಆಮೆನ್, ಆಮೆನ್,” ಎಂದು ಹೇಳಿ ನೆಲದವರೆಗೂ ತಮ್ಮ ತಲೆಗಳನ್ನು ಬಗ್ಗಿಸಿ ಯೆಹೋವ ದೇವರನ್ನು ಆರಾಧಿಸಿದರು. \p \v 7 ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ನಿಯಮವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು. \v 8 ಜನರು ಎದ್ದು ನಿಂತ ನಂತರ, ಅವರು ದೇವರ ನಿಯಮವನ್ನು ಸ್ಪಷ್ಟವಾಗಿ ಓದುತ್ತಾ, ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು. \p \v 9 ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು. \p \v 10 ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು. \p \v 11 ಲೇವಿಯರು ಕೂಡ, “ಈ ದಿನವು ಪರಿಶುದ್ಧವಾದುದರಿಂದ ನೀವು ಶಾಂತವಾಗಿದ್ದು, ವ್ಯಥೆಪಡಬೇಡಿರಿ,” ಎಂದು ಹೇಳಿ ಜನರನ್ನು ಸುಮ್ಮನಿರಿಸಿದರು. \p \v 12 ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು. \p \v 13 ಎರಡನೆಯ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿರುವ ಮುಖ್ಯವಾದವರೂ ಯಾಜಕರೂ ಲೇವಿಯರೂ ದೇವರ ನಿಯಮದ ಮಾತುಗಳನ್ನು ತಿಳಿದುಕೊಳ್ಳುವ ಹಾಗೆ, ನಿಯಮಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು. \v 14 ಆಗ ಅವರು ಏಳನೆಯ ತಿಂಗಳ ಹಬ್ಬದಲ್ಲಿ, ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ವಿಷಯ ನಿಯಮದಲ್ಲಿ ಬರೆದದ್ದನ್ನು ಕಂಡರು. \v 15 ಅದರಲ್ಲಿ, “ಪರ್ಣಶಾಲೆಗಳಿಗಾಗಿ ಬೆಟ್ಟಕ್ಕೆ ಹೋಗಿ ಓಲಿವ್, ಕಾಡು ಓಲಿವ್, ಸುಗಂಧ, ಖರ್ಜೂರ ಮುಂತಾದ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತೆಗೆದುಕೊಂಡು ಬನ್ನಿರಿ ಎಂದೂ, ತಮ್ಮ ಸಕಲ ಪಟ್ಟಣಗಳಲ್ಲಿಯೂ, ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು,” ಎಂದೂ ಬರೆದಿತ್ತು. \p \v 16 ಹಾಗೆಯೇ ಜನರು ಹೊರಟುಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ಅವರವರು ತಮ್ಮ ಮನೆಗಳ ಮೇಲೆಯೂ, ತಮ್ಮ ಅಂಗಳಗಳಲ್ಲಿಯೂ, ದೇವರ ಮನೆಯ ಅಂಗಳಗಳಲ್ಲಿಯೂ, ನೀರು ಬಾಗಿಲ ಬೀದಿಗಳಲ್ಲಿಯೂ, ಎಫ್ರಾಯೀಮನ ಬಾಗಿಲ ಬೀದಿಗಳಲ್ಲಿಯೂ ತಮಗೆ ಪರ್ಣಶಾಲೆಗಳನ್ನು ಹಾಕಿದರು. \v 17 ಈ ಪ್ರಕಾರ ಸೆರೆಯಿಂದ ತಿರುಗಿ ಬಂದ ಸಭೆಯವರೆಲ್ಲರು ಪರ್ಣಶಾಲೆಗಳನ್ನು ಹಾಕಿ, ಅದರಲ್ಲಿ ವಾಸವಾಗಿದ್ದರು. ನೂನನ ಮಗ ಯೆಹೋಶುವನ ದಿನವು ಮೊದಲುಗೊಂಡು ಆ ದಿವಸದವರೆಗೂ ಇಸ್ರಾಯೇಲರು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷವಿತ್ತು. \p \v 18 ಎಜ್ರನು ಮೊದಲನೆಯ ದಿವಸದಿಂದ ಕಡೇ ದಿವಸದವರೆಗೂ ದಿನದಿನವೂ ದೇವರ ನಿಯಮದ ಗ್ರಂಥವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೆಯ ದಿವಸದಲ್ಲಿ ಪದ್ಧತಿಯ ಪ್ರಕಾರ ಸಭೆಯು ಸೇರಿತ್ತು. \c 9 \s1 ಇಸ್ರಾಯೇಲರು ತಮ್ಮ ಪಾಪಗಳನ್ನು ಅರಿಕೆಮಾಡಿದ್ದು \p \v 1 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಇಸ್ರಾಯೇಲರು ಉಪವಾಸ ಮಾಡಿ, ಗೋಣಿತಟ್ಟನ್ನು ಉಟ್ಟುಕೊಂಡು, ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು. \v 2 ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ, ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು. \v 3 ಅವರು ತಮ್ಮ ಸ್ಥಳಗಳಲ್ಲಿ ನಿಂತು ಮೂರು ತಾಸುಗಳು ತಮ್ಮ ದೇವರಾಗಿರುವ ಯೆಹೋವ ದೇವರ ನಿಯಮದ ಗ್ರಂಥವನ್ನು ಓದಿದರು. ಮತ್ತೊಂದು ಮೂರು ತಾಸುಗಳು ತಮ್ಮ ಪಾಪಗಳನ್ನು ಅರಿಕೆಮಾಡಿ, ತಮ್ಮ ದೇವರಾಗಿರುವ ಯೆಹೋವ ದೇವರನ್ನು ಆರಾಧಿಸಿದರು. \v 4 ಆಗ ಮೆಟ್ಟಿಲುಗಳ ಮೇಲೆ ಲೇವಿಯರಲ್ಲಿ ಯೇಷೂವ, ಬಾನೀ, ಕದ್ಮಿಯೇಲ್, ಶೆಬನ್ಯ, ಬುನ್ನಿ, ಶೇರೇಬ್ಯ, ಬಾನೀ, ಕೆನಾನಿ ಎಂಬವರು ನಿಂತು ಮಹಾಶಬ್ದದಿಂದ ತಮ್ಮ ದೇವರಾಗಿರುವ ಯೆಹೋವ ದೇವರಿಗೆ ಮೊರೆಯಿಟ್ಟರು. \v 5 ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: “ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ,” ಎಂದರು. \pm ಅನಂತರ ಅವರು, “ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು. \v 6 ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ. \pm \v 7 “ನೀವು ಅಬ್ರಾಮನನ್ನು ಆಯ್ದುಕೊಂಡಿರುವ ಯೆಹೋವ ದೇವರು. ನೀವು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ, ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟಿರಿ. \v 8 ಅವನ ಹೃದಯವು ನಿಮ್ಮ ಮುಂದೆ ಪ್ರಾಮಾಣಿಕವಾದದ್ದೆಂದೂ ಗುರುತಿಸಿದಿರಿ. ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಯೆಬೂಸಿಯರೂ, ಗಿರ್ಗಾಷಿಯರೂ ಇವರ ದೇಶವನ್ನು, ಅಬ್ರಾಮನ ಸಂತಾನಕ್ಕೆ ಕೊಡುವಂತೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿರಿ. ನೀತಿವಂತರಾದ ನೀವು ನಿಮ್ಮ ವಾಗ್ದಾನವನ್ನು ಈಡೇರಿಸಿದಿರಿ. \pm \v 9 “ಇದಲ್ಲದೆ ಈಜಿಪ್ಟಿನಲ್ಲಿ ನಮ್ಮ ಪಿತೃಗಳ ದೀನಸ್ಥಿತಿಯನ್ನು ನೋಡಿದಿರಿ. ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿರಿ. \v 10 ಈಜಿಪ್ಟಿನವರು ಗರ್ವಿಗಳಾಗಿ ಇಸ್ರಾಯೇಲರನ್ನು ಕುಗ್ಗಿಸಿದಾಗ, ನೀವು ಫರೋಹನ ಮೇಲೆಯೂ, ಅವನ ಸಮಸ್ತ ಅಧಿಕಾರಿಗಳ ಮೇಲೆಯೂ, ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದಿರಿ. ಈ ಪ್ರಕಾರವೇ ನೀವು ಇಂದಿನವರೆಗೂ ನಿಮ್ಮ ಹೆಸರಿನ ಕೀರ್ತಿಯನ್ನು ಸ್ಥಾಪಿಸಿದ್ದೀರಿ. \v 11 ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ \v 12 ಇದಲ್ಲದೆ ಹಗಲಿನಲ್ಲಿ ಮೇಘಸ್ತಂಭದಿಂದಲೂ, ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭದಿಂದಲೂ ಅವರನ್ನು ನಡೆಸಿದಿರಿ. \pm \v 13 “ನೀವು ಸೀನಾಯಿ ಪರ್ವತದ ಮೇಲಕ್ಕೆ ಇಳಿದುಬಂದು, ಆಕಾಶದಿಂದ ಅವರ ಸಂಗಡ ಮಾತನಾಡಿದಿರಿ. ಸರಿಯಾದ ನ್ಯಾಯಗಳನ್ನೂ, ಸತ್ಯವಾದ ನಿಯಮಗಳನ್ನೂ, ಉತ್ತಮವಾದ ಕಟ್ಟಳೆಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕೊಟ್ಟಿರಿ. \v 14 ನೀವು ಪರಿಶುದ್ಧ ಸಬ್ಬತ್ ದಿನವನ್ನು ಅವರಿಗೆ ತಿಳಿಸಿ, ನಿಮ್ಮ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ, ನಿಯಮಗಳನ್ನೂ ಕೊಟ್ಟಿರಿ. \v 15 ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ. \pm \v 16 “ಆದರೆ ನಮ್ಮ ಪಿತೃಗಳು ಗರ್ವಪಟ್ಟು ನಡೆದು, ಹಟಮಾರಿಗಳೂ, ಕಠಿಣರೂ ಆಗಿ ನಿಮ್ಮ ಆಜ್ಞೆಗಳಿಗೆ ಅವಿಧೇಯರಾದರು. \v 17 ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ. \v 18 ಆದರೆ ಅವರು ತಮಗೋಸ್ಕರ ಒಂದು ಎರಕದ ಕರುವನ್ನು ಮಾಡಿಕೊಂಡರು. ‘ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ,’ ಎಂದು ಹೇಳಿ, ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು. \pm \v 19 “ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ. \v 20 ಇದಲ್ಲದೆ ನೀವು ಅವರಿಗೆ ಬೋಧಿಸುವ ನಿಮ್ಮ ಒಳ್ಳೆಯ ಆತ್ಮವನ್ನು ಕೊಟ್ಟಿರಿ. ಅವರ ಬಾಯಿಂದ ನಿಮ್ಮ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದ ಅವರಿಗೆ ನೀರನ್ನು ಕೊಟ್ಟಿರಿ. \v 21 ಹೀಗೆಯೇ ಮರುಭೂಮಿಯಲ್ಲಿ ನಾಲ್ವತ್ತು ವರ್ಷ ಅವರನ್ನು ಪೋಷಿಸುತ್ತಿದ್ದಿರಿ. ಅವರಿಗೆ ಯಾವ ಕೊರತೆಯೂ ಇರಲಿಲ್ಲ. ಅವರ ವಸ್ತ್ರಗಳು ಹಳೆಯದಾಗಲಿಲ್ಲ. ಅವರ ಕಾಲುಗಳು ಬಾತುಹೋಗಲಿಲ್ಲ. \pm \v 22 “ನೀವು ಅವರಿಗೆ ರಾಜ್ಯಗಳನ್ನೂ, ಜನಾಂಗಗಳನ್ನೂ ವಶಪಡಿಸಿದಿರಿ. ಅವರಿಗೆ ಮೇರೆಗಳನ್ನು ವಿಭಾಗಿಸಿ ಕೊಟ್ಟಿರಿ. ಆಗ ಅವರು, ಹೆಷ್ಬೋನಿನ ಅರಸನಾದ ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಸ್ವಾಧೀನಮಾಡಿಕೊಂಡರು. \v 23 ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿದಿರಿ. ಅವರು ಸ್ವಾಧೀನಮಾಡಿಕೊಳ್ಳುವರು ಎಂದು ನೀವು ಅವರ ಪಿತೃಗಳಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಬರಮಾಡಿದಿರಿ. \v 24 ಹಾಗೆಯೇ ಇಸ್ರಾಯೇಲರು ಹೋಗಿ, ಆ ದೇಶವನ್ನು ಸ್ವಾಧೀನಮಾಡಿಕೊಂಡರು. ನೀವು ಆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಅವರ ಮುಂದೆ ಕುಗ್ಗಿಸಿ, ಅವರಿಗೆ ಸರಿತೋರಿದ ಪ್ರಕಾರ ಮಾಡುವುದಕ್ಕೆ ಅವರನ್ನೂ, ಅವರ ಅರಸರನ್ನೂ, ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿರಿ. \v 25 ಅವರು ಕೋಟೆ ಪಟ್ಟಣಗಳನ್ನೂ, ರಸವತ್ತಾದ ಭೂಮಿಯನ್ನೂ ವಶಪಡಿಸಿಕೊಂಡರು. ಉತ್ತಮವಾದವುಗಳಿಂದ ತುಂಬಿದ ಮನೆಗಳನ್ನೂ, ಅಗಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಓಲಿವ್ ತೋಪುಗಳನ್ನೂ, ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು, ಪುಷ್ಟಿಯಾಗಿ ನಿಮ್ಮ ಮಹಾ ಉಪಕಾರದಲ್ಲಿ ಆನಂದಿಸುತ್ತಿದ್ದರು. \pm \v 26 “ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು. \v 27 ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ. \pm \v 28 “ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದಕಾರಣ ಅವರ ಶತ್ರುಗಳು ಅವರನ್ನು ಮತ್ತೆ ಆಳುವಂತೆ ಶತ್ರು ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ಅವರು ತಿರುಗಿ ನಿಮ್ಮನ್ನು ಕೂಗಿಕೊಳ್ಳಲು, ನೀವು ಪರಲೋಕದಿಂದ ಕೇಳಿ, ನಿಮ್ಮ ಅನುಕಂಪಕ್ಕೆ ಅನುಸಾರವಾಗಿ ಅವರನ್ನು ಅನೇಕ ಸಾರಿ ವಿಮೋಚಿಸಿದಿರಿ. \pm \v 29 “ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು. \v 30 ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ. \v 31 ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ. \pm \v 32 “ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ. \v 33 ನೀವು ನಮ್ಮ ಮೇಲೆ ಬರಮಾಡಿದ ಎಲ್ಲದರಲ್ಲಿಯೂ ನ್ಯಾಯವಂತರಾಗಿರುವಿರಿ. ಏಕೆಂದರೆ ನೀವು ಮಾಡಿದ್ದು ಸತ್ಯಕ್ಕನುಸಾರವಾದದ್ದು. ಆದರೆ ನಾವು ದುಷ್ಟರಾಗಿ ನಡೆದೆವು. \v 34 ನಮ್ಮ ಅರಸರೂ, ನಮ್ಮ ಪ್ರಧಾನರೂ, ನಮ್ಮ ಯಾಜಕರೂ, ನಮ್ಮ ಪಿತೃಗಳೂ ನಿಮ್ಮ ನಿಯಮವನ್ನು ಕೈಗೊಳ್ಳದೆ, ನಿಮ್ಮ ಆಜ್ಞೆಗಳನ್ನೂ, ನೀವು ಅವರಿಗೆ ಎಚ್ಚರಿಸಿದ ನಿಮ್ಮ ಎಚ್ಚರಿಕೆಗಳನ್ನೂ ಕೇಳದೆ ಹೋದರು. \v 35 ಅವರು ತಮ್ಮ ರಾಜ್ಯದಲ್ಲಿಯೂ, ನೀವು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀವು ಅವರಿಗೆ ಕೊಟ್ಟ ವಿಸ್ತಾರವಾದ, ರಸವತ್ತಾದ ದೇಶದಲ್ಲಿಯೂ, ನಿಮ್ಮನ್ನು ಸೇವಿಸಲಿಲ್ಲ. ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ. \pm \v 36 “ಈ ದಿವಸ ನಾವು ಗುಲಾಮರಾಗಿದ್ದೇವೆ. ಅದರ ಫಲವನ್ನೂ, ಅದರ ಉತ್ತಮವಾದದ್ದನ್ನೂ ತಿನ್ನುವುದಕ್ಕೆ ನೀವು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ನಾವು ಗುಲಾಮರಾಗಿದ್ದೇವೆ. \v 37 ನಮ್ಮ ಪಾಪಗಳ ನಿಮಿತ್ತ ನೀವು ನಮ್ಮ ಮೇಲೆ ಇಟ್ಟ ಅರಸರಿಗೆ ಅದರ ಹುಟ್ಟುವಳಿ ಬಹಳವಾಗಿ ಹೋಗುತ್ತಿದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಮೇಲೆಯೂ, ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ. ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ. \s1 ಜನರ ಒಪ್ಪಂದ \p \v 38 “ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು. \b \c 10 \p \v 1 ಮುದ್ರೆ ಹಾಕಿದವರು ಯಾರೆಂದರೆ: \b \li1 ಅಧಿಪತಿಯಾದ \li2 ಹಕಲ್ಯನ ಮಗ ನೆಹೆಮೀಯನು. \b \li2 ಚಿದ್ಕೀಯ, \v 2 ಸೆರಾಯ, ಅಜರ್ಯ, ಯೆರೆಮೀಯ, \li2 \v 3 ಪಷ್ಹೂರ, ಅಮರ್ಯ, ಮಲ್ಕೀಯನ, \li2 \v 4 ಹಟ್ಟೂಷ್, ಶೆಬನ್ಯ, ಮಲ್ಲೂಕ್, \li2 \v 5 ಹಾರಿಮ್, ಮೆರೇಮೋತ್, ಓಬದ್ಯ, \li2 \v 6 ದಾನಿಯೇಲ, ಗಿನ್ನೆತೋನ್, ಬಾರೂಕ್, \li2 \v 7 ಮೆಷುಲ್ಲಾಮ್, ಅಬೀಯ, ಮಿಯಾಮಿನ್, \li2 \v 8 ಮಾಜ್ಯ, ಬಿಲ್ಗೈ, ಶೆಮಾಯ \li1 ಇವರು ಯಾಜಕರಾಗಿದ್ದರು. \b \li1 \v 9 ಲೇವಿಯರು: \li2 ಅಜನ್ಯನ ಮಗನಾದ ಯೇಷೂವ, ಹೇನಾದಾದ್ ಎಂಬವನ ಮಕ್ಕಳಲ್ಲಿ ಬಿನ್ನೂಯ್, ಕದ್ಮಿಯೇಲ್, \li2 \v 10 ಅವರ ಸಂಗಡಿಗರಾದ ಶೆಬನ್ಯ, \li2 ಹೋದೀಯ, ಕೆಲೀಟ, ಪೆಲಾಯ, ಹಾನಾನ್, \li2 \v 11 ಮೀಕ, ರೆಹೋಬ್, ಹಷಬ್ಯ, \li2 \v 12 ಜಕ್ಕೂರ್, ಶೇರೇಬ್ಯ, ಶೆಬನ್ಯ, \li2 \v 13 ಹೋದೀಯ, ಬಾನೀ, ಬೆನೀನೂ ಎಂಬವರು. \b \li1 \v 14 ಜನರ ಮುಖ್ಯಸ್ಥರು \li2 ಪರೋಷ್, ಪಹತ್ ಮೋವಾಬ್, ಏಲಾಮ್, ಜತ್ತೂ, ಬಾನೀ, \li2 \v 15 ಬುನ್ನಿ, ಅಜ್ಗಾದ್, ಬೇಬೈ, \li2 \v 16 ಅದೋನೀಯ, ಬಿಗ್ವೈ, ಅದೀನ್, \li2 \v 17 ಆಟೇರ್, ಹಿಜ್ಕೀಯ, ಅಜ್ಜೂರ್, \li2 \v 18 ಹೋದೀಯ, ಹಾಷುಮ್, ಬೇಚೈ, \li2 \v 19 ಹಾರೀಫ್, ಅನಾತೋತ್, ನೇಬೈ, \li2 \v 20 ಮಗ್ಪೀಯಾಷ್, ಮೆಷುಲ್ಲಾಮ್, ಹೇಜೀರ್, \li2 \v 21 ಮೆಷೇಜಬೇಲ್, ಚಾದೋಕ್, ಯದ್ದೂವ, \li2 \v 22 ಪೆಲಟ್ಯ, ಹಾನಾನ್, ಅನಾಯ, \li2 \v 23 ಹೋಶೇಯ, ಹನನ್ಯ, ಹಷ್ಷೂಬ್, \li2 \v 24 ಹಲ್ಲೋಹೇಷ್, ಪಿಲ್ಹ, ಶೋಬೇಕ್, \li2 \v 25 ರೆಹೂಮ್, ಹಷಬ್ನ, ಮಾಸೇಯ \li2 \v 26 ಅಹೀಯ, ಹಾನಾನ್, ಆನಾನ್, \li2 \v 27 ಮಲ್ಲೂಕ್, ಹಾರಿಮ್, ಬಾಣನು. \b \pm \v 28 ಜನರಲ್ಲಿ ಉಳಿದವರಾದ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ, ದೇವರ ನಿಯಮದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರೆಲ್ಲರೂ, ಅವರ ಹೆಂಡತಿಯರೂ, ಅವರ ಪುತ್ರರೂ, ಅವರ ಪುತ್ರಿಯರೂ, ತಿಳುವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ, \v 29 ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು; \pm \v 30 ನಾವು ನಮ್ಮ ಪುತ್ರಿಯರನ್ನು ಇತರ ಜನರಿಗೆ ಕೊಡುವುದಿಲ್ಲ, ನಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳುವುದಿಲ್ಲ ಎಂದು ಆಣೆ ಮಾಡುತ್ತೇವೆ. \pm \v 31 ಬೇರೆ ದೇಶದ ಜನರು ಸಬ್ಬತ್\f + \fr 10:31 \fr*\fq ಸಬ್ಬತ್ \fq*\ft ಅಂದರೆ \ft*\fqa ವಿಶ್ರಾಂತಿ ದಿನ\fqa*\f* ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ. \pm \v 32 ವರ್ಷಕ್ಕೆ 4 ಗ್ರಾಂ ಬೆಳ್ಳಿಯನ್ನು ನಮ್ಮ ದೇವರ ಆಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ. \v 33 ಈ ಹಣವನ್ನು, ಸಮ್ಮುಖದ ರೊಟ್ಟಿಗೋಸ್ಕರವೂ, ನಿತ್ಯಧಾನ್ಯ ಕಾಣಿಕೆಗೋಸ್ಕರವೂ, ವಿಶ್ರಾಂತಿಯ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಅರ್ಪಿಸುವ ನಿತ್ಯ ದಹನಬಲಿಗಳಿಗೋಸ್ಕರವೂ, ನೇಮಿಸಿದ ಹಬ್ಬಗಳಿಗೋಸ್ಕರವೂ, ಇಸ್ರಾಯೇಲರ ಪ್ರಾಯಶ್ಚಿತ್ತವಾದ ದೋಷಪರಿಹಾರದ ಬಲಿಗೋಸ್ಕರವೂ, ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ಉಪಯೋಗಿಸಬೇಕು. \pm \v 34 ಮೋಶೆಯ ನಿಯಮದಲ್ಲಿ ಬರೆದ ಹಾಗೆ ನಮ್ಮ ದೇವರಾಗಿರುವ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸುವುದಕ್ಕೆ ನೇಮಿತವಾದ ಕಾಲಗಳಲ್ಲಿ, ವರ್ಷ ವರ್ಷಕ್ಕೆ ನಮ್ಮ ಪಿತೃಗಳ ಗೋತ್ರಗಳ ಪ್ರಕಾರ ನಮ್ಮ ದೇವಾಲಯದೊಳಗೆ ತೆಗೆದುಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ, ಲೇವಿಯರಿಗೂ, ಜನರಿಗೂ ಚೀಟಿಗಳನ್ನು ಹಾಕಿದೆವು. \pm \v 35 ಯೆಹೋವ ದೇವರ ಆಲಯಕ್ಕೆ ಪ್ರತಿ ವರ್ಷದಲ್ಲಿಯೂ ನಮ್ಮ ಭೂಮಿಯ ಫಲಗಳಿಂದ ಪ್ರಥಮ ಫಲಗಳನ್ನು ತರುವುದಕ್ಕೂ, \pm \v 36 ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ನಮ್ಮ ಪುತ್ರರಲ್ಲಿಯೂ, ನಮ್ಮ ಪಶುಗಳಲ್ಲಿಯೂ ಚೊಚ್ಚಲಾದವುಗಳನ್ನು; ನಮ್ಮ ದನಗಳಲ್ಲಿಯೂ, ಮಂದೆಗಳಲ್ಲಿಯೂ ಚೊಚ್ಚಲಾದವುಗಳನ್ನು, ನಮ್ಮ ದೇವರ ಆಲಯಕ್ಕೆ ತಂದು, ನಮ್ಮ ದೇವರ ಆಲಯದಲ್ಲಿ ಸೇವಿಸುವ ಯಾಜಕರಿಗೆ ಕೊಡುತ್ತೇವೆ; \pm \v 37 ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನು ನಮ್ಮ ಕಾಣಿಕೆಗಳನ್ನೂ, ಸಕಲ ಮರಗಳ ಫಲವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ಲೇವಿಯರು ಒಕ್ಕಲುತನವಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವುದಕ್ಕೂ ಪ್ರಮಾಣ ಮಾಡಿದೆವು. \v 38 ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು. \v 39 ಏಕೆಂದರೆ ಪರಿಶುದ್ಧ ಸ್ಥಾನದ ಸಲಕರಣೆಗಳೂ, ಸೇವೆ ಮಾಡುವ ಯಾಜಕರೂ, ದ್ವಾರಪಾಲಕರೂ, ಹಾಡುಗಾರರೂ ಇರುವ ಕೊಟ್ಟಡಿಗಳಿಗೆ ಇಸ್ರಾಯೇಲರೂ, ಲೇವಿಯರ ಮಕ್ಕಳೂ, ಕಾಣಿಕೆಯಾದ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ತರಬೇಕು. \pm “ನಾವು ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯಮಾಡುವುದಿಲ್ಲ,” ಎಂದು ಬರೆದುಕೊಟ್ಟರು. \c 11 \s1 ಯೆರೂಸಲೇಮಿನಲ್ಲಿ ಹೊಸದಾಗಿ ವಾಸಿಸುತ್ತಿದ್ದವರ ಪಟ್ಟಿ \p \v 1 ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು. \v 2 ಆಗ ಜನರು ಯೆರೂಸಲೇಮಿನಲ್ಲಿ ವಾಸವಾಗಿರಲು, ಸಮ್ಮತಿಪಟ್ಟವರೆಲ್ಲರನ್ನು ಆಶೀರ್ವದಿಸಿದರು. \b \li4 \v 3 ಯೆರೂಸಲೇಮಿನಲ್ಲಿ ವಾಸವಾಗಿದ್ದ ಸಂಸ್ಥಾನಪ್ರಧಾನರು ಯಾರೆಂದರೆ: ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರೂ, ಸೊಲೊಮೋನನ ಸೇವಕರ ಮಕ್ಕಳೂ, ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು. \v 4 ಯೆರೂಸಲೇಮಿನಲ್ಲಿ ಯೆಹೂದ ಮಕ್ಕಳಲ್ಲಿಯೂ, ಬೆನ್ಯಾಮೀನ್ಯರಲ್ಲಿಯೂ ಕೆಲವರು ವಾಸವಾಗಿದ್ದರು. \b \li1 ಯೆಹೂದನ ವಂಶಜರಲ್ಲಿ: \li2 ಒಬ್ಬನು ಅತಾಯನು, ಇವನು ಉಜ್ಜೀಯನ ಮಗ, ಜೆಕರ್ಯನ ಮಗ, ಅಮರ್ಯನ ಮಗ, ಶೆಫಟ್ಯನ ಮಗ, ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು. \li2 \v 5 ಇನ್ನೊಬ್ಬನು ಬಾರೂಕನ ಮಗ ಮಾಸೇಯ. ಇವನು ಕೊಲ್ಹೋಜೆಯ ಮಗ, ಇವನು ಹಜಾಯನ ಮಗ, ಇವನು ಅದಾಯನ ಮಗ, ಇವನು ಯೋಯಾರೀಬನ ಮಗ, ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು. \li2 \v 6 ಯೆರೂಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಪುತ್ರರೆಲ್ಲಾ 468 ಮಂದಿ. ಇವರು ಪರಾಕ್ರಮಶಾಲಿಗಳು. \li1 \v 7 ಬೆನ್ಯಾಮೀನನ ವಂಶಜರು: \li2 ಸಲ್ಲು, ಇವನು ಮೆಷುಲ್ಲಾಮನ ಮಗ, ಯೆಶಾಯನ ಮಗ, ಇಥಿಯೇಲನ ಮಗ, ಮಾಸೇಯನ ಮಗ, ಕೊಲಾಯನ ಮಗ, ಪೆದಾಯನ ಮಗ, ಯೊವೇದನ ಮಗ, \v 8 ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಮಂದಿ 928. \li2 \v 9 ಜಿಕ್ರಿಯ ಮಗ, ಯೋಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನುವಾಹನ ಮಗ ಯೆಹೂದನು ಪಟ್ಟಣದ ಹೊಸ ಭಾಗದ ಮೇಲೆ ಮೇಲ್ವಿಚಾರಕನಾಗಿದ್ದನು. \li1 \v 10 ಯಾಜಕರಲ್ಲಿ ಯಾರೆಂದರೆ: \li2 ಯೋಯಾರೀಬನ ಮಗ ಯೆದಾಯನು, ಯಾಕೀನನು. \li2 \v 11 ಅಹೀಟೂಬನ ಮಗ, ಮೆರಾಯೋತನ ಮಗ, ಚಾದೋಕನ ಮಗ, ಮೆಷುಲ್ಲಾಮನ ಮಗ, ಹಿಲ್ಕೀಯನ ಮಗ ಸೆರಾಯನು ದೇವರ ಆಲಯದ ನಾಯಕನಾಗಿದ್ದನು. \v 12 ದೇವಾಲಯದ ಕೆಲಸವನ್ನು ನಡೆಸುವ ಅವರ ಸಹೋದರರು 822 ಮಂದಿ ಇದ್ದರು. \li2 ಮಲ್ಕೀಯನ ಮಗ, ಪಷ್ಹೂರನ ಮಗ, ಜೆಕರ್ಯನ ಮಗ, ಅಮ್ಚೀಯ ಮಗ, ಪೆಲಲ್ಯನ ಮಗ, ಯೆರೋಹಾಮನ ಮಗ ಅದಾಯನೂ. \v 13 ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ 242 ಮಂದಿಯಾಗಿದ್ದರು. \li2 ಇಮ್ಮೇರನ ಮಗ ಮೆಷಿಲ್ಲೇಮೋತನ ಮಗ, ಅಹಜೈಯ ಮಗ, ಅಜರಯೇಲನ ಮಗ ಅಮಾಷಸಾಯಿ. \v 14 ಪರಾಕ್ರಮಶಾಲಿಗಳಾಗಿದ್ದ ಅವರ ಸಹೋದರರು 128 ಮಂದಿ ಇದ್ದರು. \li2 ಹಗ್ಗೆದೋಲೀಮನ ಮಗನಾದ ಜಬ್ದಿಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. \li1 \v 15 ಲೇವಿಯರಲ್ಲಿ ಯಾರೆಂದರೆ: \li2 ಬುನ್ನಿಯ ಮಗ, ಹಷಬ್ಯನ ಮಗ, ಅಜ್ರೀಕಾಮನ ಮಗ, ಹಷ್ಷೂಬನ ಮಗ ಶೆಮಾಯನು. \li2 \v 16 ಲೇವಿಯರ ಮುಖ್ಯಸ್ಥರಲ್ಲಿ ಶಬ್ಬೆತೈನೂ, ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು. \li2 \v 17 ಇದಲ್ಲದೆ ಆಸಾಫನ ಮಗ ಜಬ್ದೀಯ ಮಗ, ಮೀಕನ ಮಗ ಮತ್ತನ್ಯನು ಪ್ರಾರ್ಥನೆಯನ್ನು ಮತ್ತು ಕೃತಜ್ಞತಾಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. \li2 ಅವನ ಸಂಗಡಿಗರಲ್ಲಿ ಎರಡನೆಯವನು ಬಕ್ಬುಕ್ಯನು, \li2 ಅವನ ಸಂಗಡ ಯೆದುತೂನನ ಮಗ, ಗಲಾಲನ ಮಗ, ಶಮ್ಮೂವನ ಮಗ ಅಬ್ದನು. \li2 \v 18 ಪರಿಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ 284 ಮಂದಿಯಾಗಿದ್ದರು. \li1 \v 19 ದ್ವಾರಪಾಲಕರು: \li2 ಅಕ್ಕೂಬನೂ, ಟಲ್ಮೋನನೂ ಬಾಗಿಲುಗಳನ್ನು ಕಾಯುವವರಾದ ಅವರ ಸಂಗಡಿಗರೂ 172 ಮಂದಿಯಾಗಿದ್ದರು. \b \p \v 20 ಇಸ್ರಾಯೇಲರ ಮಿಕ್ಕಾದ ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವಾಧೀನವಾಗಿದ್ದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು. \p \v 21 ಆದರೆ ದೇವಾಲಯದ ಸೇವಕರು ಓಫೇಲ್ ಗುಡ್ಡದಲ್ಲಿ ವಾಸವಾಗಿದ್ದರು. ಜೀಹನೂ, ಗಿಷ್ಪನೂ ಅವರ ನಾಯಕರು. \p \v 22 ಮೀಕನ ಮಗ, ಮತ್ತನ್ಯನ ಮಗ, ಹಷಬ್ಯನ ಮಗ, ಬಾನೀಯ ಮಗ ಉಜ್ಜೀಯು ಯೆರೂಸಲೇಮಿನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು. ಆಸಾಫನ ವಂಶದಲ್ಲಿರುವ ಹಾಡುಗಾರನಾದ ಉಜ್ಜೀಯನು ದೇವರ ಆಲಯ ಕಾರ್ಯದ ಮೇಲೆ ಅಧಿಕಾರಿಯಾಗಿದ್ದನು. \v 23 ಏಕೆಂದರೆ ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು. \p \v 24 ಯೆಹೂದನ ಮಗ ಜೆರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಪ್ರತಿನಿಧಿಯಾಗಿದ್ದನು. \p \v 25 ಗ್ರಾಮಗಳಲ್ಲಿಯೂ, ಅವುಗಳ ಹೊಲಗಳಲ್ಲಿಯೂ ಇದ್ದವರು ಯಾರೆಂದರೆ: ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತ್ ಅರ್ಬ, ಅದರ ಗ್ರಾಮಗಳಲ್ಲಿಯೂ, ದೀಬೋನ್, ಅದರ ಗ್ರಾಮಗಳಲ್ಲಿಯೂ, ಯೆಕಬ್ಜೆಯೇಲ್, ಅದರ ಗ್ರಾಮಗಳಲ್ಲಿಯೂ, \v 26 ಯೇಷೂವ ಎಂಬ ಗ್ರಾಮದಲ್ಲಿಯೂ, ಮೋಲಾದ ಗ್ರಾಮದಲ್ಲಿಯೂ, ಬೇತ್ ಪೆಲೆಟ್ ಗ್ರಾಮದಲ್ಲಿಯೂ, \v 27 ಹಚರ್ ಷೂವಾಲ್ ಗ್ರಾಮದಲ್ಲಿಯೂ, ಬೇರ್ಷೆಬ ಮತ್ತು ಅವುಗಳ ಗ್ರಾಮಗಳಲ್ಲಿಯೂ \v 28 ಚಿಕ್ಲಗ್, ಮೆಕೋನ ಮತ್ತು ಅವುಗಳ ಗ್ರಾಮಗಳಲ್ಲಿಯೂ, \v 29 ಏನ್ರಿಮ್ಮೋನ್, ಚೊರ್ಗಾ, ಯರ್ಮೂತ್ ಎಂಬ ಗ್ರಾಮಗಳಲ್ಲಿಯೂ, \v 30 ಜಾನೋಹ, ಅದುಲ್ಲಾಮ್ ಮತ್ತು ಇವುಗಳ ಗ್ರಾಮಗಳೂ ಲಾಕೀಷ್ ಊರೂ ಇದರ ಪ್ರಾಂತಗಳೂ ಅಜೇಕವೂ ಅದರ ಗ್ರಾಮಗಳೂ ಯೆಹೂದದವರ ನಿವಾಸಸ್ಥಾನಗಳು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮ್ ತಗ್ಗಿನವರೆಗೂ ವಾಸವಾಗಿದ್ದರು. \p \v 31 ಇದಲ್ಲದೆ ಬೆನ್ಯಾಮೀನ್ಯರು ಗೆಬ ಮೊದಲುಗೊಂಡು ಮಿಕ್ಮಾಷಿನವರೆಗೂ ವಾಸವಾಗಿದ್ದರು. ಅಯ್ಯಾ, ಬೇತೇಲ್ ಇವುಗಳ ಗ್ರಾಮಗಳೂ, \v 32 ಅನಾತೋತ್, ನೋಬ್, ಅನನ್ಯ, \v 33 ಹಾಚೋರ್, ರಾಮಾ, ಗಿತ್ತಯಿಮ್, \v 34 ಹಾದೀದ್, ಚೆಬೋಯಿಮ್, ನೆಬಲ್ಲಾಟ್, \v 35 ಲೋದ್, ಓನೋ ಮತ್ತು ಗೇಹರಾಷೀಮ್ ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು. \p \v 36 ಯೆಹೂದದ ಲೇವಿಯರ ಕೆಲವು ವರ್ಗಗಳವರು ಬೆನ್ಯಾಮೀನಿನಲ್ಲಿಯೂ ವಾಸಿಸುತ್ತಿದ್ದರು. \c 12 \s1 ಯಾಜಕರು ಮತ್ತು ಲೇವಿಯರು \li4 \v 1 ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನ ಮತ್ತು ಯೇಷೂವನ ಸಂಗಡ ಹೋದ ಯಾಜಕರೂ ಲೇವಿಯರೂ ಯಾರೆಂದರೆ: \b \li1 ಸೆರಾಯ, ಯೆರೆಮೀಯ, ಎಜ್ರ, \li1 \v 2 ಅಮರ್ಯ, ಮಲ್ಲೂಕ್, ಹಟ್ಟೂಷ್, \li1 \v 3 ಶೆಕನ್ಯ, ರೆಹೂಮ್, ಮೆರೇಮೋತ್, \li1 \v 4 ಇದ್ದೋ, ಗಿನ್ನೆತೋನ್\f + \fr 12:4 \fr*\fq ಗಿನ್ನೆತೋನ್ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಗಿನ್ನೆತೋಯ್\fqa*\f*, ಅಬೀಯ, \li1 \v 5 ಮಿಯಾಮಿನ್, ಮಾದ್ಯ, ಬಿಲ್ಗ, \li1 \v 6 ಶೆಮಾಯ, ಯೋಯಾರೀಬ್, ಯೆದಾಯ, \li1 \v 7 ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. \b \li4 ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ, ಅವರ ಸಂಗಡಿಗರಲ್ಲಿಯೂ ಮುಖ್ಯಸ್ಥರಾಗಿದ್ದರು. \b \p \v 8 ಲೇವಿಯರು ಯಾರೆಂದರೆ: ಯೇಷೂವ, ಬಿನ್ನೂಯ್, ಕದ್ಮಿಯೇಲ್, ಶೇರೇಬ್ಯ, ಯೆಹೂದ, ಕೃತಜ್ಞತೆಯ ಹಾಡುಗಳ ಜವಾಬ್ದಾರನಾಗಿದ್ದ ಮತ್ತನ್ಯನೂ, ಅವನ ಸಂಗಡಿಗರು. \v 9 ಇದಲ್ಲದೆ ಅವರ ಸಹೋದರರಾದ ಬಕ್ಬುಕ್ಯ, ಉನ್ನೀ ವರ್ಗಗಳಲ್ಲಿ ಅವರಿಗೆ ಎದುರುಗಡೆ ನಿಂತು ಹಾಡುತ್ತಿದ್ದರು. \b \li1 \v 10 ಇದಲ್ಲದೆ ಯೇಷೂವನು ಯೋಯಾಕೀಮನ ತಂದೆ, \li1 ಯೋಯಾಕೀಮನು ಎಲ್ಯಷೀಬನನ್ನು ಪಡೆದನು; \li1 ಎಲ್ಯಾಷೀಬನು ಯೋಯಾದನನ್ನು ಪಡೆದನು; \li1 \v 11 ಯೋಯಾದಾವನು ಯೋನಾತಾನನನ್ನು ಪಡೆದನು; \li1 ಯೋನಾತಾನನು ಯದ್ದೂವನನ್ನು ಪಡೆದನು. \b \b \li4 \v 12 ಯೋಯಾಕೀಮನ ಕಾಲದಲ್ಲಿ ಅವನ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದ ಯಾಜಕರು ಯಾರೆಂದರೆ: \b \li1 ಸೆರಾಯನ ವಂಶದವನಾದ ಮೆರಾಯನು, \li1 ಯೆರೆಮೀಯನ ವಂಶದವನಾದ ಹನನ್ಯಯನು, \li1 \v 13 ಎಜ್ರನ ವಂಶದವನಾದ ಮೆಷುಲ್ಲಾಮನು, \li1 ಅಮರ್ಯನ ವಂಶದವನಾದ ಯೆಹೋಹಾನಾನನು, \li1 \v 14 ಮಲ್ಲೂಕಿಯ ವಂಶದವನಾದ ಯೋನಾತಾನನು, \li1 ಶೆಬನ್ಯನ ವಂಶದವನಾದ ಯೋಸೇಫನು, \li1 \v 15 ಹಾರಿಮನ ವಂಶದವನಾದ ಅದ್ನನು, \li1 ಮೆರಾಯೋತನ ವಂಶದವನಾದ ಹೆಲ್ಕಾಯನು, \li1 \v 16 ಇದ್ದೋವಿನ ವಂಶದವನಾದ ಜೆಕರ್ಯನು, \li1 ಗಿನ್ನೆತೋನನ ವಂಶದವನಾದ ಮೆಷುಲ್ಲಾಮನು, \li1 \v 17 ಅಬೀಯನ ವಂಶದವನಾದ ಜಿಕ್ರಿಯು, \li1 ಮಿನ್ಯಾಮೀನನ, ಮೋವಾದ್ಯನ ವಂಶದವನಾದ ಪಿಲ್ಟೈ, \li1 \v 18 ಬಿಲ್ಗನ ವಂಶದವನಾದ ಶಮ್ಮೂವನು, \li1 ಶೆಮಾಯನ ವಂಶದವನಾದ ಯೆಹೋನಾತಾನನು, \li1 \v 19 ಯೋಯಾರೀಬನ ವಂಶದವನಾದ ಮತ್ತೆನೈ, \li1 ಯೆದಾಯನ ವಂಶದವನಾದ ಉಜ್ಜೀ, \li1 \v 20 ಸಲ್ಲೂ ವಂಶದವನಾದ ಕಲ್ಲಾಯನು, \li1 ಆಮೋಕನ ವಂಶದವನಾದ ಏಬೆರನು, \li1 \v 21 ಹಿಲ್ಕೀಯನ ವಂಶದವನಾದ ಹಷಬ್ಯನು, \li1 ಯೆದಾಯನ ವಂಶದವನಾದ ನೆತನೆಯೇಲನು. \b \p \v 22 ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ, ಇವರ ದಿವಸಗಳಲ್ಲಿ ಲೇವಿಯರೂ, ಯಾಜಕರೂ, ಪಾರಸಿಯನಾದ ದಾರ್ಯಾವೆಷನ ಆಳಿಕೆಯವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆಯಲಾಗಿದೆ. \v 23 ಎಲ್ಯಾಷೀಬನ ಮಗನಾದ ಯೋಹಾನಾನನ ಕಾಲದವರೆಗೆ ಲೇವಿ ಎಂಬವನ ಪುತ್ರರಾದ ಪಿತೃಗಳ ಮುಖ್ಯಸ್ಥರು ಇತಿಹಾಸ ಗ್ರಂಥದಲ್ಲಿ ಬರೆದಿರುತ್ತದೆ. \v 24 ಲೇವಿಯರ ಮುಖ್ಯಸ್ಥರಾದ ಹಷಬ್ಯನೂ, ಶೇರೇಬ್ಯನೂ; ಕದ್ಮಿಯೇಲನ ಮಗನಾದ ಯೇಷೂವನೂ, ಅವರಿಗೆ ಎದುರಾದ ತಂಡವಾಗಿ ನಿಂತ ಅವರ ಸಹೋದರರೂ, ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಕೃತಜ್ಞತಾಸ್ತುತಿ ಮಾಡುವುದಕ್ಕೆ ವರ್ಗ ವರ್ಗಗಳಾಗಿದ್ದರು. \p \v 25 ಮತ್ತನ್ಯನೂ, ಬಕ್ಬುಕ್ಯನೂ, ಓಬದ್ಯನೂ, ಮೆಷುಲ್ಲಾಮನೂ, ಟಲ್ಮೋನನೂ, ಅಕ್ಕೂಬನೂ ಬೊಕ್ಕಸಗಳ ಬಾಗಿಲುಗಳನ್ನು ಕಾಯುವವರಾಗಿದ್ದರು. \v 26 ಯೋಚಾದಾಕನ ಮಗ ಯೇಷೂವನ ಮಗ ಯೋಯಾಕೀಮನ ದಿವಸಗಳಲ್ಲಿಯೂ; ರಾಜ್ಯಪಾಲನಾದ ನೆಹೆಮೀಯನ ದಿವಸಗಳಲ್ಲಿಯೂ; ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು. \s1 ಯೆರೂಸಲೇಮಿನ ಗೋಡೆಯ ಪ್ರತಿಷ್ಠೆ \p \v 27 ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ, ಹಾಡುವುದರಿಂದಲೂ, ತಾಳಗಳಿಂದಲೂ, ವೀಣೆಗಳಿಂದಲೂ, ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವುದಕ್ಕೆ ಲೇವಿಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು. \v 28 ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿರುವ ಬಯಲಿನಿಂದಲೂ, ನೆಟೋಫಾತ್ಯರ ಗ್ರಾಮಗಳಿಂದಲೂ, \v 29 ಬೇತ್ ಗಿಲ್ಗಾಲ್ ಊರಿಂದಲೂ, ಗೆಬದ ಅಜ್ಮಾವೆತಿನ ಹೊಲಗಳಿಂದಲೂ ಕೂಡಿಕೊಂಡರು. ಹಾಡುಗಾರರು ತಮಗೋಸ್ಕರ ಯೆರೂಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿದ್ದರು. \v 30 ಯಾಜಕರೂ, ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ, ಬಾಗಿಲುಗಳನ್ನೂ, ಗೋಡೆಯನ್ನೂ ಶುದ್ಧ ಮಾಡಿದರು. \p \v 31 ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ, ಸ್ತುತಿಸಲು ಎರಡು ಗುಂಪುಗಳನ್ನು ನೇಮಿಸಿದೆನು. ಒಂದು ಗುಂಪಿನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಿಲ ಕಡೆಗೆ ಹೋದರು. \v 32 ಅವರ ಹಿಂಭಾಗದಲ್ಲಿ ಹೋಷಾಯನೂ, ಯೆಹೂದದ ಪ್ರಧಾನರಲ್ಲಿ ಅರ್ಧ ಜನರೂ, \v 33 ಅಜರ್ಯನೂ, ಎಜ್ರನೂ, ಮೆಷುಲ್ಲಾಮನೂ, \v 34 ಯೆಹೂದನೂ, ಬೆನ್ಯಾಮೀನನೂ, ಶೆಮಾಯನೂ, ಯೆರೆಮೀಯನೂ; \v 35 ತುತೂರಿಗಳನ್ನು ಹಿಡಿಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗ ಜಕ್ಕೂರನ ಮಗ, ಮೀಕಾಯನ ಮಗ, ಮತ್ತನ್ಯನ ಮಗ, ಶೆಮಾಯನ ಮಗ, ಯೋನಾತಾನನ ಮಗ ಜೆಕರ್ಯನೂ, \v 36 ದೇವರ ಮನುಷ್ಯನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರೀಯನ ಸಹೋದರರಾದ ಶೆಮಾಯ, ಅಜರಯೇಲ್, ಮಿಲಲೈ, ಗಿಲಲೈ, ಮಾಯೈ, ನೆತನೆಯೇಲ್, ಯೆಹೂದ, ಹನಾನೀ ಎಂಬವರು ನಡೆದರು; ನಿಯಮಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು. \v 37 ತಮಗೆ ಎದುರಾದ ಬುಗ್ಗೆಯ ಬಾಗಿಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಿಲುಗಳಿಂದ ದಾವೀದನ ಅರಮನೆಯ ಮೇಲೆ ಪೂರ್ವದ ಕಡೆಗಿರುವ ನೀರಿನ ಬಾಗಿಲಿಗೆ ಹೋದರು. \p \v 38 ಸ್ತುತಿಸುವ ಮತ್ತೊಂದು ಭಜನಾ ಮಂಡಳಿ ಅವರಿಗೆದುರಾಗಿ ನಡೆದರು. ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು, ಅಗಲವಾದ ಗೋಡೆಯನ್ನು, \v 39 ಎಫ್ರಾಯೀಮ್ ಬಾಗಿಲ ಮೇಲೆಯೂ, ಯೆಷಾನಾ ಬಾಗಿಲ ಮೇಲೆಯೂ, ಮೀನು ಬಾಗಿಲ ಮೇಲೆಯೂ ಹಾದು, ಹನನೇಲ್ ಗೋಪುರವನ್ನೂ, ಶತ ಗೋಪುರವನ್ನೂ ದಾಟಿ, ಕುರಿ ಬಾಗಿಲವರೆಗೆ ಬಂದು ಸೆರೆಮನೆಯ ಬಾಗಿಲ ಬಳಿಯಲ್ಲಿ ನಿಂತರು. \p \v 40 ಸ್ತುತಿ ಮಾಡುವ ಎರಡು ಗುಂಪುಗಳೂ, ನಾನೂ, ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಿಗಳೂ ದೇವರ ಆಲಯದಲ್ಲಿ ನಿಂತಿದ್ದೆವು. \v 41 ಆಗ ಯಾಜಕರಾದ ಎಲ್ಯಾಕೀಮನೂ, ಮಾಸೇಯನೂ, ಮಿನ್ಯಾಮೀನನೂ, ಮೀಕಾಯನೂ, ಎಲ್ಯೋವೇನೈನೂ, ಜೆಕರ್ಯನೂ, ಹನನ್ಯನೂ, ತುತೂರಿಗಳನ್ನು ಹಿಡಿದುಕೊಂಡವರೂ; \v 42 ಮಾಸೇಯನೂ, ಶೆಮಾಯನೂ, ಎಲಿಯಾಜರನೂ, ಉಜ್ಜೀಯೂ, ಯೆಹೋಹಾನಾನನೂ, ಮಲ್ಕೀಯನೂ, ಏಲಾಮನೂ, ಏಜೆರನೂ, ತಮ್ಮ ಮೇಲ್ವಿಚಾರಕನಾದ ಯೆಜ್ರಾಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು. \v 43 ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು. \p \v 44 ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು. \v 45 ಇದಲ್ಲದೆ ದಾವೀದನೂ, ಅವನ ಮಗನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ, ದ್ವಾರಪಾಲಕರೂ ತಮ್ಮ ದೇವರ ಕಾವಲನ್ನೂ, ಶುದ್ಧೀಕರಣದ ಕಾವಲನ್ನೂ ಕಾಯುತ್ತಿದ್ದರು. \v 46 ಏಕೆಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿಯೇ ದೇವರಿಗೆ ಸ್ತೋತ್ರವನ್ನೂ, ಕೃತಜ್ಞತೆಯನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಿದ್ದರು. \v 47 ಆದ್ದರಿಂದ ಜೆರುಬ್ಬಾಬೆಲನ ದಿವಸಗಳಲ್ಲಿಯೂ, ನೆಹೆಮೀಯನ ದಿವಸಗಳಲ್ಲಿಯೂ ಇಸ್ರಾಯೇಲರೆಲ್ಲರು ಹಾಡುಗಾರರಿಗೂ, ದ್ವಾರಪಾಲಕರಿಗೂ, ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಇತರ ಲೇವಿಯರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು ಮತ್ತು ಲೇವಿಯರು ಆರೋನನ ವಂಶಸ್ಥರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು. \c 13 \s1 ನೆಹೆಮೀಯನ ಕೊನೆಯ ಸುಧಾರಣೆಗಳು \p \v 1 ಅದೇ ದಿವಸದಲ್ಲಿ ಜನರು ಕೇಳುವಂತೆ ಮೋಶೆಯ ನಿಯಮ ಗ್ರಂಥವನ್ನು ಗಟ್ಟಿಯಾಗಿ ಓದುವಾಗ, “ಅಮ್ಮೋನಿಯರೂ, ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದು,” ಎಂದು ಅದರಲ್ಲಿ ಬರೆದದ್ದು ಸಿಕ್ಕಿತು. \v 2 ಏಕೆಂದರೆ ಅವರು ಅನ್ನಪಾನಗಳೊಡನೆ ಇಸ್ರಾಯೇಲರನ್ನು ಎದುರುಗೊಳ್ಳಲಿಲ್ಲ. ಅವರು ಇಸ್ರಾಯೇಲರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಕರೆಸಿದ್ದರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದರು. \v 3 ಆಗ ಜನರು ದೇವರ ನಿಯಮವನ್ನು ಕೇಳಿದಾಗ, ಇಸ್ರಾಯೇಲರೊಳಗಿಂದ ವಿದೇಶಿ ಜನರನ್ನು ಪ್ರತ್ಯೇಕಿಸಿದರು. \p \v 4 ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ವಿಚಾರಕನಾಗಿದ್ದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಮೀಪ ಬಂಧುವಾಗಿದ್ದನು. \v 5 ಲೇವಿಯರಿಗೂ, ಹಾಡುಗಾರರಿಗೂ, ದ್ವಾರಪಾಲಕರಿಗೂ ನೇಮಕವಾದ ಕಾಣಿಕೆಗಳನ್ನೂ, ಧೂಪವನ್ನೂ, ಸಾಮಗ್ರಿಗಳನ್ನೂ, ಧಾನ್ಯದ ಹತ್ತನೆಯ ಪಾಲುಗಳನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇಡುತ್ತಿದ್ದ ದೊಡ್ಡ ಕೊಠಡಿಯನ್ನು ಎಲ್ಯಾಷೀಬನು ಟೋಬೀಯನಿಗೋಸ್ಕರ ಸಿದ್ಧ ಮಾಡಿಕೊಟ್ಟಿದ್ದನು. \p \v 6 ಆದರೆ ಇವೆಲ್ಲಾ ಸಂಭವಿಸುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆ. ತರುವಾಯ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು, \v 7 ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನಾನು ಕಂಡಾಗ, ಅದು ನನಗೆ ಬಹಳ ವ್ಯಸನಕರವಾಯಿತು. \v 8 ಆ ಕೊಠಡಿಯೊಳಗಿಂದ ಟೋಬೀಯನ ವಸ್ತುಗಳನ್ನೆಲ್ಲಾ ಹೊರಗೆ ಹಾಕಿಸಿದೆನು. \v 9 ಆಗ ನಾನು ಹೇಳಿದ್ದರಿಂದ ಅವರು ಕೊಠಡಿಗಳನ್ನು ಶುದ್ಧ ಮಾಡಿದರು. ತರುವಾಯ ದೇವರ ಆಲಯದ ಪಾತ್ರೆಗಳನ್ನೂ ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತಿರುಗಿ ಅಲ್ಲಿ ತಂದು ಇಡಿಸಿದೆನು. \p \v 10 ಲೇವಿಯರ ಪಾಲನ್ನು ಅವರಿಗೆ ಕೊಡಲಿಲ್ಲವೆಂದು ನನಗೆ ತಿಳಿಯಿತು. ಸೇವೆಯನ್ನು ಮಾಡುವ ಲೇವಿಯರೂ, ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿ ಹೋಗುತ್ತಿದ್ದರು. \v 11 ಆಗ ನಾನು ಅಧಿಕಾರಿಗಳನ್ನು ಗದರಿಸಿ ಅವರಿಗೆ, “ದೇವರ ಮಂದಿರವನ್ನು ಅಲಕ್ಷ್ಯಮಾಡಿದ್ದೇಕೆ?” ಎಂದು ವಾದಿಸಿದೆನು. ಬಿಟ್ಟುಹೋದವರನ್ನು ತಿರಿಗಿ ಕರೆಯಿಸಿ, ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು. \p \v 12 ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ ಎಣ್ಣೆ ಇವುಗಳಲ್ಲಿ ಹತ್ತರಲ್ಲೊಂದು ಪಾಲನ್ನು ಕೊಠಡಿಗಳಲ್ಲಿ ತಂದರು. \v 13 ಆಗ ನಾನು ಯಾಜಕನಾದ ಶೆಲೆಮ್ಯನನ್ನೂ, ಲೇಖಕನಾದ ಚಾದೋಕನನ್ನೂ, ಲೇವಿಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗ ಹಾನಾನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು. ಅವರು ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಹಂಚಿ ಕೊಡುವುದು ಅವರ ಕೆಲಸವಾಗಿತ್ತು. \b \p \v 14 ನನ್ನ ದೇವರೇ, ಇದಕ್ಕಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ. ನಾನು ನನ್ನ ದೇವರ ಆಲಯಕ್ಕೋಸ್ಕರವೂ, ಅದರ ಸೇವೆಗೋಸ್ಕರವೂ ನಂಬಿಗಸ್ತಿಕೆಯಿಂದ ಮಾಡಿದ ಭಕ್ತಿಕಾರ್ಯಗಳನ್ನು ಅಳಿಸಿಬಿಡಬೇಡಿರಿ. \b \p \v 15 ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು. \v 16 ಇದಲ್ಲದೆ ಮೀನುಗಳನ್ನೂ, ಎಲ್ಲಾ ಸರಕುಗಳನ್ನೂ ತೆಗೆದುಕೊಂಡು ಬಂದು ಸಬ್ಬತ್ ದಿನದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ಟೈರಿನವರು ಯೆರೂಸಲೇಮಿನಲ್ಲಿ ವಾಸವಾಗಿದ್ದರು. \v 17 ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ ಅವರಿಗೆ, “ಸಬ್ಬತ್ ದಿನವನ್ನು ನೀವು ಅಪವಿತ್ರ ಮಾಡುವ ಈ ಕೆಟ್ಟ ಕಾರ್ಯವೇನು? \v 18 ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ, ನಮ್ಮ ದೇವರು ನಮ್ಮ ಮೇಲೆಯೂ, ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲಿಲ್ಲವೋ? ಆದರೆ ನೀವು ಸಬ್ಬತ್ ದಿನವನ್ನು ಅಪವಿತ್ರ ಮಾಡುವುದರಿಂದ ಇಸ್ರಾಯೇಲಿನ ಮೇಲೆ ಇನ್ನೂ ದೇವರ ಕೋಪವನ್ನು ಬರಮಾಡುವಿರಿ.” \p \v 19 ಸಬ್ಬತ್ ದಿನಕ್ಕೆ ಮುಂಚೆ ಯೆರೂಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗಲಾರಂಭಿಸಿದಾಗ ಬಾಗಿಲುಗಳನ್ನು ಹಾಕುವ ಹಾಗೆಯೂ, ಸಬ್ಬತ್ ದಿನವು ತೀರುವವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಸಬ್ಬತ್ ದಿನದಲ್ಲಿ ಹೊರೆ ಏನಾದರೂ ಒಳಗೆ ತರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಇಟ್ಟೆನು. \v 20 ಆಗ ವರ್ತಕರೂ, ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು. \v 21 ಆಗ ನಾನು ಅವರನ್ನು ಗದರಿಸಿ ಅವರಿಗೆ, “ನೀವು ಕೋಟೆಯ ಗೋಡೆಯ ಹೊರಗೆ ಏಕೆ ಇಳುಕೊಂಡಿದ್ದೀರಿ? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮನ್ನು ಸೆರೆಗೆ ಹಾಕುವೆನು,” ಎಂದೆನು. ಆ ದಿನದಿಂದ ಅವರು ಸಬ್ಬತ್ ದಿನದಲ್ಲಿ ಬರಲೇ ಇಲ್ಲ. \v 22 ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಂಡು ಬಂದು ಸಬ್ಬತ್ ದಿನವನ್ನು ಪರಿಶುದ್ಧವಾಗಿ ಆಚರಿಸಬೇಕೆಂದೂ, ಬಾಗಿಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. \b \p ನನ್ನ ದೇವರೇ, ಇದಕ್ಕಾಗಿ ಸಹ ನೀವು ನನ್ನನ್ನು ನೆನಸಿ, ನಿಮ್ಮ ಮಹಾ ಪ್ರೀತಿಯ ಪ್ರಕಾರ ನನ್ನನ್ನು ಕರುಣಿಸಿರಿ. \b \p \v 23 ಆ ದಿನಗಳಲ್ಲಿ ಅಮ್ಮೋನ್, ಮೋವಾಬ್, ಅಷ್ಡೋದ್ ಎಂಬ ದೇಶಗಳ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕಂಡೆನು. \v 24 ಇವರ ಮಕ್ಕಳು ಅರ್ಧಮಂದಿ ಯೆಹೂದ್ಯರ ಭಾಷೆಯಲ್ಲಿ ಮಾತಾಡಲು ತಿಳಿಯದೆ, ಅಷ್ಡೋದ್ಯರ ಮತ್ತು ಬೇರೆ ಭಾಷೆಯನ್ನಾಡುತ್ತಾರೆ ಎಂದು ತಿಳಿಯಿತು. \v 25 ಆಗ ನಾನು ಅವರನ್ನು ಗದರಿಸಿ, ಶಪಿಸಿ, ಅವರಲ್ಲಿ ಕೆಲವರನ್ನು ಹೊಡೆದು, ಅವರ ಕೂದಲನ್ನು ಕಿತ್ತು, “ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೂ, ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೂ, ಮದುವೆಮಾಡಿಕೊಡಬೇಡಿರಿ, ಎಂದು ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣಮಾಡಿಸಿದೆನು. \v 26 ಇಸ್ರಾಯೇಲಿನ ಅರಸನಾದ ಸೊಲೊಮೋನನು ಇಂತಹ ಮದುವೆಗಳಿಂದ ಪಾಪ ಮಾಡಿದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ, ಅವನು ತನ್ನ ದೇವರಿಗೆ ವಿಶೇಷಪ್ರಿಯನಾಗಿದ್ದನು, ಆದ್ದರಿಂದಲೇ ದೇವರು ಅವನನ್ನು ಎಲ್ಲ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ವಿದೇಶಿ ಸ್ತ್ರೀಯರು ಅವನನ್ನು ಕೂಡ ಪಾಪಮಾಡುವ ಹಾಗೆ ಮಾಡಿದರು. \v 27 ನೀವು ವಿದೇಶಿ ಸ್ತ್ರೀಯರನ್ನು ಮದುವೆಮಾಡಿಕೊಂಡು, ನಮ್ಮ ದೇವರಿಗೆ ಅಪರಾಧಮಾಡಿ, ಅದೇ ಘೋರವಾದ ದುಷ್ಕೃತ್ಯವನ್ನು ಮಾಡಲು ನಾವು ಒಪ್ಪಿಕೊಳ್ಳುವುದಿಲ್ಲ ನಿಮ್ಮ ಮಾತು ಕೇಳಬಹುದೋ?” ಎಂದು ಗದರಿಸಿದೆನು. \p \v 28 ಮಹಾಯಾಜಕನಾದ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲಿ ಒಬ್ಬನು ಹೋರೋನಿನವನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು. \b \p \v 29 ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಒಡಂಬಡಿಕೆಯನ್ನೂ, ಅಶುದ್ಧ ಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿರಿ. \b \p \v 30 ಹೀಗೆಯೇ ನಾನು ಅವರನ್ನು ಇತರ ಜನರಿಂದ ಬಿಡಿಸಿ, ಶುದ್ಧಪಡಿಸಿದೆ. ಯಾಜಕರಿಗೂ, ಲೇವಿಯರಿಗೂ, ಅವರವರ ಕೆಲಸದ ಪ್ರಕಾರ, \v 31 ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. \b \p ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.