\id PHP - Biblica® Open Kannada Contemporary Version \ide UTF-8 \h ಫಿಲಿಪ್ಪಿಯವರಿಗೆ \toc1 ಫಿಲಿಪ್ಪಿಯವರಿಗೆ ಪೌಲನು ಬರೆದ ಪತ್ರಿಕೆ \toc2 ಫಿಲಿಪ್ಪಿಯವರಿಗೆ \toc3 ಫಿಲಿಪ್ಪಿ \mt1 ಫಿಲಿಪ್ಪಿಯವರಿಗೆ \mt2 ಪೌಲನು ಬರೆದ ಪತ್ರಿಕೆ \c 1 \p \v 1 ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, \b \p ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ: \b \p \v 2 ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. \b \s1 ಕೃತಜ್ಞತಾಸ್ತುತಿ ಮತ್ತು ಪ್ರಾರ್ಥನೆ \p \v 3 ನಾನು ನಿಮ್ಮನ್ನು ನೆನೆಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. \v 4 ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಆನಂದದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ. \v 5 ಏಕೆಂದರೆ, ನೀವು ಮೊದಲನೆಯ ದಿನದಿಂದ ಇಂದಿನವರೆಗೂ ಸುವಾರ್ತೆಯಲ್ಲಿ ಸಹಭಾಗಿಗಳಾಗಿದ್ದೀರಿ. \v 6 ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ. \p \v 7 ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ. \v 8 ಕ್ರಿಸ್ತ ಯೇಸುವಿನ ವಾತ್ಸಲ್ಯದಿಂದ ನಿಮ್ಮೆಲ್ಲರಿಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. \p \v 9 ನಿಮ್ಮ ಪ್ರೀತಿಯು ಹೆಚ್ಚುತ್ತಾ ಜ್ಞಾನದಲ್ಲಿಯೂ ಒಳನೋಟದಲ್ಲಿಯೂ ಬಹು ಹೆಚ್ಚಾಗಿ ಸಮೃದ್ಧಿಯಾಗಲಿ. \v 10 ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ \v 11 ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ. \s1 ಪೌಲನ ಸೆರೆಯು ಸುವಾರ್ತೆಯ ಪ್ರಗತಿಯು \p \v 12 ಪ್ರಿಯರೇ, ನನಗೆ ಸಂಭವಿಸಿದ ಸಂಕಟಗಳು ಸುವಾರ್ತೆಯ ಪ್ರಗತಿಗಾಗಿಯೇ ಅನುಕೂಲವಾಯಿತು ಎಂಬುದನ್ನು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ. \v 13 ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ. \v 14 ನಾನು ಸೆರೆಯಲ್ಲಿರುವುದರಿಂದಲೇ ಕರ್ತ ದೇವರಲ್ಲಿರುವ ಅನೇಕ ಸಹೋದರರು ಭಯವಿಲ್ಲದೆಯೂ ಭರವಸೆಯಿಂದಲೂ ಸುವಾರ್ತೆಯ ವಾಕ್ಯವನ್ನು ಮಾತನಾಡುವುದಕ್ಕೆ ಪ್ರೋತ್ಸಾಹ ಹೊಂದಿದ್ದಾರೆ. \p \v 15 ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ. \v 16 ಇವರಾದರೋ, ನಾನು ಸುವಾರ್ತೆಗಾಗಿ ನೇಮಕವಾಗಿದ್ದೇವೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ. \v 17 ಅವರಾದರೋ, ನಾನು ಬೇಡಿಗಳಿಂದ ಸೆರೆಮನೆಯಲ್ಲಿರುವಾಗ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧ ಪಡಿಸದೆ ಪ್ರತಿಸ್ಪರ್ಧೆಗಾಗಿ ಸಾರುತ್ತಾರೆ. \v 18 ಹೇಗಾದರೇನು? ಕಪಟದಿಂದಾಗಲಿ, ಸತ್ಯದಿಂದಾಗಲಿ ಯಾವ ರೀತಿಯಿಂದಾದರೂ ಕ್ರಿಸ್ತನನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ. \p ಹೌದು ಮುಂದೆಯೂ ಸಂತೋಷಿಸುವೆನು. \v 19 ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು. \v 20 ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ. \v 21 ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ, \v 22 ಶರೀರದಲ್ಲಿಯೇ ಬದುಕುವುದು ನನಗೆ ಫಲದಾಯಕವಾದ ಪ್ರಯಾಸವಾಗಿದ್ದರೆ, ನಾನು ಯಾವುದನ್ನು ಆರಿಸಿಕೊಳ್ಳಬೇಕೋ ನನಗೆ ತಿಳಿಯದು. \v 23 ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು. \v 24 ಆದರೂ ನಾನು ಶರೀರದಲ್ಲಿಯೇ ಉಳಿದಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ. \v 25 ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರೊಡನೆ ಇರುವೆನೆಂದು ನಿಶ್ಚಯವಾಗಿ ತಿಳಿದಿದ್ದೇನೆ. \v 26 ಹೀಗೆ ನಾನು ಪುನಃ ನಿಮ್ಮ ಬಳಿಗೆ ಬರುವುದರಿಂದ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಸಂತೋಷವು ನನ್ನ ನಿಮಿತ್ತವಾಗಿ ಅತ್ಯಧಿಕವಾಗಿರುವುದು. \s1 ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳುವುದು \p \v 27 ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು. \v 28 ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಿಯೂ ಅಂಜದೆ ಧೈರ್ಯದಿಂದಿರಿ. ನೀವು ಧೈರ್ಯದಿಂದಿರುವುದು, ಅವರ ವಿನಾಶಕ್ಕೂ, ನಿಮ್ಮ ರಕ್ಷಣೆಗೂ ದೇವರಿಂದಾದ ಸೂಚನೆಯಾಗಿದೆ. \v 29 ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ. \v 30 ನೀವು ನನ್ನಲ್ಲಿ ಕಂಡು, ಈಗ ನನ್ನಲ್ಲಿರುವುದೆಂದು ಕೇಳುತ್ತಿರುವ ಅದೇ ಹೋರಾಟದ ಅನುಭವವೇ ನಿಮಗೂ ಇದೆ. \c 2 \s1 ಕ್ರಿಸ್ತನ ದೀನತೆಯ ಅನುಸರಣೆ \p \v 1 ನೀವು ಕ್ರಿಸ್ತನೊಂದಿಗೆ ಐಕ್ಯವಾಗಿರುವುದರಿಂದ ಉತ್ತೇಜನ, ಅವರ ಪ್ರೀತಿಯಿಂದ ಸಂತೈಸುವಿಕೆ, ಆತ್ಮನಲ್ಲಿ ಅನ್ಯೋನ್ಯತೆ, ಕನಿಕರದ ವಾತ್ಸಲ್ಯಗಳು ಇರುವುದಾದರೆ, \v 2 ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ. \v 3 ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ. \v 4 ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ. \p \v 5 ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ: \q1 \v 6 ಅವರು ದೇವರ ಸ್ವರೂಪವಾಗಿದ್ದರೂ, \q2 ದೇವರಿಗೆ ಸಮಾನರಾಗಿರುವುದನ್ನು ಬಿಡಲೊಲ್ಲೆನೆಂದು ಎಣಿಸದೆ, \q1 \v 7 ತಮ್ಮನ್ನು ತಾವೇ ಬರಿದುಮಾಡಿಕೊಂಡು \q2 ಗುಲಾಮನ ರೂಪವನ್ನು ಧರಿಸಿಕೊಂಡು \q2 ಮನುಷ್ಯರಿಗೆ ಸಮನಾದರು. \q1 \v 8 ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ \q2 ತಮ್ಮನ್ನು ತಾವೇ ತಗ್ಗಿಸಿಕೊಂಡು \q2 ಮರಣವನ್ನು ಎಂದರೆ ಶಿಲುಬೆಯ \q3 ಮರಣವನ್ನೂ ಹೊಂದುವಷ್ಟು ವಿಧೇಯರಾದರು. \b \q1 \v 9 ಈ ಕಾರಣದಿಂದಲೇ ದೇವರು ಅವರನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ \q2 ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಅವರಿಗೆ ದಯಪಾಲಿಸಿದ್ದಾರೆ. \q1 \v 10 ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ \q2 ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ, \q1 \v 11 ತಂದೆಯಾದ ದೇವರ ಮಹಿಮೆಗಾಗಿ \q2 ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು. \s1 ಗೊಣಗುಟ್ಟದೆ ಎಲ್ಲವನ್ನೂ ಮಾಡಿರಿ \p \v 12 ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ. \v 13 ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ. \p \v 14 ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ. \v 15 ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,”\f + \fr 2:15 \fr*\ft \+xt ಧರ್ಮೋ 32:5\+xt*\ft*\f* ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ. \v 16 ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು. \v 17 ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು. \v 18 ಇದಕ್ಕಾಗಿಯೇ ನೀವೂ ಹರ್ಷಿಸಿರಿ. ನನ್ನೊಡನೆ ಆನಂದಿಸಿರಿ. \s1 ತಿಮೊಥೆಯನೂ ಎಪಫ್ರೊದೀತನೂ \p \v 19 ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವುದಕ್ಕೆ ಕರ್ತ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಹೀಗೆ ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಉತ್ತೇಜನಗೊಳ್ಳುವೆನು. \v 20 ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು, ನನ್ನ ಬಳಿ ಬೇರೆ ಯಾರೂ ಇಲ್ಲ. \v 21 ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ. \v 22 ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ. \v 23 ಆದ್ದರಿಂದ ನನಗೆ ಏನು ಸಂಭವಿಸುವುದು ಎಂದು ತಿಳಿದ ಕೂಡಲೇ ಅವನನ್ನು ಕಳುಹಿಸುವ ನಿರೀಕ್ಷೆಯಿದೆ. \v 24 ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತ ದೇವರಲ್ಲಿ ಭರವಸೆಯುಳ್ಳವನಾಗಿದ್ದೇನೆ. \p \v 25 ಆದರೂ ನನ್ನ ಸಹೋದರನೂ ಜೊತೆ ಕೆಲಸದವನೂ ಸಹಸೈನಿಕನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ನಾನು ನೆನೆಸಿದ್ದೇನೆ. ಅವನು ನನ್ನ ಕೊರತೆಯಲ್ಲಿ ಸೇವೆ ಮಾಡುವಂತೆ ನೀವು ಕಳುಹಿಸಿದ ನಿಮ್ಮ ಸಂದೇಶಕನೂ ಆಗಿದ್ದಾನೆ. \v 26 ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ. \v 27 ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು. \v 28 ಆದ್ದರಿಂದ ನೀವು ಅವನನ್ನು ನೋಡಿ ಪುನಃ ಆನಂದಿಸುವಂತೆಯೂ ನನಗೆ ದುಃಖ ಕಡಿಮೆಯಾಗುವಂತೆಯೂ ನಾನು ಅವನನ್ನು ಅತ್ಯಾಸಕ್ತಿಯಿಂದ ಕಳುಹಿಸಿದ್ದೇನೆ. \v 29 ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ. \v 30 ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು. \c 3 \s1 ಸ್ವಶರೀರದಲ್ಲಿ ಭರವಸೆಯಿಡದಿರುವುದು \p \v 1 ಕಡೆಯದಾಗಿ ನನ್ನ ಪ್ರಿಯರೇ, ಕರ್ತನಲ್ಲಿ ಆನಂದಿಸಿರಿ. ಬರೆದದ್ದನ್ನೇ ನಿಮಗೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ, ಅದು ನಿಮಗೆ ಸುರಕ್ಷಿತವೇ. \v 2 ನಾಯಿಗಳಂತೆ ವರ್ತಿಸುವವರಿಗೆ ಎಚ್ಚರಿಕೆ. ದುಷ್ಟಕಾರ್ಯಮಾಡುವವರಿಗೆ ಎಚ್ಚರಿಕೆ, ಸುಳ್ಳು ಸುನ್ನತಿಗಾಗಿ ವಾಗ್ವಾದಿಸುವವರಿಗೆ ಎಚ್ಚರಿಕೆ. \v 3 ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ. \v 4 ಮಾಂಸದಲ್ಲಿ ಭರವಸೆ ಇಡಲು ನನಗೆ ಸಾಕಷ್ಟು ಕಾರಣಗಳಿವೆ. \p ಬೇರೆ ಯಾವನಾದರೂ ಮಾನವೀಯ ಪ್ರಯತ್ನಗಳಲ್ಲಿ ಭರವಸೆ ಇಡಬಹುದೆಂದು ಭಾವಿಸುವುದಾದರೆ, ನಾನು ಅದಕ್ಕಿಂತಲೂ ಹೆಚ್ಚಾಗಿ ಹೇಳಬಹುದು: \v 5 ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು; ಬೆನ್ಯಾಮೀನನ ಕುಲದವನು; ಹೀಬ್ರಿಯರಿಂದ ಹುಟ್ಟಿದ ಹೀಬ್ರಿಯನು; ಮೋಶೆಯ ನಿಯಮದ ಅನುಸಾರವಾಗಿ ನಾನು ಫರಿಸಾಯನು. \v 6 ಆಸಕ್ತಿಯನ್ನು ನೋಡಿದರೆ, ನಾನು ಸಭೆಯ ಹಿಂಸಕನು; ಮೋಶೆಯ ನಿಯಮದಲ್ಲಿರುವ ನೀತಿಯ ಅನುಸಾರವಾಗಿ ನಾನು ನಿರ್ದೋಷಿ. \p \v 7 ನನಗೆ ಲಾಭವಾಗಿದ್ದ ಎಲ್ಲವನ್ನೂ ಈಗ ನಾನು ಕ್ರಿಸ್ತನ ನಿಮಿತ್ತ ನಷ್ಟವೆಂದು ಎಣಿಸುತ್ತೇನೆ. \v 8 ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ. \v 9 ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ. \v 10 ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ. \v 11 ಹೇಗಾದರೂ, ನಾನೂ ಸಹ ಸತ್ತವರೊಳಗಿಂದ ಪುನರುತ್ಥಾನ ಹೊಂದುವೆನು. \p \v 12 ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ. \v 13 ಪ್ರಿಯರೇ, ನಾನಂತೂ ಆ ಗುರಿಯನ್ನು ತಲುಪಿದ್ದೇನೆಂದು ಭಾವಿಸಿಕೊಂಡಿಲ್ಲ. ಆದರೆ ಒಂದು ಸಂಗತಿ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು, ಮುಂದಿನ ವಿಷಯಗಳನ್ನು ಮಾತ್ರ ಲಕ್ಷ್ಯವನ್ನಾಗಿ ಮಾಡಿಕೊಂಡು ಅದನ್ನೇ ಪಡೆದುಕೊಳ್ಳುವುದಕ್ಕಾಗಿ ಓಡುತ್ತಿದ್ದೇನೆ. \v 14 ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ. \s1 ಪೌಲನ ಮಾದರಿಯನ್ನು ಅನುಸರಿಸುವುದು \p \v 15 ಆದ್ದರಿಂದ ನಮ್ಮಲ್ಲಿ ಆತ್ಮಿಕ ಪರಿಪಕ್ವತೆಯುಳ್ಳವರು ಇದೇ ಮನೋಭಾವವುಳ್ಳವರಾಗಿರಬೇಕು. ಕೆಲವು ವಿಷಯಗಳ ಮೇಲೆ ಭಿನ್ನಾಭಿಪ್ರಾಯವಿದ್ದರೆ, ಅದನ್ನೂ ದೇವರು ನಿಮಗೆ ಸ್ಪಷ್ಟಪಡಿಸುವರು. \v 16 ಆದರೂ ಈಗಾಗಲೇ ನಾವು ಯಾವುದರಲ್ಲಿ ಮುಂದುವರೆದಿದ್ದೇವೋ ಆ ಸೂತ್ರದ ಪ್ರಕಾರ ಒಂದೇ ಮನಸ್ಸುಳ್ಳವರಾಗಿ ಬಾಳೋಣ. \p \v 17 ಪ್ರಿಯರೇ, ನೀವು ನನ್ನನ್ನು ಅನುಸರಿಸುವವರಾಗಿರಿ. ನಮ್ಮ ಹಾಗೆ ಬಾಳುವ ಆದರ್ಶದ ಪ್ರಕಾರ ನಡೆದುಕೊಳ್ಳುವವರನ್ನು ಗಮನಿಸಿರಿ. \v 18 ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ಬಾಳುತ್ತಿದ್ದಾರೆ. ಅವರ ವಿಷಯದಲ್ಲಿ ನಾನು ನಿಮಗೆ ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಕಣ್ಣೀರಿನಿಂದ ಹೇಳುತ್ತೇನೆ. \v 19 ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ. \v 20 ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು. \v 21 ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು. \c 4 \s1 ಸ್ಥಿರತೆ ಮತ್ತು ಐಕ್ಯತೆಗೆ ಮುಕ್ತಾಯ ಬೇಡಿಕೆ \p \v 1 ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ! \p \v 2 ಕರ್ತ ದೇವರಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ. \v 3 ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ. \s1 ಅಂತಿಮ ಪ್ರಬೋಧನೆಗಳು \p \v 4 ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ. \v 5 ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ. \v 6 ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ. \v 7 ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು. \p \v 8 ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ. \v 9 ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು. \s1 ಉಡುಗೊರೆಗಳಿಗಾಗಿ ಧನ್ಯವಾದಗಳು \p \v 10 ಅಂತೂ ಕೊನೆಯದಾಗಿ ನನ್ನ ಬಗ್ಗೆ ನಿಮಗಿರುವ ಆಸಕ್ತಿಯು ಪುನಃ ಚಿಗುರಿದ್ದಕ್ಕಾಗಿ ಕರ್ತ ದೇವರಲ್ಲಿ ಬಹಳವಾಗಿ ಆನಂದಿಸುತ್ತೇನೆ. ನೀವು ನನ್ನ ಬಗ್ಗೆ ಆಸಕ್ತಿ ಮೊದಲಿನಿಂದ ಹೊಂದಿದ್ದರೂ ಅದನ್ನು ತೋರಿಸಲು ನಿಮಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ. \v 11 ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ. \v 12 ಕೊರತೆಯಲ್ಲಾಗಲಿ, ಸಮೃದ್ಧಿಯಲ್ಲಾಗಲಿ ಹೇಗೆ ಜೀವಿಸಬೇಕೆಂಬ ಅನುಭವವನ್ನು ತಿಳಿದುಕೊಂಡಿದ್ದೇನೆ. ಚೆನ್ನಾಗಿ ಊಟಮಾಡಿರಲಿ, ಹಸಿವೆಯಿಂದಿರಲಿ, ಸಮೃದ್ಧಿಯುಳ್ಳವನಾಗಿರಲಿ, ಕೊರತೆಯುಳ್ಳವನಾಗಿರಲಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ಎಲ್ಲಾ ಪರಿಸ್ಥಿತಿಗಳಲ್ಲಿ ತೃಪ್ತನಾಗಿರುವ ರಹಸ್ಯವನ್ನು ಕಲಿತುಕೊಂಡಿದ್ದೇನೆ. \v 13 ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ. \p \v 14 ಹೀಗಿದ್ದರೂ, ನನ್ನ ತೊಂದರೆಗಳಲ್ಲಿ ನೀವು ಭಾಗವಹಿಸಿದ್ದು ಒಳ್ಳೆಯದಾಯಿತು. \v 15 ಫಿಲಿಪ್ಪಿಯವರೇ, ನಾನು ಪ್ರಾರಂಭ ದಿನಗಳಲ್ಲಿ ನಿಮ್ಮ ನಡುವೆ ಸುವಾರ್ತೆ ಸಾರಿ ಮಕೆದೋನ್ಯದಿಂದ ಹೊರಟುಹೋದಾಗ, ನಿಮ್ಮನ್ನು ಬಿಟ್ಟು ಬೇರಾವ ಸಭೆಯವರು ಕೊಡುವ ಮತ್ತು ತೆಗೆದುಕೊಳ್ಳುವ ವಿಷಯದಲ್ಲಿ ಯಾರೂ ನನ್ನೊಂದಿಗೆ ಪಾಲುಗಾರರಾಗಲಿಲ್ಲ ಎಂಬುದನ್ನು ನೀವು ತಿಳಿದುಕೊಂಡಿದ್ದೀರಿ. \v 16 ನಾನು ಥೆಸಲೋನಿಕದಲ್ಲಿದ್ದಾಗಲೂ ನನಗೆ ಕೊರತೆಯಾದಾಗ ನೀವು ಒಂದೆರಡು ಬಾರಿ ಸಹಾಯ ಕಳುಹಿಸಿದಿರಿ. \v 17 ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ. \v 18 ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ. \v 19 ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು. \p \v 20 ನಮ್ಮ ತಂದೆ ದೇವರಿಗೆ ನಿರಂತರವೂ ಮಹಿಮೆಯಾಗಲಿ. ಆಮೆನ್. \b \s1 ಅಂತಿಮ ವಂದನೆಗಳು \p \v 21 ಕ್ರಿಸ್ತ ಯೇಸುವಿನಲ್ಲಿರುವ ಎಲ್ಲಾ ದೇವಜನರಿಗೂ ವಂದನೆಗಳನ್ನು ಹೇಳಿರಿ. \p ನನ್ನ ಜೊತೆಯಲ್ಲಿರುವ ಸಹೋದರರೂ ಸಹೋದರಿಯರೂ ವಂದನೆಗಳನ್ನು ತಿಳಿಸುತ್ತಾರೆ. \p \v 22 ಎಲ್ಲಾ ದೇವಜನರೂ ವಿಶೇಷವಾಗಿ ಕೈಸರನ ಮನೆತನಕ್ಕೆ ಸೇರಿದವರೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ. \b \p \v 23 ಕರ್ತದೇವರು ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.