\id REV - Biblica® Open Kannada Contemporary Version \ide UTF-8 \h ಪ್ರಕಟನೆ \toc1 ಯೋಹಾನನು ಬರೆದ ಪ್ರಕಟನೆ \toc2 ಪ್ರಕಟನೆ \toc3 ಪ್ರಕ \mt2 ಯೋಹಾನನು ಬರೆದ \mt1 ಪ್ರಕಟನೆ \c 1 \s1 ಮೊದಲ ಮಾತು \p \v 1 ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು. \v 2 ಯೋಹಾನನು ತಾನು ಕಂಡ ಎಲ್ಲಾ ಸಂಗತಿಗಳನ್ನು ಅಂದರೆ ದೇವರ ವಾಕ್ಯದ ವಿಷಯವಾಗಿಯೂ ಕ್ರಿಸ್ತ ಯೇಸುವಿನ ವಿಷಯವಾಗಿಯೂ ತಿಳಿಸಿ ಸಾಕ್ಷಿಕೊಟ್ಟನು. \v 3 ಈ ಪ್ರವಾದನೆಯ ವಾಕ್ಯಗಳನ್ನು ಓದುವಂಥವರೂ ಕೇಳುವಂಥವರೂ ಈ ಪ್ರವಾದನೆಯ ವಾಕ್ಯಗಳಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಏಕೆಂದರೆ ಸಮಯವು ಸಮೀಪವಾಗಿದೆ. \b \s1 ವಂದನೆಗಳು ಮತ್ತು ಸ್ತೋತ್ರವೂ \p \v 4 ಯೋಹಾನನು, \b \p ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, \b \p ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ, \v 5 ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. \b \b \p ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ. \v 6 ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್. \q1 \v 7 “ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,”\f + \fr 1:7 \fr*\ft \+xt ದಾನಿ 7:13\+xt*\ft*\f* \q2 ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, \q1 ಅವರನ್ನು ಇರಿದವರು ಸಹ ಕಾಣುವರು.” \q2 ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.”\f + \fr 1:7 \fr*\ft \+xt ಜೆಕರ್ಯ 12:10\+xt*\ft*\f* \qc ಹೌದು, ಹಾಗೆಯೇ ಆಗುವುದು! ಆಮೆನ್. \p \v 8 “ನಾನೇ ಆದಿಯೂ ಅಂತ್ಯವೂ\f + \fr 1:8 \fr*\ft ಗ್ರೀಕ್ ಭಾಷೆಯಲ್ಲಿ \ft*\fqa ಆಲ್ಫಾ \fqa*\ft ಮತ್ತು \ft*\fqa ಒಮೆಗಾ\fqa*\f* ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ. \b \s1 ಯೋಹಾನನಿಗಾದ ಕ್ರಿಸ್ತ ಯೇಸುವಿನ ದರ್ಶನ \p \v 9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು. \v 10 ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು. \v 11 ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು. \p \v 12 ನನ್ನೊಂದಿಗೆ ಮಾತನಾಡುತ್ತಿದ್ದ ಧ್ವನಿಯು ಯಾರದೆಂದು ನೋಡುವುದಕ್ಕೆ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ \v 13 ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಪುತ್ರ\f + \fr 1:13 \fr*\ft \+xt ದಾನಿ 7:13\+xt*\ft*\f* ಇವರ ಹಾಗೆ ಒಬ್ಬ ವ್ಯಕ್ತಿ ಇರುವವರನ್ನೂ ಕಂಡೆನು. ಅವರು ಪಾದದವರೆಗೆ ಮುಚ್ಚುವ ನಿಲುವಂಗಿಯನ್ನು ತೊಟ್ಟು, ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದರು. \v 14 ಅವರ ತಲೆ ಕೂದಲುಗಳು ಬಿಳಿಯ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿದ್ದವು. ಅವರ ನೇತ್ರಗಳು ಬೆಂಕಿಯ ಜ್ವಾಲೆಯಂತೆಯೂ \v 15 ಅವರ ಪಾದಗಳು ಕುಲುಮೆಯಲ್ಲಿ ಹೊಳೆಯುವ ತಾಮ್ರದಂತೆಯೂ ಅವರ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. \v 16 ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು. \p \v 17 ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ \v 18 ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ. \p \v 19 “ಆದ್ದರಿಂದ ನೀನು ಕಂಡದ್ದವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಸಂಭವಿಸುವವುಗಳನ್ನೂ ಬರೆ. \v 20 ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯ ಏನೆಂದರೆ: ಆ ಏಳು ನಕ್ಷತ್ರಗಳು, ಆ ಏಳು ಸಭೆಗಳ ಸಂದೇಶಕರು, ಆ ಏಳು ದೀಪಸ್ತಂಭಗಳು, ಆ ಏಳು ಸಭೆಗಳಾಗಿರುತ್ತವೆ. \c 2 \s1 ಎಫೆಸದ ಸಭೆಯವರಿಗೆ \p \v 1 “ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: \b \pi1 ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ: \b \pi1 \v 2 ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ. \v 3 ನೀನು ತಾಳ್ಮೆಯಿಂದ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡು ಬೇಸರಗೊಳ್ಳಲಿಲ್ಲ. \v 4 ಆದರೂ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ ಎಂದು ನಿನ್ನ ವಿರುದ್ಧವಾಗಿ ಹೇಳುತ್ತೇನೆ. \v 5 ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು. \v 6 ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು. ಅದೇನೆಂದರೆ ನಾನು ಹಗೆ ಮಾಡುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ಹಗೆ ಮಾಡುತ್ತೀ. \v 7 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ\f + \fr 2:7 \fr*\ft ಅಥವಾ \ft*\fqa ಸಂತೋಷಕರವಾದ ಸ್ಥಳ\fqa*\f* ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು. \s1 ಸ್ಮುರ್ನದಲ್ಲಿರುವ ಸಭೆಗೆ \p \v 8 “ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: \b \pi1 ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ: \b \pi1 \v 9 ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ. \v 10 ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು. \v 11 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ. \s1 ಪೆರ್ಗಮದಲ್ಲಿರುವ ಸಭೆಗೆ \p \v 12 “ಪೆರ್ಗಮದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: \b \pi1 ಹರಿತವಾದ ಇಬ್ಬಾಯಿಕತ್ತಿಯನ್ನು ಹಿಡಿದವರು ಹೇಳುವುದೇನೆಂದರೆ: \b \pi1 \v 13 ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ. \v 14 ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ. \v 15 ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಹಿಡಿದುಕೊಂಡಿರುವವರೂ ನಿನ್ನಲ್ಲಿದ್ದಾರೆ. \v 16 ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು. \v 17 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು. \s1 ಥುವತೈರದ ಸಭೆಗೆ \p \v 18 “ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: \b \pi1 ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ: \b \pi1 \v 19 ನಾನು ನಿನ್ನ ಕ್ರಿಯೆಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ನೀನು ಮೊದಲು ಮಾಡಿದ್ದಕ್ಕಿಂತಲೂ ಈಗ ಹೆಚ್ಚಾಗಿ ಮಾಡುತ್ತಿರುವೆ. \v 20 ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು. \v 21 ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು. ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ವ್ಯಭಿಚಾರವನ್ನು ಬಿಟ್ಟುಬಿಡಲು ಅವಳಿಗೆ ಮನಸ್ಸಿಲ್ಲ. \v 22 ಇಗೋ, ಅವಳು ಹಾಸಿಗೆಯಲ್ಲಿ ಬಾಧೆಯಿಂದ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಪಶ್ಚಾತ್ತಾಪಪಟ್ಟು ತಮ್ಮ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ, ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು. \v 23 ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು. \v 24 ಥುವತೈರದಲ್ಲಿರುವ ಉಳಿದವರಿಗೆ ನಾನು ಹೇಳುವುದೇನಂದರೆ: ಅವಳ ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ಸೈತಾನನ ಆಳವಾದ ರಹಸ್ಯ ಬೋಧನೆಗಳು ಎಂದು ಹೇಳುವ ಬೋಧನೆಯನ್ನು ನೀವು ಅವಲಂಬಿಸಲಿಲ್ಲ. \v 25 ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲವೆಂಬುದೇ. \v 26 ಯಾರು ಜಯಶಾಲಿಯಾಗಿದ್ದು, ನನ್ನ ಚಿತ್ತವನ್ನು ಅಂತ್ಯದವರೆಗೂ ಯಾರು ನಡೆಸುತ್ತಾರೋ, ಅವರಿಗೆ ನಾನು ರಾಷ್ಟ್ರಗಳ ಮೇಲೆ ಅಧಿಕಾರವನ್ನು ನೀಡುವೆನು. \v 27 ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ, ‘ಅವರು ಕಬ್ಬಿಣದ ಕೋಲಿನಿಂದ ರಾಷ್ಟ್ರಗಳನ್ನು ಆಳುವರು. ಮಣ್ಣಿನ ಮಡಿಕೆಗಳು ಒಡೆಯುವಂತೆ ಬಲ ಮುರಿದು ಹೋಗುವುದು.’\f + \fr 2:27 \fr*\ft \+xt ಕೀರ್ತನೆ 2:9\+xt*\ft*\f* \v 28 ನಾನು ಅಂಥವರಿಗೆ ಉದಯಸೂಚಕ ತಾರೆಯನ್ನು ಅವರಿಗೆ ಕೊಡುವೆನು. \v 29 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ. \c 3 \s1 ಸಾರ್ದಿಸಿನಲ್ಲಿರುವ ಸಭೆಗೆ \p \v 1 “ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: \b \pi1 ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: \b \pi1 ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ. \v 2 ಎಚ್ಚರವಾಗು, ಸಾಯುವ ಹಾಗಿರುವ ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳು ನನಗೆ ಪರಿಪೂರ್ಣವಾಗಿ ಕಂಡುಬರಲಿಲ್ಲ. \v 3 ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು. \v 4 ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಕೆಲವು ಜನರು ಸಾರ್ದಿಸಿ ಪಟ್ಟಣದಲ್ಲಿ ಇದ್ದಾರೆ, ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು. \v 5 ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು. \v 6 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. \s1 ಫಿಲದೆಲ್ಫಿಯದಲ್ಲಿರುವ ಸಭೆಗೆ \p \v 7 “ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: \b \pi1 ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ: \b \pi1 \v 8 ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನಿನ್ನ ಶಕ್ತಿಯು ಸ್ವಲ್ಪವೇ ಆಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿಕೊಂಡಿದ್ದರಿಂದ, ನಿನ್ನೆದುರಿನಲ್ಲಿ ಒಂದು ದ್ವಾರವನ್ನು ತೆರೆದಿಟ್ಟಿದ್ದೇನೆ, ಅದನ್ನು ಯಾರೂ ಮುಚ್ಚಲಾರರು. \v 9 ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು. \v 10 ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು. \v 11 ನಾನು ಬೇಗ ಬರುತ್ತೇನೆ. ನಿನ್ನ ಕಿರೀಟವನ್ನು ಯಾರೂ ಅಪಹರಿಸದಂತೆ ನಿನಗಿರುವುದನ್ನು ಹಿಡಿದುಕೊಂಡಿರು. \v 12 ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು. \v 13 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. \s1 ಲವೊದಿಕೀಯದಲ್ಲಿರುವ ಸಭೆಗೆ \p \v 14 “ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: \b \pi1 ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ: \b \pi1 \v 15 ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನೀನು ತಣ್ಣಗೂ ಇಲ್ಲ, ಬಿಸಿಯೂ ಇಲ್ಲ, ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು. \v 16 ನೀನು ಬಿಸಿಯಾಗಲೀ, ತಣ್ಣಗಾಗಲೀ ಇಲ್ಲದೆ ಉಗುರುಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಕಾರಿ ಬಿಡುವೆನು. \v 17 ಏಕೆಂದರೆ ನೀನು ನಿನ್ನ ವಿಷಯದಲ್ಲಿ, ‘ನಾನು ಐಶ್ವರ್ಯವಂತನು, ನಾನು ಸಂಪಾದಕನಾಗಿದ್ದೇನೆ ಮತ್ತು ಕೊರತೆ ನನಗಿಲ್ಲ,’ ಎಂದು ಹೇಳಿಕೊಳ್ಳುತ್ತಿ. ಆದರೆ ನೀನು ಕೇವಲ ದುರವಸ್ಥೆಯುಳ್ಳವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾದವನು ಎಂಬುದನ್ನು ತಿಳಿಯದೆ ಇದ್ದೀ. \v 18 ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ. \v 19 ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು. \v 20 ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು. \v 21 ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು. \v 22 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.” \c 4 \s1 ಪರಲೋಕದಲ್ಲಿರುವ ಸಿಂಹಾಸನ \p \v 1 ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು. \v 2 ಕೂಡಲೇ ನಾನು ಆತ್ಮವಶನಾದೆನು. ಆಗ ನನ್ನೆದುರಿನಲ್ಲಿ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬರು ಕುಳಿತಿದ್ದರು. \v 3 ಆಸೀನರಾದವರು ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದರು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆಬಿಲ್ಲು ಹೊಳೆಯುತ್ತಿತ್ತು. \v 4 ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು. \v 5 ಸಿಂಹಾಸನದೊಳಗಿಂದ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಹರಡಿದವು. ಸಿಂಹಾಸನದ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಬೆಳಗುತ್ತಿದ್ದವು. \v 6 ಇದಲ್ಲದೆ ಸಿಂಹಾಸನದ ಮುಂದೆ ಸ್ಪಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಾಣಿಸಿತು. \p ಸಿಂಹಾಸನದ ಮಧ್ಯದಲ್ಲಿ, ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. \v 7 ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯದು ಮನುಷ್ಯನಂತಿತ್ತು, ನಾಲ್ಕನೆಯದು ಹಾರುವ ಹದ್ದಿನಂತಿತ್ತು. \v 8 ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು: \qc “ ‘ದೇವರು ಆಗಿರುವ ಕರ್ತ ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು, \qc ಅವರು ಸರ್ವಶಕ್ತರು,’\f + \fr 4:8 \fr*\ft \+xt ಯೆಶಾಯ 6:3\+xt*\ft*\f* \qc ಗತಕಾಲ, ವರ್ತಮಾನ ಭವಿಷ್ಯತ್ಕಾಲಗಳಲ್ಲಿ ಇರುವವರು.” \m \v 9 ಯುಗಯುಗಾಂತರಗಳಲ್ಲಿಯೂ ಜೀವಿಸುವವರಾಗಿ, ಸಿಂಹಾಸನದ ಮೇಲೆ ಆಸೀನರಾದವರಿಗೆ ಆ ನಾಲ್ಕು ಜೀವಿಗಳು ಮಹಿಮೆ, ಮಾನ, ಕೃತಜ್ಞತಾ ಸ್ತುತಿಗಳನ್ನು ಸಲ್ಲಿಸುವಾಗ, \v 10 ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, \q1 \v 11 “ನಮ್ಮ ಕರ್ತ ಆಗಿರುವ ದೇವರೇ, \q2 ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. \q1 ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. \q2 ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, \q2 ನಿಮ್ಮ ಚಿತ್ತದಿಂದಲೇ ಇದ್ದವು,” \m ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು. \c 5 \s1 ಚರ್ಮದ ಸುರುಳಿ ಮತ್ತು ಕುರಿಮರಿ \p \v 1 ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. \v 2 ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು, “ಈ ಸುರುಳಿಯ ಮುದ್ರೆಗಳನ್ನು ಬರೆಯುವುದಕ್ಕೂ ಅದನ್ನು ಬಿಚ್ಚುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಧ್ವನಿಯಿಂದ ಕೂಗುವುದನ್ನು ಕಂಡೆನು. \v 3 ಆದರೆ ಆ ಸುರುಳಿಯನ್ನು ಬಿಚ್ಚಲು ಇಲ್ಲವೆ ಅದರಲ್ಲಿ ನೋಡಲು ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾವ ವ್ಯಕ್ತಿಗೂ ಆಗಲಿಲ್ಲ. \v 4 ಆಗ ಸುರುಳಿಯನ್ನು ಬಿಚ್ಚುವುದಕ್ಕಾಗಲಿ, ಅದರಲ್ಲಿ ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು. \v 5 ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು. \p \v 6 ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು. \v 7 ಆ ಕುರಿಮರಿ ಆಗಿರುವವರು ಬಂದು ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯೊಳಗಿಂದ ಸುರುಳಿಯನ್ನು ತೆಗೆದುಕೊಂಡರು. \v 8 ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. \v 9 ಅವರು ಹೊಸಹಾಡನ್ನು ಹಾಡುತ್ತಾ, \q1 “ನೀವು ಸುರುಳಿಯನ್ನು ತೆಗೆದುಕೊಂಡು \q2 ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. \q1 ಏಕೆಂದರೆ ನೀವು ವಧಿತರಾಗಿ, \q2 ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು \q2 ದೇವರಿಗಾಗಿ ಕೊಂಡುಕೊಂಡಿರುವಿರಿ. \q1 \v 10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, \q2 ಅವರು ಭೂಮಿಯ ಮೇಲೆ ಆಳುವರು!” \m ಎಂದು ಹೇಳಿದರು. \p \v 11 ಇದಲ್ಲದೆ ನಾನು ನೋಡಲಾಗಿ, ಸಿಂಹಾಸನದ ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. \v 12 ಅವರು, ಮಹಾಧ್ವನಿಯಿಂದ: \q1 “ವಧಿತರಾದ ಕುರಿಮರಿ ಆಗಿರುವವರು \q2 ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, \q2 ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” \m ಎಂದು ಹೇಳಿದರು. \p \v 13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: \q1 “ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ \q2 ಸ್ತೋತ್ರ, ಗೌರವ, ಮಹಿಮೆ, ಶಕ್ತಿ, \qc ಯುಗಯುಗಾಂತರಗಳಲ್ಲಿಯೂ ಇರಲಿ!” \m \v 14 ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು. \c 6 \s1 ಮುದ್ರೆಗಳು \p \v 1 ಏಳು ಮುದ್ರೆಗಳಲ್ಲಿ ಒಂದನ್ನು ಯಜ್ಞದ ಕುರಿಮರಿ ಆಗಿರುವವರು ತೆರೆಯುವುದನ್ನು ನಾನು ಕಂಡೆನು. ಆ ಜೀವಿಗಳಲ್ಲೊಂದು ಗುಡುಗಿನಂತಿದ್ದ ಶಬ್ದದಲ್ಲಿ, “ಬಾ!” ಎಂದು ಹೇಳುವುದನ್ನು ಕೇಳಿದೆನು. \v 2 ನಾನು ನೋಡಲು, ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಸವಾರಿ ಮಾಡುವವನು ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲಾಗಿತ್ತು. ಅವನು ಜಯಿಸುವವನಾಗಿ ಜಯಿಸುವುದಕ್ಕೊಸ್ಕರ ಹೊರಟನು. \p \v 3 ಕುರಿಮರಿ ಆಗಿರುವವರು ಎರಡನೆಯ ಮುದ್ರೆಯನ್ನು ತೆರೆದಾಗ, ಎರಡನೆಯ ಜೀವಿಯು, “ಬಾ” ಎಂದು ಹೇಳುವುದನ್ನು ಕೇಳಿದೆನು. \v 4 ಆಗ ಕೆಂಪು ಬಣ್ಣದ ಬೇರೊಂದು ಕುದುರೆಯು ಹೊರಟು ಬಂದಿತು. ಅದರ ಸವಾರನಿಗೆ ಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವುದಕ್ಕೂ ಅಧಿಕಾರವು ಕೊಡಲಾಗಿತ್ತು. ಅವನಿಗೆ ದೊಡ್ಡ ಕತ್ತಿಯು ಸಹ ಕೊಡಲಾಗಿತ್ತು. \p \v 5 ಕುರಿಮರಿ ಆಗಿರುವವರು ಮೂರನೆಯ ಮುದ್ರೆಯನ್ನು ತೆರೆದಾಗ, ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ಕೇಳಿದೆನು. ನಾನು ನೋಡಲು, ಕಪ್ಪಾದ ಒಂದು ಕುದುರೆಯನ್ನು ಕಂಡೆನು. ಅದರ ಸವಾರನು ತನ್ನ ಕೈಯಲ್ಲಿ ಒಂದು ತಕ್ಕಡಿಯನ್ನು ಹಿಡಿದಿದ್ದನು. \v 6 ಆಗ ನಾನು ನಾಲ್ಕು ಜೀವಿಗಳ ಮಧ್ಯದಿಂದ ಬಂದಂತೆ ಒಂದು ಧ್ವನಿಯನ್ನು ಕೇಳಿದೆನು. ಅದು, “ದಿನದ ಕೂಲಿಗೆ ಒಂದು ಕಿಲೋಗ್ರಾಂ ಗೋಧಿ, ಮೂರು ಕಿಲೋಗ್ರಾಂ ಜವೆಗೋಧಿ, ಆದರೆ ಎಣ್ಣೆಯನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಕೆಡಿಸಬೇಡ,” ಎಂದಿತು. \p \v 7 ಕುರಿಮರಿ ಆಗಿರುವವರು ನಾಲ್ಕನೆಯ ಮುದ್ರೆಯನ್ನು ಒಡೆದಾಗ, ನಾಲ್ಕನೆಯ ಜೀವಿಯು, “ಬಾ” ಎಂದು ಕರೆಯುವ ಧ್ವನಿಯನ್ನು ಕೇಳಿದೆನು. \v 8 ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು. \p \v 9 ಕುರಿಮರಿ ಆಗಿರುವವರು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ ತಮಗಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತರಾದವರ ಆತ್ಮಗಳು ಬಲಿಪೀಠದ ಕೆಳಗಿರುವುದನ್ನು ಕಂಡೆನು. \v 10 ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು. \v 11 ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಬಿಳೀ ನಿಲುವಂಗಿಯು ಕೊಡಲಾಗಿತ್ತು. ಇನ್ನು ಸ್ವಲ್ಪಕಾಲ ಅವರಂತೆಯೇ ವಧಿಸಲಾಗಬೇಕಾಗಿರುವ ಅವರ ಜೊತೆ ಸೇವಕರ ಮತ್ತು ಸಹೋದರರ ಸಂಖ್ಯೆ ಪೂರ್ಣಗೊಳ್ಳುವ ತನಕ ಕಾದಿರಬೇಕೆಂದು ಅವರಿಗೆ ಹೇಳಲಾಯಿತು. \p \v 12 ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು. \v 13 ಬಿರುಗಾಳಿಯಿಂದ ಆಕಾಶದ ನಕ್ಷತ್ರಗಳು ಅಂಜೂರದ ಕಾಯಿಗಳಂತೆ ಭೂಮಿಗೆ ಬಿದ್ದವು. \v 14 ಆಕಾಶವು ಸುರುಳಿಯಂತೆ ಸುತ್ತಿಕೊಂಡು ಹೊರಟುಹೋಯಿತು. ಪ್ರತಿ ಬೆಟ್ಟಗಳು ಮತ್ತು ದ್ವೀಪಗಳು ತಮ್ಮ ಸ್ಥಳಗಳಿಂದ ಕದಲಿದವು. \p \v 15 ಅನಂತರ ಭೂರಾಜರುಗಳು, ಮಹಾಪುರುಷರು, ಸಹಸ್ರಾಧಿಪತಿಗಳು, ಐಶ್ವರ್ಯವಂತರು, ಬಲಿಷ್ಠರು, ದಾಸರು ಹಾಗೂ ಸ್ವತಂತ್ರರು, ಗವಿ ಮತ್ತು ಬೆಟ್ಟಗಳ ಬಂಡೆಗಳಲ್ಲಿ ತಮ್ಮನ್ನು ಮರೆಮಾಡಿಕೊಂಡು, \v 16 ಬೆಟ್ಟಗುಡ್ಡಗಳಿಗೆ, “ನಮ್ಮ ಮೇಲೆ ಬಿದ್ದು ಸಿಂಹಾಸನದ ಮೇಲೆ ಕುಳಿತಿರುವವನ ಮುಖದಿಂದ ಮತ್ತು ಕುರಿಮರಿ ಆಗಿರುವವರ ಕೋಪಾಗ್ನಿಯಿಂದ ನಮ್ಮನ್ನು ಮರೆಮಾಡಿರಿ. \v 17 ಏಕೆಂದರೆ, ಅವರ ಕೋಪಾಗ್ನಿಯ ಮಹಾದಿನವು ಬಂದಿದೆ, ಅದರ ಮುಂದೆ ಯಾರು ನಿಂತಾರು?” ಎಂದು ಹೇಳಿದರು. \c 7 \s1 ಮುದ್ರಿತರಾದ 1,44,000 ಜನರು \p \v 1 ಇದಾದನಂತರ ನಾಲ್ಕು ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿರುವುದನ್ನು ಕಂಡೆನು. ಅವರು ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ತಡೆಹಿಡಿದಿದ್ದರು. \v 2 ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ, \v 3 “ನಾವು ನಮ್ಮ ದೇವರ ದಾಸರ ಹಣೆಗಳ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ಹಾನಿಪಡಿಸಬೇಡ!” ಎಂದು ಹೇಳಿದನು. \v 4 ಆಗ ಮುದ್ರೆ ಹೊಂದಿರುವವರ ಸಂಖ್ಯೆಯು ನನಗೆ ಕೇಳಿಸಿತು. ಇಸ್ರಾಯೇಲಿನ ಎಲ್ಲಾ ಕುಲಗಳಿಂದ ಮುದ್ರೆಹಾಕಿಸಿಕೊಂಡವರು 1,44,000 ಜನರು. \b \li1 \v 5 ಯೂದ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000, \li1 ರೂಬೇನ್ ಕುಲದಿಂದ 12,000, \li1 ಗಾದ್ ಕುಲದಿಂದ 12,000, \li1 \v 6 ಆಶೇರ್ ಕುಲದಿಂದ 12,000, \li1 ನಫ್ತಲೀಮ ಕುಲದಿಂದ 12,000, \li1 ಮನಸ್ಸೆ ಕುಲದಿಂದ 12,000, \li1 \v 7 ಸಿಮೆಯೋನ್ ಕುಲದಿಂದ 12,000, \li1 ಲೇವಿ ಕುಲದಿಂದ 12,000, \li1 ಇಸ್ಸಾಕರ್ ಕುಲದಿಂದ 12,000, \li1 \v 8 ಜೆಬುಲೋನ್ ಕುಲದಿಂದ 12,000, \li1 ಯೋಸೇಫನ ಕುಲದಿಂದ 12,000, \li1 ಬೆನ್ಯಾಮೀನ್ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000 ಜನರು. \s1 ಬಿಳಿ ನಿಲುವಂಗಿಯ ಮಹಾ ಜನಸಮೂಹ \p \v 9 ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು. \v 10 ಅವರು ಮಹಾಧ್ವನಿಯಿಂದ ಹೀಗೆ ಕೂಗಿದರು: \q1 “ಸಿಂಹಾಸನದಲ್ಲಿ ಕೂತಿರುವ ನಮ್ಮ ದೇವರಿಗೂ, \q1 ಕುರಿಮರಿ ಆಗಿರುವವರಿಗೂ, \q1 ರಕ್ಷಣೆಯು ಸೇರತಕ್ಕದ್ದಾಗಿದೆ.” \m \v 11 ಸಿಂಹಾಸನ, ಹಿರಿಯರು ಮತ್ತು ನಾಲ್ಕು ಜೀವಿಗಳ ಸುತ್ತಲೂ ದೇವದೂತರು ನಿಂತಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು ದೇವರನ್ನು ಆರಾಧಿಸಿ, \q1 \v 12 “ಆಮೆನ್! \q1 ಸ್ತೋತ್ರ, ಮಹಿಮೆ, \q1 ಜ್ಞಾನ, ಕೃತಜ್ಞತೆ, ಗೌರವ, \q1 ಶಕ್ತಿ, ಬಲ \q1 ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. \q1 ಆಮೆನ್!” \m ಎಂದು ಹೇಳುತ್ತಿದ್ದರು. \p \v 13 ಆಗ ಹಿರಿಯರಲ್ಲೊಬ್ಬನು ನನ್ನನ್ನು, “ಈ ಬಿಳಿ ನಿಲುವಂಗಿಯನ್ನು ತೊಟ್ಟ ಇವರು ಯಾರು? ಎಲ್ಲಿಂದ ಬಂದವರು?” ಎಂದು ಕೇಳಿದನು. \p \v 14 ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. \p ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!” \v 15 ಆದ್ದರಿಂದ, \q1 “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, \q2 ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. \q1 ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು \q2 ಆವರಿಸಿ ಸಂರಕ್ಷಿಸಿದರು. \q1 \v 16 ‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ; \q2 ಬಾಯಾರಿಕೆಯಾಗಲಿ ಆಗುವುದಿಲ್ಲ. \q1 ಇದಲ್ಲದೆ ಸೂರ್ಯನ ಬಿಸಿಲಾದರೂ,’\f + \fr 7:16 \fr*\ft \+xt ಯೆಶಾಯ 49:10\+xt*\ft*\f* \q2 ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ. \q1 \v 17 ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ \q2 ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; \q1 ‘ಜೀವಜಲದ ಒರತೆಗಳ ಬಳಿ ನಡೆಸುವರು.’\f + \fr 7:17 \fr*\ft \+xt ಯೆಶಾಯ 49:10\+xt*\ft*\f* \q2 ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’\f + \fr 7:17 \fr*\ft \+xt ಯೆಶಾಯ 25:8\+xt*\ft*\f*” \m ಎಂದು ಹೇಳಿದನು. \c 8 \s1 ಏಳನೆಯ ಮುದ್ರೆ ಮತ್ತು ಚಿನ್ನದ ಧೂಪಾರತಿ \p \v 1 ಕುರಿಮರಿ ಆಗಿರುವವರು ಏಳನೆಯ ಮುದ್ರೆಯನ್ನು ಒಡೆದಾಗ ಪರಲೋಕದಲ್ಲಿ ಸುಮಾರು ಅರ್ಧ ತಾಸಿನವರೆಗೂ ನಿಶ್ಶಬ್ದವಿತ್ತು. \p \v 2 ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು. \p \v 3 ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು. \v 4 ದೇವದೂತನ ಕೈಯಿಂದ ಧೂಪದ ಹೊಗೆಯು, ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ, ದೇವಸನ್ನಿಧಿಗೆ ಏರಿಹೋಯಿತು. \v 5 ಆಗ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಬಲಿಪೀಠದ ಬೆಂಕಿಯಿಂದ ಅದನ್ನು ತುಂಬಿಸಿ, ಭೂಮಿಯ ಮೇಲೆ ಎಸೆದನು. ಆಗ ಗುಡುಗುಗಳೂ ಸಪ್ಪಳವೂ ಮಿಂಚುಗಳೂ ಮತ್ತು ಭೂಕಂಪವೂ ಉಂಟಾದವು. \s1 ತುತೂರಿಗಳು \p \v 6 ಆಗ ಏಳು ತುತೂರಿಗಳನ್ನು ಹಿಡಿದಿರುವ ಏಳು ದೇವದೂತರು ಅವುಗಳನ್ನು ಊದಲು ಸಿದ್ಧರಾದರು. \p \v 7 ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು. \p \v 8 ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಉರಿಯುತ್ತಿರುವ ದೊಡ್ಡ ಬೆಟ್ಟದಂಥದ್ದು ಸಮುದ್ರದಲ್ಲಿ ಎಸೆಯಲಾಯಿತು. ಸಮುದ್ರದ ಮೂರರಲ್ಲಿ ಒಂದು ಭಾಗವು ರಕ್ತವಾಯಿತು. \v 9 ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗ ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗ ನಾಶವಾದವು. \p \v 10 ಮೂರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೀಪದಂತೆ ಉರಿಯುವ ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು. \v 11 ಆ ನಕ್ಷತ್ರದ ಹೆಸರು, ಮಾಚಿಪತ್ರೆ,\f + \fr 8:11 \fr*\fq ಮಾಚಿಪತ್ರೆ, \fq*\ft ಅಂದರೆ \ft*\ft ಕಹಿಯಾದ ವಸ್ತು\ft*\f* ಆಗ ಮೂರರಲ್ಲಿ ಒಂದು ಭಾಗವು ಕಹಿಯಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕ ಜನರು ಸತ್ತರು. \p \v 12 ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು, ಆಗ ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ ಮೂರನೇ ಭಾಗವು ಕತ್ತಲಾಯಿತು. ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ, ಮೂರನೇ ಭಾಗವು ಕತ್ತಲಾಯಿತು. ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಹೋಯಿತು. ರಾತ್ರಿಯು ಹಾಗೆಯೇ ಆಯಿತು. \p \v 13 ನಾನು ನೋಡಲಾಗಿ, ಆಕಾಶದ ಮಧ್ಯದಲ್ಲಿ ಹಾರುತ್ತಿರುವ ಒಂದು ಗರುಡ ಪಕ್ಷಿ ಮಹಾಧ್ವನಿಯಿಂದ: ಇನ್ನೂ ಊದಲಿರುವ ಮೂವರು ದೂತರ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ, “ಅಯ್ಯೋ! ಅಯ್ಯೋ! ಅಯ್ಯೋ!” ಎಂದಿತು. \c 9 \p \v 1 ಐದನೆಯ ದೇವದೂತನು ತನ್ನ ತುತೂರಿಯನ್ನು ಊದಲು; ಆಕಾಶದಿಂದ ಒಂದು ನಕ್ಷತ್ರವು ಭೂಮಿಗೆ ಬಿದ್ದದ್ದನ್ನು ಕಂಡೆನು. ಅದಕ್ಕೆ ಪಾತಾಳ ಸುರಂಗದ ಬೀಗದ ಕೈ ಕೊಡಲಾಗಿತ್ತು. \v 2 ಆತನು ಆ ಪಾತಾಳವನ್ನು ತೆರೆಯಲು, ಅದರೊಳಗಿಂದ ಹೊಗೆಯು ಮಹಾ ಕುಲುಮೆಯಿಂದ ಬರುವ ಹೊಗೆಯಂತೆ ಏರಿತು. ಪಾತಾಳದ ಆ ಹೊಗೆಯಿಂದ ಸೂರ್ಯ ಮತ್ತು ಆಕಾಶಕ್ಕೆ ಕತ್ತಲು ಕವಿಯಿತು. \v 3 ಆ ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಬಂದವು. ಅವುಗಳಿಗೆ ಭೂಮಿಯ ಮೇಲಿನ ಚೇಳುಗಳಿಗೆ ಇರುವಂತೆ ಶಕ್ತಿಯನ್ನು ಕೊಡಲಾಗಿತ್ತು. \v 4 ಅವುಗಳಿಗೆ ಹಣೆಯ ಮೇಲೆ ದೇವರ ಮುದ್ರೆಯನ್ನು ಹಾಕಿಸಿಕೊಳ್ಳದ ಮನುಷ್ಯರನ್ನು ಬಿಟ್ಟು, ಭೂಮಿಯ ಮೇಲಿನ ಹುಲ್ಲು ಅಥವಾ ಯಾವುದೇ ಪಲ್ಯ ಅಥವಾ ಮರ, ಈ ಯಾವುದಕ್ಕೂ ತೊಂದರೆ ಕೊಡಬಾರದೆಂಬುದಾಗಿ ಹೇಳಲಾಯಿತು. \v 5 ಅವುಗಳು ಅವರನ್ನು ಕೊಲ್ಲದೆ, ಐದು ತಿಂಗಳುಗಳವರೆಗೆ ಯಾತನೆಪಡಿಸುವುದಕ್ಕೆ ಅಧಿಕಾರ ಕೊಡಲಾಯಿತು. ಅವರ ಯಾತನೆಯು, ಚೇಳು ತನ್ನ ಕೊಂಡಿಯಿಂದ ಮನುಷ್ಯರನ್ನು ಕುಟುಕಿಹಾಕಿದಾಗ ಆಗುವ ನೋವಿನಂತಿತ್ತು. \v 6 ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು. \p \v 7 ಆ ಮಿಡತೆಗಳು ಯುದ್ಧಕ್ಕೆ ಸನ್ನದ್ಧವಾದ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದಂತಿರುವ ಕಿರೀಟಗಳಿದ್ದವು. ಅವುಗಳ ಮುಖವು ಮಾನವರ ಮುಖಗಳಂತೆ ಇದ್ದವು. \v 8 ಅವುಗಳ ಕೂದಲು ಸ್ತ್ರೀಯರ ಕೂದಲಿನಂತಿದ್ದು, ಅವುಗಳಿಗೆ ಸಿಂಹಗಳಿಗಿದ್ದಂತೆ ಹಲ್ಲುಗಳಿದ್ದವು. \v 9 ಅವುಗಳಿಗೆ ಕಬ್ಬಿಣದ ಕವಚದಂಥ ಕವಚಗಳಿದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳಂತಿತ್ತು. \v 10 ಅವುಗಳಿಗೆ ಚೇಳಿನಂತೆ ಬಾಲವೂ ಕೊಂಡಿಯೂ ಇದ್ದವು. ಅವುಗಳಿಗೆ ಮನುಷ್ಯರನ್ನು ಐದು ತಿಂಗಳುಗಳ ಕಾಲ ತಮ್ಮ ಬಾಲಗಳಿಂದ ಬಾಧಿಸುವ ಸಾಮರ್ಥ್ಯವಿತ್ತು. \v 11 ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್\f + \fr 9:11 \fr*\ft ಅಥವಾ \ft*\fqa ನಾಶಕ\fqa*\f* ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು. \p \v 12 ಮೊದಲನೆಯ ವಿಪತ್ತು ಕಳೆದುಹೋಯಿತು; ಇಗೋ, ಇವುಗಳ ನಂತರ ಇನ್ನೂ ಎರಡು ವಿಪತ್ತುಗಳು ಬರಲಿವೆ. \p \v 13 ಆರನೆಯ ದೇವದೂತನು ತನ್ನ ತುತೂರಿಯನ್ನು ಊದಲು, ದೇವರ ಮುಂದೆ ಇರುವ ಚಿನ್ನದ ಬಲಿಪೀಠದ ನಾಲ್ಕು ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು. \v 14 ಅದು ತುತೂರಿಯನ್ನು ಹೊಂದಿರುವ ಆರನೆಯ ದೇವದೂತನಿಗೆ, “ಯೂಫ್ರೇಟೀಸ್ ಮಹಾನದಿಯ ಬಳಿ ಕಟ್ಟಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಹೇಳಿತು. \v 15 ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು. \v 16 ಕುದುರೆ ಸೈನಿಕರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು. \p \v 17 ನಾನು ನನ್ನ ದರ್ಶನದಲ್ಲಿ ಕುದುರೆಗಳನ್ನೂ ಸವಾರರನ್ನೂ ಕಂಡೆನು. ಅವರ ಕವಚಗಳು ಬೆಂಕಿಯ ಕೆಂಪು, ನೀಲಮಣಿ ಹಾಗೂ ಹಳದಿ ಬಣ್ಣದಂತೆಯೂ ಇದ್ದವು. ಕುದುರೆಗಳ ತಲೆಗಳು ಸಿಂಹದ ತಲೆಗಳಂತಿದ್ದವು. ಅವುಗಳ ಬಾಯೊಳಗಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬಂದವು. \v 18 ಅವುಗಳ ಬಾಯೊಳಗಿಂದ ಬಂದ ಬೆಂಕಿ ಹೊಗೆ ಮತ್ತು ಗಂಧಕಗಳೆಂಬ ಮೂರು ಉಪದ್ರವಗಳಿಂದ ಮಾನವಕುಲದ ಮೂರರಲ್ಲೊಂದು ಭಾಗದ ಜನರು ಹತರಾದರು. \v 19 ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲದಲ್ಲಿಯೂ ಇತ್ತು. ಏಕೆಂದರೆ ಅವುಗಳ ಬಾಲಗಳು ತಲೆಗಳನ್ನು ಹೊಂದಿದ್ದ ಸರ್ಪಗಳಂತಿದ್ದವು. ಅವುಗಳಿಂದ ಅವು ಕೇಡನ್ನುಂಟು ಮಾಡುತ್ತವೆ. \p \v 20 ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ. \v 21 ಇದಲ್ಲದೆ ಅವರು ಕೊಲೆ, ಮಾಟ, ಜಾರತ್ವ ಮತ್ತು ಕಳ್ಳತನಗಳಿಗಾಗಿಯೂ ಪಶ್ಚಾತ್ತಾಪ ಪಡಲಿಲ್ಲ. \c 10 \s1 ದೇವದೂತನೂ ಮತ್ತು ಚಿಕ್ಕ ಸುರುಳಿಯೂ \p \v 1 ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು. \v 2 ಅವನು ತನ್ನ ಕೈಯಲ್ಲಿ ತೆರೆದಿದ್ದ ಒಂದು ಚಿಕ್ಕ ಸುರುಳಿಯನ್ನು ಹಿಡಿದುಕೊಂಡಿದ್ದನು. ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೂ ತನ್ನ ಎಡಗಾಲನ್ನು ಭೂಮಿಯ ಮೇಲೂ ಇಟ್ಟುಕೊಂಡು, \v 3 ಸಿಂಹದ ಘರ್ಜನೆಯಂತೆ ಮಹಾ ಸ್ವರದಿಂದ ಕೂಗಿದನು. ಅವನು ಕೂಗಿದಾಗ, ಏಳು ಗುಡುಗುಗಳು ಮಾತನಾಡಿದವು. \v 4 ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು. \p \v 5 ಆಗ ಸಮುದ್ರದ ಮೇಲೂ ಭೂಮಿಯ ಮೇಲೂ ನಿಂತಿರುವ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ, \v 6 ಯುಗಯುಗಾಂತರಕ್ಕೂ ಜೀವಿಸುವವರೂ ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿದವರ ಮೇಲೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಇನ್ನು ಆಲಸ್ಯವಾಗುವುದಿಲ್ಲ! \v 7 ಆದರೆ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಬೇಕೆಂದಿರುವ ದಿನಗಳಲ್ಲಿ ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ಪ್ರಕಟಿಸಿದಂತೆಯೇ, ದೇವರ ರಹಸ್ಯವು ನೆರವೇರುವುದು.” \p \v 8 ಆಗ ಪರಲೋಕದಿಂದ ನಾನು ಕೇಳಿದ್ದ ಧ್ವನಿಯು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿರುವ ದೇವದೂತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ಹೇಳಿತು. \p \v 9 ಆಗ ನಾನು ದೇವದೂತನ ಬಳಿ ಹೋಗಿ, ಅವನನ್ನು, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಅವನು ನನಗೆ, “ಇದನ್ನು ತೆಗೆದುಕೊಂಡು ತಿನ್ನು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು. ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು,”\f + \fr 10:9 \fr*\ft \+xt ಯೆಹೆ 3:3\+xt*\ft*\f* ಎಂದು ಹೇಳಿದನು. \v 10 ನಾನು ದೇವದೂತನ ಕೈಯಿಂದ ಆ ಚಿಕ್ಕ ಸುರುಳಿಯನ್ನು ತೆಗೆದುಕೊಂಡು ತಿಂದೆನು. ಇದರ ರುಚಿಯು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಾಗ, ನನ್ನ ಹೊಟ್ಟೆ ಕಹಿಯಾಯಿತು. \v 11 ಆಗ ನನಗೆ, “ನೀನು ಅನೇಕ ಪ್ರಜೆ, ರಾಷ್ಟ್ರ, ಜನಾಂಗ, ಭಾಷೆ ಮತ್ತು ಅರಸರ ಮುಂದೆ ಪುನಃ ಪ್ರವಾದಿಸಬೇಕು,” ಎಂದು ಹೇಳಲಾಯಿತು. \c 11 \s1 ಎರಡು ಸಾಕ್ಷಿಗಳು \p \v 1 ದಂಡದಂತಿದ್ದ ಒಂದು ಅಳತೆ ಕೋಲು ನನಗೆ ಕೊಡಲಾಯಿತು. ನನಗೆ ಹೀಗೆ ಹೇಳಲಾಯಿತು: “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡಿ, ಆಲಯದಲ್ಲಿ ಆರಾಧನೆ ಮಾಡುವವರನ್ನು ಎಣಿಸು. \v 2 ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು. \v 3 ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,” \v 4 ಇವರು, “ಎಣ್ಣೆಯ ಮರಗಳೂ ಭೂಲೋಕದ ಒಡೆಯ ಆಗಿರುವವರ ಮುಂದೆ ನಿಂತಿರುವ ಎರಡು ದೀಪಸ್ತಂಭಗಳೂ ಆಗಿದ್ದಾರೆ.”\f + \fr 11:4 \fr*\ft ನೋಡಿರಿ \+xt ಜೆಕರ್ಯ 4:3,11,14\+xt*.\ft*\f* \v 5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಇವರ ಬಾಯೊಳಗಿಂದ ಬೆಂಕಿ ಹೊರಟು, ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಅವನಿಗೂ ಅದೇ ರೀತಿಯಾಗಿ ಕೊಲೆಯಾಗಬೇಕು. \v 6 ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ. \p \v 7 ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ, ಪಾತಾಳದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ, ಇವರನ್ನು ಜಯಿಸಿ ಕೊಲ್ಲುವುದು. \v 8 ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಗಳು ಸಾಂಕೇತಿಕವಾಗಿ ಸೊದೋಮ್ ಹಾಗೂ ಈಜಿಪ್ಟ್ ಎಂದೂ ಹೆಸರುಗಳಿರುವುದು. ಇವರ ಒಡೆಯ ಆಗಿರುವವರನ್ನು ಸಹ ಅಲ್ಲಿಯೇ ಶಿಲುಬೆಗೆ ಹಾಕಲಾಗಿತ್ತು. \v 9 ಆಗ ಸಕಲ ಪ್ರಜೆ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು, ಇವರ ಶವಗಳನ್ನು ಸಮಾಧಿಯಲ್ಲಿಡಲು ಅನುಮತಿಸದೆ, ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು. \v 10 ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು. \p \v 11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮವು\f + \fr 11:11 \fr*\ft ಅಥವಾ \ft*\fq ಜೀವಾತ್ಮವು \fq*\ft (ನೋಡಿರಿ \+xt ಯೆಹೆ 37:5,14\+xt*)\ft*\f* ಬಂದು, ಆ ಶವಗಳಲ್ಲಿ ಪ್ರವೇಶಿಸಲು, ಅವು ಕಾಲೂರಿ ನಿಂತವು. ಅವರನ್ನು ಕಂಡವರಿಗೆ ಮಹಾ ಭಯವುಂಟಾಯಿತು. \v 12 ಆಗ ಅವರಿಗೆ, “ಇಲ್ಲಿ ಮೇಲಕ್ಕೆ ಬನ್ನಿರಿ,” ಎಂದು ಮಹಾಧ್ವನಿಯು ಕೇಳಿಸಿತು. ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು. \p \v 13 ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು. \p \v 14 ಎರಡನೆಯ ವಿಪತ್ತು ಕಳೆದುಹೋಯಿತು. ಮೂರನೆಯ ವಿಪತ್ತು ಬೇಗನೆ ಬರಲಿದೆ. \s1 ಏಳನೆಯ ತುತೂರಿ \p \v 15 ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: \q1 “ಲೋಕದ ರಾಜ್ಯವು \q2 ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, \q2 ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.” \m \v 16 ತರುವಾಯ ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ದೇವರಿಗೆ ಅಡ್ಡಬಿದ್ದು, \v 17 ಹೀಗೆ ಹೇಳಿದರು: \q1 “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, \q2 ಮೊದಲು ಇದ್ದು ಈಗಲೂ ಇರುವವರೂ, \q1 ನೀವು ನಿಮ್ಮ ಮಹಾ ಅಧಿಕಾರವನ್ನು \q2 ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ. \q1 \v 18 ರಾಷ್ಟ್ರಗಳು ಕೋಪಗೊಂಡವು, \q2 ನಿಮ್ಮ ರೋಷವು ಈಗ ಬಂದಿದೆ. \q1 ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. \q2 ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ \q1 ನಿಮ್ಮ ನಾಮಕ್ಕೆ ಭಯಪಡುವ \q2 ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, \q1 ಲೋಕ ನಾಶಕರನ್ನು ದಂಡಿಸುವಿರಿ.” \p \v 19 ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು. \c 12 \s1 ಸ್ತ್ರೀ ಹಾಗೂ ಘಟಸರ್ಪ \p \v 1 ಪರಲೋಕದಲ್ಲಿ ಒಂದು ಮಹಾ ಸೂಚನೆಯು ಕಾಣಿಸಿತು: ಒಬ್ಬ ಸ್ತ್ರೀಯು ಸೂರ್ಯನನ್ನು ಧರಿಸಿಕೊಂಡಿದ್ದಳು, ಆಕೆಯ ಪಾದಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು. \v 2 ಆಕೆಯು ಗರ್ಭಿಣಿಯಾಗಿದ್ದು, ಪ್ರಸವವೇದನೆಯಿಂದ ನರಳುತ್ತಾ ಕೂಗುತ್ತಿದ್ದಳು. \v 3 ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು. \v 4 ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಚೆಲ್ಲಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ, ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅವಳ ಮುಂದೆ ನಿಂತುಕೊಂಡಿತ್ತು. \v 5 ಆಕೆ, “ರಾಷ್ಟ್ರಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ”\f + \fr 12:5 \fr*\ft \+xt ಕೀರ್ತನೆ 2:9\+xt*\ft*\f* ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ದೇವರ ಬಳಿಗೂ ಅವರ ಸಿಂಹಾಸನದ ಬಳಿಗೂ ಎತ್ತಲಾಯಿತು. \v 6 ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು. \p \v 7 ಪರಲೋಕದಲ್ಲಿ ಯುದ್ಧನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡಿದರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು. \v 8 ಅವರಿಗೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ, ಪರಲೋಕದೊಳಗೆ ಅವರಿಗಿರುವ ಸ್ಥಾನವನ್ನು ಕಳೆದುಕೊಂಡರು. \v 9 ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು. \p \v 10 ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, \q1 “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. \q2 ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. \q1 ಹಗಲಿರುಳು ನಮ್ಮ ಸಹೋದರರ ಮೇಲೆ, \q2 ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ. \q1 \v 11 ಅವರು ಮರಣದವರೆಗೆ \q2 ತಮ್ಮ ಪ್ರಾಣವನ್ನು ಪ್ರೀತಿಸದೆ, \q2 ಕುರಿಮರಿಯಾಗಿರುವವರ ರಕ್ತದಿಂದಲೂ \q1 ತಮ್ಮ ಸಾಕ್ಷಿಯ ವಾಕ್ಯದಿಂದಲೂ \q2 ಅವನನ್ನು ಜಯಿಸಿದರು. \q1 \v 12 ಆದ್ದರಿಂದ ಪರಲೋಕವೇ, \q2 ಅದರಲ್ಲಿ ವಾಸಮಾಡುವವರೇ ಹರ್ಷಗೊಳ್ಳಿರಿ. \q1 ಭೂಮಿಯೇ, ಸಮುದ್ರವೇ, ನಿಮಗೆ ದುರ್ಗತಿ! ಎನ್ನುತ್ತೇನೆ. \q2 ಏಕೆಂದರೆ, ಪಿಶಾಚನು ತನಗಿರುವ ಕಾಲವು ಕೊಂಚವೆಂದು ತಿಳಿದು, \q1 ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ \q2 ಇಳಿದು ಬಂದಿದ್ದಾನೆ,” \m ಎಂಬುದಾಗಿ ಹೇಳಿತು. \p \v 13 ಘಟಸರ್ಪನು ತಾನು ಭೂಮಿಗೆ ತಳ್ಳಲಾಗಿರುವುದನ್ನು ಕಂಡಾಗ, ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು. \v 14 ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು. \v 15 ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಬಿಟ್ಟನು. \v 16 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಿತು. ಅದು ಬಾಯಿತೆರೆದು, ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತು. \v 17 ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹುಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಎಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು, ಯೇಸುವಿನ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟನು. \c 13 \s1 ಸಮುದ್ರದಿಂದ ಹೊರಬಂದ ಮೃಗ \p \v 1 ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು. \v 2 ನಾನು ಕಂಡ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು. \v 3 ಮೃಗದ ತಲೆಗಳಲ್ಲಿ ಒಂದು ಮರಣಾಂತಿಕ ಗಾಯ ಹೊಂದಿದಂತಿರುವುದನ್ನು ನೋಡಿದೆನು. ಆದರೆ ಆ ಮರಣಕರವಾದ ಗಾಯವು ವಾಸಿಯಾಯಿತು. ಭೂಲೋಕವೆಲ್ಲಾ ಆ ಮೃಗವನ್ನು ಕಾಣುತ್ತಾ ಆಶ್ಚರ್ಯಪಟ್ಟಿತು. \v 4 ಜನರು ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟಿದ್ದರಿಂದ, ಆ ಘಟಸರ್ಪನನ್ನು ಆರಾಧಿಸಿದರು. ಇದಲ್ಲದೆ ಆ ಮೃಗವನ್ನೂ ಆರಾಧಿಸಿ, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದರು. \p \v 5 ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಕೊಡಲಾಯಿತು. ನಲವತ್ತೆರಡು ತಿಂಗಳುಗಳವರೆಗೆ ಕಾರ್ಯಸಾಧಿಸುವ ಅಧಿಕಾರವನ್ನೂ ಅದಕ್ಕೆ ಕೊಡಲಾಯಿತು. \v 6 ಆ ಮೃಗವು ತನ್ನ ಬಾಯಿತೆರೆದು, ದೇವರಿಗೆ ವಿರುದ್ಧವಾಗಿ ದೂಷಿಸಿ, ಅವರ ನಾಮವನ್ನೂ ಅವರ ನಿವಾಸವನ್ನೂ ಮತ್ತು ಪರಲೋಕ ನಿವಾಸಿಗಳನ್ನೂ ದೂಷಿಸಿತು. \v 7 ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು. \v 8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು. \p \v 9 ಕಿವಿಯುಳ್ಳವನು ಕೇಳಲಿ. \q1 \v 10 “ಸೆರೆಹಿಡಿಯುವವನು \q2 ತಾನೇ ಸೆರೆಯಾಗಿ ಹೋಗುವನು. \q1 ಕತ್ತಿಯಿಂದ ಕೊಲ್ಲುವವನು \q2 ಕತ್ತಿಯಿಂದಲೇ ಕೊಲೆಯಾಗುವನು.”\f + \fr 13:10 \fr*\ft \+xt ಯೆರೆ 15:2\+xt*\ft*\f* \m ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ. \s1 ಭೂಮಿಯೊಳಗಿಂದ ಬಂದ ಮೃಗ \p \v 11 ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು. \v 12 ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲಿ ಚಲಾಯಿಸಿತು. ಇದು ಮರಣಕರವಾದ ಗಾಯದಿಂದ ವಾಸಿಯಾದ ಮೊದಲನೆಯ ಮೃಗವನ್ನು ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು. \v 13 ಎರಡನೆಯ ಮೃಗವೂ ಮಹಾಸೂಚಕಕಾರ್ಯಗಳನ್ನು ನಡೆಸಿತು ಮತ್ತು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಬೀಳುವಂತೆ ಮಾಡಿತು. \v 14 ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ. \v 15 ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಕೊಡಲಾಗಿದ್ದರಿಂದ, ಆ ವಿಗ್ರಹವು ಮಾತನಾಡುವಂತೆಯೂ ತನ್ನನ್ನು ಆರಾಧನೆ ಮಾಡದವರನ್ನು ಕೊಲ್ಲುವಂತೆಯೂ ಮಾಡುತ್ತದೆ. \v 16 ಅದು ಚಿಕ್ಕವರು, ದೊಡ್ಡವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ಗುಲಾಮರು, ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತು ಹೊಂದಬೇಕೆಂದೂ \v 17 ಆ ಗುರುತಾಗಲಿ, ಮೃಗದ ಹೆಸರಾಗಲಿ, ಅದರ ಹೆಸರಿನ ಸಂಖ್ಯೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುವುದು. \p \v 18 ಇದರಲ್ಲಿ ಜ್ಞಾನವಿದೆ. ಬುದ್ಧಿಯುಳ್ಳವನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆಯು 666. \c 14 \s1 ಕುರಿಮರಿ ಹಾಗೂ 1,44,000 ಜನರು \p \v 1 ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು. \v 2 ಇದಲ್ಲದೆ ಪರಲೋಕದಿಂದ ಜಲ ಪ್ರವಾಹದಂತೆಯೂ ಮಹಾ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ಕಿನ್ನರಿಗಳನ್ನು ನುಡಿಸುತ್ತಿರುವ ಕಿನ್ನರರ ಶಬ್ದದಂತಿತ್ತು. \v 3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲಾದ ಆ ಒಂದು ಲಕ್ಷ ನಲವತ್ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. \v 4 ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು. \v 5 ಇವರ ಬಾಯಲ್ಲಿ ಸುಳ್ಳು ಸಿಕ್ಕಲಿಲ್ಲ. ಇವರು ನಿರ್ದೋಷಿಗಳಾಗಿದ್ದಾರೆ. \s1 ಮೂವರು ದೇವದೂತರು \p \v 6 ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು. \v 7 ಅವನು, “ನೀವು ದೇವರಿಗೆ ಭಯಪಟ್ಟು ಅವರಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಅವರು ನ್ಯಾಯತೀರ್ಪು ಮಾಡುವ ಸಮಯ ಬಂದಿದೆ. ಭೂಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದ ದೇವರನ್ನೇ ಆರಾಧಿಸಿರಿ!” ಎಂದು ಮಹಾಧ್ವನಿಯಿಂದ ಹೇಳಿದನು. \p \v 8 ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “ ‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’\f + \fr 14:8 \fr*\ft \+xt ಯೆಶಾಯ 21:9\+xt*\ft*\f* ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು. \p \v 9 ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ, \v 10 ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು. \v 11 ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಿಗಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರು ಹಗಲಿರುಳೂ ವಿಶ್ರಾಂತಿ ಪಡುವುದಿಲ್ಲಾ!” ಎಂದು ಮಹಾಶಬ್ದದಿಂದ ಹೇಳಿದನು. \v 12 ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ. \p \v 13 ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. \p ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ. \s1 ಭೂಲೋಕದ ಸುಗ್ಗಿಕಾಲ \p \v 14 ನಾನು ನೋಡಲಾಗಿ, ಒಂದು ಬಿಳಿ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯಪುತ್ರರಂತೆ\f + \fr 14:14 \fr*\ft \+xt ದಾನಿ 7:13\+xt*\ft*\f* ಒಬ್ಬರು ಕುಳಿತಿರುವುದನ್ನು ಕಂಡೆನು. ಅವರ ತಲೆಯ ಮೇಲೆ ಚಿನ್ನದ ಕಿರೀಟವೂ ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು. \v 15 ಆಗ ಮತ್ತೊಬ್ಬ ದೂತನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದವರಿಗೆ, “ಭೂಮಿಯ ಪೈರು ಮಾಗಿದೆ. ಕೊಯ್ಯುವ ಕಾಲ ಬಂದಿರುವುದರಿಂದ, ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ!” ಎಂದು ಮಹಾಧ್ವನಿಯಿಂದ ಕೂಗಿದನು. \v 16 ಮೇಘದ ಮೇಲೆ ಕುಳಿತಿದ್ದವರು ತಮ್ಮ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದರು. ಆಗ ಭೂಮಿಯ ಪೈರು ಕೊಯ್ಯಲಾಯಿತು. \p \v 17 ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು. \v 18 ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಬಲಿಪೀಠದ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ, ಭೂಮಿಯ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರ್ತಿಯಾಗಿ ಮಾಗಿವೆ!” ಎಂದು ಮಹಾಧ್ವನಿಯಿಂದ ಕೂಗಿದನು. \v 19 ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ, ಭೂಮಿಯ ದ್ರಾಕ್ಷಿಹಣ್ಣನ್ನು ಕೂಡಿಸಿ, ದೇವರ ಕೋಪವೆಂಬ ದೊಡ್ಡ ದ್ರಾಕ್ಷಿಯ ತೊಟ್ಟಿಯಲ್ಲಿ ಹಾಕಿದನು. \v 20 ಆಗ ಪಟ್ಟಣದ ಹೊರಗೆ ದ್ರಾಕ್ಷಿಯ ತೊಟ್ಟಿಯನ್ನು ತುಳಿಯಲಾಯಿತು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು, ಕುದುರೆಗಳ ಕಡಿವಾಣವನ್ನು ಮುಟ್ಟುವಷ್ಟು ಮುನ್ನೂರು ಕಿಲೋಮೀಟರ್ ದೂರ ಹರಿಯಿತು. \c 15 \s1 ಏಳುಮಂದಿ ದೂತರು, ಏಳು ಉಪದ್ರವಗಳು \p \v 1 ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು. \v 2 ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು, \v 3 ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: \q1 “ಕರ್ತ ಆಗಿರುವ ಸರ್ವಶಕ್ತ ದೇವರೇ, \q2 ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. \q1 ರಾಷ್ಟ್ರಗಳ ಅರಸರಾಗಿರುವ \q2 ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ. \q1 \v 4 ಕರ್ತನೇ, ನಿನಗೆ ಭಯಪಡದವರೂ \q2 ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? \q1 ಏಕೆಂದರೆ ನೀನೊಬ್ಬನೇ ಪರಿಶುದ್ಧನು. \q1 ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ \q2 ಎಲ್ಲಾ ರಾಷ್ಟ್ರಗಳವರು ಬಂದು, \q1 ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,”\f + \fr 15:4 \fr*\ft \+xt ಕೀರ್ತನೆ 111:2,3; ಧರ್ಮೋ 32:4; ಯೆರೆ 10:7; ಕೀರ್ತನೆ 86:9; 98:2\+xt*\ft*\f* \m ಎಂದು ಹೇಳಿದರು. \p \v 5 ಇದಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿರುವ ಸಾಕ್ಷಿಯ ಗುಡಾರದ ದೇವಾಲಯವು ತೆರೆದಿರುವುದನ್ನು ಕಂಡೆನು. \v 6 ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು. \v 7 ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು. \v 8 ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ. \c 16 \s1 ದೇವರ ಕೋಪದ ಏಳು ಬೋಗುಣಿಗಳು \p \v 1 ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು. \p \v 2 ಮೊದಲನೆಯ ದೂತನು ಹೋಗಿ ತನ್ನ ಬೋಗುಣಿಯೊಳಗಿರುವುದನ್ನು ಭೂಮಿಯ ಮೇಲೆ ಸುರಿಯಲು, ಮೃಗದ ಗುರುತನ್ನು ಹಾಕಿಸಿಕೊಂಡು ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು. \p \v 3 ಎರಡನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಸಮುದ್ರದ ಮೇಲೆ ಸುರಿಯಲು, ಅದು ಸತ್ತ ಮನುಷ್ಯನ ರಕ್ತದಂತಾಯಿತು, ಸಕಲ ಜೀವಿಗಳೂ ಸತ್ತವು. \p \v 4 ಮೂರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ನದಿಗಳ ಮೇಲೂ ನೀರಿನ ಬುಗ್ಗೆಗಳ ಮೇಲೂ ಸುರಿಯಲು, ಅವು ರಕ್ತವಾದವು. \v 5 ಆಗ ಜಲಾಶಯದ ಜಲಗಳ ದೂತನು: \q1 “ನೀವು ಇದ್ದವರೂ, ಇರುವವರೂ ಆಗಿರುವ ಪರಿಶುದ್ಧರು. \q2 ನೀವು ನೀತಿವಂತರಾಗಿದ್ದೀರಿ. ಏಕೆಂದರೆ, ನೀವು ಇವುಗಳಿಗೆ ನ್ಯಾಯತೀರಿಸುವಿರಿ. \q1 \v 6 ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. \q2 ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” \m ಎಂದು ಹೇಳುವುದನ್ನು ಕೇಳಿದೆನು. \p \v 7 ಆಗ ಬಲಿಪೀಠವು ಹೀಗೆ ಮಾತನಾಡುವುದನ್ನು ಕೇಳಿದೆನು: \q1 “ಕರ್ತಾ, ಸರ್ವಶಕ್ತರಾದ ದೇವರೇ, \q2 ನಿಮ್ಮ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ.” \p \v 8 ನಾಲ್ಕನೆಯ ದೇವದೂತನು ತನ್ನ ಬೋಗುಣಿಯೊಳಗಿರುವುದನ್ನು ಸೂರ್ಯನ ಮೇಲೆ ಸುರಿಯಲು, ಸೂರ್ಯನಿಗೆ ಮನುಷ್ಯರನ್ನು ಬೆಂಕಿಯಿಂದ ಕಂದಿಸುವ ಅಧಿಕಾರ ಕೊಡಲಾಯಿತು. \v 9 ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ. \p \v 10 ಐದನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು, ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು, \v 11 ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ. \p \v 12 ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು. \v 13 ಆಗ ಕಪ್ಪೆಗಳಂತೆ ಕಾಣುವ ಮೂರು ಅಶುದ್ಧಾತ್ಮಗಳು ಘಟಸರ್ಪನ ಬಾಯೊಳಗಿಂದಲೂ ಮತ್ತು ಸುಳ್ಳು ಪ್ರವಾದಿಯ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಬರುವುದನ್ನು ಕಂಡೆನು. \v 14 ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು. \b \mi \v 15 “ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.” \b \m \v 16 ಆಗ ಅವು ಅವರನ್ನು ಹೀಬ್ರೂ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರಿನ ಸ್ಥಳಕ್ಕೆ ಸೇರಿಸಿದವು. \p \v 17 ಏಳನೆಯ ದೂತನು ತನ್ನ ಬೋಗುಣಿಯಲ್ಲಿರುವುದನ್ನು ವಾಯುಮಂಡಲದ ಮೇಲೆ ಸುರಿಯಲು, ಆ ದೇವಾಲಯದೊಳಗಿನ ಸಿಂಹಾಸನದಿಂದ ಬಂದ ಮಹಾಧ್ವನಿಯು, “ಸಂಭವಿಸಿದ್ದಾಯಿತು” ಎಂದು ಹೇಳುವುದನ್ನು ಕೇಳಿದೆನು. \v 18 ಆಗ ಅಲ್ಲಿ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಮತ್ತು ಮಹಾಭೂಕಂಪವೂ ಸಂಭವಿಸಿದವು. ಮನುಷ್ಯನು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ. \v 19 ಮಹಾ ಪಟ್ಟಣವು ಮೂರು ಭಾಗಗಳಾಗಿ ಹೋಯಿತು ಮತ್ತು ರಾಷ್ಟ್ರಗಳ ನಗರಗಳು ಬಿದ್ದವು. ಇದಲ್ಲದೆ ಮಹಾ ಬಾಬಿಲೋನಿಗೆ ರೋಷವೆಂಬ ದ್ರಾಕ್ಷಾರಸದ ಬಟ್ಟಲನ್ನು ಕೊಡುವಂತೆ ದೇವರಿಗೆ ಅದು ಜ್ಞಾಪಕಕ್ಕೆ ಬಂತು. \v 20 ಆಗ ಪ್ರತಿಯೊಂದು ದ್ವೀಪಗಳು ಮರೆಯಾಗಿ ಹೋದವು, ಬೆಟ್ಟಗಳು ಕಾಣದಂತಾದವು. \v 21 ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ\f + \fr 16:21 \fr*\ft ಸುಮಾರು ನೂರು ಪೌಂಡುಗಳಷ್ಟು\ft*\f* ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು. \c 17 \s1 ಮೃಗದ ಮೇಲಿನ ಸ್ತ್ರೀ \p \v 1 ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ. \v 2 ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು,” ಎಂದು ಹೇಳಿದನು. \p \v 3 ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು. \v 4 ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು. \v 5 ಆಕೆಯ ಹಣೆಯ ಮೇಲೆ: \pc \sc “ಮಹಾ ಬಾಬಿಲೋನ್,\sc* \pc \sc ಜಾರ ಸ್ತ್ರೀಯರಿಗೂ\sc* \pc \sc ಭೂಮಿಯ ಎಲ್ಲಾ ಅಸಹ್ಯವಾದವುಗಳಿಗೂ ತಾಯಿ!”\sc* \m ಎಂದು ನಿಗೂಢ ಹೆಸರು ಬರೆದಿತ್ತು. \p \v 6 ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. \p ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು. \v 7 ಆಗ ದೂತನು ನನಗೆ: “ನೀನೇಕೆ ಆಶ್ಚರ್ಯಪಟ್ಟೆ? ನಾನು ನಿನಗೆ ಆ ಸ್ತ್ರೀಯ ವಿಷಯವಾಗಿಯೂ ಅವಳು ಹೊತ್ತುಕೊಂಡಿದ್ದ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದ ಮೃಗದ ವಿಷಯವಾಗಿಯೂ ಇರುವ ಗೂಡಾರ್ಥವನ್ನು ನಿನಗೆ ತಿಳಿಸುವೆನು. \v 8 ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು. \p \v 9 “ಆ ಏಳು ತಲೆಗಳು, ಆ ಸ್ತ್ರೀ ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. ಅವು ಏಳು ರಾಜರುಗಳಾಗಿರುತ್ತವೆ. \v 10 ಅವರಲ್ಲಿ ಐದು ರಾಜರು ಬಿದ್ದಿದ್ದಾರೆ; ಒಬ್ಬನು ಇದ್ದಾನೆ, ಇನ್ನೊಬ್ಬನು ಇನ್ನೂ ಬಂದಿಲ್ಲ. ಅವನು ಬಂದಾಗ ಸ್ವಲ್ಪಕಾಲ ಇರಬೇಕಾಗುತ್ತದೆ. \v 11 ಹಿಂದೆ ಇದ್ದು ಈಗ ಇಲ್ಲದ ಆ ಮೃಗವು ಎಂಟನೆಯವನು. ಅವನು ಆ ಏಳು ಜನರಲ್ಲಿ ಸೇರಿದವನಾಗಿದ್ದು, ವಿನಾಶಕ್ಕೆ ಹೋಗುತ್ತಿದ್ದಾನೆ. \p \v 12 “ನೀನು ಕಂಡ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಮೃಗದೊಂದಿಗೆ ಅಧಿಕಾರ ಹೊಂದುವವು. \v 13 ಅವರು ಏಕ ಮನಸ್ಸುಳ್ಳವರಾಗಿ, ಮೃಗಕ್ಕೆ ತಮ್ಮ ಬಲ ಮತ್ತು ಅಧಿಕಾರವನ್ನು ಕೊಡುವರು. \v 14 ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.” \p \v 15 ಅನಂತರ ದೂತನು ನನಗೆ, “ಜಾರಸ್ತ್ರೀ ಕೂತಿದ್ದ ಕಡೆ ನೀನು ಕಂಡ ನೀರುಗಳು, ಪ್ರಜೆಗಳನ್ನೂ ಸಮೂಹಗಳನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತವೆ. \v 16 ನೀನು ಕಂಡ ಆ ಮೃಗ ಮತ್ತು ಹತ್ತು ಕೊಂಬುಗಳು ಆ ಜಾರಸ್ತ್ರೀಯನ್ನು ದ್ವೇಷಿಸಿ, ಆಕೆಯನ್ನು ಗತಿಯಿಲ್ಲದವಳನ್ನಾಗಿಯೂ ಆಕೆಯನ್ನು ಬಟ್ಟೆ ಇಲ್ಲದವಳನ್ನಾಗಿಯೂ ಆಕೆಯ ಮಾಂಸವನ್ನು ತಿಂದು, ಆಕೆಯನ್ನು ಬೆಂಕಿಯಲ್ಲಿ ಸುಟ್ಟುಬಿಡುವವು. \v 17 ಏಕೆಂದರೆ, ದೇವರು ತಮ್ಮ ಮನಸ್ಸಿನಲ್ಲಿರುವುದನ್ನು ನಡೆಸುವಂತೆಯೂ ಅವುಗಳ ರಾಜ್ಯವನ್ನು ಮೃಗಕ್ಕೆ ಕೊಡಲು ಒಮ್ಮನಸ್ಸಾಗಿರುವಂತೆಯೂ ಮಾಡಿ, ದೇವರು ತಮ್ಮ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಇದನ್ನು ಅವುಗಳ ಹೃದಯದಲ್ಲಿಟ್ಟಿದ್ದಾರೆ. \v 18 ನೀನು ಕಂಡ ಆ ಸ್ತ್ರೀಯು ಭೂರಾಜರನ್ನು ಆಳುವ ಮಹಾನಗರಿಯೇ,” ಎಂದು ಹೇಳಿದನು. \c 18 \s1 ಬಾಬಿಲೋನಿನ ನಾಶನ \p \v 1 ಇದಾದನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಕೆಳಗೆ ಇಳಿದು ಬರುವುದನ್ನು ಕಂಡೆನು. ಅವನ ತೇಜಸ್ಸಿನಿಂದ ಭೂಮಿಯು ಬೆಳಗಿತು. \v 2 ಅವನು ಮಹಾಧ್ವನಿಯಿಂದ: \q1 “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’\f + \fr 18:2 \fr*\ft \+xt ಯೆಶಾಯ 21:9\+xt*\ft*\f* \q2 ಆಕೆಯು ದೆವ್ವಗಳಿಗೆ ವಾಸಸ್ಥಾನವೂ \q1 ಎಲ್ಲಾ ದುರಾತ್ಮಗಳಿಗೂ \q2 ಅಶುದ್ಧವಾದ ಹಾಗೂ ಅಸಹ್ಯವಾದ \q2 ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ. \q1 \v 3 ಏಕೆಂದರೆ ಎಲ್ಲಾ ದೇಶಗಳೂ \q2 ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. \q1 ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, \q2 ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” \m ಎಂದು ಕೂಗಿದನು. \s1 ಬಾಬಿಲೋನ್ ತೀರ್ಪಿನಿಂದ ತಪ್ಪಿಸಿಕೊಳ್ಳಲು ಎಚ್ಚರಿಕೆ \p \v 4 ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: \q1 “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, \q2 ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, \q2 ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’\f + \fr 18:4 \fr*\ft \+xt ಯೆರೆ 51:45\+xt*\ft*\f* \q1 \v 5 ಏಕೆಂದರೆ ಆಕೆಯ ಪಾಪಗಳು ಒಂದಕ್ಕೊಂದು ಸೇರಿ ಆಕಾಶದಷ್ಟಾಗಿವೆ. \q2 ದೇವರು ಆಕೆಯ ಅಪರಾಧಗಳನ್ನು ಜ್ಞಾಪಿಸಿಕೊಂಡಿದ್ದಾರೆ. \q1 \v 6 ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. \q2 ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. \q2 ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ. \q1 \v 7 ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ \q2 ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. \q1 ಏಕೆಂದರೆ ಆಕೆ ತನ್ನ ಹೃದಯದಲ್ಲಿ, \q2 ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. \q1 ನಾನು ವಿಧವೆಯಲ್ಲ,\f + \fr 18:7 \fr*\ft \+xt ಯೆಶಾಯ 47:7,8\+xt*\ft*\f* \q2 ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ. \q1 \v 8 ಆದ್ದರಿಂದ ಒಂದೇ ದಿನದಲ್ಲಿ ಆಕೆಯ ಉಪದ್ರವಗಳಾಗಿರುವ \q2 ಮರಣ, ಗೋಳಾಟ ಮತ್ತು ಕ್ಷಾಮವು ಬರುವುವು. \q1 ಆಕೆಯನ್ನು ತೀರ್ಪುಮಾಡುವ ಕರ್ತದೇವರು ಶಕ್ತರಾಗಿರುವುದರಿಂದ \q2 ಆಕೆಯು ಬೆಂಕಿಯಿಂದ ನಾಶವಾಗುವಳು.” \s1 ಭೂಮಿಯ ಮೇಲೆ ಬಾಬಿಲೋನಿಗಾಗಿ ಪ್ರಲಾಪ \p \v 9 “ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು. \v 10 ಆಕೆಯ ಯಾತನೆಯ ದೆಸೆಯಿಂದ ಹೆದರಿ, ದೂರದಲ್ಲಿ ನಿಂತು: \q1 “ ‘ಅಯ್ಯೋ! ಅಯ್ಯೋ! ಮಹಾನಗರಿಯೇ, \q2 ಬಲಿಷ್ಠನಗರಿ ಬಾಬಿಲೋನೇ! \q1 ಒಂದೇ ತಾಸಿನಲ್ಲಿ ನಿನಗೆ ತೀರ್ಪಾಯಿತಲ್ಲಾ?’ \m ಎಂದು ಶೋಕಿಸುವರು. \p \v 11 “ಭೂಮಿಯ ವರ್ತಕರು ಆಕೆಗಾಗಿ ದುಃಖಿಸಿ ಗೋಳಾಡುತ್ತಾ ತಮ್ಮ ಸರಕು ಸಾಮಗ್ರಿಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ದುಃಖಿಸುವರು. \v 12 ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ, \v 13 ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು. \p \v 14 “ನೀನು ಬಯಸಿದ ನಿನ್ನ ಪ್ರಾಣ ಫಲವು ನಿನ್ನಿಂದ ತೊಲಗಿಹೋಗಿದೆ. ನಿನ್ನ ಎಲ್ಲಾ ವೈಭವವು ಹಾಗೂ ನಿನ್ನ ಶೋಭೆಯ ಸೊಗಸುಗಳೆಲ್ಲಾ ನಿನ್ನಿಂದ ನಾಶವಾದವು. ಅವರು ಅವುಗಳನ್ನು ಇನ್ನೆಂದೂ ಕಾಣಲಾರರು. \v 15 ಆಕೆಯಿಂದ ಸಿರಿವಂತರಾದ ಆ ಸರಕುಗಳ ವರ್ತಕರು ದೂರದಲ್ಲಿ ನಿಂತು ಆಕೆಯ ಯಾತನೆಯ ದೆಸೆಯಿಂದ ಭಯಪಟ್ಟು, ದುಃಖಿಸಿ, \q1 \v 16 “ ‘ಅಯ್ಯೋ! ಅಯ್ಯೋ! ಶೋಕಭರಿತ ಮಹಾನಗರಿಯೇ, \q2 ನೀನು ನೇರಳೆ, ಕಡುಗೆಂಪು ನಾರುಮಡಿಯನ್ನು ಧರಿಸಿ, \q2 ಚಿನ್ನ, ಬೆಲೆಬಾಳುವ ಕಲ್ಲು ಮತ್ತು ಮುತ್ತುಗಳಿಂದ ಬೆಳಗುತ್ತಿದ್ದೆ. \q1 \v 17 ಒಂದೇ ತಾಸಿನಲ್ಲಿ ಅಂಥ ಮಹಾ ಐಶ್ವರ್ಯವು ನಾಶವಾಗಿ ಹೋಯಿತಲ್ಲಾ?’ ” \m ಎಂದು ಗೋಳಾಡುವರು. \p “ಪ್ರತಿಯೊಂದು ಹಡಗಿನ ಮಾಲೀಕರು ಮತ್ತು ಹಡಗು ಪಯಣಿಗರು, ನಾವಿಕರು ಮತ್ತು ಸಮುದ್ರದಿಂದ ತಮ್ಮ ಜೀವನೋಪಾಯ ಮಾಡುವವರೆಲ್ಲರೂ ದೂರದಲ್ಲಿ ನಿಂತು \v 18 ಆಕೆಯ ದಹನದ ಹೊಗೆಯನ್ನು ನೋಡಿ, ‘ಈ ಮಹಾಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಕೂಗುವರು. \v 19 ಆಗ ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು ಅಳುತ್ತಾ ದುಃಖಿಸುತ್ತಾ ಹೀಗೆ ಕೂಗುವರು: \q1 “ ‘ಅಯ್ಯೋ! ಅಯ್ಯೋ! ದುಃಖಭರಿತ ಮಹಾನಗರಿಯೇ, \q2 ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ \q2 ಆಕೆಯ ವೈಭವದಿಂದಲೇ ಐಶ್ವರ್ಯವಂತರಾದರಲ್ಲಾ! \q1 ಒಂದು ತಾಸಿನಲ್ಲಿ ಆಕೆ ಹಾಳಾದಳಲ್ಲಾ?’ \b \q1 \v 20 “ಪರಲೋಕವೇ ಸಂಭ್ರಮಿಸಿರಿ, \q2 ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ \q2 ಆಕೆಯ ನಿಮಿತ್ತ ಹರ್ಷಗೊಳ್ಳಿರಿ! \q1 ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ \q2 ದೇವರು ಆಕೆಗೆ ತೀರ್ಪುಮಾಡಿದ್ದಾರೆ!” \s1 ಬಾಬಿಲೋನಿನ ನಾಶ \p \v 21 ಅನಂತರ ಒಬ್ಬ ಬಲಿಷ್ಠನಾದ ದೂತನು, ಬೀಸುವ ಕಲ್ಲಿನಷ್ಟಿರುವ ದೊಡ್ಡ ಕಲ್ಲೊಂದನ್ನು ತೆಗೆದುಕೊಂಡು ಅದನ್ನು ಸಮುದ್ರದೊಳಗೆ ಬಿಸಾಡಿ: \q1 “ಮಹಾನಗರಿಯಾದ ಬಾಬಿಲೋನ್ \q2 ಹೀಗೆಯೇ ಬಲಾತ್ಕಾರದಿಂದ ಕೆಡವಲಾಗಿ \q2 ಎಂದಿಗೂ ಕಾಣಿಸದು. \q1 \v 22 ಬಾಬಿಲೋನೇ, ನಿನ್ನಲ್ಲಿ ಮತ್ತೆ ತಂತಿವಾದ್ಯ ನುಡಿಸುವವರು, \q2 ಸಂಗೀತಗಾರರು, ಕೊಳಲೂದುವವರು, ತುತೂರಿಯವರು, \q2 ಮಾಡುವ ಧ್ವನಿ ಎಂದೂ ಕೇಳಿಸದು. \q1 ಯಾವುದೇ ವಿಧವಾದ ಕಸಬುಗಾರನೂ \q2 ನಿನ್ನಲ್ಲಿ ಎಂದೂ ಕಂಡುಬಾರನು. \q1 ಬೀಸುವ ಕಲ್ಲಿನ ಶಬ್ದವು, \q2 ನಿನ್ನಲ್ಲಿ ಎಂದೂ ಕೇಳಿಸದು. \q1 \v 23 ದೀಪದ ಬೆಳಕು \q2 ನಿನ್ನಲ್ಲಿ ಎಂದೂ ಪ್ರಕಾಶಿಸದು. \q1 ವಧೂವರರ ಸ್ವರವು \q2 ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. \q1 ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, \q2 ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು. \q1 \v 24 ಆಕೆಯಲ್ಲಿ ಪ್ರವಾದಿಗಳ ಮತ್ತು ಪರಿಶುದ್ಧರ ರಕ್ತವೂ \q2 ಮತ್ತು ಭೂಮಿಯ ಮೇಲೆ ಕೊಲೆಯಾದವರ ರಕ್ತವೂ ಸಿಕ್ಕಿತು,” \m ಎಂದು ಹೇಳಿದನು. \c 19 \s1 ಹಲ್ಲೆಲೂಯ \p \v 1 ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: \q1 “ಹಲ್ಲೆಲೂಯಾ! \q1 ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ! \q2 \v 2 ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. \q1 ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ \q2 ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, \q1 ಆಕೆಯು ದೇವರ ದಾಸರನ್ನು ಹಿಂಸಿಸಿ, \q2 ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.” \p \v 3 ಎಂದೂ ದ್ವಿತೀಯ ಬಾರಿ: \q1 “ಹಲ್ಲೆಲೂಯಾ! \q1 ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತದೆ!” \m ಎಂದು ಘೋಷಿಸಿದರು. \p \v 4 ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು, ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿ: \q1 “ಆಮೆನ್, ಹಲ್ಲೆಲೂಯಾ!” \m ಎಂದರು. \p \v 5 ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: \q1 “ದೇವರ ಎಲ್ಲಾ ದಾಸರೇ, \q1 ದೇವರಿಗೆ ಭಯಪಡುವ ಹಿರಿಕಿರಿಯರೇ, \q2 ನಮ್ಮ ದೇವರನ್ನು ಸ್ತುತಿಸಿರಿ!” \m ಎಂದು ಹೇಳಿತು. \p \v 6 ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: \q1 “ಹಲ್ಲೆಲೂಯಾ! \q2 ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ. \q1 \v 7 ಕುರಿಮರಿ ಆಗಿರುವವರ ವಿವಾಹ ಕಾಲವು ಬಂತು. \q2 ಅವರಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ. \q1 ಸಂತೋಷಪಡೋಣ, ಹರ್ಷಗೊಳ್ಳೋಣ, \q2 ಅವರನ್ನು ಮಹಿಮೆಪಡಿಸೋಣ!” \q1 \v 8 ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು \q2 ತೊಟ್ಟುಕೊಳ್ಳುವುದಕ್ಕೆ ಆಕೆಗೆ ಅನುಗ್ರಹಿಸಲಾಗಿತ್ತು. \m ಏಕೆಂದರೆ ಆ ನಾರುಮಡಿಯು ಪರಿಶುದ್ಧರ ನೀತಿಕೃತ್ಯಗಳೇ. \b \p \v 9 ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು. \p \v 10 ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು. \s1 ಬಿಳಿಕುದುರೆಯ ಸವಾರ \p \v 11 ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ. \v 12 ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು. \v 13 ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದಾನೆ. ಆತನ ಹೆಸರು ದೇವರ ವಾಕ್ಯವೆಂಬುದೇ. \v 14 ಪರಲೋಕದ ಸೈನ್ಯದವರು ಶುಭ್ರ ಹಾಗೂ ಬಿಳಿಯ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿಯ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದರು. \v 15 ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.”\f + \fr 19:15 \fr*\ft \+xt ಕೀರ್ತನೆ 2:9\+xt*\ft*\f* ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ. \v 16 ಆತನ ತೊಡೆಯ ಮೇಲಣ ವಸ್ತ್ರದಲ್ಲಿ: \pc \sc ರಾಜಾಧಿರಾಜನೂ ಕರ್ತರ ಕರ್ತನೂ.\sc* \m ಎಂಬ ಹೆಸರು ಬರೆದಿದೆ. \p \v 17 ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾಧ್ವನಿಯಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಏರ್ಪಡಿಸುವ ಮಹಾಭೋಜನಕ್ಕೆ ಕೂಡಿಬನ್ನಿರಿ. \v 18 ರಾಜರು, ಸಹಸ್ರಾಧಿಪತಿಗಳು, ಪರಾಕ್ರಮಶಾಲಿಗಳು, ಅಶ್ವಗಳು, ಅಶ್ವಾರೂಢರು, ಸ್ವತಂತ್ರರು, ದಾಸರು, ದೊಡ್ಡವರು, ಚಿಕ್ಕವರು, ಇವರೆಲ್ಲರ ಮಾಂಸವನ್ನು ತಿನ್ನುವುದಕ್ಕೆ ಬನ್ನಿರಿ!” ಎಂದು ಹೇಳಿದನು. \p \v 19 ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವರ ಮೇಲೆಯೂ ಅವರ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿ ಬಂದಿರುವುದನ್ನು ನಾನು ಕಂಡೆನು. \v 20 ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು. \v 21 ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು. \c 20 \s1 ಸಾವಿರ ವರ್ಷ \p \v 1 ಆಗ ಒಬ್ಬ ದೂತನು ಅಧೋಲೋಕದ ಬೀಗದ ಕೈಯನ್ನೂ ದೊಡ್ಡಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. \v 2 ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು. \v 3 ಆ ಸಾವಿರ ವರ್ಷ ತೀರುವ ತನಕ ಅವನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೂತನು ಅವನನ್ನು ಅಧೋಲೋಕದಲ್ಲಿ ತಳ್ಳಿ, ಬಾಗಿಲು ಮುಚ್ಚಿ ಅದಕ್ಕೆ ಮುದ್ರೆ ಹಾಕಿದನು. ಇವುಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗತಕ್ಕದ್ದು. \p \v 4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು. \v 5 ಉಳಿದ ಸತ್ತವರು ಆ ಸಾವಿರ ವರ್ಷ ಗತಿಸುವ ತನಕ ಜೀವಿತರಾಗಲಿಲ್ಲ. ಇದೇ ಪ್ರಥಮ ಪುನರುತ್ಥಾನವು. \v 6 ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು. \s1 ಸೈತಾನನ ನ್ಯಾಯತೀರ್ಪಾಗಿದ್ದು \p \v 7 ಆ ಸಾವಿರ ವರ್ಷಗಳು ಗತಿಸಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವುದು. \v 8 ಅವನು ಹೊರಗೆ ಬಂದು ಭೂಮಿಯ ನಾಲ್ಕುದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ರಾಷ್ಟ್ರಗಳನ್ನು ಮೋಸಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು. ಅವರ ಸಂಖ್ಯೆಯು ಸಮುದ್ರತೀರದ ಮರಳಿನಷ್ಟಿರುವುದು. \v 9 ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು. \v 10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. \s1 ಸತ್ತವರ ಪುನರುತ್ಥಾನ ಮತ್ತು ನ್ಯಾಯತೀರ್ಪು \p \v 11 ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು. \v 12 ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. \v 13 ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು. \v 14 ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. \v 15 ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು. \c 21 \s1 ನೂತನ ಆಕಾಶ ಮತ್ತು ನೂತನ ಭೂಮಿ \p \v 1 ತರುವಾಯ, “ನೂತನ ಆಕಾಶವನ್ನೂ ನೂತನ ಭೂಮಿಯನ್ನೂ”\f + \fr 21:1 \fr*\ft \+xt ಯೆಶಾಯ 65:17\+xt*\ft*\f* ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಇಲ್ಲದಂತಾದವು. ಇನ್ನು ಸಮುದ್ರವು ಇರಲಿಲ್ಲ. \v 2 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು. \v 3 ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು. \v 4 ‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’\f + \fr 21:4 \fr*\ft \+xt ಯೆಶಾಯ 25:8\+xt*\ft*\f* ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು. \p \v 5 ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!” ಎಂದರು ಮತ್ತು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!” ಎಂದು ಹೇಳಿದನು. \p \v 6 ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ\f + \fr 21:6 \fr*\ft ಅಥವಾ \ft*\fqa ಆಲ್ಫಾ, ಒಮೆಗಾ\fqa*\f* ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು. \v 7 ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು. \v 8 ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು. \s1 ನೂತನ ಯೆರೂಸಲೇಮ \p \v 9 ಅಂತಿಮ ಏಳು ಉಪದ್ರವಗಳಿಂದ ತುಂಬಿದ ಏಳು ಬೋಗುಣಿಗಳನ್ನು ಹಿಡಿದಿದ್ದ ಏಳುಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ, ಯಜ್ಞದ ಕುರಿಮರಿಯಾದವವರಿಗೆ ಹೆಂಡತಿಯಾಗತಕ್ಕ ವಧುವನ್ನು ನಿನಗೆ ತೋರಿಸುವೆನು!” ಎಂದು ಹೇಳಿ, \v 10 ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಪರಿಶುದ್ಧ ಪಟ್ಟಣವಾದ ಯೆರೂಸಲೇಮು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದು ಬರುವುದನ್ನು ನನಗೆ ತೋರಿಸಿದನು. \v 11 ಅದು ದೇವರ ಮಹಿಮೆಯಿಂದ ಕೂಡಿತ್ತು. ಪಟ್ಟಣದ ಪ್ರಕಾಶವು ಸೂರ್ಯಕಾಂತದಂತೆ ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಅದು ಸ್ವಚ್ಛವಾದ ಸ್ಪಟಿಕದಂತೆ ಕಾಣಿಸಿತು. \v 12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ ಪುತ್ರರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು. \v 13 ಪೂರ್ವದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು. \v 14 ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು. \p \v 15 ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆಗೋಲನ್ನು ಹಿಡಿದಿದ್ದನು. \v 16 ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು, ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು 2,200 ಕಿಲೋಮೀಟರ್ ಆಗಿತ್ತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿದ್ದವು. \v 17 ಅವನು ಅದರ ಗೋಡೆಯನ್ನೂ ಅಳತೆ ಮಾಡಿದನು. ಅದು 65 ಮೀಟರ್ ಆಗಿತ್ತು. ಮನುಷ್ಯನ ಅಳತೆಯಂತೆ ದೇವದೂತನು ಅಳೆದನು. \v 18 ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲಾಗಿತ್ತು. ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. \v 19 ಪಟ್ಟಣದ ಗೋಡೆಯು ಮತ್ತು ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತ, ಎರಡನೆಯದು ವೈಡೂರ್ಯ, ಮೂರನೆಯದು ಪಚ್ಚೆ, ನಾಲ್ಕನೆಯದು ಪದ್ಮರಾಗ, \v 20 ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಬತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲ ಸ್ಪಟಿಕ. \v 21 ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದಾಗಿತ್ತು. ಪಟ್ಟಣದ ಮಹಾ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. \p \v 22 ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ. \v 23 ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು. \v 24 ಅದರ ಬೆಳಕಿನಲ್ಲಿ ಎಲ್ಲಾ ಜನರು ನಡೆಯುವರು. ಭೂರಾಜರು ತಮ್ಮ ಮಹಿಮೆಯನ್ನು ಅಲ್ಲಿಗೆ ತರುವರು. \v 25 ಅದರ ಹೆಬ್ಬಾಗಿಲುಗಳು ಒಂದು ದಿನವೂ ಮುಚ್ಚುವುದೇ ಇಲ್ಲ. ಇರುಳಂತೂ ಇರುವುದೇ ಇಲ್ಲ. \v 26 ಜನಾಂಗಗಳ ಮಹಿಮೆಯೂ ಗೌರವವೂ ಅಲ್ಲಿಗೆ ತರಲಾಗುವವು. \v 27 ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು. \c 22 \s1 ಜೀವನದಿ \p \v 1 ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು, \v 2 ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು. \v 3 ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು. \v 4 ದೇವರ ಮುಖವನ್ನು ಅವರು ಕಾಣುವರು. ಅವರ ಹಣೆಗಳ ಮೇಲೆ ದೇವರ ಹೆಸರು ಇರುವುದು. \v 5 ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು. \s1 ಯೇಸು ಬರುತ್ತಿದ್ದಾರೆ \p \v 6 ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು. \b \p \v 7 ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು. \b \p \v 8 ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. \v 9 ಅವನು ನನಗೆ, “ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!” ಎಂದು ಹೇಳಿದನು. \p \v 10 ಇದಲ್ಲದೆ ಅವನು, “ನನಗೆ ಈ ಪುಸ್ತಕದಲ್ಲಿರುವ ಪ್ರವಾದನಾ ವಾಕ್ಯಗಳಿಗೆ ಮುದ್ರೆ ಹಾಕಬೇಡ. ಏಕೆಂದರೆ ಸಮಯವು ಸಮೀಪವಾಗಿದೆ. \v 11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು. \b \s1 ಆಮಂತ್ರಣ ಮತ್ತು ಎಚ್ಚರಿಕೆ \p \v 12 ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ. \v 13 ನಾನೇ ಆಲ್ಫಾ ಮತ್ತು ಒಮೆಗಾ, ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. \b \p \v 14 “ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು. \v 15 ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು. \b \p \v 16 “ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು. \b \p \v 17 ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ. \b \p \v 18 ಈ ಗ್ರಂಥದ ಪ್ರವಾದನೆಯನ್ನು ಕೇಳುವ ಪ್ರತಿಯೊಬ್ಬರಿಗೂ ನಾನು ಸಾಕ್ಷಿ ಕೊಡುವುದೇನೆಂದರೆ: ಯಾರಾದರೂ ಹೆಚ್ಚು ಮಾತುಗಳನ್ನು ಇವುಗಳಿಗೆ ಕೂಡಿಸಿದರೆ, ದೇವರು ಅವರ ಮೇಲೆ ಈ ಗ್ರಂಥದಲ್ಲಿ ಬರೆದಿರುವ ಉಪದ್ರವಗಳನ್ನು ಕೂಡಿಸುವರು. \v 19 ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು. \b \p \v 20 ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. \p ಆಮೆನ್. ಕರ್ತ ಯೇಸುವೇ ಬಾ. \b \p \v 21 ನಮ್ಮ ಕರ್ತ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!