\id ROM - Biblica® Open Kannada Contemporary Version \ide UTF-8 \h ರೋಮಾಪುರದವರಿಗೆ \toc1 ರೋಮಾಪುರದವರಿಗೆ ಪೌಲನು ಬರೆದ ಪತ್ರಿಕೆ \toc2 ರೋಮಾಪುರದವರಿಗೆ \toc3 ರೋಮಾ \mt1 ರೋಮಾಪುರದವರಿಗೆ \mt2 ಪೌಲನು ಬರೆದ ಪತ್ರಿಕೆ \c 1 \p \v 1 ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ. \v 2 ದೇವರು ಮುಂಚಿತವಾಗಿ ಪವಿತ್ರ ವೇದಗಳಲ್ಲಿ ತಮ್ಮ ಪ್ರವಾದಿಗಳ ಮೂಲಕ ವಾಗ್ದಾನಮಾಡಿದ, \v 3 ಈ ಸುವಾರ್ತೆಯು ದೇವಪುತ್ರನ ವಿಷಯವಾದದ್ದು. ಯೇಸು ಮನುಷ್ಯತ್ವದ ಪ್ರಕಾರ ದಾವೀದನ ಸಂತಾನದವರೂ \v 4 ಸತ್ತವರೊಳಗಿಂದ ಪುನರುತ್ಥಾನಗೊಂಡು ಪರಿಶುದ್ಧತೆಯ ಆತ್ಮದ ಪ್ರಕಾರ ದೇವಪುತ್ರರೆಂದು ಪ್ರಬಲವಾಗಿ ನಿರ್ಣಯಿಸಲಾದವರೂ ಆಗಿದ್ದಾರೆ. ಇವರೇ ನಮ್ಮ ಕರ್ತ ಯೇಸು ಕ್ರಿಸ್ತ. \v 5 ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು. \v 6 ಯೇಸು ಕ್ರಿಸ್ತನವರಾಗಲು ಕರೆಯಲಾದವರಲ್ಲಿ ಯೆಹೂದ್ಯರಲ್ಲದವರಲ್ಲಿ ನೀವೂ ಸಹ ಸೇರಿದ್ದೀರಿ. \b \p \v 7 ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: \b \p ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ. \b \s1 ರೋಮ್ ಪಟ್ಟಣ ಸಂದರ್ಶಿಸಬೇಕೆಂಬ ಪೌಲನ ಬಯಕೆ \p \v 8 ಮೊದಲನೆಯದಾಗಿ, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಕ್ರಿಸ್ತ ಯೇಸುವಿನ ಮೂಲಕ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. \v 9 ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ. \v 10 ನಾನು ಪ್ರಾರ್ಥನೆ ಮಾಡುವಾಗಲೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತಾ ಇನ್ನು ಮೇಲಾದರೂ ನಿಮ್ಮ ಬಳಿಗೆ ಬರುವುದಕ್ಕೆ ದೇವರ ಚಿತ್ತದಿಂದ ನನಗೆ ಯಾವ ರೀತಿಯಲ್ಲಾದರೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ. \p \v 11 ನಿಮ್ಮನ್ನು ದೃಢಪಡಿಸುವುದಕ್ಕಾಗಿ ನಾನು ನಿಮಗೆ ಕೆಲವು ಆತ್ಮಿಕ ವರಗಳನ್ನು ಕೊಡಲು ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. \v 12 ಹೀಗೆ ನಾವು ಒಬ್ಬರಿಂದೊಬ್ಬರ ನಂಬಿಕೆಯಿಂದ ಪರಸ್ಪರ ಪ್ರೋತ್ಸಾಹಗೊಳ್ಳಬೇಕು. \v 13 ಪ್ರಿಯರೇ, ನನ್ನ ಸೇವೆಯು ಯೆಹೂದ್ಯರಲ್ಲದವರಲ್ಲಿ ಫಲಉಂಟಾದಂತೆ ನಿಮ್ಮಲ್ಲಿಯೂ ಫಲಉಂಟಾಗಬೇಕೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಉದ್ದೇಶಿಸಿದೆನು. ಆದರೆ ಅದಕ್ಕೆ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ. \p \v 14 ಗ್ರೀಕರಿಗೂ ಗ್ರೀಕರಲ್ಲದವರಿಗೂ ಜ್ಞಾನಿಗಳಿಗೂ ಮೂಢರಿಗೂ ನಾನು ಸಾಲಗಾರನಾಗಿದ್ದೇನೆ. \v 15 ಹೀಗಿರುವುದರಿಂದ ರೋಮ್ ನಗರದಲ್ಲಿರುವ ನಿಮಗೂ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನು ಉತ್ಸುಕನಾಗಿದ್ದೇನೆ. \p \v 16 ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ. \v 17 ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,”\f + \fr 1:17 \fr*\ft \+xt ಹಬ 2:4\+xt*\ft*\f* ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು. \s1 ದೇವರ ಕೋಪಾಗ್ನಿ \p \v 18 ದುಷ್ಟತನದಿಂದ ಸತ್ಯವನ್ನು ಅಡಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆ ಹಾಗೂ ದುಷ್ಟತನದ ಮೇಲೆ ದೇವರ ರೌದ್ರವು ಪರಲೋಕದಿಂದ ಪ್ರಕಟವಾಗುತ್ತಿದೆ. \v 19 ದೇವರ ವಿಷಯವಾಗಿ ತಿಳಿಯಬಹುದಾದದ್ದನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. ಏಕೆಂದರೆ ಅದನ್ನು ಅವರಿಗೆ ದೇವರೇ ಪ್ರಕಟಿಸಿದರು. \v 20 ಹೇಗೆಂದರೆ ಕಣ್ಣಿಗೆ ಕಾಣದ ಗುಣಲಕ್ಷಣಗಳಾಗಿರುವ ದೇವರ ಗುಣವೂ ನಿತ್ಯಶಕ್ತಿಯೂ ದೈವಸ್ವಭಾವವೂ ಜಗದ ಸೃಷ್ಟಿ ದಿನದಿಂದ ಅವರು ಸೃಷ್ಟಿಸಿದವುಗಳ ಮೂಲಕ ಸ್ಪಷ್ಟವಾಗಿ ಕಂಡುಬರುತ್ತಿವೆ. ಹೀಗಿರುವುದರಿಂದ ಜನರಿಗೆ ತಪ್ಪಿಸಿಕೊಳ್ಳಲು ನೆಪ ಇಲ್ಲವಾಗಿದೆ. \p \v 21 ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು. \v 22 ತಾವು ಜ್ಞಾನಿಗಳೆಂದು ಹೇಳಿಕೊಂಡರೂ ಮೂಢರಾಗಿದ್ದಾರೆ. \v 23 ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಶು, ಪಕ್ಷಿ, ಸರ್ಪಾದಿಗಳ ಮೂರ್ತಿಗಳೊಂದಿಗೆ ಬದಲಿಸಿಕೊಂಡರು. \p \v 24 ಆದಕಾರಣ ಅವರು ತಮ್ಮ ಹೃದಯದ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಲಿನ ಮಾಡಿಕೊಳ್ಳಲಿ ಎಂದು ದೇವರು ಅವರನ್ನು ಅಶುದ್ಧತೆಗೆ ಒಪ್ಪಿಸಿಬಿಟ್ಟರು. \v 25 ಅವರು ದೇವರ ಸತ್ಯವನ್ನು ಸುಳ್ಳನ್ನಾಗಿ ಬದಲಿಸಿಕೊಂಡು, ಸೃಷ್ಟಿಕರ್ತನನ್ನು ಆರಾಧಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವೆ ಸಲ್ಲಿಸುವವರಾದರು. ಸೃಷ್ಟಿ ಕರ್ತನೇ ನಿರಂತರವಾಗಿ ಸ್ತುತಿ ಹೊಂದತಕ್ಕವರು. ಆಮೆನ್. \p \v 26 ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗೆ ಒಪ್ಪಿಸಿಬಿಟ್ಟರು. ಹೇಗೆಂದರೆ ಅವರ ಸ್ತ್ರೀಯರು ಸಹ ಸ್ವಾಭಾವಿಕವಾದ ಭೋಗವನ್ನು ಬಿಟ್ಟು, ಅಸ್ವಾಭಾವಿಕವಾದದ್ದನ್ನು ಅನುಸರಿಸಿದರು. \v 27 ಅದರಂತೆ ಗಂಡಸರು ಸಹ ಸ್ವಾಭಾವಿಕವಾದ ಸ್ತ್ರೀಭೋಗವನ್ನು ಬಿಟ್ಟು ಒಬ್ಬರೊಂದಿಗೊಬ್ಬರು ಕಾಮಾತುರದಿಂದ ತಾಪಗೊಂಡರು. ಗಂಡಸರ ಸಂಗಡ ಗಂಡಸರು ಕೇವಲ ಅವಲಕ್ಷಣ ಕೃತ್ಯಗಳನ್ನು ನಡೆಸಿ ತಮ್ಮ ತಪ್ಪಿಗೆ ತಕ್ಕ ದಂಡನೆಯನ್ನು ಹೊಂದುವವರಾದರು. \p \v 28 ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು. \v 29 ಅವರು ಸಕಲ ವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ, ದುಷ್ಟತ್ವ, ಹೊಟ್ಟೆಕಿಚ್ಚು, ಕೊಲೆ, ಜಗಳ, ಕಪಟ, ಹಗೆತನಗಳಿಂದಲೂ ತುಂಬಿದವರಾದರು. \v 30 ಅವರು ಕಿವಿ ಊದುವವರೂ ಚಾಡಿಹೇಳುವವರೂ ದೇವರನ್ನು ದ್ವೇಷಿಸುವವರೂ ಸೊಕ್ಕಿನವರೂ ಅಹಂಕಾರಿಗಳೂ ಬಡಾಯಿ ಕೊಚ್ಚುವವರೂ ಕೇಡನ್ನು ಕಲ್ಪಿಸುವವರೂ ತಂದೆತಾಯಿಗಳ ಮಾತನ್ನು ಕೇಳದವರೂ \v 31 ವಿವೇಚನೆಯಿಲ್ಲದವರೂ ನಂಬಿಕೆಯಿಲ್ಲದವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು. \v 32 ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ. \c 2 \s1 ದೇವರ ನೀತಿಯ ತೀರ್ಪು \p \v 1 ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ. \v 2 ಆದರೆ ಅಂಥಾ ಅಪರಾಧಗಳನ್ನು ಮಾಡುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು. \v 3 ಮನುಷ್ಯನೇ, ಅಂಥವುಗಳನ್ನು ನಡೆಸುವವರ ಮೇಲೆ ತೀರ್ಪುಮಾಡುತ್ತಿರುವ ನೀನು ದೇವರ ತೀರ್ಪಿನಿಂದ ತಪ್ಪಿಸಿಕೊಂಡೇನೆಂದು ನೆನಸುತ್ತೀಯೋ? \v 4 ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ? \p \v 5 ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ. \v 6 ದೇವರು, “ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು.”\f + \fr 2:6 \fr*\ft \+xt ಕೀರ್ತನೆ 62:12; ಜ್ಞಾನೋಕ್ತಿ 24:12\+xt*\ft*\f* \v 7 ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು. \v 8 ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ. \v 9 ಕೆಟ್ಟದ್ದನ್ನು ನಡೆಸುವ ಪ್ರತಿ ಮನುಷ್ಯನಿಗೆ ಕಷ್ಟವೂ ಸಂಕಟವೂ ಬರುತ್ತವೆ, ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ. \v 10 ಆದರೆ ಒಳ್ಳೆಯದನ್ನು ನಡೆಸುವ ಪ್ರತಿಯೊಬ್ಬನಿಗೆ ಮಹಿಮೆಯೂ ಗೌರವವೂ ಸಮಾಧಾನವೂ ಉಂಟಾಗುತ್ತವೆ. ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ. \v 11 ದೇವರಲ್ಲಿ ಪಕ್ಷಪಾತವಿಲ್ಲ. \p \v 12 ನಿಯಮವಿಲ್ಲದವರಾಗಿ ಪಾಪಮಾಡಿದವರು ನಿಯಮವಿಲ್ಲದೆಯೇ ನಾಶಹೊಂದುವರು. ನಿಯಮಕ್ಕೆ ಅಧೀನರಾಗಿದ್ದು ಪಾಪಮಾಡಿದವರು ನಿಯಮದ ಮೂಲಕವಾಗಿ ತೀರ್ಪನ್ನು ಹೊಂದುವರು. \v 13 ಯಾರೂ ನಿಯಮವನ್ನು ಕೇಳಿದ ಮಾತ್ರಕ್ಕೆ ದೇವರ ಮುಂದೆ ನೀತಿವಂತರಾಗುವುದಿಲ್ಲ. ಆದರೆ ನಿಯಮಕ್ಕೆ ವಿಧೇಯರಾಗುವವರೇ ನೀತಿವಂತರಾಗುವರು. \v 14 ನಿಯಮವಿಲ್ಲದ ಯೆಹೂದ್ಯರಲ್ಲದವರು ಸ್ವಾಭಾವಿಕವಾಗಿ ನಿಯಮದಲ್ಲಿ ಹೇಳಿದಂತೆ ನಡೆಯುವಾಗ ಅವರಿಗೆ ನಿಯಮವಿಲ್ಲದಿದ್ದರೂ ಅವರ ಅಂತರಂಗವೇ ನಿಯಮವಾಗಿದೆ. \v 15 ಅವರು ತಮ್ಮ ನಡತೆಯಿಂದಲೇ ನಿಯಮವು ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಾಕ್ಷಿಕೊಡುತ್ತದೆ. ಅವರ ಯೋಚನೆಗಳು ಒಂದಕ್ಕೊಂದು ಇದು ತಪ್ಪು ಅಥವಾ ತಪ್ಪಲ್ಲ ಎಂಬುದನ್ನು ಸೂಚಿಸುತ್ತವೆ. \v 16 ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು. \s1 ಯೆಹೂದ್ಯರು ಮತ್ತು ಮೋಶೆಯ ನಿಯಮ \p \v 17 ಆದರೆ, ನೀನು ಯೆಹೂದ್ಯನೆನಿಸಿಕೊಂಡವನೂ ನಿಯಮದಲ್ಲಿ ಭರವಸೆಯಿಟ್ಟವನೂ ದೇವರಿಗೆ ಸೇರಿದವನೂ \v 18 ದೇವರ ಚಿತ್ತವನ್ನು ಬಲ್ಲವನೂ ನಿಯಮದಿಂದ ಉಪದೇಶವನ್ನು ಹೊಂದಿ ಯಾವುದು ಉತ್ತಮವಾದದ್ದೆಂದು ಅನುಮೋದಿಸುವವನೂ ಆಗಿದ್ದೀ. \v 19 ನಿನಗೆ ನಿಯಮದ ಜ್ಞಾನ ಮತ್ತು ಸತ್ಯವು ಇರುವುದರಿಂದ ನೀನು ಕುರುಡರಿಗೆ ಮಾರ್ಗದರ್ಶಿಯೂ ಕತ್ತಲೆಯಲ್ಲಿರುವವರಿಗೆ ಬೆಳಕೂ \v 20 ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೀಯೆಂದು ಧೈರ್ಯವಾಗಿದ್ದೀಯಲ್ಲಾ? \v 21 ಇತರರಿಗೆ ಉಪದೇಶಿಸುವ ನೀನು, ನಿನಗೆ ನೀನೇ ಉಪದೇಶ ಮಾಡಿಕೋ. ಕದಿಯಬಾರದೆಂದು ಸಾರುವ ನೀನು ಕದಿಯುತ್ತೀಯೋ? \v 22 ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳಲ್ಲಿ ಅಸಹ್ಯಪಡುವ ನೀನು ದೇವಾಲಯಗಳನ್ನು ದೋಚುತ್ತೀಯೋ? \v 23 ನಿಯಮದ ಬಗ್ಗೆ ಹೆಚ್ಚಳ ಪಡುವ ನೀನು ನಿಯಮವನ್ನು ಮೀರಿ ನಡೆದು ದೇವರನ್ನು ಅವಮಾನ ಪಡಿಸುತ್ತೀಯೋ? \v 24 ಪವಿತ್ರ ವೇದದಲ್ಲಿ ಬರೆದಿರುವಂತೆ, “ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದವರಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆ.”\f + \fr 2:24 \fr*\ft \+xt ಯೆಶಾಯ 52:5; ಯೆಹೆ 36:20,22\+xt*\ft*\f* \p \v 25 ನೀನು ನಿಯಮವನ್ನು ಕೈಕೊಳ್ಳುವವನಾದರೆ, ಸುನ್ನತಿ ಪ್ರಯೋಜನಕರವಾಗಿರುವುದು. ಆದರೆ ನೀನು ನಿಯಮವನ್ನು ಮೀರಿ ನಡೆಯುವವನಾದರೆ, ನಿನಗೆ ಸುನ್ನತಿಯಾಗಿದ್ದರೂ ಇಲ್ಲದಂತಾಗಿರುವುದು. \v 26 ಸುನ್ನತಿಯಿಲ್ಲದವನು ನಿಯಮಗಳನ್ನು ಕೈಗೊಳ್ಳುವವರೆಗೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸುವುದಿಲ್ಲವೇ? \v 27 ಅವನು ಶಾರೀರಿಕವಾಗಿ ಸುನ್ನತಿಯಿಲ್ಲದವನಾಗಿದ್ದರೂ ನಿಯಮವನ್ನು ಅನುಸರಿಸುವುದರಿಂದ ಲಿಖಿತ ನಿಯಮವೂ ಸುನ್ನತಿಯೂ ಇದ್ದು ನಿಯಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ತೀರ್ಪು ಮಾಡುವನಲ್ಲವೇ? \p \v 28 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ. \v 29 ಆದರೆ, ಆಂತರ್ಯದಲ್ಲಿ ಯೆಹೂದ್ಯನಾಗಿರುವವನೇ ಯೆಹೂದ್ಯನು. ಹಾಗೆಯೇ ಸುನ್ನತಿಯು ಆತ್ಮನಿಂದ ಹೃದಯದಲ್ಲಿ ಆಗುವಂಥದ್ದಾಗಿದೆ. ಇದು ಲಿಖಿತ ನಿಯಮದಿಂದ ಆಗುವಂಥದಲ್ಲ. ಅಂಥವನಿಗೆ ಮೆಚ್ಚುಗೆಯು ಮನುಷ್ಯರಿಂದ ಬರುವಂಥದಲ್ಲ, ದೇವರಿಂದಲೇ ಬರುವಂಥದ್ದಾಗಿದೆ. \c 3 \s1 ದೇವರ ನಂಬಿಗಸ್ತಿಕೆ \p \v 1 ಹಾಗಾದರೆ ಯೆಹೂದ್ಯರಾಗಿರುವುದರಿಂದ ಪ್ರಯೋಜನವೇನು? ಅಥವಾ ಸುನ್ನತಿಯಿಂದ ಲಾಭವೇನು? \v 2 ಎಲ್ಲಾ ವಿಷಯಗಳಲ್ಲಿಯೂ ಬಹಳ ಪ್ರಯೋಜನವಿದೆ. ಮೊದಲನೆಯದಾಗಿ ದೇವರ ವಾಕ್ಯಗಳು ಯೆಹೂದ್ಯರ ವಶಕ್ಕೆ ಒಪ್ಪಿಸಲಾಗಿವೆ. \p \v 3 ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರ ಅಪನಂಬಿಕೆಯು ದೇವರ ಪ್ರಾಮಾಣಿಕತೆಯನ್ನು ರದ್ದುಗೊಳಿಸುವುದೇ? \v 4 ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: \q1 “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. \q2 ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.”\f + \fr 3:4 \fr*\ft \+xt ಕೀರ್ತನೆ 51:4\+xt*\ft*\f* \p \v 5 ಹೀಗೆ ನಮ್ಮ ಅನೀತಿಯೂ ದೇವರ ನೀತಿಯನ್ನು ಪ್ರಸಿದ್ಧಿಗೆ ತರುವುದಾದರೆ, ಕೋಪವನ್ನು ಸುರಿಸುವ ದೇವರು ಅನ್ಯಾಯಗಾರರೇನು? ನಾನು ಮಾನವ ರೀತಿಯಲ್ಲಿ ಮಾತನಾಡಿದ್ದೇನೆ. \v 6 ಎಂದಿಗೂ ಹಾಗೆ ಆಗದಿರಲಿ. ದೇವರು ಅನ್ಯಾಯಗಾರರಾಗಿದ್ದರೆ ಲೋಕಕ್ಕೆ ನ್ಯಾಯತೀರಿಸುವುದು ಹೇಗೆ? \v 7 “ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೊಂಡು ಅವರ ಮಹಿಮೆಯನ್ನು ಹೆಚ್ಚಿಸುವುದಾದರೆ ನನಗೆ ಪಾಪಿಯೆಂದು ಇನ್ನು ತೀರ್ಪಾಗುವುದು ಏಕೆ?” \v 8 “ಒಳ್ಳೆಯದಾಗುವಂತೆ ಕೆಟ್ಟದ್ದನ್ನು ಮಾಡೋಣ,” ಎಂದು ನಾವು ಹೇಳುತ್ತಿರುವುದಾಗಿ, ಕೆಲವರು ನಮ್ಮ ಬಗ್ಗೆ ದೂಷಿಸಿ ಹೇಳುವ ಪ್ರಕಾರ ನಾವೇಕೆ ಹೇಳಬಾರದು? ಅಂಥವರಿಗೆ ದಂಡನೆಯ ತೀರ್ಪಾಗುವುದು ನ್ಯಾಯವೇ! \s1 ಯಾರೂ ನೀತಿವಂತರಲ್ಲ \p \v 9 ಹಾಗಾದರೆ ಏನು? ಯೆಹೂದ್ಯರಾದ ನಾವು ಯೆಹೂದ್ಯರಲ್ಲದವರಿಗಿಂತಲೂ ಶ್ರೇಷ್ಠರೋ? ಎಂದಿಗೂ ಇಲ್ಲವಲ್ಲ. ಯೆಹೂದ್ಯರಾಗಲಿ, ಯೆಹೂದ್ಯರಲ್ಲದವರಾಗಲಿ ಎಲ್ಲರೂ ಪಾಪದ ಶಕ್ತಿಗೆ ಒಳಗಾದವರೆಂದು ನಾವು ಈಗಾಗಲೇ ತೋರಿಸಿದ್ದೇವೆ. \v 10 ಪವಿತ್ರ ವೇದಗಳಲ್ಲಿ ಬರೆದಿರುವಂತೆ: \q1 “ನೀತಿವಂತನು ಇಲ್ಲ, ಒಬ್ಬನೂ ಇಲ್ಲ. \q2 \v 11 ಅರ್ಥಮಾಡಿಕೊಳ್ಳುವವನು ಒಬ್ಬನೂ ಇಲ್ಲ. \q2 ದೇವರನ್ನು ಹುಡುಕುವವನು ಒಬ್ಬನೂ ಇಲ್ಲ. \q1 \v 12 ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, \q2 ಎಲ್ಲರೂ ಕೆಲಸಕ್ಕೆ ಬಾರದವರಾಗಿದ್ದಾರೆ. \q1 ಒಳ್ಳೆಯದನ್ನು ಮಾಡುವವನು ಇಲ್ಲ \q2 ಒಬ್ಬನಾದರೂ ಇಲ್ಲ.”\f + \fr 3:12 \fr*\ft \+xt ಕೀರ್ತನೆ 14:1-3; 53:1-3; ಪ್ರಸಂಗಿ 7:20\+xt*\ft*\f* \q1 \v 13 “ಅವರ ಗಂಟಲುಗಳು ತೆರೆದ ಸಮಾಧಿಗಳು. \q2 ಅವರ ನಾಲಿಗೆಯು ವಂಚನೆಯನ್ನು ನುಡಿಯುತ್ತದೆ.”\f + \fr 3:13 \fr*\ft \+xt ಕೀರ್ತನೆ 5:9\+xt*\ft*\f* \q1 “ಅವರ ತುಟಿಗಳಲ್ಲಿ ಹಾವಿನ ವಿಷವಿದೆ.”\f + \fr 3:13 \fr*\ft \+xt ಕೀರ್ತನೆ 140:3\+xt*\ft*\f* \q2 \v 14 “ಅವರ ಬಾಯಿ ಶಾಪದಿಂದಲೂ ಕಹಿಯಿಂದಲೂ ತುಂಬಿರುತ್ತವೆ.”\f + \fr 3:14 \fr*\ft \+xt ಕೀರ್ತನೆ 10:7\+xt*\ft*\f* \q1 \v 15 “ಅವರ ಕಾಲುಗಳು ರಕ್ತಪಾತಕ್ಕೆ ಆತುರಗೊಂಡಿವೆ. \q2 \v 16 ನಾಶ, ಸಂಕಟಗಳು ಅವರ ಮಾರ್ಗಗಳಲ್ಲಿ ಹಿಂಬಾಲಿಸುತ್ತವೆ. \q1 \v 17 ಸಮಾಧಾನದ ಮಾರ್ಗವನ್ನೇ ಅವರು ಅರಿಯರು.”\f + \fr 3:17 \fr*\ft \+xt ಯೆಶಾಯ 59:7,8\+xt*\ft*\f* \q2 \v 18 “ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.”\f + \fr 3:18 \fr*\ft \+xt ಕೀರ್ತನೆ 36:1\+xt*\ft*\f* \p \v 19 ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು. \v 20 ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ. \s1 ನಂಬಿಕೆಯ ಮೂಲಕ ನೀತಿವಂತರೆಂಬ ನಿರ್ಣಯ \p \v 21 ಆದರೆ ಈಗ ನಿಯಮವಿಲ್ಲದೆ ದೇವರ ನೀತಿಯು ಪ್ರಕಟವಾಗಿದೆ. ಅದಕ್ಕೆ ನಿಯಮವೂ ಪ್ರವಾದಿಗಳೂ ಸಾಕ್ಷಿಕೊಡುತ್ತಾರೆ. \v 22 ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ. \v 23 ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ. \v 24 ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ. \v 25 ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ\f + \fr 3:25 \fr*\ft \+xt ಯಾಜಕ 16:15,16\+xt*\ft*\f* ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ \v 26 ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ. \p \v 27 ಹಾಗಾದರೆ, ನಾವು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವೆಲ್ಲಿ? ಆಸ್ಪದವೇ ಇಲ್ಲ. ನೀತಿವಂತರೆಂಬ ನಿರ್ಣಯ ನಿಯಮದಿಂದಲೋ? ಕ್ರಿಯೆಗಳಿಂದಲೋ? ಇಲ್ಲ, ಅದು ಇಲ್ಲದೆ ಹೋಯಿತು. ಅದು ನಂಬಿಕೆಯ ನಿಯಮದಿಂದಲೇ. \v 28 ಏಕೆಂದರೆ ನಿಯಮವನ್ನು ಕೈಕೊಳ್ಳುವುದರಿಂದಲೇ. ನಂಬಿಕೆಯಿಂದಲೇ ಒಬ್ಬ ಮನುಷ್ಯನು ನೀತಿವಂತನೆಂದು ನಿರ್ಣಯ ಹೊಂದುತ್ತಾನೆಂದು ಎಣಿಸುತ್ತೇವೆ. \v 29 ದೇವರು ಯೆಹೂದ್ಯರಿಗೆ ಮಾತ್ರ ದೇವರೋ? ದೇವರು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿರುವುದಿಲ್ಲವೋ? ಹೌದು, ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾರೆ. \v 30 ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. \v 31 ಹಾಗಾದರೆ, ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. ಹಾಗಾದರೆ, ನಾವು ನಂಬಿಕೆಯ ಮೂಲಕ ನಿಯಮವನ್ನು ನಿರರ್ಥಕಗೊಳಿಸುತ್ತೇವೋ? ಎಂದಿಗೂ ಇಲ್ಲ. ನಾವು ನಿಯಮವನ್ನು ಸ್ಥಿರಪಡಿಸುತ್ತೇವಷ್ಟೇ. \c 4 \s1 ಅಬ್ರಹಾಮನು ನಂಬಿಕೆಯಿಂದ ನೀತಿವಂತನೆಂದು ನಿರ್ಣಯಿಸಲಾದದ್ದು \p \v 1 ಹಾಗಾದರೆ ವಂಶಾನುಕ್ರಮವಾಗಿ ನಮ್ಮ ಮೂಲ ಪಿತೃವಾಗಿರುವ ಅಬ್ರಹಾಮನು, ಈ ವಿಷಯದಲ್ಲಿ ಏನು ಕಂಡುಕೊಂಡನೆಂದು ಹೇಳಬೇಕು? \v 2 ಅಬ್ರಹಾಮನು ಕ್ರಿಯೆಗಳ ಮೂಲಕ ನೀತಿವಂತನೆಂದು ನಿರ್ಣಯ ಹೊಂದಿದವನಾಗಿದ್ದರೆ, ದೇವರ ಮುಂದೆ ಹೊಗಳಿಸಿಕೊಳ್ಳಲು ಅವನಿಗೆ ಆಸ್ಪದ ಇರುವುದಿಲ್ಲ. \v 3 ಏಕೆಂದರೆ ಪವಿತ್ರ ವೇದವು: “ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,”\f + \fr 4:3 \fr*\ft \+xt ಆದಿ 15:6\+xt*\ft*\f* ಎಂದು ಹೇಳುತ್ತದೆ. \p \v 4 ಕೆಲಸ ಮಾಡಿದವನಿಗೆ ದೊರೆಯುವ ಕೂಲಿಯು, ಉಚಿತ ದಾನವಲ್ಲ ಅದು ಅವನ ದುಡಿದ ಸಂಪಾದನೆ. \v 5 ಆದರೆ ಯಾರು ಕೃತ್ಯಗಳನ್ನು ಮಾಡದೆ, ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವ ದೇವರಲ್ಲಿ ನಂಬಿಕೆ ಇಡುತ್ತಾರೋ ಅವರ ನಂಬಿಕೆಯೇ ನೀತಿ ಎಂದು ಎಣಿಸಲಾಗುವುದು. \v 6 ದೇವರು ಯಾರನ್ನು ಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾರೋ ಅವನೇ ಧನ್ಯನು. ಇದರ ಬಗ್ಗೆ ದಾವೀದನು ಹೀಗೆ ಹೇಳುತ್ತಾನೆ: \q1 \v 7 “ಯಾರ ಅಪರಾಧಗಳು ಕ್ಷಮಿಸಲಾಗಿವೆಯೋ, \q2 ಯಾರ ಪಾಪಗಳು ಮುಚ್ಚಲಾಗಿವೆಯೋ \q2 ಅವರೇ ಧನ್ಯರು. \q1 \v 8 ಯಾರ ಪಾಪಗಳನ್ನು ಕರ್ತನು ಅವರ ಲೆಕ್ಕಕ್ಕೆ ಎಣಿಸುವುದಿಲ್ಲವೋ, \q2 ಆ ಮನುಷ್ಯನು ಧನ್ಯನು.”\f + \fr 4:8 \fr*\ft \+xt ಕೀರ್ತನೆ 32:1,2\+xt*\ft*\f* \p \v 9 ಈ ಧನ್ಯತೆಯು ಕೇವಲ ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೂ ಇರುತ್ತದೆಯೋ? ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿ ಎಂದು ಎಣಿಸಲಾಗಿತೆಂದು ಹೇಳುತ್ತೇವಲ್ಲಾ. \v 10 ಅದು ಯಾವಾಗ ಎಣಿಸಲಾಯಿತು? ಅವನಿಗೆ ಸುನ್ನತಿ ಆದ ಬಳಿಕವೋ? ಅಥವಾ ಸುನ್ನತಿಯಾಗುವುದಕ್ಕೆ ಮೊದಲೋ? ಅದು ನಂತರವಲ್ಲ, ಮೊದಲೇ! \v 11 ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು. \v 12 ನಮ್ಮ ಪಿತೃವಾದ ಅಬ್ರಹಾಮನು ಸುನ್ನತಿ ಹೊಂದಿದವರಿಗೆ ಮಾತ್ರವೇ ತಂದೆಯಾಗಿರದೆ ಅವನಿಗೆ ಸುನ್ನತಿ ಆಗುವ ಮೊದಲು ಇದ್ದ ನಂಬಿಕೆಯ ಹೆಜ್ಜೆಯಲ್ಲಿ ನಡೆಯುವವರಿಗೂ ತಂದೆಯಾಗಿರುತ್ತಾನೆ. \p \v 13 ಅಬ್ರಹಾಮನು ಮತ್ತು ಅವನ ಸಂತತಿಯವರು ಜಗತ್ತಿಗೇ ಹಕ್ಕುದಾರರಾಗುವರೆಂಬ ವಾಗ್ದಾನವು ನಿಯಮದಿಂದ ಆದದ್ದಲ್ಲ. ನಂಬಿಕೆಯಿಂದುಂಟಾದ ನೀತಿಯ ಮೂಲಕವೇ ಬರುವಂಥದ್ದಾಗಿದೆ. \v 14 ನಿಯಮಕ್ಕೆ ಒಳಗಾಗುವವರೇ ಬಾಧ್ಯರಾದರೆ, ನಂಬಿಕೆಗೆ ಬೆಲೆಯಿಲ್ಲದಂತಾಯಿತು. ವಾಗ್ದಾನವೂ ನಿರರ್ಥಕ. \v 15 ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ. \p \v 16 ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ. \v 17 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,”\f + \fr 4:17 \fr*\ft \+xt ಆದಿ 17:5\+xt*\ft*\f* ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು. \p \v 18 ಅವನು ತನಗೆ ದೇವರಿಂದ ಹೇಳಲಾದ ನಿರೀಕ್ಷೆಗೆ ಯಾವ ಆಸ್ಪದವು ಇಲ್ಲದಿರುವಾಗಲೂ ನಿರೀಕ್ಷೆಯಿಂದ ನಂಬಿ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಇರುವುದು,”\f + \fr 4:18 \fr*\ft \+xt ಆದಿ 15:5\+xt*\ft*\f* ಎಂಬ ಹೇಳಿಕೆಯಂತೆ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. \v 19 ಅವನು ಆಗಲೇ ಸುಮಾರು ನೂರು ವರ್ಷದವನಾಗಿದ್ದು, ತನ್ನ ದೇಹವು ದುರ್ಬಲವಾಗಿದ್ದರೂ ಹೆಂಡತಿಯಾದ ಸಾರಳಿಗೆ ಗರ್ಭಧರಿಸುವ ಕಾಲ ಮುಗಿದು ಹೋಗಿದ್ದರೂ ನಂಬಿಕೆಯಲ್ಲಿ ಬಲಹೀನನಾಗಲಿಲ್ಲ. \v 20 ಅವನು ದೇವರು ಮಾಡಿದ ವಾಗ್ದಾನಕ್ಕೆ ವಿರುದ್ಧ ಅಪನಂಬಿಕೆಯಿಂದ ಚಂಚಲಚಿತ್ತನಾಗದೆ, ನಂಬಿಕೆಯಿಂದ ಶಕ್ತಿವಂತನಾಗಿ ದೇವರಿಗೆ ಮಹಿಮೆಯನ್ನು ಸಲ್ಲಿಸಿದನು. \v 21 ಅವನು ವಾಗ್ದಾನವನ್ನು ನೆರವೇರಿಸಲು ದೇವರು ಶಕ್ತರಾಗಿದ್ದಾರೆಂದು ಪೂರ್ಣ ದೃಢತೆಯುಳ್ಳವನಾದನು. \v 22 ಆದ್ದರಿಂದ, “ಅದು ಅವನ ಪಾಲಿಗೆ ನೀತಿ ಎಂಬುದಾಗಿ ಎಣಿಸಲಾಯಿತು.” \v 23 ಹೀಗೆ, “ಅವನ ಪಾಲಿಗೆ ನೀತಿ ಎಂದು ಎಣಿಸಲಾಯಿತು,” ಎಂದು ಬರೆದ ಮಾತು ಅವನಿಗೋಸ್ಕರ ಮಾತ್ರವೇ ಆಗಿರದೆ, \v 24 ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು. \v 25 ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು. \c 5 \s1 ಸಮಾಧಾನ ಮತ್ತು ನಿರೀಕ್ಷೆ \p \v 1 ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ. \v 2 ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ. \v 3 ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ \v 4 ತಾಳ್ಮೆಯು ಸದ್ಗುಣವನ್ನೂ ಸದ್ಗುಣವು ನಿರೀಕ್ಷೆಯನ್ನೂ ಉಂಟು ಮಾಡುತ್ತದೆಂದು ಬಲ್ಲೆವು. \v 5 ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ. \p \v 6 ನಾವು ಇನ್ನೂ ಬಲಹೀನರಾಗಿದ್ದಾಗಲೇ, ಸೂಕ್ತ ಸಮಯದಲ್ಲಿ ಕ್ರಿಸ್ತ ಯೇಸು ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟರು. \v 7 ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು. \v 8 ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ. \p \v 9 ಈಗ ನಾವು ಕ್ರಿಸ್ತ ಯೇಸುವಿನ ರಕ್ತದಿಂದ ನೀತಿವಂತರೆಂದು ನಿರ್ಣಯ ಹೊಂದಿರುವುದರಿಂದ, ಕ್ರಿಸ್ತ ಯೇಸುವಿನ ಮೂಲಕವಾಗಿಯೇ ದೇವರ ಕೋಪದಿಂದ ರಕ್ಷಿಸಲಾಗುವುದು ಇನ್ನೂ ಖಂಡಿತವಲ್ಲವೆ? \v 10 ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ? \v 11 ಇಷ್ಟು ಮಾತ್ರವೇ ಅಲ್ಲ, ಈಗ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಾವು ದೇವರೊಂದಿಗೆ ಮಿತ್ರರಾಗಿ, ಯೇಸುವಿನ ಮೂಲಕವೇ ದೇವರಲ್ಲಿ ಉಲ್ಲಾಸ ಪಡುತ್ತೇವೆ. \s1 ಆದಾಮನ ಮೂಲಕ ಮರಣ, ಕ್ರಿಸ್ತ ಯೇಸುವಿನ ಮೂಲಕ ಜೀವ \p \v 12 ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು. \p \v 13 ನಿಯಮವು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿ ಇತ್ತು. ಆದರೆ ನಿಯಮವು ಇಲ್ಲದಿದ್ದಾಗ ಪಾಪವು ಲೆಕ್ಕಕ್ಕೆ ಬರುವುದಿಲ್ಲ. \v 14 ಆದರೂ ಮರಣವು ಆದಾಮನಿಂದ ಮೋಶೆಯವರೆಗೂ ದೊರೆತನ ಮಾಡುತ್ತಿತ್ತು. ಆದಾಮನು ಮಾಡಿದ ಅಪರಾಧಕ್ಕೆ ಸಮಾನವಾಗಿ ಪಾಪಮಾಡಿದವರ ಮೇಲೆಯೂ ಅದು ದೊರೆತನ ಮಾಡುತ್ತಿತ್ತು. ಆದಾಮನು ಮುಂದೆ ಬರಲಿಕ್ಕಿದ್ದ ಒಬ್ಬಾತನಿಗೆ ಸಂಕೇತವಾಗಿದ್ದಾನೆ. \p \v 15 ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ? \v 16 ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಪಲ ಬಂದಂತೆ ಈ ವರವು ಬರಲಿಲ್ಲ. ಹೇಗೆಂದರೆ, ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ದಂಡನಾತೀರ್ಪು ಉಂಟಾಯಿತು. ಆದರೆ ದೇವರ ಕೃಪೆಯು ಅನೇಕರ ಅಪರಾಧಗಳಿಂದ ಅವರನ್ನು ನೀತಿವಂತರೆಂದು ನಿರ್ಣಯಿಸುವುದಾಗಿದೆ. \v 17 ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ! \p \v 18 ಹೀಗೆ, ಒಂದು ಅಪರಾಧದ ನಿಮಿತ್ತ ಎಲ್ಲಾ ಜನರ ಮೇಲೆ ದಂಡನಾತೀರ್ಪು ಬಂದಂತೆಯೇ ಒಂದು ನೀತಿಯ ಕೃತ್ಯದಿಂದ ಎಲ್ಲಾ ಜನರಿಗೂ ಜೀವವನ್ನುಂಟು ಮಾಡುವ ನೀತಿಕರಣವು ಉಂಟಾಯಿತು. \v 19 ಒಬ್ಬ ಮನುಷ್ಯನ ಅವಿಧೇಯತೆಯಿಂದಾಗಿ ಅನೇಕರು, ಪಾಪಿಗಳು ಆದಂತೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದಾಗಿ ಅನೇಕರು ನೀತಿವಂತರಾಗುವರು. \p \v 20 ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು. \v 21 ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು. \c 6 \s1 ಪಾಪಕ್ಕೆ ಸತ್ತು ಕ್ರಿಸ್ತ ಯೇಸುವಿನಲ್ಲಿ ಜೀವಂತನಾಗಿರುವುದು \p \v 1 ಹಾಗಾದರೆ ನಾವು ಏನು ಹೇಳೋಣ? ಕೃಪೆಯು ಹೆಚ್ಚಾಗಲಿ ಎಂದು ನಾವು ಪಾಪದಲ್ಲಿ ಮುಂದುವರಿಯೋಣವೆ? \v 2 ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ? \v 3 ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ? \v 4 ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು. \p \v 5 ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು. \v 6 ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು. \v 7 ಮರಣ ಹೊಂದಿರುವ ಯಾರೇ ಆದರೂ ಪಾಪದಿಂದ ಮುಕ್ತರಾಗಿರುತ್ತಾರೆ. \p \v 8 ನಾವು ಈಗ ಕ್ರಿಸ್ತ ಯೇಸುವಿನೊಂದಿಗೆ ಸತ್ತಿರುವುದಾದರೆ, ಅವರೊಂದಿಗೆ ಬದುಕುವೆವು ಎಂದು ನಂಬುತ್ತೇವೆ. \v 9 ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ. \v 10 ಕ್ರಿಸ್ತ ಯೇಸು ಪಾಪದ ಪಾಲಿಗೆ ಸತ್ತದ್ದೂ ಒಂದೇ ಸಾರಿಯಾಗಿರುತ್ತದೆ. ಆದರೆ, ಅವರು ಜೀವಿಸುವ ಜೀವಿತವು ದೇವರಿಗಾಗಿಯೇ. \p \v 11 ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ. \v 12 ಆದ್ದರಿಂದ ನೀವು ದೇಹದ ಆಶೆಗಳಿಗೆ ಒಳಗಾಗದಂತೆ ನಿಮ್ಮ ನಶ್ವರ ದೇಹಗಳಲ್ಲಿ ಪಾಪವು ಅಧಿಕಾರ ನಡೆಸಲು ಬಿಡಬೇಡಿರಿ. \v 13 ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ. \v 14 ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ. \s1 ನೀತಿಗೆ ಗುಲಾಮರು \p \v 15 ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ! \v 16 ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು. \v 17 ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ. \v 18 ಪಾಪದಿಂದ ಬಿಡುಗಡೆಹೊಂದಿ ನೀತಿಗೆ ಗುಲಾಮರಾಗಿದ್ದೀರಿ. \p \v 19 ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ. \v 20 ನೀವು ಪಾಪಕ್ಕೆ ಗುಲಾಮರಾಗಿದ್ದಾಗ ನೀತಿಗೆ ಅಧೀನರಾಗಿರಲಿಲ್ಲ. \v 21 ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ! \v 22 ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ. \v 23 ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ. \c 7 \s1 ಕ್ರಿಸ್ತ ಯೇಸುವಿನವರು ನಿಯಮಕ್ಕೆ ಅಧೀನರಲ್ಲ \p \v 1 ಪ್ರಿಯರೇ, ನಿಯಮವನ್ನು ತಿಳಿದವರಿಗೆ ನಾನು ಹೇಳುವುದೇನೆಂದರೆ, ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ನಿಯಮಕ್ಕೆ ಅವನ ಮೇಲೆ ಅಧಿಕಾರ ಇರುತ್ತದೆಂದು ನೀವು ಬಲ್ಲಿರಿ. \v 2 ಒಬ್ಬ ಮದುವೆಯಾದ ಹೆಣ್ಣು ಮಗಳು ಕಾನೂನಿಗನುಸಾರವಾಗಿ ಅವಳ ಪತಿಯು ಜೀವದಿಂದಿರುವ ತನಕ ಮಾತ್ರ ಅವನಿಗೆ ಬದ್ಧಳಾಗಿರುತ್ತಾಳೆ. ಆದರೆ ಪತಿಯು ಸತ್ತರೆ ಆಕೆಯು ಮದುವೆಯ ಕಾನೂನಿನಿಂದ ಬಿಡುಗಡೆ ಹೊಂದಿದವಳಾಗಿರುತ್ತಾಳೆ. \v 3 ಹೀಗಿರುವಾಗ, ಅವಳ ಪತಿಯು ಜೀವಂತನಾಗಿರುವಾಗ ಆಕೆಯು ಇನ್ನೊಬ್ಬನನ್ನು ಮದುವೆಯಾದರೆ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವಳು. ಆದರೆ ಪತಿಯು ಸತ್ತರೆ, ಆಕೆಯು ಬೇರೊಬ್ಬನನ್ನು ಮದುವೆಯಾದರೂ ಆ ಕಾನೂನಿನಿಂದ ಅವಳು ಬಿಡುಗಡೆ ಆಗಿರಲಾಗಿ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವುದಿಲ್ಲ. \p \v 4 ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ. \v 5 ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು. \v 6 ಈಗಲಾದರೋ ಒಂದು ಕಾಲದಲ್ಲಿ ನಮ್ಮನ್ನು ಯಾವುದು ಬಂಧನದಲ್ಲಿರಿಸಿತ್ತೋ ಅದಕ್ಕೆ ಸತ್ತವರಾಗಿದ್ದು ನಿಯಮದಿಂದ ಬಿಡುಗಡೆ ಹೊಂದಿದವರಾಗಿರುತ್ತೇವೆ. ಹೀಗೆ ನಾವು ಲಿಖಿತವಾದ ಹಳೆಯ ನಿಯಮದಂತೆ ನಡೆಯದೆ ಆತ್ಮದಿಂದ ನವಜೀವನದಲ್ಲಿ ನಡೆಯುವರಾಗಿದ್ದೇವೆ. \s1 ನಿಯಮವೂ ಪಾಪವೂ \p \v 7 ಹಾಗಾದರೆ ನಾವು ಏನು ಹೇಳೋಣ? ನಿಯಮವೇ ಪಾಪವಾಗಿದೆಯೋ? ಎಂದಿಗೂ ಇಲ್ಲ. ಆದರೂ ನಿಯಮವನ್ನು ಬಿಟ್ಟು ಬೇರಾವುದರ ಮೂಲಕವೂ ಪಾಪವೆಂದರೆ ಏನೆಂದು ನನಗೆ ತಿಳಿದುಕೊಳ್ಳಲು ಸಾಧ್ಯವಿರಲಿಲ್ಲ. ನಿಯಮವು, “ದುರಾಶೆ ಪಡಬೇಡ,”\f + \fr 7:7 \fr*\ft \+xt ವಿಮೋ 20:17; ಧರ್ಮೋ 5:21\+xt*\ft*\f* ಎಂದು ಹೇಳದೆ ಇರುತ್ತಿದ್ದರೆ ದುರಾಶೆ ಎಂದರೆ ಏನೆಂದು ನಾನು ತಿಳಿಯಲು ಸಾಧ್ಯವಿರಲಿಲ್ಲ. \v 8 ಆದರೆ ಪಾಪವು, ಆ ಆಜ್ಞೆಯಿಂದ ಅನುಕೂಲ ಹೊಂದಿ ನನ್ನಲ್ಲಿ ಎಲ್ಲಾ ವಿಧದ ಆಶೆಗಳನ್ನು ಉಂಟುಮಾಡಿತು. ಏಕೆಂದರೆ ನಿಯಮವಿಲ್ಲದೆ ಪಾಪವು ಸತ್ತದ್ದಾಗಿರುತ್ತದೆ. \v 9 ಒಮ್ಮೆ ನಾನು ನಿಯಮವಿಲ್ಲದೆ ಜೀವಿಸುತ್ತಿದ್ದೆನು. ಆದರೆ ಯಾವಾಗ ಆಜ್ಞೆಯು ಬಂದಿತೋ ಆಗ ಪಾಪವು ಜೀವಂತವಾಯಿತು, ನಾನು ಸತ್ತವನಾದೆನು. \v 10 ಜೀವವನ್ನು ತರಲಿಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣವನ್ನು ಉಂಟುಮಾಡುವುದಾಯಿತು ಎಂದು ಕಂಡುಕೊಂಡೆನು. \v 11 ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ, ಅದೇ ನನ್ನನ್ನು ಮರಣಕ್ಕೆ ಒಳಪಡಿಸಿತು. \v 12 ಹೀಗಿರಲಾಗಿ, ನಿಯಮವು ಪವಿತ್ರವಾದದ್ದು. ಆಜ್ಞೆಯು ಪವಿತ್ರವೂ ನ್ಯಾಯವೂ ಒಳ್ಳೆಯದೂ ಆಗಿರುತ್ತದೆ. \p \v 13 ಹಾಗಾದರೆ ಒಳ್ಳೆಯದಾಗಿರುವ ನಿಯಮವೇ ನನಗೆ ಮರಣಕ್ಕೆ ಕಾರಣವಾಯಿತೋ? ಎಂದಿಗೂ ಇಲ್ಲ! ಆದರೂ ಪಾಪವು ಪಾಪವೇ ಎಂದು ಕಾಣುವಂತೆ ಒಳ್ಳೆಯದಾಗಿರುವ ನಿಯಮದ ಮೂಲಕವೇ ಪಾಪವು ನನ್ನಲ್ಲಿ ಮರಣವು ಉಂಟಾಗುವಂತೆ ಮಾಡಿತು. ಈ ರೀತಿಯಾಗಿ ಆಜ್ಞೆಯ ಮೂಲಕ ಪಾಪವು ಘೋರವಾದದ್ದೇ ಎಂದು ಕಂಡುಬರಲು ಸಾಧ್ಯವಾಯಿತು. \p \v 14 ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ. \v 15 ನಾನು ಏನು ಮಾಡುತ್ತೇನೆ ಎಂಬುದನ್ನು ತಿಳಿಯದವನಾಗಿದ್ದೇನೆ. ಏಕೆಂದರೆ ನಾನು ಮಾಡಬೇಕೆಂದು ಬಯಸುವುದನ್ನು ಮಾಡದೆ, ಯಾವುದನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುವವನಾಗಿದ್ದೇನೆ. \v 16 ನಾನು ಮಾಡಲು ಬಯಸದಿರುವುದನ್ನು ಮಾಡುವುದಾದರೆ, ನಿಯಮವು ಒಳ್ಳೆಯದೆಂದು ಒಪ್ಪುತ್ತೇನೆ. \v 17 ಹೀಗಿರಲಾಗಿ ನಾನು ಬಯಸದಿರುವುದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಸಿರುವ ಪಾಪವೇ ಅದನ್ನು ಮಾಡುತ್ತದೆ. \v 18 ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು. \v 19 ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಮಾಡಲು ಬಯಸದೆ ಇರುವ ಕೆಟ್ಟದ್ದನ್ನೇ ಮಾಡುತ್ತಿದ್ದೇನೆ. \v 20 ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡುತ್ತಿರುವುದಾದರೆ ಅದನ್ನು ಮಾಡಿದವನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತಿದೆ. \p \v 21 ಒಳ್ಳೆಯದನ್ನು ಮಾಡಲು ಬಯಸುತ್ತಿರುವ ನನ್ನಲ್ಲಿ ಕೆಟ್ಟದ್ದು ಇರುವ ನಿಯಮವನ್ನು ಕಾಣುತ್ತಿದ್ದೇನೆ. \v 22 ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ. \v 23 ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ. \v 24 ನಾನು ಎಂಥಾ ದುರವಸ್ಥೆಯುಳ್ಳ ಮನುಷ್ಯನು! ನನ್ನನ್ನು ಈ ಮರಣಕರವಾದ ದೇಹದಿಂದ ಯಾರು ಬಿಡಿಸಬಲ್ಲರು? \v 25 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! \p ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ. \c 8 \s1 ಪವಿತ್ರಾತ್ಮರ ಮೂಲಕ ಜೀವನ \p \v 1 ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ. \v 2 ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು\f + \fr 8:2 \fr*\ft ಕೆಲವು ಪ್ರತಿಗಳಲ್ಲಿ \ft*\fqa ನನ್ನನ್ನು\fqa*\f* ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ. \v 3 ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು. \v 4 ಹೀಗೆ ನಾವು ಮಾಂಸಭಾವದವರಾಗಿ ಬಾಳದೆ ಪವಿತ್ರಾತ್ಮರಿಗನುಸಾರವಾಗಿ ಬಾಳುವ ನಮ್ಮಲ್ಲಿ ನಿಯಮದ ಅಗತ್ಯವು ನೆರವೇರುವುದಕ್ಕೆ ಆಸ್ಪದವಾಯಿತು. \p \v 5 ಮಾಂಸಭಾವದವರಾಗಿ ಬಾಳುವವರ ಮನಸ್ಸು ಅದಕ್ಕೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಆದರೆ ಪವಿತ್ರಾತ್ಮ ದೇವರಿಗೆ ಅನುಸಾರವಾಗಿ ಬಾಳುವವರ ಮನಸ್ಸು ಪವಿತ್ರಾತ್ಮ ದೇವರಿಗೆ ಸಂಬಂಧಪಟ್ಟವುಗಳ ಮೇಲಿರುತ್ತದೆ. \v 6 ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ. \v 7 ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ. \v 8 ಮಾಂಸಭಾವಕ್ಕೆ ಒಳಗಾದವರು ದೇವರನ್ನು ಮೆಚ್ಚಿಸಲಾರರು. \p \v 9 ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ. \v 10 ಆದರೆ ಕ್ರಿಸ್ತ ಯೇಸು ನಿಮ್ಮಲ್ಲಿ ಇರುವುದಾದರೆ, ನಿಮ್ಮ ಶರೀರವು ಪಾಪದ ನಿಮಿತ್ತ ಸತ್ತಿದ್ದರೂ ನಿಮ್ಮ ಆತ್ಮವು ನೀತಿಯ ನಿಮಿತ್ತ ಜೀವಿಸುತ್ತದೆ. \v 11 ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು. \p \v 12 ಆದ್ದರಿಂದ, ಪ್ರಿಯರೇ, ನಾವು ಮಾಂಸಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬದುಕಲು ಋಣಸ್ಥರಲ್ಲ. \v 13 ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ. \p \v 14 ಯಾರು ದೇವರ ಆತ್ಮರಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಪುತ್ರರಾಗಿರುತ್ತಾರೆ. \v 15 ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ. \v 16 ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ. \v 17 ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು. \s1 ಮುಂದಣ ಮಹಿಮೆ \p \v 18 ನಮಗೆ ಮುಂದೆ ಪ್ರಕಟವಾಗಲಿರುವ ಮಹಿಮೆಯೊಂದಿಗೆ ಹೋಲಿಸುವಾಗ ಈಗಿನ ಸಂಕಟಗಳು ಅಲ್ಪವೆಂದು ನಾನು ಎಣಿಸುತ್ತೇನೆ. \v 19 ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ. \v 20 ಸೃಷ್ಟಿಯು ನಾಶಕ್ಕೆ ಒಳಗಾಯಿತು. ಆದರೆ ಸ್ವಂತ ಇಚ್ಛೆಯಿಂದಲ್ಲ. ಅದನ್ನು ನಿರೀಕ್ಷೆಯಿಂದ ಒಳಪಡಿಸಿದ ದೇವರಿಂದಲೇ ಆಯಿತು. ಆದರೂ ಸೃಷ್ಟಿಗೂ ನಿರೀಕ್ಷೆಯಿದೆ. \v 21 ಈ ಸೃಷ್ಟಿಯು ಕೂಡ ನಾಶದ ಬಂಧನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ. \p \v 22 ಈವರೆಗೂ ಸೃಷ್ಟಿಯೆಲ್ಲ ಪ್ರಸವ ವೇದನೆಯಂಥ ನೋವಿನಿಂದ ನರಳುತ್ತಿದೆ ಎಂದು ನಾವು ಬಲ್ಲೆವು. \v 23 ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ. \v 24 ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ? \v 25 ಆದರೆ ನಾವು ಇನ್ನು ಕಾಣದಿರುವಂಥದ್ದಕ್ಕಾಗಿ ನಿರೀಕ್ಷಿಸುವುದಾದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ. \p \v 26 ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ. \v 27 ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ. \p \v 28 ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ. \v 29 ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು. \v 30 ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು. \s1 ಜಯಶಾಲಿಗಳಿಗಿಂತಲೂ ಹೆಚ್ಚಿನವರು \p \v 31 ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು? \v 32 ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ? \v 33 ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ. \v 34 ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ. \v 35 ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು. \v 36 ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: \q1 “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; \q2 ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”\f + \fr 8:36 \fr*\ft \+xt ಕೀರ್ತನೆ 44:22\+xt*\ft*\f* \m \v 37 ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ. \v 38 ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ, \v 39 ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ. \c 9 \s1 ಇಸ್ರಾಯೇಲರ ಮೇಲೆ ಪೌಲನ ವೇದನೆ \p \v 1 ನಾನು ಕ್ರಿಸ್ತ ಯೇಸುವಿನಲ್ಲಿ ಸತ್ಯವನ್ನು ಮಾತನಾಡುತ್ತೇನೆ. ನಾನು ಸುಳ್ಳು ಹೇಳುತ್ತಾ ಇಲ್ಲ. ನನ್ನ ಮನಸ್ಸಾಕ್ಷಿಯು ಇದನ್ನು ಪವಿತ್ರಾತ್ಮ ದೇವರ ಮೂಲಕ ಖಚಿತ ಪಡಿಸುತ್ತದೆ. \v 2 ನನ್ನ ಹೃದಯದಲ್ಲಿ ಮಹಾದುಖಃವೂ ಎಡೆಬಿಡದ ವೇದನೆಯೂ ತೀರದವೇದನೆಯೂ ಇದೆ. \v 3 ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ. \v 4 ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ. \v 5 ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್. \s1 ದೇವರ ಸಾರ್ವಭೌಮ ಆಯ್ಕೆ \p \v 6 ಇದು ದೇವರ ವಾಕ್ಯವು ನೆರವೇರಲಿಲ್ಲ ಎಂಬಂತೆ ಅಲ್ಲ. ಏಕೆಂದರೆ ಇಸ್ರಾಯೇಲ್ ವಂಶದಲ್ಲಿ ಬಂದವರೆಲ್ಲರೂ ಇಸ್ರಾಯೇಲರಲ್ಲ. \v 7 ಅಥವಾ ಅಬ್ರಹಾಮನ ಸಂತತಿಯವರೆಲ್ಲ ಅವನ ಮಕ್ಕಳಲ್ಲ. ಆದರೆ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,”\f + \fr 9:7 \fr*\ft \+xt ಆದಿ 21:12\+xt*\ft*\f* ಎಂದು ಹೇಳಲಾಗಿದೆ. \v 8 ಇದರ ಅರ್ಥ, ಶರೀರಸಂಬಂಧದ ಮಕ್ಕಳು ದೇವರ ಮಕ್ಕಳಾಗಿರದೆ ವಾಗ್ದಾನದ ಮಕ್ಕಳೇ ಅಬ್ರಹಾಮನ ಮಕ್ಕಳೆಂದು ಎನಿಸಿಕೊಳ್ಳುವರು ಎಂಬುದು. \v 9 ಏಕೆಂದರೆ, “ನೇಮಕವಾದ ಕಾಲದಲ್ಲಿ ನಾನು ತಿರುಗಿ ಬಂದಾಗ ಸಾರಳಿಗೆ ಒಬ್ಬ ಮಗನಿರುವನು,”\f + \fr 9:9 \fr*\ft \+xt ಆದಿ 18:10,14\+xt*\ft*\f* ಅದು ವಾಗ್ದಾನದ ಮಾತಾಗಿತ್ತು. \p \v 10 ಇದು ಮಾತ್ರವಲ್ಲದೆ, ರೆಬೆಕ್ಕಳು ಸಹ ನಮ್ಮ ಪಿತೃವಾದ ಇಸಾಕನ ಮೂಲಕ ಅವಳಿಜವಳಿ ಮಕ್ಕಳನ್ನು ಪಡೆದಳು. \v 11 ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು. \v 12 ಆದರೆ ಅದು ಕರೆಯುವಾತನಿಂದಲೇ, “ಹಿರಿಯನು ಕಿರಿಯವನಿಗೆ ಸೇವೆಮಾಡುವನು,”\f + \fr 9:12 \fr*\ft \+xt ಆದಿ 25:23\+xt*\ft*\f* ಎಂದು ರೆಬೆಕ್ಕಳಿಗೆ ಹೇಳಲಾಗಿತ್ತು. \v 13 ಇದಕ್ಕನುಸಾರವಾಗಿ, “ಯಾಕೋಬನನ್ನು ನಾನು ಪ್ರೀತಿಸಿದೆನು, ಆದರೆ ಏಸಾವನನ್ನು ಹಗೆ ಮಾಡಿದೆನು,”\f + \fr 9:13 \fr*\ft \+xt ಮಲಾಕಿ 1:2,3\+xt*\ft*\f* ಎಂದು ಬರೆದಿರುತ್ತದೆ. \p \v 14 ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. \v 15 ದೇವರು ಮೋಶೆಗೆ ಹೇಳಿದ್ದೇನೆಂದರೆ, \q1 “ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. \q2 ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು.”\f + \fr 9:15 \fr*\ft \+xt ವಿಮೋ 33:19\+xt*\ft*\f* \m \v 16 ಆದ್ದರಿಂದ ದೇವರ ಆಯ್ಕೆಯು ಮನುಷ್ಯನ ಬಯಕೆ ಅಥವಾ ಪ್ರಯತ್ನದಿಂದಾಗಿರದೆ, ದೇವರ ಕರುಣೆಯಿಂದಲೇ ಆಗಿದೆ. \v 17 ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,”\f + \fr 9:17 \fr*\ft \+xt ವಿಮೋ 9:16\+xt*\ft*\f* ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ. \v 18 ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ. \p \v 19 ಹಾಗಾದರೆ ನೀನು, “ದೇವರು ಇನ್ನೂ ತಪ್ಪು ಕಂಡುಹಿಡಿಯುವುದು ಏಕೆ? ದೇವರ ಸಂಕಲ್ಪವನ್ನು ಎದುರಿಸುವವರು ಯಾರು?” ಎಂದು ನೀನು ನನ್ನನ್ನು ಕೇಳುವೆ. \v 20 ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ”\f + \fr 9:20 \fr*\ft \+xt ಯೆಶಾಯ 29:16; 45:9\+xt*\ft*\f* ಎಂದು ಪ್ರಶ್ನಿಸಬಹುದೋ? \v 21 ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ? \p \v 22 ನಾಶಕ್ಕೂ, ಕೋಪಾಗ್ನಿಗೂ ಪಾತ್ರೆಯಾಗಿರುವುದರ ಮೇಲೆ ದೇವರು ತಮ್ಮ ಕೋಪವನ್ನು ತೋರಿಸಿ ತಮ್ಮ ಸಾಮರ್ಥ್ಯವನ್ನು ತಿಳಿಯಪಡಿಸಬೇಕೆಂದಿದ್ದರೂ ಬಹು ಸಹನೆಯಿಂದ ತಾಳಿಕೊಂಡಿರಲು ಬಯಸಿದರೆ, ಯಾರು ಏನು ಮಾಡಬಹುದು? \v 23 ದೇವರು ಯೆಹೂದ್ಯರೊಳಗಿಂದ ಮಾತ್ರವೇ ಕರೆಯದೆ, ಯೆಹೂದ್ಯರಲ್ಲದವರಿಂದಲೂ ಕರೆದು, ಮಹಿಮೆಗೆಂದು ಮೊದಲೇ ಸಿದ್ಧಮಾಡಿ, ತಮ್ಮ ಕರುಣೆಗೆ ಪಾತ್ರರಾದ ಜನರಿಗೆ ತಮ್ಮ ಮಹಿಮೆಯ ಐಶ್ವರ್ಯವನ್ನು ಪ್ರಕಟಿಸಲು ಇದನ್ನು ಮಾಡಿದರು. \v 24 ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ? \v 25 ಹೋಶೇಯನ ಪ್ರವಾದನೆಯಲ್ಲಿ ದೇವರು, \q1 “ನನ್ನ ಜನರಲ್ಲದವರನ್ನು ‘ನನ್ನ ಜನರು,’ ಎಂದು ಕರೆಯುವರು. \q2 ನಾನು ಪ್ರೀತಿಸದವರನ್ನು ನನ್ನ ‘ಪ್ರಿಯರು’ ಎಂದೂ ಹೇಳುವರು.”\f + \fr 9:25 \fr*\ft \+xt ಹೋಶೇ 2:23\+xt*\ft*\f* \m \v 26 ಮತ್ತು, \q1 “ಯಾವ ಸ್ಥಳದಲ್ಲಿ \q2 ‘ನೀವು ನನ್ನ ಜನರಲ್ಲ,’ ಎಂದು ಅವರಿಗೆ ಹೇಳಲಾಗಿತ್ತೋ, \q2 ಆ ಸ್ಥಳದಲ್ಲಿಯೇ, ‘ಅವರು ಜೀವಸ್ವರೂಪಿಯಾದ ದೇವರ ಮಕ್ಕಳು,’ ಎಂದು ಕರೆಯಲಾಗುವರು,”\f + \fr 9:26 \fr*\ft \+xt ಹೋಶೇ 1:10\+xt*\ft*\f* \m ಎಂದು ದೇವರು ಹೇಳುತ್ತಾರೆ. \m \v 27 ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, \q1 “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ \q2 ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು. \q1 \v 28 ಏಕೆಂದರೆ ಕರ್ತನು ತಮ್ಮ ವಾಕ್ಯವನ್ನು \q2 ಭೂಮಿಯ ಮೇಲೆ ಅಂತಿಮವಾಗಿಯೂ ತ್ವರಿತವಾಗಿಯೂ ನೆರವೇರಿಸುವರು.”\f + \fr 9:28 \fr*\ft \+xt ಯೆಶಾಯ 10:22,23\+xt*\ft*\f* \m \v 29 ಯೆಶಾಯನು ಈ ಹಿಂದೆ, \q1 “ಸೇನಾಧೀಶ್ವರರಾದ ದೇವರು \q2 ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, \q1 ನಾವು ಸೊದೋಮಿನಂತೆ ಆಗುತ್ತಿದ್ದೆವು, \q2 ಗೊಮೋರದ ಹಾಗೆ ಇರುತ್ತಿದ್ದೆವು.”\f + \fr 9:29 \fr*\ft \+xt ಯೆಶಾಯ 1:9\+xt*\ft*\f* \m ಎಂದು ಹೇಳಿದ್ದಾನೆ. \s1 ಇಸ್ರಾಯೇಲಿನ ಅಪನಂಬಿಕೆ \p \v 30 ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು. \v 31 ಆದರೆ ನೀತಿಯ ನಿಯಮವನ್ನು ಅನುಸರಿಸಿದ ಇಸ್ರಾಯೇಲರಾದರೋ ಆ ನೀತಿಯ ಮಾರ್ಗವನ್ನು ಪಡೆಯಲಿಲ್ಲ. \v 32 ಏಕೆ? ಏಕೆಂದರೆ ಅವರು ನಂಬಿಕೆಯನ್ನು ಅನುಸರಿಸದೆ ಕೃತ್ಯಗಳನ್ನು ಅನುಸರಿಸಿದ್ದರಿಂದಲೇ. ಅವರು ಎಡವುಕಲ್ಲನ್ನು ಎಡವಿದರು. \v 33 ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: \q1 “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ \q2 ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. \q2 ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”\f + \fr 9:33 \fr*\ft \+xt ಯೆಶಾಯ 8:14; 28:16\+xt*\ft*\f* \c 10 \p \v 1 ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ. \v 2 ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ. \v 3 ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ. \v 4 ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ. \p \v 5 ನಿಯಮದಿಂದ ಬರುವ ನೀತಿಯ ಬಗ್ಗೆ ಮೋಶೆಯು ಬರೆದಿರುವುದು ಏನೆಂದರೆ: “ನಿಯಮದಲ್ಲಿ ಬರೆದಿರುವ ಎಲ್ಲವನ್ನೂ ಮಾಡುವವರೇ ಬಾಳುವವರು,”\f + \fr 10:5 \fr*\ft \+xt ಯಾಜಕ 18:5\+xt*\ft*\f* ಎಂಬುದಾಗಿ ಬರೆದನು. \v 6 ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “ ‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’\f + \fr 10:6 \fr*\ft \+xt ಧರ್ಮೋ 30:12\+xt*\ft*\f* \v 7 ಅಥವಾ, ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು ಯಾರು ಪಾತಾಳಕ್ಕೆ ಇಳಿದು ಹೋಗುವರು?’\f + \fr 10:7 \fr*\ft \+xt ಧರ್ಮೋ 30:13\+xt*\ft*\f* ಎಂದು ಮನಸ್ಸಿನಲ್ಲಿ ಹೇಳಿಕೊಳ್ಳಬೇಡ.” \v 8 ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.”\f + \fr 10:8 \fr*\ft \+xt ಧರ್ಮೋ 30:14\+xt*\ft*\f* ಅದೇ ನಾವು ಸಾರುವ ವಿಶ್ವಾಸದ ವಾಕ್ಯ. \v 9 ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ. \v 10 ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ. \v 11 ಪವಿತ್ರ ವೇದದಲ್ಲಿ ಹೇಳಿರುವಂತೆ, “ಅವರ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದೇ ಇಲ್ಲ.”\f + \fr 10:11 \fr*\ft \+xt ಯೆಶಾಯ 28:16\+xt*\ft*\f* \v 12 ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ. \v 13 ಏಕೆಂದರೆ, “ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು.”\f + \fr 10:13 \fr*\ft \+xt ಯೋಯೇಲ 2:32\+xt*\ft*\f* \p \v 14 ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ? \v 15 ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!”\f + \fr 10:15 \fr*\ft \+xt ಯೆಶಾಯ 52:7\+xt*\ft*\f* ಎಂದು ಬರೆಯಲಾಗಿದೆ. \p \v 16 ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?”\f + \fr 10:16 \fr*\ft \+xt ಯೆಶಾಯ 53:1\+xt*\ft*\f* ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ. \v 17 ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ. \v 18 ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: \q1 “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, \q2 ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”\f + \fr 10:18 \fr*\ft \+xt ಕೀರ್ತನೆ 19:4\+xt*\ft*\f* \m \v 19 ಆದರೆ ಇಸ್ರಾಯೇಲರಿಗೆ ಅರ್ಥವಾಗಲಿಲ್ಲವೇ? ಎಂದು ನಾನು ಪ್ರಶ್ನಿಸುತ್ತೇನೆ. ಮೊದಲನೆಯದಾಗಿ ಮೋಶೆಯು, \q1 “ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. \q2 ತಿಳುವಳಿಕೆಯಿಲ್ಲದ ಜನಾಂಗದವರ ಮೂಲಕ ನೀವು ಕೋಪಗೊಳ್ಳುವಂತೆ ಮಾಡುವೆನು,”\f + \fr 10:19 \fr*\ft \+xt ಧರ್ಮೋ 32:21\+xt*\ft*\f* \m ಎಂದು ಹೇಳುತ್ತಾನೆ. \v 20 ಆದರೆ ಯೆಶಾಯನು ಬಹು ಧೈರ್ಯವಾಗಿ, \q1 “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. \q2 ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,”\f + \fr 10:20 \fr*\ft \+xt ಯೆಶಾಯ 65:1\+xt*\ft*\f* \m ಎಂದು ಹೇಳುತ್ತಾನೆ. \v 21 ಆದರೆ ಇಸ್ರಾಯೇಲರ ಕುರಿತಾಗಿ, \q1 “ನನಗೆ ಅವಿಧೇಯರೂ ಎದುರುಮಾತಾಡುವವರೂ ಆಗಿರುವ ಜನರಿಗೆ, \q2 ದಿನವೆಲ್ಲಾ ನಾನು ಕೈಚಾಚಿ ಕರೆದೆನು,”\f + \fr 10:21 \fr*\ft \+xt ಯೆಶಾಯ 65:2\+xt*\ft*\f* \m ಎಂದು ಹೇಳುತ್ತಾನೆ. \c 11 \s1 ಇಸ್ರಾಯೇಲಿನಲ್ಲಿ ಉಳಿದವರು \p \v 1 ಹಾಗಾದರೆ, ದೇವರು ತಮ್ಮ ಜನರನ್ನು ತ್ಯಜಿಸಿಬಿಟ್ಟಿದ್ದಾರೋ ಎಂದು ಕೇಳುತ್ತೇನೆ? ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲನೂ ಅಬ್ರಹಾಮನ ವಂಶದವನೂ ಬೆನ್ಯಾಮೀನನ ಕುಲದವನೂ ಆಗಿದ್ದೇನೆ. \v 2 ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ? \v 3 “ಕರ್ತಾ, ಅವರು ನಿಮ್ಮ ಪ್ರವಾದಿಗಳನ್ನು ಕೊಂದಿದ್ದಾರೆ. ನಿಮ್ಮ ಬಲಿಪೀಠವನ್ನು ಒಡೆದುಹಾಕಿದ್ದಾರೆ, ನಾನು ಒಬ್ಬನೇ ಉಳಿದಿದ್ದೇನೆ. ಅವರು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ,”\f + \fr 11:3 \fr*\ft \+xt 1 ಅರಸು 19:10,14\+xt*\ft*\f* ಎಂದು ಇಸ್ರಾಯೇಲರಿಗೆ ವಿರೋಧವಾಗಿ ದೇವರಲ್ಲಿ ವಿಜ್ಞಾಪನೆ ಮಾಡಿಕೊಂಡನು. \v 4 ಅದಕ್ಕೆ ದೇವರು ಅವನಿಗೆ ಕೊಟ್ಟ ಉತ್ತರವೇನಾಗಿತ್ತು? “ಬಾಳನಿಗೆ ಅಡ್ಡಬೀಳದ ಏಳು ಸಾವಿರ ಮಂದಿಯನ್ನು ನನಗೋಸ್ಕರ ಉಳಿಸಿದ್ದೇನೆ,”\f + \fr 11:4 \fr*\ft \+xt 1 ಅರಸು 19:18\+xt*\ft*\f* ಎಂದಲ್ಲವೇ? \v 5 ಅದೇ ರೀತಿಯಲ್ಲಿ, ಈ ಕಾಲದಲ್ಲಿಯೂ ಕೃಪೆಯಿಂದ ಆಯ್ಕೆಯಾದ ಇಸ್ರಾಯೇಲರಲ್ಲಿ ಕೆಲವರು ಉಳಿದಿದ್ದಾರೆ. \v 6 ಆ ಆಯ್ಕೆಯು ಕ್ರಿಯೆಗಳ ಆಧಾರದಿಂದಲ್ಲ, ಕೃಪೆಯಿಂದಲೇ ಆಗಿರುತ್ತದೆ. ಕ್ರಿಯೆಗಳಿಂದ ಅದು ಆಗಿದ್ದರೆ ಇನ್ನೆಂದಿಗೂ ಕೃಪೆಯಾಗಲಾರದು. \p \v 7 ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು. \v 8 ಪವಿತ್ರ ವೇದದಲ್ಲಿ ಬರೆದಿರುವಂತೆ, \q1 “ದೇವರು ಅವರಿಗೆ ಜಡಸ್ವಭಾವದ ಆತ್ಮವನ್ನು, \q2 ಕಾಣಲಾರದ ಕಣ್ಣನ್ನು \q2 ಮತ್ತು ಕೇಳಲಾರದ ಕಿವಿಯನ್ನು ಕೊಟ್ಟರು, \q1 ಅದು ಇಂದಿನವರೆಗೂ ಹಾಗೆಯೇ ಇದೆ.”\f + \fr 11:8 \fr*\ft \+xt ಧರ್ಮೋ 29:4; ಯೆಶಾಯ 29:10\+xt*\ft*\f* \m \v 9 ದಾವೀದನು, \q1 “ಅವರ ಊಟವೇ ಅವರಿಗೆ ಉರುಲೂ ಬೋನೂ ಆಗಲಿ. \q2 ಅದು ಅಡೆತಡೆಯೂ ಪ್ರತಿಕಾರವೂ ಆಗಲಿ. \q1 \v 10 ಅವರ ಕಣ್ಣುಗಳು ಕಾಣದ ಹಾಗೆ ಕತ್ತಲಾಗಲಿ. \q2 ಮತ್ತು ಅವರ ಬೆನ್ನು ಎಂದೆಂದಿಗೂ ಬಗ್ಗಿ ಹೋಗಲಿ,”\f + \fr 11:10 \fr*\ft \+xt ಕೀರ್ತನೆ 69:22,23\+xt*\ft*\f* \m ಎಂದು ಹೇಳುತ್ತಾನೆ. \s1 ಕಸಿಕಟ್ಟಿದ ಕೊಂಬೆಗಳು \p \v 11 ಇಸ್ರಾಯೇಲರು ಏಳಲಾರದ ಹಾಗೇ ಎಡವಿದರೋ? ಎಂದು ನಾನು ಕೇಳುತ್ತೇನೆ. ಇಲ್ಲವೇ ಇಲ್ಲ! ಆದರೆ, ಇಸ್ರಾಯೇಲರಲ್ಲಿ ಮತ್ಸರ ಉಂಟಾಗುವಂತೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆಯು ಉಂಟಾಯಿತು. \v 12 ಆದರೆ ಅವರ ಅಪರಾಧವು ಜಗತ್ತಿಗೆ ಐಶ್ವರ್ಯವನ್ನು ಉಂಟುಮಾಡಿತು. ಅವರ ನಷ್ಟವೇ ಯೆಹೂದ್ಯರಲ್ಲದವರಿಗೆ ಐಶ್ವರ್ಯವನ್ನು ಉಂಟುಮಾಡುವುದಾದರೆ, ಅವರ ಪರಿಪೂರ್ಣತೆಯು ಇನ್ನೂ ಎಷ್ಟೋ ಹೆಚ್ಚಾದ ಐಶ್ವರ್ಯವನ್ನು ಉಂಟುಮಾಡಬಹುದಲ್ಲವೇ! \p \v 13 ಯೆಹೂದ್ಯರಲ್ಲದವರಾಗಿರುವ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಾನು ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿರುವಷ್ಟರ ಮಟ್ಟಿಗೆ ನನ್ನ ಸೇವೆಯನ್ನು ಪ್ರಭಾವಗೊಳಿಸುತ್ತೇನೆ. \v 14 ಹೇಗೂ ನಾನು ನನ್ನ ಸ್ವಂತ ಜನರಾದ ಯೆಹೂದ್ಯರಲ್ಲಿ ಮತ್ಸರವನ್ನು ಉದ್ರೇಕಿಸಿ ಅವರಲ್ಲಿ ಕೆಲವರನ್ನಾದರೂ ರಕ್ಷಿಸಬೇಕು. \v 15 ಏಕೆಂದರೆ ಇಸ್ರಾಯೇಲರನ್ನು ತ್ಯಜಿಸುವುದರಿಂದ ಜಗತ್ತು ದೇವರೊಡನೆ ಸಂಧಾನವಾಗುವುದಾದರೆ, ಅವರನ್ನು ಸ್ವೀಕರಿಸುವುದು, ಸತ್ತವರು ಜೀವಿತರಾಗಿ ಎದ್ದು ಬಂದಂತಾಗಿರುವುದಲ್ಲವೇ? \v 16 ಪ್ರಥಮಫಲವಾಗಿ ಹಿಟ್ಟಿನಲ್ಲಿ ದೇವರಿಗೆ ಭಾಗವನ್ನು ಸಮರ್ಪಿಸಿದ್ದು ಪವಿತ್ರವಾಗಿದ್ದರೆ, ಹಿಟ್ಟೆಲ್ಲಾ ಪವಿತ್ರವಾಗಿರುತ್ತದೆ. ಬೇರು ಪವಿತ್ರವಾಗಿದ್ದರೆ, ಕೊಂಬೆಗಳೂ ಪವಿತ್ರವಾಗಿರುತ್ತವೆ? \p \v 17 ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ, \v 18 ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ. ಹೆಚ್ಚಿಸಿಕೊಂಡರೆ, ನೀನು ಆ ಬೇರಿನ ಆಧಾರವಲ್ಲ. ಆ ಬೇರೇ ನಿನಗೆ ಆಧಾರವಾಗಿದೆ. \v 19 ಹಾಗಾದರೆ ನೀನು, “ನಾನು ಕಸಿಕಟ್ಟಿಸಿಕೊಳ್ಳಬೇಕೆಂದು ಆ ಕೊಂಬೆಗಳನ್ನು ಮುರಿದು ಹಾಕಲಾಯಿತು,” ಎಂದು ನೀನು ಹೇಳಬಹುದು. \v 20 ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು. \v 21 ಏಕೆಂದರೆ ದೇವರು ಹುಟ್ಟು ಕೊಂಬೆಗಳನ್ನು ಉಳಿಸದಿದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ. \p \v 22 ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ. \v 23 ಇಸ್ರಾಯೇಲರು ಕೂಡ ಇನ್ನೂ ಅವಿಶ್ವಾಸದಲ್ಲಿ ಮುಂದುವರಿಯದಿದ್ದರೆ, ಕಸಿಕಟ್ಟಲಾಗುವರು, ಏಕೆಂದರೆ ಅವರನ್ನು ಪುನಃ ಕಸಿಕಟ್ಟಲು ದೇವರು ಶಕ್ತರಾಗಿರುತ್ತಾರೆ. \v 24 ಎಷ್ಟಾದರೂ ಕಾಡು ಓಲಿವ್ ಮರದಿಂದ ನೀನು ಕಡಿದುಹಾಕಲಾದ ಕೊಂಬೆ. ನೀನು ನೆಟ್ಟು ಬೆಳೆಸಿರುವ ಉತ್ತಮ ಓಲಿವ್ ಮರಕ್ಕೆ ಅಸ್ವಾಭಾವಿಕವಾಗಿ ಕಸಿಮಾಡುವುದಾದರೆ ಸ್ವಾಭಾವಿಕವಾಗಿರುವ ಈ ಕೊಂಬೆಗಳನ್ನು ಎಷ್ಟೋ ಹೆಚ್ಚಾಗಿ ಓಲಿವ್ ಮರಕ್ಕೆ ಅದೇ ಕಸಿಕಟ್ಟುವುದು ಸುಲಭವಲ್ಲವೇ? \s1 ಎಲ್ಲಾ ಇಸ್ರಾಯೇಲರಿಗೆ ರಕ್ಷಣೆ \p \v 25 ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು. \v 26 ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: \q1 “ವಿಮೋಚಿಸುವವರು ಒಬ್ಬರು ಚೀಯೋನಿನಿಂದ\f + \fr 11:26 \fr*\fqa ಯೆರೂಸಲೇಮಿನ \fqa*\ft ಇನ್ನೊಂದು ಹೆಸರು\ft*\f* ಬರುತ್ತಾರೆ, \q2 ಅವರು ಯಾಕೋಬನ\f + \fr 11:26 \fr*\ft ಇಸ್ರಾಯೇಲ್ ದೇಶದಿಂದ\ft*\f* ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು. \q1 \v 27 ನಾನು ಅವರ ಪಾಪಗಳನ್ನು ತೆಗೆದುಹಾಕುವಾಗ, \q2 ಅವರೊಂದಿಗೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ ಎಂದು ತಿಳಿದುಕೊಳ್ಳುವೆನು,”\f + \fr 11:27 \fr*\ft \+xt ಯೆಶಾಯ 59:20,21; 27:9; ಯೆರೆ 31:33,34\+xt*\ft*\f* \m ಎಂಬುದೇ. \p \v 28 ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು. \v 29 ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ. \v 30 ಒಂದು ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದ ನೀವು ಇಸ್ರಾಯೇಲರ ಅವಿಧೇಯತೆಯಿಂದ ಈಗ ಕರುಣೆಯನ್ನು ಹೊಂದಿರುವಿರಿ. \v 31 ಅದೇ ಪ್ರಕಾರವಾಗಿ ಇಸ್ರಾಯೇಲರು ಈಗ ಅವಿಧೇಯರಾಗಿದ್ದರೂ ನಿಮಗೆ ಕರುಣೆ ದೊರಕಿದಂತೆ, ಅವರಿಗೂ ಈಗ ಕರುಣೆ ದೊರಕುವುದು. \v 32 ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ. \s1 ದೇವಸ್ತುತಿ \q1 \v 33 ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! \q2 ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! \q2 ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು! \q1 \v 34 “ಕರ್ತದೇವರ ಮನಸ್ಸನ್ನು ಅರಿತವರು ಯಾರು? \q2 ಅವರಿಗೆ ಆಲೋಚನೆಯನ್ನು ನೀಡುವವರು ಯಾರು?”\f + \fr 11:34 \fr*\ft \+xt ಯೆಶಾಯ 40:13\+xt*\ft*\f* \q1 \v 35 “ದೇವರಿಗೆ ಮೊದಲು ಕೊಟ್ಟು, \q2 ಅವರಿಂದ ಪ್ರತಿಫಲವನ್ನು ಪಡೆಯುವವರು ಯಾರು?”\f + \fr 11:35 \fr*\ft \+xt ಯೋಬ 41:11\+xt*\ft*\f* \q1 \v 36 ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. \q2 ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್. \c 12 \s1 ಸಜೀವ ಯಜ್ಞಗಳು \p \v 1 ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು. \v 2 ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ. \s1 ಕ್ರಿಸ್ತನ ದೇಹದಲ್ಲಿನ ದೀನಸೇವೆ \p \v 3 ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ. \v 4 ನಮ್ಮಲ್ಲಿ ಪ್ರತಿಯೊಬ್ಬನಿಗೂ ಅನೇಕ ಅಂಗಗಳಿಂದ ಕೂಡಿದ ಒಂದು ದೇಹವಿರುವ ಹಾಗೆಯೇ ಮತ್ತು ಹೇಗೆ ಈ ಅಂಗಾಂಗಗಳಿಗೆಲ್ಲಾ ಒಂದೇ ಕೆಲಸವಿರುವುದ್ಲಿಲವೋ, \v 5 ಅದೇ ರೀತಿಯಲ್ಲಿ, ಅನೇಕರಾಗಿರುವ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗುತ್ತೇವೆ ಮತ್ತು ಪ್ರತಿಯೊಬ್ಬನೂ ಒಬ್ಬರಿಗೊಬ್ಬರು ಅಂಗಗಳಾಗಿರುತ್ತೇವೆ. \v 6 ನಮಗೆ ಕೊಟ್ಟಿರುವ ದೇವರ ಕೃಪೆಗೆ ಅನುಸಾರವಾಗಿ ನಮಗೆ ಬೇರೆ ಬೇರೆ ವರಗಳಿರುತ್ತವೆ. ಒಬ್ಬನಿಗೆ ಪ್ರವಾದನಾ ವರವಾಗಿದ್ದರೆ, ಅದನ್ನು ಅವನ ವಿಶ್ವಾಸದ ಅಳತೆಗೆ ತಕ್ಕ ರೀತಿಯಲ್ಲಿ ಉಪಯೋಗಿಸಲಿ. \v 7 ಅದು ಇತರರಿಗೆ ಸೇವೆ ಸಲ್ಲಿಸುವುದಾಗಿದ್ದರೆ, ಅದನ್ನು ಇತರರಿಗೆ ಸೇವೆ ಸಲ್ಲಿಸುವುದರಲ್ಲಿ ಉಪಯೋಗಿಸಲಿ. ಅದು ಬೋಧಿಸುವ ವರವಾಗಿದ್ದರೆ, ಅವನು ಬೋಧಿಸಲಿ. \v 8 ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ಸಂತೋಷದಿಂದ ಮಾಡಲಿ. \s1 ಪ್ರೀತಿ \p \v 9 ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ. \v 10 ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ. \v 11 ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ. \v 12 ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ. \v 13 ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ. \p \v 14 ನಿಮ್ಮನ್ನು ಹಿಂಸಿಸುವರನ್ನು ಆಶೀರ್ವದಿಸಿರಿ, ಶಪಿಸಬೇಡಿರಿ. \v 15 ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ. \v 16 ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ. \p \v 17 ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ. \v 18 ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ. \v 19 ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು,\f + \fr 12:19 \fr*\ft \+xt ಧರ್ಮೋ 32:35\+xt*\ft*\f* ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ. \q1 \v 20 “ಆದರೆ, ನಿನ್ನ ವೈರಿಯು ಹಸಿದಿದ್ದರೆ, ಅವನಿಗೆ ಆಹಾರ ಕೊಡು, \q2 ಅವನು ಬಾಯಾರಿದ್ದರೆ ಕುಡಿಯಲು ಕೊಡು. \q1 ಹೀಗೆ ಮಾಡುವುದರಿಂದ ನೀನು ಅವನ ತಲೆಯ ಮೇಲೆ ಉರಿಯುವ ಕೆಂಡವನ್ನು ಸುರಿದಂತಾಗುವುದು.”\f + \fr 12:20 \fr*\ft \+xt ಜ್ಞಾನೋಕ್ತಿ 25:21,22\+xt*\ft*\f* \m \v 21 ಕೆಟ್ಟದ್ದಕ್ಕೆ ಸೋಲಬೇಡಿರಿ, ಕೆಟ್ಟದ್ದನ್ನು ಒಳ್ಳೆಯದರಿಂದ ಜಯಿಸಿರಿ. \c 13 \s1 ಅಧಿಕಾರಿಗಳಿಗೆ ಅಧೀನನಾಗಿರುವುದು \p \v 1 ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ. \v 2 ಆದ್ದರಿಂದ ಅಧಿಕಾರಕ್ಕೆ ಎದುರು ಬೀಳುವವನು ದೇವರ ನೇಮಕವನ್ನು ಎದುರಿಸುವವನಾಗಿರುತ್ತಾನೆ. ಹಾಗೆ ಎದುರಿಸುವವರು ತೀರ್ಪಿಗೆ ಗುರಿಯಾಗುವರು. \v 3 ಕೆಟ್ಟದ್ದನ್ನು ಮಾಡುವವನಿಗೆ ಅಧಿಪತಿಗಳ ಭಯವಿರುವುದೇ ಹೊರತು, ಒಳ್ಳೆಯದನ್ನು ಮಾಡುವವನಿಗೆ ಅಲ್ಲ. ಅಧಿಕಾರಿಗಳಿಗೆ ಭಯಪಡಬಾರದೇ? ಒಳ್ಳೆಯದನ್ನು ಮಾಡು. ಅದರಿಂದ ನಿನಗೆ ಪ್ರಶಂಸೆ ದೊರಕುವುದು. \v 4 ಏಕೆಂದರೆ, ಅವನು ನಿನಗೆ ಒಳ್ಳೆಯದನ್ನು ಮಾಡುವುದಕ್ಕೋಸ್ಕರ ಇರುವ ದೇವರ ಸೇವಕನಾಗಿರುತ್ತಾನೆ. ಆದರೆ ನೀನು ಕೆಟ್ಟದ್ದನ್ನು ಮಾಡುವವನಾಗಿದ್ದರೆ ಭಯಪಡಬೇಕು. ಏಕೆಂದರೆ ಅವನು ವ್ಯರ್ಥವಾಗಿ ಅಧಿಕಾರವನ್ನು ಪಡೆದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಅಭ್ಯಾಸ ಮಾಡುವವನಿಗೆ ದಂಡನೆಯನ್ನು ವಿಧಿಸುತ್ತಾನೆ. \v 5 ಆದ್ದರಿಂದ, ಭಯದ ನಿಮಿತ್ತದಿಂದ ಮಾತ್ರವಲ್ಲ ಮನಸ್ಸಾಕ್ಷಿಯ ನಿಮಿತ್ತವೂ ಅಧಿಕಾರಿಗಳಿಗೆ ಅಧೀನನಾಗಿರುವುದು ಅಗತ್ಯವಾಗಿರುತ್ತದೆ. \p \v 6 ಇದರ ನಿಮಿತ್ತವಾಗಿಯೇ ನೀವು ತೆರಿಗೆಯನ್ನು ಪಾವತಿ ಮಾಡುತ್ತೀರಿ. ಏಕೆಂದರೆ, ಅಧಿಕಾರಿಗಳು ಇದರಲ್ಲಿಯೇ ನಿರತರಾಗಿರುವ ದೇವರ ಸೇವಕರಾಗಿರುತ್ತಾರೆ. \v 7 ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ. \s1 ಪ್ರೀತಿಯು ಮೋಶೆಯ ನಿಯಮವನ್ನು ನೆರವೇರಿಸುವುದು \p \v 8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ. \v 9 ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,”\f + \fr 13:9 \fr*\ft \+xt ವಿಮೋ 20:13-15,17; ಧರ್ಮೋ 5:17-19,21\+xt*\ft*\f* ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,”\f + \fr 13:9 \fr*\ft \+xt ಯಾಜಕ 19:18\+xt*\ft*\f* ಎಂಬ ಒಂದೇ ಮಾತಿನಲ್ಲಿವೆ. \v 10 ಪ್ರೀತಿಯು ತನ್ನ ನೆರೆಯವನಿಗೆ ಹಾನಿ ಮಾಡುವುದಿಲ್ಲ. ಆದ್ದರಿಂದ ಪ್ರೀತಿಯು ನಿಯಮದ ನೆರವೇರಿಕೆಯಾಗಿರುತ್ತದೆ. \s1 ಕಡೆಯದಿನವು ಸಮೀಪವಾಗಿದೆ \p \v 11 ಈಗಿನ ಕಾಲವನ್ನು ತಿಳಿದು ಇದನ್ನೆಲ್ಲಾ ಮಾಡಿರಿ. ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಗಳಿಗೆಯಾಗಿದೆ. ಏಕೆಂದರೆ, ನಮ್ಮ ರಕ್ಷಣೆಯು ನಾವು ಮೊದಲು ವಿಶ್ವಾಸವಿಟ್ಟಿದಕ್ಕಿಂತ ಈಗ ಹತ್ತಿರವಾಗಿರುತ್ತದೆ. \v 12 ರಾತ್ರಿಯು ಬಹಳಷ್ಟು ಕಳೆದು ಹಗಲು ಸಮೀಪಿಸಿದೆ. ಆದ್ದರಿಂದ ನಾವು ಕತ್ತಲೆಯ ಕೃತ್ಯಗಳನ್ನು ಎಸೆದು ಬೆಳಕಿನ ಆಯುಧಗಳನ್ನು ಧರಿಸಿಕೊಳ್ಳೋಣ. \v 13 ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ. \v 14 ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ. \c 14 \s1 ಬಲಹೀನರು ಮತ್ತು ಬಲಿಷ್ಠರು \p \v 1 ಅಂಥವನ ಅಭಿಪ್ರಾಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ವಿಶ್ವಾಸದಲ್ಲಿ ಬಲಹೀನನಾಗಿರುವವನನ್ನು ಸ್ವೀಕರಿಸಿಕೊಳ್ಳಿರಿ. \v 2 ಒಬ್ಬನ ವಿಶ್ವಾಸವು ಎಲ್ಲವನ್ನೂ ತಿನ್ನುವಂತೆ ಮಾಡುತ್ತದೆ. ಆದರೆ ವಿಶ್ವಾಸದಲ್ಲಿ ಬಲಹೀನನಾಗಿರುವವನು ಸಸ್ಯಾಹಾರಿಯಾಗಿಯೇ ಇರುತ್ತಾನೆ. \v 3 ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸದಿರಲಿ. ಸಸ್ಯಾಹಾರಿಯು ಮಾಂಸಾಹಾರಿಯನ್ನು ತೀರ್ಪು ಮಾಡದಿರಲಿ. ಏಕೆಂದರೆ ದೇವರು ಇಬ್ಬರನ್ನು ಸ್ವೀಕಾರ ಮಾಡಿರುತ್ತಾರೆ. \v 4 ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು. \p \v 5 ಕೆಲವರು ಒಂದು ದಿನವನ್ನು ಮತ್ತೊಂದು ದಿನಕ್ಕಿಂತ ವಿಶೇಷವೆಂದು ಎಣಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ. \v 6 ಒಬ್ಬ ಒಂದು ದಿನವನ್ನು ವಿಶೇಷವೆಂದು ಎಣಿಸುವುದಾದರೆ ಅವನು ಅದನ್ನು ಕರ್ತನಿಗಾಗಿಯೇ ಮಾಡಲಿ. ಮಾಂಸಾಹಾರಿಯು ದೇವರಿಗೆ ಕೃತಜ್ಞತೆಯನ್ನು ಮಾಡಿ ಊಟಮಾಡುವುದಾದರೆ ಅವನು ಅದನ್ನು ಮಾಡುವುದು ಕರ್ತನಿಗಾಗಿಯೇ. ಸಸ್ಯಾಹಾರಿಯು ಕರ್ತನಿಗಾಗಿಯೇ ತಿನ್ನದೆ ಕೃತಜ್ಞತೆ ಸಲ್ಲಿಸುತ್ತಾನೆ. \v 7 ನಮ್ಮಲ್ಲಿ ಯಾರೂ ತಮಗಾಗಿ ಜೀವಿಸದಿರಲಿ, ತಮಗಾಗಿ ಮರಣಿಸುವುದು ಬೇಡ. \v 8 ಬದುಕಿದರೆ ನಾವು ಕರ್ತನಿಗಾಗಿ ಬದುಕುತ್ತೇವೆ, ಸತ್ತರೆ ಕರ್ತನಿಗಾಗಿ ಸಾಯುತ್ತೇವೆ. ಹೀಗೆ ನಾವು ಬದುಕಿದರೂ ಸತ್ತರೂ ಕರ್ತನಿಗೆ ಸೇರಿದವರಾಗಿರುತ್ತೇವೆ. \v 9 ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು. \p \v 10 ಹೀಗಿರುವಾಗ, ನೀನು ಏಕೆ ನಿನ್ನ ಸಹೋದರರಿಗೆ ತೀರ್ಪುಮಾಡುತ್ತೀ? ಅಥವಾ ನಿನ್ನ ಸಹೋದರರನ್ನು ಏಕೆ ಹೀನಾಯವಾಗಿ ಕಾಣುತ್ತೀ? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲುವೆವು. \v 11 ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: \q1 “ ‘ನಾನು ಜೀವಿಸುವುದರಿಂದ, \q1 ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು. \q2 ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’ \q2 ಎಂದು ಕರ್ತನು ಹೇಳುತ್ತಾರೆ.”\f + \fr 14:11 \fr*\ft \+xt ಯೆಶಾಯ 45:23\+xt*\ft*\f* \m \v 12 ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು. \p \v 13 ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ. \v 14 ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು. \v 15 ನೀವು ಆಹಾರದಿಂದ ನಿಮ್ಮ ಸಹೋದರರನ್ನು ದುಃಖ ಪಡಿಸುವುದಾದರೆ ನೀವು ಪ್ರೀತಿಯಿಂದ ನಡೆದುಕೊಳ್ಳುವುದಿಲ್ಲ. ನೀವು ತಿನ್ನುವುದರ ಮೂಲಕ ಕ್ರಿಸ್ತನು ಯಾವನಿಗೋಸ್ಕರವಾಗಿ ಸತ್ತರೋ ಅಂಥವರನ್ನು ನಾಶಮಾಡಬೇಡಿರಿ. \v 16 ನಿಮಗಿರುವ ಒಳ್ಳೆಯದು ಪರರ ದೂಷಣೆಗೆ ಗುರಿಯಾಗದಿರಲಿ. \v 17 ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ. \v 18 ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ. \p \v 19 ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ. \v 20 ಆಹಾರದ ನಿಮಿತ್ತವಾಗಿ ದೇವರ ಕೆಲಸವನ್ನು ಕೆಡಿಸಬೇಡ, ಎಲ್ಲಾ ಆಹಾರವೂ ಶುದ್ಧವಾದದ್ದೇ. ಆದರೆ ಒಬ್ಬರು ತಿಂದು ವಿಘ್ನವನ್ನು ಒಡ್ಡುವುದು ಕೆಟ್ಟದ್ದು. \v 21 ಮಾಂಸ ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ ಅಥವಾ ಬೇರೆ ಏನನ್ನೇ ಆಗಲಿ, ಅದು ನಿಮ್ಮ ಸಹೋದರರನ್ನು ಎಡವುವಂತೆ ಮಾಡುವುದಾದರೆ ಅದನ್ನು ಮಾಡದೆ ಇರುವುದೇ ಒಳ್ಳೆಯದು. \p \v 22 ಈ ವಿಷಯದಲ್ಲಿ ನಿಮಗಿರುವ ವೈಯಕ್ತಿಕ ದೃಢವಿಶ್ವಾಸವನ್ನು ನೀವು ದೇವರ ಮುಂದೆ ಇಟ್ಟುಕೊಂಡಿರು. ತಾವು ಅನುಮೋದಿಸಿ ಮಾಡಿದ ಕಾರ್ಯಗಳ ಬಗ್ಗೆ ತಮಗೆ ದಂಡನಾತೀರ್ಪು ಮಾಡಿಕೊಳ್ಳದವರು ಧನ್ಯರು. \v 23 ಆದರೆ ಅನುಮಾನವುಳ್ಳವರು ಊಟಮಾಡುವುದು ವಿಶ್ವಾಸದಿಂದ ಅಲ್ಲವಾದ್ದರಿಂದ ಅವರು ದೋಷಿಯಾಗುತ್ತಾರೆ. ವಿಶ್ವಾಸವಿಲ್ಲದೆ ಮಾಡುವ ಎಲ್ಲವೂ ಪಾಪವಾಗಿವೆ. \c 15 \p \v 1 ವಿಶ್ವಾಸದಲ್ಲಿ ಬಲವುಳ್ಳವರಾದ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ, ಬಲಹೀನರ ಬಲಹೀನತೆಗಳನ್ನು ಸಹಿಸಿಕೊಳ್ಳಬೇಕು. \v 2 ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಭಕ್ತಿವೃದ್ಧಿಯ ಹಿತಕ್ಕಾಗಿ ಅವರನ್ನು ಸುಖವನ್ನು ನೋಡಿಕೊಳ್ಳಲಿ. \v 3 “ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಂದವು,”\f + \fr 15:3 \fr*\ft \+xt ಕೀರ್ತನೆ 69:9\+xt*\ft*\f* ಎಂದು ಬರೆದಿರುವಂತೆ ಕ್ರಿಸ್ತನು ಸಹ ತಮ್ಮ ಸುಖಕ್ಕಾಗಿ ಬಾಳಲಿಲ್ಲ. \v 4 ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ. \p \v 5 ಸಹನೆಯನ್ನೂ ಉತ್ತೇಜನವನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವಂತೆ ನಿಮಗೆ ಒಂದೇ ಆತ್ಮವನ್ನು ಕೊಡಲಿ. \v 6 ಹೀಗೆ ನೀವು ಒಂದೇ ಮನಸ್ಸುಳ್ಳವರಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರನ್ನು ಒಂದೇ ಬಾಯಿಂದ ಮಹಿಮೆ ಪಡಿಸುವಿರಿ. \p \v 7 ದೇವರಿಗೆ ಮಹಿಮೆಯಾಗುವುದಕ್ಕಾಗಿ ಕ್ರಿಸ್ತನು ನಿಮ್ಮನ್ನು ಸ್ವೀಕರಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಸ್ವೀಕರಿಸಿರಿ. \v 8 ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು. \v 9 ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: \q1 “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, \q2 ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.”\f + \fr 15:9 \fr*\ft \+xt 2 ಸಮು 22:50; ಕೀರ್ತನೆ 18:49\+xt*\ft*\f* \m \v 10 ಮತ್ತೊಂದು ಕಡೆಯಲ್ಲಿ ಹೀಗೆ ಬರೆಯಲಾಗಿದೆ: \q1 “ಯೆಹೂದ್ಯರಲ್ಲದವರೇ ದೇವಜನರೊಂದಿಗೆ ಸೇರಿ ಸಂತೋಷಪಡಿರಿ.”\f + \fr 15:10 \fr*\ft \+xt ಧರ್ಮೋ 32:43\+xt*\ft*\f* \m \v 11 ಇನ್ನೊಂದು ಕಡೆಯಲ್ಲಿ, \q1 “ಯೆಹೂದ್ಯರಲ್ಲದವರೇ ಕರ್ತನನ್ನು ಸ್ತುತಿಸಿರಿ. \q2 ಸಮಸ್ತ ಜನರೇ ಕರ್ತನಿಗೆ ಸ್ತೋತ್ರಮಾಡಿರಿ.”\f + \fr 15:11 \fr*\ft \+xt ಕೀರ್ತನೆ 117:1\+xt*\ft*\f* \m \v 12 ಪುನಃ ಪ್ರವಾದಿ ಯೆಶಾಯನು ಹೇಳುವುದೇನೆಂದರೆ: \q1 “ಇಷಯನ ವಂಶದಿಂದ ಬೇರು ಒಂದು ಚಿಗುರುವುದು, \q2 ಜನಾಂಗಗಳನ್ನು ಆಳುವವರಾಗಿ ಅವರು ಉದಯಿಸುವರು. \q2 ಯೆಹೂದ್ಯರಲ್ಲದವರು ಆತನಲ್ಲಿ ನಿರೀಕ್ಷೆ ಇಡುವರು.”\f + \fr 15:12 \fr*\ft \+xt ಯೆಶಾಯ 11:10\+xt*\ft*\f* \p \v 13 ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ. \s1 ಪೌಲನು ಯೆಹೂದ್ಯರಲ್ಲದವರಿಗೆ ಸೇವಕ \p \v 14 ನನ್ನ ಪ್ರಿಯರೇ, ನೀವು ಒಳ್ಳೆಯತನದಿಂದ ಪೂರ್ಣವಾದವರೂ ಸಕಲ ತಿಳುವಳಿಕೆಯಿಂದ ತುಂಬಿದವರೂ ಆಗಿದ್ದು, ಒಬ್ಬರಿಗೊಬ್ಬರು ಬುದ್ಧಿ ಹೇಳುವುದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ಬಗ್ಗೆ ನನಗೆ ಭರವಸೆ ಇದೆ. \v 15 ನಾನು ನಿಮಗೆ ಕೆಲವು ವಿಷಯಗಳನ್ನು ಜ್ಞಾಪಕ ಪಡಿಸುವುದಕ್ಕಾಗಿ ಬಹಳ ಧೈರ್ಯದಿಂದ ಹೀಗೆ ಬರೆದಿದ್ದೇನೆ. \v 16 ಯೆಹೂದ್ಯರಲ್ಲದವರು ಪವಿತ್ರಾತ್ಮನಿಂದ ಪರಿಶುದ್ಧರಾಗಿ, ದೇವರಿಗೆ ಅಂಗೀಕೃತವಾದ ಕಾಣಿಕೆಗಳಾಗಬೇಕೆಂಬ ಕಾರಣದಿಂದ, ನಾನು ಯೆಹೂದ್ಯರಲ್ಲದವರಿಗೆ ಕ್ರಿಸ್ತ ಯೇಸುವಿನ ಸೇವಕನಾಗಿ ದೇವರ ಸುವಾರ್ತೆಯನ್ನು ಪ್ರಕಟಿಸಲು ದೇವರು ನನಗೆ ಕೃಪೆ ನೀಡಿದ್ದಾರೆ. \p \v 17 ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ದೇವರ ಸೇವೆಯ ವಿಷಯವಾಗಿ ಹೊಗಳಿಕೊಳ್ಳುತ್ತೇನೆ. \v 18 ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ \v 19 ಬಲವಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಪವಿತ್ರಾತ್ಮ ಶಕ್ತಿಯಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಯೆರೂಸಲೇಮಿನಿಂದ ಪ್ರಾರಂಭಿಸಿ, ಇಲ್ಲುರಿಕದವರೆಗೆ ನಾನು ಕ್ರಿಸ್ತನ ಸುವಾರ್ತೆಯನ್ನು ಸಂಪೂರ್ಣವಾಗಿ ಸಾರಿದ್ದೇನೆ. \v 20 ಬೇರೊಬ್ಬರು ಹಾಕಿರುವ ಅಸ್ತಿವಾರದ ಮೇಲೆ ನಾನು ಕಟ್ಟಬಾರದೆಂದು, ಕ್ರಿಸ್ತನ ಹೆಸರು ತಿಳಿಯಪಡಿಸದೆ ಇರುವಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಆತುರದಿಂದ ಹೋರಾಡುತ್ತಿದ್ದೇನೆ. \v 21 ಪವಿತ್ರ ವೇದದಲ್ಲಿ ಬರೆದಿರುವಂತೆ : \q1 “ಯಾರಿಗೆ ಆತನ ಸುದ್ದಿ ಮುಟ್ಟಲಿಲ್ಲವೋ ಅವರು ಆತನನ್ನು ಕಾಣುವರು; \q2 ಯಾರು ಆತನ ವರ್ತಮಾನ ಕೇಳಲಿಲ್ಲವೋ ಅವರು ಗ್ರಹಿಸಿಕೊಳ್ಳುವರು.”\f + \fr 15:21 \fr*\ft \+xt ಯೆಶಾಯ 52:15\+xt*\ft*\f* \m \v 22 ಈ ಕಾರಣದಿಂದಲೇ ನಾನು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಬಾರಿ ಅಭ್ಯಂತರವಾಯಿತು. \s1 ರೋಮನ್ನು ಸಂದರ್ಶಿಸಲು ಪೌಲನ ಯೋಜನೆ \p \v 23 ಈಗಲಾದರೋ ಈ ಪ್ರದೇಶದಲ್ಲಿ ನನಗೆ ಅವಕಾಶವಿಲ್ಲದಿರುವುದರಿಂದಲೂ ಅನೇಕ ವರ್ಷಗಳಿಂದ ನಿಮ್ಮನ್ನು ಸಂದರ್ಶಿಸಬೇಕೆಂಬ ಹಂಬಲವಿರುವುದರಿಂದಲೂ \v 24 ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನಿಮ್ಮನ್ನು ಸಂದರ್ಶಿಸುವ ನಿರೀಕ್ಷೆಯಲ್ಲಿದ್ದೇನೆ. ಸ್ವಲ್ಪಕಾಲ ನಿಮ್ಮ ಅನ್ಯೋನ್ಯತೆಯ ಆನಂದವನ್ನು ಪಡೆದ ಬಳಿಕ ಅಲ್ಲಿಗೆ ಹೋಗುವ ನನ್ನ ಪ್ರಯಾಣದಲ್ಲಿ ನಿಮ್ಮ ಸಹಕಾರವನ್ನು ಬಯಸುತ್ತೇನೆ. \v 25 ಈಗಲಾದರೋ ನಾನು ದೇವಜನರ ಸೇವೆಗಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. \v 26 ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ. \v 27 ಅವರು ಅದನ್ನು ಮಾಡಲು ಇಷ್ಟಪಟ್ಟದ್ದಲ್ಲದೆ, ಅದು ಕರ್ತವ್ಯವೂ ಆಗಿದೆ. ಹೌದು, ಯೆಹೂದ್ಯರಲ್ಲದವರು ಯೆಹೂದ್ಯರ ಆತ್ಮಿಕ ಆಶೀರ್ವಾದಗಳಲ್ಲಿ ಪಾಲುಗೊಂಡಿರುವುದಾದರೆ ತಮ್ಮ ಲೌಕಿಕ ವಿಷಯಗಳಲ್ಲಿ ಅವರೊಂದಿಗೆ ಹಂಚಿಕೊಳ್ಳುವುದು ಅವರ ಕರ್ತವ್ಯವಾಗಿದೆ. \v 28 ಆದ್ದರಿಂದ ಈ ಕೆಲಸವನ್ನು ಪೂರೈಸಿ ಸಂಗ್ರಹಿಸಿ ಕೊಟ್ಟದ್ದನ್ನು ಅವರಿಗೆ ಒಪ್ಪಿಸಿ ಖಚಿತವಾದ ಬಳಿಕ, ನಾನು ಸ್ಪೇನ್ ದೇಶಕ್ಕೆ ಹೋಗುವ ದಾರಿಯಲ್ಲಿ ನಿಮ್ಮನ್ನು ಸಂದರ್ಶಿಸುತ್ತೇನೆ. \v 29 ನಾನು ನಿಮ್ಮ ಬಳಿಗೆ ಬರುವಾಗ ಕ್ರಿಸ್ತನ ಆಶೀರ್ವಾದದಿಂದ ತುಂಬಿದವನಾಗಿ ಬರುತ್ತೇನೆಂದು ಬಲ್ಲೆನು. \p \v 30 ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿಯೂ ಪವಿತ್ರಾತ್ಮರ ಪ್ರೀತಿಯ ಮೂಲಕವಾಗಿಯೂ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ, ನನ್ನೊಂದಿಗೆ ಹೋರಾಡಿರಿ. \v 31 ನಾನು ಯೂದಾಯ ಪ್ರಾಂತದಲ್ಲಿ ಅವಿಶ್ವಾಸಿಗಳ ಕೈಯಿಂದ ಕಾಪಾಡಬೇಕೆಂತಲೂ ನನ್ನ ಸೇವೆಯು ಯೆರೂಸಲೇಮಿನಲ್ಲಿರುವ ದೇವಜನರಿಗೆ ಮೆಚ್ಚುಗೆಯಾಗಿರಬೇಕೆಂತಲೂ ಪ್ರಾರ್ಥಿಸಿರಿ. \v 32 ಆಗ ನಾನು ದೇವರ ಚಿತ್ತಾನುಸಾರ ನಿಮ್ಮ ಬಳಿಗೆ ಸಂತೋಷದಿಂದ ಬಂದು, ನಿಮ್ಮ ಸಂಗಡ ವಿಶ್ರಾಂತಿ ಹೊಂದುವೆನು. \v 33 ಸಮಾಧಾನದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್. \b \c 16 \s1 ಪೌಲನ ವಂದನೆಗಳು \p \v 1 ನಮ್ಮ ಸಹೋದರಿಯೂ ಕೆಂಖ್ರೆಯ ಸಭೆಯ ಸೇವಕಿಯೂ ಆಗಿರುವ ಫೊಯಿಬೆಯನ್ನು ನಿಮಗೆ ಪರಿಚಯಿಸುತ್ತೇನೆ. \v 2 ಕರ್ತನಲ್ಲಿ ದೇವಜನರಿಗೆ ಯೋಗ್ಯವಾಗಿರುವ ರೀತಿಯಲ್ಲಿ ಆಕೆಯನ್ನು ಸ್ವೀಕರಿಸಿ, ಆಕೆಯು ಅನೇಕರಿಗೂ ನನಗೂ ವಿಶೇಷವಾದ ರೀತಿಯಲ್ಲಿ ಸಹಾಯ ಮಾಡಿದವಳಾಗಿರುವುದರಿಂದ ನಿಮಗೆ ಯಾವ ಕೊರತೆಗಳಿದ್ದರೂ ಆಕೆಗೆ ಬೇಕಾದದ್ದನ್ನು ಒದಗಿಸಿರಿ. \b \p \v 3 ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಕೆಲಸದವರಾಗಿರುವ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. \v 4 ಅವರು ನನ್ನ ಪ್ರಾಣದ ನಿಮಿತ್ತವಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಒಡ್ಡಿದರು. ಅವರಿಗೆ ನಾನು ಮಾತ್ರವೇ ಅಲ್ಲ ಯೆಹೂದ್ಯರಲ್ಲದವರು ಎಲ್ಲಾ ಸಭೆಗಳವರೂ ಕೃತಜ್ಞರಾಗಿರುತ್ತಾರೆ. \p \v 5 ಅವರ ಮನೆಯಲ್ಲಿ ಸೇರಿ ಬರುವ ಸಭೆಗೂ ನನ್ನ ವಂದನೆಗಳನ್ನು ತಿಳಿಸಿರಿ. \p ಏಷ್ಯಾ ಪ್ರಾಂತದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾಗಿರುವ ಎಪೈನೆತನಿಗೂ ನನ್ನ ವಂದನೆಗಳನ್ನು ತಿಳಿಸಿರಿ. \p \v 6 ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆಗಳು. \p \v 7 ನನ್ನ ಬಂಧುಗಳೂ ಜೊತೆ ಸೆರೆಯವರೂ ಆದ ಅಂದ್ರೋನಿಕನಿಗೂ ಯೂನ್ಯಳಿಗೂ ವಂದನೆಗಳು. ಅವರು ಅಪೊಸ್ತಲರಲ್ಲಿ ಪ್ರಸಿದ್ಧರೂ ಮತ್ತು ನನಗಿಂತ ಮೊದಲೇ ಕ್ರಿಸ್ತನಲ್ಲಿದ್ದವರೂ ಆಗಿರುತ್ತಾರೆ. \p \v 8 ನನಗೆ ಕರ್ತನಲ್ಲಿ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆಗಳು. \p \v 9 ಕ್ರಿಸ್ತನಲ್ಲಿ ನನ್ನ ಜೊತೆ ಸೇವಕನಾಗಿರುವ ಉರ್ಬಾನನಿಗೂ ನನಗೆ ಪ್ರಿಯನಾದ ಸ್ತಾಖುನಿಗೂ ವಂದನೆಗಳು. \p \v 10 ಕ್ರಿಸ್ತನಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆಗಳು, \p ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು. \p \v 11 ನನ್ನ ಸಂಬಂಧಿಯಾಗಿರುವ ಹೆರೊಡಿಯೋನನಿಗೆ ವಂದನೆಗಳು, \p ಕರ್ತನಲ್ಲಿರುವ ನಾರ್ಕಿಸ್ಸನ ಕುಟುಂಬದವರಿಗೆ ವಂದನೆಗಳು. \p \v 12 ಕರ್ತನ ಸೇವೆಯಲ್ಲಿ ದುಡಿಯುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು, \p ಕರ್ತನಲ್ಲಿ ತುಂಬಾ ಶ್ರಮಪಟ್ಟು ದುಡಿದಿರುವ ಪ್ರೀತಿಯ ಪೆರ್ಸೀಸಳಿಗೂ ನನ್ನ ವಂದನೆಗಳು. \p \v 13 ಕರ್ತನಲ್ಲಿ ಆಯ್ಕೆಯಾಗಿರುವ ರೂಫನಿಗೂ ನನಗೂ ತಾಯಿಯಂತಿದ್ದ ಅವನ ತಾಯಿಗೂ ವಂದನೆಗಳು. \p \v 14 ಅಸುಂಕ್ರಿತ, ಪ್ಲೆಗೋನ, ಹೆರ್ಮೆಯನಿಗೂ ಪತ್ರೋಬನಿಗೂ ಹೆರ್ಮಾನ ಮತ್ತು ಅವನೊಂದಿಗಿರುವ ಪ್ರಿಯರಿಗೂ ವಂದನೆಗಳು. \p \v 15 ಫಿಲೊಲೊಗ, ಯೂಲ್ಯಳು, ನೇರ್ಯ ಮತ್ತು ಅವನ ಸಹೋದರಿ, ಒಲುಂಪ ಮತ್ತು ಅವರೊಂದಿಗಿರುವ ಎಲ್ಲಾ ಭಕ್ತರಿಗೂ ವಂದನೆಗಳು. \p \v 16 ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. \p ಕ್ರಿಸ್ತನ ಎಲ್ಲಾ ಸಭೆಗಳವರೂ ನಿಮಗೆ ವಂದನೆಗಳನ್ನು ಕಳುಹಿಸುತ್ತಾರೆ. \b \p \v 17 ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. \v 18 ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ. \v 19 ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ. \b \p \v 20 ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. \b \p ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ. \b \p \v 21 ನನ್ನ ಜೊತೆ ಕೆಲಸದವನಾಗಿರುವ ತಿಮೊಥೆಯನು ನಿಮಗೆ ವಂದನೆಗಳನ್ನು ತಿಳಿಸುತ್ತಾನೆ. ಹಾಗೆಯೇ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ. \p \v 22 ಈ ಪತ್ರವನ್ನು ಬರೆದ ತೆರ್ತ್ಯನೆಂಬ ನಾನು ಕರ್ತನಲ್ಲಿ ನಿಮ್ಮನ್ನು ವಂದಿಸುತ್ತೇನೆ. \p \v 23 ಇಲ್ಲಿ ನನಗೂ ಇಡೀ ಸಭೆಗೂ ಅತಿಥಿ ಸತ್ಕಾರ ಮಾಡುತ್ತಿರುವ ಗಾಯನು ತನ್ನ ವಂದನೆಗಳನ್ನು ತಿಳಿಸುತ್ತಾನೆ. \p ಈ ಪಟ್ಟಣದ ಖಜಾಂಚಿಯಾಗಿರುವ ಎರಸ್ತನೂ ಮತ್ತು ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. \b \p \v 24 \it ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೆಲ್ಲರೊಡನೆ ಇರಲಿ! ಆಮೆನ್.\it*\f + \fr 16:24 \fr*\ft ಕೆಲವು ಮೂಲ ಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \b \p \v 25 ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ. \v 26 ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ. \v 27 ಶಕ್ತರಾಗಿರುವ ಒಬ್ಬರೇ ಜ್ಞಾನವಂತರಾಗಿರುವ ದೇವರಿಗೆ ಕ್ರಿಸ್ತ ಯೇಸುವಿನ ಮೂಲಕ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.