\id TIT - Biblica® Open Kannada Contemporary Version \ide UTF-8 \h ತೀತನಿಗೆ \toc1 ತೀತನಿಗೆ ಪೌಲನು ಬರೆದ ಪತ್ರಿಕೆ \toc2 ತೀತನಿಗೆ \toc3 ತೀತ \mt1 ತೀತನಿಗೆ \mt2 ಪೌಲನು ಬರೆದ ಪತ್ರಿಕೆ \c 1 \p \v 1 ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ \v 2 ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ. \v 3 ತಮ್ಮ ವಾಕ್ಯ ಸಾರುವುದರ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕರಾದ ದೇವರ ಆಜ್ಞೆಗನುಸಾರವಾಗಿ ನನಗೆ ಒಪ್ಪಿಸಿದರು. \b \p \v 4 ನಮ್ಮಲ್ಲಿ ಹುದುವಾಗಿರುವ ವಿಶ್ವಾಸಕ್ಕೆ ಅನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವುದು: \b \p ತಂದೆಯಾದ ದೇವರಿಂದಲೂ ನಮಗೆ ರಕ್ಷಕ ಹಾಗೂ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ. \b \s1 ಸಭಾಹಿರಿಯರ ಆಯ್ಕೆ \p \v 5 ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು. \v 6 ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು. \v 7 ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು. \v 8 ಆದರೆ, ಅವನು ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಸ್ವಯಂನಿಯಂತ್ರವುಳ್ಳವನೂ ನ್ಯಾಯವಂತನೂ ಪರಿಶುದ್ಧನೂ ಶಿಸ್ತುಳ್ಳವನಾಗಿರಬೇಕು. \v 9 ಇತರರನ್ನು ಸ್ವಸ್ಥಬೋಧನೆಯಿಂದ ಪ್ರೋತ್ಸಾಹಿಸುವುದಕ್ಕೂ ಎದುರಿಸುವವರನ್ನು ಖಂಡಿಸುವಂತೆ ಮಾತನಾಡುವುದಕ್ಕೂ ಶಕ್ತನಾಗಿರಲು ಅವನು ಬೋಧಿಸಿದ ಪ್ರಕಾರ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು. \s1 ಒಳಿತು ಮಾಡದವರನ್ನು ಗದರಿಸುವುದು \p \v 10 ಏಕೆಂದರೆ, ಅನೇಕ ದಂಗೆಕೋರ ಜನರೂ ಬರೀ ಮಾತನಾಡುವವರೂ ಮೋಸಗೊಳಿಸುವವರೂ ಮುಖ್ಯವಾಗಿ ಸುನ್ನತಿಯಾಗಬೇಕೆಂದು ಹೇಳುವ ಗುಂಪಿನವರೂ ಇದ್ದಾರೆ. \v 11 ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ. \v 12 “ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳಂಥವರೂ ಸೋಮಾರಿಗಳಾದ ಹೊಟ್ಟೆಬಾಕರೂ ಆಗಿದ್ದಾರೆ!” ಎಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು. \v 13 ಈ ಸಾಕ್ಷಿಯು ನಿಜವೇ. ಇದರ ದೆಸೆಯಿಂದ ಅವರು ನಂಬಿಕೆಯಲ್ಲಿ ಸ್ವಸ್ಥರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು. \v 14 ಅವರು ಯೆಹೂದ್ಯರ ಕಟ್ಟುಕಥೆಗಳಿಗೂ ಸತ್ಯದಿಂದ ದೂರಮಾಡುವ ಮಾನವರ ಆಜ್ಞೆಗಳಿಗೂ ಲಕ್ಷ್ಯಕೊಡಬಾರದು. \v 15 ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ. \v 16 ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ. \c 2 \s1 ಸುವಾರ್ತೆಗಾಗಿ ಒಳ್ಳೆಯದನ್ನು ಮಾಡುವುದು \p \v 1 ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಿಸು. \v 2 ವೃದ್ಧರು ಆತ್ಮ ಸಂಯಮವುಳ್ಳವರೂ ಗೌರವಕ್ಕೆ ಯೋಗ್ಯರೂ ಸ್ವಯಂನಿಯಂತ್ರಿತರೂ ನಂಬಿಕೆ, ಪ್ರೀತಿ, ತಾಳ್ಮೆ ಇವುಗಳಲ್ಲಿ ಬದಲಾಗದವರೂ ಆಗಿರಬೇಕೆಂದು ಉಪದೇಶಿಸು. \p \v 3 ಅದೇ ಪ್ರಕಾರ, ವೃದ್ಧಸ್ತ್ರೀಯರು ನಡತೆಯಲ್ಲಿ ಭಕ್ತಿಗೆ ತಕ್ಕ ಹಾಗೆ ಇರುವವರಾಗಿರಬೇಕು. ಅವರು ಸುಳ್ಳಾಗಿ ದೂರುವವರೂ ಮದ್ಯಾಸಕ್ತರೂ ಆಗಿರದೆ, ಒಳ್ಳೆಯವುಗಳನ್ನು ಬೋಧಿಸುವವರಾಗಿರಬೇಕು ಎಂದು ಅವರಿಗೆ ಉಪದೇಶಿಸು. \v 4 ಇದಲ್ಲದೆ ದೇವರ ವಾಕ್ಯವು ದೂಷಣೆಯಾಗದಂತೆ ಯೌವನ ಸ್ತ್ರೀಯರು ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ \v 5 ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ. \p \v 6 ಹಾಗೆಯೇ, ಯೌವನಸ್ಥರು ಆತ್ಮ ಸ್ವಶಿಸ್ತನ್ನು ಹೊಂದಿದವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸು. \v 7 ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ \v 8 ನಿಂದೆಗೆ ಹೊರತಾದ ಸ್ವಸ್ಥ ಮಾತುಗಳನ್ನಾಡುವವನಾಗಿರು. ಇದರಿಂದ ವಿರೋಧಿಸುವವನು ನಿನ್ನ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕಾಗದೆ ನಾಚಿಕೆ ಪಡುವನು. \p \v 9 ಸೇವಕರು ತಮ್ಮ ಸ್ವಂತ ಯಜಮಾನರಿಗೆ ಅಧೀನರಾಗಿದ್ದು ಎಲ್ಲವುಗಳಲ್ಲಿ ಅವರನ್ನು ಮೆಚ್ಚಿಸುವವರಾಗಿ ಎದುರು ಮಾತನಾಡದೆ, \v 10 ಯಾವುದನ್ನೂ ಕದ್ದಿಟ್ಟುಕೊಳ್ಳದೆ, ನಮ್ಮ ರಕ್ಷಕರಾದ ದೇವರ ಉಪದೇಶವನ್ನು ಎಲ್ಲಾ ವಿಷಯಗಳಲ್ಲಿಯೂ ಅಲಂಕರಿಸುವಂತೆ, ಒಳ್ಳೆಯ ನಂಬಿಗಸ್ತರೆಂದು ಎಲ್ಲದರಲ್ಲಿಯೂ ತೋರಿಸಬೇಕೆಂದು ಅವರನ್ನು ಉಪದೇಶಿಸು. \p \v 11 ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು. \v 12 ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ. \v 13 ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ. \v 14 ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು. \p \v 15 ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ. \c 3 \s1 ಒಳ್ಳೆಯದನ್ನು ಮಾಡುವುದು \p \v 1 ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು. \v 2 ಯಾರ ವಿಷಯವಾಗಿಯೂ ಕೆಟ್ಟದ್ದನ್ನಾಡದೆ, ಎಲ್ಲರೊಂದಿಗೆ ಸಮಾಧಾನವಾಗಿಯೂ ಇತರರನ್ನು ಅರ್ಥಮಾಡಿಕೊಳ್ಳುವವರಾಗಿಯೂ ಯಾವಾಗಲೂ ನಮ್ರರಾಗಿ ಇರಬೇಕೆಂತಲೂ ಅವರಿಗೆ ಜ್ಞಾಪಕಮಾಡು. \p \v 3 ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು. \v 4 ಆದರೆ ನಮಗೆ ರಕ್ಷಕರೂ ದೇವರೂ ಆಗಿರುವ ಕ್ರಿಸ್ತ ಯೇಸುವಿನ ದಯೆಯೂ ಪ್ರೀತಿಯೂ ಮನುಷ್ಯರ ಕಡೆಗೆ ಪ್ರತ್ಯಕ್ಷವಾದಾಗ, \v 5 ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು. \v 6 ನಮಗೆ ರಕ್ಷಕರಾದ ಕ್ರಿಸ್ತ ಯೇಸುವಿನ ಮೂಲಕ ದೇವರು ಪವಿತ್ರಾತ್ಮ ದೇವರನ್ನು ನಮ್ಮ ಮೇಲೆ ಸಮೃದ್ಧವಾಗಿ ಸುರಿಸಿದರು. \v 7 ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು. \v 8 ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ. \p \v 9 ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ. \v 10 ಭೇದ ಹುಟ್ಟಿಸುವವರನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು. ಅಂಥವರ ಸಹವಾಸ ಮಾಡದಿರು. \v 11 ಅಂಥವರು ಸನ್ಮಾರ್ಗ ತಪ್ಪಿದವರೂ ತಮ್ಮನ್ನು ತಾವೇ ಖಂಡಿಸಿಕೊಳ್ಳುವವರಾಗಿ ಪಾಪಮಾಡುವವರೂ ಆಗಿದ್ದಾರೆಂದು ನಿಶ್ಚಯವಾಗಿ ತಿಳಿದುಕೊ. \b \s1 ಕಡೇ ಮಾತುಗಳು \p \v 12 ನಾನು ಅರ್ತೆಮನನ್ನಾಗಲಿ, ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದಾಗ ನೀನು ನಿಕೊಪೊಲಿಯಲ್ಲಿ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನ ಮಾಡು. ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂದು ನಾನು ತೀರ್ಮಾನಿಸಿದ್ದೇನೆ. \v 13 ನಿಯಮ ಪಂಡಿತನಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು. ಅವರಿಗೇನೂ ಕೊರತೆಯಾಗಬಾರದು. \b \p \v 14 ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು. \b \p \v 15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. \p ವಿಶ್ವಾಸದಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಹೇಳು. \b \p ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!